Tag: ಸಿಡಬ್ಲ್ಯುಸಿ

  • ರಾಹುಲ್ ಗಾಂಧಿ ಮತ್ತೆ ಎಐಸಿಸಿ ಅಧ್ಯಕ್ಷರಾಗಬೇಕು- CWC ಸಭೆಯಲ್ಲಿ ಒತ್ತಡ

    ರಾಹುಲ್ ಗಾಂಧಿ ಮತ್ತೆ ಎಐಸಿಸಿ ಅಧ್ಯಕ್ಷರಾಗಬೇಕು- CWC ಸಭೆಯಲ್ಲಿ ಒತ್ತಡ

    ನವದೆಹಲಿ: ಪಂಚರಾಜ್ಯ ಚುನಾವಣೆಯಲ್ಲಿ ಸೋಲುಂಡಿರುವ ಕಾಂಗ್ರೆಸ್ (Congress) ಹಲವು ಬದಲಾವಣೆಗೆ ಮುಂದಾಗಿದೆ. ದೆಹಲಿಯಲ್ಲಿ ಇಂದು ಉನ್ನತ ಮಟ್ಟದ ಸಭೆ ನಡೆಸಿತ್ತು.

    ಸೋನಿಯಾ ಗಾಂಧಿ(Sonia Gandhi), ರಾಹುಲ್ ಗಾಂಧಿ (Rahul Gandhi), ಪ್ರಿಯಾಂಕಾ ಗಾಂಧಿ (Priyanka Gandhi) ರಾಜೀನಾಮೆ ನೀಡ್ತಾರೆ ಅಂತ ಸುದ್ದಿಯಾಗಿತ್ತು. ಆದರೆ ಇದನ್ನು ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ (Randeep Surjewala) ತಿರಸ್ಕರಿಸಿದರು.

    ಇಂದಿನ ಕಾಂಗ್ರೆಸ್ ವರ್ಕಿಂಗ್ ಕಮಿಟಿ(CWC) ಸಭೆಯಲ್ಲಿ (ಅಖಿಲ ಭಾರತ ಕಾಂಗ್ರೆಸ್ ಸಮಿತಿ(AICC) ಅಧ್ಯಕ್ಷರಾಗಿ ರಾಹುಲ್ ಗಾಂಧಿ ಮತ್ತೆ ಅಧ್ಯಕ್ಷರಾಗಬೇಕು ಅನ್ನೋ ಒತ್ತಾಯ ಕೇಳಿಬಂದಿದೆ. ಇದನ್ನೂ ಓದಿ: ನಿಮ್ಮನ್ನ ಚಾಮುಂಡೇಶ್ವರಿ ಕ್ಷೇತ್ರದ ಜನರೇ ತಿರಸ್ಕಾರ ಮಾಡಿದ್ದಾರೆ: ಸಿದ್ದು ಕಾಲೆಳೆದ ಬಿಜೆಪಿ

    ಸೆಪ್ಟೆಂಬರ್ ಗೆ ನಡೆಯಲಿರುವ ಆಂತರಿಕ ಚುನಾವಣೆಗೂ ಮೊದಲೇ ರಾಹುಲ್ ಗಾಂಧಿ ಜವಬ್ದಾರಿ ವಹಿಸಿಕೊಳ್ಳಬೇಕು. ಪ್ರಧಾನಿ ಮೋದಿ ರಾಹುಲ್ ಗಾಂಧಿಯನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಪ್ರತಿ ಭಾಷಣದಲ್ಲೂ ರಾಹುಲ್ ಟಾರ್ಗೆಟ್ ಆಗಿದ್ದಾರೆ ಅಂದ್ರೆ ರಾಹುಲ್ ಗಾಂಧಿ ಪ್ರಬಲ ಸ್ಪರ್ಧಿ ಎಂದು ಅವರಿಗೆ ತಿಳಿದಿದೆ ಎಂದು ಸಿಎಂ ಅಶೋಕ್ ಗೆಹ್ಲೋಟ್ (Ashok Gehlot) ಹೇಳಿದ್ದಾರೆ.

    ದೆಹಲಿಯ ಕಾಂಗ್ರೆಸ್ ನಾಯಕರನ್ನು ಒಳಗೊಂಡ ಗುಂಪು, ಯುವ ಕಾಂಗ್ರೆಸ್ ಮುಖ್ಯಸ್ಥ ಬಿ.ವಿ ಶ್ರೀನಿವಾಸ್ ಸೇರಿ ಹಲವರು ರಾಹುಲ್ ಗಾಂಧಿಯೇ ಅಧ್ಯಕ್ಷರಾಗಬೇಕು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಸಸಿದರು. ಇದನ್ನೂ ಓದಿ: ನಾನು ಸಂಪುಟ ಸೇರ್ಪಡೆಯಾಗುವುದು ಕೇವಲ ಉಹಾಪೋಹ, ನನಗೆ ಯಾವುದೇ ಆಸೆಯಿಲ್ಲ: ಬಿ.ವೈ.ವಿಜಯೇಂದ್ರ

    ಈ ನಡುವೆ ಜಿ23 ನಾಯಕರು ಮುಕುಲ್ ವಾಸ್ನಿಕ್ ಗೆ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಈ ನಡುವೆ ಒತ್ತಾಯಿಸಿದ್ದಾರೆ. ಉತ್ತರಾಖಂಡ್ ಗೆಲುವಿಗೆ ಕಾರಣರಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಹುಬ್ಬಳ್ಳಿಯಲ್ಲಿ ಅದ್ಧೂರಿ ಸ್ವಾಗತ ಸಿಕ್ತು. ಈ ವೇಳೆ ಮಾತಾನಾಡಿದ ಜೋಶಿ, ಡಿಕೆಶಿ ಗೋವಾಕ್ಕೆ ಹೋಗಿರೋ ಬಗ್ಗೆ ವ್ಯಂಗ್ಯವಾಡಿದ್ರು. ತೋಳ್ಬಲ ಹಾಗೂ ಗೂಂಡಾಗಿರಿ ಮಾಡಲು ಡಿಕೆಶಿ ಗೋವಾಗೆ ಹೋಗಿದ್ರಾ..? ಕಾಂಗ್ರೆಸ್ ನಡೆ ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದಂತೆ ವ್ಯಂಗ್ಯವಾಡಿದ್ರು.

  • ಮೃತ ತಾಯಿಯ ತೋಳುಗಳಲ್ಲಿ 2 ರಾತ್ರಿಗಳನ್ನು ಕಳೆದ 3 ರ ಬಾಲಕಿ!

    ಮೃತ ತಾಯಿಯ ತೋಳುಗಳಲ್ಲಿ 2 ರಾತ್ರಿಗಳನ್ನು ಕಳೆದ 3 ರ ಬಾಲಕಿ!

    ಭುವನೇಶ್ವರ್: 3 ವರ್ಷದ ಬಾಲಕಿ ತನ್ನ ಮೃತ ತಾಯಿಯ ತೋಳುಗಳಲ್ಲಿ ಎರಡು ರಾತ್ರಿಗಳನ್ನು ಕಳೆದ ಘಟನೆ ಒಡಿಶಾದ ಬಲಂಗೀರ್ ಜಿಲ್ಲೆಯ ಸಾಗರ್‌ಪಾಡಾ ಪ್ರದೇಶದ ಶಿವ ದೇವಾಲಯದ ಬಳಿಯ ಒಂದು ಕೋಣೆಯ ಬಾಡಿಗೆ ಮನೆಯಲ್ಲಿ ನಡೆದಿದೆ.

    ಕುನಿ ನಾಯ್ಕ್ ಮೃತ ಮಹಿಳೆ. ತಾಯಿಯ ಬಾಯಿಯಿಂದ ಕೀಟಗಳು ಹೊರಬರುವುದನ್ನು ಬಾಲಕಿಯು ಗಮನಿಸಿದ್ದು, ಸಹಾಯಕ್ಕಾಗಿ ಅಳುತ್ತಾ ತನ್ನ ನೆರೆಹೊರೆಯವರ ಬಳಿಗೆ ಹೋಗಿದ್ದಾಳೆ. ಅಕ್ಕಪಕ್ಕದವರು ಮೃತಳ ಮನೆಗೆ ಧಾವಿಸಿ ನೋಡಿದಾಗ ಆಕೆ ಶವವಾಗಿ ಬಿದ್ದಿರುವುದನ್ನು ಕಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಬೋಳಂಗಿರ್ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಾಲಕಿಯನ್ನು ಚೈಲ್ಡ್ ಲೈನ್ ಮೂಲಕ ಸಮೀಪದ (ಸಿಡಬ್ಲ್ಯುಸಿ) ಮಕ್ಕಳ ಕಲ್ಯಾಣ ಸಮಿತಿ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಇದನ್ನೂ ಓದಿ: ನಾಳೆಯಿಂದ ಜ.4ರ ವರೆಗೆ ರಾತ್ರಿ 10 ಗಂಟೆಯಿಂದ ಎಲ್ಲಾ ಫ್ಲೈಓವರ್ ಕ್ಲೋಸ್: ಕಮಲ್ ಪಂಥ್

    ಮೃತ ಮಹಿಳೆಯು ಸಾಗರ್‌ಪಾಡಾ ಪ್ರದೇಶದಲ್ಲಿ ಮನೆಕೆಲಸಗಾರ್ತಿಯಾಗಿ ಕೆಲಸ ಮಾಡುತ್ತಿದ್ದಳು. ತನ್ನ ಅತ್ತೆ ಮತ್ತು ಪೋಷಕರಿಂದ ಬೇರ್ಪಟ್ಟು, ತನ್ನ ಮೂರು ವರ್ಷದ ಮಗಳೊಂದಿಗೆ ವಾಸಿಸುತ್ತಿದ್ದಳು. ಎರಡು ಮೂರು ದಿನಗಳ ಹಿಂದೆ ಕುನಿ ನಾಯ್ಕ್ ಮೃತಪಟ್ಟಿದ್ದಳು. ನೆರೆಹೊರೆಯವರು ನೀರು ಮತ್ತು ಆಹಾರವನ್ನು ತರುವ ಮೊದಲು ಬಾಲಕಿ ಮೂರು ದಿನಗಳಿಂದ ಹಸಿವಿನಿಂದ ಬಳಲುತ್ತಿದ್ದಳು ಎಂದು ಸದರ್ ಪೊಲೀಸ್‌ನ ಎಸ್‌ಡಿಪಿಒ ತೂಫಾನ್ ಬಾಗ್ ಹೇಳಿದರು. ಇದನ್ನೂ ಓದಿ: ಚರಂಡಿ ಸ್ವಚ್ಛಗೊಳಿಸುವ ವಿಚಾರಕ್ಕೆ ಜಗಳ – ದೆಹಲಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಮಗನ ಹತ್ಯೆ

    ನಾವು ಬಾಲಕಿಯನ್ನು ರಕ್ಷಿಸಿದ್ದೇವೆ. ಸದ್ಯಕ್ಕೆ ಆಕೆಯನ್ನು ಮಕ್ಕಳ ಸಹಾಯವಾಣಿ ಕೇಂದ್ರದಲ್ಲಿ ಇರಿಸಲಾಗಿದ್ದು, ಆಕೆಯ ಸಂಬAಧಿಕರನ್ನು ಸಂಪರ್ಕಿಸಿ ಹಸ್ತಾಂತರಿಸಲು ನಾವು ಪ್ರಯತ್ನಿಸುತ್ತೇವೆ ಎಂದು ಚೈಲ್ಡ್ಲೈನ್ ತಂಡದ ಸದಸ್ಯ ಬಿಜಯ್ ಕುಮಾರ್ ಸಾಹು ಹೇಳಿದರು. ಇತ್ತ ಸದರ್ ಪೊಲೀಸರು ಮಹಿಳೆಯ ಕೊಳೆತ ದೇಹವನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

  • ಕಾಂಗ್ರೆಸ್ ಉಳಿಸಲು ಯಾರಿಂದಲೂ ಸಾಧ್ಯವಿಲ್ಲ: ಶಿವರಾಜ್ ಸಿಂಗ್ ಚೌವ್ಹಾಣ್

    ಕಾಂಗ್ರೆಸ್ ಉಳಿಸಲು ಯಾರಿಂದಲೂ ಸಾಧ್ಯವಿಲ್ಲ: ಶಿವರಾಜ್ ಸಿಂಗ್ ಚೌವ್ಹಾಣ್

    – ಕಾಂಗ್ರೆಸ್ ವಿರುದ್ಧ ಮಾತಾಡಿದ್ರೆ ಬಿಜೆಪಿ ಜೊತೆ ಶಾಮೀಲು ಅಂತಾರೆ

    ಭೋಪಾಲ್: ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಗದ್ದಲ, ಗುಂಪುಗಾರಿಕೆ ಉಂಟಾಗಿರುವುದು ಭಾರೀ ಚರ್ಚೆ ಕಾರಣವಾಗಿದೆ. ಮಾತ್ರವಲ್ಲ ಸಭೆಯಲ್ಲಿ ಪಕ್ಷದ ನಾಯಕತ್ವದ ಕುರಿತು ಮಾತನಾಡಿದವರಿಗೆ ಬಿಜೆಪಿ ಜೊತೆ ಒಡನಾಟ ಹೊಂದಿದ್ದಾರೆ ಎಂದು ಸಹ ಹೇಳಲಾಗಿದೆ ಎಂದು ವರದಿಯಾಗಿದೆ. ಈ ಕುರಿತು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಭೆಯಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಅವರು ಧ್ವನಿ ಎತ್ತುತ್ತಿದ್ದಂತೆ ಬಿಜೆಪಿ ಜೊತೆ ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು. ನಂತರ ಗುಲಾಮ್ ನಬಿ ಆಝಾದ್ ಹಾಗೂ ಕಪಿಲ್ ಸಿಬಲ್ ಅವರು ಪೂರ್ಣಾವಧಿ ಅಧ್ಯಕ್ಷರನ್ನು ನೇಮಿಸಬೇಕು ಎಂದು ಒತ್ತಾಯಿಸಿದರು. ಅವರೂ ಸಹ ಬಿಜೆಪಿಯೊಂದಿಗೆ ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿದೆ. ಇಂತಹ ಪಕ್ಷವನ್ನು ಯಾರಿಂದಲೂ ಕಾಪಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಹುಲ್ ಜೀ ನೀವು ತಪ್ಪು ಮಾಡಿದ್ದೀರಿ: ರಮ್ಯಾ

    ಬಿಜೆಪಿ ನಾಯಕಿ ಉಮಾ ಭಾರತಿ ಸಹ ಈ ಕುರಿತು ಕಿಡಿಕಾರಿದ್ದು, ಪಕ್ಷದ ರಾಜಕೀಯ ಪ್ರಾಬಲ್ಯ ಮುಗಿದಿದೆ. ಗಾಂಧಿ-ನೆಹರು ಕುಟುಂಬದ ಅಸ್ತಿತ್ವವು ಬಿಕ್ಕಟ್ಟಿನಲ್ಲಿದೆ. ಅವರ ರಾಜಕೀಯ ಪ್ರಾಬಲ್ಯ ಮುಗಿದಿದೆ, ಕಾಂಗ್ರೆಸ್ ಕಥೆ ಸಹ ಮುಗಿದಿದೆ. ಹೀಗಿರುವಾಗ ಯಾರು ಯಾವ ಸ್ಥಾನದಲ್ಲಿರುತ್ತಾರೆ ಎಂಬುದು ಈಗ ಮುಖ್ಯವಲ್ಲ. ಅಲ್ಲದೆ ಕಾಂಗ್ರೆಸ್ ಯಾವುದೇ ವಿದೇಶಿ ಅಂಶವಿಲ್ಲದೆ, ನಿಜವಾದ ಸ್ವದೇಶಿ ಮಾದರಿಗೆ ಮರಳಬೇಕಿದೆ ಎಂದು ಟಾಂಗ್ ನೀಡಿದ್ದಾರೆ.

    ಝೂಮ್ ಆ್ಯಪ್ ಮೂಲಕ ಇಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಕ್ಷದ ಅಧ್ಯಕ್ಷರ ಆಯ್ಕೆ ಕುರಿತು ಭಾರೀ ಚರ್ಚೆ ನಡೆದಿದ್ದು, ಈ ವೇಳೆ ಭಿನ್ನಾಭಿಪ್ರಾಯ ಸಹ ಉಂಟಾಗಿದೆ. ಪೂರ್ಣಾವಧಿಯ ಅಧ್ಯಕ್ಷರನ್ನು ನೇಮಿಸಬೇಕು ಎಂದು ಹೇಳಿದ ನಾಯಕರು ಬಿಜೆಪಿಯೊಂದಿಗೆ ಒಡನಾಟ ಹೊಂದಿದ್ದಾರೆ ಎಂಬ ಆರೋಪ ಹೊರಿಸಲಾಗಿದೆ. ಅಲ್ಲದೆ ಪತ್ರ ಚಳುವಳಿ ನಡೆಸಿದ 20 ಕಾಂಗ್ರೆಸ್ ನಾಯಕರ ವಿರುದ್ಧ ಸಹ ಸಭೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ಜ್ಯೋತಿರಾದಿತ್ಯ ಸಿಂಧಿಯಾ, ಕಪಿಲ್ ಸಿಬಲ್ ಸೇರಿ ಹಲವು ನಾಯಕರ ವಿರುದ್ಧ ಬಿಜೆಪಿಯೊಂದಿಗೆ ಒಡನಾಟ ಹೊಂದಿರುವ ಆರೋಪ ಹೊರಿಸಲಾಗಿದೆ. ಹೀಗಾಗಿ ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ.

  • ಪೊಲೀಸರೇ ಮಕ್ಕಳಿಗೆ ಆಶ್ಲೀಲ ವಿಡಿಯೋ ತೋರಿಸಿದ್ರು: ನಿತ್ಯಾನಂದನ ಶಿಷ್ಯ

    ಪೊಲೀಸರೇ ಮಕ್ಕಳಿಗೆ ಆಶ್ಲೀಲ ವಿಡಿಯೋ ತೋರಿಸಿದ್ರು: ನಿತ್ಯಾನಂದನ ಶಿಷ್ಯ

    – ತನಿಖಾಧಿಕಾರಿಗಳ ವಿರುದ್ಧ ಎಫ್‍ಐಆರ್ ದಾಖಲು

    ಅಹಮದಾಬಾದ್: ಸ್ವಯಂ ಘೋಷಿತ ದೇವ ಮಾನವ ನಿತ್ಯಾನಂದನ ವಿರುದ್ಧ ಅಹಮದಾಬಾದ್ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಆಶ್ರಮದಲ್ಲಿನ ಮಕ್ಕಳನ್ನೂ ವಿಚಾರಣೆಗೊಳಪಡಿಸಿದ್ದರು. ಆದರೆ ಇದನ್ನೇ ಅಸ್ತ್ರವಾಗಿ ಬಳಸಿಕೊಂಡ ನಿತ್ಯಾನಂದನ ಶಿಷ್ಯ, ತನಿಖಾಧಿಕಾರಿಗಳು ಆಶ್ರಮದ ಮಕ್ಕಳಿಗೆ ಅಶ್ಲೀಲ ವಿಡಿಯೋ ತೋರಿಸಿ, ಭಾವನಾತ್ಮಕವಾಗಿ ಬೆದರಿಸಿ ತಮಗೆ ಬೇಕಾದಂತೆ ಹೇಳಿಕೆ ಪಡೆದಿದ್ದಾರೆ ಎಂದು ಆರೋಪಿಸಿದ್ದಾನೆ.

    ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಮಾರ್ಚ್ 6ರಂದು ಮಕ್ಕಳ ಕಲ್ಯಾಣ ಸಮಿತಿ(ಸಿಡಬ್ಲ್ಯುಸಿ)ಯ ಸದಸ್ಯರೂ ಸೇರಿದಂತೆ 14 ಜನ ಅಧಿಕಾರಿಗಳ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಅಹಮದಾಬಾದ್‍ನ ಹೊರವಲಯದಲ್ಲಿರುವ ಗುರುಕುಲ ಹಾಗೂ ಆಶ್ರಮದಲ್ಲಿ ನಿತ್ಯಾನಂದನ ಅನುಯಾಯಿಗಿದ್ದ ಗಿರೀಶ್ ತುರ್ಲಪತಿ ಸಲ್ಲಿಸಿದ್ದ ದೂರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಅಧಿಕಾರಿಗಳ ವಿರುದ್ಧ ಪೊಕ್ಸೊ ಕಾಯ್ದೆ, ಐಪಿಸಿ ಸೆಕ್ಷನ್ಸ್ ಹಾಗೂ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಆದೇಶಿಸಿದೆ. ಅದರಂತೆ ಅಹಮದಾಬಾದ್ ಜಿಲ್ಲೆಯ ವಿವೇಕಾನಂದ ನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

    ಈ ಮೂಲಕ ಇನ್‍ಸ್ಪೆಕ್ಟರ್ ಆರ್.ಬಿ.ರಾಣಾ, ಡಿಎಸ್‍ಪಿ ಕೆ.ಟಿ.ಕರಿಮಾರಿಯಾ, ರಿಯಾಜ್ ಸರ್ವಾಯಿಯಾ, ಎಸ್.ಎಚ್.ಶಾರದಾ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ದಿಲೀಪ್ ಮೇರ್, ಸಿಡಬ್ಲ್ಯುಸಿ ಅಧ್ಯಕ್ಷರು ಹಾಗೂ ಸದಸ್ಯರ ಆರೋಪಿ ಸ್ಥಾನದಲ್ಲಿದ್ದಾರೆ.

    ವಿಚಾರಣೆ ನಡೆಸಿದ್ದಕ್ಕಾಗಿ ನಿತ್ಯಾನಂದನ ಶಿಷ್ಯ ತುರ್ಲಪತಿ ಪೊಲೀಸರು ಹಾಗೂ ಸಿಡಬ್ಲ್ಯುಸಿ ಸದಸ್ಯರ ವಿರುದ್ಧವೇ ಕೇಸ್ ಹಾಕಿದ್ದಾರೆ. ವಿವೇಕಾನಂದ ನಗರ ಪೊಲೀಸ್ ಠಾಣೆಯ ಇನ್‍ಸ್ಪೆಕ್ಟರ್ ಆರ್.ಬಿ.ರಾಣಾ ಹಾಗೂ ಸಿಡಬ್ಲ್ಯುಸಿ ಸದಸ್ಯರು ಸೇರಿದಂತೆ ಪೊಲೀಸ್ ಅಧಿಕಾರಿಗಳು ಆಶ್ರಮದ ಅಪ್ರಾಪ್ತರಿಗೆ ಅಸಭ್ಯ ಪ್ರಶ್ನೆಗಳನ್ನು ಕೇಳಿದ್ದಾರೆ. ಅಲ್ಲದೆ ತನಿಖಾಧಿಕಾರಿಗಳು ಮಕ್ಕಳಿಗೆ ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಪೊಲೀಸ್ ಅಧಿಕಾರಿಗಳು ಹಾಗೂ ಸಿಡಬ್ಲ್ಯುಸಿ ಸದಸ್ಯರು ಮಕ್ಕಳಿಂದ ಅನುಕೂಲಕರ ಹೇಳಿಕೆ ಪಡೆಯಲು ಮಕ್ಕಳನ್ನು ಭಾವನಾತ್ಮಕವಾಗಿ ಬ್ಲ್ಯಾಕ್‍ಮೇಲ್ ಮಾಡಲು ಪ್ರಯತ್ನಿಸಿದರು. ಅಲ್ಲದೆ ಅವರಿಗೆ ಪೋರ್ನ್ ವಿಡಿಯೋ ಹಾಗೂ ಫೋಟೋಗಳನ್ನು ತೋರಿಸಿದ್ದಾರೆ. ಈ ಮೂಲಕ ಮಕ್ಕಳಿಗೆ ಮಾನಸಿಕ ಹಿಮಸೆ ನಿಡಿದ್ದಾರೆ ಎಂದು ತುರ್ಲಪತಿ ಆರೋಪಿಸಿದ್ದಾರೆ.

    ಕೋರ್ಟ್ ಆದೇಶದ ಮೇರೆಗೆ ಮಾರ್ಚ್ 6ರಂದು ಪೊಲೀಸ್ ಅಧಿಕಾರಿಗಳು ಸೇರಿ ಒಟ್ಟು 14 ಜನರ ವಿರುದ್ಧ ಎಫ್‍ಐಆರ್ ದಾಖಲಿಸಿದ್ದೇವೆ. ಈವರೆಗೆ ದೂರುದಾರರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದೇವೆ. ಮುಂದಿನ ತನಿಖೆಯನ್ನು ನಡೆಸುತ್ತಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

    ಕಳೆದ ವರ್ಷ ನವೆಂಬರ್‍ನಲ್ಲಿ ಇದೇ ಪೊಲೀಸ್ ಠಾಣೆಯಲ್ಲಿ ಮೂವರು ಮಕ್ಕಳನ್ನು ಅಪಹರಿಸಿ ಬಂಧಿಸಿರುವ ಕುರಿತು ನಿತ್ಯಾನಂದನ ವಿರುದ್ಧ ಪ್ರಕರಣ ದಾಖಲಾಗಿತ್ತು. ಇಬ್ಬರು ಹೆಣ್ಣು ಮಕ್ಕಳು ಹಾಗೂ ಒಬ್ಬ ಹುಡುಗನನ್ನು ಅಪಹರಿಸಲಾಗಿದೆ ಎಂದು ದೂರು ದಾಖಲಾಗಿತ್ತು. ಅಲ್ಲದೆ ಇತ್ತೀಚೆಗೆ ಮಕ್ಕಳನ್ನು ಒತ್ತಾಯಪೂರ್ವಕವಾಗಿ ಬಂಧನದಲ್ಲಿಟ್ಟುಕೊಂಡಿದ್ದ ನಿತ್ಯಾನಂದ ದೇಶದಿಂದ ಪರಾರಿಯಾಗಿದ್ದಾನೆ. ಹೀಗಾಗಿ ನಿತ್ಯಾನಂದನ ಕುರಿತು ಮಾಹಿತಿ ಕೋರಿ ಇಂಟರ್‍ಪೋಲ್ ಬ್ಲ್ಯೂ ಕಾರ್ನರ್ ನೋಟಿಸ್ ಜಾರಿ ಮಾಡಿದೆ.