Tag: ಸಿಐಟಿಯು

  • ಸಿಐಟಿಯು ಬೆಂಗಳೂರು ಉತ್ತರ-ದಕ್ಷಿಣ-ರಾಮನಗರ ಜಿಲ್ಲಾ ಸಮಿತಿಗಳಿಂದ ಸ್ವಾತಂತ್ರ್ಯೋತ್ಸವದ ಅಹೋರಾತ್ರಿ ಕಾರ್ಯಕ್ರಮ

    ಸಿಐಟಿಯು ಬೆಂಗಳೂರು ಉತ್ತರ-ದಕ್ಷಿಣ-ರಾಮನಗರ ಜಿಲ್ಲಾ ಸಮಿತಿಗಳಿಂದ ಸ್ವಾತಂತ್ರ್ಯೋತ್ಸವದ ಅಹೋರಾತ್ರಿ ಕಾರ್ಯಕ್ರಮ

    ಬೆಂಗಳೂರು: ಸಿಐಟಿಯು ಬೆಂಗಳೂರು ಹಾಗೂ ಉತ್ತರ-ದಕ್ಷಿಣ-ರಾಮನಗರ ಜಿಲ್ಲಾ ಸಮಿತಿಗಳಿಂದ 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಹೋರಾತ್ರಿ ಕಾರ್ಯಕ್ರಮ ನಡೆಯಿತು. ನಗರದ ಟೌನ್ ಹಾಲ್‌ನ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಭೂಮಿ ತಾಯಿ ಬಳಗದಿಂದ ದೇಶಪ್ರೇಮಿ ಹಾಡುಗಳನ್ನು ಹಾಡಲಾಯಿತು.

    ಹಿರಿಯ ಸಾಹಿತಿ ಎಸ್.ಜಿ ಸಿದ್ದರಾಮಯ್ಯ ಅವರಿಂದ ಕಾರ್ಯಕ್ರಮದ ಉದ್ಘಾಟನೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ಕಾರ್ಮಿಕ ಮುಖಂಡ ಹೆಚ್.ಎನ್ ಗೋಪಾಲಗೌಡ ಅವರಿಂದ ಧ್ವಜಾರೋಹಣ ನೆರವೇರಿಸಲಾಯಿತು.

    ಪ್ರಗತಿಪರ ಚಿಂತಕ, ಗಾಂಧಿವಾದಿ ವಿ.ಪಿ ಮೇನನ್, ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ, ಸಿಐಟಿಯು ರಾಜ್ಯ ಹಾಗೂ ರಾಷ್ಟ್ರೀಯ ಮುಖಂಡ ಕೆ.ಎನ್ ಉಮೇಶ್, ಸಿಐಟಿಯು ರಾಜ್ಯ ಉಪಾಧ್ಯಕ್ಷ ಡಾ. ಪ್ರಕಾಶ್ ಕೆ, ಡಿಹೆಚ್‌ಎಸ್‌ನ ರಾಜ್ಯ ಸಂಚಾಲಕ ಗೋಪಾಲಕೃಷ್ಣ ಅರಹಳ್ಳಿ, ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿ ಅವರು ಕಾರ್ಯಕ್ರಮದಲ್ಲಿ ಸೇರಿದ್ದ ನೂರಾರು ಜನರನ್ನು ಉದ್ದೇಶಿಸಿ ಮಾತನಾಡಿದರು. ಇದನ್ನೂ ಓದಿ: ಯೋಧರಿಂದ್ಲೇ ಧ್ವಜಾರೋಹಣ ಮಾಡಿಸಿ ಸಂಭ್ರಮಿಸಿದ ಇಡೀ ಗ್ರಾಮ

     

    ಕಾರ್ಯಕ್ರಮದ ಸ್ವಾಗತವನ್ನು ಸಿಐಟಿಯು ಬೆಂ.ದಕ್ಷಿಣ ಜಿಲ್ಲಾ ಅಧ್ಯಕ್ಷ ಬಿ.ಎನ್ ಮಂಜುನಾಥ್, ನಿರೂಪಣೆಯನ್ನು ಉತ್ತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್. ಪ್ರತಾಪ್ ಸಿಂಹ, ದಕ್ಷಿಣ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜು, ಉತ್ತರ ಜಿಲ್ಲಾ ಕಾರ್ಯದರ್ಶಿ ಪಿ. ಮುನಿರಾಜು ಹಾಗೂ ವಂದನಾರ್ಪಣೆಯನ್ನು ರಾಮನಗರ ಜಿಲ್ಲಾ ಅಧ್ಯಕ್ಷ ರಾಘವೇಂದ್ರ ಅವರು ಮಾಡಿದರು.

    ಕಾರ್ಯಕ್ರಮದಲ್ಲಿ ಸಿಐಟಿಯು ರಾಜ್ಯ ಮುಖಂಡರಾದ ಕೆ. ಮಹಂತೇಶ್, ಟಿ. ಲೀಲಾವತಿ, ಮಾಲಿನಿ ಮೇಸ್ತಾ, ವಿವಿಧ ಸಂಘಟನೆಗಳ ರಾಜ್ಯ ಮುಖಂಡರಾದ ಜಿ.ಎನ್ ನಾಗರಾಜ್, ನಿತ್ಯಾನಂದಸ್ವಾಮಿ, ಚಂದ್ರಪ್ಪ ಹೋಸ್ಕೆರಾ, ಗೌರಮ್ಮ, ಕೆ.ಎಸ್ ವಿಮಲ, ಟಿ. ಸುರೇಂದ್ರ ರಾವ್ ಹಾಗೂ ಸಿಐಟಿಯು ಜಿಲ್ಲಾ, ವಿವಿಧ ಸಂಘಗಳ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು. ಇದನ್ನೂ ಓದಿ: ರಾಷ್ಟ್ರದ ಉನ್ನತಿಯಲ್ಲಿ ಪ್ರಧಾನಿ ಮೋದಿಯವರ ಕೊಡುಗೆ ಅನನ್ಯ: ಬಾಲಚಂದ್ರ ಜಾರಕಿಹೊಳಿ

    Live Tv

    [brid partner=56869869 player=32851 video=960834 autoplay=true]

  • ಕೋವಿಡ್ ಲಸಿಕೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳಿಗೆ 312 ಕೋಟಿ ಹಣ: ಸಿಐಟಿಯು ತೀವ್ರ ಖಂಡನೆ

    ಕೋವಿಡ್ ಲಸಿಕೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳಿಗೆ 312 ಕೋಟಿ ಹಣ: ಸಿಐಟಿಯು ತೀವ್ರ ಖಂಡನೆ

    – ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ನಿಧಿ ದುರ್ಬಳಕೆ ತೀವ್ರ ಖಂಡನೆ

    ಬೆಂಗಳೂರು: ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೆ 40 ಲಕ್ಷ ಕೋವಿಡ್ ಲಸಿಕೆಗಳನ್ನು ನೀಡುವ ನೆಪದಲ್ಲಿ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಖಾಸಗಿ ಆಸ್ಪತ್ರೆಗಳಿಗೆ 312 ಕೋಟಿ ರೂಪಾಯಿಗಳನ್ನು ಧಾರೆ ಎರೆಯಲು ಹೊರಟಿದ್ದಾರೆ. ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕೈಗೊಂಡಿರುವ ಈ ಕ್ರಮವನ್ನು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್(ರಿ) ಸಿಐಟಿಯು ತೀವ್ರವಾಗಿ ಖಂಡಿಸಿದೆ. ಕೂಡಲೇ ಈ ತೀರ್ಮಾನವನ್ನು ಹಿಪಡೆಯಬೇಕೆಂದು ಆಗ್ರಹಿಸಿದೆ.

    ಕಾರ್ಮಿಕ ಸಚಿವರು ಖಾಸಗಿ ಆಸ್ಪತ್ರೆಗಳ ಮಾಲಿಕರೊಂದಿಗೆ ಸಭೆ ನಡೆಸಿ ಪ್ರತಿ ಲಸಿಕೆಗೆ 780 ರೂಪಾಯಿ ದರದಲ್ಲಿ ರಾಜ್ಯದ 30 ಲಕ್ಷ ನೋಂದಾಯಿತ ಕಾರ್ಮಿಕರಿಗೆ ಹಾಗೂ 10 ಲಕ್ಷ ವಲಸೆ ಕಾರ್ಮಿಕರಿಗೆ ಲಸಿಕೆ ನೀಡುವ ತೀರ್ಮಾನ ಕೈಗೊಂಡಿರುವುದು ಮಂಡಳಿಯ ನಿಧಿಯನ್ನು ಖಾಲಿ ಮಾಡುವ ಹುನ್ನಾರವಾಗಿದೆ. ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾಗಿರುವ ನಿಧಿಯನ್ನು ಕಾರ್ಮಿಕ ಸಚಿವರು ಹಾಗೂ ಮಂಡಳಿ ಅಧಿಕಾರಿಗಳ ಕೂಟವು ದುರ್ಬಳಕೆ ಮಾಡಿಕೊಳ್ಳಲು ಇಂತಹ ಪ್ರಯತ್ನ ನಡೆಸಿದೆ ಎಂಬ ಆರೋಪ ಕೇಳಿ ಬಂದಿವೆ.

    ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆಯು ದೇಶಾದ್ಯಾಂತ ಎಲ್ಲ ನಾಗರಿಕರಿಗೂ ಉಚಿತವಾಗಿ ಕೋವಿಡ್ ಲಸಿಕೆಗಳನ್ನು ವಿತರಿಸುತ್ತಿದೆ. ಕರ್ನಾಟಕದಲ್ಲೂ ನಿರ್ಮಾಣ ವಲಯದ ಕಾರ್ಮಿಕರು ಮತ್ತು ಅವರ ಕುಟುಂಬದ ಸದಸ್ಯರು ಹಾಗೂ ವಲಸೆ ಕಾರ್ಮಿಕರು ಮೊದಲನೆ ಹಾಗೂ ಎರಡನೇ ಡೋಸ್‍ಗಳನ್ನು ಉಚಿತವಾಗಿ ಪಡೆಯುತ್ತಿದ್ದಾರೆ. ಹೀಗಿದ್ದೂ ಖಾಸಗಿ ಆಸ್ಪತ್ರೆಗಳಿಂದ ಲಸಿಕೆ ಖರೀದಿಸುವ ಅಗತ್ಯವಾದರೂ ಏನಿದೆ ಎಂದು ಸಿಐಟಿಯು ಪ್ರಶ್ನಿಸಿದೆ. ಇದನ್ನೂ ಓದಿ: ಕಾಬೂಲ್ ತೊರೆಯುವ ಮುನ್ನ 73 ಏರ್​​ಕ್ರಾಫ್ಟ್ ನಿಷ್ಕ್ರಿಯಗೊಳಿಸಿದ ಅಮೆರಿಕ ಸೈನಿಕರು

    ಈಗಾಗಲೇ ರೇಷನ್ ಕಿಟ್, ಟೂಲ್ ಕಿಟ್, ಬೂಸ್ಟಪ್ ಕಿಟ್ ಹಾಗೂ ಸುರಕ್ಷಾ ಕಿಟ್, ಹೊಸ ತಂತ್ರಾಂಶ ಅಳವಡಿಕೆ ಹಾಗೂ ಕಂಪ್ಯೂಟರ್ ಮತ್ತು ಟಿವಿಗಳ ಖರೀದಿಗಳಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆಸಲಾಗಿದೆ. ಅಲ್ಲದೆ 2021-22 ಸಾಲಿನಲ್ಲಿ 2688.90 ಕೋಟಿ ಮಂಡಳಿ ಹಣವನ್ನು ವಿವಿಧ ಬಾಬ್ತುಗಳಿಗೆ ಖರ್ಚು ಮಾಡಲು ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರದ ಕೆಪಿಟಿಟಿ ಕಾಯ್ದೆ 1999 ನ್ನು ಕಾರ್ಮಿಕ ಸಚಿವರು ಮತ್ತು ಮಂಡಳಿ ಹಿರಿಯ ಅಧಿಕಾರಿಗಳು ದುರ್ಬಳಕೆ ಮಾಡಿಕೊಂಡು ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾಗಿರುವ ನಿಧಿಯನ್ನು ಮನಬಂದಂತೆ ದುರುಪಯೋಗ ಮಾಡುತ್ತಿದ್ದಾರೆ. ಇದನ್ನೂ ಓದಿ: ಟೋಕಿಯೊ ಪ್ಯಾರಾಲಿಂಪಿಕ್ಸ್- ಹೈಜಂಪ್‍ನಲ್ಲಿ ಬೆಳ್ಳಿ ಗೆದ್ದ ತಂಗವೇಲು, ಕಂಚು ಶರದ್ ಕುಮಾರ್‌ಗೆ

    ಕೊರೊನಾ ಕಾಲದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಅನ್ನ, ಆಹಾರ, ಆರೋಗ್ಯ, ಶಿಕ್ಷಣ ಮತ್ತು ಬದುಕಿನ ಭದ್ರತೆ ಒದಗಿಸುವುದು ಕೇಂದ್ರ ಮತ್ತು ರಾಜ್ಯಗಳ ಕೆಲಸವೆಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ ರಾಜ್ಯ ಸರ್ಕಾರ ಇದಕ್ಕಾಗಿ ಖಜಾನೆಯಿಂದ ಖರ್ಚು ಮಾಡುವ ಬದಲು, ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ಮೂಲಕ ಸಾವಿರಾರು ಕೋಟಿ ಹಣವನ್ನು ಖರ್ಚು ಮಾಡಿಸುತ್ತಿದೆ. ಇದೇ ಅವಕಾಶವನ್ನು ಬಳಸಿಕೊಂಡು ಕಾರ್ಮಿಕ ಸಚಿವರು ಹಾಗೂ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಕೋಟ್ಯಾಂತರ ಹಣ ಲೂಟಿ ಹೊಡೆಯುತ್ತಿದ್ದಾರೆ. ಇದು ಬಡ ಕಾರ್ಮಿಕರ ಹೆಸರಲ್ಲಿ ನಡೆಸುತ್ತಿರುವ ಹಗಲು ದರೋಡೆಯಾಗಿದೆ. ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕೆಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್(ರಿ) ಸಿಐಟಿಯು ಆಗ್ರಹಿಸಿದೆ.

  • ರೈತ ಕಾಯ್ದೆಗೆ ವಿರೋಧ – ಉಡುಪಿಯಲ್ಲಿ ಬೃಹತ್ ಹೋರಾಟಕ್ಕೆ ಎಡಪಕ್ಷ ಸಿದ್ಧತೆ

    ರೈತ ಕಾಯ್ದೆಗೆ ವಿರೋಧ – ಉಡುಪಿಯಲ್ಲಿ ಬೃಹತ್ ಹೋರಾಟಕ್ಕೆ ಎಡಪಕ್ಷ ಸಿದ್ಧತೆ

    ಉಡುಪಿ: ದೇಶದ ಸುಮಾರು ಮುನ್ನೂರು ರೈತ ಸಂಘಟನೆಗಳು ಕರೆ ನೀಡಿರುವ ಡಿಸೆಂಬರ್ 8ರ ಭಾರತ ಬಂದ್‍ಗೆ ಉಡುಪಿ ಜಿಲ್ಲೆಯಲ್ಲಿ ಎಡಪಕ್ಷಗಳು ಬೆಂಬಲ ಘೋಷಿಸಿದೆ. ಉಡುಪಿಯಲ್ಲಿ ಸಭೆ ಸೇರಿದ ಸಿಐಟಿಯು ಸಂಘಟನೆಯ ಸದಸ್ಯರು, ರೈತರ ಹೋರಾಟಕ್ಕೆ ಬೆಂಬಲ ನೀಡಲು ನಿರ್ಧರಿಸಿದ್ದಾರೆ.

    ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ನೂತನ ರೈತರ ಕಾಯ್ದೆ ತಿದ್ದುಪಡಿ ರೈತ ವಿರೋಧಿಯಾಗಿದೆ. ಕಾರ್ಪೊರೇಟ್ ಕಂಪೆನಿಗಳ ಪರವಾಗಿರುವ ಈ ತಿದ್ದುಪಡಿಯನ್ನು ನಾವು ವಿರೋಧಿಸುತ್ತೇವೆ ಎಂದು ಸಿಪಿಎಂ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ತಿಳಿಸಿದ್ದಾರೆ.

    ಉಡುಪಿಯಲ್ಲಿ ಮಾತನಾಡದ ಅವರು, ಅದಾನಿ, ಅಂಬಾನಿಗೆ ಬೆಂಬಲ ನೀಡುವ ಇಂತಹ ಕಾಯ್ದೆಗಳಿಗೆ ನಮ್ಮ ಬೆಂಬಲವಿಲ್ಲ. ಕೇಂದ್ರ ಸರ್ಕಾರದ ಜೊತೆ ಆರು ಸುತ್ತುಗಳ ಮಾತುಕತೆ ನಡೆದರೂ ಫಲ ನೀಡದ ಕಾರಣ ಭಾರತ ಬಂದ್ ನಡೆಸುವುದು ಅನಿವಾರ್ಯವಾಗಿದೆ. ಮೋದಿ ಸರ್ಕಾರದ ಸರ್ವಾಧಿಕಾರಿ ಧೋರಣೆಯ ವಿರುದ್ಧ ನಾವು ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.

    ಕೇಂದ್ರ ಸರ್ಕಾರವು ರೈತ ವಿರೋಧಿ ಕಾಯಿದೆಗಳನ್ನು ವಾಪಸ್ ಪಡೆಯಲು ವಿಶೇಷ ಅಧಿವೇಶನ ಕರೆಯಲು ಆಗ್ರಹಿಸಿ ಕಳೆದ 11 ದಿನಗಳಿಂದ ದೆಹಲಿಯಲ್ಲಿ ರೈತರು ಧರಣಿ ನಡೆಸುತ್ತಿದ್ದಾರೆ. ರೈತರ ಮುಂದಿನ ಹೋರಾಟದ ಭಾಗವಾಗಿ 300 ರೈತ ಸಂಘಟನೆಗಳು ರೈತರ ಬೇಡಿಕೆಗಳಿಗಾಗಿ ಡಿ.8 ರಂದು ಜನತಾ ಕಫ್ರ್ಯೂ- ಅಖಿಲಭಾರತ ಬಂದ್ ಗೆ ಕರೆ ನೀಡಿರುವುದನ್ನು ಸಿಐಟಿಯು ಉಡುಪಿ ಜಿಲ್ಲಾ ಸಮಿತಿ ಬೆಂಬಲ ವ್ಯಕ್ತಪಡಿಸಿದೆ. ಈ ಕಾಯಿದೆಗಳು ಜಾರಿಯಾದಲ್ಲಿ ಈಗಾಗಲೇ ಸಂಕಷ್ಟಕ್ಕೆ ಒಳಗಾಗಿರುವ ರೈತರು, ದವಸ ಧಾನ್ಯಗಳ ಉತ್ಪಾದನೆ ತೀವ್ರವಾಗಿ ಕುಂಠಿತಗೊಳ್ಳುತ್ತದೆ. ಡಿ.8ರಂದು ಜಿಲ್ಲೆಯ ಮೂರು ತಾಲೂಕುಗಳಲ್ಲಿ ಸಮಾನ ಮನಸ್ಕ ಸಂಘಟನೆಗಳೊಂದಿಗೆ ಪ್ರತಿಭಟನೆ ನಡೆಸಲಿದೆ ಎಂದು ಸಿಐಟಿಯು ಅಧ್ಯಕ್ಷ ಶಂಕರ್, ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದ್ದಾರೆ.

  • ನಾಳೆ ಚಿಕ್ಕಬಳ್ಳಾಪುರ ಬಂದ್‍ಗೆ ಸಿಐಟಿಯು ಸಂಘಟನೆ ಕರೆ

    ನಾಳೆ ಚಿಕ್ಕಬಳ್ಳಾಪುರ ಬಂದ್‍ಗೆ ಸಿಐಟಿಯು ಸಂಘಟನೆ ಕರೆ

    ಚಿಕ್ಕಬಳ್ಳಾಪುರ: ದೇಶವ್ಯಾಪಿ ಕಾರ್ಮಿಕ ಸಂಘಟನೆಗಳಿಂದ ಮುಷ್ಕರ ಕರೆ ಹಿನ್ನಲೆಯಲ್ಲಿ ನಾಳೆ(ಬುಧವಾರ) ಚಿಕ್ಕಬಳ್ಳಾಪುರ ಜಿಲ್ಲಾ ಬಂದ್ ಗೆ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಸಂಘಟನೆ ಕರೆ ನೀಡಿದೆ.

    ಕನಿಷ್ಠ ವೇತನ, ಖಾತ್ರಿ ಮಾಸಿಕ ಪಿಂಚಣಿ, ಸಮಾನ ಕೆಲಸಕ್ಕೆ ಸಮಾನವೇತನ ಜಾರಿ ಮಾಡಿ ಗುತ್ತಿಗೆ ಪದ್ಧತಿ ರದ್ದತಿ, ಕಾರ್ಮಿಕರ ವಿವಿಧ ಬೇಡಿಕೆಗಳನ್ನ ಈಡೇರಿಕೆಗಾಗಿ ನಾಳೆ ಬಂದ್ ಗೆ ಕರೆ ನೀಡಲಾಗಿದೆ. ಇದಕ್ಕೆ ಸಾರ್ವಜನಿಕರು ಸಹಕಾರ ನೀಡುವಂತೆ ಸಿಪಿಐಎಂ ಪಕ್ಷದ ಮುಖಂಡ ಮುನಿವೆಂಕಟಪ್ಪ ಮನವಿ ಮಾಡಿಕೊಂಡಿದ್ದಾರೆ.

    ಜಿಲ್ಲೆಯ ಎಲ್ಲಾ ಆರು ತಾಲೂಕುಗಳಲ್ಲಿ ಬಂದ್ ಗೆ ಕರೆ ನೀಡಲಾಗಿದೆ. ಆದರೆ ಬಂದ್ ಗೆ ಕರ್ನಾಟಕ ಪ್ರಾಂತ ರೈತ ಸಂಘ, ಜನವಾದಿ ಮಹಿಳಾ ಸಂಘಟನೆ ಸೇರಿದಂತೆ ಭಾರತ ಕಮ್ಯೂನಿಸ್ಟ್ ಪಕ್ಷವಷ್ಟೇ ಬೆಂಬಲ ನೀಡಿರುವುದರಿಂದ ಬಂದ್ ಯಶಸ್ವಿಯಾಗುತ್ತಾ ಇಲ್ವಾ ಎಂಬುದನ್ನು ಕಾದು ನೋಡಬೇಕಿದೆ.