Tag: ಸಿಧು

  • ಕ್ಯಾನ್ಸರ್‌ನಿಂದ ತಮಿಳು ನಟಿ ಸಿಂಧು ನಿಧನ

    ಕ್ಯಾನ್ಸರ್‌ನಿಂದ ತಮಿಳು ನಟಿ ಸಿಂಧು ನಿಧನ

    ಮಿಳಿನ ‘ಅಂಗಡಿ ತೇರು’ (Angadi Theru) ಸಿನಿಮಾದ ಮೂಲಕ ಪ್ರೇಕ್ಷಕರ ಮನಗೆದ್ದ ನಟಿ ಸಿಂಧು (Sindhu) ವಿಧಿವಶರಾಗಿದ್ದಾರೆ. ಕ್ಯಾನ್ಸರ್ ಕಾಯಿಲೆಗೆ ತುತ್ತಾಗಿದ್ದ ನಟಿ ಸಿಂಧು ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

    ರೊಮ್ಯಾಂಟಿಕ್ ಡ್ರಾಮಾ ‘ಅಂಗಡಿ ತೇರು’ ಖ್ಯಾತಿಯ ಸಿಂಧು ಅವರು ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು.ಅದಕ್ಕಾಗಿ ಸೂಕ್ತ ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಇದೀಗ 42ನೇ ವಯಸ್ಸಿಗೆ ತಮ್ಮ ಬದುಕಿನ ಆಟವನ್ನು ನಟಿ ಸಿಂಧು ನಿಲ್ಲಿಸಿದ್ದಾರೆ. ಆಗಸ್ಟ್ 7ರಂದು ಮುಂಜಾನೆ 2 ಗಂಟೆಗೆ ನಟಿ ಇಹಲೋಕ ತ್ಯಜಿಸಿದ್ದಾರೆ. ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಟಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ:ತಮಿಳಿನಲ್ಲಿ ಬಂಪರ್ ಆಫರ್‌, ವಿಕ್ರಮ್‌ಗೆ ನಾಯಕಿಯಾದ ರಶ್ಮಿಕಾ ಮಂದಣ್ಣ

    ಬಾಲನಟಿಯಾಗಿ ಕಾಲಿವುಡ್‌ಗೆ (Kollywood) ಪಾದಾರ್ಪಣೆ ಮಾಡಿದ್ದ ನಟಿ ಸಿಂಧು, ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸದ್ಯ ಸಿಂಧು ಅಂತ್ಯಕ್ರಿಯೆ ಚೆನ್ನೈಯಲ್ಲಿ ಸಂಜೆ ನಡೆಯಲಿದೆ. ಸದ್ಯ ಸಿಂಧು ನಿಧನಕ್ಕೆ ಕುಟುಂಬಸ್ತರು, ಆಪ್ತರು, ಕಲಾವಿದರು ಸಂತಾಪ ಸೂಚಿಸಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರೇವಣ್ಣಗೆ ಕ್ಲೀನ್ ಚಿಟ್ ಕೊಟ್ಟ ಚುನಾವಣಾ ಆಯೋಗ

    ರೇವಣ್ಣಗೆ ಕ್ಲೀನ್ ಚಿಟ್ ಕೊಟ್ಟ ಚುನಾವಣಾ ಆಯೋಗ

    ಬೆಂಗಳೂರು: ರಾಜ್ಯಸಭಾ ಚುನಾವಣೆ ವೇಳೆ ಜೆಡಿಎಸ್ ಶಾಸಕ ಹೆಚ್‌ಡಿ ರೇವಣ್ಣ ಅವರ ಮತ ತಿರಸ್ಕೃತವಾಗುತ್ತದೆ ಎಂಬ ಮಾತು ಕೇಳಿ ಬರುತ್ತಿತ್ತು. ಆದರೆ ಅವರ ಮತ ಸಿಂಧು ಎಂದು ಚುನಾವಣಾ ಅಧಿಕಾರಿ ಅಧಿಕೃತವಾಗಿ ತಿಳಿಸಿದ್ದಾರೆ.

    ರೇವಣ್ಣ ಮತವನ್ನು ಹಾಕಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಬ್ಯಾಲೆಟ್ ಪೇಪರ್ ತೋರಿಸಿದ್ದರು. ಜೆಡಿಎಸ್ ಶಾಸಕರಿಗೆ ಮಾತ್ರ ತೋರಿಸಬೇಕಾದ ರೇವಣ್ಣ ಡಿಕೆಶಿಗೆ ತೋರಿಸಿದ್ದಾರೆ ಎಂದು ಬಿಜೆಪಿ ಏಜೆಂಟರು ಕೊಠಡಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೇ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ರೇವಣ್ಣ ಅವರ ಮತವನ್ನು ತಿರಸ್ಕೃತಗೊಳಿಸಬೇಕೆಂದು ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದರು. ಇದನ್ನೂ ಓದಿ: ಆ ಮನುಷ್ಯನಿಗೆ ಮಾನ, ಮರ್ಯಾದೆ ಇದ್ರೆ ರಾಜೀನಾಮೆ ಕೊಡಲಿ: ಶ್ರೀನಿವಾಸ್ ಗೌಡ ವಿರುದ್ಧ ಹೆಚ್‌ಡಿಕೆ ಕಿಡಿ

    ದೂರಿನನ್ವಯ ಚುನಾವಣಾಧಿಕಾರಿಗಳು ಸಿಸಿಟಿವಿ ಫೂಟೇಜ್ ಸೇರಿದಂತೆ ಎಲ್ಲಾ ರೀತಿಯ ಪರಿಶೀಲನೆ ನಡೆಸಿದ್ದಾರೆ. ರೇವಣ್ಣ ಕೇವಲ ಜೆಡಿಎಸ್ ಏಜೆಂಟರಿಗೆ ತೋರಿಸಿ ಮತ ಹಾಕಿದ್ದಾರೆ. ಕಾಂಗ್ರೆಸ್ ಏಜೆಂಟರಿಗೆ ತೋರಿಸಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲೂ ಮತ ಅಸಿಂಧು ಆಗುವುದಿಲ್ಲ ಎಂದು ಚುನಾವಣಾ ಅಧಿಕಾರಿ ವಿಶಾಲಾಕ್ಷಿ ಆದೇಶ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯಸಭಾ ಚುನಾವಣೆ: ಜೆಡಿಎಸ್‌ಗೆ ಬಿಗ್ ಶಾಕ್ ಕೊಟ್ಟ ಗುಬ್ಬಿ ಶ್ರೀನಿವಾಸ್

    ಚುನಾವಣಾಧಿಕಾರಿಯ ಆದೇಶ ಪ್ರಶ್ನಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡುವ ಸಾಧ್ಯತೆಯಿದೆ. ತಮ್ಮ ದೂರನ್ನು ಪರಿಶೀಲಿಸುವಂತೆ ಕೈ ಪಾಳಯದಿಂದ ಪತ್ರ ಬರೆಯುವ ಸಾಧ್ಯತೆಯಿದೆ.

  • 1 ವರ್ಷ ಜೈಲು ಶಿಕ್ಷೆ – ನ್ಯಾಯಾಲಯಕ್ಕೆ ಶರಣಾದ ಸಿಧು

    1 ವರ್ಷ ಜೈಲು ಶಿಕ್ಷೆ – ನ್ಯಾಯಾಲಯಕ್ಕೆ ಶರಣಾದ ಸಿಧು

    ಚಂಡೀಗಢ: 34 ವರ್ಷದ ಹಿಂದಿನ ಪ್ರಕರಣದಲ್ಲಿ ಒಂದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ, ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

    ಇಂದು ಸಂಜೆ ಪಟಿಯಾಲ ನ್ಯಾಯಾಲಯಕ್ಕೆ ಕಾರಿನಲ್ಲಿ ಆಗಮಿಸಿದ ಸಿಧು ಮುಖ್ಯ ನ್ಯಾಯಾಧೀಶರ ಮುಂದೆ ಶರಣಾಗಿದ್ದಾರೆ.

    ಈ ಬಗ್ಗೆ ಸಿಧು ಅವರ ಮಾಧ್ಯಮ ಸಲಹೆಗಾರ ಸುರೇಂದರ್‌ ದಲ್ಲಾ ಪ್ರತಿಕ್ರಿಯಿಸಿ, ಪಟಿಯಾಲದ ಮುಖ್ಯ ನ್ಯಾಯಾಧೀಶರ ಮುಂದೆ ಸಿಧು ಶರಣಾಗಿದ್ದಾರೆ. ವೈದ್ಯಕೀಯ ಪರೀಕ್ಷೆ ಮತ್ತು ಇತರ ಕಾನೂನು ಪ್ರಕ್ರಿಯೆಗಳು ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನವಜೋತ್‌ ಸಿಂಗ್‌ ಸಿಧುಗೆ 1 ವರ್ಷ ಜೈಲು ಶಿಕ್ಷೆ

    ಇಂದು ಬೆಳಗ್ಗೆ ನ್ಯಾಯಾಲಯದ ಮುಂದೆ ಶರಣಾಗಲು ಕೆಲವು ವಾರಗಳ ಸಮಯಬೇಕು ಎಂದು ಸಿಧು ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಮಾಡಿದ್ದರು. ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾ.ಎನ್.ವಿ.ರಮಣ ನೇತೃತ್ವದ ತ್ರಿಸದಸ್ಯ ಪೀಠದ ಮುಂದೆ ವಿಷಯ ಪ್ರಸ್ತಾಪಿಸಿದರು.

    ಈ ವೇಳೆ ವಕೀಲರು, ಆರೋಗ್ಯ ಸಮಸ್ಯೆಗಳ ಕಾರಣದಿಂದ ತಕ್ಷಣ ಪೊಲೀಸರ ಮುಂದೆ ಶರಣಾಗಲು ಸಾಧ್ಯವಿಲ್ಲ. ವೈದ್ಯಕೀಯ ಸಲಹೆಗಳ ಬಳಿಕ ಸಿಧು ಪೊಲೀಸರ ಮುಂದೆ ಶರಣಾಗಲಿದ್ದಾರೆ ಎಂದು ತಿಳಿಸಿದ್ದರು. ಮನವಿ ಪ್ರತಿಕ್ರಿಯಿಸಿದ ನ್ಯಾಯಪೀಠ, ಇದಕ್ಕೆ ಸಂಬಂಧಿಸಿದ ಪ್ರತ್ಯೇಕ ಔಪಚಾರಿಕ ಅರ್ಜಿ ಸಲ್ಲಿಸಿ. ಆ ಬಳಿಕ ನಾವು ಈ ವಿಚಾರದ ಬಗ್ಗೆ ಪರಿಶೀಲನೆ ನಡೆಸಿ ಆದೇಶ ನೀಡುತ್ತೇವೆ ಎಂದು ಹೇಳಿತ್ತು.

