Tag: ಸಿದ್ದಗಂಗಾ ಶ್ರಿ ಪ್ರತಿಮೆ

  • ಸಿದ್ದಗಂಗಾ ಶ್ರೀಗಳ ಪ್ರತಿಮೆ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಅನುದಾನ ಮೀಸಲು: ಪರಮೇಶ್ವರ್

    ಸಿದ್ದಗಂಗಾ ಶ್ರೀಗಳ ಪ್ರತಿಮೆ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಅನುದಾನ ಮೀಸಲು: ಪರಮೇಶ್ವರ್

    ತುಮಕೂರು: ಶಿವೈಕ್ಯ ಶಿವಕುಮಾರ ಶ್ರೀಗಳ (Shivakumar Swamiji) ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಇಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ಸಿದ್ದಗಂಗಾ ಮಠಕ್ಕೆ (Siddaganga Mutt) ಭೇಟಿ ಕೊಟ್ಟು ಶ್ರೀಗಳ ಗದ್ದಿಗೆಗೆ ಪೂಜೆ ಸಲ್ಲಿಸಿದರು. ಶಿವಕುಮಾರ ಶ್ರೀಗಳ ಸಮಾಜ ಸೇವೆಯನ್ನು ಸ್ಮರಿಸಿದರು.

    ಇದೇ ವೇಳೆ ಮಾತನಾಡಿದ ಪರಮೇಶ್ವರ್, ಶಿವಕುಮಾರ ಶ್ರೀಗಳ ಹೆಸರಿನಲ್ಲಿ ಆಚರಿಸಲು ಉದ್ದೇಶಿಸಿರುವ ದಾಸೋಹ ದಿನವನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ಕ್ರಮಕೈಗೊಳ್ಳಲಾಗುವುದು ಎಂದರು. ಅಲ್ಲದೇ ವೀರಾಪುರದಲ್ಲಿ ಶ್ರೀಗಳ ಪ್ರತಿಮೆ ನಿರ್ಮಾಣಕ್ಕೆ ಈ ಬಾರಿಯ ಬಜೆಟ್‌ನಲ್ಲಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ಕಾಡು ರಕ್ಷಕನಿಂದಲೇ ಆನೆ ದಂತ ಸಾಗಾಟ – ಫಾರೆಸ್ಟ್ ವಾಚರ್, ಸಂಬಂಧಿ ಬಂಧನ

    ಇದೇ ವೇಳೆ ಕೆಲ ರಾಜಕೀಯ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮಂಗಳವಾರ ಬೆಳಗಾವಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ತ್ಯಾಗದ ಬಗ್ಗೆ ಮಾತನಾಡಿರೋದು ಯಾವ ಅರ್ಥದಲ್ಲಿ ಅನ್ನೋದು ಗೊತ್ತಿಲ್ಲ. ಕಾಂಗ್ರೆಸ್ ಪಕ್ಷ ಸ್ವಾತಂತ್ರ‍್ಯ ಹೋರಾಟದಿಂದಲೂ ತ್ಯಾಗ ಮಾಡುತ್ತಾ ಬಂದಿದೆ. ಆದರೆ ಈಗಿನ ಆಧುನಿಕ ಸಮಾಜಕ್ಕೆ ತ್ಯಾಗದ ಮನೋಭಾವ ಕಡಿಮೆಯಾಗಿದೆ ಎಂಬ ಅರ್ಥದಲ್ಲಿ ಹೇಳಿರಬಹುದು. ಅದರಂತೆ ಸ್ವಾಭಾವಿಕವಾಗಿ ಕಾಂಗ್ರೆಸ್‌ನಲ್ಲೂ ತ್ಯಾಗದ ಮನೋಭಾವ ಕಡಿಮೆ ಆಗಿದೆ ಎಂದು ಹೇಳಿರಬಹುದು ಎಂದರು. ಇದನ್ನೂ ಓದಿ: ವ್ಹೀಲ್ ಚೇರ್‌ನಲ್ಲಿ ರಶ್ಮಿಕಾ ಮಂದಣ್ಣ- ವಿಡಿಯೋ ವೈರಲ್‌

    ಮೈಕ್ರೋಫೈನಾನ್ಸ್ನವರು ಗೈಡ್‌ಲೈನ್ಸ್ ಉಲ್ಲಂಘಿಸಿ ಸಾಲಗಾರರಿಗೆ ತೊಂದರೆ ಕೊಡುತ್ತಿದ್ದಾರೆ. ಸಂತ್ರಸ್ತರು ದೂರು ಕೊಟ್ಟರೆ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಹಲವು ಜನರ ಮೇಲೆ ಕ್ರಮ ಕೈಗೊಂಡಿದ್ದೇವೆ. ಹಾಗೆಯೇ ಲೈಸೆನ್ಸ್ ಇಲ್ಲದ ಫೈನಾನ್ಸ್ನವರ ಸರ್ವೆಯನ್ನು ಹಣಕಾಸು ಇಲಾಖೆ ಮಾಡಬೇಕು ಎಂದು ನುಣುಚಿಕೊಂಡರು. ಇದನ್ನೂ ಓದಿ: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರಲು ನಾಲಾಯಕ್: ಜೆಡಿಎಸ್ ಕಿಡಿ