Tag: ಸಿಎಂ ಶಿವರಾಜ್ ಸಿಂಗ್ ಚೌಹಾಣ್

  • ಕಮಲಾ ನೆಹರು ಆಸ್ಪತ್ರೆಯಲ್ಲಿ ಬೆಂಕಿ ಅವಘಡ – ನಾಲ್ವರು ಮಕ್ಕಳ ದಾರುಣ ಸಾವು

    ಕಮಲಾ ನೆಹರು ಆಸ್ಪತ್ರೆಯಲ್ಲಿ ಬೆಂಕಿ ಅವಘಡ – ನಾಲ್ವರು ಮಕ್ಕಳ ದಾರುಣ ಸಾವು

    ಭೋಪಾಲ್: ಮಧ್ಯಪ್ರದೇಶದ ಭೋಪಾಲ್‍ನ ಕಮಲಾ ನೆಹರು ಆಸ್ಪತ್ರೆಯ ಮಕ್ಕಳ ವಾರ್ಡ್‍ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ.

    3ನೇ ಮಹಡಿಯಲ್ಲಿರುವ ಮಕ್ಕಳ ಐಸಿಯು ವಾರ್ಡ್‍ನಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 40 ಮಕ್ಕಳು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಪೈಕಿ ಇದೀಗ 36 ಮಕ್ಕಳನ್ನು ಬೇರೆ ವಾರ್ಡ್‍ಗೆ ಸ್ಥಳಾಂತರಿಸಲಾಗಿದ್ದು, ಘಟನೆಯಲ್ಲಿ ನಾಲ್ವರು ಮಕ್ಕಳು ಬೆಂಕಿಗೆ ಅಹುತಿಯಾಗಿದ್ದಾರೆ. ಇದನ್ನೂ ಓದಿ: ಅಂತ್ಯವಾಯಿತು ಟೀಂ ಇಂಡಿಯಾದಲ್ಲಿ ಕೊಹ್ಲಿ, ಶಾಸ್ತ್ರಿ ಯುಗ

    ಈ ಘಟನೆ ಕುರಿತಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ತಮ್ಮ ಟ್ವಿಟ್ಟರ್‌ನಲ್ಲಿ, ಭೋಪಾಲ್‍ನ ಕಮಲಾ ನೆಹರು ಆಸ್ಪತ್ರೆಯ ಮಕ್ಕಳ ವಾರ್ಡ್‍ನಲ್ಲಿ ಬೆಂಕಿ ಅವಘಡ ಸಂಭವಿಸಿರುವುದು ದುಃಖಕರ ಸಂಗತಿಯಾಗಿದೆ. ರಕ್ಷಣಾ ಕಾರ್ಯಾಚರಣೆ ತ್ವರಿತವಾಗಿ ನಡೆಯುತ್ತಿದೆ. ಘಟನೆ ಸಂಬಂಧ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. ತನಿಖೆಯನ್ನು ಎಸಿಎಸ್ ಸಾರ್ವಜನಿಕ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಮೊಹಮ್ಮದ್ ಸುಲೇಮಾನ್ ಅವರು ಮಾಡುತ್ತಾರೆ. ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಆದರೆ ಈಗಾಗಲೇ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕೆಲವು ಮಕ್ಕಳನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದ್ದಾರೆ.

    ‘ಮಕ್ಕಳ ಅಕಾಲಿಕ ಸಾವು ಅಸಹನೀಯ ನೋವನ್ನುಂಟು ಮಾಡಿದೆ. ಅಗಲಿದ ಆತ್ಮಗಳಿಗೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಈ ಮಕ್ಕಳ ಕುಟುಂಬಗಳಿಗೆ ನನ್ನ ಆಳವಾದ ಸಂತಾಪ. ಘಟನೆಯಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಐಪಿಎಲ್‍ನ ನೂತನ ತಂಡ ಅಹಮದಾಬಾದ್‍ನ ಕೋಚ್ ಆಗಲಿದ್ದಾರೆ ರವಿಶಾಸ್ತ್ರಿ?

    ಮತ್ತೊಂದೆಡೆ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ವಾರ್ಡ್‍ನಲ್ಲಿ 40 ಮಕ್ಕಳಿದ್ದರು. ಅವರಲ್ಲಿ 36 ಮಕ್ಕಳು ಸುರಕ್ಷಿತವಾಗಿದ್ದಾರೆ. ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆ. ಮೃತರ ಪೋಷಕರಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

  • ರಾಮಮಂದಿರಕ್ಕಾಗಿ 28 ವರ್ಷಗಳಿಂದ ಉಪವಾಸ ಮಾಡ್ತೀರೋ 82ರ ವೃದ್ಧೆ

    ರಾಮಮಂದಿರಕ್ಕಾಗಿ 28 ವರ್ಷಗಳಿಂದ ಉಪವಾಸ ಮಾಡ್ತೀರೋ 82ರ ವೃದ್ಧೆ

    ಭೋಪಾಲ್: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವವರೆಗೂ ಆಹಾರ ಸೇವಿಸುವುದಿಲ್ಲ ಎಂದು ದೀಕ್ಷೆ ಸ್ವೀಕಾರ ಮಾಡಿ, ಕಳೆದ 28 ವರ್ಷಗಳಿಂದ ಮಧ್ಯ ಪ್ರದೇಶದ ಜಬಲ್‍ಪುರಕ್ಕೆ ನಿವಾಸಿ ಊರ್ಮಿಳಾ ಚರ್ತುವೇದಿ (82) ಉಪವಾಸ ಮಾಡುತ್ತಿದ್ದಾರೆ.

    1992ರ ಡಿ.6 ರಂದು ವಿವಾದತ್ಮಾಕ ಕಟ್ಟದ ನೆಲಸಮ ಮಾಡಿದ ಸಮಯದಿಂದ ಊರ್ಮಿಳಾ ಅವರು ಉಪವಾಸ ಮಾಡುತ್ತಿದ್ದಾರೆ. ರಾಮನಿಗೆ ಮತ್ತೆ ಮಂದಿರ ನಿರ್ಮಾಣ ಮಾಡುವವರೆಗೂ ಆಹಾರ ಸೇವಿಸುವುದಿಲ್ಲ ಎಂದು ನಿರ್ಧಾರ ಮಾಡಿದ್ದರು. ಕಳೆದ ವರ್ಷ ರಾಮಮಂದಿರ ನಿರ್ಮಾಣಕ್ಕೆ ನ್ಯಾಯಾಲಯ ಅನುಮತಿ ನೀಡಿದ ಸಂದರ್ಭದಲ್ಲಿ ಊರ್ಮಿಳಾ ಅವರು ಸಂತೋಷ ವ್ಯಕ್ತಪಡಿಸಿದ್ದರು. ಊರ್ಮಿಳಾ ಅವರು ಕಳೆದ 28 ವರ್ಷಗಳಿಂದ ಧಾನ್ಯಗಳನ್ನು ಬಳಕೆ ಮಾಡದೆ ತಯಾರಿಸಿದ ರಾಮಮಂದಿರದ ಪ್ರಸಾದ, ಹಾಲು, ಮೋಸರು ಮತ್ತು ಹಣ್ಣುಗಳನ್ನು ಮಾತ್ರ ಸೇವಿಸುತ್ತಿದ್ದರು.

    ರಾಮಮಂದಿರ ಶಿಲಾನ್ಯಾಸ ನಡೆದ ಬಳಿಕ ಅಯೋಧ್ಯೆಗೆ ಭೇಟಿ ನೀಡುವ ಚಿಂತನೆ ನಡೆಸಿರುವ ಊರ್ಮಿಳಾ ಅವರು ಪವಿತ್ರ ನದಿಯಲ್ಲಿ ಶುದ್ಧಿಯಾಗಿ ದೀಕ್ಷೆಯಿಂದ ವಿರಮಿಸುವುದಾಗಿ ತಿಳಿಸಿದ್ದಾರೆ. ಈ ಕುರಿತು ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಟ್ವೀಟ್ ಮಾಡಿದ್ದು, ‘ಶ್ರೀರಾಮ ತನ್ನ ಭಕ್ತರಿಗೆ ಎಂದು ನಿರಾಸೆ ಮಾಡುವುದಿಲ್ಲ. ತ್ರೇತಾಯುಗದ ಶಬರಿ ತಾಯಿಯಾಗಲಿ ಅಥವಾ ಈ ಯುಗದ ಊಮಿರ್ಳಾ ತಾಯಿಯಾಗಲಿ.. ಅಮ್ಮ, ನಿಮ್ಮ ಭಕ್ತಿಗೆ ಧನ್ಯವಾದ. ಇಡೀ ದೇಶವೇ ನಿಮ್ಮ ಭಕ್ತಗೆ ವಂದನೆಗಳನ್ನು ಹೇಳುತ್ತಿದೆ. ಜೈ ಶ್ರೀರಾಮ್’ ಎಂದು ಬರೆದುಕೊಂಡಿದ್ದಾರೆ.

  • ಗೋವು ರಕ್ಷಣೆ ನಿರತ ಮುಸ್ಲಿಂ ಮಹಿಳೆಗೆ ಜೀವ ಬೆದರಿಕೆ! ರಕ್ಷಣೆಗೆ ಪ್ರಧಾನಿಗೆ ಮನವಿ

    ಗೋವು ರಕ್ಷಣೆ ನಿರತ ಮುಸ್ಲಿಂ ಮಹಿಳೆಗೆ ಜೀವ ಬೆದರಿಕೆ! ರಕ್ಷಣೆಗೆ ಪ್ರಧಾನಿಗೆ ಮನವಿ

    ಭೋಪಾಲ್: ಗೋವುಗಳ ಸಂರಕ್ಷಣೆಯಲ್ಲಿ ನಿರತರಾಗಿರುವ ಮುಸ್ಲಿಂ ಮಹಿಳೆಯೊಬ್ಬರಿಗೆ ಸಂಬಂಧಿಕರೇ ಜೀವ ಬೆದರಿಕೆ ಹಾಕಿರುವ ಘಟನೆ ಮಧ್ಯಪ್ರದೇಶದಲ್ಲಿ ನೀಮುಚ್ ಜಿಲ್ಲೆಯಲ್ಲಿ ನಡೆದಿದೆ.

    ಮಧ್ಯಪ್ರದೇಶದ ರಾಷ್ಟ್ರೀಯ ಗೋವು ರಕ್ಷಾ ವಾಹಿಣಿ ಅಧ್ಯಕ್ಷೆ ಮೆಹ್ರುನ್ನೀಸಾ ಖಾನ್ ಜೀವ ಬೆದರಿಕೆಗೆ ಒಳಗಾದ ಮಹಿಳೆ. ಸದ್ಯ ಅವರು ತಮಗೆ ರಕ್ಷಣೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

    ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಮೆಹ್ರುನ್ನೀಸಾ ಅವರು, ನಾನು ಗೋವುಗಳ ಸಂರಕ್ಷಣೆ ಮಾಡುತ್ತಿರುವೆ. ಹೀಗಾಗಿ ತಮ್ಮ ಪ್ರತಿಷ್ಠೆಗೆ ದಕ್ಕೆ ಉಂಟಾಗುತ್ತಿದೆ ಎಂದು ಸಂಬಂಧಿಕರು ಅನೇಕ ಬಾರಿ ಥಳಿಸಿದ್ದಾರೆ. ಅಷ್ಟೇ ಅಲ್ಲದೇ ಜೀವ ಬೆದರಿಕೆ ಕೂಡಾ ಹಾಕಿದ್ದಾರೆ ಎಂದು ಅಳಲು ತೊಡಿಕೊಂಡರು. ಇದನ್ನು ಓದಿ: ಆನ್‍ಲೈನ್ ನಲ್ಲಿ ನಿಮಗೆ ಬೇಕಾದ ತಳಿಯ ಹಸುಗಳನ್ನು ಖರೀದಿಸಿ!- ಏನಿದರ ವಿಶೇಷತೆ?

    ಗೋವುಗಳ ರಕ್ಷಣೆಗೆ ಸೇರಿದಾಗಿನಿಂದ ಹಾಗೂ ತ್ರಿವಳಿ ತಲಾಖ್ ವಿರುದ್ಧ ಧ್ವನಿ ಎತ್ತಿದ್ದರಿಂದ ನನ್ನ ತಾಯಿ, ಮಗಳು ಭಾರೀ ವಿರೋಧ ವ್ಯಕ್ತಪಡಿಸಿದರು. ಅಷ್ಟೇ ಅಲ್ಲದೇ ಸಂಬಂಧಿಕರು ನನಗೆ ಥಳಿಸಿದ್ದು, ಜೀವ ಬೆದರಿಕೆ ಹಾಕಿದ್ದಾರೆ. ಹೀಗಾಗಿ ಮೂರು ತಿಂಗಳ ಹಿಂದೆಯೇ ಪೊಲೀಸರ ಸಹಾಯವನ್ನು ಕೇಳಿದ್ದೆ. ಸದ್ಯ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದರಿಂದ ರಕ್ಷಣೆ ನೀಡುವಂತೆ ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡಿರುವೆ ಎಂದು ಅವರು ಹೇಳಿದರು.

    ನೀಮುಚ್ ನಗರದಿಂದ 500 ಮೀ. ದೂರದಲ್ಲಿ ಗೋಶಾಲೆ ನಡೆಸಲಾಗುತ್ತಿದೆ. ಗೋವುಗಳ ರಕ್ಷಣೆ ನಮ್ಮ ಗೌರವಕ್ಕೆ ದಕ್ಕೆ ತರುತ್ತದೆ. ಹೀಗಾಗಿ ಈ ಕಾರ್ಯವನ್ನು ಕೈಬಿಡುವಂತೆ ಸಂಬಂಧಿಕರು ಒತ್ತಾಯಿಸುತ್ತಿದ್ದಾರೆ. ಆದರೆ ಪ್ರಾಣಿಗಳ ರಕ್ಷಣೆ ನಮ್ಮ ಗೌರವಕ್ಕೆ ಹೇಗೆ ಧಕ್ಕೆ ತರುತ್ತದೆ ಎನ್ನುವುದೇ ನನಗೆ ಅರ್ಥವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.