Tag: ಸಿಡಬ್ಲ್ಯೂಆರ್‌ಸಿ

  • CWRC, CWMA, ಸುಪ್ರೀಂ ಕೋರ್ಟ್‌ ಮುಂದೆ ವಾಸ್ತವಾಂಶ ಇಟ್ಟರೂ ನ್ಯಾಯ ಸಿಗ್ತಿಲ್ಲ: ಸಿಎಂ

    CWRC, CWMA, ಸುಪ್ರೀಂ ಕೋರ್ಟ್‌ ಮುಂದೆ ವಾಸ್ತವಾಂಶ ಇಟ್ಟರೂ ನ್ಯಾಯ ಸಿಗ್ತಿಲ್ಲ: ಸಿಎಂ

    ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA), ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಹಾಗೂ ಸುಪ್ರೀಂ ಕೋರ್ಟ್ (Supreme Court) ಮುಂದೆ ವಾಸ್ತವಾಂಶ ಇಟ್ಟಿದ್ದೇವೆ. ಆದರೂ ನಮಗೆ ನ್ಯಾಯ ಸಿಕ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಬೇಸರ ವ್ಯಕ್ತಪಡಿಸಿದರು.

    ಅಕ್ಟೋಬರ್ 15ರ ವರೆಗೆ ನಿತ್ಯ 3,000 ಕ್ಯೂಸೆಕ್ ನೀರನ್ನ (Cauvery Water) ತಮಿಳುನಾಡಿಗೆ ಹರಿಸಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ಈ ಸಂಬಂಧ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ನಾವು ನಮ್ಮ ಎಲ್ಲ ವಾಸ್ತವ ಅಂಶಗಳನ್ನ ಸಿಡಬ್ಲ್ಯೂಆರ್‌ಸಿ, ಸಿಡಬ್ಲ್ಯೂಎಂಎ ಹಾಗೂ ಸುಪ್ರೀಂ ಕೋರ್ಟ್ ಮುಂದಿಟ್ಟಿದ್ದೇವೆ. ಆದರೂ ನಮಗೆ ನ್ಯಾಯ ಸಿಗುತ್ತಿಲ್ಲ. ಇಂದಿನ ಸಭೆಯ ಬಳಿಕ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್‌ ನೀರು ಹರಿಸಿ – ಕರ್ನಾಟಕಕ್ಕೆ ಕಾವೇರಿ ಪ್ರಾಧಿಕಾರ ಸೂಚನೆ

    ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಇದೆ. ಆದೇಶದ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚೆ ಮಾಡ್ತೇವೆ. ಈ ಆದೇಶವನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನೆ ಮಾಡಬಹುದಾ? ಅಂತ ಕಾನೂನು ತಜ್ಞರ ಜೊತೆ ಮಾತನಾಡಿದ್ದೇನೆ. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ಸಭೆಯನ್ನೂ ಕರೆದಿದ್ದೇನೆ. ಅವರೊಂದಿಗೂ ಮಾತನಾಡಿ ಮುಂದೇನು ಮಾಡಬೇಕು ಅನ್ನೋ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದರು. ಇದನ್ನೂ ಓದಿ: ಕಾವೇರಿಗಾಗಿ ಕೈಕೊಯ್ದುಕೊಂಡು ರಕ್ತ ಚೆಲ್ಲಿದ ಹೋರಾಟಗಾರ; ಸಿದ್ದು, ಡಿಕೆಶಿ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ

    ಇದೇ ವೇಳೆ ಸಿಂಗಾಪುರಕ್ಕೆ ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, ಕೇಂದ್ರ ಸರ್ಕಾರ ಅಕ್ಕಿ ಇಟ್ಟುಕೊಂಡು ಕೊಡಲಿಲ್ಲ. ನಾವು ದುಡ್ಡು ಕೊಡ್ತೀವಿ, ಅಕ್ಕಿ ಕೊಡಿ ಅಂದರೂ ಕೇಂದ್ರ ಸರ್ಕಾರ ಕೊಡಲಿಲ್ಲ. ಅಕ್ಕಿ ವಿಚಾರದಲ್ಲಿ ರಾಜಕೀಯ ಮಾಡ್ತಿದೆ. ಬಡವರ ಕಾರ್ಯಕ್ರಮಕ್ಕೆ ಅಕ್ಕಿ ಕೊಡಲು ಬಿಜೆಪಿಗೆ ಆಸಕ್ತಿ ಇಲ್ಲ ಎಂದು ಅಸಮಾಧಾನ ಹೊರಹಾಕಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್‌ ನೀರು ಹರಿಸಿ – ಕರ್ನಾಟಕಕ್ಕೆ ಕಾವೇರಿ ಪ್ರಾಧಿಕಾರ ಸೂಚನೆ

    ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್‌ ನೀರು ಹರಿಸಿ – ಕರ್ನಾಟಕಕ್ಕೆ ಕಾವೇರಿ ಪ್ರಾಧಿಕಾರ ಸೂಚನೆ

    – ಕರ್ನಾಟಕ ಬಂದ್‌ ನಡುವೆ ರಾಜ್ಯಕ್ಕೆ ಮತ್ತೆ ಕಾವೇರಿ ಶಾಕ್‌

    ನವದಹೆಲಿ: ಕರ್ನಾಟಕದಾದ್ಯಂತ ಕಾವೇರಿ ಕಿಚ್ಚು (Cauvery Issue) ಹೊತ್ತಿ ಉರಿಯುತ್ತಿರುವ ಹೊತ್ತಿನಲ್ಲೇ ರಾಜ್ಯಕ್ಕೆ ಮತ್ತೊಂದು ಶಾಕ್‌ ಎದುರಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಅಕ್ಟೋಬರ್‌ 15 ರ ವರೆಗೆ ನಿತ್ಯ 3,000 ಕ್ಯೂಸೆಕ್‌ ನೀರನ್ನು ಹರಿಸಬೇಕು ಎಂದು ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಆದೇಶಿಸಿದೆ.

    ನವದೆಹಲಿಯಲ್ಲಿ ಇಂದು (ಶುಕ್ರವಾರ) ಪ್ರಾಧಿಕಾರದ ಅಧ್ಯಕ್ಷ ಎಸ್‌.ಕೆ ಹಲ್ದಾರ್ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಮತ್ತೆ ಸಿಡಬ್ಲ್ಯೂಆರ್‌ಸಿ ಆದೇಶವನ್ನು ಪ್ರಾಧಿಕಾರ ಎತ್ತಿ ಹಿಡಿಯಿತು. 18 ದಿನಗಳ ಕಾಲ ನಿತ್ಯ 3,000 ಕ್ಯೂಸೆಕ್‌ ನೀರನ್ನು ತಮಿಳುನಾಡಿಗೆ (Tamil Nadu) ಬಿಡಬೇಕು ಎಂದು ಸೂಚನೆ ನೀಡಿತು. ಆ ಮೂಲಕ CWRC ಆದೇಶ ಪರಿಷ್ಕರಿಸಲು ನಿರಾಕರಿಸಿತು. ಇದನ್ನೂ ಓದಿ: ಕಾವೇರಿ ಹೋರಾಟಕ್ಕೆ ಬೆಂಬಲ ನೀಡಲು ಬೈಕ್ ರ‍್ಯಾಲಿ – ಪ್ರತಿಭಟನೆಯಲ್ಲಿ ಭಾಗಿಯಾದ ಚಕ್ರವರ್ತಿ ಸೂಲಿಬೆಲೆ

    ಕರ್ನಾಟಕದ (Karnataka) ಪರ ಎಸಿಎಸ್‌ ರಾಕೇಶ್ ಸಿಂಗ್, ತಮಿಳುನಾಡು ಪರ ತಾಂತ್ರಿಕ ಮುಖ್ಯಸ್ಥ ಸುಬ್ರಮಣಿ ಸಭೆಯಲ್ಲಿ ಭಾಗಿಯಾಗಿದ್ದರು. ಎರಡು ರಾಜ್ಯಗಳಿಂದ ಅಧಿಕಾರಿಗಳ ತಂಡ ಉಪಸ್ಥಿತಿ ಇತ್ತು.

    ಕಾವೇರಿ ನೀರು ಹಂಚಿಕೆ ಬಗ್ಗೆ ಚರ್ಚೆ ವೇಳೆ, ತಮಿಳುನಾಡಿಗೆ ನಿತ್ಯ 12,500 ಕ್ಯೂಸೆಕ್ ನೀರು ಬಿಡಬೇಕು. ಮಾಸಿಕ ನಿಗದಿಯಂತೆ ಅಕ್ಟೋಬರ್‌ನಲ್ಲಿ ಬಿಡಬೇಕಾದ 22.14 ಟಿಎಂಸಿ ನೀರನ್ನು ಸಕಾಲಕ್ಕೆ ಬಿಡಬೇಕು. ಕರ್ನಾಟಕದ ಹೊಸ ಕೊರತೆ ಮಾಪನ ಪ್ರಸ್ತಾವನೆಯನ್ನು ಒಪ್ಪಿಕೊಳ್ಳದಂತೆ ಪ್ರಾಧಿಕಾರದ ಮುಂದೆ ತಮಿಳುನಾಡು ಮನವಿ ಮಾಡಿತು. ಇದನ್ನೂ ಓದಿ: ಕರ್ನಾಟಕ ಬಂದ್ ಬಿಸಿ – 60 ವಿಮಾನ ರದ್ದು

    CWRC ಆದೇಶ ಪರಿಷ್ಕರಿಸಲು ಕರ್ನಾಟಕ ಸಭೆಯಲ್ಲಿ ಮನವಿ ಮಾಡಿತು. ಸಂಕಷ್ಟ ಸೂತ್ರದ ಅಡಿಯಲ್ಲಿ ಮಾಸಿಕವಾರು ನೀರು ಹಂಚಿಕೆಗೆ ಹೊಸ ಪಟ್ಟಿ ಸಿದ್ಧಪಡಿಸಿರುವ ಕರ್ನಾಟಕ, ಹೊಸ ಹಂಚಿಕೆ ಪ್ರಕಾರ ನೀರು ಹರಿಸಲು ಮನವಿ ಮಾಡಿತು. ಕರ್ನಾಟಕದ ಮನವಿಯನ್ನು ಪರಿಗಣಿಸದಂತೆ ತಮಿಳುನಾಡು ಒತ್ತಡ ಹಾಕಿತು.

    ಎರಡೂ ಕಡೆಯ ಮನವಿ ಆಲಿಸಿದ ಪ್ರಾಧಿಕಾರ ಕೊನೆಗೆ CWRC ಆದೇಶವನ್ನು ಎತ್ತಿ ಹಿಡಿಯಿತು. 18 ದಿನಗಳ ಕಾಲ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಕರ್ನಾಟಕಕ್ಕೆ ಸೂಚನೆ ನೀಡಿತು. ಸಿಡಬ್ಲ್ಯೂಆರ್‌ಸಿ ಆದೇಶದಲ್ಲಿ ಯಾವುದೇ ಬದಲಾವಣೆ ಇಲ್ಲ. ಅ.15 ರ ವರೆಗೂ ನೀರು ಹರಿಸಬೇಕು ಎಂದು ತಿಳಿಸಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬರೋಬ್ಬರಿ 83 ಟಿಎಂಸಿ ನೀರಿಗೆ ಬೇಡಿಕೆ ಇಟ್ಟ ತಮಿಳುನಾಡು

    ಬರೋಬ್ಬರಿ 83 ಟಿಎಂಸಿ ನೀರಿಗೆ ಬೇಡಿಕೆ ಇಟ್ಟ ತಮಿಳುನಾಡು

    ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸಭೆಯಲ್ಲಿ ತಮಿಳುನಾಡು (Tamil Nadu) ಬರೋಬ್ಬರಿ 83 ಟಿಎಂಸಿ ನೀರಿಗೆ ಬೇಡಿಕೆ ಇಟ್ಟಿದೆ.

    ಕರ್ನಾಟಕ ಮತ್ತು ತಮಿಳುನಾಡು ಪ್ರತಿನಿಧಿಗಳ ಜೊತೆ CWRC ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸುತ್ತಿದೆ. ಸೆ.13ರಂದು ಹದಿನೈದು ದಿನ ನಿತ್ಯ 5,000 ಕ್ಯೂಸೆಕ್ ಕಾವೇರು ನೀರು (Cauvery Water) ಹರಿಸುವಂತೆ ನೀಡಿದ ಆದೇಶ ಇಂದಿಗೆ ಅಂತ್ಯವಾಗುತ್ತಿರುವ ಹಿನ್ನೆಲೆ ಈ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ.

    ಈ ಚರ್ಚೆಯ ವೇಳೆ ಕಳೆದ ಜೂನ್‌ನಿಂದ ಸೆಪ್ಟೆಂಬರ್‌ವರೆಗೂ 123 ಟಿಎಂಸಿ ಹರಿಸಬೇಕಿತ್ತು. ಕರ್ನಾಟಕ (Karnataka) ಈವರೆಗೂ ಕೇವಲ 40 ಟಿಎಂಸಿ ನೀರು ಹರಿಸಿದೆ. ಹೀಗಾಗಿ ಬಾಕಿ 83 ಟಿಎಂಸಿ ನೀರು ಕೂಡಲೇ ಬಿಡುಗಡೆ ಮಾಡಬೇಕು ಎಂದು ತಮಿಳುನಾಡು ವಾದ ಮಂಡಿಸಿದೆ.  ಇದನ್ನೂ ಓದಿ: Bengaluru Bandh: ಬಂದೋಬಸ್ತ್‌ನಲ್ಲಿದ್ದ ಪೊಲೀಸರಿಗೆ ಕೊಟ್ಟ ಟಿಫನ್‍ನಲ್ಲಿ ಇಲಿ!

    ಸಮಿತಿ ಯಾವುದೇ ಕಾರಣಕ್ಕೂ ನೀರಿನ ಪ್ರಮಾಣವನ್ನು ಕಡಿಮೆ ಮಾಡಬಾರದು. ಅಕ್ಟೋಬರ್‌ 22 ಟಿಎಂಸಿ ನೀರನ್ನು ಸಹ ಕರ್ನಾಟಕ ಹರಿಸಬೇಕು. ರಾಜ್ಯಕ್ಕೆ ಹರಿಸಬೇಕಾದ ನೀರನ್ನು ಸಮಿತಿ ಕೊಡುವಂತೆ ಕರ್ನಾಟಕಕ್ಕೆ ಆದೇಶಿಸಬೇಕು ಎಂದು ತಮಿಳುನಾಡು ಬೇಡಿಕೆ ಇಟ್ಟಿದೆ.  ಎರಡೂ ರಾಜ್ಯಗಳಲ್ಲಿ ರೈತರ ಹೋರಾಟ ತೀವ್ರವಾಗುತ್ತಿರುವ ಹೊತ್ತಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಹೈವೋಲ್ಟೇಜ್‌ ಸಭೆ ನಡೆಯುತ್ತಿದೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಮಿಳುನಾಡಿಗೆ ನೀರು – ಇಂದು ಸರ್ವಪಕ್ಷ ಸಭೆ ಕರೆದ ಸರ್ಕಾರ

    ತಮಿಳುನಾಡಿಗೆ ನೀರು – ಇಂದು ಸರ್ವಪಕ್ಷ ಸಭೆ ಕರೆದ ಸರ್ಕಾರ

    ಬೆಂಗಳೂರು: ತಮಿಳುನಾಡಿಗೆ (TamilNadu) ಮತ್ತೆ 15 ದಿನಗಳ ಕಾಲ ನಿತ್ಯ 5 ಸಾವಿರ ಕ್ಯೂಸೆಕ್‌ ನೀರು ಬಿಡುವಂತೆ ಕಾವೇರಿ ನದಿ ನೀರು ನಿಯಂತ್ರಣಾ ಸಮಿತಿ (CWRC) ಸೂಚಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ (Karnataka Government) ಇಕ್ಕಟ್ಟಿಗೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಮುಂದಿನ ತೀರ್ಮಾನ ಕೈಗೊಳ್ಳುವ ಸಲುವಾಗಿ ರಾಜ್ಯ ಸರ್ಕಾರ ಇಂದು ವಿಶೇಷ ಸರ್ವಪಕ್ಷ ಸಭೆ (All Party Meeting) ಕರೆದಿದೆ.

    ಸಿಎಂ ಸಿದ್ದರಾಮಯ್ಯ (CM Siddaramaiah) ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮಧ್ಯಾಹ್ನ 12:30ಕ್ಕೆ ವಿಶೇಷ ಸರ್ವಪಕ್ಷ ಸಭೆ ನಡೆಯಲಿದೆ. ವಿಪಕ್ಷಗಳ ಸದನ ನಾಯಕರು, ಕಾವೇರಿ ಜಲಾನಯನ ಕ್ಷೇತ್ರಗಳ ಸಂಸದರು, ಶಾಸಕರು, ಪರಿಷತ್ ಸದಸ್ಯರು, ಮಾಜಿ ಸಿಎಂಗಳಿಗೆ ಸಭೆಗೆ ಬರುವಂತೆ ಆಹ್ವಾನಿಸಲಾಗಿದೆ. ಇದನ್ನೂ ಓದಿ: ಕರ್ನಾಟಕಕ್ಕೆ ಕುಡಿಯುವ ನೀರಿನ ಚಿಂತೆ; ತಮಿಳುನಾಡಿಗೆ ಬೆಳೆ ಬಾಡುವ ಚಿಂತೆ – 15 ದಿನ 5,000 ಕ್ಯೂಸೆಕ್ ಹರಿಸಲು CWRC ಸೂಚನೆ

     

    ಸಿಡಬ್ಲ್ಯೂಆರ್‌ಸಿ ಶಿಫಾರಸು ಪಾಲನೆ ಮಾಡದಿರುವ ಸಂಬಂಧ ಸಭೆಯಲ್ಲಿ ಎಲ್ಲರೂ ಸೇರಿ ತೀರ್ಮಾನ ಮಾಡಲಿದ್ದಾರೆ. ಜತೆಗೆ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕೊಂಡೊಯ್ಯುವ ಬಗ್ಗೆ ಮುಹೂರ್ತ ನಿಗದಿ ಮಾಡುವ ಸಾಧ್ಯತೆ ಇದೆ.

    ಸಭೆ ಬಳಿಕ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರು ದೆಹಲಿಗೆ ತೆರಳಲಿದ್ದು, ಕೇಂದ್ರದ ಜಲಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ರಾಜ್ಯದ ಪರಿಸ್ಥಿತಿ ಮನವರಿಕೆ ಮಾಡಿ ಕೇಂದ್ರದ ಮಧ್ಯಪ್ರವೇಶಕ್ಕೆ ಒತ್ತಾಯಿಸುವ ಸಾಧ್ಯತೆ ಇದೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]