Tag: ಸಿಎಟಿ

  • ಫೋನ್‌ ಟ್ಯಾಪಿಂಗ್‌ ಕೇಸ್;‌ ಅಲೋಕ್‌ ಕುಮಾರ್‌ ವಿರುದ್ಧದ ತನಿಖಾ ಆದೇಶ ರದ್ದು – ಸರ್ಕಾರಕ್ಕೆ ಭಾರೀ ಹಿನ್ನಡೆ

    ಫೋನ್‌ ಟ್ಯಾಪಿಂಗ್‌ ಕೇಸ್;‌ ಅಲೋಕ್‌ ಕುಮಾರ್‌ ವಿರುದ್ಧದ ತನಿಖಾ ಆದೇಶ ರದ್ದು – ಸರ್ಕಾರಕ್ಕೆ ಭಾರೀ ಹಿನ್ನಡೆ

    ಬೆಂಗಳೂರು: ನಿವೃತ್ತ ಎಡಿಜಿಪಿ ಭಾಸ್ಕರ್ ರಾವ್ (Bhaskar Rao) ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣದಲ್ಲಿ ಅಲೋಕ್ ಕುಮಾರ್ (Alok Kumar) ವಿರುದ್ಧದ ಇಲಾಖಾ ತನಿಖೆ ಆದೇಶವನ್ನ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (CAT) ರದ್ದು ಮಾಡಿದೆ.

    ಈ ಮೂಲಕ ರಾಜ್ಯ ಸರ್ಕಾರದ ಆದೇಶಕ್ಕೆ ಭಾರೀ ಹಿನ್ನೆಡೆಯಾಗಿದೆ. 2018-19 ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಿದ್ದಾಗ ಅಲೋಕ್ ಕುಮಾರ್ ಬೆಂಗಳೂರು ಪೊಲೀಸ್ ಅಯುಕ್ತರಾಗಿದ್ದರು. ಈ ವೇಳೆ ಎಡಿಜಿಪಿ ಭಾಸ್ಕರ್ ರಾವ್ ಫೋನ್ ಟ್ಯಾಪಿಂಗ್ ಮಾಡಿದ್ದ ಆರೋಪ ಕೇಳಿಬಂದಿತ್ತು. ಪ್ರಕರಣದಲ್ಲಿ ಸಿಬಿಐ ತನಿಖೆಯಾಗಿ 2024 ರಲ್ಲಿ ಬಿ ರಿಪೋರ್ಟ್ ಸಲ್ಲಿಕೆ ಮಾಡಲಾಗಿತ್ತು. ಇದನ್ನೂ ಓದಿ: ನಂಜೇಗೌಡಗೆ ತಾತ್ಕಾಲಿಕ ರಿಲೀಫ್‌ – ಶಾಸಕ ಸ್ಥಾನದಿಂದ ಅಸಿಂಧುಗೊಳಿಸಿದ್ದ ಆದೇಶಕ್ಕೆ ಸುಪ್ರೀಂ ತಡೆ

    ಕಳೆದ ಮೇ ತಿಂಗಳಲ್ಲಿ ರಾಜ್ಯ ಸರ್ಕಾರ ಭಾಸ್ಕರ್ ರಾವ್ ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣವನ್ನ ಇಲಾಖಾ ತನಿಖೆಗೆ ಆದೇಶಿಸಿತ್ತು. ಸರ್ಕಾರದ ಆದೇಶ ಪ್ರಶ್ನಿಸಿ ಅಲೋಕ್‌ ಕುಮಾರ್ ಸಿಎಟಿ ಮೊರೆ ಹೋಗಿದ್ದರು. ಇಬ್ಬರು ನ್ಯಾಯಾಧೀಶರ ನಡುವೆ ವಿಭಿನ್ನ ತೀರ್ಪು ಬಂದ ಹಿನ್ನೆಲೆ, ಸಿಎಟಿ ಚೇರ್‌ಮನ್ ನ್ಯಾಯಮೂರ್ತಿ ರಣಜೀತ್‌ರಿಗೆ ಕೇಸ್ ವರ್ಗಾವಣೆಯಾಗಿತ್ತು. ಡಿಜಿಪಿ ಹುದ್ದೆಗೆ ಬಡ್ತಿ ತಡೆಯಲು ಅಲೋಕ್ ವಿರುದ್ಧ ಸರ್ಕಾರ ಇಲಾಖಾ ವಿಚಾರಣೆಗೆ ಆದೇಶ ನೀಡಿದೆ ಅಂತಾ ಅಲೋಕ್ ಕುಮಾರ್ ಪರ ವಕೀಲರು ವಾದ ಮಂಡಿಸಿದ್ದರು.

    ಎರಡೂ ಕಡೆಯ ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿಗಳು, ಸರ್ಕಾರದ ಇಲಾಖಾ ತನಿಖೆ ಆದೇಶ ರದ್ದುಗೊಳಿಸಿ‌ ಆದೇಶ ಹೊರಡಿಸಿದ್ದಾರೆ. ಹಾಗೆಯೇ, ಅಲೋಕ್ ಕುಮಾರ್‌ಗೆ ಸಲ್ಲಬೇಕಾದ ಬಡ್ತಿ ಸವಲತ್ತುಗಳನ್ನ ನೀಡುವಂತೆ ಸಹ ಆದೇಶಿಸಿದ್ದಾರೆ. ಇದನ್ನೂ ಓದಿ: GBA ರಚನೆ ಕುರಿತು ನೀವು ಎತ್ತಿರುವ ಪ್ರಶ್ನೆ ಸೂಕ್ತವಾಗಿದೆ, ಹೈಕೋರ್ಟ್‌ನಲ್ಲಿ ಪ್ರಶ್ನಿಸಿ: ಅರ್ಜಿದಾರರಿಗೆ ಸುಪ್ರೀಂ ನಿರ್ದೇಶನ

  • ಕಾಲ್ತುಳಿತ ಕೇಸ್‌; IPS ಅಧಿಕಾರಿ ವಿಕಾಸ್‌ ಕುಮಾರ್‌ಗೆ ರಿಲೀಫ್‌ – ಅಮಾನತು ರದ್ದಿಗೆ CAT ಆದೇಶ

    ಕಾಲ್ತುಳಿತ ಕೇಸ್‌; IPS ಅಧಿಕಾರಿ ವಿಕಾಸ್‌ ಕುಮಾರ್‌ಗೆ ರಿಲೀಫ್‌ – ಅಮಾನತು ರದ್ದಿಗೆ CAT ಆದೇಶ

    ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದಲ್ಲಿ ಐಪಿಎಸ್‌ ಅಧಿಕಾರಿ ವಿಕಾಸ್‌ ಕುಮಾರ್ ವಿಕಾಸ್‌ಗೆ (Vikas Kumar Vikas) ಬಿಗ್‌ ರಿಲೀಫ್‌ ಸಿಕ್ಕಿದೆ.

    ಬೆಂಗಳೂರು ಪೂರ್ವ ವಿಭಾಗದ ಹೆಚ್ಚುವರಿ ಆಯುಕ್ತ ವಿಕಾಸ್‌ ಕುಮಾರ್‌ ಅವರ ಅಮಾನತು ರದ್ದುಗೊಳಿಸುವಂತೆ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (CAT) ಆದೇಶಿಸಿದೆ. ಇದನ್ನೂ ಓದಿ: ಬೆಂಗಳೂರು ಜನತೆಗೆ ಮತ್ತೆ ದರ ಏರಿಕೆ ಬಿಸಿ – ಹೊಸೂರು ರಸ್ತೆಯ ಎರಡು ಟೋಲ್ ದರ ಏರಿಕೆ

    ಸಿಎಟಿ ಆದೇಶದಿಂದ ಸರ್ಕಾರಕ್ಕೆ ಮುಖಭಂಗ ಆಗಿದೆ. ಇನ್ನಿಬ್ಬರು ಅಧಿಕಾರಿಗಳ ಅಮಾನತುನ್ನು ಗಮನಿಸುವಂತೆ ಸರ್ಕಾರಕ್ಕೆ ಸಿಎಟಿ ಆದೇಶಿಸಿದೆ. ಇನ್ನಿಬ್ಬರ ಅಮಾನತು ಅನ್ನು ವಾಪಸ್‌ ಪಡೆಯಬಹುದು ಎಂದು ಸಲಹೆ ನೀಡಿದೆ. ಇಬ್ಬರು ಅಧಿಕಾರಿಗಳು CATಗೆ ಹೋಗದಿದ್ದಕ್ಕೆ ಸರ್ಕಾರಕ್ಕೆ ಸಲಹೆ ನೀಡಿದೆ.

    ಜೂ.4 ರಂದು ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದರು. ಮ್ಯಾಜಿಸ್ಟ್ರೇಟಿಯಲ್‌ಗೆ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ವಹಿಸಿತ್ತು. ಇದನ್ನೂ ಓದಿ: Hassan | ಎರಡೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

    ಪ್ರಕರಣದಲ್ಲಿ ಬೆಂಗಳೂರು ಕಮಿಷನರ್‌ ಆಗಿದ್ದ ದಯಾನಂದ್‌ ಸೇರಿದಂತೆ 6 ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ತಮ್ಮ ಅಮಾನತು ಆದೇಶ ಪ್ರಶ್ನಿಸಿ ವಿಕಾಸ್‌ ಕುಮಾರ್‌ ಅವರನ್ನು ಸಿಎಟಿ ಮೆಟ್ಟಿಲೇರಿದ್ದರು.

  • ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಬಿ.ಶರತ್ ವರ್ಗಾವಣೆ ಆದೇಶಕ್ಕೆ ತಡೆ

    ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಬಿ.ಶರತ್ ವರ್ಗಾವಣೆ ಆದೇಶಕ್ಕೆ ತಡೆ

    ಮೈಸೂರು: ಜಿಲ್ಲಾಧಿಕಾರಿ ಬಿ.ಶರತ್ ವರ್ಗಾವಣೆಯ ಆದೇಶಕ್ಕೆ ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿ (ಸಿಎಟಿ) ತಡೆ ನೀಡಿದ್ದು, ರಾಜ್ಯ ಸರ್ಕಾರದ ಆದೇಶಕ್ಕೆ ಹಿನ್ನಡೆ ಆಗಿದೆ. ಬಿ.ಶರತ್ ಅವರ ಜಾಗಕ್ಕೆ ರೋಹಿಣಿ ಸಿಂಧೂರಿ ಅವರನ್ನ ಮೈಸೂರು ಜಿಲ್ಲಾಧಿಕಾರಿಯಾಗಿ ಸರ್ಕಾರ ನೇಮಕ ಮಾಡಿತ್ತು.

    ಬಿ ಶರತ್ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ಮರು ನೇಮಕ ಮಾಡಬೇಕು. ಡಿಸೆಂಬರ್ 22ರೊಳಗೆ ಈ ಸಂಬಂಧ ಆದೇಶ ಹೊರಡಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸುವಂತೆ ತಿಳಿಸಲು ಅಡ್ವೊಕೇಟ್ ಜನರಲ್ ಗೆ ಸಿಎಟಿ ನಿರ್ದೇಶನ ನೀಡಿದೆ. ಒಂದು ವೇಳೆ ತಪ್ಪಿದ್ದಲ್ಲಿ ಸಿಎಟಿ ಈ ಬಗ್ಗೆ ಆದೇಶ ಹೊರಡಿಸಲಿದೆ ಎಂದು ಸೂಚಿಸಿದೆ. ಮೈಸೂರಿಗೆ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಒಂದೇ ತಿಂಗಳಲ್ಲಾದ ಬಿ.ಶರತ್ ತಮ್ಮ ವರ್ಗಾವಣೆಯನ್ನ ಪ್ರಶ್ನಿಸಿ ಸಿಎಟಿ ಮೊರೆ ಹೋಗಿದ್ದರು.

    ಕೆಲ ದಿನಗಳಿಂದ ಮೈಸೂರಿನ ಜನಪ್ರತಿನಿಧಿಗಳು ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ತಿರುಗಿ ಬಿದ್ದಿದ್ದಾರೆ. ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಜನಪರ ಕಾರ್ಯಕ್ರಮಗಳನ್ನ ಆಯೋಜಿಸುತ್ತಿದ್ದಾರೆ ಎಂದು ಬೇಸರ ಹೊರಹಾಕಿದ್ದರು. ಇನ್ನು ಸಚಿವ ಆರ್.ಅಶೋಕ್ ಸಹ ಬಹಿರಂಗವಾಗಿ ರೋಹಿಣಿ ಸಿಂಧೂರಿ ಅವರ ಕಾರ್ಯವೈಖರಿ ಬಗ್ಗೆ ಅಸಮಾಧಾನ ಹೊರ ಹಾಕಿದ್ದರು.

    ವರ್ಗಾವಣೆ ಆಗಿದ್ದೇಕೆ?: ಶರತ್ ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಒಂದು ತಿಂಗಳಿನಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿತ್ತು. ಸೋಂಕಿನ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಯಾವುದೇ ಪ್ಲಾನ್ ಮಾಡಿಕೊಂಡಿರಲಿಲ್ಲ. ಸಾವಿನ ಸಂಖ್ಯೆ, ಪಾಸಿಟಿವ್ ಸಂಖ್ಯೆ ಹೆಚ್ಚುತ್ತಿದ್ದರೂ ತಾತ್ಕಾಲಿಕವಾಗಿ ಆಸ್ಪತ್ರೆ ತೆರೆಯಲು ಜಿಲ್ಲಾಧಿಕಾರಿ ಶರತ್ ಮುಂದಾಗಿರಲಿಲ್ಲ ಅನ್ನೋ ಆರೋಪಗಳು ಬಿ.ಶರತ್ ಅವರ ವಿರುದ್ಧ ಕೇಳಿ ಬಂದಿದ್ದವು. ಕೊರೊನಾ ಏರಿಕೆ ನಡುವೆ ಅತಿ ಸರಳ ದಸರಾ ಆಚರಣೆ ಸರ್ಕಾರಕ್ಕೆ ದೊಡ್ಡ ಸವಾಲು ಆಗಿತ್ತು. ದಸರಾ ಸಮೀಪಿಸಿದ್ದರೂ ಆಚರಣೆ ಯೋಜನೆಯನ್ನ ಸರ್ಕಾರಕ್ಕೆ ಸಲ್ಲಿಸದ ಹಿನ್ನೆಲೆ ಶರತ್ ಅವರ ವರ್ಗಾವಣೆ ಆಗಿದೆ ಎನ್ನಲಾಗಿತ್ತು.

    ವರ್ಗಾವಣೆ ಬಳಿಕ ಶರತ್ ಅವರಿಗೆ ಕರೆ ಮಾಡಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ, ಬೇರೆ ಸೂಕ್ತ ಸ್ಥಳ ನೀಡುತ್ತೇವೆ. ಕಾನೂನು ತೊಡಕು ಮಾಡಿಕೊಳ್ಳಬೇಡಿ ಎಂದು ಹೇಳಿದ್ದರು ಎನ್ನಲಾಗಿದೆ. ಶರತ್ ಜಾಗಕ್ಕೆ ರೋಹಿಣಿ ಸಿಂಧೂರಿ ಅವರನ್ನೇ ನೇಮಿಸಬೇಕೆಂದು ಸಿಎಂ ಮೇಲೆ ಒತ್ತಡ ಹಾಕಲಾಗಿತ್ತು ಎಂದು ತಿಳಿದು ಬಂದಿದೆ.

  • ಯಾವ ಸಾರ್ವಜನಿಕ ಹಿತಾಸಕ್ತಿ ರೋಹಿಣಿ ಸಿಂಧೂರಿ ವರ್ಗಾವಣೆಯಲ್ಲಿದೆ: ಸರ್ಕಾರಕ್ಕೆ ಸಿಎಟಿ ಪ್ರಶ್ನೆ

    ಯಾವ ಸಾರ್ವಜನಿಕ ಹಿತಾಸಕ್ತಿ ರೋಹಿಣಿ ಸಿಂಧೂರಿ ವರ್ಗಾವಣೆಯಲ್ಲಿದೆ: ಸರ್ಕಾರಕ್ಕೆ ಸಿಎಟಿ ಪ್ರಶ್ನೆ

    ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ಮಾರ್ಚ್ 21ಕ್ಕೆ ಆದೇಶ ಕಾಯ್ದಿರಿಸಿದೆ.

    ಇಂದು ಕಲಾಪದಲ್ಲಿ ರೋಹಿಣಿ ಪರ ಹಿರಿಯ ವಕೀಲ ಜೋಯಿಸ್ ವಾದ ಮಂಡಿಸಿದರೆ, ಸರ್ಕಾರದ ಪರವಾಗಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎಎಸ್ ಪೊನ್ನಣ್ಣ ವಾದ ಮಾಡಿದರು. ಈ ವೇಳೆ ಮೈಸೂರು ಜಿಲ್ಲಾಧಿಕಾರಿ ರಂದೀಪ್ ಅವರ ವರ್ಗಾವಣೆಗೆ ಸಿಎಟಿ ತಡೆ ನೀಡಿದ್ದು, ಮುಂದಿನ ಆದೇಶ ಪ್ರಕಟವಾಗುವರೆಗೆ ಅಲ್ಲಿಯೇ ಮುಂದುವರಿಯುವಂತೆ ಸೂಚಿಸಿದೆ.

    ಸಾರ್ವಜನಿಕ ಉದ್ದೇಶಕ್ಕಾಗಿ ರೋಹಿಣಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಇದರಲ್ಲಿ ಕನಿಷ್ಠ ಎರಡು ವರ್ಷದ ನಿಯಮ ಅನ್ವಯವಾಗುವುದಿಲ್ಲ. ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಯಾವುದೇ ರೀತಿಯ ಮಂಡಳಿ ಇಲ್ಲ. ಮಂಡಳಿ ಇದ್ದರೆ ಮಾತ್ರ ನಿಯಮಗಳು ಅನ್ವಯ ಆಗುತ್ತವೆ. ಸಾರ್ವಜನಿಕ ಹಿತಾಸಕ್ತಿಯಿಂದ  ವರ್ಗಾವಣೆ ಮಾಡಲಾಗಿದೆ ಎಂದು ಪೊನ್ನಣ್ಣ ವಾದಿಸಿದರು.

    ಈ ವೇಳೆ ನ್ಯಾಯಪೀಠ, ಯಾವ ಸಾರ್ವಜನಿಕ ಹಿತಾಸಕ್ತಿ ಈ ವರ್ಗಾವಣೆಯಲ್ಲಿದೆ ತಿಳಿಸಿ ಎಂದು ಪ್ರಶ್ನಿಸಿದರು. ಇದಕ್ಕೆ ಪೊನ್ನಣ್ಣ, ಆ ವಿಚಾರವನ್ನು ಇಲ್ಲಿ ಬಹಿರಂಗ ಪಡಿಸುವ ಅಗತ್ಯವಿಲ್ಲ. ಕಾರ್ಯಾಂಗದ ಮುಖ್ಯಸ್ಥರಾಗಿ ಸಿಎಂ ಸಿಎ ಆದೇಶ ಮಾಡಿದ್ದಾರೆ ಎಂದು ಉತ್ತರಿಸಿದರು.

    ರೋಹಿಣಿ ಪರ ಹಿರಿಯ ವಕೀಲ ಜೋಯಿಸ್, ರಾಜ್ಯದ ಮುಖ್ಯಮಂತ್ರಿಗಳಾಗಿ ನಿಯಮಗಳನ್ನು ಮೀರುವಂತಿಲ್ಲ. ಇಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲ. ಎಲ್ಲಾ ವೈಯಕ್ತಿಕ ಹಿತಾಸಕ್ತಿಯಿಂದ ಕೂಡಿದ ವರ್ಗಾವಣೆ ಇದು. ಅವಧಿಗಿಂತ ಮುಂಚೆ ವರ್ಗಾವಣೆ ಮಾಡಿದರೆ ಅದಕ್ಕೆ ಸೂಕ್ತ ಕಾರಣಗಳನ್ನು ನೀಡಲೇಬೇಕು. ಕಾರಣಗಳಿಲ್ಲದೆ ವರ್ಗಾವಣೆ ಮಾಡುವಂತಿಲ್ಲ. ವರ್ಗಾವಣೆಗೂ ಮುನ್ನ ನೋಟಿಸ್ ನೀಡಬೇಕು ಎಂದು ವಾದಿಸಿದರು.  ಇದನ್ನೂ ಓದಿ: ರೋಹಿಣಿ ಸಿಂಧೂರಿ ಯಾರು? ಈ ಹಿಂದೆ ಅವರು ಮಾಡಿದ್ದ ಕೆಲಸಗಳು ಏನು?

    ನಿಯಮಗಳ ವಿರುದ್ಧವಾಗಿ ಅವಧಿಗೂ ಮುನ್ನ ವರ್ಗಾವಣೆ ಮಾಡಿದ್ದನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿ ಅವರು ಸಿಎಟಿ ಮೊರೆ ಹೋಗಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಸಿಎಟಿ ಮಾರ್ಚ್ 13ರವರೆಗೆ ವರ್ಗಾವಣೆಗೆ ತಡೆ ನೀಡಿತ್ತು.

    ರೋಹಿಣಿ ಸಿಂಧೂರಿ ವರ್ಗಾವಣೆ ಆದೇಶವನ್ನು ಮಾ.6 ರಂದು ಹಿಂದಕ್ಕೆ ಪಡೆದಿದ್ದ ರಾಜ್ಯ ಸರ್ಕಾರ ಮಾ.7 ರಂದು ವರ್ಗಾವಣೆ ಮಾಡಿತ್ತು. ಒಟ್ಟು 12 ಐಎಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿದ್ದು ರೋಹಿಣಿ ಅವರನ್ನು ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತರನ್ನಾಗಿ ನೇಮಿಸಿ ವರ್ಗಾವಣೆ ಆದೇಶ ಹೊರಡಿಸಿತ್ತು.

    ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಜ.22 ರಂದು ರೋಹಿಣಿ ಅವರನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ(ಕೆಎಸ್‍ಐಐಡಿಸಿ) ಆಡಳಿತ ನಿರ್ದೇಶಕಿಯನ್ನಾಗಿ ನೇಮಿಸಿ ಹಠಾತ್ ವರ್ಗಾವಣೆ ಮಾಡಿದ್ದ ಸರ್ಕಾರದ ಆದೇಶಕ್ಕೆ ಕೇಂದ್ರ ಚುನಾವಣಾ ಆಯೋಗ ತಡೆ ನೀಡಿತ್ತು. ಸರ್ಕಾರದ ಕ್ರಮಕ್ಕೆ ಸಾರ್ವಜನಿಕ ವಲಯದಿಂದಲೂ ಟೀಕೆ ಕೇಳಿ ಬಂದಿತ್ತು.

    ಫೆಬ್ರವರಿ 28ಕ್ಕೆ ಮತದಾರರ ಪಟ್ಟಿ ಪರಿಷ್ಕರಣೆ ನಡೆಯಲಿದ್ದು, ಮತದಾರ ಪಟ್ಟಿ ಪರಿಷ್ಕರಣೆ ಮುಗಿಯುವವರೆಗೆ ವರ್ಗಾವಣೆ ಬೇಡ. ವರ್ಗಾವಣೆ ಆದೇಶ ಜಾರಿಯನ್ನು ಕೂಡಲೇ ನಿಲ್ಲಿಸಬೇಕು. ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿರುವವರನ್ನ ಅದೇ ಸ್ಥಾನದಲ್ಲಿ ಮುಂದುವರಿಸಬೇಕು. ವರ್ಗಾವಣೆ ಬಗ್ಗೆ ಕೇಂದ್ರ ಚುನಾವಣಾ ಆಯೋಗದ ಗಮನಕ್ಕೆ ತರಬೇಕು. ವರ್ಗಾಯಿತ ಜಿಲ್ಲೆಗಳಿಗೆ ತೆರಳದಂತೆ 7 ಜಿಲ್ಲಾಧಿಕಾರಿಗಳಿಗೂ ಚುನಾವಣಾ ಆಯೋಗ ಈ ಹಿಂದೆ ಸೂಚನೆ ನೀಡಿತ್ತು. ಇದನ್ನೂ ಓದಿ:ಸರ್ಕಾರಕ್ಕೆ ಮತ್ತೊಮ್ಮೆ ಭಾರೀ ಮುಖಭಂಗ- ಕೊಪ್ಪಳ ಎಸ್‍ಪಿ ಅನೂಪ್ ಶೆಟ್ಟಿ ವರ್ಗಾವಣೆಗೂ ಸಿಎಟಿ ತಡೆ

  • ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೊಮ್ಮೆ ಮುಖಭಂಗ

    ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೊಮ್ಮೆ ಮುಖಭಂಗ

    ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದೇ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಜಯ ಸಿಕ್ಕಿದ್ದು ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೊಮ್ಮೆ ಮುಖಭಂಗವಾಗಿದೆ. ರೋಹಿಣಿ ಸಿಂಧೂರಿ ಅವರ ವರ್ಗಾವಣೆ ಆದೇಶಕ್ಕೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ತಾತ್ಕಾಲಿಕವಾಗಿ ತಡೆ ನೀಡಿದೆ.

    ನಿಯಮಗಳ ವಿರುದ್ಧವಾಗಿ ಅವಧಿಗೂ ಮುನ್ನ ವರ್ಗಾವಣೆ ಮಾಡಿದ್ದನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿ ಅವರು ಸಿಎಟಿ ಮೊರೆ ಹೋಗಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಸಿಎಟಿ ಮಾರ್ಚ್ 13ರವರೆಗೆ ವರ್ಗಾವಣೆಗೆ ತಡೆ ನೀಡಿದೆ. ಈ ಆದೇಶದಿಂದಾಗಿ ಸಿಂಧೂರಿ ಅವರು ಹಾಸನ ಡಿಸಿ ಆಗಿ ಮುಂದುವರಿಯಲಿದ್ದಾರೆ.

    ರೋಹಿಣಿ ಸಿಂಧೂರಿ ವರ್ಗಾವಣೆ ಆದೇಶವನ್ನು ಮಂಗಳವಾರ ಹಿಂದಕ್ಕೆ ಪಡೆದಿದ್ದ ರಾಜ್ಯ ಸರ್ಕಾರ ಬುಧವಾರ ವರ್ಗಾವಣೆ ಮಾಡಿತ್ತು. ಒಟ್ಟು 12 ಐಎಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿದ್ದು ರೋಹಿಣಿ ಅವರನ್ನು ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತರನ್ನಾಗಿ ನೇಮಿಸಿ ವರ್ಗಾವಣೆ ಆದೇಶ ಹೊರಡಿಸಿತ್ತು.

    ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಜ.22 ರಂದು ರೋಹಿಣಿ ಅವರನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ(ಕೆಎಸ್‍ಐಐಡಿಸಿ) ಆಡಳಿತ ನಿರ್ದೇಶಕಿಯನ್ನಾಗಿ ನೇಮಿಸಿ ಹಠಾತ್ ವರ್ಗಾವಣೆ ಮಾಡಿದ್ದ ಸರ್ಕಾರದ ಆದೇಶಕ್ಕೆ ಕೇಂದ್ರ ಚುನಾವಣಾ ಆಯೋಗ ತಡೆ ನೀಡಿತ್ತು. ಸರ್ಕಾರದ ಕ್ರಮಕ್ಕೆ ಸಾರ್ವಜನಿಕ ವಲಯದಿಂದಲೂ ಟೀಕೆ ಕೇಳಿ ಬಂದಿತ್ತು. ಈಗ ಮತ್ತೊಮ್ಮೆ ವರ್ಗಾವಣೆ ಆದೇಶ ಹೊರಡಿಸಿ ಎರಡನೇ ಬಾರಿ ಮುಖಭಂಗವಾಗಿದೆ.

    ಫೆಬ್ರವರಿ 28ಕ್ಕೆ ಮತದಾರರ ಪಟ್ಟಿ ಪರಿಷ್ಕರಣೆ ನಡೆಯಲಿದ್ದು, ಮತದಾರ ಪಟ್ಟಿ ಪರಿಷ್ಕರಣೆ ಮುಗಿಯುವವರೆಗೆ ವರ್ಗಾವಣೆ ಬೇಡ. ವರ್ಗಾವಣೆ ಆದೇಶ ಜಾರಿಯನ್ನು ಕೂಡಲೇ ನಿಲ್ಲಿಸಬೇಕು. ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿರುವವರನ್ನ ಅದೇ ಸ್ಥಾನದಲ್ಲಿ ಮುಂದುವರಿಸಬೇಕು. ವರ್ಗಾವಣೆ ಬಗ್ಗೆ ಕೇಂದ್ರ ಚುನಾವಣಾ ಆಯೋಗದ ಗಮನಕ್ಕೆ ತರಬೇಕು. ವರ್ಗಾಯಿತ ಜಿಲ್ಲೆಗಳಿಗೆ ತೆರಳದಂತೆ 7 ಜಿಲ್ಲಾಧಿಕಾರಿಗಳಿಗೂ ಚುನಾವಣಾ ಆಯೋಗ ಈ ಹಿಂದೆ ಸೂಚನೆ ನೀಡಿತ್ತು. ಇದನ್ನೂ ಓದಿ: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಾರ್ಯಕ್ಕೆ ಸಿಎಂ ಅಭಿನಂದನೆ

    ಯಾರು ರೋಹಿಣಿ ಸಿಂಧೂರಿ?:
    ಈ ಹಿಂದೆ ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದರು. ರಾಜ್ಯದಲ್ಲಿ ಮೊದಲ ಬಾರಿಗೆ ಭೂ ದಾಖಲೆಗಳ ಕುರಿತಂತೆ ವಿನ್ಯಾಸಗೊಂಡಿರುವ ಎಂ-ಆಸ್ತಿ ಅಪ್ಲಿಕೇಷನ್ ತಂದಿದ್ದರು. ಬಯಲು ಶೌಚಾಲಯ ಮುಕ್ತ ಜಿಲ್ಲೆಯನ್ನಾಗಿ ರೂಪಿಸಲು ಪಣ ತೊಟ್ಟಿದ್ದ ರೋಹಿಣಿ ಸಿಂಧೂರಿ ಅವರು ಹಳ್ಳಿ ಹಳ್ಳಿಗೆ ಹೋಗಿ, ಬಯಲು ಶೌಚಕ್ಕೆ ಹೋಗುವವರಿಗೆ ಶೌಚಾಲಯ ಬಳಸುವಂತೆ ತಿಳುವಳಿಕೆ ಹೇಳುವ ಮೂಲಕ ವಿಶೇಷ ಅಭಿಯಾನ ಮಾಡುತ್ತಿದ್ದರು.

    ನಿರ್ಮಲ್ ಭಾರತ್ ಯೋಜನೆಯಡಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಶೌಚಾಲಯ ನಿರ್ಮಾಣ ಗುರಿ ಸಾಧಿಸಿದ್ದ ಇವರ ಅಧಿಕಾರ ಅವಧಿಯಲ್ಲಿ ಶೌಚಾಲಯ ನಿರ್ಮಾಣದಲ್ಲಿ ಮಂಡ್ಯ ಜಿಲ್ಲೆ ಭಾರತದಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಕರ್ನಾಟಕದಲ್ಲಿ ಪ್ರಥಮ ಸ್ಥಾನ ಪಡೆದಿತ್ತು. ಸಿಇಓ ಅವರ ಕಾರ್ಯ ವೈಖರಿಯನ್ನು ನೋಡಿ ಮಂಡ್ಯದ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದರು.

    2015ರ ಸೆಪ್ಟೆಂಬರ್ ನಲ್ಲಿ ರೋಹಿಣಿ ಸಿಂಧೂರಿ ಅವರನ್ನು ಸರ್ಕಾರ ಆಹಾರ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ ನೇಮಿಸಿ ವರ್ಗಮಾಡಿತ್ತು. ಈಗ ಅಲ್ಲಿಂದ ಮೊದಲ ಬಾರಿಗೆ ಜಿಲ್ಲಾಧಿಕಾರಿಯಾಗಿ ಹಾಸನಕ್ಕೆ ಬಂದಿದ್ದರು. ಕಳೆದ 2017ರ ಜುಲೈ 14ರಿಂದ ಹಾಸನದ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದ ಇವರು ಅಲ್ಪಾವಧಿಯಲ್ಲಿ ದಕ್ಷ ಆಡಳಿತಾಧಿಕಾರಿ ಎಂದು ಹೆಸರು ಪಡೆದುಕೊಂಡಿದ್ದರು. ತಮ್ಮ ಕೆಲಸದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಪ್ರಶಸ್ತಿಯನ್ನು ಪಡೆದಿದ್ದರು. ಶ್ರವಣಬೆಳಗೋಳ ಮಹಾಮಸ್ತಕಾಭಿಷೇಕ ಸೇರಿದಂತೆ ಹಾಸನದ ಹಲವು ಯೋಜನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು ಕ್ರಿಯಾಶೀಲರಾಗಿದ್ದರು.  ಇದನ್ನೂ ಓದಿ: ರೋಹಿಣಿ ಸಿಂಧೂರಿ ಎತ್ತಂಗಡಿ ಕೇಸ್‍ನಲ್ಲಿ ಟ್ವಿಸ್ಟ್- ಡಿಸಿ ವರ್ಗಾವಣೆಗೆ ನಾನೇ ಕಾರಣ ಎಂದ `ಕೈ’ ನಾಯಕ!

    https://www.youtube.com/watch?v=RIlr3y8t7ow

    https://www.youtube.com/watch?v=c6PoH0rh1XE

    https://www.youtube.com/watch?v=I0pUTEiRfSo