Tag: ಸಿದ್ಧಾರೂಢ ಮಠ

  • ಒಂದೇ ತಿಂಗಳಲ್ಲಿ ಸಿದ್ಧಾರೂಢ ಮಠದಲ್ಲಿ 27.13 ಲಕ್ಷ ನಗದು, ಬೆಳ್ಳಿ ಬಂಗಾರ ಸಂಗ್ರಹ

    ಒಂದೇ ತಿಂಗಳಲ್ಲಿ ಸಿದ್ಧಾರೂಢ ಮಠದಲ್ಲಿ 27.13 ಲಕ್ಷ ನಗದು, ಬೆಳ್ಳಿ ಬಂಗಾರ ಸಂಗ್ರಹ

    ಹುಬ್ಬಳ್ಳಿ: ಉತ್ತರ ಕರ್ನಾಟಕದ ಪ್ರಸಿದ್ಧ ಮತ್ತು ಹುಬ್ಬಳ್ಳಿ ಧಾರವಾಡ ಆರಾಧ್ಯದೈವ ಶ್ರೀಸಿದ್ಧಾರೂಢ ಮಠದಲ್ಲಿ ಒಂದೇ ತಿಂಗಳಲ್ಲಿ 27.13 ಲಕ್ಷರೂಪಾಯಿ ಕಾಣಿಕೆ ಸಂಗ್ರಹವಾಗಿದೆ.

    ಏ.20 ರಿಂದ ಮೇ.25ರ ಅಂದರೆ 35 ದಿನಗಳಲ್ಲಿ ಎಲ್ಲಾ ಪೆಟ್ಟಿಗೆಯಲ್ಲಿ ಸಂಗ್ರಹವಾದ ಮೊತ್ತಯಿದಾಗಿದೆ. ಬ್ಯಾಂಕ್ ಆಫ್ ಇಂಡಿಯಾ, ಸಿದ್ಧಾರೂಢನಗರ ಶಾಖೆಯ ಮ್ಯಾನೇಜರ್ ಮತ್ತು ಸಿಬ್ಬಂದಿ, ನೂರಾರು ಭಕ್ತರ ಸಮ್ಮುಖದಲ್ಲಿ ಕಾಣಿಕೆ ಪೆಟ್ಟಿಗೆಗಳನ್ನು ತೆರೆಯಲಾಗಿದೆ. ಎಲ್ಲಾ ಪೆಟ್ಟಿಗೆಗಳಲ್ಲಿ 27.13 ಲಕ್ಷ ನಗದು ಹಣ 17,711 ರೂ ಮೌಲ್ಯದ ಬಂಗಾರ ಮತ್ತು ಬೆಳ್ಳಿ ಸಾಮಗ್ರಿಗಳನ್ನು ಭಕ್ತರು ಮಠಕ್ಕೆ ಸಮರ್ಪಣೆ ಮಾಡಿದ್ದಾರೆ.

    ಈ ಸಂದರ್ಭದಲ್ಲಿ ಟ್ರಸ್ಟ್ ಕಮಿಟಿಯ ಚೇರಮನ್ ಧರಣೇಂದ್ರ ಭ.ಜವಳಿ , ವೈಸ್ ಚೇರಮನ್ ಡಾ.ಗೋವಿಂದ ಜಿ.ಮಣ್ಣೂರ ಸೇರಿದಂತೆ ವಿವಿಧ ಪದಾಧಿಕಾರಿಗಳಿದ್ದರು. ಇದನ್ನೂ ಓದಿ: ಫ್ರಾನ್ಸ್‌ನಲ್ಲಿ ಸಾಧನೆ ಮಾಡಿ ಬಂದ ಧಾರವಾಡದ ಆಟಗಾರ್ತಿ

  • ಪ್ರಸಿದ್ಧ ಸಿದ್ಧಾರೂಢ ಮಠದಲ್ಲಿ ಇಂದಿನ ವಿಶೇಷ ಪೂಜೆಯ ಜೊತೆಗೆ ಮಂತ್ರಘೋಷ

    ಪ್ರಸಿದ್ಧ ಸಿದ್ಧಾರೂಢ ಮಠದಲ್ಲಿ ಇಂದಿನ ವಿಶೇಷ ಪೂಜೆಯ ಜೊತೆಗೆ ಮಂತ್ರಘೋಷ

    ಹುಬ್ಬಳ್ಳಿ: ಪ್ರಸಿದ್ಧ ಸಿದ್ಧಾರೂಢ ಮಠದಲ್ಲಿ ಬೆಳಗ್ಗಿನ ಜಾವದಲ್ಲಿ ಸೋಮವಾರದ ವಿಶೇಷ ಪೂಜೆಯ ಜೊತೆಗೆ ಓಂ ನಮಃ ಶಿವಾಯ ಮಂತ್ರಘೋಷ, ಭಜನೆ, ಘಂಟಾ ವಾದ್ಯ ಮೊಳಗಿದೆ.

