Tag: ಸಿಕ್ಕಿಂ

  • ಸಿಕ್ಕಿಂ ಹಠಾತ್ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 56ಕ್ಕೆ ಏರಿಕೆ – 140 ಮಂದಿ ಕಣ್ಮರೆ

    ಸಿಕ್ಕಿಂ ಹಠಾತ್ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 56ಕ್ಕೆ ಏರಿಕೆ – 140 ಮಂದಿ ಕಣ್ಮರೆ

    ನವದೆಹಲಿ: ಸಿಕ್ಕಿಂ (Sikkim) ಹಠಾತ್ ಪ್ರವಾಹದಿಂದ (Flood) ಸಾವಿಗೀಡಾದವರ ಸಂಖ್ಯೆ 56ಕ್ಕೆ ಏರಿಕೆಯಾಗಿದೆ. ಮೃತರಲ್ಲಿ ಏಳು ಸೈನಿಕರು ಹಾಗೂ ಸ್ಥಳೀಯರು ಸೇರಿದ್ದಾರೆ. ಅಲ್ಲದೇ 140 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕಳೆದ ಮೂರು ದಿನಗಳಲ್ಲಿ ನೆರೆಯ ರಾಜ್ಯ ಪಶ್ಚಿಮ ಬಂಗಾಳದ ತೀಸ್ತಾ ನದಿ ಪಾತ್ರದಲ್ಲಿ 27 ಮೃತದೇಹಗಳು ಪತ್ತೆಯಾಗಿವೆ. ಈ ಪೈಕಿ ಏಳು ಮೃತದೇಹಗಳನ್ನು ಗುರುತಿಸಲಾಗಿದೆ. ಪ್ರವಾಹದ ಬಳಿಕ ಸಾವಿರಾರು ಜನರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಲಾಗಿದೆ. ಒಟ್ಟಾರೆ 1,173 ಮನೆಗಳಿಗೆ ತೀವ್ರ ಹಾನಿಯಾಗಿದೆ ಮತ್ತು 2,413 ಜನರನ್ನು ಇಲ್ಲಿಯವರೆಗೂ ರಕ್ಷಿಸಲಾಗಿದೆ. 25,000 ಜನರಿಗೆ ಪ್ರವಾಹದಿಂದ ತೊಂದರೆಯಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ. ಇದನ್ನೂ ಓದಿ: ಕಡಿಮೆ ಅಂಕ ಕೊಟ್ಟಿದ್ದಕ್ಕೆ ಸಿಟ್ಟು- ಶಿಕ್ಷಕಿಯ ವಾಟರ್ ಬಾಟ್ಲಿಗೆ ಮಾತ್ರೆ ಹಾಕಿದ ವಿದ್ಯಾರ್ಥಿನಿಯರು!

    ಪ್ರವಾಹದಿಂದ ಹಾನಿಗೊಳಗಾದ ರಸ್ತೆಗಳ ನಿರ್ಮಾಣವನ್ನು ಆದಷ್ಟು ಬೇಗ ಮಾಡಲಾಗುತ್ತದೆ. ಮೃತರ ಕುಟುಂಬಗಳಿಗೆ 4 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಅಧಿಕಾರಿಗಳು ಹಗಲೂ ರಾತ್ರಿ ಜನರ ರಕ್ಷಣೆಗಾಗಿ ಶ್ರಮಿಸುತ್ತಿದ್ದಾರೆ. ಕೇಂದ್ರ ಸರ್ಕಾರಕ್ಕೆ 44 ಕೋಟಿ ರೂ. ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ ಎಂದು ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ತಿಳಿಸಿದ್ದಾರೆ.

    ಭಾರತ ಹವಾಮಾನ ಇಲಾಖೆ ಮುಂದಿನ ಐದು ದಿನಗಳಲ್ಲಿ ಮತ್ತೆ ಮಳೆಯಾಗುವ (Rain) ಸೂಚನೆ ನೀಡಿದೆ. ಅಲ್ಲದೇ ಈಗ ಇರುವ ಹವಾಮಾನ ಪರಿಸ್ಥಿತಿಯಲ್ಲಿ ಹೆಲಿಕಾಪ್ಟರ್ ಬಳಕೆ ಹಾಗೂ ವಿಮಾನಯಾನಕ್ಕೂ ತೊಡಕಾಗುತ್ತಿದೆ. ಸೇತುವೆಗಳ ಹಾನಿಯಿಂದ ರಕ್ಷಣಾ ಕಾರ್ಯದಲ್ಲೂ ವಿಳಂಬವಾಗುತ್ತಿದೆ. ಮತ್ತೆ ಇಂದು ರಕ್ಷಣಾ ಕಾರ್ಯಾಚರಣೆ ಆರಂಭಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಮೇಘಸ್ಫೋಟದಿಂದ (Cloudburst) ಉಂಟಾದ ಭಾರೀ ಮಳೆಯಿಂದ ಮೊದಲು ಗ್ಲೇಶಿಯಲ್ ಸರೋವರ ಉಕ್ಕಿ ಹಠಾತ್ ಪ್ರವಾಹವನ್ನು ಉಂಟುಮಾಡಿತು. ಬಳಿಕ ಚುಂಗ್ಥಾಂಗ್ ಅಣೆಕಟ್ಟಿನಿಂದ ನೀರನ್ನು ಬಿಡುಗಡೆಗೆ ಮಾಡಲಾಯಿತು. ಇದು ತೀಸ್ತಾ ನದಿಯ ನೀರಿನ ಮಟ್ಟವನ್ನು ತೀವ್ರವಾಗಿ ಹೆಚ್ಚಿಸಿತು. ಇದರಿಂದ ಪ್ರವಾಹ ತೀವ್ರ ಸ್ವರೂಪ ಪಡೆಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನಮ್ಮ ಮೆಟ್ರೋದಲ್ಲಿ ಪ್ರಾಂಕ್ ಮಾಡಿದವನಿಗೆ ಬಿತ್ತು 500 ರೂ. ದಂಡ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಕ್ಕಿಂ ಪ್ರವಾಹ – 102 ಜನ ನಾಪತ್ತೆ, ಸಾವಿನ ಸಂಖ್ಯೆ 14ಕ್ಕೆ ಏರಿಕೆ

    ಸಿಕ್ಕಿಂ ಪ್ರವಾಹ – 102 ಜನ ನಾಪತ್ತೆ, ಸಾವಿನ ಸಂಖ್ಯೆ 14ಕ್ಕೆ ಏರಿಕೆ

    ಗ್ಯಾಂಗ್ಟಾಕ್: ಸಿಕ್ಕಿಂನಲ್ಲಿ (Sikkim)‌ ಬುಧವಾರ ಮುಂಜಾನೆ ಸಂಭವಿಸಿದ ಹಠಾತ್ ಪ್ರವಾಹದಲ್ಲಿ (Flood) ಇದುವರೆಗೆ 14 ಜನರು ಸಾವನ್ನಪ್ಪಿದ್ದಾರೆ. 102 ಮಂದಿ ನಾಪತ್ತೆಯಾಗಿದ್ದಾರೆ ಎಂದು ಸಿಕ್ಕಿಂ ಸರ್ಕಾರ ತಿಳಿಸಿದೆ. ಮಾತ್ರವಲ್ಲದೇ ರಾಜ್ಯದ ವಿವಿಧ ಭಾಗಗಳಲ್ಲಿ 3,000 ಪ್ರವಾಸಿಗರು ಸಿಲುಕಿರುವ ಆತಂಕ ವ್ಯಕ್ತವಾಗಿದೆ.

    ವಾಯುವ್ಯ ಸಿಕ್ಕಿಂನಲ್ಲಿರುವ ಸೌತ್ ಲೊನಾಕ್ ಸರೋವರದಲ್ಲಿ ಬುಧವಾರ ಬೆಳಗ್ಗೆ ಸುರಿದ ನಿರಂತರ ಮಳೆಗೆ ಮೇಘಸ್ಫೋಟ (Cloudburst) ಉಂಟಾಗಿದೆ. ಇದರಿಂದ ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಯಿತು. ಇದರಿಂದಾಗಿ ಸಿಂಗ್ಟಾಮ್ ಪಟ್ಟಣದ ತೀಸ್ತಾ ನದಿಯ ಇಂದ್ರೇಣಿ ಸೇತುವೆ ಮೂಲಕ ಪ್ರವಾಹ ಸಾಗಿದೆ. ಬೆಳಗಿನ ಜಾವ 4 ಗಂಟೆ ಸುಮಾರಿಗೆ ಬಲೂಟಾರ್ ಕುಗ್ರಾಮದ ಮತ್ತೊಂದು ಸಂಪರ್ಕ ಸೇತುವೆ ಕೂಡ ಕೊಚ್ಚಿ ಹೋಗಿದೆ.

    ಸಿಕ್ಕಿಂ ಮುಖ್ಯ ಕಾರ್ಯದರ್ಶಿ ವಿಬಿ ಪಾಠಕ್ ಅವರು ಹಂಚಿಕೊಂಡ ಮಾಹಿತಿಯ ಪ್ರಕಾರ, ಲೊನಾಕ್ ಸರೋವರದಲ್ಲಿ ಮಂಗಳವಾರ ರಾತ್ರಿ 10:42 ರ ಸುಮಾರಿಗೆ ಮೇಘಸ್ಫೋಟ ಉಂಟಾಗಿದೆ. ನಂತರ ಸರೋವರ ಅದರ ದಂಡೆಯನ್ನು ಭೇದಿಸಿ ತೀಸ್ತಾ ನದಿಯ ಕಡೆಗೆ ಪ್ರವಾಹ ರೂಪದಲ್ಲಿ ಸಾಗಿದೆ. ಶೀಘ್ರವೇ ತೀಸ್ತಾ ಜಲಾನಯನ ಪ್ರದೇಶದಲ್ಲಿ ನೀರಿನ ಮಟ್ಟ ಏರಿಕೆ ವರದಿಯಾಗಿದೆ. ವಿಶೇಷವಾಗಿ ಚುಂಗ್‌ಥಾಂಗ್‌ನಲ್ಲಿ ತೀಸ್ತಾ ಸ್ಟೇಜ್ 3 ಅಣೆಕಟ್ಟು ಒಡೆದು ಆತಂಕ ಸೃಷ್ಟಿಯಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 2 ಲಕ್ಷ ಬಹುಮಾನಕ್ಕಾಗಿ 10 ನಿಮಿಷದಲ್ಲಿ ಒಂದು ಲೀಟರ್ ಮದ್ಯ ಕುಡಿದು ವ್ಯಕ್ತಿ ಸಾವು

    ಚುಂಗ್‌ಥಾಂಗ್‌ನ ತೀಸ್ತಾ ಸ್ಟೇಜ್ 3 ಅಣೆಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದ 12-14 ಕಾರ್ಮಿಕರು ಇನ್ನೂ ಅಲ್ಲಿನ ಸುರಂಗಗಳಲ್ಲಿ ಸಿಲುಕಿಕೊಂಡಿದ್ದಾರೆ. ಮಂಗನ್ ಜಿಲ್ಲೆಯ ಚುಂಗ್ತಾಂಗ್ ಮತ್ತು ಗ್ಯಾಂಗ್ಟಾಕ್ ಜಿಲ್ಲೆಯ ಡಿಕ್ಚು, ಸಿಂಗ್ಟಾಮ್ ಮತ್ತು ಪಾಕ್ಯೊಂಗ್ ಜಿಲ್ಲೆಯ ರಂಗ್ಪೋದಿಂದ ಹಲವರು ನಾಪತ್ತೆಯಾಗಿದ್ದಾರೆ ಹಾಗೂ ಹೆಚ್ಚಿನವರಿಗೆ ಗಾಯಗಳಾಗಿವೆ.

    ಒಟ್ಟಾರೆಯಾಗಿ ರಾಜ್ಯದಾದ್ಯಂತ 26 ಜನರು ಗಾಯಗೊಂಡಿದ್ದಾರೆ. ಅವರೆಲ್ಲರನ್ನು ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಬರ್ದಂಗ್‌ನಲ್ಲಿ 23 ಸೇನಾ ಸಿಬ್ಬಂದಿ ಇನ್ನೂ ನಾಪತ್ತೆಯಾಗಿದ್ದಾರೆ. ಅವರು ಬೆಂಗಾವಲು ವಾಹನ ಪ್ರವಾಹದ ಕೆಸರಿನಲ್ಲಿ ಮುಳುಗಿದೆ. ರಾಜ್ಯ ಸರ್ಕಾರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ 3 ಹೆಚ್ಚುವರಿ ತುಕಡಿಗಳನ್ನು ಕೇಳಿದೆ. ಇದನ್ನು ಕೇಂದ್ರ ಸರ್ಕಾರ ಅನುಮೋದಿಸಿದೆ. ಎನ್‌ಡಿಆರ್‌ಎಫ್‌ನ ಒಂದು ತುಕಡಿ ಈಗಾಗಲೇ ರಂಗ್ಪೋ ಮತ್ತು ಸಿಂಗ್ಟಮ್ ಪಟ್ಟಣಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದನ್ನೂ ಓದಿ: ‌ICC World Cup 2023: ಇಂದಿನಿಂದ ವಿಶ್ವಕಪ್‌ ಮಹಾಸಮರ – ಇಂದು ಇಂಗ್ಲೆಂಡ್‌ ವಿರುದ್ಧ ನ್ಯೂಜಿಲೆಂಡ್ ಸೆಣಸಾಟ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಕ್ಕಿಂನಲ್ಲಿ ಮೇಘಸ್ಫೋಟ – 10 ಸಾವು, 82 ಜನ ನಾಪತ್ತೆ

    ಸಿಕ್ಕಿಂನಲ್ಲಿ ಮೇಘಸ್ಫೋಟ – 10 ಸಾವು, 82 ಜನ ನಾಪತ್ತೆ

    ಗ್ಯಾಂಗ್ಟಾಕ್: ಉತ್ತರ ಸಿಕ್ಕಿಂನನಲ್ಲಿ (Sikkim) ಮೇಘಸ್ಫೋಟದಿಂದಾಗಿ (Cloudburst) ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹ (Flood) ಉಂಟಾದ ಕಾರಣ 10 ನಾಗರಿಕರು ಸಾವನ್ನಪ್ಪಿದ್ದಾರೆ. 22 ಸೇನಾ ಸಿಬ್ಬಂದಿ ಸೇರಿದಂತೆ 82 ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಪ್ರವಾಹದಿಂದ 14 ಸೇತುವೆಗಳು ಕುಸಿದು ಹೋಗಿವೆ. 3,000 ಕ್ಕೂ ಹೆಚ್ಚು ಪ್ರವಾಸಿಗರು ರಾಜ್ಯದ ವಿವಿಧ ಭಾಗಗಳಲ್ಲಿ ಸಿಲುಕಿರುವ ಶಂಕೆ ಇದೆ. ಮೇಘಸ್ಫೋಟದಿಂದ ಅಲ್ಲಿನ ಚುಂಗ್‍ಥಾಂಗ್‍ನಲ್ಲಿನ ಅತಿ ದೊಡ್ಡ ಜಲವಿದ್ಯುತ್ ಘಟಕದ ಅಣೆಕಟ್ಟಿನ ಭಾಗಗಳನ್ನು ನೀರು ಆವರಿಸಿತು. ಇದು ಕೆಳ ಭಾಗದ ಪ್ರದೇಶಗಳ ಮೇಲೆ ನೀರು ಹರಿಯುವಂತೆ ಮಾಡಿತು. ಇದು ಅನಾಹುತಕ್ಕೆ ಕಾರಣ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಸಿಕ್ಕಿಂನಲ್ಲಿ ಮೇಘಸ್ಫೋಟ – ಹಠಾತ್ ಪ್ರವಾಹದಲ್ಲಿ 23 ಸೈನಿಕರು ನಾಪತ್ತೆ

    ಅವಘಡ ಸಂಭವಿಸುತ್ತಿದ್ದಂತೆ ಸಿಕ್ಕಿಂ ಸರ್ಕಾರ ವಿಪತ್ತು ನಿರ್ವಹಣಾ ಕಾಯ್ದೆಯಡಿ ವಿಪತ್ತು ಎಂದು ಘೋಷಿಸಿದೆ.

    ಸಿಂಗ್ಟಾಮ್ ಪಟ್ಟಣದಿಂದ ನಾಪತ್ತೆಯಾಗಿದ್ದ 23 ಸೈನಿಕರಲ್ಲಿ ಒಬ್ಬರನ್ನು ರಕ್ಷಿಸಲಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ವಾಯುಪಡೆ ಸೇರಿದ ತೇಜಸ್ ಟ್ವಿನ್ ಸೀಟರ್ ವಿಮಾನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಕ್ಕಿಂನಲ್ಲಿ ಮೇಘಸ್ಫೋಟ – ಹಠಾತ್ ಪ್ರವಾಹದಲ್ಲಿ 23 ಸೈನಿಕರು ನಾಪತ್ತೆ

    ಸಿಕ್ಕಿಂನಲ್ಲಿ ಮೇಘಸ್ಫೋಟ – ಹಠಾತ್ ಪ್ರವಾಹದಲ್ಲಿ 23 ಸೈನಿಕರು ನಾಪತ್ತೆ

    ಗ್ಯಾಂಗ್ಟಾಕ್: ಸಿಕ್ಕಿಂನ (Sikkim) ಲೊನಾಕ್ ಸರೋವರದಲ್ಲಿ ಮೇಘಸ್ಫೋಟ (Cloudburst) ಉಂಟಾಗಿದ್ದು, ತೀಸ್ತಾ ನದಿಯಲ್ಲಿ (Teesta River) ಹಠಾತ್ ಪ್ರವಾಹ (Flood) ಉಂಟಾಗಿ 23 ಸೈನಿಕರು (Soldiers) ನಾಪತ್ತೆಯಾಗಿದ್ದಾರೆ.

    ಚುಂಗ್ಥಾಂಗ್ ಅಣೆಕಟ್ಟಿನಿಂದ ನೀರನ್ನು ಬಿಡುಗಡೆ ಮಾಡಿದ್ದರಿಂದ ನೀರಿನ ಮಟ್ಟ ಹಠಾತ್ತನೆ 15-20 ಅಡಿಗಳಷ್ಟು ಎತ್ತರಕ್ಕೆ ಏರಿದೆ. ಇದರಿಂದ ಸಿಂಗ್ಟಾಮ್ ಬಳಿಯ ಬರ್ದಂಗ್‌ನಲ್ಲಿ ನಿಲ್ಲಿಸಲಾಗಿದ್ದ ಸೇನಾ ವಾಹನಗಳು ಕೊಚ್ಚಿಕೊಂಡು ಹೋಗಿವೆ. ಈ ಹಿನ್ನೆಲೆ 23 ಸೇನಾ ಸಿಬ್ಬಂದಿ ಕಾಣೆಯಾಗಿದ್ದಾರೆ. ಇನ್ನೂ ಕೆಲವು ವಾಹನಗಳು ಮುಳುಗಿವೆ ಎಂದು ವರದಿಯಾಗಿದೆ.

    ಹಠಾತ್ ಪ್ರವಾಹದಿಂದ ಲಾಚೆನ್ ಕಣಿವೆಯ ಉದ್ದಕ್ಕೂ ಹಲವಾರು ಸೇನಾ ಸಂಸ್ಥೆಗಳಿಗೆ ಹಾನಿಯಾಗಿದೆ. ಇದೀಗ ನಾಪತ್ತೆಯಾಗಿರುವ ಸಿಬ್ಬಂದಿಯ ಪತ್ತೆಗೆ ಶೋಧಕಾರ್ಯ ನಡೆಸಲಾಗುತ್ತಿದೆ. ಇದನ್ನೂ ಓದಿ: 34 ದಿನಗಳ ಬಳಿಕ 100 ಅಡಿಯ ಗಡಿ ದಾಟಿದ ಕೆಆರ್‌ಎಸ್ ನೀರಿನ ಮಟ್ಟ

    ನದಿ ಉಕ್ಕಿ ಹರಿಯುತ್ತಿರುವುದರಿಂದ ತೀಸ್ತಾ ನದಿಯ ಮೇಲಿನ ಸಿಂಗ್‌ತಮ್ ಕಾಲು ಸೇತುವೆ ಕುಸಿದಿದೆ. ಪಶ್ಚಿಮ ಬಂಗಾಳದಿಂದ ಸಿಕ್ಕಿಂಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 10ರ ಹಲವು ಭಾಗಗಳು ಕೊಚ್ಚಿ ಹೋಗಿವೆ. ಭಾರೀ ಪ್ರವಾಹದ ಹಿನ್ನೆಲೆ ಅನೇಕ ರಸ್ತೆಗಳಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ.

    ಸಿಕ್ಕಿಂ ಸರ್ಕಾರ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಿದ್ದು, ತೀಸ್ತಾ ನದಿಯಿಂದ ಜನರನ್ನು ದೂರ ತೆರಳುವಂತೆ ಕೇಳಿಕೊಂಡಿದೆ. ಪಶ್ಚಿಮ ಬಂಗಾಳದ ಆಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ಜಲಾನಯನ ಪ್ರದೇಶದಿಂದ ಜನರನ್ನು ಸ್ಥಳಾಂತರಿಸಲು ಪ್ರಾರಂಭಿಸಿದೆ. ಇದನ್ನೂ ಓದಿ: ಹುಬ್ಬಳ್ಳಿ, ಉತ್ತರ ಕನ್ನಡ, ಬೆಳಗಾವಿ ಅರಣ್ಯದಲ್ಲಿ ತರಬೇತಿ: ಉಗ್ರರಿಂದ ಸ್ಫೋಟಕ ಮಾಹಿತಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ 12 ತಿಂಗಳು ಹೆರಿಗೆ ರಜೆ – ಸಿಕ್ಕಿಂ ಸಿಎಂ ಘೋಷಣೆ

    ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ 12 ತಿಂಗಳು ಹೆರಿಗೆ ರಜೆ – ಸಿಕ್ಕಿಂ ಸಿಎಂ ಘೋಷಣೆ

    ಗ್ಯಾಂಗ್ಟಾಕ್: ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ತಮ್ಮ ರಾಜ್ಯದಲ್ಲಿ ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ 12 ತಿಂಗಳ ಹೆರಿಗೆ ರಜೆ ಹಾಗೂ ಮಗುವಿನ ತಂದೆಗೆ 1 ತಿಂಗಳ ರಜೆ ನೀಡುವ ಹೊಸ ಯೋಜನೆಯನ್ನು ಶೀಘ್ರವೇ ಜಾರಿಗೊಳಿಸುವುದಾಗಿ ಬುಧವಾರ ತಿಳಿಸಿದ್ದಾರೆ.

    ಸಿಕ್ಕಿಂ ರಾಜ್ಯ ನಾಗರಿಕ ಸೇವಾ ಅಧಿಕಾರಿಗಳ ಸಂಘದ (SSCSOA) ವಾರ್ಷಿಕ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಸರ್ಕಾರಿ ಉದ್ಯೋಗಿಗಳಿಗೆ ಈ ಹೊಸ ಪ್ರಯೋಜನವನ್ನು ಶೀಘ್ರವೇ ಜಾರಿಗೊಳಿಸುವುದಾಗಿ ತಿಳಿಸಿದ್ದಾರೆ. ಇದು ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಮತ್ತು ಕುಟುಂಬವನ್ನು ಉತ್ತಮವಾಗಿ ನೋಡಿಕೊಳ್ಳಲು ಸಹಾಯ ಮಾಡಲಿದೆ. ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಅವರು ಹೇಳಿದ್ದಾರೆ.

    ಹೆರಿಗೆ ಪ್ರಯೋಜನ ಕಾಯಿದೆ 1961ರ ಪ್ರಕಾರ ಕೆಲಸ ಮಾಡುವ ಮಹಿಳೆ 6 ತಿಂಗಳು ಅಥವಾ 26 ವಾರಗಳ ವೇತನ ಸಹಿತ ಹೆರಿಗೆ ರಜೆಗೆ ಅರ್ಹಳಾಗಿರುತ್ತಾಳೆ. ಹಿಮಾಲಯದ ತಪ್ಪಲಿನಲ್ಲಿರುವ ಸಿಕ್ಕಿಂ, ಭಾರತದಲ್ಲಿ ಅತ್ಯಂತ ಕಡಿಮೆ ಜನಸಂಖ್ಯೆಯನ್ನು ಹೊಂದಿರುವ ರಾಜ್ಯವಾಗಿದೆ. ಇಲ್ಲಿ ಸುಮಾರು 6.32 ಲಕ್ಷ ಜನರು ನೆಲೆಸಿದ್ದಾರೆ. ಇದನ್ನೂ ಓದಿ: ರೈಲ್ವೇ ಹಳಿ ಮೇಲೆ ಕುಸಿದ ಮಣ್ಣು – ಗೋವಾ, ಕರ್ನಾಟಕ ರೈಲು ಸಂಚಾರದಲ್ಲಿ ಇನ್ನೆರಡು ದಿನ ವ್ಯತ್ಯಯ

    ಸಿಕ್ಕಿಂ ಮತ್ತು ರಾಜ್ಯದ ಜನರ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡುತ್ತಿರುವ ಅಧಿಕಾರಿಗಳು ರಾಜ್ಯದ ಆಡಳಿತದ ಬೆನ್ನೆಲುಬು. ನಾಗರಿಕ ಸೇವಾ ಅಧಿಕಾರಿಗಳಿಗೆ ಬಡ್ತಿ ಪ್ರಕ್ರಿಯೆ ಚುರುಕುಗೊಳಿಸುವತ್ತ ಗಮನ ಹರಿಸಲಾಗಿದ್ದು, ಬಡ್ತಿ ಸಂಖ್ಯೆ ಹೆಚ್ಚಳವಾಗುತ್ತಿದೆ ಎಂದು ತಮಾಂಗ್ ಹೇಳಿದರು. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಸರ್ವೆ ಕೇಸ್‌ – ಅಲಹಾಬಾದ್ ಹೈಕೋಟ್‌ನಲ್ಲಿ ಇಂದು ವಿಚಾರಣೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾರೀ ಮಳೆಯಿಂದ ಭೂಕುಸಿತ – ಸಿಕ್ಕಿಂನಲ್ಲಿ ಸಿಲುಕಿದ್ದ 300 ಪ್ರವಾಸಿಗರನ್ನು ರಕ್ಷಿಸಿದ ಸೇನೆ

    ಭಾರೀ ಮಳೆಯಿಂದ ಭೂಕುಸಿತ – ಸಿಕ್ಕಿಂನಲ್ಲಿ ಸಿಲುಕಿದ್ದ 300 ಪ್ರವಾಸಿಗರನ್ನು ರಕ್ಷಿಸಿದ ಸೇನೆ

    ಗಂಗ್ತೊಕ್: ಉತ್ತರ ಸಿಕ್ಕಿಂನಲ್ಲಿ (Sikkim) ಭಾರೀ ಮಳೆಯಿಂದಾಗಿ‌ (Rain) ಉಂಟಾದ ಭೂಕುಸಿತದಿಂದ (Landslides) ತೊಂದರೆಗೆ ಸಿಲುಕಿದ್ದ 300ಕ್ಕೂ ಹೆಚ್ಚು ಪ್ರವಾಸಿಗರನ್ನು ಭಾರತೀಯ ಸೇನೆ ರಕ್ಷಿಸಿದೆ.

    ಚುಂಗ್‍ಥಾಂಗ್‍ನಲ್ಲಿ ಸಿಕ್ಕಿಬಿದ್ದ 300 ಪ್ರವಾಸಿಗರಿಗೆ ಸ್ಟ್ರೈಕಿಂಗ್ ಲಯನ್ ಡಿವಿಷನ್‍ನ ತ್ರಿಶಕ್ತಿ ಕಾರ್ಪ್ಸ್ (Trishakti Corps) ಪಡೆಗಳು ಗಂಗ್ತೊಕ್‍ಗೆ (Gangtok) ತೆರಳಲು ತಾತ್ಕಾಲಿಕ ಸೇತುವೆ (Temporary Bridge) ಮೂಲಕ ದಾಟಲು ಸಹಕರಿಸಿದೆ. ಅಲ್ಲದೇ ಪ್ರವಾಸಿಗರಿಗೆ ಸೇನೆಯಿಂದ ಆಹಾರ, ವೈದ್ಯಕೀಯ ಸೌಕರ್ಯಗಳನ್ನು ಒದಗಿಸಿ ವಿಶ್ರಾಂತಿಗೆ ಅವಕಾಶ ಮಾಡಿಕೊಡಲಾಗಿದೆ. ಸಿಲುಕಿರುವ ಪ್ರವಾಸಿಗರ ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಗ್ರಾಹಕರ ಗಿರವಿ ಚಿನ್ನ ಎಗರಿಸಿ ನಕಲಿ ಚಿನ್ನ ತಂದಿಟ್ಟು 1 ಕೋಟಿ ರೂ. ವಂಚಿಸಿದ ಬ್ಯಾಂಕ್ ನೌಕರ ಅರೆಸ್ಟ್

    ಇದಲ್ಲದೆ ಸಂಕಷ್ಟದಲ್ಲಿ ಸಿಲುಕಿರುವ 3,500 ಪ್ರವಾಸಿಗರನ್ನು ರಕ್ಷಿಸುವಲ್ಲಿ ಭಾರತೀಯ ಸೇನೆಯ ತ್ರಿಶಕ್ತಿ ಕಾರ್ಪ್ಸ್ ಪಡೆಗಳು ಸಿಕ್ಕಿಂ ಸರ್ಕಾರಕ್ಕೆ ಸಹಾಯ ಮಾಡುತ್ತಿದೆ. ಈಗ ಸದ್ಯದ ಪರಿಸ್ಥಿತಿಯಲ್ಲಿ ಭೂಕುಸಿತದಿಂದಾಗಿ ವ್ಯಾಪಕವಾಗಿ ಹಾನಿಗೀಡಾದ ರಸ್ತೆಗಳು ಹಾಗೂ ಮಳೆ ಕಡಿಮೆ ಆಗುವ ವರೆಗೂ ಜಿಲ್ಲೆಗೆ ಯಾವ ಪ್ರವಾಸಿಗರಿಗೂ ಅವಕಾಶ ನೀಡುವುದಿಲ್ಲ ಎಂದು ಸರ್ಕಾರ ತಿಳಿಸಿದೆ.

    ಭಾರೀ ಮಳೆಯಿಂದಾಗಿ ಹಾನಿಗೊಳಗಾದ ರಸ್ತೆಗಳನ್ನು ಸರಿ ಪಡಿಸಿದ ನಂತರ ಪ್ರವಾಸಿಗರಿಗೆ ಬರಲು ಅವಕಾಶ ನೀಡುವುದಾಗಿ ಸರ್ಕಾರ ಪ್ರಕಟಿಸಿದೆ. ಇದನ್ನೂ ಓದಿ: ಮಾವಿನ ಹಣ್ಣಿಗಾಗಿ ನಡೆದ ಗಲಾಟೆ- ಸಹೋದರರನ್ನು ಬಡಿದು ಕೊಂದ ದುಷ್ಕರ್ಮಿಗಳು

  • ಸಿಕ್ಕಿಂನಲ್ಲಿ ಭಾರೀ ಹಿಮಪಾತ – 6 ಸಾವು, ಹಲವರು ನಾಪತ್ತೆ

    ಸಿಕ್ಕಿಂನಲ್ಲಿ ಭಾರೀ ಹಿಮಪಾತ – 6 ಸಾವು, ಹಲವರು ನಾಪತ್ತೆ

    ಗ್ಯಾಂಗ್ಟಾಕ್: ಸಿಕ್ಕಿಂನ (Sikkim) ನಾಥುಲಾ (Nathula) ಪ್ರದೇಶದಲ್ಲಿ ಮಂಗಳವಾರ ಭಾರೀ ಹಿಮಪಾತ (Avalanche) ಉಂಟಾಗಿದ್ದು, ಘಟನೆಯಲ್ಲಿ 6 ಪ್ರವಾಸಿಗರು ಸಾವನ್ನಪ್ಪಿದ್ದಾರೆ ಮತ್ತು 11 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಸಿಕ್ಕಿಂನ ಭಾರತ-ಚೀನಾ ಗಡಿಯ ಸಮೀಪವಿರುವ ಎತ್ತರದ ಪರ್ವತದ ಹಾದಿಯಾದ ನಾಥುಲಾ ಬಳಿ ಮಧ್ಯಾಹ್ನ 12:20ರ ವೇಳೆಗೆ ಹಿಮಪಾತ ಸಂಭವಿಸಿದೆ. ಈ ಪ್ರದೇಶ ಸಮುದ್ರ ಮಟ್ಟದಿಂದ 4,310 ಮೀ. (14,140 ಅಡಿ) ಎತ್ತರದಲ್ಲಿದೆ ಮತ್ತು ಇದು ಪ್ರಮುಖ ಪ್ರವಾಸಿ ತಾಣವಾಗಿದೆ.

    ವರದಿಗಳ ಪ್ರಕಾರ 150ಕ್ಕೂ ಹೆಚ್ಚು ಪ್ರವಾಸಿಗರು 15 ಮೈಲುಗಳಷ್ಟು ಮುಂದೆ ಸಾಗಿದ್ದು, ಅಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. ಈ ನಡುವೆ ಹಿಮದ ಅಡಿಯಲ್ಲಿ ಸಿಲುಕಿದ ಸುಮಾರು 30 ಜನರನ್ನು ರಕ್ಷಿಸಲಾಗಿದೆ. ಗಾಯಾಳುಗಳನ್ನು ರಾಜ್ಯ ರಾಜಧಾನಿ ಗ್ಯಾಂಗ್ಟನ್‌ನ ಆಸ್ಪತ್ರೆಗೆ ಕರೆತರಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಅವಘಡ ತಪ್ಪಿಸಲು ರೈಲನ್ನೇ ನಿಲ್ಲಿಸಿದ ದಿಟ್ಟ ಮಹಿಳೆ!

    ರಕ್ಷಣಾ ಕಾರ್ಯಾಚರಣೆ ಮುಂದುವರಿಸಲಾಗಿದ್ದು, ನಾಪತ್ತೆಯಾದವರ ಹುಡುಕಾಟದಲ್ಲಿ ಸಿಬ್ಬಂದಿ ತೊಡಗಿದ್ದಾರೆ. ಪ್ರಸ್ತುತ ಸಿಕ್ಕಿಂ ಪೊಲೀಸರು, ಸಿಕ್ಕಿಂನ ಟ್ರಾವೆಲ್ ಏಜೆಂಟ್ಸ್ ಅಸೋಸಿಯೇಷನ್, ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಮತ್ತು ವಾಹನ ಚಾಲಕರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: 47 ಜನ ಪ್ರಯಾಣಿಕರಿದ್ದ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ: ಪ್ರಯಾಣಿಕರು ಬಚಾವ್

  • ಟರ್ಕಿ, ಸಿರಿಯಾ ಬೆನ್ನಲ್ಲೇ ಭಾರತದಲ್ಲೂ ಭೂಕಂಪನ

    ಗ್ಯಾಂಗ್ಟಾಕ್: ಟರ್ಕಿ, ಸಿರಿಯಾ (Turkey Syria Earthquake) ದೇಶಗಳಲ್ಲಿ ಭೂಕಂಪನ ಸಂಭವಿಸಿದ್ದು ಸಾವಿರಾರು ಜನರನ್ನ ಬಲಿ ಪಡೆದಿದೆ. ಈಗಾಗಲೇ 33 ಸಾವಿರ ಮಂದಿ ಮೃತಪಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಅಲ್ಲದೇ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

    ಈ ಬೆನ್ನಲ್ಲೇ ಸೋಮವಾರ (ಫೆ.13) ಬೆಳ್ಳಂಬೆಳಗ್ಗೆ ಸಿಕ್ಕಿಂನಲ್ಲಿ (Sikkim) 4.3 ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದೆ. ಭೂಕಂಪನವು ಸಿಕ್ಕಿಂನ ಯುಕ್ಸೋಮ್‌ನ ವಾಯುವ್ಯ ಭಾಗದಲ್ಲಿ ಮುಂಜಾನೆ 4.15ರ ಸುಮಾರಿಗೆ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ ಗುರುತಿಸಲಾಗಿದೆ. ಇದನ್ನೂ ಓದಿ: ವಾರದಲ್ಲಿ 4ನೇ ಕಾರ್ಯಾಚರಣೆ – ಮತ್ತೊಂದು ಹಾರುವ ವಸ್ತುವನ್ನು ಹೊಡೆದುರುಳಿಸಿದ ಅಮೆರಿಕ

    ಭಾನುವಾರ ಮಧ್ಯಾಹ್ನ ಅಸ್ಸಾಂನ (Assam) ನಾಗಾನ್‌ನಲ್ಲಿ 4.0 ತೀವ್ರತೆಯ ಭೂಕಂಪನ ಸಂಭವಿಸಿದ ಒಂದು ದಿನದ ನಂತರ ಕಂಪನ ಸಂಭವಿಸಿದೆ. ಎರಡು ದಿನಗಳ ಹಿಂದೆಯಷ್ಟೇ ಗುಜರಾತ್‌ನ (Gujarat) ಸೂರತ್ ಜಿಲ್ಲೆಯಲ್ಲೂ 3.8 ತೀವ್ರತೆಯ ಭೂಕಂಪನ ದಾಖಲಾಗಿತ್ತು.

    ಅಫ್ಘಾನ್‌ನಲ್ಲೂ ಭೂಕಂಪನ: ಇಂದು (ಫೆ.13) ಬೆಳಗ್ಗೆ ಅಫ್ಘಾನಿಸ್ತಾನದ (Afghanistan) ಫೈಜಾಬಾದ್‌ನಲ್ಲಿಯೂ 4.3 ತೀವ್ರತೆಯ ಭೂಕಂಪ ಸಂಭವಿಸಿದೆ. ಇಲ್ಲಿನ ಈಶಾನ್ಯ ನಗರವಾದ ಫೈಜಾಬಾದ್‌ನ ಆಗ್ನೇಯಕ್ಕೆ 100 ಕಿಮೀ ದೂರದಲ್ಲಿ ಭೂಕಂಪನ ಉಂಟಾಗಿದೆ. ಬೆಳಗ್ಗೆ 6:47ರ ಸುಮಾರಿಗೆ 135 ಕಿಮೀ ಆಳದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಭೂಕಂಪನ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

    ಸದ್ಯ ಯಾವುದೇ ಆಸ್ತಿಪಾಸ್ತಿ ಹಾನಿ ಅಥವಾ ಪ್ರಾಣ ಹಾನಿ ಆಗಿಲ್ಲ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ರಾಜಭವನದಲ್ಲಿ ಮೋದಿ ರಾತ್ರಿ ವಾಸ್ತವ್ಯ – 800ಕ್ಕೂ ಹೆಚ್ಚು ಪೊಲೀಸರಿಂದ ಬಿಗಿಭದ್ರತೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕಣಿವೆಗೆ ಉರುಳಿದ ಸೇನಾ ವಾಹನ – 16 ಸೈನಿಕರು ಹುತಾತ್ಮ

    ಕಣಿವೆಗೆ ಉರುಳಿದ ಸೇನಾ ವಾಹನ – 16 ಸೈನಿಕರು ಹುತಾತ್ಮ

    ಗ್ಯಾಂಗ್ಟಾಕ್: ಭಾರತೀಯ ಸೇನಾ ವಾಹನವು (Army Truck) ಕಣಿವೆಗೆ ಉರುಳಿ 16 ಯೋಧರು ಹುತಾತ್ಮರಾಗಿರುವ ದುರ್ಘಟನೆ ಉತ್ತರ ಸಿಕ್ಕಿಂನ (Sikkim) ಝೆಮಾ ಎಂಬಲ್ಲಿ ನಡೆದಿದೆ.

    ಸೈನಿಕರು (Soldiers) ಪ್ರಯಾಣಿಸುತ್ತಿದ್ದ ಟ್ರಕ್ ಕಡಿದಾದ ಇಳಿಜಾರಿನಲ್ಲಿ ಆಯತಪ್ಪಿ ಕಣಿವೆಗೆ ಬಿದ್ದಿದ್ದರಿಂದ ಭಾರತೀಯ ಸೇನೆಯ ಮೂವರು ಜೂನಿಯರ್ ಕಮಿಷನ್ಡ್ ಅಧಿಕಾರಿಗಳು ಸೇರಿದಂತೆ 16 ಯೋಧರು ಹುತಾತ್ಮರಾಗಿದ್ದಾರೆ ಎಂದು ಭಾರತೀಯ ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ನಿವೃತ್ತ ಪ್ರಾಧ್ಯಾಪಕಿ ಶೆಲ್ಲಿ ದೆಹಲಿ ಮೇಯರ್ ಅಭ್ಯರ್ಥಿಯಾಗಿ ಘೋಷಣೆ

    ಈ ವಾಹನವು ಮೂರು ವಾಹನಗಳ ಬೆಂಗಾವಲು ಪಡೆಯ ಭಾಗವಾಗಿತ್ತು. ಬೆಳಗ್ಗೆ ಚಾಟೆನ್‌ನಿಂದ ಥಾಂಗು ಕಡೆಗೆ ಹೊರಟಿತ್ತು. ಝೆಮಾದಲ್ಲಿ ಸಾಗುತ್ತಿದ್ದಾಗ ವಾಹನವು ತೀಕ್ಷ್ಣವಾದ ತಿರುವಿನಲ್ಲಿ ಆಯತಪ್ಪಿ ಕಣಿವೆಗೆ ಉರುಳಿದೆ ಎಂದು ಸೇನೆ ಹೇಳಿದೆ. ಅಪಘಾತದಲ್ಲಿ ಗಾಯಗೊಂಡ ನಾಲ್ವರು ಯೋಧರನ್ನು ಚಿಕಿತ್ಸೆಗಾಗಿ ಏರ್‌ಲಿಫ್ಟ್‌ ಮಾಡಲಾಗಿದೆ.

    ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh), ಹುತಾತ್ಮ ಯೋಧರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. “ಉತ್ತರ ಸಿಕ್ಕಿಂನಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ ಭಾರತೀಯ ಸೇನೆಯ ಸಿಬ್ಬಂದಿಯ ಪ್ರಾಣಹಾನಿಯಿಂದ ತೀವ್ರ ನೋವಾಗಿದೆ. ಅವರ ಸೇವೆ ಮತ್ತು ಬದ್ಧತೆಗೆ ರಾಷ್ಟ್ರವು ಆಳವಾಗಿ ಕೃತಜ್ಞವಾಗಿದೆ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮೂಗಿನ ಮೂಲಕ ತೆಗೆದುಕೊಳ್ಳುವ ಲಸಿಕೆಯ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಅನುಮತಿ

    Live Tv
    [brid partner=56869869 player=32851 video=960834 autoplay=true]

  • ಸಿಕ್ಕಿಂ ಪ್ರವಾಸದಲ್ಲಿ ನಟಿ ಸಿಂಧು ಲೋಕನಾಥ್

    ಸಿಕ್ಕಿಂ ಪ್ರವಾಸದಲ್ಲಿ ನಟಿ ಸಿಂಧು ಲೋಕನಾಥ್

    ಸ್ಯಾಂಡಲ್‌ವುಡ್ ಬ್ಯೂಟಿ ಸಿಂಧು ಲೋಕನಾಥ್ ಪರಿಚಯ, ಡ್ರಾಮಾ, `ಲವ್ ಇನ್ ಮಂಡ್ಯ’ ಚಿತ್ರದ ಮೂಲಕ ಗಮನ ಸೆಳೆದ ನಟಿ ಈಗ ಸಿನಿಮಾ ಶೂಟಿಂಗ್‌ಗೆ ಬ್ರೇಕ್ ಹಾಕಿ ಪ್ರವಾಸದಲ್ಲಿ ಬ್ಯುಸಿಯಾಗಿದ್ದಾರೆ. ಬೈಕ್‌ನಲ್ಲಿ ಒಬ್ಬರೇ ಟ್ರಾವೆಲ್ ಮಾಡುತ್ತಾ ಹೊಸ ಜಾಗಗಳಿಗೆ ಭೇಟಿ ಕೊಡ್ತಿದ್ದಾರೆ. ಈ ಫೋಟೋಗಳು ಸದ್ಯ ಸಖತ್ ವೈರಲ್ ಆಗುತ್ತಿದೆ.

     

    View this post on Instagram

     

    A post shared by Sindhu Loknath (@sindhuloknath)

    ಚಂದನವನದ `ಡ್ರಾಮಾ’ ಚೆಲುವೆ ಸಿಂಧು ಲೋಕನಾಥ್ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಲ್ಲಿರುತ್ತಾರೆ. ಸಿನಿಮಾ ಶೂಟಿಂಗ್ ಮಧ್ಯೆ ಹೊಸ ಜಾಗಗಳಿಗೆ ಆಗಾಗ ಭೇಟಿ ಕೊಡ್ತಿರತ್ತಾರೆ. ಟ್ರಾವೆಲಿಂಗ್‌ನ ಅತೀ ಹೆಚ್ಚು ಇಷ್ಟ ಪಡುವ ನಟಿ ಸಿಂಧು ಇದೀಗ ಸಿಕ್ಕಿಂಗೆ ಭೇಟಿ ಕೊಟ್ಟಿದ್ದಾರೆ. ಬೆಂಗಳೂರಿಂದ ಸಿಕ್ಕಂಗೆ ಒಬ್ಬರೇ ಜರ್ನಿ ಮಾಡಿ ಅಲ್ಲಿನ ಸುಂದರ ತಾಣಗಳಿಗೆ ಭೇಟಿ ನೀಡಿದ್ದಾರೆ. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಸಿಂಧು ನಡೆಗೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಇದನ್ನೂ ಓದಿ: ನಾನು ‘ಸಂಚಾರಿ ವಿಜಯ್’ ಹಾಗೂ ರಾಷ್ಟ್ರೀಯ ಹೆದ್ದಾರಿ 4 : ನಿರ್ದೇಶಕ ಮಂಸೋರೆ ಮನದಾಳ

     

    View this post on Instagram

     

    A post shared by Sindhu Loknath (@sindhuloknath)

    ಇನ್ನು ಸಿಂಧು ಲೋಕನಾಥ್ ಕಡೆಯದಾಗಿ ಕಾಣಿಸಿಕೊಂಡ ಸಿನಿಮಾ, ಕಾಣದಂತೆ ಮಾಯವಾದನು, ಕೃಷ್ಣ ಟಾಕೀಸ್ ಚಿತ್ರದಲ್ಲಿ ನಟಿಸಿದ್ದರು. ಇದೀಗ `60 ಡೇಸ್’ ಎಂಬ ಸಿನಿಮಾಗೆ ಬಣ್ಣ ಹಚ್ಚಿದ್ದು, ಸದ್ಯದಲ್ಲೇ ಈ ಕುರಿತು ಅಪ್‌ಡೇಟ್ ಸಿಗಲಿದೆ.