Tag: ಸಿಐಡಿ

  • ಧರ್ಮಸ್ಥಳ ಬುರುಡೆ ಪ್ರಕರಣ – ಇಂದು ನ್ಯಾಯಾಧೀಶರ ಮುಂದೆ ಹಾಜರಾಗಲಿದ್ದಾನೆ ಚಿನ್ನಯ್ಯ

    ಧರ್ಮಸ್ಥಳ ಬುರುಡೆ ಪ್ರಕರಣ – ಇಂದು ನ್ಯಾಯಾಧೀಶರ ಮುಂದೆ ಹಾಜರಾಗಲಿದ್ದಾನೆ ಚಿನ್ನಯ್ಯ

    – ಧರ್ಮಸ್ಥಳ ಕೇಸ್ ಎಸ್‌ಐಟಿ ಬದಲು ಸಿಐಡಿ ತನಿಖೆ?

    ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ (Dharmasthala Mass Burials) ಪ್ರಕರಣ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಸರಣಿ ವೀಡಿಯೋಗಳನ್ನು ಬಿಡುಗಡೆ ಮಾಡುತ್ತಿರುವುದರ ನಡುವೆ, ಬುರುಡೆ ಚಿನ್ನಯ್ಯನನ್ನು (Mask Man Chinnaiah) ಇಂದು ಮತ್ತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಎಸ್‌ಐಟಿ (SIT) ಹಾಜರುಪಡಿಸಲಿದೆ. ಈ ನಡುವೆ ಮಹೇಶ್ ಶೆಟ್ಟಿ ತಿಮರೋಡಿಗೆ ಪೊಲೀಸರು ಮೂರನೇ ನೋಟಿಸ್ ಸರ್ವ್ ಮಾಡಲು ಸಿದ್ಧತೆ ನಡೆಸಿದ್ದಾರೆ. ನಿರೀಕ್ಷಣಾ ಜಾಮೀನಿಗಾಗಿ ತಿಮರೋಡಿ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ.

    ಧರ್ಮಸ್ಥಳದ ಬುರುಡೆ ಗ್ಯಾಂಗ್‌ನ ಎಸ್‌ಐಟಿ ತನಿಖೆ ಸಾವಧಾನವಾಗಿ ಸಾಗಿದೆ. ಪಿನ್ ಟು ಪಿನ್ ಮಾಹಿತಿಗಳನ್ನು ಕಲೆ ಹಾಕುತ್ತಿರುವ ಪೊಲೀಸರು, ಬುರುಡೆ ಚಿನ್ನಯ್ಯನನ್ನು ಮತ್ತೆ ಕೋರ್ಟ್‌ಗೆ ಇಂದು ಹಾಜರುಪಡಿಸಲಿದ್ದಾರೆ. ಹೆಚ್ಚುವರಿ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆ ದಾಖಲಿಸುವ ಕಾರ್ಯ ನಡೆಯಲಿದೆ. ಶಿವಮೊಗ್ಗ ಜೈಲಿನಲ್ಲಿರುವ ಚಿನ್ನಯ್ಯನನ್ನು ಈಗಾಗಲೇ ಒಂದು ಬಾರಿ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಲು ಕರೆ ತಂದಿದ್ದು, ಇಂದು ಹೇಳಿಕೆ ದಾಖಲಿಸಲು ನ್ಯಾಯಾಧೀಶರು ಅನುಮತಿ ನೀಡಿದ್ದರು. ಹೀಗಾಗಿ ಮತ್ತೆ ಶಿವಮೊಗ್ಗ ಜೈಲಿನಿಂದ ಚಿನ್ನಯ್ಯ ನನ್ನು ಕರೆ ತಂದು ಬೆಳ್ತಂಗಡಿ ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ. ಇದನ್ನೂ ಓದಿ: ಚಿನ್ನದ ಮಾಂಗಲ್ಯ ಸರದ ಆಸೆಗೆ ಮಾವನ ಮಗಳ ಕೊಲೆ – ಸತ್ಯ ಹೊರಬರುತ್ತಿದ್ದಂತೆ ಆರೋಪಿ ಆತ್ಮಹತ್ಯೆ

    ಇನ್ನು ಬುರುಡೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದ್ದು, ಬಂಗ್ಲೆಗುಡ್ಡ ತಲೆಬುರೆಡೆ, ಮೂಳೆಗಳು ಪತ್ತೆ ಕೇಸ್ ಎಸ್‌ಐಟಿ ತನಿಖೆ ಬದಲು ಸಿಐಡಿ ತನಿಖೆಗೆ ಹಸ್ತಾಂತರಿಸಲು ಸರ್ಕಾರ ಪ್ಲ್ಯಾನ್ ಮಾಡಿದೆ ಎಂದು ಹೇಳಲಾಗುತ್ತಿದೆ. ಇದೇ ಗುರುವಾರ ರಾಜ್ಯ ಸರ್ಕಾರದಿಂದ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ. ಶವಗಳ ಹೂತಿಟ್ಟ ಪ್ರಕರಣಗಳು ಮಾತ್ರ ಎಸ್‌ಐಟಿ ತನಿಖೆ ವ್ಯಾಪ್ತಿಯಲ್ಲಿ ಇರಲಿದೆ. ಷಡ್ಯಂತ್ರ ನಡೆದಿದೆ ಎಂದು ಕ್ರಿಮಿನಲ್ ಪಿತೂರಿ ನಡೆದಿರುವ ಬಗ್ಗೆ ಸರ್ಕಾರಕ್ಕೆ ಮೌಖಿಕ ವರದಿ ಕೊಟ್ಟಿದೆ ಎನ್ನಲಾಗಿದೆ. ಇನ್ನು ಎಸ್‌ಐಟಿ ಮಾಹಿತಿ ಮೇರೆಗೆ ಉಳಿದ ತನಿಖೆಯನ್ನ ಸಿಐಡಿಗೆ ವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇದನ್ನೂ ಓದಿ: ವಿಚಾರಣೆಗೆ ಹಾಜರಾಗದ ವಿಜಯಲಕ್ಷ್ಮಿ – ಸಿ ರಿಪೋರ್ಟ್‌ ಸಲ್ಲಿಕೆಗೆ ಪೊಲೀಸರ ಚಿಂತನೆ

    ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ತಪಾಸಣೆ ನಡೆಸಿದಾಗ ಪೊಲೀಸರು ತಲ್ವಾರ್ ಬಂದೂಕು ಸೇರಿದಂತೆ ಹಲವಾರು ವಸ್ತುಗಳು ವಶಕ್ಕೆ ಪಡೆದಿದ್ದರು. ಈ ವಿಚಾರಣೆಗೆ ಈಗಾಗಲೇ ಎರಡು ಬಾರಿ ನೋಟಿಸನ್ನು ಕೊಡಲಾಗಿದೆ. ಎರಡು ನೋಟಿಸ್‌ಗೆ ಕ್ಯಾರೇ ಎನ್ನದ ತಿಮರೋಡಿ ಬೇಲ್‌ಗಾಗಿ ಕೋರ್ಟ್ ಮೊರೆ ಹೋಗಿದ್ದಾರೆ. ಈ ನಡುವೆ ಪೊಲೀಸರು 3ನೇ ನೋಟಿಸ್ ನೀಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಮೂರನೇ ನೋಟಿಸ್‌ಗೆ ಉತ್ತರಿಸದಿದ್ದರೆ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarody) ಮತ್ತೆ ಬಂಧನವಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಅನೈತಿಕ ಸಂಬಂಧ ಶಂಕೆ – 9 ಬಾರಿ ಚಾಕು ಇರಿದು ಲಿವ್ ಇನ್ ಗೆಳತಿಯ ಕೊಂದ ಪ್ರಿಯಕರ

