Tag: ಸಿದ್ದರಾಮಯ್ಯ

  • ಅನ್ನಭಾಗ್ಯ | 5 ಕೆಜಿ ಅಕ್ಕಿ ಬದಲು ʻಇಂದಿರಾ ಆಹಾರ ಕಿಟ್‌ʼ

    ಅನ್ನಭಾಗ್ಯ | 5 ಕೆಜಿ ಅಕ್ಕಿ ಬದಲು ʻಇಂದಿರಾ ಆಹಾರ ಕಿಟ್‌ʼ

    – 5 ಕೆಜಿ ಅಕ್ಕಿ ಲೆಕ್ಕದಲ್ಲಿ ತೊಗರಿ ಬೇಳೆ, ಎಣ್ಣೆ, ಸಕ್ಕರೆ, ಉಪ್ಪು ವಿತರಿಸಲು ನಿರ್ಧಾರ

    ಬೆಂಗಳೂರು: ಬಿಪಿಎಲ್ (BPL Card) ಹಾಗೂ ಅಂತ್ಯೋದಯ ಕಾರ್ಡುಗಳಿಗೆ ಅನ್ನಭಾಗ್ಯದ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ ಹಾಗೂ ಉಳಿದ 5 ಕೆಜಿ ಅಕ್ಕಿ ಲೆಕ್ಕದಲ್ಲಿ ಆಹಾರ ಧಾನ್ಯ ನೀಡಲು ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಿದೆ.

    ʻಇಂದಿರಾ ಆಹಾರ ಕಿಟ್‌ʼ (ಇಂದಿರಾ – ಅನ್ನಭಾಗ್ಯ ಫಲಾನುಭವಿಗಳನ್ನು ಪುನರುಜ್ಜೀವನಗೊಳಿಸಲು ಸಮಗ್ರ ಪೋಷಣೆ ಮತ್ತು ಆಹಾರ ಉಪಕ್ರಮ) ಕಿಟ್‌ ನೀಡಲು ಸರ್ಕಾರ ನಿರ್ಧರಿಸಿದೆ. ಇದನ್ನೂ ಓದಿ: ಹೆಣ್ಣುಮಕ್ಕಳಿಗೆ ಋತುಚಕ್ರ ರಜೆಗೆ ಕ್ಯಾಬಿನೆಟ್ ಒಪ್ಪಿಗೆ – ತಿಂಗಳಲ್ಲಿ 1 ದಿನ ವೇತನ ಸಹಿತ ರಜೆ

    ಅದರಂತೆ ಫಲಾನುಭವಿಗಳಿಗೆ 10 ಕೆಜಿ ಅಕ್ಕಿ ಬದಲಿಗೆ 5 ಕೆಜಿ ಅಕ್ಕಿ ನೀಡಲಾಗುತ್ತದೆ. ಉಳಿದ 5 ಕೆಜಿ ಅಕ್ಕಿ ಲೆಕ್ಕದಲ್ಲಿ ತೊಗರಿ ಬೇಳೆ, ಹೆಸರು ಕಾಳು, ಸಕ್ಕರೆ, ಉಪ್ಪು ತಲಾ 1 ಕೆಜಿ ಹಾಗೂ 1 ಲೀಟರ್‌ ಅಡುಗೆ ಎಣ್ಣೆ ಪದಾರ್ಥವನ್ನು ಇಂದಿರಾ ಆಹಾರ ಕಿಟ್‌ನಲ್ಲಿ (INDIRA Food Kit) ನೀಡಲಾಗುತ್ತದೆ. ಅನ್ನಭಾಗ್ಯದ ಅಕ್ಕಿ ದುರ್ಬಳಕೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ (HK Patil) ತಿಳಿಸಿದ್ದಾರೆ. ಇದನ್ನೂ ಓದಿ: ಸಂಪುಟ ಪುನರ್‌ಚನೆ ವದಂತಿ ಬೆನ್ನಲ್ಲೇ ಮೂವರು ಸಚಿವರಿಂದ ಬ್ರೇಕ್‌ಫಾಸ್ಟ್‌ ಮೀಟಿಂಗ್‌

    ಅಕ್ಕದಾಗಿ ಅನ್ನಭಾಗ್ಯ ಯೋಜನೆ ಅಡಿಯಲ್ಲಿ 5 ಕೆಜಿ ಹೆಚ್ಚುವರಿ ಅಕ್ಕಿ ನೀಡಲು ಆಯವ್ಯಯದಲ್ಲಿ ಹಂಚಿಕೆ ಮಾಡಿರುವ 6,426 ಕೋಟಿ ರೂ.ಗಳಲ್ಲಿ 6,119.52 ಕೋಟಿ ರೂ. ವಚ್ಚದಲ್ಲಿ ಇಂದಿರಾ ಆಹಾರ ಕಿಟ್‌ ಅನ್ನು ಒದಗಿಸಲು ಬಜೆಟ್‌ ಮರುಹಂಚಿಕೆ ಮಾಡುವುದಕ್ಕೆ ಅನುಮೋದನೆ ನೀಡಲಾಗಿದೆ. ಇದನ್ನೂ ಓದಿ: 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಮೈತ್ರಿ ಇಲ್ಲ, ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

  • ಬಿಹಾರ ಎಲೆಕ್ಷನ್ ತನಕ ಸುಮ್ಮನಿದ್ದುಬಿಡಿ: ರಾಜಣ್ಣ ಮಾರ್ಮಿಕ ನುಡಿ

    ಬಿಹಾರ ಎಲೆಕ್ಷನ್ ತನಕ ಸುಮ್ಮನಿದ್ದುಬಿಡಿ: ರಾಜಣ್ಣ ಮಾರ್ಮಿಕ ನುಡಿ

    ತುಮಕೂರು: ಬಿಹಾರ ಎಲೆಕ್ಷನ್‌ವರೆಗೂ (Bihar Election) ಸುಮ್ಮನೆ ಇದ್ದು ಬಿಡಿ, ಬಿಹಾರ ಎಲೆಕ್ಷನ್ ಕಳೆದು ಹೋಗಲಿ ಎಂದು ಮಾಜಿ ಸಚಿವ ಕೆಎನ್ ರಾಜಣ್ಣ (KN Rajanna) ಮಾರ್ಮಿಕವಾಗಿ ನುಡಿದಿದ್ದಾರೆ.

    ತುಮಕೂರಿನಲ್ಲಿ (Tumakuru) ಮಾಧ್ಯಮದವರು, ಮತ್ತೆ ನೀವು ಸಚಿವರಾಗುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಹಾರ ಚುನಾವಣೆವರೆಗೂ ಕಾದು ನೋಡಿ ಎಂದಷ್ಟೇ ಹೇಳಿದ್ದಾರೆ. ಕೆಎನ್ ರಾಜಣ್ಣರ ಈ ಮಾತಿನ ಮರ್ಮ ಹಲವು ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಭಾರತಕ್ಕೆ ಆಗಮಿಸಿದ ತಾಲಿಬಾನ್‌ ವಿದೇಶಾಂಗ ಸಚಿವ

    ಅಲ್ಲದೇ ಸಿಎಂ ಸಿದ್ದರಾಮಯ್ಯರ (Siddaramaiah) ಬಗ್ಗೆ ನನಗೆ ವಿಶ್ವಾಸ ಇದೆ ಎಂದೂ ಮತ್ತೆ ಮಂತ್ರಿಗಿರಿ ಸಿಗಬಹುದು ಅನ್ನೋದನ್ನೂ ಪರೋಕ್ಷವಾಗಿ ಹೇಳಿದ್ದಾರೆ. ಮಂತ್ರಿ ಸ್ಥಾನ ಕೊಡಿ ಎಂದು ನಾನು ಕೇಳಿರಲಿಲ್ಲ. 2018 ರಲ್ಲಿ ನಾನು ಸೋತಾಗ ಸಿಎಂ ಸಿದ್ದರಾಮಯ್ಯ ಹೇಳಿದ್ರು ನೀನು ಗೆದ್ದರೆ ಮಿನಿಸ್ಟರ್ ಆಗ್ತಿದ್ದೆ ಕಣಯ್ಯಾ, ನಿನ್ನ ಬದಲು ತುಕಾರಂನನ್ನು ಮಾಡಿದೆ ಎಂದು ಹೇಳಿದರು. ಈ ಬಾರಿ ಅವರೇ ಕರೆದು ಸಚಿವ ಸ್ಥಾನ ಕೊಟ್ಟರು ಎಂದರು. ಇದನ್ನೂ ಓದಿ: ಕೆಮ್ಮಿನ ಸಿರಪ್ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳ ಸಾವು – ಫಾರ್ಮಾ ಕಂಪನಿ ಮಾಲೀಕ ಅರೆಸ್ಟ್

    ಹೈಕಮಾಂಡ್‌ಗೆ ಸತ್ಯದ ಅರಿವಾಗಿದ್ಯಾ ಎಂಬ ಪ್ರಶ್ನೆಗೂ ಉತ್ತರಿಸಿದ ರಾಜಣ್ಣ, ಎಲ್ಲವೂ ಬಿಹಾರ ಎಲೆಕ್ಷನ್ ಕಳೆದ ಮೇಲೆಯೇ ಗೊತ್ತಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಖಾಸಗಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ – ವಿದ್ಯಾರ್ಥಿ ಸಜೀವ ದಹನ

  • ರಾಜ್ಯೋತ್ಸವ ಪ್ರಶಸ್ತಿಗೆ ಇನ್ಮುಂದೆ ಅರ್ಜಿ ಪ್ರಕ್ರಿಯೆ ಇಲ್ಲ – ಸರ್ಕಾರದಿಂದ ಮಹತ್ವದ ನಿರ್ಧಾರ

    ರಾಜ್ಯೋತ್ಸವ ಪ್ರಶಸ್ತಿಗೆ ಇನ್ಮುಂದೆ ಅರ್ಜಿ ಪ್ರಕ್ರಿಯೆ ಇಲ್ಲ – ಸರ್ಕಾರದಿಂದ ಮಹತ್ವದ ನಿರ್ಧಾರ

    – ಈ ಬಾರಿ 70 ಮಂದಿ ಅರ್ಹ ಸಾಧಕರಿಗೆ ಪ್ರಶಸ್ತಿ ನೀಡಲು ನಿರ್ಧಾರ
    – ಕಳೆದ ವರ್ಷ 2,000ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆಯಾಗಿತ್ತು

    ಬೆಂಗಳೂರು: ವರ್ಷದಿಂದ ವರ್ಷಕ್ಕೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ (Kannada Rajyotsava Award) ಡಿಮ್ಯಾಂಡ್‌ ಹೆಚ್ಚಾಗುತ್ತಿದ್ದು, ಅರ್ಜಿ ಸಲ್ಲಿಸುವವರ ಸಂಖ್ಯೆಯೂ ಹೆಚ್ಚಾಗ್ತಿದೆ. ಹೀಗಾಗಿ ಮಹತ್ವದ ನಿರ್ಧಾರ ಕೈಗೊಂಡಿರುವ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕುವ ಪ್ರಕ್ರಿಯೆಯನ್ನೇ ಕೈಬಿಟ್ಟಿದೆ

    ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಹೊಸ ನಿಯಮ ಜಾರಿಗೊಳಿಸಲಾಗುತ್ತಿದ್ದು, ಆನ್‌ಲೈನ್‌ ಮೂಲಕ ಅರ್ಜಿ (Online Application) ಆಹ್ವಾನಿಸುವ ಪ್ರಕ್ರಿಯೆಯನ್ನೇ ಕೈಬಿಟ್ಟಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಮಾಹಿತಿ ನೀಡಿದ್ದಾರೆ.

    ರಾಜ್ಯೋತ್ಸವ ಪ್ರಶಸ್ತಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಲಹಾ ಸಮಿತಿ ಹಾಗೂ ಉನ್ನತ ಆಯ್ಕೆ ಸಮಿತಿ ರಚಿಸಿ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲು ಸರ್ಕಾರ ನಿರ್ಧರಿಸಿದೆ. ಸಮಿತಿಯಿಂದ ಆಯ್ಕೆಯಾದ ಸಾಧಕರಿಗೆ ಮಾತ್ರ ಪ್ರಶಸ್ತಿ ನೀಡಲು ಸರ್ಕಾರ ನಿರ್ಧರಿಸಿದೆ.

    ಇನ್ನೂ ಈ ಬಾರಿ 70 ಜನ ಅರ್ಹ ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಸರ್ಕಾರದ ನಿರ್ಧಾರ ಮಾಡಿದೆ. ಈಗಾಗಲೇ ಇಲಾಖೆಗೆ ಸಲ್ಲಿಕೆಯಾಗಿರುವ ಸ್ವಯಂ ಅರ್ಜಿಗಳನ್ನು ಸಹ ಪ್ರಶಸ್ತಿ ಸಲಹಾ ಸಮಿತಿ ಮುಂದೆ ಮಂಡಿಸಲು ನಿರ್ಧರಿಸಲಾಗಿದೆ.

    ಕಳೆದ ವರ್ಷ 2,000ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ
    ಕಳೆದ ವರ್ಷ 69 ಪ್ರಶಸ್ತಿಗಳಿಗೆ 2,000 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿತ್ತು. ಇದರಲ್ಲಿ ಆನ್‌ಲೈನ್‌ ಸೇವಾಸಿಂಧು ಪೋರ್ಟಲ್‌ ಮೂಲಕವೇ ಬರೋಬ್ಬರಿ 1,135ಕ್ಕೂ ಹೆಚ್ಚು ಹಾಗೂ ಭೌತಿಕವಾಗಿ 85ಕ್ಕೂ ಹೆಚ್ಚು ಅರ್ಜಿಗಳು ಸಂದಾಯವಾಗಿತ್ತು.

    ಬಿಜೆಪಿ ಅವಧಿಯಲ್ಲೇ ಈ ಕ್ರಮ ಇತ್ತು
    2022ರಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿತ್ತು. ಅಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿದ್ದ ಸುನಿಲ್ ಕುಮಾರ್, ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿಗಳನ್ನು ಪಡೆಯದೆ, ಆಯ್ಕೆ ಸಮಿತಿಯನ್ನು ರಚಿಸಿ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು ಎಂದು ಘೋಷಿಸಿದ್ದರು. ಆದ್ರೆ 2023ರಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಈ ಪ್ರಕ್ರಿಯೆಗೆ ಬ್ರೇಕ್‌ ಬಿದ್ದಿತ್ತು.

  • ಮುಡಾ ಕೇಸ್ `ಬಿ’ ರಿಪೋರ್ಟ್ ಒಪ್ಪುತ್ತಾ ಕೋರ್ಟ್? – ಮರು ತನಿಖೆ ಆದೇಶ ಬಗ್ಗೆ ನಾಳೆ ನಿರ್ಧಾರ

    ಮುಡಾ ಕೇಸ್ `ಬಿ’ ರಿಪೋರ್ಟ್ ಒಪ್ಪುತ್ತಾ ಕೋರ್ಟ್? – ಮರು ತನಿಖೆ ಆದೇಶ ಬಗ್ಗೆ ನಾಳೆ ನಿರ್ಧಾರ

    ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಅವರ ಕುಟುಂಬದ ವಿರುದ್ಧದ ಮುಡಾ ನಿವೇಶನ (Muda Case) ಹಂಚಿಕೆ ಹಗರಣ ಸಂಬಂಧ ಲೋಕಾಯುಕ್ತ ‘ಬಿ’ ರಿಪೋರ್ಟ್ (B Report) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ಪೂರ್ಣಗೊಂಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆಗೆ ಆದೇಶ ಕಾಯ್ದಿರಿಸಿದೆ.

    ಬಿ ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ (Snehamayi Krishna) ಸಲ್ಲಿಸಿದ್ದ ಅರ್ಜಿ ಸಲ್ಲಿಸಿದ್ದರು. ಬಿ ರಿಪೋರ್ಟ್ ಒಪ್ಪಬೇಕಾ? ಅಥವಾ ಮರುತನಿಖೆಗೆ ಆದೇಶಿಸಬೇಕಾ? ಅನ್ನೋ ಬಗ್ಗೆ ನಾಳೆ ಗೊತ್ತಾಗಲಿದೆ. ಇದನ್ನೂ ಓದಿ: ಜಾಲಿವುಡ್ ಮ್ಯಾನೇಜ್ಮೆಂಟ್ ವಿರುದ್ಧ ಬಿಗ್ ಬಾಸ್ ಗರಂ – ಲೀಗಲ್ ಆಕ್ಷನ್ ಬಗ್ಗೆ ಚರ್ಚೆ

    ಬಿ ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಪ್ರೊಟೆಸ್ಟ್ ಅರ್ಜಿ ಹಾಕಿದ್ದರು. ಈ ಹಿಂದೆ ತನಿಖೆ ಪೂರ್ಣವಾದ ಬಳಿಕ ‘ಬಿ’ ರಿಪೋರ್ಟ್ ಬಗ್ಗೆ ತೀರ್ಮಾನ ಮಾಡೋದಾಗಿ ಕೋರ್ಟ್ ಹೇಳಿತ್ತು. ಕಳೆದ 6 ತಿಂಗಳಿಂದ ತನಿಖೆಯಲ್ಲಿ ಪ್ರಗತಿ ಆಗದ ಹಿನ್ನೆಲೆ ಮತ್ತೊಮ್ಮೆ ಅರ್ಜಿ ಸಲ್ಲಿಸಿ ‘ಬಿ’ ರಿಪೋರ್ಟ್ ಬಗ್ಗೆ ಆದೇಶ ಮಾಡಲು ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದರು. ಇಂದು ಕೋರ್ಟ್ ಕಲಾಪದ ಅವಧಿ ಮುಕ್ತಾಯ ಹಿನ್ನೆಲೆ ಆದೇಶ ನಾಳೆಗೆ ಮುಂದೂಡಿಕೆಯಾಗಿದೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್‌ ಕ್ಲೈಮ್ಯಾಕ್ಸ್‌ ಹಂತಕ್ಕೆ – ಅಂತಿಮ ವರದಿ ಸಲ್ಲಿಸಲು SIT ತಯಾರಿ

  • ಹೊಸ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಬಗ್ಗೆ ನಾಳೆ ನಿರ್ಧಾರ – ಕಾನೂನು ಇಲಾಖೆ ವರದಿಗೆ ಸೂಚನೆ

    ಹೊಸ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಬಗ್ಗೆ ನಾಳೆ ನಿರ್ಧಾರ – ಕಾನೂನು ಇಲಾಖೆ ವರದಿಗೆ ಸೂಚನೆ

    – ಎಲ್ಲ ಮಾರ್ಗಗಳ ಪರಿಶೀಲನೆಗೆ ಸಿಎಂ ಆದೇಶ

    ಬೆಂಗಳೂರು: ಗ್ರೇಟರ್ ಬೆಂಗಳೂರು (GBA) ವ್ಯಾಪ್ತಿ ಹಾಗೂ ರಾಜ್ಯದ ಇತರೆಡೆ ನಿರ್ಮಾಣ ಹಂತದ ಕಟ್ಟಡಗಳಿಗೆ ವಿದ್ಯುತ್ ಹಾಗೂ ನೀರು ಸಂಪರ್ಕ ಕಲ್ಪಿಸುವ ವಿಚಾರದಲ್ಲಿ ಯಾವುದೇ ತೀರ್ಮಾನ ಕೈಗೊಳ್ಳುವಲ್ಲಿ ರಾಜ್ಯ ಸರ್ಕಾರ (Karnaraka Government) ವಿಫಲವಾಗಿದೆ.

    ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆಸಲಾಯಿತಾದರೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಆಗದೇ ಹೇಗೆ ಅನುಕೂಲ ಮಾಡಿಕೊಡಬಹುದು ಎಂಬುದರ ಕುರಿತು ಮಾಹಿತಿ ನೀಡುವಂತೆ ಕಾನೂನು ಇಲಾಖೆಗೆ ಸಿಎಂ ಸೂಚನೆ ನೀಡಿದ್ದಾರೆ. ನಾಳಿನ ಸಭೆಯಲ್ಲಿ ಕಾನೂನು ಇಲಾಖೆಯ ಸಲಹೆ ಆಧರಿಸಿ ಅಂತಿಮ ನಿರ್ಧಾರ ಕೈಗೊಳ್ಳೋ ಸಾಧ್ಯತೆಗಳಿವೆ. ಇದನ್ನೂ ಓದಿ: ರಾಜ್ಯ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ: ಎನ್. ಚಲುವರಾಯಸ್ವಾಮಿ

    ಸಭೆಯ ಬಳಿಕ ಮಾತನಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar), ಜಿಬಿಎಯಿಂದ ನಾವು ಪ್ರಪೋಸಲ್ ಕೊಟ್ಟಿದ್ವಿ. ಆದ್ರೆ ಇದು ಪಂಚಾಯತ್, ಮುನಿಸಿಪಾಲಿಟಿಗೂ ಎಲ್ಲದ್ದಕ್ಕೂ ಬೇಕು. ತಮಿಳುನಾಡು ಸೇರಿ ಬೇರೆ ಬೇರೆ ರಾಜ್ಯದ ಮಾಹಿತಿ ಪಡೆದಿದ್ದೇವೆ. ಕಾನೂನು ಚೌಕಟ್ಟಿನಲ್ಲಿ ಏನಾದ್ರು ಮಾರ್ಗ ಇದೆಯಾ ಅಂತ ಪರಿಶೀಲನೆ ಮಾಡಲು ಕಾನೂನು ಇಲಾಖೆಗೆ ಹೇಳಿದ್ದೇವೆ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ. ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ – ಬೆಂಗಳೂರಿನ ಈ ರಸ್ತೆಯಲ್ಲಿ 45 ದಿನ ಸಂಚಾರ ಬಂದ್

    ಅನುಮತಿ ಪಡೆಯದ ಕಟ್ಟಡಗಳಿಗೆ ನೀರು, ವಿದ್ಯುತ್‌ ಸಂಪರ್ಕ ಕೊಡಬಾರದು ಅಂತ ಸುಪ್ರೀಂ ಕೋರ್ಟ್ ಆದೇಶ ಇದೆ. ಹೀಗಾಗಿ ಸಿಎಂ ಅವರ ನೇತೃತ್ವದಲ್ಲಿ ಸಭೆ ಆಗಿದೆ. ಎಲ್ಲಾ ಇಲಾಖೆ ಸಚಿವರು ಭಾಗಿಯಾಗಿದ್ದರು, ಎಜಿ ಕೂಡಾ ಇದ್ದರು. ಇವತ್ತಿನ ಸಭೆಯಲ್ಲಿ ಅನೇಕ ಅಭಿಪ್ರಾಯಗಳು ಬಂದಿವೆ. ಅವಕಾಶ ಕೊಡೋಕೆ ಕಾನೂನಿನಲ್ಲಿ ಅನೇಕ ಅಡೆತಡೆಗಳು ಇವೆ. ಈಗಾಗಲೇ ಕ್ಯಾಬಿನೆಟ್‌ನಲ್ಲಿ 30*40 ಸೈಟ್ ಗೆ ಅನುಮತಿ ಕೊಡೋ ತೀರ್ಮಾನ ಮಾಡಿದ್ದೇವೆ. ಇದರ ಮೇಲೆ ಜಾಸ್ತಿ ಅಳತೆಯಲ್ಲಿ ಇರೋ ಕಟ್ಟಡಗಳಿಗೆ ಕೊಡೋದು ಹೇಗೆ ಅಂತ ಚರ್ಚೆ ಆಗಿದೆ. ನಾಳೆಯ (ಗುರುವಾರ) ಕ್ಯಾಬಿನೆಟ್‌ನಲ್ಲಿ ಈ ಬಗ್ಗೆ ಚರ್ಚೆ ಮಾಡ್ತೀವಿ. ಹೊಸ ಕಟ್ಟಡ ಕಟ್ಟಲು ಇನ್ನು ಮುಂದೆ ಬಿಡೊಲ್ಲ. ಈಗ ಕಟ್ಟಿರೋರಿಗೆ ಸಹಾಯ ಮಾಡೋದಕ್ಕೆ ದಾರಿ ಇದೆಯಾ ನೋಡ್ತಾ ಇದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಧರ್ಮಸ್ಥಳ ಕೇಸ್‌ ಕ್ಲೈಮ್ಯಾಕ್ಸ್‌ ಹಂತಕ್ಕೆ – ಅಂತಿಮ ವರದಿ ಸಲ್ಲಿಸಲು SIT ತಯಾರಿ

    ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಚಿವ ಕೆಜೆ ಜಾರ್ಜ್, ಪ್ರಿಯಾಂಕ್ ಖರ್ಗೆ, ಕೃಷ್ಣಭೈರೇಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಜಲಮಂಡಳಿ ಇಲಾಖೆ, ವಿದ್ಯುತ್ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.

  • ಬೆಂಗ್ಳೂರು ಗುಂಡಿಗಳನ್ನ ಯಾವಾಗ ಬಂದ್ ಮಾಡಿಸ್ತೀರಾ? – ಬಿಗ್‌ಬಾಸ್‌ಗೆ ಬೀಗ ಹಾಕಿದ ಸರ್ಕಾರಕ್ಕೆ JDS ಲೇವಡಿ

    ಬೆಂಗ್ಳೂರು ಗುಂಡಿಗಳನ್ನ ಯಾವಾಗ ಬಂದ್ ಮಾಡಿಸ್ತೀರಾ? – ಬಿಗ್‌ಬಾಸ್‌ಗೆ ಬೀಗ ಹಾಕಿದ ಸರ್ಕಾರಕ್ಕೆ JDS ಲೇವಡಿ

    ಬೆಂಗಳೂರು: ಬಿಗ್‌ಬಾಸ್ (Bigg Boss) ಶೋಗೆ ಸರ್ಕಾರ ಬೀಗ ಹಾಕಿಸಿದ ಬೆನ್ನಲ್ಲೇ ಸರ್ಕಾರ, ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಜೆಡಿಎಸ್ (JDS)  ಅಟ್ಯಾಕ್ ಮುಂದುವರೆಸಿದೆ.

    ಈ ಸಂಬಂಧ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಜೆಡಿಎಸ್ ಸರಣಿ ಪ್ರಶ್ನೆಗಳನ್ನ ಕೇಳಿದೆ. ಬೆಂಗಳೂರು ಗುಂಡಿಗಳನ್ನ (Patholes) ಯಾವಾಗ ಬಂದ್ ಮಾಡಿಸುತ್ತೀರಾ? ಯಾವಾಗ ಕಾಂಗ್ರೆಸ್ ಸರ್ಕಾರದ 60% ಕಮಿಷನ್ ದಂಧೆಗೆ ಬೀಗ ಹಾಕ್ತೀರಾ ಎಂದು ವಾಗ್ದಾಳಿ ನಡೆಸಿದೆ.ಇದನ್ನೂ ಓದಿ: ಇನ್ಮುಂದೆ ಬುಕ್ ಆದ ರೈಲ್ವೆ ಟಿಕೆಟ್ ದಿನಾಂಕ ಬದಲಿಸಲು ಅವಕಾಶ

    ಎಕ್ಸ್‌ನಲ್ಲಿ ಏನಿದೆ?
    ನಿಯಮಗಳ ಉಲ್ಲಂಘನೆ ನೆಪದಲ್ಲಿ ಬಿಡದಿಯ ಬಿಗ್‌ಬಾಸ್ ಮನೆಗೆ ಬೀಗ ಹಾಕಿಸಿದ್ದೀರಿ. ಒಪ್ಪಿಕೊಳ್ಳೋಣ. ಅದೇ ರೀತಿ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಯಾವಾಗ ಬಂದ್ ಮಾಡಿಸುತ್ತೀರಾ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ಅವರೇ.

    ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿರುವ ರೈತರ ಆತ್ಮಹತ್ಯೆಗಳನ್ನು ಯಾವಾಗ ಬಂದ್ ಮಾಡಿಸುತ್ತೀರಾ? ರಾಜ್ಯದ ಜನರ ಮೇಲೆ ನಿರಂತರವಾಗಿ ತೆರಿಗೆ ಬರೆ ಎಳೆದು ಲೂಟಿ ಹೊಡೆಯುತ್ತಿರುವುದಕ್ಕೆ ಯಾವಾಗ ಬೀಗ ಹಾಕುತ್ತೀರಾ? ಬೆಲೆ ಏರಿಕೆಗಳ ಮೂಲಕ ಜನಸಾಮಾನ್ಯರನ್ನು ಪಿಕ್ ಪಾಕೆಟ್ ಮಾಡುತ್ತಿರುವ ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಯಾವಾಗ ಬೀಗ ಹಾಕುತ್ತೀರಾ?

    ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿಯನ್ನು ತಡೆಯಲು ಯಾವ ರೀತಿ ಬೀಗ ಹಾಕಿಸುತ್ತೀರಾ? ರಾಜ್ಯದ ಜನರ ತೆರಿಗೆ ಹಣವನ್ನು ಅಕ್ರಮವಾಗಿ ವಾಮಮಾರ್ಗಗಳ ಮೂಲಕ ಕಾಂಗ್ರೆಸ್ ಹೈಕಮಾಂಡ್‌ಗೆ ಕಪ್ಪ ಒಪ್ಪಿಸುತ್ತಿರುವುದಕ್ಕೆ ಯಾವಾಗ ಬೀಗ ಹಾಕಿಸುತ್ತೀರಾ? ಕಾಂಗ್ರೆಸ್ ಸರ್ಕಾರದ 60% ಕಮಿಷನ್ ದಂಧೆಗೆ ಯಾವಾಗ ಬೀಗ ಹಾಕುತ್ತೀರಾ?

    ಕಾಂಗ್ರೆಸ್ ಶಾಸಕರು ಮತ್ತು ಕಾಂಗ್ರೆಸ್ ಪುಢಾರಿಗಳು ನಡೆಸುತ್ತಿರುವ ಕ್ಯಾಸಿನೋ ದಂಧೆ, ಅಕ್ರಮಗಳಿಗೆ ಯಾವಾಗ ಬೀಗ ಹಾಕಿಸುತ್ತೀರಾ? ಭ್ರಷ್ಟಾಚಾರದ ಕೂಪಗಳಾಗಿರುವ ಸರ್ಕಾರಿ ಇಲಾಖೆ, ಕಚೇರಿಗಳಿಗೆ ಯಾವಾಗ ಬೀಗ ಹಾಕಿಸುತ್ತೀರಾ? ಕೈಲಾಗದವರು ಮೈಪರಚಿ ಕೊಂಡಂತೆ ಇದೆ ಕಾಂಗ್ರೆಸ್ ಸರ್ಕಾರದ ದುರಾಡಳಿತ ಎಂದು ಕಿಡಿಕಾರಿದೆ.ಇದನ್ನೂ ಓದಿ: LPG ತುಂಬಿದ್ದ ಟ್ರಕ್‌ಗೆ ಟ್ಯಾಂಕರ್ ಡಿಕ್ಕಿ – ಸಿಲಿಂಡರ್‌ಗಳ ಸರಣಿ ಸ್ಫೋಟ, ಕಿ.ಮೀಗಟ್ಟಲೇ ಕಾಣಿಸಿದ ಜ್ವಾಲೆ

  • MUDA Scam | 440 ಕೋಟಿ ಮೌಲ್ಯದ 242 ಮುಡಾ ಸೈಟ್ ಸೀಜ್

    MUDA Scam | 440 ಕೋಟಿ ಮೌಲ್ಯದ 242 ಮುಡಾ ಸೈಟ್ ಸೀಜ್

    ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುಟುಂಬದ ವಿರುದ್ಧದ ಮುಡಾ ಹಗರಣ ಪ್ರಕರಣದ ತನಿಖೆಯನ್ನು ಇಡಿ ವರ್ಷದ ಬಳಿಕ ಮತ್ತೊಮ್ಮೆ ಚುರುಕುಗೊಳಿಸಿದೆ. ಮುಡಾದಲ್ಲಿ ಅಕ್ರಮವಾಗಿ ಹಂಚಿಕೆ ಮಾಡಿದ್ದ 252 ಸೈಟ್ ಗಳನ್ನು ಇ.ಡಿ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

    440 ಕೋಟಿ ರೂ. ಮೌಲ್ಯದ ನಿವೇಶನಗಳು ಅನ್ನೋದನ್ನು ಇಡಿ ಖಾತರಿ ಪಡಿಸಿದೆ. ತನಿಖೆ ಮುಂದುವರೆಸಿರೋ ಇಡಿ ಮುಡಾದ ಮಾಜಿ ಆಯುಕ್ತ ದಿನೇಶ್ ಕುಮಾರ್ ಬಂಧನದ ಬಳಿಕ ಇಡಿ ದಿನೇಶ್ ಬಳಿಯಲ್ಲಿ ಇದ್ದ 34 ಸೈಟ್‌ಗಳನ್ನ ಮುಟ್ಟುಗೋಲು ಹಾಕಿಕೊಂಡಿದ್ದಾರೆ.

    ಕುಟುಂಬದವರು ಮತ್ತು ಮನೆ ಕೆಲಸದವರ ಹೆಸರಲ್ಲೂ ಕೂಡ ಬೇನಾಮಿ ಮಾಡಿದ್ದನ್ನು ಪತ್ತೆ ಮಾಡಿರೋ ಇಡಿ ಎಲ್ಲಾ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. 34 ಸೈಟ್ ಗಳನ್ನು 40.8 ಕೋಟಿ ಮೌಲ್ಯದ್ದು ಎಂಬುದನ್ನು ಸ್ಪಷ್ಟಪಡಿಸಿದೆ. ಬೇನಾಮಿ ಹೆಸರಲ್ಲಿ ಇದ್ದವರನ್ನೆಲ್ಲಾ ವಿಚಾರಣೆ ನಡೆಸಿರೋ ಇಡಿ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸ್ತಾ ಇದೆ.

  • ಜಾತಿಗಣತಿ ಸರ್ವೇ ಅವಧಿ ವಿಸ್ತರಣೆ – ಶಿಕ್ಷಕರಿಗೆ ಮಧ್ಯಾಹ್ನದ ನಂತರ ಸಮೀಕ್ಷೆ ಮಾಡಲು ಸೂಚನೆ

    ಜಾತಿಗಣತಿ ಸರ್ವೇ ಅವಧಿ ವಿಸ್ತರಣೆ – ಶಿಕ್ಷಕರಿಗೆ ಮಧ್ಯಾಹ್ನದ ನಂತರ ಸಮೀಕ್ಷೆ ಮಾಡಲು ಸೂಚನೆ

    – ಡಿಕೆಶಿ ಬಳಿಕ 60 ಪ್ರಶ್ನೆಗೆ ಸತೀಶ್‌ ಜಾರಕಿಹೊಳಿ ಆಕ್ಷೇಪ
    – ಚಿನ್ನ ಎಷ್ಟಿದೆ ಅಂತ ಪ್ರಶ್ನೆ ಕೇಳಿಲ್ಲ, ಚಿನ್ನ ಇದೆಯೋ, ಇಲ್ವೋ ಅಂತಷ್ಟೇ ಕೇಳಿದ್ದೇವೆ

    ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯ ಅವಧಿಯನ್ನು ವಿಸ್ತರಣೆ ಮಾಡಿ ಶಿಕ್ಷಣ ಇಲಾಖೆ (Education Department) ಆದೇಶಿಸಿದೆ.

    ರಾಜ್ಯದಲ್ಲಿ ಮಂಗಳವಾರಕ್ಕೆ (ಅ.7) ಅಂತ್ಯವಾಗಬೇಕಿದ್ದ ಸರ್ವೇ ಕಾರ್ಯವನ್ನು ಅ.12ರವರೆಗೂ, ಬೆಂಗಳೂರಿನಲ್ಲಿ (Bengaluru) 1 ವಾರ ತಡವಾಗಿರೋ ಕಾರಣ ಅ.24ರವರೆಗೂ ವಿಸ್ತರಿಸಲಾಗಿದೆ. ಅಲ್ಲದೇ ಬೆಳಗ್ಗೆ 8ರಿಂದ ಮಧ್ಯಾಹ್ನ 1 ಗಂಟೆವರೆಗೆ ಶಾಲಾ ತರಗತಿ ಮುಗಿಸಿ, ಮಧ್ಯಾಹ್ನದ ನಂತರ ಸರ್ವೇ ನಡೆಸುವಂತೆ ಶಿಕ್ಷಣ ಇಲಾಖೆ ಸೂಚಿಸಿದೆ.

    ರಾಜ್ಯದಲ್ಲಿ ಈವರೆಗೆ ಶೇ.80.39ರಷ್ಟು ಸಮೀಕ್ಷೆಯಾಗಿದ್ದು, 1.43 ಕೋಟಿ ಮನೆಗಳ ಪೈಕಿ 1.15 ಕೋಟಿ ಮನೆಗಳ ಸರ್ವೇ ಮುಗಿದೆ. ಈವರೆಗೆ 4.32 ಕೋಟಿ ಜನರು ಗಣತಿ ವ್ಯಾಪ್ತಿಗೆ ಬಂದಿದ್ದಾರೆ. ಇವತ್ತು 5 ಲಕ್ಷದ 52 ಸಾವಿರದ 345 ಮನೆಗಳ ಸಮೀಕ್ಷೆ ಆಗಿದೆ. ಬೆಂಗಳೂರಿನಲ್ಲಿ ಇಂದು 1.36 ಲಕ್ಷ ಮನೆಗಳ ಸಮೀಕ್ಷೆಯಾಗಿದ್ದು, ಒಟ್ಟು 2.60 ಲಕ್ಷ ಮನೆಗಳ ಸರ್ವೇ ಆಗಿದೆ.

    ಬೆಂಗಳೂರಿನ ಅಪಾರ್ಟ್‌ಮೆಂಟ್‌ ನಿವಾಸಿಗಳು ಯಾವುದೇ ಮಾಹಿತಿ ನೀಡದೆ ಆಟ ಆಡಿಸುತ್ತಿರೋದು ತಲೆನೋವುಂಟು ಮಾಡಿದೆ. ಇನ್ನೂ ಗರ್ಭಿಣಿಯರು, ಬಾಣಂತಿಯರು, 1 ವರ್ಷಕ್ಕಿಂತ ಚಿಕ್ಕಮಕ್ಕಳನ್ನ ಹೊಂದಿರುವವರು, ಗಂಭೀರ ಆರೋಗ್ಯ ಸಮಸ್ಯೆ ಇರುವವರಿಗೆ ಸರ್ವೇಯಿಂದ ವಿನಾಯ್ತಿ ಕೊಡಲಾಗಿದೆ. ಕೆಲ ಗಣತಿದಾರರು ಇವತ್ತೂ ಕೂಡ ಅಳಲು ತೋಡಿಕೊಂಡಿದ್ದರು.

    ಇನ್ನು, ಗಣತಿ ವೇಳೆ ಚಿನ್ನದ ಬಗ್ಗೆ ಪ್ರಶ್ನೆಗೆ ಡಿಸಿಎಂ ಡಿಕೆಶಿ ಆಕ್ಷೇಪ ಸಂಬಂಧ ಆಯೋಗದ ಅಧ್ಯಕ್ಷ ಮಧುಸೂದನ್ ನಾಯ್ಕ್ ಸ್ಪಷ್ಟನೆ ಕೊಟ್ಟಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ನನಗೆ ಅರ್ಥ ಆಗ್ತಿಲ್ಲ ಅಂದಿದ್ದಾರೆ. ಚಿನ್ನ ಎಷ್ಟಿದೆ ಅಂತ ಪ್ರಶ್ನೆ ಕೇಳಿಲ್ಲ. ಚಿನ್ನ ಇದೆಯೋ, ಇಲ್ವೋ ಅಂತಷ್ಟೇ ಕೇಳಿದ್ದೇವೆ. ಜೀವನಮಟ್ಟ ತಿಳಿದುಕೊಳ್ಳಲು ಇದು ಅಗತ್ಯ ಅಂದಿದ್ದಾರೆ. ಈ ಮಧ್ಯೆ, ಸಚಿವ ಸತೀಶ್ ಜಾರಕಿಹೊಳಿ ಕೂಡ 60 ಪ್ರಶ್ನೆಗಳು ಜಾಸ್ತಿ ಆಯ್ತು ಅಂತ ಆಕ್ಷೇಪಿಸಿದ್ದಾರೆ.

  • ವೀರಶೈವ-ಲಿಂಗಾಯತರು ಹಾಳಾದ್ರೆ ಇಡೀ ರಾಜ್ಯವೇ ಹಾಳಾಗುತ್ತೆ: ಈಶ್ವರ್‌ ಖಂಡ್ರೆ

    ವೀರಶೈವ-ಲಿಂಗಾಯತರು ಹಾಳಾದ್ರೆ ಇಡೀ ರಾಜ್ಯವೇ ಹಾಳಾಗುತ್ತೆ: ಈಶ್ವರ್‌ ಖಂಡ್ರೆ

    – ಪ್ರತ್ಯೇಕ ಧರ್ಮದ ವಿಚಾರದಲ್ಲಿ ಸಿದ್ದರಾಮಯ್ಯ ಹೆಸರು ತಳಕು ಹಾಕಬಾರದು

    ಬೆಂಗಳೂರು: ಯಾವುದೇ ಶಕ್ತಿ ವೀರಶೈವ-ಲಿಂಗಾಯತರನ್ನ ಬೇರ್ಪಡಿಸಲು ಸಾಧ್ಯವಿಲ್ಲ. ʻವೀರಶೈವ ಲಿಂಗಾಯತರು (Lingayats) ಹಾಳಾದ್ರೆ ಇಡೀ ರಾಜ್ಯವೇ ಹಾಳಾಗುತ್ತೆ, ಅವರು ಸುಧಾರಿಸಿದ್ರೆ, ಕರ್ನಾಟಕ ಉದ್ಧಾರ ಆಗುತ್ತೆʼ ಅಂತ ಸಾಹಿತಿಯೊಬ್ಬರು ಹೇಳ್ತಾರೆ. ಹಾಗಾಗಿ ಎಲ್ಲರ ಉದ್ಧಾರ ಆಗಬೇಕಾದ್ರೆ, ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಿರುವುದು ಅತ್ಯವಶ್ಯಕವಾಗಿದೆ. ಯಾರಾದ್ರೂ ಈ ಧರ್ಮವನ್ನ ಹಾಳು ಮಾಡಲು ಪ್ರಯತ್ನಿಸಿದ್ರೆ, ಇಡೀ ಕರ್ನಾಟಕವೇ ಹಾಳಾಗುತ್ತೆ ಎಂದು ಸಚಿವ ಈಶ್ವರ್‌ ಖಂಡ್ರೆ (Eshwar Khandre) ಹೇಳಿದ್ದಾರೆ.

    ʻಪಬ್ಲಿಕ್‌ ಟಿವಿʼ ಜೊತೆಗೆ ಸಂದರ್ಶನದಲ್ಲಿ ಮಾತನಾಡಿದ ಅವರು, ಪ್ರತ್ಯೇಕ ಲಿಂಗಾಯತ ಧರ್ಮ ಆಗಬೇಕು ಎಂಬ ಸಚಿವ ಎಂ.ಬಿ ಪಾಟೀಲ್ (MB Patil) ಹೇಳಿಕೆಗೆ ಪ್ರತಕ್ರಿಯಿಸಿದ್ದಾರೆ. ಎಂ.ಬಿ.ಪಾಟೀಲ್ ನನಗೆ ಸ್ನೇಹಿತರು ಅವರ ಬಗ್ಗೆ ಮಾತನಾಡಲ್ಲ. ಯಾರಿಂದಲೂ ವೀರಶೈವ ಲಿಂಗಾಯತ (Veerashaiva Lingayat) ಬೇರೆ ಮಾಡಲು ಸಾಧ್ಯವಿಲ್ಲ. ಎಲ್ಲರೂ ಒಗ್ಗಟ್ಟಿನಿಂದಲೇ ಇದೀವಿ. ಅಲ್ಲದೇ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಸಿದ್ದರಾಮಯ್ಯ ಹೆಸರನ್ನ ತಳಕು ಹಾಕಬಾರದು. ಈ ಹಿಂದೆಯೂ ಅವರಿಗೆ ಸಂಬಂಧ ಇರಲಿಲ್ಲ, ಈಗಲೂ ಇಲ್ಲ, ನಮ್ಮ ಸರ್ಕಾರಕ್ಕೂ ಇಲ್ಲ. ವೀರಶೈವ ಲಿಂಗಾಯತ ಮಹಾಸಭಾ ನಿರ್ಣಯವೇ ಅಂತಿಮ ಎಂದು ಹೇಳಿದ್ದಾರೆ.

    ನಮ್ಮ ನಿಲುವು ಸ್ಪಷ್ಟವಾಗಿ ಹೇಳಿದ್ದೇನೆ. ಲಿಂಗಾಯತ-ವೀರಶೈವ ಎರಡೂ ಒಂದೇ. ಶಿವಕುಮಾರ ಸ್ವಾಮಿಗಳು, ಅಖಿಲ ಭಾರತ ವೀರಶೈವ ಲಿಂಗಾಯತ ಸಭೆಯ ಎಲ್ಲಾ ಅಧ್ಯಕ್ಷರು ಇವತ್ತು ವೀರಶೈವ-ಲಿಂಗಾಯತ ಎರಡು ಸಮಾನಾರ್ಥಕ ಪದಗಳು ಇವೆ ಅಂತ ಹೇಳಿದ್ದಾರೆ. ವೀರಶೈವ-ಲಿಂಗಾಯತ ಭಿನ್ನ ಇಲ್ಲ ಎಂದಿದ್ದಾರೆ.

    ಇಷ್ಟ ಲಿಂಗ ಪೂಜೆ ಮಾಡುವವರು, ಅಷ್ಟಾಚರಣ ವ್ಯವಸ್ಥೆ ಪಾಲನೆ ಮಾಡುವರು, ಗುರುಗಳು ಇದ್ದಾರೆ, ವಿರಕ್ತರು ಇದ್ದಾರೆ. ಹೀಗಾಗಿ ಎಲ್ಲರು ಒಗ್ಗಟ್ಟಾಗಿ, ಸಂಘಟಿತರಾಗಿ ಇರಬೇಕು. ಸಂಘಟನೆಯಲ್ಲಿ ಶಕ್ತಿ ಇದೆ. ವಿಘಟನೆಯಲ್ಲಿ ಯಾವುದೇ ಉಪಯೋಗ ಆಗೊಲ್ಲ ಎಂಬುದು ನಮ್ಮ ನಿಲುವು. ಆ ನಿಲುವಿಗೆ ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.

    ಪ್ರತ್ಯೇಕ ಲಿಂಗಾಯತ ಧರ್ಮದಲ್ಲಿ (Lingayat Religion) ಮಹಾಸಭಾದ ನಿಲುವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮಹಾಸಭಾ ಇವತ್ತು ಅಲ್ಲ ಸ್ವಾತಂತ್ರ‍್ಯ ಪೂರ್ವದಿಂದ ಹಿಡಿದು 2,000 ಇಸವಿಯಿಂದ ನಡೆದ ಜನಗಣತಿ ಸಮಯದಲ್ಲಿ ಎಲ್ಲರ ಅಭಿಪ್ರಾಯ ತೆಗೆದುಕೊಳ್ಳಾಗಿದೆ. ಭೌಗೋಳಿಕವಾಗಿ ನಾವೆಲ್ಲರೂ ಹಿಂದೂಗಳೇ ಆದರೂ ನಮ್ಮ ಆಚಾರ-ವಿಚಾರದಲ್ಲಿ ಸಿಖ್, ಜೈನರು, ಬೌದ್ಧ, ಪಾರ್ಸಿ ಗಳಿಗೆ ಪ್ರತ್ಯೇಕ ಧರ್ಮ ಅಂತ ಕೊಡಲಾಗಿದೆ. ಅದೇ ಆಧಾರದಲ್ಲಿ ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಧರ್ಮ ನೀಡಬೇಕು ಅಂತ ಪದೇ ಪದೇ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಜನಗಣತಿಯಲ್ಲೂ ಪ್ರತ್ಯೇಕ ಕಾಲಂ ಕೊಡಬೇಕು ಅಂತ ವಿನಂತಿ ಮಾಡಿದ್ದೇವೆ. ಇಲ್ಲಿವರೆಗೂ ಸರ್ಕಾರ ಅದನ್ನ ಗುರುತಿಸಿಲ್ಲ. ನಮ್ಮ ಮಹಾಸಭೆಯ ವತಿಯಿಂದ ಇನ್ನು ಮುಂದೆಯೂ ಪ್ರತ್ಯೇಕ ಧರ್ಮ ಮಾನ್ಯತೆ ಸಿಗಲು ಪ್ರಯತ್ನ ಮಾಡ್ತೀವಿ ಅಂತ ಸ್ಪಷ್ಟಪಡಿಸಿದ್ದಾರೆ.

    ಪ್ರತ್ಯೇಕ ಧರ್ಮದ ವಿಚಾರ ಮತ್ತು ಸರ್ಕಾರಕ್ಕೆ ಯಾವುದೇ ಸಂಬಂಧವಿಲ್ಲ. ಸಿದ್ದರಾಮಯ್ಯ ಜನಸಮುದಾಯದ ನಾಯಕರು ಇದ್ದಾರೆ. ನಾವು ಯಾರಾದ್ರು ಪ್ರತ್ಯೇಕ ಧರ್ಮದ ಬಗ್ಗೆ ಅವರ ಬಳಿ ಮಾತಾಡಿದ್ರೆ ಸಿಎಂ ನಿರ್ಧಾರ ತೆಗೆದುಕೊಳ್ತಾರೆ. ಮೊದಲು ಕೂಡಾ ನೀವೆಲ್ಲರು ಬಂದು ಏನ್ ಹೇಳ್ತಿರೋ ಅದನ್ನ ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇನೆ ಅಂತ ಹೇಳಿದ್ರು. ವಿನಾಃ ಕಾರಣ ರಾಜಕೀಯ ದುರುದ್ದೇಶದಿಂದ ಸಿದ್ದರಾಮಯ್ಯ ಅವರ ಬಗ್ಗೆ ಮಾತಾಡೋದು ಸರಿಯಲ್ಲ ಅಂತ ತಿಳಿಸಿದ್ದಾರೆ.

  • ವೀರಶೈವ-ಲಿಂಗಾಯತ ಎರಡೂ ಒಂದೇ, ಪ್ರತ್ಯೇಕ ಧರ್ಮ ಕೊಡಬೇಕು: ಈಶ್ವರ್‌ ಖಂಡ್ರೆ

    ವೀರಶೈವ-ಲಿಂಗಾಯತ ಎರಡೂ ಒಂದೇ, ಪ್ರತ್ಯೇಕ ಧರ್ಮ ಕೊಡಬೇಕು: ಈಶ್ವರ್‌ ಖಂಡ್ರೆ

    ಬೆಂಗಳೂರು: ವೀರಶೈವ-ಲಿಂಗಾಯತ ಎರಡೂ ಒಂದೇ. ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಧರ್ಮ (Veerashaiva Lingayat Religion) ಕೊಡಬೇಕು ಎಂಬುದು ಮಹಾಸಭಾದ ಒಕ್ಕೊರಳ ಅಭಿಪ್ರಾಯ ಅಂತ ಸಚಿವ ಈಶ್ವರ್ ಖಂಡ್ರೆ (Eshwar Khandre) ಸ್ಪಷ್ಟಪಡಿಸಿದ್ದಾರೆ.

    ಪ್ರತ್ಯೇಕ ಲಿಂಗಾಯತ ಧರ್ಮ ಆಗಬೇಕು ಎಂಬ ಸಚಿವ ಎಂ.ಬಿ ಪಾಟೀಲ್ (MB Patil) ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ನಿಲುವು ಸ್ಪಷ್ಟವಾಗಿ ಹೇಳಿದ್ದೇನೆ. ಲಿಂಗಾಯತ-ವೀರಶೈವ ಎರಡೂ ಒಂದೇ. ಶಿವಕುಮಾರ ಸ್ವಾಮಿಗಳು, ಅಖಿಲ ಭಾರತ ವೀರಶೈವ ಲಿಂಗಾಯತ ಸಭೆಯ ಎಲ್ಲಾ ಅಧ್ಯಕ್ಷರು ಇವತ್ತು ವೀರಶೈವ-ಲಿಂಗಾಯತ ಎರಡು ಸಮಾನಾರ್ಥಕ ಪದಗಳು ಇವೆ ಅಂತ ಹೇಳಿದ್ದಾರೆ. ವೀರಶೈವ-ಲಿಂಗಾಯತ ಭಿನ್ನ ಇಲ್ಲ ಎಂದಿದ್ದಾರೆ.

    ಇಷ್ಟ ಲಿಂಗ ಪೂಜೆ ಮಾಡುವವರು, ಅಷ್ಟಾಚರಣ ವ್ಯವಸ್ಥೆ ಪಾಲನೆ ಮಾಡುವರು, ಗುರುಗಳು ಇದ್ದಾರೆ, ವಿರಕ್ತರು ಇದ್ದಾರೆ. ಹೀಗಾಗಿ ಎಲ್ಲರು ಒಗ್ಗಟ್ಟಾಗಿ, ಸಂಘಟಿತರಾಗಿ ಇರಬೇಕು. ಸಂಘಟನೆಯಲ್ಲಿ ಶಕ್ತಿ ಇದೆ. ವಿಘಟನೆಯಲ್ಲಿ ಯಾವುದೇ ಉಪಯೋಗ ಆಗೊಲ್ಲ ಎಂಬುದು ನಮ್ಮ ನಿಲುವು. ಆ ನಿಲುವಿಗೆ ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.

    ಪ್ರತ್ಯೇಕ ಲಿಂಗಾಯತ ಧರ್ಮದಲ್ಲಿ (Lingayat Religion) ಮಹಾಸಭಾದ ನಿಲುವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮಹಾಸಭಾ ಇವತ್ತು ಅಲ್ಲ ಸ್ವಾತಂತ್ರ‍್ಯ ಪೂರ್ವದಿಂದ ಹಿಡಿದು 2,000 ಇಸವಿಯಿಂದ ನಡೆದ ಜನಗಣತಿ ಸಮಯದಲ್ಲಿ ಎಲ್ಲರ ಅಭಿಪ್ರಾಯ ತೆಗೆದುಕೊಳ್ಳಾಗಿದೆ. ಭೌಗೋಳಿಕವಾಗಿ ನಾವೆಲ್ಲರೂ ಹಿಂದೂಗಳೇ ಆದರೂ ನಮ್ಮ ಆಚಾರ-ವಿಚಾರದಲ್ಲಿ ಸಿಖ್, ಜೈನರು, ಬೌದ್ಧ, ಪಾರ್ಸಿ ಗಳಿಗೆ ಪ್ರತ್ಯೇಕ ಧರ್ಮ ಅಂತ ಕೊಡಲಾಗಿದೆ. ಅದೇ ಆಧಾರದಲ್ಲಿ ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಧರ್ಮ ನೀಡಬೇಕು ಅಂತ ಪದೇ ಪದೇ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಜನಗಣತಿಯಲ್ಲೂ ಪ್ರತ್ಯೇಕ ಕಾಲಂ ಕೊಡಬೇಕು ಅಂತ ವಿನಂತಿ ಮಾಡಿದ್ದೇವೆ. ಇಲ್ಲಿವರೆಗೂ ಸರ್ಕಾರ ಅದನ್ನ ಗುರುತಿಸಿಲ್ಲ. ನಮ್ಮ ಮಹಾಸಭೆಯ ವತಿಯಿಂದ ಇನ್ನು ಮುಂದೆಯೂ ಪ್ರತ್ಯೇಕ ಧರ್ಮ ಮಾನ್ಯತೆ ಸಿಗಲು ಪ್ರಯತ್ನ ಮಾಡ್ತೀವಿ ಅಂತ ಸ್ಪಷ್ಟಪಡಿಸಿದ್ದಾರೆ.

    ಪ್ರತ್ಯೇಕ ಧರ್ಮದ ವಿಚಾರ ಮತ್ತು ಸರ್ಕಾರಕ್ಕೆ ಯಾವುದೇ ಸಂಬಂಧವಿಲ್ಲ. ಸಿದ್ದರಾಮಯ್ಯ ಜನಸಮುದಾಯದ ನಾಯಕರು ಇದ್ದಾರೆ. ನಾವು ಯಾರಾದ್ರು ಪ್ರತ್ಯೇಕ ಧರ್ಮದ ಬಗ್ಗೆ ಅವರ ಬಳಿ ಮಾತಾಡಿದ್ರೆ ಸಿಎಂ ನಿರ್ಧಾರ ತೆಗೆದುಕೊಳ್ತಾರೆ. ಮೊದಲು ಕೂಡಾ ನೀವೆಲ್ಲರು ಬಂದು ಏನ್ ಹೇಳ್ತಿರೋ ಅದನ್ನ ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇನೆ ಅಂತ ಹೇಳಿದ್ರು. ವಿನಾಃ ಕಾರಣ ರಾಜಕೀಯ ದುರುದ್ದೇಶದಿಂದ ಸಿದ್ದರಾಮಯ್ಯ ಅವರ ಬಗ್ಗೆ ಮಾತಾಡೋದು ಸರಿಯಲ್ಲ ಅಂತ ತಿಳಿಸಿದ್ದಾರೆ.