Tag: ಸಿದ್ಧಾರ್ಥ್ ಆನಂದ್

  • ‘ಫೈಟರ್’ ಚಿತ್ರದಲ್ಲಿ ನಟಿಸಲು ಹೃತಿಕ್- ದೀಪಿಕಾ ಪಡುಕೋಣೆ ಪಡೆದ ಸಂಭಾವನೆ ಎಷ್ಟು?

    ‘ಫೈಟರ್’ ಚಿತ್ರದಲ್ಲಿ ನಟಿಸಲು ಹೃತಿಕ್- ದೀಪಿಕಾ ಪಡುಕೋಣೆ ಪಡೆದ ಸಂಭಾವನೆ ಎಷ್ಟು?

    ‘ಪಠಾಣ್’ (Pathaan) ಸೂಪರ್ ಸಕ್ಸಸ್ ನಂತರ ದೀಪಿಕಾ ಪಡುಕೋಣೆ ‘ಫೈಟರ್’ (Fighter) ಸಿನಿಮಾದಲ್ಲಿ ಹೃತಿಕ್ ಜೊತೆ ತೆರೆಹಂಚಿಕೊಳ್ತಿದ್ದಾರೆ. ಹೀಗಿರುವಾಗ ಚಿತ್ರತಂಡ ಬಗ್ಗೆ ಹೊಸ ಸುದ್ದಿಯೊಂದು ಹರಿದಾಡುತ್ತಿದೆ. ಕಲಾವಿದರ ಸಂಭಾವನೆಯಿಂದ ಚಿತ್ರದ ಬಜೆಟ್ ಮಿತಿ ಮಿರುತ್ತಿದೆ ಎಂದು ಸಿನಿಮಾ ವಿಶ್ಲೇಷಕ ಕಮಾಲ್ ಆರ್. ಖಾನ್ ಟ್ವೀಟ್ ಮಾಡಿದ್ದಾರೆ.

    ಬಾಲಿವುಡ್‌ನ ಬಹುನಿರೀಕ್ಷಿತ ಚಿತ್ರ ‘ಪಠಾಣ್’ಗೆ ಸಿದ್ಧಾರ್ಥ್ ಆನಂದ್ ನಿರ್ದೇಶನ ಮಾಡ್ತಿದ್ದಾರೆ. ಹೃತಿಕ್-ದೀಪಿಕಾ ಮೊದಲ ಬಾರಿಗೆ ಜೋಡಿಯಾಗಿ ನಟಿಸುತ್ತಿದ್ದಾರೆ. ಹಾಗಾಗಿ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಸ್ಟಾರ್ ಕಲಾವಿದರ ದುಬಾರಿ ಸಂಭಾವನೆ ವಿಷ್ಯವಾಗಿ ಫೈಟರ್ ಸುದ್ದಿಯಲ್ಲಿದೆ. ಇದನ್ನೂ ಓದಿ:ಬಜರಂಗದಳ ನಿಷೇಧ: ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ ನಟಿ ರಮ್ಯಾ

    ಹೃತಿಕ್ ರೋಷನ್ (Hrithik Roshan) ನಟನೆಯ ‘ಫೈಟರ್’ ಸಿನಿಮಾದ ಬಜೆಟ್ 350 ಕೋಟಿ ರೂಪಾಯಿ ತಲುಪಿದೆ. ಇದನ್ನು ಮರಳಿ ಪಡೆಯುವುದು ಬಹುತೇಕ ಅಸಾಧ್ಯ. ನಿರ್ದೇಶಕ ಸಿದ್ದಾರ್ಥ್ ಆನಂದ್ ಅವರು 40 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ. ಹೃತಿಕ್ ರೋಷನ್ ಸಂಭಾವನೆ 85 ಕೋಟಿ ರೂಪಾಯಿ, ದೀಪಿಕಾ ಪಡುಕೋಣೆ ಸಂಭಾವನೆ 20 ಕೋಟಿ ರೂಪಾಯಿ. ಇನ್ನುಳಿದ ಕಲಾವಿದರಿಗೆ 15 ಕೋಟಿ ರೂಪಾಯಿ ನೀಡಲಾಗುತ್ತಿದೆ. ಅಂದರೆ, ಸಂಭಾವನೆ ಮೊತ್ತವೇ 160 ಕೋಟಿ ರೂಪಾಯಿ ತಲುಪಲಿದೆ’ ಎಂದು ಕಮಾಲ್ ಆರ್.ಖಾನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ಈ ಚಿತ್ರದ ಬಜೆಜ್ ಕೈ ಮೀರಿ ಹೋಗಿದೆ ಎಂದಿದ್ದಾರೆ. ಈ ಸಂಭಾವನೆ ವಿಚಾರ ಅದೆಷ್ಟರ ಮಟ್ಟಿಗೆ ನಿಜಾ ಎಂಬುದನ್ನ ಚಿತ್ರತಂಡವೇ ಸ್ಪಷ್ಟಪಡಿಸಬೇಕಿದೆ.

    ಗಲ್ಲಾಪೆಟ್ಟಿಗೆಯಲ್ಲಿ ಪಠಾಣ್ ಕೋಟಿ ಕೋಟಿ ಲೂಟಿ ಮಾಡಿರೋದ್ರಿಂದ ಸಹಜವಾಗಿ ಸಿದ್ಧಾರ್ಥ್ ಆನಂದ್ ನಿರ್ದೇಶನದ ಫೈಟರ್ ಮೇಲೆ ನಿರೀಕ್ಷೆ ಡಬಲ್ ಆಗಿದೆ. ಮುಂದಿನ ದಿನಗಳಲ್ಲಿ ಸಿನಿಮಾ ಕಲಾವಿದರ ಸಂಭಾವನೆ ಮೀರಿ ಕಲೆಕ್ಷನ್ ಮಾಡುವ ‘ಫೈಟರ್’ ದಾಖಲೆ ಬರೆಯುತ್ತಾ ಎಂದು ಕಾದುನೋಡಬೇಕಿದೆ.

  • ಪಠಾಣ್ ನಿರ್ದೇಶಕನ ಸಿನಿಮಾಗೆ ಪ್ರಭಾಸ್ ಗ್ರೀನ್ ಸಿಗ್ನಲ್

    ಪಠಾಣ್ ನಿರ್ದೇಶಕನ ಸಿನಿಮಾಗೆ ಪ್ರಭಾಸ್ ಗ್ರೀನ್ ಸಿಗ್ನಲ್

    `ಬಾಹುಬಲಿ 2′ (Bahubali 2) ನಂತರ ಸಕ್ಸಸ್ ಸಿಗದೇ ಪ್ರಭಾಸ್ ಒದ್ದಾಡುತ್ತಿದ್ದಾರೆ. ಸಾಲು ಸಾಲು ಸಿನಿಮಾಗಳು ಪ್ರಭಾಸ್ ಕೈಯಲ್ಲಿದ್ದರು. ಕೆರಿಯರ್‌ನ ಮತ್ತೊಂದು ಬಿಗ್ ಬ್ರೇಕ್ ಕಾಯ್ತಿದ್ದಾರೆ. ಸದ್ಯ `ಪಠಾಣ್’ (Pathan) ನಿರ್ದೇಶಕ ಸಿದ್ಧಾರ್ಥ್ ಆನಂದ್ (Siddarth Anand) ಜೊತೆ ನಟ ಸಿನಿಮಾ ಮಾಡಲು ಮುಂದಾಗಿದ್ದಾರೆ.

    ಹೊಡಿ ಬಡಿ ಕಡಿ ಎಂಬ ಸಿನಿಮಾಗಳನ್ನ ತೆರೆಯ ಮೇಲೆ ತೋರಿಸುವುದರಲ್ಲಿ ಸಿದ್ಧಾರ್ಥ್ ಆನಂದ್ ಯಾವಾಗಲೂ ಮುಂದು. ಅದಕ್ಕೆ ತಾಜಾ ಉದಾಹರಣೆ ಎಂದರೆ `ವಾರ್’ ಸಿನಿಮಾ, ಇತ್ತೀಚಿನ ಪಠಾಣ್ ಕೂಡ ಒಂದು. ರಿಲೀಸ್‌ಗೂ ಮುಂಚೆಯೇ ಟ್ರೈಲರ್‌ನಿಂದ ಶಾರುಖ್ (Sharukh Khan) ಚಿತ್ರ ಸದ್ದು ಮಾಡ್ತಿದೆ. ಈ ಬೆನ್ನಲ್ಲೇ ಸಿದ್ಧಾರ್ಥ್ ಆನಂದ್ ಮತ್ತು ಪ್ರಭಾಸ್ (Actor Prabhas) ಕಾಂಬಿನೇಷನ್ ಚಿತ್ರಕ್ಕೆ ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಇದನ್ನೂ ಓದಿ: ಸತತ ಸೋಲಿನಿಂದ ಬೇಸತ್ತ ಪೂಜಾಗೆ ನಿರ್ದೇಶಕ ತ್ರಿವಿಕ್ರಮ್ ಸಲಹೆ

    `ಬಾಹುಬಲಿ 2′ ನಂತರ ಪ್ರಭಾಸ್ ನಟಿಸಿರುವ ಚಿತ್ರಗಳಿಂದ ಸೋತು ಬೇಸತ್ತಿದ್ದಾರೆ. ಹಾಗಾಗಿ ಸಿದ್ಧಾರ್ಥ್ ಹೆಣೆದಿರುವ ಕಥೆ ಕೇಳಿ ಥ್ರಿಲ್ ಆಗಿ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇವರಿಬ್ಬರ ಕಾಂಬಿನೇಷನ್‌ನಲ್ಲಿ ಖಡಕ್ ಆ್ಯಕ್ಷನ್ ಚಿತ್ರ ನೋಡೋದಂತು ಪಕ್ಕಾ ಎನ್ನಲಾಗುತ್ತಿದೆ. ಈ ಜೋಡಿಯ ಹೊಸ ಚಿತ್ರ ಅದೆಷ್ಟರ ಮಟ್ಟಿಗೆ ಕಮಾಲ್‌ ಮಾಡಲಿದೆ ಎಂದು ಕಾದುನೋಡಬೇಕಿದೆ.

    ಪ್ರಭಾಸ್ ನಟನೆಯ ಆದಿಪುರುಷ್, ಸಲಾರ್, ಪ್ರಾಜೆಕ್ಟ್ ಕೆ ಸಿನಿಮಾಗಳು ತೆರೆಗೆ ಅಪ್ಪಳಿಸೋದಕ್ಕೆ ರೆಡಿಯಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮತ್ತೆ ಬಾಲಿವುಡ್ ಸಿನಿಮಾದಲ್ಲಿ ಪ್ರಭಾಸ್ – ಬಾಹುಬಲಿಗೆ ಜೋಡಿ ಆಗ್ತಾರಾ ಈ ಕ್ಯೂಟ್ ಬೆಡಗಿ

    ಮತ್ತೆ ಬಾಲಿವುಡ್ ಸಿನಿಮಾದಲ್ಲಿ ಪ್ರಭಾಸ್ – ಬಾಹುಬಲಿಗೆ ಜೋಡಿ ಆಗ್ತಾರಾ ಈ ಕ್ಯೂಟ್ ಬೆಡಗಿ

    ಹೈದರಾಬಾದ್: ಟಾಲಿವುಡ್ ನಟ ಬಾಹುಬಲಿ ಪ್ರಭಾಸ್ ಮತ್ತೆ ಬಾಲಿವುಡ್ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಎಂಬ ಸುದ್ದಿಯೊಂದು ಇದೀಗ ಟಿ-ಟೌನ್ ಅಂಗಳದಲ್ಲಿ ಹರಿದಾಡುತ್ತಿದೆ.

    ನಟ ಪ್ರಭಾಸ್ ಸದ್ಯ ತೆಲುಗಿನ ಆದಿಪುರುಷ ಮತ್ತು ಸಲಾರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಅಲ್ಲದೇ ನಿರ್ದೇಶಕ ನಾಗ್ ಅಶ್ವಿನ್ ಆ್ಯಕ್ಷನ್ ಕಟ್ ಹೇಳುತ್ತಿರುವ ಮುಂದಿನ ಸಿನಿಮಾದ ಶೂಟಿಂಗ್‍ನಲ್ಲಿ ಕೂಡ ಶೀಘ್ರದಲ್ಲಿಯೇ ಪಾಲ್ಗೊಳ್ಳಲಿದ್ದರೆ. ಆದರೆ ಈ ಎಲ್ಲದರ ಮಧ್ಯೆ ಬಾಲಿವುಡ್ ನಿರ್ದೇಶಕ ಸಿದ್ದಾರ್ಥ್ ಆನಂದ್ ಅವರ ಮುಂದಿನ ಸಿನಿಮಾಕ್ಕೆ ಪ್ರಭಾಸ್ ಗ್ರೀನ್ ಸಿಗ್ನಲ್ ನೀಡಿದ್ದಾರಂತೆ. ಇದೊಂದು ಆಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಸದ್ಯದಲ್ಲಿಯೇ ಈ ಸಿನಿಮಾವನ್ನು ಅಧಿಕೃತವಾಗಿ ಘೋಷಿಸಲು ಸಿನಿಮಾತಂಡ ಪ್ಲಾನ್ ಮಾಡಿದೆಯಂತೆ.

    ಈ ಸಿನಿಮಾದಲ್ಲಿ ಪ್ರಭಾಸ್ ಜೊತೆಗೆ ಬಾಲಿವುಡ್ ನಟಿ ಕತ್ರಿನಾ ಕೈಫ್ ಡ್ಯೂಯೆಟ್ ಆಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಮುನ್ನ ನಿರ್ದೇಶಕ ಸಿದ್ದಾರ್ಥ್ ಆನಂದ್ ಆ್ಯಕ್ಷನ್ ಕಟ್ ಹೇಳಿದ್ದ ಬ್ಯಾಂಗ್ ಬ್ಯಾಂಗ್ ಸಿನಿಮಾದಲ್ಲಿ ಹೃತಿಕ್ ರೋಷನ್‍ಗೆ ಜೋಡಿಯಾಗಿ ಕತ್ರಿನಾ ಕೈಫ್ ಅಭಿನಯಿಸಿದ್ದರು. ಪ್ರಭಾಸ್‍ಗೆ ಸಾಹೋ ಸಿನಿಮಾದಲ್ಲಿ ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಜೋಡಿಯಾಗಿ ನಟಿಸಿದ್ದರು.

    ಸದ್ಯ ಸಿದ್ಧಾರ್ಥ್ ಆನಂದ್ ಬಾಲಿವುಡ್ ಬಾದ್ ಶಾ ನಟ ಶಾರೂಕ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅಭಿನಯಿಸುತ್ತಿರುವ ಪಠಾಣ್ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಎಲ್ಲ ಒಕೆ ಆದಲ್ಲಿ ಸಿದ್ಧಾರ್ಥ್ ಪ್ರಭಾಸ್ ಸಿನಿಮಾವನ್ನು ಶೀಘ್ರದಲ್ಲಿ ಕೈಗೆತ್ತುಕೊಳ್ಳಲಿದ್ದಾರೆ.