ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ (Congress) ನಾಯಕತ್ವ ಕದನ ತಾರಕಕ್ಕೇರಿದೆ. ಈ ನಡುವೆ ಅನಗತ್ಯವಾಗಿ ಮತ್ತೆ ಮಾತಾಡಿ ವಿವಾದ ಸೃಷ್ಟಿಸಲ್ಲ ಎಂದು ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೇಳಿಕೊಂಡಿದ್ದಾರೆ.
ಪಕ್ಷದ ಶಿಸ್ತುಕ್ರಮದ ನೋಟಿಸ್ ಬೆದರಿಕೆಗೂ ಬಗ್ಗದೇ ನಾನು ಹೇಳಿದ್ರಲ್ಲಿ ತಪ್ಪೇನಿದೆ ಅಂತ ಪುನರುಚ್ಛರಿಸಿದ್ದಾರೆ. ನನ್ನ ಹೇಳಿಕೆ ವಿವಾದ ಸ್ವರೂಪ ಪಡೆದಾಗಲೇ ಸ್ಪಷ್ಟೀಕರಣ ಕೊಟ್ಟಿದ್ದೇನೆ. ಅನಗತ್ಯವಾಗಿ ಮತ್ತೆ ಮಾತಾಡಿ ವಿವಾದ ಸೃಷ್ಟಿಸಲ್ಲ ಅಂದಿದ್ದಾರೆ.
ಬೆಂಗಳೂರು: ಅಧಿಕಾರ ಹಂಚಿಕೆ, ಸಂಪುಟ ಸರ್ಜರಿ ಕುದಿಯಲ್ಲಿ ಬೇಯುತ್ತಿರುವ ರಾಜ್ಯ ಕಾಂಗ್ರೆಸ್‌ನಲ್ಲಿ ಉತ್ತರಾಧಿಕಾರಿ ಸಮರ ತಾರಕಕ್ಕೇರಿದೆ. ಸಿದ್ದರಾಮಯ್ಯಗೆ (Siddaramaiah) ಸತೀಶ್ ಜಾರಕಿಹೊಳಿ ಸಮರ್ಥ ಉತ್ತರಾಧಿಕಾರಿ ಎಂಬ ಸಂದೇಶ ರವಾನಿಸಿ ಯತೀಂದ್ರ ಇಕ್ಕಟ್ಟಿಗೆ ಸಿಲುಕಿದ್ದಾರೆ. ಯತೀಂದ್ರ ಹೇಳಿಕೆ ರಾಜಕೀಯ ಸಂಚಲನ ಸೃಷ್ಟಿಸುತ್ತಿದ್ದಂತೆಯೇ ಹೈಕಮಾಂಡ್‌ಗೆ ಕೆಪಿಸಿಸಿ ರಿಪೋರ್ಟ್ ಸಲ್ಲಿಸಿದೆ.
ಈಗ ಯತೀಂದ್ರ (Yathindra Siddaramaiah) ಮೇಲೆ ಹೈಕಮಾಂಡ್ ಶಿಸ್ತುಕ್ರಮದ ತೂಗುಗತ್ತಿ ಇದೆ. ಯತೀಂದ್ರ ಮಾತಿಗೆ ಕಡಿವಾಣಕ್ಕೆ ಪಕ್ಷದ ಕೆಲ ಶಾಸಕರು ಆಗ್ರಹಿಸಿದ್ದಾರೆ. ಡಿಸಿಎಂ ಡಿಕೆಶಿ ಕೂಡ, ‘ಯಾರ ಹತ್ತಿರ.. ಏನು ಮಾತನಾಡಬೇಕೋ.. ಅಲ್ಲಿ ಮಾತನಾಡುತ್ತೇನೆ. ನಾನು ಶಿಸ್ತಿನ ಜೊತೆ ನಿಲ್ಲುತ್ತೇನೆ’ ಅಂತ ಪರೋಕ್ಷ ಸಂದೇಶ ರವಾನಿಸಿದ್ದಾರೆ. ಇದನ್ನೂ ಓದಿ: ಆಂತರಿಕ ಸಂಘರ್ಷ, ಅಧಿಕಾರ ಹಸ್ತಾಂತರ ಚರ್ಚೆ ಮಧ್ಯೆ ರಾಜ್ಯಕ್ಕೆ ಬರಲಿದ್ದಾರೆ ರಾಹುಲ್ ಗಾಂಧಿ
ಈ ಬೆನ್ನಲ್ಲೇ ಸಿಎಂ ಪ್ರತಿಕ್ರಿಯಿಸಿದ್ದು, ಮಗನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಸೈದ್ಧಾಂತಿಕವಾಗಿ ಮಾತ್ರ ಮಾತನಾಡಿದ್ದೇನೆ ಅಂತ ಹೇಳಿದ್ದಾನೆ. ಇದನ್ನು ತಿರುಚಿ ಬರೆಯಲಾಗಿದೆ ಅಂತ ವಿವಾದಕ್ಕೆ ಇತಿಶ್ರೀ ಹಾಡಿದ್ದಾರೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿಂದು ನಡೆದ ಸಭೆಯಲ್ಲಿ ರಾಜ್ಯದಲ್ಲಿ 13 ಕಂಪನಿಗಳಿಂದ 27,000 ಕೋಟಿ ರೂ. ಹೂಡಿಕೆ ಮಾಡಲು ಒಪ್ಪಿಗೆ ಸೂಚಿಸಲಾಯಿತು.
The State clears ₹27,607 crore investment proposals creating 8,704 jobs.
At the 66th meeting of the State High-Level Clearance Committee, chaired by Hon’ble CM Shri Siddaramaiah , we approved 13 major projects—11 new and 2 expansions—reflecting investor confidence in… pic.twitter.com/RclnRHe4BJ
ಸಿದ್ದರಾಮಯ್ಯ ವಿಧಾನಸೌಧದಲ್ಲಿಂದು ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ ಸಭೆಯಲ್ಲಿ ರಾಜ್ಯದಲ್ಲಿ 13 ಕಂಪನಿಗಳಿಂದ 27 ಸಾವಿರ ಕೋಟಿ ಹೂಡಿಕೆಗೆ (Investment Proposals) ಒಪ್ಪಿಗೆ ನೀಡಲಾಗಿದೆ. ಅದರ ಅನ್ವಯ 11 ಹೊಸ ಯೋಜನೆಗಳು, 8 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿದೆ ಎಂದು ಅಂದಾಜಿಸಲಾಗಿದೆ. 11 ಹೊಸ ಕೈಗಾರಿಕಾ ಯೋಜನೆಗಳು ಮತ್ತು 2 ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗಳು ಸೇರಿವೆ ಒಟ್ಟು 13 ಯೋಜನೆಗಳಿಂದ 8,704 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಸಚಿವ ಎಂ.ಬಿ ಪಾಟೀಲ್ (MB Patil) ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
11 ಹೊಸ ಹೂಡಿಕೆ ಯೋಜನೆಗಳ ಪೈಕಿ ತೇಜಸ್ ನೆಟ್ವರ್ಕ್ಸ್ 542.19 ಕೋಟಿ ರೂ., ವಾಯು ಅಸೆಟ್ಸ್ 1,251 ಕೋಟಿ ರೂ., ಜಿಂದಾಲ್ ಸ್ಟೀಲ್ಸ್ 1,300.57 ಕೋಟಿ ರೂ., ಜಿಂದಾಲ್ ಎಲೆಕ್ಟ್ರಿಕಲ್ ಸ್ಟೀಲ್ 7,102 ಕೋಟಿ ರೂ., ಗ್ರಾಸಿಂ ಇಂಡಸ್ಟ್ರೀಸ್ 1,386 ಕೋಟಿ ರೂ., ಎಸ್ಎಫ್ಎಕ್ಸ್ ಇಂಡಿಯಾ 9,298 ಕೋಟಿ ರೂ., ಸ್ನೀಡರ್ ಎಲೆಕ್ಟ್ರಿಕ್ ಐಟಿ ಬಿಝಿನೆಸ್, ಎಚ್ಎಸ್ಎಸ್ ಟೆಕ್ಸ್ಟೈಲ್ಸ್ 740 ಕೋಟಿ ರೂ., ಸ್ನೈಡರ್ ಎಲೆಕ್ಟ್ರಿಕ್ ಬಿಸಿನೆಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ 1,520.75 ಕೋಟಿ ರೂ., ಕ್ಯೂಪಿಐಎಐ ಇಂಡಿಯಾ 1,136 ಕೋಟಿ ರೂ., ಟೊಯೋಟಾ ಇಂಡಸ್ಟ್ರೀಸ್ ಎಂಜಿನ್ ಇಂಡಿಯಾ ಲಿಮಿಟೆಡ್ 1,330 ಕೋಟಿ ರೂ. ಮತ್ತು ರಿಲಯನ್ಸ್ ಕನ್ಸೂಮರ್ ಪ್ರಾಡಕ್ಟ್ಸ್ 1,622 ಕೋಟಿ ರೂ., ಹೂಡಿಕೆ ಮಾಡಲಿವೆ. ಮಿಕ್ಕಂತೆ, ಎಂಬೆಸಿ ಇಂಡಸ್ಟ್ರಿಯಲ್ ಪಾರ್ಕ್ ಮತ್ತು ಬಾಲಾಜಿ ವೇಫರ್ಸ್ ಕಂಪನಿಗಳು ಕ್ರಮವಾಗಿ 80 ಮತ್ತು 298.75 ಕೋಟಿ ರೂ. ಹೆಚ್ಚುವರಿ ಬಂಡವಾಳ ಹೂಡಿಕೆ ಮಾಡಲಿವೆ.
ಬೆಂಗಳೂರು: ಕಾಂಗ್ರೆಸ್‌ನಲ್ಲಿ ಉತ್ತರಾಧಿಕಾರತ್ವ ಸಮರ ತಾರಕಕ್ಕೇರಿದೆ. ಮಾತನಾಡಲ್ಲ ಎನ್ನುತ್ತಲೇ ಯತೀಂದ್ರಗೆ (Yathindra Siddaramaiah) ಶಿಸ್ತಿನ ಪಾಠ ಮಾಡಿದ್ದಾರೆ ಡಿಕೆಶಿ. ಈಗಲೂ ನಾನು ಶಿಸ್ತಿನ ಜೊತೆ ನಿಲ್ಲುತ್ತೇನೆ ಎನ್ನುವ ಮೂಲಕ ಚದುರಂಗದಾಟ ಶುರು ಆಗಿದೆ. ಹಾಗಾದ್ರೆ ಯತೀಂದ್ರ ವಿರುದ್ಧ ಶಿಸ್ತುಕ್ರಮವೋ..? ಎಚ್ಚರಿಕೆಯ ಆಟವೋ.? ಇನ್ನಷ್ಟೇ ಕಾದುನೋಡಬೇಕಿದೆ.
ಕಾಂಗ್ರೆಸ್ ಕುಲುಮೆಯಲ್ಲೀಗ ಕಾದ ಕಬ್ಬಿಣ್ಣಕ್ಕೆ ಸಿಕ್ಕ ಸಿಕ್ಕವರ ಬಡಿತ ಜೋರಾಗಿದೆ. ಬದಲಿ ನಾಯಕತ್ವ ಜಟಾಪಟಿಗೆ ಉತ್ತರ ಸಿಗುವ ಮುನ್ನವೇ ಉತ್ತರಾಧಿಕಾರತ್ವ ಪ್ರಸ್ತಾಪ ಬಿಸಿಯೇರಿಸಿದೆ. ಸಿದ್ದರಾಮಯ್ಯ ಬಳಿಕ ಸತೀಶ್ ಜಾರಕಿಹೊಳಿ (Satish Jarkiholi) ಸಮರ್ಥ ನಾಯಕತ್ವದ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಕೊಟ್ಟ ಹೇಳಿಕೆಯನ್ನ ಬೇರೆ ಬೇರೆ ರೀತಿಯಲ್ಲಿ ವ್ಯಾಖ್ಯಾನಿಸಲಾಗ್ತಿದೆ. ಡಿಕೆಶಿ ಬಣದ ಬೆಂಬಲಿಗ ಶಾಸಕರಾದ ಶಿವಗಂಗಾ, ಇಕ್ಬಾಲ್ ಹುಸೇನ್ ಯತೀಂದ್ರಗೆ ಶಿಸ್ತಿನ ಗೆರೆ ಏಕಿಲ್ಲ ಎಂದು ಬಹಿರಂಗವಾಗಿ ಪ್ರಶ್ನಿಸಿ ಅಖಾಡವನ್ನ ರೋಚಕಗೊಳಿಸಿದ್ದಾರೆ. ಈ ನಡುವೆ ಯತೀಂದ್ರ ವಿರುದ್ಧ ಶಿಸ್ತು ಕ್ರಮಕ್ಕೆ ಬೆಂಬಲಿಗ ಶಾಸಕರ ಆಗ್ರಹಕ್ಕೆ ಡಿಕೆಶಿ ಪರೋಕ್ಷ ಬೆಂಬಲ ನೀಡಿದ್ದಾರೆ.
ಹೈಕಮಾಂಡ್‌ಗೆ ಕೆಪಿಸಿಸಿ ವರದಿ ರವಾನೆ; ಸಿಡಿದ ಡಿಕೆ
ಇನ್ನು, ಉತ್ತರಾಧಿಕಾರ ಬಗ್ಗೆ ಯತೀಂದ್ರ ನೀಡಿದ್ದ ಹೇಳಿಕೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್‌ಗೆ ಕೆಪಿಸಿಸಿ ವರದಿ (KPCC Report) ರವಾನಿಸಿದೆ. ಯತೀಂದ್ರ ವಿರುದ್ಧ ಕ್ರಮ ಕೈಗೊಳ್ಳಬೇಕು ಅಂತ ಬೆಂಬಲಿಗರು ಆಡಿರೋ ಮಾತನ್ನು ಡಿಕೆಶಿ ಪರೋಕ್ಷವಾಗಿ ಬೆಂಬಲಿಸಿದ್ದಾರೆ. ನನ್ನ ಪಕ್ಷದ ಆದ್ಯತೆ ಶಿಸ್ತು ಎನ್ನುವ ಮೂಲಕ ಯತೀಂದ್ರಗೆ ಡಿಕೆಶಿ (DK Shivakumar) ಪರೋಕ್ಷ ಗುನ್ನಾ ಕೊಟ್ಟಿದ್ದಾರೆ. ಈ ಬಗ್ಗೆ ನಾನು ಈಗ ಮಾತನಾಡಲ್ಲ. ಯಾರ ಹತ್ತಿರ.. ಏನು ಮಾತನಾಡಬೇಕೋ.. ಅಲ್ಲಿ ಮಾತನಾಡುತ್ತೇನೆ. ನಾನು ಶಿಸ್ತಿನ ಜೊತೆ ನಿಲ್ಲುತ್ತೇನೆ. ಶಿಸ್ತು ನನ್ನ ಪಕ್ಷದ ಆದ್ಯತೆ ಎಂದು ಪರೋಕ್ಷ ಸಂದೇಶ ರವಾನಿಸಿದ್ದಾರೆ.
ಉತ್ತರಾಧಿಕಾರ ಹೇಳಿಕೆಗೆ ಸಿಎಂ ಮೌನ
ಇನ್ನು ಪುತ್ರ ಯತೀಂದ್ರ ಉತ್ತರಾಧಿಕಾರತ್ವದ ಬಗ್ಗೆ ಇಷ್ಟೆಲ್ಲ ಮಾತನಾಡಿದ್ರೂ ಸಿಎಂ ಮಾತ್ರ ಇನ್ನೂ ಮೌನ. ಕಾಂಗ್ರೆಸ್ ಒಳಗೆ ಇಷ್ಟೆಲ್ಲ ಬೆಳವಣಿಗೆ ಆಗ್ತಿದ್ರೂ ಸಿಎಂ ಅಂತರ ಕಾಯ್ದುಕೊಂಡಿದ್ದು ಏಕೆ ಎಂಬ ಚರ್ಚೆ ಶುರುವಾಗಿದೆ. ಸಿಎಂ ಕಾದು ನೋಡುವ ತಂತ್ರಕ್ಕೆ ಮುಂದಾಗಿದ್ದು, ಎಲ್ಲವನ್ನೂ ನೋಡಿ ಕಡೆಗಳಿಗೆಯಲ್ಲಿ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗ್ತರಾ? ಎಂಬುದನ್ನ ಕಾದುನೋಡಬೇಕಿದೆ. ಈ ನಡುವೆ ಸಚಿವ ಪ್ರಿಯಾಂಕ್ ಖರ್ಗೆ ಯತೀಂದ್ರ ಹೇಳಿಕೆಯನ್ನ ಸಮರ್ಥಿಸಿಕೊಂಡ್ರೂ ಸಿಎಂ ಬದಲಾವಣೆ ತೀರ್ಮಾನ ಹೈಕಮಾಂಡ್ ಎಂದು ಮೇಲೆ ಕೈ ತೋರಿಸಿ ಜಾರಿಕೊಂಡಿದ್ದಾರೆ.
ಬಿಹಾರ ಎಲೆಕ್ಷನ್ ಬಳಿಕ ಕ್ರಾಂತಿನಾ?
