ದಾವಣಗೆರೆ: ಕಟ್ಟಡ ಕಾರ್ಮಿಕರ ಕಾರ್ಡ್ ದುರುಪಯೋಗವಾದರೆ ಕ್ರಮ ಎಂದು ಸಿಎಂ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ.
ವಿವಿಧ ಕಾರ್ಯಕ್ರಮಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಗೆಂದು ಹೊನ್ನಾಳಿ ಹೆಲಿಪ್ಯಾಡ್ ಗೆ ಇಂದು ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಈ ವೇಳೆ ವರದಿಗಾರರು ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರಿಗೆ ನೀಡುವ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುತ್ತಿಲ್ಲ. ನಕಲಿ ಕಾರ್ಡ್ ಗಳು ಸೃಷ್ಟಿಯಾಗಿವೆ ಎಂದು ಸಿಎಂ ಗಮನಕ್ಕೆ ತಂದಾಗ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರ ಇದನ್ನು ತಪ್ಪಿಸಲೆಂದೇ ಈ-ಶ್ರಮ ಎಂಬ ಪೋರ್ಟಲ್ ಪ್ರಾರಂಭಿಸಿ ಆಧಾರ್ ಕಾರ್ಡ್ ಲಿಂಕ್ ಕಲ್ಪಿಸಲಾಗಿದೆ. ದುರುಪಯೋಗವಾಗಿರುವ ಪ್ರಕರಣಗಳಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಎಲ್ಲ ಸಂಸ್ಥೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಜನಪರ ಸರ್ಕಾರ: ಬೊಮ್ಮಯ
ಗಡಿ ಭಾಗಳಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗಿದ್ದು, ಶೇ.1ಕ್ಕಿಂತ ಕಡಿಮೆಯಾಗುತ್ತಿದೆ. ಶೀಘ್ರವಾಗಿ ತಜ್ಞರ ಸಭೆ ನಡೆಯಲಿದ್ದು, ಶಾಲೆಗಳ ಪುನರಾರಂಭ ಸೇರಿದಂತೆ ನಿರ್ಬಂಧಗಳನ್ನು ಸಡಿಲಗೊಳಿಸುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ದಾವಣಗೆರೆ: ಗ್ರಾಮೀಣ ಪ್ರದೇಶದಲ್ಲಿ ಜನರಿಗೆ ಸಂಪರ್ಕ ಇರುವ ಎಲ್ಲ ಸಂಸ್ಥೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಜನಪರ ಸರ್ಕಾರ ಆಗುತ್ತದೆ. ಈ ತತ್ವದ ಹಿನ್ನೆಲೆಯಲ್ಲಿ ಸರ್ಕಾರವನ್ನು ಜನರ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ. ಜಿಲ್ಲಾಧಿಕಾರಿಗಳು ಮಾತ್ರವಲ್ಲ, ಇಡೀ ಸರ್ಕಾರವೇ ಗ್ರಾಮಗಳ ಕಡೆ ನಡೆದಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ನ್ಯಾಮತಿ ತಾಲೂಕಿನ ಸುರಹೊನ್ನೆಯಲ್ಲಿ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ’ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಾಗೂ ವಿವಿಧ ಸೌಲಭ್ಯಗಳ ವಿತರಣೆ, ವಿವಿಧ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ನೆರವೇರಿಸಿ ಮಾತನಾಡಿದ ಅವರು, ಅಭಿವೃದ್ಧಿ ಜನರ ಸುತ್ತಲೂ ಆಗಬೇಕು. ಜನರ ಬಳಿ ಅಭಿವೃದ್ಧಿ ಹೋದಾಗ ಓಡಾಟ ನಿಂತ ಸ್ಥಿರವಾದ ಬದುಕು ಸಿಗುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದರು. ಇದನ್ನೂ ಓದಿ: ಸಾಂಪ್ರದಾಯಿಕ ಆಚರಣೆಗೆ ಬ್ರೇಕ್ ಹಾಕಿ ಪೀಠಾರೋಹಣ ಮಾಡಿದ ಮುರುಘಾ ಶರಣರು
ಮನೆ ಬಾಗಿಲಿಗೆ ಪಡಿತರ:
ಜ.26ರ ನಂತರ ಪಡಿತರವನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಸಾಮಾಜಿಕ ಭದ್ರತೆ ಮನೆ ಬಾಗಿಲಿಗೆ ಬರಬೇಕು. ಪ್ರತಿ ಗ್ರಾಮ ಪಂಚಾಯತಿಯಲ್ಲಿ ಎಲ್ಲ ಸೌಲಭ್ಯಗಳು ದೊರಕಲು ಯೋಜನೆ ರೂಪಿಸಲಾಗಿದೆ. ಪ್ರಾಯೋಗಿಕವಾಗಿ ನ.1 ರಂದು ಜನಸೇವಕ ಕಾರ್ಯಕ್ರಮವನ್ನು ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಎಲ್ಲ ಸೌಲಭ್ಯಗಳನ್ನು ಮೊಬೈಲ್ ಮೂಲಕ ದೊರಕಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ವಿವರಿಸಿದರು . ಇದನ್ನೂ ಓದಿ: ಮಾಜಿ ಮಂತ್ರಿ ಎನ್.ಎಚ್ ಶಿವಶಂಕರರೆಡ್ಡಿ ವಿರುದ್ಧ ನಿಂದನೆ ಆರೋಪ -ಆಡಿಯೋ ವೈರಲ್
ಪಿಂಚಣಿ ಸೌಲಭ್ಯ ಆನ್‍ಲೈನ್ ನಲ್ಲಿ ಈಗಾಗಲೇ ಲಭ್ಯವಿದೆ. ಇದು ಲಭ್ಯವಾಗುವಲ್ಲಿ ತೊಂದರೆಯಾದರೆ, ತಾಲೂಕು ಕಚೇರಿಗೆ ಹೋಗಬೇಕಾಗಿಲ್ಲ. ಪ್ರತಿ ಗ್ರಾಮ ಪಂಚಾಯತಿಯಲ್ಲಿ ಇರುವ ಕೇಂದ್ರದಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಬಹುದು. ಜನರ ಸೇವೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ಹಿಡಿದು, ಗ್ರಾಮ ಪಂಚಾಯತಿಯ ಅಧಿಕಾರಿಗಳು ಭಾಗವಹಿಸಬೇಕು ಎಂದರು.
ಅಧಿಕಾರ ಹೆಪ್ಪುಗಟ್ಟಿ ವಿಧಾನಸಭೆಯಲ್ಲಿ ಕುಳಿತುಕೊಳ್ಳದೆ, ಜೇನುತುಪ್ಪವಾಗಿ ಗ್ರಾಮೀಣ ಪ್ರದೇಶಕ್ಕೆ ಹರಿಯಬೇಕೆನ್ನುವ ಕಲ್ಪನೆ ನಮ್ಮದು. ಕಾಲ ಬದಲಾಗಿದ್ದು, ಜನರು ಜಾಗೃತರಾಗಿದ್ದಾರೆ. ಸ್ಪಂದನಶೀಲ ಸರ್ಕಾರ ಕರ್ನಾಟಕದಲ್ಲಿದೆ. ಸ್ವಚ್ಛ, ದಕ್ಷ, ಜನಪರ ಆಡಳಿತವನ್ನು ನಾವು ಕೊಡುತ್ತೇವೆ. ಅದರ ಲಾಭವನ್ನು ಜನ ಪಡೆಯಬೇಕು ಎಂದು ತಿಳಿಸಿದರು.
2 ಸಾವಿರ ಕೋಟಿ ರೂ. ಬಿಡುಗಡೆ!
ನಮ್ಮ ಸರ್ಕಾರ ಬಡವರಿಗೆ 4 ಲಕ್ಷ ಮನೆಗಳನ್ನು ಕೇವಲ ಒಂದೂವರೆ ವರ್ಷದಲ್ಲಿ ಕಟ್ಟಿದ್ದು, ನಗರಗಳ ಕೊಳಗೇರಿಯಲ್ಲಿರುವವರಿಗೆ 1 ಲಕ್ಷ ಮನೆಗಳನ್ನು ಕಟ್ಟಿ ಕೊಡಲಾಗುತ್ತಿದೆ. ಜಲ್ ಜೀವನ್ ಮಿಷನ್ ಯೋಜನೆಯನ್ನು ಅನುಷ್ಠಾನಗೊಳಿಸಲು 2 ಸಾವಿರ ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದೆಯಲ್ಲದೆ, ಅಮೃತ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಸಮಗ್ರ ಅಭಿವೃದ್ಧಿಯ ಕಲ್ಪನೆಯನ್ನು ಸರ್ಕಾರ ಹೊಂದಿದ್ದು, ಉದ್ಯಮ, ಉದ್ಯೋಗಕ್ಕೆ ಸಮಾನ ಮಹತ್ವವನ್ನು ನೀಡಿದೆ ಎಂದರು. ಇದನ್ನೂ ಓದಿ: ಮೈಸೂರಿನಲ್ಲಿ ಶಾಶ್ವತ ವಸ್ತು ಪ್ರದರ್ಶನಕ್ಕೆ ಚಿಂತನೆ: ಸಿಎಂ
ಶಿಕ್ಷಣದಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ ನೂತನ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತಿದ್ದೇವೆ. ದಾವಣಗೆರೆ ಜಿಲ್ಲೆಯಲ್ಲಿ ಅಭಿವೃದ್ಧಿಯ ಪರ್ವ ಪ್ರಾರಂಭವಾಗಿದೆ. ನ್ಯಾಮತಿಗೆ ಮಿನಿ ವಿಧಾನಸೌಧವನ್ನು ಮಂಜೂರು ಮಾಡಲಾಗುವುದು ಎಂದು ಭರವಸೆ ನೀಡಿದರು.
