Tag: ಸಿಡಿಲು

  • ಬಳ್ಳಾರಿ | ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಸಾವು

    ಬಳ್ಳಾರಿ | ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಸಾವು

    – ಓರ್ವ ಬಾಲಕನಿಗೆ ಗಂಭೀರ ಗಾಯ

    ಬಳ್ಳಾರಿ: ಕುರಿ ಮೇಯಿಸಲು ಹೋದಾಗ ಸಿಡಿಲು (Thunderstorm) ಬಡಿದು ಒಂದೇ ಕುಟುಂಬದ ಇಬ್ಬರು ದಾರುಣವಾಗಿ ಮೃತಪಟ್ಟು, ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ನಡೆದಿದೆ.

    ರಾರಾವಿ ಗ್ರಾಮದ ಭೀರಪ್ಪ (45), ಸುನೀಲ್ (26) ಮೃತ ದುರ್ದೈವಿಗಳುದ್ಸಿಡಿಲು ಬಡಿದ ಪರಿಣಾಮ ವಿನೋದ್ (14) ಗಂಭೀರ ಗಾಯಗೊಂಡಿದ್ದಾನೆ. ಒಂದೇ ಕುಟುಂಬದ ಭೀರಪ್ಪ, ಸುನೀಲ್ ಹಾಗೂ ವಿನೋದ್ ಕುರಿ ಮೇಯಿಸಲು ಹೋದಾಗ, ಮಳೆ ಬಂದಿದ್ದರಿಂದ ಮರದ ಆಶ್ರಯ ಪಡೆದಿದ್ದರು. ಮರದ ಕೆಳಗೆ ನಿಂತಾಗ ಸಿಡಿಲು ಬಡಿದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ:  ಕಾಂಗ್ರೆಸ್‌ನಿಂದ ಇಂದಿರಾಗಾಂಧಿ ಪೋಸ್ಟರ್ – ಬಿಜೆಪಿ ಕಿಡಿ

    ಗಂಭೀರ ಗಾಯಗೊಂಡಿರುವ ವಿನೋದ್‌ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಇಡೀ ರಾರಾವಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸಿರಗುಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಪಕ್ಷಾತೀತವಾಗಿ ಮೇ 15ರಿಂದ 23ರವರೆಗೆ ಕರ್ನಾಟಕದಲ್ಲಿ ತಿರಂಗಾ ಯಾತ್ರೆ: ಆರ್.ಅಶೋಕ್

  • ಹಾವೇರಿ | ಬಿರುಗಾಳಿ ಸಹಿತ ಮಳೆ – ಸಿಡಿಲಬ್ಬರಕ್ಕೆ ಇಬ್ಬರು ಬಲಿ

    ಹಾವೇರಿ | ಬಿರುಗಾಳಿ ಸಹಿತ ಮಳೆ – ಸಿಡಿಲಬ್ಬರಕ್ಕೆ ಇಬ್ಬರು ಬಲಿ

    ಹಾವೇರಿ: ಸಿಡಿಲು ಬಡಿದು(Lightning strikes) ಇಬ್ಬರು ವೃದ್ಧರು ಮೃತಪಟ್ಟಿರುವ ಪ್ರತ್ಯೇಕ ಘಟನೆ ಹಾವೇರಿ(Haveri) ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ಹಾನಗಲ್(Hanagal) ತಾಲೂಕಿನ ಕೊಂಡೊಜಿ ಗ್ರಾಮದ ಮರಿಯವ್ವ ನಾಯ್ಕರ್(60) ಮೃತರು. ಮೂಲತಃ ಗದಗ(Gadag) ಜಿಲ್ಲೆ ಬಸಾಪುರ ಗ್ರಾಮದ ನಿವಾಸಿಯಾದ ಮರಿಯವ್ವ ಕಳೆದ ಕೆಲವು ತಿಂಗಳಿನಿಂದ ಮಾವಿನ ತೋಟದಲ್ಲಿ ಕೆಲಸ ಮಾಡಿಕೊಂಡಿಕೊಂಡಿದ್ದರು. ಇಂದು ಸಂಜೆ ಸಿಡಿಲು ಬಡಿದು ಮರಿಯವ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಪಾಕ್‌ ಜೊತೆ ಮಾತುಕತೆ ನಡೆದ್ರೆ ಭಯೋತ್ಪಾದನೆ, POK ಬಗ್ಗೆ ಮಾತ್ರ: ಮೋದಿ ಖಡಕ್‌ ಮಾತು

    ಜಿಲ್ಲೆಯ ಹಿರೇಕೆರೂರು(Hirekeruru) ತಾಲೂಕಿನ ಡಮ್ಮಳ್ಳಿ(Dammalli) ಗ್ರಾಮದ ನಾಗಪ್ಪ ಕನಸೋಗಿ(62) ಮೃತ ದುರ್ದೈವಿ. ಗ್ರಾಮದ ದೊಡ್ಡ ಕೆರೆಬಳಿ ದನಕಾಯಲು ಹೋದಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಇನ್ನು ಪಾಕ್ ಕೆಮ್ಮಿದ್ರೂ ಭಾರತೀಯ ಸೇನೆ ಬಾರ್ಡರ್‌ಗೆ ನುಗ್ಗುತ್ತೆ: ಪ್ರಹ್ಲಾದ್ ಜೋಶಿ

    ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹಿರೇಕೆರೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಿರೇಕೆರೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಜಿಲ್ಲೆಯ ಹಲವೆಡೆ ಬಿರುಗಾಳಿ ಸಮೇತ ಮಳೆಯಾಗಿದ್ದು, ಜಿಲ್ಲೆಯಲ್ಲಿ ಮಳೆರಾಯ ತಂಪೆರೆದಿದ್ದಾನೆ.

  • ಬಿರುಗಾಳಿ ಸಹಿತ ಮಳೆ – ರೇಷ್ಮೆ ಗೂಡಿಗೆ ಸಿಡಿಲು ಬಡಿದು ರೈತ ಸಾವು

    ಬಿರುಗಾಳಿ ಸಹಿತ ಮಳೆ – ರೇಷ್ಮೆ ಗೂಡಿಗೆ ಸಿಡಿಲು ಬಡಿದು ರೈತ ಸಾವು

    ದಾವಣಗೆರೆ: ರೇಷ್ಮೆ ಗೂಡಿಗೆ ಸಿಡಿಲು ಬಡಿದು ರೈತ ಸಾವನ್ನಪ್ಪಿದ ಘಟನೆ ವಿಜಯನಗರ (Vijayanagara) ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನಲ್ಲಿ ನಡೆದಿದೆ.

    ಹರಪನಹಳ್ಳಿ ತಾಲೂಕಿನಾದ್ಯಾಂತ ಬಿರುಗಾಳಿ ಸಹಿತ ಭಾರೀ ಮಳೆಯಾದ ಪರಿಣಾಮ ನಾನಾ ಅವಾಂತರಗಳು ಸೃಷ್ಟಿಯಾಗಿವೆ. ಮಳೆಯ ಪರಿಣಾಮ ಸಿಡಿಲು ಬಡಿದು ಹುಣಸೆಕಟ್ಟೆಯ ರೈತ ಬಸವರಾಜಪ್ಪ ಸಾವನ್ನಪ್ಪಿದ್ದಾರೆ. ಏಕಾಏಕಿ ಗಾಳಿ ಸಹಿತ ಮಳೆ ಶುರುವಾಗಿದ್ದರಿಂದ ಬಸವರಾಜಪ್ಪ ರೇಷ್ಮೆ ಗೂಡಿನ ಬಳಿ ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಸಿಡಿಲು ಬಡಿದು ದುರಂತ ಸಂಭವಿಸಿದೆ. ಇದನ್ನೂ ಓದಿ: ಮುತ್ತಪ್ಪ ರೈ ಕುಟುಂಬದ ಮೇಲೆ ಸಾಕಷ್ಟು ಜನರಿಗೆ ದ್ವೇಷ ಇದೆ: ಪ್ರಕಾಶ್‌ ರೈ

