ಹಾವೇರಿ: ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಆಲಮಟ್ಟಿ ಜಲಾಶಯವನ್ನು 524 ಅಡಿಗೆ ಏರಿಕೆ ಮಾಡಲು ತಜ್ಞರ ತಂಡದ ಜತೆ ದೆಹಲಿಯಲ್ಲಿ ಚರ್ಚಿಸುತ್ತೇನೆ. ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿದೆ. ಆದಷ್ಟು ಬೇಗ ನೋಟಿಫಿಕೇಷನ್ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿ ಮರಣ ಪ್ರಮಾಣ ಏರಿಕೆ ಸಂಬಂಧ ತಜ್ಞರ ವರದಿ ಬಂದಿದ್ದು, ಆರೋಗ್ಯ ಇಲಾಖೆಯ ವೈಫಲ್ಯ ಸಾಬೀತಾಗಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ ಅವರು, ಇದು ಹಾವೇರಿ ಜಿಲ್ಲೆಗೆ ಮಾತ್ರ ಸಂಬಂಧಿಸಿದ್ದಲ್ಲ. ಇಡೀ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಕೋವಿಡ್ ಬಂದಾಗ ಹಲವಾರು ಸಮಸ್ಯೆಗಳು ಉಂಟಾಗಿವೆ. ತಜ್ಞರು ಕೆಲವು ಸಲಹೆ, ಸೂಚನೆ ನೀಡಿದ್ದಾರೆ. ಆರೋಗ್ಯ ಇಲಾಖೆಯನ್ನು ಉನ್ನತೀಕರಣಗೊಳಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.
– ಶೈಕ್ಷಣಿಕ ಸಾಮಾಜಿಕ ಸಮಿಕ್ಷೆ ವರದಿಯನ್ನು ಜಾರಿಗೆ ತನ್ನಿ – ಸಿಎಂ ಬೊಮ್ಮಾಯಿ, ಸಮಾಜ ಕಲ್ಯಾಣ ಸಚಿವರಿಗೆ ಮನವಿ
ಬೆಂಗಳೂರು: ಕಾಂತರಾಜ್ ವರದಿಯನ್ನು ಜಾರಿಗೆ ತನ್ನಿ ಹಾಗೂ ಬಲಿಷ್ಠ ಸಮುದಾಯಗಳನ್ನು ಪ್ರವರ್ಗ 2 ಎ ಗೆ ಸೇರಿಸಬಾರದಂತೆ ಆಗ್ರಹಿಸಿ ಇಂದು ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು.
ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಎಂ.ಸಿ ವೇಣುಗೋಪಾಲ್ ಮಾತನಾಡಿ, ರಾಜ್ಯದಲ್ಲಿ ಈಗಾಗಲೇ ನಡೆಸಿರುವ ಕಾಂತರಾಜ್ ವರದಿಯನ್ನು ಜಾರಿಗೊಳಿಸಬೇಕು. ಆ ಮೂಲಕ ಜಾತಿಗೆ ಅನುಗುಣವಾಗಿ ಸರ್ಕಾರದಲ್ಲಿ ಅನುಕೂಲವಾಗಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ಅಲ್ಲದೆ 2ಎ ಗೆ ಪ್ರಬಲ ಜಾತಿಗಳನ್ನು ಸೇರಿಸಬಾರದು. ಹಾಗೆಯೇ, ಅತಿ ಹಿಂದುಳಿದ ವರ್ಗಗಳ ಮಠ ಮಾನ್ಯಗಳಿಗೆ ಸಂಘ ಸಂಸ್ಥೆಗಳೀಗೆ ಪ್ರಬಲ ಜಾತಿಗಳಿಗೆ ಕೊಟ್ಟಂತೆಯೇ ಅನುದಾನ ಕೋಡಬೇಕು. ಸಮುದಾಯ ಭವನ ವಿದ್ಯಾರ್ಥಿ ಭವನ ಸ್ಥಾಪನೆಗೆ ಅನುಕೂಲ ಮಾಡಿಕೊಡಬೇಕು ಎನ್ನುವ ಪ್ರಮುಖ ಅಂಶಗಳನ್ನು ಮುಖ್ಯಮಂತ್ರಿಗಳ ಮುಂದೆ ಪ್ರಸ್ತಾಪಿಸಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ವೈದ್ಯಕೀಯ ಸೀಟ್‍ನಲ್ಲಿ OBC ಶೇ.27, EWSಗೆ ಶೇ.10 ಮೀಸಲಾತಿ
ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಗೌರವಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡಿ, ಈ ನಾಡಿನಲ್ಲಿ ಆತಿ ಸಣ್ಣ ಹಾಗೂ ಅತಿ ಸೂಕ್ಷ್ಮ ಸಮುದಾಯಗಳಿವೆ, ಧ್ವನಿಯೇ ಇಲ್ಲದ ಈ ಅಸಂಘಟಿತ ಸಮುದಾಯಗಳು ತಮಗೆ ಆಸ್ಮಿತೆಯೇ ಇಲ್ಲದೆ ಸರ್ಕಾರದ ಯಾವುದೇ ನೆರವು, ಸಹಕಾರ, ಅನುದಾನ, ಮೀಸಲಾತಿಗಳನ್ನು ಪಡೆಯುವುದರಲ್ಲಿ ವಿಫಲವಾಗಿವೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡವನ್ನು ಹೊರತುಪಡಿಸಿ, ಧಾರ್ಮಿಕ ಅಲ್ಪ ಸಂಖ್ಯಾತರನ್ನು ಒಳಗೊಂಡಂತೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಐದು ಪ್ರವರ್ಗಗಳಿವೆ. ಈ ಐದೂ ಪ್ರವರ್ಗಗಳಿಗೆ ಶೇಕಡಾ 32 ಮೀಸಲಾತಿ ಇದೆ. ಪ್ರವರ್ಗ ಒಂದರಲ್ಲಿ 95 ಜಾತಿಗಳಿದ್ದು 4% ಮೀಸಲಾತಿ ಇದೆ. ಅಂತೆಯೇ ಪ್ರವರ್ಗ 2(ಎ) ನಲ್ಲಿ 102 ಜಾತಿಗಳಿದ್ದು, 15% ಮೀಸಲಾತಿ ಇದೆ. ಪ್ರವರ್ಗ 2(ಬಿ) ನಲ್ಲಿ ಮುಸ್ಲಿಂ ಸಮುದಾಯವಿದ್ದು ಶೇಕಡಾ 4% ಮೀಸಲಾತಿ ಇದೆ. ಪ್ರವರ್ಗ 3(ಎ) ನಲ್ಲಿ ಒಕ್ಕಲಿಗರು ಮತ್ತಿತರಿದ್ದು ಶೇಕಡಾ 4% ಮತ್ತು ಪ್ರವರ್ಗ 3(ಬಿ) ನಲ್ಲಿ ವೀರಶೈವ ಲಿಂಗಾಯಿತ ಮತ್ತಿತರ ಜಾತಿಗಳಿದ್ದು ಶೇಕಡಾ 5% ಮೀಸಲಾತಿ ಇದೆ. ದುರಂತವೆಂದರೆ ಈ ಪಟ್ಟಿಯಲ್ಲಿರುವ ಬಲಿಷ್ಟ ಮತ್ತು ಸಂಘಟಿತ ಜಾತಿಗಳು ಸಹಜವಾಗಿಯೇ ಪ್ರಾತಿನಿದ್ಯದ ಫಲಗಳನ್ನು ಕಾಣುತ್ತಿದ್ದು, ಪ್ರವರ್ಗ ಒಂದು ಮತ್ತು 2(ಬಿ) ನಲ್ಲಿರುವ ಅತಿ ಹಿಂದುಳಿದ ಜಾತಿಗಳು ಅವಕಾಶ ವಂಚಿತವಾಗಿವೆ. ಇದನ್ನೂ ಓದಿ: ಅಕ್ಟೋಬರ್ 1ರೊಳಗೆ ಮೀಸಲಾತಿ ಪ್ರಕಟಿಸಿ- ಸರ್ಕಾರಕ್ಕೆ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಸಂದೇಶ
ಈ ಹಿನ್ನೆಲೆಯಲ್ಲಿ ಈ ಎಲ್ಲಾ ಪ್ರವರ್ಗಗಳನ್ನು ಪುನರ್ ವರ್ಗೀಕರಣ ಮಾಡುವ ಅವಶ್ಯಕತೆ ಇದೆ. ಇದರೊಂದಿಗೆ ಸದರಿ ಪ್ರವರ್ಗಗಳು ಹಿಂದುಳಿದ ವರ್ಗಗಳ ಯಾವುದೇ ಆಯೋಗದ ಶಿಫಾರಸಿನ ಮೇಲೆ ಆದವುಗಳಲ್ಲ. ಈ ಕಾರಣಕ್ಕೆ ಇಲ್ಲಿನ ವರ್ಗೀಕರಣ ಅತ್ಯಂತ ಅವೈಜ್ಞಾನಿಕವಾದುದು ಮತ್ತು ಕುಲಶಾಸ್ತ್ರೀಯ ಅಧ್ಯಯನದ ದೃಷ್ಟಿಯಿಂದಲೂ ಅಸಮರ್ಪಕವಾದ್ದು ಎಂದು ಹೇಳಿದರು. ಇದನ್ನೂ ಓದಿ: ಪಂಚಮಸಾಲಿ 2ಎ ಮೀಸಲಾತಿ- ದುಂಡು ಮೇಜಿನ ಸಭೆಯಲ್ಲಿ ಪಂಚ ನಿರ್ಣಯ ಪಾಸ್
ವೇದಿಕೆಯ ಗೌರವ ಸಲಹೆಗಾರರಾದ ಡಾ.ಸಿ.ಎಸ್ ದ್ವಾರಕಾನಾಥ್ ಮಾತನಾಡಿ, ರಾಜ್ಯದಲ್ಲಿ ಅತಿ ಹಿಂದುಳಿದ ಜಾತಿಗಳಿಗೆ ಸಮರ್ಪಕವಾದಂತಹ ಧ್ವನಿ ಎತ್ತುವಂತಹ ಜನರಿಲ್ಲ. ಈ ವರ್ಗಗಳಿಗೆ ದೊರಕಬೇಕಾದಂತಹ ಮೀಸಲಾತಿಯನ್ನು ಕಿತ್ತುಕೊಂಡು ಪ್ರಬಲ ಜಾತಿಗಳಿಗೆ ಅವಕಾಶ ಮಾಡಿಕೊಡುವುದು ಸರಿಯಲ್ಲ ಎನ್ನುವುದನ್ನು ಮುಖ್ಯಮಂತ್ರಿಗಳು ಹಾಗೂ ಸಚಿವರ ಗಮನಕ್ಕೆ ತಂದಿದ್ದೇವೆ. ಮಾನ್ಯ ಮುಖ್ಯಮಂತ್ರಿಗಳು ನಮ್ಮ ಎಲ್ಲಾ ಬೇಡಿಕೆಯನ್ನು ಸಾವಧಾನವಾಗಿ ಕೇಳಿಸಿಕೊಂಡಿದ್ದು ಭರವಸೆ ನೀಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಎಸ್.ಟಿ. ಸಮುದಾಯದ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಬಿಜೆಪಿ ಎಸ್.ಟಿ. ಮೋರ್ಚಾ ಮನವಿ
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಗೌರವ ಸಲಹೆಗಾರರಾದ ಡಾ. ಸಿ.ಎಸ್.ದ್ವಾರಕಾನಾಥ್, ಗೌರವ ಅಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು, ಅಧ್ಯಕ್ಷರಾದ ಎಂ.ಸಿ.ವೇಣುಗೋಪಾಲ್, ಎಂಎಲ್‍ಸಿ ಪಿ ಆರ್ ರಮೇಶ್, ಮಾಜಿ ಶಾಸಕರಾದ ನೆ.ಲ.ನರೇಂದ್ರ ಬಾಬು, ಸೇರಿದಂತೆ ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: 2ಎ ಮೀಸಲಾತಿ ಹೋರಾಟ ಮುಂದುವರಿಯುತ್ತದೆ: ಯತ್ನಾಳ್
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದ ಸಚಿವರ ಅಸಮಾಧಾನ ಮುಂದುವರಿದಿದ್ದು, ಈ ಬಗ್ಗೆ ಹೈಕಮಾಂಡ್‍ಗೆ ದೂರು ನೀಡಲು ಮುಖ್ಯಮಂತ್ರಿಗಳು ಮುಂದಾಗಿರುವ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಸಂಪುಟದಲ್ಲಿ ಬಯಸಿದ ಖಾತೆ ಸಿಗದ್ದಕ್ಕೆ ಮುನಿಸಿಕೊಂಡಿರುವ ಇಬ್ಬರು ಮತ್ತು ಸಚಿವ ಸ್ಥಾನ ತಪ್ಪಿದ್ದಕ್ಕೆ ಲಾಬಿಗೆ ಮುಂದಾಗಿರುವ ಒಬ್ಬರ ನಡೆಯ ಬಗ್ಗೆ ಹೈಕಮಾಂಡ್‍ಗೆ ವಿವರಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ:ಸುಖದ ನಿದ್ದೆಯಲ್ಲಿದ್ದ ನನಗೆ ಈಗ ಪೊಲೀಸರು ನಿದ್ದೆ ಮಾಡಲು ಬಿಡುತ್ತಿಲ್ಲ – ಅರಗ ಜ್ಞಾನೇಂದ್ರ
ಆ ಮೂವರು, ಸಂಪುಟ ಬಿಕ್ಕಟ್ಟು:
ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಖಾತೆ ಬದಲಾವಣೆಗೆ ಪಟ್ಟು ಹಿಡಿದಿದ್ದಾರೆ. ಸಿಎಂ ಮತ್ತು ಮಾಜಿ ಸಿಎಂ ಬಿಎಸ್‍ವೈ ಮನವಿ ಮೇರೆಗೆ ಆಗಸ್ಟ್ 15ರಂದು ಹೊಸ ಜಿಲ್ಲೆ ವಿಜಯನಗರದಲ್ಲಿ ಧ್ವಜಾರೋಹಣ ನೆರವೇರಿಸಿದ್ದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ್ದ ಆನಂದ್ ಸಿಂಗ್, ಅಭೀ ಪಿಕ್ಚರ್ ಬಾಕೀ ಹೈ ಅನ್ನೋ ಹೇಳಿಕೆ ನೀಡಿದ್ದರು. ಈ ಹೇಳಿಕೆ ಬೆನ್ನಲ್ಲೇ ಆನಂದ್ ಸಿಂಗ್ ಅವರನ್ನ ಇರೋ ಖಾತೆಯಲ್ಲಿಯೇ ಮುಂದುವರಿಸಬೇಕಾ ಅಥವಾ ಬೇಡವಾ? ಒಂದು ವೇಳೆ ಖಾತೆ ಬದಲಾದ್ರೆ ಇನ್ನುಳಿದ ಸಚಿವರು ಮುನಿಸಿಕೊಂಡು ತಮಗೂ ಪ್ರಭಾವಿ ಖಾತೆ ಕೊಡುವಂತೆ ಉಳಿದ ಮಂತ್ರಿಗಳು ಬೇಡಿಕೆ ಇಡಬಹುದು. ಆದ್ರೆ ಖಾತೆ ಬದಲಿಸದೇ ಇದ್ದರೇ ಆನಂದ್ ಸಿಂಗ್ ರಾಜೀನಾಮೆ ಆತಂಕ ಸಹ ಮುಖ್ಯಮಂತ್ರಿಗಳಿಗೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.
ಇತ್ತ ಸಿಡಿ ಪ್ರಕರಣದಿಂದಾಗಿ ಸಂಪುಟದಿಂದ ದೂರ ಉಳಿದಿರುವ ಶಾಸಕ ರಮೇಶ್ ಜಾರಕಿಹೊಳಿ ಸಹ ಮಂತ್ರಿಗಿರಿಗಾಗಿ ಒತ್ತಡ ಹಾಕುತ್ತಿದ್ದಾರೆ ಎನ್ನಲಾಗಿದೆ. ಇತ್ತ ಸಚಿವ ಸ್ಥಾನ ತಪ್ಪಿದ್ದಕ್ಕೆ ಮುನಿಸಿಕೊಂಡಿರುವ ಎಂಎಲ್‍ಸಿ ಸಿ.ಪಿ.ಯೋಗೇಶ್ವರ್ ಲಾಬಿಗೆ ಮುಂದಾಗಿದ್ದಾರೆ. ಈ ಮೂವರಿಂದ ಸರ್ಕಾರಕ್ಕೆ ಆಡಳಿತ ನಡೆಸಲು ಸಾಧ್ಯವಾಗುತ್ತಿಲ್ಲ. ಈ ಕುರಿತು ನೀವೇ ತೀರ್ಮಾನ ತೆಗೆದುಕೊಳ್ಳಬೇಕೆಂದು ಹೈಕಮಾಂಡ್‍ಗೆ ವರದಿ ಸಲ್ಲಿಸಲು ಸಿಎಂ ಬೊಮ್ಮಾಯಿ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಹಾಕಿದ ಪ್ರಕರಣ- ಆರೋಪಿಗಳು 14 ದಿನ ಪೊಲೀಸ್ ಕಸ್ಟಡಿಗೆ
ಸರ್ಕಾರದ ಮೇಲೆ ಆರ್‍ಎಸ್‍ಎಸ್ ಹಿಡಿತ?:
ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಬಳಿಕ ಸಿಎಂ ಬೊಮ್ಮಾಯಿ ಸರ್ಕಾರದ ಮೇಲೆ ಆರ್‍ಎಸ್‍ಎಸ್ ಹಿಡಿತ ಸಾಧಿಸುತ್ತಿರುವ ಬಗ್ಗೆ ತಿಳಿದು ಬಂದಿದೆ. ಬೊಮ್ಮಾಯಿ ಆಪ್ತ ವಲಯದಲ್ಲಿ ಸಂಘ ಪರಿವಾರದ ಸೂಚಿಸಿದ ಸಚಿವರು ಇರಬೇಕು. ಆರ್‍ಎಸ್‍ಎಸ್ ಸೂಚಿಸಿದವರನ್ನೇ ಸುತ್ತಮುತ್ತ ನಿಯೋಜಿಸಿಕೊಳ್ಳುವಂತೆ ಸಿಎಂ ಬೊಮ್ಮಾಯಿಗೆ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದೆ. ಸಿಎಂ ಕಚೇರಿ, ಸಚಿವರ ಕಚೇರಿಯಲ್ಲಿ ಸಂಘ ಸೂಚಿತರಿಗೆಷ್ಟೇನಾ ಜಾಗ ಮೀಸಲಿಡುವ ಮೂಲಕ ಎಲ್ಲರ ಮೇಲೆ ನೇರ ನಿಗಾ ಇಡುವ ಸಲುವಾಗಿ ಆರ್‍ಎಸ್‍ಎಸ್ ತಂತ್ರ ರಚಿಸಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ:ಜೆಡಿಎಸ್‍ಗೆ ಬಿಗ್ ಶಾಕ್ ಕೊಡಲು ಡಿಕೆಶಿ ರಣತಂತ್ರ
ಮಂಗಳೂರು: ನಗರದ ಹೃದಯ ಭಾಗದಲ್ಲಿರುವ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೆಡಿಸಿನ್ ವಿಭಾಗದ ನೂತನ ಐಸಿಯು ಘಟಕವನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಗುರುವಾರ ಉದ್ಘಾಟಿಸಿದರು.
ವೆನ್ಲಾಕ್ ಸರ್ಕಾರಿ ಆಸ್ಪತ್ರೆಯಲ್ಲಿ 32 ಬೆಡ್ ಗಳ ಹೈಟೆಕ್ ಐಸಿಯು ಉದ್ಘಾಟನೆ ಮಾಡಿದ್ದು, ಮುಂದಿನ ದಿನಗಳಲ್ಲಿ ಬಡವರಿಗೂ ಒಳ್ಳೆಯ ಹೈಟೆಕ್ ವ್ಯವಸ್ಥೆ ಸರ್ಕಾರ ಮಟ್ಟದಲ್ಲೇ ಸಿಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ಅಧಿಕೃತ ಖಾತೆ ಸೇರಿದಂತೆ ನಾಯಕರ ಟ್ವಿಟ್ಟರ್ ಖಾತೆ ಬ್ಲಾಕ್
ಈ ಸಂದರ್ಭದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸುನಿಲ್ ಕುಮಾರ್, ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವರಾದ ಡಾ. ಸುಧಾಕರ್, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ.ವೈ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಪೊಲೀಸ್ ಆಯುಕ್ತ ಶಶಿಕುಮಾರ್, ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಡಿಎಚ್‍ಒ ಡಾ. ಕಿಶೋರ್ ಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕರು ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಕ್ಯಾಂಟೀನ್, ಬೇಕಾದ್ರೆ ನೆಹರು ಹುಕ್ಕಾ ಬಾರ್ ತೆರೆಯಲಿ : ಸಿಟಿ ರವಿ
ಉಡುಪಿ: ಜಿಲ್ಲೆಯಲ್ಲಿ ಸಾಂಕ್ರಾಮಿಕ ಕೊರೊನಾ ಪಾಸಿಟಿವ್ ಪ್ರಕರಣ ವ್ಯಾಪಕವಾಗಿ ಹಬ್ಬುತ್ತಿದೆ. ಪ್ರತಿದಿನ ನೂರರ ಆಸುಪಾಸಿನಲ್ಲಿ ಕೋವಿಡ್ ಪ್ರಕರಣಗಳು ದಾಖಲಾಗುತ್ತಿವೆ. ಪಾಸಿಟಿವಿಟಿ ರೇಟ್ 2- 3 ಶೇಕಡಾ ದಾಖಲಾಗುತ್ತಿದ್ದು, ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ಬಂದು ಅಧಿಕಾರಿಗಳ ಸಭೆ ನಡೆಸಲಿದ್ದಾರೆ.
ಕೊರೊನಾ ಸಾಂಕ್ರಾಮಿಕ ರೋಗ ರಾಜ್ಯದ ಇತರ ಜಿಲ್ಲೆಗಳಲ್ಲಿ ಇಳಿಮುಖವಾಗಿದೆ. ಕರಾವಳಿ ಜಿಲ್ಲೆ ಉಡುಪಿಯಲ್ಲಿ ಪ್ರತಿದಿನ ನೂರರ ಆಸುಪಾಸಿನಲ್ಲಿ ಪ್ರಕರಣಗಳು ಗೋಚರವಾಗುತ್ತಿದೆ. ಜಿಲ್ಲೆಯಲ್ಲಿ ಸೆಕ್ಷನ್ 144(3) ಜಾರಿ ಮಾಡಲಾಗಿದೆ. ಸಭೆ ಸಮಾರಂಭಗಳಿಗೆ ಅವಕಾಶ ನೀಡಲಾಗುತ್ತಿಲ್ಲ. ಆದರೂ ಪ್ರಾಥಮಿಕ ಸಂಪರ್ಕದಿಂದಲೇ ಅತಿ ಹೆಚ್ಚು ಪಾಸಿಟಿವ್ ಪ್ರಕರಣಗಳು ಬರುತ್ತಿದೆ.
ಸಿಎಂ ಬಸವರಾಜ ಬೊಮ್ಮಾಯಿ ಗಡಿ ಮತ್ತು ಪಕ್ಕದ ಜಿಲ್ಲೆಯಲ್ಲಿ ಕೊರೊನಾ ವ್ಯಾಪಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಈಗಾಗಲೇ ಎರಡು ಬಾರಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ. ಗುರುವಾರ ನೂತನ ಸಿಎಂ ಕರಾವಳಿ ಜಿಲ್ಲೆಯ ಪ್ರವಾಸ ಮಾಡಲಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3 ಕ್ಕೆ ಉಡುಪಿ ಜಿಲ್ಲೆಗೆ ಆಗಮಿಸಲಿರುವ ಸಿಎಂ ಬೊಮ್ಮಾಯಿ, ಮಣಿಪಾಲದ ರಜತಾದ್ರಿ ಜಿಲ್ಲಾಧಿಕಾರಿಗಳ ಸಂಕೀರಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ವೈದ್ಯಾಧಿಕಾರಿಗಳ ಸಭೆ ನಡೆಸಲಿದ್ದಾರೆ. ಇದನ್ನೂ ಓದಿ: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಒಂದು ವರ್ಷ
ಉಡುಪಿ ಜಿಲ್ಲಾ ಆಸ್ಪತ್ರೆಗೆ ಸಿಎಂ ಶಂಕುಸ್ಥಾಪನೆ
ದಕ್ಷಿಣ ಕನ್ನಡ ಜಿಲ್ಲೆಯಿಂದ ಉಡುಪಿ ಬೇರ್ಪಟ್ಟು 24 ವರ್ಷ ಆಗಿದೆ. ನೂತನ ಜಿಲ್ಲೆಯಾಗಿ ಉಡುಪಿಯನ್ನು ಘೋಷಣೆ ಮಾಡಿದಾಗ ತಾಲೂಕು ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯಾಗಿ ಘೋಷಣೆ ಮಾಡಲಾಗಿತ್ತು. ಎರಡು ದಶಕ ಕಳೆದರೂ ಜಿಲ್ಲೆಗೊಂದು ಸುಸಜ್ಜಿತ ಜಿಲ್ಲಾಸ್ಪತ್ರೆ ಇರಲಿಲ್ಲ. ಹಿಂದಿನ ಸಿಎಂ ಬಿಎಸ್ ಯಡಿಯೂರಪ್ಪ ಉಡುಪಿ ಜಿಲ್ಲಾ ಆಸ್ಪತ್ರೆಗೆ ಅನುದಾನ ತೆಗೆದಿಟ್ಟಿದ್ದರು. ಉಡುಪಿ ಪ್ರವಾಸ ಕೈಗೊಳ್ಳಲಿರುವ ಸಿಎಂ ಬಸವರಾಜ ಬೊಮ್ಮಾಯಿ ಹೊಸ ಆಸ್ಪತ್ರೆಗೆ ಗುದ್ದಲಿ ಪೂಜೆ ಮಾಡಲಿದ್ದಾರೆ ಎಂದು ಶಾಸಕ ರಘುಪತಿ ಭಟ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ:‘ಬೀಪ್’ ಹಾಕುವ ಪದ ಬಳಸಿದ ಮಂತ್ರಿ ಈಶ್ವರಪ್ಪ- ಕಾಂಗ್ರೆಸ್‍ನವರು ಕುಡುಕ ….. ಮಕ್ಕಳು ಎಂದ ಸಚಿವ
ಬಳ್ಳಾರಿ: ಖಾತೆ ಬದಲಾವಣೆಗೆ ಪಟ್ಟು ಹಿಡಿದಿರುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಇದೀಗ ಅಸಮಾಧಾನದಿಂದ ತಮ್ಮ ಶಾಸಕರ ಕಚೇರಿಯ ಬೋರ್ಡ್ ತೆರವುಗೊಳಿಸುತ್ತಿದ್ದಾರೆ.
ಪ್ರವಾಸೋದ್ಯಮ ಖಾತೆ ನೀಡಿದ ಹಿನ್ನೆಲೆ ಆನಂದ್ ಸಿಂಗ್ ಅಸಮಾಧಾನಗೊಂಡಿದ್ದು, ಖಾತೆ ಬದಲಾವಣೆಗೆ ಪಟ್ಟು ಹಿಡಿದಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಮಾತುಕತೆಯನ್ನೂ ನಡೆಸಿದ್ದರು. ಆದರೆ ಈ ವೇಳೆ ಸಿಎಂ ಎರಡು ದಿನ ಸಮಯ ಕೇಳಿದ್ದರು ಎನ್ನಲಾಗಿದೆ. ಇದೀಗ ಮುಖ್ಯಮಂತ್ರಿಗಳಿಂದ ಸಕಾರಾತ್ಮಕ ಸ್ಪಂದನೆ ದೊರೆಯದ ಹಿನ್ನೆಲೆ ಕಳೆದ 14 ವರ್ಷದಿಂದ ಹೊಸಪೇಟೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಮ್ಮ ಕಚೇರಿಯನ್ನು ತೆರವುಗೊಳಿಸಲು ಮುಂದಾಗಿದ್ದಾರೆ.
ಹೊಸಪೇಟೆ ಶಾಸಕರ ಕಚೇರಿ ಬೋರ್ಡ್ ತೆರವುಗೊಳಿಸುತ್ತಿದ್ದು, ಸಂಪೂರ್ಣ ಕಚೇರಿ ಬಂದ್ ಮಾಡಲು ಆನಂದ್ ಸಿಂಗ್ ಮುಂದಾಗಿದ್ದಾರೆ. ಕ್ರೇನ್ ಮೂಲಕ ಕಚೇರಿಯನ್ನು ತೆರವುಗೊಳಿಸುತ್ತಿದ್ದಾರೆ. ಈ ಹಿಂದೆಯೂ ಸಮ್ಮಿಶ್ರ ಸರ್ಕಾರದಲ್ಲಿ ಮುನಿಸಿಕೊಂಡು ಆನಂದ ಸಿಂಗ್ ರಾಜೀನಾಮೆ ನೀಡಿದ್ದರು. ಇದೀಗ ಆನಂದ್ ಸಿಂಗ್ ನಡೆಯಿಂದ ಬಿಜೆಪಿಯಲ್ಲಿ ಅತಂಕ ಜೊತೆ ಭಿನ್ನಮತೀಯ ಚಟುವಟಿಕೆ ಜೋರಾಗುವ ಸುಳಿವು ಸಿಕ್ಕಿದೆ.
ಭಾನುವಾರ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಆನಂದ್ ಸಿಂಗ್ ಸುಮಾರು ಅರ್ಧ ಗಂಟೆಗಳ ಕಾಲ ಮಾತನಾಡಿದ್ದರು. ಆದ್ರೆ ಭೇಟಿ ವೇಳೆ ಆನಂದ್ ಸಿಂಗ್ ಮನವೊಲಿಸಲು ಸಿಎಂ ವಿಫಲರಾಗಿದ್ದರು ಎಂಬ ಮಾತುಗಳು ಕೇಳಿ ಬಂದಿದ್ದವು. ಭೇಟಿಯ ಬಳಿಕ ಆನಂದ್ ಸಿಂಗ್ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ಹಿಂದಿರುಗಿದ್ದರು. ಆನಂದ್ ಸಿಂಗ್ ಬೆನ್ನಲ್ಲೇ ಮತ್ತೋರ್ವ ಅಸಮಧಾನಿತ ಸಚಿವ ಎಂಟಿಬಿ ನಾಗರಾಜ್ ಸಹ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಚರ್ಚೆ ನಡೆಸಿ, ಎರಡ್ಮೂರು ದಿನಗಳಲ್ಲಿ ತಮ್ಮ ನಿರ್ಧಾರ ತಿಳಿಸುವದಾಗಿ ಹೇಳಿ ಖಾತೆ ಹಂಚಿಕೆ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದರು.
ಚಿಕ್ಕಬಳ್ಳಾಪುರ: ಸಿಎಂ ಬದಲಾವಣೆ ಹಾಗೂ ಸಂಪುಟ ರಚನೆಯಿಂದ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗಲಿದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಚಿಕ್ಕಬಳ್ಳಾಪುರದಲ್ಲಿ ಸಚಿವ ಸುಧಾಕರ್ ತಿರುಗೇಟು ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಕನಸು ನನಸಾಗಲ್ಲ. ಸಿದ್ದರಾಮಯ್ಯನವರು ಕನಸು ಕಾಣುತ್ತಲೇ ಇರಲಿ. ಅವರ ಕನಸು ಯಾವತ್ತು ನನಸಾಗಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಸಿಎಂ ಬದಲಾವಣೆ ಸಂಪುಟ ರಚನೆ ಮಾಡಿದ್ದು, ಬೆಟ್ಟ ಅಗೆದು ಇಲಿ ಹಿಡಿದ್ರು ಎಂಬ ಹೇಳಿಕೆಗೆ, ಸಿಎಂ ಬದಲಾವಣೆ ಸಂಪುಟ ರಚನೆ ಬಿಜೆಪಿ ಪಕ್ಷದ ತೀರ್ಮಾನ. ನಮ್ಮ ಪಕ್ಷ ಹಾಗೂ ನಾಯಕರ ತೀರ್ಮಾನ. ಸಿದ್ದರಾಮಯ್ಯನವರಿಗೆ ಯಾಕೆ ಈ ಉಸಾಬರಿ ಎಂದು ಪ್ರಶ್ನಿಸಿದ್ದಾರೆ. ಜೊತೆಗೆ ಅವರಿಗೇನು ಈ ವಿಚಾರ ಅಗತ್ಯ ಇಲ್ಲ. ಈ ಸರ್ಕಾರ ಆಡಳಿತ ಹೇಗೆ ಕೊಡುತ್ತದೆ ಅಂತ ವ್ಯಾಖ್ಯಾನ ಕೊಡಲಿ. 2-3 ತಿಂಗಳು ಸಿಎಂ ಹೇಗೆ ವ್ಯವಹರಿಸುತ್ತಾರೆ ಅಂತ ನೋಡುತ್ತೇವೆ ಎಂದು ಹೇಳಿದರು. ಆದರೆ ಈಗ ಎರಡೇ ದಿನಕ್ಕೆ ಈ ರೀತಿ ಮಾತಾನಾಡುತ್ತಿದ್ದಾರೆ ಅಂತ ಸಿದ್ದರಾಮಯ್ಯನವರ ವಿರುದ್ಧ ಮಾತನಾಡಿದ್ದಾರೆ.
ಇದೇ ವೇಳೆ ಸಚಿವ ಸಂಪುಟ ರಚನೆಯಿಂದ ಅಸಮಾಧಾನಿತರಾದವರಿಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ಸಿಗಲಿದೆ. ಎಲ್ಲಾ ಶಾಸಕರಿಗೆ ಮಂತ್ರಿಯಾಗಬೇಕು ಎಂಬ ಆಸೆ ಇರುತ್ತೆ. ಅದಕ್ಕೆ ಅರ್ಹತೆ ಆಕಾಂಕ್ಷೆ ಸಹ ಇರುತ್ತೆ. ಆದರೆ ಎಲ್ಲರನ್ನೂ ಸಂಪುಟದಲ್ಲಿ ಸೇರಿಸಿಕೊಳ್ಳಲು ಅಸಾಧ್ಯ. ಪ್ರಾದೇಶಿಕ ಸಮತೋಲನ, ಜಾತಿವಾರು ಅವಕಾಶದ ಆಧಾರದ ಮೇಲೆ ಸಿಎಂ ಹಾಗೂ ಬಿಜೆಪಿ ನಾಯಕರು ಸಂಪುಟ ರಚನೆ ಮಾಡಿದ್ದಾರೆ. ಅವಕಾಶ ವಂಚಿತರಿಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನ ಮಾನ ಸಿಗಲಿದ್ದು, ಅವರ ಆಕಾಂಕ್ಷೆ ಫಲಿಸುತ್ತೆ ಎಂದಿದ್ದಾರೆ. ಇದನ್ನೂ ಓದಿ:ಇಡಿಯವರು ಅವರ ಕೆಲಸ ಮಾಡ್ಲೇಬಾರದಾ: ಮಾಧುಸ್ವಾಮಿ ಪ್ರಶ್ನೆ
ಬೆಂಗಳೂರು: ನಮ್ಮಲ್ಲಿ ಯಾವುದೇ ಪರ, ವಿರೋಧ ಬಣಗಳಿಲ್ಲ. ಸಚಿವ ಸಂಪುಟ ರಚನೆ ವೇಳೆ ಈ ರೀತಿಯ ಅಸಮಾಧಾನಗಳು ಸಹಜ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮಾರ್ಗದರ್ಶನ, ಸಿಎಂ ಬಸವರಾಜ ಬೊಮ್ಮಯಿ ನೇತೃತ್ವದಲ್ಲಿ ಹೊಸದಾಗಿ ಸಚಿವ ಸಂಪುಟ ರಚನೆ ಮಾಡಲಾಗಿದೆ. ಪ್ರಾದೇಶಿಕ ಮತ್ತು ಭೋಗೋಳಿಕ ಅಧಾರದ ಮೇಲೆ ಸ್ಥಾನಗಳನ್ನು ನೀಡಲಾಗಿದೆ. ಸಚಿವ ಸ್ಥಾನ ವಂಚಿತರು ಯಾರೂ ಪಕ್ಷ ಬಿಡುವುದಿಲ್ಲ. ಯಾವುದೇ ಸರ್ಕಾರ ಹೊಸದಾಗಿ ಸಚಿವ ಸಂಪುಟ ರಚನೆ ಮಾಡಿದ ವೇಳೆ ಈ ರೀತಿ ಅಸಮಾಧನಗಳು ಆಗೋದು ಸಹಜ ಎಂದರು.
ಕೆಲ ಹಿರಿಯರನ್ನು ಸಚಿವ ಸಂಪುಟದಿಂದ ಕೈ ಬಿಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿ, ಮುಂದಿನ ಚುನಾವಣೆಗೆ ಅವರ ಅವಶ್ಯಕತೆ ಇರುವ ದೃಷ್ಟಿಯಿಂದ ಕೆಲವರನ್ನು ಕೈಬಿಡಲಾಗಿದೆ. ಯಾವುದೇ ಬಣ ರಾಜಕೀಯ ನಮ್ಮಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದರು.
ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟ ರಚನೆ ಕಸರತ್ತು ಕೊನೆಗೂ ಮುಗಿದಿದೆ. ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಸಿಎಂ ಬಸರಾಜ ಬೊಮ್ಮಯಿ ಕಸರತ್ತು ನಡೆಸಿದ್ದರು. ಪಟ್ಟಿ ಬಿಡುಗಡೆಯ ನಂತರ ಕೆಲವರು ಖುಷಿಪಟ್ಟರೆ, ಮತ್ತಷ್ಟು ಜನ ತೀವ್ರ ಅಸಮಾಧನ ವ್ಯಕ್ತಪಡಿಸಿದರು. ಪ್ರಮುಖವಾಗಿ ಶಾಸಕ ರಾಜೂಗೌಡ, ರೇಣುಕಾಚಾರ್ಯ, ಸೇರಿದಂತೆ ಕೆಲವರು ತಮ್ಮ ಅಸಮಾಧನ ಹೊರ ಹಾಕಿದರು.
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸೇರುವ ನಾಯಕರ ಪಟ್ಟಿ ಕೊನೆಗೂ ಅಂತಿಮಗೊಂಡಿದ್ದು, ಇಂದು 29 ಮಂದಿಯ ಹೆಸರುವುಳ್ಳ ಪಟ್ಟಿ ಅಧಿಕೃತವಾಗಿದೆ. ವಲಸಿಗರ ಕೋಟಾದಲ್ಲಿ ಜನ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು ಮಾಧ್ಯಾಹ್ನ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.
ಮೂರು ದಿನಗಳಿಂದ ದೆಹಲಿಯಲ್ಲಿಯೇ ಉಳಿದುಕೊಂಡಿದ್ದ ಸಿಎಂ ಬೊಮ್ಮಾಯಿ ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದರು. ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಎಲ್ಲರಿಗೂ ಶುಭ ಕೋರಿದರು. ಈ ಬಾರಿ ಯಾವುದೇ ಡಿಸಿಎಂ ಹುದ್ದೆ ಸೃಷ್ಟಿಗೆ ಬಿಜೆಪಿ ಹೈಕಮಾಂಡ್ ಮುಂದಾಗಿಲ್ಲ. 8 ಲಿಂಗಾಯತ, 7 ಒಕ್ಕಲಿಗ, 7 ಒಬಿಸಿ, 3 ದಲಿತ, 3 ಎಸ್.ಸಿ., 1 ಎಸ್.ಟಿ ಮತ್ತು ಮಹಿಳೆ ಶಾಸಕಿಗೂ ಸ್ಥಾನ ನೀಡಲಾಗಿದೆ ಎಂದು ಸಿಎಂ ತಿಳಿಸಿದರು. ಇದನ್ನೂ ಓದಿ: ಮೋಸ, ವಂಚನೆ, ವಸೂಲಿಯಿಂದ ಸಚಿವ ಸ್ಥಾನ ತಪ್ಪಿತು: ಸಿಎಂ ವಿರುದ್ಧವೇ ಗುಡುಗಿದ ಶಾಸಕ ಓಲೇಕಾರ್
ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮಾರನೇ ದಿನವೇ ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಬೆಂಗಳೂರಿಂದ ಹುಬ್ಬಳ್ಳಿಗೆ ವಿಮಾನದ ಮೂಲಕ ತೆರಳಿ, ಅಲ್ಲಿಂದ ರಸ್ತೆ ಮಾರ್ಗವಾಗಿ ಉತ್ತರ ಕನ್ನಡ ತಲುಪಿದರು. ಯಲ್ಲಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಸ್ ಕೇಂದ್ರ, ಆಂಬ್ಯೂಲೆನ್ಸ್ ಸೇವೆ ಉದ್ಘಾಟಿಸಿದರು. ಬಳಿಕ ಮಳೆಯಿಂದ ಗುಡ್ಡ ಕುಸಿತವಾಗಿದ್ದ ಕಳಚೆ ಗ್ರಾಮವನ್ನು ಮಳೆಯಲ್ಲೇ ಪರಿಶೀಲಿಸಿದರು. ಬಳಿಕ ಅರೆಬೈಲ್, ಗುಳ್ಳಾಪುರದ ಕುಸಿದ ಬ್ರಿಡ್ಜ್, ಮನೆ ಹಾನಿ ವೀಕ್ಷಿಸಿದರು.
ಮಾಜಿ ಸಚಿವ ಶಿವರಾಮ್ ಹೆಬ್ಬಾರ್, ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಅಂಕೋಲದಲ್ಲೂ ಪ್ರವಾಹ ತಂದ ಅವಾಂತರ ವೀಕ್ಷಿಸಿದ್ರು. ಈ ವೇಳೆ ಶಾಲೆಗೆ ಹೋಗಲು ಆಗ್ತಿಲ್ಲ ಅಂತ ವಿದ್ಯಾರ್ಥಿಗಳು ಕಣ್ಣೀರು ಹಾಕಿದ್ರು. ಶಿರೂರು ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರ ಅಹವಾಲು ಸ್ವೀಕರಿಸಿ ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ಕೈಗೊಳ್ತೇವೆ. ಎನ್‍ಡಿಆರ್ ಎಫ್‍ನಿಂದ ಪರಿಹಾರ ಬಂದಿದೆ ಅಂತ ಹೇಳಿದರು.
ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಗೆ ತೆರಳಿದರು. ಹುಬ್ಬಳ್ಳಿಯಲ್ಲಿ ಆರ್‍ಎಸ್‍ಎಸ್ ನಾಯಕರನ್ನು ಹಾಗೂ ರಂಭಾಪುರ ವೀರ ಸಿಂಹಾಸನಾಧೀಶ್ವರ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಧಾರವಾಡ ಹೊರವಲಯದ ರಾಯಪುರದಲ್ಲಿರೋ ತಂದೆ-ತಾಯಿ ಸಮಾಧಿಗೆ ನಮಿಸಿ ನಾಡಿನ ಸೇವೆಗೆ ಶಕ್ತಿ ಕೊಡಿ ಅಂತ ಕೇಳಿಕೊಂಡಿದ್ದೇನೆ ಎಂದು ಹೇಳಿದರು.
ಉತ್ತರ ಕರ್ನಾಟಕದಲ್ಲಿ ಮಳೆ ನಿಂತಿದ್ದರೂ ಪ್ರವಾಹ ತಂದ ಅವಾಂತರ ಒಂದೊಂದಾಗಿ ಬೆಳಕಿಗೆ ಬರ್ತಿದೆ. ಮಹಾರಾಷ್ಟ್ರದ ಜಲಾಶಯಗಳ ನೀರು ಭಾರೀ ಸಮಸ್ಯೆ ತಂದೊಡ್ಡಿದೆ. ಚಿಕ್ಕೋಡಿ, ಅಥಣಿ, ರಾಯಬಾಗ, ಕಾಗವಾಡ ತಾಲೂಕುಗಳ ಕೃಷ್ಣಾ ನದಿ ತೀರ ಅಕ್ಷರಶಃ ನಲುಗಿ ಹೋಗಿದೆ. ಚಿಕ್ಕೋಡಿ ತಾಲೂಕಿನ 11 ಗ್ರಾಮಗಳು, ರಾಯಬಾಗ ತಾಲೂಕಿನ 18 ಗ್ರಾಮಗಳು, ಅಥಣಿ ತಾಲೂಕಿನ 22 ಗ್ರಾಮಗಳು ಹಾಗೂ ಕಾಗವಾಡ ತಾಲೂಕಿನ 7 ಗ್ರಾಮಗಳು ಜಲಾವೃತಗೊಂಡಿದ್ದು ಒಟ್ಟು 45 ಸಾವಿರಕ್ಕೂ ಹೆಚ್ಚಿನ ಜನರನ್ನ ಸ್ಥಳಾಂತರ ಮಾಡಲಾಗಿದೆ. ರಾಯಬಾಗ ತಾಲೂಕಿನ ಭಿರಡಿ ಗ್ರಾಮದಲ್ಲಿ ಶಾಸಕ ದುರ್ಯೋಧನ ಐಹೊಳೆಗೆ ಸಂತ್ರಸ್ತರು ತರಾಟೆ ತೆಗೆದುಕೊಂಡಿದ್ದಾರೆ.
ಬಾಳೆಹೊನ್ನೂರಿನ ರಂಭಾಪುರಿ ಪೀಠದ ಶ್ರೀ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಶ್ರೀಗಳನ್ನು ಹುಬ್ಬಳ್ಳಿಯಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದುಕೊಳ್ಳಲಾಯಿತು. pic.twitter.com/dXLZh0gsKm
ಯಾದಗಿರಿಯ ಬಸವಸಾಗರ ಜಲಾಶಯದಿಂದ 4 ಲಕ್ಷಕ್ಕೂ ಅಧಿಕ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗಿದೆ. ತಿಂಥಣಿ ಗ್ರಾಮದ ಜಲಾವೃತ ಭೀತಿಯಿಂದ ಗ್ರಾಮಸ್ಥರು ಮನೆ ಖಾಲಿ ಮಾಡಿದ್ದಾರೆ. ಸುರಪುರ ತಾಲೂಕಿನ ನೀಲಕಂಠರಾಯನಗಡ್ಡಿ ಗ್ರಾಮದ ಸಂಪರ್ಕ ಸೇತುವೆ ಕೃಷ್ಣಾ ನದಿಯ ಪ್ರವಾಹಕ್ಕೆ ಸಂಪರ್ಕ ಕಳೆದುಕೊಂಡಿದೆ. ರಾಯಚೂರಿನ ದೇವದುರ್ಗದ ಕೊಪ್ಪರ ಗ್ರಾಮಕ್ಕೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಲಕ್ಷ್ಮೀ ನರಸಿಂಹಸ್ವಾಮಿ ಹಾಗೂ ಬಸವಣ್ಣ ದೇವಾಲಯಗಳು ಮುಳುಗಿವೆ. ಪಂಪ್ ಸೆಟ್‍ಗಳು ಕೊಚ್ಚಿಹೋಗಿವೆ. ಆದರೂ, ಸೇತುವೆ ಮೇಲೆ ಕಾರು ಚಾಲಕ ದುಸ್ಸಾಹಸ ಮಾಡಿದ್ದಾನೆ. ಇತ್ತ, ಕೊಡಗಿನ ವಿರಾಜಪೇಟೆ ಪಟ್ಟಣದ ನೆಹರು ನಗರ, ಮಲೆತಿರಿಕೆ ಬೆಟ್ಟದಲ್ಲಿ ಭಾರೀ ಪ್ರಮಾಣದಲ್ಲಿ ಬಿರುಕು ಬಿಟ್ಟಿದೆ. ಇದನ್ನೂ ಓದಿ: ಮತ್ತೆ ಏರಿಕೆಯತ್ತ ಕೊರೊನಾ- ಬಹುದಿನಗಳ ಬಳಿಕ ರಾಜ್ಯದಲ್ಲಿ 2 ಸಾವಿರಕ್ಕೂ ಅಧಿಕ ಕೇಸ್
ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆ ಹಾಗೂ ಅತಿವೃಷ್ಟಿಯಿಂದ ಬಾಧಿತಗೊಳಗಾದ ಯಲ್ಲಾಪುರ ತಾಲೂಕಿನ ವಿವಿಧ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ಹಾಗೂ ಯಲ್ಲಾಪುರ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿ ಆಸ್ಪತ್ರೆಯ ವಿವಿಧ ವಿಭಾಗಗಳ ಜೊತೆಗೆ ಕೋವಿಡ್ -19 ಲಸಿಕೆ ನೀಡುವ ಕೇಂದ್ರನ್ನೂ ಪರಿಶೀಲನೆ ಮಾಡಲಾಯಿತು. pic.twitter.com/5wcYWZJYFU
ಇತ್ತ, ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತಾಡಿ, ಪ್ರವಾಹ ಪೀಡಿದ ಜನರಿಗೆ ಇವರಿಂದ ಸಹಾಯ ನಿರೀಕ್ಷಿಸಲು ಸಾಧ್ಯವಿಲ್ಲ. ಕಳೆದ ವರ್ಷದ್ದೇ ಪರಿಹಾರ ಕೊಟ್ಟಿಲ್ಲ. ಆಗಸ್ಟ್ 1 ರಂದು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡೋದಾಗಿ ಹೇಳಿದ್ರು. ಈ ಮಧ್ಯೆ, ಮಾಜಿ ಸಿಎಂ ಕುಮಾರಸ್ವಾಮಿ ಅವರು ನೀರಾವರಿ ಯೋಜನೆ ಸಂಬಂಧ ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳಿಗೆ ದೂರು ನೀಡಿದ್ದಾರೆ. ಮಹದಾಯಿ, ಮೇಕೆದಾಟು ಮತ್ತು ಕೃಷ್ಣ ಮೇಲ್ದಂಡೆ 3ನೇ ಹಂತದ ಯೋಜನೆಗೆ ಕೇಂದ್ರ ಅನ್ಯಾಯ ಮಾಡಿದೆ ಅಂತ ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನದವರೆಗೆ ಪಾದಯಾತ್ರೆ ನಡೆಸಿದರು. ಇದನ್ನೂ ಓದಿ: ನಾನು ಬಿಜೆಪಿ ಶಿಸ್ತಿನ ಸಿಪಾಯಿ, ಡಿಸಿಎಂ ಸ್ಥಾನಕ್ಕೆ ಲಾಬಿ ಮಾಡಲ್ಲ: ರಾಮುಲು