Tag: ಸಿಟಿ ಸ್ಕ್ಯಾನ್

  • ರಾಜ್ಯದ 14 ಜಿಲ್ಲಾಸ್ಪತ್ರೆಗಳಲ್ಲಿ ಸಿಟಿ, ಎಂಆರ್‌ಐ ಸ್ಕ್ಯಾನಿಂಗ್‌ ಸೇವೆಗೆ ಅನುದಾನದ ಕೊರತೆಯಿಲ್ಲ: ಆರೋಗ್ಯ ಇಲಾಖೆ ಸ್ಪಷ್ಟನೆ

    ರಾಜ್ಯದ 14 ಜಿಲ್ಲಾಸ್ಪತ್ರೆಗಳಲ್ಲಿ ಸಿಟಿ, ಎಂಆರ್‌ಐ ಸ್ಕ್ಯಾನಿಂಗ್‌ ಸೇವೆಗೆ ಅನುದಾನದ ಕೊರತೆಯಿಲ್ಲ: ಆರೋಗ್ಯ ಇಲಾಖೆ ಸ್ಪಷ್ಟನೆ

    ಬೆಂಗಳೂರು: ರಾಜ್ಯದಲ್ಲಿ 14 ಜಿಲ್ಲಾಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್ (CT Scan) ಹಾಗೂ ಎಂಆರ್‌ಐ ಸ್ಕ್ಯಾನಿಂಗ್‌ (MRI Scan) ಸೇವೆಗಳು ಸ್ಥಗಿತಗೊಂಡಿವೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿ ಎಂದು ಆರೋಗ್ಯ ಇಲಾಖೆ (Health Department) ಸ್ಪಷ್ಟನೆ ನೀಡಿದೆ.

    ಈ ಕುರಿತು ಮಾಧ್ಯಮಗಳಲ್ಲಿ ವರದಿ ಬಂದ ಹಿನ್ನೆಲೆಯಲ್ಲಿ ತಕ್ಷಣ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಅವರು ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಆರೋಗ್ಯ ಇಲಾಖೆ ಮಾಧ್ಯಮಗಳಲ್ಲಿ ಬಂದಿರುವ ವರದಿ ನಿರಾಧಾರ ಎಂದಿದೆ.ಇದನ್ನೂ ಓದಿ: ಗುತ್ತಿಗೆಯಲ್ಲಿ ಮೀಸಲಾತಿ ಕೊಡಿ – ಅಧಿಕಾರಿಗಳಿಗೆ ನರೇಂದ್ರಸ್ವಾಮಿ ಸೂಚನೆ

    ರಾಜ್ಯದಲ್ಲಿ ಸಿಟಿ ಮತ್ತು ಎಂಆರ್‌ಐ ಸ್ಕ್ಯಾನಿಂಗ್‌ ಸೇವೆಗಳಿಗೆ ಅನುದಾನದ ಕೊರತೆಯಿದೆ ಎಂಬ ಮಾಧ್ಯಮ ವರದಿಗಳು ಆಧಾರ ರಹಿತವಾಗಿದೆ. ಸಿಟಿ ಮತ್ತು ಎಂಆರ್‌ಐ ಸ್ಕ್ಯಾನಿಂಗ್‌ ಸೇವೆಗಳಿಗೆ ಅಗತ್ಯವಿರುವ 63.49 ಕೋಟಿ ರೂ. ಅನುದಾನ ಆರೋಗ್ಯ ಇಲಾಖೆಯ ಬಳಿ ಲಭ್ಯವಿದ್ದು, ಯಾವುದೇ ರೀತಿಯ ಅನುದಾನದ ಕೊರತೆಯಾಗಿಲ್ಲ ಎಂದು ಇಲಾಖೆ ಸ್ಪಷ್ಟನೆ ನೀಡಿದೆ.

