Tag: ಸಿಪಿಸಿಬಿ

  • ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಳ – ಪ್ರಾಥಮಿಕ ಶಾಲೆಗಳಲ್ಲಿ ಆನ್‌ಲೈನ್ ಕ್ಲಾಸ್

    ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಳ – ಪ್ರಾಥಮಿಕ ಶಾಲೆಗಳಲ್ಲಿ ಆನ್‌ಲೈನ್ ಕ್ಲಾಸ್

    ನವದೆಹಲಿ: ಚಳಿಗಾಲ ಆರಂಭವಾಗುತ್ತಿದ್ದಂತೆಯೇ ರಾಷ್ಟ್ರ ರಾಜಧಾನಿ ದೆಹಲಿ (Delhi) ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಮಂಜಿನ ಹೊದಿಕೆ, ಗ್ಯಾಸ್‌ ಚೇಂಬರ್‌ ಆಗಿ ಬದಲಾಗಿವೆ. ಉಸಿರಾಡಲು ಶುದ್ಧ ಗಾಳಿ, ಉತ್ತಮ ವಾತಾವರಣ ಇಲ್ಲದೇ ಜನಸಾಮಾನ್ಯರು ಪರದಾಡುವ ಪರಿಸ್ಥಿತಿ ಮತ್ತೆ ಮರುಕಳಿಸಿದೆ. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಶಾಲೆಯಿಂದ ವಿನಾಯಿತಿ ನೀಡಲಾಗಿದೆ.

    ಈ ಕುರಿತು ದೆಹಲಿ ಸಿಎಂ ಅತಿಶಿ (Atishi) ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ವಾಯು ಮಾಲಿನ್ಯ ಮಿತಿಮೀರಿದ ಹಿನ್ನೆಲೆಯುಲ್ಲಿ ದೆಹಲಿಯ ಎಲ್ಲಾ ಪ್ರಾಥಮಿಕ ಶಾಲೆಗಳು ಮುಂದಿನ ಆದೇಶದ ವರೆಗೆ ಆನ್‌ಲೈನ್‌ ತರಗತಿಗಳಿಗೆ ಬಲಾಗುವಂತೆ ಆದೇಶಿಸಿದ್ದಾರೆ.

    ಗುರುವಾರ (ನ.14) ಬೆಳಿಗ್ಗೆ ದಟ್ಟನೆಯ ಮಂಜು ಆವರಿಸಿದ್ದನ್ನು ಕಂಡು ದಿಲ್ಲಿಗರು ಕಂಗಾಲಾಗಿದ್ದಾರೆ. ವಾಯು ಗುಣಮಟ್ಟ ಸೂಚ್ಯಂಕದಲ್ಲಿ (AIQ) ಮಟ್ಟ ಅಪಾಯಕಾರಿ ಹಂತದತ್ತ ತಲುಪುತ್ತಿದೆ. ಮುಂಜಾನೆ AQI 452ರ ಗಡಿ ದಾಟಿದೆ. ಇದರಿಂದ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Delhi Airport) ಗೋಚರತೆ ಕಡಿಮೆಯಾಗಿದ್ದು, 300 ಅಧಿಕ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಫ್ಲೈಟ್‌ರಾಡಾರ್ ತಿಳಿಸಿದೆ.

    ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಪ್ರಕಾರ, ರಾಜಧಾನಿ ಭಾಗದ ಹಲವು ಪ್ರದೇಶಗಳಲ್ಲಿ ಎಕ್ಯೂಐ ಪ್ರಮಾಣ 450 ದಾಟಿದೆ. ಆನಂದ ವಿಹಾರ್, ಅಶೋಕ್ ವಿಹಾರ್, ಬವಾನಾ, ದ್ವಾರಕಾ, ಜಹಾಂಗೀರ್‌ಪುರಿ, ಮುಂಡ್ಕ, ನಜಾಫ್‌ಗಡ, ಲಾಜ್‌ಪತ್ ನಗರ್, ಪತ್ಪರ್‌ಗಂಜ್, ಪಂಜಾಬಿ ಬಾಗ್, ಆರ್‌ಕೆ ಪುರಂ, ರೋಹಿಣಿ, ವಿವೇಕ್ ವಿಹಾರ್ ಮತ್ತು ವಾಜಿರ್‌ಪುರ ಪ್ರದೇಶಗಳನ್ನು ಎಕ್ಯೂಐ ಸರಾಸರಿ ‘ತೀವ್ರ’ ಸ್ವರೂಪದ ವರ್ಗದಲ್ಲಿ ಗುರುತಿಸಲಾಗಿದ್ದು, ಬೆಳಿಗ್ಗೆ 6 ಗಂಟೆ ಸುಮಾರಿಗೆ 450ಕ್ಕಿಂತ ಅಧಿಕವಿತ್ತು.

    ಹದಗೆಡುತ್ತಿರುವ ಗಾಳಿಯ ಗುಣಮಟ್ಟದ ಕುರಿತು ಮಾತನಾಡಿದ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರು ಅತಿಶಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು, ನಾವು ಕರ್ತವ್ಯ ಪಥದಲ್ಲಿ ನಿಂತಿದ್ದೇವೆ ಇಲ್ಲಿ AQI 474 ತಲುಪಿದೆ. ನಮಗೆ ಇಂಡಿಯಾ ಗೇಟ್ ಅನ್ನು ಸಹ ನೋಡಲಾಗುತ್ತಿಲ್ಲ, ಎಎಪಿ ಸರ್ಕಾರದ ಅಸಮರ್ಥತೆ ಇದಕ್ಕೆ ಕಾರಣ ಎಂದು ವಾಗ್ದಾಳಿ ನಡೆಸಿದರು.

  • ನಿಷೇಧದ ನಡುವೆಯೂ ಪಟಾಕಿ ಸದ್ದು- ಅತಿಯಾದ ವಾಯುಮಾಲಿನ್ಯದಿಂದ ಉಸಿರಾಟಕ್ಕೂ ತೊಂದರೆ

    ನಿಷೇಧದ ನಡುವೆಯೂ ಪಟಾಕಿ ಸದ್ದು- ಅತಿಯಾದ ವಾಯುಮಾಲಿನ್ಯದಿಂದ ಉಸಿರಾಟಕ್ಕೂ ತೊಂದರೆ

    ನವದೆಹಲಿ: ದೀಪಾವಳಿಯಂದು ನಿಷೇಧ ಹೊರತಾಗಿಯೂ ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ (Diwali Cracker) ಸಿಡಿಸಲಾಗಿದೆ. ಇದರಿಂದ ವಾಯು ಗುಣಮಟ್ಟ ತೀವ್ರ ಕುಸಿತವಾಗಿದ್ದು, ಜನರಿಗೆ ಉಸಿರಾಟದ ಸಮಸ್ಯೆಗಳು ಎದುರಾಗುತ್ತಿವೆ.

    ದೆಹಲಿಯ (Delhi) ವಾಯು ಗುಣಮಟ್ಟ ಸೂಚ್ಯಂಕವು (AQI) ಇಂದು ಬೆಳಗ್ಗೆ 6 ಗಂಟೆಗೆ 323 ರಷ್ಟಿತ್ತು ಎಂದು ಸಿಸ್ಟಮ್ ಆಫ್ ಏರ್ ಕ್ವಾಲಿಟಿ ಮತ್ತು ಹವಾಮಾನ ಮುನ್ಸೂಚನೆ ಮತ್ತು ಸಂಶೋಧನೆ (SAFAR) ತೋರಿಸಿದೆ. ನೆರೆಯ ಗುರುಗ್ರಾಮ್, ನೋಯ್ಡಾ ಮತ್ತು ಫರಿದಾಬಾದ್‌ನಲ್ಲಿಯೂ ಗಾಳಿಯ ಗುಣಮಟ್ಟವು ಅತ್ಯಂತ ಕಳಪೆ ಮಟ್ಟಕ್ಕೆ ತಲುಪಿದೆ. ದೀಪಾವಳಿಯಿಂದಾಗಿ ಅನುಮತಿಸಿದ್ದ ಡೆಸಿಬಲ್ ಮಿತಿಗಳನ್ನು ಮೀರಿ ಪಟಾಕಿ ಸಿಡಿಸಲಾಗಿದೆ. ಇದರಿಂದಾಗಿ ಸಾರ್ವಜನಿಕರ ಉಸಿರಾಟಕ್ಕೂ ತೊಂದರೆಯಾಗುತ್ತಿದೆ.

    ಆದಾಗ್ಯೂ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ವಾಯುಗುಣಮಟ್ಟ ಕಳಪೆಯಾಗಿರುವುದು ಕಡಿಮೆ. ಈ ಬಾರಿ ದೀಪಾವಳಿಯಲ್ಲಿ (Dewali) ಕಳೆದ 24 ಗಂಟೆಯಲ್ಲಿ ಎಕ್ಯೂಐ 312 ಮಾತ್ರ ಇದೆ. 2021ರಲ್ಲಿ 382 ಎಕ್ಯೂಐ, 2020ರಲ್ಲಿ 414 ಎಕ್ಯೂಐ, 2019ರಲ್ಲಿ 337 ಎಕ್ಯೂಐ ಇತ್ತು. ಆದರೆ ಈ ಬಾರಿ 312 ಎಕ್ಯೂಐ ಇದೆ ಎಂದು ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಹೇಳಿದೆ. ಇದನ್ನೂ ಓದಿ: ಪಟಾಕಿ ಸಿಡಿತದಿಂದ ಹೈದರಾಬಾದ್‍ನಲ್ಲಿ 24 ಮಂದಿ ಕಣ್ಣಿಗೆ ಗಾಯ

    ಸಾಮಾನ್ಯವಾಗಿ ವಾಯುಗುಣಮಟ್ಟ ಸೂಚ್ಯಂಕ 50ರ ನಡುವೆ ಇದ್ದರೆ ಉತ್ತಮ, 51 ರಿಂದ 100 ತೃಪ್ತಿದಾಯಕ, 101 ರಿಂದ 200 ಮಧ್ಯಮ, 201 ರಿಂದ 300 ಕಳಪೆ, 301 ರಿಂದ 400 ಅತ್ಯಂತ ಕಳಪೆ, 401 ರಿಂದ 500 ತೀವ್ರ ಕಳಪೆ ಎಂದು ಅಂದಾಜಿಸಲಾಗುತ್ತದೆ. ಇದನ್ನೂ ಓದಿ: ಪಾಕ್ ಮಾಜಿ ಪ್ರಧಾನಿ ಇಮ್ರಾನ್‌ಖಾನ್ ಚುನಾವಣೆಗೆ ಕೋರ್ಟ್ ಗ್ರೀನ್ ಸಿಗ್ನಲ್

    ವಾಯು ಮಾಲಿನ್ಯದಿಂದಾಗಿ ದೆಹಲಿ ಸರ್ಕಾರ ಪಟಾಕಿ ನಿಷೇಧಿಸಿದೆ. ಆದೇಶ ಉಲ್ಲಂಘನೆ ಮಾಡಿದವರಿಗೆ ದಂಡ ಹಾಗೂ 6 ತಿಂಗಳ ಶಿಕ್ಷೆ ವಿಧಿಸಲು ಮುಂದಾಗಿದೆ. ಆದರೆ ಸುಪ್ರೀಂ ಕೋರ್ಟ್ ಪಟಾಕಿ ನಿಷೇಧವನ್ನು ತೆಗೆದುಹಾಕಿತ್ತು.

    Live Tv
    [brid partner=56869869 player=32851 video=960834 autoplay=true]