    ಗುರುವಾರ ನ್ಯಾ.ಎಂ.ಎಂ.ಖಾನ್ವಿಲ್ಕರ್ ನೇತೃತ್ವದ ದ್ವಿ ಸದಸ್ಯ ಪೀಠ 1988ರ ಪ್ರಕರಣವೊಂದರಲ್ಲಿ ಸಿಧುಗೆ ಒಂದು ವರ್ಷ ಶಿಕ್ಷೆ ವಿಧಿಸಿತ್ತು.

  • ಥಾಮಸ್ ಕಪ್ ಗೆದ್ದ ಭಾರತ ತಂಡದೊಂದಿಗೆ ಇಡೀ ದೇಶವೇ ಸಂಭ್ರಮಿಸಿದೆ: ಮೋದಿ

    ಥಾಮಸ್ ಕಪ್ ಗೆದ್ದ ಭಾರತ ತಂಡದೊಂದಿಗೆ ಇಡೀ ದೇಶವೇ ಸಂಭ್ರಮಿಸಿದೆ: ಮೋದಿ

    ನವದೆಹಲಿ: ಥಾಮಸ್ ಕಪ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ 43 ವರ್ಷಗಳ ಬಳಿಕ ಚೊಚ್ಚಲ ಬಾರಿಗೆ ಚಾಂಪಿಯನ್ ಆದ ಭಾರತದ ಪುರುಷರ ತಂಡದೊಂದಿಗೆ ಇಡೀ ದೇಶವೇ ಸಂಭ್ರಮಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ಮೂಲಕ ಸಂಭ್ರಮ ಹಂಚಿಕೊಂಡಿದ್ದಾರೆ.‌

    ಟ್ವೀಟ್‍ನಲ್ಲಿ ಏನಿದೆ?
    ಭಾರತ ಬ್ಯಾಡ್ಮಿಂಟನ್ ತಂಡ ಇತಿಹಾಸ ಬರೆದಿದೆ. ಥಾಮಸ್ ಕಪ್ ಗೆದ್ದ ಭಾರತ ತಂಡದೊಂದಿಗೆ ಇಡೀ ದೇಶವೇ ಸಂಭ್ರಮಿಸಿದೆ. ನಮ್ಮ ಬಲಿಷ್ಠ ತಂಡಕ್ಕೆ ಅಭಿನಂದನೆಗಳು ಮತ್ತು ಅವರ ಮುಂದಿನ ಸಾಧನೆಗಳಿಗೆ ಶುಭಾಶಯಗಳು. ಈ ಗೆಲುವು ಮುಂಬರುವ ಹಲವು ಕ್ರೀಡಾ ಪಟುಗಳಿಗೆ ಪ್ರೇರಣೆ ನೀಡಲಿದೆ. ಇದನ್ನೂ ಓದಿ: ಥಾಮಸ್‌ ಕಪ್‌ ಬ್ಯಾಡ್ಮಿಂಟನ್‌ – ಭಾರತ ಚಾಂಪಿಯನ್‌, ಇತಿಹಾಸ ಸೃಷ್ಟಿ

    1 ಕೋಟಿ ರೂ. ಬಹುಮಾನ:
    43 ವರ್ಷಗಳ ಬಳಿಕ ಬ್ಯಾಡ್ಮಿಂಟನ್‍ನಲ್ಲಿ ಐತಿಹಾಸಿಕ ಸಾಧನೆ ಮಾಡಿದ ಭಾರತದ ಪುರುಷರ ತಂಡಕ್ಕೆ 1 ಕೋಟಿ ರೂ. ನೀಡಲಾಗುವುದು ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಘೋಷಿಸಿದ್ದು, ಇದೊಂದು ಐತಿಹಾಸಿಕ ಸಾಧನೆ. ದೇಶಕ್ಕೆ ಹೆಮ್ಮೆ ತಂದಿದೆ ಎಂದು ಸಂಭ್ರಮಪಟ್ಟರು.

    43 ವರ್ಷಗಳಿಂದಲೂ ಟೂರ್ನಿಯಲ್ಲಿ ಆಡುತ್ತಿರುವ ಭಾರತ ಈ ಬಾರಿ ಚೊಚ್ಚಲ ಟ್ರೋಫಿಯನ್ನು ಗೆದ್ದುಕೊಂಡಿದೆ. ಅದು 14 ಬಾರಿ ಚಾಂಪಿಯನ್ ಇಂಡೋನೇಷ್ಯಾದ ವಿರುದ್ಧ ಗೆದ್ದು ಈ ಸಾಧನೆ ಮಾಡಿದೆ ಎನ್ನುವುದು ವಿಶೇಷ. ಈ ಮೂಲಕ ಥಾಮಸ್ ಕಪ್ ಗೆದ್ದ 6ನೇ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಈ ಹಿಂದೆ 1979ರಲ್ಲಿ ಕಂಚಿನ ಪದಕ ಗೆದ್ದಿದ್ದೇ ಈವರೆಗೆ ಟೂರ್ನಿಯಲ್ಲಿ ಭಾರತದ ಶ್ರೇಷ್ಠ ಸಾಧನೆ ಎನಿಸಿತ್ತು. ಇದನ್ನೂ ಓದಿ: ಉದ್ದನೆ ಕೂದಲಿನ, ತುಟಿಗೆ ಬಣ್ಣ ಹಚ್ಚಿ ದೈತ ದಾಂಡಿಗನಾಗಿ ಗಮನಸೆಳೆದ ಸೈಮಂಡ್ಸ್ ಇನ್ನು ನೆನಪು ಮಾತ್ರ

    ಮೊದಲ ಸಿಂಗಲ್ಸ್ ಪಂದ್ಯದಲ್ಲಿ ಲಕ್ಷ್ಯ ಸೆನ್ ಜಿಂಟಿಂಗ್ ವಿರುದ್ಧ ಜಯಗಳಿಸಿದರು. ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಜಿಂಟಿಗ್ ಮೊದಲ ಪಂದ್ಯವನ್ನು 8-21 ರಿಂದ ಗೆದ್ದುಕೊಂಡರೂ ಲಕ್ಷ್ಯ ಸೆನ್ ನಂತರ ಎರಡು ಪಂದ್ಯವನ್ನು 21-17, 21-16 ಗೇಮ್‍ಗಳಿಂದ ಗೆದ್ದುಕೊಳ್ಳುವ ಮೂಲಕ ಭಾರತಕ್ಕೆ ಮೊದಲ ಮುನ್ನಡೆಯನ್ನು ತಂದುಕೊಟ್ಟರು.

    ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್‍ಸಾಯಿರಾಜ್ ರಾಂಕಿರೆಡ್ಡಿ, ಚಿರಾಗ್ ಶೆಟ್ಟಿ ಅವರು ಮೊಹಮ್ಮದ್ ಅಹ್ಸಾನ್ ಮತ್ತು ಕೆವಿನ್ ಸುಕಮುಲ್ಜೊ ಜೊತೆ ಮೊದಲ ಪಂದ್ಯವನ್ನು 18-21 ರಿಂದ ಸೋತಿದ್ದರೂ ನಂತರ 23-21, 21-19 ಗೇಮ್‍ಗಳಿಂದ ಗೆಲ್ಲುವ ಮೂಲಕ ಗೆಲುವಿನ ಸಮೀಪ ತಂದರು. ಇದನ್ನೂ ಓದಿ: ಗುಜರಾತ್ ಗುನ್ನಕ್ಕೆ ಚೆನ್ನೈ ಚಿಂದಿ –  ಟೈಟಾನ್ಸ್‌ಗೆ 7 ವಿಕೆಟ್‌ಗಳ ಜಯ

    ಮೂರನೇ ಪಂದ್ಯದಲ್ಲಿ ಶ್ರೀಕಾಂತ್ ಕಿಡಂಬಿ ಅವರು ಜೊನಾಟನ್ ಕ್ರಿಸ್ಟಿ ಅವರ ವಿರುದ್ಧ 21-15, 23-21 ನೇರ ಸೆಟ್‍ಗಳಿಂದ ಗೆಲುವು ಸಾಧಿಸಿ ಭಾರತಕ್ಕೆ ಟ್ರೋಫಿಯನ್ನು ಗೆದ್ದುಕೊಟ್ಟರು.

    ಈ ಸಾಧನೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ರಾಷ್ಟ್ರೀಯ ಕೋಚ್ ಹಾಗೂ ಭಾರತೀಯ ಬ್ಯಾಡ್ಮಿಂಟನ್ ಸಂಸ್ಥೆ ಉಪಾಧ್ಯಕ್ಷ ಪುಲ್ಲೇಲ ಗೋಪಿಚಂದ್, ಇದು ನಿಜವಾಗಿಯೂ ದೊಡ್ಡ ಸಾಧನೆ. 1983ರಲ್ಲಿ ಭಾರತ ಕ್ರಿಕೆಟ್ ವಿಶ್ವಕಪ್ ಗೆದ್ದಂತೆ ಆಗಿದೆ. ಇಂಡೋನೇಷ್ಯಾ ಬ್ಯಾಡ್ಮಿಂಟನ್ ಮತ್ತು ಥಾಮಸ್ ಕಪ್‍ನಲ್ಲಿ ದೊಡ್ಡ ಖ್ಯಾತಿ ಮತ್ತು ಪರಂಪರೆಯನ್ನು ಹೊಂದಿದೆ. ಈ ತಂಡವನ್ನು ಸೋಲಿಸುವ ಮೂಲಕ ವಿಶ್ವ ಮಟ್ಟದಲ್ಲಿ ನಾವು ಬಲಿಷ್ಠವಾಗುತ್ತಿದ್ದೇವೆ ಎಂಬುದಕ್ಕೆ ಸಾಕ್ಷಿ ಎಂದರು.

    ನಾವು ಸೈನಾ ಮತ್ತು ಸಿಂಧು ಅವರನ್ನು ಮಹಿಳಾ ಶಕ್ತಿ ಎಂದು ಕರೆಯಲ್ಪಟ್ಟಿದ್ದೇವೆ, ಆದರೆ ಈಗ ನಮ್ಮ ಹುಡುಗರು ತಮ್ಮ ಸಾಮರ್ಥ್ಯವನ್ನು ತೋರಿಸಿದ್ದಾರೆ. ಈ ಸಾಧನೆ ಮುಂದಿನ ದಿನಗಳಲ್ಲಿ ತಮ್ಮ ಮಕ್ಕಳು ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡುತ್ತದೆ ಎಂದು ನಾನು ಭಾವಿಸುತ್ತೇನೆ.  ಭಾರತದಲ್ಲಿ ಬ್ಯಾಡ್ಮಿಂಟನ್ ಕ್ರೀಡೆಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ಸವಾಲು ಇದೆ. ಕ್ರೀಡಾಪಟುಗಳಿಗೆ ಬ್ಯಾಡ್ಮಿಂಟನ್ ಸಂಸ್ಥೆ ಹಾಗೂ ಪ್ರಧಾನಿ ಮೋದಿ ಅವರ ಬೆಂಬಲಕ್ಕಾಗಿ ನಾನು ಧನ್ಯವಾದ ಸಲ್ಲಿಸುತ್ತೇನೆ ಎಂದು ನುಡಿದರು.

  • ಸ್ವಿಸ್ ಓಪನ್ ಬ್ಯಾಡ್ಮಿಂಟನ್ ಪ್ರಶಸ್ತಿ ಗೆದ್ದ ಪಿ.ವಿ ಸಿಂಧು

    ಸ್ವಿಸ್ ಓಪನ್ ಬ್ಯಾಡ್ಮಿಂಟನ್ ಪ್ರಶಸ್ತಿ ಗೆದ್ದ ಪಿ.ವಿ ಸಿಂಧು

    ಬಾಸೆಲ್: ಸ್ವಿಸ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು ಥಾಯ್ಲೆಂಡ್‍ನ ಬುಸಾನನ್ ಒಂಗ್‍ಬಮ್ರುಂಗ್‍ಫಾನ್ ವಿರುದ್ಧ ಫೈನಲ್‍ ಪಂದ್ಯ ಗೆದ್ದು ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.

    ತೀವ್ರ ಕುತೂಹಲ ಮೂಡಿಸಿದ್ದ ಫೈನಲ್ ಪಂದ್ಯದಲ್ಲಿ ಬುಸಾನನ್ ಒಂಗ್‍ಬಮ್ರುಂಗ್‍ಫಾನ್ ವಿರುದ್ಧ ಸಿಂಧು 21-16, 21-8 ನೇರ ಸೆಟ್‌ನಿಂದ ಫೈನಲ್ ಪಂದ್ಯವನ್ನು ಗೆದ್ದು ಬೀಗಿದರು. ಇದನ್ನೂ ಓದಿ: ಕೊನೆಯ ಓವರ್ ಥ್ರಿಲ್ಲರ್ – ಆ ಒಂದು ‘ನೋ ಬಾಲ್‍’ನಿಂದ ಭಾರತ ತಂಡ ಮನೆಗೆ

    ಪಂದ್ಯ 49 ನಿಮಿಷಗಳ ವರೆಗೆ ಸಾಗಿತ್ತು. ಈ ಮೊದಲು ಬುಸಾನನ್ ಮತ್ತು ಸಿಂಧು 16 ಬಾರಿ ಮುಖಾಮುಖಿಯಾಗಿದ್ದರು. ಇದರಲ್ಲಿ ಸಿಂಧು 16 ಬಾರಿ ಜಯ ಗಳಿಸಿದ್ದರೆ, ಬುಸಾನನ್ ಒಂದು ಬಾರಿ ಮೇಲುಗೈ ಸಾಧಿಸಿದ್ದರು. ಇದೀಗ ಸ್ವಿಸ್ ಓಪನ್ ಫೈನಲ್‍ನಲ್ಲೂ ಸಿಂಧು, ಬುಸಾನನ್ ವಿರುದ್ಧ ಮೇಲುಗೈ ಸಾಧಿಸಿ ಪ್ರಶಸ್ತಿ ಜಯಿಸಿದ್ದಾರೆ. ಇದು ಸಿಂಧುಗೆ ಸ್ವಿಸ್ ಓಪನ್‍ನಲ್ಲಿ ಸತತ 2ನೇ ಫೈನಲ್ ಆಗಿತ್ತು. ಕಳೆದ ಬಾರಿ ಅವರು ಫೈನಲ್‍ನಲ್ಲಿ ಸ್ಪೇನ್‍ನ ಕ್ಯಾರೊಲಿನಾ ಮರೀನ್ ವಿರುದ್ಧ ಸೋತಿದ್ದರು. ಇದನ್ನೂ ಓದಿ: 2023 ರಿಂದ ಮಹಿಳಾ ಐಪಿಎಲ್ ಪ್ರಾರಂಭಿಸಲು ಬಿಸಿಸಿಐ ಸಿದ್ಧತೆ

    ಶನಿವಾರ ನಡೆದ ಮಹಿಳಾ ಸಿಂಗಲ್ಸ್‌ನ ರೋಚಕ ಸೆಮಿಫೈನಲ್‍ನಲ್ಲಿ ಸಿಂಧು, ಥಾಯ್ಲೆಂಡ್‍ನ ಸುಪನಿದಾ ಕಟೆಥೊಂಗ್ ವಿರುದ್ಧ 21-18, 15-21, 21-19 ಗೇಮ್‍ಗಳಲ್ಲಿ ಗೆಲುವು ಸಾಧಿಸಿದರು.

  • ಆಗಾಗ ‘ಸಿಕ್ಸರ್’ ಹೇಳಿಕೆ ನೀಡಿ ಕೊನೆಗೂ ಕ್ಯಾಪ್ಟನನ್ನು ಕೆಳಗೆ ಇಳಿಸಿದ ಸಿಧು

    ಆಗಾಗ ‘ಸಿಕ್ಸರ್’ ಹೇಳಿಕೆ ನೀಡಿ ಕೊನೆಗೂ ಕ್ಯಾಪ್ಟನನ್ನು ಕೆಳಗೆ ಇಳಿಸಿದ ಸಿಧು

    ಚಂಡೀಗಢ: ಅಮರಿಂದರ್ ಸಿಂಗ್ ವಿರುದ್ಧ ಬಹಿರಂಗವಾಗಿ ಆಗಾಗ ಹೇಳಿಕೆಯಲ್ಲೇ ಸಿಕ್ಸರ್ ಸಿಡಿಸುತ್ತಿದ್ದ ಸಿಧು ಕೊನೆಗೂ ಅವರನ್ನು ಪಂಜಾಬ್ ಮುಖ್ಯಮಂತ್ರಿ ಪಟ್ಟದಿಂದ ಕೆಳಗೆ ಇಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

    2004ರಲ್ಲಿ ಬಿಜೆಪಿ ಸೇರಿದ್ದ ಸಿಧು ಲೋಕಸಭಾ ಚುನಾವಣೆಯಲ್ಲಿ ಅಮೃತಸರದಿಂದ ಸ್ಪರ್ಧಿಸಿ ಜಯಗಳಿಸಿದ್ದರು. 2004, 2009 ರಲ್ಲಿ ಸಿಧು ಜಯಗಳಿಸಿದ್ದರೆ 2014ರ ಲೋಕಸಭಾ ಚುನಾವಣೆಯಲ್ಲಿ ಅರುಣ್ ಜೇಟ್ಲಿ ಅವರಿಗೆ ಅಮೃತಸರದ ಟಿಕೆಟ್ ನೀಡಲಾಗಿತ್ತು. ಇದರಿಂದ ಬಹಿರಂಗವಾಗಿ ಬಂಡಾಯ ಸಾರಿದ್ದ ಸಿಧು ಬಿಜೆಪಿಯನ್ನು ತೊರೆದು 2017ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು.

    2017ರಲ್ಲಿ ಅಮೃತಸರ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಜಯಗಳಿಸಿದ್ದ ಸಿಧು ಡಿಸಿಎಂ ಪಟ್ಟದ ಮೇಲೆ ಕಣ್ಣಿಟ್ಟಿದ್ದರು. ಆದರೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ಸಿಧು ಆಸೆಗೆ ಕೊಕ್ಕೆ ಹಾಕಿದ್ದರು. ಆದರೂ ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಇಷ್ಟ ಇಲ್ಲದೇ ಇದ್ದರೂ ಸಂಪುಟಕ್ಕೆ ಸೇರಿಸಿಕೊಂಡಿದ್ದರು. ಇಲ್ಲಿಂದ ಸಿಧು ಮತ್ತು ಅಮರಿಂದರ್ ಮಧ್ಯೆ ಸಂಘರ್ಷದ ಕಿಡಿ ಹೊತ್ತಿಕೊಂಡಿತು.

    2019ರ ಲೋಕಸಭೆ ಚುನಾವಣಾ ಸಮಯದಲ್ಲಿ ಸಿಧು ಪತ್ನಿ ನವಜೋತ್ ಕೌರ್ ಚಂಡೀಗಢ ಟಿಕೆಟ್ ಬಯಸಿದ್ದರು. ಟಿಕೆಟ್ ಸಿಗದಕ್ಕೆ ಅಮರಿಂದರ್ ಕಾರಣ ಎಂದು ಆರೋಪಿಸುವುದರೊಂದಿಗೆ ಸಂಘರ್ಷ ಮತ್ತಷ್ಟು ಜಾಸ್ತಿಯಾಯಿತು. 2019ರ ಜುಲೈನಲ್ಲಿ ಸಿಧು ಮಂತ್ರಿ ಸ್ಥಾನಕ್ಕೂ ರಾಜೀನಾಮೆ ನೀಡಿದರು. ಇದನ್ನೂ ಓದಿ: ಪಂಜಾಬ್ ಕಾಂಗ್ರೆಸ್‍ನಲ್ಲಿ ಭಿನ್ನಮತ – ಸತ್ಯಕ್ಕೆ ಸೋಲಿಲ್ಲ ಎಂದ ನವಜೋತ್ ಸಿಂಗ್ ಸಿಧು

    ರಾಜೀನಾಮೆ ಬಳಿಕವೂ ಪಂಜಾಬ್ ಸರ್ಕಾರ, ಅಮರಿಂದರ್ ವಿರುದ್ಧ ಸಿಧು ಟೀಕೆ ಮುಂದುವರಿಸಿದರು. ಈ ನಡುವೆ ಪಂಜಾಬ್‍ನಲ್ಲಿ ಆಪ್ ಬಲ ಜಾಸ್ತಿ ಆಗುತ್ತಿದ್ದು, ಸಿಧು ಆಪ್ ಸೇರುವ ಸಾಧ್ಯತೆಯಿದೆ ಎಂಬ ವದಂತಿಗಳು ಹರಿದಾಡತೊಡಗಿತು.

    ಮುಂದಿನ ವಿಧಾಸಭಾ ಚುನಾವಣೆಯಲ್ಲಿ ನಾಯಕರೇ ಬಡಿದಾಡುವುದು ಬೇಡ ಎಂದು ತೀರ್ಮಾನಿಸಿ ಸಿಧು ಆಸೆಯಂತೆ ಅವರನ್ನು ಹೈಕಮಾಂಡ್ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ತನ್ನ ವಿರುದ್ಧವೇ ಬಂಡಾಯ ಸಾರಿದ್ದ ಸಿಧುವನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದು ಅಮರಿಂದರ್ ಸಿಟ್ಟಾಗಿದ್ದರು. ಇದನ್ನೂ ಓದಿ: ಆಪ್ ಜೊತೆ ಕೈ ಜೋಡಿಸ್ತಾರಾ ಸಿಧು?

    ಈ ನಡುವೆ ಸಿಧು ಸಲಹೆಗಾರರಾಗಿದ್ದ ಮಾಲ್ವಿಂದರ್ ಸಿಂಗ್ ಕಾಶ್ಮೀರ ವಿಚಾರವಾಗಿ ವಿವಾದಿತ ಹೇಳಿಕೆ ನೀಡಿದ್ದರು. ಇದರಿಂದ ಸಿಟ್ಟಾದ ಅಮರಿಂದರ್ ಅವರನ್ನು ವಜಾ ಮಾಡುವಲ್ಲಿ ಯಶಸ್ವಿಯಾಗಿದ್ದರು. ತನ್ನ ಆಪ್ತನನ್ನು ವಜಾ ಮಾಡಿದ ವಿಚಾರದಲ್ಲಿ ಸಿಟ್ಟಾಗಿದ್ದ ಸಿಧು ಅಮರಿಂದರ್ ಆಡಳಿತದ ವಿರುದ್ಧ ಹೈಕಮಾಂಡ್‍ಗೆ ದೂರು ನೀಡುತ್ತಲೇ ಇದ್ದರು.

    ಪಂಜಾಬ್‍ನಲ್ಲಿ ಆಡಳಿತ ವಿರೋಧಿ ಅಲೆ ಇದೆ. ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕಾದರೆ ಅಮರಿಂದರ್ ಸಿಂಗ್ ಅವರನ್ನು ಕೆಳಗಡೆ ಇಳಿಸಲೇ ಬೇಕು ಎಂದು ಸಿಧು ಬಣ ಹೈಕಮಾಂಡ್‍ಗೆ ದೂರು ನೀಡಿತ್ತು. ಈ ದೂರಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಂತರಿಕ ಸಮೀಕ್ಷೆಯನ್ನು ಮಾಡಿತ್ತು ಎನ್ನಲಾಗುತ್ತಿದೆ. ಕೊನೆಗೆ ಹಲವು ನಾಯಕರ ಅಪಸ್ವರಕ್ಕೆ ಮಣಿದ ಕಾಂಗ್ರೆಸ್ ಬಿಜೆಪಿಯಂತೆ ಅಮರಿಂದರ್ ಸಿಂಗ್ ಅವರಿಗೆ ರಾಜೀನಾಮೆ ನೀಡುವಂತೆ ಸೂಚಿಸಿತ್ತು.

    ಕಾಂಗ್ರೆಸ್ ಹೈಕಮಾಂಡ್ ಪರವಾಗಿ ಪ್ರಿಯಾಂಕಾ ಗಾಂಧಿ ಸಿಧು ಪರವಾಗಿದ್ದಾರೆ. ಆಡಳಿತ ವಿರೋಧಿ ಅಲೆ, ಈ ಹಿಂದೆ ಚುನಾವಣೆಯಲ್ಲಿ ನೀಡಿದ್ದ ಭರವಸೆ ಈಡೇರಿಸದ ಪರಿಣಾಮ ಹೈಕಮಾಂಡ್ ಮಟ್ಟದಲ್ಲಿ ಅಮರಿಂದರ್ ಪರ ಬ್ಯಾಟ್ ಮಾಡುವ ನಾಯಕರಿಲ್ಲ. ಹೀಗಾಗಿ ಕೊನೆಗೆ ಅಮರಿಂದರ್ ಮುಖ್ಯಮಂತ್ರಿ ಪಟ್ಟಕ್ಕೆ ರಾಜೀನಾಮೆ ನೀಡಿದ್ದಾರೆ.

  • ಸಚಿವನಾದ್ರೂ ನಾನು ಕಾಮಿಡಿ ಶೋ ಬಿಡಲ್ಲ: ಸಿಧು

    ಸಚಿವನಾದ್ರೂ ನಾನು ಕಾಮಿಡಿ ಶೋ ಬಿಡಲ್ಲ: ಸಿಧು

    ಚಂಡೀಗಢ: ಸಚಿವನಾದ್ರೂ ನಾನು ಟಿವಿಯಲ್ಲಿ ಮಾಡ್ತಿರೋ ಕಾಮಿಡಿ ಶೋ ಬಿಡಲ್ಲ ಎಂದು ಮಾಜಿ ಕ್ರಿಕೆಟಿಗ ಹಾಗೂ ಪಂಜಾಬ್‍ನ ನೂತನ ಸಚಿವ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.

    ನಿನ್ನೆಯಷ್ಟೇ ಸಿಧು ಪಂಜಾಬ್‍ನ ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದರು. ಈ ಹಿಂದೆ ಬಿಜೆಪಿಯಲ್ಲಿದ್ದ ಸಿಧು ಅವರು ಕಳೆದ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಕೈ ಹಿಡಿದಿದ್ದರು. ಜೊತೆಗೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

    ಆದರೆ ಈ ಎಲ್ಲ ಕೆಲಸಗಳ ನಡುವೆ ಸಿಧು ಅವರು ದಿ ಕಪಿಲ್ ಶರ್ಮಾ ಶೋನಲ್ಲೂ ಭಾವಹಿಸುತ್ತಿದ್ದರು. ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಒಂದು ದಿನದ ಬಳಿಕ ಮಾತನಾಡಿದ ಅವರು, ನಾನು ಬೆಳಗ್ಗೆ ಸಚಿವನಾಗಿ ಕೆಲಸ ಮಾಡುತ್ತೇನೆ. ರಾತ್ರಿ ಕಾಮಿಡಿ ಶೋ ಶೂಟಿಂಗ್‍ನಲ್ಲಿ ಭಾಗಿಯಾಗುತ್ತೇನೆ. ಯಾವುದೇ ಕಾರಣಕ್ಕೂ ಕೆಲಸದ ವಿಚಾರದಲ್ಲಿ ರಾಜಿ ಮಾಡಿಕೊಳ್ಳಲ್ಲ ಎಂದು ಹೇಳಿದ್ದಾರೆ. ಇದೊಂದು ಕಷ್ಟದ ಕೆಲಸ ಎನ್ನುವುದು ಗೊತ್ತು. ಆದರೂ ನಾನು ಕಾಮಿಡಿ ಶೋ ಬಿಡಲ್ಲ. ಪಂಜಾಬಿಗರ ಸಂಪೂರ್ಣ ಸೇವೆಗೂ ನಾನು ಸಿದ್ಧ. ಇದುವೇ ನನ್ನ ಪ್ರಮುಖ ಕೆಲಸ ಎಂದು ಹೇಳಿದರು.

    ಇದೇ ವೇಳೆ ನನಗೆ ಸಿಕ್ಕಿರುವ ಸಚಿವ ಸ್ಥಾನದ ಬಗ್ಗೆ ನನಗೆ ಯಾವುದೇ ಬೇಸರವಿಲ್ಲ ಎಂದೂ ಸಿಧು ಸ್ಪಷ್ಟಪಡಿಸಿದ್ದಾರೆ. ಈ ಹಿಂದೆ ಸಿಧು ಅವರನ್ನು ಪಂಜಾಬ್ ಡಿಸಿಎಂ ಮಾಡುತ್ತಾರೆ ಎಂಬ ವದಂತಿ ಹರಡಿತ್ತು. ಆದರೆ ಸಿಧುಗೆ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಸಚಿವಾಲಯವನ್ನು ಮಾತ್ರ ನೀಡಿದ್ದಾರೆ. ಇದರಿಂದ ಅವರು ಅಸಮಾಧಾನಗೊಂಡಿದ್ದಾರೆ ಎನ್ನಲಾಗಿತ್ತು. ಆದರೆ ಈ ಎಲ್ಲಾ ವಿಚಾರಗಳನ್ನು ಸಿಧು ಅವರು ಅಲ್ಲಗಳೆದಿದ್ದಾರೆ. ನನಗೆ ಯಾವುದೇ ಸಿಟ್ಟಿಲ್ಲ. ನನಗೆ ಕೊಟ್ಟಿರುವ ಜವಾಬ್ದಾರಿಯನ್ನು ಸಿಪಾಯಿಯಂತೆ ನಿರ್ವಹಿಸುತ್ತೇನೆ ಎಂದು ಸಿಧು ಹೇಳಿದರು.