Tag: ಸಿಎಂ ಬಸವರಾಜ ಬೊಮ್ಮಾಯಿ

  • ಸಚಿವ ಸಂಪುಟದಲ್ಲಿ ಬದಲಾವಣೆ ಮಾಡುವುದು ಸಿಎಂ ನಿರ್ಧಾರಕ್ಕೆ ಬಿಟ್ಟಿದ್ದು: ಅರುಣ್ ಸಿಂಗ್

    ಸಚಿವ ಸಂಪುಟದಲ್ಲಿ ಬದಲಾವಣೆ ಮಾಡುವುದು ಸಿಎಂ ನಿರ್ಧಾರಕ್ಕೆ ಬಿಟ್ಟಿದ್ದು: ಅರುಣ್ ಸಿಂಗ್

    ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಮುಖ್ಯಮಂತ್ರಿ ಸಕಾಲದಲ್ಲಿ ನಿರ್ಧರಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಮತ್ತು ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ತಿಳಿಸಿದರು.

    ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದರು. ಸಂಪುಟ ಪುನಾರಚನೆಯು ಮುಖ್ಯಮಂತ್ರಿಯ ಪರಮಾಧಿಕಾರ ಎಂದರು. ಇದನ್ನೂ ಓದಿ : ಪೊಲೀಸರನ್ನೇ ಕಳ್ಳರೆಂದು ಭಾವಿಸಿ ಗೂಸಾ ಕೊಟ್ಟ ಗ್ರಾಮಸ್ಥರು

    BASAVARJ BOMMAI (1)

    ರಾಜ್ಯಸಭಾ ಸದಸ್ಯರು, ವಿಧಾನಪರಿಷತ್ ಸದಸ್ಯತ್ವಕ್ಕೆ ಸ್ಪರ್ಧಿಸಲು ಬಯಸುವವರ ಪಟ್ಟಿಯನ್ನು ರಾಜ್ಯ ಕೋರ್ ಕಮಿಟಿ ಮತ್ತು ರಾಜ್ಯ ಚುನಾವಣಾ ಸಮಿತಿಯು ಕೇಂದ್ರ ಸಂಸದೀಯ ಮಂಡಳಿಗೆ ಶಿಫಾರಸು ಮಾಡುತ್ತದೆ. ಕೇಂದ್ರ ಸಂಸದೀಯ ಮಂಡಳಿಯು ರಾಜ್ಯಸಭಾ ಸದಸ್ಯರು, ವಿಧಾನಪರಿಷತ್ ಸದಸ್ಯತ್ವಕ್ಕೆ ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುತ್ತದೆ ಎಂದು ಹೇಳಿದರು.

    ಇದೇ ವೇಖೆ ಕಾಂಗ್ರೆಸ್ ಪಕ್ಷದೊಳಗೆ ಗೊಂದಲಗಳಿವೆ. ಬಿಜೆಪಿಯಲ್ಲಿ ನಾಯಕತ್ವ ಮತ್ತಿತರ ಯಾವುದೇ ಗೊಂದಲಗಳಿಲ್ಲ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ :  ತಿಂಗಳ ಮುತ್ತು: ರಣಬೀರ್ ಕಪೂರ್, ಆಲಿಯಾ ಭಟ್ ಕಿಸ್ಮತ್

  • ಕಾಂಗ್ರೆಸ್ ನಾಯಕರೆಲ್ಲ ಬೇಲ್ ಮೇಲೆ ಇದ್ದಾರೆ: ಸುನೀಲ್ ಕುಮಾರ್

    ಕಾಂಗ್ರೆಸ್ ನಾಯಕರೆಲ್ಲ ಬೇಲ್ ಮೇಲೆ ಇದ್ದಾರೆ: ಸುನೀಲ್ ಕುಮಾರ್

    ದಾವಣಗೆರೆ: ಕಾಂಗ್ರೆಸ್ ಪಕ್ಷ ನಾಯಕರಿಲ್ಲದೆ ಅನಾಥವಾಗಿದೆ. ಅಲ್ಲಿ ಕಾರ್ಯಕರ್ತರು, ನಾಯಕರು ಎಲ್ರೂ ಅನಾಥರು. ಕಾಂಗ್ರೆಸ್ ನಾಯಕರೆಲ್ಲ ಬೇಲ್ ಮೇಲೆ ಇದ್ದಾರೆ ಎಂದು ಸಚಿವ ಸುನೀಲ್ ಕುಮಾರ್ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.

    ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇವತ್ತು ರಾಜ್ಯದ ಜನರಿಗೆ ಭರವಸೆ ಇದ್ದರೆ ಅದು ಬಿಜೆಪಿ ಹಾಗೂ ನರೇಂದ್ರ ಮೋದಿ ಅವರ ಮೇಲೆ ಮಾತ್ರ. ಕಾಂಗ್ರೆಸ್ ಹತ್ತು ಸುಳ್ಳು ಹೇಳಿ ನಿಜ ಮಾಡಲು ಹೋಗುತ್ತಿದ್ದಾರೆ. ಕಾಂಗ್ರೆಸ್ ಭ್ರಷ್ಟಾಚಾರಿಗಳು ಜಾಮೀನಿನ ಮೇಲೆ ಇದ್ದವರು. ರಾಷ್ಟ್ರೀಯ ಅಧ್ಯಕ್ಷರಿಂದ ಹಿಡಿದು, ರಾಜ್ಯ ಅಧ್ಯಕ್ಷರವರೆಗೂ ಬೇಲ್ ಮೇಲೆ ಇದ್ದಾರೆ. ಅವರು ನಮ್ಮ ಮೇಲೆ ಅರೋಪ ಮಾಡ್ತಾರೆ ಎಂದರೆ ನೀವೇ ಯೋಚಿಸಿ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಕರಿಯಲ್ಲಿ ಖಾರ ಹೆಚ್ಚಾಗಿದ್ದಕ್ಕೆ ಪತ್ನಿಯ ತಲೆ ಬೋಳಿಸಿದ

    ಸಚಿವ ಸಂಪುಟದ ವಿಸ್ತರಣೆ ಪುನರಾಚನೆ ಮುಖ್ಯಮಂತ್ರಿಗಳ ಪರಮಾಧಿಕಾರ. ಮುಖ್ಯಮಂತ್ರಿಗಳು ಕರ್ನಾಟಕಕ್ಕೆ ಒಳಿತಾಗುವ ನಿರ್ಣಯವನ್ನು ತೆಗೆದುಕೊಳ್ಳುತ್ತಿದ್ದಾರೆ. ದೂರದೃಷ್ಟಿ ಇಟ್ಟುಕೊಂಡ ನಾಯಕರು ಯಾವ ಸಮಯಕ್ಕೆ, ಯಾವ ನಿರ್ಣಯ ತೆಗೆದುಕೊಳ್ಳಬೇಕು ಎನ್ನುವುದನ್ನು ತಿಳಿದುಕೊಳ್ಳಬೇಕು ಎಂದು ಸಲಹೆ ಕೊಟ್ಟರು.

    ನಾನು ಸಾಮಾನ್ಯ ಕಾರ್ಯಕರ್ತನಾಗಿದ್ದೆ. ಪಕ್ಷ ಹಾಗೂ ಕಾರ್ಯಕರ್ತರು ನನ್ನನ್ನು ಚುನಾವಣೆಗೆ ನಿಲ್ಲಿಸಿ ಸಚಿವರನ್ನಾಗಿ ಮಾಡಿದೆ. ಮುಂದೆ ಕೂಡ ಪಕ್ಷ ಯಾವ ನಿರ್ಣಯ ತೆಗೆದುಕೊಳ್ಳುತ್ತೋ ಅದಕ್ಕೆ ನಾವು ಸಿದ್ಧರಿದ್ದೇವೆ. ಇದರಲ್ಲಿ ಬೇರೆ-ಬೇರೆ ವಿಚಾರ ಪ್ರಸ್ತಾಪ ಇಲ್ಲ. ಸಚಿವ ಸ್ಥಾನಕ್ಕೆ 60,100 ಕೋಟಿ ನೀಡುತ್ತಿದ್ದಾರೆ ಎನ್ನುವ ಹೇಳಿಕೆ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿದ ಅವರು ಪಕ್ಷ ನಮಗೆ ಕೊಟ್ಟಿದೆ ವಿನಃ ನಾವು ಪಕ್ಷಕ್ಕೆ ಏನು ಕೊಟ್ಟಿಲ್ಲ, ಪಕ್ಷದಲ್ಲಿ ವಿಚಾರಕ್ಕೆ ಆದ್ಯತೆ ವಿನಃ, ಹಣಕ್ಕೆ ಆದ್ಯತೆ ಇಲ್ಲ ಎಂದು ತಿಳಿಸಿದರು.

    ಶಾಸಕ ಯತ್ನಾಳ್ ಹಣಕೊಡುವ ಬಗ್ಗೆ ಯಾವ ದೃಷ್ಟಿಕೋನದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಅವರು ಹೇಳಿದ್ದಾರೆ ಎಂದ್ರೇ ಅದು ಸಾರ್ವತ್ರಿಕ ಆಗಲ್ಲ. ಸಿಎಂ ಬಸವರಾಜ ಬೊಮ್ಮಯಿ ನೇತೃತ್ವದಲ್ಲಿ ನಾವು ಮುಂದಿನ ಚುನಾವಣೆಗೆ ಹೋಗುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೃಷ್ಣಮೃಗ ಬೇಟೆಗಾರರಿಂದ 3 ಪೊಲೀಸರ ಹತ್ಯೆ – 1 ಕೋಟಿ ರೂ. ಪರಿಹಾರ ಫೋಷಿಸಿದ ಸಿಎಂ 

    ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿ ನಡೆದ ನಿರಂತರ ಜ್ಯೋತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಪೀಡರ್‌ಗಳಲ್ಲಿ ತನಿಖೆ ನಡೆಸಿದ್ದೇವೆ. ಅದು ಸಮಾಧಾನ ತಂದಿಲ್ಲ. ಉಳಿದ 29 ಪೀಡರ್‌ಗಳ ತನಿಖೆ ಮಾಡುವುದಕ್ಕೆ ಆದೇಶಿಸಿದ್ದೇನೆ. ನಿರಂತರ ಜ್ಯೋತಿ ಅಕ್ರಮ ಪ್ರಕರಣದಲ್ಲಿ ಯಾರನ್ನು ರಕ್ಷಿಸುವುದಿಲ್ಲ. ನಾನು ಇಲಾಖೆ ಸಚಿವನಾದ ಮೇಲೆ 100ಕ್ಕೂ ಹೆಚ್ಚು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದೇನೆ. ಅದೇ ರೀತಿ ಹರಿಹರದಲ್ಲಿ ಸಮಗ್ರ ತನಿಖೆ ಮಾಡಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ಕೊಟ್ಟರು.

  • ರಾಜಕೀಯ ಪಕ್ಷ ಅಧಿಕಾರ ಹಿಡಿಯಲು ‘ಆಪರೇಷನ್ ಕಮಲ’ ಅನಿವಾರ್ಯ: ಕಟೀಲ್

    ರಾಜಕೀಯ ಪಕ್ಷ ಅಧಿಕಾರ ಹಿಡಿಯಲು ‘ಆಪರೇಷನ್ ಕಮಲ’ ಅನಿವಾರ್ಯ: ಕಟೀಲ್

    – ಚಹಾ ಮಾರುವ ಹುಡುಗ ಪ್ರಧಾನಿ ಆಗಬಲ್ಲ ಎಂದು ತೋರಿಸಿದ ಪಕ್ಷ ಬಿಜೆಪಿ
    – ಕಾಂಗ್ರೆಸ್‍ನಲ್ಲಿ ಶಾಸ್ತ್ರಿಗಳು ಬಿಟ್ರೆ ಉಳಿದ ಎಲ್ಲ ಪ್ರಧಾನಿಗಳೂ ಕಳಂಕಿತರು

    ಬೆಂಗಳೂರು: ರಾಜಕೀಯ ಪಕ್ಷ ಅಧಿಕಾರ ಹಿಡಿಯಬೇಕಾದರೆ ಆಪರೇಷನ್ ಕಮಲ ಅನಿವಾರ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದರು.

    ಬಿಜೆಪಿ ಕಚೇರಿಯಲ್ಲಿ ಯುವ ಮೋರ್ಚಾ ಕಾರ್ಯಕಾರಿಣಿ ಸಭೆ ನಡೆದಿದ್ದು, ಯುವ ಮೋರ್ಚಾ ಕಾರ್ಯಕಾರಿಣಿ ಸಭೆ ಉದ್ಘಾಟಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಾಂಧಿಯವರು ಸ್ವಾತಂತ್ರ್ಯ ನಂತರ ಭಾರತ ರಾಮರಾಜ್ಯ ಆಗಬೇಕು, ಭಾರತ ಜಾತ್ಯತೀತ ಆಗಬೇಕು ಅನ್ನಲಿಲ್ಲ. ರಾಮನ ಭಾರತ ಆಗಲು ಪ್ರತಿ ವ್ಯಕ್ತಿ ರಾಮ ಆಗಬೇಕು. ವ್ಯಕ್ತಿ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣದ ಕಾರ್ಯ ಆಗಬೇಕು ಎಂದು ವಿವರಿಸಿದರು.

    ಆಪರೇಷನ್ ಕಮಲ ಸಮರ್ಥಿಸಿಕೊಂಡ ಕಟೀಲ್ ಅವರು, ಹಿಂದೆ ಆಪರೇಷನ್ ಕಮಲ ಮಾಡಿದಾಗ ಬಹಳ ಜನ ಕೇಳಿದರು. ಬೇರೆ ಪಕ್ಷಗಳಿಂದ ನಿಮ್ಮ ಪಕ್ಷಕ್ಕೆ ಕರೆದುಕೊಂಡು ಬರುವುದೇ ನಿಮ್ಮ ಕೆಲಸನಾ ಎಂದು ಹಲವು ಜನರು ಹೇಳಿದ್ದಾರೆ. ಆದ್ರೆ ಆಪರೇಷನ್ ಕಮಲ ಅನಿವಾರ್ಯ. ಒಂದು ರಾಜಕೀಯ ಪಕ್ಷ ಅಧಿಕಾರ ಹಿಡಿಯಲು ಇದು ಅನಿವಾರ್ಯವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ:  ಚಹಾ, ಸಿಗರೇಟ್ ತಂದುಕೊಡುವಂತಹ ರೌಡಿಗಳಿಂದ ನಾನೇನು ಕಲಿಯಬೇಕಿಲ್ಲ: ಯತ್ನಾಳ್ 

    ಅಧಿಕಾರಕ್ಕಾಗಿ ಆಪರೇಷನ್ ಕಮಲ ಮಾಡಿರಬಹುದು. ಆದ್ರೆ ನಮ್ಮ ಪಕ್ಷದಲ್ಲಿ ಪಕ್ಷಕ್ಕಾಗಿ ದುಡಿದವರು, ಸಾಮಾನ್ಯ ಕಾರ್ಯಕರ್ತನನ್ನು ಶಾಸಕ ಮಾಡ್ತೀವಿ. ನಮ್ಮದು ಅಧಿಕಾರಕ್ಕಾಗಿ ಆದರ್ಶ ಅಲ್ಲ. ಕಾಂಗ್ರೆಸ್ ನಲ್ಲಿ ಈಗಲೂ ಇಂದಿರಾಗಾಂಧಿ, ಸೋನಿಯಾಗಾಂಧಿ, ರಾಹುಲ್‍ಗಾಂಧಿಗೆ ಜೈ ಅಂತಾರೆ. ನಾವು ಭಾರತ ಮಾತೆಗೆ ಜೈಕಾರ ಹಾಕ್ತೇವೆ ಎಂದರು.

    ಸಾಮಾಜಿಕ ಬದ್ಧತೆಯಿದೆ
    ಚಹಾ ಮಾರುವ ಹುಡುಗ ಪ್ರಧಾನಿ ಆಗಬಲ್ಲ ಎಂದು ತೋರಿಸಿದ ಪಕ್ಷ ಬಿಜೆಪಿ. ಮತಗಟ್ಟೆ ಅಧ್ಯಕ್ಷರಾಗಿದ್ದ ಅಮಿತ್ ಶಾ ಅವರು ಇವತ್ತು ಕೇಂದ್ರದ ಗೃಹ ಸಚಿವ. ಹಳ್ಳಿಯಿಂದ ಬಂದವನೊಬ್ಬ ಸಾಮಾನ್ಯ ಬಿಜೆಪಿಯ ರಾಜ್ಯಾಧ್ಯಕ್ಷ ಆಗ್ತಾನೆ. ಮೂರು ಸಲ ಎಂಪಿ ಆಗ್ತಾನೆ. ಇದು ಬಿಜೆಪಿಯಲ್ಲಿ ಮಾತ್ರ ಸಾಧ್ಯ. ನಾವು ಪರಿವಾರವಾದದಿಂದ ಬಂದವರಲ್ಲ. ಹಣಬಲದಿಂದ ಬಂದವರಲ್ಲ. ರಾಷ್ಟ್ರಭಕ್ತಿ, ಸಾಮಾಜಿಕ ಬದ್ಧತೆಯಿಂದ ನಾವು ರಾಜಕೀಯಕ್ಕೆ ಬಂದವರು ಎಂದು ಕಾಂಗ್ರೆಸ್‌ಗೆ ತಿರುಗೇಟು ಕೊಟ್ಟರು.

    ಭ್ರಷ್ಟಾಚಾರ, ಭಯೋತ್ಪಾದನೆ ಕಾಂಗ್ರೆಸ್ ಕೊಡುಗೆ
    ಕಾಂಗ್ರೆಸ್‍ನಲ್ಲಿ ಪದಾಧಿಕಾರಿಗಳ ಟೀಂ ಸಾಂವಿಧಾನಿಕವಾಗಿಲ್ಲ. ಕಾಂಗ್ರೆಸ್‍ನಲ್ಲಿ ಅವ್ಯವಸ್ಥೆ ತುಂಬಿದೆ. ಅವರಿಗೆ ಪಕ್ಷ ಕಟ್ಟಲು ಗೊತ್ತಿಲ್ಲ. ಇನ್ನು ನಾಡನ್ನು ಏನ್ ಕಟ್ತಾರೆ? ಕಾಂಗ್ರೆಸ್‍ನಲ್ಲಿ 150 ಪ್ರಧಾನ ಕಾರ್ಯದರ್ಶಿ ಇದ್ದಾರೆ. ಅದು ಮುಂದೆ 250 ದಾಟುತ್ತೆ ಎಂದರು. ಪಂಚರಾಜ್ಯಗಳ ಫಲಿತಾಂಶ ಬಳಿಕ ಕಾಂಗ್ರೆಸ್‍ಗೆ ಭಯ ಶುರುವಾಗಿದೆ. ಕಾಂಗ್ರೆಸ್ ದೇಶದಲ್ಲಿ ತಿರಸ್ಕರಿಸಲ್ಪಡ್ತಿದೆ. ಅಧಿಕಾರದಲ್ಲಿ ಇದ್ದಾಗ ಅವರ ನಡವಳಿಕೆಗಳೇ ಇದಕ್ಕೆ ಕಾರಣ. ಭ್ರಷ್ಟಾಚಾರ, ಭಯೋತ್ಪಾದನೆಗಳೇ ಕಾಂಗ್ರೆಸ್ ಪರಿವಾರದ ಕೊಡುಗೆ ಎಂದು ಆರೋಪಿಸಿದರು.

    ಕಾಂಗ್ರೆಸ್‍ನಲ್ಲಿ ಶಾಸ್ತ್ರಿಗಳು ಬಿಟ್ರೆ ಉಳಿದ ಎಲ್ಲ ಪ್ರಧಾನಿಗಳೂ ಕಳಂಕಿತರು. ವಾಜಪೇಯಿ, ಮೋದಿ ಕಳಂಕರಹಿತ, ಭ್ರಷ್ಟಾಚಾರ ರಹಿತ ಸರ್ಕಾರ ಕೊಟ್ಟವರು. ರಾಜ್ಯದಲ್ಲೂ ಎಲ್ಲ ಕಾಂಗ್ರೆಸ್ ಸಿಎಂಗಳು ಭ್ರಷ್ಟಾಚಾರಿಗಳು. ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಹ್ಯೂಬ್ಲೋಟ್ ವಾಚ್ ಯಾರು ಕೊಟ್ರು? ಅರ್ಕಾವತಿ ರೀಡೂ ಪ್ರಕರಣದ ತನಿಖೆ ಆದ್ರೆ ಸಿದ್ದರಾಮಯ್ಯ ಅವರು ಜೀವನಪರ್ಯಂತ ಜೈಲಿನಲ್ಲಿರ್ತಾರೆ. ಸಿದ್ದರಾಮಯ್ಯ ಅವರಷ್ಟು ಭ್ರಷ್ಟಾಚಾರಿ ಬೇರ್ಯಾರೂ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಸಿಎಂ ಬೊಮ್ಮಾಯಿ ಪಿಎಸ್‍ಐ ಅಕ್ರಮ ಆದಾಗ ಕೂಡಲೇ ತನಿಖೆಗೆ ಕೊಟ್ರು. ನಮ್ ಸರ್ಕಾರ ಪಾರದರ್ಶಕ ತನಿಖೆ ನಡೆಸ್ತಿದೆ. ಸಿದ್ದರಾಮಯ್ಯ ಅವರು ಡ್ರಗ್ಸ್ ಹಣದಲ್ಲಿ ಸರ್ಕಾರ ನಡೆಸಿದ್ರು. ನಮ್ಮ ಸರ್ಕಾರ ಬಂದು ಡ್ರಗ್ಸ್ ಮುಕ್ತ ಮಾಡ್ತು. ಡ್ರಗ್ಸ್ ಮುಕ್ತ ಕರ್ನಾಟಕ ಮಾಡಿದ್ದು, ನಮ್ಮ ಸರ್ಕಾರದಲ್ಲಿ ಎಂದರು. ಹುಬ್ಬಳ್ಳಿ ದಾಂಧಲೆ ಹಿಂದೆ ಸಿದ್ದರಾಮಯ್ಯ ಷಡ್ಯಂತ್ರ ಇದೆ. ಶಿವಮೊಗ್ಗದ ಗಲಭೆ, ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಹಿಂದೆ ಸಿದ್ದರಾಮಯ್ಯ ಇದ್ದಾರೆ ಎಂದು ಆರೋಪಿಸಿದರು.

    ಕಾಂಗ್ರೆಸ್ ಅಧ್ಯಕ್ಷ ತಿಹಾರ್ ಜೈಲಲ್ಲಿದ್ದು ಬಂದವರು. ಮೆರವಣಿಗೆಯಲ್ಲಿ ಹೋದ್ರು ಮೆರವಣಿಗೆಯಲ್ಲಿ ಬಂದ್ರು. ನಾಚಿಕೆ ಆಗಬೇಕು ಕಾಂಗ್ರೆಸ್ ಅಧ್ಯಕ್ಷರಿಗೆ. ಜೈಲಿಗೆ ಹೋಗೋರು ಕದ್ದುಮುಚ್ಚಿ ಹೋಗ್ತಾರೆ. ಇವ್ರು ಮೆರವಣಿಗೆಯಲ್ಲಿ ಹೋಗ್ತಾರೆ ಎಂದು ಡಿಕೆಶಿ ವಿರುದ್ಧ ವಾಗ್ದಾಳಿ ಮಾಡಿದರು.

    ಕಾಂಗ್ರೆಸ್ ಅರಾಜಕತೆಯ ಸೃಷ್ಟಿಕರ್ತ. ಅಧಿಕಾರ ಇಲ್ಲದಿದ್ರೆ ಕೈ ನಾಯಕರು ವಿಲವಿಲ ಒದ್ದಾಡ್ತಾರೆ. ರಾಹುಲ್ ಗಾಂಧಿ ನೇಪಾಳಕ್ಕೆ ಹೋಗಿ ಏನ್ ಮಾಡಿದ್ರು? ಇದರ ಬಗ್ಗೆ ಯಾಕೆ ಸಿದ್ದರಾಮಯ್ಯ, ಡಿಕೆಶಿ ಮೌನವಾಗಿದ್ದಾರೆ? ನೇಪಾಳದಲ್ಲಿ ರಾಹುಲ್ ಗಾಂಧಿ ಯಾರ ಭೇಟಿ ಮಾಡಿದ್ರು ಹೇಳಿ. ದೇಶದ ವಿರೋಧಿ ಚೀನಾ ಜತೆ ಸ್ನೇಹ ಮಾಡ್ತೀರಾ? ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್ ದೇಶದಲ್ಲಿ ಬಾಂಬಿನ ಕಾರ್ಖಾನೆ ಸೃಷ್ಟಿಸಿತು. ಭಿಂದ್ರನ್ ವಾಲೆಯ ಸೃಷ್ಟಿ ಇಂದಿರಾಗಾಂಧಿ ಮಾಡಿದ್ದು, ಅವರೇ ಭಯೋತ್ಪಾದನೆಗೆ ಕಾರಣ. ಮೋದಿಯವರು ಎಂಟು ವರ್ಷದ ಆಡಳಿತದಲ್ಲಿ ಒಂದೇ ಒಂದು ಕಡೆ ಬಾಂಬ್ ಸ್ಫೋಟ ಆಗ್ಲಿಲ್ಲ ಎಂದರು.

    ನಾವು ಪಾರದರ್ಶಕವಾಗಿದ್ದೇವೆ. ಇವತ್ತು ಹಗರಣಗಳಾಗಿವೆ ಅಂತಾರಲ್ಲ ಎಲ್ಲವನ್ನೂ ತನಿಖೆಗೆ ಕೊಡಲಾಗಿದೆ. ಎಷ್ಟೇ ದೊಡ್ಡವರಿದ್ರೂ ಬಂಧಿಸ್ತೇವೆ. ಪ್ರಿಯಾಂಕ್ ಖರ್ಗೆ, ಮಲ್ಲಿಕಾರ್ಜುನ ಖರ್ಗೆ ಸಾವಿರಾರು ಕೋಟಿ ಒಡೆಯರು. ಈ ಸಾವಿರಾರು ಕೋಟಿ ಎಲ್ಲಿಂದ ಬಂತು ಎಂದು ಪ್ರಶ್ನಿಸಿದರು.

    CM Basavaraj Bommai

    ಮಾಜಿ ಸಿಎಂ ಯಡಿಯೂರಪ್ಪ ಮಾರ್ಗದರ್ಶನ, ಬೊಮ್ಮಾಯಿ ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆ ಗೆಲ್ತೇವೆ. ಕಾಂಗ್ರೆಸ್, ಜೆಡಿಎಸ್‍ನಿಂದ ಬಹಳ ಜನ ಬಿಜೆಪಿ ಬಾಗಿಲು ತಟ್ತಿದ್ದಾರೆ. ನಮಗೆ ಪುರುಸೊತ್ತಿಲ್ಲ, ಅಷ್ಟು ಜನ ಬರ್ತಿದ್ದಾರೆ. ಹಾಗಾಗಿ ನಾವು ಲಿಸ್ಟ್ ಮಾಡ್ಕೊಂಡು ಸೇರ್ಪಡೆ ಮಾಡ್ಕೊಳ್ತಿದ್ದೇವೆ. ಬಿಜೆಪಿ ಕಚೇರಿ ಯುವ ಮೋರ್ಚಾ ಕಾರ್ಯಕರ್ತರಿಗೆ ಎಚ್ಚರಿಕೆ ಜೊತೆಗೆ ಕಿವಿಮಾತು ಹೇಳಿದರು. ಇದನ್ನೂ ಓದಿ: ಪತಿ ಆಸೆ ಈಡೇರಿಸಿದ ಮಡದಿ: ಹುತಾತ್ಮ ಯೋಧನ ಪತ್ನಿ ಈಗ ಲೆಫ್ಟಿನೆಂಟ್

    ಯುವ ಮೋರ್ಚಾ ಕಾರ್ಯಕರ್ತರು ಮನೆ-ಮನೆಗೆ ತೆರೆಳಿ ಕೆಲಸ ಮಾಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಕೆಲಸದ ಬಗ್ಗೆ ಜನರಿಗೆ ತಿಳಿಸಬೇಕು. ಸರ್ಕಾರದ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಯಾರು ಸಹ ವಿಧಾನ ಸೌಧ, ಸಚಿವರ ಮನೆಗಳ ಬಳಿ ಹೋಗಬಾರದು. ನಿಮಗೆ ಅಧಿಕಾರ ಕೊಟ್ಟಿರುವುದು ಪಕ್ಷದ ಕೆಲಸ ಮಾಡಲು. ಮನೆ ಮನೆಗೆ ತೆರೆಳಿ ಕೆಲಸ ಮಾಡಿದ್ರೆ ಮುಂದೆ ನಿಮಗೆ ಹೆಚ್ಚಿನ ಜವಾಬ್ದಾರಿ ಜೊತೆಗೆ ಅಧಿಕಾರ ಸಿಗಲಿದೆ. ನೀವು ಎಲ್ಲಿ ಹೋಗಿ ಏನ್ ಮಾಡುವಿರಿ ಎಂದು ನಮಗೆ ಮಾಹಿತಿ ಬರುತ್ತೆ ಎಂದರು.

  • ಬಿಜೆಪಿಯಲ್ಲಿ ಸಿಎಂ ಸ್ಥಾನ ಲಾಬಿಗೆ ಅವಕಾಶವಿಲ್ಲ, ಯತ್ನಾಳ್ ಹೇಳಿಕೆ ತಪ್ಪು: ರೇಣುಕಾಚಾರ್ಯ

    ಬಿಜೆಪಿಯಲ್ಲಿ ಸಿಎಂ ಸ್ಥಾನ ಲಾಬಿಗೆ ಅವಕಾಶವಿಲ್ಲ, ಯತ್ನಾಳ್ ಹೇಳಿಕೆ ತಪ್ಪು: ರೇಣುಕಾಚಾರ್ಯ

    ದಾವಣಗೆರೆ: ಬಿಜೆಪಿಯಲ್ಲಿ ಸಿಎಂ, ಸಚಿವ ಸ್ಥಾನ ಲಾಬಿಗೆ ಅವಕಾಶವಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರು ಶಾಸಕ ಬಸನಗೌಡ ಯತ್ನಾಳ್ ಹೇಳಿಕೆಯನ್ನು ವಿರೋಧಿಸಿದರು.

    ದೆಹಲಿಯಿಂದ ಬಂದವರು ನಿಮಗೆ ಸಿಎಂ ಮಾಡ್ತೀವಿ 2,500 ಕೋಟಿ ರೆಡಿ ಮಾಡ್ರೀ ಎಂದಿದ್ರು ಎಂದು ಶಾಸಕ ಯತ್ನಾಳ್ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿರೋಧಿಸಿ ದಾವಣಗೆರೆ ಜಿಲ್ಲೆಯ ನ್ಯಾಮತಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯತ್ನಾಳ್ ಹೇಳಿಕೆ ತಪ್ಪು. ಬಹಿರಂಗ ಸಭೆಯಲ್ಲಿ ಹೇಳುವ ಅವಶ್ಯಕತೆ ಇರಲಿಲ್ಲ ಎಂದು ಕಿವಿಮಾತು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್ ತೊರೆದ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆ 

    YATNAL 1

    ಬಿಜೆಪಿಯಲ್ಲಿ ಸಿಎಂ ಸಚಿವ ಸ್ಥಾನಕ್ಕೆ ಲಾಬಿಗೆ ಅವಕಾಶವಿಲ್ಲ. ಯತ್ನಾಳ್ ನನಗಿಂತ ಹಿರಿಯರು ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂಬುದು ಗೊತ್ತಿಲ್ಲ. ಅವರು ಬಿಜೆಪಿ ಮುಖಂಡರು ಅಂತ ಹೇಳಿಲ್ಲ, ಯಾರೋ ಮಧ್ಯವರ್ತಿಗಳು ಎಂದು ಹೇಳಿದ್ದಾರೆ. ಆದರೆ ಈ ವಿಷಯಗಳ ಬಗ್ಗೆ ಸಾರ್ವಜನಿಕ ಸಮಾರಂಭಗಳಲ್ಲಿ ಮಾತನಾಡಬಾರದು ಎಂದು ಮನವಿ ಮಾಡುತ್ತೇವೆ ಎಂದರು.

    ಶಾಸಕಾಂಗ ಸಭೆಯಲ್ಲಿ ನಿರ್ಣಯವಾದ ನಂತರ ಬೊಮ್ಮಾಯಿ ಸಿಎಂ ಆಗಿದ್ದಾರೆ. ನಮ್ಮಲ್ಲಿ ಹಣ ಕೇಳುವ ಸಂಸ್ಕೃತಿ ಇಲ್ಲ. ಅದು ಕಾಂಗ್ರೆಸ್ ಸಂಸ್ಕೃತಿ, ಲಕೋಟೆ ಸಂಸ್ಕೃತಿ ನಮ್ಮಲ್ಲಿ ಎಂದಿಗೂ ಇಲ್ಲ. ಯಾರನ್ನು ಸಚಿವರನ್ನಾಗಿ ಮಾಡಬೇಕು, ಯಾರನ್ನು ಬಿಡಬೇಕು ಅದು ಸಿಎಂ ಹಾಗೂ ಹೈಕಮಾಂಡ್‍ಗೆ ಬಿಟ್ಟ ವಿಚಾರ ಎಂದು ತಿಳಿಸಿದರು.

    kumarswamy

    ಪಿಎಸ್‍ಐ ನೇಮಕಾತಿ ಅಕ್ರಮದಲ್ಲಿ ಬಿಜೆಪಿ ಪ್ರಭಾವಿಗಳಿದ್ದಾರೆಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪ ಮಾಡ್ತಿರುವುದು ಗಾಳಿಯಲ್ಲಿ ಗುಂಡು ಹೊಡೆಯುವ ಸಂಸ್ಕೃತಿ. ಸರ್ಕಾರ ಪಥನವಾಗುತ್ತದೇ ಎಂದು ಹೇಳುವುದಲ್ಲಾ ಅದನ್ನು ಸಾಬೀತು ಮಾಡಲಿ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಸಿದ್ದರಾಮಯ್ಯ ಮಠದ ಶ್ರೀಗಳಂತೆ ಮಾತನಾಡಿದ್ರು: ಸಿದ್ದು ಹೊಗಳಿದ ಡಿಕೆಶಿ


    ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ ದಿನ ಬೆಳಗ್ಗೆಯಾದರೆ ರಾಜೀನಾಮೆ ಎಂದು ಹೇಳುತ್ತಾರೆ. ಅವರ ಅವಧಿಯಲ್ಲಿ ಎಷ್ಟು ಜನ ಸಚಿವರ ರಾಜೀನಾಮೆ ಪಡೆದಿದ್ದಾರೆ. ರಾಜೀನಾಮೆ ಕೇಳುವ ನೈತಿಕತೆ ಅವರಿಗಿಲ್ಲ ಎಂದು ಟಾಂಗ್ ಕೊಟ್ಟರು.

  • ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಬೊಮ್ಮಾಯಿ ನೇತ್ರತ್ವದಲ್ಲಿ ಚುನಾವಣೆ: ನಳಿನ್

    ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಬೊಮ್ಮಾಯಿ ನೇತ್ರತ್ವದಲ್ಲಿ ಚುನಾವಣೆ: ನಳಿನ್

    ವಿಜಯನಗರ: ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆ ನಡೆಯುತ್ತದೆ. ಅದರಲ್ಲಿ ಯಾವುದೇ ಅನುಮಾನ ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

    ಕಳೆದ ತಿಂಗಳಲ್ಲಿ ವಿಜಯನಗರದಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಸಭೆಯನ್ನು ಯಶಸ್ವಿ ಮಾಡಿದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ನಳಿನ್ ಅವರು ಭಾಗವಾಯಿಸಿದ್ದರು. ಕಾರ್ಯಕ್ರಮದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿಯಲ್ಲಿ ಯಾವುದೇ ರೀತಿಯ ನಾಯಕತ್ವ ಬದಲಾವಣೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಕಾರಿನಲ್ಲಿದ್ದ ಮೊಬೈಲ್ ಕದ್ದ – ಕರೆ ಮಾಡಿದ್ರೆ ಹಣಕ್ಕಾಗಿ ಬ್ಲಾಕ್ ಮೇಲ್ 

    ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಮತ್ತು ಪಿಎಸ್‍ಎ ನೇಮಕದಲ್ಲಿ ಅಕ್ರಮ ಪ್ರಕರಣ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ವಿಚಾರದಲ್ಲಿ ರಾಜ್ಯ ಸರ್ಕಾರ ಈಗಾಗಲೇ ಆರೋಪಿಗಳನ್ನ ಬಂಧಿಸಿದೆ. ಎಷ್ಟೇ ದೊಡ್ಡವರಿದ್ರು, ಕಾನೂನು ಪ್ರಕಾರ ಶಿಕ್ಷೆಯಾಗುತ್ತದೆ. ಯಾರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಇನ್ನು ನಮ್ಮ ಪಕ್ಷ ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದರು.

    ಕಾಂಗ್ರೆಸ್ ಅವರ ಆಡಳಿತದಲ್ಲಿ ಸಾಕಷ್ಟು ಹಗರಣಗಳು ನಡೆದಿವೆ. ಯಾವುದೇ ಹಗರಣಗಳ ಕುರಿತು ಕಾಂಗ್ರೆಸ್ ತನಿಖೆ ಮಾಡಿಲ್ಲ. ಹೀಗಾಗಿ ಬಿಜೆಪಿ ಕುರಿತು ಮಾತನಾಡಲು ಅವರಿಗೆ ನೈತಿಕತೆ ಇಲ್ಲ ಎಂದು ತಿಳಿಸಿದರು.

  • ನಾಯಕತ್ವ ಬದಲಾವಣೆ ಬಗ್ಗೆ ಸಂತೋಷ್ ಯಾಕೆ ಹೇಳಿದ್ದಾರೆ ನನಗೆ ಗೊತ್ತಿಲ್ಲ: ಉಮೇಶ್ ಕತ್ತಿ

    ನಾಯಕತ್ವ ಬದಲಾವಣೆ ಬಗ್ಗೆ ಸಂತೋಷ್ ಯಾಕೆ ಹೇಳಿದ್ದಾರೆ ನನಗೆ ಗೊತ್ತಿಲ್ಲ: ಉಮೇಶ್ ಕತ್ತಿ

    ಚಿಕ್ಕೋಡಿ: ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಒಳ್ಳೆಯ ಸರ್ಕಾರ ನೀಡುತ್ತಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾಯದರ್ಶಿ ಬಿ.ಎಲ್.ಸಂತೋಷ್ ಯಾಕೆ ಹೇಳಿದ್ದಾರೆ ನನಗೆ ಗೊತ್ತಿಲ್ಲ ಎಂದು ಆಹಾರ ಹಾಗೂ ಅರಣ್ಯ ಇಲಾಖೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

    ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬೊಮ್ಮಾಯಿ ಸರ್ಕಾರದಲ್ಲಿಯೇ ನಾವು ಮಂತ್ರಿಯಾಗಿದ್ದೇವೆ. ಒಳ್ಳೆಯ ಸರ್ಕಾರದ ಜೊತೆಗೆ ಬರುವ ದಿನಗಳಲ್ಲಿ ಬೊಮ್ಮಾಯಿ ಅವರ ನೇತೃತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಬೊಮ್ಮಾಯಿಯನ್ನು ಬದಲಾಯಿಸಲು RSS ಹೊರಟಿದೆ: ಸಿದ್ದು 

    ಬೊಮ್ಮಾಯಿ ಅವರ ನೇತೃತ್ವ ಒಳ್ಳೆಯ ನೇತೃತ್ವ ಇದೆ. ಮುಂದಿನ ಸರ್ಕಾರ ನಮ್ಮದೆ ಇರುತ್ತದೆ. ಆದರೆ ಸಂತೋಷ್ ಅವರು ಯಾಕೆ ಈ ರೀತಿ ಮಾತನಾಡಿದ್ದಾರೆ ಎಂಬುದಕ್ಕೆ ನನಗೆ ಯಾವುದೇ ಮಾಹಿತಿಯಿಲ್ಲ ಎಂದರು.

  • ಬೊಮ್ಮಾಯಿಯನ್ನು ಬದಲಾಯಿಸಲು RSS ಹೊರಟಿದೆ: ಸಿದ್ದು

    ಬೊಮ್ಮಾಯಿಯನ್ನು ಬದಲಾಯಿಸಲು RSS ಹೊರಟಿದೆ: ಸಿದ್ದು

    ಮೈಸೂರು: ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಆರ್‌ಎಸ್‍ಎಸ್ ನಾಯಕರು ಬದಲಾಯಿಸಲು ಹೊರಟಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೊಮ್ಮಾಯಿ ಆರ್‌ಎಸ್‍ಎಸ್‍ನವನಲ್ಲ. ಹೀಗಾಗಿ ಬೊಮ್ಮಾಯಿಯನ್ನು ಬದಲಾಯಿಸಲು ಆರ್‌ಎಸ್‍ಎಸ್‍ನವರು ಹೊರಟಿದ್ದಾರೆ. ಬೊಮ್ಮಾಯಿ ಜನತಾ ಪರಿವಾರದವನು. ನಮ್ಮ ಜೊತೆಯಲ್ಲೇ ಇದ್ದ. ಆದರೆ ಅವನು ನಮ್ಮ ಪಟ್ಟುಗಳನ್ನು ಕಲಿಯಲಿಲ್ಲ ಎಂದರು. ಇದನ್ನೂ ಓದಿ:  ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಕಾಮಗಾರಿ ವಿಳಂಬ – ಸ್ಯಾಂಕಿ ಬಳಿ ಪ್ರತಿಭಟನೆ 

    ರಾಜ್ಯದಲ್ಲಿ ರಾಜ್ಯ ಸರ್ಕಾರ ಸತ್ತು ಹೋಗಿದೆ. ಗೃಹ ಸಚಿವರು ಅತ್ಯಂತ ಅಸಮರ್ಥ ಸಚಿವ. ರಾಜ್ಯದಲ್ಲಿ ಸರ್ಕಾರವೇ ಇಲ್ಲ. ಇವರಿಗೆ ಆಡಳಿತ ಮಾಡುವುದಕ್ಕೆ ಬರ್ತಿಲ್ಲ. ಎಲ್ಲ ಪರೀಕ್ಷೆಗಳಲ್ಲೂ ದುಡ್ಡು ದುಡ್ಡು ಎನ್ನುತ್ತಿದ್ದಾರೆ. ದುಡ್ಡು ಕೊಟ್ಟು ಬಂದ ಅಧಿಕಾರಿಗಳು ಇವರ ಮಾತು ಕೇಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾಯದರ್ಶಿ ಬಿ.ಎಲ್.ಸಂತೋಷ್ ಅವರಿಗೆ ತಿರುಗೇಟು ಕೊಟ್ಟ ಇವರು, ಮಾಜಿ ಸಿಎಂ ಯಡಿಯೂರಪ್ಪ ಮತ್ತು ಅವರ ಮಕ್ಕಳು ಯಾರು? ಅಪ್ಪ-ಮಕ್ಕಳು ಅಲ್ವಾ? ಅಂದ್ರೆ ವಂಶಪಾರಂಪರ್ಯ ರಾಜಕಾರಣದ ಬಗ್ಗೆ ಮಾತನಾಡಲು ಇವರಿಗೆ ಯಾವ ನೈತಿಕತೆ ಇದೆಯಾ? ಎಂದು ಕಿಡಿಕಾರಿದರು.

    ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಇಲ್ಲ. ಆದರೆ ಸರ್ಕಾರಕ್ಕೆ ನಿಭಾಯಿಸಲು ಬರುತ್ತಿಲ್ಲ. ಕಲ್ಲಿದ್ದಲು ಹೆಚ್ಚಾಗಿಯೇ ಇದೆ. ಆದರೆ ಅದನ್ನು ಹಂಚಿಕೆ ಮಾಡಲು ಇವರಿಗೆ ಬರುತ್ತಿಲ್ಲ. ಇಂತಹ ಆಡಳಿತದಿಂದ ಕಷ್ಟ ಎದುರಾಗುತ್ತಿದೆ. ಕೃತಕ ಕೊರತೆ ಸೃಷ್ಟಿಯನ್ನು ಮಾಡುತ್ತಿದ್ದಾರೆ. ದಿಢೀರನೆ ಕಲ್ಲಿದ್ದಲು ಉತ್ಪಾದನೆ ನಿಲ್ಲಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಆ್ಯಸಿಡ್ ದಾಳಿಗೆ ಒಳಗಾದ ಯುವತಿಗೆ ಸಹಾಯಹಸ್ತ 

    ಈ ಕುರಿತು ಅಧಿಕಾರಿಗಳು ಯಾವ ಸಚಿವರ ಮಾತನ್ನು ಕೇಳುತ್ತಿಲ್ಲ. ಸಚಿವರಿಗೆ ಇದರ ಬಗ್ಗೆ ಜ್ಞಾನವಿಲ್ಲ. ಇಂತಹ ಕೆಟ್ಟ ಸರ್ಕಾರವನ್ನು ಕರ್ನಾಟಕ ಎಂದೂ ನೋಡಿರಲಿಲ್ಲ. ಇದೊಂದು ಭ್ರಷ್ಟ ಸರ್ಕಾರ ಎಂದು ಆರೋಪಿಸಿದರು.

  • ಬೆಳಗಾವಿ ವಿಭಜನೆ: ಕರ್ನಾಟಕ, ಜಿಲ್ಲೆಯ ಹಿತದೃಷ್ಟಿಯಿಂದ ಸೂಕ್ತ ತೀರ್ಮಾನ ಮಾಡುತ್ತೇನೆ: ಸಿಎಂ

    ಬೆಳಗಾವಿ ವಿಭಜನೆ: ಕರ್ನಾಟಕ, ಜಿಲ್ಲೆಯ ಹಿತದೃಷ್ಟಿಯಿಂದ ಸೂಕ್ತ ತೀರ್ಮಾನ ಮಾಡುತ್ತೇನೆ: ಸಿಎಂ

    ಬೆಳಗಾವಿ: ರಾಜ್ಯದಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ. ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ಯಾವಾಗ ಚರ್ಚೆಗೆ ಕರೆಯುತ್ತೋ ಅಂದು ಹೋಗಿ ಈ ಕುರಿತು ಚರ್ಚೆ ಮಾಡಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ಕೊಟ್ಟರು.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಬಗ್ಗೆ ಇನ್ನೂ ಚರ್ಚೆಯಾಗಿಲ್ಲ. ನಾಳೆಗೆ ದೆಹಲಿಗೆ ಹೋಗುತ್ತಿದ್ದೇನೆ. ಚೀಫ್ ಜಸ್ಟಿಸ್ ಕಾನ್ಫರೆನ್ಸ್ ಪಾಲ್ಗೊಂಡು ವಾಪಸ್ ಬರುತ್ತೇನೆ. ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ಯಾವಾಗ ಚರ್ಚೆಗೆ ಕರೆಯುತ್ತೋ ಅಂದು ಹೋಗಿ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು. ಇದನ್ನೂ ಓದಿ:  ಕ್ಯಾನ್ಸರ್ ಚಿಕಿತ್ಸೆಯಲ್ಲಿರುವಾಗಲೇ ಇಂಟರ್ವ್ಯೂ ಅಟೆಂಡ್ ಮಾಡಿದ ಹಠವಾದಿ

    ಬೆಳಗಾವಿ ಜಿಲ್ಲೆ ವಿಭಜನೆ ವಿಚಾರಕ್ಕೆ, ಬೆಳಗಾವಿ ಜಿಲ್ಲೆಯ ವಿಭಜನೆಗೆ ಇನ್ನೂ ಯಾವುದೇ ನಿರ್ಣಯ ಮಾಡಿಲ್ಲ. ಬೆಳಗಾವಿ ವಿಭಜನೆ ಅನೇಕ ವರ್ಷಗಳಿಂದ ಚರ್ಚೆಯಲ್ಲಿದೆ. ಎರಡು, ಮೂರು ಜಿಲ್ಲೆಗಳ ಬಗ್ಗೆ ಪ್ರಸ್ತಾಪವಿದೆ. ಗಡಿಭಾಗದ ಜಿಲ್ಲೆ ಇದ್ದು ಬೇಡ ಎಂದು ಅಂದಿನಿ ಸಿಎಂ ಜೆ.ಎಚ್.ಪಟೇಲ್ ಇದ್ದಾಗ ಹೇಳಿದ್ರು. ಈಗ ಮತ್ತೆ ಜನರ ತಮ್ಮ ಒತ್ತಾಸೆಯನ್ನು ವ್ಯಕ್ತಪಡಿಸಿದ್ದಾರೆ. ಕರ್ನಾಟಕ, ಜಿಲ್ಲೆ ಹಿತದೃಷ್ಟಿಯಿಂದ ಸೂಕ್ತ ತೀರ್ಮಾನ ಮಾಡುತ್ತೇನೆ ಎಂದರು.

    ರಾಜ್ಯದಲ್ಲಿ ಮತ್ತೆ ಸಾರಿಗೆ ಮುಷ್ಕರ ವಿಚಾರಕ್ಕೆ, ಇದನ್ನು ಸಾರಿಗೆ ಸಚಿವರು ನೋಡಿಕೊಳ್ಳುತ್ತಾರೆ ಎಂದು ಪ್ರತಿಕ್ರಿಯೆ ನೀಡಿದರು. ಇದೇ ವೇಳೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ರಾಣಿ ಚೆನ್ನಮ್ಮ ಹೆಸರು ಇಡೋ ವಿಚಾರಕ್ಕೆ ಮಾತನಾಡಿದ ಅವರು, ಇಲ್ಲಿಯ ಎಲ್ಲ ನಾಯಕರ ಜೊತೆಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು. ಇದನ್ನೂ ಓದಿ:  ಅವನನ್ನ ಪ್ಲೀಸ್ ಬಿಡಬೇಡಿ, ಅವನಿಗೆ ಶಿಕ್ಷೆಯಾಗಲೇ ಬೇಕು: ಪೊಲೀಸರನ್ನು ಬೇಡಿಕೊಂಡ ಆಸಿಡ್ ಸಂತ್ರಸ್ತೆ

  • ವಿಧ್ವಂಸಕ ಕೃತ್ಯಗಳಿಗೆ ಕಾಂಗ್ರೆಸ್ ಹೊಣೆ: ಆರ್.ಅಶೋಕ್

    ವಿಧ್ವಂಸಕ ಕೃತ್ಯಗಳಿಗೆ ಕಾಂಗ್ರೆಸ್ ಹೊಣೆ: ಆರ್.ಅಶೋಕ್

    ಬೆಂಗಳೂರು: ಕಾಂಗ್ರೆಸ್ ಸಂಸ್ಕೃತಿಯೇ ಎಲ್ಲೆಡೆ ಅಶಾಂತಿ ನಿರ್ಮಾಣ ಮಾಡುವುದು. ವಿಧ್ವಂಸಕ ಕೃತ್ಯಗಳಿಗೆ ಕಾಂಗ್ರೆಸ್ ಹೊಣೆ ಎಂದು ಕಂದಾಯ ಸಚಿವ ಆರ್.ಅಶೋಕ್ ಆರೋಪಿಸಿದರು.

    ಜಯನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸಂಸ್ಕೃತಿಯೇ ಎಲ್ಲೆಡೆ ಅಶಾಂತಿ ನಿರ್ಮಾಣ ಮಾಡುವುದು. ಹಿಂದೆ ಅವರದೇ ಪಕ್ಷದ ಸಿಎಂ ಬದಲಾಯಿಸಲು ರಾಮನಗರ, ಕನಕಪುರದಲ್ಲಿ ಗಲಾಟೆ ಮಾಡಿಸುತ್ತಿದ್ದರು. ಡಿಜೆಹಳ್ಳಿ-ಕೆಜಿಹಳ್ಳಿಯಲ್ಲೂ ಅವರದೇ ಪಕ್ಷದ ಶಾಸಕನ ಮನೆಯನ್ನು, ಅವರದೇ ಪಕ್ಷದ ಮಾಜಿ ಮೇಯರ್‍ಗೆ ಬೆಂಕಿ ಹಾಕಿಸಿ, ಜೈಲಿಗೆ ಹೋಗಿದ್ದ ಎಂದು ಕಿಡಿಕಾರಿದರು. ಇದನ್ನೂ ಓದಿ:  ಪ್ರಿಯಾಂಕ್ ಖರ್ಗೆ ಆಪ್ತರೆನ್ನಲಾದ ಕಾಂಗ್ರೆಸ್ ನಾಯಕರನ್ನ ಬಂಧಿಸಲಾಗಿದೆ: ಆರಗ

    ಹುಬ್ಬಳ್ಳಿ ಗಲಾಟೆಯಲ್ಲೂ ಸ್ಥಳೀಯ ಕಾಂಗ್ರೆಸ್ ಅಧ್ಯಕ್ಷನೇ ಭಾಗಿಯಾಗಿದ್ದಾನೆ. ಪಿಎಸ್‍ಐ ನೇಮಕಾತಿ ಹಗರಣದಲ್ಲೂ ಕಾಂಗ್ರೆಸ್ ಮುಖಂಡನೇ ಇದ್ದಾನೆ. ಹೀಗೆ ಅವರೇ ಎಲ್ಲ ಹಗರಣದಲ್ಲೂ ಭಾಗಿಯಾಗಿ ಉಳಿದವರ ಬಗ್ಗೆ ಮಾತನಾಡುತ್ತಾರೆ. ರಾಜ್ಯದಲ್ಲಿ ಅಶಾಂತಿ, ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಸರ್ವಪ್ರಯತ್ನ ಮಾಡುತ್ತಿದೆ. ವಿದೇಶಿ ಶಕ್ತಿಗಳು ಈ ಎಲ್ಲ ಘಟನೆಯಲ್ಲಿ ಭಾಗಿಯಾಗಿದೆಯೇ ಎನ್ನುವ ಬಗ್ಗೆ ತನಿಖೆ ನಡೆಸಬೇಕು ಎಂದರು.

    ಗಲಭೆಕೋರರ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸುತ್ತ, ನಮ್ಮಲ್ಲೂ ಯುಪಿ, ಮಧ್ಯಪ್ರದೇಶ ಮಾದರಿ ರೂಲ್ಸ್ ಬರಬೇಕಾದ ಸ್ಥಿತಿ ಬರುತ್ತಿದೆ. ಬುಲ್ಡೋಜರ್ ರೂಲ್ಸ್ ತಂದರೆ ಮಾತ್ರ ಕೃತ್ಯಗಳನ್ನು ಮಟ್ಟ ಹಾಕಲು ಸಾಧ್ಯ. ಗಲಭೆ ಸೃಷ್ಟಿ ಮಾಡುವವರ ಮೇಲೆ ಕಠಿಣ ಕ್ರಮ ಜರುಗಿಸಬೇಕು. ಬುಲ್ಡೋಜರ್ ಬಳಸಿ ಆರೋಪಿಗಳ ಅಕ್ರಮ ಮನೆಗಳನ್ನು ತೆರವು ಮಾಡಬೇಕು ಎಂದು ತಿಳಿಸಿದರು. ಇದನ್ನೂ ಓದಿ:  ರಾಜ್ಯದಲ್ಲಿ 139 ಜನರಿಗೆ ಕೊರೊನಾ – ಶೂನ್ಯ ಮರಣ ದರ 

    ಯಾವುದೇ ಧರ್ಮ, ಜಾತಿಗೆ ಸೇರಿದ್ದರೂ ಸುಮ್ಮನೆ ಬಿಡಬಾರದು. ಅವರ ಆಸ್ತಿ-ಪಾಸ್ತಿಗಳನ್ನು ಜಪ್ತಿ ಮಾಡಿಕೊಳ್ಳಬೇಕು. ಈ ಬಗ್ಗೆ ನಾನು ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಚರ್ಚೆ ಮಾಡುತ್ತೇನೆ. ನಾವು ಇನ್ನಷ್ಟು ಕಠಿಣಕ್ರಮ ತೆಗೆದುಕೊಂಡು ದುಷ್ಟರ ಹೆಡೆಮುರಿ ಕಟ್ಟುತ್ತೇವೆ. ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ. ರಾಜ್ಯದಲ್ಲಿ ಅರಾಜಕತೆ ಉಂಟು ಮಾಡುವ ಕಾಂಗ್ರೆಸ್‍ಗೆ ತಕ್ಕ ಪಾಠ ಜನರೇ ಕಲಿಸುತ್ತಾರೆ ಎಂದು ಹೇಳಿದರು.

  • ಸರ್ಕಾರಿ ನೌಕರರ ಹಿತ ಕಾಯಲು ಸರ್ಕಾರ ಬದ್ಧ: ಸಿಎಂ

    ಸರ್ಕಾರಿ ನೌಕರರ ಹಿತ ಕಾಯಲು ಸರ್ಕಾರ ಬದ್ಧ: ಸಿಎಂ

    ಶಿವಮೊಗ್ಗ: ಸರ್ಕಾರ ಮತ್ತು ಜನ ಸಾಮಾನ್ಯರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರ ಹಿತ ಕಾಯಲು ಸರ್ಕಾರ ಸದಾ ಬದ್ಧವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ಕೊಟ್ಟರು.

    ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರಿ ನೌಕರರ ಸಂಘ ಸಂಯುಕ್ತಾಶ್ರಯದಲ್ಲಿ ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಏರ್ಪಡಿಸಲಾಗಿತ್ತು. ಈ ವೇಳೆ ಬೊಮ್ಮಾಯಿ ಅವರು ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

    ದೇಶದಲ್ಲೇ ನಮ್ಮ ರಾಜ್ಯ ಸರ್ಕಾರಿ ನೌಕರರು ದಕ್ಷ ಅಧಿಕಾರಿಗಳೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದಕ್ಕೆ ಹಲವಾರು ದಶಕಗಳಿಂದ ಸೇವೆ ಸಲ್ಲಿಸಿದ ಹಿರಿಯ ಸರ್ಕಾರಿ ಅಧಿಕಾರಿ ಅಥವಾ ನೌಕರರ ಶ್ರಮವೇ ಕಾರಣವಾಗಿದೆ. ಅವರನ್ನು ಈ ಸಮಯದಲ್ಲಿ ಸ್ಮರಿಸುತ್ತಾ ಅಭಿನಂದಿಸುತ್ತೇನೆ. ಈ ಪರಂಪರೆ ಹೀಗೆ ಮುಂದುವರೆಸುವ ಕರ್ತವ್ಯ ಮತ್ತು ನೈತಿಕ ಜವಾಬ್ದಾರಿ ನಿಮ್ಮ ಮೇಲಿದೆ. ನಮ್ಮ ಜವಾಬ್ದಾರಿಯನ್ನು ಸ್ಪಷ್ಟವಾಗಿ ತಿಳಿದುಕೊಂಡಲ್ಲಿ ನಮ್ಮ ಕರ್ತವ್ಯಕ್ಕೆ ನ್ಯಾಯ ಒದಗಿಸಬಹುದಾದ್ದರಿಂದ ಆಡಳಿತ ಯಂತ್ರದ ಬಗ್ಗೆ ಸ್ಪಷ್ಟತೆ ಇರಬೇಕು ಎಂದರು. ಇದನ್ನೂ ಓದಿ: ಕಲಬುರಗಿಯಲ್ಲಿ ನಾಳೆಯಿಂದ 2 ದಿನ ಬಿಜೆಪಿ ಕೋರ್ ಕಮಿಟಿ ಸಭೆ – ಸಿಎಂ ಸೇರಿ ಹಲವರು ಭಾಗಿ

    ಆಳುವುದೇ ಬೇರೆ ಮತ್ತು ಆಡಳಿತ ಮಾಡುವುದೇ ಬೇರೆ. ಆದ್ದರಿಂದ ನಾವು ಈ ಎರಡರ ನಡುವಿನ ವ್ಯತ್ಯಾಸ ಸ್ಪಷ್ಟಪಡಿಸಿಕೊಳ್ಳಬೇಕು. ನಮ್ಮ ಪಾತ್ರವನ್ನು ನಿಷ್ಠೆಯಿಂದ ನಿರ್ವಹಿಸಿದಲ್ಲಿ ನಾವು ಇಡೀ ರಾಜ್ಯದ ಜನತೆಗೆ ಅಭಿವೃದ್ದಿಯ ಫಲ ನೀಡಲು ಸಾಧ್ಯ. ಜವಾನನಿಂದ ಹಿಡಿದು ಅಧಿಕಾರಿಯವರೆಗೆ ತಮ್ಮ ಅಧಿಕಾರವನ್ನು ಜನಪರವಾಗಿ ಬಳಸಬೇಕು ಎಂದರು.

    ಕಾನೂನು ಬದ್ಧವಾಗಿ ಕೆಲಸ ಮಾಡಬೇಕು. ವಿವೇಚನೆ ಬಳಸುವ ಸಂದರ್ಭದಲ್ಲಿ ಸಮಾಜದ ಕಟ್ಟಕಡೆಯ ವ್ಯಕ್ತಿ ಪರವಾಗಿ ಚಿಂತಿಸಿ ನಿರ್ಣಯ ಕೈಗೊಳ್ಳಬೇಕು. ಶ್ರೀಮಂತನ ಪರವಾಗಿ ಅಲ್ಲ. ಬಡವರು, ಜನ ಸಾಮಾನ್ಯರ ಪರವಾದ ನಿರ್ಣಯ ಕೈಗೊಳ್ಳಬೇಕು ಎಂದರು.

    ಆಡಳಿತ ಸುಧಾರಣೆ 2ನೇ ಆಯೋಗದಲ್ಲಿ ಅನೇಕ ಸುಧಾರಣಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಬದಲಾಗುತ್ತಿರುವ ಜಾಗತಿಕ ವಿದ್ಯಮಾನಗಳು ಸರ್ಕಾರದ ಆಡಳಿತ ಯಂತ್ರದ ಮೇಲೆ ಪರಿಣಾಮ ಬೀರುತ್ತಿದೆ. ಆದ್ದರಿಂದ ನಾವು ಸರ್ಕಾರಿ, ಖಾಸಗಿ ಎಲ್ಲರ ಸಹಭಾಗಿತ್ವದಲ್ಲಿ ಕೆಲಸ ಮಾಡಬೇಕಿದೆ. ಈಗ ನಮ್ಮ ಚಿಂತನೆ, ಕಾರ್ಯವೈಖರಿಗಳು ಬದಲಾಗಬೇಕು ಎಂದು ಸಂದೇಶ ಕೊಟ್ಟರು.

    ಗ್ರಾ.ಪಂಯಿಂದ ಹಿಡಿದು ವಿಧಾನಸೌಧದವರೆಗೆ ಈ ತಂತ್ರಜ್ಞಾನ ಬಳಕೆಯ ವ್ಯವಸ್ಥೆ ಬಂದಿದೆ. ನೀವು ನಿಗದಿತ ಅವಧಿಯಲ್ಲಿ ಕೈಗೊಳ್ಳುವ ನಿರ್ಧಾರ ನಿಮ್ಮ ಜನಪರ ಕಳಕಳಿಯನ್ನು ತೋರುತ್ತದೆ. ಜನರ ಓಡಾಟ ತಪ್ಪಿಸುತ್ತದೆ. ಭ್ರಷ್ಟರನ್ನಾಗಿಸುವುದನ್ನು ತಪ್ಪಿಸುತ್ತದೆ. ಆರೋಪವನ್ನು ತಪ್ಪಿಸುತ್ತದೆ. ಪಟ್ಟಭದ್ರ ಹಿತಾಸಕ್ತಿಗಳು ವ್ಯವಸ್ಥೆಯನ್ನು ಅಲ್ಲೋಲ ಕಲ್ಲೋಲ ಮಾಡುತ್ತಿರುತ್ತವೆ ಎಂದು ಎಚ್ಚರಿಕೆ ಕೊಟ್ಟರು.

    ನಾವು ನಮ್ಮ ಸಾಮಾಜಿಕ, ಜನಪರ ಕೆಲಸ, ಕಾರ್ಯಕ್ಷಮತೆಯ ಮೂಲಕ ಉತ್ತರ ನೀಡಬೇಕು. ಅದನ್ನು ನಾನು ನಿಮ್ಮಿಂದ ಬಯಸುತ್ತಿದ್ದೇನೆ. ಬನ್ನಿ ಬದಲಾವಣೆ ಮಾಡೋಣ. ಆಡಳಿತ ಯಂತ್ರದಲ್ಲಿ ಬದಲಾವಣೆ ಮಾಡೋಣ. ಆಳುವ ರೀತಿಯನ್ನು ಬದಲಾಯಿಸೋಣ, ಜನಸಾಮಾನ್ಯರ ಬಳಿಗೆ ವ್ಯವಸ್ಥೆಯನ್ನು ಕೊಂಡೊಯ್ಯೋಣ. ಬಡವರು, ರೈತರು, ದೀನ-ದಲಿತರು ಸೇರಿದಂತೆ ಎಲ್ಲರ ಅಭಿವೃದ್ದಿಗಾಗಿ ಸ್ಥಿತಪ್ರಜ್ಞೆ ಮತ್ತು ಸಮಯಪ್ರಜ್ಞೆಯಿಂದ ಕೆಲಸ ಮಾಡೋಣವೆಂದು ಕರೆ ನೀಡಿದರು. ಇದನ್ನೂ ಓದಿ: ಬಸವಣ್ಣನಂತೆ ಬೊಮ್ಮಾಯಿ ಕೆಲಸ ಮಾಡುತ್ತಿದ್ದಾರೆ: ದೇಶಿಕೇಂದ್ರ ಮಹಾಸ್ವಾಮಿಜೀ

    ಪ್ರಸ್ತುತ ರಾಜ್ಯದಲ್ಲಿ 2 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಇದ್ದರೂ, ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡು ಅಧಿಕಾರಿ/ನೌಕರರು ಉತ್ತಮವಾಗಿ ಕೆಲಸ ಮಾಡುತ್ತಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಸರ್ಕಾರಿ ನೌಕರರಿಗೆ ಹಲವಾರು ಸೌಲಭ್ಯಗಳನ್ನು ನೀಡಲಾಗುತ್ತಿದೆ. ಇದಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರ ಪರಿಶ್ರಮವೂ ಕಾರಣವಾಗಿದೆ ಎಂದು ಶ್ಲಾಘಿಸಿದರು.

    ಕಾರ್ಯಕ್ರಮದಲ್ಲಿ ಸಚಿವರಾದ ಆರಗ ಜ್ಞಾನೇಂದ್ರ, ಡಾ.ಅಶ್ವಥನಾರಾಯಣ, ಭೈರತಿ ಬಸವರಾಜ್ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಅಶೋಕ್‍ನಾಯ್ಕ್, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿ.ಪಂ ಸಿಇಓ ಎಂ.ಎಲ್.ವೈಶಾಲಿ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹಾಜರಿದ್ದರು.