ಬೆಂಗಳೂರು: ಮಾಜಿ ಸಚಿವರ ರಮೇಶ್ ಜಾರಕಿಹೊಳಿಗೆ ಇಂದು ಬಿಗ್ ಡೇ ಆಗಿದ್ದು, ರಾಸಲೀಲೆ ಪ್ರಕರಣ ಸಂಬಂಧ ಇಂದು ಹೈಕೋರ್ಟ್‍ನಲ್ಲಿ ಭವಿಷ್ಯ ನಿರ್ಧಾರವಾಗುತ್ತದೆ.
ಪ್ರಕರಣ ಸಂಬಂಧ ಹೈಕೋರ್ಟ್ ತನಿಖಾ ಪ್ರಗತಿ ವರದಿ ಕೇಳಿದೆ. ಈ ಹಿನ್ನೆಲೆಯಲ್ಲಿ ಎಸ್‍ಐಟಿ (Special Investigation Team) ಇಂದು ತನಿಖಾ ಪ್ರಗತಿ ವರದಿ ಸಲ್ಲಿಸಲಿದೆ. ವರದಿ ನೋಡಿದ ಬಳಿಕ ಹೈಕೋರ್ಟ್ ಎಸ್ ಐಟಿಯೇ ತನಿಖಾ ಮುಂದುವರೆಸಬೇಕಾ..? ಬೇರೆ ತನಿಖಾ ಸಂಸ್ಥೆಗೆ ವರ್ಗಾವಣೆ ಆಗ್ಬೇಕಾ..? ಎಂದು ತನಿಖಾ ಪ್ರಗತಿ ವರದಿ ನೋಡಿ ನ್ಯಾಯಾಲಯ ವಾದ ಪ್ರತಿವಾದ ಆಲಿಸಲಿದೆ.

ಬಳಿಕ ತನಿಖೆಯನ್ನು ಯಾರು ಮುಂದುವರಿಸಬೇಕು ಎಂದು ಆದೇಶ ಮಾಡಲಿದೆ. ವಿಶೇಷ ಅಂದರೆ ಯುವತಿಯ ಪರ ಹಿರಿಯ ವಕೀಲೆ ವಾದ ಮಂಡಿಸುತ್ತಾ ಇದ್ದಾರೆ. ಸುಪ್ರಿಂಕೋರ್ಟ್ ಹಿರಿಯ ವಕೀಲೆ ಇಂದ್ರ ಜೈಸಿಂಗ್ ವಾದ ಮಾಡ್ತಾ ಇದ್ದಾರೆ. ಬಹುತೇಕ ಇಂದು ರಮೇಶ್ ಜಾರಕಿಹೊಳಿ ಭವಿಷ್ಯ ನಿರ್ಧಾರ ಆಗಲಿದೆ.

ಏನಿದು ಪ್ರಕರಣ..?
ಮಾರ್ಚ್ 2ರಂದು ರಮೇಶ್ ಜಾರಕಿಹೊಳಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆ ಬಳಿಕ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದರು. ಇತ್ತ ವೀಡಿಯೋ ಸಂಚಲನ ಸೃಷ್ಟಿಸಿ ರಮೇಶ್ ಜಾರಕಿಹೊಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಹ ನೀಡಿದ್ದರು. ಆ ಬಳಿಕದಿಂದ ಅವರು ಎಲ್ಲೂ ಕಾಣಿಸಿಕೊಂಡಿರಲಿಲ್ಲ. ನಂತರ ಸ್ವತಃ ಸುದ್ದಿಗೋಷ್ಠಿ ಕರೆದು ಮಾಧ್ಯಮಗಳ ಮುಂದೆ ಭಾವುಕರಾಗಿದ್ದರು. ಇಷ್ಟೆಲ್ಲಾ ಆದ ನಂತರ ಮಾಜಿ ಸಚಿವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟು ಗೋಕಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಬಳಿಕ ಪಿಪಿಇ ಕಿಟ್ ಧರಿಸಿ ಉಪಚುನಾವಣೆಗೆ ಮತದಾನ ಮಾಡಿದ್ದರು.

ಕೆಲ ದಿನಗಳ ಹಿಂದೆಯಷ್ಟೇ ಎಸ್‍ಐಟಿ ಮುಂದೆ ಹಾಜರಾಗಿದ್ದ ರಮೇಶ್ ಜಾರಕಿಹೊಳಿ, ಯುವತಿ ಸಮ್ಮತಿಯ ಮೇರೆಗೆ ಲೈಂಗಿಕ ಸಂಪರ್ಕದಲ್ಲಿ ಭಾಗಿಯಾಗಿದ್ದು, ಬಳಿಕ ಆಕೆಯೇ ವಿಡಿಯೋ ಮಾಡಿಕೊಂಡು ಈ ರೀತಿ ನಡೆದುಕೊಳ್ಳುತ್ತಾ ಇದ್ದಾಳೆ ಎಂದು ಅಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದರು. ಆದರೆ ಈ ಮಾಹಿತಿಯನ್ನು ಎಸ್‍ಐಟಿ ಅಧಿಕಾರಿಗಳು ಅಲ್ಲಗೆಳೆದಿದ್ದು, ಪ್ರಕರಣ ಇನ್ನೂ ತನಿಖಾ ಹಂತದಲ್ಲಿದೆ. ಯಾವುದೇ ಬೆಳವಣಿಗೆಯೂ ನಡೆದಿಲ್ಲ. ತನಿಖೆಯ ಬಳಿಕ ಸಂಪೂರ್ಣ ಸತ್ಯಾಸತ್ಯತೆ ಬೆಳಕಿಗೆ ಬರಲಿದೆ ಅಂತ ಈ ಸುದ್ದಿಗೆ ಎಸ್‍ಐಟಿ ಮೂಲಗಳು ಸ್ಪಷ್ಟಪಡಿಸಿತ್ತು.

























ನಿನ್ನೆ ಸಿಡಿಯಲ್ಲಿದ್ದ ಮಗಳು ಕಿಡ್ನಾಪ್ ಆಗಿದ್ದಾಳೆ ಎಂದು ಯುವತಿಯ ತಂದೆ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಯುವತಿಯ ತಂದೆ, ತಾಯಿ ಮತ್ತು ಇಬ್ಬರು ಸಹೋದರರು, ಓರ್ವ ವಕೀಲರೊಂದಿಗೆ ಆಗಮಿಸಿ ನಿನ್ನೆ ದೂರು ನೀಡಿದ್ದಾರೆ. ಆದರೆ ದೂರಿನ ಪ್ರತಿಯಲ್ಲಿ ನೀಡಿದ ವಿಳಾಸದಲ್ಲಿದ್ದ ಮನೆಯಿಂದ ಎರಡು ದಿನಗಳ ಹಿಂದೆಯೇ ಯುವತಿ ತಂದೆ ತೆರಳಿದ್ದಾರೆ.
ಯುವತಿ ಕುಟುಂಬ ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯಲ್ಲಿ ವಾಸವಿತ್ತು. ಆದರೆ ನಿನ್ನೆ ದೂರು ನೀಡಿ ಕುಟುಂಬ ಅಜ್ಞಾತವಾಗಿದೆ. ಇತ್ತ ಪೋಷಕರ ದೂರಿನಂತೆ ಯುವತಿ ಕಿಡ್ನ್ಯಾಪ್ ಕೇಸ್ ತನಿಖೆ ನಡೆಸಲು ವಿಶೇಷ ತಂಡ ರಚನೆ ಮಾಡಲಾಗಿದೆ. ಎಪಿಎಂಸಿ ಠಾಣೆ ಸಿಪಿಐ ಜಾವೇದ್ ಮುಷಾಪುರಿ ನೇತೃತ್ವದಲ್ಲಿ ವಿಶೇಷ ತಂಡ ರಚನೆಯಾಗಿದ್ದು, ಯುವತಿ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ಕೈಗೊಳ್ಳಲಿದ್ದಾರೆ.
ಸದ್ಯ ಪೊಲೀಸರು ಅಪರಿಚಿತನ ವಿರುದ್ಧ ಕೇಸ್ ದಾಖಲಿಸಿಕೊಂಡಿದ್ದು, ಯುವತಿ ಪೋಷಕರಿಗೆ ಯಾರ ಮೇಲೆ ಸಂಶಯವಿದೆ ಎಂಬ ಬಗ್ಗೆ ವಿಚಾರಣೆ ನಡೆಸಲಿದ್ದಾರೆ. ಮಾರ್ಚ್ 2ರಂದು ರಾತ್ರಿ 12 ರಿಂದ 1 ಗಂಟೆ ಮಧ್ಯೆ ಮಗಳನ್ನು ಬೆಂಗಳೂರಿನ ಹಾಸ್ಟೆಲ್‍ನಿಂದ ಕಿಡ್ನಾಪ್ ಮಾಡಿದ್ದಾರೆ. ಅಕ್ರಮ ಬಂಧನದಲ್ಲಿಟ್ಟು ಹೆದರಿಸಿ ಅಶ್ಲೀಲ ಸಿಡಿ ಮಾಡಿ ಹರಿಬಿಟ್ಟ ಆರೋಪಿಸಿ ಯುವತಿ ತಂದೆ ದೂರಿನಲ್ಲಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಅಪರಿಚಿತರ ವಿರುದ್ಧ ಕೇಸ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.