ಮೈಸೂರು: ವಸ್ತು ಪ್ರದರ್ಶನ ಮೈದಾನವನ್ನು ವರ್ಷವಿಡೀ ಉಪಯೋಗ ಮಾಡಿಕೊಳ್ಳುವ ನಿಟ್ಟಿನಲ್ಲಿ ಶಾಶ್ವತ ವಸ್ತುಪ್ರದರ್ಶನ ಆಯೋಜಿಸುವ ಬಗ್ಗೆ ಯೋಜನೆ ರೂಪಿಸಲಾಗುವುದೆಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಪ್ರವಾಸೋದ್ಯಮ ಸರ್ಕಿಟ್ ರೂಪಿಸಲು ಸಮಗ್ರ ಚಿಂತನೆ ನಡೆಸಿ ನಿರ್ಣಯವನ್ನು ಶೀಘ್ರದಲ್ಲಿಯೇ ಕೈಗೊಳ್ಳಲಾಗುವುದು. ಉತ್ತಮ ರೀತಿಯಲ್ಲಿ ದಸರಾ ನಡೆಸಿಕೊಟ್ಟ ಮೈಸೂರಿನ ಜನತೆಗೆ ವಿಶೇಷ ಅಭಿನಂದನೆಗಳನ್ನು ಸಲ್ಲಿಸಿದರು. ಮುಂಬರುವ ವರ್ಷಗಳಲ್ಲಿ ಪರಿಸ್ಥಿತಿ ಉತ್ತಮಗೊಂಡರೆ ಅದ್ದೂರಿಯಾಗಿ ದಸರಾ ಆಚರಣೆ ಮಾಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಸಾಂಪ್ರದಾಯಿಕ ಆಚರಣೆಗೆ ಬ್ರೇಕ್ ಹಾಕಿ ಪೀಠಾರೋಹಣ ಮಾಡಿದ ಮುರುಘಾ ಶರಣರು
ಸಿಂಧಗಿ ಮತ್ತು ಹಾನಗಲ್ ಉಪಚುನಾವಣೆ ಸಂಬಂಧ ನಾಲ್ಕು ದಿನಗಳ ಪ್ರಚಾರಕ್ಕೆ ತೆರಳುವುದಾಗಿ ತಿಳಿಸಿದ ಅವರು, ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಬೆಂಗಳೂರು: ಕೋವಿಡ್ ಆರಂಭದಲ್ಲಿ ವೈದ್ಯಕೀಯ ಸಾಧನಗಳ ಕೊರತೆ ಇತ್ತು. ನಂತರ ಮೇಕ್ ಇನ್ ಇಂಡಿಯಾದಿಂದಾಗಿ ಹೊರದೇಶಗಳಿಗೂ ಸಾಧನಗಳನ್ನು ರಫ್ತು ಮಾಡುವ ಸಾಮಥ್ರ್ಯ ಬಂದಿದ್ದು, ಇದರಿಂದ ನವಭಾರತ ನಿರ್ಮಾಣವಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಐಐಟಿಪಿಎಲ್ ನ ನೂತನ ಕ್ಯಾತ್ ಲ್ಯಾಬ್ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿಗಾಗಿ ‘ಮೇಕ್ ಇನ್ ಇಂಡಿಯಾ’ ಕರೆ ನೀಡಿದ್ದಾರೆ. ಉತ್ಪಾದನಾ ವಲಯದಲ್ಲಿ ಎಫ್‍ಡಿಐ ಹೂಡಿಕೆ 2014 ಕ್ಕಿಂತ ಮುನ್ನ 20 ಬಿಲಿಯನ್ ಡಾಲರ್ ಇತ್ತು. ಈಗ ಮೂರು ಪಟ್ಟು ಹೆಚ್ಚಿದ್ದು, 68 ಬಿಲಿಯನ್ ಡಾಲರ್ ಹೂಡಿಕೆ ಬಂದಿದೆ. ಹೆಚ್ಚಿನ ವೈದ್ಯಕೀಯ ಉಪಕರಣಗಳಿಗಾಗಿ ನಾವು ಬೇರೆ ದೇಶಗಳನ್ನು ಅವಲಂಬಿಸಿದ್ದೇವೆ. ಆದರೆ ಐಐಟಿಪಿಎಲ್ ಕಂಪನಿ ಆತ್ಮನಿರ್ಭರ ಭಾರತದ ಪರಿಕಲ್ಪನೆಯನ್ನು ಸರಿಯಾಗಿ ಅರ್ಥ ಮಾಡಿಕೊಂಡು ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದರು. ಇದನ್ನೂ ಓದಿ: ಯಡಿಯೂರಪ್ಪ ವ್ಯಕ್ತಿ ಅಲ್ಲ ದೊಡ್ಡ ಶಕ್ತಿ: ಶ್ರೀರಾಮುಲು
ಈ ಹಿಂದೆ ಪಿಪಿಇ ಕಿಟ್ ಗೂ ಚೀನಾವನ್ನು ಅವಲಂಬಿಸಬೇಕಾಗಿತ್ತು. ನಂತರ ಮೋದಿ ಅವರ ಪ್ರಯತ್ನದಿಂದ ಅನೇಕ ದೇಶೀಯ ಕಂಪನಿಗಳು ಮಾಸ್ಕ್, ಪಿಪಿಇ ಕಿಟ್ ತಯಾರಿಸಿ ವಿದೇಶಗಳಿಗೂ ರಫ್ತು ಮಾಡುವಂತಾಯಿತು. ಇದರಿಂದ ನವಭಾರತ ನಿರ್ಮಾಣ ಸಾಧ್ಯವಾಗಿದೆ ಎಂದರು.
ಭಾರತ ಮಧುಮೇಹಿಗಳು ಹೆಚ್ಚಿರುವ ಕೇಂದ್ರವಾಗಿದೆ. ಇದು ಬೇರೆ ರೋಗಗಳಿಗೂ ದಾರಿ ಮಾಡಿಕೊಡುತ್ತದೆ. ಸಾಂಕ್ರಾಮಿಕ ರೋಗಗಳಲ್ಲಿ ಹೆಚ್ಚಿನವು ಹೃದಯ ಸಂಬಂಧಿ ರೋಗಗಳಿಗೆ ಸಂಬಂಧಿಸಿದೆ. ಇದಕ್ಕಾಗಿ ಚಿಕಿತ್ಸೆ ನೀಡಲು ಅನೇಕ ವೈದ್ಯಕೀಯ ಉಪಕರಣಗಳು ಬೇಕಿದ್ದು, ಇದು ಸಾಮಾಜಿಕ ಪರಿಣಾಮವನ್ನೂ ಬೀರುತ್ತದೆ. ಇದು ಕೇವಲ ಉದ್ಯಮವಾಗಿರದೆ ಜನರ ಜೀವನದ ಮೇಲೆ ಪರಿಣಾಮ ಬೀರುವ ಅಂಶವೂ ಆಗಿದೆ. 3-4 ಲಕ್ಷ ರೂ. ಬೆಲೆಬಾಳುವ ಉಪಕರಣಗಳನ್ನು ಬೆಂಗಳೂರಿನಲ್ಲೇ ಉತ್ಪಾದಿಸಲು ಐಐಟಿಪಿಎಲ್ ಕಂಪನಿ ಮೂಲಸೌಕರ್ಯ ಅಭಿವೃದ್ಧಿಪಡಿಸಿದ್ದು, ಇದು ಜನರಿಗೆ ಅನುಕೂಲವಾಗಲಿದೆ. ಇಂತಹ ಹೂಡಿಕೆದಾರರು ಹಾಗೂ ಸಂಶೋಧಕರಿಗೆ ಸರ್ಕಾರ ಎಲ್ಲ ಬಗೆಯ ನೆರವು ನೀಡಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ನಾಪತ್ತೆಗೂ ಮುನ್ನ ಖತರ್ನಾಕ್ ಪ್ಲಾನ್ ಮಾಡಿದ್ದ ಯುವತಿ, ಮಕ್ಕಳು
ಶೀಘ್ರದಲ್ಲೇ ಸಭೆ
ಕೋವಿಡ್ ಗೆ ಸಂಬಂಧಿಸಿದ ತೀರ್ಮಾನಗಳನ್ನು ಕೈಗೊಳ್ಳಲು ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಇದಕ್ಕೂ ಮೊದಲು ತಾಂತ್ರಿಕ ಸಲಹಾ ಸಮಿತಿಯ ಸಭೆ ನಡೆಸಿ ಸಲಹೆಗಳನ್ನು ಪಡೆಯಲಾಗುವುದು. ಕೋವಿಡ್ ಒಂದು ರಾಜ್ಯ ಅಥವಾ ದೇಶಕ್ಕೆ ಸೀಮಿತವಾಗಿಲ್ಲ. ರಾಜ್ಯದಲ್ಲಿ 83% ಮೊದಲ ಲಸಿಕೆ ಡೋಸ್, 38% ಎರಡೂ ಡೋಸ್ ನೀಡಲಾಗಿದೆ. ರಾಜ್ಯದಲ್ಲಿ ಸದ್ಯಕ್ಕೆ ತೀವ್ರ ಆತಂಕ ಇಲ್ಲ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು: ಶೀಘ್ರದಲ್ಲಿಯೇ ಅಧಿಕೃತವಾಗಿ ಜಿಲ್ಲಾ ಉಸ್ತುವಾರಿಗಳ ಹಂಚಿಕೆಗೆ ಪ್ಲಾನ್ ಮಾಡಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಹೊಸ ಸಂಕಷ್ಟ ಎದುರಾಗಿದೆ. ಬೆಂಗಳೂರು ನಗರದ ಜಿಲ್ಲಾ ಉಸ್ತುವಾರಿ ಆಗಲು ಸಚಿವ ವಿ. ಸೋಮಣ್ಣ ಹಾಗೂ ಆರ್. ಅಶೋಕ್ ಮಧ್ಯೆ ಪೈಪೋಟಿ ಏರ್ಪಟ್ಟಿದೆ.
ಆರ್. ಅಶೋಕ್‍ಗೆ ಜಿಲ್ಲಾ ಉಸ್ತುವಾರಿ ಆಗುವ ಅವಕಾಶ ತಪ್ಪಿಸಲು ಹಲವಾರು ತಂತ್ರಗಳು ನಡೆಯುತ್ತಿದ್ದು, ಸೋಮಣ್ಣಗೆ ಕೆಲ ಬಿಜೆಪಿ ಶಾಸಕರಿಂದಲೇ ಬೆಂಬಲ ದೊರೆಯುತ್ತಿದೆ. ಅಶೋಕ್ ಅವರಿಗೆ ಶತಾಯಗತಾಯ ಬೆಂಗಳೂರು ಉಸ್ತುವಾರಿಯನ್ನು ಕೈ ತಪ್ಪಿಸಬೇಕೆಂದು ವಿರೋಧಿ ಬಣಗಳು ಒಂದಾಗಿದ್ದು, ವಿ. ಸೋಮಣ್ಣ ಪರವಾಗಿ ಬ್ಯಾಟ್ ಬೀಸಿದ್ದಾರೆ. ಇದರಿಂದಾಗಿ ಸರ್ಕಾರದಲ್ಲಿ ಆಂತರಿಕ ಕಚ್ಚಾಟ ಭುಗಿಲೆದಿದ್ದೆ. ಸದ್ಯ ಅಶೋಕ್ ಅವರು ಒಬ್ಬಂಟಿಯಾಗಿ ಹೋರಾಡುತ್ತಿದ್ದಾರೆ. ಇದನ್ನೂ ಓದಿ: ನಾನು ಎಲ್ಲರಿಗಿಂತ ಸೀನಿಯರ್, ಅರ್ಧ ಬೆಂಗಳೂರು ಉಸ್ತುವಾರಿ ಕೊಡಲಿ: ಸೋಮಣ್ಣ
ಹೀಗಾಗಿ ಇಬ್ಬರ ನಡುವೆ ಇರುವ ಮನಸ್ತಾಪವನ್ನು ಬಗೆಹರಿಸಲು ಬಸವರಾಜ್ ಬೊಮ್ಮಾಯಿಯವರು ಇಂದು ಚರ್ಚೆ ನಡೆಸಲಿದ್ದು, ಬೆಂಗಳೂರು ಅಷ್ಟೇ ಅಲ್ಲದೇ ಉಳಿದ ಜಿಲ್ಲೆಗಳಲ್ಲಿ ಇಂಥ ಸಂಘರ್ಷ ಆಗದಂತೆ ಗಮನ ವಹಿಸುತ್ತಿದ್ದಾರೆ. ಒಟ್ಟಾರೆ ಇವರಿಬ್ಬರ ಸಂಧಾನ ಮಾಡಿಸುವಲ್ಲಿ ಸಕ್ಸಸ್ ಆಗ್ತಾರಾ ಸಿಎಂ? ಬೆಂಗಳೂರು ಉಸ್ತುವಾರಿ ಯಾರಾಗ್ತಾರೆ? ಈ ಎಲ್ಲ ಗೊಂದಲಗಳು ಬಗೆಹರಿಯುತ್ತಾ ಅಥವಾ ಮತ್ತಷ್ಟು ಜಟಿಲ ಆಗುತ್ತಾ? ಎಂಬುವುದಕ್ಕೆ ಕಾದು ನೋಡಬೇಕಾಗಿದೆ. ಇದನ್ನೂ ಓದಿ: ಬೆಂಗಳೂರು ಉಸ್ತುವಾರಿ: ಸಿಎಂ ನಿರ್ಧಾರಕ್ಕೆ ಬದ್ಧ ಎಂದ ಸಚಿವ ಅಶೋಕ್
ನವದೆಹಲಿ: ಸಿಎಂ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ನಾಗರಿಕ ವಿಮಾನಯಾನ ಖಾತೆಯ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಇಂದು ಭೇಟಿ ಮಾಡಿದ್ದಾರೆ.
ದೆಹಲಿಯಲ್ಲಿ ಭೇಟಿ ಮಾಡಿರುವ ಸಿಎಂ, ಕೆಲವು ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಈ ವೇಳೆ ಕೇಂದ್ರ ಕಲ್ಲಿದ್ದಲು, ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಖಾತೆ ಸಚಿವರಾದ ವಿ.ಸುನೀಲ್ ಕುಮಾರ್, ಮುಖ್ಯಕಾರ್ಯದರ್ಶಿಗಳಾದ ಪಿ.ರವಿಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಪ್ರಸಾದ್ ಅವರು ಉಪಸ್ಥಿತರಿದ್ದರು. ಇದನ್ನೂ ಓದಿ: ಯಡಿಯೂರಪ್ಪ, ವಿಜಯೇಂದ್ರ ಆಪ್ತರೇ ಟಾರ್ಗೆಟ್- ಐಟಿ ದಾಳಿ ಬಗ್ಗೆ ಸಿದ್ದರಾಮಯ್ಯ ಅನುಮಾನ
ಈಗಾಗಲೇ ದೆಹಲಿ ಪ್ರವಾಸದಲ್ಲಿರುವ ಬೊಮ್ಮಾಯಿ ಅವರಿಗೆ ಈಗ ಸಂಪುಟ ಸಂಕಟ ಶುರುವಾಗಿದೆ. ಸಂಪುಟ ವಿಸ್ತರಣೆಗಾಗಿ ಸಿಎಂ ಮೇಲೆ ಒತ್ತಡ ಹೆಚ್ಚಾಗ್ತಿದೆ. ನವೆಂಬರ್ ಅಥವಾ ಡಿಸೆಂಬರ್ ಗೆ ಸಂಪುಟ ವಿಸ್ತರಣೆಗೆ ಬೊಮ್ಮಾಯಿ ಅವರು ಯೋಚಿಸಿದ್ದು, ದೆಹಲಿ ನಾಯಕರ ಭೇಟಿ ವೇಳೆ ಸಂಪುಟ ವಿಸ್ತರಣೆ ಅನಿವಾರ್ಯತೆಗೆ ಬಗ್ಗೆ ಮನವರಿಕೆ ಮಾಡಿಕೊಡಲು ಯತ್ನಿಸಬಹುದು ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು/ಚಾಮರಾಜನಗರ: ರಾಜ್ಯಪ್ರವಾಸಕ್ಕೆ ಆಗಮಿಸಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಶಾಲು ಹೊದಿಸಿ ಬರಮಾಡಿಕೊಂಡರು.
ರಾಮನಾಥ್ ಕೋವಿಂದ್ ಅವರು ಮೂರು ದಿನಗಳ ಕಾಲ ರಾಜ್ಯದ ಭೇಟಿಗೆ ಆಗಮಿಸಿದ್ದು, ಈ ವೇಳೆ ಬೊಮ್ಮಾಯಿ ಅವರು ಬೆಂಗಳೂರಿನ ಎಚ್.ಎ.ಎಲ್ ವಿಮಾನನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು. ಇದೇ ವೇಳೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಸಹ ಉಪಸ್ಥಿತರಿದ್ದರು.
ಇತ್ತ ನಾಳೆ ಚಾಮರಾಜನಗರ ಜಿಲ್ಲೆಗೆ ರಾಮನಾಥ್ ಕೋವಿಂದ್ ಮತ್ತು ಬೊಮ್ಮಾಯಿ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಭರದ ಸಿದ್ಧತೆ ಕೈಗೊಳ್ಳಲಾಗಿದೆ. ಬಿಳಿಗಿರಿರಂಗನ ಬೆಟ್ಟದ ತಪ್ಪಲಿನಲ್ಲಿರುವ ವಡ್ಡಗೆರೆ ಬಳಿ 3 ಹೆಲಿಪ್ಯಾಡ್ ಹಾಗೂ ಚಾಮರಾಜನಗರದ ಸರ್ಕಾರಿ ಮೆಡಿಕಲ್ ಕಾಲೇಜು ಬಳಿ 3 ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದ್ದು, ಬಿಳಿಗಿರಿರಂಗನ ಬೆಟ್ಟಕ್ಕೆ ನಾಳೆ ಬೆಳಗ್ಗೆ 11.40ಕ್ಕೆ ರಾಷ್ಟ್ರಪತಿಗಳು ಭೇಟಿ ನೀಡಲಿದ್ದಾರೆ. ಇದನ್ನೂ ಓದಿ: ಶಾಖೆಗೆ ಬಂದು ಸಂಘದ ಶಿಕ್ಷಣ ಪಡೆಯಿರಿ, ನಿಮಗೂ ಒಳ್ಳೆಯದು – ಹೆಚ್‍ಡಿಕೆಗೆ ಕಟೀಲ್ ಸಲಹೆ
ಮಧ್ಯಾಹ್ನ 1.25ಕ್ಕೆ ಚಾಮರಾಜನಗರಕ್ಕೆ ಆಗಮಿಸಲಿದ್ದು, ಇದೇ ವೇಳೆ ಮೈಸೂರಿನಿಂದ ರಸ್ತೆ ಮಾರ್ಗ ಚಾಮರಾಜನಗರಕ್ಕೆ ಮುಖ್ಯಮಂತ್ರಿಗಳು ಆಗಮಿಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ 162 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸರ್ಕಾರಿ ಮೆಡಿಕಲ್ ಕಾಲೇಜು ಬೋಧನಾ ಆಸ್ಪತ್ರೆಯನ್ನು ರಾಮನಾಥ್ ಕೋವಿಂದ್ ಉದ್ಘಾಟಿಸಲಿದ್ದಾರೆ.
ರಾಮನಾಥ್ ಕೋವಿಂದ್ ಅವರ ಭೇಟಿ ಹಿನ್ನೆಲೆ, ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ 500 ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ. ಇಂದು ಮತ್ತು ನಾಳೆ ಬಿಳಿಗಿರಿರಂಗನ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದ್ದು, ನಾಳೆ ಚಾಮರಾಜನಗರದ ಸರ್ಕಾರಿ ಮೆಡಿಕಲ್ ಕಾಲೇಜು ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಇದನ್ನೂ ಓದಿ: ಟಯರ್ ಸ್ಫೋಟಗೊಂಡು ತಾಯಿ, ಮಗ ಕಾರಿನಲ್ಲೇ ದುರ್ಮರಣ
ಬೆಂಗಳೂರು: ಸುರಕ್ಷಿತ, ಸುಂದರ, ಹಸಿರುಮಯ ಬೆಂಗಳೂರು ನಗರ ಮಾಡುವುದು ನಮ್ಮ ಗುರಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ರಾಜಾಜಿನಗರ ವಿಧಾನಸಭಾ ಕ್ಷೇತ್ರ, ಶಿವನಗರದ ಪಶ್ಚಿಮ ಕಾರ್ಡ್ ರಸ್ತೆಯಲ್ಲಿ 655 ಮೀಟರ್ ಉದ್ದದ ಮೇಲ್ಸೆತುವೆ ಉದ್ಘಾಟನೆಯನ್ನು ಬೊಮ್ಮಾಯಿ ಅವರು ಮಾಡಿದರು. ಉದ್ಘಾಟನೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಾಜಿನಗರ, ಬಸವೇಶ್ವರನಗರ, ಶಿವನಗರ ಪ್ರದೇಶ ಅತಿ ಹೆಚ್ಚು ಜನ ದಟ್ಟಣೆ ಇರುವ ಪ್ರದೇಶ. ಸಿಗ್ನಲ್ ಫ್ರೀ ಕಾರಿಡಾರ್ ನಿಂದ ಮುಕ್ತ ಸಂಚಾರಕ್ಕೆ ಅನುಕೂಲವಾಗಲಿದೆ. ತುಮಕೂರು, ಮೈಸೂರು ಹೆದ್ದಾರಿ ಸಂಚಾರ ದಟ್ಟಣೆ ಇದೆ. ಮೈಸೂರು ಸೋಪ್ ಕಾರ್ಖಾನೆ ಮೈಸೂರು ರಸ್ತೆ ವರಗೆ ಸಿಗ್ನಲ್ ಫೀ ಕಾರಿಡಾರ್ ವ್ಯವಸ್ಥೆಗೆ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸಿಂದಗಿ ಕಾಂಗ್ರೆಸ್ಸಿನಲ್ಲಿ ಭುಗಿಲೆದ್ದ ಅಸಮಾಧಾನ
ಜನರ ಸಮಸ್ಯೆ ಬಗ್ಗೆ ಚರ್ಚೆ ಮಾಡುತ್ತೇವೆ. ಆದರೆ ಜನರ ಸಮಸ್ಯೆ ನಡುವೆ ಬದುಕುತ್ತಾರೆ. ಜನರ ಸಮಸ್ಯೆ ನಿವಾರಣೆಯಾದರೆ ಮಾತ್ರ ಜನಪರ ಸರ್ಕಾರವಾಗುತ್ತದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬಿ.ಬಿ.ಎಂ.ಪಿ. ಬೆಸ್ಕಾಂ ಮತ್ತು ಜಲಮಂಡಳಿ ಸಮನ್ವಯ ಇಲ್ಲದೇ ಇರುವುದರಿಂದ ಸಮಸ್ಯೆಗಳು ಹೆಚ್ಚಾಗುತ್ತಿದೆ ಎಂದರು.
ವಸತಿ ಸಚಿವ ವಿ.ಸೋಮಣ್ಣ, ಅಬಕಾರಿ ಸಚಿವ ಗೋಪಾಲಯ್ಯ, ಸ್ಥಳೀಯ ಶಾಸಕ ಮತ್ತು ಮಾಜಿ ಸಚಿವ ಸುರೇಶ್ ಕುಮಾರ್, ಲೋಕಸಭಾ ಸದಸ್ಯ ಪಿ.ಸಿ.ಮೋಹನ್, ರಾಜ್ಯಸಭಾ ಸದಸ್ಯ ಹನುಮಂತಯ್ಯ, ಮಾಜಿ ಮಹಾಪೌರ ಜಿ.ಪದ್ಮಾವತಿ, ಮಾಜಿ ಉಪಮಹಾಪೌರ ರಂಗಣ್ಣ, ಮಾಜಿ ಮಹಾನಗರ ಪಾಲಿಕೆ ಸದಸ್ಯರುಗಳಾದ ಮಂಜುಳಾವಿಜಯಕುಮಾರ್, ಜಿ.ಕೃಷ್ಣಮೂರ್ತಿ, ಗಂಗಭೈರಯ್ಯ, ಮುನಿರಾಜು, ಮೋಹನ್ ಕುಮಾರ್, ದೀಪಾನಾಗೇಶ್, ರೂಪಲಿಂಗೇಶ್ವರ್ ಮತ್ತು ಜಯರತ್ನ ಅವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಹೃದಯ ಸ್ನೇಹಿ ಚಟುವಟಿಕೆಯಾದ ಬಿರುಸಿನ ನಡಿಗೆಗೆ ಚಾಲನೆ ನೀಡಲಾಗಿದೆ. ಆರೋಗ್ಯ ಕಾಪಾಡಿಕೊಳ್ಳಲು ಬಿರುಸಿನ ನಡಿಗೆ ಸಹಾಯಕ. ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ಹೃದಯ ಮನುಷ್ಯನ ಅಂಗಗಳ ಪೈಕಿ ಅತ್ಯಂತ ಪ್ರಮುಖ ಅಂಗ ಎಂದ ಅವರು ಹೃದಯಾಘಾತವಾದಾಗ ಪ್ರಾಥಮಿಕ ಚಿಕಿತ್ಸೆ ಕುರಿತಂತೆ ಮಾಹಿತಿ ಪ್ರತಿಯೊಬ್ಬರಿಗೂ ಅತ್ಯಗತ್ಯ ಎಂದು ತಿಳಿಸಿದರು.
ಶೇ.60 ರಷ್ಟು ಸಂಭವಿಸುವ ಅಕಾಲಿಕ ಮರಣಗಳಲ್ಲಿ ಶೇ.25 ರಷ್ಟು ಸಾವುಗಳು ಹೃದಯರೋಗದಿಂದ ಸಂಭವಿಸುತ್ತಿದೆ. ಇದನ್ನು ತಡೆಗಟ್ಟಲು ಬಿರುಸಿನ ನಡಿಗೆ ಅತ್ಯುತ್ತಮ ವ್ಯಾಯಾಮವಾಗಿದೆ. ರಾಜ್ಯದ ಜನತೆ ಪ್ರತಿದಿನ ಶ್ರಮಜೀವನಕ್ಕೆ ಬದ್ಧರಾಗಿರಬೇಕು. ಕನಿಷ್ಠ ಅರ್ಧ ಗಂಟೆಯಾದರೂ ಬಿರುಸಿನ ನಡಿಗೆ ಮಾಡಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಕಾರಲ್ಲೇ ಕೂರಿಸಿ ಯುವಕ, ಯುವತಿಯ ವೀಡಿಯೋ ರೆಕಾರ್ಡ್ – 5 ಲಕ್ಷಕ್ಕೆ ಬೆದರಿಕೆ
ಬಿರುಸಿನ ನಡಿಗೆಗೆ ಸ್ಫೂರ್ತಿ ತುಂಬಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದಿನಿಂದ ನಿಯಮಿತವಾಗಿ ವಾಕಿಂಗ್ ಮಾಡುವ ಪ್ರತಿಜ್ಞೆಯನ್ನು ಮುಖ್ಯಮಂತ್ರಿಗಳು ಕೈಗೊಂಡರು. ವ್ಯಕ್ತಿ ಹಾಗೂ ಸಮುದಾಯದ ಆರೋಗ್ಯ ಬಹಳ ಮುಖ್ಯ. ಹೃದಯ ಸದಾ ಬಡಿಯುವ ಅಂಗ, ಇದನ್ನು ಆರೋಗ್ಯಕರವಾಗಿಡುವ ಮೂಲಕ ಆರೋಗ್ಯವಂತ ರಾಜ್ಯವನ್ನು ಕಟ್ಟೋಣ ಎಂದು ತಿಳಿಸಿದರು.
ಈ ವೇಳೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಸಂಸದ ಪಿ.ಸಿ ಮೋಹನ್, ಜಿಲ್ಲಾಧಿಕಾರಿ ಮಂಜುನಾಥ್ ಮೊದಲಾದವರು ಉಪಸ್ಥಿತರಿದ್ದರು.
ಹಾವೇರಿ: ತುಂಗಭದ್ರಾ ನದಿ ತೀರದಲ್ಲಿ ಮರಳು ಸಾಗಾಣಿಕೆಗೆ ಮಕ್ಕಳನ್ನು ಪೋಷಕರು ಬಳಕೆ ಮಾಡಿಕೊಳ್ಳುತ್ತಿರೋ ಶಾಕಿಂಗ್ ವಿಚಾರ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಬಳಿ ನಡೆಯುತ್ತಿದೆ.
ರಾಣೆಬೆನ್ನೂರಿನ ಚಿಕ್ಕಕುರುವತ್ತಿ ಗ್ರಾಮದ ಬಳಿ ಮರಳಿನ ಗಾಡಿ ಓಡಿಸ್ತಿದ್ದ ಬಾಲಕನ ವೀಡಿಯೋ ಈಗ ವೈರಲ್ ಆಗಿದೆ. ಗ್ರಾಮದ ಬಳಿ ಇರೋ ತುಂಗಭದ್ರಾ ನದಿಯಿಂದ ಎತ್ತಿನ ಗಾಡಿಯಲ್ಲಿ ಮರಳು ತುಂಬಿಕೊಂಡು ಪೋಷಕರ ಜೊತೆಗೆ ಬಾಲಕ ಎತ್ತಿನಬಂಡಿಯನ್ನು ಓಡಿಸುತ್ತಿದ್ದನು. ಇದನ್ನೂ ಓದಿ: ಪ್ರತಿಭಟನೆ ನಡೆದರೂ ಚಿಕ್ಕಬಳ್ಳಾಪುರದಲ್ಲಿ KSRTC ಬಸ್ಸುಗಳಿಗೆ ಇಲ್ಲ ಬಂದ್
ಈ ವೇಳೆ ಸ್ಥಳೀಯರು ಇದನ್ನು ಗಮನಿಸಿ ಮರಳಿನ ಗಾಡಿ ತಡೆದು ನಿಲ್ಲಿಸಿ, ಬಾಲಕನನ್ನು ಶಾಲೆಗೆ ಕಳಿಸೋ ಬದಲು ಮರಳು ತುಂಬಿಕೊಂಡು ಬರಲು ಕಳುಸಿದ್ದಕ್ಕೆ ಪೋಷಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನೀವು ಹಾಳು ಆಗಿದ್ದೀರಿ ಮಕ್ಕಳನ್ನು ಹಾಳು ಮಾಡಬೇಡಿ. ಮಕ್ಕಳನ್ನು ಶಾಲೆಗೆ ಕಳುಹಿಸಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಸ್ಥಳೀಯನ ಆಕ್ರೋಶಕ್ಕೆ ಕಂಗಾಲಾಗಿ ಬಾಲಕನ ಪೋಷಕ ಇಲ್ಲದ ಸಬೂಬು ನೀಡಿದ್ದಾನೆ. ವಿಷಯ ಗೊತ್ತಿದ್ದರೂ ಪೊಲೀಸರು ಮಾತ್ರ ಕಣ್ಣುಮುಚ್ಚಿ ಕುಳಿತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದನ್ನೂ ಓದಿ: ಪೊಲೀಸ್ ನೇಮಕಾತಿ ಪರೀಕ್ಷೆ ವೇಳೆ ವಂಚನೆ – ಐವರು ಅರೆಸ್ಟ್