Tag: ಸಿನಿಮಾ ಟಿಕೆಟ್

  • ಮಲ್ಟಿಪ್ಲೆಕ್ಸ್‌ಗಳಲ್ಲಿ ಏಕರೂಪ ದರ ನಿಗದಿ ವಿಚಾರ – ಮಧ್ಯಂತರ ಆದೇಶ ಕಾಯ್ದಿರಿಸಿದ ಹೈಕೋರ್ಟ್

    ಮಲ್ಟಿಪ್ಲೆಕ್ಸ್‌ಗಳಲ್ಲಿ ಏಕರೂಪ ದರ ನಿಗದಿ ವಿಚಾರ – ಮಧ್ಯಂತರ ಆದೇಶ ಕಾಯ್ದಿರಿಸಿದ ಹೈಕೋರ್ಟ್

    ಬೆಂಗಳೂರು:ಮಲ್ಟಿಪ್ಲೆಕ್ಸ್‌ಗಳಲ್ಲಿ ಏಕರೂಪ (Multiplex) ದರ ನಿಗದಿ ವಿಚಾರ ಸಂಬಂಧ ಮಧ್ಯಂತರ ಆದೇಶವನ್ನ ಹೈಕೋರ್ಟ್ (High Court) ಕಾಯ್ದಿರಿಸಿದೆ.

    200 ರೂ.ಗೆ ಚಿತ್ರ ಪ್ರದರ್ಶನ ಮಾಡಿದ್ರೆ ನಷ್ಟ ಉಂಟಾಗುತ್ತೆ ಎಂದು ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯಿತು. ಮಲ್ಟಿಪ್ಲೆಕ್ಸ್‌ಗಳ ಪರವಾಗಿ ಮುಕುಲ್ ರೋಹ್ಟಗಿ ವಾದಿಸಿ, ಸಂವಿಧಾನದ ಸಮಾನತೆ, ಅಭಿವ್ಯಕ್ತಿ ಸ್ವಾತಂತ್ರ‍್ಯ ಉಲ್ಲಂಘನೆಯಾಗಿದೆ. 2017ರಲ್ಲಿಯೂ ಸರ್ಕಾರ ಇದೇ ರೀತಿಯ ಆದೇಶ ಹೊರಡಿಸಿದ್ದಾಗ ಹೈಕೋರ್ಟ್ ರದ್ದುಪಡಿಸಿತ್ತು. ಟಿಕೆಟ್ ಖರೀದಿಸಿ ಚಿತ್ರ ನೋಡುವುದು ಗ್ರಾಹಕನಿಗೆ ಬಿಟ್ಟದ್ದು, ಈ ವಿಚಾರದಲ್ಲಿ ಸರ್ಕಾರ ಮಧ್ಯಪ್ರವೇಶಿಸುವಂತಿಲ್ಲವೆಂದು ವಾದ ಮಂಡಿಸಿದರು. ಇದನ್ನೂ ಓದಿ: ಎಸ್‌ಟಿಗೆ ಕುರುಬ – ಮಹತ್ವದ ಸಭೆ ಕರೆದ ವಾಲ್ಮೀಕಿ ಸಮುದಾಯ

    ಹೊಂಬಾಳೆ ಫಿಲಂಸ್ ಪರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ವಾದಿಸಿ, ಜಿಎಸ್‌ಟಿ ಹೊರತುಪಡಿಸಿದ ಟಿಕೆಟ್ ದರ 200 ರೂ. ನಿಗದಿಪಡಿಸಲಾಗಿದೆ. ಇದು ವಿವೇಚನೆಯಿಲ್ಲದೇ ಸರ್ಕಾರ ಕೈಗೊಂಡ ನಿರ್ಧಾರ. ಸಿನಿಮಾ ನಿರ್ಮಿಸಲು ಎಷ್ಟೆಲ್ಲಾ ಶ್ರಮ, ಬಂಡವಾಳ ಬೇಕಾಗುತ್ತದೆ. ಅಂಕಿ ಅಂಶ ಸಂಗ್ರಹಿಸದೇ ಸರ್ಕಾರದ ಸ್ವೇಚ್ಚೆಯ ನಿರ್ಧಾರವಾಗಿದೆ ಎಂದು ವಾದಿಸಿದ್ದಾರೆ. ಇದನ್ನೂ ಓದಿ: ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ, ಕೂಡಲೇ ಕೈಬಿಡಿ: ಆರ್.ಅಶೋಕ್

    ಈ ಮಧ್ಯೆ, 200 ರೂ. ನಿಗದಿ ಮಾಡಿರೋದು ಒಳ್ಳೆಯ ನಿರ್ಧಾರ ಅಂತ ನಿರ್ಮಾಪಕಿ ಪ್ರಿಯಾ ಹಾಸನ್, ನಿರ್ಮಾಪಕರಾದ ಎ ಗಣೇಶ್, ಚಿಂಗಾರಿ ಮಹದೇವ್ ಹೇಳಿದ್ದಾರೆ. ಅಲ್ಲದೇ ಕೋರ್ಟ್ ಮೆಟ್ಟಿಲೇರಿರುವವರು ಅರ್ಜಿ ವಾಪಸ್ ಪಡೆಯಬೇಕು. ಇಲ್ಲವಾದಲ್ಲಿ ನಾವೂ ಕಾನೂನು ಹೋರಾಟ ಮಾಡುತ್ತೇವೆ ಎಂದು ಫಿಲ್ಮ್ ಚೇಂಬರ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶ | ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷೆ!

  • ಇನ್ಮುಂದೆ ಮಲ್ಟಿಪ್ಲೆಕ್ಸ್ ಸೇರಿ ಎಲ್ಲ ಚಿತ್ರಮಂದಿರಗಳಲ್ಲಿ ಏಕರೂಪ ದರ ನಿಗದಿ; ಪ್ರತಿ ಟಿಕೆಟ್‍ಗೆ ಇಷ್ಟೇ ಬೆಲೆ

    ಇನ್ಮುಂದೆ ಮಲ್ಟಿಪ್ಲೆಕ್ಸ್ ಸೇರಿ ಎಲ್ಲ ಚಿತ್ರಮಂದಿರಗಳಲ್ಲಿ ಏಕರೂಪ ದರ ನಿಗದಿ; ಪ್ರತಿ ಟಿಕೆಟ್‍ಗೆ ಇಷ್ಟೇ ಬೆಲೆ

    ಬೆಂಗಳೂರು: ಮಲ್ಟಿಪ್ಲೆಕ್ಸ್‌ ಥಿಯೇಟರ್‌ಗಳಲ್ಲಿ (Multiplex Theatre) ನಡೆಯುತ್ತಿದ್ದ ಲೂಟಿಗೆ ಕೊನೆಗೂ ರಾಜ್ಯ ಸರ್ಕಾರ ಕಡಿವಾಣ ಹಾಕಿದ್ದು, ಸಿನಿಮಾ ಪ್ರಿಯರಿಗೆ ಗುಡ್‌ನ್ಯೂಸ್‌ ಕೊಟ್ಟಿದೆ. ಮಲ್ಟಿಪ್ಲೆಕ್ಸ್ ಸೇರಿದಂತೆ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಏಕರೂಪ ದರ ನಿಗದಿ ಮಾಡಿ ರಾಜ್ಯ ಸರ್ಕಾರ (Karnataka Government) ಇಂದು ಅಧಿಸೂಚನೆ ಹೊರಡಿಸಿದೆ.

    ಟಿಕೆಟ್‌ ದರ ಎಷ್ಟು?
    ಇನ್ಮುಂದೆ ರಾಜ್ಯದ ಮಲ್ಟಿಪ್ಲೆಕ್ಸ್‌ ಸೇರಿದಂತೆ ಎಲ್ಲಾ ಚಿತ್ರಮಂದಿಗಳಲ್ಲಿ, ಎಲ್ಲಾ ಭಾಷಯ ಚಿತ್ರಗಳಿಗೆ ಹಾಗೂ ಎಲ್ಲಾ ಪ್ರದರ್ಶನಕ್ಕೆ ಎಲ್ಲಾ ರೀತಿಯ ತೆರಿಗೆ ಹೊರತುಪಡಿಸಿ ಟಿಕೆಟ್‌ ದರ (Cinema Ticket Price) 200 ರೂ. ಮೀರದಂತೆ ಆದೇಶದಲ್ಲಿ ತಿಳಿಸಿದೆ. 75 ಆಸನಗಳು ಅಥವಾ ಅದಕ್ಕಿಂತ ಕಡಿಮೆ ಆಸನಗಳ ಪ್ರಿಮಿಯಂ ಸೌಲಭ್ಯವಿರುವ ಬಹುಪರದೆ ಚಿತ್ರ ಮಂದಿರಗಳನ್ನು ನಿಗದಿಪಡಿಸಿರುವ 200 ರೂ.ಗಳ ಗರಿಷ್ಠ ಟಿಕೆಟ್‌ ದರ ಮಿತಿಯಿಂದ ಹೊರಗಿಟ್ಟಿದೆ.