    ಅಲ್ಲದೇ ಅಡವಿಹಳ್ಳಿಯ ಸಮೀಪದ ಹೊಂಬಳಗಟ್ಟೆ ಬಳಿ ಧರೆಗುರುಳಿದ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ನಂದಿಬೇವೂರಿನಲ್ಲಿಯೂ ವಿದ್ಯುತ್ ಕಂಬಗಳು ಧರೆಗುರುಳಿವೆ. ಇದನ್ನೂ ಓದಿ: ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆಗೆ ಕೂರಿಸದ ಪ್ರಕರಣ – ಶಿವಮೊಗ್ಗದ ದೊಡ್ಡಪೇಟೆ ಠಾಣೆಯಲ್ಲಿ FIR

    ಇನ್ನು ಬಿರು ಬೇಸಿಗೆಯಿಂದ ಬಸವಳಿದಿದ್ದ ಗಡಿ ಜಿಲ್ಲೆ ಚಾಮರಾಜನಗರದಲ್ಲಿಯೂ ವರುಣನ ಆಗಮನವಾಗಿದೆ. ಜಿಲ್ಲೆಯ ಹನೂರು ತಾಲೂಕಿನ ಅಜ್ಜಿಪುರದಲ್ಲಿ ಅರ್ಧ ಘಂಟೆಗೂ ಅಧಿಕ ಕಾಲ ಭಾರಿ ಬಿರುಗಾಳಿ ಸಹಿತ ಮಳೆ ಸುರಿದಿದೆ. ಇದನ್ನೂ ಓದಿ: ರಸ್ತೆ ಗುಂಡಿ ಬಗ್ಗೆ ದೂರು ಕೊಟ್ಟವರ ಎಕ್ಸ್ ಖಾತೆ ಬ್ಲಾಕ್; ಬಿಬಿಎಂಪಿ ನಡೆಗೆ ಸಾರ್ವಜನಿಕರ ಆಕ್ರೋಶ

  • ಬಿಹಾರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ- ಗುರುವಾರ ಒಂದೇ ದಿನ 58 ಬಲಿ

    ಬಿಹಾರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ- ಗುರುವಾರ ಒಂದೇ ದಿನ 58 ಬಲಿ

    ಪಾಟ್ನಾ: ಬಿಹಾರದಲ್ಲಿ (Bihar) ಭಾರೀ ಗಾಳಿಯೊಂದಿಗೆ ಆಲಿಕಲ್ಲು ಮಳೆಯಾಗುತ್ತಿದ್ದು (Rain) ಗುರುವಾರ ಒಂದೇ ದಿನ ರಾಜ್ಯಾದ್ಯಂತ 58 ಜನರು ಸಾವನ್ನಪ್ಪಿದ್ದಾರೆ. ಈ ಪೈಕಿ 23 ಜನರು ಸಿಡಿಲು (Lightning Strikes) ಬಡಿದು ಸಾವನ್ನಪ್ಪಿದ್ದರೆ, 35 ಜನರು ಭಾರೀ ಮಳೆ ಮತ್ತು ಗಾಳಿಯಿಂದ ಮರ, ಗೋಡೆಗಳು ಕುಸಿದು ಬಿದ್ದು ಮೃತಪಟ್ಟಿದ್ದಾರೆ.

    ಮಾಹಿತಿಯ ಪ್ರಕಾರ ನಳಂದ (Nalanda) ಜಿಲ್ಲೆಯಲ್ಲಿ ಭಾರೀ ಹಾನಿ ಸಂಭವಿಸಿದೆ. ಗಾಳಿಯಿಂದ 22 ಮಂದಿ ಸಾವನ್ನಪ್ಪಿದ್ದಾರೆ. ಸಿವಾನ್‌ನಲ್ಲಿ ಸಿಡಿಲು ಬಡಿದು 4 ಮಂದಿ ಬಲಿಯಾಗಿದ್ದಾರೆ.

    ಬಿಹಾರದ ಎಂಟು ಜಿಲ್ಲೆಗಳಲ್ಲಿ ಸಿಡಿಲು ಬಡಿದು 25 ಜನರು ಸಾವನ್ನಪ್ಪಿದ ಒಂದು ದಿನದ ನಂತರ ಇದು ಸಂಭವಿಸಿದೆ. ಮೃತಪಟ್ಟವರಲ್ಲಿ ಹೆಚ್ಚಿನವರು ರೈತರು ಮತ್ತು ದಿನಗೂಲಿ ಕಾರ್ಮಿಕರಾಗಿದ್ದು ಕೃಷಿ ಕೆಲಸದಲ್ಲಿ ತೊಡಗಿದ್ದಾಗ ಸಾವನ್ನಪ್ಪಿದ್ದಾರೆ.


    ಮುಖ್ಯಮಂತ್ರಿ ನಿತೀಶ್ ಕುಮಾರ್ ಸಂತಾಪ ಸೂಚಿಸಿ ಮೃತರ ಹತ್ತಿರದ ಸಂಬಂಧಿಕರಿಗೆ ತಲಾ 4 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ವಿಪತ್ತು ನಿರ್ವಹಣಾ ಇಲಾಖೆ ಹೊರಡಿಸಿದ ಸಲಹೆಗಳನ್ನು ಪಾಲಿಸುವಂತೆ ಅವರು ರಾಜ್ಯದ ಜನರಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಪಿರಿಯಡ್ಸ್ ಆಗಿದ್ದಕ್ಕೆ 8ನೇ ತರಗತಿ ವಿದ್ಯಾರ್ಥಿನಿಗೆ ಕ್ಲಾಸ್ ರೂಂ ಹೊರಗೆ ಪರೀಕ್ಷೆ

    ಈ ವರ್ಷದ ಫೆಬ್ರವರಿಯಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ರಾಜ್ಯ ವಿಧಾನಸಭೆಯಲ್ಲಿ ಮಂಡಿಸಲಾದ ಬಿಹಾರ ಆರ್ಥಿಕ ಸಮೀಕ್ಷೆಯಲ್ಲಿ 2023 ರಲ್ಲಿ ರಾಜ್ಯದಲ್ಲಿ ಸಿಡಿಲು ಅಥವಾ ಗುಡುಗುನಿಂದ 275 ಮಂದಿ ಮೃತಪಟ್ಟಿದ್ದಾರೆ ಎಂದು ಉಲ್ಲೇಖಿಸಲಾಗಿದೆ.


    ದರ್ಭಂಗಾ, ಪೂರ್ವ ಚಂಪಾರಣ್, ಗೋಪಾಲ್‌ಗಂಜ್, ಪಶ್ಚಿಮ ಚಂಪಾರಣ್, ಕಿಶನ್‌ಗಂಜ್, ಅರಾರಿಯಾ, ಸುಪೌಲ್, ಗಯಾ, ಸೀತಾಮರ್ಹಿ, ಶಿಯೋಹರ್, ನಲಂದಾ, ನವಾಡ ಮತ್ತು ಪಾಟ್ನಾ ಸೇರಿದಂತೆ ಹಲವಾರು ಜಿಲ್ಲೆಗಳಿಗೆ ಭಾರತ ಹವಾಮಾನ ಇಲಾಖೆ ಅರೇಂಜ್‌ ಅಲರ್ಟ್‌ ಜಾರಿ ಮಾಡಿದೆ. ಈ ಜಿಲ್ಲೆಗಳಲ್ಲಿ ಶುಕ್ರವಾರ ಮತ್ತು ಶನಿವಾರ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.

    ಮಧುಬನಿ, ದರ್ಭಂಗಾ, ಪೂರ್ವ ಚಂಪಾರಣ್, ಗೋಪಾಲ್‌ಗಂಜ್, ಪಶ್ಚಿಮ ಚಂಪಾರಣ್, ಕಿಶನ್‌ಗಂಜ್, ಅರಾರಿಯಾ, ಸುಪೌಲ್, ಗಯಾ, ಸೀತಾಮರ್ಹಿ, ಶಿಯೋಹರ್, ನಲಂದಾ, ನವಾಡ, ಪಾಟ್ನಾಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

  • ಸಿಡಿಲು ಬಡಿದು ಯುವಕ ಸಾವು

    ಸಿಡಿಲು ಬಡಿದು ಯುವಕ ಸಾವು

    ಬಳ್ಳಾರಿ: ಸಿಡಿಲು ಬಡಿದು ಯುವಕ ಸಾವನ್ನಪ್ಪಿರುವ ಘಟನೆ ವಿಜಯನಗರ (Vijayanagara) ಜಿಲ್ಲೆಯ ಕೂಡ್ಲಿಗಿ (Kudligi) ತಾಲೂಕಿನ ಬಂಡೆಬಸಾಪುರ ತಾಂಡಾದಲ್ಲಿ ನಡೆದಿದೆ.

    ಬಂಡೆಬಸಾಪುರ ಗ್ರಾಮದ ಪಾಂಡುನಾಯ್ಕ್(18) ಮೃತ ಯುವಕ. ಗುರುವಾರ ಸಂಜೆ ಗ್ರಾಮದಲ್ಲಿ ಭಾರೀ ಮಳೆಯಾಗಿದ್ದು, ಮಳೆ ಬರುತ್ತಿದ್ದ ಸಮಯದಲ್ಲಿ ಪಾಂಡುನಾಯ್ಕ್ ಮನೆ ಬಳಿ ನಿಂತಿದ್ದ. ಈ ವೇಳೆ ಸಿಡಿಲು ಬಡಿದು ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಬೊಲೆರೋ, ಬಸ್ ನಡುವೆ ಭೀಕರ ಅಪಘಾತ – ನಾಲ್ವರು ದುರ್ಮರಣ

    ಸಿಡಿಲಿನ ತೀವ್ರತೆಗೆ ಮನೆಯ ಗೋಡೆಗಳಿಗೆ ಹಾನಿಯಾಗಿದೆ. ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: 18 ದಿನಗಳ ಕಾಲ NIA ಕಸ್ಟಡಿಗೆ ರಾಣಾ – ಮಧ್ಯರಾತ್ರಿ ಕೋರ್ಟ್‌ನಲ್ಲಿ ವಾದ ಏನಿತ್ತು?

  • ಸುಬ್ರಹ್ಮಣ್ಯದಲ್ಲಿ ಸಿಡಿಲಿಗೆ ನವ ವಿವಾಹಿತ ಬಲಿ

    ಸುಬ್ರಹ್ಮಣ್ಯದಲ್ಲಿ ಸಿಡಿಲಿಗೆ ನವ ವಿವಾಹಿತ ಬಲಿ

    ಮಂಗಳೂರು: ಸಿಡಿಲು (Lightning) ಬಡಿದು ನವ ವಿವಾಹಿತ (Newly Married) ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ (Subramanya) ನಡೆದಿದೆ.

    ಪರ್ವತಮುಖಿ ನಿವಾಸಿ ಸೋಮಸುಂದರ್ (34) ಮೃತಪಟ್ಟ ನವ ವಿವಾಹಿತ. ಸಂಜೆಯ ವೇಳೆ ಮಳೆ (Rain) ಮುನ್ಸೂಚನೆ ಹಿನ್ನಲೆ ಅಂಗಳದಲ್ಲಿದ್ದ ಅಡಿಕೆಯನ್ನು ಸೋಮಸುಂದರ್‌ ರಾಶಿ ಮಾಡುತ್ತಿದ್ದರು.

    ಕೆಲಸ ಮಾಡುತ್ತಿದ್ದಾಗ ಸೋಮಸುಂದರ್‌ ಅವರಿಗೆ ಸಿಡಿಲು ಬಡಿದಿದೆ. ಕೂಡಲೇ ಅವರನ್ನು ವಾಹನದಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮೃತಪಟ್ಟಿದ್ದಾರೆ. ಹತ್ತು ದಿನದ ಹಿಂದೆಯಷ್ಟೇ ಸೋಮಸುಂದರ್ ಅವರ ವಿವಾಹ ನಡೆದಿತ್ತು.

  • ವಿಜಯಪುರದಲ್ಲಿ ಸಿಡಿಲು ಬಡಿದು ಇಬ್ಬರ ದುರ್ಮರಣ

    ವಿಜಯಪುರದಲ್ಲಿ ಸಿಡಿಲು ಬಡಿದು ಇಬ್ಬರ ದುರ್ಮರಣ

    ವಿಜಯಪುರ: ಸಿಡಿಲು (Lightning) ಬಡಿದು ಇಬ್ಬರು ಸಾವನ್ನಪ್ಪಿದ ಘಟನೆ ವಿಜಯಪುರ (Vijayapura) ಜಿಲ್ಲೆಯ ಇಂಡಿ (Indi) ತಾಲೂಕಿನಲ್ಲಿ ನಡೆದಿದೆ.