ಈ ಮಧ್ಯೆ, ನವೆಂಬರ್ ಕ್ರಾಂತಿಯ ಬಗ್ಗೆ ರಾಜಣ್ಣ ಪುತ್ರ ರಾಜೇಂದ್ರ ಮತ್ತೆ ಮಾತನಾಡಿದ್ದಾರೆ. ಯತೀಂದ್ರ ಹೇಳಿಕೆಯಲ್ಲಿ ತಪ್ಪೇನಿಲ್ಲ. ಮುಂದೆ ಅಹಿಂದ ನಾಯಕ ಮುಖ್ಯಮಂತ್ರಿ ಆಗಬೇಕು ಅಂತ ಹೇಳಿದ್ದಾರೆ. ಇದು ಅವರ ವೈಯಕ್ತಿಕ ಅಭಿಪ್ರಾಯ ಎಂದಿದ್ದಾರೆ. ಬಿಹಾರ ಎಲೆಕ್ಷನ್ ನಂತರ ಕೆಲವೊಂದು ಬದಲಾವಣೆಗಳು ಆಗ್ತವೆ ನೋಡ್ತೀರಿ ಅಂತ ಮೇಲ್ಮನೆ ಸದಸ್ಯ ರಾಜೇಂದ್ರ ರಾಜಣ್ಣ ಹೇಳಿದ್ದಾರೆ.
ಬೆಂಗಳೂರು: ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (KSDL) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳನ್ನು ಶುಕ್ರವಾರ ಸರ್ಕಾರಕ್ಕೆ ಹಸ್ತಾಂತರಿಸಿತು.
ಸಂಸ್ಥೆಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ (MB Patil) ಮತ್ತು ಕೆಎಸ್‌ಡಿಎಲ್ ಅಧ್ಯಕ್ಷ ಅಪ್ಪಾಜಿ ನಾಡಗೌಡ (Appaji Nadagouda) ಅವರು ಈ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದರು. ಈ ಕಾರ್ಯಕ್ರಮವು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು.
ಈ ವೇಳೆ ಸಚಿವ ಪಾಟೀಲ್ ಮಾತನಾಡಿ, ಕೆಎಸ್‌ಡಿಎಲ್ ಸಂಸ್ಥೆಯು ಕಳೆದ ಹಣಕಾಸು ವರ್ಷದಲ್ಲಿ 1,700 ಕೋಟಿ ರೂಪಾಯಿ ವಹಿವಾಟು ನಡೆಸಿ, 451 ಕೋಟಿ ರೂ. ಲಾಭ ಕಂಡಿದೆ. ಇದರ ಪೈಕಿ ನಿಯಮದಂತೆ ಶೇ.30ರಷ್ಟು ಲಾಭಾಂಶವನ್ನು ಸರ್ಕಾರಕ್ಕೆ ಕೊಡಲಾಗಿದೆ. ವಹಿವಾಟು, ಲಾಭ ಮತ್ತು ಲಾಭಾಂಶ ಮೂರರಲ್ಲೂ ಇದು ಸಾರ್ವಕಾಲಿಕ ದಾಖಲೆ ಆಗಿದೆ ಎಂದಿದ್ದಾರೆ.
2022-23ರಲ್ಲಿ ಬಿಜೆಪಿ ಸರ್ಕಾರವಿದ್ದಾಗ ಸಂಸ್ಥೆಯ ವತಿಯಿಂದ ಸರ್ಕಾರಕ್ಕೆ 54 ಕೋಟಿ ರೂಪಾಯಿ ಡಿವಿಡೆಂಡ್ (ಲಾಭಾಂಶ) ಕೊಡಲಾಗಿತ್ತು. 2023-24ರಲ್ಲಿ 108 ಕೋಟಿ ರೂ. ಲಾಭಾಂಶ ಹಸ್ತಾಂತರಿಸಲಾಗಿತ್ತು. ಇದಕ್ಕೆ ಹೋಲಿಸಿದರೆ ಲಾಭಾಂಶದಲ್ಲಿ ಈಗ 27 ಕೋಟಿ ರೂ. ಹೆಚ್ಚಳವಾಗಿದೆ. ಮುಂಬರುವ ವರ್ಷಗಳಲ್ಲಿ ಇದು ಮತ್ತಷ್ಟು ಹೆಚ್ಚಲಿದೆ ಎಂದು ಅವರು ನುಡಿದಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ ಜಾರ್ಜ್, ಪ್ರಿಯಾಂಕ್ ಖರ್ಗೆ, ಡಾ.ಎಂ.ಸಿ ಸುಧಾಕರ್, ಸಂತೋಷ ಲಾಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಪಿ.ಕೆ ಪ್ರಶಾಂತ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬೆಂಗಳೂರು: ಸೂರ್ಯನಿಗೂ ಚಂದ್ರನಿಗೂ, ಅಮಾವಾಸ್ಯೆಗೂ ಹುಣ್ಷಿಮೆಗೂ ವ್ಯತ್ಯಾಸ ತಿಳಿದು ಸಿದ್ದರಾಮಯ್ಯನವರು ಮಾತಾಡಲಿ ಅಂತ ಅಮಾವಾಸ್ಯೆ ಎಂದು ಕರೆದ ಸಿಎಂ ಸಿದ್ದರಾಮಯ್ಯಗೆ (Siddaramaiah) ಸಂಸದ ತೇಜಸ್ವಿ ಸೂರ್ಯ (Tejaswi Surya) ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತಾಡಿದ ಅವರು, ಸಿದ್ದರಾಮಯ್ಯ ಹಿರಿಯರು, ಲೋಕಾನುಭ ಇರೋರು ಅವರಿಗೆ ಅಮಾವಾಸ್ಯೆ, ಹುಣ್ಣಿಮೆ ನಡುವಿನ ವ್ಯತ್ಯಾಸ ಗೊತ್ತಿಲ್ವಾ? ವರ್ಷದ 365 ದಿನವೂ ಬೆಳಕು ಕೊಡೋದು ಸೂರ್ಯ ಮಾತ್ರ, ಚಂದ್ರ ಅಲ್ಲ. ಚಂದ್ರನ ಪೂಜೆ ಮಾಡುವವರ ಜೊತೆಯಿದ್ದು, ಅಮಾವಾಸ್ಯೆ ದಿನ ಸೂರ್ಯ ಇರಲ್ಲ ಅಂತ ಸಿಎಂ ಗೊಂದಲಗೊಂಡಿರಬಹುದು ಎಂದು ಟಾಂಗ್ ಕೊಟ್ಟಿದ್ದಾರೆ.ಇದನ್ನೂ ಓದಿ: ಇದಾನಲ್ಲ ಅಮವಾಸ್ಯೆ ತೇಜಸ್ವಿ ಸೂರ್ಯ ಕೇಂದ್ರದಿಂದ ಹಣ ತರಲ್ಲ – ಸಿಎಂ
ಸಿದ್ದರಾಮಯ್ಯ ಹಿರಿಯರು, ನನ್ನ ತಂದೆ ಸಮಾನ. ಅವರ ವಿರುದ್ಧ ನಾನು ವೈಯಕ್ತಿಕವಾಗಿ ಟೀಕಿಸಿದರೆ ನನಗೆ ಶೋಭೆ ತರಲ್ಲ. ಅದು ನನ್ನ ರಾಜಕಾರಣದ ಸಂಸ್ಕಾರ ಅಲ್ಲ, ನಮ್ಮ ಪಕ್ಷದ ಸಂಸ್ಕಾರವೂ ಅಲ್ಲ. ಆದರೆ ಸಿದ್ದರಾಮಯ್ಯ ಆಡಳಿತವನ್ನು ಪ್ರಶ್ನೆ ಮಾಡಲೇಬೇಕು. ಕರ್ನಾಟಕಕ್ಕೆ ಸಿದ್ದರಾಮಯ್ಯ ಆಡಳಿತ ಎಂಬ ಗ್ರಹಣ ಹಿಡಿದಿದೆ. ಬೆಂಗಳೂರಿನಲ್ಲಿ ನರಕ ಸ್ಥಿತಿ ಇದೆ. ಬೆಂಗಳೂರಿನಲ್ಲಿ ಗುಂಡಿಗಳಿಲ್ಲದ ರಸ್ತೆಗಳಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಆಗ್ತಿಲ್ಲ. ಅತ್ಯಾಚಾರ, ಕೊಲೆ ಪ್ರಕರಣಗಳು ಹೆಚ್ಚಾಗಿವೆ. ಕಂಪನಿಗಳು ಬೆಂಗಳೂರಿಗೆ ಬರ್ತಿಲ್ಲ. ಗೃಹ ಸಚಿವರು ಬೆಟ್ಟಿಂಗ್‌ನಲ್ಲಿ ಬ್ಯುಸಿ ಇದ್ದರೆ, ಐಟಿ ಸಚಿವರು ಆರ್‌ಎಸ್‌ಎಸ್ ಬ್ಯಾನ್ ಮಾಡೋದ್ರಲ್ಲಿ ಬ್ಯುಸಿ ಇದ್ದಾರೆ. ಇದು ಸಿದ್ದರಾಮಯ್ಯ ಆಡಳಿತದ ವೈಖರಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿ: ನಮ್ಮದು ಏನೇ ಇದ್ದರೂ 2028ಕ್ಕೆ ಸಿಎಂ ಸ್ಥಾನದ ಕ್ಲೈಮ್ ಮಾಡುತ್ತೇವೆ. ಯತೀಂದ್ರ ಹೇಳಿಕೆ ಅದು ಅವರ ವೈಯಕ್ತಿಕ ಅಭಿಪ್ರಾಯ ಎಂದು ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಹೇಳಿದ್ದಾರೆ.
ಯತಿಂದ್ರ (Yathindra Siddaramaiah) ಅವರು ಅವರ ವೈಯಕ್ತಿಕ ಹೇಳಿಕೆ ನೀಡಿದ್ದಾರೆ. ಅಂತಿಮವಾಗಿ ಯಾರು ನಾಯಕ ಎನ್ನುವುದನ್ನು ಪಕ್ಷದ ಶಾಸಕರು ನಿರ್ಧಾರ ಮಾಡುತ್ತಾರೆ. ಅಹಿಂದ ನಾಯಕತ್ವ ಇಲ್ಲದೇ ಪಕ್ಷ ಸಂಘಟನೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಇಂದಿನಿಂದ ಸರ್ಕಾರಿ ಶಾಲೆಗಳು ಪುನಾರಂಭ
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಪವರ್ ಶೇರಿಂಗ್ ಸಂಘರ್ಷ ಮಧ್ಯೆ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೊಸ ಲೆಕ್ಕಾಚಾರಕ್ಕೆ ನಾಂದಿ ಹಾಡುವ ಹೇಳಿಕೆ ಕೊಟ್ಟಿದ್ದಾರೆ. ಸತೀಶ್ ಜಾರಕಿಹೊಳಿ (Satish Jarkiholi) ಸಿದ್ದರಾಮಯ್ಯನವರ ಸಮರ್ಥ ಉತ್ತರಾಧಿಕಾರಿ ಎಂಬರ್ಥದಲ್ಲಿ ಮಾತನಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿ ಪಕ್ಷವನ್ನ ಮುನ್ನಡೆಸ್ತಾರೆ ಅಂತ ಹೇಳುವ ಮೂಲಕ ದೀಪಾವಳಿ ಹಬ್ಬದಂದೇ ರಾಜಕೀಯ ಸಂಚಲನ ಸೃಷ್ಟಿಸಿದ್ದಾರೆ. ಪವರ್ ಶೇರಿಂಗ್ ಗದ್ದಲದ ಸಂದರ್ಭಗಳಲ್ಲೇ ಪರ್ಯಾಯ ನಾಯಕತ್ವದ ದಾಳ ಉರುಳಿಸಿದ ಯತೀಂದ್ರ, ಇದ್ದಕ್ಕಿದ್ದಂತೆ ರ‍್ಯಾಯ ನಾಯಕ ಪ್ರಸ್ತಾಪಿಸುವ ಮೂಲಕ ಕಾಂಗ್ರೆಸ್‌ನಲ್ಲಿ (Congress) ಸತೀಶ್ ಜಾರಕಿಹೊಳಿಯ ನಾಯಕತ್ವವೂ ಇದೆ ಎಂಬ ಸಂದೇಶ ರವಾನಿಸಿದ್ದಾರೆ.
ಬೆಳಗಾವಿ ಜಿಲ್ಲೆ ರಾಯಭಾಗದ ಕಾರ್ಯಕ್ರಮವೊಂದರಲ್ಲಿ ಯತೀಂದ್ರ, ನಮ್ಮ ತಂದೆಯವರು ರಾಜಕೀಯದ ಕೊನೆಗಾಲದಲ್ಲಿದ್ದಾರೆ. ಇಂಥ ಸಂದರ್ಭದಲ್ಲಿ ನಮಗೆ ಮಾರ್ಗದರ್ಶಕರ ಅಗತ್ಯತೆ ಇದೆ. ಸತೀಶ್ ಜಾರಕಿಹೊಳಿ ಮಾದರಿಯಾಗಿ ನಮ್ಮನ್ನು ಮುನ್ನಡೆಸುತ್ತಾರೆ ಎಂದು ಹೇಳಿದ್ದಾರೆ. ಈ ಮಾತು ಸಂಚಲನ ಸೃಷ್ಟಿಸುತ್ತಿದ್ದಂತೆಯೇ ಸ್ಪಷ್ಟನೆ ಕೊಟ್ಟ ಯತೀಂದ್ರ, ರಾಜಕೀಯ ಉತ್ತರಾಧಿಕಾರಿ ಬಗ್ಗೆ ಹೇಳಿಲ್ಲ, ಸೈದ್ಧಾಂತಿಕ ಉತ್ತರಾಧಿಕಾರಿ ಬಗ್ಗೆ ಅಷ್ಟೆ ಹೇಳಿದ್ದೇನೆ ಎಂದಿದ್ದಾರೆ.
ಇತ್ತ ಸಿಎಂ ಆಗೋ ಕನಸು ಹೊತ್ತು ಟೆಂಪಲ್ ರನ್ ಮಾಡ್ತಿರೋ ಡಿಸಿಎಂ ಡಿಕೆಶಿಗೂ ಇದು ಮಾರ್ಮಿಕ ಸಂದೇಶವಾಗೋದು ಸುಳ್ಳಲ್ಲ. ಇವತ್ತು ಬೆಳಗ್ಗೆಯಷ್ಟೇ ಡಿಕೆಶಿ ಮಂತ್ರಾಲಯದಲ್ಲಿ ಗುರುರಾಯರ ದರ್ಶನ ಪಡೆದು ಸಂಕಲ್ಪ ಮಾಡಿದ್ರು. ವ್ಯಕ್ತಿ ಪೂಜೆ ಬೇಡ ಅಂದಿರೋ ಡಿಕೆಶಿ, ನಾವು ಒಟ್ಟಿಗೆ ಕೆಲಸ ಮಾಡಿಕೊಂಡು ಹೋಗ್ತೀವಿ ಎಂದಿದ್ದಾರೆ.
ಇದು ಒಂದ್ಕಡೆಯಾದ್ರೆ ಸಿದ್ದರಾಮಯ್ಯ ಬಳಿಕ ಸಚಿವ ಪ್ರಿಯಾಂಕ್ ಖರ್ಗೆ ಅಂತಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೈರಲ್ ಆಗ್ತಿದೆ. ಸಿದ್ದರಾಮಯ್ಯ ನಂತರ ಯಾರು ಅಹಿಂದ ನಾಯಕರು ಯಾರು? ಉತ್ತರ ಈಗ ಸಿಕ್ಕಿದೆ. ಅದುವೆ ಏಕೈಕ ನಾಯಕ ಪ್ರಿಯಾಂಕ್ ಖರ್ಗೆ ಅಂತಾ ಪೋಸ್ಟ್ ಹಾಕಲಾಗಿದೆ.
– ನಿವೃತ್ತ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳ ಸೇವಾ ನಿಧಿಗೆ 10 ಕೋಟಿ; ಸಿಎಂ ಘೋಷಣೆ
ಬೆಂಗಳೂರು: ರಾಜ್ಯದಲ್ಲಿ ಕೋಮು ಹತ್ಯೆ, ಹಿಂಸಾಚಾರ, ಪ್ರಚೋದನಕಾರಿ ಭಾಷಣ (Provocative speech) ಹಾಗೂ ನೈತಿಕ ಪೊಲೀಸ್ ಗಿರಿಯಂತಹ ಪ್ರಕರಣಗಳನ್ನ ಹತ್ತಿಕ್ಕಲು ಸ್ಪೆಷಲ್ ಆಕ್ಷನ್ ಫೋರ್ಸ್ ರಚನೆ ಮಾಡಿದ್ದೇವೆಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದರು.
ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್‌ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ. ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು.
ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹೀಗಾಗಿ
ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿರುವುದು… pic.twitter.com/JWrmB6IdhW
ಬಳಿಕ ಮಾತನಾಡಿ, ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್‌ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ. ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು. ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹೀಗಾಗಿ ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿರುವುದು ಉತ್ತಮ ಕೆಲಸ. ಹಾಗೆಯೇ ಮಾದಕ ವಸ್ತು ಹಾವಳಿಗೂ ಬ್ರೇಕ್ ಬಿದ್ದಿದ್ದು ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕಿದೆ. ಈ ಎಲ್ಲಾ ಸಾಧನೆಗಳ ಶ್ರೇಯ ಪೊಲೀಸ್ ಇಲಾಖೆಗೆ ಸಲ್ಲಬೇಕು. ರಾಜ್ಯದಲ್ಲಿ ಪರಿಶಿಷ್ಠ ಜಾತಿ ಹಾಗೂ ವರ್ಗದವರ ಮೇಲಿನ ದೌರ್ಜನ್ಯ ತಡೆಗೆ ಡಿಸಿಆರ್‌ಇ ಪೊಲೀಸ್ ಠಾಣೆಗಳನ್ನು ಕಾರ್ಯೋನ್ಮುಖಗೊಳಿಸಿದ್ದೇವೆ. ಇವು ಪರಿಣಾಮಕಾರಿಯಾಗಿ ಕೆಲಸ ಮಾಡುವ ಮೂಲಕ ಸಾಂವಿಧಾನಿಕ ಹಕ್ಕು ಮತ್ತು ಮೌಲ್ಯಗಳನ್ನು ಕಾಪಾಡುವ ಕೆಲಸ ಮಾಡಬೇಕು.
ಒಂದು ವರ್ಷದಲ್ಲಿ ರಾಜ್ಯದ 8 ಮಂದಿ ಸೇರಿ ದೇಶದಲ್ಲಿ 191 ಮಂದಿ ಕರ್ತವ್ಯ ನಿರ್ವಹಣೆ ವೇಳೆ ಪ್ರಾಣ ತ್ಯಾಗ ಮಾಡುವ ಮೂಲಕ ಹುತಾತ್ಮರಾಗಿದ್ದಾರೆ. ಇವರ ತ್ಯಾಗ, ಬಲಿದಾನಕ್ಕೆ ಬೆಲೆ ಕಟ್ಟಲಾಗದು. ಇವರನ್ನು ಸ್ಮರಿಸಿ, ನಮಿಸುವುದು ಪ್ರತಿಯೊಬ್ಬರ ಕರ್ತವ್ಯ. ಸಂವಿಧಾನದಲ್ಲಿ ಜನರಿಗೆ ಕೊಟ್ಟಿರುವ ಹಕ್ಕುಗಳನ್ನು ಕಾಪಾಡುವ ಜವಾಬ್ದಾರಿಯನ್ನೂ ಪೊಲೀಸ್ ಇಲಾಖೆ ನಿರ್ವಹಿಸುತ್ತಿದೆ. ನಿವೃತ್ತ ಪೊಲೀಸ್ ಆರೋಗ್ಯ ಯೋಜನೆಯ ವೈದ್ಯಕೀಯ ಮರು ಪಾವತಿ ವೆಚ್ಚವನ್ನು ವಾರ್ಷಿಕ 1 ಲಕ್ಷ ರೂ.ಗಳಿಂದ 1.50 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಎಲ್ಲಾ ಪೊಲೀಸ್ ಸಿಬ್ಬಂದಿಯ ಆರೋಗ್ಯ ತಪಾಸಣಾ ವೆಚ್ಚವನ್ನು 1,000 ರೂ.ಗಳಿಂದ 1,500 ರೂ.ಗೆ ಹೆಚ್ಚಿಸಲಾಗಿದೆ ಎಂದು ವಿವರಿಸಿದರು.
ಪೊಲೀಸ್ ಇಲಾಖೆ ಕಾನೂನು ಸುವ್ಯವಸ್ಥೆ ಮೇಲೆ ರಾಜ್ಯದ ಅಭಿವೃದ್ಧಿ ಕಾಣುತ್ತೆ. ರಾಜ್ಯಕ್ಕೆ ಬಂಡವಾಳ ಹರಿದುಬರುವಲ್ಲೂ ಪೊಲೀಸರ ಪಾತ್ರವಿದೆ. ಪ್ರಾಣತ್ಯಾಗದ ಜೊತೆಗೆ ಹಲವರು ಗಾಯಗೊಂಡಿರುತ್ತಾರೆ. ಅವರೆಲ್ಲರ ಜೊತೆಗೆ ಸರ್ಕಾರ ಇರುತ್ತೆ. ಕೋಮು ಹತ್ಯೆ, ದ್ವೇಷ ಭಾಷಣ, ನೈತಿಕ ಪೊಲೀಸ್ ಗಿರಿ ಹೆಚ್ಚಾಗಿ ಉಡುಪಿ, ದಕ್ಷಿಣ ಕನ್ನಡದಲ್ಲಿ ಆಗುತ್ತೆ. ಹೀಗಾಗಿ ಇಂತಹ ಪ್ರಕರಣಗಳನ್ನ ಹತ್ತಿಕ್ಕಲು ಸ್ಪೆಷಲ್ ಆಕ್ಷನ್ ಫೋರ್ಸ್ ಶುರು ಮಾಡಿದ್ದೇವೆ ಎಂದು ತಿಳಿಸಿದರು.
ಜನರ ರಕ್ಷಣೆಗೆ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ತಂದಿದ್ದೇವೆ. ಬೇರೆ ರಾಜ್ಯ, ದೇಶಗಳಿಂದ ಬಂದ ಜನರಿಗೆ ಸುರಕ್ಷತೆ ನೀಡುವ ಕೆಲಸವನ್ನೂ ಮಾಡಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಹೋಗಿದ್ದೆ. ಮೊದಲು ಕಾನೂನು ಸುವ್ಯವಸ್ಥೆ ಹಾಳಾಗಿತ್ತು. ಆದ್ರೆ ಇತ್ತೀಚೆಗೆ ಕಾನೂನು ಸುವ್ಯವಸ್ಥೆ ಸರಿದಾರಿಯಲ್ಲಿದೆ. ಇದಕ್ಕೆ ಶ್ರಮಿಸಿದ ಪೊಲೀಸ್ ಇಲಾಖೆಗೆ ಧನ್ಯವಾದ ಸಲ್ಲಿಸುತ್ತೇನೆಂದರು. ಇದನ್ನೂ ಓದಿ: ಇದಾನಲ್ಲ ಅಮವಾಸ್ಯೆ ತೇಜಸ್ವಿ ಸೂರ್ಯ ಕೇಂದ್ರದಿಂದ ಹಣ ತರಲ್ಲ – ಸಿಎಂ
ಅಲ್ಲದೇ ಕೋಮುಹತ್ಯೆ, ಹಿಂಸಾಚಾರ, ಪ್ರಚೋದನಕಾರಿ ಭಾಷಣ ನೈತಿಕ ಪೊಲೀಸ್ ಗಿರಿಯಂತಹ ಪ್ರಕರಣಗಳನ್ನ ತಡೆಯಲು ರಾಜ್ಯದಲ್ಲಿ ಸ್ಪೆಷಲ್ ಆಕ್ಷನ್ ಫೋರ್ಸ್ ರಚನೆ ಮಾಡಿದ್ದೇವೆ. ಮಾದಕ ದ್ರವ್ಯಕ್ಕೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗಿದೆ. ನಂದಿಬೆಟ್ಟದಲ್ಲಿ 2 ಭಾರತೀಯ ಮೀಸಲು ಪಡೆ ಆರಂಭಕ್ಕೆ ಒಪ್ಪಿಗೆ ನೀಡಲಾಗಿದೆ. ಹೊಸದಾಗಿ ಎರಡು ಬಾಂಬ್ ಸ್ಕ್ಯಾಡ್ ಮಾಡಲಾಗಿದೆ. ನಾಗರಿಕರಿಗಾಗಿ ಮನೆ ಮನೆಗೆ ಪೊಲೀಸ್ ವ್ಯವಸ್ಥೆ ಜಾರಿ ಮಾಡಿದ್ದೇವೆ. ಎಸ್ಸಿ-ಎಸ್ಟಿ ಜನರ ರಕ್ಷಣೆಗೆ ಡಿಸಿಆರ್-ಎ ಠಾಣೆ ತಂದಿದ್ದೇವೆ.
ಬೆಂಗಳೂರು: ಬಿಹಾರ ಚುನಾವಣೆಯ ನಂತರ ಸಂಪುಟ ಪುನಾರಚನೆ (Cabinet Reshuffle) ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ದೀಪಾವಳಿ (Deepavali) ಹಬ್ಬದ ನೆಪದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ನಿವಾಸದ ಮುಂದೆ ಶಾಸಕರ ಪರೇಡ್ ಆರಂಭವಾಗಿದೆ.
ಹಬ್ಬದ ಶುಭ ಕೋರಲು ಶಾಸಕರು ಪೈಪೋಟಿ ನಡೆಸುತ್ತಿದ್ದು ಎರಡೂ ಪವರ್ ಸೆಂಟರ್ ಬ್ಯಾಲೆನ್ಸ್ ಮಾಡುವ ಅನಿವಾರ್ಯತೆಗೆ ಸಿಕ್ಕಿದ್ದಾರೆ. ಇಬ್ಬರ ನಿವಾಸಕ್ಕೂ ಭೇಟಿ ನೀಡಿ ಹಬ್ಬದ ಶುಭಾಶಯ ಹೇಳಿ ಇಬ್ಬರ ಬಳಿಯೂ ಪರೋಕ್ಷವಾಗಿ ಸಂಪುಟ ವಿಸ್ತರಣೆ/ ಪುನಾರಚನೆಯ ಪ್ರಸ್ತಾಪ ಇಡುತ್ತಿದ್ದಾರೆ.
ಸಿಎಂ ಸಿದ್ದರಾಮಯ್ಯ ಸಚಿವರಿಗೆ ಆಯೋಜಿಸಿದ ಡಿನ್ನರ್ ಸಭೆಯಲ್ಲಿ ಸಂಪುಟ ಪುನಾರಚನೆಯ ಸುಳಿವು ನೀಡಿದ್ದರು ಎನ್ನಲಾಗುತ್ತಿದೆ. ಬಿಹಾರ ವಿಧಾನಸಭಾ ಚುನಾವಣೆಯ ನಂತರ ಡಿಸೆಂಬರ್‌ನಲ್ಲಿ ಸಂಪುಟ ಪುನನಾಚನೆ ನಡೆದರೆ, ಸಂಪುಟದಿಂದ ಕೈಬಿಟ್ಟರೆ, ಪಕ್ಷದಲ್ಲಿ ಪರ್ಯಾಯ ಹುದ್ದೆಗಳೊಂದಿಗೆ ಅವರಿಗೆ ಗೌರವಯುತವಾಗಿ ಬೀಳ್ಕೊಡುಗೆ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದರು.
ಪಕ್ಷದ ಹೈಕಮಾಂಡ್ ಪ್ರಸ್ತುತ ಬಿಹಾರ ಚುನಾವಣೆಗಳಲ್ಲಿ ನಿರತವಾಗಿದೆ. ಹೈಕಮಾಂಡ್ ಅನುಮೋದಿಸಿದರೆ, ಆಡಳಿತಕ್ಕೆ ಶಕ್ತಿ ತುಂಬಲು 12-15 ಸಚಿವರನ್ನು ಹೊಸ ಮುಖಗಳೊಂದಿಗೆ ಬದಲಾಯಿಸುವ ಸಾಧ್ಯತೆಯಿದೆ.