    ದರ ಕಡಿಮೆಯಾಗಿದ್ದು ಯಾಕೆ?
    ಕರ್ನಾಟಕದಲ್ಲಿ ಮಲ್ಟಿಪ್ಲೆಕ್ಸ್ ಥಿಯೇಟರ್ ಮಾಲೀಕರು ಸಿನಿಮಾಗೆ ಹೆಚ್ಚು ದರದ ಟಿಕೆಟ್ ನಿಗದಿ ಮಾಡುವ ಕಾರಣ ಜನ ಥಿಯೇಟರ್ ಗಳಿಗೆ ಬರುತ್ತಿಲ್ಲ. ಒಂದೊಂದು ಮಾಲ್ ನಲ್ಲಿ ಬೇರೆ ಬೇರೆ ರೀತಿಯ ದರವಿದೆ. ಹೀಗಾಗಿ ಟಿಕೆಟ್ ದರವನ್ನು ಕಡಿಮೆ ಮಾಡಿ ಏಕರೂಪದ ದರವನ್ನು ತರಬೇಕು ಎಂದು ಆಗ್ರಹಿಸಿ ಜನ ಮತ್ತು ಸಿನಿಮಾ ಕಲಾವಿದರು ಸಾಮಾಜಿಕ ಜಾಲತಾಣದಲ್ಲಿ ಕಳೆದ ವರ್ಷ ಆಂದೋಲನ ನಡೆಸಿದ್ದರು. ತಮಿಳುನಾಡಿನಲ್ಲಿ ಗರಿಷ್ಠ 120 ರೂ. ಟಿಕೆಟ್, ಆಂಧ್ರಪ್ರದೇಶದಲ್ಲಿ ಗರಿಷ್ಠ 150 ರೂ. ನಿಗದಿಯಾಗಿರುವಾಗ ನಮ್ಮಲ್ಲಿ ಯಾಕೆ ದರವನ್ನು ನಿಗದಿ ಮಾಡಬಾರದು ಎಂದು ಸರ್ಕಾರವನ್ನು ಪ್ರಶ್ನಿಸಿದ್ದರು.

    ಒತ್ತಡ ಜಾಸ್ತಿ ಆಗುತ್ತಿದ್ದಂತೆ ಸರ್ಕಾರ ಈ ಸಮಸ್ಯೆಯ ಬಗ್ಗೆ ಅಧ್ಯಯನ ನಡೆಸಲು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ರಾಜೇಂದ್ರ ಸಿಂಗ್ ಬಾಬು ನೇತೃತ್ವದಲ್ಲಿ ಗಿರೀಶ್ ಕಾಸರವಳ್ಳಿ, ಭಾರತಿ ವಿಷ್ಣುವರ್ಧನ್, ರಾಘವೇಂದ್ರ ರಾಜ್‍ಕುಮಾರ್, ರಾಕ್‍ಲೈನ್ ವೆಂಕಟೇಶ್, ಭಾಷಾ, ಜಯಮಾಲ, ಥಾಮಸ್ ಡಿಸೋಜಾ, ಕೆ ವಿ ಚಂದ್ರಶೇಖರ್ ಮತ್ತು ಗಂಗಾಧರ್ ಮೊದಲಿಯಾರ್ ಅವರುಗಳನ್ನು ಒಳಗೊಂಡ 17 ಜನರ ಸದಸ್ಯರ ಸಮಿತಿಯೊಂದನ್ನು ರಚಿಸಿತ್ತು.

    ಈ ಸಮಿತಿ ಟಿಕೆಟ್ ದರಕ್ಕೆ ಗರಿಷ್ಠ ಮಿತಿಯನ್ನು ನಿಗದಿಪಡಿಸಬೇಕು ಹಾಗೂ ಪ್ರೈಮ್ ಟೈಂನಲ್ಲಿ ಪ್ರತಿ ಮಲ್ಟಿಪ್ಲೆಕ್ಸ್ ನಲ್ಲಿ ಎರಡು ಕನ್ನಡ ಸಿನೆಮಾಗಳನ್ನು ಕಡ್ಡಾಯವಾಗಿ ತೋರಿಸಲು ನಿಯಮ ಹೇರುವಂತೆ ಸರ್ಕಾರಕ್ಕೆ ವರದಿ ನೀಡಿತ್ತು. ಈ ಹಿನ್ನೆಲೆ ಏಕರೂಪ ದರ ನಿಗಡಿಮಾಡಿ ರಾಜ್ಯ ಸರ್ಕಾರ ಆದೇಶ ಹೊಡಿಸಿದೆ.

  • ಮಲ್ಟಿಪ್ಲೆಕ್ಸ್‌ ಸೇರಿ ಎಲ್ಲಾ ಥಿಯೇಟರ್‌ಗಳಲ್ಲೂ ಏಕರೂಪ ದರ; 200 ರೂ. ಫಿಕ್ಸ್‌ – ಕರಡು ಅಧಿಸೂಚನೆ ಪ್ರಕಟ

    ಮಲ್ಟಿಪ್ಲೆಕ್ಸ್‌ ಸೇರಿ ಎಲ್ಲಾ ಥಿಯೇಟರ್‌ಗಳಲ್ಲೂ ಏಕರೂಪ ದರ; 200 ರೂ. ಫಿಕ್ಸ್‌ – ಕರಡು ಅಧಿಸೂಚನೆ ಪ್ರಕಟ

    ಬೆಂಗಳೂರು: ಮಲ್ಟಿಪ್ಲೆಕ್ಸ್ (Multiplex) ಸೇರಿದಂತೆ ಎಲ್ಲ ಚಿತ್ರಮಂದಿರಗಳಲ್ಲಿ ಏಕರೂಪ ದರ ಜಾರಿ ಸಂಬಂಧ ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ. ಅಧಿಸೂಚನೆ ಪ್ರಕಟವಾದ 15 ದಿನಗಳ ಒಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದೆ.

    ಮಲ್ಟಿಪ್ಲೆಕ್ಸ್‌ ಸೇರಿದಂತೆ ಎಲ್ಲ ಥಿಯೇಟರ್‌ಗಳಲ್ಲಿ ಟಿಕೆಟ್‌ ದರವನ್ನು 200 ರೂ.ಗೆ ಮಿತಿಗೊಳಿಸುವುದಾಗಿ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಇದನ್ನೂ ಓದಿ: ಆನೆ-ಮಾನವ ಸಂಘರ್ಷ ನಿಯಂತ್ರಣಕ್ಕೆ ಮಹತ್ವದ ಹೆಜ್ಜೆ `ಆನೆಪಥ’: ಈಶ್ವರ್ ಖಂಡ್ರೆ

    ಕರ್ನಾಟಕ ಸಿನೆಮಾಸ್ (ನಿಯಂತ್ರಣ) ನಿಯಮಗಳನ್ನು ತಿದ್ದುಪಡಿ ಮಾಡಲು, ಕಾಯ್ದೆ 1964, 1964 (ಕರ್ನಾಟಕ ಕಾಯ್ದೆ 23) ಅಧಿಕೃತ ಗೆಜೆಟ್‌ನಲ್ಲಿ ಪ್ರಕಟವಾದ ದಿನಾಂಕದಿಂದ 15 ದಿನಗಳ ನಂತರ ಈ ಕರಡನ್ನು ಗಣನೆಗೆ ತೆಗೆದುಕೊಳ್ಳಲಾಗುವುದು ಸರ್ಕಾರ ತಿಳಿಸಿದೆ.