    ಸೋಮವಾರ ಬ್ರಾಹ್ಮೀ ಮುಹೂರ್ತದಲ್ಲಿ ಸಿದ್ಧಾರೂಢರಿಗೆ ವಿಶೇಷ ಪೂಜೆ ನಡೆಯುವುದು ವಾಡಿಕೆ. ಇದರ ಜೊತೆಗೆ ಶ್ರೀರಾಮಸೇನೆ ಕರೆಕೊಟ್ಟಿರುವ ಸುಪ್ರಭಾತ ಅಭಿಯಾನಕ್ಕೆ ಸಿದ್ಧಾರೂಢ ಮಠದ ಆಡಳಿತ ಮಂಡಳಿ ಬೆಂಬಲ ನೀಡಿತ್ತು. ಹೀಗಾಗಿ ನೂರಾರು ಭಕ್ತರಿಂದ ವಿಶೇಷ ಪೂಜೆ ಜೊತೆಗೆ ಭಜನೆ ನಡೆಯಿತು.

    ಪ್ರತಿ ವಾರಕ್ಕಿಂತ ಈ ವಾರ ಶ್ರೀರಾಮಸೇನೆ ಸದಸ್ಯರ ಜೊತೆಗೆ ನೂರಾರು ಭಕ್ತರು ಸಿದ್ಧಾರೂಢರ ದರ್ಶನ ಪಡೆದಿದ್ದು ವಿಶೇಷವಾಗಿತ್ತು. ಇದನ್ನೂ ಓದಿ: ಹಳೇ ಹುಬ್ಬಳ್ಳಿಯ ದಿಡ್ಡಿ ಹನುಮಂತ ದೇವಸ್ಥಾನದಲ್ಲಿ ಮೊಳಗಿದ ಸುಪ್ರಭಾತ

  • ಸಿದ್ಧಾರೂಢ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಶ್ವಥ್ ನಾರಾಯಣ್

    ಸಿದ್ಧಾರೂಢ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಶ್ವಥ್ ನಾರಾಯಣ್

    ಹುಬ್ಬಳ್ಳಿ: ಪ್ರವಾಸದಲ್ಲಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರು ಇಂದು ಬೆಳಗ್ಗೆಯೇ ಹುಬ್ಬಳ್ಳಿಯ ಆರಾಧ್ಯ ದೈವವಾದ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿ ಸಿದ್ಧಾರೂಢರು ಮತ್ತು ಗುರುನಾಥರೂಢರ ಗದ್ದುಗೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

    ನಗರಕ್ಕೆ ಭೇಟಿ ನೀಡಿದ ಅವರು, ಇಂದು ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇದರ ಮಧ್ಯೆಯೇ ಬೆಳಂಬೆಳಗ್ಗೆ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ್ದಾರೆ. ಉಭಯ ಶ್ರೀಗಳ ಗದ್ದುಗೆ ದರ್ಶನ ಪಡೆದುಕೊಂಡು ವಿಶೇಷ ಪೂಜೆ ಸಲ್ಲಿಸಿದರು.

    ಡಿಸಿಎಂ ಅಶ್ವಥ್ ನಾರಾಯಣ್ ನಗರದಲ್ಲಿ ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇಂದು ಬೆಳಗ್ಗೆ ಕರ್ನಾಟಕ ವಿಶ್ವ ವಿದ್ಯಾಲಯದ ಸಿಂಡಿಕೇಟ್ ಹಾಲ್‍ನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020ಕ್ಕೆ ಸಂಬಂಧಿಸಿದಂತೆ ಶಿಕ್ಷಣ ತಜ್ಞರೊಂದಿಗಿನ ಚರ್ಚೆಯಲ್ಲಿ ಪಾಲ್ಗೊಳ್ಳುವರು.

    ಬೆಳಗ್ಗೆ 10.30ಕ್ಕೆ ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿ ಮತ್ತು ಬಳ್ಳಾರಿ ಜಿಲ್ಲೆಯ ಶಾಲೆಗಳಿಗೆ ಕೋವಿಡ್ 19ರ ಕಿಟ್‍ಗಳನ್ನು ಪೂರೈಸುವ ವಾಹನಗಳಿಗೆ ಚಾಲನೆ ನೀಡುವರು. ಬೆಳಗ್ಗೆ 11.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಯುನಿವರ್ಸಿಟಿ ಸೈಂಟಿಫಿಕ್ ಇನ್‍ಸ್ಟ್ರುಮೆಂಟೆನೇಷನ್ ಸೆಂಟರ್ (ಯುಎಸ್‍ಐಸಿ) ಗೆ ಭೇಟಿ ನೀಡುವರು. ಮಧ್ಯಾಹ್ನ 12.30ಕ್ಕೆ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಕೋವಿಡ್ ವ್ಯಾಕ್ಸಿನೇಷನ್ ಕೇಂದ್ರಕ್ಕೆ, ಮಧ್ಯಾಹ್ನ 3.15ಕ್ಕೆ ಹುಬ್ಬಳ್ಳಿಯ ದೇಶಪಾಂಡೆ ಫೌಂಡೇಶನ್ ಹಾಗೂ ಸಂಜೆ 5.30ಕ್ಕೆ ನಗರದ ಐಟಿ ಪಾರ್ಕ್‍ಗೆ ಭೇಟಿ ನೀಡುವರು. ಸಂಜೆ 7 ಗಂಟೆಗೆ ಕುಸುಗಲ್ ರಸ್ತೆಯ ಶ್ರೀನಿವಾಸ ಗಾರ್ಡನ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು.

  • ಸಿದ್ಧಾರೂಢ ಮಠದಲ್ಲಿ 35 ದಿನಗಳಲ್ಲಿ 18.63 ಲಕ್ಷ ದೇಣಿಗೆ ಸಂಗ್ರಹ

    ಸಿದ್ಧಾರೂಢ ಮಠದಲ್ಲಿ 35 ದಿನಗಳಲ್ಲಿ 18.63 ಲಕ್ಷ ದೇಣಿಗೆ ಸಂಗ್ರಹ

    ಹುಬ್ಬಳ್ಳಿ: ಉತ್ತರ ಕರ್ನಾಟಕದ ಆರಾಧ್ಯದೈವ ವಾಣಿಜ್ಯ ನಗರಿಯ ಸದ್ಗುರು ಶ್ರೀ ಸಿದ್ಧಾರೂಢರ ಮಠದಲ್ಲಿ ಮಾರ್ಚ್ 18 ರಿಂದ ಏಪ್ರಿಲ್ 22ರ ವರೆಗೆ 18,63,527 ರೂಪಾಯಿ ದೇಣಿಗೆ ಸಂಗ್ರಹವಾಗಿದೆ.

    ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಶ್ರೀ ಸಿದ್ಧಾರೂಢ ಸ್ವಾಮಿ ಟ್ರಸ್ಟ್ ಕಮಿಟಿಯ ನೇತೃತ್ವದಲ್ಲಿ ಭಕ್ತಾದಿಗಳ ಸಮ್ಮುಖದಲ್ಲಿ ಹುಂಡಿ ತೆರದು ಏಣಿಕೆ ಮಾಡಲಾಗಿದ್ದು, 35 ದಿನಗಳಲ್ಲಿ 18,63,527 ರೂಪಾಯಿ ದೇಣಿಗೆ ಸಂಗ್ರಹವಾಗಿದೆ. ವಾಣಿಜ್ಯ ನಗರಿ ಮಾತ್ರವಲ್ಲದೆ ಧಾರವಾಡ, ಗದಗ, ಹಾವೇರಿ, ಬೆಳಗಾವಿ ಸೇರಿದಂತೆ ರಾಜ್ಯ ಅಂತರರಾಜ್ಯದಲ್ಲಿ ಕೂಡ ಶ್ರೀ ಸಿದ್ಧಾರೂಢರ ಭಕ್ತರಿದ್ದು, ಈ ಬಾರಿ ಕೊರೊನಾ ಸಮಯದಲ್ಲಿಯೂ ದೊಡ್ಡ ಮಟ್ಟದಲ್ಲಿ ದೇಣಿಗೆ ಸಂಗ್ರಹವಾಗಿದೆ.

    ಎಣಿಕೆ ಮೇಲ್ವಿಚಾರಣೆಯನ್ನು ಟ್ರಸ್ಟ್ ಅಧ್ಯಕ್ಷರಾದ ಡಿ.ಡಿ.ಮಾಳಗಿ, ಉಪಾಧ್ಯಕ್ಷ ಜಗದೀಶ್ ಮಗಜಿಕೊಂಡಿ ಸೇರಿದಂತೆ ಟ್ರಸ್ಟ್ ಸದಸ್ಯರು ವಹಿಸಿಕೊಂಡಿದ್ದರು.

  • ಏಕಾಂತದ ವಿಡಿಯೋ ಸೆರೆ ಹಿಡಿದು ಸಿದ್ಧಾರೂಢ ಮಠದ ಟ್ರಸ್ಟಿಗಳಿಗೆ ಬ್ಲ್ಯಾಕ್ ಮೇಲ್

    ಏಕಾಂತದ ವಿಡಿಯೋ ಸೆರೆ ಹಿಡಿದು ಸಿದ್ಧಾರೂಢ ಮಠದ ಟ್ರಸ್ಟಿಗಳಿಗೆ ಬ್ಲ್ಯಾಕ್ ಮೇಲ್

    – 10 ಲಕ್ಷ ರೂ. ವಸೂಲಿ ಬಳಿಕ ಮತ್ತೆ ಬೇಡಿಕೆ

    ಹುಬ್ಬಳ್ಳಿ: ನಗರದ ಐತಿಹಾಸಿಕ ಸಿದ್ಧಾರೂಢ ಮಠದ ಟ್ರಸ್ಟಿಗಳನ್ನು ಬ್ಲ್ಯಾಕ್‍ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇ ಹುಬ್ಬಳ್ಳಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

    ಹುಬ್ಬಳ್ಳಿ ನಿವಾಸಿಗಳಾದ ಸಂತೋಷ್ ಪೂಜಾರಿ, ಸಂಜು, ಗಣೇಶ್ ಹಾಗೂ ಸುನೀಲ್ ಬಂಧಿತ ಆರೋಪಿಗಳು. ಸಿದ್ಧಾರೂಢ ಮಠದ ಟ್ರಸ್ಟಿ ಡಾ. ಬಸನಗೌಡ ಸಂಕನಗೌಡರ್ ಹಾಗೂ ಅಮರಗೋಳದ ವಿಜಯಲಕ್ಷ್ಮಿ ಹನಿಟ್ರ್ಯಾಪ್‍ಗೆ ಒಳಗಾದವರು. ಘಟನೆಯು ಕಳೆದ ತಿಂಗಳು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಡಾ. ಬಸನಗೌಡ ಸಂಕನಗೌಡರ್ ಅಮರಗೋಳದ ನಿವಾಸಿ ವಿಜಯಲಕ್ಷ್ಮಿ ಅವರ ಮನೆಗೆ ಸೆಪ್ಟೆಂಬರ್ 25ರಂದು ಹೋಗಿದ್ದರು. ಮನೆಯಲ್ಲಿ ಯಾರು ಇಲ್ಲದೆ ಇದ್ದಾಗ ಏಕಾಂತದಲ್ಲಿ ಕಾಲ ಕಳೆಯುತ್ತಿದ್ದರು. ಈ ದೃಶ್ಯವನ್ನು ಆರೋಪಿಗಳು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ. ಬಳಿಕ ಅವರ ಮೇಲೆ ಹಲ್ಲೆ ಮಾಡಿ, 10 ಲಕ್ಷ ರೂ. ಕೊಡಿ ಎಂದು ಒತ್ತಾಯಿಸಿದ್ದಾರೆ. ಒಂದು ವೇಳೆ ಹಣ ಕೊಡಿದಿದ್ದರೆ ನಿಮ್ಮ ಏಕಾಂತದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತೇವೆ. ಇಲ್ಲವೇ ಮಾಧ್ಯಮಗಳಿಗೆ ವಿಡಿಯೋ ನೀಡುತ್ತೇವೆ ಎಂದು ಬ್ಲ್ಯಾಕ್ ಮೇಲ್ ಮಾಡಿದ್ದಾರೆ.

    ಸಮಾಜದಲ್ಲಿ ತಮ್ಮ ಗೌರವ ಹಾಳಾಗುತ್ತದೆ ಎಂದು ಹೆದರಿದ ಟ್ರಸ್ಟಿಗಳು ಹಣ ನೀಡಲು ಒಪ್ಪಿಕೊಂಡಿದ್ದರು. ಅದರಂತೆ 9.50 ಲಕ್ಷ ರೂ.ವನ್ನು ಕೊಟ್ಟು ವಿಡಿಯೋ ನಾಶ ಮಾಡುವಂತೆ ಮನವಿ ಮಾಡಿಕೊಂಡಿದ್ದರು. ಆದರೆ ಆರೋಪಿಗಳು ಹೆಚ್ಚಿನ ಹಣದ ಆಸೆಗೆ ಬಿದ್ದು, ಮತ್ತೆ 10 ಸಾವಿರ ರೂ. ಪಡೆದಿದ್ದರು. ಇದರಿಂದ ಕಿರಿಕಿರಿಗೆ ಒಳಗಾದ ಸಂತ್ರಸ್ತರು ಪೊಲೀಸರಿಗೆ ದೂರು ನೀಡಿದ್ದರು.

    ಪ್ರಕರಣ ದಾಖಲಿಸಿಕೊಂಡ ಹಳೇ ಹುಬ್ಬಳ್ಳಿ ಪೊಲೀಸರು ತನಿಖೆ ಆರಂಭಿಸಿದಾಗ ಸತ್ಯ ಬೆಳಕಿಗೆ ಬಂದಿದೆ. ತಕ್ಷಣವೇ ಆರೋಪಿಗಳನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ.