Tag: ಸಿಗರೇಟು

  • ಸ್ಮೋಕಿಂಗ್ ರೂಮ್ ನಿಂದಾನೇ ನನಗೂ ರಾಕೇಶ್ ಅಡಿಗಗೂ ಬಾಂಡಿಂಗ್ ಬೆಳೆದಿದ್ದು : ಸೋನು ಶ್ರೀನಿವಾಸ್ ಗೌಡ

    ಸ್ಮೋಕಿಂಗ್ ರೂಮ್ ನಿಂದಾನೇ ನನಗೂ ರಾಕೇಶ್ ಅಡಿಗಗೂ ಬಾಂಡಿಂಗ್ ಬೆಳೆದಿದ್ದು : ಸೋನು ಶ್ರೀನಿವಾಸ್ ಗೌಡ

    ಬಿಗ್ ಬಾಸ್ ಮನೆಯಲ್ಲಿ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಸಿಗರೇಟು ಸೇದಿದರು ಎನ್ನುವುದೇ ದೊಡ್ಡ ಸುದ್ದಿ ಆಯಿತು. ಟ್ರೋಲ್ ಪೇಜುಗಳಲ್ಲಿ ಮತ್ತು ನೋಡುಗರು ಕೂಡ ಈ ಕುರಿತು ಕಾಮೆಂಟ್ ಮಾಡಿದ್ದರು. ಸೋನು ಇದನ್ನೆಲ್ಲ ಮಾಡ್ತಾರಾ ಅಂತ ಕೆಲವರು ಅಚ್ಚರಿಯನ್ನೂ ವ್ಯಕ್ತ ಪಡಿಸಿದರು. ಆದರೂ, ಆಗಾಗ್ಗೆ ಬಿಗ್ ಬಾಸ್ ಮನೆಯಲ್ಲಿ ಸ್ಮೋಕಿಂಗ್ ಕುರಿತಾಗಿ ಚರ್ಚೆಗಳು ನಡೆಯುತ್ತಲೇ ಇದ್ದವು. ಈ ಕುರಿತು ಸ್ವತಃ ಸೋನು ಗೌಡ ಅವರ ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಮಾತನಾಡಿದ್ದಾರೆ. ಇದನ್ನೂ  ಓದಿ:ಅನುಷ್ಕಾಗೆ ಕೈಕೊಟ್ಟು ಬಾಲಿವುಡ್ ಬೆಡಗಿಗೆ ಮನಸ್ಸು ಕೊಟ್ಟ ಪ್ರಭಾಸ್

    ಬಿಗ್ ಬಾಸ್ (Bigg Boss OTT) ಮನೆಗೂ ಹೋಗುವ ಮುನ್ನ ತಮ್ಮ ಬ್ರ್ಯಾಂಡ್ ಬಗ್ಗೆಯೂ ಸೋನು ಹೇಳಿದ್ದರಂತೆ. ಅದನ್ನೇ ತರಿಸಿಕೊಡುವಂತೆ ಮನವಿ ಮಾಡಿಕೊಂಡಿದ್ದರಂತೆ. ಹಾಗಾಗಿ ಬಿಗ್ ಬಾಸ್ ಟೀಮ್ ಕೂಡ ಸೋನು ನೆಚ್ಚಿನ ಬ್ರ್ಯಾಂಡ್ ಅನ್ನೇ ಒದಗಿಸಿತ್ತಂತೆ. ಬಿಗ್ ಬಾಸ್ ಮನೆಯಲ್ಲಿ ಸ್ಮೋಕ್ (Smoking) ಮಾಡಲು ಕಂಪೆನಿ ಕೊಡುತ್ತಿದ್ದದ್ದು ರಾಕೇಶ್ ಅಡಿಗ. ಹಾಗಾಗಿ ಪದೇ ಪದೇ ಆ ಸ್ಥಳಕ್ಕೆ ಇಬ್ಬರೂ ಹೋಗುತ್ತಿದ್ದರಂತೆ. ಮೊದಲ ಬಾರಿಗೆ ಸೋನು ಸಿಗರೇಟು ಕೇಳಿದಾಗ ಸ್ವತಃ ರಾಕೇಶ್ ಅಡಿಗ ಅಚ್ಚರಿ ವ್ಯಕ್ತ ಪಡಿಸಿದ್ದರಂತೆ.

    ನೋಡಿದವರು ಏನು ಅನ್ನುತ್ತಾರೆ ಹೀಗೆ ಸಿಗರೇಟು (Cigarette) ಸೇದಿದರೆ ಎಂದು ರಾಕೇಶ್ ಅಡಿಗ ಕೇಳಿದಾಗ, ನಾನು ಯಾವುದನ್ನೂ ಮುಚ್ಚಿ ಇಡುವುದಿಲ್ಲ. ಹಾಗೆಯೇ ನಾನು ಅಡಿಕ್ಟ್ ಅಲ್ಲ. ಬೇಕು ಅಂತಾನೂ ಅನಿಸಲ್ಲ. ಎದುರಿಗೆ ಇದ್ದಾಗ ಅದನ್ನು ಮಾಡಬೇಕು ಅನಿಸತ್ತೆ. ಹಾಗಾಗಿ ಸಿಗರೇಟು ಸೇದಿದ್ದೇನೆ. ಬಹುಶಃ ನನಗೆ ರಾಕೇಶ್ ಅಡಿಗ (Rakesh Adiga) ಅಷ್ಟೊಂದು ಪರಿಚಯ ಆಗುವುದಕ್ಕೆ ಕಾರಣವೇ ಸ್ಮೋಕಿಂಗ್ ರೂಮ್. ತೀರಾ ಕ್ಲೋಸ್ ಆಗಿದ್ದು ಅದೇ ಏರಿಯಾದಲ್ಲಿ ಅನ್ನುತ್ತಾರೆ ಸೋನು.

    ಹಾಗಂತ ಧೂಮಪಾನ ಮಾಡುವುದರಿಂದ ಅಪಾಯವಿದೆ ಎಂದು ಸೋನುಗೂ ಗೊತ್ತಿದೆ. ಹಾಗಾಗಿಯೇ ಅವರು ನಿತ್ಯವೂ ಅದನ್ನು ಮಾಡುವುದಿಲ್ಲವಂತೆ. ಯಾವಾಗಲಾದರೂ ಸ್ಮೋಕ್ ಮಾಡುವೆ. ನಾನು ಚಟಕ್ಕೆ ಬಿದ್ದವರಂತೆ ಸೇದುವುದಿಲ್ಲವೆಂದು ಅವರು ಸ್ಪಷ್ಟ ಪಡಿಸುತ್ತಾರೆ. ಅದು ಆರೋಗ್ಯಕ್ಕೆ ಒಳ್ಳೆಯದೂ ಅಲ್ಲ ಎಂದು ಹೇಳುತ್ತಾರೆ.

    Live Tv
    [brid partner=56869869 player=32851 video=960834 autoplay=true]

  • ಕಾಳಿ ಕೈಲಿ ಸಿಗರೇಟು ವಿವಾದ : ನಿರ್ದೇಶಕಿ ಲೀನಾ ಮಣಿಮೇಕಲೈ ಟ್ವಿಟ್‌ಗೆ ತಡೆ

    ಕಾಳಿ ಕೈಲಿ ಸಿಗರೇಟು ವಿವಾದ : ನಿರ್ದೇಶಕಿ ಲೀನಾ ಮಣಿಮೇಕಲೈ ಟ್ವಿಟ್‌ಗೆ ತಡೆ

    ಮ್ಮ ಸಾಕ್ಷ್ಯಚಿತ್ರದಲ್ಲಿ ಕಾಳಿ ದೇವತೆಯ ಒಂದು ಕೈಯಲ್ಲಿ ಸಿಗರೇಟು ಮತ್ತು ಕೈಯಲ್ಲಿ ಎಲ್ಜಿಬಿಟಿಕ್ಯೂ ಧ್ವಜ ಕೊಟ್ಟ ಕಾರಣಕ್ಕಾಗಿ ತಮಿಳಿನ ಖ್ಯಾತ ನಿರ್ದೇಶಕಿ ಲೀನಾ ಮಣಿಮೇಕಲೈ ವಿರುದ್ಧ ಕ್ರಮಕ್ಕಾಗಿ ದೇಶಾದ್ಯಂತ ಆಗ್ರಹ ನಡೆದಿತ್ತು. ಹಲವು ಕಡೆ ಇವರ ವಿರುದ್ಧ ದೂರುಗಳು ದಾಖಲಾಗಿದ್ದವು. ಮುಂಬೈನಲ್ಲಿ ಎಫ್‍.ಐ.ಆರ್ ಕೂಡ ದಾಖಲಾಗಿತ್ತು. ಇದೀಗ ಭಾರತದಲ್ಲಿ ಅವರ ಟ್ವಿಟರ್ ಖಾತೆಯನ್ನು ತಡೆಹಿಡಿಯಲಾಗಿದೆ.

    ನಿನ್ನೆಯಷ್ಟೇ ದೆಹಲಿಯಲ್ಲಿ ದೂರು ದಾಖಲಾಗಿದ್ದು, ಬೆಂಗಳೂರಿನಲ್ಲೂ ಕಿರಣ್ ಆರಾಧ್ಯ ಎನ್ನುವವರು ಸೈಬರ್ ಕ್ರೈಂಗೆ ದೂರು ನೀಡಿದ್ದರು.  ಅಲ್ಲದೇ, ಅನೇಕ ಕಡೆ ಈ ಕುರಿತು ಪ್ರತಿರೋಧ ಕೂಡ ವ್ಯಕ್ತವಾಗಿತ್ತು. ಇದೀಗ ದೇಶದ ಹಲವು ಕಡೆ ಫಿಲ್ಮ್ ಚೇಂಬರ್ ಗೂ ದೂರುಗಳನ್ನು ದಾಖಲಿಸಲಾಗುತ್ತಿದೆ. ಅಲ್ಲದೇ, ಆ ಸಾಕ್ಷ್ಯ ಚಿತ್ರವನ್ನು ಪ್ರದರ್ಶನ ಮಾಡದಂತೆ ಒತ್ತಡ ಹೇರಲಾಗುತ್ತಿದೆ. ಇದನ್ನೂ ಓದಿ : Breaking- ಫಹಾದ್ ಫಾಸಿಲ್ ಗಾಗಿ ಸಿನಿಮಾ ಮಾಡಲು ಮತ್ತೆ ತಮಿಳಿಗೆ ಹೊರಟ ಪವನ್ ಕುಮಾರ್

    ಲೀನಾ ಅವರು ತಮ್ಮ ಸಾಕ್ಷ್ಯಚಿತ್ರದ ಪೋಸ್ಟರ್ ಒಂದನ್ನು ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿದ್ದು, ಆ ಪೋಸ್ಟರ್ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಭಾವನೆಗಳಿಗೆ ಅವರು ಧಕ್ಕೆ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಲೀನಾ ಅವರು ಕಾಳಿ ಕುರಿತಾಗಿ ಸಾಕ್ಷ್ಯ ಚಿತ್ರ ಮಾಡಿದ್ದು, ಕಾಳಿಯ ಒಂದು ಕೈಲಿ ಸಿಗರೇಟು ಮತ್ತೊಂದು ಕೈಲಿ ಎಲ್ಜಿಬಿಟಿಕ್ಯೂ ಧ್ವಜವನ್ನು ನೀಡಲಾಗಿದೆ. ಈ ಪೋಸ್ಟರ್ ಅನ್ನು ಶೇರ್ ಮಾಡಿರುವ ಲೀನಾ, ಈ ಸಾಕ್ಷ್ಯ ಚಿತ್ರವು ಕೆನಡಾ ಫಿಲ್ಮ್ ಫೇಸ್ಟಿವಲ್ ನಲ್ಲಿ ಬಿಡುಗಡೆ ಆಗುತ್ತಿದೆ. ಈ ಕಾರಣಕ್ಕಾಗಿ ನಾನು ಉತ್ಸುಕಳಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.

    ಟ್ವಿಟರ್ ಬಳಕೆದಾರರು ಈ ಕುರಿತು ಆಕ್ರೋಶ ವ್ಯಕ್ತ ಪಡಿಸಿದ್ದು, ಈ ನಿರ್ಮಾಪಕಿಯನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಕೋಟ್ಯಂತರ ಹಿಂದೂಗಳ ಭಾವನೆಗೆ ಆಕೆ ಧಕ್ಕೆ ಮಾಡಿದ್ದರಿಂದ, ಆ ಸಾಕ್ಷ್ಯ ಚಿತ್ರವನ್ನು ನಿಷೇಧ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ. ತಮಿಳು ನಾಡು ಮೂಲದ ಈ ಲೀನಾ ಸಲಿಂಗಿಗಳ ಬೆಂಬಲಕ್ಕೆ ಈ ಹಿಂದೆ ನಿಂತವರು ಎನ್ನುವುದು ವಿಶೇಷ.

    Live Tv
    [brid partner=56869869 player=32851 video=960834 autoplay=true]

  • ಕಾಳಿ ಕೈಲಿ ಸಿಗರೇಟು ವಿವಾದ : ಲೀನಾ ವಿರುದ್ಧ ಫಿಲ್ಮ್ ಚೇಂಬರ್ ನಲ್ಲಿ ದೂರು

    ಕಾಳಿ ಕೈಲಿ ಸಿಗರೇಟು ವಿವಾದ : ಲೀನಾ ವಿರುದ್ಧ ಫಿಲ್ಮ್ ಚೇಂಬರ್ ನಲ್ಲಿ ದೂರು

    ಮ್ಮ ಸಾಕ್ಷ್ಯಚಿತ್ರದಲ್ಲಿ ಕಾಳಿ ದೇವತೆಯ ಒಂದು ಕೈಯಲ್ಲಿ ಸಿಗರೇಟು ಮತ್ತು ಕೈಯಲ್ಲಿ ಎಲ್ಜಿಬಿಟಿಕ್ಯೂ ಧ್ವಜ ಕೊಟ್ಟ ಕಾರಣಕ್ಕಾಗಿ ತಮಿಳಿನ ಖ್ಯಾತ ನಿರ್ಮಾಪಕಿ ಲೀನಾ ಮಣಿಮೇಕಲೈ ವಿರುದ್ಧ ಆಕ್ರೋಶ  ಮುಂದುವರೆದಿದ್ದು, ಇದೀಗ ಅವರ ವಿರುದ್ದ ನಿರ್ದೇಶಕ ಕಂ ನಿರ್ಮಾಪಕ ಮರಡಿಹಳ್ಳಿ ನಾಗಚಂದ್ರ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ಫಿಲ್ಮ್ ಚೇಂಬರ್ ಅಧ್ಯಕ್ಷರಿಗೆ ದೂರು ನೀಡಿರುವ ಅವರು, ಲೀನಾ ಮೇಲೆ ತಗೆದುಕೊಳ್ಳಬಹುದಾದ ಕ್ರಮದ ಕುರಿತು ಚರ್ಚಿಸಿದ್ದಾರೆ.

    ನಿನ್ನೆಯಷ್ಟೇ ದೆಹಲಿಯಲ್ಲಿ ದೂರು ದಾಖಲಾಗಿದ್ದು, ಬೆಂಗಳೂರಿನಲ್ಲೂ ಕಿರಣ್ ಆರಾಧ್ಯ ಎನ್ನುವವರು ಸೈಬರ್ ಕ್ರೈಂಗೆ ದೂರು ನೀಡಿದ್ದರು.  ಅಲ್ಲದೇ, ಅನೇಕ ಕಡೆ ಈ ಕುರಿತು ಪ್ರತಿರೋಧ ಕೂಡ ವ್ಯಕ್ತವಾಗಿತ್ತು. ಇದೀಗ ದೇಶದ ಹಲವು ಕಡೆ ಫಿಲ್ಮ್ ಚೇಂಬರ್ ಗೂ ದೂರುಗಳನ್ನು ದಾಖಲಿಸಲಾಗುತ್ತಿದೆ. ಅಲ್ಲದೇ, ಆ ಸಾಕ್ಷ್ಯ ಚಿತ್ರವನ್ನು ಪ್ರದರ್ಶನ ಮಾಡದಂತೆ ಒತ್ತಡ ಹೇರಲಾಗುತ್ತಿದೆ. ಇದನ್ನೂ ಓದಿ:ಸಮಂತಾ ಮೊದಲ ಸಂಭಾವನೆ ಕೇಳಿದ್ರೆ ನೀವು ಶಾಕ್‌ ಆಗುತ್ತೀರಾ

    ಲೀನಾ ಅವರು ತಮ್ಮ ಸಾಕ್ಷ್ಯಚಿತ್ರದ ಪೋಸ್ಟರ್ ಒಂದನ್ನು ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿದ್ದು, ಆ ಪೋಸ್ಟರ್ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಭಾವನೆಗಳಿಗೆ ಅವರು ಧಕ್ಕೆ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಲೀನಾ ಅವರು ಕಾಳಿ ಕುರಿತಾಗಿ ಸಾಕ್ಷ್ಯ ಚಿತ್ರ ಮಾಡಿದ್ದು, ಕಾಳಿಯ ಒಂದು ಕೈಲಿ ಸಿಗರೇಟು ಮತ್ತೊಂದು ಕೈಲಿ ಎಲ್ಜಿಬಿಟಿಕ್ಯೂ ಧ್ವಜವನ್ನು ನೀಡಲಾಗಿದೆ. ಈ ಪೋಸ್ಟರ್ ಅನ್ನು ಶೇರ್ ಮಾಡಿರುವ ಲೀನಾ, ಈ ಸಾಕ್ಷ್ಯ ಚಿತ್ರವು ಕೆನಡಾ ಫಿಲ್ಮ್ ಫೇಸ್ಟಿವಲ್ ನಲ್ಲಿ ಬಿಡುಗಡೆ ಆಗುತ್ತಿದೆ. ಈ ಕಾರಣಕ್ಕಾಗಿ ನಾನು ಉತ್ಸುಕಳಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.

    ಟ್ವಿಟರ್ ಬಳಕೆದಾರರು ಈ ಕುರಿತು ಆಕ್ರೋಶ ವ್ಯಕ್ತ ಪಡಿಸಿದ್ದು, ಈ ನಿರ್ಮಾಪಕಿಯನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಕೋಟ್ಯಂತರ ಹಿಂದೂಗಳ ಭಾವನೆಗೆ ಆಕೆ ಧಕ್ಕೆ ಮಾಡಿದ್ದರಿಂದ, ಆ ಸಾಕ್ಷ್ಯ ಚಿತ್ರವನ್ನು ನಿಷೇಧ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ. ತಮಿಳು ನಾಡು ಮೂಲದ ಈ ಲೀನಾ ಸಲಿಂಗಿಗಳ ಬೆಂಬಲಕ್ಕೆ ಈ ಹಿಂದೆ ನಿಂತವರು ಎನ್ನುವುದು ವಿಶೇಷ.

    Live Tv
    [brid partner=56869869 player=32851 video=960834 autoplay=true]

  • ಕಾಳಿ ಕೈಲಿ ಸಿಗರೇಟು ವಿವಾದ : ಲೀನಾ ಮೇಲೆ ಹಲವು ದೂರು ದಾಖಲು

    ಕಾಳಿ ಕೈಲಿ ಸಿಗರೇಟು ವಿವಾದ : ಲೀನಾ ಮೇಲೆ ಹಲವು ದೂರು ದಾಖಲು

    ಮ್ಮ ಸಾಕ್ಷ್ಯಚಿತ್ರದಲ್ಲಿ ಕಾಳಿ ದೇವತೆಯ ಒಂದು ಕೈಯಲ್ಲಿ ಸಿಗರೇಟು ಮತ್ತು ಕೈಯಲ್ಲಿ ಎಲ್ಜಿಬಿಟಿಕ್ಯೂ ಧ್ವಜ ಕೊಟ್ಟ ಕಾರಣಕ್ಕಾಗಿ ತಮಿಳಿನ ಖ್ಯಾತ ನಿರ್ಮಾಪಕಿ ಲೀನಾ ಮಣಿಮೇಕಲೈ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಅವರ ವಿರುದ್ಧ ದೂರುಗಳು ದಾಖಲಾಗಿವೆ. ದೆಹಲಿಯಲ್ಲಿ ದೂರು ದಾಖಲಾಗಿದ್ದು, ಬೆಂಗಳೂರಿನಲ್ಲೂ ಕಿರಣ್ ಆರಾಧ್ಯ ಎನ್ನುವವರು ಸೈಬರ್ ಕ್ರೈಂಗೆ ದೂರು ನೀಡಿದ್ದಾರೆ. ಅಲ್ಲದೇ, ಅನೇಕ ಕಡೆ ಈ ಕುರಿತು ಪ್ರತಿರೋಧ ಕೂಡ ವ್ಯಕ್ತವಾಘಿದೆ.

    ಲೀನಾ ಅವರು ತಮ್ಮ ಸಾಕ್ಷ್ಯಚಿತ್ರದ ಪೋಸ್ಟರ್ ಒಂದನ್ನು ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿದ್ದು, ಆ ಪೋಸ್ಟರ್ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಭಾವನೆಗಳಿಗೆ ಅವರು ಧಕ್ಕೆ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಲೀನಾ ಅವರು ಕಾಳಿ ಕುರಿತಾಗಿ ಸಾಕ್ಷ್ಯ ಚಿತ್ರ ಮಾಡಿದ್ದು, ಕಾಳಿಯ ಒಂದು ಕೈಲಿ ಸಿಗರೇಟು ಮತ್ತೊಂದು ಕೈಲಿ ಎಲ್ಜಿಬಿಟಿಕ್ಯೂ ಧ್ವಜವನ್ನು ನೀಡಲಾಗಿದೆ. ಈ ಪೋಸ್ಟರ್ ಅನ್ನು ಶೇರ್ ಮಾಡಿರುವ ಲೀನಾ, ಈ ಸಾಕ್ಷ್ಯ ಚಿತ್ರವು ಕೆನಡಾ ಫಿಲ್ಮ್ ಫೇಸ್ಟಿವಲ್ ನಲ್ಲಿ ಬಿಡುಗಡೆ ಆಗುತ್ತಿದೆ. ಈ ಕಾರಣಕ್ಕಾಗಿ ನಾನು ಉತ್ಸುಕಳಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಥೇಟ್ ನಯನತಾರಾ ರೀತಿಯೇ ಕಂಗೊಳಿಸಿದ ‘ಸತ್ಯ’ ಧಾರಾವಾಹಿಯ ಗೌತಮಿ

    ಟ್ವಿಟರ್ ಬಳಕೆದಾರರು ಈ ಕುರಿತು ಆಕ್ರೋಶ ವ್ಯಕ್ತ ಪಡಿಸಿದ್ದು, ಈ ನಿರ್ಮಾಪಕಿಯನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಕೋಟ್ಯಂತರ ಹಿಂದೂಗಳ ಭಾವನೆಗೆ ಆಕೆ ಧಕ್ಕೆ ಮಾಡಿದ್ದರಿಂದ, ಆ ಸಾಕ್ಷ್ಯ ಚಿತ್ರವನ್ನು ನಿಷೇಧ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ. ತಮಿಳು ನಾಡು ಮೂಲದ ಈ ಲೀನಾ ಸಲಿಂಗಿಗಳ ಬೆಂಬಲಕ್ಕೆ ಈ ಹಿಂದೆ ನಿಂತವರು ಎನ್ನುವುದು ವಿಶೇಷ.

    Live Tv
    [brid partner=56869869 player=32851 video=960834 autoplay=true]

  • ಕಾಳಿ ಕೈಲಿ ಸಿಗರೇಟು, ಮತ್ತೊಂದು ಕೈಯಲ್ಲಿ ಎಲ್ಜಿಬಿಟಿಕ್ಯೂ ಧ್ವಜ : ಭುಗಿಲೆದ್ದ ಆಕ್ರೋಶ

    ಕಾಳಿ ಕೈಲಿ ಸಿಗರೇಟು, ಮತ್ತೊಂದು ಕೈಯಲ್ಲಿ ಎಲ್ಜಿಬಿಟಿಕ್ಯೂ ಧ್ವಜ : ಭುಗಿಲೆದ್ದ ಆಕ್ರೋಶ

    ಭಾರತೀಯ ಸಿನಿಮಾ ರಂಗದ ಖ್ಯಾತ ನಿರ್ಮಾಪಕಿ ಲೀನಾ ಮಣಿಮೇಕಲೈ ಅವರು ತಮ್ಮ ಸಾಕ್ಷ್ಯಚಿತ್ರದ ಪೋಸ್ಟರ್ ಒಂದನ್ನು ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿದ್ದು, ಆ ಪೋಸ್ಟರ್ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಭಾವನೆಗಳಿಗೆ ಅವರು ಧಕ್ಕೆ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

    ಲೀನಾ ಅವರು ಕಾಳಿ ಕುರಿತಾಗಿ ಸಾಕ್ಷ್ಯ ಚಿತ್ರ ಮಾಡಿದ್ದು, ಕಾಳಿಯ ಒಂದು ಕೈಲಿ ಸಿಗರೇಟು ಮತ್ತೊಂದು ಕೈಲಿ ಎಲ್ಜಿಬಿಟಿಕ್ಯೂ ಧ್ವಜವನ್ನು ನೀಡಲಾಗಿದೆ. ಈ ಪೋಸ್ಟರ್ ಅನ್ನು ಶೇರ್ ಮಾಡಿರುವ ಲೀನಾ, ಈ ಸಾಕ್ಷ್ಯ ಚಿತ್ರವು ಕೆನಡಾ ಫಿಲ್ಮ್ ಫೇಸ್ಟಿವಲ್ ನಲ್ಲಿ ಬಿಡುಗಡೆ ಆಗುತ್ತಿದೆ. ಈ ಕಾರಣಕ್ಕಾಗಿ ನಾನು ಉತ್ಸುಕಳಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ವಿಜಯ್ ದೇವರಕೊಂಡ ಅರೆ ನಗ್ನ ಫೋಟೋ ನೋಡಿ ರಶ್ಮಿಕಾ ಹೇಳಿದ್ದು ಹೀಗೆ

    ಟ್ವಿಟರ್ ಬಳಕೆದಾರರು ಈ ಕುರಿತು ಆಕ್ರೋಶ ವ್ಯಕ್ತ ಪಡಿಸಿದ್ದು, ಈ ನಿರ್ಮಾಪಕಿಯನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಕೋಟ್ಯಂತರ ಹಿಂದೂಗಳ ಭಾವನೆಗೆ ಆಕೆ ಧಕ್ಕೆ ಮಾಡಿದ್ದರಿಂದ, ಆ ಸಾಕ್ಷ್ಯ ಚಿತ್ರವನ್ನು ನಿಷೇಧ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ. ತಮಿಳು ನಾಡು ಮೂಲದ ಈ ಲೀನಾ ಸಲಿಂಗಿಗಳ ಬೆಂಬಲಕ್ಕೆ ಈ ಹಿಂದೆ ನಿಂತವರು ಎನ್ನುವುದು ವಿಶೇಷ.

    Live Tv
    [brid partner=56869869 player=32851 video=960834 autoplay=true]

  • ‘ಕೆಜಿಎಫ್ 2’ ರಾಕಿಭಾಯ್ ಪ್ರೇರಣೆಯಿಂದ ಆಸ್ಪತ್ರೆ ಸೇರಿದ 15 ವರ್ಷದ ಬಾಲಕ

    ‘ಕೆಜಿಎಫ್ 2’ ರಾಕಿಭಾಯ್ ಪ್ರೇರಣೆಯಿಂದ ಆಸ್ಪತ್ರೆ ಸೇರಿದ 15 ವರ್ಷದ ಬಾಲಕ

    ಸಿನಿಮಾಗಳಿಂದ ಯಾರು, ಯಾವ ರೀತಿಯ ಪ್ರೇರಣೆ ಪಡೆಯುತ್ತಾರೋ ಗೊತ್ತಿಲ್ಲ. ಆದರೆ, ಹೈದರಾಬಾದ್ ನ ಹುಡುಗನೊಬ್ಬ ಕೆಜಿಎಫ್ 2 ಸಿನಿಮಾದ ರಾಕಿಭಾಯ್ ಪ್ರೇರಣೆ ಪಡೆದು ಆಸ್ಪತ್ರೆ ಸೇರಿದ್ದಾನೆ. ಅವನ ಈ ಹುಚ್ಚಾಟಕ್ಕೆ ಕುಟುಂಬ ಆತಂಕ ಪಡುವಂತಾಗಿದೆ. ಇದನ್ನೂ ಓದಿ : ಪ್ರಭುದೇವ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾಗೆ ಸಂದೇಶ್ ನಾಗರಾಜ್ ನಿರ್ಮಾಪಕ

    ಕೆಜಿಎಫ್ 2 ಸಿನಿಮಾದಲ್ಲಿ ರಾಕಿಭಾಯ್, ಪ್ಯಾಕೆಟ್ ಗಟ್ಟಲೆ ಸಿಗರೇಟು ಸೇದುತ್ತಾನೆ, ಒಂದು ರೀತಿಯಲ್ಲಿ ಉಗಿಬಂಡೆ ಹೋದಂತೆ ಒಂದರ ಮೇಲೊಂದು ಸಿಗರೇಟು ಹಚ್ಚುತ್ತಾನೆ. ಇದನ್ನೇ ಮಾದರಿಯನ್ನಾಗಿ ತಗೆದುಕೊಂಡ  ಆ ಹುಡುಗ ಫುಲ್ ಪ್ಯಾಕ್ ಸಿಗರೇಟು ಸೇದಿದ್ದಾನೆ. ಪರಿಣಾಮ ತೀವ್ರ ಗಂಟಲು ನೋವು ಮತ್ತು ಕೆಮ್ಮು ಕಾಣಿಸಿಕೊಂಡಿದೆ. ವಿಷಯ ತಿಳಿದ ಪಾಲಕರು ಅವನನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಇದನ್ನೂ ಓದಿ : ಅಕ್ಟೋಬರ್ 3ಕ್ಕೆ ಅಭಿಷೇಕ್ ಅಂಬರೀಶ್ ಹೊಸ ಸಿನಿಮಾಗೆ ಮುಹೂರ್ತ

    ಅಂದಹಾಗೆ ಈ ಹುಡುಗ ಕೆಜಿಎಫ್ 2 ಸಿನಿಮಾವನ್ನು ಮೂರು ಬಾರಿ ನೋಡಿದ್ದಾನಂತೆ. ಥಿಯೇಟರ್ ನಿಂದ ಆಚೆ ಬರುತ್ತಿದ್ದಂತೆಯೇ ಥೇಟ್ ರಾಕಿಭಾಯ್ ತರಹ ಆಡುತ್ತಿದ್ದನಂತೆ. ಅದು ಅತಿರೇಕಕ್ಕೆ ಹೋಗಿ ಈಗ ಆಸ್ಪತ್ರೆ ಸೇರುವಂತಾಗಿದೆ. ಮಗನಿಗೆ ಚಿಕಿತ್ಸೆ ಕೊಡಿಸಿರುವ ಪಾಲಕರು, ಈ ರೀತಿ ಯಾರೂ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ : ‘ಮಾ ಇಷ್ಟಂ’ ಸಿನಿಮಾಗೆ ತಡೆಯಾಜ್ಞೆ ತಂದವರ ವಿರುದ್ಧವೇ ನಕಲಿ ಸಹಿ ದೂರು ನೀಡಿದ ವರ್ಮಾ

    ಈ ವಿಷಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ಈ ಕುರಿತು ಪರ ವಿರೋಧ ಚರ್ಚೆ ಶುರುವಾಗಿದೆ. ಸಿನಿಮಾ ನೋಡಿ ಈ ರೀತಿ ಮಾಡುವುದಾದರೆ, ಅದೆಷ್ಟೋ ಸಿನಿಮಾಗಳು ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಿವೆ. ಅದರಲ್ಲೂ ಡಾ.ರಾಜ್ ಕುಮಾರ್ ಅವರ ಬಂಗಾರದ ಮನುಷ್ಯ, ಸಮಾಜಕ್ಕೆ ನೀಡಿದ ಸಂದೇಶ ಎಂತಹದ್ದು ಅಂತ ಎಲ್ಲರಿಗೂ ಗೊತ್ತಿದೆ. ಆದರೆ, ಯಾರೂ ಬಂಗಾರದ ಮನುಷ್ಯ ಆಗಲಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ.