Tag: ಸಿದ್ದರಾಮಯ್ಯ

  • ಸರ್ಕಾರದ ಸಭೆ, ಸಮಾರಂಭಗಳಲ್ಲಿ ಜನಪ್ರತಿನಿಧಿಗಳ ಆಹ್ವಾನಕ್ಕೆ ಹೊಸ ಮಾರ್ಗಸೂಚಿ – ಶಿಷ್ಟಾಚಾರ ಪಾಲನೆಗೆ ಸೂಚನೆ

    ಸರ್ಕಾರದ ಸಭೆ, ಸಮಾರಂಭಗಳಲ್ಲಿ ಜನಪ್ರತಿನಿಧಿಗಳ ಆಹ್ವಾನಕ್ಕೆ ಹೊಸ ಮಾರ್ಗಸೂಚಿ – ಶಿಷ್ಟಾಚಾರ ಪಾಲನೆಗೆ ಸೂಚನೆ

    ಬೆಂಗಳೂರು: ಇನ್ಮುಂದೆ ಸರ್ಕಾರದ ಸಭೆ, ಸಮಾರಂಭಗಳಲ್ಲಿ (Government Programs) ಜನಪ್ರತಿನಿಧಿಗಳ ಆಹ್ವಾನಕ್ಕೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟ ಮಾಡಿದೆ. 2019ರ ಸುತ್ತೋಲೆಯಲ್ಲಿನ ಮಾರ್ಗಸೂಚಿಗಳನ್ನ (New Guidelines) ಮಾರ್ಪಾಡು ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ.

    ರಾಜ್ಯ ಮಟ್ಟದ ಕಾರ್ಯಕ್ರಮ, ಜಿಲ್ಲೆ ಹಾಗೂ ತಾಲೂಕು ಮಟ್ಟದ ಕಾರ್ಯಕ್ರಮ, ರಾಜ್ಯದಲ್ಲಿ ನಡೆಯೋ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳಿಗೆ ಹೊಸ ಮಾರ್ಗಸೂಚಿ ಅನ್ವಯವಾಗಲಿದೆ. ಅದರ ಅನ್ವಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕಡ್ಡಾಯವಾಗಿ ಶಿಷ್ಟಾಚಾರ ಪಾಲನೆ ಮಾಡಬೇಕಾಗಿ ಸೂಚಿಸಿದೆ. ಮಾರ್ಗಸೂಚಿಯಲ್ಲಿ ಏನಿದೆ ಅನ್ನೋದನ್ನ ಮುಂದೆ ನೋಡೋಣ…

    ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ಮಾರ್ಗಸೂಚಿ
    > ಸಿಎಂ, ಡಿಸಿಎಂ, ಸಂಬಂಧ ಪಟ್ಟ ಇಲಾಖೆ ಸಚಿವರು, ಇಲಾಖಾ ಸಚಿವರು ಸೂಚಿಸುವ ಯಾವುದೇ ಗಣ್ಯರು ಕಾರ್ಯಕ್ರಮ ಉದ್ಘಾಟನೆ ಮಾಡಬಹುದು.
    > ಸಿಎಂ, ಡಿಸಿಎಂ ಕಾರ್ಯಕ್ರಮ ಉದ್ಘಾಟನೆ ಮಾಡಿದ್ರೆ ಸಂಬಂಧ ಪಟ್ಟ ಇಲಾಖೆ ಸಚಿವರು ಅಧ್ಯಕ್ಷತೆ ವಹಿಸುತ್ತಾರೆ.
    > ಇಲಾಖಾ ಸಚಿವರು ಕಾರ್ಯಕ್ರಮ ಉದ್ಘಾಟನೆ ಮಾಡಿದ್ರೆ ಸ್ಥಳೀಯ ಶಾಸಕರು ಅಧ್ಯಕ್ಷತೆ ವಹಿಸುವುದು.
    > ಇತರೆ ಗಣ್ಯರು ಕಾರ್ಯಕ್ರಮ ಉದ್ಘಾಟನೆ ಮಾಡಿದ್ರೆ ಯಾರು ಅಧ್ಯಕ್ಷತೆವಹಿಸಬೇಕು ಅಂತ ಇಲಾಖೆ ಸಚಿವರು ನಿರ್ಧಾರ ಮಾಡುತ್ತಾರೆ.
    > ಕಾರ್ಯಕ್ರಮದಲ್ಲಿ ಆಹ್ವಾನ ಪತ್ರಿಕೆ ಮತ್ತು ವೇದಿಕೆ ಮೇಲೆ ಆಸೀನರಾಗು ಗಣ್ಯರ ಹೆಸರು 9 ಸಂಖ್ಯೆ ಮೀರದಂತೆ ಹಾಗೂ ಅನಿವಾರ್ಯ ಸಮಯದಲ್ಲಿ 13 ಸಂಖ್ಯೆ ಮೀರದಂತೆ ಆಯ್ಕೆ ಮಾಡುವುದು. ಸ್ಥಳೀಯ ಶಾಸಕರ ಹೆಸರು ಕಡ್ಡಾಯ ಸೇರಿಸುವುದು.
    > ವಿಧಾನಸೌಧ, ವಿಕಾಸಸೌಧದಲ್ಲಿ ನಡೆಯೊ ಕಾರ್ಯಕ್ರಮದಲ್ಲಿ ಇಲಾಖೆ ಸಚಿವರು ಸಭಾಪತಿ, ಸಭಾಧ್ಯಕ್ಷರ ಸಹಮತಿ ಪಡೆದು ಯಾರು ವೇದಿಕೆ ಆಸೀನರಾಗೋ ಗಣ್ಯರ ಅಯ್ಕೆ ಮಾಡುವುದು.

    ಇಲಾಖೆಗಳು ಆಯೋಜಿಸುವ ಜಿಲ್ಲಾ ಮಟ್ಟದ ಕಾರ್ಯಕ್ರಮಗಳು
    > ಸಿಎಂ, ಡಿಸಿಎಂ, ಸಂಬಂಧ ಪಟ್ಟ ಇಲಾಖೆ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಇಲಾಖಾ ಸಚಿವರು ಸೂಚಿಸುವ ಯಾವುದೇ ಗಣ್ಯರು ಕಾರ್ಯಕ್ರಮ ಉದ್ಘಾಟನೆ ಮಾಡಬಹುದು.
    > ಸಿಎಂ, ಡಿಸಿಎಂ ಕಾರ್ಯಕ್ರಮ ಉದ್ಘಾಟನೆ ಮಾಡಿದ್ರೆ ಸಂಬಂಧಪಟ್ಟ ಇಲಾಖೆ ಸಚಿವರು ಅಧ್ಯಕ್ಷತೆವಹಿಸುತ್ತಾರೆ.
    > ಇಲಾಖಾ ಸಚಿವರು ಕಾರ್ಯಕ್ರಮ ಉದ್ಘಾಟನೆ ಮಾಡಿದ್ರೆ ಜಿಲ್ಲಾ ಉಸ್ತುವಾರಿ ಸಚಿವರು ಅಧ್ಯಕ್ಷತೆವಹಿಸುವುದು.
    > ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟನೆ ಸ್ಥಳೀಯ ಶಾಸಕರು ಅಧ್ಯಕ್ಷತೆವಹಿಸುವುದು.
    > ಇತರೆ ಗಣ್ಯರು ಕಾರ್ಯಕ್ರಮ ಉದ್ಘಾಟನೆ ಮಾಡಿದ್ರೆ ಯಾರು ಅಧ್ಯಕ್ಷತೆವಹಿಸಬೇಕು ಅಂತ ಇಲಾಖೆ ಸಚಿವರು ನಿರ್ಧಾರ ಮಾಡುತ್ತಾರೆ.
    > ಕಾರ್ಯಕ್ರಮದಲ್ಲಿ ಆಹ್ವಾನ ಪತ್ರಿಕೆ ಮತ್ತು ವೇದಿಕೆ ಮೇಲೆ ಆಸೀನರಾಗುವ ಗಣ್ಯರ ಹೆಸರು 9 ಸಂಖ್ಯೆ ಮೀರದಂತೆ ಹಾಗೂ ಅನಿವಾರ್ಯ ಸಮಯದಲ್ಲಿ 13 ಸಂಖ್ಯೆ ಮೀರದಂತೆ ಆಯ್ಕೆ ಮಾಡುವುದು. ಸ್ಥಳೀಯ ಶಾಸಕರ ಹೆಸರು ಕಡ್ಡಾಯ ಸೇರಿಸುವುದು.

    ಜಿಲ್ಲಾಡಳಿತ ಆಯೋಜಿಸುವ ಜಿಲ್ಲಾಮಟ್ಟದ ಕಾರ್ಯಕ್ರಮಗಳು
    > ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಇತರೆ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಅನುಮೋದಿಸುವ ಇತರೆ ಗಣ್ಯರು ಉದ್ಘಾಟನೆ ಮಾಡ್ತಾರೆ.
    > ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟನೆ ಮಾಡಿದರೆ ಸ್ಥಳೀಯ ಶಾಸಕರು ಅಧ್ಯಕ್ಷತೆವಹಿಸಬೇಕು.
    > ಜಿಲ್ಲೆಯ ಇತರೆ ಸಚಿವರು ಉದ್ಘಾಟನೆ ಮಾಡಿದರೆ ಶಾಸಕರು ಅಧ್ಯಕ್ಷತೆ ವಹಿಸಬೇಕು.
    > ಇತರೇ ಗಣ್ಯರು ಉದ್ಘಾಟನೆ ಮಾಡಿದರೆ ಯಾರು ಅಧ್ಯಕ್ಷತೆ ವಹಿಸಬೇಕು ಅಂತ ಜಿಲ್ಲಾ ಉಸ್ತುವಾರಿ ‌ಸಚಿವರು ನಿರ್ಧಾರ ಮಾಡುತ್ತಾರೆ.
    > ಕಾರ್ಯಕ್ರಮದಲ್ಲಿ ಆಹ್ವಾನ ಪತ್ರಿಕೆ ಮತ್ತು ವೇದಿಕೆ ಮೇಲೆ ಆಸೀನರಾಗು ಗಣ್ಯರ ಹೆಸರು 9 ಸಂಖ್ಯೆ ಮೀರದಂತೆ ಹಾಗೂ ಅನಿವಾರ್ಯ ಸಮಯದಲ್ಲಿ 13 ಸಂಖ್ಯೆ ಮೀರದಂತೆ ಆಯ್ಕೆ ಮಾಡುವುದು. ಸ್ಥಳೀಯ ಶಾಸಕರ ಹೆಸರು ಕಡ್ಡಾಯ ಸೇರಿಸುವುದು.

    ರಾಜ್ಯದಲ್ಲಿ ಆಯೋಜನೆ ಮಾಡುವ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳು
    > ರಾಜ್ಯಪಾಲರು, ಸಿಎಂ, ಡಿಸಿಎಂ ಕೇಂದ್ರ ಕ್ಯಾಬಿನೆಟ್ ಸಚಿವರು, ಇಲಾಖೆ ಸಚಿವರು, ಅಥವಾ ಸಿಎಂ ಸೂಚಿಸುವ ಗಣ್ಯರು ಕಾರ್ಯಕ್ರಮ ಉದ್ಘಾಟನೆ ಮಾಡುತ್ತಾರೆ.

    ಅಧ್ಯಕ್ಷತೆ
    > ರಾಜ್ಯಪಾಲರು ಕಾರ್ಯಕ್ರಮ ಉದ್ಘಾಟನೆ ಮಾಡಿದ್ರೆ ಸಿಎಂ, ಕೇಂದ್ರ ಸಚಿವರು, ಡಿಸಿಎಂ ಅಧ್ಯಕ್ಷತೆ
    > ಸಿಎಂ ,ಡಿಸಿಎಂ, ಕೇಂದ್ರ ಸಚಿವರು ಉದ್ಘಾಟನೆ ಮಾಡಿದ್ರೆ ಇಲಾಖೆ ಸಚಿವರು ಅಧ್ಯಕ್ಷತೆ
    > ಇಲಾಖೆ ಸಚಿವರು ಉದ್ಘಾಟನೆ ಮಾಡಿದ್ರೆ ಸ್ಥಳೀಯ ಶಾಸಕರು ಅಧ್ಯಕ್ಷತೆ
    > ಗಣ್ಯರು ಉದ್ಘಾಟನೆ ಮಾಡಿದರೆ ಯಾರು ಅಧ್ಯಕ್ಷತೆ ಅಂತ ಸಿಎಂರಿಂದ ನಿರ್ಧಾರ
    > ಕಾರ್ಯಕ್ರಮದಲ್ಲಿ ಆಹ್ವಾನ ಪತ್ರಿಕೆ ಮತ್ತು ವೇದಿಕೆ ಮೇಲೆ ಆಸೀನರಾಗುವ ಗಣ್ಯರ ಹೆಸರು 9 ಸಂಖ್ಯೆ ಮೀರದಂತೆ ಹಾಗೂ ಅನಿವಾರ್ಯ ಸಮಯದಲ್ಲಿ 13 ಸಂಖ್ಯೆ ಮೀರದಂತೆ ಆಯ್ಕೆ ಮಾಡುವುದು. ಸ್ಥಳೀಯ ಶಾಸಕರು, ಸಂಸದರು ಹೆಸರು ಕಡ್ಡಾಯ ಸೇರಿಸುವುದು. ವಿಧಾನಸೌಧ, ವಿಕಾಸಸೌಧದಲ್ಲಿ ಕಾರ್ಯಕ್ರಮ ನಡೆದರೆ ಸಭಾಪತಿ, ಸಭಾಧ್ಯಕ್ಷರ ಸಹಮತಿ ಪಡೆದು ಅತಿಥಿಗಳ ಆಹ್ವಾನ ಮಾಡುವುದು.

    ರಾಜ್ಯದ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನುಸರಿಸಬೇಕಾದ ಗಣ್ಯರ ಜೇಷ್ಠತಾ ಪಟ್ಟಿ
    1. ರಾಜ್ಯಪಾಲರು
    2. ಮುಖ್ಯಮಂತ್ರಿಗಳು
    3. ಕೇಂದ್ರ ಸಚಿವ ಸಂಪುಟ ದರ್ಜೆಯ ಸಚಿವರು
    4. ಉಪಮುಖ್ಯಮಂತ್ರಿಗಳು
    5. ಕೇಂದ್ರ ರಾಜ್ಯ ಸಚಿವರು
    6. ಸಭಾಪತಿಗಳು, ಕರ್ನಾಟಕ ವಿಧಾನ ಪರಿಷತ್ತು
    7. ಸಭಾಧ್ಯಕ್ಷರು, ಕರ್ನಾಟಕ ವಿಧಾನ ಸಭೆ
    8. ರಾಜ್ಯ ಸಚಿವ ಸಂಪುಟ ದರ್ಜೆಯ ಸಚಿವರುಗಳು
    9. ವಿರೋಧ ಪಕ್ಷದ ನಾಯಕರುಗಳು, ವಿಧಾನ ಸಭೆ ಮತ್ತು ವಿಧಾನ ಪರಿಷತ್ತು
    10. ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಧೀಶರು
    11. ಅಡ್ವಕೇಟ್ ಜನರಲ್
    12. ಉಪ ಸಭಾಪತಿಗಳು, ಕರ್ನಾಟಕ ವಿಧಾನ ಪರಿಷತ್ತು
    13. ಉಪ ಸಭಾಧ್ಯಕ್ಷರು, ಕರ್ನಾಟಕ ವಿಧಾನ ಸಭೆ
    14. ಸರ್ಕಾರಿ ಮುಖ್ಯ ಸಚೇತಕರು, ವಿಧಾನ ಸಭೆ ಮತ್ತು ವಿಧಾನ ಪರಿಷತ್ತು.
    15. ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಹೊಂದಿರುವ ಗಣ್ಯರು
    16. ಸಂಸದರು, ಲೋಕಸಭೆ
    17. ಸಂಸದರು, ರಾಜ್ಯಸಭೆ
    18. ರಾಜ್ಯ ಸಚಿವರ ದರ್ಜೆಯ ಸ್ಥಾನಮಾನ ಹೊಂದಿರುವ ಗಣ್ಯರು
    19. ವಿಧಾನ ಸಭೆಯ ಶಾಸಕರುಗಳು
    20. ವಿಧಾನ ಪರಿಷತ್ತಿನ ಶಾಸಕರುಗಳು
    21. ಮಂಡಳಿಗಳು, ನಿಗಮಗಳು, ಆಯೋಗಗಳು, ನಗರ ಸ್ಥಳೀಯ ಸಂಸ್ಥೆಗಳು, ಪಂಚಾಯತ್ ರಾಜ್ ಸಂಸ್ಥೆಗಳು, ಪ್ರಾಧಿಕಾರಗಳ ಅಕಾಡೆಮಿಗಳು ಮತ್ತು ಇನ್ನಿತರೇ ಸರ್ಕಾರಿ ಅಂಗ ಸಂಸ್ಥೆ ಅಧ್ಯಕ್ಷರುಗಳು, ಸದಸ್ಯರು

