Tag: ಸಿಎಂ ಬೊಮ್ಮಾಯಿ

  • ಮಂಗಳೂರಿನ ವೆನ್ಲಾಕ್ ಸರ್ಕಾರಿ ಆಸ್ಪತ್ರೆಯ ಮೆಡಿಸಿನ್ ವಿಭಾಗದಲ್ಲಿ ನೂತನ ಐಸಿಯು ಘಟಕ ಉದ್ಘಾಟನೆ

    ಮಂಗಳೂರಿನ ವೆನ್ಲಾಕ್ ಸರ್ಕಾರಿ ಆಸ್ಪತ್ರೆಯ ಮೆಡಿಸಿನ್ ವಿಭಾಗದಲ್ಲಿ ನೂತನ ಐಸಿಯು ಘಟಕ ಉದ್ಘಾಟನೆ

    ಮಂಗಳೂರು: ನಗರದ ಹೃದಯ ಭಾಗದಲ್ಲಿರುವ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೆಡಿಸಿನ್ ವಿಭಾಗದ ನೂತನ ಐಸಿಯು ಘಟಕವನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಗುರುವಾರ ಉದ್ಘಾಟಿಸಿದರು.

    ವೆನ್ಲಾಕ್ ಸರ್ಕಾರಿ ಆಸ್ಪತ್ರೆಯಲ್ಲಿ 32 ಬೆಡ್ ಗಳ ಹೈಟೆಕ್ ಐಸಿಯು ಉದ್ಘಾಟನೆ ಮಾಡಿದ್ದು, ಮುಂದಿನ ದಿನಗಳಲ್ಲಿ ಬಡವರಿಗೂ ಒಳ್ಳೆಯ ಹೈಟೆಕ್ ವ್ಯವಸ್ಥೆ ಸರ್ಕಾರ ಮಟ್ಟದಲ್ಲೇ ಸಿಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ಅಧಿಕೃತ ಖಾತೆ ಸೇರಿದಂತೆ ನಾಯಕರ ಟ್ವಿಟ್ಟರ್ ಖಾತೆ ಬ್ಲಾಕ್

    ಈ ಸಂದರ್ಭದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸುನಿಲ್ ಕುಮಾರ್, ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವರಾದ ಡಾ. ಸುಧಾಕರ್, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ.ವೈ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಪೊಲೀಸ್ ಆಯುಕ್ತ ಶಶಿಕುಮಾರ್, ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಡಿಎಚ್‍ಒ ಡಾ. ಕಿಶೋರ್ ಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕರು ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಕ್ಯಾಂಟೀನ್, ಬೇಕಾದ್ರೆ ನೆಹರು ಹುಕ್ಕಾ ಬಾರ್ ತೆರೆಯಲಿ : ಸಿಟಿ ರವಿ

  • ಬೇಸರಗೊಂಡ ಸಚಿವರನ್ನು ಸಿಎಂ ಬೊಮ್ಮಾಯಿ ಸಮಾಧಾನ ಮಾಡುತ್ತಾರೆ: ಸುನಿಲ್ ಕುಮಾರ್

    ಬೇಸರಗೊಂಡ ಸಚಿವರನ್ನು ಸಿಎಂ ಬೊಮ್ಮಾಯಿ ಸಮಾಧಾನ ಮಾಡುತ್ತಾರೆ: ಸುನಿಲ್ ಕುಮಾರ್

    – ನಾನು ಹಗರಣಗಳನ್ನು ಹೊರತೆಗೆಯಲು ಬಂದ ಸಚಿವ ಅಲ್ಲ

    ಉಡುಪಿ: ಖಾತೆ ಹಂಚಿಕೆಯಲ್ಲಿ ಇಬ್ಬರು ಸಚಿವರಿಗೆ ಅಸಮಧಾನ ವಿಚಾರಕ್ಕೆ ಬೇಸರಗೊಂಡ ಸಚಿವರನ್ನು ಸಿಎಂ ಕರೆದು ಮಾತನಾಡುತ್ತಾರೆ. ಸಮಸ್ಯೆ ಬಗೆಹರಿಸಲು ಬಿಜೆಪಿಯಲ್ಲಿ ಆಂತರಿಕ ವ್ಯವಸ್ಥೆ ಇದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದರು.

    ಬೇಸರ ಮತ್ತು ನೋವನ್ನು ಆಂತರಿಕವಾಗಿ ಕರೆದು ಪರಿಹರಿಸಲಾಗುತ್ತದೆ. ಬಿಜೆಪಿ ತನ್ನ ವ್ಯವಸ್ಥೆಯ ಒಳಗೆ ಅದನ್ನ ಸರಿಮಾಡುತ್ತದೆ. ದೇವೇಗೌಡರು ಮತ್ತು ಸಿಎಂ ಬೊಮ್ಮಾಯಿ ಭೇಟಿ ವಿಚಾರದ ಬಗ್ಗೆ ತಗಾದೆ ತೆಗೆದು ವಿರೋಧಿಸಿದ್ದ ಶಾಸಕ ಪ್ರೀತಂ ಗೌಡ ಬಗ್ಗೆ ನಾನು ಪ್ರತಿಕ್ರಿಯೆ ಕೊಡಲ್ಲ. ಯಾರ ಜೊತೆಗೂ ಕೂಡ ಫ್ರೆಂಡ್ ಶಿಪ್ ಇರಬಹುದು. ಆದರೆ ಬದ್ಧತೆ ಮತ್ತು ಕಾರ್ಯಶೈಲಿಯಲ್ಲಿ ವ್ಯತ್ಯಾಸಗಳು ಆಗಬಾರದು ಎಂದು ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ ಹೇಳಿದರು.

    ದೇಶಾದ್ಯಂತ ನಾಳೆ ವಿದ್ಯುತ್ ಇಲಾಖೆಯ ಮುಷ್ಕರವಿದೆ. ಕೆಪಿಟಿಸಿಎಲ್ ಕಾರ್ಮಿಕ ಸಂಘಟನೆಗಳು ನನ್ನನ್ನು ಭೇಟಿಯಾಗಿವೆ. ಖಾಸಗೀಕರಣದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೇವೆ ಎಂದಿದ್ದಾರೆ. ಶುಕ್ರವಾರ ಅಥವಾ ಶನಿವಾರ ನಾನು ಇಂಧನ ಇಲಾಖೆಯ ಅಧಿಕಾರ ವಹಿಸಿಕೊಳ್ಳಲಿದ್ದೇನೆ. ನಮ್ಮ ರಾಜ್ಯ ಮತ್ತು ಇಲಾಖೆಯ ಹಿತಾಸಕ್ತಿಯನ್ನು ನಾವು ಕಾಪಾಡುತ್ತೇವೆ. ಕೇಂದ್ರದ ಬಿಲ್ ಏನಿದೆ ಎಂಬುದನ್ನು ಪರಾಮರ್ಶಿಸುತ್ತೇನೆ. ಇಲಾಖೆಯ ಅಧಿಕಾರ ವಹಿಸಿಕೊಂಡ ನಂತರ ಈ ಬಗ್ಗೆ ಪ್ರತಿಕ್ರಿಯಿಸುತ್ತೇನೆ.

    ನಾನು ಹಗರಣಗಳನ್ನು ಹೊರತೆಗೆಯಲು ಬಂದ ಸಚಿವ ಅಲ್ಲ, ಇಲಾಖೆಯಲ್ಲಿ ಸುಧಾರಣೆಗಳನ್ನು ಮಾಡಲು ಬಂದವನು. ಇಂಧನ ಇಲಾಖೆಯಲ್ಲಿ ಮತ್ತು ರಾಜ್ಯದಲ್ಲಿ ಸೀಮಿತ ಅವಧಿಯಲ್ಲಿ ಕೆಲಸ ಮಾಡಬೇಕಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

    ಇಡಿ ದಾಳಿಗೆ ಜೆಡಿಎಸ್ ಕುಮ್ಮಕ್ಕು ಎಂಬ ಶಾಸಕ ಜಮೀರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಜಮೀರ್ ಬಹಿರಂಗವಾಗಿ ಯಾರದ್ದೋ ಮೇಲೆ ಆರೋಪ ಮಾಡುತ್ತಾರೆ. ಆಂತರಿಕವಾಗಿ ನನ್ನ ಪಾರ್ಟಿಯವರೇ ಮಾಡಿದ್ರೂ ಅಂತಾರೆ. ಏನಿದ್ದರೂ ಅವರವರ ಆಂತರಿಕ ಬೇಗುದಿ ಅಷ್ಟೇ. ಇದರಲ್ಲಿ ನಮ್ಮ ಪಕ್ಷದ ಯಾವುದೇ ಪಾತ್ರ ಇಲ್ಲ ಎಂದು ಸುನಿಲ್ ಕುಮಾರ್ ಹೇಳಿದರು. ಇದನ್ನೂ ಓದಿ: ಕೃಷಿ ಬಿಲ್- ವಿದ್ಯುತ್ ಬಿಲ್ ಹಿಂಪಡೆಯುವ ಒತ್ತಾಯ, ಕಾರ್ಮಿಕ ಸಂಘಟನೆ ಉಡುಪಿ ತಹಶಿಲ್ದಾರ್ ಕಚೇರಿ ಮುತ್ತಿಗೆ ಎಚ್ಚರಿಕೆ

  • ಎರಡ್ಮೂರು ದಿನಗಳಲ್ಲಿ ನನ್ನ ನಿರ್ಧಾರ ಪ್ರಕಟಿಸುತ್ತೇನೆ: ಎಂಟಿಬಿ ನಾಗರಾಜ್

    ಎರಡ್ಮೂರು ದಿನಗಳಲ್ಲಿ ನನ್ನ ನಿರ್ಧಾರ ಪ್ರಕಟಿಸುತ್ತೇನೆ: ಎಂಟಿಬಿ ನಾಗರಾಜ್

    ಬೆಂಗಳೂರು: ಎರಡ್ಮೂರು ದಿನಗಳಲ್ಲಿ ನನ್ನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ.

    ಸಿಎಂ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಈ ಹಿಂದೆ ಕಾಂಗ್ರೆಸ್ ನಲ್ಲಿದ್ದಾಗ ವಸತಿ ಸಚಿವನಾಗಿದ್ದವನು ರಾಜೀನಾಮೆ ನೀಡಿ ಬಿಜೆಪಿ ಸೇರಿದವನು. ಹಾಗಾಗಿ ಅದಕ್ಕಿಂತ ಉನ್ನತವಾದ ಖಾತೆಯನ್ನು ನೀಡ್ತಾರೆ ಅನ್ನೋ ನಿರೀಕ್ಷೆ ಇತ್ತು. ವಸತಿ ಖಾತೆಗಿಂತ ಒಳ್ಳೆಯ ಖಾತೆಗಳು ಯಾವುದು ಅನ್ನೋದು ಸಿಎಂಗೆ ಗೊತ್ತಿದೆ. ಲೋಕೋಪಯೋಗಿ, ಇಂಧನ, ಸಾರಿಗೆ, ಸಮಾಜ ಕಲ್ಯಾಣ, ಗ್ರಾಮೀಣಾಭಿವೃದ್ಧಿ ಇಲಾಖೆಗಳನ್ನು ನನಗೆ ನೀಡಬಹುದಿತ್ತು. ಆದ್ರೆ ಸಿಎಂ ಬೊಮ್ಮಾಯಿ ಅವರು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ನೀಡಿದ್ದಾರೆ ಎಂದು ಎಂಟಿಬಿ ನಾಗರಾಜ್ ಬೇಸರ ಹೊರ ಹಾಕಿದರು.

    ಖಾತೆ ಬದಲಿಸುತ್ತಾರಾ ಅನ್ನೋ ನಂಬಿಕೆ ನನಗಿಲ್ಲ. ಖಾತೆ ಹಂಚಿಕೆಯಿಂದಾಗಿ ಬೇಸರವಾಗಿದ್ರೆ ವರಿಷ್ಠರ ಜೊತೆ ಮಾತನಾಡುತ್ತೇನೆ. ಮುಂದಿನ ದಿನಗಳಲ್ಲಿ ಮಾತಾಡಿ ನಿರ್ಧಾರ ಮಾಡೋಣ ಎಂದು ಸಿಎಂ ಭರವಸೆ ನೀಡಿದ್ದಾರೆ. ನಾನು ಸಿಎಂ ಬೊಮ್ಮಾಯಿ ಅವರ ಮಾತನ್ನು ಒಪ್ಪಿದ್ದೇನೆ ಎಂದರು.

    ಎರಡ್ಮೂರು ದಿನಗಳಲ್ಲಿ ನನ್ನ ನಿರ್ಧಾರವನ್ನು ಪ್ರಕಟಿಸುತ್ತೇನೆ ನನ್ನ ಹೇಳಿಕೆಗೆ ಇವತ್ತು ಸಹ ಬದ್ಧನಾಗಿದ್ದೇನೆ. ಸುಮಾರು ಮೂವತ್ತಕ್ಕೂ ಹೆಚ್ಚು ನಿಮಿಷ ಸಿಎಂ ಜೊತೆ ಮಾತನಾಡಿದ್ದು, ಅವರು ಸಹ ಕೆಲ ಸಲಹೆಗಳನ್ನು ನೀಡಿದ್ದಾರೆ. ಬಿಜೆಪಿ ಸರ್ಕಾರ ರಚನೆಗೆ ಕಾರಣವಾದ 17 ಜನರಲ್ಲಿ ಕೇವಲ ಮೂವರಿಗೆ ಮಾತ್ರ ಒಳ್ಳೆಯ ಖಾತೆ ನೀಡಿರುವುದು ಬೇಸರಕ್ಕೆ ಕಾರಣವಾಗಿದೆ ಎಂದರು. ಇದನ್ನೂ ಓದಿ: ಮಂತ್ರಿ ಆಗದೇ ಇರುವದಕ್ಕೆ ಬೇಜಾರಿಲ್ಲ: ಲಕ್ಷ್ಮಣ ಸವದಿ

    ಇದೇ ಖಾತೆ ಹಂಚಿಕೆಯಿಂದ ಅಸಮಾಧಾನಗೊಂಡಿರುವ ಸಚಿವ ಆನಂದ್ ಸಿಂಗ್ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ರು. ಆದ್ರೆ ಇಬ್ಬರು ನಡುವಿನ ಸಭೆ ವಿಫಲವಾಗಿದೆ ಎನ್ನಲಾಗಿದೆ. ಸಿಎಂ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಆನಂದ್ ಸಿಂಗ್ ಹಿಂದೇಟು ಹಾಕಿದರು. ಇದನ್ನೂ ಓದಿ: ನಾನು ಹಠವಾದಿ, ಅಂದುಕೊಂಡಿದ್ದನ್ನ ಸಾಧಿಸದೇ ಬಿಡಲ್ಲ: ಸಚಿವ ಆನಂದ್ ಸಿಂಗ್

  • ನಾನು ಹಠವಾದಿ, ಅಂದುಕೊಂಡಿದ್ದನ್ನ ಸಾಧಿಸದೇ ಬಿಡಲ್ಲ: ಸಚಿವ ಆನಂದ್ ಸಿಂಗ್

    ನಾನು ಹಠವಾದಿ, ಅಂದುಕೊಂಡಿದ್ದನ್ನ ಸಾಧಿಸದೇ ಬಿಡಲ್ಲ: ಸಚಿವ ಆನಂದ್ ಸಿಂಗ್

    – ಈ ಬಾರಿ ನಾನು ಸುಮ್ಮನಿರಲ್ಲ

    ಬಳ್ಳಾರಿ: ಖಾತೆ ಹಂಚಿಕೆ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ನಾಯಕರ ಅಸಮಧಾನ ಶುರುವಾಗಿದೆ. ನನಗೆ ಆ ಖಾತೆ ಬೇಕಿತ್ತು, ಈ ಖಾತೆ ಬೇಕಿತ್ತು ಎಂದು ಖ್ಯಾತೆ ತೆಗೆದಿದ್ದಾರೆ. ನಿರೀಕ್ಷೆ ಮಾಡಿದ ಖಾತೆ ಕೈ ತಪ್ಪಿದ್ದಕ್ಕೆ ಹೊಸಪೇಟೆ ಶಾಸಕ ಆನಂದ ಸಿಂಗ್ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ನಾನು ಕೇಳಿರುವ ಖಾತೆಯನ್ನು ಮುಖ್ಯಮಂತ್ರಿಗಳು ನನಗೆ ಕೊಟ್ಟಿಲ್ಲ, ಇದರ ಕುರಿತು ನನಗೆ ಬಹಳ ನೋವಿದೆ. ಪ್ರತಿ ಬಾರಿಯು ನನಗೆ ಸಣ್ಣ ಸಣ್ಣ ಖಾತೆ ನೀಡಿ ಹಿಂಪಡೆದುಕೊಳ್ಳಲಾತ್ತಿದೆ. ಈ ಹಿಂದೆ ಸುಮ್ಮನಿದ್ದೆ, ಆದರೆ ಈ ಬಾರಿ ನಾನು ಸುಮ್ಮನಿರಲ್ಲ. ನಾನು ಕೇಳಿರುವ ಖಾತೆ ಬೇಕು. ಮುಖ್ಯಮಂತ್ರಿಗಳು ನನಗೆ ಆ ಖಾತೆ ನೀಡ್ತಾರೆ ಅನ್ನೋ ನಂಬಿಕೆ ಇದೆ ಎಂದು ಹೇಳಿದರು.

    ಯಾವುದೇ ಕೆಲಸಕ್ಕೆ ಕೈ ಹಾಕಿದ್ರೂ ಸುಮ್ಮನೆ ಬಿಡಲ್ಲ. ಅದು ಅಂತ್ಯ ಆಗುವವರೆಗೂ ಹೋರಾಡುತ್ತೆನೆ. ನಾನು ಅಂದುಕೊಂಡಿದ್ದನ್ನು ಮಾಡೋವರೆಗೂ ಬಿಡೋದಿಲ್ಲ ನಾನು ಹಠವಾದಿ. ನಾನು ಕೇಳಿರುವ ಖಾತೆ ಕೊಡದೇ ಇರಲು ಕಾರಣವಾದ್ರೂ ಬೇಕಲ್ಲ. ಯಾಕೆ ಕೊಟ್ಟಿಲ್ಲ ಅಂತ ಸಮರ್ಥವಾಗಿ ಅದನ್ನು ಮೊದಲು ಹೇಳಬೇಕು. ದೊಡ್ಡ ಖಾತೆ ನನಗೆ ಕೊಡದಿರುವದಕ್ಕೆ ಕಾರಣವೇನು? ನಾನೇನು ಭ್ರಷ್ಟಾಚಾರ ಮಾಡಿದ್ದೇನಾ? ಯಾವುದಾದರು ನನ್ನ ಮೇಲೆ ಕಪ್ಪು ಚುಕ್ಕೆ ಇದೆಯಾ? ಖಾತೆ ನಿಭಾಯಸದೆ ಇರುವಷ್ಟು ಅಸಮರ್ಥನೇ? ಯಾವ ಕಾರಣಕ್ಕೆ ನಾನು ಕೇಳಿದ ಖಾತೆ ನೀಡಿಲ್ಲ ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ:ಕಾಂಗ್ರೆಸ್ಸಿನಿಂದ ಬಂದವರನ್ನ ಮಂತ್ರಿ ಮಾಡಬೇಕಾಗಿದ್ದರಿಂದ ನನಗೆ ಸಚಿವ ಸ್ಥಾನ ಕೈ ತಪ್ಪಿತು: ರೂಪಾಲಿ ನಾಯ್ಕ

    ಸಮ್ಮಿಶ್ರ ಸರ್ಕಾರ ಕೆಡವಿ ಬಿಜೆಪಿ ಸರ್ಕಾರದ ರಚನೆಗಾಗಿ ರಾಜೀನಾಮೆ ಕೊಡಬೇಕಾದ್ರೇ ಯಾರಿಗೂ ಹೇಳಿರಲಿಲ್ಲ. ಒಬ್ಬನೇ ಹೋಗಿ ರಾಜೀನಾಮೆ ಕೊಟ್ಟಿದ್ದೇನೆ, ಮುಂದೆ ಏನು ಎಂಬುವುದರ ಬಗ್ಗೆಯೂ ಕೂಡ ಯೋಚನೆ ಮಾಡದೆ ರಾಜೀನಾಮೆ ಕೊಟ್ಟಿರೋದನ್ನು ಅವರು ಅರ್ಥ ಮಾಡಿಕೊಳ್ಳಬೇಕು ಎಂದು ಬೇಸರ ಹೊರ ಹಾಕಿದರು. ಇದನ್ನೂ ಓದಿ: ನೂತನ ಸಚಿವರಿಗೆ ಖಾತೆ ಹಂಚಿಕೆ – ಪಟ್ಟಿ ಪ್ರಕಟ

  • ನೂತನ ಸಚಿವರಿಗೆ ಖಾತೆ ಹಂಚಿಕೆ – ಪಟ್ಟಿ ಪ್ರಕಟ

    ನೂತನ ಸಚಿವರಿಗೆ ಖಾತೆ ಹಂಚಿಕೆ – ಪಟ್ಟಿ ಪ್ರಕಟ

    ಬೆಂಗಳೂರು: ಸಿಎಂ ಬೊಮ್ಮಾಯಿ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಬೆಂಗಳೂರು ನಗರ ಅಭಿವೃದ್ಧಿ ಖಾತೆಯನ್ನು ಮುಖ್ಯಮಂತ್ರಿಗಳು ತಮ್ಮ ಬಳಿಯಲ್ಲಿಯೇ ಇರಿಸಿಕೊಂಡಿದ್ದಾರೆ. ಸಂಘ ನಿಷ್ಠರಿಗೆ ಪ್ರಬಲ ಖಾತೆಗಳ ಹಂಚಿಕೆಯಾಗಿರೋದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಮೊದಲ ಬಾರಿ ಸಂಪುಟ ಪ್ರವೇಶಿಸಿರುವ ಸುನಿಲ್ ಕುಮಾರ್ ಪವರ್ ಫುಲ್ ಖಾತೆ ಇಂಧನ ಇಲಾಖೆಯೇ ಸಿಕ್ಕಿದೆ.

    ಖಾತೆ ಹಂಚಿಕೆ ಪಟ್ಟಿ
    * ಸಿಎಂ ಬಸವರಾಜ ಬೊಮ್ಮಾಯಿ – ಆರ್ಥಿಕ ಇಲಾಖೆ, ಗುಪ್ತಚರ ಇಲಾಖೆ, ಸಂಸದೀಯ ವ್ಯವಹಾರಗಳ ಇಲಾಖೆ, ಬೆಂಗಳೂರು ನಗರಾಭಿವೃದ್ಧಿ ಇಲಾಖೆ
    * ಆರ್ ಅಶೋಕ್ – ಕಂದಾಯ
    * ಗೋವಿಂದ ಕಾರಜೋಳ – ಬೃಹತ್ ನೀರಾವರಿ ಇಲಾಖೆ
    * ಅರಗ ಜ್ಞಾನೇಂದ್ರ – ಗೃಹ ಇಲಾಖೆ
    * ಸುನಿಲ್ ಕುಮಾರ್ – ಇಂಧನ ಇಲಾಖೆ, ಕನ್ನಡ ಮತ್ತು ಸಂಸ್ಕøತಿ
    * ಬಿ.ಸಿ.ಪಾಟೀಲ್ -ಕೃಷಿ ಇಲಾಖೆ
    * ಸುಧಾಕರ್- ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ
    * ಕೆ.ಎಸ್.ಈಶ್ವರಪ್ಪ – ಗ್ರಾಮೀಣಾಭಿವೃದ್ಧಿ
    * ಗೋಪಾಲಯ್ಯ – ಅಬಕಾರಿ ಇಲಾಖೆ
    * ಅಶ್ವಥ ನಾರಾಯಣ – ಐಟಿಬಿಟಿ, ಉನ್ನತ ಶಿಕ್ಷಣ ಇಲಾಖೆ
    * ಕೋಟ ಶ್ರೀನಿವಾಸ ಪೂಜಾರಿ – ಸಮಾಜ ಕಲ್ಯಾಣ ಇಲಾಖೆ
    * ಮುರುಗೇಶ್ ನಿರಾಣಿ – ಬೃಹತ್ ಮತ್ತುಮಧ್ಯಮ ಕೈಗಾರಿಕೆ
    * ಶ್ರೀರಾಮುಲು – ಸಾರಿಗೆ, ಹಿಂದುಳಿದ ವರ್ಗಗಳ ಕಲ್ಯಾಣ
    * ಸೋಮಣ್ಣ – ವಸತಿ ಮತ್ತು ಮೂಲಸೌಕರ್ಯ
    * ಉಮೇಶ್ ಕತ್ತಿ – ಅರಣ್ಯ ಇಲಾಖೆ, ಆಹಾರ ಇಲಾಖೆ
    * ಮಾಧುಸ್ವಾಮಿ- ಕಾನೂನು ಮತ್ತು ಸಂಸದೀಯ ಇಲಾಖೆ, ಸಣ್ಣ ನೀರಾವರಿ ಇಲಾಖೆ
    * ಸಿ.ಸಿ.ಪಾಟೀಲ್- ಲೋಕೋಪಯೋಗಿ ಇಲಾಖೆ
    * ಶಶಿಕಲಾ ಜೊಲ್ಲೆ – ಮುಜರಾಯಿ ಇಲಾಖೆ, ಹಜ್ ಮತ್ತು ವಕ್ಫ್
    * ಎಸ್.ಅಂಗಾರ – ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಇಲಾಖೆ
    * ಆನಂದ್ ಸಿಂಗ್ – ಪ್ರವಾಸೋದ್ಯಮ ಇಲಾಖೆ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ
    * ಮುನಿರತ್ನ – ತೋಟಗಾರಿಕೆ ಇಲಾಖೆ
    * ಶಿವರಾಂ ಹೆಬ್ಬಾರ್- ಕಾರ್ಮಿಕ ಇಲಾಖೆ
    * ಎಂಟಿಬಿ ನಾಗರಾಜ್ – ಪೌರಾಡಳಿತ
    * ಬಿ.ಸಿ.ನಾಗೇಶ್ – ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಇಲಾಖೆ
    * ಪ್ರಭು ಚೌಹಾನ್- ಪಶುಶಂಗೋಪನೆ
    * ಎಸ್.ಟಿ.ಸೋಮಶೇಖರ್ – ಸಹಕಾರ
    * ಹಾಲಪ್ಪ ಆಚಾರ್ – ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಸಬಲೀಕರಣ ಇಲಾಖೆ
    * ಶಂಕರ್ ಪಾಟೀಲ್ ಮುನೇನಕೊಪ್ಪ – ಜವಳಿ ಮತ್ತು ಕೈಮಗ್ಗ ಇಲಾಖೆ, ಸಕ್ಕರೆ ಇಲಾಖೆ
    * ನಾರಾಯಣ್ ಗೌಡ – ರೇಷ್ಮೆ ಇಲಾಖೆ, ಯುವ ಜನ ಮತ್ತು ಕ್ರೀಡಾ ಇಲಾಖೆ
    * ಬೈರತಿ ಬಸವರಾಜ್ – ನಗರಾಭಿವೃದ್ದಿ ಇಲಾಖೆ

    ಪವರ್ ಫುಲ್ ಖಾತೆಗಳಾದ ಜಲಸಂಪನ್ಮೂಲ, ಇಂಧನ, ಬೃಹತ್ ಕೈಗಾರಿಕಾ ಖಾತೆಗಳಿಗೂ ಸಿಕ್ಕಾಪಟ್ಟೆ ಡಿಮ್ಯಾಂಡ್ ಏರ್ಪಟ್ಟಿತ್ತು. ಹೀಗಾಗಿ ಶುಕ್ರವಾರ ಸಂಜೆಯೇ ಪಟ್ಟಿ ಅಂತಿಮಗೊಂಡಿದ್ರೂ ಬಿಡುಗಡೆಗೆ ವಿಳಂಬವಾಗಿದೆ ಎನ್ನಲಾಗಿದೆ.

  • ಕೇಸ್ ಮುಗಿದ್ಮೇಲೆ ಹೈಕಮಾಂಡ್ ರಮೇಶ್ ಜಾರಕಿಹೊಳಿಯನ್ನ ಮಂತ್ರಿ ಮಾಡುತ್ತೆ: ಬಾಲಚಂದ್ರ ಜಾರಕಿಹೊಳಿ

    ಕೇಸ್ ಮುಗಿದ್ಮೇಲೆ ಹೈಕಮಾಂಡ್ ರಮೇಶ್ ಜಾರಕಿಹೊಳಿಯನ್ನ ಮಂತ್ರಿ ಮಾಡುತ್ತೆ: ಬಾಲಚಂದ್ರ ಜಾರಕಿಹೊಳಿ

    ಬೆಂಗಳೂರು: ಪ್ರಕರಣ ಇತ್ಯರ್ಥವಾದ ಬಳಿಕ ರಮೇಶ್ ಜಾರಕಿಹೊಳಿ ಅವರನ್ನ ಸಚಿವರನ್ನಾಗಿ ಮಾಡಲಾಗುವುದು ಎಂದು ಸೋದರ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

    ಸಿಎಂ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ, ರಮೇಶ್ ಜಾರಕಿಹೊಳಿ ಮನೆಯಲ್ಲಿ ಭಿನ್ನಮತಿಯ ಸಭೆ ಅಂತ ಮಾಧ್ಯಮಗಳಲ್ಲಿ ಬರ್ತಿದೆ. ಆದ್ರೆ ಯಾವುದೇ ಭಿನ್ನಮತ ನಮ್ಮಲ್ಲಿ ಇಲ್ಲ. ಸಿಎಂ ಭೇಟಿಗೆ ಸಮಯ ಕೇಳಿದ್ದೀವಿ, ಇವತ್ತು ಸಮಯ ನೀಡಿದ್ದರಿಂದ ಬಂದಿದ್ದೇವೆ. ರಮೇಶ್ ಜಾರಕಿಹೊಳಿ ಅವರನ್ನ ಸಚಿವರನ್ನಾಗಿ ಮಾಡಬೇಕು ಅನ್ನೋದು ನಮ್ಮ ಬೇಡಿಕೆ. ನನಗೆ ಸಚಿವ ಸ್ಥಾನದ ಮೇಲೆ ಯಾವುದೇ ಆಕಾಂಕ್ಷೆ ಇಲ್ಲ ಎಂದು ಹೇಳಿದರು.

    ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ನಿನ್ನೆ ರಾತ್ರಿ ಅಸಮಾಧಾನಿತ ಶಾಸಕರು ಭೇಟಿ ನೀಡಿ ಮಾತುಕತೆ ನಡೆಸಿದ್ರು. ರಮೇಶ್ ಜಾರಕಿಹೊಳಿ ಮನೆಯಲ್ಲಿ ಭಿನ್ನಮತಿಯರು ರಹಸ್ಯ ಸಭೆ ನಡೆಸಿದ್ರು ಎಂಬ ವಿಷಯಕ್ಕೆ ಸ್ಪಷ್ಟನೆ ನೀಡಲು ಸಿಎಂರನ್ನ ಭೇಟಿ ಮಾಡಿದ್ದರು ಎನ್ನಲಾಗಿದೆ.

    17 ವರ್ಷಗಳ ಬಳಿಕ ಜಾರಕಿಹೊಳಿ ಕುಟುಂಬ ಸದಸ್ಯರು ಇಲ್ಲದ ಸಂಪುಟ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿದೆ. ಈ ಬೆಳವಣಿಗೆಯಿಂದ ತೀವ್ರವಾಗಿ ಅಸಮಾಧಾನಗೊಂಡಿರುವ ರಮೇಶ್ ಜಾರಕಿಹೊಳಿ, ತಮ್ಮ ಬೆಂಬಲಿಗ ಶಾಸಕರೊಂದಿಗೆ ಕಳೆದ ರಾತ್ರಿ ಸಭೆ ನಡೆಸಿದ್ದಾರೆ.

    ತಾವು ಬಿಜೆಪಿಗೆ ಕರೆತಂದ ಶ್ರೀಮಂತ ಪಾಟೀಲ್, ಮಹೇಶ್ ಕುಮಟಳ್ಳಿಗೆ ಮಂತ್ರಿ ಸ್ಥಾನ ನೀಡದಿರುವುದಕ್ಕೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ. ಯೋಗೇಶ್ವರ್‍ಗೆ ಮಂತ್ರಿ ಸ್ಥಾನ ಕೈತಪ್ಪಿರುವ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ. ಸಚಿವ ಸ್ಥಾನ ಸಿಗದೇ ಇರೋದಕ್ಕೆ ನೊಂದಿರುವ ಶ್ರೀಮಂತ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಚಿಂತನೆ ನಡೆಸಿದ್ದಾರೆ. ಶೀಘ್ರವೇ ಈ ಬಗ್ಗೆ ಒಂದು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಕ್ಷತ್ರಿಯ ಮರಾಠ ಒಕ್ಕೂಟ ಎಚ್ಚರಿಸಿದೆ. ಇದನ್ನೂ ಓದಿ: ಪವರ್ ಫುಲ್ ಖಾತೆಗಳಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್ – ರೆಬಲ್‍ಗಳ ರಹಸ್ಯ ಸಭೆ!

  • ಪವರ್ ಫುಲ್ ಖಾತೆಗಳಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್ – ರೆಬಲ್‍ಗಳ ರಹಸ್ಯ ಸಭೆ!

    ಪವರ್ ಫುಲ್ ಖಾತೆಗಳಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್ – ರೆಬಲ್‍ಗಳ ರಹಸ್ಯ ಸಭೆ!

    ಬೆಂಗಳೂರು: ಸಿಎಂ ಬೊಮ್ಮಾಯಿ ಸಂಪುಟ ಅಸ್ತಿತ್ವಕ್ಕೆ ಬಂದು ನಾಲ್ಕು ದಿನವಾದ್ರೂ, ನೂತನ ಮಂತ್ರಿಗಳಿಗೆ ಖಾತೆ ಹಂಚಿಕೆ ಆಗಿಲ್ಲ. ಮುಖ್ಯಮಂತ್ರಿಗಳು ಖಾತೆ ಹಂಚಿಕೆ ಪಟ್ಟಿಯನ್ನು ರಾಜಭವನಕ್ಕೆ ಶುಕ್ರವಾರ ಸಂಜೆಯೆ ಕಳಿಸಿಕೊಟ್ಟಿದ್ರೂ, ಅದಕ್ಕೆ ಇನ್ನೂ ಪ್ರಕಟವಾಗುವ ಭಾಗ್ಯ ಸಿಕ್ಕಿಲ್ಲ. ಬೊಮ್ಮಾಯಿ ಪಟ್ಟಿಗೆ ಹೈಕಮಾಂಡ್ ಬ್ರೇಕ್ ಹಾಕಿದ್ಯಾ ಅನ್ನೋ ಅನುಮಾನ ಮೂಡಿದೆ.

    ಪವರ್ ಫುಲ್ ಖಾತೆಗಳಾದ ಜಲಸಂಪನ್ಮೂಲ, ಇಂಧನ, ಬೃಹತ್ ಕೈಗಾರಿಕಾ ಖಾತೆಗಳಿಗೂ ಸಿಕ್ಕಾಪಟ್ಟೆ ಡಿಮ್ಯಾಂಡ್ ಏರ್ಪಟ್ಟಿದ್ರಿಂದ ತಡೆ ಹಿಡಿಯಲಾಗಿದೆಯಾ ಎಂಬ ಚರ್ಚೆ ನಡೆದಿದೆ. ಗೃಹ ಖಾತೆಗಾಗಿ ಬಿ.ಸಿ.ಪಾಟೀಲ್ ಪ್ರಯತ್ನಿಸ್ತಿದ್ದಾರೆ. ಎಸ್‍ಟಿ ಸೋಮಶೇಖರ್ ಅವರಂತೂ ನನಗೆ ಬೆಂಗಳೂರು ನಗರ ಅಭಿವೃದ್ಧಿ ಖಾತೆ ಬೇಕು ಎಂದು ಬಹಿರಂಗವಾಗಿ ಬೇಡಿಕೆ ಇಟ್ಟಿದ್ದಾರೆ. ಸುಧಾಕರ್ ಮತ್ತೆ ಆರೋಗ್ಯ ಖಾತೆ ಪಡೆಯಲು ಸಿಎಂ ಮೇಲೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.

    ಸದ್ಯ ಪಬ್ಲಿಕ್ ಟಿವಿಗೆ ಲಭ್ಯ ಆಗಿರುವ ಮಾಹಿತಿ ಪ್ರಕಾರ, ಕೆಲವರಿಗೆ ಪ್ರಮುಖ ಖಾತೆಗಳು ಲಭ್ಯ ಆಗಿವೆ ಎನ್ನಲಾಗಿವೆ. ಆ ಸಂಭಾವ್ಯ ಪಟ್ಟಿ ಇಲ್ಲಿದೆ.
    * ಗೋವಿಂದ ಕಾರಜೋಳ – ಜಲಸಂಪನ್ಮೂಲ
    * ಆರ್ ಅಶೋಕ್ – ಗೃಹ ಮತ್ತು ಕಂದಾಯ
    * ಉಮೇಶ್ ಕತ್ತಿ – ಲೋಕೋಪಯೋಗಿ
    * ಶ್ರೀರಾಮುಲು – ಸಮಾಜ ಕಲ್ಯಾಣ
    * ಬಿ.ಸಿ.ನಾಗೇಶ್ – ಶಿಕ್ಷಣ
    * ಸುನಿಲ್‍ಕುಮಾರ್- ಹಿಂದುಳಿದ ವರ್ಗಗಳ ಇಲಾಖೆ
    * ಮಾಧುಸ್ವಾಮಿ – ಕಾನೂನು, ಸಂಸದೀಯ ವ್ಯವಹಾರ
    * ಅರಗ ಜ್ಞಾನೇಂದ್ರ – ಅರಣ್ಯ

    ರೆಬೆಲ್ ಮೀಟಿಂಗ್:
    ಇನ್ನು ಸಂಪುಟ ರಚನೆಯಿಂದ ಉಂಟಾಗಿರುವ ಅತೃಪ್ತಿ ಶಮನವಾಗಿಲ್ಲ. ರಹಸ್ಯವಾಗಿ ಭಿನ್ನಮತೀಯ ಚಟುವಟಕೆಗಳು ಶುರುವಾದಂತಿವೆ. 17 ವರ್ಷಗಳ ಬಳಿಕ ಜಾರಕಿಹೊಳಿ ಕುಟುಂಬ ಸದಸ್ಯರು ಇಲ್ಲದ ಸಂಪುಟ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿದೆ. ಈ ಬೆಳವಣಿಗೆಯಿಂದ ತೀವ್ರವಾಗಿ ಅಸಮಾಧಾನಗೊಂಡಿರುವ ರಮೇಶ್ ಜಾರಕಿಹೊಳಿ, ತಮ್ಮ ಬೆಂಬಲಿಗ ಶಾಸಕರೊಂದಿಗೆ ಕಳೆದ ರಾತ್ರಿ ಸಭೆ ನಡೆಸಿದ್ದಾರೆ.

    ತಾವು ಬಿಜೆಪಿಗೆ ಕರೆತಂದ ಶ್ರೀಮಂತ ಪಾಟೀಲ್, ಮಹೇಶ್ ಕುಮಟಳ್ಳಿಗೆ ಮಂತ್ರಿ ಸ್ಥಾನ ನೀಡದಿರುವುದಕ್ಕೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ. ಯೋಗೇಶ್ವರ್‍ಗೆ ಮಂತ್ರಿ ಸ್ಥಾನ ಕೈತಪ್ಪಿರುವ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ. ಸಚಿವ ಸ್ಥಾನ ಸಿಗದೇ ಇರೋದಕ್ಕೆ ನೊಂದಿರುವ ಶ್ರೀಮಂತ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಚಿಂತನೆ ನಡೆಸಿದ್ದಾರೆ. ಶೀಘ್ರವೇ ಈ ಬಗ್ಗೆ ಒಂದು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಕ್ಷತ್ರಿಯ ಮರಾಠ ಒಕ್ಕೂಟ ಎಚ್ಚರಿಸಿದೆ. ಇದನ್ನೂ ಓದಿ: 3ನೇ ಬಾರಿಯೂ ಕೈತಪ್ಪಿದ ಸಚಿವ ಸ್ಥಾನ – ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ ಬರೆದ ಕುಮಾರಸ್ವಾಮಿ

    ಈ ಮಧ್ಯೆ, ಸಚಿವ ಸ್ಥಾನ ತಪ್ಪಿದವರಿಗೆ ವೈರಾಗ್ಯ ಕಾಡುವುದು ಸಹಜ. ಆದ್ರೆ ತಾಳಿದವನು ಬಾಳಿಯಾನು ಎಂಬ ಮಾತನ್ನು ನೆನಪಲ್ಲಿ ಇಟ್ಕೋಬೇಕು ಎಂದು ಸಚಿವ ಮುರುಗೇಶ್ ನಿರಾಣಿ ಹಿತವಚನ ಬೋಧಿಸಿದ್ದಾರೆ. ಸಿಎಂ ವಿರುದ್ಧ ಸಿಡಿದಿದ್ದ ನೆಹರೂ ಓಲೇಕಾರ್ ಕೋಪ ಈಗ ಶಮನವಾಗಿದೆ. ಪೂರ್ಣಿಮಾ ಶ್ರೀನಿವಾಸ್‍ಗೆ ಮಂತ್ರಿ ಸ್ಥಾನ ತಪ್ಪಿದನ್ನು ವಿರೋಧಿಸಿ ಅವರ ಬೆಂಬಲಿಗರು ಧರ್ಮಪುರದಿಂದ ಹಿರಿಯೂರಿನವರೆಗೂ ಪಾದಯಾತ್ರೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ರೇಣುಕಾಚಾರ್ಯ ಮೂರು ದಿನದಿಂದ ಕ್ಷೇತ್ರದ ಕಡೆ ತಲೆ ಹಾಕಿಲ್ಲ. ಆದ್ರೆ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಯಾವುದೇ ಭಿನ್ನಮತೀಯ ಚಟುವಟಿಕೆ ನಡೆದಿಲ್ಲ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ಇದನ್ನೂ ಓದಿ: ಮಂತ್ರಿಸ್ಥಾನ ನೀಡದಿದ್ರೆ ಮತ್ತೊಂದು ಆಪರೇಷನ್ ನಡೆಸುವ ಎಚ್ಚರಿಕೆ ನೀಡಿದರಂತೆ ಎಂಟಿಬಿ ನಾಗರಾಜ್!

  • ಬೊಮ್ಮಾಯಿ ಸಂಪುಟ ಸೇರಲಿರುವ ಶಾಸಕರ ಪಟ್ಟಿ ರಿಲೀಸ್ – ಮಧ್ಯಾಹ್ನ 2.15ಕ್ಕೆ 29 ಮಂದಿ ಪ್ರಮಾಣ ವಚನ

    ಬೊಮ್ಮಾಯಿ ಸಂಪುಟ ಸೇರಲಿರುವ ಶಾಸಕರ ಪಟ್ಟಿ ರಿಲೀಸ್ – ಮಧ್ಯಾಹ್ನ 2.15ಕ್ಕೆ 29 ಮಂದಿ ಪ್ರಮಾಣ ವಚನ

    ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸೇರುವ ನಾಯಕರ ಪಟ್ಟಿ ಕೊನೆಗೂ ಅಂತಿಮಗೊಂಡಿದ್ದು, ಇಂದು 29 ಮಂದಿಯ ಹೆಸರುವುಳ್ಳ ಪಟ್ಟಿ ಅಧಿಕೃತವಾಗಿದೆ. ವಲಸಿಗರ ಕೋಟಾದಲ್ಲಿ ಜನ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು ಮಾಧ್ಯಾಹ್ನ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.

    ಮೂರು ದಿನಗಳಿಂದ ದೆಹಲಿಯಲ್ಲಿಯೇ ಉಳಿದುಕೊಂಡಿದ್ದ ಸಿಎಂ ಬೊಮ್ಮಾಯಿ ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದರು. ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಎಲ್ಲರಿಗೂ ಶುಭ ಕೋರಿದರು. ಈ ಬಾರಿ ಯಾವುದೇ ಡಿಸಿಎಂ ಹುದ್ದೆ ಸೃಷ್ಟಿಗೆ ಬಿಜೆಪಿ ಹೈಕಮಾಂಡ್ ಮುಂದಾಗಿಲ್ಲ. 8 ಲಿಂಗಾಯತ, 7 ಒಕ್ಕಲಿಗ, 7 ಒಬಿಸಿ, 3 ದಲಿತ, 3 ಎಸ್.ಸಿ., 1 ಎಸ್.ಟಿ ಮತ್ತು ಮಹಿಳೆ ಶಾಸಕಿಗೂ ಸ್ಥಾನ ನೀಡಲಾಗಿದೆ ಎಂದು ಸಿಎಂ ತಿಳಿಸಿದರು. ಇದನ್ನೂ ಓದಿ: ಮೋಸ, ವಂಚನೆ, ವಸೂಲಿಯಿಂದ ಸಚಿವ ಸ್ಥಾನ ತಪ್ಪಿತು: ಸಿಎಂ ವಿರುದ್ಧವೇ ಗುಡುಗಿದ ಶಾಸಕ ಓಲೇಕಾರ್

    ಬೊಮ್ಮಾಯಿ ಸಂಪುಟದ ಫೈನಲ್ ಪಟ್ಟಿ
    ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ, ಆರ್.ಅಶೋಕ್- ಪದ್ಮನಾಭ ನಗರ, ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ, ಉಮೇಶ್ ಕತ್ತಿ- ಹುಕ್ಕೇರಿ, ಎಸ್.ಟಿ.ಸೋಮಶೇಖರ್- ಯಶವಂತಪುರ, ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ, ಬೈರತಿ ಬಸವರಾಜ – ಕೆ ಆರ್ ಪುರಂ, ಮುರುಗೇಶ್ ನಿರಾಣಿ – ಬೀಳಗಿ, ಶಿವರಾಂ ಹೆಬ್ಬಾರ್- ಯಲ್ಲಾಪುರ, ಶಶಿಕಲಾ ಜೊಲ್ಲೆ- ನಿಪ್ಪಾಣಿ, ಕೆಸಿ ನಾರಾಯಣಗೌಡ – ಕೆಆರ್ ಪೇಟೆ, ಸುನೀಲ್ ಕುಮಾರ್ – ಕಾರ್ಕಳ, ಅರಗ ಜ್ಞಾನೇಂದ್ರ – ತೀರ್ಥಹಳ್ಳಿ, ಗೋವಿಂದ ಕಾರಜೋಳ-ಮುಧೋಳ, ಮುನಿರತ್ನ- ಆರ್ ಆರ್ ನಗರ, ಎಂ.ಟಿ.ಬಿ ನಾಗರಾಜ್ – ಎಂಎಲ್‍ಸಿ, ಗೋಪಾಲಯ್ಯ- ಮಹಾಲಕ್ಷ್ಮಿ ಲೇಔಟ್, ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ, ಹಾಲಪ್ಪ ಆಚಾರ್ – ಯಲ್ಬುರ್ಗ, ಶಂಕರ್ ಪಾಟೀಲ್ ಮುನೇನಕೊಪ್ಪ – ನವಲುಗುಂದ, ಕೋಟಾ ಶ್ರೀನಿವಾಸ ಪೂಜಾರಿ – ಎಂಎಲ್‍ಸಿ, ಪ್ರಭು ಚೌವ್ಹಾಣ್ – ಔರಾದ್, ವಿ ಸೋಮಣ್ಣ – ಗೋವಿಂದರಾಜನಗರ, ಎಸ್ ಅಂಗಾರ-ಸುಳ್ಯ, ಆನಂದ್ ಸಿಂಗ್ – ಹೊಸಪೇಟೆ, ಸಿ.ಸಿ.ಪಾಟೀಲ್ – ನರಗುಂದ, ಬಿ.ಸಿ.ನಾಗೇಶ್ – ತಿಪಟೂರು, ಬಿ.ಶ್ರೀ ರಾಮುಲು- ಮೊಳಕಾಲ್ಮೂರು ಇದನ್ನೂ ಓದಿ: ಇನ್‍ಸೈಡ್ ಸ್ಟೋರಿ – ಕೊನೆಯ ಹಂತದಲ್ಲಿ ವಿಜಯೇಂದ್ರಗೆ ಸಚಿವ ಸ್ಥಾನ ತಪ್ಪಿದ್ದೇಗೆ?

  • ಇನ್‍ಸೈಡ್ ಸ್ಟೋರಿ – ಕೊನೆಯ ಹಂತದಲ್ಲಿ ವಿಜಯೇಂದ್ರಗೆ ಸಚಿವ ಸ್ಥಾನ ತಪ್ಪಿದ್ದೇಗೆ?

    ಇನ್‍ಸೈಡ್ ಸ್ಟೋರಿ – ಕೊನೆಯ ಹಂತದಲ್ಲಿ ವಿಜಯೇಂದ್ರಗೆ ಸಚಿವ ಸ್ಥಾನ ತಪ್ಪಿದ್ದೇಗೆ?

    – ಸೋತು ಗೆದ್ರಾ ಅಥವಾ ಗೆದ್ದು ಸೋತ್ರಾ ಬಿಎಸ್‍ವೈ?

    ಬೆಂಗಳೂರು: ಕೊನೆಯ ಹಂತದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೆಸರನ್ನ ಸಂಪುಟದಿಂದ ಕೈಬಿಡಲಾಗಿದೆ. ಕೊನೆಯ ಹಂತದಲ್ಲಿ ವಿಜಯೇಂದ್ರ ಸಚಿವ ಸ್ಥಾನದಿಂದ ವಂಚಿರಾಗಿದ್ದು ಹೇಗೆ ಎಂಬುದರ ಇನ್‍ಸೈಡ್ ಸ್ಟೋರಿ ಇಲ್ಲಿದೆ.

    ಬಿಎಸ್‍ವೈ ಷರತ್ತು, ‘ಹೈ’ ಗೊಂದಲ:
    ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ವೇಳೆ ಹೈಕಮಾಂಡ್ ಮುಂದೆ ಕೆಲ ಷರತ್ತುಗಳನ್ನು ಇರಿಸಿದ್ದರು ಎನ್ನಲಾಗಿದೆ. ಆ ಷರತ್ತುಗಳ ಪೈಕಿ ತಮ್ಮ ವಿರುದ್ಧ ಮತ್ತು ತಮಗೆ ಆಡಳಿತ ನಡೆಸಲು ಬಿಡದ ಎಂಎಲ್‍ಸಿ ಸಿ.ಪಿ.ಯೋಗೇಶ್ವರ್, ಶಾಸಕರಾದ ಅರವಿಂದ್ ಬೆಲ್ಲದ್ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಗೆ ಸಚಿವ ಸ್ಥಾನ ನೀಡಬಾರದು. ಒಂದು ವೇಳೆ ಇವರಿಗೆ ಸಂಪುಟದಲ್ಲಿ ಸ್ಥಾನ ಮಾಡಿದ್ರೆ, ಪುತ್ರ ವಿಜಯೇಂದ್ರನ ಹೆಸರು ಪರಿಗಣಿಸಬೇಕೆಂಬ ಷರತ್ತು ಇರಿಸಿದ್ದರು ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಯಡಿಯೂರಪ್ಪನವರು ಹಾಕಿದ್ದ ಈ ಷರತ್ತಿನಿಂದಲೇ ಪಟ್ಟಿ ಅಂತಿಮಗೊಳ್ಳಲು ವಿಳಂಬವಾಯ್ತು ಎನ್ನಲಾಗಿದೆ. ನಿನ್ನೆಯವರೆಗೂ ಯೋಗೇಶ್ವರ್, ಬೆಲ್ಲದ್, ಯತ್ನಾಳ್ ಮತ್ತು ವಿಜಯೇಂದ್ರ ಹೆಸರು ಕೇಳಿ ಬಂದಿತ್ತು. ಆದ್ರೆ ಕೊನೆ ಹಂತದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡಿರುವ ಹೈಕಮಾಂಡ್ ಎಲ್ಲರ ಹೆಸರನ್ನು ಕೈ ಬಿಟ್ಟಿದೆ ಎನ್ನಲಾಗಿದೆ. ಇದನ್ನೂ ಓದಿ: ಮೋಸ, ವಂಚನೆ, ವಸೂಲಿಯಿಂದ ಸಚಿವ ಸ್ಥಾನ ತಪ್ಪಿತು: ಸಿಎಂ ವಿರುದ್ಧವೇ ಗುಡುಗಿದ ಶಾಸಕ ಓಲೇಕಾರ್

    ಬಿಎಸ್‍ವೈಗೆ ಸಿಕ್ಕಿದ್ದು ಗೆಲುವಾ? ಸೋಲು?:
    ಯೆಸ್, ಸಚಿವ ಸಂಪುಟದಲ್ಲಿ ತಮ್ಮ ವಿರೋಧಿಗಳಿಗೆ ಸಚಿವ ಸ್ಥಾನ ಸಿಗದಂತೆ ನೋಡಿಕೊಳ್ಳಲು ಯಡಿಯೂರಪ್ಪ ಮೇಲ್ನೋಟಕ್ಕೆ ಯಶಸ್ವಿಯಾದಂತೆ ಕಾಣುತ್ತೆ. ಮತ್ತೊಂದು ಕಡೆ ಪುತ್ರ ವಿಜಯೇಂದ್ರಗೆ ಸಂಪುಟದಲ್ಲಿ ಸ್ಥಾನ ಕೊಡಿಸಲು ಬಿಎಸ್‍ವೈ ಫೇಲ್ ಆದ್ರಾ ಅನ್ನೋ ಪ್ರಶ್ನೆ ಸಹ ಮುನ್ನಲೆಗೆ ಬಂದಿದೆ. ಇತ್ತ ಕೇಂದ್ರ ಸಚಿವ ಸಂಪುಟದಲ್ಲಿಯೂ ಪುತ್ರ, ಸಂಸದ ಬಿ.ವೈ.ರಾಘವೇಂದ್ರರಿಗೆ ನಿರಾಸೆಯುಂಟಾಗಿತ್ತು. ಇದನ್ನೂ ಓದಿ: ಕ್ಯಾಬಿನೆಟ್‍ಗೂ ಮುನ್ನವೇ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ- ಆನಂದ್ ಮಾಮನಿ ರಾಜೀನಾಮೆ ಸಾಧ್ಯತೆ