    ರಾಜ್ಯದಲ್ಲಿ ಒಟ್ಟು 3 ಸಂಸ್ಥೆಗಳು ಸಿಟಿ ಮತ್ತು ಎಂಆರ್‌ಐ ಸ್ಕ್ಯಾನಿಂಗ್‌ ಸೇವೆಗಳನ್ನು ಒದಗಿಸುತ್ತಿವೆ. ಅದರಲ್ಲಿ ಕೃಷ್ಣ ಡಯಾಗ್ನೋಸ್ಟಿಕ್ ಸಂಸ್ಥೆಯು ಬಿಲ್ ಪಾವತಿಗಾಗಿ ನೀಡಿದ ದಾಖಲಾತಿಗಳಲ್ಲಿ ಮಾಹಿತಿ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ವಿವರಣೆ ಕೇಳಲಾಗಿದೆ. ಜೂನ್ & ಜುಲೈ 2 ತಿಂಗಳುಗಳ ಬಿಲ್ ಪಾವತಿಯಲ್ಲಿ ಮಾತ್ರವೇ ವಿಳಂಬವಾಗಿದೆ. ಉಳಿದ ಸಂಸ್ಥೆಗಳ ಬಿಲ್ ಪಾವತಿಯಲ್ಲಿ ಯಾವುದೇ ಬಾಕಿ ಇರುವುದಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.

    ಇಲಾಖೆ ಕೇಳಿರುವ ಪೂರಕ ಮಾಹಿತಿಯನ್ನ ಕೃಷ್ಣ ಡಯಾಗ್ನೋಸ್ಟಿಕ್ ಸಂಸ್ಥೆ (Krsnaa Diagnostics) ಒದಗಿಸಿದ ತಕ್ಷಣ ಬಾಕಿ ಬಿಲ್ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು. ಈ ಸಂಸ್ಥೆಯಿಂದ ಆಗಿರುವ ಸಿಟಿ ಮತ್ತು ಎಂಆರ್‌ಐ ಸ್ಕ್ಯಾನಿಂಗ್‌ ಸೇವೆಗಳ ವ್ಯತ್ಯಯವನ್ನು ಸರಿಪಡಿಸಲು ಬದಲಿ ಕ್ರಮವನ್ನೂ ಈಗಾಗಲೇ ಕೈಗೊಳ್ಳಲಾಗಿದೆ. ಈ ಕೂಡಲೇ ಸಿಟಿ ಮತ್ತು ಎಂಆರ್‌ಐ ಸ್ಕ್ಯಾನಿಂಗ್‌ ಸೇವೆಗಳನ್ನು ಪುನರಾರಂಭಿಸಲು ಸಂಸ್ಥೆಯ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ವ್ಯತ್ಯಯ ಕಂಡುಬಂದಲ್ಲಿ ಕೃಷ್ಣ ಡಯಾಗ್ನೋಸ್ಟಿಕ್ ಸಂಸ್ಥೆಯ ವಿರುದ್ಧ ಇಲಾಖೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.ಇದನ್ನೂ ಓದಿ: ಮಗುವಿನ ಜನನದ ಬಗ್ಗೆ ಅನುಮಾನ – 5 ವರ್ಷದ ಮಗುವನ್ನೇ ಕೊಂದ ಪಾಪಿ ತಂದೆ!

  • ವೃದ್ಧೆಯನ್ನು ಸೆಕ್ಸ್‌ಗೆ ಪೀಡಿಸಿದ್ದ ಆರೋಪ- ಯುವಕ ಅರೆಸ್ಟ್

    ವೃದ್ಧೆಯನ್ನು ಸೆಕ್ಸ್‌ಗೆ ಪೀಡಿಸಿದ್ದ ಆರೋಪ- ಯುವಕ ಅರೆಸ್ಟ್

    ಬೆಂಗಳೂರು: ವೃದ್ಧೆಯನ್ನು ಸೆಕ್ಸ್ ಗೆ ಪೀಡಿಸಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

    ಅಶೋಕ್ ಬಂಧಿತ ಆರೋಪಿ. ಈತ ಖಾಸಗಿ ಆಸ್ಪತ್ರೆ ಸಿಟಿ ಸ್ಕ್ಯಾನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ. ಆಗಸ್ಟ್ 3 ರಂದು ವೃದ್ಧೆಯೊಬ್ಬರು ಅನಾರೋಗ್ಯದಿಂದ ಹೆಬ್ಬಾಳದಲ್ಲಿರೋ (Hebbal Hospital) ಆಸ್ಪತ್ರೆಗೆ ದಾಖಲಾಗಿದ್ದರು.

    ಆಗಸ್ಟ್ 4 ಬೆಳಗ್ಗಿನ ಜಾವ 1:30ರ ವೇಳೆಗೆ ವೃದ್ಧೆಯನ್ನು ಸಿಟಿ ಸ್ಕ್ಯಾನ್‍ಗೆ ಕರೆದೊಯ್ದು ಕೃತ್ಯ ಎಸಗಿದ್ದಾನೆ. ಈ ಹಿನ್ನೆಲೆಯಲ್ಲಿ ಸಿಟಿ ಸ್ಕ್ಯಾನ್ ಮೆಷಿನ್ ಮೇಲೆ ಮಲಗಿಸಿ ವಿವಸ್ತ್ರಗೊಳಿಸಿದ್ದ. ಬಳಿಕ ಸೆಕ್ಸ್ ಗೆ ಸಹಕರಿಸುವಂತೆ ಪೀಡಿಸಿದ್ದಾಗಿ ವೃದ್ಧೆ ಆರೋಪಿಸಿ ದೂರು ದಾಖಲಿಸಿದ್ದರು. ಇದನ್ನೂ ಓದಿ: ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ಕಾರು ಡಿಕ್ಕಿ – ಬೈಕ್ ಸವಾರ ಸಾವು

    ಸದ್ಯ ಸಂತ್ರಸ್ತೆ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಆರೋಪಿ ವಿರುದ್ಧ ಕೊಡಿಗೇಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 8 ಅಡಿ ಉದ್ದದ ಹೆಬ್ಬಾವಿಗೆ ಸಿಟಿ ಸ್ಕ್ಯಾನ್!

    8 ಅಡಿ ಉದ್ದದ ಹೆಬ್ಬಾವಿಗೆ ಸಿಟಿ ಸ್ಕ್ಯಾನ್!

    ನವದೆಹಲಿ: ಗಂಭೀರವಾಗಿ ಗಾಯಗೊಂಡಿದ್ದ 8 ಅಡಿ ಉದ್ದದ ಹೆಬ್ಬಾವು ಚಿಕಿತ್ಸೆ ವೇಳೆ ಕಂಪ್ಯೂಟೆಡ್ ಟೊಮೊಗ್ರಪಿ/ಸಿಟಿ ಸ್ಕ್ಯಾನ್‍ಗೆ ಒಳಪಟ್ಟ ಘಟನೆ ಭಾನುವಾರದಂದು ಭುವನೇಶ್ವರ್‍ನಲ್ಲಿ ನಡೆದಿದೆ.

    ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದ ಈ ಹಾವಿನ ಸಿಟಿ ಸ್ಕ್ಯಾನ್ ಬಹುಶಃ ಭಾರತದಲ್ಲಿ ಇದೇ ಮೊದಲು ಎಂದು ಉರಗ ರಕ್ಷಕ ಸುಭೇಂದು ಮಲ್ಲಿಕ್ ಹೇಳಿದ್ದಾರೆ. 4 ದಿನಗಳ ಹಿಂದೆ ಭುವನೇಶ್ವರದಿಂದ 130 ಕಿ.ಮೀ ದೂರದಲ್ಲಿರುವ ಕಿಯೊಂಜಾರ್ ಜಿಲ್ಲೆಯ ಆನಂದಪುರ್‍ನಲ್ಲಿ ಗಾಯಗೊಂಡಿದ್ದ ಹಾವು ಪತ್ತೆಯಾಗಿತ್ತು. ಅರಣ್ಯ ಇಲಾಖೆಯವರು ಹಾವನ್ನ ರಕ್ಷಣೆ ಮಾಡಿದ್ದರು. ಒಡಿಶಾದಲ್ಲಿ ಹಾವುಗಳ ರಕ್ಷಣೆ ಹಾಗೂ ಅವುಗಳ ಆರೋಗ್ಯದ ಉದ್ದೇಶದಿಂದ ನಿರ್ಮಿಸಲಾಗಿರೋ 60 ಸದಸ್ಯರ ಸ್ನೇಕ್ ಹೆಲ್ಪ್‍ಲೈನ್ ಸಂಸ್ಥೆಗೆ ಹಾವನ್ನ ಒಪ್ಪಿಸಲಾಗಿತ್ತು.

    ಶುಕ್ರವಾರದಂದು ರೇಂಜ್ ಆಫೀಸರ್ ಮಿಹಿರ್ ಪಟ್ನಾಯ್ಕ್ ಗಂಭೀರವಾಗಿ ಗಾಯಗೊಂಡಿದ್ದ ಹಾವನ್ನ ಒಡಿಶಾ ಕೃಷಿ ಹಾಗೂ ತಾಂತ್ರಿಕ ವಿಶ್ವವಿದ್ಯಾಲಯದ ಪಶುವೈದ್ಯ ವಿಜ್ಞಾನ ಕಾಲೇಜಿಗೆ ತಂದಿದ್ರು. ಮೊದಲು ಎಕ್ಸ್‍ರೇ ತೆಗೆದಾಗ ಹಾವಿಗೆ ಆಗಿರುವ ಗಾಯದ ಬಗ್ಗೆ ಹೆಚ್ಚಾಗಿ ತಿಳಿಯಲಿಲ್ಲ. ಹೀಗಾಗಿ ಹಾವನ್ನ ಸ್ನೇಕ್ ಹೆಲ್ಪ್‍ಲೈನ್‍ನವರು ನೋಡಿಕೊಳ್ತಿದ್ರು.

    ವೈದ್ಯಕೀಯ ಪುಸ್ತಕಗಳನ್ನ ಓದಿ, ಸಾಕಷ್ಟು ಸಂಶೋಧನೆ ನಡೆಸಿದ ನಂತರ ಹಾವಿನ ಗಾಯದ ಬಗ್ಗೆ ತಿಳಿದುಕೊಳ್ಳಲು ಸಿಟಿ ಸ್ಕ್ಯಾನ್ ಮಾಡಲು ನಿರ್ಧರಿಸಲಾಯಿತು ಎಂದು ಮಲ್ಲಿಕ್ ಹೇಳಿದ್ದಾರೆ.

    ಸರ್ಕಾರಿ ಆಸ್ಪತ್ರೆಗೆಳಲ್ಲಿ ಈ ಸೌಲಭ್ಯವಿಲ್ಲದ ಕಾರಣ ಸಿಟಿ ಸ್ಕ್ಯಾನ್‍ಗಾಗಿ ಹಾವನ್ನ ಒಳಗೆ ತರಲು ಖಾಸಗಿ ಕ್ಲಿನಿಕ್‍ವೊಂದರ ವೈದ್ಯರ ಮನವೊಲಿಸಿದೆವು. ನಂತರ ಅಷ್ಟು ಉದ್ದದ ಹಾವಿನ ಸಿಟಿ ಸ್ಕ್ಯಾನ್ ಸ್ಪಷ್ಟವಾಗಿ ಪಡೆಯಬೇಕಾದ್ರೆ ಅದನ್ನ ಅಲುಗಾಡದಂತೆ ನೋಡಿಕೊಳ್ಳುವುದು ಹೇಗೆ ಎಂಬುದು ಸವಾಲಾಗಿತ್ತು. ವಿದೇಶಗಳಲ್ಲಿ ಹೆಬ್ಬಾವುಗಳಿಗೆ ಅರವಳಿಕೆ ಕೊಟ್ಟ ಪ್ರಕರಣಗಳು ಇವೆ. ಆದ್ರೂ ಭಾರತದಲ್ಲಿ ಅದನ್ನು ಮಾಡಲು ನಮಗೆ ಭಯವಾಗಿತ್ತು. ಇಷ್ಟೆಲ್ಲಾ ಗೊಂದಲದ ನಂತರ ಮೆಡಿಕಲ್ ಟೇಪ್ ಬಳಸಿ ಹಾವನ್ನ ಹಿಡಿದುಕೊಳ್ಳಲು ನಿರ್ಧರಿಸಿದೆವು. ಸಿಟಿ ಸ್ಕ್ಯಾನ್‍ನಿಂದ ಹೆಬ್ಬಾವಿನ ಆಂತರಿಕ ಗಾಯಗಳ ಬಗ್ಗೆ ಗೊತ್ತಾಯಿತು. ತಲೆಯ ಭಾಗದಲ್ಲೂ ಗಂಭೀರ ಪೆಟ್ಟಾಗಿತ್ತು ಎಂದು ಅವರು ಹೇಳಿದ್ದಾರೆ.

    ಮುಂದೆ ಇದರ ಪ್ರತಿಯನ್ನು ಅಂತಾರಾಷ್ಟ್ರೀಯ ತಜ್ಞರಿಗೆ ಕಳಿಸಿ ಅವರ ಮಾರ್ಗದರ್ಶನದಂತೆ ಮುಂದಿನ ಹೆಜ್ಜೆಯಿಡಬೇಕೆಂದುಕೊಂಡಿದ್ದೇನೆ ಎಂದು ಮಲ್ಲಿಕ್ ತಿಳಿಸಿದ್ದಾರೆ. ಹೆಬ್ಬಾವಿಗೆ ಚಿಕಿತ್ಸೆ ಮುಂದುವರೆಯಲಿದೆ ಎಂದು ವರದಿಯಾಗಿದೆ.