    22. (i) ಇಲಾಖೆ ಮಟ್ಟದ ಕಾರ್ಯಕ್ರಮಗಳಾಗಿದ್ದಲ್ಲಿ ಮುಖ್ಯ ಕಾರ್ಯದರ್ಶಿಗಳು, ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಕಾರ್ಯದರ್ಶಿಗಳು.
    (ii) ಜಿಲ್ಲಾ ಮಟ್ಟದ ಕಾರ್ಯಕ್ರಮಗಳಾಗಿದ್ದಲ್ಲಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿಪಂ ಸಿಇಓಗಳು, ಎಸ್ಪಿ ಮತ್ತು ಇಲಾಖಾ ಮುಖ್ಯಸ್ಥರು.

    23. ಸ್ವಾತಂತ್ರ ಹೋರಾಟಗಾರರು, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ಇತರೆ ಪ್ರಶಸ್ತಿ ಪುರಸ್ಕೃತರು, ಕಲಾವಿದರು ಪರಿಣಿತರು, ಶಿಕ್ಷಣ ತಜ್ಞರು, ಬುದ್ಧಿಜೀವಿಗಳು, ಲೇಖಕರು, ವಿಜ್ಞಾನಿಗಳು, ಕ್ರೀಡಾಪಟುಗಳು, ರೈತ ಪ್ರತಿನಿಧಿಗಳು, ಸಮಾಜಸೇವಕರು, ಹಿರಿಯ ನ್ಯಾಯವಾದಿಗಳು.

  • ಜಾತಿಗಣತಿಯಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ

    ಜಾತಿಗಣತಿಯಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ

    – 45 ನಿಮಿಷಕ್ಕೂ ಹೆಚ್ಚು ಸಮಯ ಗಣತಿದಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ

    ಬೆಂಗಳೂರು: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ (Caste Census) ಸಿಎಂ ಸಿದ್ದರಾಮಯ್ಯ (Siddaramaiah) ಗುರುವಾರ ಪಾಲ್ಗೊಂಡು ಮಾಹಿತಿ ನೀಡಿದ್ದಾರೆ.

    ಕಾವೇರಿ ನಿವಾಸದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಗಮಿಸಿದ್ದ ಗಣತಿದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 45 ನಿಮಿಷಕ್ಕೂ ಹೆಚ್ಚು ಕಾಲ ಸಮಾಧಾನದಿಂದ ಉತ್ತರಿಸಿದರು. ಗಣತಿದಾರರು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಮುಖ್ಯಮಂತ್ರಿಗಳು ಉತ್ತರಿಸಿ ಸಂಪೂರ್ಣ ಮಾಹಿತಿ ನೀಡಿದರು. ಇದನ್ನೂ ಓದಿ: ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ ಮಾಡಿದ್ರೆ ಕಠಿಣ ಕ್ರಮ: ಸಿದ್ದರಾಮಯ್ಯ

    ಈ ಕುರಿತು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಸಿದ್ದರಾಮಯ್ಯ, ನಮ್ಮ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗಾಗಿ ನನ್ನ ಮನೆಗೆ ಭೇಟಿನೀಡಿದ ಸಿಬ್ಬಂದಿಗಳಿಗೆ ಮಾಹಿತಿ ನೀಡಿ, ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ ಎಂದು ತಿಳಿಸಿದ್ದಾರೆ.

    ಅಸಮಾನತೆ, ಬಡತನವನ್ನು ನಿವಾರಣೆ ಮಾಡಿ ಸಮಸಮಾಜ ನಿರ್ಮಾಣ ಮಾಡುವ ಉದ್ದೇಶದೊಂದಿಗೆ ನಮ್ಮ ಸರ್ಕಾರವು ಈ ಸಮೀಕ್ಷೆಯನ್ನು ಕೈಗೊಂಡಿದೆ. ಪ್ರತಿಯೊಬ್ಬರೂ ಈ ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಂಡು, ತಮ್ಮ ಮಾಹಿತಿಯನ್ನು ಪ್ರಾಮಾಣಿಕವಾಗಿ ನೀಡಬೇಕು. ಆಗ ಮಾತ್ರ ಸಮಾಜದ ವಾಸ್ತವ ಸ್ಥಿತಿಗತಿಯ ಬಗೆಗೆ ನಿಖರ ಮಾಹಿತಿ ದೊರೆತು, ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಜನರನ್ನು ಗುರುತಿಸಿ, ಅವರ ಪ್ರಗತಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ.

    ಇದು ಯಾವುದೇ ಒಂದು ಜಾತಿಗೆ ಸೀಮಿತವಾದ ಸಮೀಕ್ಷೆಯಲ್ಲ, ರಾಜ್ಯದ ಪ್ರತಿಯೊಬ್ಬರ ಜೀವನದ ಮೇಲೆ ಬೆಳಕು ಚೆಲ್ಲುವ ಒಂದು ವೈಜ್ಞಾನಿಕ ಪ್ರಯತ್ನ. ಸಮೀಕ್ಷೆಯಲ್ಲಿ ಮಾಹಿತಿ ನೀಡುವುದರಿಂದ ನಿಮ್ಮ ವೈಯಕ್ತಿಕ ಮಾಹಿತಿ ದುರ್ಬಳಕೆ ಖಂಡಿತಾ ಆಗದು. ಚಿಂತೆ ಬಿಟ್ಟು, ಧೈರ್ಯವಾಗಿ ಸಿಬ್ಬಂದಿಗಳ ಜೊತೆ ಮಾಹಿತಿ ಹಂಚಿಕೊಳ್ಳಿ ಎಂದು ಜನತೆಯಲ್ಲಿ ಸಿಎಂ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ಮೂಗುದಾರ

  • ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ ಮಾಡಿದ್ರೆ ಕಠಿಣ ಕ್ರಮ: ಸಿದ್ದರಾಮಯ್ಯ

    ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ ಮಾಡಿದ್ರೆ ಕಠಿಣ ಕ್ರಮ: ಸಿದ್ದರಾಮಯ್ಯ

    ಬೆಂಗಳೂರು: ಹಸಿವಿನ ಸಂಕಟ,ಅನ್ನದ ಮೌಲ್ಯ ನನಗೆ ಗೊತ್ತು ಅದಕ್ಕಾಗಿ ನಾನು ಅನ್ನಭಾಗ್ಯ ಜಾರಿಗೆ ತಂದೆ. ಕಾಳಸಂತೆಯಲ್ಲಿ ಯಾರೇ ಅನ್ನ ಭಾಗ್ಯ(Anna Bhgya) ಅಕ್ಕಿ ಮಾರಾಟ ಮಾಡಿದರೂ ಅವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.

    ಆಹಾರ ಮತ್ತು ನಾಗರಿಕ‌ ಸರಬರಾಜು ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ವಿಶ್ವ ಆಹಾರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಕವಿ ಬೇಂದ್ರೆಯವರು ರೈತರನ್ನು ಅನ್ನಬ್ರಹ್ಮ ಎಂದು ಕರೆದಿದ್ದಾರೆ. ಆದ್ದರಿಂದ ಅನ್ನ ವ್ಯರ್ಥ ಮಾಡುವುದು, ಬಿಸಾಡುವುದು ಅನ್ನಬ್ರಹ್ಮನಿಗೆ ಮಾಡುವ ಅವಮಾನ ಎಂದರು.

    ನಾವು ಒಂದು ಕಾಲದಲ್ಲಿ ಅನ್ನಕ್ಕಾಗಿ ಅಮೆರಿಕದ ಮೇಲೆ ಅವಲಂಬಿತರಾಗಿದ್ದೆವು. ಈಗ ವಿದೇಶಗಳಿಗೆ ರಫ್ತು ಮಾಡುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ. ಇದರ ಜೊತೆಗೆ ಊಟ ವ್ಯರ್ಥ ಮಾಡುವ ಪ್ರಮಾಣವೂ ಹೆಚ್ಚಾಗುತ್ತಿರುವುದು ಬೇಸರದ ಸಂಗತಿ ಎಂದರು. ಇದನ್ನೂಓದಿ:  ಭಾರತದ ಆರ್ಥಿಕತೆಗೆ ರಷ್ಯಾದ ತೈಲ ಮುಖ್ಯ, ನಮ್ಮ ಸಂಬಂಧ ನಂಬಿಕೆ ಮೇಲೆ ಕಟ್ಟಿರುವ ಸೇತುವೆ: ರಷ್ಯಾ


    ಬೆಂಗಳೂರು ಒಂದರಲ್ಲೇ ಪ್ರತೀ ವರ್ಷ 943 ಟನ್ ಆಹಾರ ವ್ಯರ್ಥ ಆಗುತ್ತಿದೆ. ಹೆಚ್ಚೂಕಡಿಮೆ 360 ಕೋಟಿ ರೂ. ಮೌಲ್ಯದ ಆಹಾರ ವೇಸ್ಟ್ ಮಾಡುತ್ತಿದ್ದೇವೆ ಎಂದು ಜಿಕೆವಿಕೆ ಅಧ್ಯಯನವನ್ನು ಉಲ್ಲೇಖಿಸಿದರು. ಗೊತ್ತಿದ್ದೂ ಗೊತ್ತಿದ್ದೂ ಆಹಾರ ವ್ಯರ್ಥ ಮಾಡುವುದು ಅನ್ನಕ್ಕೆ ತೋರಿಸುವ ಅಹಂಕಾರ. ಅನ್ನ ವೇಸ್ಟ್ ಮಾಡುವುದು ಪಾಪದ ಕೆಲಸ ಎಂದು ಮಹಾತ್ಮ ಗಾಂಧಿ ಹೇಳಿದ್ದಾರೆ‌ ಅಂತ ತಿಳಿಸಿದರು.

    ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ಕಾಂಗ್ರೆಸ್ ಬದ್ದತೆ. ಹೀಗಾಗಿ ಬಡವರ ಪರವಾದ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು ಕಾಂಗ್ರೆಸ್. ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಪ್ರಧಾನಿ ಮನ ಮೋಹನ್ ಸಿಂಗ್. ಆಹಾರ ಭದ್ರತೆ ಕಾಯ್ದೆಯನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿತ್ತು. ಬಡವರ ವಿರೋಧಿ ನೀತಿ ಬಿಜೆಪಿಯ ಸಿದ್ಧಾಂತ. ಇದನ್ನು ಅರ್ಥ ಮಾಡಿಕೊಳ್ಳಬೇಕು. ಆ ಕಡೆ ಬಿಜೆಪಿಗೂ ಚಪ್ಪಾಳೆ ತಟ್ಟೋದು,ಈ ಕಡೆ ಬಡವರ ಪರ ಕಾರ್ಯಕ್ರಮ ಕೊಟ್ಟ ಕಾಂಗ್ರೆಸ್ಸಿಗೂ ಚಪ್ಪಾಳೆ ತಟ್ಟೋದು ಮಾಡಬೇಡಿ. ಅನ್ನದ ಪರವಾಗಿ ಇರುವ ಕಾಂಗ್ರೆಸ್ ಬದ್ಧತೆ ಅರ್ಥ ಮಾಡಿಕೊಳ್ಳಿ ಎಂದು ಕರೆ ನೀಡಿದರು.

    ಅನ್ನಭಾಗ್ಯದ ಅಕ್ಕಿಯನ್ನು ಸಂಗ್ರಹಿಸಿ ಕಾಳ ಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಾಳ ಸಂತೆ ಮಾರಾಟ ತಪ್ಪಿಸಲು 5 ಕೆಜಿ ಅಕ್ಕಿ ಕೊಟ್ಟು ಉಳಿದ ಐದು ಕೆಜಿ ಕಾಳು, ಬೇಳೆ ವಿತರಿಸಲು ತೀರ್ಮಾನಿಸಿದ್ದೇವೆ ಎಂದರು. ಇದನ್ನೂ ಓದಿ: ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ಮೂಗುದಾರ

    ಆಹಾರದ ಬಗ್ಗೆ ಜಾಗ್ರತೆ, ಸಣ್ಣ ರೈತರ ರಕ್ಷಣೆ ಮಾಡುವುದು ನಮ್ಮ ನಿಮ್ಮ ಮತ್ತು ನಾಗರಿಕ ಸಮಾಜದ ಜವಾಬ್ದಾರಿ ಅಂತ ತಿಳಿಸಿದರು. ಡಿಸಿಎಂ ಡಿಕೆಶಿವಕುಮಾರ್, ಸಚಿವ ಮುನಿಯಪ್ಪ ಸೇರಿ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

  • ನಮ್ಮಪ್ಪ ಸಿಎಂ ಆಗಿದ್ರೆ ರಾಜ್ಯಕ್ಕೆ ಒಳ್ಳೇದಾಗುತ್ತೆ: ಯತೀಂದ್ರ ಸಿದ್ದರಾಮಯ್ಯ

    ನಮ್ಮಪ್ಪ ಸಿಎಂ ಆಗಿದ್ರೆ ರಾಜ್ಯಕ್ಕೆ ಒಳ್ಳೇದಾಗುತ್ತೆ: ಯತೀಂದ್ರ ಸಿದ್ದರಾಮಯ್ಯ

    – ಈಗಿನ ಪರಿಸ್ಥಿತಿ ನೋಡಿದ್ರೆ ಸಿದ್ದರಾಮಯ್ಯ ಅವ್ರೇ 5 ವರ್ಷ ಸಿಎಂ

    ಮೈಸೂರು: 5 ವರ್ಷ ಸಿದ್ದರಾಮಯ್ಯ ಸಿಎಂ ಆಗಿ ಇರಬೇಕು. ರಾಜ್ಯಕ್ಕೆ ಒಳ್ಳೆಯದಾಗುತ್ತೆ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೇಳಿದ್ದಾರೆ.

    ನವೆಂಬರ್ ಕ್ರಾಂತಿ ವಿಚಾರದ ಬಗ್ಗೆ ಮೈಸೂರಿನಲ್ಲಿ (Mysuru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ರಾಂತಿ ಬಗ್ಗೆ ನಂಗೆ ಗೊತ್ತಿಲ್ಲ. ತಂದೆಯವರು ಕೊಟ್ಟಿರುವ ಮಾಹಿತಿಯ ಪ್ರಕಾರ ಹೈಕಮಾಂಡ್ ಆಗ್ಲಿ ಬೇರೆ ನಾಯಕರಾಗಲಿ ಯಾರು ಕೂಡ ನವೆಂಬರ್ ಆದ ಮೇಲೆ ಅಧಿಕಾರ ಬಿಡಿ ಎಂದು ಹೇಳಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಕೃತಿಕಾ ಕೊಲೆ ಕೇಸ್ | ಜುಲೈನಲ್ಲೇ ಕೆಲಸ ಬಿಟ್ಟಿದ್ದ ಕಿಲ್ಲರ್ ಡಾಕ್ಟರ್ – ವಿಕ್ಟೋರಿಯಾ ಆಸ್ಪತ್ರೆ ಸ್ಪಷ್ಟನೆ

    ಇವರೆಲ್ಲಾ ಯಾವ ಕ್ರಾಂತಿ ಬಗ್ಗೆ ಮಾತನಾಡುತ್ತಿದ್ದಾರೆ ನನಗೆ ಗೊತ್ತಿಲ್ಲ. ರಾಜಕೀಯದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು. ಈಗಿನ ಪರಿಸ್ಥಿತಿ ನೋಡಿದ್ರೆ ನಮ್ಮ ತಂದೆ 5 ವರ್ಷ ಸಿಎಂ ಆಗಿ ಇರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    .

    ಸಿದ್ದರಾಮಯ್ಯ ಅವರಿಗೆ ಶಾಸಕರ ಬೆಂಬಲ ಇದೆ. ಇಲ್ಲ ಅಂದಿದ್ರೆ ಶಾಸಕರು ಸುಮ್ಮನೆ ಇರ್ತಿದ್ರಾ. ಹೈಕಮಾಂಡ್ ಹೋಗಿ ದೂರು ಕೊಡುತ್ತಿದ್ದರು ಎಂದು ಹೇಳಿದ್ದಾರೆ. ಇದನ್ನೂ ಓದಿ: ಒಬಿಸಿ ಮೀಸಲಾತಿ ಏರಿಸಿದ್ದ ತೆಲಂಗಾಣಕ್ಕೆ ಭಾರೀ ಹಿನ್ನಡೆ – ಸುಪ್ರೀಂನಲ್ಲಿ ಅರ್ಜಿ ವಜಾ

  • ʻಗೃಹಲಕ್ಷ್ಮಿʼಯರಿಗೆ ಸಿಗದ ದೀಪಾವಳಿ ಗಿಫ್ಟ್‌ – ಸರ್ಕಾರದ ವಿರುದ್ಧ ಮಹಿಳೆಯರ ಆಕ್ರೋಶ

    ʻಗೃಹಲಕ್ಷ್ಮಿʼಯರಿಗೆ ಸಿಗದ ದೀಪಾವಳಿ ಗಿಫ್ಟ್‌ – ಸರ್ಕಾರದ ವಿರುದ್ಧ ಮಹಿಳೆಯರ ಆಕ್ರೋಶ

    – ಕಳೆದ 3-4 ತಿಂಗಳಿನಿಂದ ಹಣವೇ ಬಂದಿಲ್ಲ ಅಂತ ಆಕ್ಷೇಪ

    ಬೆಂಗಳೂರು: ಸರ್ಕಾರದ ಪಂಚ ಗ್ಯಾರಂಟಿಗಳಲ್ಲೊಂದು ಗೃಹಲಕ್ಷ್ಮಿ ಯೋಜನೆ (Gruhalakshmi Scheme). ಆದ್ರೆ ಕಳೆದ 3-4 ತಿಂಗಳಿಂದ ಎರಡು ಸಾವಿರ ರೂಪಾಯಿ ಹಣ ಮಹಿಳೆಯರ ಅಕೌಂಟ್‌ಗೆ ಜಮೆಯಾಗ್ತಿಲ್ಲ. ದೀಪಾವಳಿ (Deepavali) ಸಮಯದಲ್ಲೇ ಮನೆಗೆ ಮಹಾಲಕ್ಷ್ಮಿ ಬಾರದೇ ಇರೋದು ಗೃಹಲಕ್ಷ್ಮೀಯರ ಆಕ್ರೋಶಕ್ಕೆ ಕಾರಣವಾಗ್ತಿದೆ.

    ಕಾಂಗ್ರೆಸ್ ಸರ್ಕಾರ 2023ರ ವಿಧಾನಸಭಾ ಚುನಾವಣೆಯ ವೇಳೆ ಪಂಚ ಗ್ಯಾರಂಟಿ (Congress Guarantee) ಯೋಜನೆಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದಿದೆ. ಈ ಗ್ಯಾರಂಟಿಗಳಲ್ಲೊಂದು ಗೃಹಲಕ್ಷ್ಮಿ ಯೋಜನೆ ಮಹತ್ವದ್ದಾಗಿದೆ. ಇದ್ರಿಂದಾಗಿ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿ ಜಮಾಯಾಗುತ್ತಿತ್ತು. ಆದ್ರೆ, ಕಳೆದ 4 ತಿಂಗಳಿನಿಂದ ಗೃಹಲಕ್ಷ್ಮಿ ಹಣ ಮಹಿಳೆಯರ ಅಕೌಂಟ್‌ಗೆ ಜಮೆಯಾಗ್ತಿಲ್ಲ. ಸರ್ಕಾರ ಹಣ ಹಾಕಲು ವಿಳಂಬ ಮಾಡುತ್ತಿದೆ. ಇದು ಗೃಹಲಕ್ಷ್ಮಿ ಫಲಾನುಭವಿಗಳ ಆಕ್ರೋಶಕ್ಕೆ ಕಾರಣವಾಗ್ತಿದೆ. ಇದನ್ನೂ ಓದಿ: ಭಟ್ಕಳ| ಮದುವೆ ಮಂಟಪದಲ್ಲಿ ಪಾರ್ಕಿಂಗ್ ವಿಷಯಕ್ಕೆ ನಡುರಸ್ತೆಯಲ್ಲೇ ಮಾರಾಮಾರಿ

    ಇನ್ನೂ ಸರ್ಕಾರ ಮಹಿಳೆಯರ ಮತಗಳ ಮೇಲೆ ಕಣ್ಣಿಟ್ಟು ಈ ಯೋಜನೆ ಜಾರಿಗೊಳಿಸಿತ್ತು. ಅದರಂತೆ ರಾಜ್ಯದ ಮಹಿಳೆಯರಿಗೆ ಆರ್ಥಿಕ ಸಬಲೀಕರಣ ಒದಗಿಸುವ ಗುರಿಯೊಂದಿಗೆ ಈ ಯೋಜನೆಯನ್ನ ಜಾರಿಗೆ ತಂದಿತ್ತು. ಆದ್ರೆ ಮಹಿಳೆಯರಿಗೆ ಮನೆ ನಡೆಸಲು, ಮಕ್ಕಳ ಶಿಕ್ಷಣಕ್ಕೆ ಮೊದಲಾದವುಗಳಿಗೆ ಈ ಹಣ ಸಹಾಯಕವಾಗ್ತಿಲ್ಲ ಅಂತಾ ಸರ್ಕಾರದ ವಿರುದ್ದ ಹರಿಹಾಯುತ್ತಿದ್ದಾರೆ. ಇದನ್ನೂ ಓದಿ: ಹಾಸನಾಂಬ ದೇವಿ ದರ್ಶನ ಪಡೆದ ಬಾನು ಮುಷ್ತಾಕ್

    ಕಳೆದ 3-4 ತಿಂಗಳಿನಿಂದ ಮಹಿಳೆಯರ ಬ್ಯಾಂಕ್ ಖಾತೆಗೆ ಸರಿಯಾಗಿ ಹಣ ಜಮಾ ಆಗದೇ ಇರೋದಕ್ಕೆ ಗೃಹಲಕ್ಷ್ಮಿ ಫಲಾನುಭವಿಗಳು ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್‌ಗೆ ಅಲೆದಾಡುತ್ತಿದ್ದಾರೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಗಮನ ಹರಿಸಿ, ಆದಷ್ಟು ಬೇಗ ಬಾಕಿ ಕಂತಿನ ಹಣ ಬಿಡುಗಡೆ ಮಾಡಿದ್ರೇ, ಮಹಿಳೆಯರು ದೀಪಾವಳಿ ಹಬ್ಬವನ್ನು ಖುಷಿಯಿಂದ ಮಾಡಬಹುದು ಅನ್ನೋದು ಜನರ ಕೋರಿಕೆ.ಇದನ್ನೂ ಓದಿ: ಪತಿಯಿಂದ ವೈದ್ಯೆ ಹತ್ಯೆ; ಮಗಳಿಗಾಗಿ ಕಟ್ಟಿಸಿದ್ದ 4 ಕೋಟಿ ರೂ. ಮನೆ ಇಸ್ಕಾನ್‌ಗೆ ದಾನ ಮಾಡಿದ ತಂದೆ

  • ಡಿಕೆಶಿಗೆ ಹಾಸನಾಂಬೆ ಮಹಾಪ್ರಸಾದ – ಪೂಜೆ ವೇಳೆ ಬಲಗಡೆ ಹೂವು ವರ ನೀಡಿದ ದೇವಿ

    ಡಿಕೆಶಿಗೆ ಹಾಸನಾಂಬೆ ಮಹಾಪ್ರಸಾದ – ಪೂಜೆ ವೇಳೆ ಬಲಗಡೆ ಹೂವು ವರ ನೀಡಿದ ದೇವಿ

    – ಶತ್ರುವಿನ ಮೇಲೆ ವಿಜಯ ಸಾಧಿಸಲು ಖಡ್ಗಮಾಲ ಸ್ತೋತ್ರ ಪಠಿಸಿದ ಡಿಕೆಶಿ
    – ಡಿಕೆಶಿ ಭೇಟಿ ಬೆನ್ನೇ ಇಂದು ಸಿದ್ದರಾಮಯ್ಯರಿಂದ ಹಾಸನಾಂಬೆ ದರ್ಶನ

    ಹಾಸನ: ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆಗೆ ಕಸರತ್ತು ನಡೆಯುತ್ತಿರುವ ಹೊತ್ತಿನಲ್ಲೇ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರಿಗೆ ಹಾಸನಾಂಬೆ ಸನ್ನಿಧಿಯಲ್ಲಿ ಮಹಾಪ್ರಸಾದ ಸಿಕ್ಕಿದೆ.

    ಮಂಗಳವಾರ ರಾತ್ರಿ ಪತ್ನಿಯೊಂದಿಗೆ ಹಾಸನಾಂಬೆ (Hassanamba Temple) ಸನ್ನಿಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಡಿಸಿಎಂಗೆ ವಿಜಯೀ ಶ್ರೇಯಸ್ಸು ಲಭಿಸಲೆಂದು ನಾರಾಯಣಿ ನಮಸ್ಕಾರ ಮಂತ್ರದ ಮೂಲಕ ಪೂಜೆ. ಸಲ್ಲಿಸಲಾಯಿತು. ಸುಮಾರು ಐದು ನಿಮಿಷ ದುರ್ಗಾ ಸಪ್ತಸತಿಯ 11ನೇ ಅಧ್ಯಾಯದ ನಾರಾಯಣಿ ನಮಸ್ಕಾರ ಮಂತ್ರ ಹೇಳಿ ಅರ್ಚಕರು ಪೂಜೆ ನೆರವೇರಿಸಿದರು.

    ಪೂಜೆ ನೇರವೇರಿಸುವ ವೇಳೆ ಡಿಕೆಶಿ ʻಶತ್ರುವಿನ ಮೇಲೆ ವಿಜಯ ಸಾಧಿಸಲು ಖಡ್ಗಮಾಲ ಸ್ತೋತ್ರʼ ಪಠಿಸಿದರು. ಇದೇ ಶುಭ ಸಮಯದಲ್ಲಿ ದೇವಿಯ ಬಲಗಡೆಯಿಂದ ಹೂವು ವರದವಾಗಿ ಬಿದ್ದಿತು. 2 ಬಾರಿ ದೇವಿಯ ಬಲಭಾಗದ ಹೂವು ಬಿದ್ದಿತು.

    ಪೂಜೆ ಬಳಿಕ ಮಾತನಾಡಿದ ಡಿಕೆಶಿ, ನಾನುಂಟು.. ಆ ತಾಯಿ ಉಂಟು ನಮಗೆ, ನಿಮಗೆ, ಎಲ್ಲರಿಗೂ ಭಗವಂತ ಶಾಂತಿ, ನೆಮ್ಮದಿ ಕೊಟ್ಟು ಕಾಪಾಡಲಿ ಎಂದು ಪ್ರಾರ್ಥಿಸಿದ್ದೇನೆ ಎಂದ್ರು.

    ಇಂದು ಸಿಎಂ ಭೇಟಿ
    ಮಂಗಳವಾರ ರಾತ್ರಿ ಡಿಸಿಎಂ ಭೇಟಿ ನೀಡಿದ ಪೂಜೆ ಸಲ್ಲಿಸಿದ ಬೆನ್ನಲ್ಲೇ ಇಂದು ಸಿಎಂ ಸಿದ್ದರಾಮಯ್ಯ ಹಾಸನಾಂಬ ಸನ್ನಿಧಿಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11 ಗಂಟೆ ಬೂವನಹಳ್ಳಿ ಹೆಲಿಪ್ಯಾಡ್‌ಗೆ ಆಗಮಿಸಲಿದ್ದು, ಅಲ್ಲಿಂದ ಹಾಸನಾಂಬೆ ದರ್ಶನಕ್ಕೆ ತೆರಳಲಿದ್ದಾರೆ. ದರ್ಶನ ಪಡೆದು ಮಧ್ಯಾಹ್ನ 12 ಗಂಟೆಗೆ ವಾಪಸ್ ಆಗಲಿದ್ದಾರೆ. ಕಳೆದ 2 ವರ್ಷಗಳಿಂದ ಸಿಎಂ ಹಾಸನಾಂಬೆ ದರ್ಶನ ಪಡೆಯುತ್ತಿರುವುದು ಗಮನಾರ್ಹ.

  • ಸಿಎಂ, ಡಿಸಿಎಂ ಮನೆಗೆ ಬಾಂಬ್‌ ಬೆದರಿಕೆ ಬೆನ್ನಲ್ಲೇ ಅಲರ್ಟ್‌ – ಪ್ರಕರಣ ಭೇದಿಸಲು SIT ರಚಿಸಿದ ಸರ್ಕಾರ

    ಸಿಎಂ, ಡಿಸಿಎಂ ಮನೆಗೆ ಬಾಂಬ್‌ ಬೆದರಿಕೆ ಬೆನ್ನಲ್ಲೇ ಅಲರ್ಟ್‌ – ಪ್ರಕರಣ ಭೇದಿಸಲು SIT ರಚಿಸಿದ ಸರ್ಕಾರ

    – ಡಿಕೆಶಿ ಮನೆ ಎದುರಿನ ಶಾಲೆಗೂ ಬಂದಿತ್ತು ಬಾಂಬ್ ಬೆದರಿಕೆ

    ಬೆಂಗಳೂರು: ಆಗಾಗ್ಗೆ ಶಾಲೆಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ಬರುತ್ತಿವೆ. ಇತ್ತೀಚೆಗಷ್ಟೇ ಸಿಎಂ, ಡಿಸಿಎಂ ಮನೆಗಳನ್ನು (CM, DCM Home) ಸ್ಫೋಟಿಸುವುದಾಗಿ ಹುಸಿ ಬೆದರಿಕೆ ಬಂದಿತ್ತು. ಈ ಬೆನ್ನಲ್ಲೇ ಎಚ್ಚೆತ್ತಿರುವ ಪೊಲೀಸ್‌ ಇಲಾಖೆ ಬಾಂಬ್‌ ಬೆದರಿಕೆ ಪ್ರಕರಣಗಳನ್ನ ಭೇದಿಸಲು ವಿಶೇಷ ತನಿಖಾ ತಂಡ (SIT) ರಚನೆ ಮಾಡಿದೆ.

    ಕೆಲ ಶಾಲೆಗಳು, ಸರ್ಕಾರಿ ಕಚೇರಿಗಳಿಗೆ ಕಳೆದ ಒಂದೂವರೆ ವರ್ಷದಿಂದ ನಿರಂತರವಾಗಿ ಬಾಂಬ್‌ ಬೆದರಿಕೆ (Bomb Threat) ಬರುತ್ತಲೇ ಇದೆ. ಬೆಂಗಳೂರು ಒಂದರಲ್ಲೇ 34 ಪ್ರಕರಣಗಳು ದಾಖಲಾಗಿವೆ. ಮುಂಬೈನಲ್ಲಿ 27, ಚೆನ್ನೈ 22 ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಬಾಂಬ್‌ ಬೆದರಿಕೆಗಳನ್ನು ತಪ್ಪಿಸಲು ಹಾಗೂ ಹುಸಿ ಬೆದರಿಕೆಯೊಡ್ಡುವವರ ಹೆಡೆಮುರಿ ಕಟ್ಟಲು ಜಂಟಿ ಪೊಲೀಸ್ ಆಯುಕ್ತ ವಂಶಿಕೃಷ್ಣ ತನಿಖಾ ತಂಡ ರಚನೆ ಮಾಡಿದ್ದಾರೆ.

    ಸಿಎಂ, ಡಿಸಿಎಂ ಮನೆ ಸ್ಫೋಟಿಸುವುದಾಗಿ ಬೆದರಿಕೆ
    ಕಳೆದ ಶನಿವಾರ ಸಿಎಂ ಮತ್ತು ಡಿಸಿಎಂ ಮನೆಗಳಲ್ಲಿ 4 ಕೆಜಿಯಷ್ಟು ಆರ್‌ಡಿಎಕ್ಸ್ ಮತ್ತು ಐಇಡಿ ಸ್ಫೋಟಕ ಇರಿಸಲಾಗಿದೆ. ಅವುಗಳನ್ನು ದೂರದಿಂದಲೇ ಸ್ಫೋಟಿಸಲಾಗುತ್ತದೆ ಎಂದು ಇ-ಮೇಲ್‌ ಮೂಲಕ ಹುಸಿ ಬೆದರಿಕೆ ಬಂದಿತ್ತು. ಶನಿವಾರ ಬೆಳಗಿನ ಜಾವ 4:20ರ ಸುಮಾರಿಗೆ, ಆರ್ನಾ ಅಶ್ವಿನ್ ಶೇಖರ್ (aarna.ashwinshekher@outlook.com) ಮೇಲ್ ಐಡಿಯಿಂದ ಸಿಎಂ ಸಿದ್ದರಾಮಯ್ಯ ಅವರ ಅಧಿಕೃತ ಇಮೇಲ್ ಐಡಿ (cm.kar@nic.in) ಮತ್ತು ಡಿಸಿಎಂ ಅವರ ವೈಯಕ್ತಿಕ ಇಮೇಲ್ ಐಡಿ dkshivakumar1@gmail.com ಗೆ ಇಮೇಲ್ ಬೆದರಿಕೆ ಸಂದೇಶ ಬಂದಿತ್ತು.

    ಇದರ ನಂತರ, ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳದೊಂದಿಗೆ ಸಿಎಂ ಮತ್ತು ಡಿಸಿಎಂ ಅವರ ನಿವಾಸಗಳನ್ನು ಸಂಪೂರ್ಣ ಶೋಧ ನಡೆಸಲಾಗಿತ್ತು. ಬಳಿಕ ಹುಸಿ ಬಾಂಬ್‌ ಬೆದರಿಕೆ ಅನ್ನೋದು ಗೊತ್ತಾಯ್ತು. ಬಳಿಕ ಅರ್ನಾ ಅಶ್ವಿನ್ ಶೇಖರ್ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು. ಈ ಬೆನ್ನಲ್ಲೇ ಎಸ್‌ಐಟಿ ರಚಿಸಲಾಗಿದೆ.

    ಬಂಗಾಳದಲ್ಲಿ ಓರ್ವನ ಬಂಧನ
    ಕಳೆದ ವರ್ಷ ಅಕ್ಟೋಬರ್‌ 4ರಂದು ಬಸವನಗುಡಿಯ ಬಿಐಟಿ ಕಾಲೇಜಿಗೆ ಇ-ಮೇಲ್‌ ಮೂಲಕ ಆರೋಪಿಯು ಬಾಂಬ್‌ ಬೆದರಿಕೆ ಹಾಕಿದ್ದ. ಕಾಲೇಜು ಆವರಣದಲ್ಲೇ ಹೈಡ್ರೋಜನ್‌ ಸುಧಾರಿತ ಐಇಡಿ (IED) ಇಟ್ಟಿದ್ದು, ಅದನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ವಿವಿ ಪುರಂ ಪೊಲೀಸರು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಆರೋಪಿಯನ್ನ ಬಂಧಿಸಿದ್ದರು.

    ಆರೋಪಿಯಿಂದ ಲ್ಯಾಪ್‌ಟಾಪ್, ಮೊಬೈಲ್ ಫೋನ್‌ಗಳನ್ನ ವಶಕ್ಕೆ ಪಡೆಯಲಾಗಿತ್ತು. ವಿಚಾರಣೆ ವೇಳೆ ಆರೋಪಿ ಇದೇ ರೀತಿ 10 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅನ್ನೋದು ಗೊತ್ತಾಗಿತ್ತು.

    ಇದಕ್ಕೂ ಮುನ್ನ ಹಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ ಬಂದಿತ್ತು. ಡಿಕೆಶಿ ಮನೆ ಎದುರಿನ ಶಾಲೆಗೂ ಬಾಂಬ್ ಬೆದರಿಕೆ ಬಂದಿತ್ತು.

  • ಸಂಪುಟ ಪುನಾರಚನೆ, ಸಚಿವರ ಜೊತೆ ಪ್ರತ್ಯೇಕ ಮಾತು – ಸಿಎಂ ಡಿನ್ನರ್‌ ಸಭೆಯ ಇನ್‌ಸೈಡ್‌ ಸ್ಟೋರಿ

    ಸಂಪುಟ ಪುನಾರಚನೆ, ಸಚಿವರ ಜೊತೆ ಪ್ರತ್ಯೇಕ ಮಾತು – ಸಿಎಂ ಡಿನ್ನರ್‌ ಸಭೆಯ ಇನ್‌ಸೈಡ್‌ ಸ್ಟೋರಿ

    ಬೆಂಗಳೂರು: ಆಡಳಿತ ರೂಢ ಕಾಂಗ್ರೆಸ್ (Congress) ಪಕ್ಷದಲ್ಲಿ ನವೆಂಬರ್ ಕ್ರಾಂತಿಯ ವದಂತಿಯ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ (CM Siddaramaiah) ಸಚಿವರ ಜೊತೆ ಡಿನ್ನರ್‌ ಸಭೆ (Dinner Meeting) ನಡೆಸಿ ಸಂಪುಟ ಪುನಾರಚನೆಯ ಬಗ್ಗೆ ಮಾತನಾಡಿದ್ದಾರೆ.

    ಕಾವೇರಿ ನಿವಾಸದಲ್ಲಿ ಸಚಿವರ ಜೊತೆ ಸಭೆ ನಡೆಸುವ ಮೊದಲು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಜೊತೆ 30 ನಿಮಿಷ ಪ್ರತ್ಯೇಕ ಸಭೆ ನಡೆಸಿರುವ ವಿಚಾರ ಮೂಲಗಳಿಂದ ಪಬ್ಲಿಕ್‌ ಟಿವಿ ತಿಳಿದು ಬಂದಿದೆ.

    ಮುಂಬರುವ ಪಂಚಾಯತ್‌ ಮತ್ತು ಜಿಬಿಎ ಚುನಾವಣೆ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ, ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳ ನಿಷೇಧ, ಸಂಪುಟ ಪುನಾರಚನೆಯ ಬಗ್ಗೆ ಇಬ್ಬರು ನಾಯಕರು ಮಾತನಾಡಿದರು.  ಇದನ್ನೂ ಓದಿ:  ಡಿಕೆಶಿ ಕನಸಿನ ಟನಲ್‌ ರೋಡ್‌ ಡಿಪಿಆರ್‌ನಲ್ಲಿ ಲೋಪದೋಷ!

    ಡಿಕೆಶಿಯ ಜೊತೆ ಮಾತುಕತೆಯ ಬಳಿಕ ಸಚಿವರ ಜೊತೆ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಬಿಹಾರ ಚುನಾವಣೆಗೆ ಯಾವ ರೀತಿ ನಾವು ಸಹಕಾರ ನೀಡಬೇಕು? ಮತ್ತು ಪಕ್ಷದ ಪ್ರಚಾರಕ್ಕೆ ಸಂಬಂಧಿಸಿದಂತೆ ವಿಚಾರಗಳ ಬಗ್ಗೆ ಸಿಎಂ, ಡಿಸಿಎಂ ಸಲಹೆ ನೀಡಿದರು.

    ಡಿಸಿಎಂ ಡಿಕೆಶಿ ತೆರಳಿದ ನಂತರ ಉಳಿದ ಸಚಿವರ ಜೊತೆ ಸಿಎಂ ಸಭೆ ನಡೆಸಿದರು. ಈ ಸಭೆಯಲ್ಲಿ ಕೆಲವು ಸಚಿವರು ಸಂಪುಟ ಪುನಾರಚನೆ ವಿಷಯ ಪ್ರಸ್ತಾಪ ಮಾಡಿದರು. ಇದಕ್ಕೆ ಸಂಪುಟ ಪುನಾರಚನೆ ಬಗ್ಗೆ ನನಗೂ ಆಸಕ್ತಿ ಇದ್ದು ಹೈಕಮಾಂಡ್ ಜೊತೆ ಮಾತನಾಡುತ್ತೇನೆ. ಎರಡೂವರೆ ವರ್ಷಕ್ಕೆ ಸಂಪುಟ ಸರ್ಜರಿ ಆಗಬೇಕಿದೆ. ಸಚಿವರ ಮೌಲ್ಯ ಮಾಪನ ಫಲಿತಾಂಶ ಹೈಕಮಾಂಡ್ ಬಳಿ ಇದೆ. ಯಾರನ್ನು ಕೈ ಬಿಡಿ ಎಂದು ನಾನು ಹೇಳುವುದಿಲ್ಲ. ಯಾರು ಇನ್? ಯಾರು ಔಟ್ ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ದೇಶದ ಮೊದಲ ಆದಾಯ ಸಮೀಕ್ಷೆ ಫೆಬ್ರವರಿಯಲ್ಲಿ ಆರಂಭ

    ಈ ವೇಳೆ ಕೆಲ ಸಚಿವರು ಸಿಎಂ ಬಳಿ ಪ್ರತ್ಯೇಕ ಮಾತುಕತೆ ನಡೆಸಲು ಬೇಡಿಕೆ ಇಟ್ಟರು. ಸಚಿವರ ಒನ್‌ ಟು ಒನ್‌ ಮಾತುಕತೆಗೆ ಸಿಎಂ ಒಪ್ಪಿಗೆ ನೀಡಿ ಸಚಿವರಿಗೆ 5 ನಿಮಿಷ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

  • ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ: ಸಿಎಂ

    ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ: ಸಿಎಂ

    ಬಾಗಲಕೋಟೆ: ಆರ್‌ಎಸ್‌ಎಸ್‌ (RSS) ವಿರುದ್ಧ ತಮಿಳುನಾಡಿನಲ್ಲಿ (Tamil Nadu) ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಆ ರೀತಿ ಕ್ರಮವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

    ಬಂಡಿಗಣಿಯಲ್ಲಿ ಮಧ್ಯಮಗಳ ಜೊತೆ ಮಾತನಾಡಿದ ಅವರು, ಸರ್ಕಾರಿ ಜಾಗದಲ್ಲಿ ಆರ್‌ಎಸ್‌ಎಸ್‌ ಕಾರ್ಯಕ್ರಮಕ್ಕೆ ಅನುಮತಿ ನೀಡದಂತೆ ಪ್ರಿಯಾಂಕ್‌ ಖರ್ಗೆ ಪತ್ರ ಬರೆದಿದ್ದಾರೆ. ಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದೇನೆ ಎಂದರು. ಇದನ್ನೂ ಓದಿ:  ಮಲ್ಲಿಕಾರ್ಜುನ ಖರ್ಗೆಯವರೇ ನಿಮ್ಮ ಮಕ್ಕಳಿಗೆ ಸರಿಯಾಗಿ ಪಾಠ ಹೇಳಿಕೊಡಿ: ಗೋವಿಂದ ಕಾರಜೋಳ

     

    ಇಂದು ರಾತ್ರಿ ನಡೆಯಲಿರುವ ಡಿನ್ನರ್ ಪಾರ್ಟಿಗೂ ಸಂಪುಟ ಪುನಾರಚನೆಗೂ ಯಾವುದೇ ಸಂಬಂಧವಿಲ್ಲ. ನಾನು ಆಗಾಗ ಊಟ ನೀಡುತ್ತಿರುತ್ತೇನೆ. ಊಟದಲ್ಲಿ ಏನೂ ಸ್ಪೆಷಲ್ ಇಲ್ಲ. ಮಾಧ್ಯಮದವರಿಗೆ ಮತ್ತು ಬಿಜೆಪಿಯವರಿಗೆ ಮಾತ್ರ ವಿಶೇಷ ಎಂದು ತಿಳಿಸಿದರು. ಇದನ್ನೂ ಓದಿ:  ಸರ್ಕಾರಿ ಸ್ಥಳಗಳು, ಮುಜರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ ಎಲ್ಲಾ ಚಟುವಟಿಕೆ ಬ್ಯಾನ್‌?

    ದೇವೇಗೌಡರ ಆರೋಗ್ಯ ಚೆನ್ನಾಗಿದೆ, ಚೇತರಿಕೆ ಆಗುತ್ತಿದೆ. ವೈದ್ಯ ಸತ್ಯನಾರಾಯಣ ಅವರ ಜೊತೆ ಮಾತನಾಡಿದ್ದೇನೆ. ಎರಡ್ಮೂರು ದಿನಗಳಲ್ಲಿ ಚೇತರಿಕೆ ಆಗುತ್ತಾರೆ ಎಂದಿದ್ದಾರೆ ಎಂದು ನುಡಿದರು.

  • ಸಿಎಂ ಡಿನ್ನರ್ ಪಾರ್ಟಿಗೂ ಅಧಿಕಾರ ಹಸ್ತಾಂತರಕ್ಕೂ ಸಂಬಂಧ ಇಲ್ಲ – ಪರಮೇಶ್ವರ್‌

    ಸಿಎಂ ಡಿನ್ನರ್ ಪಾರ್ಟಿಗೂ ಅಧಿಕಾರ ಹಸ್ತಾಂತರಕ್ಕೂ ಸಂಬಂಧ ಇಲ್ಲ – ಪರಮೇಶ್ವರ್‌

    ಬೆಂಗಳೂರು: ಸಿಎಂ ಡಿನ್ನರ್‌ ಮೀಟಿಂಗ್ (CM Dinner Meeting) ಕರೆದಿರೋದಕ್ಕೂ ಎರಡೂವರೆ ವರ್ಷ ಅಧಿಕಾರ ಹಸ್ತಾಂತರಕ್ಕೂ ಯಾವುದೇ ಸಂಬಂಧವಿಲ್ಲ ಅಂತ ಗೃಹ ಸಚಿವ ಪರಮೇಶ್ವರ್‌ (G Parameshwar) ಸ್ಪಷ್ಟಪಡಿಸಿದ್ದಾರೆ.

    ಸಿಎಂ ಡಿನ್ನರ್ ಮೀಟಿಂಗ್ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿಗಳು ಊಟಕ್ಕೆ ಕರೆಯುತ್ತಾರೆ. ಸೆಷನ್ ಇದ್ದಾಗಲೂ ಅವರು ಕರೆಯುತ್ತಾರೆ. ಕೆಲವರು ಮಂತ್ರಿಗಳು ಕರೆಯುತ್ತಾರೆ.‌ ಅದೇ ರೀತಿ ಈಗ ಸಿಎಂ ಕರೆದಿದ್ದಾರೆ. ನಾನು ಹೇಳೋದು ಇದೇನು ದೊಡ್ಡದಲ್ಲ. ಊಟಕ್ಕೂ, ಎರಡೂವರೆ ವರ್ಷ ಅಧಿಕಾರ ಬದಲಾವಣೆಗೂ ಸಂಬಂಧವಿಲ್ಲ ಎಂದರು. ಇದನ್ನೂ ಓದಿ: ಶಾಸಕರ ಅಭಿಪ್ರಾಯ ಪಡೆದೇ ಹೈಕಮಾಂಡ್ ಸಿಎಂ ಆಯ್ಕೆ ಮಾಡೋದು: ಡಿಕೆಶಿಗೆ ಪರಮೇಶ್ವರ್ ತಿರುಗೇಟು

    ಬಿಹಾರ ಎಲೆಕ್ಷನ್ (Bihar Election) ವಿಚಾರವಾಗಿ ಸಿಎಂ ಕರೆದಿದ್ದಾರೆಂಬ ಬಿಜೆಪಿ ಆರೋಪಕ್ಕೆ ತಿರುಗೇಟು ‌ಕೊಟ್ಟ ಅವರು, ಬಿಜೆಪಿಯವರು ಹೇಗೆ ಬೇಕಾದ್ರೂ ಮಾತನಾಡಬಹುದು. ಹಾಗೆ ಮಾತನಾಡಬೇಕು ಹೀಗೆ ಮಾತಾಡಬೇಕು ಅಂತ ಏನಿಲ್ಲ. ಅವರು ಏನು ಬೇಕಾದ್ರೂ ಮಾತನಾಡಬಹುದು ಅಂತ ತಿರುಗೇಟು ಕೊಟ್ರು. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ RSS ಬಗ್ಗೆ ಸಿಎಂಗೆ ಪತ್ರ ಬರೆದಿರೋದು ನನಗೆ ಗೊತ್ತಿಲ್ಲ: ಪರಮೇಶ್ವರ್‌