Tag: ಸಿದ್ದರಾಮಯ್ಯ

  • ಪ್ರಿಯಾಂಕ್ ಖರ್ಗೆ RSS ಬಗ್ಗೆ ಸಿಎಂಗೆ ಪತ್ರ ಬರೆದಿರೋದು ನನಗೆ ಗೊತ್ತಿಲ್ಲ: ಪರಮೇಶ್ವರ್‌

    ಪ್ರಿಯಾಂಕ್ ಖರ್ಗೆ RSS ಬಗ್ಗೆ ಸಿಎಂಗೆ ಪತ್ರ ಬರೆದಿರೋದು ನನಗೆ ಗೊತ್ತಿಲ್ಲ: ಪರಮೇಶ್ವರ್‌

    • RSS ನಿಷೇಧದ ಬಗ್ಗೆ ಗೃಹ ಇಲಾಖೆಗೆ ಪ್ರಸ್ತಾವನೆ ಬಂದರೆ ಪರಿಶೀಲನೆ

    ಬೆಂಗಳೂರು: ಪ್ರಿಯಾಂಕ್ ಖರ್ಗೆ (Priyank Kharge) RSS ಕಾರ್ಯಕ್ರಮಗಳನ್ನ ನಿಷೇಧ ಮಾಡಬೇಕು ಅಂತ ಸಿಎಂಗೆ ಪತ್ರ ಬರೆದಿರೋದು ನನಗೇನು ಗೊತ್ತಿಲ್ಲ. ಗೃಹ ಇಲಾಖೆಗೆ ಆ ಪತ್ರ ಬಂದರೆ ಪರಿಶೀಲನೆ ಮಾಡುತ್ತೇವೆ ಅಂತ ಗೃಹ ಸಚಿವ ಪರಮೇಶ್ವರ್‌ (G Parameshwar) ತಿಳಿಸಿದರು.

    RSS ಬ್ಯಾನ್‌ಗೆ ಸಚಿವ ಪ್ರಿಯಾಂಕ್ ಖರ್ಗೆ ಸಿಎಂಗೆ ಪತ್ರ ಬರೆದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪತ್ರ ಬರೆದಿರೋದು ಎಲ್ಲವೂ ನಿಮಗೆ ಗೊತ್ತಿದೆಯಲ್ಲ. ನೀವೇ ಹೇಳಿದಂತೆ ಅವರು ಪತ್ರ ಬರೆದಿದ್ದಾರೆ. ಶಾಲೆ, ಸರ್ಕಾರಿ ಜಾಗದಲ್ಲಿ ಬೇಡ ಅಂತ ಹೇಳಿದ್ದಾರೆ ಅದರ ಬಗ್ಗೆ ನನಗೆ ಗೊತ್ತಿಲ್ಲ. ಸಿಎಂ ಅವರು ಅದರ ಬಗ್ಗೆ ಚರ್ಚೆ ಮಾಡ್ತಾರೇನೋ, ಸಿಎಸ್ ಅವರು ನಿರ್ಧಾರ ತೆಗೆದುಕೊಳ್ತಾರೆ ಅಂತ ಹೇಳಿದರು.

    ಈ ಬಗ್ಗೆ ನಮ್ಮ ಇಲಾಖೆಗೆ ಬಂದರೆ ಪರಿಶೀಲನೆ ಮಾಡ್ತೇವೆ. ಅದರ ಸಾಧಕ ಬಾಧಕ ಪರಿಶೀಲನೆ ಮಾಡ್ತೇವೆ. ದೂರು ಬಂದರೆ ಮಾಡಬಹುದು. ವೈಯುಕ್ತಿಕವಾಗಿ ನನ್ನ ಅಭಿಪ್ರಾಯ ಯಾಕೆ ಹೇಳಬೇಕು? ಎಂದರು.

    ಎಬಿವಿಪಿ ಕಾರ್ಯಕ್ರಮದಲ್ಲಿ ನಾನು ಎಲ್ಲಿ ಭಾಗಿಯಾಗಿದ್ದೆ? ಮೆರವಣಿಗೆ ಬರ್ತಿತ್ತು ಕೈಮುಗಿದೆ. ಅಬ್ಬಕ್ಕನಿಗೆ ಕೈಮುಗಿಯೋದು ತಪ್ಪೇ?ಅದನ್ನೇ ತಪ್ಪು ಅಂದ್ರೆ ಹೇಗೆ? ಅವತ್ತೇ ಕ್ಲಾರಿಪಿಕೇಶನ್ ಕೊಟ್ಟಿದ್ದೇನೆ. ಇವತ್ತು ನಾನು ಕೊಡ್ತಿದ್ದೇನೆ. ನನಗೆ ಪರ್ಮಿಷನ್ ಕೇಳಿದ್ರೆ ಪೊಲೀಸರು ಕೊಡ್ತಾರೆ. ಸರ್ಕಾರ ಬ್ಯಾನ್ ಮಾಡಿದ್ರೆ ಕೊಡಲ್ಲ. ಇನ್ನೂ ಏನು ಬ್ಯಾನ್ ಆಗಿಲ್ಲವಲ್ಲ. ನಮ್ಮ ಇಲಾಖೆಗೆ ಫಾರ್ವರ್ಡ್ ಮಾಡಬೇಕು. ಆಗ ನಾವು ನೋಡ್ತೇವೆ ಅಂತ ತಿಳಿಸಿದರು.

  • ನಾನು ಸಿಎಂ ಆಗಿದ್ದಿದ್ರೆ ʻಪಂಚ ಗ್ಯಾರಂಟಿʼ ಅನುಷ್ಠಾನ ಮಾಡ್ತಿರಲಿಲ್ಲ, ಗ್ಯಾರಂಟಿ ಹೊರೆಯಾಗಿದೆ: ಆರ್.ವಿ.ದೇಶಪಾಂಡೆ

    ನಾನು ಸಿಎಂ ಆಗಿದ್ದಿದ್ರೆ ʻಪಂಚ ಗ್ಯಾರಂಟಿʼ ಅನುಷ್ಠಾನ ಮಾಡ್ತಿರಲಿಲ್ಲ, ಗ್ಯಾರಂಟಿ ಹೊರೆಯಾಗಿದೆ: ಆರ್.ವಿ.ದೇಶಪಾಂಡೆ

    – ಗ್ಯಾರಂಟಿಗಳಿಂದ ಅಭಿವೃದ್ಧಿಯ ವೇಗ ತಗ್ಗಿದೆ ಎಂದು `ಕೈʼ ಶಾಸಕ ಬೇಸರ

    ಕಾರವಾರ: ನಾನು ಮುಖ್ಯಮಂತ್ರಿ ಆಗಿದ್ದಿದ್ರೆ ಪಂಚ ಗ್ಯಾರಂಟಿ ಯೋಜನೆಗಳನ್ನ (Congress Guarantee Scheme) ಅನುಷ್ಠಾನ ಮಾಡುತ್ತಿರಲಿಲ್ಲ ಎಂದು ಸ್ವಪಕ್ಷದ ಯೋಜನೆ ಬಗ್ಗೆ ಪಕ್ಷದ ಕಾರ್ಯಕ್ರಮದಲ್ಲೇ ಕಾಂಗ್ರೆಸ್ ಹಿರಿಯ ಶಾಸಕ ಆರ್.ವಿ ದೇಶಪಾಂಡೆ (RV Deshpande) ಹೇಳಿದ್ದಾರೆ.

    ಉತ್ತರ ಕನ್ನಡ (Uttara Kannada) ಜಿಲ್ಲೆಯ ದಾಂಡೇಲಿ ತಾಲೂಕಿನ ಅಂಬೇವಾಡಿ ನವಗ್ರಾಮದಲ್ಲಿ ಕಾಂಗ್ರೆಸ್ ಸಮಿತಿಯಿಂದ ಹಮ್ಮಿಕೊಂಡಿದ್ದ ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಹೊರೆ ಆಗಿದೆ. ಜನರಿಗೆ ಅನುಕೂಲವಾಗಿರುವುದು ಒಂದೆಡೆಯಾದ್ರೆ, ಇನ್ನೊಂದೆಡೆ ಸರ್ಕಾರ ನಡೆಸಲು ಕಷ್ಟವಾಗಿದೆ.

    ಮಹಿಳೆಯರು ಎಲ್ಲ ಸೌಲಭ್ಯಗಳನ್ನ ಪಡೆಯುತ್ತಿದ್ದಾರೆ. ಪುರುಷರಿಗೆ ಯಾವುದೇ ಯೋಜನೆಗಳು ಇಲ್ಲ. ಸರ್ಕಾರದ ಈ ಯೋಜನೆಗಳನ್ನ ಜನರಿಗೆ ತಲುಪಿಸಲು ಅನೇಕ ಸಮಿತಿಗಳನ್ನ ರಚಿಸಲಾಗಿದೆ. ಅವುಗಳನ್ನು ನಿಭಾಯಿಸುವುದೇ ಆಗಿದೆ. ಹೀಗಾಗಿ ರಾಜ್ಯದಲ್ಲಿ ಅಭಿವೃದ್ಧಿಯ ವೇಗ ತಗ್ಗಿದೆ ಎಂದು ಹೇಳಿದ್ದಾರೆ.

    ಇನ್ನೂ 5 ಕೆಜಿ ಅಕ್ಕಿ ಬದಲಿಗೆ ಸರ್ಕಾರದಿಂದ ಇಂದಿರಾ ಕಿಟ್‌ (INDIRA Food Kit) ಕೊಡುವ ನಿರ್ಧಾರ ಕುರಿತು ಮಾತನಾಡ್ತಾ, ಮುಖ್ಯಮಂತ್ರಿಗಳು ಇಂದಿರಾ ಕಿಟ್ ಕೊಡ್ತಾರೋ ತೆಂಗಿನಕಾಯಿ ಕೊಡ್ತಾರೋ ನಮಗೇ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

  • ನಾಳೆ ಸಿಎಂ ಡಿನ್ನರ್ – ನವೆಂಬರ್ ಆಟವೋ..? ಡಿಸೆಂಬರ್ ಡೆಡ್‌ಲೈನೋ..?

    ನಾಳೆ ಸಿಎಂ ಡಿನ್ನರ್ – ನವೆಂಬರ್ ಆಟವೋ..? ಡಿಸೆಂಬರ್ ಡೆಡ್‌ಲೈನೋ..?

    ಬೆಂಗಳೂರು: ಕಾಂಗ್ರೆಸ್‌ನಲ್ಲಿ (Congress) ಏನಾಗುತ್ತೆ..? ಏನ್ ಆಗಲ್ಲ. ನವೆಂಬರ್ ಆಟವೋ..? ಡಿಸೆಂಬರ್ ಡೆಡ್‌ಲೈನೋ..? ಇದು ರಾಜ್ಯ ರಾಜಕಾರಣದ ಬಿಸಿ ಬಿಸಿ ಚರ್ಚೆ. ಈ ನಡುವೆ ನಾಳೆ ಸಿಎಂ ಕರೆದಿರುವ ಡಿನ್ನರ್ ಮೀಟಿಂಗ್ (CM Dinner Meeting), ಮತ್ತಷ್ಟು ಕಾವೇರಿಸಿದೆ. ಹಾಗಾದ್ರೆ ಡಿನ್ನರ್ ಮೀಟಿಂಗ್ ರಹಸ್ಯ ಏನು..? ಇನ್‌ಸೈಡ್ ಸ್ಟೋರಿಗಾಗಿ ಮುಂದೆ ಓದಿ…

    ಕಾಂಗ್ರೆಸ್ ನಲ್ಲಿ ನವೆಂಬರ್ ಕ್ರಾಂತಿ ಸದ್ದು ಸದ್ಯಕ್ಕೆ ನಿಲ್ಲುತ್ತಿಲ್ಲ. ಈ ಹೊತ್ತಲ್ಲೇ ನಾಳೆ ಸಿಎಂ ಸಿದ್ದರಾಮಯ್ಯ ಸಚಿವರಿಗೆ ಡಿನ್ನರ್ ಆಯೋಜಿಸಿದ್ದಾರೆ. ಬಹಳ ದಿನಗಳ ನಂತ್ರ ಸಚಿವರ ಸಭೆ ಕರೆದಿರುವ ಸಿಎಂ ಸಿದ್ದರಾಮಯ್ಯ (Siddaramaiah) ನಡೆ ಕುತೂಹಲ ಮೂಡಿಸಿದೆ. ಊಟದ ನೆಪದಲ್ಲಿ ಸಚಿವರ ಜೊತೆ ಸಿಎಂ ಸಭೆ ನಡೆಸಲಿದ್ದು, ಸಂಪುಟ ಪುನಾರಚನೆ ಆಗುತ್ತೋ..? ಇಲ್ವೋ..? ಎಂಬ ಬಗ್ಗೆ ಕ್ಲಾರಿಟಿ ಕೊಡುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಆದ್ರೆ ಡಿನ್ನರ್‌ಗೆ ಡಿಸಿಎಂ ಡಿಕೆಶಿಗೂ ಕೂಡ ಆಹ್ವಾನ ಕೊಟ್ಟಿದ್ದಾರೆ ಎನ್ನಲಾಗಿದ್ದು, ಡಿಕೆಶಿ (DK Shivakumar) ಹಾಜರಿ ಬಗ್ಗೆ ಕುತೂಹಲವೂ ಹೆಚ್ಚಿದೆ. ಆದ್ರೆ ಸಂಪುಟ ಪುನಾರಚನೆ ಸಿಎಂ ಕೈಯಲ್ಲಿ ಇಲ್ಲ, ಹೈಕಮಾಂಡ್ ಅಂತಿಮ ತೀರ್ಮಾನ ಮಾಡಬೇಕಾಗುತ್ತೆ. ನಾಳೆಯ ಡಿನ್ನರ್ ಸಭೆಯಲ್ಲಿ ಬಿಹಾರ ಎಲೆಕ್ಷನ್‌ಗೆ ರಾಜ್ಯ ಕಾಂಗ್ರೆಸ್‌ನಿಂದ ಹೈಕಮಾಂಡ್‌ಗೆ ಸಹಕಾರ ಕೊಡುವ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಬಹುದು ಎನ್ನಲಾಗ್ತಿದೆ.

    ಇನ್ನು ಸಂಪುಟ ಪುನಾರಚನೆಗೆ ಬಗ್ಗೆ ಶಾಸಕ ಲಕ್ಷ್ಮಣ್ ಸವದಿ ಸುಳಿವು ನೀಡಿದಂತೆ ಕಾಣ್ತಿದೆ, ಡಿಸೆಂಬರ್‌ನಲ್ಲಿ ನನಗೆ ಶುಕ್ರದೆಸೆ ಬರಲಿದೆ ಅಂತಾ ಹೇಳಿದ್ದಾರೆ. ಆದ್ರೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ದಿನೇಶ್‌ಗುಂಡೂರಾವ್ ಮಾತ್ರ ಸಿಎಂ ಡಿನ್ನರ್ ಕರೆದಿರುವುದು ಪುನಾರಚನೆಗೆ ಅಲ್ಲ ಅಂತಾ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಎಲ್ಲವೂ ಹೈಕಮಾಂಡ್ ಕೈಯಲ್ಲಿದೆ ಅಂತೇಳಿದ್ದಾರೆ.

    ಈ ನಡುವೆ ಕಾಂಗ್ರೆಸ್ ಬೆಳವಣಿಗೆಗಳ ಬಗ್ಗೆ ಬಿಜೆಪಿ ನಾಯಕರು (BJP Leaders) ವಾಗ್ದಾಳಿ ನಡೆಸಿದ್ದಾರೆ. ಜನ ನೆರೆಯಿಂದ ಸಮಸ್ಯೆಗೆ ಒಳಗಾಗಿದ್ದಾರೆ. ಸಿಎಂ ನಾಟಕ ಮಾಡೋದನ್ನು ಬಿಡಲಿ. ಸಚಿವರನ್ನು ನೆರೆ ಪ್ರದೇಶಗಳಿಗೆ ಕಳಿಸಿಕೊಡಿ. ನಿಮ್ಮ ಔತಣ ಕೂಟವನ್ನು ನಿಲ್ಲಿಸಿ ಅಂತಾ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿಕಾರಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮಾತನಾಡಿ, ಕಾಂಗ್ರೆಸ್‌ನಲ್ಲಿ ಸಾಕಷ್ಟು ಗೊಂದಲ ಇದೆ. ಕ್ಯಾಬಿನೆಟ್ ನಲ್ಲಿ ಒಬ್ಬರಿಗೊಬ್ಬರು ಬಡಿದಾಡುವ ಪರಿಸ್ಥಿತಿ ನಿರ್ಮಾಣ ಆಗಿದೆ. ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಕೈಕೈ ಮಿಲಾಯಿಸುವ ಹಂತಕ್ಕೆ ಬಂದಿದ್ದಾರೆ ಅಂತಾ ವ್ಯಂಗ್ಯವಾಡಿದ್ದಾರೆ.

    ಒಟ್ನಲ್ಲಿ `ಕೈ’ ಮನೆಯೊಳಗೆ ಕ್ರಾಂತಿ ಕಂಪನ ಜೋರಾಗಿದ್ದು, ಕ್ರಾಂತಿಗೆ ಬ್ರೇಕ್ ಹಾಕಲು ಒಂದು ಗುಂಪು ಒಟ್ಟೊಟ್ಟಿಗೆ ಮೂರು ಅಸ್ತ್ರ ಪ್ರಯೋಗಿಸ್ತಿದ್ರೆ, ಒಂದು ಗುಂಪು ಸೈಲೈಂಟ್ ಆಗಿ ಹೈಕಮಾಂಡ್ ಮುಂದೆ ಕ್ಲೈಮ್ ಮಾಡಲು ಮುಂದಾಗಿದ್ದು, ಕ್ರಾಂತಿ ಕಡೆಗೋ? ಪುನಾರಚನೆಗಷ್ಟೇ ಸೀಮಿತವೋ..? ಕಾದುನೋಡಬೇಕಿದೆ.

  • ಸರ್ಕಾರಿ ಸ್ಥಳಗಳು, ಮುಜರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ ಎಲ್ಲಾ ಚಟುವಟಿಕೆ ಬ್ಯಾನ್‌?

    ಸರ್ಕಾರಿ ಸ್ಥಳಗಳು, ಮುಜರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ ಎಲ್ಲಾ ಚಟುವಟಿಕೆ ಬ್ಯಾನ್‌?

    – ಸಿಎಂಗೆ ಪತ್ರ ಬರೆದು ಮನವಿ ಮಾಡಿರುವ ಪ್ರಿಯಾಂಕ್‌

    ಬೆಂಗಳೂರು: ಸರ್ಕಾರಿ ಸ್ಥಳ, ಮುಜುರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ನ (RSS) ಎಲ್ಲಾ ಚಟುವಟಿಕೆಗಳನ್ನು ಸರ್ಕಾರ ನಿಷೇಧಿಸುತ್ತಾ ಹೀಗೊಂದು ಪ್ರಶ್ನೆ ಈಗ ಎದ್ದಿದೆ.

    ಹೌದು. ಐಟಿ ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ (Siddaramaiah) ಪತ್ರ ಬರೆದು ಸರ್ಕಾರದ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ನ ಎಲ್ಲ ಚಟುವಟಿಕೆಗಳನ್ನು ನಿಷೇಧಿಸುವಂತೆ ಮನವಿ ಮಾಡಿದ್ದಾರೆ.

    ಪ್ರಿಯಾಂಕ್‌ ಖರ್ಗೆ ಬರೆದ ಪತ್ರವನ್ನು ಸಿದ್ದರಾಮಯ್ಯನವರು ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಕಳುಹಿಸಿ ಪರಿಶೀಲಿಸಿ ಕೂಡಲೇ ಅಗತ್ಯ ಕ್ರಮ ವಹಿಸಿ ಎಂದು ಸೂಚಿಸಿದ್ದಾರೆ.

    ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧಿಸುವಂತೆ ಸರ್ಕಾರ ಇನ್ನೂ ಯಾವುದೇ ಆದೇಶ ಪ್ರಕಟಿಸಿಲ್ಲ. ಒಂದು ವೇಳೆ ಆದೇಶ ಪ್ರಕಟಿಸಿದರೆ ಅಧಿಕೃತವಾಗಿ ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಟಿ ಚಟುವಟಿಕೆಗಳಿಗೆ ಬ್ರೇಕ್‌ ಬೀಳಲಿದೆ. ಇದನ್ನೂ ಓದಿ:  ಪಾಕಿಸ್ತಾನದ 58 ಸೈನಿಕರ ಹತ್ಯೆ, 30 ಮಂದಿಗೆ ಗಾಯ: ಅಫ್ಘಾನಿಸ್ತಾನ

    ಪ್ರಿಯಾಂಕ್‌ ಖರ್ಗೆ ಪತ್ರದಲ್ಲಿ ಏನಿದೆ?
    ಜನ ಸಮುದಾಯದಲ್ಲಿ ದ್ವೇಷ ಬಿತ್ತುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸುವುದಕ್ಕಾಗಿ ಹಾಗೂ ದೇಶದ ಜಾತ್ಯತೀತ ಮೌಲ್ಯಗಳನ್ನು ಎತ್ತಿ ಹಿಡಿಯುವುದಕ್ಕಾಗಿ ಸಮಗ್ರತೆ, ಸಮಾನತೆ ಮತ್ತು ಏಕತೆಯ ಮೂಲಭೂತ ತತ್ವಗಳನ್ನೊಳಗೊಂಡ ಸಂವಿಧಾನವು ನಮಗೆ ಸರಕಾರವನ್ನು ನೀಡುತ್ತದೆ.

    ರಾಷ್ಟ್ರೀಯ ಸ್ವಯಂ ಸೇವಕ ಸಂಘ ಎಂಬ ಹೆಸರಿನ ಸಂಘಟನೆಯು ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಹಾಗೂ ಸಾರ್ವಜನಿಕ ಸರ್ಕಾರಿ ಮೈದಾನಗಳನ್ನು ಬಳಸಿಕೊಂಡು ಶಾಖೆ ನಡೆಸುತ್ತಾ, ಘೋಷಣೆಗಳನ್ನು ಕೂಗುತ್ತಾ ಮಕ್ಕಳು ಮತ್ತು ಯುವ ಸಮುದಾಯದ ಮನಸ್ಸಿನಲ್ಲಿ ಭಾರತದ ಏಕತೆಯ ವಿರುದ್ಧವಾಗಿ, ಹಾಗೂ ಸಂವಿಧಾನದ ಆಶಯಗಳ ವಿರುದ್ಧವಾಗಿ ನಕಾರಾತ್ಮಕ ಆಲೋಚನೆಗಳನ್ನು ತುಂಬಲಾಗುತ್ತಿದೆ.

    ಪೊಲೀಸ್ ಅನುಮತಿ ಪಡೆಯದೆ ದೊಣ್ಣೆಗಳನ್ನು ಹಿಡಿದು ಆಕ್ರಮಣಕಾರಿ ಪ್ರದರ್ಶನ ನಡೆಸುವ ಮೂಲಕ ಮುಗ್ಗ ಮಕ್ಕಳು ಹಾಡಿ ಯುವಜನರ ಮನಸಿನ ಮೇಲೆ ದುಷ್ಪರಿಣಾಮ ಬೀರಲಾಗುತ್ತಿದೆ. ನಾಡಿನ ಮಕ್ಕಳು, ಯುವ ಸಮುದಾಯ, ಸಾರ್ವಜನಿಕರು ಮತ್ತು ಸಮಾಜದ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಯಾವುದೇ ಸರ್ಕಾರಿ ಸ್ಥಳಗಳಲ್ಲಿ ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ.

  • ಜಿಬಿಎ ಸಭೆಗೆ ಗೈರಾದ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಗೆ ವಿರೋಧಿಗಳು: ಸಿಎಂ

    ಜಿಬಿಎ ಸಭೆಗೆ ಗೈರಾದ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಗೆ ವಿರೋಧಿಗಳು: ಸಿಎಂ

    ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಸಭೆಗೆ ಹಾಜರಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬಹುದಾಗಿದ್ದರೂ, ಸಭೆಗೆ ಗೈರಾಗುವ ಮೂಲಕ ಬಿಜೆಪಿಯವರು (BJP) ಬೆಂಗಳೂರಿನ ಅಭಿವೃದ್ಧಿಗೆ ವಿರೋಧಿಗಳೆಂದು ನಿರೂಪಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

    ಜಿಬಿಎ ಸಭೆಗೆ ಬಿಜೆಪಿಯವರು ಗೈರಾದ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಗರಿಗೆ ಬೆಂಗಳೂರಿನ ಬಗ್ಗೆ ಕಳಕಳಿಯಿದ್ದರೆ ಜಿಬಿಎ ಸಭೆಗೆ ಗೈರಾಗುತ್ತಿರಲಿಲ್ಲ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಎಂಬುದು ಪ್ರಜಾಪ್ರಭುತ್ವದ ವೇದಿಕೆಯಾಗಿದೆ. ಆಡಳಿತ ವಿಕೇಂದ್ರೀಕರಣಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಾರೆ ಎಂದು ಇದರಿಂದ ತಿಳಿಯುತ್ತದೆ ಎಂದರು. ಇದನ್ನೂ ಓದಿ: ದಾವಣಗೆರೆಯಲ್ಲಿ ಏಕಾಏಕಿ 36 ಮನೆಗಳ ತೆರವು – ಬೀದಿಗೆ ಬಿದ್ದ ಕುಟುಂಬಗಳು

    ಬೆಂಗಳೂರು ಬೃಹತ್ ಆಗಿ ಬೆಳೆದಿದ್ದು, ಇಲ್ಲಿನ ಜನರಿಗೆ ಉತ್ತಮ ಆಡಳಿತ, ಸೌಲಭ್ಯಗಳನ್ನು ನೀಡಲು ನಗರವನ್ನು ವಿಭಜಿಸಲೇಬೇಕೆಂಬ ನಿಲುವನ್ನು ಪ್ರಥಮವಾಗಿ ಬಿಜೆಪಿಯವರೇ ಹೊಂದಿದ್ದರು. ಆದರೆ ಈಗ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿಯವರು ಪುನ: ಅಧಿಕಾರಕ್ಕೆ ಬರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಚಿಕ್ಕಬಳ್ಳಾಪುರ | ತಂದೆ ಸಾವಿನಿಂದ ಮನನೊಂದು ಮಗಳೂ ಆತ್ಮಹತ್ಯೆ!

  • ಮೈಸೂರಿನಲ್ಲಿ ಬಾಲಕಿ ಅತ್ಯಾಚಾರ & ಕೊಲೆ ಪ್ರಕರಣ – ಸಿದ್ದರಾಮಯ್ಯಗೆ ಕಪ್ಪು ಚುಕ್ಕೆ: ಆರ್.‌ ಅಶೋಕ್‌

    ಮೈಸೂರಿನಲ್ಲಿ ಬಾಲಕಿ ಅತ್ಯಾಚಾರ & ಕೊಲೆ ಪ್ರಕರಣ – ಸಿದ್ದರಾಮಯ್ಯಗೆ ಕಪ್ಪು ಚುಕ್ಕೆ: ಆರ್.‌ ಅಶೋಕ್‌

    – ಸಿಎಂ ತವರಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡದ ಸರ್ಕಾರ ಅಂತ ಕಿಡಿ

    ಮೈಸೂರು: ನಗರದಲ್ಲಿ ಬಾಲಕಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ (Girl Rape And Murder) ಸಿದ್ದರಾಮಯ್ಯಗೆ ಕಪ್ಪುಚುಕ್ಕೆ, ಇದು ಸರ್ಕಾರದ ವೈಫಲ್ಯದ ಪರಿಣಾಮ ಎಂದು ವಿಪಕ್ಷ ನಾಯಕ ಆರ್. ಅಶೋಕ್ (R Ashok) ಕಿಡಿಕಾರಿದ್ರು.

    ಬೆಂಗಳೂರಿನಲ್ಲಿ ಮಾತಾಡಿದ ಆರ್. ಅಶೋಕ್, ಮೈಸೂರಿನ (Mysuru) ಘಟನೆ ರಾಜ್ಯವನ್ನು ತಲ್ಲಣಗೊಳಿಸಿದೆ. ಬಾಲಕಿ ಅತ್ಯಾಚಾರ ತಡೆಯೋಕಾಗದವರು ಯಾವ ಪುರುಷಾರ್ಥಕ್ಕೆ ದಸರಾ‌ ಮೆರವಣಿಗೆ ಮಾಡಿದ್ರು? ರಾಜ್ಯದಲ್ಲಿ ರೇಪ್ ಮೆರವಣಿಗೆ ಸಾಗಿದೆ. ಸಿಎಂ ಸ್ವತಃ ತಮ್ಮ ಜಿಲ್ಲೆಯಲ್ಲೇ ಬಾಲಕಿ ರಕ್ಷಣೆ ಮಾಡುವಲ್ಲಿ ವಿಫಲರಾಗಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ.‌ ಸರ್ಕಾರ ತಲೆತಗ್ಗಿಸುವ ಘಟನೆ ಇದು ಎಂದು ವಾಗ್ದಾಳಿ ನಡೆಸಿದ್ರು. ಇದನ್ನೂ ಓದಿ: ಮೈಸೂರು | ಬಾಲಕಿಯ ರೇಪ್‌ ಬಳಿಕ ಎದೆ, ಹೊಟ್ಟೆ, ಮರ್ಮಾಂಗಕ್ಕೆ 19 ಬಾರಿ ಚಾಕು ಇರಿದು ಕೊಂದಿದ್ದ ಕಾಮುಕ

    ನೈಟ್ ಬೀಟ್ ಪೊಲೀಸರು ಏನ್ ಮಾಡ್ತಿದ್ರು? ಪೋಸ್ಟಿಂಗ್‌ಗಾಗಿ ಕಾಸು ಕಲೆಕ್ಷನ್‌ಗೆ ಹೋಗಿದ್ರಾ ಪೊಲೀಸರು? ಸಿಎಂ ತವರು ಜಿಲ್ಲೆಯಲ್ಲಿ ಅತ್ಯಾಚಾರ ಪ್ರಕರಣ ನಡೆದಿದ್ದರೂ ಸಿಎಂ, ಡಿಸಿಎಂ ಚಕಾರ ಇಲ್ಲ. ಕಾನೂನು ಸುವ್ಯವಸ್ಥೆ ಕಾಪಾಡದೇ ಸರ್ಕಾರ ಕೈಚೆಲ್ಲಿದೆ. ಸರ್ಕಾರ ಕ್ರಮ ಕೈಗೊಳ್ಳದೇ ನಿದ್ದೆಯಲ್ಲಿದೆ, ಇದು ಅವಮಾನವೀಯ ಘಟ‌ನೆ. ಪೊಲೀಸರು ದಸರಾ (Dasara) ಗುಂಗಲ್ಲೇ ಇದ್ದಿದ್ರೆ ಅಲರ್ಟ್ ಆಗಿರ್ಬೇಕಿತ್ತು. ಇಡೀ ಮೈಸೂರು ವಿದ್ಯುದ್ದೀಪಾಲಂಕಾರದ ಬೆಳಕಿನಿಂದ ಝಗಮಗಿಸ್ತಿತ್ತು. ನಾಲ್ಕೈದು ಜಿಲ್ಲೆಗಳ ಪೊಲೀಸರು ಭದ್ರತೆಗಿದ್ರು. ಇಷ್ಟಿದ್ರೂ ಬಾಲಕಿ ರೇಪ್ ತಡೆಯಲು ಆಗಿಲ್ಲ. ದೆಹಲಿಯಲ್ಲಿ ಮೋದಿ ಮನೆ ಮುಂದೆ ರಸ್ತೆಗುಂಡಿ ಪತ್ತೆ ಹಚ್ಚೋರು ಬಾಲಕಿ ಅತ್ಯಾಚಾರ ತಡೆಯಲು ಆಗಿಲ್ಲ ಎಂದು ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಮೈಸೂರಿನ ಪೊಲೀಸರಿಗೆ ಸಿಎಂ ಪುತ್ರ ಯತೀಂದ್ರನ ಕಾಟ ಹೆಚ್ಚಾಗಿದೆ: ಪ್ರತಾಪ್ ಸಿಂಹ ಆರೋಪ

    ಇನ್ನು ಮೈಸೂರು ಪೊಲೀಸರಿಗೆ ಯತೀಂದ್ರ ಕಾಟ ಎಂದು ಪ್ರತಾಪ್ ಸಿಂಹ (Pratap Simha) ಆರೋಪ ಸರಿ ಇದೆ. ಪ್ರತಾಪ್ ಸಿಂಹ ಸತ್ಯ ಹೇಳಿದ್ದಾರೆ. ಪೋಸ್ಟಿಂಗ್ ವ್ಯವಹಾರ ಸರ್ಕಾರದಲ್ಲಿ ನಡೀತಿದೆ. ಪೊಲೀಸರು ಫೀಲ್ಡ್‌ನಲ್ಲಿಲ್ಲ, ಪೋಸ್ಟಿಂಗ್‌ಗಾಗಿ ಶಾಸಕರು, ಸಚಿವರ ಮನೆ ಮುಂದೆ ಇದ್ದಾರೆ ಎಂದು ಅಶೋಕ್ ಹೇಳಿದ್ರು. ಇದನ್ನೂ ಓದಿ: ಚಾಮುಂಡಿ ತಾಯಿಗೆ ಮುಡಿ ಉತ್ಸವ; ರಾಜರ ವಜ್ರ-ವೈಡೂರ್ಯ ಅಲಂಕಾರದಲ್ಲಿ ಕಂಗೊಳಿಸಿದ ದೇವಿ

  • ರಾಹುಲ್ ಗಾಂಧಿ ಜೊತೆಗಿನ ಫೋಟೊ ಶೇರ್ – ರಾಜಕೀಯ ಎಂಟ್ರಿಗೆ ಸಿದ್ದರಾಮಯ್ಯ ಮೊಮ್ಮಗ ಸಿದ್ಧತೆ?

    ರಾಹುಲ್ ಗಾಂಧಿ ಜೊತೆಗಿನ ಫೋಟೊ ಶೇರ್ – ರಾಜಕೀಯ ಎಂಟ್ರಿಗೆ ಸಿದ್ದರಾಮಯ್ಯ ಮೊಮ್ಮಗ ಸಿದ್ಧತೆ?

    – ರಾಜಕಾರಣವು ನನ್ನ ಬದುಕಿನ ಹಿನ್ನೆಲೆಯ ಒಂದು ಭಾಗ: ಧವನ್‌ ರಾಕೇಶ್‌

    ಬೆಂಗಳೂರು: ಇತ್ತೀಚೆಗೆ ಹಲವು ಕಾರ್ಯಕ್ರಮಗಳಲ್ಲಿ ತಾತನ ಜೊತೆ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವ ಸಿದ್ದರಾಮಯ್ಯ (Siddaramaiah) ಮೊಮ್ಮಗ ಧವನ್ ರಾಕೇಶ್ (Dhawan Rakesh) ರಾಜಕೀಯ ಪ್ರವೇಶಕ್ಕೆ ಸಿದ್ಧತೆ ನಡೆಸಿದ್ದಾರೆ.

    ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಜೊತೆಗಿನ ಫೋಟೊಗಳನ್ನು ಸಿದ್ದರಾಮಯ್ಯ ಮೊಮ್ಮಗ ತನ್ನ ಇನ್‌ಸ್ಟಾ ಖಾತೆಯಲ್ಲಿ ಹಂಚಿಕೊAಡಿದ್ದು, ರಾಜಕೀಯ ಬಗೆಗಿನ ತಮ್ಮ ಒಲವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬಾಂಬೆ ಮಾದರಿಯಲ್ಲಿ ಕೊಳೆಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚನೆಗೆ ಸೂಚನೆ: ಡಿಕೆಶಿ

     

    View this post on Instagram

     

    A post shared by Dhawan Rakesh (@dhawanrakesh_)

    ಪೋಸ್ಟ್‌ನಲ್ಲಿ ಏನಿದೆ?
    ಕಳೆದ ಆ.8 ರಂದು, ನಮ್ಮ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರನ್ನು ಭೇಟಿಯಾಗುವ ಸದಾವಕಾಶ ನನಗೆ ದೊರೆಯಿತು. ಪ್ರಾಮಾಣಿಕ ನಾಯಕರನ್ನು ನಾನು ಎಷ್ಟರ ಮಟ್ಟಿಗೆ ಗೌರವಿಸುತ್ತೇನೆ ಮತ್ತು ಅವರನ್ನು ಭೇಟಿಯಾಗಲು ಬಯಸುತ್ತೇನೆ ಎಂಬುದನ್ನು ನನ್ನ ತಾತ ಗುರುತಿಸಿದ್ದರಿಂದ ಇದು ಸಾಧ್ಯವಾಯಿತು. ಈ ರಾಜಕೀಯ ವಲಯದಲ್ಲಿ ಪ್ರಾಮಾಣಿಕತೆಯನ್ನು ಬಹುತೇಕವಾಗಿ ಕಡೆಗಣಿಸಲಾಗಿದೆ. ಆದರೆ, ಇದೇ ವಲಯದಲ್ಲಿ ಪ್ರಾಮಾಣಿಕವಾಗಿರಲು ಯತ್ನಿಸುವ, ತನ್ನ ನಂಬಿಕೆಗೆ ಬದ್ಧವಾಗಿರುವ ನಾಯಕರನ್ನು ಭೇಟಿಯಾಗಲು ನಾನು ಇಚ್ಛಿಸುತ್ತೇನೆ.

    ರಾಜಕಾರಣವು ನನ್ನ ಬದುಕಿನ ಹಿನ್ನೆಲೆಯ ಒಂದು ಭಾಗವಾಗಿರುವುದು ನಿಜ. ಆದರೆ, ನಿರಂತರ ವಿರೋಧದ ನಡುವೆಯೂ ತನ್ನ ನಂಬಿಕೆ ಹಾಗೂ ಸಿದ್ಧಾಂತದ ಪರ ನಿಲ್ಲಲು ರಾಹುಲ್ ಗಾಂಧಿ ನಿರ್ಧರಿಸಿದರು. ಇಂತಹ ನಾಯಕನನ್ನು ಭೇಟಿಯಾಗಿದ್ದು ನಿಜವಾಗಿಯೂ ವಿಭಿನ್ನ ಅನುಭವವಾಗಿತ್ತು. ಅವರೊಂದಿಗೆ ಸ್ವಲ್ಪ ಕ್ಷಣಗಳ ಕಾಲ ಮಾತನಾಡಿದೆ. ಅವರ ಕುರಿತು ನನ್ನಲ್ಲಿರುವ ಅಪಾರ ಗೌರವದ ಬಗ್ಗೆ ತಿಳಿಸಿದೆ. ಈಗ ವಿದ್ಯಾರ್ಥಿಯಾಗಿ, ಮುಂದೆ ವಕೀಲನಾಗಿ ನಾನು ಅವರ ಜೊತೆ ನಿಲ್ಲಲು, ಅವರೊಂದಿಗೆ ಹೆಜ್ಜೆ ಹಾಕಲು ಬಯಸುತ್ತೇನೆಂದು ಹೇಳಿದೆ. ಈಗ ನಾವೆಲ್ಲರೂ ಸ್ವಲ್ಪ ಹೆಚ್ಚು ಮುನ್ನೆಚ್ಚರಿಕೆಯಿಂದ ಯೋಚಿಸಬೇಕಿದೆ. ಹೆಚ್ಚು ಜಾಗೃತರಾಗಬೇಕಿದೆ. ಸತ್ಯ, ನಿಷ್ಠೆ ಹಾಗೂ ಪಾರದರ್ಶಕತೆಯ ಮೂಲಕ ದೇಶವನ್ನು ಮುನ್ನಡೆಸುವ ನಾಯಕರನ್ನು ಗೌರವಿಸಬೇಕಿದೆ. ರಾಹುಲ್ ಗಾಂಧಿ ಅವರು ಸಾರ್ವಜನಿಕರು ಹಾಗೂ ಮಾಧ್ಯಮಗಳೊಂದಿಗೆ ಮುಕ್ತವಾಗಿ ಸಂವಾದ ನಡೆಸುತ್ತಾರೆ. ಅದೇ ರೀತಿ, ನಾವು ಸಹ ಸಂವಾದಕ್ಕೆ ಮುಂದಾಗಬೇಕಿದೆ. ಪ್ರಾಮಾಣಿಕ ಸಂವಾದವನ್ನು ನಾನು ಯಾವಾಗಲೂ ಸ್ವಾಗತಿಸುತ್ತೇನೆ ಎಂದು ಪೋಸ್ಟ್ನಲ್ಲಿ ಸಿದ್ದರಾಮಯ್ಯ ಮೊಮ್ಮಗ ಧವನ್ ರಾಕೇಶ್ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಹಾವೇರಿ, ಗದಗಕ್ಕೆ ಕೇಂದ್ರ ಸರ್ಕಾರ ಬಂಪರ್‌ ಕೊಡುಗೆ – ಧನ್ ಧಾನ್ಯ ಕೃಷಿ ಯೋಜನೆಗೆ ಜಿಲ್ಲೆಗಳ ಸೇರ್ಪಡೆ

  • ನಕ್ಷೆ ಮಂಜೂರಾತಿ, ಟಿಡಿಆರ್ ನೀಡುವ ಅಧಿಕಾರ ಇನ್ಮುಂದೆ GBA ವ್ಯಾಪ್ತಿಗೆ – ಸಿಎಂ ನೇತೃತ್ವದ ಸಭೆಯಲ್ಲಿ ನಿರ್ಣಯ

    ನಕ್ಷೆ ಮಂಜೂರಾತಿ, ಟಿಡಿಆರ್ ನೀಡುವ ಅಧಿಕಾರ ಇನ್ಮುಂದೆ GBA ವ್ಯಾಪ್ತಿಗೆ – ಸಿಎಂ ನೇತೃತ್ವದ ಸಭೆಯಲ್ಲಿ ನಿರ್ಣಯ

    – 5 ಪಾಲಿಕೆಗಳಿಗೆ ಐದು ಕಚೇರಿ ಅಂತಿಮ
    – ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ ಸಭೆಯಲ್ಲಿ ಮಹತ್ವದ ನಿರ್ಣಯ

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿಂದು ಬೆಂಗಳೂರಿನಲ್ಲಿ ಜಿಬಿಎ ಮೊದಲ ಸಭೆ ನಡೀತು. ಜಿಬಿಎ (GBA) ಅಡಿಯಲ್ಲಿರುವ 5 ನಗರ ಪಾಲಿಕೆ ಆಯುಕ್ತರು ಹಾಗೂ ಅಧಿಕಾರಿಗಳು ಜಿಬಿಎ ವ್ಯಾಪ್ತಿಯ ನಗರ ಪಾಲಿಕೆಗಳ ಚುನಾವಣೆ ಸಂಬಂಧಿಸಿದಂತೆ ಸಭೆ ಮಾಡಲಾಯಿತು. ಸಭೆಯಲ್ಲಿ ಬೆಂಗಳೂರಿನ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯಗಳು ಹಾಗೂ ಕುಂದುಕೊರತೆಗಳ ಬಗ್ಗೆಯೂ ಚರ್ಚೆ ನಡೀತು.

    ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸೇರಿದಂತೆ ಬೆಂಗಳೂರು ನಗರ ಕಾಂಗ್ರೆಸ್ ಶಾಸಕರು, ಜಿಬಿಎ ಪಾಲಿಕೆಗಳ ಆಯುಕ್ತರು, ಸದಸ್ಯರು ಭಾಗಿಯಾಗಿದ್ದರು. ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನ ಕೈಗೊಳ್ಳಲಾಯಿತು. ಇದನ್ನೂ ಓದಿ: ಟ್ರಾಫಿಕ್‌ ಸಮಸ್ಯೆ ಒಳ್ಳೆಯದು, ಇದು ಬೆಂಗಳೂರಿನ ಪ್ರಗತಿಯ ದಿಕ್ಸೂಚಿ: ಪ್ರಿಯಾಂಕ್‌ ಖರ್ಗೆ ವ್ಯಾಖ್ಯಾನ

    ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (BDA)ಕ್ಕೆ ಇದ್ದ ಇದ್ದ ನಕ್ಷೆ ಮಂಜೂರಾತಿ ಹಾಗೂ TDR (ವರ್ಗಾಯಿಸಬಹುದಾದ ಅಭಿವೃದ್ಧಿ ಹಕ್ಕುಗಳು) ನೀಡುವ ಅಧಿಕಾರವನ್ನ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಗೆ ತರಲು ನಿರ್ಧರಿಸಲಾಯಿತು. ಜಿಬಿಎ ವ್ಯಾಪ್ತಿಯ 5 ನಗರಪಾಲಿಕೆಗಳಿಗೆ ಬಜೆಟ್‌ ತೀರ್ಮಾನ ಮಾಡುವ ಜೊತೆಗೆ ಬಿಎಂಟಿಸಿ ಹಾಗೂ ಅಗ್ನಿಶಾಮಕ ದಳವನ್ನೂ ಸಹ ಬಿಜೆಪಿ ವ್ಯಾಪ್ತಿಗೆ ಸೇರಿಸಿ ನಿರ್ಣಯ ಕೈಗೊಳ್ಳಲಾಯಿತು. ಇದನ್ನೂ ಓದಿ: ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ಜಾತಿಗಣತಿ, GBA ಚುನಾವಣೆಗೆ ತಯಾರಿ ಎಲ್ಲಿ?: ಸರ್ಕಾರಕ್ಕೆ ವಿಜಯೇಂದ್ರ ಪ್ರಶ್ನೆ

    ಸಭೆಯ ಮಹತ್ವದ ನಿರ್ಣಯಗಳೇನು?
    – ಬಿಡಿಎಗೆ ಇದ್ದ ನಕ್ಷೆ ಮಂಜೂರಾತಿ ಇನ್ಮುಂದೆ ಜಿಬಿಎ ವ್ಯಾಪ್ತಿಗೆ
    – ಟಿಡಿಆರ್ ನೀಡುವ ಅಧಿಕಾರ ಕೂಡ ಇನ್ಮುಂದೆ ಜಿಬಿಎ ವ್ಯಾಪ್ತಿಗೆ
    – ಐದು ಪಾಲಿಕೆಗಳ ಬಜೆಟ್ ತೀರ್ಮಾನ
    – ಬಿಎಂಟಿಸಿ, ಅಗ್ನಿ ಶಾಮಕ ದಳ, ಇನ್ಮುಂದೆ ಜಿಬಿಎ ವ್ಯಾಪ್ತಿಗೆ
    – ಕೇಂದ್ರ ಸಂಯೋಜನಾ ಸಮಿತಿ ರಚನೆಗೆ ತೀರ್ಮಾನ (ಇಲಾಖೆಗಳ ನಡುವಿನ ಸಮನ್ವಯತೆಗೆ)
    – ಜಿಬಿಎ ಮುಖ್ಯ ಆಯುಕ್ತರ ನೇತೃತ್ವದಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಲು ತೀರ್ಮಾನ
    – ಐದು ಪಾಲಿಕೆಗಳಿಗೆ ಐದು ಕಚೇರಿ ಅಂತಿಮ
    – ಸೆಂಟ್ರಲ್ ಪಾಲಿಕೆ ಜಿಬಿಎ ಕೇಂದ್ರ ಕಚೇರಿಯಲ್ಲೇ ಕಚೇರಿ ಇರಲಿದೆ
    – ಹೊಸ ಪಾಲಿಕೆ ಕಚೇರಿ ಕಟ್ಟಡಗಳು ಒಂದೇ ರೀತಿ ಇರಬೇಕೆಂದು ತೀರ್ಮಾನಿಸಲಾಗಿದೆ
    – ಒಂದೇ ಮಾದರಿಯಲ್ಲಿ ಕಚೇರಿ ನಿರ್ಮಾಣ ಮಾಡಲು ತೀರ್ಮಾನ
    – ಹೊಸದಾಗಿ ಐದು ಪಾಲಿಕೆಗಳಿಗೆ ಕಚೇರಿ ನಿರ್ಮಾಣ

    ಬಿಜೆಎ ಸಭೆಗೆ ಬಿಜೆಪಿ ಶಾಸಕರ ಗೈರು
    ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಮೊದಲ ಸಭೆಗೆ ಬಿಜೆಪಿ ಶಾಸಕರು ಗೈರಾದರು. ಜಿಬಿಎ ರಚನೆ ಬಗ್ಗೆ ನಮಗೆ ವಿರೋಧವಿದೆ ಹಾಗಾಗಿ ನಾವು ಸಭೆಗೆ ಹಾಜರಾಗುವುದಿಲ್ಲ ಎಂದು ವಿರೋಧಿಸಿದ್ರು. 75 ಜಿಬಿಎ ಸದಸ್ಯರ ಪೈಕಿ ಕೇವಲ 35 ಸದಸ್ಯರು ಮಾತ್ರ ಸಭೆಗೆ ಹಾಜರಾಗಿದ್ದರು. ಹೀಗಾಗಿ ಮೊದಲ ಸಭೆಯಲ್ಲಿ ಸಿಎಂಗೆ ಹಿನ್ನಡೆಯಾಯ್ತು. ಇದನ್ನೂ ಓದಿ: ಸಿಎಂ ಡಿನ್ನರ್ ಮೀಟಿಂಗ್ ಸಿದ್ದರಾಮಯ್ಯ ಅಧಿಕಾರ ಅಂತ್ಯದ ಮುನ್ಸೂಚನೆಯಾ- ಛಲವಾದಿ ಪ್ರಶ್ನೆ

  • ಸಿಎಂ ಡಿನ್ನರ್ ಮೀಟಿಂಗ್ ಸಿದ್ದರಾಮಯ್ಯ ಅಧಿಕಾರ ಅಂತ್ಯದ ಮುನ್ಸೂಚನೆಯಾ- ಛಲವಾದಿ ಪ್ರಶ್ನೆ

    ಸಿಎಂ ಡಿನ್ನರ್ ಮೀಟಿಂಗ್ ಸಿದ್ದರಾಮಯ್ಯ ಅಧಿಕಾರ ಅಂತ್ಯದ ಮುನ್ಸೂಚನೆಯಾ- ಛಲವಾದಿ ಪ್ರಶ್ನೆ

    ಬೆಂಗಳೂರು: ಸಿಎಂ ಡಿನ್ನರ್ ಮೀಟಿಂಗ್ ಸಿದ್ದರಾಮಯ್ಯ (Siddaramaiah) ಅಧಿಕಾರ ಅಂತ್ಯದ ಮುನ್ಸೂಚನೆಯಾ? ಡಿಕೆ ಶಿವಕುಮಾರ್ ಸಿಎಂ ಆಗುವ ಆರಂಭವೇ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಪ್ರಶ್ನಿಸಿದ್ದಾರೆ.

    ಸಿಎಂ ಡಿನ್ನರ್ ಮೀಟಿಂಗ್ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನವೆಂಬರ್ ಕ್ರಾಂತಿ ಅನ್ನೋದು ಬಹುದಿನಗಳ ಸುದ್ದಿ. 6 ತಿಂಗಳ ಹಿಂದೆಯೇ ಕಾಂತ್ರಿ ಆಗುತ್ತೆ ಎಂದು ಕಾಂಗ್ರೆಸ್ ನಾಯಕರೇ ಹೇಳಿದ್ರು. ಆ ಕ್ರಾಂತಿಗೆ ಇನ್ನೊಂದು ತಿಂಗಳು ಇದೆ. ಅದರ ಬೆಳವಣಿಗೆ ಈಗ ಶುರುವಾಗಿದೆ‌. ಸಿಎಂ ಅವರು ಬದಲಾವಣೆ ಆಗ್ತಾರೆ ಅನ್ನೋ ಸಮಯದಲ್ಲಿ ಡಿನ್ನರ್ ಮೀಟಿಂಗ್ ಮಾಡುತ್ತಿದ್ದಾರೆ. ಸಿಎಂ ಅಲ್ಲದೇ ಬೇರೆ ಮಂತ್ರಿಗಳು ಸಭೆ ಮಾಡ್ತಿದ್ದಾರೆ. ಇದು ಕ್ರಾಂತಿಯ ವಿಚಾರವೇ ಅಂತ ಅನುಮಾನ ವ್ಯಕ್ತಪಡಿಸಿದರು. ಇದನ್ನೂ ಓದಿ:  ನಾವು ಮಾಡಿರೋದು ಪೊಲಿಟಿಕಲ್ ಮೀಟಿಂಗ್ ಅಲ್ಲ: ಪರಮೇಶ್ವರ್

     

    ಡಿನ್ನರ್ ಮೀಟಿಂಗ್ ಅಂದರೆ ಅದೇ ವಿಶೇಷತೆ. ಎರಡು ವರ್ಷಗಳಿಂದ ಡಿನ್ನರ್ ಮೀಟಿಂಗ್ ಸಿಎಂ ಮಾಡಿರಲಿಲ್ಲ.ಈಗ ಮಾಡ್ತಿದ್ದಾರೆ ಅಂದರೆ ಸಿದ್ದರಾಮಯ್ಯ (Siddaramaiah) ಅವರ ಅಧಿಕಾರ ಅಂತ್ಯವಾ? ಅಥವಾ ಡಿಕೆಶಿ (DK Shivakumar) ಗುಂಪು ಹೇಳು ರೀತಿ ನವೆಂಬರ್ ಗೆ ಡಿಕೆಶಿವಕುಮಾರ್ ಸಿಎಂ ಆಗ್ತಾರೆ ಅನ್ನೋದರ ಪ್ರಾರಂಭನಾ? ಅಥವಾ ದಲಿತ ಸಿಎಂ ಮಾಡ್ತೀನಿ ಅಂತ ಕಾಂಗ್ರೆಸ್ ಹೇಳ್ತಿದೆ. ಈಗಲಾದರೂ ದಲಿತ ಸಿಎಂ ಮಾಡಿ ಅದಕ್ಕೆ ತೆರೆ ಎಳೆಯುತ್ತಾರಾ ಅಂತ ಪ್ರಶ್ನೆ ಮಾಡಿದರು.

    ನಿನ್ನೆಯಿಂದ ಸಿಎಂ ಆಗಿ ಪರಮೇಶ್ವರ್ ಅವರನ್ನ ಮಾಡುತ್ತಾರೆ. ಅವರನ್ನು ಬೆಂಬಲಿಸುತ್ತೇವೆ ಎಂದು ಸಿಎಂ ಜೊತೆ ಇರೋ ಮಂತ್ರಿಗಳು ಹೇಳುತ್ತಿದ್ದಾರೆ. ಸಿಎಂ ಅವರು ಪರಮೇಶ್ವರ್ ಸಿಎಂ ಮಾಡಿಸೋಕೆ ಪ್ರಯತ್ನ ಮಾಡ್ತಿದ್ದಾರಾ? ನವೆಂಬರ್ ಕ್ರಾಂತಿಗೂ ಸಿಎಂ ಡಿನ್ನರ್ ಮೀಟಿಂಗ್‌ಗೂ ನಿಕಟ ಸಂಬಂಧವಿದೆ. ಈ ಬೆಳವಣಿಗೆ ನೋಡ್ತಿದ್ದರೆ ಏನೋ ದೊಡ್ಡ ವಿಷಯ ಇದೆ ಅಂತ ಜನರು ಅನ್ನಿಸುತ್ತಿದೆ ಅಂತ ತಿಳಿಸಿದರು. ಇದನ್ನೂ ಓದಿ:  ಕುಕ್ಕರ್ ಬ್ರ್ಯಾಂಡ್ ಪ್ರೆಸ್ಟೀಜ್ ಸಂಸ್ಥಾಪಕ ಟಿಟಿ ಜಗನ್ನಾಥನ್ ನಿಧನ

    ಈ ಬಾರಿಯ ದಸರಾ ಜನ ಸಾಮಾನ್ಯರ ದಸರಾ ಆಗಿರಲಿಲ್ಲ. ಕಾಂಗ್ರೆಸ್ ದಸರಾ ಆಗಿತ್ತು. ಈ ಬಾರಿ ದಸರಾ ಸಿದ್ದರಾಮಯ್ಯ, ಮಹದೇವಪ್ಪ ಅವರ ಅವರ ಮನೆ ಮದುವೆ ಸಮಾರಂಭ ನಡೆದ ಹಾಗೆ ಇತ್ತು. ಜನ ಸಾಮಾನ್ಯರು ಕಷ್ಟಪಟ್ಟರೂ ದಸರಾ ನೋಡಲು ಸಾಧ್ಯವಾಗಲಿಲ್ಲ. ಟಿಕೆಟ್ ಕಾಳಸಂತೆಯಲ್ಲಿ ಮಾರಾಟ ಆಗಿತ್ತು. ಸಿದ್ದರಾಮಯ್ಯ, ಮಹದೇವಪ್ಪ ಮೊಮ್ಮಕ್ಕಳ ಕಾರ್ಯಕ್ರಮದ ರೀತಿ ಇತ್ತು ಎಂದು ಹೇಳಿ ಯದುವೀರ್‌ ಒಡೆಯರ್‌ ಹೇಳಿಕೆಯನ್ನು ಸಮರ್ಥಿಸಿದರು.

  • ಸಚಿವ ಸಂಪುಟ ಪುನಾರಚನೆ ವಿಚಾರ ನನಗೆ ಗೊತ್ತಿಲ್ಲ: ಡಿಕೆಶಿ

    ಸಚಿವ ಸಂಪುಟ ಪುನಾರಚನೆ ವಿಚಾರ ನನಗೆ ಗೊತ್ತಿಲ್ಲ: ಡಿಕೆಶಿ

    ಬೆಂಗಳೂರು: ಸಚಿವ ಸಂಪುಟದಲ್ಲಿ (Cabinet) ಬದಲಾವಣೆ ವಿಚಾರವಾಗಿ ನನಗೆ ಯಾವುದೇ ಮಾಹಿತಿ ಇಲ್ಲ. ಇದು ಪಕ್ಷ ಹಾಗೂ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಹೇಳಿದರು.

    ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ನಾನು ಮಾತನಾಡುವುದಿಲ್ಲ. ನನ್ನ ಜೊತೆ ಈ ವಿಚಾರ ಚರ್ಚೆ ಮಾಡಿದರೆ ನಾನು ನನ್ನ ಸಲಹೆ ನೀಡುತ್ತೇನೆ. ಈ ವಿಚಾರವಾಗಿ ಅನಗತ್ಯ ಚರ್ಚೆ ಮಾಡಿ ಗೊಂದಲ ಸೃಷ್ಟಿಸಬೇಡಿ ಎಂದು ನಿಮ್ಮಲ್ಲಿ ಮನವಿ ಮಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಭಯೋತ್ಪಾದಕ ಗುಂಪು ಜೆಇಎಂ ಮಹಿಳಾ ವಿಭಾಗ ಆರಂಭ – ‘ಆಪರೇಷನ್‌ ಸಿಂಧೂರ’ದಲ್ಲಿ ಗಂಡನ ಕಳೆದುಕೊಂಡ ಮಹಿಳೆಗೆ ಚುಕ್ಕಾಣಿ

    ಮುಖ್ಯಮಂತ್ರಿಗಳು ಔತಣಕೂಟ ಆಯೋಜಿಸಿರುವ ಬಗ್ಗೆ ಕೇಳಿದಾಗ, ಇದರಲ್ಲಿ ತಪ್ಪೇನಿದೆ? ಒಟ್ಟಿಗೆ ಸೇರಿ ಊಟ ಮಾಡಿ, ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡುವುದು ಸಹಜ ಎಂದರು. ಇದನ್ನೂ ಓದಿ: ವೀರೇಂದ್ರ ಪಪ್ಪಿ ವಿರುದ್ಧದ ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಕೇಸ್ – ಚಳ್ಳಕೆರೆಯ ಹಲವೆಡೆ ಇಡಿ ದಾಳಿ

    ಬಿಗ್ ಬಾಸ್ ವಿಚಾರವಾಗಿ ಪ್ರತಿಕ್ರಿಯಿಸಿ, ಬುಧವಾರ ರಾತ್ರಿ ಡಿಸಿಗೆ ಕರೆ ಮಾಡಿ ಜಾಲಿವುಡ್ ಸ್ಟುಡಿಯೋದವರು ತಮ್ಮ ತಪ್ಪನ್ನು ಸರಿಪಡಿಸಿಕೊಳ್ಳಲು ಒಂದು ಅವಕಾಶ ಕಲ್ಪಿಸಿ ಎಂದು ಸೂಚಿಸಿದ್ದೇನೆ. ನಮ್ಮ ಉದ್ಯಮ ಬೆಳೆಯಬೇಕು. ಇದು ಹೆಚ್ಚಿನ ಮಾಲಿನ್ಯ ಉಂಟು ಮಾಡಲು ದೊಡ್ಡ ಕಾರ್ಖಾನೆಯಲ್ಲ. ಸಣ್ಣಪುಟ್ಟ ನಿಯಮ ಉಲ್ಲಂಘನೆಯಾಗಿದ್ದರೆ ಸರಿಪಡಿಸಿಕೊಳ್ಳಿ. ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಾವಳಿಯನ್ನು ಪಾಲನೆ ಮಾಡಿ ಎಂದು ಸ್ಟುಡಿಯೋದವರಿಗೂ ಹೇಳಿ ಕಳುಹಿಸಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಮೈಸೂರಲ್ಲಿ 10 ವರ್ಷದ ಬಾಲಕಿ ಮೇಲೆ ರೇಪ್ & ಮರ್ಡರ್; ಆರೋಪಿ ಗುರುತು ಪತ್ತೆ