Tag: ಸಿನಿಮಾ ಚಿತ್ರೀಕರಣ

  • ಮಗನ ಸಾವಿನ ನೋವು ನಿರಂತರವಾಗಿ ಕಾಡ್ತಿದೆ – ಮೃತ ರೇಣುಕಾಸ್ವಾಮಿ ತಂದೆ

    ಮಗನ ಸಾವಿನ ನೋವು ನಿರಂತರವಾಗಿ ಕಾಡ್ತಿದೆ – ಮೃತ ರೇಣುಕಾಸ್ವಾಮಿ ತಂದೆ

    – ಡಿ-ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆಯಾಗಿ ಇಂದಿಗೆ 1 ವರ್ಷ

    ಚಿತ್ರದುರ್ಗ: ಪುತ್ರಶೋಕಂ ನಿರಂತರಂ ಎಂಬಂತೆ ಮಗನ ಸಾವಿನ ನೋವು ನಿರಂತರವಾಗಿ ಕಾಡುತ್ತಿದೆ ಎಂದು ಮೃತ ರೇಣುಕಾಸ್ವಾಮಿ (Renukaswamy Case) ತಂದೆ ಕಾಶಿನಾಥಯ್ಯ ನೋವು ತೋಡಿಕೊಂಡಿದ್ದಾರೆ.

    ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇ 29ರಂದೇ ಕಾರ್ಯ ಮಾಡಿದ್ದೇವೆ. ಇಂದಿಗೆ ರೇಣುಕಾಸ್ವಾಮಿ ನಮ್ಮನ್ನಗಲಿ ಒಂದು ವರ್ಷವಾಗಿದೆ. ಹೀಗಾಗಿ ನಾನು, ನನ್ನ ಹೆಂಡತಿ, ಸೊಸೆ ಹಾಗೂ ಮೊಮ್ಮಗ ಎಲ್ಲರೂ ರೇಣುಕಾಸ್ವಾಮಿ ಫೋಟೊಗೆ ಸಾಂಕೇತಿಕವಾಗಿ ಪೂಜೆ ಸಲ್ಲಿಸಿದ್ದೇವೆ. ಪುತ್ರಶೋಕಂ ನಿರಂತರಂ ಎಂಬಂತೆ ಮಗನ ನೋವು ಕಾಡುತ್ತಲೇ ಇದೆ ಎಂದರು.ಇದನ್ನೂ ಓದಿ: ಪೊಲೀಸರದ್ದೇ ತಪ್ಪು, ಸರ್ಕಾರಕ್ಕೆ ಯಾಕೆ ಮುಜುಗರ ಆಗ್ಬೇಕು: ಸಿದ್ದರಾಮಯ್ಯ ಪ್ರಶ್ನೆ

    ಇದೇ ವೇಳೆ ನಟ ದರ್ಶನ್ ಅವರಿಗೆ ಸಿನಿಮಾ ಚಿತ್ರೀಕರಣಕ್ಕೆ ಅವಕಾಶ ನೀಡಿರುವ ಕುರಿತು ಮಾತನಾಡಿದ ಅವರು, ಅದೆಲ್ಲ ಕಾನೂನು ವಿಚಾರ. ಕಾನೂನು ಒಂದು ಕ್ರಮಕೈಗೊಳ್ಳುತ್ತದೆ. ಮಗನ ಕೊಲೆ ಮಾಡಿದವರಿಗೆ ತಕ್ಕ ಶಿಕ್ಷೆ ಆಗಬೇಕು. ಸರ್ಕಾರ, ಕೋರ್ಟ್ ಮೇಲೆ ನಂಬಿಕೆ ಇದ್ದು, ಕ್ರಮ ಆಗುತ್ತದೆ ಎಂದುಕೊಂಡಿದ್ದೇವೆ. ಈವರೆಗೂ ನಟ ದರ್ಶನ್ ನಮ್ಮನ್ನು ಸಂಪರ್ಕಿಸಿಲ್ಲ. ನಾವು ಕೂಡ ಯಾವುದೇ ರೀತಿಯ ರಾಜಿ, ಪಂಚಾಯಿತಿಗೆ ಯತ್ನಿಸಿಲ್ಲ. ಒಂದು ವೇಳೆ ಆ ಸಂದರ್ಭ ಬಂದರೆ ನಮ್ಮ ಸಮಾಜದ ಮುಖಂಡರು ನಿರ್ಧಾರಿಸುತ್ತಾರೆ. ಆದರೆ ನನ್ನ ಮಗನ ಕೊಲೆ ಮಾಡಿದವರಿಗೆ ತಕ್ಕ ಶಿಕ್ಷೆ ಆಗಬೇಕು. ಸೊಸೆ, ಮೊಮ್ಮಗನ ಜೀವನಕ್ಕೆ ಸರ್ಕಾರ ಅನುಕೂಲ ಮಾಡಿಕೊಡಲಿ ಎಂದು ಮನವಿ ಮಾಡಿಕೊಂಡಿದ್ದಾರೆ

    ಇನ್ನೂ ಡಿ-ಗ್ಯಾಂಗ್‌ನ (D-Gang) ಎಲ್ಲಾ ಆರೋಪಿಗಳು ಜಾಮೀನಿನ ಮೇಲೆ ಹೊರಗಿದ್ದು, ನಟ ದರ್ಶನ್ (Actor Darshan) ಡೆವಿಲ್ ಸಿನಿಮಾ ಶೂಟಿಂಗ್‌ನಲ್ಲಿ ಬ್ಯೂಸಿಯಾಗಿದ್ದಾರೆ.ಇದನ್ನೂ ಓದಿ: ಪರಿಷತ್‌ಗೆ ಶಿಫಾರಸ್ಸಾಗಿದ್ದ 4 ಹೆಸರುಗಳಿಗೆ ಕೊನೆ ಕ್ಷಣದಲ್ಲಿ ಹೈಕಮಾಂಡ್‌ ಬ್ರೇಕ್‌!

  • ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಲಯಾಳಂ ಸಿನಿಮಾ ಚಿತ್ರೀಕರಣಕ್ಕೆ ಅನುಮತಿ – ಸರ್ಕಾರದ ವಿರುದ್ಧ ಸ್ಥಳೀಯರ ಆಕ್ರೋಶ

    ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಲಯಾಳಂ ಸಿನಿಮಾ ಚಿತ್ರೀಕರಣಕ್ಕೆ ಅನುಮತಿ – ಸರ್ಕಾರದ ವಿರುದ್ಧ ಸ್ಥಳೀಯರ ಆಕ್ರೋಶ

    – ಹಸು ಹೋದ್ರೆ ನಮ್ಮ ಮೇಲೆ  ಕೇಸ್ ಹಾಕ್ತಾರೆ, ಶೂಟಿಂಗ್‌ಗೆ ಅನುಮತಿ ನೀಡಿದ್ದು ಹೇಗೆ?
    – 9 ವರ್ಷದ ಹಿಂದೆ ಖಾಸಗಿ ವಾಹನ ಪ್ರವೇಶಕ್ಕೆ ನಿರ್ಬಂಧ

    ಚಾಮರಾಜನಗರ: ಇಲ್ಲಿನ ಬಂಡೀಪುರ ಅಭಯಾರಣ್ಯದ (Bandipur Sanctuary) ಹಿಮವದ್ ಗೋಪಾಲಸ್ವಾಮಿ ಬೆಟ್ಟ (Himavad Gopalaswamy Betta) ಪರಿಸರ ಸೂಕ್ಷ್ಮ ವಲಯದಲ್ಲಿ ಮಲಯಾಳಂ ಸಿನಿಮಾ ಚಿತ್ರೀಕರಣಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡುವ ಮೂಲಕ ರೈತರ ಹಾಗೂ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದೆ.

    ಬಂಡೀಪುರವು ರಾಜ್ಯದ ಪ್ರಸಿದ್ಧ ಹುಲಿ ಸಂರಕ್ಷಿತ ಅರಣ್ಯವಾಗಿದೆ. ಪರಿಸರ ಸೂಕ್ಷ್ಮ ವಲಯದಲ್ಲಿ ಸಿನಿಮಾ ಶೂಟಿಂಗ್‌ಗೆ ಸರ್ಕಾರ ಹಾಗೂ ಅರಣ್ಯ ಇಲಾಖೆಯ ಅನುಮತಿ ನೀಡಿದ್ದು ಮಲಯಾಳಂ ಸಿನಿಮಾದ ಚಿತ್ರೀಕರಣ ನಡೆದಿದೆ. ಇದೀಗ ಪರಿಸರ ಸೂಕ್ಷ್ಮ ವಲಯದಲ್ಲಿ ಹೇಗೆ ಚಿತ್ರೀಕರಣಕ್ಕೆ ಅವಕಾಶ ಕೊಟ್ಟಿದ್ದಾರೆ? ರಾಜ್ಯ ಸರ್ಕಾರ, ಬಂಡೀಪುರವನ್ನು ಕೇರಳ ಸರ್ಕಾರಕ್ಕೆ ಒತ್ತೆ ಇಡ್ತಿದ್ಯಾ ಎಂದು ಪ್ರಶ್ನಿಸುವ ಮೂಲಕ ಸ್ಥಳೀಯರು ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಇದನ್ನೂ ಓದಿ: Exclusive |  ಕ್ಯಾಬಿನೆಟ್ ಕ್ಲೈಮ್ಯಾಕ್ಸ್, ಜಾತಿ ಗಣತಿ ಮಂಡನೆಗೆ ಪ್ಲ್ಯಾನ್‌ – ಮಾಸ್ಟರ್‌ಸ್ಟ್ರೋಕ್‌ ಕೊಡ್ತಾರಾ ಸಿಎಂ?

    ಇಡೀ ದೇಶದಲ್ಲಿ ಪ್ರಸಿದ್ಧಿ ಪಡೆದಿರುವ ಹಲಿ ಸಂರಕ್ಷಿತ ಅರಣ್ಯಗಳಲ್ಲಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಕೂಡ ಒಂದು. ಈಗ ಕರ್ನಾಟಕ ಸರ್ಕಾರ ಹಾಗೂ ಪಿಸಿಸಿಎಫ್ ಕೇರಳದ ಮಲಯಾಳಂ ಸಿನಿಮಾ ಚಿತ್ರೀಕರಣಕ್ಕೆ ಬಂಡೀಪುರದ ಪರಿಸರ ಸೂಕ್ಷ್ಮ ವಲಯದಲ್ಲಿ ಬರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಅವಕಾಶ ನೀಡುವ ಮೂಲಕ ಹುಬ್ಬೇರುವಂತೆ ಮಾಡಿದೆ. ಇದನ್ನೂ ಓದಿ: ಡೀಸೆಲ್ ಬೆಲೆ ಏರಿಕೆ – ಖಾಸಗಿ ಬಸ್ ಪ್ರಯಾಣ ದರ ದುಬಾರಿ!

    ಹಿಮವದ್ ಗೋಪಾಲಸ್ವಾಮಿ ಬೆಟ್ಟ ಪರಿಸರ ಸೂಕ್ಷ್ಮ ವಲಯ ವ್ಯಾಪ್ತಿಗೆ ಬರುವ ಹಿನ್ನಲೆ ಕಾಡು ಪ್ರಾಣಿಗಳಿಗೆ ತೊಂದರೆಯಾಗುವ ನಿಟ್ಟಿನಲ್ಲಿ 2016ರಲ್ಲಿ ಖಾಸಗಿ ವಾಹನಗಳಿಗೆ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಯಾವುದೇ ಶೂಟಿಂಗ್‌ಗಳು ಸಹ ಬೆಟ್ಟದಲ್ಲಿ ನಡೆದಿಲ್ಲ. ಆದರೆ ಇದೀಗ ಶೂಟಿಂಗ್‌ಗೆ ಅವಕಾಶ ಕೊಟ್ಟಿರುವುದು ಏಕೆ ಎಂದು ಆಕ್ರೋಶ ಹೊರಹಾಕಿದ್ದಾರೆ.

    ಒಂದು ದಿನದ ಮಟ್ಟಿಗೆ ಸರ್ಕಾರ ಮಲಯಾಳಂ ಸಿನಿಮಾ ಶೂಟಿಂಗ್‌ಗೆ ಅವಕಾಶ ಕೊಟ್ಟಿತ್ತು. ಸ್ಥಳೀಯ ಕಾಂಗ್ರೆಸ್ ಶಾಸಕ ಗಣೇಶ್ ಪ್ರಸಾದ್ ಕೂಡ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾಗಿದ್ದಾರೆ. ಸರ್ಕಾರ, ಸಚಿವರಿಗೆ ಪರಿಸರ ಸೂಕ್ಷ್ಮ ವಲಯದ ಅರಿವಿಲ್ಲದಿದ್ದರೂ ಪರವಾಗಿಲ್ಲ, ಸ್ಥಳೀಯ ಶಾಸಕರಿಗಿಲ್ವಾ ಎನ್ನುವ ಪ್ರಶ್ನೆ ಮಾಡುತ್ತಾರೆ. ಅರಣ್ಯದಲ್ಲಿ ನಮ್ಮ ಹಸು ಮೇಯಲು ಹೋದರೆ ಅವಕಾಶ ಕೊಡುವುದಿಲ್ಲ. ನಮ್ಮ ಮೇಲೆ ಕೇಸ್ ಹಾಕಿದ ನಿದರ್ಶನ ಕೂಡ ಇದೆ. ಹೀಗಿರುವಾಗ ಶೂಟಿಂಗ್‌ಗೆ ಸರ್ಕಾರ ಪರ್ಮಿಷನ್ ಕೊಟ್ಟು ಅದರಿಂದ ಬಂಡೀಪುರದ ಆದಾಯ ಹೆಚ್ಚಿಸುವ ಅಗತ್ಯವಿಲ್ಲ ಸ್ಥಳೀಯರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಭಾರತದ ಉದ್ಯಮಿಗೆ ಅಮೆರಿಕದಲ್ಲಿ ಕಹಿ ಅನುಭವ – ಏರ್‌ಪೋರ್ಟ್‌ನಲ್ಲಿ 8 ಗಂಟೆ ಕೂರಿಸಿದ ಆರೋಪ

    ಈ ಬಗ್ಗೆ ಆರಣ್ಯ ಇಲಾಖೆ ಡಿಸಿಎಫ್ ಪ್ರಭಾಕರನ್ ಮಾತ್ರ ರಾಜ್ಯ ಸರ್ಕಾರದಿಂದಲೇ ಮಲಯಾಳಂ ಸಿನಿಮಾ ಚಿತ್ರಿಕರಣಕ್ಕೆ ಅನುಮತಿ ನೀಡಲಾಗಿದೆ. ಅನುಮತಿಯ ಅದೇಶ ಪ್ರತಿ ನಮಗೂ ಬಂದಿದೆ. ಅಗ್ರಿಮೆಂಟ್ ಮಾಡ್ಕೊಂಡಿದ್ದೇವೆಂದು ಪಬ್ಲಿಕ್ ಟಿವಿಗೆ ಡಿಸಿಎಫ್ ಪ್ರಭಾಕರ್ ದೂರವಾಣಿಯಲ್ಲಿ ಮೂಲಕ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಚೀನಾ ಮೇಲಿನ ಟ್ಯಾರಿಫ್‌ ಅನ್ನು 104% ಹೆಚ್ಚಿಸಿದ ಅಮೆರಿಕ

    ಈಗಾಗ್ಲೇ ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ತೆರವು ಬೇಡ ಎಂಬ ಕಾವು ಹೊತ್ತಿದೆ. ಈ ಸಮಯದಲ್ಲಿ ಮಲಯಾಳಂ ಸಿನಿಮಾಗೆ ಸರ್ಕಾರ ಅವಕಾಶ ಕಲ್ಪಿಸಿದ್ದು, ರೈತರು ಹಾಗೂ ಪರಿಸರವಾದಿಗಳ ಕಣ್ಣು ಕೆಂಪಾಗಿಸಿದೆ.

  • ಸಿನಿಮಾ ಚಿತ್ರೀಕರಣದ ವೇಳೆ ಹೆಜ್ಜೇನು ದಾಳಿ – ಇಬ್ಬರು ಗಂಭೀರ

    ಸಿನಿಮಾ ಚಿತ್ರೀಕರಣದ ವೇಳೆ ಹೆಜ್ಜೇನು ದಾಳಿ – ಇಬ್ಬರು ಗಂಭೀರ

    ಕಾರವಾರ: ಕನ್ನಡ ಸಿನಿಮಾ ‘ಭಾವಪೂರ್ಣ’ಚಿತ್ರೀಕರಣದ ಸಂದರ್ಭದಲ್ಲಿ ಹೆಜ್ಜೇನು ದಾಳಿಯಾಗಿ (Honey Bee Attack) ಇಬ್ಬರು ಲೈಟಿಂಗ್ ಸಹಾಯಕರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕುಸಿದು ಬಿದ್ದ ಘಟನೆ ಉತ್ತರ ಕನ್ನಡ (ಜಿಲ್ಲೆಯ ಅಂಕೋಲ ತಾಲೂಕಿನ ಜಮಗೋಡಿನ ರೈಲ್ವೆ ನಿಲ್ದಾಣ ರಸ್ತೆಯ ಕ್ರಾಸ್ ಬಳಿ ಸೋಮವಾರ ನಡೆದಿದೆ.

    ಮಂಡ್ಯ ಮೂಲದ ರಮೇಶ್ ಮತ್ತು ರಾಮು ಹೆಜ್ಜೇನು ಕಡಿತಕ್ಕೊಳಗಾದ ಲೈಟಿಂಗ್ ಸಹಾಯಕರು. ಹೆಜ್ಜೇನು ದಾಳಿ ಮಾಡುತ್ತಲೇ ಸ್ಥಳದಲ್ಲಿದ್ದ ಚಿತ್ರತಂಡದ ಕೆಲಸಗಾರರು, ತಂತ್ರಜ್ಞರು, ನಟರು ಕಾಲ್ಕಿತ್ತಿದ್ದಾರೆ. ಈ ವೇಳೆ ಇಬ್ಬರ ಮೇಲೆ ನೂರಾರು ಜೇನು ನೊಣಗಳು ದಾಳಿ ನಡೆಸಿವೆ. ಇದರಿಂದ ಇಬ್ಬರೂ ಸ್ಥಳದಲ್ಲೇ ಕುಸಿದು ಬಿದ್ದಿದ್ದು, ಅವರಿಗೆ ಇತರರು ಸಹಾಯ ಮಾಡಲೂ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು. ಇದನ್ನೂ ಓದಿ: ಕೆಜಿಎಫ್‌ ಮ್ಯೂಸಿಕ್‌ ಬಳಕೆ – ಕಾಂಗ್ರೆಸ್‌ ಟ್ವಿಟ್ಟರ್‌ ಖಾತೆ ಬ್ಲಾಕ್‌ ಮಾಡುವಂತೆ ಕೋರ್ಟ್‌ ಆದೇಶ

    ಘಟನೆಯ ಬಳಿಕ ಸ್ಥಳೀಯ ಆಟೋ ಚಾಲಕನ ಸಹಾಯದಿಂದ 108ಕ್ಕೆ ಕರೆ ಮಾಡಿದ್ದು, ಗಾಯಾಳುಗಳನ್ನು ರಕ್ಷಿಸಿ ಅಂಕೋಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ರಾಜ್ಯದಲ್ಲಿ ಆಡಳಿತ ಪಕ್ಷವೂ ಇಲ್ಲ, ವಿರೋಧ ಪಕ್ಷವೂ ಇಲ್ಲ: ಸಿಎಂ ಇಬ್ರಾಹಿಂ

    Live Tv
    [brid partner=56869869 player=32851 video=960834 autoplay=true]