– ಕರ್ನಾಟಕದ 8 ಜಿಲ್ಲೆಗಳಲ್ಲಿ ಸೋಂಕು ಹೆಚ್ಚಳ






ಮೈಸೂರು: ಕೆಟ್ಟವರೊಂದಿಗೆ ಒಳ್ಳೆಯವರ ಸೇರ್ಪಡೆಯಾಗಿದ್ದರಿಂದ ಸಿಎಂ ಬದಲಾವಣೆ ವಿಳಂಬವಾಗುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ವಿರುದ್ಧ ಗುಡುಗಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಯತ್ನಾಳ್, ಯಡಿಯೂರಪ್ಪ ವಿರುದ್ಧ ಹಾಗೂ ವಿಪಕ್ಷಗಳ ವಿರುದ್ಧ ಹರಿಹಾಯ್ದರು. ಸಿಎಂ ಯಡಿಯೂರಪ್ಪ ಕುಟುಂಬದವರು ಮಾಡುತ್ತಿರೋ ಭ್ರಷ್ಟಾಚಾರದಲ್ಲಿ ವಿರೋಧ ಪಕ್ಷಗಳು ಪಾಲುದಾರರಾಗಿವೆ. ಅವರಿಗೂ ಭ್ರಷ್ಟಾಚಾರದ ಹಣದಲ್ಲಿ ಪಾಲಿದೆ. ಯಡಿಯೂರಪ್ಪರನ್ನು ಶೀಘ್ರದಲ್ಲೇ ಕೆಳಗೆ ಇಳಿಸದಿದ್ದರೆ ಬಿಜೆಪಿ ದಕ್ಷಿಣ ಭಾರತದಲ್ಲಿ ನಿರ್ನಾಮ ಆಗುತ್ತದೆ ಎಂದು ಭವಿಷ್ಯ ನುಡಿದರು.

ಯಡಿಯೂರಪ್ಪ ಅವರಗಿಂತ ದೊಡ್ಡ ನಾಯಕರು ಲಿಂಗಾಯತ ಸಮುದಾಯದಲ್ಲಿದ್ದಾರೆ. ಪರ್ಯಾಯ ನಾಯಕ ಇಲ್ಲ ಅನ್ನೋದು ಸುಳ್ಳು. ಯಡಿಯೂರಪ್ಪ ಅವರಿಂದ ಲಿಂಗಾಯತ ಸಮುದಾಯ ಸಮಾಜದ ಮುಂದೆ ತಲೆ ತಗ್ಗಿಸುವ ಪರಿಸ್ಥಿತಿ ಬಂದಿದೆ. ಯಡಿಯೂರಪ್ಪ ಬದಲಾವಣೆ ಇಲ್ಲ ಅಂತಾ ರಾಷ್ಟ್ರೀಯ ಅಧ್ಯಕ್ಷರು ಹೇಳಲಿ. ಅವತ್ತು ನಾಯಕತ್ವ ಬದಲಾವಣೆ ಮುಗಿದ ಅಧ್ಯಯ ಅಂತಾ ಒಪ್ಪಿಕೊಳ್ತಿನಿ ಎಂದರು.

ಖಾವಿ ತೆಗೆದು ಖಾದಿ ಧರಿಸಿ: ದಕ್ಷಿಣೆ ಕಾಸಿಗೆ ಆಸೆ ಬಿದ್ದು ಕೆಲ ಮಠಾಧೀಶರು ಸಿಎಂ ಪರ ಮಾತನಾಡುತ್ತಿದ್ದಾರೆ. ಲವ್ ಜಿಹಾದ್ ತಡೆಯಲು ಮಠಾಧೀಶರು ಮುಂದಾಗಬೇಕು. ಕೆಟ್ಟವರಿಗೆ ಬುದ್ದಿ ಹೇಳುವ ಕೆಲಸ ಮಾಡಬೇಕು. ಅದನ್ನು ಬಿಟ್ಟು ಸಿಎಂ ಬದಲಾವಣೆ ಮಾಡಿದ್ರೆ ಬೀದಿಗೆ ಬರುತ್ತೇವೆ ಅನ್ನೋದು ಸರಿಯಲ್ಲ. ಸಿಎಂ ಕುಟುಂಬದಿಂದ ಲಿಂಗಾಯತ ಸಮಾಜಕ್ಕೆ ಕೆಟ್ಟ ಹೆಸರು ಬಂದಿದೆ. ಇದರ ಬಗ್ಗೆ ಮಾತನಾಡುವ ಬದಲು ಭ್ರಷ್ಟರ ಪರವಾಗಿ ಮಠಾಧೀಶರು ಮಾತನಾಡಬಾರದು. ನಿಮಗೆ ಅಷ್ಟೊಂದು ರಾಜಕೀಯ ಹುಚ್ಚು ಇದ್ರೆ ಖಾವಿ ತೆಗೆದು ಖಾದಿ ಧರಿಸಿ ಬನ್ನಿ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಗುಡುಗು ಯತ್ನಾಳ್, ಮಿಂಚು ಯೋಗೇಶ್ವರ್ ಮಳೆ ಬಂದ್ಮೇಲೆ ತಣ್ಣಗಾಗ್ತಾರೆ: ಕೋಟ ವ್ಯಾಖ್ಯಾನ

ಸಿಎಂ ನಿವಾಸದ ಗೆಸ್ಟ್ ಹೌಸ್‍ನಲ್ಲಿ ಡೀಲ್: ಇದೆ ವೇಳೆ ಸಿಎಂ ಪುತ್ರ, ಬಿಜೆಪಿ ಉಪರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ ಯತ್ನಾಳ್, ಸಿಎಂ ನಿವಾಸ ಕಾವೇರಿ ಹಿಂಭಾಗದಲ್ಲಿ ಗೆಸ್ಟ್ ಗೌಸ್ ಇದೆ. ಇವರ ಎಲ್ಲ ಡೀಲ್‍ಗಳೂ ಅಲ್ಲೇ ನಡೆಯೋದು. ಸಿಸಿಬಿ ಪೊಲೀಸರು ಅಲ್ಲಿಗೆ ಯಾಕೆ ರೈಡ್ ಮಾಡಲ್ಲ ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ಸಿಎಂ ವಿರುದ್ಧ ಸಿಪಿವೈ, ಬೆಲ್ಲದ್, ಯತ್ನಾಳ್ ಚಾರ್ಜ್‍ಶೀಟ್ ಏನು?

ದಿನಕ್ಕೆ ನೂರು ಕೋಟಿ ರೂ. ಲೂಟಿ ಹೊಡೆಯುತ್ತಿದ್ದಾರೆ. ರಾಜ್ಯದಲ್ಲಿ ವಿರೋಧ ಪಕ್ಷಗಳು ಸತ್ತು ಹೋಗಿದ್ದು, ಯಡಿಯೂರಪ್ಪ ಜೊತೆ ಶಾಮೀಲು ಆಗಿವೆ. ಅವರಿಗೂ ಭ್ರಷ್ಟಾಚಾರದಲ್ಲಿ ಪಾಲು ಇರೋದರಿಂದ ಯಾರು ಯಡಿಯೂರಪ್ಪ ವಿರುದ್ಧ ಮಾತಾನಾಡುತ್ತಿಲ್ಲ. ಅವರಿಗೂ ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರಿಯಬೇಕು ಎಂದು ಹೇಳಿದರು. ಇದನ್ನೂ ಓದಿ: ಯತ್ನಾಳ್ ಪರ ಸದಾ ಕಾಲ ಇರುತ್ತೇನೆ: ಸಿ.ಪಿ ಯೋಗೇಶ್ವರ್

ಬೆಂಗಳೂರು: ಚಿಂತಾಮಣಿಯಿಂದ ನವದೆಹಲಿಗೆ 250 ಟನ್ ಮಾವು ಸಾಗಿಸುವ ‘ಕಿಸಾನ್ ರೈಲಿ’ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. ಬೆಂಗಳೂರು ನಗರದ ಯಲಹಂಕ ರೈಲು ನಿಲ್ದಾಣದಲ್ಲಿ ಕಿಸಾನ್ ರೈಲಿಗೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.
ರೈತರು ಬೆಳೆದ ಬೆಳೆಗೆ ಉತ್ತಮ ಮೌಲ್ಯ ಒದಗಿಸುವ ನಿಟ್ಟಿನಲ್ಲಿ ಕಿಸಾನ್ ರೈಲು ಪ್ರಮುಖ ಪಾತ್ರ ವಹಿಸಿದೆ. ಕೃಷಿ ಉತ್ಪನ್ನಗಳಿಗೆ ದೂರದ ಮಾರುಕಟ್ಟೆಗಳ ಸಂಪರ್ಕ ಸಿಗುವಂತೆ ಮಾಡಿ ರೈತರ ಆದಾಯ ಹೆಚ್ಚಿಸಲು ಮಹತ್ವದ ಪಾತ್ರ ವಹಿಸಿದೆ ಎಂದರು. ಕಿಸಾನ್ ರೈಲು ಯೋಜನೆಯನ್ನು ರೂಪಿಸಿ ಅನುಷ್ಠಾನಕ್ಕೆ ತಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳನ್ನು ಸಿಎಂ ಅರ್ಪಿಸಿದರು.

ಕಿಸಾನ್ ರೈಲು ಆಗಸ್ಟ್ 2020ರಿಂದ ಪ್ರಾರಂಭಗೊಂಡಿದ್ದು, ರೈತರಿಗೆ, ಕೃಷಿ ಉತ್ಪನ್ನದ ವರ್ತಕರಿಗೆ, ರಫ್ತುದಾರರಿಗೆ ಪ್ರಯೋಜನಕಾರಿಯಾಗಿದೆ ಎಂದರು. ಕಿಸಾನ್ ರೈಲಿನಲ್ಲಿ ಕೃಷಿ ಉತ್ಪನ್ನಗಳ ರೈಲ್ವೆ ಸಾಗಾಣಿಕೆ ದರದಲ್ಲಿ ಶೇ 50ರಷ್ಟು ರಿಯಾಯಿತಿ ದೊರೆಯುತ್ತದೆ. ಇದರಿಂದ ರೈತರಿಗೆ ರಸ್ತೆ ಮೂಲಕ ಸಾಗಾಣಿಕೆ ಮಾಡಿದ್ದಕಿಂತಲೂ ಅತ್ಯಂತ ಕಡಿಮೆ ದರದಲ್ಲಿ ಸಾಗಾಣಿಕೆ ಮಾಡಲು ಅನುಕೂಲವಾಗಿದೆ ಎಂದರು.

ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಕಂದಾಯ ಸಚಿವ ಆರ್ ಅಶೋಕ್, ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್, ತೋಟಗಾರಿಕಾ ಸಚಿವ ಆರ್.ಶಂಕರ್, ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ರವರು ಉಪಸ್ಥಿತರಿದ್ದರು. ಬೆಂಗಳೂರು ರೈಲ್ವೆ ವಿಭಾಗದ ವ್ಯವಸ್ಥಾಪಕ ಅಶೋಕ್ ಕುಮಾರ್ ವರ್ಮಾ, ಕೃಷಿ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ ಅವರು ಇತರ ಹಿರಿಯ ಅಧಿಕಾರಿಗಳು ಇದ್ದರು.
ಜೂನ್ 21, 2021 ರಿಂದ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಂದ 5 ಕಿಸಾನ್ ರೈಲು ಸೇವೆಗಳ ಮೂಲಕ 1250 ಟಾನ್ ಮಾವನ್ನು ದೆಹಲಿಗೆ ಸಾಗಾಣಿಕೆ ಮಾಡಲಾಗಿದೆ.

ಕಿಸಾನ್ ರೈಲು ನಿಗದಿತ ವೇಳಾಪಟ್ಟಿಯಂತೆ ಸಂಚರಿಸುವುದರಿಂದ ಶೀಘ್ರವಾಗಿ ದೇಶದಾದ್ಯಂತ ಸೂಕ್ತ ಮಾರುಕಟ್ಟೆಗಳಿಗೆ ಸಾಗಿಸಲು ಅನುಕೂಲವಾಗುವುದು. ಕೋಲಾರದಿಂದ ದೆಹಲಿಗೆ ಸುಮಾರು 2,300 ಕಿ ಮೀ ದೂರವನ್ನು ಕೇವಲ 38-40 ಗಂಟೆಗಳಲ್ಲಿ ತಲುಪುವುದರಿಂದ ಹಣ್ಣಿನ ತಾಜಾತನವೂ ಉಳಿಯುತ್ತದೆ. ಕಿಸಾನ್ ರೈಲು ರೈತರ ಬೆಳೆಗಳನ್ನು ಸುರಕ್ಷಿತವಾಗಿ, ಬೇಡಿಕೆಯಿರುವ ಮಾರುಕಟ್ಟೆಗೆ ಸಾಗಾಣಿಕೆ ಮಾಡುವಲ್ಲಿ ಸಹಾಯಕವಾಗಿದೆ.
ಮುಖ್ಯಮಂತ್ರಿ @BSYBJP ರವರು ಇಂದು ಚಿಂತಾಮಣಿಯಿಂದ ನವದೆಹಲಿಗೆ 250 ಟನ್ ಮಾವು ಸಾಗಿಸುವ "ಕಿಸಾನ್ ರೈಲಿಗೆ" ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. (1/2)#KisanRail @PMOIndia @RailMinIndia @PiyushGoyal pic.twitter.com/mRQ3hQm57Y
— CM of Karnataka (@CMofKarnataka) June 29, 2021

ಹಾಸನ: ಮುಖ್ಯಮಂತ್ರಿ ಜಿಲ್ಲೆ ಶಿವಮೊಗ್ಗ ಒಂದಕ್ಕೆ 2019 ರಿಂದ ಇಲ್ಲಿಯವರೆಗೆ ನ್ಯಾಷನಲ್ ಹೈವೇ ಅಥಾರಿಟಿಯಿಂದ ಐದೂವರೆ ಸಾವಿರ ಕೋಟಿ ಕಾಮಗಾರಿ ನೀಡಲಾಗಿದೆ. ರಾಜ್ಯದ ಭೂಪಟದಲ್ಲಿ ಬೇರೆ ಜಿಲ್ಲೆಗಳು ಇಲ್ವೆ ಇಲ್ವಾ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣನವರು ಪ್ರಶ್ನಿಸಿದ್ದಾರೆ.

ಬಿಜೆಪಿ ಎಂಪಿಗಳು ಇದರ ಬಗ್ಗೆ ಉಸಿರಾಡುತ್ತಿಲ್ಲ, ಟಿಎಡಿಎ, ಸಂಬಳಕ್ಕಾಗಿ ಓಡಾಡುತ್ತಿವೆ. ಶಿವಮೊಗ್ಗಕ್ಕೆ ಮಾತ್ರ ಅಚ್ಛೇ ದಿನ್ ಬಂದಿದೆ. ಆತ್ಮಸ್ಥೈರ್ಯ ಇದ್ದರೆ ಬಿಜೆಪಿಯ 25 ಸಂಸದರು ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ.

ನಿತಿನ್ ಗಡ್ಕರಿ ಈಸ್ ಎ ಡೈನಾಮಿಕ್ ಲೀಡರ್, ಟಿ.ಆರ್.ಬಾಲು, ಗಡ್ಕರಿ ಇಬ್ಬರೂ ನಾನು ಕಂಡ ಉತ್ತಮ ಸಚಿವರು. ಬಿಜೆಪಿ ರಾಜ್ಯಾಧ್ಯಕ್ಷರಿಗೆ 10 ವರ್ಷದಿಂದ ಸಕಲೇಶಪುರದಿಂದ ಗುಂಡ್ಯ -ಬಿಸಿ ರೋಡ್ ಗೆ ರಸ್ತೆ ಮಾಡಿಸಲು ಆಗಿಲ್ಲ. ಮಂಗಳೂರಿನಿಂದ ವಿಮಾನದಲ್ಲಿ ಹೋಗುತ್ತಾರೆ. ರಸ್ತೆಯಲ್ಲಿ ಓಡಾಡಲು ಜನರು ಹರಸಾಹಸಪಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಮುಖ್ಯಮಂತ್ರಿಗೆ ಜೈ ಅಂದವರಿಗೆ 850 ಕೋಟಿ ನೀರಾವರಿ ಕಾಮಗಾರಿಗೆ ಹಣ ನೀಡಿದ್ದಾರೆ. ಅಧಿಕಾರಿಗಳು ವರ್ಗಾವಣೆಗೆ ಹೆದರಿ ಬಿಜೆಪಿಯವರು ಹೇಳಿದಂತೆ ಕೇಳುತ್ತಾರೆ. ಮುಂದೊಂದು ದಿನ ಕೆಲವು ಅಧಿಕಾರಿಗಳು ಜೈಲಿಗೆ ಹೋಗುತ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಿಂಬೆಹಣ್ಣಿನ ಜ್ಯೂಸ್ ಮಾರುತ್ತಿದ್ದ ಮಹಿಳೆ ಇಂದು ಪೊಲೀಸ್

ಬೆಂಗಳೂರು: ಕಂದಾಯ ಸಚಿವ ಆರ್.ಅಶೋಕ್ ಅವರು ಮುಖ್ಯಮಂತ್ರಿಗಳೊಂದಿಗೆ ಬೆಂಗಳೂರು ಕಂಟೋನ್ಮೆಂಟ್ ನಿಂದ ಹಿಲಲಿಗೆ ಪ್ರಯಾಣಿಸುವ ಮೂಲಕ ಬೆಂಗಳೂರು ಉಪನಗರ ರೈಲು ಯೋಜನೆ ಹಾಗೂ ದ್ವಿಪಥ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಕರ್ನಾಟಕ ಸರ್ಕಾರ ಹಾಗೂ ರೈಲ್ವೆ ಸಚಿವಾಲಯ ಜಂಟಿ ಸಹಯೋಗದಲ್ಲಿ ಕೆ-ಆರೈಡಿಇ ಯು ಈ ಉಪನಗರ ಯೋಜನೆಯನ್ನು ಕಾರ್ಯಗತಗೊಳಿಸಲಿದೆ.

ಬಿಎಸ್‍ಆರ್ ಪಿಯು 148ಕಿ.ಮೀ. ಅಂತರದಲ್ಲಿ 4 ಕಾರಿಡಾರ್ ಗಳನ್ನ ಹೊಂದಿದೆ.
1. ಕೆಎಸ್‍ಆರ್ ಬೆಂಗಳೂರು ನಗರ – ದೇವನಹಳ್ಳಿ (ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ) (41.40 ಕಿ.ಮೀ.)
2. ಬೈಯಪ್ಪನಹಳ್ಳಿ – ಚಿಕ್ಕಬಾಣಾವರ (25 ಕಿ.ಮೀ.)
3. ಕೆಂಗೇರಿ – ವೈಟ್ ಫಿಲ್ಡ್ (35.52 ಕಿ.ಮೀ.)
4. ಹೀಲಲಿಗೆ (ಚಂದಾಪುರ) – ರಾಜನಕುಂಟೆ (46.24 ಕಿ.ಮೀ.)
ನಾಲ್ಕು ಕಾರಿಡಾರ್ ಗಳಲ್ಲಿ ಕಾರಿಡಾರ್ – (ಬೈಯಪ್ಪನಹಳ್ಳಿ-ಚಿಕ್ಕಬಾಣಾವರ) ಮತ್ತು ಕಾರಿಡಾರ್ – 4 (ಹೀಲಲಿಗೆ (ಚಂದಾಪುರ)-ರಾಜನಕುಂಟೆ) ಕಾಮಗಾರಿಗಳನ್ನ ಮೊದಲು ಕೈಗೆತ್ತಿಕೊಳ್ಳಲಾಗುವುದು)
ಕಂದಾಯ ಸಚಿವ @RAshokaBJP, ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಕಪಿಲ್ ಮೋಹನ್ ಮತ್ತು ಇತರ ಹಿರಿಯ ಅಧಿಕಾರಿಗಳು ಜೊತೆಗಿದ್ದರು. (2/2) pic.twitter.com/zueUAYrKz5
— CM of Karnataka (@CMofKarnataka) June 24, 2021
ದ್ವಿಪಥ ಯೋಜನೆಗಳು:
ಯಶವಂತಪುರ – ಚನ್ನಸಂದ್ರ ವಿಭಾಗ ಮತ್ತು ಬೈಯಪ್ಪನಹಳ್ಳಿ – ಹೊಸುರು ನಡುವಿನ ಏಕ ಮಾರ್ಗದಿಂದಾಗಿ ಬೆಂಗಳೂರಿನಿಂದ ಹೊರವಲಯಕ್ಕೆ ರೈಲುಗಳನ್ನ ಓಡಿಸಲು ಸಾಕಷ್ಟು ಅಡಚಣೆಯುಂಟಾಗುತ್ತಿತ್ತು. ಅದಕ್ಕಾಗಿಯೇ ಈ ದ್ವಿಪಥ ಯೋಜನೆಗಳನ್ನ 2018-19ರಲ್ಲಿ ಮಂಜೂರು ಮಾಡಲಾಯಿತು. ಕರ್ನಾಟಕ ಸರ್ಕಾರ ಮತ್ತು ರೈಲ್ವೆ ಸಚಿವಾಲಯವು 50-50 ವೆಚ್ಚ ಹಂಚಿಕೆಯಲ್ಲಿ ಕೈಗೊಳ್ಳಲಾಗುತ್ತದೆ.
Inspected railway track doubling between Yeshwanthpur-Channasandra & Baiyappanahalli-Hosur along @CMofKarnataka #SuburbanRailBng#BengaluruMission2022 pic.twitter.com/Q6gsRyRHP0
— R. Ashoka (@RAshokaBJP) June 24, 2021

ಬೆಂಗಳೂರು : ಉನ್ನತ ಶಿಕ್ಷಣ ಕಲಿಕೆಯಲ್ಲಿ ಇಡೀ ದೇಶದಲ್ಲೇ ಮೊದಲು ಎನ್ನುವ ಹೆಗ್ಗಳಿಕೆಗೆ ಹೊಂದಿರುವ ‘ಕಲಿಕಾ ನಿರ್ವಹಣಾ ವ್ಯವಸ್ಥೆ’ (Learning Management System) ಬೋಧನೆ-ಕಲಿಕೆಗೆ ಅನುಕೂಲವಾಗುವಂತೆ 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿಗಳನ್ನು ವಿತರಣೆ ಮಾಡುವ ಮಹತ್ವದ ಕಾರ್ಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಬೆಳಗ್ಗೆ 11 ಗಂಟೆಗೆ ಚಾಲನೆ ನೀಡಲಿದ್ದಾರೆ.
ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಯಲ್ಲಿ ತಾರತಮ್ಯ ನಿವಾರಣೆ ಹಾಗೂ ಡಿಜಿಟಲ್ ಅಂತರವೂ ಅಳಿಸಿಹಾಕುವ ಧ್ಯೇಯದೊಂದಿಗೆ ಸರಕಾರ ಇಷ್ಟು ಬೃಹತ್ ಪ್ರಮಾಣದ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿಗಳನ್ನು ವಿತರಿಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿಎ.ನ್.ಅಶ್ವತ್ಥನಾರಾಯಣ ತಿಳಿಸಿದರು.

ಈ ಕಾರ್ಯಕ್ರಮಕ್ಕಾಗಿ ಉನ್ನತ ಶಿಕ್ಷಣ ಇಲಾಖೆಯ ಜತೆಗೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳು ಕೈಜೋಡಿಸಿವೆ ಎಂದು ಅವರು ಹೇಳಿದರು.
ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಸಾಂಕೇತಿಕವಾಗಿ ಟ್ಯಾಬ್ಲೆಟ್ ಪಿಸಿಗಳನ್ನು ವಿತರಣೆ ಮಾಡುವರು. ಬಳಿಕ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಶಾಸಕರು ಆಯಾ ಜಿಲ್ಲೆಗಳಲ್ಲಿ ವಿತರಣೆ ಮಾಡುವರು. ವರ್ಚುಯಲ್ ವೇದಿಕೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಎಲ್ಲ ಸಚಿವರು ಜಿಲ್ಲೆಗಳಿಂದ ಭಾಗಿಯಾಗುವರು ಹಾಗೂ ಕೆಲ ವಿದ್ಯಾರ್ಥಿಗಳು ಕೂಡ ಅಭಿಪ್ರಾಯ ಹಂಚಿಕೊಳ್ಳುವರು ಎಂದು ಡಿಸಿಎಂ ಮಾಹಿತಿ ನೀಡಿದರು.
ಈ ಕಾರ್ಯಕ್ರಮ ಉನ್ನತ ಶಿಕ್ಷಣ ಇಲಾಖೆಯ ‘ವಿಜಯೀಭವ’, ಜ್ಞಾನನಿಧಿ ಯುಟ್ಯೂಬ್ ಚಾನೆಲ್‍ಗಳಲ್ಲಿ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಫೇಸ್‍ಬುಕ್ & ಟ್ವಿಟ್ಟರ್ ಖಾತೆಗಳಲ್ಲಿ ನೇರ ಪ್ರಸಾರ ಆಗಲಿದೆ. ವೀಕ್ಷಣೆಗೆ ಈ ಲಿಂಕ್ ಕ್ಲಿಕ್ ಮಾಡಿ..
https://youtube.com/c/VijayiBhava
https://youtube.com/c/JnanaNidhiDCE
https://www.facebook.com/Department-of-Collegiate-Education-100568944804207/
https://twitter.com/collegiate_of?s=09
ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 87 ಸರ್ಕಾರಿ ಪಾಲಿಟೆಕ್ನಿಕ್ ಹಾಗೂ 14 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 1.55 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿಗಳನ್ನು ನೀಡಲಾಗುವುದು. ಈ ಯೋಜನೆಗಾಗಿ ರಾಜ್ಯ ಸರಕಾರ 163 ಕೋಟಿ ರೂ. ವೆಚ್ಚ ಮಾಡಿದೆ. ಇದರ ಜತೆಯಲ್ಲೇ ಸರ್ಕಾರಿ ಕಾಲೇಜುಗಳಲ್ಲಿ 2,500 ಸ್ಮಾರ್ಟ್ ಕ್ಲಾಸ್ ರೂಂಗಳಿಗೆ ಚಾಲನೆ ನೀಡಲಾಗುತ್ತಿದ್ದು, ನಾಳೆಯ ಕಾರ್ಯಕ್ರಮದ ನಿಮಿತ್ತ ಬ್ಯಾಂಕ್ವೆಟ್ ಹಾಲ್‍ನಲ್ಲಿ ಸ್ಮಾರ್ಟ್ ಕ್ಲಾಸ್ ರೂಂನ ಒಂದರ ಪ್ರಾತ್ಯಕ್ಷಿಕೆಯೂ ಇರುತ್ತದೆ.
#KarnatakaLMS – ಡಿಜಿಟಲ್ ಕಲಿಕೆಯತ್ತ ಒಂದು ದಿಟ್ಟ ಹೆಜ್ಜೆ!
ನಾಳೆ(23/06/2021) ನಮ್ಮ ಸರ್ಕಾರದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ ಸ್ಮಾರ್ಟ್ ತರಗತಿಗಳ ಉದ್ಘಾಟನೆ ಹಾಗೂ ಟ್ಯಾಬ್ಲೆಟ್ ಪಿ.ಸಿ. ವಿತರಣೆ ನಡೆಯಲಿದೆ. ರಾಜ್ಯದ ಉನ್ನತ ಶಿಕ್ಷಣವನ್ನು ಮತ್ತಷ್ಟು ಉತ್ತುಂಗಕ್ಕೆ ಏರಿಸುವತ್ತ ನಮ್ಮ ನಿರಂತರ ಶ್ರಮವಿರಲಿದೆ. pic.twitter.com/piCStYm1Rw
— Dr. C.N. Ashwath Narayan (@drashwathcn) June 22, 2021
ಯಾವುದೇ ವಿದ್ಯಾರ್ಥಿ ಸಾಮಾಜಿಕ, ಆರ್ಥಿಕ ಅಥವಾ ಇನ್ನಾವುದೇ ಕಾರಣದಿಂದ ಕೋವಿಡ್ ಕಾಲದಲ್ಲಿ ಕಲಿಕೆಯಿಂದ ವಂಚಿತರಾಗಬಾರದು ಎನ್ನುವುದೇ ಟ್ಯಾಬ್ಲೆಟ್ ಪಿಸಿ ಯೋಜನೆಯ ಮುಖ್ಯ ಉದ್ದೇಶ. ಕೋವಿಡ್ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳು ಎಲ್ಲೇ ಇದ್ದರೂ ಈ ಟ್ಯಾಬ್ಲೆಟ್ ಪಿಸಿಗಳ ಮೂಲಕ ಎಲ್‍ಎಂಎಸ್ ವ್ಯವಸ್ಥೆಯಲ್ಲಿ ಕಲಿಕೆ ಮುಂದುವರಿಸಬಹುದು.
ಈಗಾಗಲೇ ಕಲಿಕಾ ನಿರ್ವಹಣಾ ವ್ಯವಸ್ಥೆ ಅನುಷ್ಠಾನಕ್ಕೆ ಬಂದಿದೆ. ಅದರಂತೆ ವಿದ್ಯಾರ್ಥಿಗಳು ಸುಲಭ ವ್ಯಾಸಂಗಕ್ಕೆ ಈ ಟ್ಯಾಬ್ಲೆಟ್ ಗಳು ಸಹಾಯಕ. ವಿದ್ಯಾರ್ಥಿಗಳ ಜ್ಞಾನಾರ್ಜನೆ ಮಟ್ಟವನ್ನೂ ಹೆಚ್ಚಿಸಲು ಇವು ಪೂರಕ. ಇಂದಿನ ಜಾಗತಿಕ ಮಟ್ಟದ ಆಧುನಿಕ ಕಲಿಕಾ ಮಟ್ಟಕ್ಕೆ ತಕ್ಕಂತೆ ಕಲಿಕೆಯನ್ನು ನಿರಂತರವಾಗಿ ಮುಂದುವರಿಸುವುದು ಹಾಗೂ ಆನ್‍ಲೈನ್ ಮೂಲಕವೇ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಪಡೆದುಕೊಳ್ಳಲು ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಗಳು ನೆರವಾಗುತ್ತವೆ.

ಈ ಟ್ಯಾಬ್ಲೆಟ್‍ಗಳು ಉತ್ತಮವಾಗಿವೆ ಹಾಗೂ ಕಲಿಕೆಗೆ ಬೇಕಾದ ಎಲ್ಲ ಫೀಚರುಗಳನ್ನು ಒಳಗೊಂಡಿವೆ. ವೈಫೈ, ಸಿಮ್ ಬಳಕೆಯಿಂದ ಇವುಗಳಿಗೆ ಇಂಟರ್ ನೆಟ್ ಸಂಪರ್ಕ ಕಲ್ಪಿಸಬಹುದು. ವೈಫೈ ಲಭ್ಯತೆ ಇಲ್ಲದ ಕಡೆಗಳಲ್ಲಿ ಸಿಮ್ ಬಳಕೆಯ ಮೂಲಕವೇ ಆನ್‍ಲೈನ್ ತರಗತಿಯಲ್ಲಿ ಪಾಲ್ಗೊಳ್ಳಬಹುದು.
ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಹುತೇಕ ಎಲ್ಲ ವಿದ್ಯಾರ್ಥಿಗಳು ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದವರಾಗಿದ್ದು ಅವರ ಕಲಿಕೆಗೆ ಹೆಗಲು ಕೊಡಬೇಕಾದ ಹೊಣೆಗಾರಿಕೆ ಸರಕಾರದ್ದು. ಇಂಥ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಗಳನ್ನು ನೀಡುವ ಮೂಲಕ ಗ್ರಾಮೀಣ ಕರ್ನಾಟಕದಲ್ಲಿ ಸರಕಾರಿ-ಖಾಸಗಿ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ನಡುವಿನ ಡಿಜಿಟಲ್ ತಾರತಮ್ಯವನ್ನು ಸಂಪೂರ್ಣವಾಗಿ ಅಳಿಸಿ ಹಾಕಿದಂತಾಗಿದೆ.

ಚಿಕ್ಕಮಗಳೂರು: ಮುಖ್ಯಮಂತ್ರಿ ಬದಲಾವಣೆ ಎಂಬುವುದು ಹಾಗೂ ಅರುಣ್ ಸಿಂಗ್ ವರದಿ ನೀಡಿದರು ಎನ್ನುವುದು ಎರಡೂ ಸುಳ್ಳು ಸುದ್ದಿ. ಅವರು ಯಾರೆಂದು ಪತ್ತೆ ಹಚ್ಚುವುದು ಕಷ್ಟದ ಕೆಲಸವಲ್ಲ. ಕಳ್ಳನ ಹೆಂಡತಿ ಯಾವತ್ತಿದ್ದರೂ ಡ್ಯಾಶ್ ಎಂದು ಸಿ.ಟಿ.ರವಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಿಡಿ ಕಾರಿದ್ದಾರೆ.

ತಾಲೂಕಿನ ಭದ್ರಾ ನದಿ ಬಳಿ ಕೊರೊನಾದಿಂದ ಸತ್ತವರು ಅಸ್ಥಿ ವಿಸರ್ಜನೆ ಬಳಿಕ ಮಾತನಾಡಿದ ಅವರು, ಕನ್ನಡದಲ್ಲಿ ಒಂದು ಗಾದೆ ಮಾತಿದೆ. ಕಳ್ಳನ ಹೆಂಡತಿ ಡ್ಯಾಶ್ ಅಂತೇಳಿ. ಅವರನ್ನು ಪತ್ತೆ ಹಚ್ಚುವುದು ಕಷ್ಟದ್ದೇನಲ್ಲ. ಎಷ್ಟು ದಿನ ಈ ರೀತಿ ಮುಚ್ಚಿಟ್ಟು ಸುಳ್ಳು ಸುದ್ದಿ ಹಬ್ಬಿಸಲು ಆಗುತ್ತೆ. ಒಂದು ದಿನ ಪತ್ತೆ ಆಗೇ ಆಗುತ್ತೆ. ಪಾರ್ಟಿ ಎಲ್ಲವನ್ನೂ ಗಮನಿಸುತ್ತಿರುತ್ತೆ, ಯಾವಾಗ ಯಾವ ಕ್ರಮ ತೆಗೆದುಕೊಳ್ಳಬೇಕೋ ತೆಗೆದುಕೊಳ್ಳುತ್ತದೆ ಎಂದರು.

ಉದ್ದೇಶ ಪೂರ್ವಕವಾಗೋ, ದುರುದ್ದೇಶ ಪೂರ್ವಕವಾಗೋ ಸುಳ್ಳು ಸುದ್ದಿಗಳನ್ನ ಹಬ್ಬಿಸುತ್ತಿದ್ದಾರೆ. ಅದರಲ್ಲಿ ಮುಖ್ಯಮಂತ್ರಿ ಬದಲಾವಣೆ ಎನ್ನುವುದು ಒಂದು ಸುಳ್ಳು ಸುದ್ದಿ. ಅರುಣ್ ಸಿಂಗ್ ವರದಿ ನೀಡಿದರು ಎಂಬುವುದು ಕೂಡ ಸುಳ್ಳು ಸುದ್ದಿ ಎಂದರು. ಅರುಣ್ ಸಿಂಗ್ ನಾನು ಕಳೆದ 30 ವರ್ಷಗಳ ಒಡನಾಡಿಗಳು. ಅವರಿಗೆ ಫೋನ್ ಮಾಡಿ ಮಾತನಾಡಿದೆ. ಅವರು ಮೂರು ದಿನ ಕೇಂದ್ರದಲ್ಲೇ ಇಲ್ಲ. ಆದರೆ, ಕೆಲವು ಪ್ರಮುಖ ಪತ್ರಿಕೆಗಳು, ಸುದ್ದಿ ವಾಹಿನಿಗಳು ವರದಿ ನೀಡಿದ್ದಾರೆ ಎಂದು ಸುಳ್ಳು ಸುದ್ದಿಗಳನ್ನ ಹಬ್ಬಿಸಿದರು. ಇದರ ಹಿಂದೆ ಯಾರದ್ದೋ ಷಡ್ಯಂತ್ರದ ಕೈವಾಡವಿರುವಂತೆ ಕಾಣುತ್ತಿದೆ ಎಂದು ನುಡಿದರು.

ಅಪಪ್ರಚಾರ ಮಾಡಬೇಕೆಂಬ ಷಡ್ಯಂತ್ರ ಹಾಗೂ ಒಂದಲ್ಲ ಒಂದು ರೀತಿ ಸುದ್ದಿಯನ್ನ ಜೀವಂತವಾಗಿಡಬೇಕೆಂಬ ಕಾರಣಕ್ಕೆ ಈ ರೀತಿ ಮಾಡುತ್ತಿದ್ದಾರೆ. ಹಾಗಾಗಿ, ಇದರ ಹಿಂದೆ ಒಂದು ಷಡ್ಯಂತ್ರ ಇದೆ. ಷಡ್ಯಂತ್ರದ ಕಾರಣದಿಂದಾಗಿಯೇ ಸುಳ್ಳು ಸುದ್ದಿಗಳನ್ನು ಬಿಡುವ ಕೆಲಸ ಮಾಡುತ್ತಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಮುಖ್ಯಮಂತ್ರಿ ಕುರ್ಚಿಗೆ ಡಿಕೆಶಿ ಬಹಳ ದಿನದಿಂದ ಕಾಯ್ತಿದ್ದಾರೆ: ಸಂಗಣ್ಣ
ಸುದ್ದಿ ಬಿಟ್ಟು ಚರ್ಚೆ ಹುಟ್ಟು ಹಾಕುತ್ತಾರೆ. ಚರ್ಚೆಗೆ ಬಿಟ್ಟು ಕ್ರಿಯೆ-ಪ್ರತಿಕ್ರಿಯೆ ಕೇಳುತ್ತಾರೆ. ಕ್ರಿಯೆ-ಪ್ರತಿಕ್ರಿಯ ಮೂಲಕ ಅದೇ ಜೀವಂತವಾಗಿರುತ್ತದೆ ಎಂದು ಹೇಳಿದರು. ನಾನು ಮೂರು ದಿನ ದೆಹಲಿಯಲ್ಲಿ ಇಲ್ಲ. ಯಾವ ಪತ್ರಿಕೆಯಲ್ಲಿ ಬಂದಿದೆ, ನನಗೆ ಗೊತ್ತಿಲ್ಲ. ಡಿಟೇಲ್ಸ್ ಕೊಡು ಎಂದು ಅರುಣ್ ಸಿಂಗ್ ಅವರೇ ನನಗೆ ಹೇಳಿದ್ದಾರೆ. ಸುದ್ದಿ ಹುಟ್ಟುಹಾಕಿದವರು ಯಾರು. ಸುದ್ದಿಯ ಸೃಷ್ಠಿಕರ್ತರು ಯಾರೆಂದು ಪ್ರಶ್ನಿಸಿದರು.

ಸುಳ್ಳು ಸುದ್ದಿಯ ಸೃಷ್ಟಿಕರ್ತರು ಹಿಂಗೇಲ್ಲಾ ಸೃಷ್ಟಿ ಮಾಡುವ ಕೆಲಸ ಮಾಡುತ್ತಿರುತ್ತಾರೆ. ಕೆಲಸ ಇಲ್ಲದವರು ಅದನ್ನು ಮಾಡುತ್ತಾರೆ. ನಾವು ಜನರ ಮಧ್ಯೆ ಇದ್ದು, ಕೆಲಸ ಮಾಡುವವರು. ಕ್ಷೇತ್ರಕ್ಕೆ ಬಂದರೆ ಜನರ ಜೊತೆ ಇರುತ್ತೇವೆ. ಇಲ್ಲವಾದರೆ ಸಂಘಟನೆ ಕೆಲಸದಲ್ಲಿ ಇರುತ್ತೇವೆ. ನಮಗೆ ಯೋಚನೆ ಮಾಡಲು ಪರುಸೊತ್ತು ಇರಲ್ಲ. ಒಂದಲ್ಲ ಒಂದು ಊರಲ್ಲಿ ಯಾವುದಾದರೂ ಚಟುವಟಿಕೆಯಲ್ಲಿ ಇರುತ್ತೇವೆ. ಕೆಲಸ ಇಲ್ಲದವರಿಗೆ ಈ ರೀತಿ ಸೃಷ್ಟಿ ಮಾಡುವುದೇ ಕೆಲಸವಾಗಿರುತ್ತೆ ಎಂದರು.

ಬೆಂಗಳೂರು : ಪ್ರತಿ ಮನೆಗೆ ನಲ್ಲಿ ನೀರಿನ ಸಂಪರ್ಕ ಒದಗಿಸುವ ಜಲಜೀವನ್ ಮಿಷನ್ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 25 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸಲು ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜಲಜೀವನ್ ಮಿಷನ್ ಯೋಜನೆ ಪ್ರಗತಿ ಪರಿಶೀಲನೆ ನಡೆಸಿದರು. ರಾಜ್ಯದಲ್ಲಿ 91.91 ಲಕ್ಷ ಗ್ರಾಮೀಣ ಕುಟುಂಬಗಳಿದ್ದು, ಈಗಾಗಲೇ 28 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಕ್ರಿಯಾತ್ಮಕ ನಳಗಳ ಸಂಪರ್ಕ ಒದಗಿಸಲಾಗಿದೆ. 2021-22ರಲ್ಲಿ 25.17 ಲಕ್ಷ ಮನೆಗಳಿಗೆ ಸಂಪರ್ಕ ಒದಗಿಸುವ ಗುರಿಯನ್ನು ನಿಗದಿತ ಕಾಲಮಿತಿಯಲ್ಲಿ ಸಾಧಿಸುವಂತೆ ನಿರ್ದೇಶನ ನೀಡಿದರು.

ರಾಜ್ಯದಲ್ಲಿ ಈವರೆಗೆ 435 ಬಹುಗ್ರಾಮ ಯೋಜನೆಗಳು ಪೂರ್ಣಗೊಂಡಿವೆ. 69 ಯೋಜನೆಗಳು ಪ್ರಗತಿಯಲ್ಲಿದ್ದು, 30 ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, 2021-22ನೇ ಸಾಲಿನಲ್ಲಿ 161 ಯೋಜನೆಗಳ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಮುಖ್ಯಮಂತ್ರಿ @BSYBJP ರವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಜಲಜೀವನ್ ಮಿಷನ್ ಯೋಜನೆ ಪ್ರಗತಿ ಪರಿಶೀಲನಾ ಸಭೆಯ ಪ್ರಮುಖಾಂಶಗಳು;#JalJeevanMission @PMOIndia @MoJSDoWRRDGR @gssjodhpur @jaljeevan_ pic.twitter.com/0Nwc22LlXF
— CM of Karnataka (@CMofKarnataka) June 22, 2021
ರಾಜ್ಯದಲ್ಲಿ ನದಿ ಮೂಲದಿಂದ ನೀರು ದೊರೆಯುವ ಸ್ಥಳದಲ್ಲಿ ಆದ್ಯತೆಯ ಮೇರೆಗೆ ಅನುಷ್ಠಾನಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಈ ಯೋಜನೆ ಪ್ರಧಾನ ಮಂತ್ರಿಯವರ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ನಿಗದಿತ ಕಾಲಮಿತಿಯೊಳಗೆ ಅನುಷ್ಠಾನಗೊಳಿಸಿ. ಈ ಕುರಿತು ಎಲ್ಲ ಜಿಲ್ಲೆಗಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ನಡೆಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ಇದನ್ನೂ ಓದಿ: ಕೋವಿಡ್ 3ನೇ ಅಲೆ ತಪ್ಪಿಸಲು ಸಿದ್ಧತೆ ಕೈಗೊಳ್ಳಿ: ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅಧಿಕಾರಿಗಳಿಗೆ ಸೂಚನೆ
ಮುಖ್ಯಮಂತ್ರಿ @BSYBJP ರವರ ಅಧ್ಯಕ್ಷತೆಯಲ್ಲಿ ಇಂದು ಜಲ್ ಜೀವನ್ ಮಿಷನ್ ಕುರಿತಂತೆ ಸಭೆ ಜರುಗಿತು. (1/2) #JalJeevanMission @PMOIndia @MoJSDoWRRDGR @gssjodhpur @jaljeevan_ pic.twitter.com/yYdl1oghob
— CM of Karnataka (@CMofKarnataka) June 22, 2021
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ರಾಜ್ಯದಲ್ಲಿ ತಗ್ಗಿದ ಮಹಾಮಾರಿ – ಇಂದು 3,709 ಕೊರೊನಾ ಪ್ರಕರಣ

ಬೆಂಗಳೂರು: ಹನಿ ನೀರಾವರಿ ಸಬ್ಸಿಡಿ ಮುಂದುವರಿಸಲು ಮುಖ್ಯಮಂತ್ರಿಗಳನ್ನು ಕೋರಿದ್ದು, ಇದಕ್ಕೆ ಸಕಾರಾತ್ಮಕ ಸ್ಪಂದನೆ ಲಭಿಸಿದೆ ಅಂತಾ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು ಈ ಹಿಂದಿನಂತೆ ಶೇ 90ರಷ್ಟು ಸಬ್ಸಿಡಿ ಮುಂದುವರಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ರೈತರಿಗೆ ನೀಡುವ ಶೂನ್ಯ ಬಡ್ಡಿದರದ ಸಾಲವನ್ನು ಪ್ರತಿಯೊಬ್ಬ ಅರ್ಹ ರೈತರಿಗೂ ನೀಡಲು ಮನವಿ ಮಾಡಿದ್ದಾಗಿ ಕೋರಲಾಗಿದೆ. ಸಕ್ಕರೆ ಕಾರ್ಖಾನೆಗಳ ಬಾಕಿ ಬಿಲ್‍ಗಳನ್ನು ಬೇಗನೆ ಪಾವತಿಸಲು ಸೂಚಿಸುವಂತೆ ಕೋರಿದ್ದೇವೆ ಎಂದರು.

ರೈತರ ಉತ್ಪನ್ನಗಳ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ಸಕಾಲದಲ್ಲಿ ತೆರೆಯುವಂತೆ ವಿನಂತಿಸಲಾಗಿದೆ ಎಂದು ವಿವರಿಸಿದರು. ಅಲ್ಲದೆ ಸಾಮಾಜಿಕ, ವೈದ್ಯಕೀಯ ಮತ್ತು ಆರ್ಥಿಕ ಸುರಕ್ಷೆಗೆ ನಮ್ಮ ಪಕ್ಷ ಗಣನೀಯ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು. ಮಾಸ್ಕ್, ಸ್ಯಾನಿಟೈಸರ್ ವಿತರಣೆ, ಸಾಮಾಜಿಕ ಜಾಗೃತಿ ಮೂಡಿಸುವುದು, ಲಸಿಕೆ ಸಂಬಂಧ, ಮನೆಮದ್ದು, ವ್ಯಾಯಾಮ ಜಾಗೃತಿ ಮೂಡಿಸಲಾಗುತ್ತಿದೆ. ಆರ್ಥಿಕ ಸುರಕ್ಷೆಗಾಗಿಯೂ ಕೆಲಸ ನಡೆದಿದೆ. ಕೊರೊನಾ ಸಂದರ್ಭದಲ್ಲಿ ಅನೇಕ ಜನರನ್ನು ನಾವು ಕಳೆದುಕೊಂಡಿದ್ದೇವೆ. ಜನರಿಗೆ ನೆರವಾಗಲು ಪ್ರಧಾನಮಂತ್ರಿ ಜೀವನ್ ಜ್ಯೋತಿ ವಿಮಾ ಯೋಜನೆ ಕುರಿತು (ಎರಡು ಲಕ್ಷ ವಿಮೆ), ಪ್ರಧಾನಮಂತ್ರಿ ಸುರಕ್ಷಾ ವಿಮೆ ಯೋಜನೆ ಕುರಿತು ಜಾಗೃತಿ ಮೂಡಿಸುತ್ತಿದ್ದೇವೆ ಎಂದರು.

ರೈತ ಮೋರ್ಚಾವು ರಾಜ್ಯದಲ್ಲಿ ವಿವಿಧ ಮೋರ್ಚಾಗಳ ಸಹಯೋಗದಲ್ಲಿ 11 ಲಕ್ಷ ಸಸಿ ನೆಡುವ ಕಾರ್ಯಕ್ರಮವನ್ನು ಅರಣ್ಯ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಿದೆ. ಡಾ. ಶ್ಯಾಮಪ್ರಸಾದ ಮುಖರ್ಜಿ ಅವರ ಬಲಿದಾನ- ಜನ್ಮದಿನದ ನಡುವಿನ ಅವಧಿಯಲ್ಲಿ ಈ ಕಾರ್ಯ ನೆರವೇರಲಿದೆ ಎಂದರು. ಕೇಂದ್ರ ಸರ್ಕಾರವು ಡಿಎಪಿ ಗೊಬ್ಬರದ ದರ ಏರದಂತೆ ತಡೆಯಲು ಹೆಚ್ಚುವರಿ ಸಬ್ಸಿಡಿ ನೀಡಿದ್ದು, ಈ ಮೂಲಕ 1,200 ರೂಪಾಯಿ ದರದಲ್ಲಿ ಒಂದು ಬ್ಯಾಗ್ ಡಿಎಪಿ ಲಭಿಸುವಂತೆ ಮಾಡಿದೆ. ನ್ಯಾನೋ ಯೂರಿಯಾ ಬಿಡುಗಡೆ ಮಾಡಿದೆ. ಕಡಿಮೆ ಖರ್ಚಿನಲ್ಲಿ ಇದು ಲಭಿಸಲಿದೆ. ಇದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ಕೃಷಿ ಡಿಪ್ಲೊಮಾ, ಕೃಷಿ ಬಿಎಸ್ಸಿ, ಸಮಾನ ಪದವಿ ಕೋರ್ಸ್ ಗಳ ಪ್ರವೇಶದಲ್ಲಿ ಕೃಷಿಕರು ಮತ್ತು ಕೃಷಿ ಕಾರ್ಮಿಕರ ಮಕ್ಕಳಿಗೆ ಮೀಸಲು ಪ್ರಮಾಣವನ್ನು ಶೇ 40ರಿಂದ ಶೇ 50ಕ್ಕೆ ಹೆಚ್ಚಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ರಾಜ್ಯ ಸರಕಾರ ನಿನ್ನೆ ನಿರ್ಧರಿಸಿದೆ. ಇದೊಂದು ಮಹತ್ವದ ಕ್ರಮವಾಗಿದ್ದು, ಈ ಸಂಬಂಧ ಮುಖ್ಯಮಂತ್ರಿಗಳಿಗೆ ಕೃಷಿಕರ ಪರವಾಗಿ ಧನ್ಯವಾದಗಳನ್ನು ಸಮರ್ಪಿಸುವುದಾಗಿ ಹೇಳಿದರು. ಇದೇ ವೇಳೆ ಪಕ್ಷದ ರಾಜ್ಯ ಕಾರ್ಯದರ್ಶಿಗಳಾದ ಜಗದೀಶ್ ಹಿರೇಮನೆ, ರಾಜ್ಯ ಮಾಧ್ಯಮ ಸಂಚಾಲಕರಾದ ಕರುಣಾಕರ ಖಾಸಲೆ ಅವರು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.
ಇಂದು ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಂದರ್ಭ pic.twitter.com/qyptEZxfTr
— Iranna Kadadi-MP (@Irannakadadi_MP) June 22, 2021

ಬೆಂಗಳೂರು: ಅಥಣಿಯ ಪಶುವೈದ್ಯಕೀಯ ಮಹಾವಿದ್ಯಾಲಯಕ್ಕೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚುವರಿಯಾಗಿ ರೂ.36 ಕೋಟಿ ನೀಡಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿರುವುದಕ್ಕೆ ಸಚಿವ ಪ್ರಭು ಚವ್ಹಾಣ್ ಹರ್ಷ ವ್ಯಕ್ತಪಡಿಸಿದ್ದಾರೆ.
ಅಥಣಿಯಲ್ಲಿ ಕಾರ್ಯನಿವಹಿಸುತ್ತಿರುವ ಪಶುವೈದ್ಯಕೀಯ ಮಹಾವಿದ್ಯಾಲಯದ ಅಭಿವೃದ್ಧಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು ಅಲ್ಲದೇ ವಿದ್ಯಾಲಯದ ಕಾಮಗಾರಿಗಳು ಸಹ ನಿಧಾನಗತಿಯಲ್ಲಿ ಆಗಿರುವುದರಿಂದ ಇಲ್ಲಿಯವರೆಗೆ ಪ್ರವೇಶಾತಿ ಆರಂಭವಾಗಿರಲಿಲ್ಲ. ಈ ಭಾಗದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕಳೆದ ಅವಧಿಯಲ್ಲಿ ಘೋಷಣೆ ಮಾಡಿದ ಪಶುವೈದ್ಯಕೀಯ ಮಹಾವಿದ್ಯಾಲಯ ನಂತರದಲ್ಲಿ ಬಂದ ಸರ್ಕಾರಗಳು ಅನುದಾನ ನೀಡದಿರುವುದರಿಂದ ಅಭಿವೃದ್ಧಿ ಕುಂಠಿತವಾಗಿತ್ತು. ಈ ಕುರಿತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರರೊಂದಿಗೆ ಗಂಭೀರವಾಗಿ ಚರ್ಚೆ ಸಹ ನಡೆಸಲಾಗಿತ್ತು.
ಮಹಾವಿದ್ಯಾಲದ ಪ್ರಥಮ ಹಾಗೂ ದ್ವಿತೀಯ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, MSVE (Minimum Standard of Veterinary Education Regulation 2016)ರ ಅನ್ವಯ ಬೇಕಾದ ಕನಿಷ್ಠ ಮೂಲಭೂತ ಸೌಕರ್ಯಗಳಾದ ಪ್ರಾಯೋಗಿಕ ಉಪಕರಣಗಳು, ಪಿಠೋಪಕರಣಗಳು ಹಾಗೂ ಇತರೇ ಸೌಕರ್ಯಗಳಿಗೆ ರೂ.137 ಕೋಟಿ ಮೊತ್ತ ಬೇಕಿದ್ದು, ಅದರಲ್ಲಿ ಈಗಾಗಲೇ ರೂ.50 ಕೋಟಿ ಬಿಡುಗಡೆ ಮಾಡಲಾಗಿದ್ದು, ಪರಿಷ್ಕೃತ ಹೆಚ್ಚುವರಿ ರೂ.82 ಕೋಟಿಯಲ್ಲಿ ರೂ.36 ಕೋಟಿ ಸದ್ಯ ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
ಅಥಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಶುವೈದ್ಯಕೀಯ ಮಹಾವಿದ್ಯಾಲಯ ಮುಂಬೈ ಕರ್ನಾಟಕ ಭಾಗದ ಅಭಿವೃದ್ಧಿಗೆ ಮತ್ತು ಈ ಭಾಗದ ನಿರುದ್ಯೋಗಿ ಯುವಕರಿಗೆ ಮತ್ತು ಮಹಿಳೆಯರಿಗೆ ಕೃಷಿಯ ಜೊತೆಗೆ ಪಶುಪಾಲನೆಯಲ್ಲಿ ಉದ್ಯೋಗಾವಕಾಶ ಕಂಡುಕೊಳ್ಳಲು ಸಹಕಾರಿಯಾಗಿದೆ ಎಂದು ಸಚಿವರು ಹೇಳಿದ್ದಾರೆ. ಇದನ್ನೂ ಓದಿ: ಡಾ.ದೇವಿಶೆಟ್ಟಿ ವರದಿ, ಪರಿಶೀಲನೆ ಬಳಿಕ ಮುಂದಿನ ನಿರ್ಧಾರ: ಸುರೇಶ್ ಕುಮಾರ್