Tag: ಸಿಎಎ

  • 2024ಕ್ಕೂ ಮುನ್ನ ದಾಖಲೆಗಳಿಲ್ಲದೇ ಪಾಕ್‌, ಅಫ್ಘಾನ್‌, ಬಾಂಗ್ಲಾದಿಂದ ಬಂದ ಅಲ್ಪಸಂಖ್ಯಾತರಿಗೆ ಭಾರತದಲ್ಲಿ ಉಳಿಯಲು ಅವಕಾಶ

    2024ಕ್ಕೂ ಮುನ್ನ ದಾಖಲೆಗಳಿಲ್ಲದೇ ಪಾಕ್‌, ಅಫ್ಘಾನ್‌, ಬಾಂಗ್ಲಾದಿಂದ ಬಂದ ಅಲ್ಪಸಂಖ್ಯಾತರಿಗೆ ಭಾರತದಲ್ಲಿ ಉಳಿಯಲು ಅವಕಾಶ

    – ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳಿಗೆ ಅನುಕೂಲ

    ನವದೆಹಲಿ: ಧಾರ್ಮಿಕ ಕಿರುಕುಳದಿಂದ (Religious Persecution) ತಪ್ಪಿಸಿಕೊಳ್ಳಲು 2024ರ ಡಿಸೆಂಬರ್‌ 31ಕ್ಕೂ ಮುನ್ನ ದಾಖಲೆಗಳಿಲ್ಲದೇ ಪಾಕಿಸ್ತಾನ (Pakistan), ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶಗಳಿಂದ ಬಂದ ಧಾರ್ಮಿಕ ಅಲ್ಪಸಂಖ್ಯಾತರಿಗೆ (ಮುಸ್ಲಿಮೇತರ ಸಮುದಾಯಗಳಿಗೆ) ಭಾರತದಲ್ಲಿ ಉಳಿಯಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ಗೃಹಸಚಿವಾಲಯ ತಿಳಿಸಿದೆ.

    ಪಾಸ್‌ಪೋರ್ಟ್‌ (Passport) ಅಥವಾ ಇತರ ಪ್ರಯಾಣ ದಾಖಲೆಗಳಿಲ್ಲದೇ ಬಂದ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಕ್ರೈಸ್ತರು ಹಾಗೂ ಪಾರ್ಸಿಗಳಿಗೆ ಭಾರತದಲ್ಲಿ ಉಳಿಯಲು ಅವಕಾಶ ನೀಡುವುದಾಗಿ ಹೇಳಿದೆ. ಜೊತೆಗೆ ದೇಶ ಪ್ರವೇಶಿಸಿದ್ದು ದಾಖಲೆಗಳು ಸಿಂಧುತ್ವದ ಅವಧಿ ಮೀರಿದ್ದರೆ ಅಂತಹವರಿಗೂ ಈ ನಿಯಮ ಅನ್ವಯಿಸಲಿದೆ ಎಂದು ಗೃಹ ಸಚಿವಾಲಯ ಆದೇಶದಲ್ಲಿ ತಿಳಿಸಿದೆ. ಇದನ್ನೂ ಓದಿ: ಅಮೆರಿಕ ಒತ್ತಡದ ನಡುವೆ ಭಾರತಕ್ಕೆ ರಷ್ಯಾ ಗಿಫ್ಟ್‌; ಇನ್ನಷ್ಟು S-400 ವಾಯು ರಕ್ಷಣಾ ವ್ಯವಸ್ಥೆ ಪೂರೈಕೆಗೆ ನಿರ್ಧಾರ

    Narendra Modi Amit Shah 2

    ಕಳೆದ ವರ್ಷ ಮಾರ್ಚ್‌ 11ರಂದು ಜಾರಿಗೆ ಬಂದ ಪೌರತ್ವ ತಿದ್ದುಪಡಿ ಕಾಯ್ದೆ (Citizenship (Amendment) Act) ಪ್ರಕಾರ, 2014 ಡಿಸೆಂಬರ್‌ 31ರ ನಂತರ ಅಥವಾ ಅದಕ್ಕೂ ಮುನ್ನ ಧಾರ್ಮಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಭಾರತಕ್ಕೆ ಬಂದ ಅಲ್ಪಸಂಖ್ಯಾತ ಸದಸ್ಯರಿಗೆ ಭಾರತದ ಪೌರತ್ವ ನೀಡಲಾಗುವುದು. 2025ರ ವಲಸೆ ಮತ್ತು ವಿದೇಶಿಗರ ಕಾಯ್ದೆ ಅಡಿಯಲ್ಲಿ ಈ ಮಹತ್ವದ ಆದೇಶ ಹೊರಡಿಸಲಾಗಿದೆ. ಇದರಿಂದ 2014ರ ನಂತರ ಭಾರತಕ್ಕೆ ವಲಸೆ ಬಂದು ತಮ್ಮ ಬಗ್ಗೆ ಚಿಂತಿತರಾಗಿದ್ದ ಪಾಕಿಸ್ತಾನದ ಹಿಂದೂಗಳಿಗೆ ವಿಶೇಷವಾಗಿ ಹೆಚ್ಚಿನ ಸಂಖ್ಯೆಯ ಜನರಿಗೆ ಅನುಕೂಲ ಆಗಲಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಮುಂದುವರಿದ ಅಮೆರಿಕ ಸುಂಕ ಸಮರ; ತೈಲ ಖರೀದಿಗೆ ಭಾರತಕ್ಕೆ ದೊಡ್ಡ ಡಿಸ್ಕೌಂಟ್‌ ಕೊಟ್ಟ ರಷ್ಯಾ

    CAA protest

    ಸಿಎಎಯಲ್ಲಿ ಏನಿದೆ?
    ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ಥಾನದಲ್ಲಿ ಕಿರುಕುಳಕ್ಕೆ ಒಳಗಾದ ಮುಸ್ಲಿಮೇತರರಿಗೆ ಭಾರತದ ಪೌರತ್ವ (Citizenship) ನೀಡಲಾಗುತ್ತದೆ. 2014ರ ಡಿಸೆಂಬರ್ 31ಕ್ಕೆ ಮೊದಲು ರಕ್ಷಣೆ ಬಯಸಿ ಭಾರತಕ್ಕೆ ಶರಣಾರ್ಥಿಗಳಾಗಿ ಬಂದಿರುವ ಹಿಂದೂಗಳು, ಕ್ರೈಸ್ತರು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳಿಗೆ ಮಾತ್ರ ಸಿಎಎ ಅನ್ವಯ ಪೌರತ್ವ ನೀಡಲಾಗುತ್ತದೆ. ಪೌರತ್ವ ನೋಂದಣಿ ಪ್ರಕ್ರಿಯೆ ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿಯೇ ಮುಗಿಯಲಿದ್ದು, ದೇಶದಲ್ಲಿರುವ ಮುಸ್ಲಿಮರಿಗೆ ಸಿಎಎಯಿಂದ ಯಾವುದೇ ತೊಂದರೆ ಆಗುವುದಿಲ್ಲ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಸ್ಮಾರ್ಟ್ ಇಂಟೆಲಿಜೆಂಟ್ ವಿಲೇಜ್ – ಏನಿದು ಹೊಸ ಯೋಜನೆ?

  • ಪಾಕ್‌, ಬಾಂಗ್ಲಾ, ಅಫ್ಘಾನಿಸ್ತಾನದ 188 ಹಿಂದೂ ನಿರಾಶ್ರಿತರಿಗೆ ಪೌರತ್ವ ಪ್ರಮಾಣಪತ್ರ ನೀಡಿದ ಅಮಿತ್‌ ಶಾ

    ಪಾಕ್‌, ಬಾಂಗ್ಲಾ, ಅಫ್ಘಾನಿಸ್ತಾನದ 188 ಹಿಂದೂ ನಿರಾಶ್ರಿತರಿಗೆ ಪೌರತ್ವ ಪ್ರಮಾಣಪತ್ರ ನೀಡಿದ ಅಮಿತ್‌ ಶಾ

    ನವದೆಹಲಿ: ಹಿಂದಿನ ಸರ್ಕಾರಗಳ ತುಷ್ಟೀಕರಣ ನೀತಿಯಿಂದಾಗಿ ಭಾರತದಲ್ಲಿ ಪೌರತ್ವ ಬಯಸುತ್ತಿರುವ ಹಿಂದೂ, ಬೌದ್ಧ, ಸಿಖ್‌, ಜೈನ ನಿರಾಶ್ರಿತರಿಗೆ ನ್ಯಾಯ ಒದಗಿಸಲಿಲ್ಲ ಎಂದು ಇಂಡಿಯಾ ಒಕ್ಕೂಟದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಕಿಡಿಕಾರಿದ್ದಾರೆ.

    ಅಮಿತ್ ಶಾ ಅವರು ಗುಜರಾತ್‌ನ ಅಹಮದಾಬಾದ್‌ನಲ್ಲಿ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ 188 ಹಿಂದೂ ನಿರಾಶ್ರಿತರಿಗೆ ಸಿಎಎ (CAA) ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳನ್ನು ವಿತರಿಸಿದರು. ಇದನ್ನೂ ಓದಿ: ಮುಸ್ಲಿಮರಿಗೆ ಜಾತ್ಯತೀತ ನಾಗರಿಕ ಸಂಹಿತೆ ಸ್ವೀಕಾರಾರ್ಹವಲ್ಲ: ಮುಸ್ಲಿಂ ಮಂಡಳಿ

    ಸಿಎಎ ಕೇವಲ ಜನರಿಗೆ ಪೌರತ್ವ ನೀಡುವುದಕ್ಕಾಗಿ ಅಲ್ಲ. ಇದು ಲಕ್ಷಾಂತರ ಜನರಿಗೆ ನ್ಯಾಯ ಮತ್ತು ಹಕ್ಕುಗಳನ್ನು ನೀಡುತ್ತದೆ. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳ ತುಷ್ಟೀಕರಣದ ರಾಜಕೀಯದಿಂದಾಗಿ, ದೇಶದಲ್ಲಿ ಆಶ್ರಯ ಪಡೆದ ಜನರಿಗೆ 1947 ರಿಂದ 2014 ರವರೆಗೆ ನ್ಯಾಯ ಸಿಗಲಿಲ್ಲ. ಅವರು ಚಿತ್ರಹಿಂಸೆಗೊಳಗಾದರು. ನೆರೆಯ ದೇಶಗಳಲ್ಲಿ ಅವರು ಹಿಂದೂ, ಬೌದ್ಧ, ಸಿಖ್ ಅಥವಾ ಜೈನರಾಗಿದ್ದರು. ಆದರೆ ಅವರ ದೇಶದಲ್ಲಿಯೂ ಸಹ ಅವರನ್ನು ಹಿಂಸಿಸಲಾಯಿತು. ಇಂಡಿಯಾ ಮೈತ್ರಿಕೂಟದ ತುಷ್ಟೀಕರಣ ರಾಜಕೀಯವು ಅವರಿಗೆ ನ್ಯಾಯವನ್ನು ನೀಡಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

    ವಿಭಜನೆಯಾದಾಗ ಗಲಭೆಗಳು ನಡೆದವು. ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಲ್ಲಿ ವಾಸಿಸುವ ಕೋಟಿಗಟ್ಟಲೆ ಹಿಂದೂಗಳು, ಸಿಖ್ಖರು, ಜೈನರು ಮತ್ತು ಬೌದ್ಧರು ಭಾರವನ್ನು ಹೊರಬೇಕಾಯಿತು. ಈ ದೇಶಗಳ ನಿರಾಶ್ರಿತರಿಗೆ ಭಾರತದಲ್ಲಿ ಪೌರತ್ವ ನೀಡಲಾಗುವುದು ಎಂದು ಕಾಂಗ್ರೆಸ್ ಭರವಸೆ ನೀಡಿತ್ತು. ಆದರೆ ತನ್ನ ವೋಟ್‌ಬ್ಯಾಂಕ್ ಉದ್ದೇಶದಿಂದ ಪೌರತ್ವ ನೀಡುವ ಕೆಲಸ ಮಾಡಲಿಲ್ಲ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಕೋಲ್ಕತ್ತಾ ವೈದ್ಯೆ ಹತ್ಯಾಚಾರ; ನೈಟ್ ಶಿಫ್ಟ್ ಮಹಿಳೆಯರ ಸುರಕ್ಷತೆಗಾಗಿ ಪಶ್ಚಿಮ ಬಂಗಾಳ ಸರ್ಕಾರದಿಂದ 5 ಕ್ರಮ

    2019 ರಲ್ಲಿ ಕಾನೂನನ್ನು ಅಂಗೀಕರಿಸಲಾಗಿದ್ದರೂ ಪೌರತ್ವ ನೀಡಲು ವಿಳಂಬವಾಗಿದೆ. ಏಕೆಂದರೆ ಅಲ್ಪಸಂಖ್ಯಾತರನ್ನು ದಾರಿ ತಪ್ಪಿಸಲಾಗಿದೆ. ಆದರೆ ಸಿಎಎ ಯಾರಿಂದಲೂ ಪೌರತ್ವವನ್ನು ಕಸಿದುಕೊಳ್ಳುವುದಿಲ್ಲ. ಇಂದು ಕೂಡ ಕೆಲವು ರಾಜ್ಯ ಸರ್ಕಾರಗಳು ಜನರನ್ನು ದಾರಿ ತಪ್ಪಿಸುತ್ತಿವೆ. ನನ್ನ ರಾಜ್ಯದಲ್ಲಿ 128 ಕುಟುಂಬಗಳು ಭಾರತದ ಪ್ರಜೆಗಳಾಗಿ ಮಾರ್ಪಟ್ಟಿವೆ. ಬಾಂಗ್ಲಾದೇಶವನ್ನು ರಚಿಸಿದಾಗ ಅಲ್ಲಿ 27% ಹಿಂದೂಗಳಿದ್ದರು. ಆದರೆ ಇಂದು ಅದು 9% ನಷ್ಟಿದೆ. ಏಕೆಂದರೆ ಅವರು ತಮ್ಮ ಧರ್ಮವನ್ನು ಬದಲಾಯಿಸಲು ಒತ್ತಾಯಿಸಲಾಯಿತು ಎಂದು ತಿಳಿಸಿದ್ದಾರೆ.

  • ಪೌರತ್ವ ತಿದ್ದುಪಡಿ ಕಾಯ್ದೆ | ರಾಜ್ಯದಲ್ಲಿದ್ದ ಐವರು ಬಾಂಗ್ಲಾ ನಿರಾಶ್ರಿತರಿಗೆ ಭಾರತೀಯ ಪೌರತ್ವ

    ಪೌರತ್ವ ತಿದ್ದುಪಡಿ ಕಾಯ್ದೆ | ರಾಜ್ಯದಲ್ಲಿದ್ದ ಐವರು ಬಾಂಗ್ಲಾ ನಿರಾಶ್ರಿತರಿಗೆ ಭಾರತೀಯ ಪೌರತ್ವ

    – 40 ವರ್ಷಗಳ ಹೋರಾಟಕ್ಕೆ ಸಿಕ್ಕ ಫಲ

    ರಾಯಚೂರು: ಪೌರತ್ವ ತಿದ್ದುಪಡಿ ಕಾಯ್ದೆ (CAA) ಅಡಿಯಲ್ಲಿ ರಾಜ್ಯದಲ್ಲಿ ವಾಸಿಸುತ್ತಿರುವ ಐವರು ಬಾಂಗ್ಲಾ ನಿರಾಶ್ರಿತರಿಗೆ ಭಾರತೀಯ ಪೌರತ್ವ (Indian Citizenship) ಸಿಕ್ಕಿದೆ.

    ರಾಯಚೂರು (Raichur) ಜಿಲ್ಲೆ ಸಿಂಧನೂರು ತಾಲೂಕಿನ ಆರ್.ಎಚ್‌ ಕ್ಯಾಂಪ್‌ಗಳಲ್ಲಿ ವಾಸವಿರುವ ಐವರಿಗೆ ಭಾರತೀಯ ಪೌರತ್ವ ಸಿಕ್ಕಿದೆ. ಆರ್.ಎಚ್‌ಕ್ಯಾಂಪ್‌ಗಳಲ್ಲಿರುವ ರಾಮಕೃಷ್ಣನ್‌ ಅಭಿಕರಿ, ಸುಕುಮಾರ ಮೊಂಡಲ್, ಬಿ. ಪ್ರದಾಸ ಗೋಲ್ದರ್, ಜಯಂತ ಮೊಂಡಲ್, ಅದ್ವಿತ ಕೇಂದ್ರ ಗೃಹ ಇಲಾಖೆಯಿಂದ ಪೌರತ್ವ ಪಡೆದ ಬಾಂಗ್ಲಾ ವಲಸಿಗರಾಗಿದ್ದಾರೆ. ಜನಗಣತಿ ಕಾರ್ಯಾಚರಣೆ ಹಾಗೂ ನಾಗರಿಕ ನೋಂದಣಿ ನಿರ್ದೇಶನಾಲಯದಿಂದ ಅಧಿಕೃತವಾಗಿ ಪೌರತ್ವ ಪತ್ರ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ – ಕೇಂದ್ರದಿಂದ ಅಧಿಸೂಚನೆ ಪ್ರಕಟ

    ಬಾಂಗ್ಲಾ ವಲಸಿಗರು ಇಲ್ಲಿ ಆಶ್ರಯ ಪಡೆದಿದ್ದೇಗೆ?
    1971ರ ಬಾಂಗ್ಲಾದೇಶ ವಿಮೋಚನಾ ವೇಳೆ ಬಾಂಗ್ಲಾ ಹಾಗೂ ಬರ್ಮಾ ವಲಸಿಗರಿಗೆ ಭಾರತದಲ್ಲಿ ಆಶ್ರಯ ನೀಡಲಾಗಿತ್ತು. ಈ ವೇಳೆ ಸಿಂಧನೂರು ತಾಲೂಕಿನಲ್ಲಿ ಸುಮಾರು 932 ಕುಟುಂಬಗಳಿಗೆ 5 ಸಾವಿರ ಎಕರೆ ಜಮೀನು ನೀಡಲಾಗಿತ್ತು. 1971ರ ಬಳಿಕ ಬಂದ ಕುಟುಂಬಗಳಿಗೆ ಪೌರತ್ವ ಹಾಗೂ ಯಾವುದೇ ಸೌಲಭ್ಯ ನೀಡಿರಲಿಲ್ಲ. ಪೌರತ್ವಕ್ಕಾಗಿ ನಿರಾಶ್ರಿತರು ಕಳೆದ 40 ವರ್ಷಗಳಿಂದ ಅರ್ಜಿ ಹಾಕುತ್ತಲೇ ಇದ್ದರು. ಅದರಂತೆ ಐವರಿಗೆ ಪೌರತ್ವ ಸಿಕ್ಕಿದೆ. ಪೌರತ್ವ ಕೋರಿ ಒಟ್ಟು 146 ಅರ್ಜಿಗಳು ಸಲ್ಲಿಕೆಯಾಗಿತ್ತು. ಈ ಪೈಕಿ ಆರ್.ಎಚ್ ಕ್ಯಾಂಪ್‌ನಲ್ಲಿ ವಾಸಿಸುತ್ತಿರುವ ಐವರಿಗೆ ಪೌರತ್ವ ದೊರೆತಿದೆ. ಇದನ್ನೂ ಓದಿ: Koppala | ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ನ ಚೈನ್ ಲಿಂಕ್ ಕಟ್ – ಜನರಲ್ಲಿ ಆತಂಕ!

    ಸಿಎಎಯಲ್ಲಿ ಏನಿದೆ?
    ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ಥಾನದಲ್ಲಿ ಕಿರುಕುಳಕ್ಕೆ ಒಳಗಾದ ಮುಸ್ಲಿಮೇತರರಿಗೆ ಭಾರತದ ಪೌರತ್ವ (Citizenship) ನೀಡಲಾಗುತ್ತದೆ. 2014ರ ಡಿಸೆಂಬರ್ 31ಕ್ಕೆ ಮೊದಲು ರಕ್ಷಣೆ ಬಯಸಿ ಭಾರತಕ್ಕೆ ಶರಣಾರ್ಥಿಗಳಾಗಿ ಬಂದಿರುವ ಹಿಂದೂಗಳು, ಕ್ರೈಸ್ತರು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳಿಗೆ ಮಾತ್ರ ಸಿಎಎ ಅನ್ವಯ ಪೌರತ್ವ ನೀಡಲಾಗುತ್ತದೆ. ಪೌರತ್ವ ನೋಂದಣಿ ಪ್ರಕ್ರಿಯೆ ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿಯೇ ಮುಗಿಯಲಿದ್ದು, ದೇಶದಲ್ಲಿರುವ ಮುಸ್ಲಿಮರಿಗೆ ಸಿಎಎಯಿಂದ ಯಾವುದೇ ತೊಂದರೆ ಆಗುವುದಿಲ್ಲ. ಇದನ್ನೂ ಓದಿ: TB ಡ್ಯಾಮ್‌ ಪರಿಶೀಲನೆಗೆ ಬೆಂಗಳೂರು, ಹೈದರಾಬಾದ್‌, ಚೆನ್ನೈನಿಂದ ತಜ್ಞರ ತಂಡ ಆಗಮನ: ತಂಗಡಗಿ 

  • ಮೋದಿ ಗ್ಯಾರಂಟಿಗೆ ತಾಜಾ ಉದಾಹರಣೆ ಸಿಎಎ: ಪ್ರಧಾನಿ

    ಮೋದಿ ಗ್ಯಾರಂಟಿಗೆ ತಾಜಾ ಉದಾಹರಣೆ ಸಿಎಎ: ಪ್ರಧಾನಿ

    ಲಕ್ನೋ: ಮೋದಿ ಗ್ಯಾರಂಟಿಗೆ (Modi Guarantee) ತಾಜಾ ಉದಾಹರಣೆ ಸಿಎಎ. ಸಿಎಎ (CAA) ಅಡಿಯಲ್ಲಿ ಪೌರತ್ವ ಪ್ರಮಾಣ ಪತ್ರ ನೀಡಲು ಆರಂಭಿಸಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.

    ಉತ್ತರ ಪ್ರದೇಶದ (Uttar Pradesh) ಲಾಲ್‌ಗಂಜ್‌ನಲ್ಲಿ (Lalganj) ಮಾತನಾಡಿದ ಅವರು, ವಿದೇಶಗಳಿಂದ ಬಂದಿರುವ ಅಲ್ಪಸಂಖ್ಯಾತರು ನಮ್ಮ ದೇಶದಲ್ಲಿದ್ದಾರೆ. ಧರ್ಮದ ಆಧಾರದ ಮೇಲೆ ದೇಶ ಹಂಚಿಕೆಯಾದಾಗ ಬಲಿಯಾದವರು ಇವರು. ಅವರು ಯಾವಾಗ ಬೇಕಾದರೂ ಬರಬಹುದು ಎಂದು ಗಾಂಧೀಜಿ ಹೇಳಿದ್ದರು. ಆದರೆ ಕಾಂಗ್ರೆಸ್ ಈ ಜನರ ಬಗ್ಗೆ ಗಮನಿಸಿಲ್ಲ. ಇಲ್ಲಿನ ಮತಬ್ಯಾಂಕ್‌ಗಾಗಿ ಗಮನಿಸಿಲ್ಲ. ದಲಿತ, ಓಬಿಸಿ ಸಮುದಾಯದ ಜನರು ಕಷ್ಟದಲ್ಲಿದ್ದರು. ಅವರನ್ನು ಕರೆತರುವ ಕೆಲಸ ನಾವು ಮಾಡಿದ್ದೇವೆ ಎಂದರು. ಇದನ್ನೂ ಓದಿ: ರಾಹುಲ್‌ ಗಾಂಧಿ ಪರ ಡಿಕೆಶಿ ಪ್ರಚಾರ – ಮೋದಿಗೆ ಸಾಲು ಸಾಲು ಪ್ರಶ್ನೆ

    ಹತ್ತು ವರ್ಷಗಳ ಹಿಂದೆ ಜನರು ದೇವರ ಭರವಸೆಯಲ್ಲಿ ಬದುಕುತ್ತಿದ್ದರು. ಕೆಲವು ಕಡೆ ಬಾಂಬ್ ದಾಳಿ, ಕೆಲವು ಕಡೆ ಸ್ಲೀಪರ್ ಸೆಲ್, ಕೆಲವು ಕಡೆ ಕೋಮು ಘರ್ಷಣೆ, ಇನ್ನೂ ಕೆಲವು ಕಡೆ ಭಯೋತ್ಪಾದನೆಯಿಂದ ಸಂಕಷ್ಟ ಪರಿಸ್ಥಿತಿ ಇತ್ತು. ಸಾವಿರಾರು ತಾಯಂದಿರು ತಮ್ಮ ಮಕ್ಕಳನ್ನು ಕಳೆದುಕೊಂಡರು. ಈ ಹಿಂದಿನ ಸರ್ಕಾರಗಳು ಇಂತಹ ಜನರಿಗೆ ಸಹಕಾರ ನೀಡುತ್ತಿದ್ದವು. ಈಗಲೂ ನಿಮ್ಮ ಮೀಸಲಾತಿಯನ್ನು ಕಿತ್ತು ಸಮುದಾಯವೊಂದಕ್ಕೆ ನೀಡಲು ಚಿಂತಿಸಿವೆ. ಬಜೆಟ್ 15% ಅಲ್ಪಸಂಖ್ಯಾತರ ಹೆಸರಿನಲ್ಲಿ ಹೋಗುತ್ತಿದೆ. 70 ವರ್ಷಗಳಿಂದ ಹಿಂದೂ-ಮುಸ್ಲಿಂ ರಾಜಕೀಯ ಮಾಡಿವೆ. ನಾವು ಒಂದಾಗಿ ಹೋಗಬೇಕು. ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಉಚಿತ ಪಡಿತರ ಜನರ ತೆರಿಗೆ ಹಣದಿಂದ ನೀಡಲಾಗುತ್ತಿದೆ, ದಯೆ ರೂಪದಲ್ಲಿ ಬಿಂಬಿಸುವ ಅಗತ್ಯವಿಲ್ಲ: ಮಾಯಾವತಿ ಟೀಕೆ

  • ಸಿಎಎ ಅಡಿಯಲ್ಲಿ 14 ಜನರಿಗೆ ಮೊದಲ ಬಾರಿಗೆ ಪೌರತ್ವ ಪ್ರಮಾಣ ಪತ್ರ ಹಸ್ತಾಂತರ

    ಸಿಎಎ ಅಡಿಯಲ್ಲಿ 14 ಜನರಿಗೆ ಮೊದಲ ಬಾರಿಗೆ ಪೌರತ್ವ ಪ್ರಮಾಣ ಪತ್ರ ಹಸ್ತಾಂತರ

    ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (CAA) ಅಧಿಕೃತವಾಗಿ ಜಾರಿಯಾದ ಬಳಿಕ 14 ಜನರಿಗೆ ಮೊದಲ ಬಾರಿಗೆ ಪೌರತ್ವ ಪ್ರಮಾಣ ಪತ್ರವನ್ನು ಕೇಂದ್ರ ಗೃಹ ಇಲಾಖೆ ನೀಡಿದೆ.

    ಗೃಹ ಇಲಾಖೆಯ ಕಾರ್ಯದರ್ಶಿ ಅಜಯ್ ಭಲ್ಲಾ ಪ್ರಮಾಣ ಪತ್ರ ವಿತರಿಸಿದರು. ಮೊದಲ ಹಂತದಲ್ಲಿ 14 ಮಂದಿ ಒಳಗೊಂಡಂತೆ 300 ಮಂದಿಗೆ ಪೌರತ್ವ ಪ್ರಮಾಣ ಪತ್ರ ನೀಡಲಾಗುತ್ತಿದೆ. ಇದಕ್ಕಾಗಿ ತಯಾರಿಸಿ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಿದ್ದ 14 ಜನರ ಅರ್ಜಿಗಳ ಪ್ರಕ್ರಿಯೆಯನ್ನು ಅಜಯ್ ಭಲ್ಲಾ ಪೂರ್ಣಗೊಳಿಸಿದರು. ಇದನ್ನೂ ಓದಿ: ಮೋದಿ ಬೀಳ್ಕೊಡುಗೆಗೆ ದೇಶದ ಜನರು ಸಿದ್ಧವಾಗಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

    2014 ರ ಡಿಸೆಂಬರ್ 31 ಅಥವಾ ಅದಕ್ಕೂ ಮೊದಲು ಭಾರತಕ್ಕೆ ಬಂದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ರಾಷ್ಟ್ರೀಯತೆಯನ್ನು ನೀಡಲು ಡಿಸೆಂಬರ್ 2019 ರಲ್ಲಿ CAA ಅನ್ನು ಜಾರಿಗೊಳಿಸಲಾಗಿದೆ. ಇದರಲ್ಲಿ ಹಿಂದೂಗಳು, ಸಿಖ್‌ಗಳು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದ್ದಾರೆ.

    ಸಂಸತ್‌ನಲ್ಲಿ ಅನುಮೋದನೆ ಪಡೆದ ನಾಲ್ಕು ವರ್ಷದ ಬಳಿಕ ಕಳೆದ ಮಾರ್ಚ್ 11 ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಇದನ್ನೂ ಓದಿ: ಪಿಒಕೆ ಭಾರತದ ಭಾಗ, ಮರಳಿ ಪಡೆದೇ ಪಡೆಯುತ್ತೇವೆ – ಬಂಗಾಳದಲ್ಲಿ ಅಮಿತ್ ಶಾ ಗುಡುಗು

  • 10 ವರ್ಷಗಳ ಸಾಧನೆ ಬಿಜೆಪಿಗೆ ಬೂಸ್ಟರ್‌ ಡೋಸ್‌ ಕೊಡುತ್ತಾ? 

    10 ವರ್ಷಗಳ ಸಾಧನೆ ಬಿಜೆಪಿಗೆ ಬೂಸ್ಟರ್‌ ಡೋಸ್‌ ಕೊಡುತ್ತಾ? 

    ನವದೆಹಲಿ: 2024ರ ಲೋಕಸಭಾ ಚುನಾವಣೆ ಕಳೆಗಟ್ಟಿದೆ. ಈಗಾಗಲೇ ಮೊದಲ ಹಂತದ ಚುನಾವಣೆ ನಡೆಯುತ್ತಿದ್ದು, ಮೊದಲಿಗೆ 21 ರಾಜ್ಯಗಳ 102 ಕ್ಷೇತ್ರಗಳಿಗೆ ಮತದಾನ ನಡೆದಿದೆ. ಇದರಿಂದಾಗಿ ರಾಷ್ಟ್ರೀಯ ಪಕ್ಷಗಳ ನಡುವೆ ಕೆಸರೆರಚಾಟ ಶುರುವಾಗಿದೆ. ಕಾಂಗ್ರೆಸ್‌ ತನ್ನ ಗ್ಯಾರಂಟಿಗಳ ಮೇಲೆ ನಂಬಿಕೆಯಿಟ್ಟಿದ್ದರೆ, ಬಿಜೆಪಿ ಮೋದಿ ಗ್ಯಾರಂಟಿಯ ಮೇಲೆ ಭರವಸೆ ಹೊಂದಿದೆ. ಅದಕ್ಕೆ ಪೂರಕವಾಗಿ ಕಳೆದ 10 ವರ್ಷಗಳಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರ ಮುಂದೆ ಬಿತ್ತರಿಸಲು ಶುರು ಮಾಡಿದ್ದಾರೆ.

    ಕಳೆದ 10 ವರ್ಷಗಳ ಸಾಧನೆಯನ್ನು ಬಣ್ಣಿಸುತ್ತಿರುವ ಪ್ರಧಾನಿ ಮೋದಿ ಅವರು, ಮುಂದಿನ ಗ್ಯಾರಂಟಿಗಳೊಂದಿಗೆ ಚುನಾವಣೆ ಎದುರಿಸುತ್ತಿದ್ದಾರೆ. ಇತ್ತೀಚೆಗೆ ಮಾಧ್ಯಮಗಳಿಗೆ ನೀಡುತ್ತಿರುವ ಸಂದರ್ಶನಗಳಲ್ಲಿ ನೆರೆ-ಹೊರೆ ದೇಶಗಳ ಜೊತೆಗಿನ ಸಂಬಂಧ, ಲೋಕಸಭಾ ಚುನಾವಣೆ, ಭಾರತದಲ್ಲಿ ಪ್ರಜಾಪ್ರಭುತ್ವ, ಮುಕ್ತ ಪತ್ರಿಕಾ ಸ್ವಾತಂತ್ರ್ಯ, ಮೂಲಸೌಕರ್ಯ ಅಭಿವೃದ್ಧಿ, ಪರಿಸರ ಸಂರಕ್ಷಣೆ, ಡಿಜಿಟಲ್ ಕೇತ್ರದಲ್ಲಿನ ಭಾರತದ ಸಾಧನೆ ಮೊದಲಾದ ವಿಷಯಗಳ ಕುರಿತು ಮುಕ್ತವಾಗಿ ಮಾತನಾಡಿದ್ದಾರೆ.

    ಪ್ರಸ್ತುತ ಚುನಾವಣೆಯಲ್ಲಿ 3ನೇ ಬಾರಿಗೆ ಅಧಿಕಾರದ ಗದ್ದುಗೆ ಹಿಡಿಯಲೇಬೇಕೆಂದು ಪಣ ತೊಟ್ಟಿರುವ ಪ್ರಧಾನಿ ಮೋದಿ, 3ನೇ ಅತಿದೊಡ್ಡ ಆರ್ಥಿಕ ದೇಶವಾಗಿ ಮಾಡುವ ಗುರಿ ಹೊಂದಿರುವುದಾಗಿ ಮಹತ್ವದ ಗ್ಯಾರಂಟಿ ನೀಡಿದ್ದಾರೆ. ಹಾಗಾದ್ರೆ ಕಳೆದ 10 ವರ್ಷಗಳಲ್ಲಿ ಅಧಿಕಾರಕ್ಕೆ ಬಂದ ನಂತರ ರಾಷ್ಟ್ರದಲ್ಲಿ ಏನೇನು ಬೆಳವಣಿಯಾಗಿದೆ ಎಂಬುದನ್ನು ತಿಳಿಯುವ ಕುತೂಹಲ ನಿಮಗಿದ್ದರೆ ಮುಂದೆ ಓದಿ…

    ಸಂವಿಧಾನದ 370ನೇ ವಿಧಿ ರದ್ದು:

    ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿತು. ಭಾರತದ ಸಂವಿಧಾನದ 370ನೇ ವಿಧಿಯು ಉತ್ತರ ಭಾರತದಲ್ಲಿ ವಿವಾದಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿಕೊಟ್ಟಿತ್ತು. ಇದು ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರತ್ಯೇಕ ಸಂವಿಧಾನ, ರಾಜ್ಯಧ್ವಜ ಮತ್ತು ಆಂತರಿಕ ಆಡಳಿತ ಸ್ವಾಯತತ್ತೆಯನ್ನು ಒದಗಿಸಿತ್ತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ವಿಧಿಯನ್ನ ರದ್ದುಗೊಳಿಸಿತು. 370ನೇ ವಿಧಿ ರದ್ದತಿಯ ನಂತರ ಆ ಪ್ರದೇಶ ಜಾಗತಿಕ ಕಾರ್ಯಕ್ರಮಗಳ ತಾಣವಾಗಿ ಬದಲಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಅಲ್ಲದೇ ಇತ್ತೀಚೆಗೆ ಪ್ರಮುಖ ಹೂಡಿಕೆಗಾದರರೂ ಜಮ್ಮು ಮತ್ತು ಕಾಶ್ಮೀರದಂತಹ ಪ್ರದೇಶಗಳಲ್ಲಿ ಹೂಡಿಕೆಗೆ ಮನಸ್ಸು ಮಾಡುತ್ತಿರುವುದು ಗಮನಾರ್ಹ.

    ಮಹಿಳೆಯರಿಗೆ ಮೀಸಲಾತಿ:

    ಕೇಂದ್ರ ಸರ್ಕಾರ ಹೊಸ ಸಂಸತ್‌ ಕಟ್ಟಡದ ಮೊದಲ ವಿಶೇಷ ಅಧಿವೇಶನ ಸಮಯದಲ್ಲಿ ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಯಲ್ಲಿ ಮಹಿಳೆಯರಿಗೆ 33% ಮೀಸಲಾತಿ (Women Reservation) ನೀಡುವ ಮಸೂದೆಯನ್ನು ಪಾಸ್‌ ಮಾಡಿದೆ. 1989 ರಿಂದ ಈ ವಿಚಾರ ಸಂಸತ್ತಿನಲ್ಲಿ ಚರ್ಚೆ ಆಗುತ್ತಲೇ ಇತ್ತು. ಆದರೆ 2023ರ ಸೆಪ್ಟೆಂಬರ್‌ನಲ್ಲಿ ಮಸೂದೆಯನ್ನು ಪಾಸ್‌ ಮಾಡಲಾಗಿದೆ.  ಅಲ್ಲದೇ ಸಶಸ್ತ್ರ ಮೀಸಲು ಪಡೆಗಳು ಸೇರಿದಂತೆ ಎಲ್ಲ ಕ್ಷೇತ್ರಗಲ್ಲಿಯೂ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚುತ್ತಿದೆ. ಅಲ್ಲದೇ ಮಹಿಳೆಯರಿಗಾಗಿ ನಮೋ ಡ್ರೋನ್‌ ದೀದಿ, ಲಕ್‌ಪತಿ ದೀದಿ, ಸ್ವಸಹಾಯ ಸಂಘಗಳಿಗೆ ಆರ್ಥಿಕ ಸಹಾಯ ನೀಡುವ ಮೂಲಕ ನಾರಿ ಶಕ್ತಿಯ ಬಲ ಹೆಚ್ಚಿಸಿದೆ ಎಂದು ಮೋದಿ ಹೇಳಿಕೊಂಡಿದ್ದಾರೆ.

    ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ:

    ಕಳೆದ ಮಾರ್ಚ್‌ ತಿಂಗಳಿನಲ್ಲಿ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನುಷ್ಠಾನಗೊಳಿಸಿತು.. 2014ರ ಡಿಸೆಂಬರ್‌ 31ಕ್ಕೂ ಮುನ್ನ  ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶಲ್ಲಿ ಧಾರ್ಮಿಕ ಅಲ್ಪಸಂಖ್ಯಾತರಾದ ಕಾರಣಕ್ಕೆ ಅಲ್ಲಿ ಕಿರುಕುಳ ಅನುಭವಿಸಿ, ಬದುಕಲಾಗದೆ 31 ಡಿಸೆಂಬರ್‌ 2014ಕ್ಕಿಂತ ಮುಂಚೆ ಭಾರತದೊಳಗೆ ಓಡಿಬಂದ ಹಿಂದೂ, ಜೈನ, ಭೌದ್ಧ, ಕ್ರಿಶ್ಚಿಯನ್‌, ಪಾರ್ಸಿ ಮತ್ತು ಸಿಖ್ಖರನ್ನು ಭಾರತೀಯ ನಾಗರಿಕರು ಎಂದು ಪರಿಗಣಿಸಿ ಅವರಿಗೆ ಈ ಕಾಯ್ದೆಯ ಅಡಿ ಪೌರತ್ವ ನೀಡಲಾಗುತ್ತದೆ. 

    ತ್ರಿವಳಿ ತಲಾಖ್‌ ನಿಷೇಧ:

    2019ರ ಜುಲೈ 30 ರಂದು ಭಾರತದ ಸಂಸತ್ತು ತ್ರಿವಳಿ ತಲಾಖ್‌ ಪದ್ದತಿಯನ್ನು ಕಾನೂನುಬಾಹಿರ ಮತ್ತು ಅಸಾಂವಿಧಾನಿಕ ಎಂದು ಘೋಷಣೆ ಮಾಡಿತು. ಆನಂತರ 2019ರ ಆಗಸ್ಟ್‌ 1 ರಂದು ಮುಸ್ಲಿಂ ಮಹಿಳೆಯರ ವಿಹಾಹದ ಮೇಲಿನ ಹಕ್ಕುಗಳ ಸಂರಕ್ಷಣೆ ಕಾಯ್ದೆ 2019 ಹೆಸರಿನಲ್ಲಿ ಶಿಕ್ಷಾರ್ಹ ಕಾಯ್ದೆಯನ್ನು ಅನುಷ್ಟಾನಗೊಳಿಸಲಾಯಿತು. ಈ ನಿಯಮ ಉಲ್ಲಂಘಿಸಿದರೆ ಕನಿಷ್ಠ 3 ವರ್ಷ ಜೈಲು ಶಿಕ್ಷಗೆ ವ್ಯಕ್ತಿ ಗುರಿಯಾಗಬಹುದು ಜೊತೆಗೆ ದಂಡ ವಿಧಿಸಲಾಗುತ್ತದೆ. ಅಲ್ಲದೇ ತ್ರಿವಳಿ ತಲಾಖ್‌ ಪಡೆದ ಸಂತ್ರಸ್ತೆಯು ಪತಿಯಿಂದ ಜೀವನಾಂಶ ಪಡೆಯಲು ಅರ್ಹಳಾಗಿರುತ್ತಾಳೆ, ಜೊತೆಗೆ ಮಕ್ಕಳನ್ನು ತನ್ನ ಸುಪರ್ದಿಗೆ ಪಡೆಯುವ ಅವಕಾಶವೂ ಮಹಿಳೆಗೆ ಇರುತ್ತದೆ ಎಂಬುದು ಗಮನಾರ್ಹ.

    ಹೆದ್ದಾರಿಗಳ ಸಂಖ್ಯೆಯಲ್ಲಿ ಹೆಚ್ಚಳ:

    ಕಳೆದ 10 ವರ್ಷಗಳಲ್ಲಿ ತಮ್ಮ ಸರ್ಕಾರದ ಅವಧಿಯಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಸಂಖ್ಯೆ ಶೇ.60 ರಷ್ಟು ಹೆಚ್ಚಳವಾಗಿದೆ. 91,287 ಕಿಮೀ ಗಳಿಂದ 1,46,145 ಕಿಮೀಗಳಿಗೆ ಹೆಚ್ಚಿಸಿದ್ದೇವೆ. ದೇಶಾದ್ಯಂತ ವಿಮಾನ ನಿಲ್ದಾಣಗಳ ಸಂಖ್ಯೆ ದ್ವಿಗುಣಗೊಂಡಿದೆ. 1 ಕೋಟಿ ಮನೆಗಳಿಗೆ ಸೌರ ವಿದ್ಯುತ್‌ ಕಲ್ಪಿಸಲಾಗಿದೆ. ಅಲ್ಲದೇ ಕಳೆದ 1 ದಶಕದಲ್ಲಿ ಸೌರಶಕ್ತಿ ಬಳಕೆಯಲ್ಲೂ ಗಣನೀಯ ಏರಿಕೆ ಕಂಡಿದೆ ಎಂಬುದಾಗಿ ಪ್ರಧಾನಿ ಹೇಳಿದ್ದಾರೆ. ದೇಶದಲ್ಲಿ ಸೌರಶಕ್ತಿ ಸಾಮರ್ಥ್ಯವೂ 2014 ರಿಂದ 2024ರ ಅವಧಿಗೆ 2,820 ಮೆಗಾವ್ಯಾಟ್‌ನಿಂದ 72,000 ಮೆಗಾವ್ಯಾಟ್‌ಗೆ ತಲುಪಿದೆ. ಭಾರತ ಕೈಗೊಂಡಿರುವ ಭವಿಷ್ಯದ ಯೋಜನೆಗಳೂ ಸಹ ಹವಾಮಾನ ಸುಧಾರಣೆಯ ವಿಚಾರದಲ್ಲಿ ಭದ್ರತೆ ಹೊಂದಿರುವುದಾಗಿ ಹೇಳಿದ್ದಾರೆ. ಅಲ್ಲದೇ 12,349 ಕಿಮೀ ರಾಷ್ಟ್ರೀಯ ಹೆದ್ದಾರಿಯನ್ನು 2023-24ರ ಅವಧಿಯಲ್ಲಿ ನಿರ್ಮಾಣ ಮಾಡಲಾಗಿದೆ.

    ಪ್ರಮುಖ ಬೆಳವಣಿಗೆ ಮುಖ್ಯಾಂಶಗಳು:

    • ಹೆಚ್‌ಎಎಲ್‌ 2026ರ ವೇಳೆ 2 ಲಕ್ಷ ಕೋಟಿ ರೂ. ವಹಿವಾಟು ನಡೆಸುವ ಗುರಿ ಹೊಂದಿದೆ.
    • ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗ ಸಭೆ ಆಯೋಜನೆ
    • ಅತಿದೊಡ್ಡ ಆರ್ಥಿಕತೆ ಹೊಂದಿದ ದೇಶಗಳ ಪಟ್ಟಿಯಲ್ಲಿ 11ನೇ ಸ್ಥಾನದಲ್ಲಿದ್ದ ಭಾರತ 5ನೇ ಸ್ಥಾನಕ್ಕೆ ಜಿಗಿದಿದೆ.
    • ಸೆನ್ಸೆಕ್ಸ್‌ ಸಾರ್ವಕಾಲಿಕ ದಾಖಲೆ. 2014ರಲ್ಲಿ 25,000 ಸಾವಿರ ದಷ್ಟಿದ್ದ ಷೇರುಪೇಟೆ ಸೂಚ್ಯಂಕ 2024ರಲ್ಲಿ 75000 ಅಂಕಗಳನ್ನು ದಾಟಿದೆ.
    • 3ನೇ ಅತಿದೊಡ್ಡ ಸ್ಟಾರ್ಟ್‌ಅಪ್‌ ಪರಿಸರ ವ್ಯವಸ್ಥೆ ಹೊಂದಿದ ದೇಶವಾಗಿ ಭಾರತ ಗುರುತಿಸಿಕೊಂಡಿದೆ ಎಂಬುದಾಗಿಯೂ ಪ್ರಧಾನಿ ಮೋದಿ ತಿಳಿಸಿದ್ದಾರೆ.

  • ಸಿಎಎ ರದ್ದು, ಎಲ್ಲಾ ವಿದ್ಯಾರ್ಥಿಗಳಿಗೆ ಮಾಸಿಕ ವಿದ್ಯಾರ್ಥಿ ವೇತನ, 10 ಉಚಿತ ಎಲ್‌ಪಿಜಿ ಸಿಲಿಂಡರ್‌ – ಟಿಎಂಸಿ ಪ್ರಣಾಳಿಕೆಯಲ್ಲಿ ಘೋಷಣೆ

    ಸಿಎಎ ರದ್ದು, ಎಲ್ಲಾ ವಿದ್ಯಾರ್ಥಿಗಳಿಗೆ ಮಾಸಿಕ ವಿದ್ಯಾರ್ಥಿ ವೇತನ, 10 ಉಚಿತ ಎಲ್‌ಪಿಜಿ ಸಿಲಿಂಡರ್‌ – ಟಿಎಂಸಿ ಪ್ರಣಾಳಿಕೆಯಲ್ಲಿ ಘೋಷಣೆ

    ಕೋಲ್ಕತ್ತಾ: ಪೌರತ್ವ ತಿದ್ದುಪಡಿ ಕಾಯ್ದೆ (CAA) ರದ್ದು, ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ (UCC), ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ (NRC) ಅನುಷ್ಠಾನವನ್ನು ನಿಲ್ಲಿಸುವುದಾಗಿ ಮಮತಾ ಬ್ಯಾನರ್ಜಿ(Mamata Banerjee) ನೇತೃತ್ವದ ತೃಣಮೂಲ ಕಾಂಗ್ರೆಸ್‌ (TMC) ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ.

    ಇಂದು ಟಿಎಂಸಿ ಸಂಸದ ಡೆರೆಕ್ ಒ’ಬ್ರೇನ್, ಪಶ್ಚಿಮ ಬಂಗಾಳದ (West Bengal) ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಮತ್ತು ಮುಖ್ಯಮಂತ್ರಿಗಳ ವಿಶೇಷ ಸಲಹೆಗಾರ ಅಮಿತ್ ಮಿತ್ರ ಅವರು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಪಾಲ್ಗೊಂಡಿರಲಿಲ್ಲ. ಇದನ್ನೂ ಓದಿ: ಧಾರವಾಡದಲ್ಲಿ 18 ಕೋಟಿ ಪತ್ತೆ – ಎಸ್‌ಬಿಐಗೆ ಹಣ ರವಾನೆ

     

    ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷವು ಪ್ರಸ್ತಾವಿತ ರಾಷ್ಟ್ರೀಯ ನಾಗರಿಕರ ನೋಂದಣಿಗೆ ವಿರೋಧ ವ್ಯಕ್ತಪಡಿಸಿದೆ, ಪಶ್ಚಿಮ ಬಂಗಾಳದಲ್ಲಿ ಇದನ್ನು ಎಂದಿಗೂ ಜಾರಿಗೆ ತರುವುದಿಲ್ಲ ಎಂದು ಹೇಳಿದೆ.

    ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯ ಅಡಿಯಲ್ಲಿ ದೈನಂದಿನ ಭತ್ಯೆಯನ್ನು ದಿನಕ್ಕೆ 400 ರೂ.ಗೆ ಹೆಚ್ಚಿಸುವುದಾಗಿ ಭರವಸೆ ನೀಡಿದೆ. ಎಲ್ಲರಿಗೂ ಪಕ್ಕಾ ಮನೆಗಳನ್ನು ನಿರ್ಮಿಸುವ ಭರವಸೆಯನ್ನೂ ಪಕ್ಷ ನೀಡಿದೆ.  ಇದನ್ನೂ ಓದಿ: ಜನತಂತ್ರದ ಹಬ್ಬ – ಚುನಾವಣಾ ಖರ್ಚು ವೆಚ್ಚ ಹೇಗೆ ನಡೆಯುತ್ತೆ? – ಈ ಬಾರಿ ಅಂದಾಜಿಸಿರುವ ವೆಚ್ಚ ಎಷ್ಟು?

     

    ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ವರ್ಷಕ್ಕೆ 10 ಉಚಿತ ಎಲ್‌ಪಿಜಿ ಸಿಲಿಂಡರ್‌ಗಳು, ಪ್ರತಿ ಪಡಿತರ ಚೀಟಿದಾರರಿಗೆ ಮನೆಗೆ 5 ಕೆಜಿ ಉಚಿತ ಪಡಿತರ. 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಪ್ರತಿ ತಿಂಗಳು 1,000 ರೂ. ಪಿಂಚಣಿ. 10 ಲಕ್ಷ ರೂಪಾಯಿಯ ವೈದ್ಯಕೀಯ ವಿಮೆ ನೀಡುವುದಾಗಿ ಭರವಸೆ ನೀಡಲಾಗಿದೆ.

    ಯುವಕರಿಗೆ, ಎಲ್ಲ ವಿದ್ಯಾರ್ಥಿಗಳಿಗೆ 25 ವರ್ಷದವರೆಗೆ ಮಾಸಿಕ ವಿದ್ಯಾರ್ಥಿ ವೇತನ.  ಉನ್ನತ ಶಿಕ್ಷಣ ಓದಲು ಬಯಸುವವರಿಗೆ 10 ಲಕ್ಷ ರೂ. ಮೌಲ್ಯದ ವಿದ್ಯಾರ್ಥಿ ಕ್ರೆಡಿಟ್ ಕಾರ್ಡ್ ನೀಡಲಾಗುವುದು ಎಂದು ಪಕ್ಷ ಭರವಸೆ ನೀಡಿದೆ.

    ಬಂಗಾಳದ ಲಕ್ಷ್ಮೀರ್ ಭಂಡಾರ್ ಯೋಜನೆಯ ಮಾದರಿಯಲ್ಲಿ ದೇಶಾದ್ಯಂತ ಮಹಿಳೆಯರಿಗೆ ಮಾಸಿಕ ಹಣವನ್ನು ನೀಡಲಾಗುವುದು ಎಂದು ಟಿಎಂಸಿ ಪ್ರಣಾಳಿಕೆಯಲ್ಲಿ ತಿಳಿಸಿದೆ.

  • ಒಳನುಸುಳುವಿಕೆ ತಡೆಯಲು ಬಿಜೆಪಿಗೆ ಮತ ನೀಡಿ: ಬಂಗಾಳದಲ್ಲಿ ಅಮಿತ್ ಶಾ ಮನವಿ

    ಒಳನುಸುಳುವಿಕೆ ತಡೆಯಲು ಬಿಜೆಪಿಗೆ ಮತ ನೀಡಿ: ಬಂಗಾಳದಲ್ಲಿ ಅಮಿತ್ ಶಾ ಮನವಿ

    ಕೋಲ್ಕತ್ತಾ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು (CAA) ನಾವು ಜಾರಿ ಮಾಡಿದ್ದೇವೆ. ಆದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ಅಲ್ಪ ಸಂಖ್ಯಾತರ ಪೌರತ್ವ ರದ್ದಾಗಲಿದೆ ಎಂದು ಜನರ ದಾರಿ ತಪ್ಪಿಸುತ್ತಿದ್ದಾರೆ. ಅವರು ಏನೇ ಪ್ರಯತ್ನ ಮಾಡಿದರೂ ಸಿಎಎ ತಡೆಯಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಸವಾಲು ಹಾಕಿದರು.

    ಪಶ್ಚಿಮ ಬಂಗಾಳದ (West Bengal) ಬಲೂರ್‌ಘಾಟ್‌ನಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ನೀವು ಸಿಎಎಗೆ ಅರ್ಜಿ ಸಲ್ಲಿಸಿದರೆ ನಿಮ್ಮ ಪೌರತ್ವವನ್ನು ಕಳೆದುಕೊಳ್ಳುತ್ತೀರಿ ಎಂದು ದಾರಿ ತಪ್ಪಿಸಲಾಗುತ್ತಿದೆ. ನಿರಾಶ್ರಿತರಿಗೆ ಸಿಎಎ ಅಡಿಯಲ್ಲಿ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ನಾನು ವಿನಂತಿಸುತ್ತೇನೆ. ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎಂದು ನಾನು ಭರವಸೆ ನೀಡುತ್ತೇನೆ ಎಂದರು. ಇದನ್ನೂ ಓದಿ: ಕೇಜ್ರಿವಾಲ್‌ ಬಂಧನ ಬಳಿಕ ಎಎಪಿಗೆ ಮತ್ತೊಂದು ಶಾಕ್‌ – ಸಚಿವ ರಾಜ್‌ಕುಮಾರ್‌ ಆನಂದ್‌ ರಾಜೀನಾಮೆ

    ಸಶಕ್ತ ಭಾರತ ನಿರ್ಮಿಸಲು ನಾವು ‘ಸಶಕ್ತ ಬಂಗಾಳ’ವನ್ನು ನಿರ್ಮಿಸಬೇಕಾಗಿದೆ. ಆದರೆ ಪಶ್ಚಿಮ ಬಂಗಾಳದಲ್ಲಿ ಒಳನುಸುಳುವಿಕೆಯ ಪ್ರಮಾಣವನ್ನು ನೀವು ನೋಡುತ್ತೀರಿ. ಅಂತಹ ಪರಿಸ್ಥಿತಿಗಳು ಮುಂದುವರಿದರೆ ರಾಜ್ಯ ಪ್ರಗತಿ ಹೊಂದಲು ಸಾಧ್ಯವಿಲ್ಲ ಮತ್ತು ಎಂದಿಗೂ ಸಬಲರಾಗಲು ಸಾಧ್ಯವಿಲ್ಲ. ಈ ಒಳನುಸುಳುವಿಕೆಯನ್ನು ತಡೆಯಲು ಮಮತಾ ಬ್ಯಾನರ್ಜಿ ಎಂದಾದರೂ ಕೆಲಸ ಮಾಡುತ್ತಾರೆ ಎಂದು ನೀವು ಭಾವಿಸುತ್ತೀರಾ? ಇಲ್ಲ ಏಕೆಂದರೆ ಈ ನುಸುಳುಕೋರರು ಅವಳ ನಿಜವಾದ ಮತಬ್ಯಾಂಕ್ ಎಂದು ಆರೋಪಿಸಿದರು. ಇದನ್ನೂ ಓದಿ: ತಣಿಯದ ಸಿಟ್ಟು- ಪತಂಜಲಿ ವಿರುದ್ಧ ಸುಪ್ರೀಂಕೋರ್ಟ್ ಕೆಂಡಾಮಂಡಲ

    ಪ್ರಧಾನಿ ನರೇಂದ್ರ ಮೋದಿ ಮತ್ತು ಪಶ್ಚಿಮ ಬಂಗಾಳದ ಬಿಜೆಪಿ ಸರ್ಕಾರದಿಂದ ಮಾತ್ರ ರಾಜ್ಯದಲ್ಲಿ ನುಸುಳುವಿಕೆಯನ್ನು ತಡೆಯಲು ಸಾಧ್ಯ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯನ್ನು ತರುವುದನ್ನು ಖಚಿತಪಡಿಸಿಕೊಳ್ಳಿ ಮತ್ತು ಸಾಟಿಯಿಲ್ಲದ ಪರಿವರ್ತನೆಯನ್ನು ವೀಕ್ಷಿಸಿ. ನಾವು ಅಸ್ಸಾಂನಲ್ಲಿ ಒಳನುಸುಳುವಿಕೆಯನ್ನು ನಿಲ್ಲಿಸಿದ್ದೇವೆ. ನಮ್ಮನ್ನು 30 ಸೀಟು ದಾಟಿಸಿ. ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಿ. ಒಳನುಸುಳುವಿಕೆಯನ್ನು ನಿಲ್ಲಿಸುತ್ತೇವೆ. ಇದು ಮೋದಿಯವರ ಗ್ಯಾರಂಟಿ ಎಂದು ಹೇಳಿದರು. ಇದನ್ನೂ ಓದಿ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಕೇಜ್ರಿವಾಲ್ ಮೇಲ್ಮನವಿ ಸಲ್ಲಿಕೆ
    ಪಶ್ಚಿಮ ಬಂಗಾಳದಲ್ಲಿ ಏಳು ಹಂತಗಳಲ್ಲಿ 42 ಸ್ಥಾನಗಳಿಗೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ 2019ರ ಲೋಕಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ 42 ಸ್ಥಾನಗಳಲ್ಲಿ 22 ಸ್ಥಾನಗಳನ್ನು ಗೆದ್ದುಕೊಂಡಿತು. ಆದರೆ ಭಾರತೀಯ ಜನತಾ ಪಕ್ಷ 18 ಗೆದ್ದಿತ್ತು. ಇತರ ಎರಡು ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿದೆ. ಇದನ್ನೂ ಓದಿ: ಶ್ರೀಗಳ ಬಗ್ಗೆ ಮಾತಾಡೋಕೆ ಡಿಕೆಶಿಗೆ ನೈತಿಕತೆ ಇಲ್ಲ: ಅಶೋಕ್ ವಾಗ್ದಾಳಿ
  • ಪ್ರಣಾಳಿಕೆಯಲ್ಲಿ ಸಿಎಎ ಉಲ್ಲೇಖಿಸಲು ಭಯ – ಕಾಂಗ್ರೆಸ್‌ ವಿರುದ್ಧ ಪಿಣರಾಯಿ ಕಿಡಿ

    ಪ್ರಣಾಳಿಕೆಯಲ್ಲಿ ಸಿಎಎ ಉಲ್ಲೇಖಿಸಲು ಭಯ – ಕಾಂಗ್ರೆಸ್‌ ವಿರುದ್ಧ ಪಿಣರಾಯಿ ಕಿಡಿ

    ತಿರುವನಂತಪುರಂ: ಲೋಕಸಭಾ ಪ್ರಣಾಳಿಕೆಯಲ್ಲಿ (Lok Sabha Election) ಪೌರತ್ವ ತಿದ್ದುಪಡಿ ಕಾಯ್ದೆಯ (CAA) ಬಗ್ಗೆ ಯಾವುದೇ ಉಲ್ಲೇಖ ಮಾಡದ್ದಕ್ಕೆ ಕಾಂಗ್ರೆಸ್‌ (Congress) ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ವಾಗ್ದಾಳಿ ನಡೆಸಿದ್ದಾರೆ.

    ಕೊಲ್ಲಂನಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದರೆ ಜಿಎಸ್‌ಟಿ (GST) ಸೇರಿ, ಸಂವಿಧಾನವನ್ನು ಉಲ್ಲಂಘಿಸಿ ಜಾರಿಗೆ ತರಲಾದ ಹಲವು ಕಾನೂನುಗಳನ್ನು ವಾಪಸ್ ಪಡೆಯುವುದಾಗಿ ಕಾಂಗ್ರೆಸ್‌ ಹೇಳಿದೆ. ಆದರೆ ಸಿಎಎ ಬಗ್ಗೆ ಒಂದು ಶಬ್ದವನ್ನೂ ಉಲ್ಲೇಖಿಸಿಲ್ಲ ಎಂದು ಕಿಡಿಕಾರಿದರು.  ಇದನ್ನೂ ಓದಿ: ಏ.16ಕ್ಕೆ ವಿವಿಪ್ಯಾಟ್ ತಾಳೆಗೆ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ: ಸುಪ್ರೀಂ

    ಉದ್ದೇಶಪೂರ್ವಕವಾಗಿಯೇ ಸಿಎಎಯನ್ನು ಹೊರಗಿಡಲಾಗಿದೆ. ವಿವಾದಾತ್ಮಕ ವಿಷಯಗಳ ಬಗ್ಗೆ ಪ್ರಸ್ತಾಪಿಸಲು ಕಾಂಗ್ರೆಸ್‌ಗೆ ಇರುವ ಭಯವನ್ನು ಇದು ತೋರಿಸುತ್ತದೆ ಎಂದು ದೂರಿದರು.

    ಕಾಂಗ್ರೆಸ್‌ ವಿರುದ್ಧ ವಿಜಯನ್‌ ಕಿಡಿ ಕಾರುತ್ತಿರುವುದು ಇದು ಮೊದಲೆನಲ್ಲ. ರಾಹುಲ್‌ ಗಾಂಧಿ (Rahul Gandhi) ವಯನಾಡ್‌ನಲ್ಲಿ ಸ್ಪರ್ಧಿಸುತ್ತಿರುವುದಕ್ಕೆ ಅವರು ವಿರೋಧ ವ್ಯಕ್ತಪಡಿಸಿದ್ದರು. ಕೇರಳಲ್ಲಿ ಬಿಜೆಪಿ ಖಾತೆ ತೆರೆಯುವುದಿಲ್ಲ ಎನ್ನುವುದು ಎಲ್ಲರಿಗೂ ಗೊತ್ತಿರುವ ಸತ್ಯ ಹೀಗಿರುವಾಗ ಕೇರಳದಲ್ಲಿ ರಾಹುಲ್‌ ಗಾಂಧಿ ಸ್ಪರ್ಧೆ ಮಾಡುವುದು ಎಷ್ಟು ಸರಿ? ಬಿಜೆಪಿ (BJP) ಪ್ರಬಲವಿರುವ ರಾಜ್ಯಗಳಲ್ಲಿ ರಾಹುಲ್‌ ಸ್ಪರ್ಧಿಸಬೇಕು ಎಂದು ಎಂದು ಹೇಳಿದ್ದರು.  ಇದನ್ನೂ ಓದಿ: ಕೇಜ್ರಿವಾಲ್‌ ಇತರರೊಂದಿಗೆ ಸೇರಿ ಪಿತೂರಿ ನಡೆಸಿದ್ದಾರೆ – ಜಾಮೀನು ಅರ್ಜಿ ವಜಾ‌

    INDIA ಒಕ್ಕೂಟದಲ್ಲಿ ಸಿಪಿಎಂ ಪಕ್ಷವೂ ಭಾಗವಾಗಿದೆ. ಆದರೆ ಕೇರಳದಲ್ಲಿ ಕಾಂಗ್ರೆಸ್‌ ವಿರುದ್ಧ ಸಿಪಿಎಂ ಈ ಬಾರಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ.

  • ರಾಜ್ಯದಲ್ಲಿ ಸಿಎಎ ಜಾರಿ ಆಗುತ್ತಾ? – ಕ್ಯಾಬಿನೆಟ್‌ನಲ್ಲಿ ತೀರ್ಮಾನ ಮಾಡ್ತೀವಿ ಎಂದ ಪರಮೇಶ್ವರ್‌

    ರಾಜ್ಯದಲ್ಲಿ ಸಿಎಎ ಜಾರಿ ಆಗುತ್ತಾ? – ಕ್ಯಾಬಿನೆಟ್‌ನಲ್ಲಿ ತೀರ್ಮಾನ ಮಾಡ್ತೀವಿ ಎಂದ ಪರಮೇಶ್ವರ್‌

    ಬೆಂಗಳೂರು: ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿ ಮಾಡಬೇಕೇ? ಬೇಡ್ವೇ ಎಂಬುದರ ಬಗ್ಗೆ ಕ್ಯಾಬಿನೆಟ್‌ನಲ್ಲಿ (Cabinet) ತೀರ್ಮಾನ ಮಾಡುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ (Dr G Parmeshwaar) ಹೇಳಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅದರ ಬಗ್ಗೆ ಇನ್ನು ಚರ್ಚೆ ಮಾಡಿಲ್ಲ. ಸಿಎಂ ಸಚಿವ ಸಂಪುಟ ಸಭೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತಾರೆ. ಅವೆಲ್ಲವನ್ನೂ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.  ಇದನ್ನೂ ಓದಿ: ಪ್ರತಾಪ್ ಸಿಂಹ ಹೆಸರು ಕೆಡಿಸಿಕೊಂಡಿದ್ದಕ್ಕೆ ಟಿಕೆಟ್ ಕೊಡ್ತಿಲ್ಲ: ಸಿದ್ದರಾಮಯ್ಯ

     

    ಸಿಎಎಯಿಂದ ಕಾಂಗ್ರೆಸ್ (Congress) ಹಿನ್ನಡೆ ಭೀತಿ ಇದೆ ಅಂತ ಬಿಜೆಪಿಯವರು ಹೇಳುತ್ತಾರೆ. ಬಿಜೆಪಿಯವರು ತಂದಿದ್ದಾರೆ. ನಮ್ಮ ಮೇಲೆ ಎನಾದರೂ ಆರೋಪ ಮಾಡಬೇಕು ಅಲ್ವಾ? ನಾವು ಈ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಕಾಪಾಡಬೇಕು ಎಂಬುದು ನಮ್ಮ ವಾದ. ಇಷ್ಟು ದಿನ ಸುಮ್ಮನೆ ಇದ್ದು ಈಗ ರಾಜಕೀಯಕ್ಕೆ ಬಳಸ್ತಾರೆ. ಚುನಾವಣಾ ಸಂದರ್ಭದಲ್ಲಿ ಯಾಕೆ ತರಬೇಕಿತ್ತು ಎಂದು ಪ್ರಶ್ನೆ ಮಾಡಿದರು.

    ಚುನಾವಣಾ ದೃಷ್ಟಿಯಿಂದ ಸಿಎಎ ಜಾರಿ ಮಾಡಿದ್ದಾರೆ ಎಂಬುದು ಸ್ಪಷ್ಟವಾಗಿ ಕಾಣಿಸುತ್ತಿದೆ. ಇದಕ್ಕೆ ಯಾವುದೇ ರಾಕೆಟ್ ಸೈನ್ಸ್ ಬೇಕಿಲ್ಲ. ಇದನ್ನ ಜನರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು. ಇದನ್ನೂ ಓದಿ: ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ : ಪ್ರತಾಪ್‌ ಸಿಂಹ

    ಸರ್ಕಾರದ ಮಟ್ಟದಲ್ಲಿ ಇನ್ನೂ ಜಾರಿ ಬಗ್ಗೆ ಚರ್ಚೆ ಮಾಡಿಲ್ಲ‌. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರವಾಸದಲ್ಲಿದ್ದು, ನಾಳೆ ಕ್ಯಾಬಿನೆಟ್‌ ಸಭೆಯಿದೆ. ಬಾಂಗ್ಲಾದೇಶ, ಬೇರೆ ದೇಶದಿಂದ ಬಂದವರನ್ನ ಗುರುತಿಸಿ ವಾಪಸ್ ಕಳಿಸುತ್ತಿದ್ದೇವೆ. ಪಾಸ್‌ಪೋರ್ಟ್ ಇಲ್ಲದಿದ್ದರೆ ಅವರನ್ನು ವಾಪಸ್ ಕಳುಹಿಸುತ್ತಿದ್ದೇವೆ ಎಂದರು.