Tag: ಸಿಎಂ ಯಡಿಯೂರಪ್ಪ

  • ಕೊರೊನಾ 3ನೇ ಅಲೆಗೆ ಸಿದ್ಧತೆ ಮಾಡಿಕೊಳ್ಳಿ: ಸಿಎಂಗೆ ವಿನಯ್ ಗುರೂಜಿ ಸಲಹೆ

    ಕೊರೊನಾ 3ನೇ ಅಲೆಗೆ ಸಿದ್ಧತೆ ಮಾಡಿಕೊಳ್ಳಿ: ಸಿಎಂಗೆ ವಿನಯ್ ಗುರೂಜಿ ಸಲಹೆ

    ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬರುವ ಹೊತ್ತಿನಲ್ಲೆ 3ನೇ ಅಲೆಗೂ ರಾಜ್ಯ ಸರ್ಕಾರ ಸಕಲ ಸಿದ್ಧತೆಗಳನ್ನ ಮಾಡಿಕೊಳ್ಳಬೇಕು ಅಂತ ಅವಧೂತ ವಿನಯ್ ಗುರೂಜಿ ಸಿಎಂ ಯಡಿಯೂರಪ್ಪರಿಗೆ ಸಲಹೆ ನೀಡಿದ್ದಾರೆ.

    ಮುಖ್ಯಮಂತ್ರಿಗಳ ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ ವಿನಯ್ ಗುರೂಜಿ, 3ನೇ ಅಲೆ ಸಾಕಷ್ಟು ತೊಂದರೆ ಕೊಡುತ್ತೆ ಅಂತ ವಿಜ್ಞಾನ ವಲಯ ಹೇಳುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಎಚ್ಚರ ತಪ್ಪದೆ ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು. ಎರಡನೇ ಅಲೆಯಲ್ಲಿ ಆದ ಸಮಸ್ಯೆ ಆಗದಂತೆ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಅಂತ ಸಲಹೆ ನೀಡಿದರು. ಇದಲ್ಲದೆ ಪ್ರತಿ ತಾಲೂಕಿಗೂ ಒಂದೊಂದು ಮಲ್ಪಿ ಸ್ಪೆಷಲ್ ಆಸ್ಪತ್ರೆಗಳನ್ನು ಸರ್ಕಾರ ಪ್ರಾರಂಭ ಮಾಡಬೇಕು ಅಂತ ಮನವಿ ಮಾಡಿದ್ರು.

    ಇದೇ ವೇಳೆ ತಮ್ಮ ಜಿಲ್ಲೆಯ ಕೆಲ ಸಮಸ್ಯೆಗಳನ್ನ ಪರಿಹಾರ ಮಾಡುವಂತೆ ವಿನಯ್ ಗುರೂಜಿ ಅವರು ಸಿಎಂ ಯಡಿಯೂರಪ್ಪಗೆ ಮನವಿ ಮಾಡಿದರು. ಮಲೆನಾಡು ಸೇರಿದಂತೆ ಹಲವು ಕಡೆ ಅಂತರ್ಜಲದ ಮಟ್ಟ ಕುಸಿದಿದೆ. ನೀಲಗಿರಿ, ಅಕೇಶಿಯ ಪ್ಲಾಂಟೇಶ್ ನಿಂದ ಸಾಕಷ್ಟು ಸಮಸ್ಯೆ ಆಗಿದೆ. ಹೀಗಾಗಿ ಅಕೇಶಿಯಾ ಮತ್ತು ನೀಲಗಿರಿ ಮಗಳನ್ನ ತೆಗೆದು ಹಣ್ಣಿನ ಗಿಡಗಳನ್ನ ಬೆಳಿಸಿದ್ರೆ ಪ್ರಾಣಿ-ಪಕ್ಷಿಗಳಿಗೆ ಅನುಕೂಲ ಆಗುತ್ತೆ ಅಂತ ಮನವಿ ಮಾಡಿದರು.  ಇದನ್ನೂ ಓದಿ: ಪ್ರಯಾಣಿಕರ ಪಾಸ್ ಅವಧಿ ವಿಸ್ತರಿಸಿದ ಬಿಎಂಟಿಸಿ

    ಇದೇ ವೇಳೆ ಕೊಪ್ಪದಲ್ಲಿ ಇರೋ ಆಸ್ಪತ್ರೆಯನ್ನ ಮೇಲ್ದರ್ಜೆ ಏರಿಸಬೇಕು. ಕೊಪ್ಪದಿಂದ ಶಿವಮೊಗ್ಗ ಬರೋದಕ್ಕೆ ಒಂದೂವರೆ ಗಂಟೆಯಾಗುತ್ತೆ. ಇದ್ರಿಂದ ಸಾಕಷ್ಟು ಸಮಸ್ಯೆ ಆಗ್ತಿದೆ. ಹೀಗಾಗಿ ಅಲ್ಲಿನ ಆಸ್ಪತ್ರೆಯನ್ನ ಮೇಲ್ದರ್ಜೆಗೆ ಏರಿಸಬೇಕು ಅಂತ ಮನವಿ ಮಾಡಿಕೊಂಡರು. ಇದನ್ನೂ ಓದಿ: ಸೋಮವಾರದಿಂದ ಹೊಸ ರೂಲ್ಸ್, ಹೊಸ ಲೈಫ್ – ಅನ್‍ಲಾಕ್ 2.Oಗೆ ಬೆಂಗಳೂರಿಗರ ಸಿದ್ಧತೆ

  • ಪ್ರವಾಹ ಪರಿಸ್ಥಿತಿ ಎದುರಿಸಲು ಅಗತ್ಯ ಕ್ರಮ ಕೈಗೊಳ್ಳಿ – ಯಾದಗಿರಿ ಜಿಲ್ಲಾಡಳಿತಕ್ಕೆ ಬಿಎಸ್‍ವೈ ಸೂಚನೆ

    ಪ್ರವಾಹ ಪರಿಸ್ಥಿತಿ ಎದುರಿಸಲು ಅಗತ್ಯ ಕ್ರಮ ಕೈಗೊಳ್ಳಿ – ಯಾದಗಿರಿ ಜಿಲ್ಲಾಡಳಿತಕ್ಕೆ ಬಿಎಸ್‍ವೈ ಸೂಚನೆ

    – ಜಿಲ್ಲಾಡಳಿತ ಹಿರಿಯ ಅಧಿಕಾರಿಗಳ ಜೊತೆಗೆ ಸಿಎಂ ವೀಡಿಯೋ ಸಂವಾದ

    ಯಾದಗಿರಿ: ಮಹಾರಾಷ್ಟ್ರದಲ್ಲಿ ಅಪಾರ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ, ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಜೊತೆಗೆ ಸಿಎಂ ಯಡಿಯೂರಪ್ಪನವರು ವೀಡಿಯೋ ಸಂವಾದ ಮೂಲಕ ಸೂಚನೆ ನೀಡಿದ್ದಾರೆ.

    ಜಿಲ್ಲಾಧಿಕಾರಿ ಡಾ.ರಾಗಾಪ್ರಿಯರೊಂದಿಗೆ ವೀಡಿಯೋ ಸಂವಾದ ನಡೆಸಿದ ಯಡಿಯೂರಪ್ಪನವರು, ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸಲು ಅಧಿಕಾರಿಗಳು ಸನ್ನದ್ದರಾಗಬೇಕು, ಸಹಾಯವಾಣಿ ಕೇಂದ್ರ, ಕಾಳಜಿ ಕೇಂದ್ರ ಆರಂಭ ಜೊತೆಗೆ ಅಗತ್ಯ ತಯಾರಿ ಮಾಡಿಕೊಂಡು ಎಲ್ಲಾ ರೀತಿಯ ಸಿದ್ಧತೆಯಲ್ಲಿ ತೊಡಗಿಕೊಳ್ಳಿ ಎಂದು ಸೂಚನೆ ನೀಡಿದರು. ಇದನ್ನೂ ಓದಿ: ಅನ್‍ಲಾಕ್ ಬೆನ್ನಲ್ಲೇ ಮತ್ತೆ ಮಹಾನಗರಗಳತ್ತ ಯಾದಗಿರಿ ಜನರ ಮಹಾ ವಲಸೆ

    ವೀಡಿಯೋ ಸಂವಾದದ ವೇಳೆ ಡಿಸಿ ರಾಗಪ್ರಿಯ ಜಿಲ್ಲಾಡಳಿತ ಕೈಗೊಂಡ ಮುನ್ನೆಚ್ಚರಿಕೆ ಕ್ರಮಗಳನ್ನು ವಿವರಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಂವಾದದ ವ್ಯವಸ್ಥೆ ಮಾಡಲಾಗಿತ್ತು. ಸಂವಾದದಲ್ಲಿ ಸಿಎಸ್ ಪಿ ವೇದಮೂರ್ತಿ, ಜಿ.ಪಂ ಸಿಇಓ ಶಿಲ್ಲಾ ಶರ್ಮಾ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.

  • ಬಿಎಂಟಿಸಿ ಬಸ್ ಬಿಡಿ – ಸಿಎಂಗೆ ಪತ್ರದ ಮೂಲಕ ಹಲವು ಒಕ್ಕೂಟಗಳ ಮನವಿ

    ಬಿಎಂಟಿಸಿ ಬಸ್ ಬಿಡಿ – ಸಿಎಂಗೆ ಪತ್ರದ ಮೂಲಕ ಹಲವು ಒಕ್ಕೂಟಗಳ ಮನವಿ

    ಬೆಂಗಳೂರು: ಬಿಎಂಟಿಸಿ ಬಸ್‍ಗಳನ್ನು ಪುನಾರಂಭಿಸುವಂತೆ ಬೆಂಗಳೂರಿನ ಹಲವು ಒಕ್ಕೂಟಗಳು ಸಿಎಂ ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದಾರೆ.

    ಕೊರೊನಾ ಲಾಕ್‍ಡೌನ್ ನಿಂದ ರಾಜ್ಯದ ನಾಲ್ಕು ನಿಗಮಗಳ ಬಸ್ ಸಂಚಾರವನ್ನು ನಿಲ್ಲಿಸಲಾಗಿದೆ. ಆದರೆ ಜೂನ್ 14ರಿಂದ ಅನ್‍ಲಾಕ್ ಪಾರ್ಟ್-1 ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್ ಸೇವೆ ಪುನರಾಂಭಿಸುವಂತೆ ಬೆಂಗಳೂರಿನ ಹಲವು ಒಕ್ಕೂಟಗಳು ಸಿಎಂ ಹಾಗೂ ಸಾರಿಗೆ ಸಚಿವರಿಗೆ ಪತ್ರ ಬರೆದಿದ್ದಾರೆ. ಬಿಎಂಟಿಸಿ ಬಸ್ ಗಳನ್ನು ಆದ್ಯತೆಯ ಮೇರೆಗೆ ಪುನರಾರಂಭಿಸಿ ಎಂದು ಒತ್ತಾಯ ಮಾಡಿದ್ದಾರೆ.

    ಕೊರೊನಾ ಲಾಕ್‍ಡೌನ್ ನಲ್ಲಿ ಸಾವಿರಾರು ಜನ ಕೆಲಸವಿಲ್ಲದೆ ಪರದಾಡಿದ್ದಾರೆ. ಈಗ ಕಟ್ಟಡ ನಿರ್ಮಾಣ ಕಾರ್ಮಿಕರು, ಭದ್ರತಾ ಸಿಬ್ಬಂದಿ, ಆಸ್ಪತ್ರೆ ಸೌಲಭ್ಯಗಳ ಸಿಬ್ಬಂದಿಗಳು, ಗೃಹಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು ಮತ್ತೆ ಕೆಲಸ ಆರಂಭಿಸಿದ್ದಾರೆ. ಆದರೆ ಕೆಲಸಕ್ಕೆ ಹೋಗಲು ಬಸ್ಸುಗಳು ಇಲ್ಲ. ಬಸ್ ಇಲ್ಲದೇ ಕೆಲಸಕ್ಕೆ ಹೇಗೆ ಹೋಗುವುದು? ಕೆಲಸಕ್ಕೆ ಹೋಗಲು ಸ್ವಂತ ವಾಹನವಿಲ್ಲ. ತಕ್ಷಣವೇ 6,300 ಬಸ್ಸುಗಳನ್ನು ಆರಂಭಿಸಬೇಕು. ಜೊತೆಗೆ ಬಸ್ಸುಗಳ ಟಿಕೆಟ್ ದರಗಳನ್ನು ರೂ.5 ಹಾಗೂ ರೂ.10ರಂತೆ ಕೇವಲ ಒಂದು ಅಥವಾ ಎರಡು ನಿಗದಿತ/ ಫ್ಲ್ಯಾಟ್ ದರಗಳಿಗೆ ಕಡಿಮೆಗೊಳಿಸಬೇಕು ಹಾಗೂ ಬಸ್ ಪಾಸ್ ಖರೀದಿಸಿದ ಪ್ರಯಾಣಿಕರಿಗೆ ಪರಿಹಾರ ನೀಡಬೇಕೆಂದು ಪತ್ರದಲ್ಲಿ ಆಗ್ರಹ ಮಾಡಲಾಗಿದೆ. ಇದನ್ನೂ ಓದಿ: ಕೋಕ್ ಬಾಟಲ್ ಕೆಳಗಿಟ್ಟ ರೊನಾಲ್ಡೊ- ಕಂಪನಿಗೆ 29 ಸಾವಿರ ಕೋಟಿ ನಷ್ಟ

    ಈ ಪತ್ರವನ್ನು ಪ್ರಮುಖವಾಗಿ ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ, ಗಾರ್ಮೆಂಟ್ಸ್ ಹಾಗೂ ಟೆಕ್ಸ್ ಟೈಲ್ ವರ್ಕರ್ಸ್ ಯೂನಿಯನ್, ಕರ್ನಾಟಕ ಗಾರ್ಮೆಂಟ್ಸ್ ವರ್ಕರ್ಸ್ ಯೂನಿಯನ್, ಅಖಿಲ ಕರ್ನಾಟಕ ವಯೋವೃದ್ದರ ಒಕ್ಕೂಟ, ಮನೆ ಗೆಲಸ ಕಾರ್ಮಿಕರ ಯೂನಿಯನ್, ಡೊಮೆಸ್ಟಿಕ್ ವರ್ಕರ್ಸ್ ರೈಟ್ಸ್ ಯೂನಿಯನ್, ಕರ್ನಾಟಕ ಸ್ಲಂ ಜನರ ಸಂಘಟನೆ,ಸಾವಿತ್ರಿ ಬಾಯಿ ಫುಲೆ ಮಹಿಳಾ ಸಂಘಟನೆ, ಬೆಂಗಳೂರು ಜಿಲ್ಲಾ ಬೀದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದಿಂದ ಬರೆಯಲಾಗಿದೆ. ಇದನ್ನೂ ಓದಿ: 300 ಚೀಲ ನಕಲಿ ರಸಗೊಬ್ಬರ ಪತ್ತೆ

  • ಬಿಎಸ್‍ವೈ ಆಪರೇಷನ್ ಕಮಲದ ಪಿತಾಮಹ: ಶಾಸಕ ಭೀಮಾನಾಯ್ಕ್

    ಬಿಎಸ್‍ವೈ ಆಪರೇಷನ್ ಕಮಲದ ಪಿತಾಮಹ: ಶಾಸಕ ಭೀಮಾನಾಯ್ಕ್

    ವಿಜಯನಗರ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಆಪರೇಷನ್ ಕಮಲದ ಪಿತಾಮಹ ಇದ್ದಂತೆ ಎಂದು ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಎಸ್. ಭೀಮನಾಯ್ಕ್ ಹೇಳಿದ್ದಾರೆ.

    ದೇಶದಲ್ಲಿ ಜಾತಿಗಳ ಮಧ್ಯೆ ಕಲಹ ತಂದಿಟ್ಟು ಸಮಾಜದಲ್ಲಿನ ಸಹಬಾಳ್ವೆಗೆ ಬೆಂಕಿಯಿಟ್ಟು ಪೆಟ್ರೋಲ್ ಸೇರಿದಂತೆ ಅಗತ್ಯವಸ್ತುಗಳ ಬೆಲೆ ಹೆಚ್ಚಳ ಮಾಡಿ ಶ್ರಮಿಕ ವರ್ಗವನ್ನು ತೆರಿಗೆ ಎಂಬ ಕೂಪಕ್ಕೆ ಸಿಲುಕಿಸಿದೆ ಎಂದು ಭೀಮನಾಯ್ಕ್‍ರವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

    ತೈಲ ಬೆಲೆ ಏರಿಕೆ ಖಂಡಿಸಿ ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಳ್ಳಾರಿ ಜಿಲ್ಲೆಯ ಕೊಟ್ಟರು ಪಟ್ಟಣದ ಉಜ್ಜಿನಿ ರಸ್ತೆಯ ಪೆಟ್ರೋಲ್ ಬಂಕ್ ಮುಂದೆ ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ನಂಬಿ ಮತ ಹಾಕಿದ ಎಲ್ಲಾ ಮತದಾರರಿಗೂ ತಮ್ಮ ತಮ್ಮ ಖಾತೆಗೆ 15 ಲಕ್ಷ ರೂ ಹಣ, ಎರಡು ಲಕ್ಷ ಕೋಟಿ ಉದ್ಯೋಗ ನೀಡದೇ ಸುಳ್ಳು ಭರವಸೆ ನೀಡಿ ದೇಶದ ಜನರಿಂದ ತೆರಿಗೆ ವಸೂಲಿ ಮಾಡುತ್ತಿದೆ ಎಂದು ಖಾರವಾಗಿ ನುಡಿದಿದ್ದಾರೆ.

    ಈಗಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಆಪರೇಷನ್ ಕಮಲದ ಪಿತಾಮಹ ಇದ್ದಂತೆ ಏಕೆಂದರೆ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚಿಸಿಕೊಂಡು ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿರುವಾಗ ನಮ್ಮ ಸಮ್ಮಿಶ್ರ ಸರ್ಕಾರದ 19 ಶಾಸಕರನ್ನು ಲಂಚ ಕೊಟ್ಟು ಖರೀದಿ ಮಾಡಿಕೊಂಡು ಕಳ್ಳದಾರಿಯಲ್ಲಿ ಬಂದು ಅಧಿಕಾರ ಗಿಟ್ಟಿಸಿಕೊಂಡಿದ್ದಾರೆ ಎಂದರು. ಇದನ್ನೂ ಓದಿ:  ಈಶ್ವರಪ್ಪನವರಿಗೆ ಈಗ ಅರಿವಾಗುತ್ತಿರುವುದು ಆಶ್ಚರ್ಯ: ಆರ್.ವಿ.ದೇಶಪಾಂಡೆ

  • ಧರ್ಮ ಬಿಟ್ಟು ರಾಜಕಾರಣವಿಲ್ಲ, ರಾಜಕಾರಣ ಬಿಟ್ಟು ಧರ್ಮವಿಲ್ಲ: ಸಚಿವ ಬಿ.ಸಿ.ಪಾಟೀಲ್

    ಧರ್ಮ ಬಿಟ್ಟು ರಾಜಕಾರಣವಿಲ್ಲ, ರಾಜಕಾರಣ ಬಿಟ್ಟು ಧರ್ಮವಿಲ್ಲ: ಸಚಿವ ಬಿ.ಸಿ.ಪಾಟೀಲ್

    ಚಾಮರಾಜನಗರ: ಸಿಎಂ ಯಡಿಯೂರಪ್ಪ ಪರ ಮಠಾಧೀಶರ ಬ್ಯಾಟಿಂಗ್ ವಿಚಾರವಾಗಿ ಪ್ರತಿಕ್ರಿಯಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್, ಧರ್ಮ ಬಿಟ್ಟು ರಾಜಕಾರಣವಿಲ್ಲ, ರಾಜಕಾರಣ ಬಿಟ್ಟು ಧರ್ಮವಿಲ್ಲ. ಪ್ರತಿಯೊಬ್ಬರಿಗು ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕು ಇದೆ, ವಾಕ್ ಸ್ವಾತಂತ್ರ್ಯ ಇದೆ, ಮಠಾಧೀಶರು ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

    ಚಾಮರಾಜನಗರ ಜಿಲ್ಲೆಯಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ಇಲ್ಲ ಎಂದು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಸ್ಪಷ್ಡಪಡಿಸಿದ್ದಾರೆ. ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮಾಮೂಲಿಯಂತೆ ಪಕ್ಷದ ಆಗು ಹೋಗುಗಳು ಹಾಗು ಪಕ್ಷ ಸಂಘಟನೆ ಬಗ್ಗೆ ಚರ್ಚಿಸಲು ಬರುತ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾವು ಬಿಜೆಪಿಗೆ ಬಂದಿದ್ದಕ್ಕೆ ಈಶ್ವರಪ್ಪ ಮಿನಿಸ್ಟರ್ ಆಗಿದ್ದು: ಬಿ.ಸಿ.ಪಾಟೀಲ್ ತಿರುಗೇಟು

    ಮುಖ್ಯಮಂತ್ರಿ ಬದಲಾವಣೆ ವಿಚಾರ ಸಂಪೂರ್ಣ ಸುಳ್ಳು, ಮುಂದಿನ ಎರಡು ವರ್ಷ ಕಾಲ ಯಡಿಯೂರಪ್ಪ ನವರೇ ಸಿಎಂ ಆಗಿರುತ್ತಾರೆ. ನಾನೇ ಮುಂದಿನ ಸಿಎಂ ಎಂದು ಯತ್ನಾಳ್ ಎಲ್ಲಾ ಶಾಸಕರಿಗೆ ಫೋನ್ ಮಾಡಿ ಬೆಂಬಲ ಕೋರುತ್ತಿದ್ದಾರೆಂಬ ರೇಣುಕಾಚಾರ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ನನಗೆ ಯಾರಿಂದಲೂ ಯಾವುದೇ ಫೋನ್ ಬಂದಿಲ್ಲ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: ಈಶ್ವರಪ್ಪನವರಿಗೆ ಈಗ ಅರಿವಾಗುತ್ತಿರುವುದು ಆಶ್ಚರ್ಯ: ಆರ್.ವಿ.ದೇಶಪಾಂಡೆ

  • ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೂಲಕವೇ ಅನಾಥ ಮಕ್ಕಳ ದತ್ತು ಪ್ರಕ್ರಿಯೆ: ಶಶಿಕಲಾ ಜೊಲ್ಲೆ

    ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೂಲಕವೇ ಅನಾಥ ಮಕ್ಕಳ ದತ್ತು ಪ್ರಕ್ರಿಯೆ: ಶಶಿಕಲಾ ಜೊಲ್ಲೆ

    ಹಾವೇರಿ: ಕೋವಿಡ್ ಮೂರನೇ ಅಲೆಯು ಮಕ್ಕಳ ಮೇಲೆ ಪ್ರಭಾವ ಬೀರುತ್ತದೆ ಎಂಬ ತಜ್ಞರ ಅಭಿಪ್ರಾಯದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು, ಮಕ್ಕಳು ಸೋಂಕಿಗೆ ತುತ್ತಾಗದಂತೆ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಸೋಂಕಿಗೆ ತುತ್ತಾದಲ್ಲಿ ಮಕ್ಕಳಿಗೆ ಪ್ರತ್ಯೇಕ ಚಿಕಿತ್ಸಾ ವ್ಯವಸ್ಥೆ ಕುರಿತಂತೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಕುರಿತಂತೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ ಅವರು ತಿಳಿಸಿದ್ದಾರೆ.

    ಹಾವೇರಿಯಲ್ಲಿ ಮಂಗಳವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ರಾಜ್ಯದಲ್ಲಿ ಮೊದಲ ಅಲೆಯಿಂದ ಈವರೆಗೆ 1,735 ಹಾಗೂ ಹಾವೇರಿ ಜಿಲ್ಲೆಯಲ್ಲಿ 89 ಮಕ್ಕಳು ಕೋವಿಡ್ ಪಾಸಿಟಿವ್ ಸೋಂಕಿನಿಂದ ಬಳಲುತ್ತಿದ್ದಾರೆ. ಕೋವಿಡ್ ಸೋಂಕಿನ ಮಕ್ಕಳ ಮರಣ ಪ್ರಮಾಣ ಕಡಿಮೆ ಎಂದು ಹೇಳಿದರು. ಕೋವಿಡ್ ಮೂರನೇ ಅಲೆಯು ಮಕ್ಕಳ ಮೇಲೆ ಹೆಚ್ಚಿನ ಪ್ರಭಾವ ಬೀರುತ್ತದೆ ಎಂದು ಹಲವು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಈಗಾಗಲೇ ಈ ಕುರಿತಂತೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಆರೋಗ್ಯ ಸಚಿವರ ಜೊತೆಗೂಡಿ ಚರ್ಚಿಸಲಾಗಿದೆ. ಮಕ್ಕಳಿಗಾಗಿ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತ್ಯೇಕ ಮಕ್ಕಳ ಕೋವಿಡ್ ವಾರ್ಡ್ ವ್ಯವಸ್ಥೆ, ಐ.ಸಿ.ಯು ವ್ಯವಸ್ಥೆಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು ಇಲಾಖೆಯ ಪ್ರವಾಸ್ತವನೆಯನ್ನು ಒಪ್ಪಿದ ಕಾರಣ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಈ ಕುರಿತಂತೆ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

    ಅಪೌಷ್ಠಿಕ ಮಕ್ಕಳು ತೀವ್ರ ಅಪೌಷ್ಠಿಕತೆಯಿಂದ ಬಳಲುವ ಮಕ್ಕಳು ಕೋವಿಡ್‍ಗೆ ತುತ್ತಾಗದಂತೆ ಮುನ್ನೆಚ್ಚರಿಕೆ ಕ್ರಮಗಳ ಕುರಿತಂತೆ ಎಲ್ಲ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಲಾಗಿದೆ. ರಾಜ್ಯದಲ್ಲಿ 7751 ಮಕ್ಕಳು ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆ. 4.47 ಲಕ್ಷ ಮಕ್ಕಳು ಅಪೌಷ್ಠಿಕತೆಯ ಅಂಚಿನಲ್ಲಿರುವ ಮಕ್ಕಳಿದ್ದಾರೆ. ಸಾಮಾನ್ಯ ಮಕ್ಕಳ ಜೊತೆಗೆ ಈ ಮಕ್ಕಳ ಮೇಲೆ ವಿಶೇಷ ನಿಗಾವಹಿಸಿ ಕೋವಿಡ್ ಸೋಂಕು ತಗಲದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಪೌಷ್ಠಿಕ ಆಹಾರ ವಿತರಣೆ ಸೇರಿದಂತೆ ಹಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಎಲ್ಲ ಜಿಲ್ಲಾಡಳಿತ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದರು.

    ಅನಾಥ ಮಕ್ಕಳಿಗೆ ನೆರವು: ಕೋವಿಡ್ ಸೋಂಕಿನಿಂದ ತಂದೆ-ತಾಯಿಯನ್ನು ಕಳೆದುಕೊಂಡ ಅನಾಥ ಹಾಗೂ ಏಕಪೋಷಕ ಮಕ್ಕಳಿಗೆ ಆರ್ಥಿಕ, ಶೈಕ್ಷಣಿಕ ನೆರವು ಒದಗಿಸುವ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕ್ರಮಕೈಗೊಂಡಿದೆ. ಮುಖ್ಯಮಂತ್ರಿಗಳ ಬಾಲ ಸೇವಾ ಯೋಜನೆ ಹಾಗೂ ಬಾಲ ಹಿತೈಷಿ ಯೋಜನೆಯಡಿ ಪ್ರತಿ ತಿಂಗಳು ಮಕ್ಕಳಿಗೆ ಮೂರುವರೆಸಾವಿರ ರೂ. ಹಾಗೂ ಉಚಿತ ಶಿಕ್ಷಣ, ಎಸ್.ಎಸ್.ಎಲ್.ಸಿ. ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಣೆ ಹಾಗೂ 21 ವರ್ಷ ಪೂರೈಸಿದ ಹೆಣ್ಣುಮಕ್ಕಳಿಗೆ ಮುಂದಿನ ಭವಿಷ್ಯಕ್ಕೆ ಒಂದು ಲಕ್ಷ ರೂ. ನೆರವು ನೀಡಲಾಗುವುದು. ಅನಾಥ ಮಕ್ಕಳನ್ನು ಪಾಲಕರು ಪೋಷಿಸಲು ಅಸಮರ್ಥರಾಗಿದ್ದರೆ ದಾನಿಗಳ ನೆರವಿನಿಂದ ಇವರಿಗೆ ಶಿಕ್ಷಣ, ತರಬೇತಿ, ಉದ್ಯೋಗಾವಕಾಶಗಳನ್ನು ಕಲ್ಪುಸಲು ಕ್ರಮಕೈಗೊಳ್ಳಲಾಗುವುದು. ರಾಜ್ಯದಲ್ಲಿ ಕೋವಿಡ್‍ನಿಂದ ಪಾಲಕರು ಮೃತರಾಗಿ ಅನಾಥವಾಗಿರುವ 43 ಮಕ್ಕಳನ್ನು ಗುರುತಿಸಲಾಗಿದೆ ಎಂದು ಹೇಳಿದರು.

    ದತ್ತು ಪ್ರಕ್ರಿಯೆ: ಕೋವಿಡ್ ಸೋಂಕಿನಿಂದ ಪಾಲಕರನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳನ್ನು ಯಾರೂ ನೇರವಾಗಿ ದತ್ತು ಪಡೆಯಲು ಅವಕಾಶವಿರುವುದಿಲ್ಲ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದಲೇ ದತ್ತು ಪ್ರಕ್ರಿಯೆ ನಡೆಸಿ ಪಡೆಯಬೇಕು. ಕೋವಿಡ್‍ನಿಂದ ಪಾಲಕರನ್ನು ಕಳೆದುಕೊಂಡ ಮಕ್ಕಳು ಇದ್ದಲ್ಲಿ ಇಲಾಖೆಯ ಸಹಾಯವಾಣಿ 1098ಕ್ಕೆ ಸಂಪರ್ಕಿಸಿ ಮಾಹಿತಿ ಕೊಡಬೇಕು. ಕೆಲವು ಸಾಮಾಜಿಕ ಜಾಲತಾಣದಲ್ಲಿ ಕೋವಿಡ್‍ನಿಂದ ಪಾಲಕರನ್ನು ಕಳೆದುಕೊಂಡ ಅನಾಥ ಮಕ್ಕಳನ್ನು ಸಾಕುವುದಾಗಿ ಸಂದೇಶಗಳು ಹರಿದಾಡುತ್ತಿವೆ. ಯಾರೂ ಸಹ ಈ ಸಂದೇಶಗಳನ್ನು ನಂಬದೇ ಸಂದೇಶದಲ್ಲಿರುವ ಮೊಬೈಲ್ ಸಂಖ್ಯೆಗಳಿಗೆ ಸಂಪರ್ಕಿಸಿ ಮೋಸಹೋಗದಂತೆ ಸಾರ್ವಜನಿಕರು ಜಾಗೃತಿಯಿಂದ ಇರಬೇಕು ಎಂದು ತಿಳಿಸಿದರು. ಇದನ್ನೂ ಓದಿ: 

    ಕೋವಿಡ್ ಸೋಂಕಿನಿಂದ ಮೂರು ಜನ ಅಂಗನವಾಡಿ ಕಾರ್ಯಕರ್ತೆಯರು ಮರಣಹೊಂದಿದ್ದಾರೆ. ತಲಾ 30 ಲಕ್ಷ ರೂ. ಪರಿಹಾರ ಪಾವತಿ ಪ್ರಕ್ರಿಯೆ ನಡೆಯುತ್ತಿದೆ. ಕಳೆದ ಬಾರಿ ಕೋವಿಡ್‍ಗೆ ಬಲಿಯಾದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರಿಗೆ ಪರಿಹಾರ ಪಾವತಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ವಿದೇಶಕ್ಕೆ ತೆರಳುವ ಫಲಾನುಭವಿಗಳ ಕೋವಿಶೀಲ್ಡ್ ಲಸಿಕೆ ಪಡೆಯುವ ಅಂತರ ಕಡಿತ

    ಜಿಲ್ಲಾಡಳಿತ ಉತ್ತಮ ಕ್ರಮ: ಕೋವಿಡ್ ಮೂರನೇ ಅಲೆ ಎದುರಿಸುವ ನಿಟ್ಟಿನಲ್ಲಿ ಹಾವೇರಿ ಜಿಲ್ಲಾಡಳಿತ ಉತ್ತಮ ಸಿದ್ಧತೆ ಮಾಡಿಕೊಂಡಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳು ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಿ ಮೂರನೇ ಅಲೆ ಕುರಿತಂತೆ ವ್ಯಾಪಕವಾದ ಪ್ರಚಾರದ ಜೊತೆಗೆ ಸಿದ್ಧತೆಗಳನ್ನು ಎಚ್ಚರದಿಂದ ಕೈಗೊಳ್ಳಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಇದನ್ನೂ ಓದಿ: ಪಂತರಪಾಳ್ಯದಲ್ಲಿ 10 ತಿಂಗಳಲ್ಲಿ 150 ಹಾಸಿಗೆಗಳ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಿದ್ಧ: ವಿ. ಸೋಮಣ್ಣ

    ಜಿಲ್ಲೆಯ ಏಳು ತಾಲೂಕಾ ಆಸ್ಪತ್ರೆಗಳಲ್ಲಿ ಮಕ್ಕಳಿಗಾಗಿ ಪ್ರತ್ಯೇಕ ಕೋವಿಡ್ ವಾರ್ಡ್ ಗಳನ್ನು ಮಾಡಲಾಗಿದೆ. 119 ಬೆಡ್‍ಗಳನ್ನು ಕಾಯ್ದಿಸಲಾಗಿದೆ. ಕೋವಿಡ್ ಆರೈಕೆ ಕೇಂದ್ರಗಳಲ್ಲಿ 195 ಬೆಡ್‍ಗಳನ್ನು ಪ್ರತ್ಯೇಕವಾಗಿ ಕಾಯ್ದಿರಿಸಲಾಗಿದೆ. ಜಿಲ್ಲೆಯಲ್ಲಿ ಮೊದಲನೇ ಅಲೆಯಿಂದ ಈವರೆಗೆ 991 ಮಕ್ಕಳಿಗೆ ಸೋಂಕು ತಗಲಿದ್ದು, 901 ಸೋಂಕಿನಿಂದ ಗುಣಮುಖರಾಗಿದ್ದಾರೆ. 89 ಮಕ್ಕಳ ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ದೀರ್ಘಕಾಲದ ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಒಂದು ಮಗುವಿಗೆ ಕೋವಿಡ್ ಸೋಂಕು ತಗುಲಿ ಮರಣಹೊಂದಿದೆ. ಕೋವಿಡ್ ಸೋಂಕಿನಿಂದ ಅಲ್ಲ ಎಂದು ಹೇಳಿದರು. ಇದನ್ನೂ ಓದಿ: ಕೊರೊನಾ ವ್ಯಾಕ್ಸಿನ್‍ಗೆ ಆನ್‍ಲೈನ್ ನೋಂದಣಿ ಕಡ್ಡಾಯವಲ್ಲ

  • 17 ಜನ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದ ನಂತರ ಸಣ್ಣ ಸಣ್ಣ ಗೊಂದಲಗಳಾಗಿವೆ: ಕೆ.ಎಸ್.ಈಶ್ವರಪ್ಪ

    17 ಜನ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದ ನಂತರ ಸಣ್ಣ ಸಣ್ಣ ಗೊಂದಲಗಳಾಗಿವೆ: ಕೆ.ಎಸ್.ಈಶ್ವರಪ್ಪ

    ಕಾರವಾರ: ಭಾರತೀಯ ಜನತಾ ಪಾರ್ಟಿಗೆ ಪೂರ್ಣ ಬಹುಮತ ಸಿಕ್ಕಿದ್ದರೆ ಮುಖ್ಯಮಂತ್ರಿ ಬದಲಾವಣೆಯ ಗೊಂದಲ ಆಗುತ್ತಿರಲಿಲ್ಲ. 17 ಜನ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದ ನಂತರ ಈ ಸಣ್ಣ ಸಣ್ಣ ಗೊಂದಲವಾಗಿದೆ ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ಗ್ರಾಮೀಣಾಭಿವೃದ್ಧ ಸಚಿವ ಈಶ್ವರಪ್ಪ ಹೇಳಿದ್ದಾರೆ.

    ಗೊಂದಲ ನಿರ್ಮಾಣ ಮಾಡಿಕೊಂಡವರು ಪಕ್ಷದ ನಾಯಕರಲ್ಲ. ಚುನಾವಣೆ ಫಲಿತಾಂಶದ ಗೊಂದಲ. ಕೇಂದ್ರ ನಾಯಕ ಅರುಣ್ ಸಿಂಗ್ ಬೆಂಗಳೂರಿಗೆ ಬರುತ್ತಾರೆ ಸಮಸ್ಯೆ ಆಲಿಸಿ ಪರಿಹಾರ ನೀಡುತ್ತಾರೆ. ಯಾರಿಗೆ ಏನು ಅಸಮಧಾನವಿದೆಯೋ ಕೇಂದ್ರದ ನಾಯಕರ ಮುಂದೆ ಹೇಳಿಕೊಳ್ಳುತ್ತಾರೆ ಎಂದರು.

    ಮುಖ್ಯಮಂತ್ರಿಗಳ ವಿರುದ್ಧವಾಗಿ ನಾನು ರಾಜ್ಯಪಾಲರಿಗೆ ದೂರು ಕೊಡಲಿಲ್ಲ. ನಮ್ಮ ಇಲಾಖೆಗೆ ಬರಬೇಕಾದ ಹಣ ನೇರವಾಗಿ ಬರದೇ ಮುಖ್ಯಮಂತ್ರಿಗಳು ಬೇರೆಡೆ ಕೊಟ್ಟಿದ್ದು ಸರಿಯೋ ತಪ್ಪೋ ಎಂಬುದನ್ನು ಕೇಳಲು ರಾಜ್ಯಪಾಲರ ಬಳಿ ಹೋಗಿದ್ದೆ. ಮುಖ್ಯಮಂತ್ರಿ ಬದಲಾವಣೆಗೆ ಅಲ್ಲ. ನಾಯಕತ್ವ ಬದಲಾವಣೆ ವಿಚಾರದಲ್ಲಿ ಕೇಂದ್ರ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ ಎಂದರು.

    ದೆಹಲಿಯಲ್ಲಿ ಬಿಎಸ್‍ವೈ ವಿರೋಧಿ ಬಣದ ಶಾಸಕ ಅರವಿಂದ್ ಬೆಲ್ಲದ್ ಸೋಮವಾರ ರಾಜ್ಯ ಉಸ್ತುವಾರಿ ಅರುಣ್ ಸಿಂಗ್‍ರನ್ನು ಭೇಟಿ ಮಾಡಿ ಅರ್ಧಗಂಟೆ ಕಾಲ ಚರ್ಚೆ ನಡೆಸಿದ್ದಾರೆ. ಆದರೆ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ನಿರ್ಗಮಿಸಿದ್ದಾರೆ.

    ಇದೇ ವೇಳೆ, ಅಮಿತ್ ಶಾ, ಜೆಪಿ ನಡ್ಡಾ ಭೇಟಿಗೂ ಬೆಲ್ಲದ್ ಪ್ರಯತ್ನ ನಡೆಸಿದ್ದಾರೆ. ಈ ಬೆನ್ನಲ್ಲೇ ಬುಧವಾರ ಸಂಜೆ ಬೆಂಗಳೂರಿನಲ್ಲಿ ನಡೆಯಲಿರುವ ಸಚಿವರ ಸಭೆಗೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಬೇಕಾ? ಬೇಡ್ವಾ ಎಂದು ಸಂಧಿಗ್ಧತೆಯಲ್ಲಿ ಅರುಣ್ ಸಿಂಗ್ ಸಿಲುಕಿದ್ದಾರೆ ಎನ್ನಲಾಗಿದೆ. ಅರುಣ್ ಸಿಂಗ್ ಜೊತೆಗೆ ವೀಕ್ಷಕರೊಬ್ಬರನ್ನು ಕಳಿಸಿ ಎಂದು ಬಿಎಸ್‍ವೈ ವಿರೋಧಿ ಬಣ ಹೈಕಮಾಂಡ್‍ಗೆ ಮನವಿ ಮಾಡಿದೆ ಎಂದು ತಿಳಿದುಬಂದಿದೆ. ಈ ಬೆಳವಣಿಗೆ ಮುಖ್ಯಮಂತ್ರಿ ಬಣದ ಚಿಂತೆಗೆ ಕಾರಣವಾಗಿದೆ. ಇದನ್ನೂ ಓದಿ: ವಿಪಕ್ಷ ನಾಯಕನಾದ ನನ್ನ ಆರೋಪಗಳಿಗೆ ಈಶ್ವರಪ್ಪ ಸಾಕ್ಷ್ಯ ಕೊಟ್ರು: ಸಿದ್ದರಾಮಯ್ಯ

    ಈ ಮಧ್ಯೆ ಅರವಿಂದ್ ಬೆಲ್ಲದ್ ವಿರುದ್ಧ ಎಂಎಲ್‍ಸಿ ಆಯನೂರು ಮಂಜುನಾಥ್ ಕಿಡಿಕಾರಿದ್ದಾರೆ. ಅರವಿಂದ್ ಬೆಲ್ಲದ್ ಎಂಬ ಮನುಷ್ಯ ಮುಖ್ಯಮಂತ್ರಿ ಕನಸು ಕಾಣುತ್ತಿದ್ದಾರೆ. ತಾವೇ ಗೆದ್ದು ಬರಲು ತಿಣುಕಾಡುವ ಮನುಷ್ಯ ಆತ. ಅವರು ಸಿಎಂ ಕನಸು ಕಾಣಲಿ ಯಾರು ಬೇಡ ಅಂತಾರೆ ಎಂದು ಆಯನೂರು ಮಂಜುನಾಥ್ ವ್ಯಂಗ್ಯ ಮಾಡಿದ್ದಾರೆ. ಇನ್ನು ವಿಜಯಪರದ ಶಾಸಕ ಯತ್ನಾಳ್ ಶಾಸಕರಿಗೆ ಕರೆ ಮಾಡಿ ನಾನೇ ಮುಂದಿನ ಸಿಎಂ, ಸಹಕಾರ ಕೊಡಿ ಎಂದು ಕೇಳ್ತಿದ್ದಾರೆ ಅಂತಾ ರೇಣುಕಾಚಾರ್ಯ ಆರೋಪಿಸಿದ್ದಾರೆ. ಇದನ್ನೂ ಓದಿ: ನಾಯಕತ್ವ ಬದಲಾವಣೆಗೆ ದೆಹಲಿಯಲ್ಲಿ ಬೆಲ್ಲದ್ ರಣತಂತ್ರ- ಅರುಣ್ ಸಿಂಗ್ ಮುಂದೆ ಬೆಲ್ಲದ್ ಹೇಳಿದ್ದೇನು?

  • ಆರ್ಥಿಕ ಸಂಕಷ್ಟದಲ್ಲಿರುವ ಪತ್ರಕರ್ತರಿಗೂ ನೆರವು ನೀಡಲು ಸಿಎಂಗೆ ಮನವಿ

    ಆರ್ಥಿಕ ಸಂಕಷ್ಟದಲ್ಲಿರುವ ಪತ್ರಕರ್ತರಿಗೂ ನೆರವು ನೀಡಲು ಸಿಎಂಗೆ ಮನವಿ

    ಬೆಂಗಳೂರು: ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ತಮಿಳುನಾಡಿನ ಮಾದರಿ ಪರಿಹಾರ ನೀಡಬೇಕೆಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಒತ್ತಾಯಿಸಿದ್ದು, ಸಿಎಂ ಯಡಿಯೂರಪ್ಪ ಪರಿಶೀಲನೆ ಮಾಡುವ ಭರವಸೆ ನೀಡಿದ್ದಾರೆ.

    ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರನ್ನು ಭೇಟಿ ಮಾಡಿ, ಕೋವಿಡ್ ಲಾಕ್‍ಡೌನ್ ಕಾರಣದಿಂದಾಗಿ ಮಾಧ್ಯಮಗಳು ಸಂಕಷ್ಟದಲ್ಲಿ ಸಿಲುಕಿದ್ದು, ಇದೇ ವೃತ್ತಿ ಅವಲಂಬಿಸಿರುವ ಹಲವು ಪತ್ರಕರ್ತರ ಬದುಕು ಕೂಡ ಅಯೋಮಯವಾಗಿದೆ. ಗ್ರಾಮೀಣ ಪತ್ರಕರ್ತರ ಪರಿಸ್ಥಿತಿ ಕೂಡ ಬಹಳ ಕಷ್ಟದಲ್ಲಿದೆ. ಇದನ್ನೂ ಓದಿ: ಲಾಕ್‍ಡೌನ್ ಪೂರ್ಣಗೊಂಡ ತಕ್ಷಣ ಶಿಕ್ಷಕರ ಹಾಜರಿಗೆ ಸೂಚನೆ: ಸುರೇಶ್ ಕುಮಾರ್

    ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವ, ಪತ್ರಕರ್ತರಿಗೆ (ತಮಿಳುನಾಡಿನಲ್ಲಿ ತಲಾ 5 ಸಾವಿರ ನೀಡಿದ ಮಾದರಿಯಲ್ಲಿ) ಹಲವು ರಾಜ್ಯಗಳಲ್ಲಿ ನೆರವು ನೀಡಲಾಗಿದೆ. ಅದೇ ರೀತಿ ರಾಜ್ಯದಲ್ಲಿಯೂ ತಲಾ 10 ಸಾವಿರ ನೆರವು ನೀಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಇದೇ ಸಂದರ್ಭದಲ್ಲಿ ನಾಗರಾಜ್ ಅವರಿಗೆ ಚಿಕಿತ್ಸೆ ಭಾಗವಾಗಿ ಒಂದು ಲಕ್ಷ ರೂ. ನೆರವನ್ನು ಮುಖ್ಯಮಂತ್ರಿ ಮಂಜೂರು ಮಾಡಿದರು. ಇದನ್ನೂ ಓದಿ: ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಒಂದು ಲಕ್ಷ ಪರಿಹಾರ: ಸಿಎಂ ಘೋಷಣೆ

  • ನಾಯಕತ್ವ ಬದಲಾವಣೆಯಾಗಲೀ ಮುಖ್ಯಮಂತ್ರಿಯ ಬದಲಾವಣೆಯಾಗಲೀ ಇಲ್ಲ: ಬಿ.ಸಿ.ಪಾಟೀಲ್

    ನಾಯಕತ್ವ ಬದಲಾವಣೆಯಾಗಲೀ ಮುಖ್ಯಮಂತ್ರಿಯ ಬದಲಾವಣೆಯಾಗಲೀ ಇಲ್ಲ: ಬಿ.ಸಿ.ಪಾಟೀಲ್

    ಬೆಂಗಳೂರು: ನಾಯಕತ್ವ ಬದಲಾವಣೆಯ ಚರ್ಚೆಯು ಯಡಿಯೂರಪ್ಪ ಅವರು ಮುಖ್ಯಮಂತ್ರಿ ಹುದ್ದೆಗೇರಿದಾಗಿನಿಂದಲೂ ಈ ಇದೆ. ಆದರೆ ರಾಜ್ಯ ಬಿಜೆಪಿ ಉಸ್ತುವಾರಿಗಳಾದ ಅರುಣ್ ಸಿಂಗ್ ನಾಯಕತ್ವ ಬದಲಾವಣೆಯಾಗಲೀ ಮುಖ್ಯಮಂತ್ರಿಯ ಬದಲಾವಣೆಯಾಗಲೀ ಇಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

    ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಬಿ.ಸಿ.ಪಾಟೀಲ್, ಜೂನ್ 16 ರಂದು ಉಸ್ತುವಾರಿಗಳು ಸಭೆ ಕರೆದಿದ್ದಾರಾದರೂ ಚರ್ಚೆಯ ವಿಷಯ ಗೊತ್ತಿಲ್ಲ. ಸಚಿವರ ಸಭೆಯದು. ಅದರಲ್ಲಿ ತಾವು ಸಹ ಭಾಗವಹಿಸುತ್ತಿದ್ದೇನೆ. ಇನ್ನೂ ಎರಡು ವರ್ಷ ಬಿ.ಎಸ್.ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ. ಇದನ್ನೇ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಸಹ ತಿಳಿಸಿದ್ದಾರೆ. ಪಕ್ಷದ ವರಿಷ್ಠರು ಯಾವುದೇ ತೀರ್ಮಾನ ಕೈಗೊಂಡರೂ ಎಲ್ಲರೂ ಅದಕ್ಕೆ ಬದ್ಧರಾಗಬೇಕು ಎಂದರು.

    ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಬುಧವಾರ ರಾಜ್ಯಕ್ಕೆ ಆಗಮಿಸಲಿದ್ದಾರೆ. ಮೂರು ದಿನಗಳ ಕಾಲ ರಾಜ್ಯದಲ್ಲಿ ವಾಸ್ತವ್ಯ ಹೂಡಲಿರುವ ಅರುಣ್ ಸಿಂಗ್, ಸಿಎಂ, ರಾಜ್ಯಾಧ್ಯಕ್ಷರು, ಸಚಿವರು, ಸಂಸದರು, ಶಾಸಕರ ಜತೆ ಪ್ರತ್ಯೇಕ ಚರ್ಚೆ ನಡೆಸಲಿದ್ದಾರೆ.