Tag: ಸಿಟಿರವಿ

  • ಭವ್ಯ ಮಂದಿರದ ಮುಂದೆ ನಿಂತಾಗ ಕಣ್ಣೀರು ತುಂಬಿ ಬಂತು- ಸಿ.ಟಿ.ರವಿ ದಂಪತಿಯಿಂದ ಬಾಲರಾಮನ ದರ್ಶನ

    ಭವ್ಯ ಮಂದಿರದ ಮುಂದೆ ನಿಂತಾಗ ಕಣ್ಣೀರು ತುಂಬಿ ಬಂತು- ಸಿ.ಟಿ.ರವಿ ದಂಪತಿಯಿಂದ ಬಾಲರಾಮನ ದರ್ಶನ

    ಬೆಂಗಳೂರು: ಮಾಜಿ ಸಚಿವ ಸಿ.ಟಿ.ರವಿ (C.T.Ravi) ದಂಪತಿ ಅಯೋಧ್ಯೆಗೆ ತೆರಳಿ ಬಾಲರಾಮನ (BalaRama) ದರ್ಶನವನ್ನು ಪಡೆದಿದ್ದಾರೆ.

    ಪ್ರಭು ಶ್ರೀರಾಮನ ದರ್ಶನ ಪಡೆದ ರವಿ ಅವರು ಫೋಟೋದೊಂದಿಗೆ ಬಾಲರಾಮನ ದರ್ಶನದ ಅನುಭವವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ  (Social Media) ಪೋಸ್ಟ್ ಮಾಡಿದ್ದಾರೆ. ಭವ್ಯ ಮಂದಿರದ ಮುಂದೆ ನಿಂತುಕೊಂಡವನಿಗೆ ಮೈಯೆಲ್ಲಾ ರೋಮಾಂಚನ, ಜೀವನ ಪಾವನವಾದ ಭಾವ ಎಂದು ಬರೆದುಕೊಂಡಿದ್ದಾರೆ.  ಇದನ್ನೂ ಓದಿ:  ಈಗ ಪರ್ಸಂಟೇಜ್ ಕಡಿಮೆ ಆಗಿದೆ, ಆದ್ರೆ ಎಷ್ಟಾಗಿದೆ ಗೊತ್ತಿಲ್ಲ- ಉಲ್ಟಾ ಹೊಡೆದ ಕೆಂಪಣ್ಣ

    ಅಯೋಧ್ಯಾ ರಾಮ ಜನ್ಮ ಭೂಮಿಯಲ್ಲಿ ಮರ್ಯಾದಾ ಪುರುಷೋತ್ತಮ ಪ್ರಭು ಶ್ರೀರಾಮ ಚಂದ್ರನ ಮಂದಿರ ನಿರ್ಮಾಣಕ್ಕಾಗಿ 500 ವರ್ಷಗಳ ಹೋರಾಟದ ನೆನಪಾಗಿ ಕಣ್ಣಲ್ಲಿ ನೀರು ತುಂಬಿ ಬಂತು. ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಿರುವ ಸಂತೋಷಕ್ಕೋ ಅಥವಾ ಮಂದಿರ ನಿರ್ಮಾಣಕ್ಕೆ ತ್ಯಾಗ ಬಲಿದಾನ ಮಾಡಿದ ಲಕ್ಷಾಂತರ ಜನರಿಗಾಗಿ ಮೂಡಿದ ಅಶ್ರುತರ್ಪಣವೋ? ನಾನರಿಯೆ ಎಂದು ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸರ್ಕಾರ ಏನು ಮನೆ-ಮನೆ ಬೆಡ್‌ರೂಮ್‌ಗೆ ಹೋಗುತ್ತಾ? – ಲಿವ್‌ಇನ್‌ ರಿಲೇಷನ್‌ ನೋಂದಣಿ ಕಡ್ಡಾಯಕ್ಕೆ ಮಹಿಳಾ ಹೋರಾಟಗಾರ್ತಿ ವಿರೋಧ

    ಸರಯೂ ತೀರದಲ್ಲಿ ಗುಲಾಮಗಿರಿಯ ಪ್ರತೀಕವಾಗಿ ನಿಂತಿದ್ದ ವಿವಾದಿತ ಕಟ್ಟಡವನ್ನು ಕೆಡವಲು, ರಾಷ್ಟ್ರ ಪುರುಷ ರಾಮನಿಗೆ ಭವ್ಯ ರಾಷ್ಟ್ರ  ಮಂದಿರವನ್ನು ಕಟ್ಟಲು ನಡೆಸಿದ ಕರಸೇವೆ, ಜೊತೆಗಿದ್ದ ಕರಸೇವಕರು, ಸರಯೂ ನದಿಯಿಂದ ತಂದ ಮರಳಿನ ರಾಶಿ, ಮೈ ಮೇಲಿದ್ದ ಲಾಠಿಯೇಟಿನ ಬಾಸುಂಡೆಗಳು, ಗುಮ್ಮಟ ಪತನ, ತಾತ್ಕಾಲಿಕ ಮಂದಿರ ನಿರ್ಮಾಣಕ್ಕೆ ಇಟ್ಟಿಗೆ ಹೊತ್ತದ್ದು, ಹುತಾತ್ಮ ಕರಸೇವಕರ ದೇಹಗಳು, ನೋವಿನಿಂದ ನರಳುತ್ತಿದ್ದ ಕರಸೇವಕರು, ಕರಸೇವಕರನ್ನು ಮಕ್ಕಳ ಹಾಗೆ ನೋಡಿಕೊಂಡ ದೇಶದ ಮಾತೆಯರು, ಇವರೆಲ್ಲರೂ ನನ್ನ ಸ್ಮೃತಿ ಪಟಲದಲ್ಲಿ ಹಾದು ಹೋದರು. ಇಂದು ಪತ್ನಿಯೊಂದಿಗೆ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಪ್ರಭು ಶ್ರೀರಾಮ ಚಂದ್ರನ ದರ್ಶನ ಮಾಡುವಂತಾಗಿದ್ದು ನನ್ನ ಪಾಲಿನ ಸೌಭಾಗ್ಯ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹೆಲ್ಮೆಟ್‌ ಹಾಕಿಲ್ಲವೆಂದು ತಡೆದಿದ್ದಕ್ಕೆ ಟ್ರಾಫಿಕ್‌ ಪೊಲೀಸ್‌ ಕೈ ಬೆರಳನ್ನೇ ಕಚ್ಚಿದ ಭೂಪ!

  • ಬಿಎಸ್‍ವೈ ನಮ್ಮ ನಾಯಕ, ಹೈಕಮಾಂಡ್ ಟಿಕೆಟ್ ನಿರ್ಧಾರ ಮಾಡ್ತಾರೆ: ಸಿಟಿ ರವಿ

    ಬಿಎಸ್‍ವೈ ನಮ್ಮ ನಾಯಕ, ಹೈಕಮಾಂಡ್ ಟಿಕೆಟ್ ನಿರ್ಧಾರ ಮಾಡ್ತಾರೆ: ಸಿಟಿ ರವಿ

    ರಾಯಚೂರು: ಜಿಲ್ಲೆಯ ಲಿಂಗಸುಗೂರು ಹಾಗೂ ರಾಯಚೂರು ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳಲ್ಲಿ ಅಸಮಾಧಾನ ಉಂಟಾದ ಹಿನ್ನೆಲೆಯಲ್ಲಿ ಮಾಜಿ ಸಚಿವ ಸಿಟಿ ರವಿ ಹಾಗೂ ಸೋಮಣ್ಣ ಸಂಧಾನ ಸಭೆ ನಡೆಸಿದರು.

    ರಾಯಚೂರಿನ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಿ ಬಳಿಕ ಮಾತನಾಡಿದ ಸಿ.ಟಿ.ರವಿ, ಲಿಂಗಸುಗೂರು ಮತ್ತು ರಾಯಚೂರು ನಗರ ಕ್ಷೇತ್ರದ ಅಭ್ಯರ್ಥಿಗಳ ಹೆಸರು ಅಂತಿಮವಾಗಿಲ್ಲ ಎಂದು ತಿಳಿಸಿದರು.

    ಈ ವೇಳೆ ಮಾಧ್ಯಮಗಳು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಿಂದೆ ಡಾ. ಶಿವರಾಜ್ ಪಾಟೀಲ್ ಮತ್ತು ಮಾನಪ್ಪ ವಜ್ಜಲ್ ಹೆಸರು ಘೊಷಿಸಿದ್ದಾರಲ್ಲ ಎಂದು ಮರು ಪ್ರಶ್ನೆ ಹಾಕಿದ್ದಕ್ಕೆ ಸಿಟಿ ರವಿ, ನಾನು ಯಡಿಯೂರಪ್ಪ ಅವರ ಹೇಳಿಕೆಯನ್ನು ವಿರೋಧಿಸುವಿಲ್ಲ. ಅವರು ನಮ್ಮ ಪಕ್ಷದ ಮುಖವಾಣಿ. ಟಿಕೆಟ್ ಯಾರಿಗೆ ನೀಡಬೇಕು ಎನ್ನುವುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಸ್ಪಷ್ಟ ಪಡಿಸಿದರು.

    ಪಾರ್ಲಿಮೆಂಟರಿ ಬೋರ್ಡ್ ಅಭ್ಯರ್ಥಿಗಳನ್ನ ಅಂತಿಮಗೊಳಿಸಲಿದೆ ಅಂತ ಅತೃಪ್ತ 12 ಜನ ಆಕಾಂಕ್ಷಿಗಳ ಜೊತೆ ಸಭೆ ಮಾಡಿದ ಬಳಿಕ ಸಿಟಿ ರವಿ ಹೇಳಿದರು.