Tag: ಸಿಎಂ ಬೊಮ್ಮಾಯಿ

  • ಬೆಳಗಾವಿಯಲ್ಲಿ MES ಪುಂಡರ ದಾಂಧಲೆ – ರಾತ್ರಿ ಏನೇನು ಮಾಡಿದ್ದಾರೆ?

    ಬೆಳಗಾವಿಯಲ್ಲಿ MES ಪುಂಡರ ದಾಂಧಲೆ – ರಾತ್ರಿ ಏನೇನು ಮಾಡಿದ್ದಾರೆ?

    – ಪೆಟ್ರೋಲ್ ಬಾಟಲಿ ಹಿಡಿದು ಬಸ್ಸಿಗೆ ಬೆಂಕಿ ಹಚ್ಚಲು ಯತ್ನ
    – ಸಂಗೊಳ್ಳಿ ರಾಯಣ್ಣನ ಪ್ರತಿಮೆ ವಿರೂಪ

    ಬೆಳಗಾವಿ: ಕಳೆದ ರಾತ್ರಿ ಎಂಇಎಸ್ ಕಾರ್ಯಕರ್ತರು ನಡೆಸಿದ್ದ ದಾಂಧಲೆ ಕುರಿತ ಇಂಚಿಂಚೂ ಮಾಹಿತಿಯ ವೀಡಿಯೋಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ

    ಶುಕ್ರವಾರ ರಾತ್ರಿ 10:0ರ ವೇಳೆಗೆ ಮುಖಕ್ಕೆ ಮಾಸ್ಕ್ ಹಾಗೂ ಟೋಪಿ ಹಾಕಿಕೊಂಡು ಬಂದ 6-7 ಜನರಿದ್ದ 5 ಎಂಇಎಸ್ ಗ್ಯಾಂಗ್ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕನ್ನಡದ ನಾಮಫಲಕಗಳನ್ನು ಕೆಳಕ್ಕುರುಳಿಸಿ ಕಾಲಿನಿಂದ ಹಾನಿಗೊಳಿಸಿ ಹೋಟೆಲ್‍ಗಳ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ. ಇದನ್ನೂ ಓದಿ: ಕರ್ನಾಟಕದ ಕಾರಿನ ಮೇಲೆ ಶಿವಸೇನೆ ಪುಂಡರಿಂದ ಕಲ್ಲು ತೂರಾಟ

    ದುಷ್ಕರ್ಮಿಗಳು ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಹಾನಿಪಡಿಸಿ ಖಡ್ಗ, ಗುರಾಣಿ ಬೇರೆ, ಬೇರೆ ಕಡೆ ಇಟ್ಟು ವಿಕೃತಿಗೊಳಿಸಿ ದುಷ್ಕೃತ್ಯವೆಸಗಿದ್ದಾರೆ. ಜೊತೆಗೆ ಅಧಿವೇಶನದ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ 20ಕ್ಕೂ ಹೆಚ್ಚು ವಾಹನಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ ಹಿಂಸಾಚಾರ ಕೃತ್ಯವೆಸಗಿದ್ದಾರೆ.

    MES

    ನಗರದ ವಿವಿಧೆಡೆ ಲಾಡ್ಜ್‌ಗಳ ಮುಂದೆ ನಿಲ್ಲಿಸಿದ್ದ ವಾಹನಗಳ ಮೇಲೂ ಕಲ್ಲು ತೂರಾಟ ನಡೆಸಲಾಗಿದ್ದು, ಆರ್‌ಟಿಓ ವೃತ್ತದ ಬಳಿಯ ನಿರ್ಮಾಣ ಹಂತದ ಪೊಲೀಸ್ ಕಾಂಪ್ಲೆಕ್ಸ್‌ನ ಪಾರ್ಕಿಂಗ್‍ನಲ್ಲಿ ವಾಹನಗಳನ್ನು ಜಖಂಗೊಳಿಸಿದ್ದಾರೆ. ಇದನ್ನೂ ಓದಿ: ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರೋಲ್ಲ, ಕನ್ನಡಿಗರ ಶಕ್ತಿ ಪ್ರದರ್ಶಿಸುವ ಕಾಲ ಬಂದಿದೆ: ಹೆಚ್‍ಡಿಕೆ

    ಬೆಳಗಾವಿ ಹೊರವಲಯದಲ್ಲಿ ಕೂಡ ಕೆಎಸ್ಆರ್‌ಟಿಸಿ ಬಸ್ ಮೇಲೆ ಕಿಡಿಕೇಡಿಗಳು ಕಲ್ಲು ತೂರಾಟ ನಡೆಸಿದ್ದು, ಈ ವೇಳೆ ಓರ್ವ ಕೈಯಲ್ಲಿ ಪೆಟ್ರೋಲ್ ಬಾಟಲಿ ಹಿಡಿದುಕೊಂಡು ಬಸ್‍ಗೆ ಬೆಂಕಿ ಹಚ್ಚಲು ಯತ್ನಿಸಿದ್ದಾನೆ.

    ಈ ಘಟನೆಯ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯ ಅವರು ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದು, ಬೆಳಗಾವಿಯಲ್ಲಿ ನಡೆದ ಪುಂಡಾಟಿಕೆ ಖಂಡನೀಯ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಕಠಿಣ ಕ್ರಮ ತೆಗೆದುಕೊಳ್ಳಲು ಗೃಹಸಚಿವರಿಗೆ ಸೂಚನೆ ನೀಡಲಾಗಿದ್ದು, ಹಲವರ ಬಂಧನವೂ ಆಗಿದೆ. ಕಲ್ಲು ತೂರಾಟ, ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವುದು ಕಾನೂನುಬಾಹಿರ. ಇಂತಹ ಘಟನೆ ನಡೆಯದಂತೆ ದೀರ್ಘಾವಧಿ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಿದ್ದೇನೆ. ಇದನ್ನೂಓದಿ:  ಬೆಳಗಾವಿಯಲ್ಲಿ MES ಪುಂಡರ ಅಟ್ಟಹಾಸ – ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ, ಬಸ್ ಮೇಲೆ ಕಲ್ಲು ತೂರಾಟ

    ರಾಷ್ಟ್ರಭಕ್ತರ ಪ್ರತಿಮೆಗೆ ಭಂಗ ತರುವುದು ಸರಿಯಲ್ಲ. ದೇಶಕ್ಕಾಗಿ ತ್ಯಾಗ ಮಾಡಿದವರನ್ನು ಗೌರವಿಸಬೇಕು. ನಾಡಿಗೆ ಹೋರಾಡಿದವರ, ತ್ಯಾಗ ಮಾಡಿದವರ ಗೌರವ ಉಳಿಸಬೇಕು. ನಾಡಿನಲ್ಲಿ ಕ್ಷೋಭೆ ಉಂಟುಮಾಡುವುದು ಸರಿಯಲ್ಲ. ಕೆಲವೇ ಕೆಲವು ಪುಂಡರು ಇಂತಹ ದುಷ್ಕೃತ್ಯ ಮಾಡುತ್ತಿದ್ದು, ಅವರನ್ನು ಸದೆಬಡಿಯುತ್ತೇವೆ”

  • MES ಪುಂಡಾಟಿಕೆಯನ್ನು ಖಂಡಿಸಿದ ಸಿಎಂ – 27 ಮಂದಿ ಅರೆಸ್ಟ್

    MES ಪುಂಡಾಟಿಕೆಯನ್ನು ಖಂಡಿಸಿದ ಸಿಎಂ – 27 ಮಂದಿ ಅರೆಸ್ಟ್

    ಹುಬ್ಬಳ್ಳಿ: ಎಂಇಎಸ್ ಪುಂಡರ ಪುಂಡಾಟಿಕೆ ಖಂಡಿಸುವೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

    ಬೆಳಗಾವಿಯಲ್ಲಿ ತಡರಾತ್ರಿ ಪುಂಡರು ಹಿಂಸಾಚಾರ ಕೃತ್ಯವೆಸಗಿದ್ದು, ಸಂಗೊಳ್ಳಿ ರಾಯಣ್ಣ ಪುತ್ಥಾಳಿಗೆ ಹಾನಿಗೊಳಿಸಿ, ಬಸ್, ಹಾಗೂ ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಇದೀಗ ಬೆಳಗಾವಿ ಪೊಲೀಸರು 27 ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ:  ಬೆಳಗಾವಿಯಲ್ಲಿ MES ಪುಂಡರ ಅಟ್ಟಹಾಸ – ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ, ಬಸ್ ಮೇಲೆ ಕಲ್ಲು ತೂರಾಟ

    ಈ ಕುರಿತಂತೆ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬೊಮ್ಮಾಯಿ ಅವರು, ಎಂಇಎಸ್ ಪುಂಡಾಟಿಕೆಯನ್ನು ಖಂಡಿಸುತ್ತೇನೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ಸಾರ್ವಜನಿಕರ ಆಸ್ತಿ ಹಾನಿ ಮಾಡುವುದು ಕಾನೂನುಬಾಹಿರ. ಪುಂಡಾಟಿಕೆ ಹಿಂದೆ ಹಲವು ಕಾರಣಗಳಿವೆ. ಈ ವಿಚಾರವಾಗಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರೋಲ್ಲ, ಕನ್ನಡಿಗರ ಶಕ್ತಿ ಪ್ರದರ್ಶಿಸುವ ಕಾಲ ಬಂದಿದೆ: ಹೆಚ್‍ಡಿಕೆ

    ರಾಷ್ಟ್ರಭಕ್ತರ ಪ್ರತಿಮೆಗಳನ್ನ ಗೌರವಿಸಬೇಕು. ಅವರಿಗೆ ಅಪಮಾನ ಮಾಡಬಾರದು. ಸಮಾಜದಲ್ಲಿ ಕ್ಷೋಭೆ ಉಂಟು ಮಾಡುವುದು ಸರಿಯಲ್ಲ. ಪೊಲೀಸರಿಗೆ ದೀರ್ಘಾವಧಿ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದೇನೆ. ಇದು ಪುರ್ನಾವರ್ತನೆ ಆಗದಂತೆ ಸೂಚಿಸಿದ್ದೇನೆ ಎಂದು ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

  • ಭಾರತ ಶಸ್ತ್ರಾಸ್ತ್ರ ತಯಾರಿಕೆಯಲ್ಲಿ ಆತ್ಮನಿರ್ಭರ್ ಆಗಬೇಕೆಂಬ ಹಂಬಲ ಬಿಪಿನ್ ಅವರಿಗಿತ್ತು: ಬೊಮ್ಮಾಯಿ

    ಭಾರತ ಶಸ್ತ್ರಾಸ್ತ್ರ ತಯಾರಿಕೆಯಲ್ಲಿ ಆತ್ಮನಿರ್ಭರ್ ಆಗಬೇಕೆಂಬ ಹಂಬಲ ಬಿಪಿನ್ ಅವರಿಗಿತ್ತು: ಬೊಮ್ಮಾಯಿ

    ಬೆಂಗಳೂರು: ಭಾರತ ಶಸ್ತ್ರಾಸ್ತ್ರ ತಯಾರಿಕೆಯಲ್ಲಿ ಆತ್ಮನಿರ್ಭರ್ ಆಗಬೇಕೆಂಬ ಹಂಬಲವಿದ್ದ ಬಿಪಿನ್ ರಾವತ್ ಅವರು ಸ್ಥಳೀಯವಾಗಿ ರಕ್ಷಣಾ ಉಪಕರಣಗಳ ತಯಾರಿಕೆಯನ್ನು ಪ್ರಾರಂಭಿಸಿದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

    ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಆರ್‌ಡಿಓ ಹಾಗೂ ಹಲವಾರು ಸಂಸ್ಥೆಗಳು ಉತ್ತಮವಾಗಿ ಕಾರ್ಯನಿರ್ವಹಿಸುವಲ್ಲಿ ಅವರ ಪ್ರೇರಣೆಯೂ ಇದೆ. ಹೊಸ ಆವಿಷ್ಕಾರ, ಉಪಕರಣಗಳನ್ನು ತಯಾರು ಮಾಡಿ ಸೇನೆಗಳಿಗೆ ಸರಬರಾಜು ಮಾಡುವುದಷ್ಟೇ ಅಲ್ಲ, ಖಾಸಗಿ ವಲಯದಲ್ಲಿಯೂ ಉತ್ಪಾದನೆ ಮಾಡಲು ಜ್ಞಾನವನ್ನು ವರ್ಗಾಯಿಸಿ ಬಹಳ ಪ್ರೋತ್ಸಾಹ ನೀಡಿದ್ದರು ಎಂದರು. ಇದನ್ನೂ ಓದಿ: 200 ಕೋಟಿ ರೂ. ವಂಚನೆ ಪ್ರಕರಣ – ಇಡಿ ಮುಂದೆ ವಿಚಾರಣೆಗೆ ಹಾಜರಾದ ಜಾಕ್ವೆಲಿನ್

    ಯುದ್ಧಭೂಮಿಯಲ್ಲಿ ಹೊಸ ವಿಧಾನಗಳ ಅನುಷ್ಠಾನ:
    ಮೂರು ಪಡೆಯ ಮುಖ್ಯಸ್ಥರಾದ ಬಿಪಿನ್ ರಾವತ್ ಅವರ ದುರ್ಮರಣದಿಂದ ಇಡೀ ದೇಶವೇ ದಿಗ್ಭ್ರಮೆಗೆ ಒಳಗಾಗಿದೆ. ಘಟನೆ ಹೇಗಾಯ್ತು ಎನ್ನುವುದು ಮುಖ್ಯವಾಗಿರುವುದರಿಂದ ವಾಯುಪಡೆ ತನಿಖೆಯನ್ನು ಕೈಗೊಂಡಿದೆ. ರಾವತ್ ಅವರು ಸೈನ್ಯವನ್ನು ಮುಂಚೂಣಿಯಲ್ಲಿ ನಿಂತು ಮುನ್ನಡೆಸಿದರು. ಯುದ್ಧ ಭೂಮಿಯಲ್ಲಿ ಹೊಸ ವಿಧಾನಗಳನ್ನು ಕಂಡುಕೊಂಡು ಅನುಷ್ಠಾನವನ್ನೂ ಮಾಡಿದರು ಎಂದು ಹೇಳಿದರು.

    ದಿಟ್ಟ ನಿಲುವು:
    ಭಾರತದ ಸುರಕ್ಷತೆಯ ಬಗ್ಗೆ ಹಿಂದೆಂದೂ ತೆಗೆದುಕೊಂಡಿರದ ಹಲವಾರು ದಿಟ್ಟ ನಿಲುವನ್ನು ಪ್ರದರ್ಶಿಸಿದ್ದ ಅವರು ಚೀನಾ, ಭಾರತದ ಗಡಿಯಲ್ಲಿ ನಡೆದ ಚಕಮಕಿಯಲ್ಲಿ ದೇಶವನ್ನು ಬಹಳ ಗಟ್ಟಿಯಾಗಿ ನಿಲ್ಲಿಸಿ, ಚೀನಾವನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾದರು. ಅವರ ನಾಯಕತ್ವ ಮುಂದಿನ ದಿನಗಳಲ್ಲಿ ನಮಗೆ ಬಹಳ ಅವಶ್ಯಕವಾಗಿತ್ತು ಎಂದರು. ಇದನ್ನೂ ಓದಿ: ಕೊನೆ ಕ್ಷಣದಲ್ಲಿ ಬಿಪಿನ್‌ ರಾವತ್‌ ಅವ್ರು ಕುಡಿಯಲು ನೀರು ಕೇಳಿದ್ದರು- ಪ್ರತ್ಯಕ್ಷದರ್ಶಿ ಮಾತು

    ಜೀವನ ಚರಿತ್ರೆ ಪ್ರೇರಣಾದಾಯಕ:
    ಅವರ ಸೇವೆಯನ್ನು ಗುರುತಿಸಿಯೇ ನಮ್ಮ ಪ್ರಧಾನ ಮಂತ್ರಿಗಳು ಅವರನ್ನು ಸೇನಾ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಿದ್ದರು. ಇಡೀ ಭಾರತ ಒಬ್ಬ ನಾಯಕನನ್ನು ಕಳೆದುಕೊಂಡಿದೆ. ನಮ್ಮೆಲ್ಲರಿಗೂ ಅವರ ಜೀವನ ಚರಿತ್ರೆ ಪ್ರೇರಣಾದಾಯಕವಾಗಿದೆ. ಅವರ ತ್ಯಾಗ ಬಲಿದಾನಗಳ ಬಗ್ಗೆ ಮಕ್ಕಳಿಗೆ ತಿಳಿಸುವಂತಾಗಬೇಕು. ಮುಂದಿನ ಪೀಳಿಗೆ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಅವರ ಕಾರ್ಯಕ್ರಮಗಳನ್ನು ಮುಂದುವರೆಸಿ ನಿಜವಾದ ಶ್ರದ್ದಾಂಜಲಿಯನ್ನು ಸಲ್ಲಿಸಬೇಕು ಎಂದು ಹೇಳಿದರು.

    PM MODI

    ಕರ್ನಾಟಕದೊಂದಿಗೆ ಸಂಬಂಧ:
    ಕರ್ನಾಟಕದೊಂದಿಗೆ ಅವರು ಅವಿನಾಭಾವ ಸಂಬಂಧ ಹೊಂದಿದ್ದರು. ಕೊಡಗಿನೊಂದಿಗೆ ವಿಶೇಷ ಸಂಬಂಧ ಅವರಿಗಿತ್ತು. ಜನರಲ್ ಕಾರಿಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರ ಬಗ್ಗೆ ಅಪಾರ ಗೌರವವಿತ್ತು. ಅವರ ಶೌರ್ಯವನ್ನು ಪದೇ, ಪದೇ ಹೇಳುತ್ತಿದ್ದರು. ಇಲ್ಲಿನ ಜನರು ಹಾಗೂ ಸೈನಿಕರ ಬಗ್ಗೆ ಪ್ರೀತಿಯನ್ನು ಹೊಂದಿದ್ದರು ಎಂದು ಸ್ಮರಿಸಿದರು. ಇದನ್ನೂ ಓದಿ: ಬ್ಯಾಂಕ್‍ಗಳಿಗೆ 4 ದಿನ ರಜೆ- ತುರ್ತು ವಹಿವಾಟುಗಳನ್ನು ಇಂದೇ ಮುಗಿಸಿಕೊಳ್ಳಿ

  • ಸಿದ್ದರಾಮಯ್ಯ ಮೇಲೆ ಗೌರವವಿತ್ತು, ಆದ್ರೆ ಇತ್ತೀಚಿನ ಹೇಳಿಕೆ ನಿರಾಸೆ ತಂದಿದೆ: ಬೊಮ್ಮಾಯಿ

    ಸಿದ್ದರಾಮಯ್ಯ ಮೇಲೆ ಗೌರವವಿತ್ತು, ಆದ್ರೆ ಇತ್ತೀಚಿನ ಹೇಳಿಕೆ ನಿರಾಸೆ ತಂದಿದೆ: ಬೊಮ್ಮಾಯಿ

    ಹುಬ್ಬಳ್ಳಿ: ಬೊಮ್ಮಾಯಿವರು ಸುಳ್ಳು ಹೇಳುತ್ತಿದ್ದಾರೆ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಆರೋಪಕ್ಕೆ, ಸಿದ್ದರಾಮಯ್ಯ ಅವರ ಬಗ್ಗೆ ನನಗೆ ಬಹಳ ಗೌರವವಿತ್ತು. ಆದರೆ ಇತ್ತೀಚಿಗೆ ಅವರ ಹೇಳಿಕೆಗಳು ನನಗೆ ಬಹಳ ನಿರಾಸೆ ತಂದಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಅಸಮಾಧಾನ ವ್ಯಕ್ತಪಡಿಸಿದರು.

    ನಗರದ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಸಭೆ ಇದೆ. ಪಕ್ಷದ ಶಾಸಕರು ಮುಖಂಡರ ಸಭೆ ಕರೆದಿದ್ದೇವೆ. ನಮ್ಮ ಅಭ್ಯರ್ಥಿ ಗೆಲ್ಲೋಕೆ ಏನೆಲ್ಲಾ ಸೂಚನೆ ನೀಡಬೇಕು ಅದನ್ನು ಮಾಡುತ್ತೇನೆ. ನಮ್ಮ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಗೆಲುವು ನಿಶ್ಚಿತ. ಲಖನ್ ಜಾರಕಿಹೊಳಿ, ಕಾಂಗ್ರೆಸ್‍ನ ಬಂಡಾಯ ಅಭ್ಯರ್ಥಿ. ನಮಗೇನು ಸಂಬಂಧವಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಸಿಎಂ ನಿಮಗೆ ನಾವು ಸದಾ ಆಭಾರಿ: ಅಶ್ವಿನಿ ಪುನೀತ್ ರಾಜ್‍ಕುಮಾರ್

    ರಾಜ್ಯದಲ್ಲಿ ಹೆಚ್ಚಾಗುತ್ತಿರು ಕೊರೊನಾ ವೈರಸ್ ಪ್ರಕರಣ ಕುರಿತಂತೆ ಮಾತನಾಡಿದ ಅವರು, ಎಲ್ಲಾ ಕೊರೊನಾ ಕೇಸ್‍ಗಳ ಜಿನೋಮ್ ಸ್ವಿಕ್ವೇನ್ಸ್ ಟೆಸ್ಟ್ ಮಾಡುತ್ತಿದ್ದೇವೆ. ಆ ಲ್ಯಾಬ್ ಗಳನ್ನು ಹೆಚ್ಚಿಗೆ ಮಾಡುವ ಚಿಂತನೆ ಮಾಡಿದ್ದೇವೆ. ಪರಿಣತರ ಜೊತೆ ಚರ್ಚಿಸಿ ಈಗಾಗಲೇ ಆರೋಗ್ಯ ಇಲಾಖೆ ಕಾರ್ಯದರ್ಶಿಗೆ ಸೂಚನೆ ನೀಡಿದ್ದೇವೆ. ಏನೆಲ್ಲಾ ಅದಕ್ಕೆ ತಯಾರಿಬೇಕು ಮಾಡಿಕೊಳ್ಳುವಂತೆ ಸೂಚನೆ ತಿಳಿಸಿದ್ದೇನೆ. ಆದಷ್ಟು ಬೇಗ ವರದಿ ಬರುವಂತೆ ಮಾಡುತ್ತೇವೆ ಎಂದರು.

    ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ರೇಣುಕಾಚಾರ್ಯ ಹೇಳಿಕೆಗೆ ವಿಚಾರಕ್ಕೆ ಖಾರವಾಗಿ ಪ್ರತಿಕ್ರಿಯಿಸಿ ಎಲ್ಲರ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ ಎಂದು ರೇಣುಕಾಚಾರ್ಯಗೆ ಟಾಂಗ್ ನೀಡಿದರು. ಇದನ್ನೂ ಓದಿ: ಫೋಟೋಶೂಟ್‌ಗಾಗಿ ಬಂದಿದ್ದ ಮಹಿಳೆ ಮೇಲೆ ಲಾಡ್ಜ್‌ನಲ್ಲಿ ಗ್ಯಾಂಗ್‌ರೇಪ್

  • ಹೊಸ ಕೋವಿಡ್ ತಳಿಯಿಂದ ತಲ್ಲಣ – ಸಂಜೆ ಸಿಎಂ ಬೊಮ್ಮಾಯಿ ತುರ್ತು ಸಭೆ

    ಬೆಂಗಳೂರು: ಕೋವಿಡ್ ನಿಯಂತ್ರಣ, ಲಸಿಕೆ ವಿಚಾರ ಹಾಗೂ ಹೊಸ ತಳಿಯ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ಸಂಜೆ ಸಭೆ ನಡೆಸಲಿದ್ದಾರೆ.

    ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ ವೈರಸ್‍ನ ಹೊಸ ರೂಪಾಂತರಿ ತಳಿ ನಿದ್ದೆಗೆಡಿಸಿದೆ. ಹೊಸ ರೂಪಾಂತರ ತಳಿಗೆ ‘ಒಮಿಕ್ರಾನ್ ಅಥವಾ ಬಿ.1.1.529’ ಹೆಸರಿಟ್ಟಿರುವ ವಿಶ್ವ ಆರೋಗ್ಯ ಸಂಸ್ಥೆ, ಈ ರೂಪಾಂತರಿ ತಳಿ ಕಳವಳಕಾರಿ ಎಂದು ಘೋಷಿಸಿದೆ.

    ರಾಜ್ಯದಲ್ಲಿ ಮತ್ತೆ ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ಸರ್ಕಾರಿ ನಿವಾಸದಲ್ಲಿ ಸಂಜೆ 4 ಗಂಟೆಗೆ ಅಭಿವೃದ್ಧಿ ಆಯುಕ್ತರು, ಬಿಬಿಎಂಪಿ ಮುಖ್ಯ ಆಯುಕ್ತರು, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ, ವಿಪತ್ತು ನಿರ್ವಹಣಾ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಜೊತೆ ಸಭೆ ನಡೆಸಲಿದ್ದಾರೆ. ಜೊತೆಗೆ ಧಾರವಾಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಮೈಸೂರು, ಬೆಂಗಳೂರು ನಗರ ಡಿಸಿಗಳು ವೀಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಳ್ಳಲು ಸೂಚನೆ ನೀಡಿದ್ದಾರೆ ಮತ್ತು ತಾಂತ್ರಿಕ ಸಲಹಾ ಸಮಿತಿ ಸದಸ್ಯರಿಗೂ ಕೂಡಾ ಸಭೆಗೆ ಆಹ್ವಾನಿಸಿದ್ದಾರೆ. ದನ್ನೂ ಓದಿ: ವಿಶ್ವಕ್ಕೆ ಆತಂಕ ತಂದಿಟ್ಟ ರೂಪಾಂತರಿ ತಳಿ – ಹೈ ಅಲರ್ಟ್‌ ಘೋಷಣೆ, 87 ಮಂದಿಗೆ ಸೋಂಕು

    ವಿಶ್ವದ ನಾಲ್ಕು ರಾಷ್ಟ್ರಗಳಲ್ಲಿ ಓಮಿಕ್ರೋನ್ ತನ್ನ ಆರ್ಭಟ ಶುರು ಮಾಡಿರುವ ಹಿನ್ನೆಲೆ ರಾಜ್ಯದಲ್ಲಿ ಕಟ್ಟೆಚ್ಚರಿಕೆ ವಹಿಸಲಾಗಿದೆ. ದಕ್ಷಿಣ ಆಫ್ರಿಕಾ, ಬೊಟ್ಸ್ ವಾನಾ, ಸಿಂಗಾಪುರ ದೇಶಗಳಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರನ್ನು ಏರ್ ಪೋರ್ಟ್‌ನಲ್ಲಿ ಕಠಿಣ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಕೊರೊನಾ ನೆಗೆಟಿವ್ ಇದ್ದರೂ ಕೂಡ ಒಂದು ವಾರ ಕ್ವಾರಂಟೈನ್ ಗೊಳಿಸಲಾಗುತ್ತಿದೆ ಹಾಗೂ ಪ್ರಯಾಣಿಕರ ಟ್ರಾವೆಲ್ ಹಿಸ್ಟರಿಯ ಮಾಹಿತಿಯನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಪಡೆಯಲಿದ್ದಾರೆ. ದನ್ನೂ ಓದಿ: ಬೆಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಕೊರೊನಾ ಬ್ಲಾಸ್ಟ್ – 12 ವಿದ್ಯಾರ್ಥಿಗಳಿಗೆ ಪಾಸಿಟಿವ್ 

    ಸೋಂಕು ಹಬ್ಬಿದ ರಾಷ್ಟ್ರಗಳಿಂದ ಬಂದ ಪ್ರಯಾಣಿಕರಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡರೆ, ಅವರ ಸ್ಯಾಂಪಲ್ಸ್ ಗಳನ್ನು ಜಿನೋಮಿಕ್ ಸಿಕ್ವೆನ್ಸಿಂಗ್ ಪರೀಕ್ಷೆಗೆ ಕಳುಹಿಸಲಾಗುತ್ತದೆ.

  • ಬಿಟ್ ಕಾಯಿನ್ ದಂಧೆಯಲ್ಲಿ ಪ್ರಭಾವಿಗಳಿದ್ದಾರೆ: ಸಿದ್ದರಾಮಯ್ಯ

    ಬಿಟ್ ಕಾಯಿನ್ ದಂಧೆಯಲ್ಲಿ ಪ್ರಭಾವಿಗಳಿದ್ದಾರೆ: ಸಿದ್ದರಾಮಯ್ಯ

    ಹುಬ್ಬಳ್ಳಿ: ಬಿಟ್ ಕಾಯಿನ್ ದಂಧೆಯಲ್ಲಿ ಪ್ರಭಾಗಳು ಇದ್ದಾರೆ. ಅದರ ಬಗ್ಗೆ ನಮಗೆ ಮಾಹಿತಿ ಇದೆ. ಆದರೆ ಕೇಂದ್ರ ತನಿಖಾ ಸಂಸ್ಥೆಯವರು ಅದನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದ್ದಾರೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

    ಹುಬ್ಬಳ್ಳಿಯಲ್ಲಿಂದು ಖಾಸಗಿ ಸಮಾರಂಭದಲ್ಲಿ ಭಾಗಿಯಾಗಿದ್ದ ಅವರು ಮಾಧ್ಯಮಗಳ ಜೊತೆ ಮಾತನಾಡಿ, ಬಿಟ್ ಕಾಯಿನ್ ದಂಧೆಯಲ್ಲಿ ಯಾರಿಗೂ ರಕ್ಷಣೆ ಕೊಡಬಾರದು. ಪ್ರಕರಣವನ್ನು ಮುಚ್ಚಿ ಹಾಕಬಾರದು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಅದೂ ಯಾರೇ ಇದ್ದರೂ ಶಿಕ್ಷೆ ಆಗಬೇಕೆಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯವರಿಗೆ ಹಸುಗಳ ಮೇಲೆ ಪ್ರೀತಿ ಇದ್ದರೆ ಗೋಮಾಂಸ ರಫ್ತು ನಿಲ್ಲಿಸಲಿ: ಎಚ್.ಸಿ.ಮಹದೇವಪ್ಪ

    ಬಿಟ್ ಕಾಯಿನ್ ದಂಧೆಯ ಬಗ್ಗೆ ಐಟಿ ಹಾಗೂ ಸಿಬಿಐಗೆ ರೆಫರ್ ಮಾಡಿದ್ದೇವೆ ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆಗೆ, ಇಷ್ಟು ದಿನ ಅವರು ಏನೂ ಮಾಡ್ತಿದ್ರು, ಮತ್ಯಾಕೆ ಮುಚ್ಚಿಟ್ಟರು. ಈಡಿಗೆ ಪ್ರಕರಣ ವರ್ಗಾಯಿಸಿದ್ದಾರೆ ಅಂದರೆ ಎನೂ ಆಗಿರಬೇಕಲ್ವಾ, ಇಲ್ಲಿಯವರೆಗೂ ಯಾಕೆ ರಕ್ಷಣೆ ನೀಡಿದರೂ. ಆ ಬಗ್ಗೆ ಇನ್ನಷ್ಟು ಮಾಹಿತಿ ಸಂಗ್ರಹಿಸುತ್ತೇವೆ ಎಂದು ತಿರುಗೇಟು ನೀಡಿದ್ದಾರೆ.

    basavaraj bommai

    ಇದೇ ವೇಳೆ ಉಪಚುನಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆಯಲ್ಲಿ ನಾವೂ ಗೆಲುವು ಸಾಧಿಸುತ್ತೇವೆ. ಹಾನಗಲ್ ಕ್ಷೇತ್ರದಲ್ಲಿ ನೂರಕ್ಕೆ ನೂರರಷ್ಟು ಗೆಲವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಡಿಕೆ ಶಿವಕುಮಾರ್ ಆಪ್ತನ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ

    ಬುಧವಾರ ಹಾನಗಲ್ ಪ್ರಚಾರದ ವೇಳೆ ಬಸವರಾಜ ಬೊಮ್ಮಾಯಿ ಅವರು ಹಾಕಿದ ಸವಾಲಿಗೆ ಪ್ರತಿಕ್ರಿಯಿಸಿದ ಅವರು, ಆ ಯಪ್ಪನಿಗೆ ಬಾ ಅಂತ ಹೇಳಿದ್ದೇನೆ. ನಾನು ಹೇಳಿ ಎಷ್ಟು ದಿನಾ ಆಯ್ತು. ಅವರ ಕ್ಷೇತ್ರ ಏನು ನೋಡೋದು. ಇವರು ಅಧಿಕಾರಕ್ಕೆ ಬಂದ ಮೇಲೆ ಒಂದೂ ರಸ್ತೆಯಾದರೂ ಹೊಸದಾಗಿ ಮಾಡಿದ್ದಾರಾ ಎಂದು ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ಬಲಿಪಾಡ್ಯಮಿ ದಿನ ದೇವಾಲಯಗಳಲ್ಲಿ ಗೋಪೂಜೆ ಕಡ್ಡಾಯ: ಧಾರ್ಮಿಕ ದತ್ತಿ ಇಲಾಖೆ

    ಧಾರವಾಡದಲ್ಲಿ ಡಿಕೆ ಶಿವಕುಮಾರ ಆಪ್ತ ಯುಬಿ ಶೆಟ್ಟಿ ಸಹೋದರರ ಮೇಲೆ ಐಟಿ ದಾಳಿ ವಿಚಾರದ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಸಿದ್ದರಾಮಯ್ಯ ಅವರು, ನನಗೆ ಗೊತ್ತಿಲ್ಲಪ್ಪ ಅಂತ ಹೇಳಿ ಪ್ರತಿಕ್ರಿಯೆ ನೀಡದೇ ತೆರಳಿದರು.

  • ಸಿದ್ದರಾಮಯ್ಯ ತೀರ್ಮಾನ, ಹೇಳಿಕೆಗಳು ಅವರಿಗೆ ಶೋಭೆಯಲ್ಲ: ವಿ. ಸೋಮಣ್ಣ

    ಸಿದ್ದರಾಮಯ್ಯ ತೀರ್ಮಾನ, ಹೇಳಿಕೆಗಳು ಅವರಿಗೆ ಶೋಭೆಯಲ್ಲ: ವಿ. ಸೋಮಣ್ಣ

    ವಿಜಯಪುರ: ಇತ್ತೀಚೆಗೆ ಸಿದ್ದರಾಮಯ್ಯ ತೀರ್ಮಾನಗಳು, ಹೇಳಿಕೆಗಳು ಅವರಿಗೆ ಶೋಭೆ ತರಲ್ಲ. ಇವರು ಹಳೆ ಸಿದ್ದರಾಮಯ್ಯನೋ, ಹೊಸ ಸಿದ್ದರಾಮಯ್ಯನೋ ತಿಳಿಯುತ್ತಿಲ್ಲ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

    ಜನರಿಗೆ ಒಂದು ಮನೆಯನ್ನು ಸರಿಯಾಗಿ ಹಂಚಿಲ್ಲ ಎಂಬ ಸಿದ್ದರಾಮಯ್ಯ ಅವರ ಆರೋಪಕ್ಕೆ ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯವರಿಗೆ ಅಂಕಿ ಅಂಶಗಳನ್ನು ಸ್ವತಃ ನಾನೇ ಕಳುಹಿಸಿದ್ದೇನೆ. ಅವರ ಮತಕ್ಷೇತ್ರ ಬಾದಾಮಿ ಬಗ್ಗೆಯೂ ಕಳುಹಿಸಿದ್ದೇನೆ. ಈ ಹಿಂದೆ ರಾಜ್ಯದಲ್ಲಿ ಅವರು ಇದ್ದಂತಹ ಸಂದರ್ಭದಲ್ಲಿ 22 ಲಕ್ಷ ಮನೆಗಳನ್ನು ಚುನಾವಣೆ ಮುಂದಿಟ್ಟುಕೊಂಡು 35 ಸಾವಿರ ಕೋಟಿ ಬಜೆಟ್‍ನನ್ನು ಮಾರ್ಚ್‍ನಲ್ಲಿ ಮಾಡಿ, ಏಪ್ರಿಲ್‍ನಲ್ಲಿ ಚುನಾವಣೆ ಬಂದರು. ಬಳಿಕ ೨ ಸಾವಿರ ಕೋಟಿ ಇಟ್ಟರು. ಆದಾದ ನಂತರ ಬಂದ ಸಮ್ಮಿಶ್ರ ಸರ್ಕಾರದಲ್ಲಿ ಕುಮಾರಸ್ವಾಮಿ  ಇದೆಲ್ಲಾವನ್ನು ನೋಡಿ ಬೇಸರಗೊಂಡು ಅವರ ಇತಿ ಮಿತಿಯಲ್ಲಿ ಒಂದು ಸಾವಿರ ಚಿಲ್ಲರೆ ಕೊಟ್ಟು ಕೈತೊಳೆದುಕೊಂಡರು ಎಂದು ಹೇಳಿದ್ದಾರೆ. ಇದನ್ನೂ ಓದಿ: ಪರ್ವತದ ನೀರು ಕುಡಿದು, ದೇವಾಲಯದ ಪ್ರಸಾದ ಸೇವಿಸಿ ಬದುಕುಳಿದೆವು: ಉತ್ತರಾಖಂಡ್ ಪ್ರವಾಹ ಭೀಕರತೆ ಬಿಚ್ಚಿಟ್ಟ ಕನ್ನಡಿಗರು

    ನಮ್ಮ ಸರ್ಕಾರ ಬಂದ ಮೇಲೆ ಇದೆಲ್ಲವನ್ನು ಪರಿಶೀಲಿಸಿ 6 ಲಕ್ಷ 40 ಸಾವಿರ ಮನೆಗಳಿಗೆ ನಾಲ್ಕು ಸಾವಿರ ಕೋಟಿಗೂ ಅಧಿಕ ಹಣವನ್ನು ಬಿಡುಗಡೆ ಮಾಡಿದ್ದೇವೆ. ಆದರೆ ಸಿದ್ದರಾಮಯ್ಯ ಅವರು ನನ್ನ ಕ್ಷೇತ್ರಕ್ಕೆ ಒಂದು ರೂಪಾಯಿ ಕೊಟ್ಟಿಲ್ಲ ಎಂದು ಹೇಳುತ್ತಾರೆ. ನಾನು ಎಷ್ಟು ನೀಡಿದ್ದೇವೆ ಎಂಬ ಬಗ್ಗೆ ಮಾಹಿತಿ ಇದೆ. ಸಿದ್ದರಾಮಯ್ಯ ಅವರಿಗೆ ಮಾಹಿತಿ ಕೊರತೆ ಇದೆಯೋ ಇಲ್ವೋ ಗೊತ್ತಿಲ್ಲ. ಆದರೆ ಯಾರೋ ಹೇಳಿದರು ಅಂತಾ ಈ ರೀತಿ ಹೇಳುತ್ತಿದ್ದಾರೆ. ಇದು ಒಂದು ಹಿಟ್ ಆ್ಯಂಡ್ ರನ್ ಇದ್ದ ಹಾಗೆ, ಇದು ಆಗ ಬಾರದು ಎಂದಿದ್ದಾರೆ. ಇದನ್ನೂ ಓದಿ: ಮತಾಂತರ ಯತ್ನ ಪ್ರಕರಣ – ಹಿಂದೂ ಪರ ಸಂಘಟನೆ ಕಾರ್ಯಕರ್ತರ ವಿರುದ್ಧ FIR ದಾಖಲು

    ಇತ್ತೀಚೆಗೆ ಸಿದ್ದರಾಮಯ್ಯ ತೀರ್ಮಾನಗಳು, ಹೇಳಿಕೆಗಳು ಅವರಿಗೆ ಶೋಭೆ ತರಲ್ಲ. ಇವರು ಹಳೆ ಸಿದ್ದರಾಮಯ್ಯನೋ, ಹೊಸ ಸಿದ್ದರಾಮಯ್ಯನೋ ತಿಳಿಯುತ್ತಿಲ್ಲ. ಸಿಎಂ ಬಗ್ಗೆ ಏನೇನೋ ಮಾತನಾಡುವುದು ಸರಿಯಲ್ಲ. ಇವರ ಬಗ್ಗೆ ಮಾತನಾಡಲೂ ಹೋದರೆ ಸಾಕಷ್ಟಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

  • ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಕನ್ನಡ ಮಾಯ

    ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಕನ್ನಡ ಮಾಯ

    ಬೆಂಗಳೂರು: ನಗರದ ರಾಜೀವ್ ಗಾಂಧಿ ಎದೆರೋಗ ಸಂಸ್ಥೆಯ ಮಾಡ್ಯೂಲರ್ ಆಸ್ಪತ್ರೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಉದ್ಘಾಟನೆ ಮಾಡಿದರು. ಆರೋಗ್ಯ ಇಲಾಖೆಯ ಈ ಅಧಿಕೃತ ಕಾರ್ಯಕ್ರಮದಲ್ಲಿ ಕನ್ನಡವನ್ನು ಕಡೆಗಣಿಸಲಾಗಿದೆ.

    bommai

    ರಾಜೀವ್ ಗಾಂಧಿ ಆರೋಗ್ಯ ಸಂಸ್ಥೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮಾಡ್ಯೂಲರ್ ಆಸ್ಪತ್ರೆ ಉದ್ಘಾಟನಾ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಮನ್‌ಸುಖ್ ಮಾಂಡವೀಯ ಆಗಮಿಸಿದ್ದರು. ಈ ವೇಳೆ ಕೋವಿಡ್ ಆಸ್ಪತ್ರೆ ಅಡಿಗಲ್ಲಿನಲ್ಲಿ ಕನ್ನಡದ ಯಾವುದೇ ಬರಹಗಳು ಕಂಡಿಲ್ಲ. ಅಡಿಗಲ್ಲು ಪೂರ್ತಿ ಆಂಗ್ಲ ಪದಗಳಲ್ಲಿ ಬರೆಯಲಾಗಿದೆ. ಅಲ್ಲದೇ ಈ ಹಿಂದೆ ಮೆಟ್ರೋ ಉದ್ಘಾಟನಾ ಕಾರ್ಯಕ್ರದಲ್ಲಿಯೂ ಕನ್ನಡವನ್ನು ಕಡೆಗಣಿಸಲಾಗಿತ್ತು. ಈ ವಿಚಾರ ಬಹಳಷ್ಟು ಟೀಕೆಗಳಿಗೆ ಕಾರಣವಾಗಿತ್ತು. ಇದೀಗ ಸಿಎಂ ಕಾರ್ಯಕ್ರದಲ್ಲಿ ಮತ್ತದೇ ಯಡವಟ್ಟು ಸಂಭವಿಸಿದೆ.  ಇದನ್ನೂ ಓದಿ: ಬೆಂಗಳೂರು ಉಸ್ತುವಾರಿಗಾಗಿ ಸೋಮಣ್ಣ-ಅಶೋಕ್ ಮಧ್ಯೆ ಕೋಲ್ಡ್ ವಾರ್ – ಸಿಎಂಗೆ ಸಂಕಟ

    bommai

    ಮಾಡ್ಯೂಲರ್ ಆಸ್ಫತ್ರೆ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಸಚಿವ ಮನ್‌ಸುಖ್ ಮಾಂಡವೀಯ ಮತ್ತು ಬಸವರಾಜ್ ಬೊಮ್ಮಾಯಿ, ಸಚಿವ ಕೆ.ಸುಧಾಕರ್ ಮತ್ತು ಸ್ಥಳೀಯ ಶಾಸಕ ಉದಯ್ ಗರುಡಾಚಾರ್ ಪಾಲ್ಗೊಂಡಿದ್ದರು. ಇದನ್ನೂ ಓದಿ: ಜೆಡಿಎಸ್ ಬಗ್ಗೆ ಮಾತನಾಡದಿದ್ದರೆ ಸಿದ್ದರಾಮಯ್ಯಗೆ ನಿದ್ದೆ ಬರಲ್ಲ: ಹೆಚ್‍ಡಿ ಕುಮಾರಸ್ವಾಮಿ

    bommai

    ಈ ವೇಳೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಬೊಮ್ಮಾಯಿ ಅವರು, ಈ ಮಾಡ್ಯೂಲರ್ ಆಸ್ಪತ್ರೆ ಎಲ್ಲಿ ಬೇಕಾದರೂ ಮಾಡಬಹುದು, ಈ ಥರ ಮಾಡ್ಯುಲ್ ಆಸ್ಪತ್ರೆ ಪ್ರತಿಯೊಂದು ಜಿಲ್ಲೆಯಲ್ಲಿ ಮಾಡುವುದಕ್ಕೆ ಮುಂದಾಗುತ್ತೇವೆ. ಆದರೆ ಸ್ವಲ್ಪ ತೊಂದರೆಯಿಂದ ನರ್ಸ್, ಡಾಕ್ಟರ್ ಮತ್ತೆ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜನೆ ಮಾಡಿಕೊಂಡು ಪ್ರತಿಯೊಂದು ಜಿಲ್ಲೆಯಲ್ಲಿ ಮಾಡ್ಯುಲರ್ ಆಸ್ಪತ್ರೆ ನಿರ್ಮಾಣ ಮಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ನಿಲ್ಲದ ಪುಂಡರ ಕುಚೇಷ್ಟೆ – ಕಾರಿನಲ್ಲಿ ಹೋಗ್ತಿದ್ದ ದಂಪತಿಗೆ ಅಡ್ಡಗಟ್ಟಿ ಧಮ್ಕಿ

    bommai

    ಇದೇ ವೇಳೆ, ಎಲ್ಲಕಿಂತ ಮನುಷ್ಯ ಗುಣ ಉಪಕಾರ ಸ್ಮರಣೆ. ಅವರು ನಮಗೆ ಉಪಕಾರ ಸ್ಮರಣೆ ಮಾಡಿದ್ದರೆ, ನಾವು ಅವರಿಗೆ ಉಪಕಾರ ಸ್ಮರಣೆ ಮಾಡಬೇಕು. ವ್ಯಾಪಾರದಲ್ಲಿ ಬ್ಯಾಲೆನ್ಸ್ ಶೀಟ್ ಇರುತ್ತದೆ. ಅದೇ ರೀತಿ ಮನುಷ್ಯನ ಬದುಕಲ್ಲಿ ಬ್ಯಾಲೆನ್ಸ್ ಶೀಟ್ ಇರುತ್ತದೆ. ತಂದೆ ತಾಯಿ ಗುರುಗಳ ಉಪಕಾರ ಕ್ರೆಡಿಟ್ ಆಗಿರುತ್ತದೆ. ಇದರಿಂದ ನಾವು ಬೆಳೆಯಬೇಕು, ನಾವು ಬೆಳೆದ ನಂತರ ನಾವು ಸಮಾಜಕ್ಕೆ ಡೆಬಿಟ್ ಮಾಡಬೇಕು. ಈ ಸಮಾಜ ದೇವರ ಸೃಷ್ಟಿ, ಅದಕ್ಕೆ ನಾವು ಸೇವೆ ಮಾಡಬೇಕು. ಸಾಧಕನು ಸಾವಿನ ನಂತರವೂ ಬದುಕುವುದು ಅವನ ಸಾಧನೆಯಿಂದ ಅಂತ ವಿವೇಕಾನಂದರು ತಿಳಿಸಿದ್ದಾರೆ. ಇಂತಹ 20 ಮಾಡ್ಯೂಲರ್ ಆಸ್ಪತ್ರೆ ಮಾಡಬೇಕು. ಪ್ರತಿ ಜಿಲ್ಲೆಯಲ್ಲಿ ಇದು ಆಗಬೇಕು. ಪ್ಯಾರಾ ಮೆಡಿಕಲ್ ಸ್ಟಾಫ್ ಸೇರಿದಂತೆ ವೈದ್ಯರ ಅವಶ್ಯಕತೆ ಇದೆ. ಅವಶ್ಯಕತೆ ತುಂಬಿದ ನಂತರ ಇವೆಲ್ಲವನ್ನು ಮಾಡುತ್ತೇವೆ ಎಂದು ನುಡಿದಿದ್ದಾರೆ.

    ಕೇಂದ್ರ ಸಚಿವರಾದ ಮನ್‌ಸುಖ್‌ ಅವರು ಮೋದಿ ಅವರ ಸರ್ಕಾರದಲ್ಲಿ ಆರೋಗ್ಯ ಮಂತ್ರಿಯಾಗಿ ಉತ್ತಮವಾದ ಕೆಲಸ ಮಾಡುತ್ತಿದ್ದಾರೆ. ಕೋವಿಡ್‌ನಂತ ಭೀಕರ ಸಂದರ್ಭದಲ್ಲಿ ಗಟ್ಟಿ ನಿರ್ಧಾರ ಮಾಡಿ ಜನರನ್ನು ಉಳಿಸುವ ಕೆಲಸ ಮಾಡಿದ್ದರು. ಮೋದಿ ಹಾಗೂ ಕೇಂದ್ರ ಸಚಿವರಿಗೆ ಧನ್ಯವಾದಗಳು. ಹುಬ್ಬಳ್ಳಿ ಧಾರವಾಡ ಸೇರಿದಂತೆ ಎಲ್ಲಾ ಕಡೆ ಈ ಕೆಲಸ ಮಾಡಿ, ನಾವು ಜಾಗ ಕೊಡುತ್ತೇವೆ ಎಂದು ಹೇಳಿದ್ದಾರೆ.

  • ನಾನು ಎಲ್ಲರಿಗಿಂತ ಸೀನಿಯರ್, ಅರ್ಧ ಬೆಂಗಳೂರು ಉಸ್ತುವಾರಿ ಕೊಡಲಿ: ಸೋಮಣ್ಣ

    ನಾನು ಎಲ್ಲರಿಗಿಂತ ಸೀನಿಯರ್, ಅರ್ಧ ಬೆಂಗಳೂರು ಉಸ್ತುವಾರಿ ಕೊಡಲಿ: ಸೋಮಣ್ಣ

    – ಇಬ್ಬರು ಸಚಿವರ ಮಧ್ಯೆ ಮುಸುಕಿನ ಗುದ್ದಾಟ
    – ಅಶೋಕ್ ‘ಸಾಮ್ರಾಟ್’ ತರ ಆಡ್ತಾನೆ

    ಬೆಂಗಳೂರು: ನಾನು ಎಲ್ಲರಿಗಿಂತ ಸೀನಿಯರ್, ಎಲ್ಲರಿಗಿಂತ ಜಾಸ್ತಿ ಅರ್ಹತೆ ಹೊಂದಿದ್ದೇನೆ. ಹಾಗಾಗಿ ನನ್ನನ್ನು ಬೆಂಗಳೂರು ಉಸ್ತುವಾರಿಯನ್ನಾಗಿ ಮಾಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಕೇಳಿದ್ದೇನೆ ಎಂದು ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

    ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಈ ಮುನ್ನ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪನವರು ಬೆಂಗಳೂರು ನಗರದ ಉಸ್ತುವಾರಿಯನ್ನು ವಹಿಸಿಕೊಂಡಿದ್ದರು. ಈಗಲೂ ಅವರೇ ವಹಿಸಿಕೊಂಡರೂ ತೊಂದರೆ ಇಲ್ಲ. ಆದರೆ ಇದು ಮುಖ್ಯಮಂತ್ರಿಗಳ ಪರಮಾಧಿಕಾರ ಯಾರಿಗೆ ಎಷ್ಟು ವರ್ಷ ಅನುಭವವಿದೆ, ಯಾರನ್ನು ಉಸ್ತುವಾರಿ ಮಾಡಬೇಕು ಎಂದು ಅವರಿಗೆ ತಿಳಿದಿದೆ. ನಾನು ಈ ವಿಚಾರಕ್ಕೆ ಮೂಗು ತೂರಿಸುವ ಕೆಲಸ ಮಾಡುವುದಿಲ್ಲ. ಆದರೆ ನಾನು ಜೆ.ಹೆಚ್ ಪಾಟೇಲರ ಸರ್ಕಾರದ ಅವಧಿಯಲ್ಲಿ ಮಂತ್ರಿಯಾಗಿದ್ದವನು. ಎಲ್ಲರಿಗಿಂತ ಜಾಸ್ತಿ ಅರ್ಹತೆ ಹೊಂದಿದ್ದೇನೆ. ಹಾಗಾಗಿ ನನ್ನನ್ನು ಬೆಂಗಳೂರು ಉಸ್ತುವಾರಿಯನ್ನಾಗಿ ಮಾಡಿ ಎಂದು ಕೇಳಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ದಿವಂಗತ ಮನಗೂಳಿ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಬೇಡ: ಹೆಚ್‍ಡಿಕೆ

    ನಾನು 40 ವರ್ಷ ರಾಜಕಾರಣದಲ್ಲಿ ಅನುಭವ ಹೊಂದಿದ್ದೇನೆ. ನನ್ನ ಇಲಾಖೆಯಲ್ಲಿ 1 ಲಕ್ಷ ಮನೆ ನೀಡುವ ಬಗ್ಗೆ ಯಾರದೋ ಸಲಹೆ ಪಡೆದು ಕೆಲಸ ಮಾಡುವ ಅವಶ್ಯಕತೆ ಇಲ್ಲ. ಬೆಂಗಳೂರು ಮಹಾನಗರದ ಬಡ ಜನರಿಗೆ ನಾವು ನೀಡುತ್ತಿರುವ ಕೆಲವು ಮನೆಗಳ ಕಾರ್ಯಕ್ರಮಕ್ಕೆ ನಾವು ಅಶೋಕ್‍ರನ್ನು ಕರೆದಿದ್ದೇವೆ. ಆದರೆ ಅವರು ಚಿಕ್ಕಮಗಳೂರಿನಲ್ಲಿದ್ದರು ಹಾಗಾಗಿ ಬರಲಿಲ್ಲ. ಅಶೋಕ್ ಎಂಎಲ್‍ಎ ಆಗಿದ್ದಾಗ ನಾನು ಮಂತ್ರಿಯಾಗಿದ್ದೆ. ಹಾಗಂತ ನನಗೆ ದುರಂಹಕಾರ ಇಲ್ಲ. ನನಗೆ ನನ್ನ ಪಕ್ಷ ಮುಖ್ಯ ಎಂದು ನುಡಿದಿದ್ದಾರೆ. ಇದನ್ನೂ ಓದಿ: ಐಟಿ ದಾಳಿಗೂ, ರಾಜಕೀಯಕ್ಕೂ ಸಂಬಂಧ ಇಲ್ಲ: ಕೋಟಾ ಶ್ರೀವಾಸ ಪೂಜಾರಿ

    ನಮ್ಮ ಬೆಂಗಳೂರು ನಗರದಲ್ಲಿರುವವರು ಉಸ್ತುವಾರಿ ಸಚಿವರಾಗುವುದಕ್ಕೆ ಯಡಿಯೂರಪ್ಪ ಅವರು ಈ ಹಿಂದೆ ಹೊಸ ಪೀಠಿಕೆ ಹಾಕಿ ಇಟ್ಟುಕೊಂಡಿದ್ದರು. ಇವರಿಗೂ ನಾನು ಅದನ್ನೇ ಹೇಳಿದ್ದೇನೆ. ಇಲ್ಲ ಯಾರಿಗಾದರೂ ಕೊಟ್ಟರೂ ಯಾವುದೇ ತೊಂದರೆ ಇಲ್ಲ. ಆದರೆ ನಾನು ಎಲ್ಲರಿಗಿಂತ ಬೆಂಗಳೂರು ನಗರಕ್ಕೆ ಸೀನಿಯರ್ ಆಗಿದ್ದೇನೆ. ಅಂಡರ್ ಪಾಸ್, ಫ್ಲೈ ಓವರ್, ಮೆಟ್ರೋ ಯೋಜನೆ ಎಲ್ಲವೂ ನನ್ನ ಕಾಲದಲ್ಲಿಯೇ ಆಗಿದೆ. ಈಗ ನನಗೆ 70 ವರ್ಷ ಎಲ್ಲರಿಗಿಂತ ಸೀನಿಯರ್ ಆಗಿದ್ದು, ಎಲ್ಲವನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತೇನೆ ಎಂದಿದ್ದಾರೆ.

    ಯಾವುದೇ ಮಿಂಟಿಂಗ್‍ಗೂ ಸೋಮಣ್ಣನವರು ಎಲ್ಲರನ್ನು ಕರೆಯುತ್ತಾರೆ ಆದರೆ ಅಶೋಕ್ ಅವರನ್ನು ಮಾತ್ರ ಕರೆಯುವುದಿಲ್ಲ ಎಂಬ ವಿಶ್ವನಾಥ್ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅಶೋಕ್ ಎಂದು ಅವರ ತಂದೆ-ತಾಯಿ ಯಾಕೆ ಹೆಸರಿಟ್ಟರು ಗೊತ್ತಿಲ್ಲ. ಅಶೋಕ ಎಂದರೆ ಸಾಮ್ರಾಟ ಚಕ್ರವರ್ತಿ ಎಂದರ್ಥ. ಸಾಮ್ರಾಟ ಚಕ್ರವರ್ತಿ ಕೆಲಸನೇ ಬೇರೆ, ನನ್ನ ಕೆಲಸನೇ ಬೇರೆ. ವಿಶ್ವನಾಥ್ ಅವರು ಯಾಕೆ ಈ ರೀತಿ ಹೇಳಿದ್ದಾರೆ ನನಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ಬಯಸಿದರೆ ಪಾಕ್‌ ಕ್ರಿಕೆಟ್‌ ಕತೆ ಮುಗಿದಂತೆ: ರಮೀಝ್‌ ರಾಜಾ

     

    ಬೆಂಗಳೂರು ನಗರಕ್ಕೆ ಯಾರನ್ನು ಉಸ್ತುವಾರಿಯನ್ನಾಗಿ ಮಾಡಿಲ್ಲ. ಅಶೋಕ್ ಅವರನ್ನು ಸ್ವಾತಂತ್ರ್ಯ ದಿನಾಚರಣೆಯ ಸಮಯ ಹಾಗೂ ಕೋವಿಡ್ ನಿರ್ವಹಣೆಗಾಗಿ ಅಷ್ಟೇ ಉಸ್ತುವಾರಿಯನ್ನಾಗಿ ಮಾಡಲಾಗಿತ್ತು. ಸದ್ಯ ಇದೀಗ ಬೆಂಗಳೂರು ನಗರದ ಉಸ್ತುವಾರಿಯಾಗಿ ಅಶೋಕ್ ಅವರನ್ನು ಮಾಡುತ್ತಾರೋ ಅಥವಾ ಸೋಮಣ್ಣ ಅವರನ್ನು ಮಾಡುತ್ತಾರೋ, ಇಲ್ಲ ಬೇಕಿದ್ದರೆ ಇಬ್ಬರಿಗೂ ಬೆಂಗಳೂರು ಉಸ್ತುವಾರಿಯನ್ನು ವಹಿಸುತ್ತಾರೋ ಅವರಿಗೆ ಬಿಟ್ಟಿದೆ ಎಂದು ಹೇಳಿದ್ದಾರೆ.

  • ವಿದ್ಯಾರ್ಥಿಗಳ ಜತೆ ಸಿಎಂ ಬಸವರಾಜ ಬೊಮ್ಮಾಯಿ ಮಾತುಕತೆ

    ವಿದ್ಯಾರ್ಥಿಗಳ ಜತೆ ಸಿಎಂ ಬಸವರಾಜ ಬೊಮ್ಮಾಯಿ ಮಾತುಕತೆ

    ಹಾವೇರಿ: ಯಾವ ಕ್ಲಾಸ್ ನಲ್ಲಿ ಓದ್ತಾ ಇದ್ದೀಯಮ್ಮಾ? ಕ್ಲಾಸ್ ಶುರು ಆಗಿವೆಯಾ? ಸರಿಯಾಗಿ ಓದಮ್ಮಾ.. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಹಾವೇರಿ ಜಿಲ್ಲೆ ಶಿಗ್ಗಾಂವಿ ಕ್ಷೇತ್ರದ ಅರಟಾಳ ದುಂಡಸಿ ಗ್ರಾಮದ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ಮಕ್ಕಳೊಂದಿಗೆ ನಡೆಸಿದ ಸಂಭಾಷಣೆಯ ಮಾತುಗಳು.

    ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಆಗಮಿಸಿದ ಮುಖ್ಯಮಂತ್ರಿಗಳು ತಡಸ್ ಗ್ರಾಮದಿಂದ ಹೊರಟ ನಂತರ ಮಾರ್ಗಮಧ್ಯದ ಅರಟಾಳ- ದುಂಡಸಿ ಗ್ರಾಮಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದ ಪ್ರೌಢಶಾಲೆ ವಿದ್ಯಾರ್ಥಿಗಳು ಸಿಎಂ ಅವರನ್ನು ಸ್ವಾಗತಿಸಿದರು. ವಿದ್ಯಾರ್ಥಿಗಳೊಂದಿಗೆ ಕೆಲ ಸಮಯ ಮುಖ್ಯಮಂತ್ರಿಗಳು ಮಾತನಾಡಿದರು. ವಿದ್ಯಾರ್ಥಿನಿಯೊಬ್ಬಳನ್ನು ಕರೆದು ಮಾತನಾಡಿಸಿದ ಸಿಎಂ, ಯಾವ ಕ್ಲಾಸಲ್ಲಿ ಓದ್ತಾ ಇದ್ದೀಯಾ? ಕ್ಲಾಸುಗಳು ಆರಂಭವಾಗಿವೆಯಾ? ಏನಾದರೂ ಸಮಸ್ಯೆ ಇದೆಯಾ ಎಂದು ಪ್ರಶ್ನಿಸಿದರು.

    ನಂತರ ಚೆನ್ನಾಗಿ ಓದಮ್ಮಾ ಅಂತ ಸಲಹೆ ನೀಡಿದರು ಈ ಸಂದರ್ಭದಲ್ಲಿ ಗ್ರಾಮಸ್ಥರು ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು. ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ವಿದ್ಯಾರ್ಥಿಗಳ ಮುಖದಲ್ಲಿ ಮಂದಹಾಸ ಎದ್ದು ಕಾಣುತ್ತಿತ್ತು. ಇದನ್ನೂ ಓದಿ: ಸಿಎಂ ಯಾವುದೇ ವಿವಾದ ಸೃಷ್ಟಿಸಿಕೊಳ್ಳದೇ ರಾಜ್ಯ ಮುನ್ನಡೆಸಲಿದ್ದಾರೆ: ಕೋಡಿಮಠ ಶ್ರೀ ಭವಿಷ್ಯ