    ಬುರುಡೆ ವಿಚಾರಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿಯ ವಿಚಾರಣೆ ನಡೆದಿಲ್ಲ. ಬುರುಡೆ ಗ್ಯಾಂಗ್‌ನಲ್ಲಿ ತಾನಿಲ್ಲ ಎಂದು ಬಿಂಬಿಸಲು ಹೊರಟಿರುವ ಮಹೇಶ್ ಶೆಟ್ಟಿ ಈಗಾಗಲೇ ಸಾಲು ಸಾಲು ವೀಡಿಯೋಗಳನ್ನು ಹರಿಬಿಟ್ಟಿದ್ದಾರೆ.‌ ಇದನ್ನೂ ಓದಿ: ಧಾರವಾಡ | ಯೂಟ್ಯೂಬರ್‌ ಮುಕಳೆಪ್ಪನ ಪತ್ನಿ ಪೊಲೀಸರ ವಶಕ್ಕೆ – ಶಕ್ತಿ ಸದನ ಕೇಂದ್ರಕ್ಕೆ ರವಾನೆ

  • ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಕೇಸ್‌ – ಆರೋಪಿ ಜಗ್ಗ 10 ದಿನ ಸಿಐಡಿ ಕಸ್ಟಡಿಗೆ

    ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಕೇಸ್‌ – ಆರೋಪಿ ಜಗ್ಗ 10 ದಿನ ಸಿಐಡಿ ಕಸ್ಟಡಿಗೆ

    ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ (Biklu Shiva) ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಜಗದೀಶ್‌ನನ್ನು 10 ದಿನಗಳ ಕಾಲ ಸಿಐಡಿ ಕಸ್ಟಡಿಗೆ ವಹಿಸಿ 1ನೇ ಎಸಿಜೆಎಂ ಕೋರ್ಟ್‌ ಆದೇಶಿಸಿದೆ.

    ಜಗದೀಶ್‌ನನ್ನು (Jagga) ದೆಹಲಿ ವಿಮಾನ ನಿಲ್ದಾಣದಲ್ಲಿ ಸಿಐಡಿ ವಶಕ್ಕೆ ಪಡೆಯಿತು. 1 ನೇ ಎಸಿಜೆಎಂ ಕೋರ್ಟ್‌ಗೆ ಆರೋಪಿಯನ್ನು ಹಾಜರುಪಡಿಸಲಾಗಿತ್ತು. 10 ದಿನ ಸಿಐಡಿ ಕಸ್ಟಡಿಗೆ ಪಡೆದಿದೆ. ಕೊಲೆ ಕೇಸ್ ಹಾಗೂ ಕೋಕಾ ಕಾಯ್ದೆಯಡಿ ಜಗ್ಗನನ್ನ ಸಿಐಡಿ ವಶಕ್ಕೆ ಪಡೆದಿದೆ. ಇದನ್ನೂ ಓದಿ: ಬಿಕ್ಲು ಶಿವ ಹತ್ಯೆ ಕೇಸ್ – ಎ1 ಆರೋಪಿ ಜಗ್ಗ ಅರೆಸ್ಟ್

    ಜು.15 ರಂದು ಭಾರತಿನಗರದಲ್ಲಿ ಬಿಕ್ಲು ಶಿವನ ಕೊಲೆಯಾಗಿತ್ತು. ರೌಡಿಶೀಟರ್ ಕೊಲೆ ಕೇಸ್‌ನಲ್ಲಿ ಜಗದೀಶ್‌ ಎ1 ಆರೋಪಿಯಾಗಿದ್ದ. ಕೊಲೆಯ ನಂತರ ಚೆನ್ನೈ ಏರ್‌ಪೋರ್ಟ್‌ನಿಂದ ದುಬೈಗೆ ಎಸ್ಕೇಪ್ ಆಗಿದ್ದ.

    ಭಾರತಿನಗರ ಪೊಲೀಸ್‌ ಠಾಣೆಯಲ್ಲಿ ಬಿಕ್ಲು ಶಿವನ ಕೊಲೆ ಕೇಸ್ ದಾಖಲಾಗಿತ್ತು. ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿತ್ತು. ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್‌ – ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

  • ಬಿಕ್ಲು ಶಿವ ಹತ್ಯೆ ಕೇಸ್ – ಎ1 ಆರೋಪಿ ಜಗ್ಗ ಅರೆಸ್ಟ್

    ಬಿಕ್ಲು ಶಿವ ಹತ್ಯೆ ಕೇಸ್ – ಎ1 ಆರೋಪಿ ಜಗ್ಗ ಅರೆಸ್ಟ್

    ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ (Biklu Shiva Murder Case) ತಲೆಮರೆಸಿಕೊಂಡಿದ್ದ ಎ1 ಆರೋಪಿ ಜಗದೀಶ್ ಅಲಿಯಾಸ್ ಜಗ್ಗನನ್ನು ಸಿಐಡಿ (CID) ಅಧಿಕಾರಿಗಳು ಬಂಧಿಸಿದ್ದಾರೆ.

    ಜಗ್ಗನನ್ನ ದೆಹಲಿಯಿಂದ ಅರೆಸ್ಟ್ ಮಾಡಿ ಸಿಐಡಿ ಅಧಿಕಾರಿಗಳು ಕರೆತರುತ್ತಿದ್ದಾರೆ. ಲುಕ್‌ಔಟ್ ನೋಟಿಸ್ ಜಾರಿ ಹಿನ್ನೆಲೆ ದೆಹಲಿ ಏರ್‌ಪೋರ್ಟ್‌ನಲ್ಲಿ ಜಗ್ಗ ಲಾಕ್ ಆಗಿದ್ದಾನೆ. ಜಗ್ಗನನ್ನು ವಶಕ್ಕೆ ಪಡೆದು ಸಿಐಡಿ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ಸದ್ಯ ಜಗ್ಗನನ್ನು ವಶಕ್ಕೆ ಪಡೆದ ಸಿಐಡಿ ಅಧಿಕಾರಿಗಳು ಆತನನ್ನು ಸಿಐಡಿ ಕಚೇರಿಗೆ ಕರೆದುಕೊಂಡು ಬರುತ್ತಿದ್ದಾರೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ 5 ಗಂಟೆಗೆ ಆಗಮಿಸಿ ಎಸ್‌ಐಟಿ ಅಧಿಕಾರಿಗಳಿಗೆ ಶಾಕ್‌ ಕೊಟ್ಟ ಸುಜಾತ ಭಟ್‌!

    ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಕೇರಳ ಸೇರಿದಂತೆ ಹಲವು ಕಡೆಗಳಲ್ಲಿ ಜಗದೀಶ್ ಅಲಿಯಾಸ್ ಜಗ್ಗನ ಹುಡುಕಾಟಕ್ಕೆ ಪೊಲೀಸರು ತೀವ್ರ ಶೋಧ ನಡೆಸಿದ್ದರು. ಬಳಿಕ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಗ್ಗ ಸೇರಿ ಈವರೆಗೆ 21 ಆರೋಪಿಗಳನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಈ ಗಣೇಶೋತ್ಸವಕ್ಕೆ ವಿಘ್ನ ವಿನಾಶಕನ ಮೂರ್ತಿಯನ್ನು ಮನೆಯಲ್ಲೇ ತಯಾರಿಸಿ…

    ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಜಗದೀಶ್ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ರೌಡಿಶೀಟ್ ತೆರೆಯಲಾಗಿತ್ತು. ಕೆಲವು ವರ್ಷಗಳ ಹಿಂದೆ ಆತನನ್ನು ರೌಡಿಪಟ್ಟಿಯಿಂದ ಕೈ ಬಿಡಲಾಗಿತ್ತು. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜಗದೀಶ್ ಪ್ರಮುಖ ಆರೋಪಿಯಾಗಿದ್ದಾನೆ. ಇದನ್ನೂ ಓದಿ: ಮಟ್ಟಣ್ಣನವರ್‌ನಿಂದ ಹೋರಾಟ ಹಳ್ಳ ಹಿಡಿಯಿತು – ಸೌಜನ್ಯ ಪರ ಹೋರಾಟಗಾರರಲ್ಲೇ ಒಡಕು!

    ಜುಲೈ 15ರಂದು ಬಿಕ್ಲು ಶಿವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಶಿವ ಅವರ ತಾಯಿ ವಿಜಯಲಕ್ಷ್ಮಿ ಅವರು ನೀಡಿದ ದೂರು ಆಧರಿಸಿ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸೇರಿದಂತೆ ಐವರ ವಿರುದ್ಧ ಭಾರತಿನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಬೈರತಿ ಬಸವರಾಜ್ ಅವರನ್ನು ಭಾರತಿನಗರ ಠಾಣೆಯ ಪೊಲೀಸರು ಎರಡು ಬಾರಿ ವಿಚಾರಣೆ ನಡೆಸಿದ್ದರು. 15 ಆರೋಪಿಗಳನ್ನು ಬಂಧಿಸಿದ್ದರು. ಅದಾದ ಮೇಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಸರ್ಕಾರ ವಹಿಸಿತ್ತು. ಇದನ್ನೂ ಓದಿ: ನಾಡಿನಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ – ಗಗನಕ್ಕೇರಿದ ಹೂವುಗಳ ದರ

  • ಸಚಿವ ಕೆ.ಎನ್.ರಾಜಣ್ಣಗೆ ಹನಿಟ್ರ್ಯಾಪ್ ಯತ್ನದಲ್ಲಿ ಹುರುಳಿಲ್ಲ – ಐಜಿಪಿಗೆ ಸಿಐಡಿ ವರದಿ

    ಸಚಿವ ಕೆ.ಎನ್.ರಾಜಣ್ಣಗೆ ಹನಿಟ್ರ್ಯಾಪ್ ಯತ್ನದಲ್ಲಿ ಹುರುಳಿಲ್ಲ – ಐಜಿಪಿಗೆ ಸಿಐಡಿ ವರದಿ

    ಬೆಂಗಳೂರು: ಕಳೆದ ವಿಧಾನಸಭಾ ಅಧಿವೇಷನದ ವೇಳೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ಸಚಿವ ಕೆ.ಎನ್.ರಾಜಣ್ಣ (K.N.Rajanna) ಹನಿಟ್ರ್ಯಾಪ್ ಯತ್ನ ಪ್ರಕರಣದಲ್ಲಿ ಯಾವುದೇ ಸಾಕ್ಷಿಗಳು ಇಲ್ಲ, ಕೇಸಲ್ಲಿ ಹುರುಳಿಲ್ಲ ಎಂದು ಸಿಐಡಿ ಷರಾ ಬರೆದಿದೆ.

    ಸಾಕ್ಷ್ಯಾಧಾರಗಳ ಕೊರತೆಯಿಂದ ಕೇಸಲ್ಲಿ ಹುರುಳಿಲ್ಲ ಅಂತಾ ಡಿಜಿ & ಐಜಿಪಿಗೆ ರಿಪೋರ್ಟ್ ನೀಡಲಾಗಿದೆ. ಕಳೆದ ವಿಧಾನಸಭಾ ಅಧಿವೇಶನದಲ್ಲಿ ಹನಿಟ್ರ್ಯಾಪ್ ಯತ್ನವಾಗಿತ್ತು ಎಂದು ಸಚಿವ ರಾಜಣ್ಣ ಸದನದಲ್ಲೇ ಹೇಳಿದ್ದರು. ಸೂಕ್ತ ತನಿಖೆ ನಡೆಸುವಂತೆ ಗೃಹ ಸಚಿವರಿಗೆ ರಾಜಣ್ಣ ದೂರು ನೀಡಿದ್ದರು. ಗೃಹ ಸಚಿವರಿಗೆ ನೀಡಿದ ದೂರನ್ನ ಆಧರಿಸಿ ಸಿಐಡಿಗೆ ತನಿಖೆ ನಡೆಸುವಂತೆ ಸೂಚನೆ ನೀಡಲಾಗಿತ್ತು. ಸಚಿವ ರಾಜಣ್ಣ ಹೇಳಿಕೆ ದಾಖಲಿಸಿ ಸಿಐಡಿ ಸ್ಥಳ ಮಹಜರು ನಡೆಸಿತ್ತು. ಇದನ್ನೂ ಓದಿ: ಹನಿಟ್ರ್ಯಾಪ್‌ ಮಾಡಲು ಬಂದವರಿಗೆ ಕಪಾಳಕ್ಕೆ ಹೊಡೆದಿದ್ದು ನಿಜ – ವಿಷ ಕನ್ಯೆಯರ ರಹಸ್ಯ ಹೇಳಿದ ರಾಜಣ್ಣ

    ತನಿಖೆಯಲ್ಲಿ ಹನಿಟ್ರ್ಯಾಪ್‌ಗೆ ಯಾವುದೇ ಸಾಕ್ಷಿಗಳು ಸಿಕ್ಕಿಲ್ಲ ಎಂದು ರಿಪೋರ್ಟ್ ಸಲ್ಲಿಕೆ ಮಾಡಿದೆ. ಹನಿಟ್ರ್ಯಾಪ್ ಬಗ್ಗೆ ತನಿಖೆ ನಡೆಸಿದ್ದ ಡಿವೈಎಸ್‌ಪಿ ಕೇಶವ ಮೂರ್ತಿ ಮತ್ತು ತಂಡ ವರದಿ ನೀಡಿದೆ.

  • ಕೊಹ್ಲಿಗಾಗಿ ಆರ್‌ಸಿಬಿಯ ಆತುರವೇ ಕಾಲ್ತುಳಿತಕ್ಕೆ ಕಾರಣ – ಸಿಐಡಿ ತನಿಖೆಯಲ್ಲಿ ಸ್ಫೋಟಕ ವಿಚಾರ ಬಯಲು

    ಕೊಹ್ಲಿಗಾಗಿ ಆರ್‌ಸಿಬಿಯ ಆತುರವೇ ಕಾಲ್ತುಳಿತಕ್ಕೆ ಕಾರಣ – ಸಿಐಡಿ ತನಿಖೆಯಲ್ಲಿ ಸ್ಫೋಟಕ ವಿಚಾರ ಬಯಲು

    – ಕೊಹ್ಲಿ ಆಪ್ತ ನಿಖಿಲ್ ಸೋಸಲೆಯಿಂದ ವಿಜಯೋತ್ಸವಕ್ಕೆ ಒತ್ತಡ
    – ಕಾಲ್ತುಳಿತದ ವೇಳೆ ಗೇಟ್‌ಗಳ ಬಳಿ ಪೊಲೀಸರೇ ಇರಲಿಲ್ಲ

    ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸಂಬಂಧ ಸಿಐಡಿ ಬಹುತೇಕ ತನಿಖೆ ಮುಗಿಸಿದ್ದು, ವಿರಾಟ್ ಕೊಹ್ಲಿಗಾಗಿ ಆರ್‌ಸಿಬಿ (RCB) ಮ್ಯಾನೇಜ್‌ಮೆಂಟ್ ತೆಗೆದುಕೊಂಡ ಆತುರದ ನಿರ್ಧಾರವೇ 11 ಜನರ ಸಾವಿಗೆ ಕಾರಣ ಎಂದು ವರದಿ ಸಿದ್ಧಪಡಿಸಿದೆ.

    ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stampede) ಉಂಟಾದ ಕಾಲ್ತುಳಿತ ಪ್ರಕರಣ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೂರು ಎಫ್‌ಐಆರ್‌ಗಳ ಬಗ್ಗೆ ತನಿಖೆ ನಡೆಸಿದ್ದ ಸಿಐಡಿ ಕಾಲ್ತುಳಿತಕ್ಕೆ ಕಾರಣವಾದ ಅಂಶಗಳನ್ನ ಪತ್ತೆ ಮಾಡಿದೆ. ಇದನ್ನೂ ಓದಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅರ್ಧನಾರೇಶ್ವರರನ್ನ ಹುಡುಕಿಕೊಳ್ಳಲಿ: ಹರಿಪ್ರಸಾದ್

    ಸಾವಿರಾರು ವಿಡಿಯೋಗಳು, ಸಿಸಿಟಿವಿ ಕ್ಯಾಮೆರಾ, ಚಿನ್ನಸ್ವಾಮಿ ಸ್ಟೇಡಿಯಂನ 13 ಗೇಟ್‌ಗಳಲ್ಲಿ ಅವ್ಯವಸ್ಥೆ, ಪೊಲೀಸರ ನಿಯೋಜನೆ, ನೂಕುನುಗ್ಗಲು ಉಂಟಾಗಲು ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಸಿ, ಸಿಐಡಿ ವರದಿ ಸಿದ್ಧಪಡಿಸಿದೆ. ಇದನ್ನೂ ಓದಿ: ರಾಜಮೌಳಿ ಸಿನಿಮಾ ರಿಜೆಕ್ಟ್ ಮಾಡಿದ ನಟ ವಿಕ್ರಂ – ಕಾರಣ ಏನ್ ಗೊತ್ತಾ?

    ವರದಿಯಲ್ಲೇನಿದೆ?
    ಆರ್‌ಸಿಬಿ ಸಿಇಓ ರಾಜೇಶ್ ಮೆನನ್, ಮಾರ್ಕೆಟಿಂಗ್ ಹೆಡ್ ನಿಖಿಲ್ ಸೋಸಲೆಯಿಂದ ಕಾರ್ಯಕ್ರಮ ಆಯೋಜನೆ ನಿರ್ಧಾರ ಮಾಡಲಾಗಿತ್ತು. ವಿರಾಟ್ ಕೊಹ್ಲಿಯ (Virat Kohli) ಕಾರಣ ಕೊಟ್ಟು ಕೊಹ್ಲಿ ಆಪ್ತ ನಿಖಿಲ್ ಸೋಸ್ಲೆ ಕೆಎಸ್‌ಸಿಎ ಮೇಲೆ ಅತಿಯಾದ ಒತ್ತಡ ಹಾಕಿ ಕಾರ್ಯಕ್ರಮ ಆಯೋಜಿಸಿದ್ದರು.

    ಕಾರ್ಯಕ್ರಮ ಮುಂದೂಡಿಕೆ ಬಗ್ಗೆ ಪೊಲೀಸ್ ಇಲಾಖೆ ಹಾಗೂ ಕೆಎಸ್‌ಸಿಎ ಅಭಿಪ್ರಾಯ ನೀಡಿತ್ತು. ಆದರೆ ಕೊಹ್ಲಿ ಕಾರಣ ಹೇಳಿ ನಾಳೆಯೇ ಕಾರ್ಯಕ್ರಮ ಆಯೋಜನೆ ಆಗಬೇಕು ಎಂದು ನಿಖಿಲ್ ಸೋಸಲೆ ಒತ್ತಡ ಹಾಕಿದ್ದರು. ಕೊಹ್ಲಿ ಯುಕೆಗೆ ಹೋಗಬೇಕು. ಮುಂದೂಡಿದರೆ ಕೊಹ್ಲಿ ಬರುವುದಿಲ್ಲ ಎಂದಿದ್ದರು. ನಿಖಿಲ್ ಸೋಸಲೆ ಒತ್ತಡಕ್ಕೆ ಕಾರ್ಯಕ್ರಮ ಆಯೋಜನೆ ನಡೆದಿತ್ತು. ಇದನ್ನೂ ಓದಿ: ಹಿಮಾಚಲದಲ್ಲಿ ಮೇಘಸ್ಫೋಟ| ಮಧ್ಯರಾತ್ರಿ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ

    ಟಿಕೆಟ್ ಗೊಂದಲ, ಟ್ವೀಟ್ ಹಿಂದೆಯೂ ನಿಖಿಲ್ ಸೋಸಲೆ ಕಾರಣ. ಟ್ವೀಟ್‌ನಿಂದಲೇ ಸಾಕಷ್ಟು ಜನ ಸೇರಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಅಲ್ಲದೇ ಫ್ರೀ ಟಿಕೆಟ್ ಅನೌನ್ಸ್ ಮಾಡಿದ್ದರಿಂದಲೇ ಜನ ಹೆಚ್ಚು ಸೇರಿದ್ದರು.

    ಪೊಲೀಸ್ ಬಂದೋಬಸ್ತ್ನಲ್ಲಿ ಎಡವಟ್ಟಾಗಿತ್ತು. ಕಾಲ್ತುಳಿತದ ವೇಳೆ ಗೇಟ್‌ಗಳ ಬಳಿ ಪೊಲೀಸರೇ ಇರಲಿಲ್ಲ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಹೆಚ್ಚಿನ ಬಂದೋಬಸ್ತ್ ಆಗಿರಲಿಲ್ಲ. ವಿಧಾನಸೌಧದ ಬಳಿಯೇ ಪೊಲೀಸ್ ಇಲಾಖೆ ಹೆಚ್ಚು ಗಮನಹರಿಸಿತ್ತು. ಇದನ್ನೂ ಓದಿ: ಬಹುಭಾಷಾ ನಟ ಆಂಧ್ರ, ತಮಿಳುನಾಡಿನಲ್ಲೇಕೆ ಹೋರಾಡುತ್ತಿಲ್ಲ: ಪ್ರಕಾಶ್ ರೈಗೆ ಕುಟುಕಿದ ಎಂಬಿ ಪಾಟೀಲ್‌

    ಸ್ಟೇಡಿಯಂ ಬಂದೋಬಸ್ತ್ ಬಗ್ಗೆ ಪೊಲೀಸ್ ಅಧಿಕಾರಿಗಳು ನಿಯೋಜನೆ ಬಗ್ಗೆ ರೋಲ್‌ಕಾಲ್ ಆಗಿರಲಿಲ್ಲ. ಕೆಎಸ್‌ಆರ್‌ಪಿ ಸಿಬ್ಬಂದಿಗೂ ಸರಿಯಾದ ಸಂದೇಶ ನೀಡಿರಲಿಲ್ಲ. ಐಪಿಎಲ್ ಮ್ಯಾಚ್ ವೇಳೆಯಂತೆಯೇ ಕೆಎಸ್‌ಆರ್‌ಪಿಗೆ ಸಂದೇಶ ನೀಡಲಾಗಿತ್ತು. ಲಕ್ಷಾಂತರ ಜನ ಸೇರುತ್ತಾರೆ. ಸಿಬ್ಬಂದಿ ಗಸ್ತು ಹಾಗೂ ಬಂದೋಬಸ್ತ್ ಬಗ್ಗೆ ಕೆಎಸ್‌ಆರ್‌ಪಿ ಸಿಬ್ಬಂದಿಗೂ ಸೂಚನೆ ನೀಡಿರಲಿಲ್ಲ ಎಂದು ಸಿಐಡಿ ವರದಿಯಲ್ಲಿ ಉಲ್ಲೇಖವಾಗಿದೆ. ಇದನ್ನೂ ಓದಿ: ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಹತ್ಯೆ – ಪ್ರಮುಖ ಆರೋಪಿ ಎನ್‌ಕೌಂಟರ್‌ಗೆ ಬಲಿ

    ಸದ್ಯ ಈ ಎಲ್ಲಾ ಅಂಶಗಳನ್ನ ಸಿಐಡಿ ವರದಿಯಲ್ಲಿ ದಾಖಲಿಸಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಉಳಿದ ತನಿಖೆ ಮುಗಿಸಿ ಕೋರ್ಟ್‌ಗೆ ವರದಿ ಸಲ್ಲಿಸಲಿದೆ.

  • ಐಶ್ವರ್ಯ ಗೌಡ ವಂಚನೆ ಪ್ರಕರಣ ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

    ಐಶ್ವರ್ಯ ಗೌಡ ವಂಚನೆ ಪ್ರಕರಣ ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

    ಬೆಂಗಳೂರು: ಐಶ್ವರ್ಯ ಗೌಡ (Aishwarya Gowda) ವಂಚನೆ ಪ್ರಕರಣದ ತನಿಖೆಯನ್ನು ಸಿಐಡಿಗೆ (CID) ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಐಶ್ವರ್ಯ ವಿರುದ್ಧ ರಾಜ್ಯದ ಹಲವು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ರಾಜರಾಜೇಶ್ವರಿ ನಗರ, ಚಂದ್ರಾಲೇಔಟ್, ಮಂಡ್ಯ ಸೇರಿ ಹಲವಾರು ಕಡೆ ಕೇಸ್ ದಾಖಲಾಗಿತ್ತು. ಈಗ ಐಶ್ವರ್ಯ ಗೌಡ ವಂಚನೆ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಸಿಡಿಆರ್ ಪ್ರಕರಣ ಹೊರತು ಪಡಿಸಿ ಉಳಿದ ಪ್ರಕರಣದ ತನಿಖೆ ನಡೆಸಲು ಸಿಐಡಿಗೆ ವರ್ಗಾಣೆ ಮಾಡಲಾಗಿದೆ. ಇದನ್ನೂ ಓದಿ: ಜನರಿಗೆ ಗುಡ್ ನ್ಯೂಸ್ – 3 ಸಾವಿರಕ್ಕೆ ವಾರ್ಷಿಕ ಟೋಲ್‌ ಪಾಸ್‌!

    ಸಿಐಡಿಯ ಆರ್ಥಿಕ ಅಪರಾಧ ವಿಭಾಗಕ್ಕೆ ಕೇಸ್ ವರ್ಗಾವಣೆ ಮಾಡಲಾಗಿದೆ. ಈಗಾಗಲೇ ಬ್ಯಾಟರಾಯನಪುರ ಉಪವಿಭಾಗದ ಪೊಲೀಸರು ಕೇಸ್‌ನ ತನಿಖೆ ನಡೆಸಿದ್ದರು. ಇದೀಗ ಮುಂದಿನ ತನಿಖೆಗೆ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಮತ್ತೊಂದು ಕಡೆ ಇಡಿಯಿಂದ ಕೂಡ ವಂಚನೆ ಕೇಸ್ ತನಿಖೆ ನಡೆಯುತ್ತಿದೆ. ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಐಶ್ವರ್ಯ ಗೌಡಳನ್ನು ಬಂಧಿಸಿ ಜೈಲಿಗೆ ಕಳಿಸಿದ್ದರು. ಆದಾದ ಬಳಿಕ ಮಾಜಿ ಸಂಸದ ಡಿ.ಕೆ ಸುರೇಶ್ ಕೂಡ ಪ್ರಕರಣದಲ್ಲಿ ತನಿಖೆಗೆ ಹಾಜರಾಗುವಂತೆ ಇಡಿ ನೋಟಿಸ್ ಕೊಟ್ಟಿದ್ದು, ತನಿಖೆ ಮುಂದುವರಿಸಿದೆ. ಇದನ್ನೂ ಓದಿ: ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಜುಲೈ ಮೊದಲ ವಾರಕ್ಕೆ ವಿಚಾರಣೆ ಮುಂದೂಡಿಕೆ

  • ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಗಾಯಾಳು ಮಕ್ಕಳ ವಿವರ ಕೋರಿ ಸಿಐಡಿಗೆ ಮಕ್ಕಳ ಹಕ್ಕುಗಳ ಆಯೋಗ ನೋಟಿಸ್

    ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಗಾಯಾಳು ಮಕ್ಕಳ ವಿವರ ಕೋರಿ ಸಿಐಡಿಗೆ ಮಕ್ಕಳ ಹಕ್ಕುಗಳ ಆಯೋಗ ನೋಟಿಸ್

    ಬೆಂಗಳೂರು: ಚಿನ್ನಸ್ವಾಮಿಯಲ್ಲಿ ಕಾಲ್ತುಳಿತದಿಂದ (Chinnaswamy Stampede) ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ (CID) ಮಕ್ಕಳ ಹಕ್ಕುಗಳ ಆಯೋಗ (Child Rights Panel) ನೋಟಿಸ್ ಜಾರಿ ಮಾಡಿದೆ.

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಾಕಷ್ಟು ಜನ ಮಕ್ಕಳು ತೊಂದರೆಗೆ ಒಳಗಾಗಿರುವ ಬಗ್ಗೆ ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ನೋಟಿಸ್ ನೀಡಿದೆ. ಇದನ್ನೂ ಓದಿ: ವಿಧಾನಸೌಧದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು KSCA, RCB: ಸಿದ್ದರಾಮಯ್ಯ

    ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆರ್‌ಸಿಬಿ (RCB) ವಿಜಯೋತ್ಸವದ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳಿದ್ದರು. ಅವಘಡದಲ್ಲಿ ಸಾಕಷ್ಟು ಜನ ಮಕ್ಕಳಿಗೆ ತೊಂದರೆಯಾಗಿರುವ ಮಾಹಿತಿ ಇದೆ. ಆದರೆ ನಿಖರವಾಗಿ ಎಷ್ಟು ಮಕ್ಕಳಿಗೆ ಸಮಸ್ಯೆಯಾಗಿದೆ ಏನಾಗಿದೆ ಎಂಬುದರ ವಿವರ ಸಿಕ್ಕಿಲ್ಲ. ಹೀಗಾಗಿ ಮಕ್ಕಳ ಹಕ್ಕು ಆಯೋಗವು ಸಿಐಡಿಗೆ ವಿವರ ಕೋರಿ ನೋಟಿಸ್ ಜಾರಿ ಮಾಡಿದೆ. ಇದನ್ನೂ ಓದಿ: `ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ

    ಜೂ. 4ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಉಂಟಾಗಿ 11 ಮಂದಿ ಸಾವನ್ನಪ್ಪಿದ್ದರು. ಈ ವೇಳೆ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

  • ಚಿನ್ನಸ್ವಾಮಿ ಸ್ಟೇಡಿಯಂಗೆ ಸಿಐಡಿ ತಂಡ ಭೇಟಿ – ಕಾಲ್ತುಳಿತ ಸ್ಥಳದಲ್ಲಿ ಪರಿಶೀಲನೆ

    ಚಿನ್ನಸ್ವಾಮಿ ಸ್ಟೇಡಿಯಂಗೆ ಸಿಐಡಿ ತಂಡ ಭೇಟಿ – ಕಾಲ್ತುಳಿತ ಸ್ಥಳದಲ್ಲಿ ಪರಿಶೀಲನೆ

    ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಬಳಿ ಕಾಲ್ತುಳಿತದಿಂದ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದ ಪ್ರಕರಣ ಈಗಾಗಲೇ ದೇಶಾದ್ಯಂತ ಸುದ್ದಿಯಾಗಿದೆ. ಪ್ರಕರಣದಿಂದ ಸರ್ಕಾರ ಆಘಾತಕ್ಕೆ ಒಳಗಾಗಿದ್ದು, ಈಗಾಗಲೇ ನಾಲ್ವರನ್ನು ಬಂಧಿಸಲಾಗಿದೆ. ಸರ್ಕಾರ ಸಿಐಡಿ (CID), ಮ್ಯಾಜಿಸ್ಟ್ರೇಟ್ ಹಾಗೂ ನ್ಯಾಯಾಂಗ ತನಿಖೆಗೆ ಆದೇಶ ಕೂಡ ಕೊಟ್ಟಿದೆ. ಪ್ರಕರಣವನ್ನು ಸಿಐಡಿ ಪೊಲೀಸರಿಗೆ ಕಬ್ಬನ್ ಪಾರ್ಕ್ ಪೊಲೀಸರು ಹಸ್ತಾಂತರ ಮಾಡಿದ್ದು, ಇಂದಿನಿಂದ ತನಿಖೆ ಆರಂಭಿಸಿದೆ.

    ಸಿಐಡಿ ಎಸ್‌ಪಿ ಶುಭನ್ವಿತಾ ನೇತೃತ್ವದಲ್ಲಿ ಕಾಲ್ತುಳಿತ ಪ್ರಕರಣದ ತನಿಖೆ ನಡೆಯಲಿದ್ದು, ಡಿವೈಎಸ್‌ಪಿ ಗೌತಮ್ ಹಾಗೂ ಪುರುಷೋತ್ತಮ್‌ರನ್ನು ತನಿಖಾಧಿಕಾರಿಗಳಾಗಿ ನೇಮಕ ಮಾಡಲಾಗಿದೆ. ಕಾಲ್ತುಳಿತ ಉಂಟಾದ ಸ್ಥಳಕ್ಕೆ ಭೇಟಿ ನೀಡಿದ ಸಿಐಡಿ ತಂಡ, ನೂಕು ನುಗ್ಗಲು ಉಂಟಾಗಿದ್ದ ಗೇಟ್ ನಂಬರ್ 7, 19, 18, 16, 21ರ ಬಳಿ ಪರಿಶೀಲನೆ ನಡೆಸಿದೆ. ಇದನ್ನೂ ಓದಿ: ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಹೆದ್ದಾರಿಯಲ್ಲಿ ತುರ್ತು ಭೂಸ್ಪರ್ಶ

    ಬಂಧನಕ್ಕೊಳಗಾಗಿರುವ ಡಿಎನ್‌ಎ ಮ್ಯಾನೇಜ್‌ಮೆಂಟ್‌ನ ಮೂವರು ಹಾಗೂ ಆರ್‌ಸಿಬಿಯ ಒಬ್ಬರು ನ್ಯಾಯಾಂಗ ಬಂಧನದಲ್ಲಿದ್ದು, ಬಾಡಿ ವಾರೆಂಟ್ ಮೇಲೆ ವಶಕ್ಕೆ ಪಡೆಯಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಶನಿವಾರ ಹಾಗೂ ಭಾನುವಾರ ಕೋರ್ಟ್‌ಗೆ ರಜೆ ಇದ್ದು, ಸೋಮವಾರ ಕಸ್ಟಡಿಗೆ ಪಡೆಯಲು ಸಿದ್ಧತೆ ನಡೆದಿದೆ. ಇದನ್ನೂ ಓದಿ: ಮಂಗಳೂರು| ಸೆಮಿನಾರ್ ತಪ್ಪಿಸಲು ವಿದ್ಯಾರ್ಥಿನಿಯಿಂದಲೇ ಮೆಡಿಕಲ್ ಕಾಲೇಜಿಗೆ ಬಾಂಬ್ ಬೆದರಿಕೆ

    ಸಿಐಡಿ ಜೊತೆ ಬೆಂಗಳೂರು ಜಿಲ್ಲಾಧಿಕಾರಿ ಕೂಡ ತನಿಖೆ ಆರಂಭಿಸಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿರೋ ಜಿಲ್ಲಾಧಿಕಾರಿ ಜಗದೀಶ್, ಗಾಯಗೊಂಡವರ ಬಗ್ಗೆ ತನಿಖೆ ವರದಿ ಪಡೆದುಕೊಂಡಿದ್ದಾರೆ. ಇನ್ನೂ ಗಾಯಾಳುಗಳ ಸಂಖ್ಯೆಯನ್ನು ಸರ್ಕಾರ ತಪ್ಪಾಗಿ ಹೇಳಿರೋದು ಬಹಿರಂಗವಾಗಿದೆ. ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು 11 ಜನರು ಮೃತಪಟ್ಟಿದ್ದಾರೆ, 45 ಜನರು ಗಾಯಗೊಂಡಿದ್ದಾರೆ ಎಂದು ಹೇಳಿದ್ದರು. ಆದರೆ ಅಸಲಿಗೆ ಗಾಯಗೊಂಡವರು ಕೇವಲ 45 ಜನರು ಮಾತ್ರವಲ್ಲ, ಬರೋಬ್ಬರಿ 65 ಮಂದಿ ಕಾಲ್ತುಳಿತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ ಕಾರ್ಯದಲ್ಲಿ 17 ವರ್ಷ ಕಳೆದ IISC ಪ್ರೊಫೆಸರ್ ಮಾಧವಿ ಲತಾ

    ಗಾಯಾಳುಗಳಿಗೂ ನೋಟಿಸ್ ಜಾರಿ:
    ಇನ್ನು ಬೆಂಗಳೂರಿನ 4 ಆಸ್ಪತ್ರೆಗಳಿಂದ ಜಿಲ್ಲಾಧಿಕಾರಿ ಜಗದೀಶ್ ವಿವರಣೆ ಪಡೆದುಕೊಂಡಿದ್ದಾರೆ. ಬೌರಿಂಗ್, ಪೋರ್ಟಿಸ್, ಮಣಿಪಾಲ್ ಮತ್ತು ವೈದೇಹಿ ಆಸ್ಪತ್ರೆಗಳಲ್ಲಿ ಎಷ್ಟು ಗಾಯಾಳುಗಳು ಅಡ್ಮಿಟ್ ಆಗಿದ್ರು? ಎಷ್ಟು ಮಂದಿ ಡಿಸ್ಚಾರ್ಜ್ ಆದರು ಮತ್ತು ಎಷ್ಟು ಡೆತ್ ಆಗಿದೆ? ಘಟನೆಗೆ ಕಾರಣ ಏನು ಅಂತಾ ಮಾಹಿತಿ ಪಡೆದುಕೊಂಡಿದ್ದಾರೆ. ಕಾಲ್ತುಳಿತ ಹೇಗಾಯ್ತು? ಏನೇನಾಯ್ತು ಅನ್ನೋ ಮಾಹಿತಿ ಸಂಗ್ರಹಕ್ಕೆ 25ಕ್ಕೂ ಹೆಚ್ಚು ಗಾಯಾಳುಗಳಿಗೆ ನೋಟಿಸ್ ಕೊಟ್ಟಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್‌ ದಾಳಿಗೂ ಕಾಲ್ತುಳಿತಕ್ಕೂ ಏನ್‌ ಸಂಬಂಧ? ಮನಮೋಹನ್ ಸಿಂಗ್‌ ಪ್ರಧಾನಿಯಾಗಿದ್ದಾಗ ಎಷ್ಟು ಅಟ್ಯಾಕ್ ಆಗಿದ್ವು – ಹೆಚ್‌ಡಿಕೆ ಪ್ರಶ್ನೆ

    ಬೌರಿಂಗ್ ಆಸ್ಪತ್ರೆಯಲ್ಲಿ ಇಬ್ಬರು ಮಾತ್ರ ಚಿಕಿತ್ಸೆ ಪಡೆಯುತ್ತಿದ್ದು, ಉಳಿದೆಲ್ಲಾ ಗಾಯಾಳುಗಳು ಡಿಸ್ಚಾರ್ಜ್ ಆಗಿದ್ದಾರೆ. ಇಬ್ಬರೂ ಅಭಿಮಾನಿಗಳು ಪದವಿ ವಿದ್ಯಾರ್ಥಿಗಳಾಗಿದ್ದು, ಕೆಆರ್ ಪುರಂ ಹಾಗೂ ಚಿಕ್ಕಮಗಳೂರು ಮೂಲದ ನಿವಾಸಿಗಳಾಗಿದ್ದಾರೆ. ಕಾಲ್ತುಳಿತದಲ್ಲಿ ಇಬ್ಬರು ಅಭಿಮಾನಿಗಳ ಕಾಲು ಮುರಿದಿತ್ತು. ಇದನ್ನೂ ಓದಿ: ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

  • PUBLiC TV Exclusive | ರನ್ಯಾ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ – ಸಿಐಡಿ ವಿಚಾರಣೆ ಆದೇಶ ವಾಪಸ್ ಪಡೆದ ಸರ್ಕಾರ!

    PUBLiC TV Exclusive | ರನ್ಯಾ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ – ಸಿಐಡಿ ವಿಚಾರಣೆ ಆದೇಶ ವಾಪಸ್ ಪಡೆದ ಸರ್ಕಾರ!

    ಬೆಂಗಳೂರು: ನಟಿ ರನ್ಯಾ ರಾವ್‌ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ (Ranya Rao Gold Smuggling Case) ಸ್ಫೋಟಕ ವಿಚಾರಗಳು ಬಯಲಿಗೆ ಬರ್ತಿವೆ. ಈ ನಡುವೆ ರಾಜ್ಯ ಸರ್ಕಾರವೇ ಸಿಐಡಿ ವಿಚಾರಣೆಗೆ (CID Investigation) ನೀಡಿದ್ದ ಆದೇಶವನ್ನು ವಾಪಸ್‌ ಪಡೆದಿದೆ.

    ಶಿಷ್ಟಾಚಾರ ಉಲ್ಲಂಘಟನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ಆದೇಶ ನೀಡಿದ್ದ ಸರ್ಕಾರ ಒಂದೇ ದಿನದಲ್ಲಿ ಯೂಟರ್ನ್‌ ಹೊಡೆದಿದೆ. ಮೊನ್ನೆ ರಾತ್ರಿ ಆದೇಶ ನೀಡಿ, ನಿನ್ನೆ ರಾತ್ರಿಯೇ ಆದೇಶ ವಾಪಸ್ ಪಡೆದಿದೆ. ಸದ್ಯ ಸರ್ಕಾರದ ದಿಢೀರ್‌ ಯೂಟರ್ನ್‌ ನಿರ್ಧಾರ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ರನ್ಯಾ ರಾವ್ ಪ್ರಕರಣದಲ್ಲಿ ಯಾರ ಒತ್ತಡ ಹೆಚ್ಚಾಗಿತ್ತು..? ಎಂಬ ಪ್ರಶ್ನೆಯೂ ಹುಟ್ಟುಹಾಕಿದೆ. ಇದನ್ನೂ ಓದಿ: ಭೂಸ್ವಾಧೀನ ಪರಿಹಾರ ನೀಡದ ಜಿಲ್ಲಾಡಳಿತ – ಹಾವೇರಿ ಜಿಲ್ಲಾಧಿಕಾರಿ ಕಾರು ಜಪ್ತಿ

    ಸಿಐಡಿ ತನಿಖೆ ಆದೇಶ ಬೆನ್ನಲ್ಲೇ ಐಓ ಆಗಿ ರಾಘವೇಂದ್ರ ಹೆಗ್ಡೆ ಅವರ ನೇಮಕ ಆಗಿತ್ತು. ಆದ್ರೆ ಆದೇಶ ಹಿಂಪಡೆಯಲಾಗಿದ್ದು, ಸಿಐಡಿ ಡಿಜಿಪಿ ತನಿಖಾಧಿಕಾರಿಯನ್ನ ನೇಮಕಗೊಳಿಸಿದ ಬಳಿಕ ಏಕೆ ಸರ್ಕಾರದ ವರಸೆ ಬದಲಾಯ್ತು..? ಎಂಬುದು ಮತ್ತಷ್ಟು ಅನುಮಾನಕ್ಕೆ ಕಾರಣವಾಗಿದೆ.

    ಈಗ ಐಎಎಸ್ ಅಧಿಕಾರಿ ಗೌರವ್ ಗುಪ್ತಾ ತನಿಖೆಯಷ್ಟೇ ನಡೆಯಲಿದೆ. ಅದು ಪ್ರೋಟೋಕಾಲ್ ಉಲ್ಲಂಘನೆಗೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ರಾಮಚಂದ್ರರಾವ್ ವಿರುದ್ಧದ ಆರೋಪದ ಬಗ್ಗೆ ತನಿಖೆ ಮಾತ್ರ ನಡೆಯಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಅಮೆರಿಕದ ಮದ್ಯದ ಮೇಲೆ ಭಾರತ 150%, ಕೃಷಿ ಉತ್ಪನ್ನಗಳ ಮೇಲೆ 100% ತೆರಿಗೆ ವಿಧಿಸುತ್ತಿದೆ: ವೈಟ್‌ಹೌಸ್

    ಬಗೆದಷ್ಟೂ ರಹಸ್ಯ ಬಯಲು:
    ರನ್ಯಾ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಸ್ಫೋಟಕ ವಿಚಾರಗಳು ಬಯಲಿಗೆ ಬರ್ತಿವೆ. ಕಳೆದ ವರ್ಷದ ಕೊನೆಯಲ್ಲಿ 2 ಬಾರಿ ದುಬೈನಲ್ಲಿ ಚಿನ್ನ ಖರೀದಿ ಮಾಡಿದ್ದ ರನ್ಯಾರಾವ್, ಅದನ್ನು ಸ್ವಿಟ್ಜರ್‌ಲೆಂಡ್‌ಗೆ ಕೊಂಡೊಯ್ಯೋದಾಗಿ ಹೇಳಿ ಅಲ್ಲಿನ ಕಸ್ಟಮ್ಸ್ ಅಧಿಕಾರಿಗಳನ್ನು ಯಾಮಾರಿಸಿದ್ರು. ಜಿನೇವಾಗೆ ಹೋಗೋದಾಗಿ ಸುಳ್ಳು ಹೇಳಿದ್ದ ರನ್ಯಾರಾವ್ ನೇರವಾಗಿ ಭಾರತಕ್ಕೆ ಬಂದಿದ್ರು ಎಂಬುದು ಆಕೆಯ ಟ್ರಾವೆಲ್ ಹಿಸ್ಟರಿ ಪರಿಶೀಲಿಸಿದಾಗ ಗೊತ್ತಾಗಿದೆ ಎಂದು ಡಿಆರ್‌ಐ, ಅರೆಸ್ಟ್ ಮೆಮೋದಲ್ಲಿ ತಿಳಿಸಿದೆ. ಇದನ್ನೂ ಓದಿ: ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಂದ ಶಾಸಕರ ಹಕ್ಕು ಮೊಟಕುಗೊಳಿಸುವ ಕಾರ್ಯ: ರಾಜ್ಯಪಾಲರಿಗೆ ಬಿಜೆಪಿ ದೂರು

    ರನ್ಯಾ ರಾವ್ ನಿರಂತರವಾಗಿ ಚಿನ್ನ ಕಳ್ಳಸಾಗಣೆ ಮಾಡಿದ್ದಾರೆ. ಗೋಲ್ಡ್ ಸ್ಮಗ್ಲಿಂಗ್ ಕಿಂಗ್‌ಪಿನ್ ಆಗಿರುವ ಈಕೆ ಆರು ತಿಂಗಳು ದೇಶದಿಂದ ಹೊರಗೆ ಇರ್ತಿದ್ರು.. ಎಂದಿದೆ. ರನ್ಯಾ ಜಾಮೀನು ಅರ್ಜಿ ವಿಚಾರಣೆ ವೇಳೆ ಈ ಎಲ್ಲಾ ಅಂಶಗಳು ಪ್ರಸ್ತಾಪವಾದ್ವು. ಸರ್ಚ್ ಪ್ರಕ್ರಿಯೆ ಕಾನೂನು ಪ್ರಕಾರ ನಡೆದಿಲ್ಲ. ನಿದ್ದೆ ಮಾಡೋಕೂ ಬಿಡದೇ ವಿಚಾರಣೆ ನಡೆಸಿದ್ದಾರೆ. ನಿದ್ದೆಯ ಹಕ್ಕನ್ನು ಕಿತ್ಕೊಂಡಿದ್ದಾರೆ ಎಂದು ರನ್ಯಾ ಪರ ವಕೀಲರು ವಾದ ಮಂಡಿಸಿದ್ರು. ರನ್ಯಾ ಮದ್ವೆಯಾದ ಮಹಿಳೆ. ಅವರೆಲ್ಲೂ ಹೋಗಲ್ಲ.. ಜಾಮೀನು ನೀಡಿ ಎಂದು ಮನವಿ ಮಾಡಿದ್ರು. ಆದ್ರೆ, ಇದನ್ನು ಡಿಆರ್‌ಐ ಪರ ವಕೀಲರು ಆಕ್ಷೇಪಿಸಿದ್ರು. ರನ್ಯಾಗೆ ಕರೆ ಮಾಡಿದ್ದ ವ್ಯಕ್ತಿಗೆ ಸಮನ್ಸ್ ನೀಡಿ ಹೇಳಿಕೆ ಪಡೆಯಲಾಗಿದೆ. ಯಾವುದೇ ಲೋಪ ಎಸಗಿಲ್ಲ. ಆಕೆ ಬಳಿ ಯುಎಇ ರೆಸಿಡೆನ್ಸಿ ಕಾರ್ಡ್ ಸಿಕ್ಕಿದೆ. ಹೀಗಾಗಿ ಜಾಮೀನು ಕೊಡಬಾರದು ಎಂದು ಪ್ರತಿವಾದ ಮಾಡಿದ್ರು. ಕಡೆಗೆ ಕೋರ್ಟ್ ಮಾರ್ಚ್ 14ಕ್ಕೆ ಆದೇಶ ಕಾಯ್ದಿರಿಸಿತು.

  • ಡಿಜಿಪಿ ಅಪ್ಪನಿಗೆ ಮಗಳು ತಂದ ಸಂಕಷ್ಟ – ಸರ್ಕಾರದಿಂದ ಎರಡೆರಡು ತನಿಖೆಗೆ ಆದೇಶ

    ಡಿಜಿಪಿ ಅಪ್ಪನಿಗೆ ಮಗಳು ತಂದ ಸಂಕಷ್ಟ – ಸರ್ಕಾರದಿಂದ ಎರಡೆರಡು ತನಿಖೆಗೆ ಆದೇಶ

    ಏರ್‌ಪೋರ್ಟ್‌ನಲ್ಲಿ ಪ್ರೋಟೊಕಾಲ್‌ ಉಲ್ಲಂಘನೆ; CID ತನಿಖೆಗೆ ಸರ್ಕಾರ ಆದೇಶ
    – ಇಬ್ಬರು ಪೊಲೀಸ್‌ ಕಾನ್‌ಸ್ಟೇಬಲ್‌ಗಳಿಗೆ ಸಂಕಷ್ಟ 

    ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ರನ್ಯಾಳಿಂದ (Ranya Rao) ಚಿನ್ನ ಕಳ್ಳಸಾಗಣೆ ಪ್ರಕರಣ ಸಂಬಂಧ ಡಿಜಿಪಿ ರಾಮಚಂದ್ರ ರಾವ್‌ಗೆ (Ramachandra Rao) ಮಗಳಿಂದ ಸಂಕಷ್ಟ ಶುರುವಾಗಿದೆ. ಮಗಳಿಂದ ಇದೀಗ ತಂದೆಗೂ ಸಹ ವಿಚಾರಣೆ ಭಾಗ್ಯ ಬಂದೊದಗಿದೆ.

    ಐಎಎಸ್ ಅಧಿಕಾರಿ ಗೌರವ್ ಗುಪ್ತ ನೇತೃತ್ವದಲ್ಲಿ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಮಚಂದ್ರರಾವ್‌ಗೆ ಕೊಟ್ಟಿದ್ದ ಪ್ರೋಟೋಕಾಲ್‌ಗಳನ್ನು ದುರುಪಯೋಗ ಪಡಿಸಿಕೊಂಡು ವಿಮಾನ ನಿಲ್ದಾಣಗಳಲ್ಲಿ ಅಧಿಕಾರಿಗಳ ಕಣ್ತಪ್ಪಿಸಿಕೊಂಡು ಅಕ್ರಮ ಅಪರಾಧ ಎಸಗಿರುವ ಆರೋಪ ಇದೆ. ಇದನ್ನೂ ಓದಿ: ಝೀರೋ ಬ್ಯಾಲೆನ್ಸ್ ಇದ್ದ ರನ್ಯಾ ಅಕೌಂಟ್‌ಗೆ 2 ದಿನದಲ್ಲಿ 10 ಲಕ್ಷ ಹಣ!

    ಸದ್ಯ ರಾಜ್ಯ ಪೊಲೀಸ್ ಗೃಹ ನಿರ್ಮಾಣ ನಿಗಮದ‌ ವ್ಯವಸ್ಥಾಪಕ ನಿರ್ದೇಶಕರಾಗಿರುವ ರಾಮಚಂದ್ರರಾವ್ ಅವರನ್ನು ತನಿಖೆ ನಡೆಸುವುದು ಅಗತ್ಯವೆಂದು ಸರ್ಕಾರ ಪರಿಗಣಿಸಿದೆ. ತನಿಖೆಗೆ ಅಗತ್ಯವಿರುವ ದಾಖಲೆಗಳನ್ನು ಮತ್ತು ನೆರವನ್ನು ನೀಡಲು ಡಿಜಿಐಜಿಪಿ ಅಲೋಕ್ ಮೋಹನ್‌ಗೆ ಸೂಚನೆ ನೀಡಲಾಗಿದ್ದು, ತನಿಖೆ ನಡೆಸಿ ಒಂದು ವಾರದಲ್ಲಿ ವರದಿಯನ್ನು‌ ಸರ್ಕಾರಕ್ಕೆ ಸಲ್ಲಿಸಲು ಖಡಕ್ ಸೂಚನೆ ನೀಡಲಾಗಿದೆ.

    ಇದಲ್ಲದೇ‌, ಪೊಲೀಸ್ ಸಿಬ್ಬಂದಿ ಪ್ರೋಟೋಕಾಲ್ ಉಲ್ಲಂಘನೆಯಲ್ಲಿ ಭಾಗಿಯಾಗಿರುವ ಬಗ್ಗೆ ಸಿಐಡಿ ತನಿಖೆ ನಡೆಸುವಂತೆ ಸಹ ಸರ್ಕಾರ ಆದೇಶ ನೀಡಿದೆ. ಇಬ್ಬರು ಪೊಲೀಸ್ ಕಾನ್‌ಸ್ಟೇಬಲ್‌ಗಳಿಗೆ ಇದರಿಂದ ಸಂಕಷ್ಟ ಎದುರಾಗಿದೆ. ಓರ್ವ ಪ್ರೋಟೋಕಾಲ್‌ನ ಹೆಡ್ ಕಾನ್‌ಸ್ಟೇಬಲ್, ಇನ್ನೊಬ್ಬ ಗುಪ್ತಚರ ಇಲಾಖೆ ಕಾನ್‌ಸ್ಟೇಬಲ್ ಆಗಿದ್ದರು. ರನ್ಯಾ ರಾವ್ ಏರ್‌ಪೋರ್ಟ್‌ಗೆ ಬಂದಾಗ ಪಾಳಿಯಲ್ಲಿ ಈ ಇಬ್ಬರೂ ಇದ್ದರು. ಪ್ರೋಟೋಕಾಲ್‌ ಕಾನ್‌ಸ್ಟೇಬಲ್ ಕರೆದ ಅಂತ ಗುಪ್ತಚರ ಇಲಾಖೆಯ ಅಧಿಕಾರಿಯೂ ರನ್ಯಾ ರಾವ್ ಭೇಟಿಗೆ ಹೋಗಿದ್ದರು. ಹೀಗಾಗಿ, ಇಬ್ಬರಿಗೂ ಕೂಡ ವಿಚಾರಣೆಯ ಬಿಸಿ ತಟ್ಟಿದೆ. ಇದನ್ನೂ ಓದಿ: ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಸ್ಟಾರ್ ಹೋಟೆಲ್ ಮಾಲೀಕನ ಮೊಮ್ಮಗ ಅರೆಸ್ಟ್