Tag: ಸಿನಿಮಾ ನಿರ್ಮಾಪಕ

  • ʻಗೇಮ್‌ ಚೇಂಜರ್‌ʼ ಸಿನಿ ನಿರ್ಮಾಪಕ ದಿಲ್‌ ರಾಜುಗೆ ಐಟಿ ಶಾಕ್‌ – 55 ತಂಡ, 8 ಕಡೆ ಏಕಕಾಲಕ್ಕೆ ದಾಳಿ

    ʻಗೇಮ್‌ ಚೇಂಜರ್‌ʼ ಸಿನಿ ನಿರ್ಮಾಪಕ ದಿಲ್‌ ರಾಜುಗೆ ಐಟಿ ಶಾಕ್‌ – 55 ತಂಡ, 8 ಕಡೆ ಏಕಕಾಲಕ್ಕೆ ದಾಳಿ

    ನಟ ರಾಮ್‌ ಚರಣ್‌ ಅಭಿನಯದ ʻಗೇಮ್‌ ಚೇಂಜರ್‌ʼ (Game Changer) ಸೇರಿದಂತೆ ಹಿಟ್‌ ಸಿನಿಮಾಗಳ ನಿರ್ಮಾಪಕ ದಿಲ್‌ ರಾಜು (Dil Raju) ಅವರಿಗೆ ಆದಾಯ ತೆರಿಗೆ ಇಲಾಖೆ (Income Tax officer) ಶಾಕ್‌ ಕೊಟ್ಟಿದೆ.

    ಒಟ್ಟು 55 ತಂಡಗಳು ನಿರ್ಮಾಪಕ ದಿಲ್‌ ರಾಜು ಅವರ ಮನೆ, ಕಚೇರಿ ಸೇರಿದಂತೆ 8 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿವೆ. ಹೈದರಾಬಾದ್‌ನ ಜೂಬ್ಲಿಹಿಲ್ಸ್, ಬಂಜಾರಹಿಲ್ಸ್‌ನಲ್ಲಿರುವ ನಿವಾಸಗಳ ಮೇಲೆ, ದಿಲ್ ರಾಜು ಸಹೋದರ ಶಿರೀಷ್, ಪುತ್ರಿ ಹನ್ಸಿತ ರೆಡ್ಡಿ ಹಾಗೂ ಸಂಬಂಧಿಕರ ಮನೆಗಳ ಮೇಲೂ ಐಟಿ ದಾಳಿ ನಡೆಸಿದ್ದು, ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಇದನ್ನೂ ಓದಿ: ಬೆಂಬಲ ತೊಗರಿ ಖರೀದಿ ಶುರು – ಜಿಲ್ಲೆಯಾದ್ಯಂತ 177 ಖರೀದಿ ಕೇಂದ್ರ ಸ್ಥಾಪನೆ

    ಇತ್ತೀಚೆಗಷ್ಟೇ ದೊಡ್ಡ ಬಜೆಟ್‌ ಸಿನಿಮಾ ʻಗೇಮ್ ಚೇಂಜರ್ʼ ನಿರ್ಮಿಸಿದ್ದರು. ಇದು ಬಾಕ್ಸ್‌ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಅದೇ ಹೊತ್ತಿಗೆ ಕಡಿಮೆ ಬಜೆಟ್‌ನಲ್ಲಿ ನಿರ್ಮಾಣ ಮಾಡಿದ ʻಸಂಕ್ರಾಂತಿಕಿ ವಸ್ತುನ್ನಾಂʼ ಸಿನಿಮಾ ಕೂಡ ಭರ್ಜರಿ ಕಲೆಕ್ಷನ್‌ ಮಾಡುತ್ತಿದೆ. ಈ ನಡುವೆ ಐಟಿ ಅಧಿಕಾರಿಗಳು ನಿರ್ಮಾಪಕರಿಗೆ ಶಾಕ್‌ ಕೊಟ್ಟಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ICAT ಕೇಂದ್ರ ಸ್ಥಾಪನೆ ಖಚಿತ – ಉನ್ನತ ಅಧಿಕಾರಿಗಳೊಂದಿಗೆ ಹೆಚ್‌ಡಿಕೆ ಚರ್ಚೆ

  • ನಿರ್ಮಾಪಕನ ಪತ್ನಿ, ಮಗಳು ಬೆಂಕಿಗಾಹುತಿ

    ನಿರ್ಮಾಪಕನ ಪತ್ನಿ, ಮಗಳು ಬೆಂಕಿಗಾಹುತಿ

    ಮುಂಬೈ: ನಿರ್ಮಾಪಕ ಸಂತೋಷ್ ಗುಪ್ತಾ ಅವರ ಪತ್ನಿ ಮತ್ತು ಮಗಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಇದೀಗ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

    ಸಂತೋಷ್ ಗುಪ್ತಾ ಮುಂಬೈನ ಅಂಧೇರಿಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದರು. ಸೋಮವಾರ ತಾಯಿ-ಮಗಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಸಂತೋಷ್ ಮನೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕದಳದ ಸಿಬ್ಬಂದಿಗೆ ವಿಷಯ ತಿಳಿಸಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಇಬ್ಬರನ್ನ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು.

    ತಾಯಿ ಅಸ್ಮಿತಾ ಗುಪ್ತಾರನ್ನ ಕೂಪರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಗಳು ಸೃಷ್ಠಿ ದೇಹದ ಶೇ.70ರಷ್ಟು ಭಾಗ ಬೆಂಕಿಗಾಹುತಿ ಆಗಿದ್ದರಿಂದ ಮಂಗಳವಾರ ಐರೋಲಿ ನ್ಯಾಷನಲ್ ಬರ್ನ್ಸ್ ಸೆಂಟರ್ ಗೆ ರವಾನಿಸಲಾಗಿತ್ತು. ಆದ್ರೆ ತಾಯಿ ಸಾವನ್ನಪ್ಪಿದ ಮರುವದಿನವೇ ಮಗಳು ಸಹ ಸಾವನ್ನಪ್ಪಿದ್ದಾರೆ.

    ಆತ್ಮಹತ್ಯೆಗೆ ಕಾರಣವೇನು?: ಅಸ್ಮಿತಾ ಕಳೆದ ಹಲವು ದಿನಗಳಿಂದ ಕಿಡ್ನಿಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅನಾರೋಗ್ಯ ಹಿನ್ನೆಲೆ ಆತ್ಮಹತ್ಯೆಗೆ ಅಸ್ಮಿತಾ ನಿರ್ಧರಿಸಿದ್ದರು. ಇನ್ನು ತಾಯಿ ಕಷ್ಟ ನೋಡಲಾರದೇ ಮಗಳು ಸಹ ಸೂಸೈಡ್ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ.