Tag: ಸಿಡಿಎಸ್

  • ಒಪ್ಪಂದ ರದ್ದು- ಚೀನಾ ಗಡಿಯಲ್ಲಿ ಆತ್ಮರಕ್ಷಣೆಗೆ ಗುಂಡು ಹಾರಿಸಲು ಸೈನಿಕರಿಗೆ ಅನುಮತಿ

    ಒಪ್ಪಂದ ರದ್ದು- ಚೀನಾ ಗಡಿಯಲ್ಲಿ ಆತ್ಮರಕ್ಷಣೆಗೆ ಗುಂಡು ಹಾರಿಸಲು ಸೈನಿಕರಿಗೆ ಅನುಮತಿ

    ನವದೆಹಲಿ: ಆತ್ಮ ರಕ್ಷಣೆಗಾಗಿ ಸಿಡಿಎಸ್(ಚೀಫ್ ಡಿಫೆನ್ಸ್ ಸ್ಟಾಫ್) ಬಿಪಿನ್‌ ರಾವತ್‌ ಮತ್ತು ಮೂರು ಸೇನೆಯ ಮುಖ್ಯಸ್ಥರು ಆತ್ಮರಕ್ಷಣೆಗಾಗಿ ಚೀನಾ ಗಡಿಯಲ್ಲಿ ಗುಂಡು ಹಾರಿಸಲು ಅನುಮತಿ ನೀಡಿದ್ದಾರೆ.

    ಕಳೆದ ಸೋಮವಾರ ರಾತ್ರಿ ಚೀನಿ ಸೈನಿಕರು ಮೊಳೆಗಳನ್ನು ವೆಲ್ಡ್‌ ಮಾಡಿದ ಬೇಸ್‌ ಬಾಲ್‌ ಬ್ಯಾಟ್‌ನಂತಿರುವ ಕಬ್ಬಿಣದ ರಾಡ್‌ಗಳಿಂದ ಭಾರತೀಯ ಸೇನೆಯ ಮೇಲೆ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಸೈನಿಕರಿಗೆ ಸರ್ಕಾರ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಿದೆ.

    ಈ ಸಂಬಂಧ ನಿವೃತ್ತ ಮೇಜರ್ ಜನರಲ್ (ಡಾ.) ಜಿಡಿ ಬಕ್ಷಿ ಎಸ್ ಎಂ ಟ್ವೀಟ್‌ ಮಾಡಿ ಧನ್ಯವಾದ ಹೇಳಿದ್ದಾರೆ. ಓ ದೇವರೇ ಧನ್ಯವಾದ. ಸೇನಾ ಪಡೆಗಳ ಮುಖ್ಯಸ್ಥರಾದ ಸಿಡಿಎಸ್‌ ಮತ್ತು ಸೇನೆಯ ಮೂರೂ ವಿಭಾಗಗಳ ಮುಖ್ಯಸ್ಥರು ಆತ್ಮ ರಕ್ಷಣೆಯ ಸಮಯದಲ್ಲಿ ನಮ್ಮ ಯೋಧರು ಗುಂಡು ಹಾರಿಸಬಹುದು ಎಂದು ಅಧಿಕಾರ ನೀಡಿದ್ದಾರೆ. ಗಡಿಯಲ್ಲಿ ಗುಂಡು ಹಾರಿಸಕೂಡದು ಎಂಬ 1996ರ ಒಪ್ಪಂದವನ್ನು ಚೀನಾ ಸೇನೆಯು ಉಲ್ಲಂಘಿಸಿ ಚೂಪಾದ ಆಯುಧಗಳನ್ನು ಬಳಸಿದೆ. ನಾವು ಶಿಲಾಯುಗಕ್ಕೆ ಹೋಗುವುದಿಲ್ಲ ಎಂದು ಟ್ವೀಟ್‌ ಮಾಡಿದ್ದಾರೆ.

    ನಾವು ಹೆದರಲ್ಲ: ಭಾರತೀಯ ಸೇನೆಗೆ ಸರ್ಕಾರ ಪೂರ್ಣ ಸ್ವಾತಂತ್ರ್ಯ ನೀಡಿದ ಬೆನ್ನಲ್ಲೇ ಚೀನಾ ಸರ್ಕಾರದ ಮುಖವಾಣಿ ಗ್ಲೋಬಲ್‌ ಟೈಮ್ಸ್‌ ಇದಕ್ಕೆ ನಾವು ಹೆದರುವುದಿಲ್ಲ ಎಂದು ತಿಳಿಸಿದೆ. ಸೇನೆಗೆ ಗುಂಡು ಹಾರಿಸಲು ಅಧಿಕಾರ ನೀಡಲಾಗಿದೆ. ಭಾರತ ಚೀನಾ ಜೊತೆ ಯುದ್ಧ ಮಾಡಲು ನಿರ್ಧರಿಸಿದ್ಯಾ? ಭಾರತ ಗುಂಡಿನ ದಾಳಿ ನಡೆಸಲು ಆರಂಭಿಸಿದರೆ ನಾವು ಗುಂಡಿನ ದಾಳಿ ನಡೆಸುತ್ತೇವೆ. ನಾವು ಯಾವುದಕ್ಕೂ ಹೆದರುವುದಿಲ್ಲ ಎಂದು ಟ್ವೀಟ್‌ ಮಾಡಿದೆ.

    ಒಪ್ಪಂದ ಮಾಡಿಕೊಂಡಿದ್ದು ಯಾಕೆ?
    ಭಾರತ ಮತ್ತು ಚೀನಾ ನಡುವೆ ಅಂತಾರಾಷ್ಟ್ರೀಯ ಗಡಿ ರೇಖೆ ಇಲ್ಲದ ಕಾರಣ ಗಡಿಯಲ್ಲಿ ಈ ರೀತಿ ಕಿತ್ತಾಟಗಳು ನಡೆಯುತಿತ್ತು. ಎರಡು ದೇಶಗಳ ಗಡಿಯನ್ನು ವಾಸ್ತವ ಗಡಿ ರೇಖೆಯಿಂದ(ಎಲ್‌ಎಸಿ – ಲೈನ್ ಆಫ್ ಆಕ್ಚುವಲ್ ಕಂಟ್ರೋಲ್) ಗುರುತಿಸಲಾಗಿದೆ. ಆದರೆ ಹಲವು ಭಾಗಗಳಲ್ಲಿ ಭಾರತ ಮತ್ತು ಚೀನಾದ ನಡುವಿನ ಗಡಿಗಳು ನಿರ್ಧಾರವಾಗಿಲ್ಲ. ಹೀಗಾಗಿ ಹಲವು ಬಾರಿ ಎರಡು ಕಡೆಯ ಸೈನಿಕರು ಗಡಿಯಲ್ಲಿ ಪಹರೆ ಕಾಯುತ್ತಿದ್ದಾಗ ಕಿತ್ತಾಟಗಳು ನಡೆಯುತ್ತಿದ್ದವು. ಎರಡು ಕಡೆಯಿಂದಲೂ ಪ್ರತಿರೋಧಗಳು ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ 1993, 1996ರಲ್ಲಿ ಭಾರತ ಮತ್ತು ಚೀನಾ ನಡುವೆ ಒಪ್ಪಂದ ನಡೆಯಿತು.

    1993ರ ಒಪ್ಪಂದದ ಪ್ರಕಾರ ಎಲ್‌ಎಸಿ ದಾಟಿ ಯಾರೇ ಒಳಬಂದರೂ ಅವರಿಗೆ ಎಚ್ಚರಿಕೆ ನೀಡಿ ಕಳುಹಿಸಬೇಕು. 1996ರ ಪ್ರಕಾರ ಎಲ್‌ಎಸಿಯ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಎರಡು ದೇಶಗಳು ಯಾವುದೇ ಸ್ಫೋಟ ನಡೆಸಬಾರದು. ಗುಂಡಿನ ದಾಳಿ ನಡೆಸಕೂಡದು ಎಂಬ ಒಪ್ಪಂದಕ್ಕೆ ಬರಲಾಗಿದೆ. ಹೀಗಾಗಿ ಭಾರತ ಚೀನಾ ಗಡಿಯಲ್ಲಿ ಸೈನಿಕರು ಈ ಒಪ್ಪಂದಕ್ಕೆ ಬದ್ಧವಾಗಿದ್ದಾರೆ. ಆದರೆ ಕಳೆದ ವಾರ ನಡೆದ ಘರ್ಷಣೆಯ ಬಳಿಕ ಭಾರತ ಗಡಿ ಒಪ್ಪಂದ ರದ್ದು ಮಾಡಿದ್ದು ಸರ್ಕಾರ ಭಾರತೀಯ ಸೇನೆಗೆ ಪೂರ್ಣ ಅಧಿಕಾರವನ್ನು ನೀಡಿದೆ.

  • ಸಿಡಿಎಸ್‌ಗೆ ನೂತನ ವಸ್ತ್ರ ವಿನ್ಯಾಸ : ಸೌಥ್ ಬ್ಲಾಕ್ ನಲ್ಲಿ ಕಚೇರಿ

    ಸಿಡಿಎಸ್‌ಗೆ ನೂತನ ವಸ್ತ್ರ ವಿನ್ಯಾಸ : ಸೌಥ್ ಬ್ಲಾಕ್ ನಲ್ಲಿ ಕಚೇರಿ

    ನವದೆಹಲಿ: ದೇಶದ ಮೊದಲ `ರಕ್ಷಣಾ ಪಡೆಗಳ ಮುಖ್ಯಸ್ಥ’ (ಸಿಡಿಎಸ್) ರನ್ನಾಗಿ ಜನರಲ್ ಬಿಪಿನ್ ರಾವತ್ ಅವರನ್ನು ನೇಮಕ ಮಾಡಿದ ಬಳಿಕ ಈಗ ಕೇಂದ್ರ ಸರ್ಕಾರ, ಮಿಲಿಟರಿ ಅಫೇರ್ಸ್ ಡಿಪಾಟ್ರ್ಮೆಂಟ್ ಎಂಬ ಹೊಸ ಇಲಾಖೆಯನ್ನು ಸೃಷ್ಟಿಸಿದೆ.

    ಕೇಂದ್ರ ಸರ್ಕಾರ ಹಾಗೂ ಮೂರು ಪಡೆಗಳ ಮಧ್ಯೆ ಸಮನ್ವಯ ತರುವ ಕೆಲಸವನ್ನು ಸಿಡಿಎಸ್ ಮಾಡಲಿದ್ದಾರೆ. ಈ ಹುದ್ದೆಗೆ ಆಯ್ಕೆ ಆಗಲಿರುವ ಅವರು 4 ಸ್ಟಾರ್ ಹೊಂದಿರುವ ಮಿಲಿಟರಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಾರೆ.

    ಮುಖ್ಯ ಸೇನಾಧಿಕಾರಿಯು ಪ್ರಸ್ತುತ ಇರುವ ಸೇನೆಯ ಮೂರು ವಿಭಾಗದ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡುವ ಏಕೈಕ ಸಮನ್ವಯ ಅಧಿಕಾರಿಯಾಗಿರುತ್ತಾರೆ. ಭಾರತದ ಭೂ ಸೇನೆ, ನೌಕಾದಳ ಮತ್ತು ವಾಯುದಳಕ್ಕೆ ಸಂಬಂಧಿಸಿದ ಸಲಹೆಯನ್ನು ಸರ್ಕಾರಕ್ಕೆ ನೀಡುವ ಸಿಂಗಲ್ ಪಾಯಿಂಟ್ ಅಧಿಕಾರ ಅವರದ್ದಾಗಿರುತ್ತದೆ.

    ಮಿಲಿಟರಿ ಅಫೇರ್ಸ್ ಡಿಪಾಟ್ರ್ಮೆಂಟ್‍ಗೆ ದೆಹಲಿಯ ಸೌಥ್ ಬ್ಲಾಕ್ ನಲ್ಲಿ ಕಚೇರಿ ಒದಗಿಸಲಾಗಿದ್ದು ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ನೂತನ ಸಿಡಿಎಸ್ ಹುದ್ದೆಗೆ ಪ್ರತ್ಯೇಕ ಕಾರಿನ ಧ್ವಜ, ಟೋಪಿ, ಭುಜ ಪಟ್ಟಿ, ಮತ್ತು ಬೆಲ್ಟ್‍ನ್ನು ವಿನ್ಯಾಸ ಮಾಡಲಾಗಿದೆ.

  • ಈಗ ಅಧಿಕೃತ ಪ್ರಕಟ – ಇನ್ನು ಮುಂದೆ ಬಿಪಿನ್ ರಾವತ್ ಮೂರು ಪಡೆಗಳ ಬಾಸ್

    ಈಗ ಅಧಿಕೃತ ಪ್ರಕಟ – ಇನ್ನು ಮುಂದೆ ಬಿಪಿನ್ ರಾವತ್ ಮೂರು ಪಡೆಗಳ ಬಾಸ್

    ನವದೆಹಲಿ: ಹೊಸದಾಗಿ ರಚನೆಯಾಗಿರುವ `ರಕ್ಷಣಾ ಪಡೆಗಳ ಮುಖ್ಯಸ್ಥ’ (ಸಿಡಿಎಸ್) ಹುದ್ದೆಗೆ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರನ್ನು ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ. ಸೇವೆಯಿಂದ ನಿವೃತ್ತಿಯಾಗಲು ಒಂದು ದಿನ ಬಾಕಿ ಇರುವಾಗಲೇ ರಾವತ್ ಅವರು ಈ ಹುದ್ದೆಗೆ ನೇಮಕಗೊಂಡಿದ್ದಾರೆ.

    ವಾಯು ಮತ್ತು ನೌಕಾ ಸೇನೆಗಳ ನಡುವೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಿಡಿಎಸ್ ಹುದ್ದೆ ಸೃಷ್ಟಿಗೆ ಕೇಂದ್ರ ಭದ್ರತಾ ಸಂಪುಟ ಸಮಿತಿ ಕಳೆದ ವಾರ ಗ್ರೀನ್ ಸಿಗ್ನಲ್ ನೀಡಿ ಕ್ಯಾಬಿನೆಟ್ ಒಪ್ಪಿಗೆ ನೀಡಿತ್ತು.

    ಈ ಹುದ್ದೆಯ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ ಬಿಪಿನ್ ರಾವತ್ ಅವರೇ ಆಯ್ಕೆ ಆಗಲಿದ್ದಾರೆ ಎನ್ನುವ ಸುದ್ದಿ ಲಭ್ಯವಾಗಿತ್ತು. ಅದರಂತೆ ಈಗ ಬಿಪಿನ್ ರಾವತ್ ಹೆಸರು ಅಧಿಕೃತವಾಗಿ ಪ್ರಕಟವಾಗಿದೆ. ಸಿಡಿಎಸ್ ಮುಖ್ಯಸ್ತರ ನಿವೃತ್ತಿ ವಯಸ್ಸನ್ನು ಕೇಂದ್ರ ಸರ್ಕಾರ 65ಕ್ಕೆ ನಿಗದಿ ಮಾಡಿದೆ. ಬಿಪಿನ್ ರಾವತ್ ಅವರಿಗೆ 64 ವರ್ಷವಾಗಿದ್ದು 4 ವರ್ಷಗಳ ಕಾಲ ಅವರೇ ಈ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.

    ಸಿಡಿಎಸ್ ವಿಶೇಷತೆ ಏನು?:
    ಭೂ, ವಾಯು ಹಾಗೂ ನೌಕಾ ಪಡೆಗಳಿಗೆ ಪ್ರತ್ಯೇಕ ಮುಖ್ಯಸ್ಥರಿದ್ದಾರೆ. ರಾಷ್ಟ್ರಪತಿಗಳು ನೇತೃತ್ವ, ಆದೇಶದಂತೆ ಮೂರು ಪಡೆಗಳು ಕಾರ್ಯನಿರ್ವಹಿಸುತ್ತಿವೆ. ಕೇಂದ್ರ ಸರ್ಕಾರ ಹಾಗೂ ಮೂರು ಪಡೆಗಳ ಮಧ್ಯೆ ಸಮನ್ವಯ ತರುವ ಕೆಲಸವನ್ನು ಸಿಡಿಎಸ್ ಮಾಡಲಿದ್ದಾರೆ. ಈ ಹುದ್ದೆಗೆ ಆಯ್ಕೆ ಆಗಲಿರುವ ಅವರು 4 ಸ್ಟಾರ್ ಹೊಂದಿರುವ ಮಿಲಿಟರಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಾರೆ.

    ಮುಖ್ಯ ಸೇನಾಧಿಕಾರಿಯು ಪ್ರಸ್ತುತ ಇರುವ ಸೇನೆಯ ಮೂರು ವಿಭಾಗದ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡುವ ಏಕೈಕ ಸಮನ್ವ ಅಧಿಕಾರಿಯಾಗಿರುತ್ತಾರೆ. ಭಾರತದ ಭೂ ಸೇನೆ, ನೌಕಾದಳ ಮತ್ತು ವಾಯುದಳಕ್ಕೆ ಸಂಬಂಧಿಸಿದ ಸಲಹೆಯನ್ನು ಸರ್ಕಾರಕ್ಕೆ ನೀಡುವ ಸಿಂಗಲ್ ಪಾಯಿಂಟ್ ಅಧಿಕಾರ ಅವರದ್ದಾಗಿರುತ್ತದೆ.

    ಕೆಲಸ ಏನು?
    ಮೂರು ಸೇನೆಗಳ ನಡುವೆ ಉತ್ತಮ ಸಂವಹನ ಸಮನ್ವಯ ಸಾಧಿಸುವುದು ಮುಖ್ಯ ಉದ್ದೇಶ. ಸೇನೆಗೆ ಹಂಚಿಯಾಗುವ ನಿಧಿಯನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು. ಮೂರು ಸೇನೆಗಳ ಸಂಬಂಧ ಏಕ ವ್ಯಕ್ತಿಯಾಗಿ ಪ್ರಧಾನಿಗಳಿಗೆ ಸಲಹೆ ನೀಡುವುದು. ಮೂರು ಸೇನೆಗಳ ಸಂಬಂಧ ಆಡಳಿತ್ಮಾಕ ನಿರ್ಧಾರಗಳನ್ನು ತೆಗೆದುಕೊಳ್ಳುವುದು. ತ್ರಿಸೇನೆಗಳ ಜಂಟಿ ನಿರ್ವಹಣೆ ಹಾಗೂ ತರಬೇತಿ ಕೂಡಾ ಈ ಮಹಾದಂಡನಾಯಕ ವ್ಯಾಪ್ತಿಯಲ್ಲಿ ಬರಲಿದೆ. ಸೈಬರ್, ಬಾಹ್ಯಾಕಾಶ, ವಿಶೇಷ ಭದ್ರತಾ ದಳಗಳು ಕೂಡಾ ಮಹಾ ದಂಡನಾಯಕ ಕಚೇರಿ ವ್ಯಾಪ್ತಿಗೆ ಬರಲಿದೆ.

    ಈ ವರ್ಷದ ಸ್ವಾತಂತ್ರ್ಯ ದಿನದಂದು ಕೆಂಪುಕೋಟೆಯ ಮೇಲೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮೋದಿ ಅವರು, ಭೂ, ವಾಯು ಹಾಗೂ ನೌಕಾ ಪಡೆಗಳು ನಮ್ಮ ಹೆಮ್ಮೆ. ಈ ಮೂರೂ ಸೇನಾ ಪಡೆಗಳ ಮಧ್ಯೆ ಸಮನ್ವಯತೆ ತರುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ನೇಮಕ ಮಾಡಲಾಗುತ್ತದೆ ಎಂದು ಐತಿಹಾಸಿಕ ಘೋಷಣೆ ಮಾಡಿದ್ದರು.

    ಸಿಡಿಎಸ್ ನೇಮಕಕ್ಕಾಗಿ ದೀರ್ಘಕಾಲದಿಂದ ಸೇನಾ ಅಧಿಕಾರಿಗಳು ಒತ್ತಾಯಿಸುತ್ತಾ ಬಂದಿದ್ದಾರೆ. ಸದ್ಯ ನಾವು ಅದನ್ನು ಕಾರ್ಯಗತಕ್ಕೆ ತರಲು ನಿರ್ಧಸಿದ್ದೇವೆ. ಈ ನೇಮಕವು ಮೂರು ಪಡೆಗಳ ಉನ್ನತ ಮಟ್ಟದಲ್ಲಿ ಪರಿಣಾಮಕಾರಿ ನಾಯಕತ್ವವನ್ನು ನೀಡಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದರು.

    ಮುಖ್ಯ ಸೇನಾಧಿಕಾರಿ ನೇಮಕವು ಈಗಿನ ಮಾತಲ್ಲ. 20 ವರ್ಷಗಳ ಹಿಂದೆಯೇ ಈ ವಿಚಾರ ಪ್ರಸ್ತಾಪವಾಗಿತ್ತು. ಆದರೆ ಕಾರ್ಯರೂಪಕ್ಕೆ ಬಾರದೇ ಹಾಗೆ ಉಳಿದಿತ್ತು. ಕಾರ್ಗಿಲ್ ಯುದ್ಧದ ನಂತರ ಭದ್ರತಾ ಲೋಪ ಮತ್ತು ಸೇನಾಪಡೆಗಳ ನಡುವೆ ಇರುವ ಅಂತರಗಳ ಕುರಿತು ಅಧ್ಯಯನ ನಡೆಸಿ ವರದಿ ನೀಡಲು 1999ರಲ್ಲಿ ಸಂಸತ್ತಿನ ಉನ್ನತ ಮಟ್ಟದ ಸಮಿತಿ ರಚಿಸಲಾಗಿತ್ತು. ಈ ಸಮಿತಿಯ ನೇತೃತ್ವವನ್ನು ಅಂದಿನ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಅವರು ವಹಿಸಿಕೊಂಡಿದ್ದರು. ಸುದೀರ್ಘ ಅಧ್ಯಯನ ನಡೆಸಿದ ಸಮಿತಿಯು, ಮೂರೂ ಸೇನಾಪಡೆಗಳ ನಡುವೆ ಹಲವೆಡೆ ಸಂವಹನ ಮತ್ತು ಹೊಂದಾಣಿಕೆಯ ಕೊರತೆಯಾಗಿದ್ದನ್ನು ಗುರುತಿಸಿತ್ತು. ಹೀಗಾಗಿ ಮೂರೂ ಸೇನಾಪಡೆಗಳು ಸೇರಿ ಓರ್ವ ಮುಖ್ಯಸ್ಥರನ್ನು ನೇಮಿಸುವಂತೆ ವರದಿ ನೀಡಿತ್ತು. ಆದರೆ ಬದಲಾದ ರಾಜಕೀಯ ಹಾಗೂ ಅಧಿಕಾರಿಗಳ ಆಕ್ಷೇಪದಿಂದಾಗಿ ಸಮಿತಿಯ ಶಿಫಾರಸು ಕಾರ್ಯರೂಪಕ್ಕೆ ಬಂದಿರಲಿಲ್ಲ.

    2012 ರಲ್ಲಿ ನರೇಶ್ ಚಂದ್ರಾ ನೇತೃತ್ವದ ಟಾಸ್ಕ್ ಫೋರ್ಸ್, 2016 ರಲ್ಲಿ ಲೆಫ್ಟಿನೆಂಟ್ ಜನರಲ್ ಡಿಬಿ ಶೇಕ್ತ್ ಕಾರ್ ಸಮಿತಿ ಸಿಡಿಎಸ್ ನೇಮಕವಾಗಬೇಕೆಂದು ತನ್ನ ವರದಿಯಲ್ಲಿ ಶಿಫಾರಸು ಮಾಡಿತ್ತು. ಮೂರು ಸೇನೆಯ ಪ್ಲಾನಿಂಗ್, ಬಜೆಟ್, ಸಂಗ್ರಹಣೆ, ಶಸ್ತ್ರಾಸ್ತ್ರ ಖರೀದಿ, ತರಬೇತಿ ವಿಚಾರದ ಬಗ್ಗೆ ಸಿಡಿಎಸ್ ಗಮನ ಹರಿಸಿ ಕೇಂದ್ರ ರಕ್ಷಣಾ ಇಲಾಖೆಯ ಜೊತೆ ಸೇತುವೆಯಾಗಿ ಕೆಲಸ ಮಾಡಲಿದೆ.

  • ಸೇನಾ ಪ್ರಧಾನ ದಂಡ ನಾಯಕನ ಹುದ್ದೆಗೆ ಭದ್ರತಾ ಸಮಿತಿ ಒಪ್ಪಿಗೆ – ಹೇಗಿರಲಿದೆ ಸಿಡಿಎಸ್ ಪವರ್?

    ಸೇನಾ ಪ್ರಧಾನ ದಂಡ ನಾಯಕನ ಹುದ್ದೆಗೆ ಭದ್ರತಾ ಸಮಿತಿ ಒಪ್ಪಿಗೆ – ಹೇಗಿರಲಿದೆ ಸಿಡಿಎಸ್ ಪವರ್?

    ನವದೆಹಲಿ: ಭೂ, ವಾಯು ಮತ್ತು ನೌಕಾ ಸೇನೆಗಳ ನಡುವೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸೇನಾ ಪ್ರಧಾನ ದಂಡ ನಾಯಕನ(ಸಿಡಿಎಸ್) ಹುದ್ದೆ ಸೃಷ್ಟಿಗೆ ಕೇಂದ್ರ ಭದ್ರತಾ ಸಂಪುಟ ಸಮಿತಿ ಗ್ರೀನ್ ಸಿಗ್ನಲ್ ನೀಡಿದೆ. ಇಂದು ಸಚಿವ ಸಂಪುಟ ಸಭೆ ಬಳಿಕ ನಡೆದ ಭದ್ರತಾ ಸಮಿತಿ ಸಭೆಯಲ್ಲಿ ಪ್ರಧಾನಿ ಈ ನರೇಂದ್ರ ಮೋದಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

    ಕಳೆದ ಸ್ವಾತಂತ್ರ್ಯ ದಿನಾಚರಣೆ ದಿನದಂದು ಈ ಬಗ್ಗೆ ಸುಳಿವು ಕೊಟ್ಟಿದ್ದ ಪ್ರಧಾನಿ ನರೇಂದ್ರ ಮೋದಿ ಇಂದು ಚೀಫ್ ಡಿಫೆನ್ಸ್ ಸ್ಟಾಫ್ ಸೃಷ್ಟಿಗೆ ಅನುಮೋದನೆ ನೀಡಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಆರ್. ಜೈಶಂಕರ್, ಹಣಕಾಸು ಸಚಿವೆ ನಿರ್ಮಲ ಸೀತರಾಮನ್ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಈ ಸಂಬಂಧ ಅಂತಿಮ ನಿರ್ಧಾರಕ್ಕೆ ಬರಲಾಗಿದೆ.

    ಮೂಲಗಳ ಪ್ರಕಾರ ಡಿಸೆಂಬರ್ ಅಂತ್ಯಕ್ಕೆ ನಿವೃತ್ತಿ ಆಗಲಿರುವ ಭೂಸೇನಾ ಮುಖ್ಯಸ್ಥ ಬಿಪಿನ್ ರಾವತ್ ಮೊದಲ ಸಿಡಿಎಸ್ ಆಗಿ ನೇಮಕಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು ಶೀಘ್ರದಲ್ಲೇ ಹೆಸರು ಅಂತಿಮವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

    ಸಿಡಿಎಸ್ ವಿಶೇಷತೆ ಏನು?:
    ಭೂ, ವಾಯು ಹಾಗೂ ನೌಕಾ ಪಡೆಗಳಿಗೆ ಪ್ರತ್ಯೇಕ ಮುಖ್ಯಸ್ಥರಿದ್ದಾರೆ. ರಾಷ್ಟ್ರಪತಿಗಳು ನೇತೃತ್ವ, ಆದೇಶದಂತೆ ಮೂರು ಪಡೆಗಳು ಕಾರ್ಯನಿರ್ವಹಿಸುತ್ತಿವೆ. ಕೇಂದ್ರ ಸರ್ಕಾರ ಹಾಗೂ ಮೂರು ಪಡೆಗಳ ಮಧ್ಯೆ ಸಮನ್ವಯ ತರುವ ಕೆಲಸವನ್ನು ಸಿಡಿಎಸ್ ಮಾಡಲಿದ್ದಾರೆ. ಈ ಹುದ್ದೆಗೆ ಆಯ್ಕೆ ಆಗಲಿರುವ ಅವರು 4 ಸ್ಟಾರ್ ಹೊಂದಿರುವ ಮಿಲಿಟರಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಾರೆ.

    ಮುಖ್ಯ ಸೇನಾಧಿಕಾರಿಯು ಪ್ರಸ್ತುತ ಇರುವ ಸೇನೆಯ ಮೂರು ವಿಭಾಗದ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡುವ ಏಕೈಕ ಸಮನ್ವ ಅಧಿಕಾರಿಯಾಗಿರುತ್ತಾರೆ. ಭಾರತದ ಭೂ ಸೇನೆ, ನೌಕಾದಳ ಮತ್ತು ವಾಯುದಳಕ್ಕೆ ಸಂಬಂಧಿಸಿದ ಸಲಹೆಯನ್ನು ಸರ್ಕಾರಕ್ಕೆ ನೀಡುವ ಸಿಂಗಲ್ ಪಾಯಿಂಟ್ ಅಧಿಕಾರ ಅವರದ್ದಾಗಿರುತ್ತದೆ.

    ಕೆಲಸ ಏನು?
    ಮೂರು ಸೇನೆಗಳ ನಡುವೆ ಉತ್ತಮ ಸಂವಹನ ಸಮನ್ವಯ ಸಾಧಿಸುವುದು ಮುಖ್ಯ ಉದ್ದೇಶ. ಸೇನೆಗೆ ಹಂಚಿಯಾಗುವ ನಿಧಿಯನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು. ಮೂರು ಸೇನೆಗಳ ಸಂಬಂಧ ಏಕ ವ್ಯಕ್ತಿಯಾಗಿ ಪ್ರಧಾನಿಗಳಿಗೆ ಸಲಹೆ ನೀಡುವುದು. ಮೂರು ಸೇನೆಗಳ ಸಂಬಂಧ ಆಡಳಿತ್ಮಾಕ ನಿರ್ಧಾರಗಳನ್ನು ತೆಗೆದುಕೊಳ್ಳುವುದು. ತ್ರಿಸೇನೆಗಳ ಜಂಟಿ ನಿರ್ವಹಣೆ ಹಾಗೂ ತರಬೇತಿ ಕೂಡಾ ಈ ಮಹಾದಂಡನಾಯಕ ವ್ಯಾಪ್ತಿಯಲ್ಲಿ ಬರಲಿದೆ. ಸೈಬರ್, ಬಾಹ್ಯಾಕಾಶ, ವಿಶೇಷ ಭದ್ರತಾ ದಳಗಳು ಕೂಡಾ ಮಹಾ ದಂಡನಾಯಕ ಕಚೇರಿ ವ್ಯಾಪ್ತಿಗೆ ಬರಲಿದೆ.

    ಈ ವರ್ಷದ ಸ್ವಾತಂತ್ರ್ಯ ದಿನದಂದು ಕೆಂಪುಕೋಟೆಯ ಮೇಲೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮೋದಿ ಅವರು, ಭೂ, ವಾಯು ಹಾಗೂ ನೌಕಾ ಪಡೆಗಳು ನಮ್ಮ ಹೆಮ್ಮೆ. ಈ ಮೂರೂ ಸೇನಾ ಪಡೆಗಳ ಮಧ್ಯೆ ಸಮನ್ವಯತೆ ತರುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ನೇಮಕ ಮಾಡಲಾಗುತ್ತದೆ ಎಂದು ಐತಿಹಾಸಿಕ ಘೋಷಣೆ ಮಾಡಿದ್ದರು.

    ಸಿಡಿಎಸ್ ನೇಮಕಕ್ಕಾಗಿ ದೀರ್ಘಕಾಲದಿಂದ ಸೇನಾ ಅಧಿಕಾರಿಗಳು ಒತ್ತಾಯಿಸುತ್ತಾ ಬಂದಿದ್ದಾರೆ. ಸದ್ಯ ನಾವು ಅದನ್ನು ಕಾರ್ಯಗತಕ್ಕೆ ತರಲು ನಿರ್ಧಸಿದ್ದೇವೆ. ಈ ನೇಮಕವು ಮೂರು ಪಡೆಗಳ ಉನ್ನತ ಮಟ್ಟದಲ್ಲಿ ಪರಿಣಾಮಕಾರಿ ನಾಯಕತ್ವವನ್ನು ನೀಡಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದರು.

    ಮುಖ್ಯ ಸೇನಾಧಿಕಾರಿ ನೇಮಕವು ಈಗಿನ ಮಾತಲ್ಲ. 20 ವರ್ಷಗಳ ಹಿಂದೆಯೇ ಈ ವಿಚಾರ ಪ್ರಸ್ತಾಪವಾಗಿತ್ತು. ಆದರೆ ಕಾರ್ಯರೂಪಕ್ಕೆ ಬಾರದೇ ಹಾಗೆ ಉಳಿದಿತ್ತು. ಕಾರ್ಗಿಲ್ ಯುದ್ಧದ ನಂತರ ಭದ್ರತಾ ಲೋಪ ಮತ್ತು ಸೇನಾಪಡೆಗಳ ನಡುವೆ ಇರುವ ಅಂತರಗಳ ಕುರಿತು ಅಧ್ಯಯನ ನಡೆಸಿ ವರದಿ ನೀಡಲು 1999ರಲ್ಲಿ ಸಂಸತ್ತಿನ ಉನ್ನತ ಮಟ್ಟದ ಸಮಿತಿ ರಚಿಸಲಾಗಿತ್ತು. ಈ ಸಮಿತಿಯ ನೇತೃತ್ವವನ್ನು ಅಂದಿನ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಅವರು ವಹಿಸಿಕೊಂಡಿದ್ದರು. ಸುದೀರ್ಘ ಅಧ್ಯಯನ ನಡೆಸಿದ ಸಮಿತಿಯು, ಮೂರೂ ಸೇನಾಪಡೆಗಳ ನಡುವೆ ಹಲವೆಡೆ ಸಂವಹನ ಮತ್ತು ಹೊಂದಾಣಿಕೆಯ ಕೊರತೆಯಾಗಿದ್ದನ್ನು ಗುರುತಿಸಿತ್ತು. ಹೀಗಾಗಿ ಮೂರೂ ಸೇನಾಪಡೆಗಳು ಸೇರಿ ಓರ್ವ ಮುಖ್ಯಸ್ಥರನ್ನು ನೇಮಿಸುವಂತೆ ವರದಿ ನೀಡಿತ್ತು. ಆದರೆ ಬದಲಾದ ರಾಜಕೀಯ ಹಾಗೂ ಅಧಿಕಾರಿಗಳ ಆಕ್ಷೇಪದಿಂದಾಗಿ ಸಮಿತಿಯ ಶಿಫಾರಸು ಕಾರ್ಯರೂಪಕ್ಕೆ ಬಂದಿರಲಿಲ್ಲ.

    2012 ರಲ್ಲಿ ನರೇಶ್ ಚಂದ್ರಾ ನೇತೃತ್ವದ ಟಾಸ್ಕ್ ಫೋರ್ಸ್, 2016 ರಲ್ಲಿ ಲೆಫ್ಟಿನೆಂಟ್ ಜನರಲ್ ಡಿಬಿ ಶೇಕ್ತ್‍ಕಾರ್ ಸಮಿತಿ ಸಿಡಿಎಸ್ ನೇಮಕವಾಗಬೇಕೆಂದು ತನ್ನ ವರದಿಯಲ್ಲಿ ಶಿಫಾರಸು ಮಾಡಿತ್ತು. ಮೂರು ಸೇನೆಯ ಪ್ಲಾನಿಂಗ್, ಬಜೆಟ್, ಸಂಗ್ರಹಣೆ, ಶಸ್ತ್ರಾಸ್ತ್ರ ಖರೀದಿ, ತರಬೇತಿ ವಿಚಾರದ ಬಗ್ಗೆ ಸಿಡಿಎಸ್ ಗಮನ ಹರಿಸಿ ಕೇಂದ್ರ ರಕ್ಷಣಾ ಇಲಾಖೆಯ ಜೊತೆ ಸೇತುವೆಯಾಗಿ ಕೆಲಸ ಮಾಡಲಿದೆ.