    ಮೇಲೆ ನಿರ್ದಿಷ್ಟಪಡಿಸಿದ ಅವಧಿ ಮುಗಿಯುವ ಮೊದಲು ಈ ಕರಡಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆ ಮತ್ತು ಸಲಹೆಯನ್ನು ರಾಜ್ಯ ಸರ್ಕಾರವು ಪರಿಗಣಿಸುತ್ತದೆ. ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ತಿಳಿಸಬಹುದು. ಇದನ್ನೂ ಓದಿ: ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಸಚಿವ ರಾಮಲಿಂಗಾರೆಡ್ಡಿ

  • ಇಂದಿನಿಂದ 23 ವಸ್ತುಗಳ ಬೆಲೆ ಇಳಿಕೆ: ಸಿನಿಮಾ ಟಿಕೆಟ್ ಬೆಲೆ ಎಷ್ಟು ಇಳಿಕೆಯಾಗುತ್ತೆ?

    ಇಂದಿನಿಂದ 23 ವಸ್ತುಗಳ ಬೆಲೆ ಇಳಿಕೆ: ಸಿನಿಮಾ ಟಿಕೆಟ್ ಬೆಲೆ ಎಷ್ಟು ಇಳಿಕೆಯಾಗುತ್ತೆ?

    ನವದೆಹಲಿ: ಹೊಸ ವರ್ಷಕ್ಕೆ ಪೆಟ್ರೋಲ್, ಡೀಸೆಲ್, ಎಲ್‍ಪಿಜಿ ದರ ಇಳಿಕೆಯಾಗುವುದರ ಜೊತೆಗೆ ಇಂದಿನಿಂದ 23 ವಸ್ತುಗಳ ಬೆಲೆಯೂ ಕಡಿಮೆಯಾಗಲಿದೆ. ಹಣಕಾಸು ಸಚಿವ ಅರುಣ್ ಜೇಟ್ಲಿ ನೇತೃತ್ವದ ಜಿಎಸ್‍ಟಿ ಮಂಡಳಿ ಶೇ.28 ತೆರಿಗೆ ಶ್ರೇಣಿಯಲ್ಲಿದ್ದ ವಸ್ತುಗಳ ತೆರಿಗೆಯನ್ನು ಕಡಿತಗೊಳಿಸಿತ್ತು. ಜಿಎಸ್‍ಟಿ ಮಂಡಳಿ ಘೋಷಿಸಿದ್ದ ಸೇವೆಗಳ ಮೇಲಿನ ತೆರಿಗೆ ಇಳಿಕೆ ಹೊಸ ವರ್ಷದ ಮೊದಲ ದಿನವಾದ ಇಂದಿನಿಂದ ಜಾರಿಗೆ ಬರಲಿದೆ.

    ಯಾವ ವಸ್ತುಗಳ ತೆರಿಗೆ ಇಳಿಕೆಯಾಗಿದೆ?
    ಮಾನಿಟರ್, 32 ಇಂಚು ಟಿ.ವಿ ಸ್ಕ್ರೀನ್, ಟೈರ್, ಪವರ್ ಬ್ಯಾಂಕ್‍ಗಳ ಲಿಥಿಯಂ ಬ್ಯಾಟರಿ, ಗೇರ್ ಬಾಕ್ಸ್, ವಿಡಿಯೊ ಗೇಮ್, ಡಿಜಿಟಲ್ ಕ್ಯಾಮೆರಾ, ವಿಡಿಯೊ ರೆಕಾರ್ಡರ್ ಮೇಲಿದ್ದ ತೆರಿಗೆ ಶೇ.28 ರಿಂದ ಶೇ.18ಕ್ಕೆ ತಗ್ಗಿದೆ. ಇದನ್ನೂ ಓದಿ: ಹೊಸ ವರ್ಷಕ್ಕೆ ಗುಡ್‍ನ್ಯೂಸ್ – ಪೆಟ್ರೋಲ್, ಡೀಸೆಲ್ ಬೆಲೆ ಮತ್ತಷ್ಟು ಇಳಿಕೆ: ಯಾವ ನಗರದಲ್ಲಿ ಎಷ್ಟು?

    ಅಂಗವಿಕಲ ವ್ಯಕ್ತಿಗಳಿಗೆ ಬೇಕಾಗುವ ಸಾಧನಗಳ ಮೇಲಿದ್ದ ತೆರಿಗೆ ಶೇ.28 ರಿಂದ ಶೇ.5ಕ್ಕೆ ಇಳಿಕೆಯಾಗಿದ್ದರೆ, ಶಿಲೆಗಳ ಮೇಲಿದ್ದ ತೆರಿಗೆ ಶೇ.18 ರಿಂದ ಶೇ. 12ಕ್ಕೆ ಇಳಿದಿದೆ. ಶೇ.18 ರಿಂದ ಶೇ.5ಕ್ಕೆ ಮಾರ್ಬಲ್ ಮೇಲಿದ್ದ ತೆರಿಗೆ ತಗ್ಗಿದರೆ, ವಾಕಿಂಗ್ ಸ್ಟಿಕ್, ಹಾರುವ ಬೂದಿಯಿಂದ ತಯಾರಿಸುವ ಇಟ್ಟಿಗೆ ಮೇಲಿದ್ದ ತೆರಿಗೆ ಶೇ.12 ರಿಂದ ಶೇ.5ಕ್ಕೆ ಇಳಿಕೆಯಾಗಿದೆ. ಮ್ಯೂಸಿಕ್ ಪುಸ್ತಕಗಳ ಮೇಲಿದ್ದ ಶೇ.12 ತೆರಿಗೆಯನ್ನು ಸಂಪೂರ್ಣ ತೆಗೆದುಹಾಕಲಾಗಿದೆ.

    ಸಿನಿಮಾ ಟಿಕೆಟ್ ಅಗ್ಗ
    ಸಿನಿ ವೀಕ್ಷಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 100 ರೂ. ತನಕದ ಟಿಕೆಟ್ ಮೇಲೆ ಶೇ.18ರಷ್ಟಿದ್ದ ಜಿಎಸ್‍ಟಿಯನ್ನು ಶೇ.12ಕ್ಕೆ ಇಳಿಸಲಾಗಿದೆ. 100 ರೂ.ಗಿಂತ ಹೆಚ್ಚಿನ ದರದ ಟಿಕೆಟ್ ಮೇಲೆ ಶೇ.28ರಷ್ಟಿದ್ದ ಜಿಎಸ್‍ಟಿ ಶೇ.18ಕ್ಕೆ ತಗ್ಗಿದೆ. ಸರಕು ಸಾಗಣೆ ವಾಹನಗಳ ಮೇಲಿನ ಥರ್ಡ್ ಪಾರ್ಟಿ ಇನ್ಶೂರೆನ್ಸ್ ಪ್ರೀಮಿಯಂ ಮೊದಲಾದವುಗಳ ಮೇಲಿದ್ದ ತೆರಿಗೆ ಶೇ.18 ರಿಂದ ಶೇ.12ಕ್ಕೆ ಇಳಿಕೆಯಾಗಿದೆ. ಇದನ್ನೂ ಓದಿ: ಹೊಸ ವರ್ಷಕ್ಕೆ ಗಿಫ್ಟ್ – ಎಲ್‍ಪಿಜಿ ಸಿಲಿಂಡರ್ ಬೆಲೆ ಭಾರೀ ಇಳಿಕೆ

    ಕಳೆದ ಡಿ.22ರಂದು ಸಭೆ ಸೇರಿದ್ದ ಜಿಎಸ್‍ಟಿ ಮಂಡಳಿ ದರ ಇಳಿಕೆಗೆ ನಿರ್ಧಾರ ಕೈಗೊಂಡಿತ್ತು. ಈ ನಿರ್ಧಾರದಿಂದಾಗಿ ಶೇ.28 ತೆರಿಗೆ ದರ ಹೊಂದಿರುವ ವಸ್ತುಗಳ ಸಂಖ್ಯೆ ಸದ್ಯ 28ಕ್ಕೆ ಇಳಿಕೆಯಾಗಿದೆ. 2017ರ ಜು.1ರಂದು ಜಿಎಸ್‍ಟಿ ಜಾರಿಯಾದಾಗ ಶೇ.28ರ ತೆರಿಗೆ ವ್ಯಾಪ್ತಿಯಲ್ಲಿ 226 ಸರಕುಗಳು ಇದ್ದವು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv