Tag: ಸಿದ್ಧಗಂಗಾ ಮಠ

  • ಶಿವಕುಮಾರ ಶ್ರೀಗಳ 6ನೇ ಪುಣ್ಯಸ್ಮರಣೆ – ಸಿದ್ಧಗಂಗಾ ಮಠದಲ್ಲಿಂದು ಸಂಸ್ಮರಣೋತ್ಸವ

    ಶಿವಕುಮಾರ ಶ್ರೀಗಳ 6ನೇ ಪುಣ್ಯಸ್ಮರಣೆ – ಸಿದ್ಧಗಂಗಾ ಮಠದಲ್ಲಿಂದು ಸಂಸ್ಮರಣೋತ್ಸವ

    – ಕರ್ನಾಟಕ, ಮೇಘಾಲಯದ ರಾಜ್ಯಪಾಲರು ಭಾಗಿ

    ತುಮಕೂರು: ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಕಾಯಕ ಯೋಗಿ, ಶಿವೈಕ್ಯ ಡಾ.ಶಿವಕುಮಾರ ಶ್ರೀಗಳು ಇಂದಿಗೆ ನಮ್ಮೆನ್ನೆಲ್ಲ ಅಗಲಿ 6 ವರ್ಷಗಳೇ ಕಳೆದಿವೆ. ಇದರ ಸ್ಮರಣಾರ್ಥವಾಗಿ ಇಂದು (ಜ.21) ತುಮಕೂರಿನ ಸಿದ್ಧಗಂಗಾ ಮಠದಲ್ಲಿ (Tumakuru Siddaganga Mutt) ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

    ಶ್ರೀಗಳು ನಮ್ಮನ್ನಗಲಿ 6 ವರ್ಷಗಳೇ ಉರುಳಿದರೂ ಅವರ ಆದರ್ಶಗಳು, ಬದುಕಿನ ಚಿಂತನೆಗಳು, ನಡೆದುಕೊಂಡ ರೀತಿ ನೀತಿ, ಆಚಾರ-ವಿಚಾರಗಳು ಇಂದಿಗೂ ಜೀವಂತ. ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದ ಹಿನ್ನೆಲೆ ಮಠದ ಆವಣರಣದಲ್ಲಿ ಬೃಹತ್ ವೇದಿಕೆ ತಲೆ ಎತ್ತಿದೆ.ಇದನ್ನೂ ಓದಿ: ಬೆಂಬಲ ತೊಗರಿ ಖರೀದಿ ಶುರು – ಜಿಲ್ಲೆಯಾದ್ಯಂತ 177 ಖರೀದಿ ಕೇಂದ್ರ ಸ್ಥಾಪನೆ

    ಏನೇನು ಕಾರ್ಯಕ್ರಮ?
    ಇಂದು ಬೆಳಗ್ಗೆಯಿಂದಲೇ ಸಿದ್ಧಮಠದ ಆವರಣದಲ್ಲಿರುವ ಶಿವೈಕ್ಯ ಡಾ.ಶಿವಕುಮಾರ ಶ್ರೀಗಳ ಗದ್ದುಗೆಗೆ ಮಂತ್ರಘೋಷ್ಯಗಳೊಂದಿಗೆ ವಿಶೇಷ ಪೂಜೆ ನಡೆಯುತ್ತಿದೆ. ಬೆಳಗ್ಗೆ 8 ಗಂಟೆಗೆ ಮಠದ ಆವರಣದಲ್ಲಿ ಶ್ರೀಗಳ ಪುತ್ಥಳಿಯನ್ನ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ಮಾಡಲಾಗುತ್ತದೆ. ಬೆಳಗ್ಗೆ 11 ಗಂಟೆಗೆ ಶ್ರೀಮಠದ ಆವರಣದಲ್ಲಿ ನಿರ್ಮಾಣವಾಗಿರುವ ಬೃಹತ್ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದೆ.

    ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮೇಘಾಲಯ ರಾಜ್ಯಪಾಲ ಸಿ.ಹೆಚ್ ವಿಜಯಶಂಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇನ್ನು ವೇದಿಕೆಯಲ್ಲಿ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಮಹಾಸ್ವಾಮಿ ಹಾಗೂ ಉತ್ತಾಧಿಕಾರಿ ಶ್ರೀ ಶಿವ ಸಿದ್ಧೇಶ್ವರ ಸ್ವಾಮೀಜಿ, ಮೈಸೂರಿನ ಶ್ರೀ ಸುತ್ತೂರು ವೀರಸಿಂಹಾಸನ ಸಂಸ್ಥಾನ ಮಠದ ಅಧ್ಯಕ್ಷ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು, ಕೇಂದ್ರ ಸಚಿವ ವಿ.ಸೋಮಣ್ಣ ಸೇರಿದಂತೆ ಹಲವು ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

    ಜಾನಪದ ವಿದ್ವಾಂಸ ನಾಡೋಜ ಡಾ.ಗೊ.ರು.ಚನ್ನಬಸಪ್ಪ ಅವರಿಗೆ ಸಿದ್ಧಗಂಗಾಶ್ರೀ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಮೈಸೂರಿನ ಸಾಹಿತಿ ಡಾ ಹೆಚ್.ಟಿ.ಶೈಲಜಾ ಹಾಗೂ ತುಮಕೂರಿನ ಸಮಾಜ ಸೇವಕ ಜಿ.ಎನ್.ಬಸವರಾಜಪ್ಪ ಅವರಿಗೆ ಸಿದ್ಧಗಂಗಾ ಶಿವಕುಮಾರ ಶ್ರೀ ಪ್ರಶಸ್ತಿಯನ್ನ ಪ್ರದಾನ ಮಾಡಲಾಗುವುದು. ಅಲ್ಲದೇ ಸಂಜೆ 6 ಗಂಟೆಗೆ ಇದೇ ವೇದಿಕೆಯಲ್ಲಿ ವಿವಿಧ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

    ಈ ಕಾರ್ಯಕ್ರಮದಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಭಕ್ತರು ಸೇರುವ ನೀರಿಕ್ಷೆಯನ್ನು ಮಠದ ಆಡಳಿತ ಮಂಡಳಿ ಇಟ್ಟುಕೊಂಡಿದೆ. ಬರುವಂತಹ ಭಕ್ತರಿಗೆ ತಿಂಡಿ, ಮಧ್ಯಾಹ್ನ ಹಾಗೂ ರಾತ್ರಿ ಊಟದ ವ್ಯವಸ್ಥೆ ಕೂಡ ಮಾಡಲಾಗಿದೆ. ಈಗಾಗಲೇ ಮಠದ ಆವರಣದಲ್ಲಿ ಉಪಾಹಾರ ಸಿದ್ಧಗೊಂಡಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಇಡೀ ಮಠ ಸುತ್ತಲೂ ಹಾಗೂ ಒಳಗೆ ಪೊಲೀಸ್ ವ್ಯವಸ್ಥೆ ನಿಯೋಜಿಸಲಾಗಿದೆ.ಇದನ್ನೂ ಓದಿ: ದಿನ ಭವಿಷ್ಯ 21-01-2025

     

  • ಚುನಾವಣೆ ಬೆನ್ನಲ್ಲೇ ತುಮಕೂರು ಸಿದ್ಧಗಂಗಾ ಮಠಕ್ಕೆ ಶಿವಣ್ಣ ದಂಪತಿ ಭೇಟಿ!

    ಚುನಾವಣೆ ಬೆನ್ನಲ್ಲೇ ತುಮಕೂರು ಸಿದ್ಧಗಂಗಾ ಮಠಕ್ಕೆ ಶಿವಣ್ಣ ದಂಪತಿ ಭೇಟಿ!

    – ಚುನಾವಣೆಯ ಫಲಿತಾಂಶ ಗೀತಾಳ ಪರವಾಗಿರಲಿದೆ ಎಂದ ನಟ

    ತುಮಕೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್‌ (Geetha Shivarajkumar) ಅವರಿಂದು ಇಲ್ಲಿನ ಸಿದ್ಧಗಂಗಾ ಮಠಕ್ಕೆ (Siddaganga Mutt) ಭೇಟಿ ನೀಡಿ, ಶಿವಕುಮಾರ ಸ್ವಾಮೀಜಿ ಗದ್ದುಗೆಯ ದರ್ಶನದ ಪಡೆದರು. ಬಳಿಕ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ಶಿವಮೊಗ್ಗದ (Shivamogga) ಜನ ನನ್ನ ಕೈ ಬಿಡುವುದಿಲ್ಲ ಎಂಬ ನಂಬಿಕೆಯಿದೆ. ಪ್ರಚಾರ ಕಾರ್ಯವೂ ಭರದಿಂದ ಸಾಗುತ್ತಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಎಲ್ಲ ವರ್ಗದ ಜನರಿಗೆ ತಲುಪಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಆಶಯ ಈಡೇರಿದೆ ಎಂದು ರಾಜ್ಯ ಸರ್ಕಾರದ ಸಾಧನೆಗಳನ್ನು ಶ್ಲಾಘಿಸಿದರು. ಇದನ್ನೂ ಓದಿ: ಕಾಂಗ್ರೆಸ್‌ಗೆ ತನ್ನ ಸದಸ್ಯನ ಮಗಳನ್ನೇ ರಕ್ಷಣೆ ಮಾಡೋಕೆ ಆಗ್ಲಿಲ್ಲ: ನೇಹಾ ಹತ್ಯೆ ಖಂಡಿಸಿದ ಮೋದಿ

    ಶಿವಮೊಗ್ಗದಲ್ಲಿ ಇಂದಿಗೂ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಆಗಿಲ್ಲ. ಬಗರ್‌ಹುಕುಂ, ಕುಡಿಯುವ ನೀರು, ರಸ್ತೆ-ಚರಂಡಿ ಹೀಗೆ ಹಲವು ತೊಂದರೆಗಳಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಗೀತಾ ಅವರು ಗೆದ್ದರೆ ಇದಕ್ಕೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ಹೆಚ್‌.ಡಿ.ರೇವಣ್ಣ ಎ1, ಪ್ರಜ್ವಲ್‌ ರೇವಣ್ಣ ಎ2 ಆರೋಪಿ – ಮನೆ ಕೆಲಸದಾಕೆಯಿಂದ ದೂರು

    ಪತಿಯಾಗಿ ಗೀತಾಗೆ ಬೆಂಬಲ ಸೂಚಿಸುವುದು ನನ್ನ ಜವಾಬ್ದಾರಿ. ಈ ಸಲ ಎಲ್ಲ ಕಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚುನಾವಣೆಯ ಫಲಿತಾಂಶ ಗೀತಾಳ ಪರವಾಗಿ ಇರಲಿದೆ ಎಂಬ ನಂಬಿಕೆ ಇದೆ. ತಂದೆಯವರು ಮಠದ ಬಗ್ಗೆ ಅಪಾರ ಗೌರವ ಹೊಂದಿದ್ದರು. ಇಲ್ಲಿನ ಪರಿಸರ ನನಗೆ ಇಷ್ಟ. ಆದ್ದರಿಂದ ಶ್ರೀಗಳ ಆಶೀರ್ವಾದ ಪಡೆಯಲು ಬಂದಿದ್ದೇವೆಂದು ತಿಳಿಸಿದರು. ಇದನ್ನೂ ಓದಿ: SC-ST ಸಮುದಾಯಗಳಿಗೆ ಸೇರಬೇಕಿದ್ದ 11,000 ಕೋಟಿ ಹಣವನ್ನ ಕಾಂಗ್ರೆಸ್ ನುಂಗಿ ನೀರು ಕುಡಿದಿದೆ: ಮೋದಿ ಕೆಂಡ

    ಈ ಸಂದರ್ಭದಲ್ಲಿ ಶಿವಮೊಗ್ಗ ಕ್ಷೇತ್ರದ ಉಸ್ತುವಾರಿ ಅನಿಲ್‌ಕುಮಾರ್‌ ತಡಕಲ್‌, ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ವಿಜಯ ರಾಘವೇಂದ್ರ, ಮಠದ ಆಡಳಿತಾಧಿಕಾರಿ ನಾಗರಾಜ, ಮುಖಂಡರಾದ ರಾಧಾ ವಿಜಯ್, ದಯಾನಂದ ಇತರರು ಹಾಜರಿದ್ದರು.

  • ನಡೆದಾಡುವ ದೇವರ ಗದ್ದುಗೆ ದರ್ಶನ ಪಡೆದ ಗೃಹ ಸಚಿವ ಅಮಿತ್ ಶಾ

    ನಡೆದಾಡುವ ದೇವರ ಗದ್ದುಗೆ ದರ್ಶನ ಪಡೆದ ಗೃಹ ಸಚಿವ ಅಮಿತ್ ಶಾ

    ತುಮಕೂರು: ನಡೆದಾಡುವ ದೇವರು ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ 115ನೇ ಜನ್ಮದಿನೋತ್ಸವ ಹಿನ್ನೆಲೆ ತುಮಕೂರಿನಲ್ಲಿರುವ ಸಿದ್ದಗಂಗಾ ಮಠಕ್ಕೆ ಕೇಂದ್ರ ಸಚಿವ ಅಮಿತ್ ಶಾ ಅವರು ಭೇಟಿ ನೀಡಿದ್ದಾರೆ.

    ತುಮಕೂರು ವಿವಿಯ ಹೆಲಿಪ್ಯಾಡಲ್ಲಿ ಇಳಿದ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆಗರ ಜ್ಞಾನೇಂದ್ರ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವಾರು ಬಿಜೆಪಿ ನಾಯಕರು ಹೂಗುಚ್ಛ ನೀಡಿ ಸ್ವಾಗತಿಸಿದರು. ಇದನ್ನೂ ಓದಿ: ಇಂದು ಶಿವಕುಮಾರ ಶ್ರೀಗಳ 115 ನೇ ಜನ್ಮ ದಿನೋತ್ಸವ – ಪೂಜಾ ಕೈಂಕರ್ಯಗಳು ಆರಂಭ

    ನಂತರ ಕಾರಿನ ಮೂಲಕ ರಸ್ತೆ ಮಾರ್ಗವಾಗಿ ಸಿದ್ದಗಂಗಾ ಮಠಕ್ಕೆ ಆಗಮಿಸಿದ ಅಮಿತ್ ಶಾ ಅವರು, ಶ್ರೀಗಳ ಗದ್ದುಗೆಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಸಿದ್ದಗಂಗಾ ಮಠದಲ್ಲಿ ನಡೆದಾಡುವ ದೇವರ ಬಸವ ಭಾರತ ಹೆಸರಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವರಾದ ಖೂಬಾ, ಸಂಸದ ಜಿ.ಎಸ್.ಬಸವರಾಜ್ ಹಾಗೂ ಸಿದ್ದಗಂಗಾ ಮಠದ ಸಿದ್ದಲಿಂಗೇಶ್ವರ ಸ್ವಾಮೀಜಿ ಸೇರಿದಂತೆ ಹಲವಾರು ಸಾಧು ಸಂತರು ಭಾಗವಹಿಸಿದ್ದರು. ಅಲ್ಲದೇ ವೇದಿಕೆ ಮುಂಭಾಗದಲ್ಲಿ ಸಾರ್ವಜನಿಕರು ಕುಳಿತುಕೊಳ್ಳಲು 10 ಸಾವಿರಕ್ಕೂ ಹೆಚ್ಚು ಆಸನದ ವ್ಯವಸ್ಥೆ ಮಾಡಲಾಗಿತ್ತು. ಇದನ್ನೂ ಓದಿ: ಸಿದ್ದಗಂಗಾ ಮಠಕ್ಕೆ ರಾಹುಲ್‌ ಗಾಂಧಿ ಭೇಟಿ

    ಇಂದು ಲಿಂಗೈಕ್ಯ ಶಿವಕುಮಾರ ಶ್ರೀಗಳ ಜನ್ಮದಿನೋತ್ಸವ ಹಿನ್ನೆಲೆ ಸುಮಾರು 1.5 ರಿಂದ 2 ಲಕ್ಷ ಭಕ್ತಾದಿಗಳಿಗೆ ಎಂಟು ಕಡೆಗಳಲ್ಲಿ ಉಪ್ಪಿಟ್ಟು, ಕೇಸರಿಬಾತ್, ಬೂಂದಿ ಪಾಯಸ, ಅನ್ನಸಾಂಬಾರ್, ವಿವಿಧ ಖಾದ್ಯಗಳ ಊಟ, ತಿಂಡಿಯ ವ್ಯವಸ್ಥೆಗೊಳಿಸಲಾಗಿದೆ.

    ಇಂದು ಬೆಳಗ್ಗಿನಿಂದಲೇ ಸಿದ್ದಗಂಗಾ ಮಠದಲ್ಲಿ ಹಲವಾರು ಕಾರ್ಯಕ್ರಮಗಳು ನಡೆಯುತ್ತಿದ್ದು, ಅಮಿತ್ ಶಾ ಸಹ ಆಗಮಿಸಿದ್ದು, ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದುಕೊಟ್ಟಂತೆ ಆಗಿದೆ. ಅಮಿತ್ ಶಾ ಆಗಮನದ ಹಿನ್ನೆಲೆ 04 ಎಸ್‍ಪಿ, 10 ಡಿ.ವೈ.ಎಸ್‍ಪಿ, ಕೆ.ಎಸ್.ಆರ್.ಪಿ., ಡಿಆರ್ ಸೇರಿದಂತೆ 2 ಸಾವಿರ ಪೊಲೀಸರನ್ನು ನಿಯೋಜನೆಗೊಳಿಸಲಾಗಿದೆ.

  • ಮೀರಾಬಾಯಿ ಕೊಪ್ಪಿಕರ್‌ಗೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ

    ಮೀರಾಬಾಯಿ ಕೊಪ್ಪಿಕರ್‌ಗೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ

    ಬಾಗಲಕೋಟೆ: ಕರ್ನಾಟಕ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನೀಡುವ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಬಾಗಲಕೋಟೆಯ ಗಾಂಧಿವಾದಿ, ಸ್ವಾತಂತ್ರ್ಯ ಹೋರಾಟಗಾರ್ತಿ ಮೀರಾಬಾಯಿ ಕೊಪ್ಪಿಕರ್, ಹಾಗೂ ಸಿದ್ಧಗಂಗಾ ಶಿಕ್ಷಣ ಸಂಸ್ಥೆ ಹಾಗೂ ಸಿದ್ಧಗಂಗಾ ಮಠವನ್ನು ಆಯ್ಕೆ ಮಾಡಲಾಗಿದೆ.

    ಕರ್ನಾಟಕ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ 2020 ಮತ್ತು 2021 ನೇ ಸಾಲಿನ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಕಳೆದ ವರ್ಷದ ಪ್ರಶಸ್ತಿಯನ್ನು ಸರ್ಕಾರ ಪ್ರಕಟಿಸಿರಲಿಲ್ಲ. ಈ ವರ್ಷ ಕೋವಿಡ್ ಪ್ರಕರಣ ಕಡಿಮೆಯಾಗುತ್ತಾ ಬಂದಿರುವ ಹಿನ್ನೆಲೆಯಲ್ಲಿ, ಸರ್ಕಾರವು ಈಬಾರಿ ಪ್ರಶಸ್ತಿಗಳನ್ನು ಪ್ರದಾನ ಮಾಡಲು ಇಚ್ಚಿಸಿದೆ. ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ಕರ್ನಾಟಕ ಉಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಅಶೋಕ್ ಬಂಗಾರೆಪ್ಪಾ ಹಿಂಚಿಗೇರಿ ಇವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿತ್ತು. ಇದನ್ನೂ ಓದಿ: ಬಿಸಿಯೂಟ ಯೋಜನೆಗೆ ‘ಪಿಎಂ ಪೋಷಣ್’ ಮರುನಾಮಕರಣ ಮಾಡಿದ ಕೇಂದ್ರ

    siddaganga mutt

    ಆಯ್ಕೆ ಸಮಿತಿಯು 2020ರ ಸಾಲಿಗೆ ಬಾಗಲಕೋಟೆ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರಾದ ಮೀರಾಬಾಯಿ ಕೊಪ್ಪಿಕರ್ ಮತ್ತು 2021ನೇ ಸಾಲಿಗೆ ಶ್ರೀ ಸಿದ್ಧಗಂಗಾ ಶಿಕ್ಷಣ ಸಂಸ್ಥೆ ಹಾಗೂ ಶ್ರೀ ಸಿದ್ಧಗಂಗಾ ಮಠವನ್ನು ಪ್ರಶಸ್ತಿಗೆ ಆಯ್ಕೆಮಾಡಿದೆ. ಅಕ್ಟೋಬರ್ 2ರಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿಯಂದು ಬೆಂಗಳೂರಿನ ಗಾಂಧಿಭವನದಲ್ಲಿ ಹಮ್ಮಿಕೊಳ್ಳುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕೃತರಿಗೆ ತಲಾ ಐದು ಲಕ್ಷ ರೂ. ಹಾಗೂ ಸ್ಮರಣಿಕೆಯನ್ನು ನೀಡಿ ಗೌರವಿಸಲಾಗುತ್ತಿದೆ. ಮೀರಾಬಾಯಿ ಹುಬ್ಬಳ್ಳಿಯ ಅತ್ಯಂತ ಶ್ರೀಮಂತರಾಗಿದ್ದ ಕೊಪ್ಪಿಕರ್ ವಂಶದ ಕುಡಿ. ಇವರಿಗೆ 96 ವರ್ಷವಾಗಿದ್ದು, ಸದ್ಯ ಮುಧೋಳದಲ್ಲಿರುವ ವಾತ್ಸಲ್ಯ ಧಾಮದಲ್ಲಿ ವಾಸ್ತವ್ಯ ಮಾಡುತ್ತಿದ್ದಾರೆ.

    ಗಾಂಧಿವಾದಿಯಾಗಿದ್ದ ಕೊಪ್ಪಿಕರ್ ಇವರು ಇತ್ತೀಚಿನವರೆಗೂ ತಾವೇ ನೂಲು ನೇಯ್ದು ಅದರಲ್ಲಿ ವಸ್ತ್ರವನ್ನು ಮಾಡಿಕೊಳ್ಳುತ್ತಿದ್ದರು. ಈಗ ವಯಸ್ಸಾದ ನಿಮಿತ್ತ ನೇಯ್ಗೆ ಮಾಡುತ್ತಿಲ್ಲ. ಗಾಂಧಿವಾದಿಗಳಾಗಿದ್ದ ಮೀರಾಬಾಯಿ ಕೊಪ್ಪಿಕರ್ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಸಬರಮತಿ ಆಶ್ರಮದಲ್ಲಿ ಇದ್ದರು. ವಿನೋಬಾ ಭಾವೆಯವರ ಜೊತೆಗೂಡಿ ಭೂದಾನ ಚಳವಳಿಯಲ್ಲಿ ಪಾಲ್ಗೊಂಡು, ಕರ್ನಾಟಕದಿಂದ ಒಟ್ಟು 40 ಸಾವಿರ ಎಕರೆ ಭೂಮಿಯನ್ನು ದಾನ ಮಾಡಿಸುವಲ್ಲಿ ಯಶಸ್ವಿಯಾಗಿದ್ದರು.

    ಸಾವಯವ ಕೃಷಿ ಮಾಡುತ್ತಿದ್ದ ಇವರು ತಾವೇ ಬೆಳೆದ ವಸ್ತುಗಳನ್ನು ಮಾರಿ ಅದರಲ್ಲಿ ಬಂದ ಆದಾಯದಿಂದ ಜೀವನ ಮಾಡುತ್ತಿದ್ದರು. ವಾತ್ಸಲ್ಯ ಧಾಮ ವಿನೋಬಾ ಭಾವೆಯವರ ತಾಯಿ ಮೂಲ ಜಮಖಂಡಿಯವರಾದ ರುಕ್ಮಿಣಿ ಭಾವೆಯವರದ್ದಾಗಿದ್ದು, ಮುಧೋಳದಲ್ಲಿ ಅವರು 2.5 ಎಕರೆ ಜಾಗವನ್ನು ಕೊಂಡು ಅದರಲ್ಲಿ ಆಶ್ರಮ ನಿರ್ಮಿಸಿದ್ದರು. ಆರಂಭದಲ್ಲಿ 20 ಜನರಿದ್ದರು. ಈಗ ಮೂರು ಜನರಷ್ಟೇ ವಾಸ ಮಾಡುತಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮತ್ತಷ್ಟು ಇಳಿಕೆ ಕಂಡ ಕೊರೊನಾ ಪ್ರಕರಣ – ಇಂದು 539 ಕೇಸ್, 17 ಸಾವು

    ಕೊಪ್ಪಿಕರ್ ಅವರಿಗೆ 2008 ರಲ್ಲಿ ಇವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿತ್ತು. ಪ್ರಶಸ್ತಿಯನ್ನು ಇವರಿಗೆ ಕೊಡಲು ಆಗಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರೇ ಆಶ್ರಮಕ್ಕೆ ಆಗಮಿಸಿ, ಚೆಕ್ ಹಾಗೂ ಮೂರು ಗ್ರಾಂ ಬಂಗಾರದ ಪದಕವನ್ನು ಕೊಟ್ಟಿದ್ದರು. ಅವರು ನೀಡಿದ ಚೆಕ್ ಹಣ ಇನ್ನೂ ಬ್ಯಾಂಕ್‍ನಲ್ಲಿದ್ದು, ಅದನ್ನು ಜನತೆಯ ಕಲ್ಯಾಣಕ್ಕೆ ಬಳಸಲು ಹೇಳಿದ್ದಾರೆ. ಬಂಗಾರದ ಪದಕವನ್ನು ಬಡವರಿಗೆ ದಾನ ಮಾಡಿದ್ದಾರೆ.

  • ಶ್ರೀಗಳ ಪುಣ್ಯಾರಾಧನೆಗೆ 25 ಟನ್ ಹಣ್ಣು, ತರಕಾರಿ ನೀಡಿದ್ರು ಕೋಲಾರದ ಭಕ್ತರು!

    ಶ್ರೀಗಳ ಪುಣ್ಯಾರಾಧನೆಗೆ 25 ಟನ್ ಹಣ್ಣು, ತರಕಾರಿ ನೀಡಿದ್ರು ಕೋಲಾರದ ಭಕ್ತರು!

    ಕೋಲಾರ: ತುಮಕೂರಿನ ಸಿದ್ಧಗಂಗಾ ಮಠದ ನಡೆದಾಡುವ ದೇವರು, ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಗಳ ಪುಣ್ಯಸ್ಮರಣೆಗೆ ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ 25 ಟನ್ ಹಣ್ಣು ಮತ್ತು ತರಕಾರಿಗಳನ್ನು ಕಳುಹಿಸಿಕೊಡಲಾಯಿತು.

    ನಾಳೆ ಸಿದ್ದಗಂಗಾ ಶ್ರೀಗಳ 11ನೇ ದಿನದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತಾಧಿಗಳು ಸೇರುವುದರಿಂದ ಮಠದಲ್ಲಿ ಅನ್ನ ದಾಸೋಹ ಮಾಡುವುದಕ್ಕೆ ಉಪಯುಕ್ತವಾಗಲೆಂದು ಹಣ್ಣು ತರಕಾರಿಗಳನ್ನ ಕಳುಹಿಸಿಕೊಡಲಾಯಿತು. ಕೋಲಾರದ ಎಪಿಎಂಸಿ ಮಾರುಕಟ್ಟೆಯ ತರಕಾರಿ ದಲ್ಲಾಳಿಗಳು, ವರ್ತಕರು, ರೈತರು ಸೇರಿ 10 ಟನ್ ಟೊಮ್ಯಾಟೊ, 15 ಟನ್ ವಿವಿಧ ಬಗೆಬಗೆಯ ತರಕಾರಿಗಳಾದ ಮೂಲಂಗಿ, ಬೀನ್ಸ್, ಹೂಕೋಸು, ಕ್ಯಾರೆಟ್ ಹಾಗೂ ಅಕ್ಕಿ ಮುಂತಾದವುಗಳನ್ನು 2 ಗೂಡ್ಸ್ ಲಾರಿಗಳ ಮೂಲಕ ಸಿದ್ಧಗಂಗಾ ಮಠಕ್ಕೆ ಕಾಣಿಕೆ ರೂಪದಲ್ಲಿ ನೀಡಿದ್ದಾರೆ. ಇದನ್ನೂ ಓದಿ: ಶ್ರೀಗಳ ಪುಣ್ಯಾರಾಧನೆಗೆ ಭಕ್ತರಿಂದ 11 ಟನ್ ಅಕ್ಕಿ ಕಾಣಿಕೆ!

    ಶ್ರೀ ಶಿವಕುಮಾರ ಶ್ರೀಗಳು ಮಠಕ್ಕೆ ಬರುವ ಭಕ್ತರು ಹಸಿದು ವಾಪಸ್ ಹೋಗಬಾರದೆಂದು ಅನ್ನ ದಾಸೋಹವನ್ನು ಮಾಡಿಸುತ್ತಿದ್ದರು. ಅಲ್ಲದೆ ಮಠಕ್ಕೆ ಬರುವ ಲಕ್ಷಾಂತರ ಭಕ್ತರಿಗೆ ಅನ್ನ, ವಿದ್ಯೆ, ಆಶ್ರಯ ನೀಡಿ ತ್ರಿವಿಧ ದಾಸೋಹಿ ಎಂದು ಖ್ಯಾತಿ ಪಡೆದಿದ್ದಾರೆ. ಹಾಗಾಗಿ ಸ್ವಾಮೀಜಿಗಳ ಸೇವೆ ಹೀಗೆಯೇ ಮುಂದುವರಿಯಬೇಕೆಂದು, ಅವರು ಅಗಲಿದ ನಂತರವೂ ಮಠದಲ್ಲಿ ದಾಸೋಹಕ್ಕೆ ಯಾವುದೇ ತೊಂದರೆಯಾಗಬಾರದೆಂದು ಕೋಲಾರದ ಮಾರುಕಟ್ಟೆ ವತಿಯಿಂದ ಈ ಸಹಾಯವನ್ನು ಮಾಡಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಡೆದಾಡುವ ದೇವರ ಆರೋಗ್ಯದಲ್ಲಿ ಚೇತರಿಕೆ

    ನಡೆದಾಡುವ ದೇವರ ಆರೋಗ್ಯದಲ್ಲಿ ಚೇತರಿಕೆ

    ತುಮಕೂರು: ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಬುಧವಾರ ರಾತ್ರಿ ಮಠದಲ್ಲಿ ಚಿಕಿತ್ಸೆ ನೀಡಲಾಗಿದೆ. ಸದ್ಯಕ್ಕೆ ಸ್ವಾಮಿಜಿಗಳ ಆರೋಗ್ಯದಲ್ಲಿ ಚೇತರಿಕೆ ಕಾಣಿಸಿದೆ.

    ಬಿಜಿಎಸ್ ಆಸ್ಪತ್ರೆಯ ಡಾ.ರವೀಂದ್ರ ಅವರ ತಂಡ ಬಂದು ತಪಾಸಣೆ ನಡೆಸಿ ಚಿಕಿತ್ಸೆಯನ್ನು ನೀಡಿದೆ. ನಡೆದಾಡುವ ದೇವರು ಚೇತರಿಸಿಕೊಂಡಿದ್ದಾರೆ. ಸಿದ್ದಗಂಗಾ ಶ್ರೀಗಳು ಆರೋಗ್ಯರಾಗಿದ್ದಾರೆಂದು ಮಠದ ಕಿರಿಯ ಶ್ರೀಗಳು ಸ್ಪಷ್ಟಪಡಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀಗಳ ಆಪ್ತ ವೈದ್ಯ ಡಾ. ಪರಮೇಶ್ವರ್, ಹೃದಯ ಬಡಿತದಲ್ಲಿ ಸ್ವಲ್ಪ ಏರುಪೇರು ಕಂಡುಬಂದಿದ್ದು, ಜ್ವರದಿಂದ ಬಳಲುತ್ತಿದ್ದರು. ಬಳಿಕ ಬಿಜಿಎಸ್ ಆಸ್ಪತ್ರೆಯ ಡಾ.ರವೀಂದ್ರರವರ ತಂಡ ಬಂದು ತಪಾಸಣೆ ನಡೆಸಿ ಏನು ತೊಂದರೆ ಇಲ್ಲ ಎಂದು ತಿಳಿಸಿದ್ದಾರೆ. ಇಂಜೆಕ್ಷನ್ ನೀಡಿದ ಬಳಿಕ ಸ್ವಾಮೀಜಿ ಕೂಡ ಆರಾಮಗಿದ್ದಾರೆ. ಪೂಜೆಯನ್ನು ಕೂಡ ಮಾಡಿದ್ದಾರೆ ಎಂದು ಹೇಳಿದ್ದಾರೆ.

    2018 ಜನವರಿಯಲ್ಲಿ ಶ್ರೀಗಳ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿತ್ತು. ಅಂದು ಅಳವಡಿಸಿದ್ದ ಸ್ಟಂಟ್ ಗೆ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಡಿಸೆಂಬರ್ 1ರಂದು ಬಿಜಿಎಸ್ ಆಸ್ಪತ್ರೆಗೆ ಕರೆತರಲಾಗಿತ್ತು. ಆಸ್ಪತ್ರೆಗೆ ಆಗಮಿಸಿದ್ದ ಶ್ರೀಗಳು ವ್ಹೀಲ್ ಚೇರ್ ನಲ್ಲಿ ಕುಳಿತುಕೊಳ್ಳಲು ಒಪ್ಪದೇ ನಡೆದುಕೊಂಡು ಹೋಗುವ ಮೂಲಕ ಎಲ್ಲರನ್ನು ಅಚ್ಚರಿಸಿಗೊಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv