ಹಾವೇರಿ: ಹಿಜಬ್ ಮತ್ತು ಕೇಸರಿ ಶಾಲು ಫೈಟ್ ಈಗ ಸಿಎಂ ಬಸವರಾಜ ಬೊಮ್ಮಾಯಿ ತವರು ಜಿಲ್ಲೆಗೆ ಕಾಲಿಟ್ಟಿದೆ. ಸಮವಸ್ತ್ರವನ್ನು ಕಡ್ಡಾಯ ಎಂದು ಆದೇಶ ಮಾಡಿದ ಬಳಿಕವೂ ವಿದ್ಯಾರ್ಥಿಗಳು ಕೇಸರಿಶಾಲು ಧರಿಸಿ ಕಾಲೇಜು ಕ್ಯಾಂಪಸ್‍ಗೆ ಬರುತ್ತಿರುವ ಘಟನೆ ಹಾವೇರಿ ತಾಲೂಕಿನ ಗಾಂಧಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ.
ಡಿಗ್ರಿ ಕಾಲೇಜಿನಲ್ಲಿ ಕೇಸರಿಶಾಲು ಧರಿಸಿಕೊಂಡು ಸುಮಾರು 50ಕ್ಕೂ ಅಧಿಕ ವಿದ್ಯಾರ್ಥಿಗಳು ಆಗಮಿಸಿದ್ದಾರೆ. ಕ್ಯಾಂಪಸ್‍ನಲ್ಲಿ ಜೈ ಶ್ರೀರಾಮ್, ಜೈ ಶಿವಾಜಿ, ಜೈ ಭವಾನಿ ಎಂದು ಘೋಷಣೆ ಹಾಕಿದ್ದಾರೆ. ಮೊದ ಮೊದಲು ಕಾಲೇಜು ಗೇಟ್ ಬಂದ್ ಮಾಡಿದ ಕಾಲೇಜು ಸಿಬ್ಬಂದಿ ನಂತರ ವಿದ್ಯಾರ್ಥಿಗಳನ್ನು ಕಾಲೇಜ್ ಒಳಗೆ ಬಿಟ್ಟ ಉಪನ್ಯಾಸಕರು ಏನೂ ಮಾಡದೇ ಅಸಹಾಯಕರಾಗಿದ್ದರು. ಇದನ್ನೂ ಓದಿ: ಕೊರೊನಾಗೆ ಗೆಳೆಯ ಮೃತ – ಸ್ನೇಹಿತನ ಮಡದಿಯನ್ನ ಮದುವೆಯಾದ ಯುವಕ
ವಿಷಯ ತಿಳಿದು ಕಾಲೇಜಿಗೆ ಆಗಮಿಸಿದ ಗ್ರಾಮೀಣ ಠಾಣೆ ಸಿಪಿಐ ನಾಗಮ್ಮ ಹಾಗೂ ಪೊಲೀಸರು ವಾತಾವರಣವನ್ನು ತಿಳಿಗೊಳಿಸಿದರು. ಕಾಲೇಜು ಸಿಬ್ಬಂದಿ ಜೊತೆಗೆ ಮಾತನಾಡಿದ ಪೊಲೀಸರು ಮಾತುಕತೆ ನಡೆಸಿದರು.
ಪ್ರಾಚಾರ್ಯರು ಕಾಲೇಜು ಬಂದ್ ಮಾಡಿ ಎಲ್ಲ ವಿದ್ಯಾರ್ಥಿಗಳನ್ನು ಹೊರಹಾಕಿದ್ದಾರೆ. ನಾಳೆಯಿಂದ ಎಲ್ಲರೂ ಸಮವಸ್ತ್ರ ಸಹಿತ ಕಾಲೇಜಿಗೆ ಆಗಮಿಸಬೇಕು. ಯಾರೂ ಕೇಸರಿ ಶಾಲೂ ಹಾಗೂ ಬೂರ್ಕಾ ಹಾಕಿಕೊಂಡು ಬರಬಾರದು ಎಂದು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಉತ್ತರಾಖಂಡದ ಬ್ರಾಂಡ್ ಅಂಬಾಸಿಡರ್ ಆಗಿ ಅಕ್ಷಯ್ ಕುಮಾರ್ ನೇಮಕ
ಬೆಂಗಳೂರು: ಮಧುಮೇಹ ನಿವಾರಣೆಗಾಗಿ ಪ್ರಾಚೀನ ಆಯುರ್ವೇದ ಚಿಕಿತ್ಸಾ ಪದ್ಧತಿಯ ಅಂಶಗಳನ್ನು ಒಳಗೊಂಡಿರುವ ಮಹತ್ವದ ಕೃತಿಯೊಂದನ್ನು ಹೊರತರಲಾಗಿದೆ. ಈ ಪುಸ್ತಕವನ್ನು ಖ್ಯಾತ ಆಯುರ್ವೇದ ತಜ್ಞ ಡಾ.ಮೃತ್ಯುಂಜಯ ಸ್ವಾಮಿ ಅವರು ಬರೆದಿರುವ ‘ಏನ್ಷಿಯೆಂಟ್ ಸೀಕ್ರೆಟ್ಸ್ ಟು ರಿವರ್ಸ್ ಡಯಾಬಿಟೀಸ್’ ಕೃತಿ ಇದಾಗಿದೆ. ಈ ಕೃತಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಇಂದು ಬಿಡುಗಡೆ ಮಾಡಿದರು.
ಮಧುಮೇಹ ರೋಗಕ್ಕೆ ತುತ್ತಾಗಿರುವವರು, ಪ್ರಿ ಡಯಾಬಿಟಿಕ್ ಹಾಗೂ ಇನ್ಸುಲಿನ್ ಚಿಕಿತ್ಸೆಯಲ್ಲಿರುವವರಿಗೆ ಹೇಗೆ ಮಧುಮೇಹವನ್ನು ನಿವಾರಿಸಬಹುದು ಎನ್ನುವ ಅತ್ಯಂತ ಮಹತ್ವದ ಸಂಗತಿಗಳು ಈ ಕೃತಿಯಲ್ಲಿ ಅಡಗಿವೆ. ಇದನ್ನೂ ಓದಿ: ಮನಸ್ಸಿಗೆ ಬಂದಂತೆ ಮಾಡಲು ಇದು ಪಾಕಿಸ್ತಾನ ಅಲ್ಲ: ಆರ್. ಅಶೋಕ್
ಕೃತಿಯ ಲೇಖಕ ಡಾ.ಮೃತ್ಯುಂಜಯ ಸ್ವಾಮಿ ಮಾತನಾಡಿ, ಭಾರತ ದೇಶ ಮಧುಮೇಹದ ರಾಜಧಾನಿಯಾಗುವತ್ತ ದಾಪುಗಾಲು ಹಾಕುತ್ತಿದೆ. ಬದಲಾದ ಜೀವನಶೈಲಿಯಿಂದ ಬರುವ ಪ್ರಮುಖ ರೋಗಗಳಲ್ಲಿ ಮಧುಮೇಹ ಕೂಡ ಒಂದು. ಈ ರೋಗಕ್ಕೆ ತುತ್ತಾಗುವವರು ತಾವು ಸಾಯುವವರೆಗೂ ಮಾತ್ರೆಗಳನ್ನು ನುಂಗುತ್ತಲೇ ಇರಬೇಕು ಎನ್ನುವ ಸ್ಥಿತಿಯಾಗಿದೆ ಎಂದು ವಿವರಿಸಿದರು.
ಆಧುನಿಕ ವೈದ್ಯಶಾಸ್ತ್ರದ ಪ್ರಕಾರ, ಮಧುಮೇಹವನ್ನು ನಿವಾರಿಸಲು ಸಾಧ್ಯವಿಲ್ಲ. ಕೇವಲ ಅದನ್ನು ನಿಭಾಯಿಸಲು ಮಾತ್ರ ಸಾಧ್ಯ ಎನ್ನುವ ಮಾತುಗಳು ಜನಜನಿತ. ಆದರೆ ನಮ್ಮ ಪಾರಂಪರಿಕ ಔಷಧ ಪದ್ಧತಿಯಲ್ಲಿ ಮಧುಮೇಹ ರೋಗವನ್ನು ಕೇವಲ ನಿಭಾಯಿಸುವುದಷ್ಟೇ ಅಲ್ಲ ದೇಹವನ್ನು ಮಧುಮೇಹದಿಂದ ಮುಕ್ತಗೊಳಿಸಹುದು ಎನ್ನುವ ಅಂಶಗಳು ಅಡಕವಾಗಿವೆ. ಆ ಅಂಶಗಳ ಆಧಾರದಲ್ಲಿ ಪುಸ್ತಕವನ್ನು ಬರೆಯಲಾಗಿದೆ ಎಂದರು.
ಪುಸ್ತಕವನ್ನು ಲೋಕಾರ್ಪಣೆಗೊಳಿಸಿದ ಹರಿಹರ ವೀರಶೈವ ಲಿಂಗಾಯಿತ ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧೀಕಾರಿ ಜಗದ್ಗುರು ಶ್ರೀ ಶ್ರೀ ಶ್ರೀ ವಚನಾನಂದ ಸ್ವಾಮೀಜಿ ಅವರು ಮಾತನಾಡಿ, ಜೀವನಶೈಲಿ ರೋಗಗಳು ನಮ್ಮ ಯುವ ಜನಾಂಗದ ಬಹುಭಾಗದ ಜನರನ್ನು ಅನಾರೋಗ್ಯಕ್ಕೀಡು ಮಾಡುತ್ತಿವೆ. ಇದರಲ್ಲಿ ಹೆಚ್ಚು ಸಮಸ್ಯೆ ಉಂಟುಮಾಡುತ್ತಿರುವುದು ಮಧುಮೇಹ. ಈ ರೋಗಕ್ಕೆ ತುತ್ತಾಗಿರುವವರು ತಮ್ಮ ಜೀವನ ಶೈಲಿಯಲ್ಲಿ ಬದಲಾವಣೆ ಮಾಡಿಕೊಂಡಲ್ಲಿ ಅನೇಕ ಅನುಕೂಲಗಳನ್ನು ನಾವು ಯೋಗಭ್ಯಾಸದಲ್ಲಿ ಕಂಡಿದ್ದೇವೆ ಎಂದು ತಿಳಿಸಿದರು.
ಈ ಪುಸ್ತಕದಲ್ಲಿ ಅಳವಡಿಸಿರುವಂತಹ ಪ್ರಾಚೀನ ಆರೋಗ್ಯ ಪದ್ಧತಿಗಳ ಅಂಶಗಳು ಹಾಗೂ ಯೋಗಭ್ಯಾಸದಂತಹ ಅಳವಡಿಕೆಗಳು ಬಹಳ ಉಪಯೋಗ. ಸ್ವತಃ ಆಯುರ್ವೇದ ವೈದ್ಯರಾಗಿರುವ ಡಾ.ಮೃತ್ಯುಂಜಯ ಅವರು ತಮ್ಮ ಪುಸ್ತಕದಲ್ಲಿ ತಾವು ಆಳವಾಗಿ ಅಧ್ಯಯನ ಮಾಡಿದ ಅಂಶಗಳನ್ನು ನಮೂದಿಸಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ‘ಬ್ಲಾಕ್‍ಚೈನ್’ ಮೂಲಕ ಮದುವೆಯಾದ ಭಾರತದ ಮೊದಲ ದಂಪತಿ!
ಈ ಸಂದರ್ಭದಲ್ಲಿ ಯುವ ಬ್ರಿಗೇಡ್ ಸಂಸ್ಥೆಯ ಚಕ್ರವರ್ತಿ ಸೂಲಿಬೆಲೆ ಮತ್ತಿತರರು ಉಪಸ್ಥಿತರಿದ್ದರು.
ಅತಿ ಹೆಚ್ಚು ಮಾರಾಟವಾಗುತ್ತಿರುವ ಕೃತಿ: ಡಾ.ಮೃತ್ಯುಂಜಯ ಸ್ವಾಮಿ ಅವರ ಮೊದಲ ಪುಸ್ತಕ ‘ಏನ್ಷಿಯೆಂಟ್ ಸೀಕ್ರೆಟ್ ಆಫ್ ಹೆಲ್ದಿ ಲಿವಿಂಗ್’ ಕೃತಿಯು ಆಮೆಜಾನ್‍ನಲ್ಲಿ ಅತಿ ಹೆಚ್ಚು ಮಾರಾಟವಾಗುತ್ತಿರುವ ಕೃತಿಗಳಲ್ಲಿ ಒಂದಾಗಿದೆ. ಈ ಪುಸ್ತಕದಲ್ಲಿ ಮಧುಮೇಹವನ್ನು ನಿವಾರಿಸುವುದು, ಅದನ್ನು ಸುಲಭ ವಿಧಾನದಲ್ಲಿ ನಿಭಾಯಿಸುವುದು. ಹಾಗೆಯೇ ಅದಕ್ಕೆ ಬೇಕಾದ ಆಹಾರ ಪದ್ಧತಿ ಜೀವನ ಶೈಯಲ್ಲಿ ಆಗಬೇಕಾದ ಮಾರ್ಪಾಡು ಹೀಗೆ ಹತ್ತು ಹಲವು ಅಂಶಗಳನ್ನು ವಿಸ್ತøತವಾಗಿ ಚರ್ಚಿಸಲಾಗಿದೆ.
ಬೆಂಗಳೂರು: ರಾಜ್ಯದ ಆರು ಜಿಲ್ಲೆಗಳಲ್ಲಿ ಹೆಚ್ಚು ಅಪೌಷ್ಠಿಕತೆ ಹೆಚ್ಚಿದೆ. ಈ ಸಮಸ್ಯೆಯನ್ನು ನಿವಾರಿಸಿ ಮುಂದಿನ ವರ್ಷ ನೀತಿ ಆಯೋಗದ ಆರೋಗ್ಯ ಸೂಚ್ಯಂಕದಲ್ಲಿ ರಾಜ್ಯವನ್ನು ಟಾಪ್ 3 ರಲ್ಲಿ ಬರುವಂತೆ ಪ್ರಯತ್ನಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ 6 ಜಿಲ್ಲೆಗಳಲ್ಲಿ ಅಪೌಷ್ಠಿಕತೆ ಹೆಚ್ಚಿದೆ. ವಿಶೇಷ ಒತ್ತು ನೀಡಿ ಅಪೌಷ್ಠಿಕತೆ ನಿವಾರಣೆಗೆ ಕ್ರಮ ವಹಿಸಲಾಗುವುದು. ಮುಂದಿನ ವರ್ಷ ನೀತಿ ಆಯೋಗದ ಆರೋಗ್ಯ ಸೂಚ್ಯಂಕ ಟಾಪ್ 3 ರಲ್ಲಿ ಬರುವಂತೆ ಕ್ರಮ ವಹಿಸಲಾಗುವುದು ಎಂದರು. ಇದನ್ನೂ ಓದಿ: ನಾರಾಯಣ ಗುರುಗಳ ಬಗ್ಗೆ ಪ್ರಧಾನಿ ಸೇರಿದಂತೆ ಎಲ್ಲರಿಗೂ ಗೌರವ ಇದೆ: ಎಸ್.ಅಂಗಾರ
ಕೋವಿಡ್ ಪ್ರಕರಣಗಳ ಪ್ರಮಾಣ ಬೆಂಗಳೂರಿನಲ್ಲಿ ಇಳಿಕೆಯಾಗುತ್ತಿದೆ. ಬೇರೆ ಜಿಲ್ಲೆಗಳಲ್ಲಿ ನಿಧಾನವಾಗಿ ಏರುತ್ತಿದೆ. ಆದರೆ ಆಸ್ಪತ್ರೆ ದಾಖಲಾತಿ 1-2% ಮಾತ್ರ ಇರುವುದರಿಂದ ಆರೋಗ್ಯ ವ್ಯವಸ್ಥೆಯ ಮೇಲೆ ಹೆಚ್ಚು ಒತ್ತಡ ಇಲ್ಲ. ಓಮಿಕ್ರಾನ್ ವೈರಾಣು ಇದ್ದರೂ ರೋಗ ತೀವ್ರತೆ ಇಲ್ಲ. ಕಳೆದೆರಡು ಅಲೆಗಳಿಗೆ ಹೋಲಿಸಿದರೆ ಈ ಅಲೆಯಲ್ಲಿ ಸಾವಿನ ಪ್ರಮಾಣ ಬಹಳ ಕಡಿಮೆ ಇದೆ. ಹಾಗೆಯೇ ಹೊಸ ಪ್ರಕರಣಗಳಿಗಿಂತ ಗುಣಮುಖರಾಗುವವರ ಪ್ರಮಾಣ ಅಧಿಕವಾಗಿದೆ. ಪ್ರಕರಣ ಕಡಿಮೆಯಾಗುತ್ತಿರುವಾಗ ಅತಿ ಕಠಿಣ ನಿಯಮಗಳ ಅಗತ್ಯವಿಲ್ಲ ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಹೊಸ ಜಿಲ್ಲಾಸ್ಪತ್ರೆ ನಿರ್ಮಾಣವಾಗಿಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಈ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಗುವುದು. ಸ್ಥಳದ ಬಗ್ಗೆಯೂ ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗುವುದು. ಹಾಗೆಯೇ ಜಿಲ್ಲಾಡಳಿತ ಕಚೇರಿ ಎಲ್ಲಿರಬೇಕೆಂದು ಜನಪ್ರತಿನಿಧಿಗಳ ಸಹಮತದೊಂದಿಗೆ ತೀರ್ಮಾನಿಸಲಾಗುವುದು. ಈ ಭಾಗದಲ್ಲಿ ಯುವಜನರಿಗೆ ಉದ್ಯೋಗ ನೀಡಲು ಕೈಗಾರಿಕೆ ಆರಂಭಕ್ಕೆ ಒತ್ತು ನೀಡಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಬದಲಾವಣೆಯಿಂದ ಸಹಜವಾಗಿ ಕಾರ್ಯಕರ್ತರಿಗೆ, ಬೆಂಬಲಿಗರಿಗೆ ಬೇಸರವಾಗಿರಬಹುದು. ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಇಲ್ಲದಿದ್ದರೂ, ಚಿಕ್ಕಬಳ್ಳಾಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬದ್ಧನಾಗಿದ್ದೇನೆ. ಹಿರಿಯರಾದ ಎಂಟಿಬಿ ನಾಗರಾಜ್ ಅವರ ಸಹಕಾರ ಪಡೆದು ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯ ನಡೆಯಲಿದೆ. ಹಾಗೆಯೇ ಎಲ್ಲ ಕ್ಷೇತ್ರಗಳಿಗೆ ಭೇಟಿ ನೀಡಿ ಬಿಜೆಪಿ ಬಲಪಡಿಸಲಾಗುವುದು ಎಂದು ವಿವರಿಸಿದರು. ಇದನ್ನೂ ಓದಿ: ನಮಗೆ ಗೌರವ ಕೊಟ್ಟಿದ್ದಕ್ಕೆ ಜಾರಕಿಹೊಳಿಗೆ ಅಭಿನಂದನೆ: ಎಚ್‍ಡಿಕೆ
ರಾಜಕಾರಣವೇ ಬೇರೆ, ವಿಶ್ವಾಸವೇ ಬೇರೆ!
ಯಾರೇ ಶಾಸಕರು ಮತ್ತೊಂದು ಪಕ್ಷದವರ ಜೊತೆ ಎದುರಿಗೆ ಸಿಕ್ಕಾಗ ಮಾತನಾಡಿದರೆ ಪಕ್ಷ ಸೇರುತ್ತಾರೆ ಎಂದು ಹೇಳುವುದಲ್ಲ. ಚುನಾವಣೆ ಹತ್ತಿರ ಬರುತ್ತಿರುವುದರಿಂದ ಕಾಂಗ್ರೆಸ್ ಅವರು ಚಾಲ್ತಿಯಲ್ಲಿರಲು ಹೇಳಿಕೆ ನೀಡುತ್ತಿದ್ದಾರೆ. ಯಾರೂ ಕೂಡ ನಾಲ್ಕು, ಆರು ತಿಂಗಳಲ್ಲಿ ಮುಖ್ಯಮಂತ್ರಿಗಳನ್ನು ಬದಲಿಸುವುದಿಲ್ಲ. ಇವು ಸಂಪೂರ್ಣ ಗಾಳಿ ಸುದ್ದಿ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿ ಜನವರಿ 28ಕ್ಕೆ 6 ತಿಂಗಳು ಪೂರ್ಣಗೊಳ್ಳಲಿದ್ದು, ಹೈಕಮಾಂಡ್ ರಿಪೋರ್ಟ್ ಕಾರ್ಡ್ ತರಿಸಿಕೊಂಡಿದೆ. ಈ ರಿಪೋರ್ಟ್ ಕಾರ್ಡ್ ಆಧರಿಸಿ ವರಿಷ್ಠರು ಮುಂದಿನ ನಡೆ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಪಬ್ಲಿಕ್ ಟಿವಿಗೆ ಖಚಿತ ಮಾಹಿತಿ ಲಭ್ಯವಾಗಿದೆ.
ಸಚಿವರ ಕಾರ್ಯವೈಖರಿಯನ್ನು ಸಚಿವ ಸಂಪುಟ ಪುನಾರಚನೆಗೂ ಮುನ್ನ ಪರಿಶೀಲನೆ ನಡೆಸಲಾಗುವುದು. ಇಲಾಖೆ, ಪಕ್ಷದ ಚಟುವಟಿಕೆ, ಸರ್ಕಾರದ ಸಮರ್ಥನೆ ಹೀಗೆ ಹಲವು ಆಯಾಮಗಳಲ್ಲಿ ಮಾಹಿತಿ ಪಡೆದಿರುವ ವರಿಷ್ಠರು ವರದಿ ಆಧರಿಸಿ ಕ್ರಿಯಾಶೀಲರಲ್ಲದ ಸಚಿವರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆ ಇದೆ ಎನ್ನಲಾಗಿದೆ. ಇದನ್ನೂ ಓದಿ: ಬಿಜೆಪಿಯಲ್ಲಿ ಉಸ್ತುವಾರಿ ಸಚಿವರ ಕಿತ್ತಾಟ – ಮಾಧುಸ್ವಾಮಿ, ಸೋಮಣ್ಣ, ಎಂಟಿಬಿಗೆ ಅಸಮಾಧಾನ
ಸಚಿವರ, ಸರ್ಕಾರದ ರಿಪೋರ್ಟ್ ತರಿಸಿಕೊಳ್ಳಲು ಕಾರಣ ಏನು?
* ಪಂಚರಾಜ್ಯಗಳ ಚುನಾವಣೆ ಬೆನ್ನಲ್ಲೇ ಸಂಪುಟ ವಿಸ್ತರಣೆ ಮಾಡಬೇಕು
* ಕ್ರಿಯಾಶೀಲರಲ್ಲದ ಸಚಿವರನ್ನು ಗುರುತಿಸುವುದು
* ಒಂದು ವರ್ಷಕ್ಕೂ ಮುನ್ನ ಚುನಾವಣೆಗೆ ಪಕ್ಷ ಮತ್ತು ಸರ್ಕಾರವನ್ನು ಸಜ್ಜುಗೊಳಿಸಬೇಕಿರುವ ಹೈಕಮಾಂಡ್
* ಕಡೆಯ ಒಂದೂವರೆ ವರ್ಷದಲ್ಲಿ ಜನರಲ್ಲಿ ಸರ್ಕಾರದ ಬಗ್ಗೆ ಒಳ್ಳೆಯ ಅಭಿಪ್ರಾಯ ಮೂಡಿಸುವುದು
* ಈ ಹಿನ್ನೆಲೆ ಸಮರ್ಥವಾಗಿ ಕಾರ್ಯನಿರ್ವಹಿಸುವ ಸಚಿವರನ್ನು ಉಳಿಸಿಕೊಂಡು ಉಳಿದವರನ್ನು ಕೈ ಬಿಡುವುದು
* ರಿಪೋರ್ಟ್ ಪರಿಶೀಲಿಸಿ, ಚುನಾವಣೆ ಬೆನ್ನಲ್ಲೇ ಸಂಪುಟಕ್ಕೆ ಸರ್ಜರಿ ಮಾಡಲಿರುವ ಹೈಕಮಾಂಡ್
* ಅಲ್ಲದೇ ಸರ್ಕಾರದಲ್ಲಿ ಆಗಬೇಕಿರುವ ಬದಲಾವಣೆ ಗುರುತಿಸಿ ಸಿಎಂ ಬೊಮ್ಮಾಯಿಗೆ ಟಾರ್ಗೆಟ್ ನೀಡುವುದು
ಬೆಂಗಳೂರು: ಮೊದಲನೇ ಹಾಗೂ 2 ನೇ ಡೋಸ್ ಲಸಿಕೆ ಪ್ರಮಾಣದಲ್ಲಿ ರಾಜ್ಯ ಸರಾಸರಿಗಿಂತ ಕಡಿಮೆ ಇರುವ ಜಿಲ್ಲೆಗಳು ತಿಂಗಳ ಅಂತ್ಯದೊಳಗೆ ಸರಾಸರಿಯನ್ನು ತಲುಪಬೇಕು ಎಂದು ಎಲ್ಲ ಜಿಲ್ಲೆಗಳ ಡಿಸಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.
ಕೋವಿಡ್-19 ಲಸಿಕಾ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಬೊಮ್ಮಾಯಿ ಮಾತನಾಡಿದರು. ಜಿಲ್ಲಾಡಳಿತಗಳು ದಕ್ಷತೆಯಿಂದ ಪ್ರತಿ ಗ್ರಾಮದ ಕಟ್ಟಕಡೆಯ ಮನೆಗೂ ಔಷಧ ಕಿಟ್‌ಗಳನ್ನು ತಲುಪಿಸಬೇಕು. ಹೋಮ್ ಐಸೋಲೇಶನ್ ನಲ್ಲಿರುವವರಿಗೆ ಸರಿಯಾದ ಚಿಕಿತ್ಸೆ ನೀಡಬೇಕು. ಜಿಲ್ಲಾಧಿಕಾರಿಗಳು, ಡಿಹೆಚ್‌ಒಗಳು ತಾಲ್ಲೂಕುಗಳಿಗೆ ಭೇಟಿ ನೀಡಿ ಔಷಧ ವಿತರಣೆಯ ಬಗ್ಗೆ ಪರಿಶೀಲಿಸಬೇಕು. ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಮೇಲ್ವಿಚಾರಣೆ ಕೈಗೊಳ್ಳಬೇಕು ಎಂದು ತಿಳಿಸಿದರು. ಇದನ್ನೂ ಓದಿ: 12-14 ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ನಿರ್ಧಾರವಾಗಿಲ್ಲ – ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟನೆ
ಪ್ರಯೋಗಾಲಯದ ವರದಿ ಬಂದ ತಕ್ಷಣ ಟೆಲಿ ಟ್ರಯಾಜಿಂಗ್ ಮಾಡಬೇಕು. ಶೇ.94ರಷ್ಟು ಸೋಂಕಿತರು ಹೋಮ್ ಐಸೋಲೇಶನ್ ಇರುವುದರಿಂದ ಮನೆಯವರಿಗೆ ಹರಡದಂತೆ ಕ್ರಮ ಕೈಗೊಳ್ಳಬೇಕು. ಸೋಂಕಿತರ ಮನೆಯವರಿಗೂ ಪರೀಕ್ಷೆ ಮಾಡಿ ಅಗತ್ಯವಿದ್ದರೆ ಚಿಕಿತ್ಸೆ ನೀಡಿ ಎಂದು ಸಲಹೆ ನೀಡಿದರು.
ಹೊರ ರಾಜ್ಯ ಕಾರ್ಮಿಕರಿಗಾಗಿ ಲಸಿಕೆ, ಚಿಕಿತ್ಸೆ ಎಸ್‌ಒಪಿ:
ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಪ್ರಾರಂಭ ಮಾಡಿ ವೈದ್ಯರು ಹಾಗೂ ಎಎನ್‌ಎಂಗಳು ಮನೆ ಮನೆಗೆ ಭೇಟಿ ನೀಡಬೇಕು. ಇದಕ್ಕೆ ವಿಶೇಷ ಎಸ್‌ಒಪಿ ರೂಪಿಸಬೇಕು. ಬೆಂಗಳೂರಿನಲ್ಲಿ ಖಾಸಗಿ ಹಾಗೂ ಸರ್ಕಾರಿ ಒಪಿಡಿಗಳನ್ನು ಬಲಪಡಿಸಲು ಹಾಗೂ ಜನಸಂಖ್ಯೆಗೆ ಅನುಗುಣವಾಗಿ ಹೊಸ ಒಪಿಡಿಗಳನ್ನು ತೆರೆಯಬೇಕು. ಕೆಲಸಕ್ಕಾಗಿ ಹೊರ ರಾಜ್ಯಗಳಿಂದ ಕಾರ್ಮಿಕರನ್ನು ಕರೆತರುವ ರಾಜ್ಯದ ಕೈಗಾರಿಕೆಗಳಿಗೆ ಕಾರ್ಮಿಕರ ಲಸಿಕೆ ಹಾಗೂ ಚಿಕಿತ್ಸೆ ಕುರಿತು ವಿಶೇಷ ಎಸ್‌ಒಪಿ ರೂಪಿಸಬೇಕು ಎಂದು ಸೂಚಿಸಿದರು. ಇದನ್ನೂ ಓದಿ: ನಾನು ಮಾಸ್ಕ್ ಹಾಕಲ್ಲ : ಸಚಿವ ಉಮೇಶ್ ಕತ್ತಿ
ಅನ್ಯರೋಗಿಗಳು, ವೃದ್ಧರ ಪರೀಕ್ಷೆ ಹೆಚ್ಚಿಸಿ:
ಎಲ್ಲ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಹೆಚ್ಚಿರುವುದರಿಂದ ಅನ್ಯರೋಗ (ಕೋ-ಮಾರ್ಬಿಡಿಟಿ) ಇರುವವರನ್ನು ಗುರುತಿಸಿ, ಹೋಮ್ ಐಸೋಲೇಶನ್‌ನಲ್ಲಿರುವವರಿಗೆ ಟೆಸ್ಟ್ ಮಾಡಿ ಚಿಕಿತ್ಸೆ ನೀಡಬೇಕು. ಕೋ-ಮಾರ್ಬಿಡಿಟಿ ಇರುವವರು ಹಾಗೂ 60 ವರ್ಷಗಳಿಗೂ ಮೇಲ್ಪಟ್ಟವರಿಗೆ ಪರೀಕ್ಷೆಗಳನ್ನು ಹೆಚ್ಚಿಸಬೇಕು ಮತ್ತು ಔಷಧಿ ಒದಗಿಸಬೇಕು ಎಂದು ತಿಳಿಸಿದರು.
ಎಲ್ಲಾ ಜಿಲ್ಲೆಗಳಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆಗೆ ಹೆಚ್ಚು ಒತ್ತು ನೀಡಬೇಕು. ಮುಂಚೂಣಿ ಕಾರ್ಯಕರ್ತರು ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ಅಭಿಯಾನ ಕೈಗೊಳ್ಳಬೇಕು. ಲಸಿಕೆ ಪಡೆದು 90 ದಿನ ಪೂರೈಸಿರುವವರ ಪಟ್ಟಿ ತಯಾರಿಸಿ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಲಸಿಕೆ ಕಾರ್ಯಕ್ರಮದ ಮೇಲ್ವಿಚಾರಣೆಯ ಜವಾಬ್ದಾರಿ ನೀಡಬೇಕು ಎಂದು ಹೇಳಿದರು. ಇದನ್ನೂ ಓದಿ: ಹುಟ್ಟಿದ ಒಂದು ದಿನದ ನವಜಾತ ಶಿಶುವಿಗೆ ಕೊರೊನಾ
ಕರ್ನಾಟಕದಲ್ಲಿ ಪರೀಕ್ಷೆಗಳು ಹೆಚ್ಚಾಗಿರುವುದರಿಂದ ಪ್ರಕರಣಗಳು ಹೆಚ್ಚಿದ್ದರೂ ಕೋವಿಡ್ ಪರಿಸ್ಥಿತಿ ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದೇವೆ. ಮುನ್ನೆಚ್ಚರಿಕಾ ಕ್ರಮಗಳು ಉತ್ತಮವಾಗಿದ್ದರೆ ಕೋವಿಡ್ ಮೂರನೇ ಅಲೆ ಏರುಗತಿ ತಲುಪಿದರೂ ಆತಂಕ ಪಡದೆ ಯಶಸ್ವಿಯಾಗಿ ನಿಭಾಯಿಸಬಹುದು ಎಂದು ಸಿಎಂ ಆಶಯ ವ್ಯಕ್ತಪಡಿಸಿದರು.
ಮಂಡ್ಯ: ಗೊಂದಲ ಸೃಷ್ಟಿಸಿ ಸರ್ಕಾರಕ್ಕೆ ಟೆನ್ಷನ್ ಕೊಡೋಣ ಅಂತ ಅಂದುಕೊಂಡಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಸಚಿವ ನಾರಾಯಣಗೌಡರು ಕಿಡಿಕಾರಿದರು.
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯಿಂದ ರಾಜ್ಯದಲ್ಲಿ ಸಂಭವಿಸುತ್ತಿರುವ ಗೊಂದಲ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗೊಂದಲ ಸೃಷ್ಟಿಸಲು ಕಾಂಗ್ರೆಸಿಗರು ಹಠ ಮಾಡ್ತಿದ್ದಾರೆ. ಪಾದಯಾತ್ರೆಗೆ ಹೊರಟ್ಟಿಲ್ಲ, ಅರೆಸ್ಟ್ ಮಾಡ್ಲಿ ಅಂತ ಕಾಯುತ್ತಿದ್ದಾರೆ. ಅರೆಸ್ಟ್ ಮಾಡಿದ್ರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡಿಸೋದಕ್ಕೆ ಪ್ಲಾನ್ ಮಾಡಿದ್ದಾರೆ. ಗೊಂದಲ ಸೃಷ್ಟಿ ಸರ್ಕಾರಕ್ಕೆ ಟೆನ್ಷನ್ ಕೊಡೋಣ ಅಂತ ಅಂದುಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೋವಿಡ್ ನಿಯಮ ಉಲ್ಲಂಘನೆ – ಪ್ರಭು ಚವ್ಹಾಣ್ ವಿರುದ್ಧ ದೂರು
ಈ ಬಗ್ಗೆ ಸಿಎಂ ಬೊಮ್ಮಾಯಿ ಬುದ್ಧಿವಂತಿಕೆಯಿಂದ ತೀರ್ಮಾನ ತೆಗೆದುಕೊಂಡಿದ್ದಾರೆ. ಪಾದಯಾತ್ರೆಯಿಂದ ನಮ್ಮ ಪಾರ್ಟಿ, ಸರ್ಕಾರಕ್ಕೆ ಏನೂ ಎಫೆಕ್ಟ್ ಆಗಲ್ಲ. ಪಾದಯಾತ್ರೆ ಅಗತ್ಯ ಇಲ್ಲ ಅನ್ನೋದು ರಾಜ್ಯದ ಜನರಿಗೆ ತಿಳಿದಿದೆ. ಪಾದಯಾತ್ರೆಯಲ್ಲಿ ಭಾಗಿಯಾಗಿರುವ ಎಲ್ಲರೂ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಬೇಕು. ಕೆಲವರು ಲಸಿಕೆ ತೆಗೆದುಕೊಳ್ಳದೇ ಇರುವವರು ಇರುತ್ತಾರೆ. ಅಂತವರೆಗೆ ತೊಂದರೆ ಆಗುತ್ತೆ ಎಂದು ತಿಳಿಸಿದರು.
ಮತ್ತೆ ಜೈಲಿಗೆ ಕಳುಹಿಸಲು ಪ್ಲಾನ್ ಮಾಡ್ತಿದ್ದಾರೆ ಎಂದು ಡಿಕೆಶಿ ಆರೋಪ ವಿಚಾರವಾಗಿ ಮಾತನಾಡಿದ ಅವರು, ಯಾತಕ್ಕಾಗಿ ಈ ರೀತಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ ಅಂತ ನಮಗೂ ಅರ್ಥ ಆಗಲಿಲ್ಲ. ಅರೆಸ್ಟ್ ಮಾಡೋದಾಗಿದ್ರೆ ಒಂದು ನಿಮುಷದಲ್ಲಿ ಮಾಡಬಹುದಾಗಿತ್ತು. ಇದು ಗೊಂದಲ ಸೃಷ್ಟಿಸುವ ಸಂದರ್ಭವಲ್ಲ. ಎಷ್ಟು ದಿನ ಪಾದಯಾತ್ರೆ ಮಾಡೋದಕ್ಕೆ ಸಾಧ್ಯ ಎಂದು ಪ್ರಶ್ನಿಸಿದ ಅವರು, ನಾಲ್ಕು ದಿನದಲ್ಲಿ ತಣ್ಣಗೆ ಆಗುತ್ತಾರೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ನೆಟ್ಟಿಗರ ಆಕ್ರೋಶಕ್ಕೆ ಮಣಿದು ಸೈನಾ ಬಳಿ ಕ್ಷಮೆಯಾಚಿಸಿದ ಸಿದ್ದಾರ್ಥ್
ಬೆಂಗಳೂರು: ಸಕಲ ಸೌಲಭ್ಯಗಳಿರುವ ನವಬೆಂಗಳೂರನ್ನು ನಿರ್ಮಿಸಲು ನೀಲನಕ್ಷೆ ಸಿದ್ಧಪಡಿಸಲಾಗುತ್ತಿದೆ. ಈ ಮೂಲಕ ವಿಶೇಷ ಅನುದಾನವನ್ನು ಸರ್ಕಾರ ಒದಗಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಅದ್ವಿತೀಯ ಗ್ರೂಪ್ ನ ಐ.ಟಿ ಪಾರ್ಕ್ ಯೋಜನೆಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಬೊಮ್ಮಾಯಿ ಅವರು ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು, ಬೃಹತ್ ಆಗಿ ಬೆಳೆಯುತ್ತಿರುವ ಬೆಂಗಳೂರನ್ನು ಯೋಜನಾಬದ್ಧವಾಗಿ ಹಾಗೂ ಸಮಗ್ರವಾಗಿ ಅಭಿವೃದ್ಧಿಗೊಳಿಸಬೇಕಿದೆ. ಎಲ್ಲ ವರ್ಗದ ಜನರಿಗೆ ಸೌಲಭ್ಯಗಳನ್ನು ತಲುಪಿಸುವ ವಿಶೇಷ ಯೋಜನೆಗಳನ್ನು ಒಟ್ಟಾಗಿ ರೂಪಿಸುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಾಗಿದ್ದು, ಲಾಕ್‍ಡೌನ್ ಆಗಲು ಬಿಡ್ಬೇಡಿ – ಮಂತ್ರಾಲಯ ಶ್ರೀ ಮನವಿ
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಾಲದಲ್ಲಿ ರೂಪಿಸಲಾದ ಬೆಂಗಳೂರು ವಿಷನ್ 2022 ಯೋಜನೆಯಡಿ 4-5 ಕಾರ್ಯಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಅವುಗಳಿಗೆ ವೇಗವನ್ನು ನೀಡಲು ಈಗಾಗಲೇ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.
ಜಿ.ಎಂ.ಸಿದ್ದೇಶ್ವರ ಅವರ ಎರಡು ಮತ್ತು ಮೂರನೇ ಪೀಳಿಗೆ ಯಶಸ್ವಿಯಾಗಿ ವ್ಯಾಪಾರದಲ್ಲಿ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಕೊಡುಗೆ ನೀಡಿದ್ದಾರೆ. ಇದು ಉತ್ತರ ಕರ್ನಾಟಕಕ್ಕೆ ಹೆಸರುವಾಸಿಯಾದ ಸಂಸ್ಥೆಯಾಗಿದೆ. ಬೆಂಗಳೂರಿನಲ್ಲಿ ಆಸ್ಪತ್ರೆ ನಿರ್ಮಿಸಿ, ಆರೋಗ್ಯ ಸೇವೆಗಳನ್ನು ಉತ್ತಮ ರೀತಿಯಲ್ಲಿ ನೀಡುತ್ತಿದ್ದಾರೆ. ಎಲ್ಲ ರಂಗದಲ್ಲಿಯೂ ಯಶಸ್ವಿಯಾಗಿ ಕಠಿಣ ಪರಿಶ್ರಮದಿಂದ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಪ್ರಶಂಸಿದರು.
ಇದೀಗ ಐ.ಟಿ ಹಬ್ ನಿರ್ಮಿಸಿ 10 ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಲಿದ್ದಾರೆ. ರಾಜ್ಯದಲ್ಲಿ ಐಟಿಯಿಂದ ಬೆಂಗಳೂರು ಪ್ರಸಿದ್ಧವಾಗಿದೆ. ನಾಲ್ಕು ದಿಕ್ಕಿನಲ್ಲಿಯೂ ಮಾಹಿತಿ ತಂತ್ರಜ್ಞಾನ ಉದ್ಯಮ ವಿಸ್ತರಣೆಯಾಗಿದೆ. ಐ.ಟಿ ಉದ್ಯಮಕ್ಕೆ ಹಿಂದಿನ ಸರ್ಕಾರಗಳೂ ಸೇರಿದಂತೆ ನಮ್ಮ ಸರ್ಕಾರವೂ ಮಹತ್ವ ಮತ್ತು ಪ್ರೋತ್ಸಾಹ ನೀಡುತ್ತಾ ಬಂದಿದೆ. ಅತಿ ಹೆಚ್ಚು ಉದ್ಯೋಗ ಲಭಿಸುತ್ತಿರುವುದು ಐ.ಟಿ ವಲಯದಲ್ಲಿ. ವಿದ್ಯಾವಂತರಿಗೆ ದೊಡ್ಡ ಪ್ರಮಾಣದಲ್ಲಿ ಅವಕಾಶಗಳು ದೊರಕುತ್ತಿದೆ ಎಂದರು.
ದುಡಿಯುವ ವರ್ಗದವರ ಕೈಯಲ್ಲಿ ದೇಶದ ಆರ್ಥಿಕತೆ!
ಜನರ ಕೈಯಲ್ಲಿ ಉದ್ಯೋಗ ಇದ್ದಾಗ ಮಾತ್ರ ದೇಶ ಅಭಿವೃದ್ಧಿಯಾಗಿ, ಆರ್ಥಿಕತೆ ಬೆಳೆಯುತ್ತದೆ. ಆ ನಿಟ್ಟಿನಲ್ಲಿ ಐ.ಟಿ ಸೇವೆಗಳು ದೇಶದ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಅತಿ ಹೆಚ್ಚು ರಫ್ತು ಆಗುತ್ತಿರುವುದು ಐ.ಟಿ ವಲಯದಲ್ಲಿ. ದೇಶದ ಒಟ್ಟು ರಫ್ತಿನ ಪ್ರಮಾಣದಲ್ಲಿ ಶೇ.40 ರಷ್ಟು ರಫ್ತು ಬೆಂಗಳೂರಿನಿಂದ ಆಗುತ್ತಿದೆ. ಹೀಗಾಗಿ ಬೆಂಗಳೂರು ದೇಶದ ಆರ್ಥಿಕತೆಯ ಪ್ರಮುಖ ಕೇಂದ್ರವಾಗಿದೆ ಎಂದು ತಿಳಿಸಿದರು.
ಸಮಾರಂಭದಲ್ಲಿ ಸಚಿವರಾದ ಮುರುಗೇಶ್ ನಿರಾಣಿ, ಬಿ.ಎ.ಬಸವರಾಜ, ಆರ್.ಅಶೋಕ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕ ಎಸ್.ಎ.ರವೀಂದ್ರನಾಥ, ಮೊದಲಾದವರು ಉಪಸ್ಥಿತರಿದ್ದರು.
ರಾಮನಗರ: ಮಂತ್ರಿಗಳು ಮಂತ್ರಿಗಳ ರೀತಿ ನಡೆದುಕೊಂಡಿಲ್ಲ. ಪುತ್ಥಳಿ ಅನಾವರಣಕ್ಕೆ ದಲಿತ ಸಂಘಟನೆಗಳಿಗೆ ಆಹ್ವಾನ ನೀಡದೇ ಕಾರ್ಯಕ್ರಮವನ್ನು ಮಾಡುತ್ತಿದ್ದರು. ಅದರಿಂದ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಮುಂದಾಗಿದ್ದರು ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.
ರಾಮನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವರು ಸವಾಲಿಗೆ ಕರೆದಾಗ ನಾನು ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಾಗುವುದಿಲ್ಲ. ಇಲ್ಲಿರುವ ಪ್ರತಿಯೊಂದು ಕಲ್ಲುಗಳು ಕೂಡ ನಮ್ಮ ಅವಧಿಯಲ್ಲಿದ್ದ ಶಾಸಕರು ಮತ್ತು ಸಚಿವರು ಮಾಡಿಸಿದ್ದಾರೆ. ಇವರು ಹೊಸದಾಗಿ ಏನನ್ನು ಸಹ ಮಾಡಿಲ್ಲ. ಆದರೆ ಜನರ ಮುಂದೆ ಎಲ್ಲವನ್ನು ನಾವೇ ಮಾಡಿದ್ದೇವೆ ಎಂದು ಆವೇಶದಿಂದ ಮಾತನಾಡುವುದು, ಸವಾಲಿಗೆ ಕರೆಯುವುದು, ಬಿಜೆಪಿ ಎನ್ನುವುದು ಎಲ್ಲ ಸರಿ ಅಲ್ಲ. ಇದು ಸರ್ಕಾರಿ ಕಾರ್ಯಕ್ರಮ ಬಿಜೆಪಿ ಕಾರ್ಯಕ್ರಮದ ವೇದಿಕೆ ಅಲ್ಲ. ಇದು ಸಾರ್ವಜನಿಕ ವೇದಿಕೆ ಎಂದು ಒತ್ತಿ ಹೇಳಿದರು.
ಕಾರ್ಯಕ್ರಮ 10.30ಕ್ಕೆ ನಿಗದಿಯಾಗಿತ್ತು. ಹಾಗಾಗಿ ನಾನು ಸಹ 10.30ಕ್ಕೆ ಕಾರ್ಯಕ್ರಮಕ್ಕೆ ಬಂದಿದ್ದೇನೆ. ಆದರೆ ಅವರಿಗೆ ಅವರೇ ಪುತ್ಥಳಿ ಅನಾವರಣ ಮಾಡಿದರೆ ಹೇಗೆ? ಪುತ್ಥಳಿ ಅನಾವರಣ ಮಾಡುವುದಕ್ಕೆ ಹಿಂದೆ ಇದ್ದ ಸರ್ಕಾರದಲ್ಲಿ ಡಿ.ಕೆ. ಶಿವಕುಮಾರ್, ಕುಮಾರಸ್ವಾಮಿ, ಶಾಸಕರು ಎಲ್ಲರೂ ರಾಮನಗರ ಜಿಲ್ಲಾ ಪಂಚಾಯತಿಯಿಂದ ಅನುದಾನ ಪಡೆದು ಎಲ್ಲಾ ಗೊಂದಲಗಳನ್ನು ಬಗೆಹರಿಸಿಕೊಂಡು ಒಂದು ಸಮಿತಿಯನ್ನು ರಚನೆ ಮಾಡಿ ಜಿಲ್ಲಾ ಮಟ್ಟದಲ್ಲಿ ಒಂದು ಕಾರ್ಯಕ್ರಮವನ್ನು ರೂಪಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಕಾರ್ಯಕ್ರಮದಲ್ಲಿ ಸಿಎಂ ಎದುರೇ ಡಿಕೆ ಸುರೇಶ್, ಅಶ್ವಥ್ ನಾರಾಯಣ ನಡುವೆ ಜಟಾಪಟಿ
ವೇದಿಕೆ ಮೇಲೆ ಡಿ.ಕೆ ಸುರೇಶ್ ಅವರು ಗುಂಡಾ ವರ್ತನೆ ಮಾಡಿದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನನಗೆ ಗುಂಡಾ ವರ್ತನೆ ಮಾಡುವ ಅವಶ್ಯಕತೆ ಇಲ್ಲ. ಇದು ಸಾರ್ವಜನಿಕರ ಕಾರ್ಯಕ್ರಮ. ಸಾರ್ವಜನಿಕರ ಭಾವನೆಗಳನ್ನು ಅರ್ಥೈಸಿಕೊಂಡು ಕೆಲಸ ಮಾಡುತ್ತಿದ್ದೇನೆ ಅಷ್ಟೇ ಎಂದು ಹೇಳಿದರು.
DK Suresh, CM Basavaraja Bommai, Congress, BJP, Ramanagara
ಬೆಂಗಳೂರು: 15-18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ವಿತರಣೆ ಇಂದಿನಿಂದ ಆರಂಭವಾಗಿದೆ. ಇಂದು ಬಿಬಿಎಂಪಿ ಮಹಿಳೆಯರ ಪದವಿ ಮತ್ತು ಸ್ನಾತಕೋತ್ತರ ಕಾಲೇಜು ಮೂಡಲಪಾಳ್ಯದಲ್ಲಿ ಮಕ್ಕಳ ಲಸಿಕೆ ಅಭಿಯಾನಕ್ಕೆ ದೀಪ ಬೆಳಗಿಸುವ ಮೂಲಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ವಸತಿ ಸಚಿವ ವಿ.ಸೋಮಣ್ಣ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ , ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ಆಡಳಿತಾಧಿಕಾರಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ದೀಪಾ ಬೆಳಗಿಸಿ ಚಾಲನೆ ನೀಡಿದರು.
ರಾಜ್ಯ ಬಿಜೆಪಿ ಯುವ ಮುಖಂಡ ಡಾ.ಅರುಣ್ ಸೋಮಣ್ಣರವರು, ಗೋವಿಂದರಾಜನಗರ ಮಂಡಲ ಬಿಜೆಪಿ ಅಧ್ಯಕ್ಷರಾದ ವಿಶ್ವನಾಥಗೌಡ, ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ದಾಸೇಗೌಡ, ಕೆ.ಉಮೇಶ್ ಶೆಟ್ಟಿ, ಮೋಹನ್ ಕುಮಾರ್, ವಾಗೇಶ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಸಂಸದ ರೇವಂತ್ ರೆಡ್ಡಿಗೆ ಕೊರೊನಾ ಪಾಸಿಟಿವ್
ಇದೇ ವೇಳೆ ಕಾರ್ಯಕ್ರಮವನ್ನುದ್ದೇಶಿ ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು, ಲಸಿಕಾ ಕಾರ್ಯಕ್ರಮ ಹೊಸ ವರ್ಷದಲ್ಲಿ ಆಗುತ್ತಿದೆ. ಎಲ್ಲರಿಗೂ ಸುರಕ್ಷಿತ ಆರೋಗ್ಯ ಭಾಗ್ಯ ನಿಮ್ಮದಾಗಲಿ. ಕೊರೊನಾ ಯಾರೂ ನಿರೀಕ್ಷಿಸಿರಲಿಲ್ಲ. ದೇಶ ಕೊರೊನಾ ಎದುರಿಸಿದ ರೀತಿ ಹಾಗೂ ಲಸಿಕೆ ಅಭಿಯಾನ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಮೂರನೇ ಅಲೆ ಅಕ್ಕಪಕ್ಕದ ರಾಜ್ಯದಲ್ಲಿ ಬಹಳ ಹೆಚ್ಚಿದೆ. ರಾಜ್ಯದಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಗಡಿಯಲ್ಲಿ ಭದ್ರತೆ, ಆರ್‍ಟಿಪಿಸಿಆರ್ ಪರೀಕ್ಷೆ, ಕೋವಿಡ್ ಟೆಸ್ಟ್, ಲಸಿಕೆ ಹೆಚ್ಚು ಮಾಡಲಾಗುತ್ತಿದೆ. ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಸೋಂಕು ಹೆಚ್ಚಾಗಿದೆ. ಮಕ್ಕಳ ಆರೋಗ್ಯ ಬಹಳ ಮುಖ್ಯ. ಇಂದಿನಿಂದ ಪ್ರಥಮ ಲಸಿಕೆ ಡೋಸ್ ನೀಡಲಾಗುತ್ತದೆ. 2ನೇ ಡೋಸ್ ಕೂಡಾ ಅವಧಿ ಬಂದಾಗ ಆರಂಭಿಸಲಾಗುತ್ತದೆ ಮತ್ತು ರಾಜ್ಯದಲ್ಲಿ 43 ಲಕ್ಷ, ಬೆಂಗಳೂರಲ್ಲಿ ಒಟ್ಟು 4 ಲಕ್ಷ 41 ಸಾವಿರ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. ಇಂದು ಒಂದೇ ದಿನ 40 ಸಾವಿರ ಮಕ್ಕಳಿಗೆ ಲಸಿಕೆ ನೀಡಲು ಸಿದ್ಧತೆ ಮಾಡಲಾಗುತ್ತಿದೆ. ನಗರದ 255 ಶಾಲಾ ಕಾಲೇಜಿನಲ್ಲಿ ಲಸಿಕೆ ಕೊಡಲಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಓಮಿಕ್ರಾನ್ ವೇಗವಾಗಿ ಹರಡುತ್ತಿದ್ದು, ವೈರಲ್ ಫೀವರ್ನಂತಿದೆ: ಯೋಗಿ ಆದಿತ್ಯನಾಥ್
ನಂತರ ಮಾತನಾಡಿದ ವಿ.ಸೋಮಣ್ಣ ಅವರು, ಮೂರನೇ ಅಲೆ ಎಷ್ಟರ ಮಟ್ಟಿಗೆ ಗಂಭೀರ ಅನ್ನುವುದಕ್ಕಿಂತ ಎಲ್ಲರೂ ಲಸಿಕೆ ಪಡೆಯುವುದು ಮುಖ್ಯ. ಜನಜಂಗುಳಿ ತಪ್ಪಿಸಿ, ಮಾಸ್ಕ್ ಧರಿಸುವುದರಿಂದ ಈ ಸೋಂಕನ್ನು ತಡೆಗಟ್ಟಬಹುದು. ಈ ಕ್ಷೇತ್ರದ ಸರ್ಕಾರಿ ಶಾಲೆ ಮಕ್ಕಳಿಗೆ ಎಲ್ಲಾ ರೀತಿಯ ಸುರಕ್ಷತೆ ನೀಡಲಾಗುತ್ತಿದೆ ಎಂದರು.