Tag: ಸಿದ್ದರಾಮೋತ್ಸವ

  • ಸಿದ್ದರಾಮೋತ್ಸವಕ್ಕೆ ಹೋಗಿದ್ದ ವ್ಯಕ್ತಿ ಕಾಣೆ- ಕುಟುಂಬ ಸದಸ್ಯರನ್ನ ಭೇಟಿಯಾದ ಸಿದ್ದರಾಮಯ್ಯ

    ಸಿದ್ದರಾಮೋತ್ಸವಕ್ಕೆ ಹೋಗಿದ್ದ ವ್ಯಕ್ತಿ ಕಾಣೆ- ಕುಟುಂಬ ಸದಸ್ಯರನ್ನ ಭೇಟಿಯಾದ ಸಿದ್ದರಾಮಯ್ಯ

    ಬಾಗಲಕೋಟೆ: ಸಿದ್ದರಾಮೋತ್ಸವಕ್ಕೆ (Siddaramotsava) ಹೋಗಿದ್ದ ವ್ಯಕ್ತಿ ಕಾಣೆ ಆಗಿರುವ ಪ್ರಕರಣ ಸಂಬಂಧಿಸಿದಂತೆ ನಾಪತ್ತೆಯಾಗಿರುವ ವ್ಯಕ್ತಿಯ ಕುಟುಂಬ ಸದಸ್ಯರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ.

    ಅಡಿಹುಡಿ ಗ್ರಾಮದ ಗಿರಿಮಲ್ಲ ಖಂಡೇಕರ ಕಾಣೆಯಾಗಿರುವ ವ್ಯಕ್ತಿ. ನಿನ್ನೆ ಜಮಖಂಡಿಗೆ ಬಂದಿದ್ದ ಸಿದ್ದರಾಮಯ್ಯ (Siddaramaiah) ಅಡಿಹುಡಿ ಗ್ರಾಮಕ್ಕೆ ತೆರಳಿ ಗಿರಿಮಲ್ಲನ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಈ ವೇಳೆ ಸಿದ್ದರಾಮಯ್ಯ ಅವರಿಗೆ ಜಮಖಂಡಿ ಶಾಸಕ ಆನಂದ ನ್ಯಾಮಗೌಡ (Aanand Nyamegowda) ಸಾಥ್ ನೀಡಿದ್ರು.

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಗಿರಿಮಲ್ಲ (GiriMalla) ಜೀವಂತ ಇದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ನಾನು ಎಸ್‍ಪಿ ಅವರಿಗೆ ಹೇಳಿ ಹುಡುಕಿಸಿ ಕೊಡುವ ಪ್ರಯತ್ನ ಮಾಡುತ್ತೇನೆ ಎಂದರು. ಇದನ್ನೂ ಓದಿ: ಟ್ರಾಫಿಕ್‍ನಲ್ಲಿ ಸಿಲುಕಿದ್ದ ಕಾರನ್ನು ಅಲ್ಲೇ ಬಿಟ್ಟರು – 3 ಕಿ.ಮೀ ಓಡಿ ಶಸ್ತ್ರಚಿಕಿತ್ಸೆ ಮಾಡಿ ರೋಗಿಯ ಪ್ರಾಣ ಉಳಿಸಿದ ಡಾಕ್ಟರ್

    ನಿಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ (Education) ಕೊಡೆಸುತ್ತೇನೆ. ನಿಮಗೆ ಎಲ್ಲ ಅಗತ್ಯ ಸಹಾಯ ಮಾಡುತ್ತೇನೆ.  ಶಾಸಕ ಆನಂದ್ ನ್ಯಾಮಗೌಡ ಎಲ್ಲವನ್ನು ನೋಡಿಕೊಳ್ತಾರೆ. ಇದೇ ಸೆಪ್ಟಂಬರ್ 27 ಕ್ಕೆ ಮತ್ತೆ ಜಮಖಂಡಿಗೆ ಬರುತ್ತಿದ್ದೇನೆ. ಆಗ ಮತ್ತೆ ಬರುವೆ, ನಿಮಗೆ ಆರ್ಥಿಕ ಸಹಾಯ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಅಭಯ ನೀಡಿದ್ದಾರೆ.

    ಆಗಸ್ಟ್ 2 ರಂದು ಗ್ರಾಮದ ಜನರ ಜೊತೆ ಬಸ್ ನಲ್ಲಿ ದಾವಣಗೆರೆಗೆ ಸಿದ್ದರಾಮೋತ್ಸವಕ್ಕೆ ತೆರಳಿದ್ದ ಗಿರಿಮಲ್ಲ ವಾಪಸ್ ಊರಿಗೆ ಬಂದಿಲ್ಲ. ಈವರೆಗೂ ಗಿರಿಮಲ್ಲ ಎಲ್ಲಿದ್ದಾನೆ ಎನ್ನುವ ಮಾಹಿತಿ‌ ಕೂಡ ಇಲ್ಲ. ಹೀಗಾಗಿ ಆತನ ಕುಟುಂಬ ದಾವಣಗೆರೆಗೆ ತೆರಳಿ ಮನೆ ಮನೆಗೆ ತೆರಳಿ ಫೋಟೋ ತೋರಿಸಿ ಹುಡುಕಾಟ ನಡೆಸುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಸಿದ್ದರಾಮೋತ್ಸವ ಮೂಲಕ ಸಿಎಂ ಕುರ್ಚಿಗಾಗಿ ವ್ಯಕ್ತಿಪೂಜೆ – ಬಿಜೆಪಿ ಟೀಕೆ

    ಸಿದ್ದರಾಮೋತ್ಸವ ಮೂಲಕ ಸಿಎಂ ಕುರ್ಚಿಗಾಗಿ ವ್ಯಕ್ತಿಪೂಜೆ – ಬಿಜೆಪಿ ಟೀಕೆ

    ಬೆಂಗಳೂರು: ಸಿದ್ದರಾಮೋತ್ಸವದ (siddaramotsava) ಮೂಲಕ ಸಿಎಂ ಕುರ್ಚಿಗಾಗಿ ವ್ಯಕ್ತಿಪೂಜೆ ಮಾಡಲಾಗಿದೆ ಎಂದು ಸಿದ್ದರಾಮಯ್ಯ ವಿರುದ್ಧ ಬಿಜೆಪಿ (BJP) ವಾಗ್ದಾಳಿ ನಡೆಸಿದೆ. ಸರಣಿ ಟ್ವೀಟ್‌ ಮೂಲಕ ಕಾಂಗ್ರೆಸ್‌ (congress) ಹಾಗೂ ಸಿದ್ದರಾಮಯ್ಯ (Siddaramaiah) ವಿರುದ್ಧ ಬಿಜೆಪಿ ಹರಿಹಾಯ್ದಿದೆ.

    ಟ್ವೀಟ್‌ನಲ್ಲೇನಿದೆ?
    ಬಿಜೆಪಿ ಪಕ್ಷದ ಒಂದು‌ ಜನಸ್ಪಂದನೆ ಕಾರ್ಯಕ್ರಮಕ್ಕೆ ಬೆದರಿರುವ ಸಿದ್ದರಾಮಯ್ಯ ಅವರೇ, ಮುಂದೆ ಹೇಗೆ? ಇನ್ನೂ ಹಲವಾರು ಸಮಾವೇಶದ ರೂಪುರೇಷೆ ನಡೆಯುತ್ತಿದೆ. ಭ್ರಷ್ಟರಾಮಯ್ಯ ಅವರು ಈಗಲೇ ತಮ್ಮ ಬುಡಕ್ಕೆ ಬೆಂಕಿ ಬಿದ್ದವರಂತೆ ವಿಲವಿಲ ಒದ್ದಾಡುತ್ತಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ, ರಾಜಕೀಯವಾಗಿ ಮೂಲೆಗುಂಪಾಗೋ ದಿನ ದೂರವಿಲ್ಲ: ಕಟೀಲ್ ತಿರುಗೇಟು

    ಭಾರತ್ ಜೋಡೋ ಯಾತ್ರೆಯ ಮೂಲಕ‌ ನಕಲಿ ಗಾಂಧಿ ಕುಟುಂಬದ ಪಾದಪೂಜೆ ಮಾಡಲಾಗಿದೆ. ಸಿದ್ದರಾಮೋತ್ಸವದ ಮೂಲಕ ಸಿಎಂ‌ ಕುರ್ಚಿಗಾಗಿ ವ್ಯಕ್ತಿಪೂಜೆಯಾಗಿದೆ. ಜನ ಸಂವೇದನೆಗೆ, ಜನಸ್ಪಂದನೆಯ ಮೂಲಕ ನಾವು ಬೆಲೆ ನೀಡುತ್ತಿದ್ದೇವೆ. ಮಾನ್ಯ ಸಿದ್ದರಾಮಯ್ಯ ಅವರೇ, ನಿಮ್ಮದು ಬರೇ ಅಧಿಕಾರ ಕೇಂದ್ರೀಕೃತ ಸಮಾವೇಶಗಳಲ್ಲವೇ?

    ರಾಜ್ಯ ಕಂಡ ಅತಿ ಭ್ರಷ್ಟಾತಿ ಭ್ರಷ್ಟ ಮುಖ್ಯಮಂತ್ರಿ ಎಂದರೆ ಅದು ಸಿದ್ದರಾಮಯ್ಯ. ತಾನು ಮಾಡಿದ ಭ್ರಷ್ಟಾಚಾರಗಳು ತನ್ನನ್ನು ಸುತ್ತಿಕೊಳ್ಳುತ್ತದೆ ಎಂಬ ಭಯ ಕಾಡಿದಾಗ ಭ್ರಷ್ಟಾಚಾರ ತನಿಖಾ ಸಂಸ್ಥೆಗೆ ಬಾಗಿಲು ಹಾಕಿದ ಕೀರ್ತಿ ಇಟಲಿ ಪರಿವಾರದ ಈ ಭ್ರಷ್ಟರಾಮಯ್ಯ ಅವರಿಗೆ ಸಲ್ಲುತ್ತದೆ. ನಿಜವಲ್ವೇ ‘ರೀಡು’ರಾಮಯ್ಯ? ಇದನ್ನೂ ಓದಿ: ನಮಗೆ ಸವಾಲು ಹಾಕುವ ಧಮ್ ನಿಮಗೆ ಇಲ್ಲ: ಬೊಮ್ಮಾಯಿ ವಿರುದ್ಧ ಸಿದ್ದು ಕಿಡಿ

    ಜನ್ಮ ದಿನಾಂಕವೇ ಗೊತ್ತಿಲ್ಲ ಎನ್ನುತ್ತಲೇ ಜನನ ದಿನ ದಿನಾಂಕದಲ್ಲೂ ಹಗರಣ ನಡೆಸಿ ಸಿದ್ರಾಮೋತ್ಸವ ಮಾಡಿದ್ದು, ಡಿಕೆಶಿಯನ್ನು ಬೆದರಿಸಲೋ, ನಕಲಿ ಗಾಂಧಿ ಪರಿವಾರವನ್ನು ಬೆದರಿಸಲೋ ಅಥವಾ ಜನ ಸೇರಿಸಿ‌ ಸಿಎಂ ಆಗುತ್ತೇನೆ ಎಂಬ ಭ್ರಮೆಯಿಂದ ಮಾಡಿದ್ದೋ? 2013 ರಲ್ಲಿ ಭ್ರಷ್ಟರಾಮಯ್ಯ ಸಿಎಂ ಆಗಿದ್ದಲ್ಲ, ಅದು ದಲಿತ‌ ನಾಯಕನಿಂದ ಕಿತ್ತುಕೊಂಡ ಪದಭಿಕ್ಷೆ!

    Live Tv
    [brid partner=56869869 player=32851 video=960834 autoplay=true]

  • ಸಿದ್ದರಾಮೋತ್ಸವ ಬಳಿಕ ಮತ್ತೊಮ್ಮೆ ಶಕ್ತಿ ಪ್ರದರ್ಶನಕ್ಕೆ ಪ್ಲಾನ್- ಆಗಸ್ಟ್ 26ರಂದು ನಡೆಯುತ್ತಾ ಹೈಡ್ರಾಮಾ..?

    ಸಿದ್ದರಾಮೋತ್ಸವ ಬಳಿಕ ಮತ್ತೊಮ್ಮೆ ಶಕ್ತಿ ಪ್ರದರ್ಶನಕ್ಕೆ ಪ್ಲಾನ್- ಆಗಸ್ಟ್ 26ರಂದು ನಡೆಯುತ್ತಾ ಹೈಡ್ರಾಮಾ..?

    ಬೆಂಗಳೂರು: ಸಿದ್ದರಾಮೋತ್ಸವದ ನಂತರ ಸಿದ್ದರಾಮಯ್ಯ & ಟೀಂನಿಂದ ಮತ್ತೊಂದು ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಿದ್ಧವಾಗಿದೆ.

    ಆಗಸ್ಟ್ 26ಕ್ಕೆ ಮಡಿಕೇರಿಯಲ್ಲಿ ಸಿದ್ದರಾಮಯ್ಯ ಮೈಸೂರು ಭಾಗದ ಶಕ್ತಿ ಪ್ರದರ್ಶನ ನಡೆಯುವುದು ಫಿಕ್ಸ್ ಆಗಿದೆ. ಸಿದ್ದರಾಮಯ್ಯ ತಂಟೆಗೆ ಬಂದರೆ ಹುಷಾರ್ ಎಂಬ ಸಂದೇಶ ರವಾನಿಸಲು ಸಿದ್ದರಾಮಯ್ಯ ಬೆಂಬಲಿಗರು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಕಾಲದಲ್ಲೇ ತುಮಕೂರಲ್ಲಿ ಸಾವರ್ಕರ್ ಪಾರ್ಕ್- ಹಳೆ ಫೋಟೋ ವೈರಲ್, ಕೈ ಪಡೆಗೆ ಮುಜುಗರ

    ಸಾವಿರ ಸಾವಿರ ಸಂಖ್ಯೆಯಲ್ಲಿ ಸಿದ್ದರಾಮಯ್ಯ ಬೆಂಬಲಿಗರು ಮಡಿಕೇರಿ ಚಲೋಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ತೂರಿದಕ್ಕೆ ಪ್ರತಿಯಾಗಿ ಮಡಿಕೇರಿ ಎಸ್ ಪಿ ಕಚೇರಿ ಮುಂದೆ ಪ್ರತಿಭಟನೆ ಮಾಡುವುದಾಗಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಇದಕ್ಕೆ ಬಿಜೆಪಿ ಶಾಸಕ ಬೋಪಯ್ಯ ಕೂಡ ಸೆಡ್ಡು ಹೊಡೆದಿದ್ದಾರೆ. ಅದ್ಯಾರೋ ಬರ್ತಾರೋ ಬರಲಿ ಎಂದಿದ್ದಾರೆ.

    ಇದರಿಂದಾಗಿ ಆಗಸ್ಟ್ 26 ರಂದು ಮಡಿಕೇರಿಯಲ್ಲಿ ಹೈಡ್ರಾಮ ನಡೆಯೋದು ಬಹುತೇಕ ಖಚಿತವಾಗಿದೆ. ಶಾಸಕ ಅಪ್ಪಚ್ಚು ರಂಜನ್ ಕೂಡ ತಿರುಗೇಟು ಕೊಟ್ಟಿದ್ದಾರೆ. ಬೇಕಾದ್ರೆ ಸಿದ್ದರಾಮಯ್ಯ ಕೊಡಗಿಗೆ ಬಂದು ಚುನಾವಣೆಗೆ ನಿಲ್ಲಲಿ. ಡೆಪಾಸಿಟ್ ಇಲ್ಲದಂತೆ ಅವರನ್ನು ಸೋಲಿಸಿ ಕಳುಹಿಸುತ್ತೆವೆ ಎಂದು ಸವಾಲೆಸೆದಿದ್ದಾರೆ. ಇದನ್ನೂ ಓದಿ: ರಂಭಾಪುರಿ ಶ್ರೀ ಬಳಿ ನೋವು ತೋಡಿಕೊಂಡಿಲ್ಲ, ಆಗಿದ್ದು ಹೇಳಿದ್ದೇನೆ ಅಷ್ಟೇ: ಸಿದ್ದರಾಮಯ್ಯ ಸ್ಪಷ್ಟನೆ

    Live Tv
    [brid partner=56869869 player=32851 video=960834 autoplay=true]

  • ಸಿದ್ದರಾಮೋತ್ಸವಕ್ಕೆ ಬಸ್ ವ್ಯವಸ್ಥೆ ಮಾಡಿದ್ದನ್ನು ಒಪ್ಪಿಕೊಂಡ ಶಾಸಕ ಶಿವಲಿಂಗೇಗೌಡ

    ಸಿದ್ದರಾಮೋತ್ಸವಕ್ಕೆ ಬಸ್ ವ್ಯವಸ್ಥೆ ಮಾಡಿದ್ದನ್ನು ಒಪ್ಪಿಕೊಂಡ ಶಾಸಕ ಶಿವಲಿಂಗೇಗೌಡ

    ಹಾಸನ: ಸಿದ್ದರಾಮೋತ್ಸವಕ್ಕೆ ಅನ್ಯಪಕ್ಷಗಳ ಶಾಸಕರು ವಾಹನ ವ್ಯವಸ್ಥೆ ಮಾಡಿದ್ರು ಎಂಬ ಸುದ್ದಿ ಹರಿದಾಡಿತ್ತು. ಇದಕ್ಕೆ ಪುಷ್ಠಿ ನೀಡುವಂತಹ ಹೇಳಿಕೆಯನ್ನು ಅರಸಿಕೆರೆಯ ಜೆಡಿಎಸ್ ಶಾಸಕ ಶಿವಲಿಂಗೇಗೌಡ ನೀಡಿದ್ದಾರೆ.

    ಹೌದು. ನಾನು ವಾಹನ ವ್ಯವಸ್ಥೆ ಮಾಡಿದ್ದು ಸತ್ಯ ಎಂದಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ನಾನು ಉಪಯೋಗ ಪಡೆದಿದ್ದೇನೆ. ಕೆಲವರು ಬಂದು ಸಹಾಯ ಕೇಳಿದಾಗ, ಬಸ್ ವ್ಯವಸ್ಥೆ ಮಾಡಿಸಿದ್ದೇನೆ ಎಂದಿದ್ದಾರೆ. ನಾನು ಜೆಡಿಎಸ್ ಜೊತೆ ಭಿನ್ನಾಭಿಪ್ರಾಯ ಹೊಂದಿರೋದು ಎಲ್ಲರಿಗೂ ಗೊತ್ತಿದೆ ಎಂದು ಶಿವಲಿಂಗೇಗೌಡ ಹೇಳಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿಂದು 1,608 ಮಂದಿಗೆ ಕೊರೊನಾ – ಇಬ್ಬರು ಸಾವು

    ಸಿದ್ದರಾಮೋತ್ಸವ ಅಪಘಾತ- ಸಾವಿನ ಸಂಖ್ಯೆ 3ಕ್ಕೆ: ಸಿದ್ದರಾಮೋತ್ಸವ ವೇಳೆ ಸಂಭವಿಸಿದ ಅಪಘಾತಗಳಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೇರಿದೆ. ಸಿದ್ದರಾಮೋತ್ಸವಕ್ಕೆ ತೆರಲಿದ್ದ ಮಂಡ್ಯದ ಅರಳಕುಪ್ಪೆಯ ಸ್ವಾಮಿಗೌಡ ಅಪಘಾತದಲ್ಲಿ ಮೃತಪಟ್ಟಿರೋದು ತಡವಾಗಿ ಬೆಳಕಿಗೆ ಬಂದಿದೆ. ದಾವಣಗೆರೆಯಿಂದ ವಾಪಸ್ ಆಗದ ಕಾರಣ ಕುಟುಂಬಸ್ಥರು ನಾಪತ್ತೆ ಕೇಸ್ ದಾಖಲಿಸಿದ್ರು. ಇದನ್ನೂ ಓದಿ: ಮುಂದಿನ ಕಾಮನ್‌ವೆಲ್ತ್ ಗೇಮ್ಸ್ ಎಲ್ಲಿ-ಯಾವಾಗ? – ಇಲ್ಲಿದೆ ಡೀಟೈಲ್ಸ್

    ದಾವಣಗೆರೆ ಪೊಲೀಸರು ತನಿಖೆ ನಡೆಸಿದಾಗ, ಜಿಲ್ಲಾಸ್ಪತ್ರೆ ಶವಾಗಾರದಲ್ಲಿ ಸ್ವಾಮಿಗೌಡನ ಶವ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಶವ ಹಸ್ತಾಂತರಿಸಲಾಗಿದೆ. ಕಲಬುರಗಿಯ ಸಾವಳಗಿಯಿಂದ ಸಿದ್ದರಾಮೋತ್ಸವಕ್ಕೆ ತೆರಳಿದ್ದ 70 ವರ್ಷದ ಬಸಣ್ಣ ನಾಪತ್ತೆಯಾಗಿದ್ದಾರೆ. ಅಪ್ಪನ ಫೋಟೋ ಹಿಡಿದು ಮೂವರು ಮಕ್ಕಳು ದಾವಣಗೆರೆಯಲ್ಲಿ ಹುಡುಕಾಟ ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಾವು ಸಿದ್ದರಾಮೋತ್ಸವದಂತಹ ನೂರು ಕಾರ್ಯಕ್ರಮ ಮಾಡಿದ್ದೇವೆ: ಈಶ್ವರಪ್ಪ

    ನಾವು ಸಿದ್ದರಾಮೋತ್ಸವದಂತಹ ನೂರು ಕಾರ್ಯಕ್ರಮ ಮಾಡಿದ್ದೇವೆ: ಈಶ್ವರಪ್ಪ

    ಶಿವಮೊಗ್ಗ: ಸಿದ್ದರಾಮೋತ್ಸವದಂತಹ ನೂರಾರು ಕಾರ್ಯಕ್ರಮಗಳನ್ನು ನಾವು ಮಾಡಿದ್ದೇವೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

    ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿದ್ದರಾಮೋತ್ಸವ ಕಾರ್ಯಕ್ರಮದಿಂದ ಕಾಂಗ್ರೆಸ್ ಪಕ್ಷದಲ್ಲಿಯೇ ಸಂತೋಷ ಪಡುವವರು ಇದ್ದಾರೆ. ಹೊಟ್ಟೆ ಉರಿದುಕೊಳ್ಳುವವರು ಇದ್ದಾರೆ. ಆದರೆ ನಾವು ಇಂತಹ ನೂರು ಕಾರ್ಯಕ್ರಮಗಳನ್ನು ಮಾಡಿದ್ದೇವೆ ಎಂದು ಹೇಳಿದರು.

    ಕಾಂಗ್ರೆಸ್‍ನವರು ಒಟ್ಟಾಗಿ ಕಾರ್ಯಕ್ರಮ ಮಾಡಿದ್ದೇವೆ ಅಂದರು. ಅವರ ಜೀವನದಲ್ಲೇ ಒಟ್ಟಾಗಿ ಕಾರ್ಯಕ್ರಮ ಮಾಡಿಯೇ ಗೊತ್ತಿಲ್ಲ. ಈ ಕಾರ್ಯಕ್ರಮದಿಂದ ಕಾಂಗ್ರೆಸ್ ಆಂತರಿಕ ಗೊಂದಲ ಸಾಕಷ್ಟು ಹೆಚ್ಚಾಗಿದೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಎರಡು ಹೆಚ್ಚುವರಿ SDRF ತಂಡ ರಚನೆ: ಬೊಮ್ಮಾಯಿ ಸೂಚನೆ

    ರಾಜ್ಯದಲ್ಲಿ ಕಾಂಗ್ರೆಸ್‍ನವರು ಅಧಿಕಾರ ನಡೆಸಿದ್ದರು. ಆಗ ರಾಜ್ಯದ ಜನ ಕಾಂಗ್ರೆಸ್‍ನವರಿಗೆ ನೀವು ಅಯೋಗ್ಯರು ಇದ್ದೀರಾ. ಬಡವರು, ದಲಿತರ ಪರ ಇಲ್ಲ ಅಂತಾ ಕಿತ್ತು ಬಿಸಾಕಿದ್ದಾರೆ. ಆದರೆ ಕಾಂಗ್ರೆಸ್‍ನವರು ಮತ್ತೆ ಅಧಿಕಾರದ ಕನಸು ಕಾಣುತ್ತಿದ್ದಾರೆ. ಮುಂದೆಯೂ ಬಿಜೆಪಿ 150ಕ್ಕೂ ಅಧಿಕ ಸ್ಥಾನ ಪಡೆಯಲಿದ್ದು, ಬಿಜೆಪಿಯವರೇ ಮುಖ್ಯಮಂತ್ರಿ ಆಗುತ್ತಾರೆ ಎಂದರು. ಇದನ್ನೂ ಓದಿ: ಈದ್ಗಾ ಮೈದಾನ ಕಂದಾಯ ಇಲಾಖೆ ಆಸ್ತಿ- ವರ್ಕ್ಫ್ ಬೋರ್ಡ್ ಅರ್ಜಿ ವಜಾಗೊಳಿಸಿದ ಬಿಬಿಎಂಪಿ

    Live Tv
    [brid partner=56869869 player=32851 video=960834 autoplay=true]

  • ನನ್ನ ಹುಟ್ಟುಹಬ್ಬದ ಬಗ್ಗೆ ನಮ್ಮ ಅವ್ವ, ಅಪ್ಪನಿಗೆ ಗೊತ್ತು: ಸಿದ್ದರಾಮಯ್ಯ

    ನನ್ನ ಹುಟ್ಟುಹಬ್ಬದ ಬಗ್ಗೆ ನಮ್ಮ ಅವ್ವ, ಅಪ್ಪನಿಗೆ ಗೊತ್ತು: ಸಿದ್ದರಾಮಯ್ಯ

    ಚಿಕ್ಕಬಳ್ಳಾಪುರ: ಸಿದ್ದರಾಮೋತ್ಸವ ಸಕ್ಸಸ್ ಕಂಡು ಬಿಜೆಪಿಯವರಿಗೆ ಹೊಟ್ಟೆ ಉರಿ ಆಗಿದೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಜಂಟಿ ರೋಡ್ ಶೋ ನಡೆಸಿದರು. ಈ ವೇಳೆ ಸಿದ್ದರಾಮಯ್ಯನವರಿಗೆ 75 ವರ್ಷ ವಯಸ್ಸೇ ಆಗಿಲ್ಲ ಎಂಬ ಬಿಜೆಪಿಯ ಕೆಲ ನಾಯಕರು ವ್ಯಂಗ್ಯವಾಡಿ ಸಿದ್ದರಾಮೋತ್ಸವದ ಬಗ್ಗೆ ಟೀಕಿಸಿದ್ದರ ಬಗ್ಗೆ ಕಿಡಿಕಾರಿದರು. ಇದನ್ನೂ ಓದಿ: ಚಂದ್ರಬಾಬು ನಾಯ್ಡು ಕ್ಷೇತ್ರದಿಂದ ಜಗನ್ ಸ್ಪರ್ಧೆ – 2 ವರ್ಷಕ್ಕೂ ಮುನ್ನ ರಂಗೇರಿದ ಚುನಾವಣಾ ರಾಜಕೀಯ

    ನನ್ನ ಹುಟ್ಟುಹಬ್ಬದ ಬಗ್ಗೆ ಬಿಜೆಪಿಯವರಿಗೇನು ಗೊತ್ತು. ನಮ್ಮ ಅವ್ವ, ಅಪ್ಪನಿಗೆ ಗೊತ್ತು ಅಂತ ನಕ್ಕರು. ಬಿಜೆಪಿಯವರಿಗೆ ಸಿದ್ದರಾಮೋತ್ಸವದ ಸಕ್ಸಸ್ ಕಂಡು ಹೊಟ್ಟೆ ಉರಿ ಬಂದಿದೆ. ಅವರ ಮಾತಿಗೆ ಕಿಮ್ಮತ್ತು ಇಲ್ಲ ಅಂತ ತಿರುಗೇಟು ನೀಡಿದರು.  ಇದನ್ನೂ ಓದಿ: ಗಲ್ಲು ಶಿಕ್ಷೆ ಕಾನೂನಿನ ಬಳಿಕ ಮಹಿಳೆಯರ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣಗಳು ಹೆಚ್ಚುತ್ತಿವೆ: ಗೆಹ್ಲೋಟ್

    ಚಿಂತಾಮಣಿ ವಿಧಾನ ಕ್ಷೇತ್ರದಲ್ಲಿ ಮಾಜಿ ಶಾಸಕ ಡಾ.ಎಂ.ಸಿ.ಸುಧಾಕರ್ ನೇತೃತ್ವದಲ್ಲಿ 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರೋ ಪಾದಯಾತ್ರೆ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಹಾಗೂ ಡಿಕೆಶಿ ಆಗಮಿಸಿದ್ದರು. ಇಬ್ಬರು ನಾಯಕರಿಗೆ ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದ್ದು, ಚಿಂತಾಮಣಿ ಬೆಂಗಳೂರು ರಸ್ತೆಯ ಟೋಲ್ ಗೇಟ್ ಬಳಿಯೇ ಜೆಸಿಬಿ ಮೂಲಕ ಹೂ ಸುರಿಮಳೆ ಹಾಗೂ ಬೃಹತ್ ಸೇಬಿನ ಹಾರ ಹಾಕಿ ಸ್ವಾಗತ ಕೋರಿದರು.

    Live Tv
    [brid partner=56869869 player=32851 video=960834 autoplay=true]

  • ಮೋದಿ ಮುಂದೆ ರಾಹುಲ್ ಗಾಂಧಿ ಜೀರೋ: ರೇಣುಕಾಚಾರ್ಯ

    ಮೋದಿ ಮುಂದೆ ರಾಹುಲ್ ಗಾಂಧಿ ಜೀರೋ: ರೇಣುಕಾಚಾರ್ಯ

    -ಸಿದ್ದರಾಮೋತ್ಸವಕ್ಕೆ ಬಂದವ್ರು ಕಾಂಗ್ರೆಸ್ ಓಟರ್ಸ್ ಅಲ್ಲ
    -ದಾವಣಗೆರೆಯಲ್ಲಿ ಬಿಜೆಪಿಯ ಕಾರ್ಯಕ್ರಮ ಮಾಡಲು ಸಿದ್ದತೆ

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ರಾಹುಲ್ ಗಾಂಧಿ ಜೀರೋ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ವ್ಯಂಗ್ಯವಾಡಿದ್ದಾರೆ

    ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಮಾಡಿರುವುದು ಸಿದ್ದರಾಮಯ್ಯನವರ ಅಭಿಮಾನಿಗಳು. ಕಾಂಗ್ರೆಸ್‍ನವರು ಈಗ ಭ್ರಮಾಲೋಕದಲ್ಲಿ ತೇಲಾಡುತ್ತಿದ್ದಾರೆ. ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ ಅಂದುಕೊಂಡಿದ್ದಾರೆ. ಅಲ್ಲಿ ಬಂದಿರುವ 60 ಪರ್ಸೆಂಟ್ ಜನ ಸಿದ್ದರಾಮಯ್ಯ ಅಭಿಮಾನಿಗಳು. ನಾನು ಸಿದ್ದರಾಮಯ್ಯನವರ ಬಗ್ಗೆ ಟೀಕೆ ಮಾಡಲ್ಲ. ಸಿದ್ದರಾಮಯ್ಯನವರ ಬಗ್ಗೆ ಇಟ್ಟಿರುವ ಗೌರವಕ್ಕೆ ಅಭಿಮಾನಿಗಳು ಬಂದಿದ್ದಾರೆ. ಆದರೆ ಅವರು ಕಾಂಗ್ರೆಸ್ ಓಟರ್ಸ್ ಅಲ್ಲ. ಕಾಂಗ್ರೆಸ್ ಒಂದು ರೀತಿ ಸತ್ತೇ ಹೋಗಿದೆ. ರಾಜ್ಯದಲ್ಲಿ, ದೇಶದಲ್ಲಿ ಕಾಂಗ್ರೆಸ್ ಬಲಿಷ್ಟವಾಗಿದೆ. ಬಸವರಾಜ್ ಬೊಮ್ಮಾಯಿ ಕೊಟ್ಟ ಅನೇಕ ಕಾರ್ಯಕ್ರಮಗಳು ಜನಪರವಾಗಿವೆ. ಕಾಂಗ್ರೆಸ್ ಸಿದ್ದರಾಮೋತ್ಸವ ಕಾರ್ಯಕ್ರಮದ ಬಗ್ಗೆ ನಮಗೇನೂ ಭಯ ಇಲ್ಲ. ಆ ಕಾರ್ಯಕ್ರಮ ವಿರೋಧ ಮಾಡಿದ್ದು ಕಾಂಗ್ರೆಸ್‍ನವರೇ ಹೊರತು, ನಾವಲ್ಲಾ. ಬಿಜೆಪಿ ಜನಪರ ಕಾರ್ಯಕ್ರಮಗಳ ಬಗ್ಗೆ ರಾಜ್ಯಾದ್ಯಂತ ಕಾರ್ಯಕ್ರಮ ಮಾಡಲಿದೆ. ಆ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ದಾವಣಗೆರೆಯಲ್ಲಿ ಮಾಡಲು ಸಿಎಂಗೆ ವಿನಂತಿ ಮಾಡುತ್ತೇನೆ ಎಂದಿದ್ದಾರೆ.

     

    ಬಿಜೆಪಿ ಸಂಘಟನೆ ದೇಶದಲ್ಲಿ ರಾಜ್ಯದಲ್ಲಿ ಬಲಿಷ್ಠವಾಗಿದೆ. ಮೋದಿ, ಬಿಎಸ್‍ವೈ ಅವರು ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ನೀಡಿದ್ದಾರೆ. ನೇಕಾರ ಸಮುದಾಯದ ಮಕ್ಕಳಿಗೆ ವಿದ್ಯಾನಿಧಿ ಕಾರ್ಯಕ್ರಮವನ್ನು ಸಿಎಂ ಕೊಟ್ಟಿದ್ದಾರೆ. ಸ್ವಾಮಿ ವಿವೇಕಾನಂದ ಹೆಸರಿನಲ್ಲಿ ಯುವಕರಿಗೆ ಆದ್ಯತೆ ಕೊಟ್ಟಿದ್ದಾರೆ. ನಮ್ಮ ಸರ್ಕಾರದ ಅನೇಕ ಜನಪರ ಕಾರ್ಯಕ್ರಮಗಳನ್ನು ನೀಡಿದೆ. ಒಟ್ಟಾಗಿ ನಾವು ಮುನ್ನುಗ್ಗಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಜನರ ಮನೆ ಬಾಗಿಲನ್ನು ತಲುಪಿ ಮತ್ತೆ ನಾವು ಅಧಿಕಾರಕ್ಕೆ ಬರುವ ವಿಶ್ವಾಸ ಇದೆ. ನಾವು ಸಹ ದಾವಣಗೆರೆಯಲ್ಲಿ ಸಮಾವೇಶ ಮಾಡುತ್ತೇವೆ. ಆದರೆ ಇದು ಸಿದ್ದರಾಮೋತ್ಸವಕ್ಕೆ ಕೌಂಟರ್ ಅಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪತ್ನಿ ಸಂಬಂಧಿ ಜೊತೆ ಲವ್ವಿ-ಡವ್ವಿ, ವೇಶ್ಯೆ ಪ್ರೀತಿಗೆ ಬಿದ್ದು ಆದ ಸೈಕೋ ಕಿಲ್ಲರ್ – ಮಂಡ್ಯದಲ್ಲೊಂದು ಮರ್ಡರ್ ಮಿಸ್ಟ್ರಿ

    ಜನಪರವಾದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಸಲುವಾಗಿ ಸಮಾರೋಪ ಕಾರ್ಯಕ್ರಮ ಮಾಡುತ್ತೇವೆ. ಈ ಬಗ್ಗೆ ಸಿಎಂ ಹಾಗೂ ಅಧ್ಯಕ್ಷರ ಜೊತೆಗೆ ಚರ್ಚೆ ನಡೆಸಿದ್ದೇವೆ. ಕಾರ್ಯಕ್ರಮದ ಸಮಾರೋಪಕ್ಕೆ ಅವಕಾಶ ಕೊಡಿ ಅಂತ ಕೇಳಿದ್ದೇವೆ. ಸಿದ್ದರಾಮೋತ್ಸವ ವಿರೋಧ ಮಾಡಿದ್ದು ಕಾಂಗ್ರೆಸ್‍ನವರು. ಕಾಂಗ್ರೆಸ್‍ನಲ್ಲಿ ಗುಂಪಿಗಾರಿಕೆ ಇದೆ. ಬಿಜೆಪಿಯಲ್ಲಿ ಯಾವುದೇ ಗುಂಪಿಗಾರಿಕೆ ಇಲ್ಲ. ಸಿದ್ದರಾಮಯ್ಯನವರ ಮೇಲೆ ಗೌರವ ಇದೆ. ಯಾವುದೇ ಭಯವಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಾಲು-ಸಾಲು ಸರಗಳ್ಳತನ- 5 ರಾಜ್ಯಗಳಲ್ಲಿ ಸದ್ದು ಮಾಡ್ತಿದ್ದ ಖತರ್ನಾಕ್ ಕಳ್ಳ ಬೆಂಗ್ಳೂರಿನಲ್ಲಿ ಅರೆಸ್ಟ್

    ನನಗೆ ಸರಿಯಾಗಿ ಹುಟ್ಟುಹಬ್ಬದ ದಿನ ಗೊತ್ತಿಲ್ಲ ಅಂತ ಸಿದ್ದರಾಮಯ್ಯನವರು ಹೇಳಿರುವುದನ್ನು ಗಮನಿಸಿದ್ದೇನೆ. ಕಾಂಗ್ರೆಸ್‍ನ ಮುಖಂಡರು ಭ್ರಮಾಲೋಕದಲ್ಲಿದ್ದಾರೆ. ರಾಹುಲ್ ಗಾಂಧಿಯವರು ಬಲವಂತವಾಗಿ ಅಪ್ಪಿಕೊಳ್ಳಿ ಅಂತ ಹೇಳಿದರು. ನನಗೆ ಇದು ಒಂದು ಕಡೆ ನಗು ಬರುತ್ತದೆ, ಮತ್ತೊಂದು ಕಡೆ ಆಶ್ಚರ್ಯ ಆಗುತ್ತದೆ. ದೇವಸ್ಥಾನದಲ್ಲಿ ತೀರ್ಥವನ್ನ ಮಾತ್ರೆಯಂತೆ ತೆಗೆದುಕೊಳ್ಳುತ್ತಾರೆ. ನರೇಂದ್ರ ಮೋದಿ ವಿಶ್ವ ಮೆಚ್ಚಿದ ನಾಯಕ. ಮೋದಿ ಮುಂದೆ ರಾಹುಲ್ ಗಾಂದಿ ಜೀರೋ. ಹಿಂದೂ ವಿರೋಧಿಯವರು. ವಿನಃ ಕಾರಣ ಕಾಂಗ್ರೆಸ್‍ನವರಿಗೆ ಕಾನೂನನ್ನು ಗೌರವಿಸುವುದು ಗೊತ್ತಿಲ್ಲ. ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಬಂದವರು ಕಾಂಗ್ರೆಸ್‍ನವರಲ್ಲ, ಸಿದ್ದರಾಮಯ್ಯನವರ ಅಭಿಮಾನಿಗಳು. ಬಹಳಷ್ಟು ಜನ ಪಕ್ಷಾತೀತವಾಗಿ ಹೋಗಿದ್ದಾರೆ ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಚುನಾವಣೆಗೆ ಕಾಂಗ್ರೆಸ್ ತಂತ್ರ- ಸಿದ್ದರಾಮೋತ್ಸವ ಮುಗೀತು ಇದೀಗ ಪಕ್ಷೋತ್ಸವ

    ಚುನಾವಣೆಗೆ ಕಾಂಗ್ರೆಸ್ ತಂತ್ರ- ಸಿದ್ದರಾಮೋತ್ಸವ ಮುಗೀತು ಇದೀಗ ಪಕ್ಷೋತ್ಸವ

    ಬೆಂಗಳೂರು: ಮುಂದಿನ ಚುನಾವಣೆಗೆ ಕಾಂಗ್ರೆಸ್ ರಣತಂತ್ರ ರೂಪಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟುಹಬ್ಬದ ಪ್ರಯುಕ್ತ ಸಿದ್ದರಾಮೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮ ಭಾರೀ ಜನಸ್ತೋಮದಿಂದ ಕೂಡಿತ್ತು. ಈ ಹಿನ್ನೆಲೆಯಲ್ಲಿ ಇದೀಕ್ಷ ಕಾಂಗ್ರೆಸ್ ಪಕ್ಷೋತ್ಸವ ಮಾಡಲು ತೀರ್ಮಾನಿಸಿದೆ.

    ಆಗಸ್ಟ್ 15ರಂದು ಬೆಂಗಳೂರಿನಲ್ಲಿ ನಡೆಯಬೇಕಿರುವ ಪಾದಯಾತ್ರೆ ಈಗ ಕೇವಲ ಫ್ರೀಡಂಮಾರ್ಚ್ ಆಗಿಲ್ಲ. ಆಗಸ್ಟ್ 15ರ ನಡಿಗೆ ಪಕ್ಷೋತ್ಸವ ಆಗಲಿದೆ. ಸಿದ್ದರಾಮೋತ್ಸವದ ಮಾದರಿಯಲ್ಲಿಯೇ ಅದ್ದೂರಿ ಕಾರ್ಯಕ್ರಮ ಮಾಡಲು ಡಿಕೆಶಿ ಸಿದ್ದತೆ ಆರಂಭಿಸಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭಿಸಿದೆ. ಇದನ್ನೂ ಓದಿ: ಸಿದ್ದರಾಮಯ್ಯ ನನ್ನ ಹಿರಿಯಣ್ಣನಂತೆ- ಮಾಜಿ ಸಿಎಂ ಗುಣಗಾನ ಮಾಡಿದ ಡಿಕೆ ಶಿವಕುಮಾರ್

    ಒಂದು ಲಕ್ಷ ಜನ, 6 ಕಿಮೀ ನಡಿಗೆ, ವೇದಿಕೆ ಮೇಲೆ ಪಕ್ಷದ ಪರವಾದ ಅದ್ದೂರಿ ಆಚರಣೆಗೆ ಪ್ಲಾನ್ ಮಾಡಲಾಗುತ್ತಿದೆ. ಪ್ರಿಯಾಂಕಾ ಗಾಂಧಿ ಅಥವಾ ರಾಹುಲ್ ಗಾಂಧಿ ಇಬ್ಬರಲ್ಲಿ ಒಬ್ಬರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವ್ಯಕ್ತಿಗಿಂತ ಪಕ್ಷ ಮುಖ್ಯ. ಪಕ್ಷವೇ ಎಲ್ಲಾ. ಪಕ್ಷದಿಂದಲೇ ಎಲ್ಲಾ ಎಂಬಂತೆ ಕಾರ್ಯಕ್ರಮ ಆಯೋಜನೆಗೆ ಪ್ಲಾನ್ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ.

    ಫ್ರೀಡಂ ಮಾರ್ಚ್‍ನಲ್ಲೂ ಟಿಕ್ ಫಾರ್ ಟ್ಯಾಕ್. ಒಗ್ಗಟ್ಟಿನ ಮಂತ್ರದ ನಡುವೆಯೂ ಸಿದ್ಸರಾಮೋತ್ಸವದ ಮಾದರಿಯಲ್ಲೆ ಅದಕ್ಕಿಂತ ಅದ್ದೂರಿಯಾಗಿ ಪಕ್ಷಕ್ಕಾಗಿ ಮಾಡುವ ಕಾರ್ಯಕ್ರಮ ಎಂದು ಬಿಂಬಿಸುವುದು ಡಿಕೆಶಿ ಲೆಕ್ಕಾಚಾರ ಎನ್ನಲಾಗುತ್ತಿದೆ. ಇದನ್ನೂ ಓದಿ: ಪಕ್ಷ ಗೆದ್ದ ಬಳಿಕವೇ ಮುಖ್ಯಮಂತ್ರಿ ವಿಚಾರ – ಮುಂದಿನ ಸಿಎಂ ಚರ್ಚೆಗೆ ರಾಹುಲ್ ಗಾಂಧಿ ಬ್ರೇಕ್

    Live Tv
    [brid partner=56869869 player=32851 video=960834 autoplay=true]

  • ಸಿದ್ದರಾಮೋತ್ಸವಕ್ಕೆ 10 ಲಕ್ಷಕ್ಕೂ ಹೆಚ್ಚಿನ ಜನಸಾಗರ- ಹೈಕಮಾಂಡ್‍ಗೆ ಬಿಎಸ್‍ವೈ ರಿಪೋರ್ಟ್

    ಸಿದ್ದರಾಮೋತ್ಸವಕ್ಕೆ 10 ಲಕ್ಷಕ್ಕೂ ಹೆಚ್ಚಿನ ಜನಸಾಗರ- ಹೈಕಮಾಂಡ್‍ಗೆ ಬಿಎಸ್‍ವೈ ರಿಪೋರ್ಟ್

    ಬೆಂಗಳೂರು: ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಜನಸಾಗರವೇ ಹರಿದುಬಂದಿದ್ದು, ಬಿಜೆಪಿ ನಾಯಕರಿಗೆ ಶಾಕ್ ನೀಡಿದೆ. ನಿರೀಕ್ಷೆಗೂ ಮೀರಿ 10 ಲಕ್ಷ ಜನ ಸೇರಿದ್ದಕ್ಕೆ ರಾಜ್ಯ ಬಿಜೆಪಿ ನಾಯಕರು ಆತಂಕ್ಕೀಡಾಗಿದ್ದಾರೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಿಗಿಂತಲೂ ಮೊದಲೇ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಬಿಜೆಪಿ ಹೈಕಮಾಂಡ್‍ಗೆ ರಿಪೋರ್ಟ್ ಕೊಟ್ಟಿದ್ದಾರೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಸಿದ್ದರಾಮೋತ್ಸವ ಮಾಸ್ ಸಮಾವೇಶ ಚುನಾವಣಾ ಪ್ರಚಾರದ ದಿಕ್ಕು ಬದಲಿಸಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಹೊಂದಾಣಿಕೆಯಾದ್ರೆ ಬಿಜೆಪಿಗೆ ಮುಂದೆ ಕಷ್ಟವಾಗಲಿದೆ. ನಿನ್ನೆಯ 10 ಲಕ್ಷಕ್ಕೂ ಹೆಚ್ಚು ಜನಸಾಗರ ಸೇರಿದೆ. ಕಾಂಗ್ರೆಸ್ ಕೂಡ ಇಷ್ಟು ಜನಸ್ತೋಮವನ್ನು ನಿರೀಕ್ಷೆ ಮಾಡಿರಲಿಲ್ಲ. ಹೀಗಾಗಿ ಪರಿಣಾಮಕಾರಿ ತಂತ್ರಗಾರಿಕೆ ಅಗತ್ಯವೆಂದು ಬಿಎಸ್‍ವೈ ಹೇಳಿದ್ದಾರೆ. ಇದನ್ನೂ ಓದಿ: ಕೊನೆಗೂ ನನಸಾಯ್ತು ಅಮ್ಮ, ಮಗಳ ಕನಸು – ಒಂದೇ ವಿಮಾನಕ್ಕೆ ಇಬ್ಬರೂ ಪೈಲಟ್

    ಪಕ್ಷ ಸಂಘಟನೆಯಲ್ಲಿ ಕೆಲ ಬದಲಾವಣೆ ತನ್ನಿ. ಸರ್ಕಾರ, ಪಕ್ಷ ವೇಗವಾಗಿ ಹೋಗಬೇಕು, ಇಲ್ಲ ಅಂದ್ರೆ 2023 ನಮಗೆ ಕಷ್ಟ ಕಟ್ಟಿಟ್ಟಬುತ್ತಿ. ಸಿದ್ದರಾಮೋತ್ಸವದಲ್ಲಿನ ಜನ ವೋಟ್ ಆಗಿ ಕನ್ವರ್ಟ್ ಆದ್ರೆ ಬಿಜೆಪಿಗೆ ದೊಡ್ಡ ಲಾಸ್ ಆಗಲಿದೆ. ನಿನ್ನೆಯ ಜನರನ್ನ ನಾನು ನಿರೀಕ್ಷೆ ಮಾಡಿರಲಿಲ್ಲ, ಸಿದ್ದರಾಮಯ್ಯ ಕೂಡ ನಿರೀಕ್ಷೆ ಮಾಡಿರಲಿಲ್ಲ. ಹಾಗಾಗಿ ಇದು ನಮಗೆ ಆಲರಾಂ ಆಗಬೇಕು. ಸ್ವಾತಂತ್ರ್ಯ ಅಮೃತ ಮಹೋತ್ಸವದ ಬಳಿಕ ಈ ಕಡೆ ಗಮನ ಹರಿಸಿ ಎಂದು ಯಡಿಯೂರಪ್ಪ ಮನವಿ ಮಾಡಿದ್ದಾರೆ ಎನ್ನಲಾಗಿದೆ.

    ಹೀಗೆ ಸುಮಾರು 15 ನಿಮಿಷಗಳ ಕಾಲ ಚರ್ಚೆ ನಡೆಸಿ ಯಡಿಯೂರಪ್ಪ ಅವರು ಅಮಿತ್ ಶಾಗೆ ಮಾಹಿತಿ ಕೊಟ್ಟಿದ್ದಾರೆ. ಖಾಸಗಿ ಹೊಟೇಲಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಹಾಗೂ ಶಾಸಕ ರಾಮದಾಸ್ ಮತ್ತಿತರರು ಅಮಿತ್ ಶಾರನ್ನು ಭೇಟಿಯಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಿಎಂ ಕುರ್ಚಿ ಕಿತ್ತಾಟಕ್ಕೆ ಡಿಕೆ-ಸಿದ್ದು ಕದನ ವಿರಾಮ

    ಸಿಎಂ ಕುರ್ಚಿ ಕಿತ್ತಾಟಕ್ಕೆ ಡಿಕೆ-ಸಿದ್ದು ಕದನ ವಿರಾಮ

    ಬೆಂಗಳೂರು: ಸಿದ್ದರಾಮೋತ್ಸವ ಮುಗಿದಿದ್ದು, ಕಾಂಗ್ರೆಸ್‌ನಲ್ಲಿ ಇನ್ನೇನಿದ್ದರೂ ಒಗ್ಗಟ್ಟಿನ ಮಂತ್ರ ಪಠಿಸಬೇಕಿದೆ. ನಿನ್ನೆಯಷ್ಟೇ ಡಿಕೆಶಿ, ಸಿದ್ದರಾಮಯ್ಯರ ನಡುವೆ ಗುದ್ದಾಟ ಇಲ್ಲ ಎಂದು ಕಾರ್ಯಕರ್ತರ ಮುಂದೆ ಘೋಷಣೆ ಮಾಡಿದ್ದಾರೆ. ಹೀಗಿದ್ದೂ ಸಿದ್ದು ಬೆಂಬಲಿಗರು, ಡಿಕೆಶಿ ಬೆಂಬಲಿಗರ ನಡುವೆ ಮುಂದಿನ ಸಿಎಂ ಎಂಬ ನೇರ ಮಾತಿಗೆ ಕಡಿವಾಣ ಬಿದ್ದಿದ್ದೆಯೇ ಎಂಬುದು ಪ್ರಶ್ನೆಯಾಗಿದೆ. ಸದ್ಯ ರಾಜ್ಯ ಕಾಂಗ್ರೆಸ್ಸಿಗರ ನಡೆ ಇಂತಹದ್ದೊಂದು ಕುತೂಹಲಕ್ಕೆ ಕಾರಣವಾಗಿದೆ.

    ಸಿದ್ದರಾಮೋತ್ಸವ ಘೋಷಣೆ ಆಗುತ್ತಿದ್ದಂತೆ ಮುಂದಿನ ಸಿಎಂ ಗದ್ದಲ ಜೋರಾಗಿತ್ತು. ಆದರೆ ಸಿದ್ದರಾಮೋತ್ಸವದ ವೇದಿಕೆ ಮೇಲೆ ಸಿದ್ದರಾಮಯ್ಯ ಹಾಗೂ ಡಿಕೆಶಿ ಇಬ್ಬರು ಬಹಿರಂಗವಾಗಿಯೇ ಕದನ ವಿರಾಮ ಘೋಷಣೆ ಮಾಡಿ ಒಗ್ಗಟ್ಟಿನ ಮಂತ್ರ ಪಠಿಸಿದ್ದಾರೆ. ಇನ್ನು ಮುಂದೇಯೂ ಇದು ಮುಂದುವರಿಯುತ್ತಾ? ಸಿಎಂ ಜಗಳಕ್ಕೆ ತಾತ್ಕಾಲಿಕವಾಗಿಯಾದರೂ ಬ್ರೇಕ್ ಬೀಳುತ್ತಾ ಅನ್ನೋದೇ ಸದ್ಯದ ಕುತೂಹಲವಾಗಿದೆ. ಇದನ್ನೂ ಓದಿ: ನಾಳೆಯಿಂದ ಲಾಲ್‌ಬಾಗ್‌ನಲ್ಲಿ ಅಪ್ಪು ನೆನಪಿನ ಫಲಪುಷ್ಪ ಪ್ರದರ್ಶನ

    ನಿನ್ನೆ ದಾವಣಗೆರೆಯಲ್ಲಿ ಅದ್ಧೂರಿಯಾಗಿ ಸಿದ್ದರಾಮೋತ್ಸವ ನಡೆದಿದೆ. ಸುಮಾರು 7 ಲಕ್ಷಕ್ಕೂ ಹೆಚ್ಚು ಸಿದ್ದು ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್‌ಗೆ ಬಲ ತುಂಬಲು ಸಾಕ್ಷಿಯಾಗಿದ್ದಾರೆ. ಕಾರ್ಯಕ್ರಮ ಮುಗಿಸಿ ವಾಪಸ್ ಹೊರಟ ಜನರಿಂದ ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಕಿಲೋಮೀಟರ್ ಉದ್ದಕ್ಕೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.

    ಕಾರ್ಯಕ್ರಮ ಮುಗಿದು 4-5 ಗಂಟೆಗಳೇ ಕಳೆದ್ರೂ ವಾಹನ ದಟ್ಟಣೆ ಕರಗಲು ಸುಮಾರು ಗಂಟೆಗಳೇ ಬೇಕಾಯ್ತು. ರಾತ್ರಿ ಸಿದ್ದರಾಮಯ್ಯ ಚಿತ್ರದುರ್ಗದ ಸಿರಿಗೆರೆ ತರಳಬಾಳು ಮಠಕ್ಕೆ ಭೇಟಿ ನೀಡಿದ್ರು. ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಭೇಟಿ ಮಾಡಿ ಆಶೀರ್ವಾದ ಪಡೆದ್ರು. ಬಳಿಕ ಚಿತ್ರದುರ್ಗದ ಮುರುಘಾಮಠಕ್ಕೆ ಸಿದ್ಧರಾಮಯ್ಯ ಭೇಟಿ ನೀಡಿದ್ರು. ಈ ವೇಳೆ ಅನ್ನದಾತ ಸಿದ್ಧರಾಮಯ್ಯಗೆ ಜೈ ಎಂದು ಕಾರ್ಯಕರ್ತರು ಘೋಷಣೆ ಕೂಗಿದ್ರು. ಇದನ್ನೂ ಓದಿ: ವಿದ್ಯಾರ್ಥಿಯಿಂದ ಅವಾಚ್ಯ ಪೋಸ್ಟ್- ಕಾಲೇಜು ವೇದಿಕೆಯಲ್ಲೇ ಕಣ್ಣೀರಿಟ್ಟ ಸಾ.ರಾ ಮಹೇಶ್

    ಒಟ್ಟಿನಲ್ಲಿ ಸಿದ್ದರಾಮೋತ್ಸವ ಕಾಂಗ್ರೆಸ್‌ಗೆ ಬಲ ತುಂಬುವ ಜೊತೆಗೆ ಕಾಂಗ್ರೆಸ್ ವರ್ಚಸ್ಸನ್ನು ಹೆಚ್ಚಿಸಲು ಕಾರಣವಾಯಿತು ಎಂದು ಕಾಂಗ್ರೆಸ್ಸಿಗರ ನಂಬಿಕೆ. ಆದರೆ ಸಿದ್ದು-ಡಿಕೆಶಿ ನಡುವೆ ಮತ್ತೆ ಸಿಎಂ ಕುರ್ಚಿ ಕಿತ್ತಾಟಕ್ಕೆ ವಾಕ್ಸಮರ ಮುಂದುವರಿಯಲಿದೆಯೇ ಎಂಬುದೇ ಪ್ರಶ್ನೆಯಾಗಿದೆ.

    Live Tv
    [brid partner=56869869 player=32851 video=960834 autoplay=true]