Tag: ಸಿಎಎಸ್‌

  • ವಿನೇಶ್‌ ಫೋಗಟ್‌ ʼಬೆಳ್ಳಿʼ ತೀರ್ಪು ಆ.16ಕ್ಕೆ ಮುಂದೂಡಿಕೆ

    ವಿನೇಶ್‌ ಫೋಗಟ್‌ ʼಬೆಳ್ಳಿʼ ತೀರ್ಪು ಆ.16ಕ್ಕೆ ಮುಂದೂಡಿಕೆ

    ಪ್ಯಾರಿಸ್‌: ಭಾರತೀಯ ಕುಸ್ತಿಪಟು ವಿನೇಶ್‌ ಫೋಗಟ್‌ (Vinesh Phogat) ಅವರು ಸಲ್ಲಿಸಿರುವ ಮೇಲ್ಮನವಿ ಮೇಲಿನ ತೀರ್ಪನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯ ಮಂಡಳಿ (CAS) ಮತ್ತೆ ಮುಂದಕ್ಕೆ ಹಾಕಿದೆ. ಭಾರತೀಯ ಕಾಲಮಾನ ಮಂಗಳವಾರ ರಾತ್ರಿ ತೀರ್ಪು ಪ್ರಕಟವಾಗಬೇಕಿತ್ತು. ಆದರೆ ಈಗ ಆ.16 ರಂದು ತೀರ್ಪು ನೀಡುವುದಾಗಿ ಪ್ರಕಟಿಸಿದೆ.

    ನಿಗದಿಗಿಂತ 100 ಗ್ರಾಂ ಅಧಿಕ ತೂಕ ಹೊಂದಿದ್ದಕ್ಕೆ ಫೋಗಟ್‌ ಅವರನ್ನು ಪ್ಯಾರಿಸ್‌ ಒಲಿಂಪಿಕ್ಸ್‌ (Paris Olympics) ಮಹಿಳೆಯರ ಕುಸ್ತಿ ಸ್ಪರ್ಧೆಯ 50 ಕೆ.ಜಿ. ವಿಭಾಗದ ಫೈನಲ್‌ನಿಂದ ಅನರ್ಹಗೊಳಿಸಲಾಗಿತ್ತು.ಕ್ರೀಡಾಕೂಟದ ಸಂದರ್ಭದಲ್ಲಿ ವಿವಾದ ಪರಿಹಾರಕ್ಕಾಗಿ ವಿಶೇಷವಾಗಿ ಸ್ಥಾಪಿಸಲಾಗಿರುವ ಸಿಎಎಸ್‌ನ ತಾತ್ಕಾಲಿಕ ವಿಭಾಗಕ್ಕೆ ತಮ್ಮ ವಿರುದ್ಧದ ಕ್ರಮ ಪ್ರಶ್ನಿಸಿ ವಿನೇಶ್‌ ಆ.9 ರಂದು ಮೇಲ್ಮನವಿ ಸಲ್ಲಿಸಿದ್ದರು.

    ಮನವಿಯನ್ನು ಆಲಿಸಿದ ಸಿಎಎಸ್‌ ಆರಂಭದಲ್ಲಿ ಆ.10 ರಂದು ತೀರ್ಪು ಪ್ರಕಟಿಸುವುದಾಗಿ ಹೇಳಿತ್ತು. ನಂತರ ಆ.13 ರಂದು ಪ್ರಕಟಿಸಲಾಗುವುದು ಎಂದಿತ್ತು. ಆದರೆ ಈಗ ಮೂರನೇ ಬಾರಿ ಮುಂದೂಡಿದ್ದು, ಆ.16 ರಂದು ಪ್ರಕಟಿಸುವುದಾಗಿ ಹೇಳಿದೆ. ಇದನ್ನೂ ಓದಿ: ಸರ್ಕಾರಿ ಕೆಲಸ ತಿರಸ್ಕರಿಸಿದ ಒಲಿಂಪಿಕ್ಸ್‌ ಶೂಟಿಂಗ್‌ನಲ್ಲಿ ಕಂಚು ಗೆದ್ದ ಸರಬ್ಜೋತ್‌ ಸಿಂಗ್‌

    ಫೈನಲ್‌ ಪಂದ್ಯದ ಮುನ್ನಾದಿನ ನಾನು ‌ಮೂರು ಪಂದ್ಯವನ್ನು ಆಡಿದ್ದೇನೆ. ಆ ದಿನ ನಿಗದಿತ 50 ಕೆಜಿ ತೂಕದ ಮಿತಿಯಲ್ಲಿ ಇದ್ದ ಕಾರಣ ಜಂಟಿಯಾಗಿ ಬೆಳ್ಳಿ ಪದಕದ ಗೌರವ ನೀಡಬೇಕೆಂದು ಮನವಿ ಮಾಡಿದ್ದರು.

    ವಿನೇಶ್‌ ಫೋಗಟ್‌ ಪರವಾಗಿ ಖ್ಯಾತ ವಕೀಲ ಹರೀಶ್ ಸಾಳ್ವೆ ಮತ್ತು ವಿದುಷ್ಪತ್ ಸಿಂಘಾನಿಯಾ ಅವರು  ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.

     

  • ಕ್ಷಮಿಸಿ.. ಆದರೆ ನಾವು ನಿಯಮ ಪಾಲಿಸಲೇಬೇಕು: ಫೋಗಟ್‌ ಅನರ್ಹತೆ ಬಗ್ಗೆ ಅಂತಾರಾಷ್ಟ್ರೀಯ ಕುಸ್ತಿ ಫೆಡರೇಷನ್‌ ಪ್ರತಿಕ್ರಿಯೆ

    ಕ್ಷಮಿಸಿ.. ಆದರೆ ನಾವು ನಿಯಮ ಪಾಲಿಸಲೇಬೇಕು: ಫೋಗಟ್‌ ಅನರ್ಹತೆ ಬಗ್ಗೆ ಅಂತಾರಾಷ್ಟ್ರೀಯ ಕುಸ್ತಿ ಫೆಡರೇಷನ್‌ ಪ್ರತಿಕ್ರಿಯೆ

    ಪ್ಯಾರಿಸ್‌: 2024ರ ಪ್ಯಾರಿಸ್‌ ಒಲಿಂಪಿಕ್ಸ್‌ನಿಂದ ಭಾರತದ ಕುಸ್ತಿಪಟು ವಿನೇಶ್‌ ಫೋಗಟ್‌ (Vinesh Phogat) ಅನರ್ಹತೆಗೆ ಸ್ವತಃ ಅಂತಾರಾಷ್ಟ್ರೀಯ ಕುಸ್ತಿ ಫೆಡರೇಷನ್‌ ಅಧ್ಯಕ್ಷರು ಕ್ಷಮೆಯಾಚಿಸಿದ್ದಾರೆ. ಆದರೆ, ನಾವು ನಿಯಮ ಪಾಲಿಸಲೇಬೇಕು ಎಂದು ತಮ್ಮ ನಿಲುವಿಗೆ ಸ್ಪಷ್ಟನೆ ನೀಡಿದ್ದಾರೆ.

    ಕೋರ್ಟ್ ಆಫ್ ಆರ್ಬಿಟ್ರೇಷನ್ ಆಫ್ ಸ್ಪೋರ್ಟ್ (CAS) ನಲ್ಲಿ ಕುಸ್ತಿಪಟು ವಿನೇಶ್ ಫೋಗಟ್ ಅವರ ವಿಚಾರಣೆಯ ಫಲಿತಾಂಶಕ್ಕಾಗಿ ಭಾರತೀಯರು ಕಾಯುತ್ತಿದ್ದಾರೆ. ಇದೇ ಹೊತ್ತಿನಲ್ಲಿ, ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಅಧ್ಯಕ್ಷ ನೆನಾದ್ ಲಾಲೋವಿಕ್ (Nenad Lalovic), ಕುಸ್ತಿಪಟು ತೂಕದ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ಪ್ಯಾರಿಸ್‌ ಒಲಿಂಪಿಕ್ಸ್‌ ಹಬ್ಬಕ್ಕಿಂದು ಅದ್ಧೂರಿ ತೆರೆ – ಭಾರತದ ಧ್ವಜಧಾರಿಯಾಗಲಿದ್ದಾರೆ ಮನು ಭಾಕರ್‌

    ಏನಾಯಿತು ಎಂಬುದರ ಬಗ್ಗೆ ನನಗೆ ತುಂಬಾ ವಿಷಾದವಿದೆ. ಆದರೆ ಕ್ರೀಡಾಪಟುಗಳು ಕ್ರೀಡಾಪಟುಗಳೇ. ತೂಕದ ವಿಚಾರಕ್ಕೆ ಏನೆಲ್ಲಾ ಆಯಿತು ಎಂಬುದು ಎಲ್ಲರಿಗೂ ಗೊತ್ತಿದೆ. ನಮ್ಮ ನಿಯಮಗಳನ್ನು ಅನುಸರಿಸುವುದನ್ನು ಬಿಟ್ಟು ನಮಗೆ ಬೇರೆ ಆಯ್ಕೆಗಳಿಲ್ಲ ಎಂದು ಲಾಲೋವಿಕ್‌ ಸ್ಪಷ್ಟಪಡಿಸಿದ್ದಾರೆ.

    ಕ್ರೀಡಾಪಟುಗಳ ಆರೋಗ್ಯದ ಕಾಳಜಿಯಿಂದಾಗಿ ನಾವು ಆ ನಿಯಮವನ್ನು ಪರಿಚಯಿಸಿದ್ದೇವೆ. ಕ್ರೀಡಾಪಟುಗಳು ಸ್ಪರ್ಧಿಸಲು ತೂಕದ ನಿಯಮಗಳಿಗೆ ಬದ್ಧರಾಗಿದ್ದಾರೆ. ಬಹುಶಃ ನಿಯಮಗಳಲ್ಲಿ ಸ್ವಲ್ಪ ಹೊಂದಾಣಿಕೆಗಳನ್ನು ಮಾಡಬಹುದು. ಆದರೆ ನಾವು ನಿಯಮಗಳನ್ನು ಬದಲಾಯಿಸಲು ಸಾಧ್ಯವಿಲ್ಲ ತಿಳಿಸಿದ್ದಾರೆ. ಇದನ್ನೂ ಓದಿ: ಊಟವಿಲ್ಲ, ಬರೀ ನೀರು – 10 ಗಂಟೆಯಲ್ಲಿ 4.6 ಕೆಜಿ ತೂಕ ಇಳಿಸಿದ್ದ ಪದಕ ವಿಜೇತ ಅಮನ್‌

    50 ಕೆಜಿ ಮಹಿಳೆಯರ ಫ್ರೀಸ್ಟೈಲ್ ಕುಸ್ತಿಯಲ್ಲಿ ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಈಗಾಗಲೇ ಹಸ್ತಾಂತರಿಸಲಾಗಿದೆ. ತೂಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಈಗಾಗಲೇ ಫೈನಲ್‌ಗೆ ಬಂದಿದ್ದರಿಂದ ಜಂಟಿ-ಬೆಳ್ಳಿಯನ್ನು ನೀಡುವಂತೆ ವಿನೇಶ್ ಮನವಿ ಮಾಡಿದ್ದಾರೆ. ಅದನ್ನು ಸಿಎಎಸ್‌ ವಿಚಾರಣೆ ಮಾಡುತ್ತಿದೆ. ತೀರ್ಪು ಇನ್ನಷ್ಟೇ ಬರಬೇಕಿದೆ.

  • ವಿನೇಶ್ ಫೋಗಟ್‌ಗೆ ಮಧ್ಯಸ್ಥ ಮಂಡಳಿ ರಿಲೀಫ್ ನೀಡುತ್ತಾ? – ಒಲಿಂಪಿಕ್ಸ್ ಮುಗಿಯೋ ಮುನ್ನ ಸಿಎಎಸ್‌ನಿಂದ ತೀರ್ಪು

    ವಿನೇಶ್ ಫೋಗಟ್‌ಗೆ ಮಧ್ಯಸ್ಥ ಮಂಡಳಿ ರಿಲೀಫ್ ನೀಡುತ್ತಾ? – ಒಲಿಂಪಿಕ್ಸ್ ಮುಗಿಯೋ ಮುನ್ನ ಸಿಎಎಸ್‌ನಿಂದ ತೀರ್ಪು

    – ಫೋಗಟ್‌ಗೆ ಭಾರತ ರತ್ನ ನೀಡಬೇಕೆಂದು ಒತ್ತಾಯ

    ನವದೆಹಲಿ: ಅನರ್ಹತೆ ವಿಚಾರದಲ್ಲಿ ಭಾರತೀಯ ಕುಸ್ತಿಪಟು ವಿನೇಶ್ ಫೋಗಟ್‌ಗೆ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಅನರ್ಹತೆ ಪ್ರಶ್ನಿಸಿ ವಿನೇಶ್ ಫೋಗಟ್ (Vinesh Phogat) ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಕ್ರೀಡಾ ಮಧ್ಯಸ್ಥ ಮಂಡಳಿ, ಅನರ್ಹತೆ ತೆರವು ಮಾಡಲು ನಿರಾಕರಿಸಿದೆ.

    ವಿನೇಶ್ ಪರ ಹಿರಿಯ ವಕೀಲ ಹರೀಶ್ ಸಾಳ್ವೆ ವಾದ ಮಂಡಿಸಿದರು. ಆದರೆ ಯಾವುದೇ ಪ್ರಯೋಜನ ಆಗಲಿಲ್ಲ. ಒಲಿಂಪಿಕ್ಸ್ ನಿಯಮಗಳನ್ನು ಬದಲಿಸುವ ಅವಕಾಶ ಇಲ್ಲ ಎಂದು ಈಗಾಗಲೇ ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ ಫೆಡರೇಷನ್ ಸ್ಪಷ್ಟಪಡಿಸಿತ್ತು. ಇದನ್ನೂ ಓದಿ: ವಿನೇಶ್‌ ಫೋಗಟ್‌ಗೆ 4 ಕೋಟಿ ರೂ. ಬಹುಮಾನ – ಬೆಳ್ಳಿ ಪದಕ ವಿಜೇತೆ ಮಾದರಿಯಲ್ಲಿ ಗೌರವಿಸಲು ಸಕಲ ಸಿದ್ಧತೆ

    ಈ ಮಧ್ಯೆ, ಫೋಗಟ್ ವಿಚಾರದಲ್ಲಿ ರಾಜಕೀಯ ಮುಂದುವರೆದಿದೆ. ಫೋಗಟ್‌ಗೆ ಭಾರತ ರತ್ನ ನೀಡಬೇಕು. ಇಲ್ಲವೇ ರಾಜ್ಯಸಭೆಗೆ ನಾಮಿನೇಟ್ ಮಾಡಬೇಕು ಎಂದು ಒತ್ತಾಯಿಸಿ ಟಿಎಂಸಿಯ ಅಭಿಷೇಕ್ ಬ್ಯಾನರ್ಜಿ ಎಕ್ಸ್ನಲ್ಲಿ ಪೋಸ್ಟ್ ಹಾಕಿದ್ದಾರೆ.

    ಇದಕ್ಕೆ ಕೆಲ ನೆಟ್ಟಿಗರು, ನಿಮಗೆ ಅಷ್ಟು ಗೌರವ ಇದ್ರೆ ಮೊದಲು ವಿನೇಶ್‌ರನ್ನು ಬಂಗಾಳ ಸಿಎಂ ಮಾಡಿ ಎಂದು ಸವಾಲ್ ಹಾಕಿದ್ದಾರೆ. ಇದನ್ನೂ ಓದಿ: Paris Olympics | ವಿನೇಶ್‌ ಅನರ್ಹ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಆಘಾತ – ಅಂತಿಮ್‌ ಪಂಘಲ್‌ ಗಡಿಪಾರು