    ಇಂಡಿ ಪಟ್ಟಣದಲ್ಲಿ ಭೀರಪ್ಪ ಅವರಾದಿ (15) ಎಂಬ ಬಾಲಕ ಸಿಡಿಲಿಗೆ ಬಲಿಯಾಗಿದ್ದಾನೆ. ಇನ್ನೂ ಇಂಡಿ ತಾಲೂಕಿನ ಮಸಳಿ ಬಿಕೆ ಗ್ರಾಮದಲ್ಲಿ ಸೋಮಶೇಖರ್ ಕಾಶಿನಾಥ ಪಟ್ಟಣಶೆಟ್ಟಿ (45) ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಲೋಕ ಸಮರದಲ್ಲಿ ಒಕ್ಕಲಿಗ ಜಟಾಪಟಿ – ಏನಿದು ಫೋನ್‌ ಟ್ಯಾಪ್‌ ಕೇಸ್‌?

    ರಾಜ್ಯದಲ್ಲಿ ತೀವ್ರ ಬೇಸಿಗೆಯ ನಡುವೆಯೂ, ಹಲವು ಜಿಲ್ಲೆಗಳಲ್ಲಿ ವರುಣ ತಂಪೆರೆದಿದ್ದಾನೆ. ಶಿವಮೊಗ್ಗ, ಮಡಿಕೇರಿ, ಚಿಕ್ಕಮಗಳೂರು, ವಿಜಯಪುರ ಸೇರಿದಂತೆ ಕಲಬುರಗಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗಿದೆ. ವಿಜಯಪುರ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಿದ್ದು, ವಿಜಯಪುರ ನಗರ, ತಿಕೋಟ ತಾಲೂಕಿನ ಘೋಣಸಗಿ, ಬಾಬಾನಗರ, ಹುಬನೂರು, ಸೋಮದೇವರಹಟ್ಟಿ, ಬಿಜ್ಜರಗಿ, ಕಳ್ಳಕವಟಗಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಗಾಳಿ ಸಹಿತ ಹಗುರ ಮಳೆಯಾಗಿದೆ. ಇದನ್ನೂ ಓದಿ: ರಾಜ್ಯದ ಹಲವೆಡೆ ಮಳೆ – ಬಿಸಿಲಿನಿಂದ ಕಂಗೆಟ್ಟ ಜನಕ್ಕೆ ತಂಪೆರೆದ ವರುಣ

  • ಭದ್ರಾವತಿಯಲ್ಲಿ ಸಿಡಿಲು ಬಡಿದು ಸಹೋದರರ ದುರ್ಮರಣ

    ಭದ್ರಾವತಿಯಲ್ಲಿ ಸಿಡಿಲು ಬಡಿದು ಸಹೋದರರ ದುರ್ಮರಣ

    ಶಿವಮೊಗ್ಗ: ಸಿಡಿಲು ಬಡಿದ (Lightning Strike) ಪರಿಣಾಮ ಗದ್ದೆಗೆ ತೆರಳಿದ್ದ ಸಹೋದರರಿಬ್ಬರು ಸಾವಿಗೀಡಾದ ಘಟನೆ ಭದ್ರಾವತಿಯ (Bhadravati) ಹುಣಸೆಕಟ್ಟೆ ಜಂಕ್ಷನ್‍ನಲ್ಲಿ ನಡೆದಿದೆ

    ಮೃತ ದುರ್ದೈವಿಗಳನ್ನು ಬೀರು (32) ಹಾಗೂ ಸುರೇಶ್ (30) ಎಂದು ಗುರುತಿಸಲಾಗಿದೆ. ಇಬ್ಬರೂ ಮಂಗಳವಾರ ರಾತ್ರಿ, ಕಟಾವಾಗಿದ್ದ ಭತ್ತದ ಗದ್ದೆಗೆ ಭತ್ತ ಕಾಯಲು ತೆರಳಿದ್ದರು. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಭ್ರೂಣ ಪತ್ತೆ, ಹತ್ಯೆ ಪ್ರಕರಣ- ಆಲೆಮನೆ ಮಾಲೀಕನಿಂದ ಆಶಾ ಕಾರ್ಯಕರ್ತೆಗೆ ಬೆದರಿಕೆ

    ಮೃತರ ಶವವನ್ನು ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಆಸ್ಪತ್ರೆಯ ಮುಂಭಾಗ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

    ಈ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್‌ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 6 ತಿಂಗಳಿಗೇ ಕಿತ್ತು ಬಂದ 1.58 ಕೋಟಿಯ 2 ಕಿ.ಮೀ ರಸ್ತೆ!

  • ಕಡೂರಿನಲ್ಲಿ ಸಿಡಿಲು ಬಡಿದು ಓರ್ವ ಸಾವು – ನಾಲ್ವರಿಗೆ ಗಾಯ

    ಕಡೂರಿನಲ್ಲಿ ಸಿಡಿಲು ಬಡಿದು ಓರ್ವ ಸಾವು – ನಾಲ್ವರಿಗೆ ಗಾಯ

    ಚಿಕ್ಕಮಗಳೂರು: ಸಿಡಿಲು ಬಡಿದು (Lightning Strike) ಓರ್ವ ಯುವಕ ಸಾವನ್ನಪ್ಪಿ, ನಾಲ್ವರು ಗಾಯಗೊಂಡ ಘಟನೆ ಜಿಲ್ಲೆಯ ಕಡೂರು (Kaduru) ತಾಲೂಕಿನ ಯಗಟಿಪುರ ಗ್ರಾಮದಲ್ಲಿ ನಡೆದಿದೆ.

    ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ ಹೋಬಳಿಯ ಗಂಜಿಗೆರೆ ಗ್ರಾಮದ ಮುಕೇಶ್‌(28) ಮೃತಪಟ್ಟ ಯುವಕ. ಸಂಬಂಧಿಕರ ಮಗುವಿನ ಮಂಡೆ ಹರಕೆ ತೀರಿಸಲು ಯಗಟಿಪುರ ಗ್ರಾಮದ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನಕ್ಕೆ ಸಂಬಂಧಿಕರ ಜೊತೆಗೆ ಬಂದಿದ್ದ ಮುಕೇಶ್ ದೇವಸ್ಥಾನದವರು ನೀಡಿದ ರೂಮಿನಲ್ಲಿ ಉಳಿದುಕೊಂಡಿದ್ದರು. ಇದನ್ನೂ ಓದಿ: ಪ್ರೀತಿ ಹೆಸರಲ್ಲಿ ದೋಖಾ – ಲವ್ ಜಿಹಾದ್‌ಗೆ ಯತ್ನಿಸಿದ ಮುಸ್ಲಿಂ ಯುವಕನಿಂದ ಯುವತಿ ಬಚಾವ್

    ದೇವರ ದರ್ಶನ ಪಡೆದ ನಂತರ ಊರಿಗೆ ವಾಪಸ್ಸಾಗಲು ಮುಂದಾದಾಗ ಜೋರಾಗಿ ಮಳೆ ಬಂದಿದೆ. ರೂಮಿನ ಹೊರಗೆ ಕಾಯುತ್ತ ನಿಂತಿದ್ದ ಸಮಯದಲ್ಲಿ ಸಿಡಿಲು ಬಡಿದಿದೆ.

    ತೀವ್ರ ಅಸ್ವಸ್ಥಗೊಂಡ ಮುಕೇಶ್‌ ಅವರನ್ನು ಮೊದಲು ಯಗಟಿ ಆಸ್ಪತ್ರೆಗೆ ನಂತರ ಕಡೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ. ಎರಡೂವರೆ ವರ್ಷದ ಹಿಂದೆ ಕಾವ್ಯ ಅವರನ್ನು ಮುಕೇಶ್‌ ಮದುವೆಯಾಗಿದ್ದರು.

     

    ಮುಕೇಶ್ ಜೊತೆಯಲ್ಲಿದ್ದ ಶೃತಿ ಎಂಬುವರ ಕಾಲಿಗೂ ಸಿಡಿಲು ಬಡಿದಿದೆ. ಸಂಕೇತ್ ಎಂಬುವವರ ಹೊಟ್ಟೆ ಭಾಗಕ್ಕೆ, ಸುದೀಪ್ ಎಂಬುವರ ದೇಹದ ಕೆಳಭಾಗ ಮತ್ತು ನಾಗಾರ್ಜುನ ಎಂಬುವವರ ದೇಹದ ಎಡಭಾಗಕ್ಕೆ ಸಿಡಿಲು ಬಡಿದು ಗಾಯಗಳಾಗಿವೆ. ಇವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಸುದೀಪ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಮಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಡಿಲಿನ ಹೊಡೆತಕ್ಕೆ ದೇವಸ್ಥಾನದ ವಸತಿ ಗೃಹಗಳ ವಿದ್ಯುತ್ ವಯರ್‌ಗಳು ಸುಟ್ಟು ಹೋಗಿವೆ. ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಬನಶಂಕರಿ ದೇವಸ್ಥಾನದ ನೂತನ ಗೋಪುರಕ್ಕೆ ಬಡಿದ ಸಿಡಿಲು – ಸ್ಥಳೀಯರಲ್ಲಿ ಆತಂಕ

    ಬನಶಂಕರಿ ದೇವಸ್ಥಾನದ ನೂತನ ಗೋಪುರಕ್ಕೆ ಬಡಿದ ಸಿಡಿಲು – ಸ್ಥಳೀಯರಲ್ಲಿ ಆತಂಕ

    ಗದಗ: ಬನಶಂಕರಿ ದೇವಸ್ಥಾನದ (Banashankari temple) ನೂತನ ಗೋಪುರಕ್ಕೆ ಸಿಡಿಲು ಬಡಿದು ಸ್ಥಳದಲ್ಲಿದ್ದ 8 ಜನ ಪ್ರಾಣಾಪಾಯದಿಂದ ಪಾರಾದ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ (Lakshmeshwara) ತಾಲೂಕಿನ ಶಿಗ್ಲಿ (Shigli) ಗ್ರಾಮದಲ್ಲಿ ನಡೆದಿದೆ.

    ಶಿಗ್ಲಿ ಗ್ರಾಮದ ಐತಿಹಾಸಿಕ ಬನಶಂಕರಿ ದೇವಸ್ಥಾನ ಗೋಪುರಕ್ಕೆ ಸಿಡಿಲು ಬಡಿದು ಗೋಪುರ ಜಖಂ ಆಗಿದೆ. ಈ ವೇಳೆ ಸ್ಥಳದಲ್ಲಿದ್ದ 8 ಜನ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಓರ್ವನ ಕೈಗೆ ಗೋಪುರದ ಸಿಮೆಂಟ್ ತುಣುಕುಗಳು ಬಡಿದು ಗಾಯವಾಗಿದೆ. ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಇದನ್ನೂ ಓದಿ: ಪುಣ್ಯಸ್ಮರಣೆ – ತಂದೆಯ ಸಮಾಧಿಗೆ ಹೆಲಿಕಾಪ್ಟರ್‌ನಲ್ಲಿ ಪುಷ್ಪಾರ್ಚನೆ ಮಾಡಿಸಿದ ಮಗ

    8 ತಿಂಗಳ ಹಿಂದೆಯಷ್ಟೇ ಸುಮಾರು 1.20 ಕೋಟಿ ರೂ. ವೆಚ್ಚದಲ್ಲಿ ಈ ಗೋಪುರ ಜೀರ್ಣೋದ್ಧಾರ ಮಾಡಲಾಗಿತ್ತು. ಸಾವಿರಾರು ಜನ ದಾನಿಗಳ ದೇಣಿಗೆ ಸಹಾಯದಿಂದ ಸುಂದರ ಗೋಪುರ ನಿರ್ಮಿಸಲಾಗಿತ್ತು. ಈಗ ಏಕಾಏಕಿ ಸಿಡಿಲು ಬಡಿದಿರುವುದರಿಂದ ಗ್ರಾಮದ ಜನರಲ್ಲಿ ಆತಂಕ ಮನೆಮಾಡಿದೆ. ಐತಿಹಾಸಿಕ ದೇವಸ್ಥಾನ ಗೋಪುರಕ್ಕೆ ಅಪಚಾರ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಪ್ರೀತಿಸಿದವಳಿಂದ ಕಪಾಳಮೋಕ್ಷ – ಅವಮಾನ ಸಹಿಸಲಾರದೇ ಪ್ರಿಯಕರ ಆತ್ಮಹತ್ಯೆ

    Live Tv
    [brid partner=56869869 player=32851 video=960834 autoplay=true]