Tag: ಸಿಬಿಐ

  • ಸಂದೇಶ್‌ಖಾಲಿಯಲ್ಲಿ ಸಿಬಿಐ ದಾಳಿ – ತನಿಖಾ ಸಂಸ್ಥೆ ವಿರುದ್ಧವೇ ದೂರು ನೀಡಿದ ಟಿಎಂಸಿ

    ಸಂದೇಶ್‌ಖಾಲಿಯಲ್ಲಿ ಸಿಬಿಐ ದಾಳಿ – ತನಿಖಾ ಸಂಸ್ಥೆ ವಿರುದ್ಧವೇ ದೂರು ನೀಡಿದ ಟಿಎಂಸಿ

    – ಮಮತಾ ಬ್ಯಾನರ್ಜಿ ಬಂಧಿಸುವಂತೆ ಬಿಜೆಪಿ ಆಗ್ರಹ

    ಕೋಲ್ಕತ್ತಾ: 2ನೇ ಹಂತದ ಚುನಾವಣೆ ದಿನವೇ ಸಂದೇಶ್‌ಖಾಲಿಯಲ್ಲಿ (Sandeshkhali) ಸಿಬಿಐ ದಾಳಿ ನಡೆಸಿದ್ದನ್ನು ತೀವ್ರವಾಗಿ ಖಂಡಿಸಿರುವ ಟಿಎಂಸಿ (TMC), ತನಿಖಾ ಸಂಸ್ಥೆ ವಿರುದ್ಧವೇ ದೂರು ನೀಡಿದೆ.

    ಸಿಬಿಐ ಕಾರ್ಯಚರಣೆಯನ್ನೇ ಮಮತಾ ಪ್ರಶ್ನಿಸಿದ್ದಾರೆ. ಅಧಿಕಾರಿಗಳೇ ಶಸ್ತ್ರಾಸ್ತ್ರಗಳನ್ನು ತಂದಿಟ್ಟು ಆರೋಪ ಮಾಡುತ್ತಿರಬಹುದು ಈ ಬಗ್ಗೆ ನಮಗೆ ಅನುಮಾನವಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಆದ್ರೆ, ಟಿಎಂಸಿಯನ್ನು ಭಯೋತ್ಪಾದಕ ಸಂಘಟನೆಗೆ ಹೋಲಿಸಿರುವ ಬಿಜೆಪಿ, ಮಮತಾ ಬ್ಯಾನರ್ಜಿಯನ್ನು (Mamata Banerjee) ಬಂಧಿಸಿ ಎಂದು ಆಗ್ರಹಿಸಿದೆ. ಇದನ್ನೂ ಓದಿ: ಮಣಿಪುರದಲ್ಲಿ ಉಗ್ರರಿಂದ ಬಾಂಬ್ ದಾಳಿ- ಇಬ್ಬರು ಯೋಧರು ಹುತಾತ್ಮ

    ಇದೇ ಹೊತ್ತಲ್ಲಿ, ಹೆಲಿಕಾಪ್ಟರ್ ಹತ್ತುವಾಗ ಸಿಎಂ ಮಮತಾ ಎಡವಿಬಿದ್ದ ಘಟನೆ ದುರ್ಗಾಪುರದಲ್ಲಿ ನಡೆದಿದೆ. ಸಿಎಂಗೆ ಸಣ್ಣ ಗಾಯವಾಗಿದೆ. ಮತ್ತೊಂದು ಕಡೆ, ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಬಿಷ್ಣೋಪುರದ ಭದ್ರತಾ ಪಡೆಗಳ ಶಿಬಿರದ ಮೇಲೆ ಮಧ್ಯರಾತ್ರಿ ದಾಳಿ ನಡೆಸಿದ ಮಿಲಿಟೆಂಟ್‌ಗಳು ಸತತ 2 ಗಂಟೆಗಳ ಕಾಲ ಗುಂಡಿನ ಮಳೆಗರೆದಿದ್ದಾರೆ. ಬಾಂಬ್‌ಗಳನ್ನು ಕೂಡ ಎಸೆದಿದ್ದಾರೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ.

    ಹಿಂಸಾಚಾರದ ವೇಳೆ ಸಿಆರ್‌ಪಿಎಫ್ ಯೋಧರು ಸಹ ಪ್ರತಿದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಸಿಆರ್‌ಪಿಎಫ್ ಹಾಗೂ ಓರ್ವ ಪೊಲೀಸ್‌ ಅಧಿಕಾರಿ ಹುತಾತ್ಮರಾಗಿದ್ದಾರೆ. ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನಾನು ಸಕ್ರಿಯ ರಾಜಕಾರಣಕ್ಕೆ ಬರಬೇಕೆಂಬುದು ದೇಶದ ಕರೆಯಾಗಿದೆ: ರಾಬರ್ಟ್ ವಾದ್ರಾ

    ಏಪ್ರಿಲ್ 26ರಂದು ಸಂದೇಶ್ ಖಾಲಿಯಲ್ಲಿ ದಾಳಿ ನಡೆಸಿದ್ದ ಸಿಬಿಐ ಅಧಿಕಾರಿಗಳ ತಂಡ ವಿದೇಶಿ ನಿರ್ಮಿತ ಶಸ್ತ್ರಾಸ್ತ್ರಗಳು ಹಾಗೂ ಭಾರೀ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿತ್ತು.

  • ಪೊಲೀಸರ ಮೇಲೆ ನಂಬಿಕೆ ಇಲ್ಲ, ಸಿಬಿಐ ತನಿಖೆಗೆ ನೇಹಾ ತಂದೆ ಆಗ್ರಹಿಸಿದ್ದಾರೆ: ಜೆಪಿ ನಡ್ಡಾ

    ಪೊಲೀಸರ ಮೇಲೆ ನಂಬಿಕೆ ಇಲ್ಲ, ಸಿಬಿಐ ತನಿಖೆಗೆ ನೇಹಾ ತಂದೆ ಆಗ್ರಹಿಸಿದ್ದಾರೆ: ಜೆಪಿ ನಡ್ಡಾ

    ಹುಬ್ಬಳ್ಳಿ: ಬಿಜೆಪಿ (BJP) ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅವರು ನೇಹಾ ಹಿರೇಮಠ್‌ (Neha Hiremath) ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.

    ನೇಹಾ ತಂದೆ ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ್‌ ಹಿರೇಮಠ್‌ (Niranjan Hiremath) ಮತ್ತು ಗೀತಾ ಅವರನ್ನು ಭಾನುವಾರ ಸಂಜೆ ಭೇಟಿಯಾಗಿ ಮಾತುಕತೆ ನಡೆಸಿದರು. ನಡ್ಡಾ ಜೊತೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಶಾಸಕರುಗಳಾದ ಅರವಿಂದ್ ಬೆಲ್ಲದ್‌, ಮಹೇಶ್ ಟೆಂಗಿನಕಾಯಿ, ಎಂ ಆರ್ ಪಾಟೀಲ್ ಸೇರಿ ವಿವಿಧ ಮುಖಂಡು ನಡ್ಡಾಗೆ ಸಾಥ್ ನೀಡಿದರು. ಇದನ್ನೂ ಓದಿ: ರಾಹುಲ್‌ ಗಾಂಧಿಗೆ ಅನಾರೋಗ್ಯ – ಇಂಡಿಯಾ ಒಕ್ಕೂಟದ ರ‍್ಯಾಲಿಗೆ ಗೈರು

     

    ಭೇಟಿ ಬಳಿಕ ಮಾತನಾಡಿದ ನಡ್ಡಾ, ಶೋಕತಪ್ತ ಕುಟುಂಬಕ್ಕೆ ಸಾಂತ್ವನ ಹೇಳಲು ಬಂದಿದ್ದೇನೆ. ಬಿಜೆಪಿ, ಇಡಿ ದೇಶ ಅವರ ಕುಟುಂಬದೊಂದಿಗೆ ಇದೆ. ಅವರ ಕುಟುಂಬಕ್ಕೆ ನ್ಯಾಯ ಸಿಗುತ್ತದೆ ಎಂದರು. ಇದನ್ನೂ ಓದಿ: ವಯನಾಡ್‌ನಲ್ಲಿ ರಾಹುಲ್‌ಗೆ ಬಿಗ್‌ ಶಾಕ್‌ – ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಬಿಜೆಪಿ ಸೇರ್ಪಡೆ

    ತನಿಖೆಯ ದಾರಿ ತಪ್ಪಿಸಲು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್‌ ತುಷ್ಟೀಕರಣಕ್ಕಾಗಿ ಈ ರೀತಿ ಹೇಳಿಕೆ ಕೊಟ್ಟಿದ್ದಾರೆ. ಸರ್ಕಾರದ ತುಷ್ಟೀಕರಣವನ್ನು ಜನರು ಕ್ಷಮಿಸುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: Jammu Kashmir Election: ಹೆಡ್‌ ಮಾಸ್ತರ್‌ ಮನೆ ಮೇಲೆ ದಾಳಿ – ಪಿಸ್ತೂಲ್‌, ಚೀನಾ ಗ್ರೆನೇಡ್‌ ವಶ

    ಪೊಲೀಸರು ಪ್ರಕರಣದ ತೀವ್ರತೆ ಅರಿತು ತನಿಖೆ ಮಾಡಬೇಕು. ರಾಜ್ಯ ಪೊಲೀಸರು ಅಸಮರ್ಥರಿದ್ದರೆ ಸಿಬಿಐಗೆ (CBI) ಪ್ರಕರಣವನ್ನು ಹಸ್ತಾಂತರಿಸಲಿ. ನೇಹಾ ತಂದೆಯೂ ಸಿಬಿಐ ತನಿಖೆಗೆ ಆಗ್ರಹಿಸಿದ್ದಾರೆ. ನೇಹಾ ಕುಟುಂಬಕ್ಕೆ ಸ್ಥಳೀಯ ಪೊಲೀಸರ ತನಿಖೆ ಮೇಲೆ ನಂಬಿಕೆ ಇಲ್ಲ. ಹೀಗಾಗಿ ಸಿಬಿಐ ತನಿಖೆಗೆ ಪ್ರಕರಣ ಒಪ್ಪಿಸಬೇಕು. ನೇಹಾ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವ ಪ್ರಯತ್ನ ಬಿಜೆಪಿ ಮಾಡಲಿದೆ ಎಂದರು

     

  • ಚುನಾವಣಾ ಬಾಂಡ್ ಖರೀದಿಯಲ್ಲಿ ಅತಿ ಹೆಚ್ಚು ದೇಣಿಗೆ ನೀಡಿದ ಮೇಘಾ ಎಂಜಿನಿಯರಿಂಗ್‍ಗೆ ಸಿಬಿಐ ಶಾಕ್

    ಚುನಾವಣಾ ಬಾಂಡ್ ಖರೀದಿಯಲ್ಲಿ ಅತಿ ಹೆಚ್ಚು ದೇಣಿಗೆ ನೀಡಿದ ಮೇಘಾ ಎಂಜಿನಿಯರಿಂಗ್‍ಗೆ ಸಿಬಿಐ ಶಾಕ್

    ನವದೆಹಲಿ: ಚುನಾವಣಾ ಬಾಂಡ್ (Electoral Bond) ಖರೀದಿ ಮಾಡುವ ಮೂಲಕ, ರಾಜಕೀಯ ಪಕ್ಷಗಳಿಗೆ ಹೆಚ್ಚಿನ ದೇಣಿಗೆ ನೀಡಿದ್ದ ಮೇಘಾ ಎಂಜಿನಿಯರಿಂಗ್ ಮತ್ತು ಇನ್‍ಫ್ರಾಸ್ಟ್ರಕ್ಚರ್ (Megha Engineering) ಕಂಪನಿಯ ವಿರುದ್ಧ ಸಿಬಿಐ (CBI) ಎಫ್‍ಐಆರ್ ದಾಖಲಿಸಿದೆ.

    ಎನ್‍ಐಎಸ್‍ಪಿಗಾಗಿ 315 ಕೋಟಿ ರೂ. ಯೋಜನೆಯ ಅನುಷ್ಠಾನದಲ್ಲಿ ಭ್ರಷ್ಟಾಚಾರ (Corruption) ನಡೆದಿದೆ ಎಂಬ ದೂರಿನ ಮೇಲೆ ಸಿಬಿಐ ಪ್ರಕರಣ ದಾಖಲಿಸಿದೆ. ಉಕ್ಕಿನ ಸಚಿವಾಲಯದ ಎನ್‍ಎಂಡಿಸಿ ಕಬ್ಬಿಣ ಮತ್ತು ಉಕ್ಕು ಸ್ಥಾವರದ 8 ಅಧಿಕಾರಿಗಳು ಸೇರಿದಂತೆ ಮೇಘಾ ಎಂಜಿನಿಯರಿಂಗ್ ಮತ್ತು ಇನ್‍ಫ್ರಾಸ್ಟ್ರಕ್ಚರ್ ಲಿಮಿಟೆಡ್ ವಿರುದ್ಧ ಈ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಇಸ್ರೇಲ್‌ ಮೇಲೆ ಸಿಟ್ಟು – ಮುಂಬೈಗೆ ಬರುತ್ತಿದ್ದ ಹಡಗನ್ನು ವಶಪಡಿಸಿಕೊಂಡ ಇರಾನ್‌

    ಆರೋಪವೇನು?
    ಇಂಟೇಕ್ ವೆಲ್ ಮತ್ತು ಪಂಪ್ ಹೌಸ್ ಮತ್ತು ಕ್ರಾಸ್ ಕಂಟ್ರಿ ಪೈಪ್‍ಲೈನ್ ಕಾಮಗಾರಿಗೆ ಸಂಬಂಧಿಸಿದ 315 ಕೋಟಿ ರೂ. ಯೋಜನೆಯಲ್ಲಿ ಲಂಚದ ಆರೋಪದ ಬಗ್ಗೆ ಸಿಬಿಐ ಆಗಸ್ಟ್ 10, 2023 ಪ್ರಾಥಮಿಕ ತನಿಖೆ ನಡೆಸಿತ್ತು. ಇದರ ಆಧಾರದ ಮೇಲೆ ಮಾರ್ಚ್ 31 ರಂದು ದಾಖಲಾಗಿರುವ ಲಂಚದ ಪ್ರಕರಣವನ್ನು ದಾಖಲಿಸಲು ಮಾರ್ಚ್ 18 ರಂದು ಶಿಫಾರಸು ಮಾಡಲಾಗಿತ್ತು.

    ಯಾರ ಮೇಲೆ ಎಫ್‍ಐಆರ್?
    ನಿವೃತ್ತ ಕಾರ್ಯನಿರ್ವಾಹಕ ನಿರ್ದೇಶಕ ಪ್ರಶಾಂತ್ ದಾಶ್, ನಿರ್ದೇಶಕ (ಉತ್ಪಾದನೆ) ಡಿಕೆ ಮೊಹಾಂತಿ, ಡಿಜಿಎಂ ಪಿಕೆ ಭುಯಾನ್, ಡಿಎಂ ನರೇಶ್ ಬಾಬು, ಹಿರಿಯ ವ್ಯವಸ್ಥಾಪಕ ಸುಬ್ರೊ ಬ್ಯಾನರ್ಜಿ, ನಿವೃತ್ತ ಸಿಜಿಎಂ (ಹಣಕಾಸು) ಎಲ್ ಕೃಷ್ಣ ಮೋಹನ್, ಜಿಎಂ (ಹಣಕಾಸು) ಕೆ ರಾಜಶೇಖರ್, ವ್ಯವಸ್ಥಾಪಕ (ಹಣಕಾಸು) ಸೋಮನಾಥ್ ಘೋಷ್, ಎಲ್ಲಾ ಸೇರಿ 73.85 ಲಕ್ಷ ರೂ. ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದಲ್ಲಿ ಕಂಪನಿಯ ಜನರಲ್ ಮ್ಯಾನೇಜರ್ ಚಂದ್ರ ಮತ್ತು ಮೇಘಾ ಇಂಜಿನಿಯರಿಂಗ್‍ನ್ನೂ ಆರೋಪಿಗಳೆಂದು ಹೆಸರಿಸಲಾಗಿದೆ.

    ಮೇಘಾಗೆ ಎರಡನೇ ಸ್ಥಾನ
    ಇತ್ತೀಚೆಗೆ ಚುನಾವಣಾ ಬಾಂಡ್‍ಗಳ ಖರೀದಿಯಲ್ಲಿ ಮೇಘಾ ಎಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ಎರಡನೇ ಅತಿ ಹೆಚ್ಚು ಖರೀದಿದಾರ ಎಂಬ ಮಾಹಿತಿ ಹೊರ ಬಿದ್ದಿತ್ತು. 2019 ಮತ್ತು 2023ರ ನಡುವೆ ಬಾಂಡ್‍ಗಳನ್ನು ಖರೀದಿಸಿದ ಸಮಯದಲ್ಲಿ ಐದು ಪ್ರಮುಖ ಯೋಜನೆಗಳನ್ನು ಪಡೆದುಕೊಂಡಿದೆ. ಈ ಬಗ್ಗೆ ಬಿಜೆಪಿಗೆ ಹಣ ನೀಡಿದ್ದಕ್ಕಾಗಿ ಕಂಪನಿಗೆ ಹಲವು ಯೋಜನೆಗಳ ಗುತ್ತಿಗೆ ನೀಡಲಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು.

    ಕಂಪನಿಯ ಒಟ್ಟು 966 ಕೋಟಿ ರೂ. ಚುನಾವಣಾ ಬಾಂಡ್ ಖರೀದಿಯಲ್ಲಿ 584 ಕೋಟಿ ರೂ. ಬಿಜೆಪಿ ಪಾಲಾಗಿದೆ. ಬಿಆರ್‍ಎಸ್ 195 ಕೋಟಿ ರೂ., ಡಿಎನ್‍ಕೆ 85 ಕೋಟಿ ರೂ. ಪಡೆದುಕೊಂಡಿದೆ. ಕಂಪನಿಯ ಬಾಂಡ್‍ಗಳನ್ನು ರಿಡೀಮ್ ಮಾಡಿದ ಇತರರಲ್ಲಿ ವೈಎಸ್‍ಆರ್ ಕಾಂಗ್ರೆಸ್, ತೆಲುಗು ದೇಶಂ, ಕಾಂಗ್ರೆಸ್, ಜನತಾ ದಳ (ಯುನೈಟೆಡ್), ಜನತಾ ದಳ (ಜಾತ್ಯತೀತ) ಮತ್ತು ಜನ ಸೇನಾ ಪಕ್ಷ ಸೇರಿದೆ. ಇದನ್ನೂ ಓದಿ: `ಹೆಲ್ತ್ ಡ್ರಿಂಕ್ಸ್’ ವರ್ಗದಿಂದ ಬೋರ್ನ್‍ವಿಟಾವನ್ನು ತೆಗೆದುಹಾಕಿ: ಕೇಂದ್ರದಿಂದ ಮಹತ್ವದ ಆದೇಶ

  • ಸಿಬಿಐಗೆ ಸಲ್ಲಿಸಿದ ದಾಖಲೆ ನಮಗೂ ನೀಡಿ – ಡಿಕೆಶಿಗೆ ಲೋಕಾಯುಕ್ತದಿಂದ ನೋಟಿಸ್‌

    ಸಿಬಿಐಗೆ ಸಲ್ಲಿಸಿದ ದಾಖಲೆ ನಮಗೂ ನೀಡಿ – ಡಿಕೆಶಿಗೆ ಲೋಕಾಯುಕ್ತದಿಂದ ನೋಟಿಸ್‌

    ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣಕ್ಕೆ (Disproportionate Assets Case) ಸಂಬಂಧಿಸಿದಂತೆ ಸಿಬಿಐಗೆ (CBI) ನೀಡಿರುವ ದಾಖಲೆಗಳನ್ನ ನಮಗೂ ನೀಡಿ ಎಂದು ಲೋಕಾಯುಕ್ತ ಪೊಲೀಸರು (Lokayukta Police) ಡಿಸಿಎಂ ಡಿಕೆ ಶಿವಕುಮಾರ್‌ಗೆ (DK Shivakumar) ನೋಟಿಸ್‌ ನೀಡಿದ್ದಾರೆ.

    ಅಕ್ರಮ ಆಸ್ತಿ ಪ್ರಕರಣ ಸಂಬಂಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದೆ. ಈಗ ತನಿಖೆಯ ಭಾಗವಾಗಿ ಪೊಲೀಸರು ಸಿಬಿಐಗೆ ಸಲ್ಲಿಸಿದ ಮಾಹಿತಿ ಮತ್ತು  ದಾಖಲೆಗಳನ್ನು ನಮ್ಮ ಕಚೇರಿಗೆ ಸಲ್ಲಿಸಿ ಎಂದು ನೋಟಿಸ್‌ ನೀಡಿದೆ.  ಇದನ್ನೂ ಓದಿ: ಮಂಗಳೂರಿನಲ್ಲಿ ರೋಡ್‌ ಶೋ, ಮೈಸೂರಿನಲ್ಲಿ ಸಮಾವೇಶ – ಮೋದಿ ಕಾರ್ಯಕ್ರಮದಲ್ಲಿ ಬದಲಾವಣೆ

     

    ಅಕ್ರಮ ಆಸ್ತಿಗಳಿಕೆ ಪ್ರಕರಣದ ತನಿಖೆಯ ಪೂರ್ವಾನುಮತಿಯನ್ನು ಹಿಂಪಡೆದ ಬಳಿಕ ಸರ್ಕಾರ ತನಿಖೆಯ ಜವಾಬ್ದಾರಿಯನ್ನು ಲೋಕಾಯುಕ್ತಕ್ಕೆ ನೀಡಿತ್ತು. ಲೋಕಾಯುಕ್ತ ಪೊಲೀಸರು ಫೆ.8 ರಂದು ಡಿಕೆಶಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು. ಇದನ್ನೂ ಓದಿ: ಕ್ಷೇತ್ರದಲ್ಲಿ ಭಯದ ವಾತಾವರಣವಿದ್ದರೂ ಜನರಿಗೆ ಎದುರಿಸುವ ಶಕ್ತಿಯಿದೆ: ಸಿಎನ್‌ ಮಂಜುನಾಥ್‌

    ಏನಿದು ಸಿಬಿಐ ಪ್ರಕರಣ?
    2017 ರಲ್ಲಿ ಡಿ.ಕೆ.ಶಿವಕುಮಾರ್ ವಾಸ್ತವ್ಯವಿದ್ದ ಈಗಲ್‌ಟನ್ ರೆಸಾರ್ಟ್ ಮತ್ತು ಅವರ ಸಹಚರರ ಮೇಲೆ ದಾಳಿ ಮೇಲೆ ದಾಳಿ ಮಾಡಿದ್ದ ಆದಾಯ ತೆರಿಗೆ ಇಲಾಖೆ (Income Tax Department) ಸುಮಾರು 8.59 ಕೋಟಿ ಹಣ ವಶಪಡಿಸಿಕೊಂಡಿತ್ತು. ಲೆಕ್ಕಕ್ಕೆ ಸಿಗದ ಈ ಹಣವನ್ನು ಡಿ.ಕೆ.ಶಿವಕುಮಾರ್ ತಮ್ಮ ಸಹಚರರ ಬಳಿ ಇರಿಸಿದ್ದರು ಎಂದು ಆರೋಪಿಸಿತ್ತು. ಇದೇ ಪ್ರಕರಣದಲ್ಲಿ ಇಡಿ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿತ್ತು. ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದ ಇಡಿ ಪಿಸಿ ಆ್ಯಕ್ಟ್ ನಡಿ ತನಿಖೆ ನಡೆಸಲು ಸಿಬಿಐಗೆ ನೀಡಲು ಶಿಫಾರಸು ಮಾಡಿತ್ತು. ಶಿಫಾರಸು ಆಧರಿಸಿ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ನೇತೃತ್ವದ ಸರ್ಕಾರ ಸಿಬಿಐ ತನಿಖೆಗೆ ನೀಡಿತ್ತು.

  • ವಯನಾಡ್ ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿ ಮೃತದೇಹ ಪತ್ತೆ ಪ್ರಕರಣ – 29 ಗಂಟೆಗಳ ಕಾಲ ನಿರಂತರ ಹಲ್ಲೆ

    ವಯನಾಡ್ ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿ ಮೃತದೇಹ ಪತ್ತೆ ಪ್ರಕರಣ – 29 ಗಂಟೆಗಳ ಕಾಲ ನಿರಂತರ ಹಲ್ಲೆ

    – ಪೊಲೀಸರಿಂದ ಸಿಬಿಐಗೆ ವರದಿ ಸಲ್ಲಿಕೆ

    ತಿರುವನಂತಪುರಂ: ಕೇರಳದ (Kerala) ವಯನಾಡ್ ಜಿಲ್ಲೆಯ (Wayanad) ಕಾಲೇಜೊಂದರ ಹಾಸ್ಟೆಲ್‍ನಲ್ಲಿ ಪಶುವೈದ್ಯಕೀಯ ವಿದ್ಯಾರ್ಥಿಯ (Student)
    ಶವ ಪತ್ತೆಯಾದ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳ (Central Bureau of Investigation) ವಹಿಸಿಕೊಂಡಿದೆ. ವಿದ್ಯಾರ್ಥಿ ಸಿದ್ಧಾರ್ಥನ್ (20) ಎಂಬಾತನ ಮೃತದೇಹ ಫೆಬ್ರವರಿ 18 ರಂದು ಹಾಸ್ಟೆಲ್‍ನ ಸ್ನಾನಗೃಹದೊಳಗೆ ಪತ್ತೆಯಾಗಿತ್ತು. ಇದೀಗ ಹಿರಿಯ ವಿದ್ಯಾರ್ಥಿಗಳು ಹಾಗೂ ಸಹಪಾಠಿಗಳ ಕಿರುಕುಳದಿಂದ ಆತ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು (Police) ಸಿಬಿಐಗೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ.

    ಸಿದ್ಧಾರ್ಥನ್ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಹಿರಿಯ ವಿದ್ಯಾರ್ಥಿಗಳು ಮತ್ತು ಸಹಪಾಠಿಗಳು 29 ಗಂಟೆಗಳ ಕಾಲ ನಿರಂತರವಾಗಿ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ವೈತಿರಿ ಪೊಲೀಸ್ ಠಾಣೆಯ ಸಬ್ ಇನ್ಸ್‍ಪೆಕ್ಟರ್ ಪ್ರಶೋಭ್ ಪಿವಿ ಅವರು, ಸಿಬಿಐಗೆ ನೀಡಿದ ತನಿಖಾ ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಹದಿಹರೆಯದ ಹುಡುಗರೇ ಇವಳ ಟಾರ್ಗೆಟ್‌ – ಸೆಕ್ಸ್‌ಗಾಗಿ 14 ವರ್ಷದ ಹುಡುಗಿಯಂತೆ ನಟಿಸಿದ್ದ ಮಾಯಗಾತಿ ಅರೆಸ್ಟ್‌!

    ಕೈ ಮತ್ತು ಬೆಲ್ಟ್ ಬಳಸಿ ನಿರಂತರವಾಗಿ ಸಿದ್ಧಾರ್ಥನ್ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ. ನಿರಂತರ ರ್ಯಾಗಿಂಗ್ ಮತ್ತು ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿ ಹಾಸ್ಟೆಲ್‍ನ ಬಾತ್‍ರೂಮ್‍ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ 20 ಜನರ ವಿರುದ್ಧ ವಯನಾಡ್‍ನ ವೈತಿರಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಇದೀಗ ಕೇಂದ್ರದಿಂದ ಅಧಿಸೂಚನೆ ಪಡೆದ ಕೆಲವೇ ಗಂಟೆಗಳಲ್ಲಿ ಸಿಬಿಐ ಪ್ರಕರಣ ಕೈಗೆತ್ತಿಕೊಂಡಿದೆ.

    ಪ್ರಕರಣದ ಬಗ್ಗೆ ಮಾರ್ಚ್ 9 ರಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಸಿಬಿಐ ತನಿಖೆಗೆ ಭರವಸೆ ನೀಡಿದ್ದರು. ಇನ್ನೂ ಪ್ರಮುಖ ಕಡತಗಳು ಸಿಬಿಐಗೆ ನೀಡದ ಇರುವುದರಿಂದ, ರಾಜ್ಯ ಸರ್ಕಾರ ಉದ್ದೇಶಪೂರ್ವಕವಾಗಿ ಸಿಬಿಐ ತನಿಖೆಯನ್ನು ವಿಳಂಬಗೊಳಿಸಲು ಪ್ರಯತ್ನಿಸುತ್ತಿದೆ. ಕಡತಗಳನ್ನು ಹಸ್ತಾಂತರಿಸದೆ ಸಾಕ್ಷ್ಯ ನಾಶಪಡಿಸಿದೆ ಎಂದು ವಿದ್ಯಾರ್ಥಿಯ ಕುಟುಂಬ ಆರೋಪಿಸಿದೆ.

    ವಿದ್ಯಾರ್ಥಿಯ ತಂದೆ ಜಯಪ್ರಕಾಶ್, ಸಾಯುವ ಮೊದಲು ತನ್ನ ಮಗನಿಗೆ ಎಂಟು ತಿಂಗಳ ಕಾಲ ಕಿರುಕುಳ ನೀಡಲಾಗಿತ್ತು ಎಂದು ಆರೋಪಿಸಿದ್ದಾರೆ. ಅಲ್ಲದೇ ಎಸ್‍ಎಫ್‍ಐ ಮುಖಂಡರು ಹಲವು ತಿಂಗಳುಗಳಿಂದ ಕಾಲೇಜಿನಲ್ಲಿ ಕ್ಯಾಂಪ್ ಹಾಕಿದ್ದು, ಕೆಲವರು ನನ್ನ ಮಗನನ್ನು ಬಟ್ಟೆ ಬಿಚ್ಚಿ ಮಂಡಿಯೂರಿ ಕೂರಿಸಿದ್ದರು ಎಂದು ದೂರಿದ್ದಾರೆ.

    ತಿರುವನಂತಪುರಂ ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‍ಡಿಎ) ಅಭ್ಯರ್ಥಿ, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ (Rajeev Chandrasekhar), ಸಿಬಿಐ ತನಿಖೆಯನ್ನು ತ್ವರಿತಗೊಳಿಸಲು ಕ್ರಮಕೈಗೊಳ್ಳುತ್ತೇವೆ ಎಂದು ವಿದ್ಯಾರ್ಥಿಯ ಕುಟುಂಬಕ್ಕೆ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಖಾಸಗಿ ಬಸ್ ಪಲ್ಟಿ- ಮೂವರ ದುರ್ಮರಣ, 38 ಮಂದಿಗೆ ಗಾಯ

  • ನಾಲ್ಕೈದು ಲಕ್ಷಕ್ಕೆ ಮಾರಾಟ- ಸಿಬಿಐ ದಾಳಿ ಮಾಡಿ ನವಜಾತ ಶಿಶುಗಳ ರಕ್ಷಣೆ

    ನಾಲ್ಕೈದು ಲಕ್ಷಕ್ಕೆ ಮಾರಾಟ- ಸಿಬಿಐ ದಾಳಿ ಮಾಡಿ ನವಜಾತ ಶಿಶುಗಳ ರಕ್ಷಣೆ

    ನವದೆಹಲಿ: ಮಕ್ಕಳ ಕಳ್ಳಸಾಗಣೆ (Child Trafficking) ಪ್ರಕರಣ ಸಂಬಂಧ ದೆಹಲಿಯ ಹಲವು ಪ್ರದೇಶಗಳಲ್ಲಿ ಸಿಬಿಐ ದಾಳಿ ನಡೆಸಿದೆ. ಈ ಪ್ರಕರಣ ಸಂಬಂಧ ಕೆಲವರನ್ನು ಕೂಡ ವಶಕ್ಕೆ ಪಡೆಯಲಾಗಿದೆ.

    ಬಂಧಿತರಲ್ಲಿ ಆಸ್ಪತ್ರೆಯ ವಾರ್ಡ್ ಬಾಯ್ ಸೇರಿದಂತೆ ಕೆಲವು ಮಹಿಳೆಯರು ಮತ್ತು ಪುರುಷರು ಸೇರಿದ್ದಾರೆ. ಶುಕ್ರವಾರ ಸಂಜೆ ದೆಹಲಿ-ಎನ್‌ಸಿಆರ್‌ನ ಹಲವೆಡೆ ಸಿಬಿಐ ದಾಳಿ ನಡೆಸಿತ್ತು. ದಾಳಿ ವೇಳೆ ಸಿಬಿಐ ತಂಡ ಕೇಶವಪುರಂನ ಮನೆಯೊಂದರಿಂದ 2 ನವಜಾತ ಶಿಶುಗಳನ್ನು ಮತ್ತು 8 ಮಕ್ಕಳನ್ನು ರಕ್ಷಿಸಿದೆ.

    ಸದ್ಯ ಸಿಬಿಐ ತಂಡ ಈ ಪ್ರಕರಣದಲ್ಲಿ ಮಕ್ಕಳನ್ನು ಮಾರಾಟ ಮಾಡಿದ ಮಹಿಳೆ ಹಾಗೂ ಖರೀದಿಸಿದ ವ್ಯಕ್ತಿಯ ವಿಚಾರಣೆ ನಡೆಸುತ್ತಿದೆ. ಈ ಪ್ರಕರಣದಲ್ಲಿ ಮಹಿಳೆ ಸೇರಿದಂತೆ ಕೆಲವರನ್ನು ಸಿಬಿಐ ವಶಕ್ಕೆ ಪಡೆದಿದ್ದು, ಅವರ ವಿಚಾರಣೆ ನಡೆಯುತ್ತಿದೆ. ಇದನ್ನೂ ಓದಿ: ಕರಾವಳಿಯಲ್ಲಿ ನಕ್ಸಲರ ಚಲನವಲನ – ಕಡಬದ ಮನೆಗೆ ಬಂದು ಊಟ ಮಾಡಿದ ಶಂಕಿತರು

    ನಾಲ್ಕೈದು ಲಕ್ಷಕ್ಕೆ ಮಕ್ಕಳ ಮಾರಾಟ: ಸಿಬಿಐ (CBI) ಮೂಲಗಳ ಪ್ರಕಾರ, ಕಳೆದ ಒಂದು ತಿಂಗಳಲ್ಲಿ ಸುಮಾರು 10 ಮಕ್ಕಳನ್ನು ಮಾರಾಟ ಮಾಡಲಾಗಿದೆ. ಈ ಗ್ಯಾಂಗ್ ನ ನಂಟುಗಳು ಹಲವು ರಾಜ್ಯಗಳಲ್ಲಿ ಹರಡಿಕೊಂಡಿವೆ ಎಂದು ತನಿಖಾ ಸಂಸ್ಥೆ ತಿಳಿಸಿದೆ. ಮಾಹಿತಿ ಪ್ರಕಾರ ನವಜಾತ ಶಿಶುಗಳನ್ನು 4 ರಿಂದ 5 ಲಕ್ಷ ರೂ.ಗೆ ಮಾರಾಟ ಮಾಡಲಾಗಿದೆ.

    ದೆಹಲಿಯ ಕೆಲವು ದೊಡ್ಡ ಆಸ್ಪತ್ರೆಗಳಿಂದ ಮಕ್ಕಳು ಕಾಣೆಯಾಗಿದ್ದಾರೆ ಎಂಬ ವರದಿಗಳು ಬಂದಿವೆ. ನಂತರ ಸಿಬಿಐ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿ ಮಹಿಳೆ ಸೇರಿದಂತೆ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಮಕ್ಕಳ ವ್ಯಾಪಾರದ ಬಗ್ಗೆ ಮಾಹಿತಿ ಪಡೆದ ಸಿಬಿಐ, ನಾಪತ್ತೆಯಾದ ಮಕ್ಕಳೊಂದಿಗೆ ಸಂಪರ್ಕ ಸಾಧಿಸಿ ದಾಳಿ ನಡೆಸಿತು.

  • ಮಹುವಾ ಮೊಯಿತ್ರಾ ವಿರುದ್ಧ ಅಕ್ರಮ ಹಣ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

    ಮಹುವಾ ಮೊಯಿತ್ರಾ ವಿರುದ್ಧ ಅಕ್ರಮ ಹಣ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

    ನವದೆಹಲಿ: ತೃಣಮೂಲ ಕಾಂಗ್ರೆಸ್‌ ನಾಯಕಿ ಮಹುವಾ ಮೊಯಿತ್ರಾ ವಿರುದ್ಧ ಜಾರಿ ನಿರ್ದೇಶನಾಲಯ (Enforcement Directorate) ಅಕ್ರಮ ಹಣ ವರ್ಗಾವಣೆ ಕೇಸ್‌ (Money Laundering Case) ದಾಖಲಿಸಿದೆ.

    ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ (CBI) ದಾಖಲಿಸಿದ ಎಫ್‌ಐಆರ್‌ ಆಧರಿಸಿ, ಪ್ರಕರಣ ದಾಖಲಿಸಲಾಗಿದೆ. ವಿಚಾರಣೆಗಾಗಿ ತನ್ನ ದೆಹಲಿ ಕಚೇರಿಗೆ ಹಾಜರಾಗುವಂತೆ ನೀಡಿದ್ದ ಏಜೆನ್ಸಿಯ ಸಮನ್ಸ್ ಅನ್ನು ಮಹುವಾ ಮೊಯಿತ್ರಾ ತಪ್ಪಿಸಿಕೊಂಡ ಹಿನ್ನೆಲೆಯಲ್ಲಿ ಇ.ಡಿ ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಉಲ್ಲಂಘನೆ ಪ್ರಕರಣದಲ್ಲಿ ವಿಚಾರಣೆಗಾಗಿ ಮೊಯಿತ್ರಾ ಮತ್ತು ಉದ್ಯಮಿ ದರ್ಶನ್ ಹಿರಾನಂದಾನಿ ಅವರಿಗೆ ಇಡಿ ಸಮನ್ಸ್ ನೀಡಿತ್ತು. ಈ ಸಮನ್ಸ್‌ ಅನ್ನು ಮೊಯಿತ್ರ ನಿರಾಕರಿಸಿದ್ದರು ಎಂದು ಹೇಳಲಾಗಿದೆ.

    ಏನಿದು ಕೇಸ್‌?
    ಬಿಜೆಪಿ ಲೋಕಸಭಾ ಸದಸ್ಯ ನಿಶಿಕಾಂತ್ ದುಬೆ ಅವರು ಮೊಯಿತ್ರಾ ವಿರುದ್ಧ ಪ್ರಶ್ನೆಗಾಗಿ ಹಣ ಪಡೆದ ಆರೋಪ ಮಾಡಿದ್ದರು. ನಂತರ ಮೊಯಿತ್ರಾ ವಿರುದ್ಧ ಲೋಕಪಾಲ್ ನಿರ್ದೇಶನದ ಮೇರೆಗೆ ಎಫ್‍ಐಆರ್ ದಾಖಲಿಸಲಾಗಿತ್ತು. ಪ್ರಶ್ನೆಗಾಗಿ ಹಣ ಪಡೆದ ಆರೋಪದ ಮೇಲೆ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹುವಾ ಅವರಿಗೆ ಸಂಬಂಧಿಸಿದ ಕೋಲ್ಕತ್ತಾದ ಹಲವು ಸ್ಥಳಗಳಲ್ಲಿ ಕೇಂದ್ರೀಯ ತನಿಖಾ ದಳ (CBI) ಶೋಧ ಕಾರ್ಯ ನಡೆಸಿ ಎಫ್‍ಐಆರ್ ಸಹ ದಾಖಲಿಸಲಾಗಿತ್ತು. ಇದನ್ನೂ ಓದಿ: ಬಾವನನ್ನು ಗೆಲ್ಲಿಸಲು ಪಣ – ಬೆಂಗಳೂರು ಗ್ರಾಮಾಂತರವನ್ನು ಪ್ರತಿಷ್ಠೆಯಾಗಿ ಹೆಚ್‌ಡಿಕೆ ತೆಗೆದುಕೊಂಡಿದ್ದು ಯಾಕೆ?

    ಕೈಗಾರಿಕೋದ್ಯಮಿ ಗೌತಮ್ ಅದಾನಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಪ್ರಶ್ನೆಗಳ ದಾಳಿ ಮಾಡಲು ದುಬೈ ಮೂಲದ ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ನಗದು ಮತ್ತು ಉಡುಗೊರೆಗಳನ್ನು ಪಡೆದು ಟಿಎಂಸಿ ನಾಯಕಿ ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ನಿಶಿಕಾಂತ್ ದುಬೆ ಆರೋಪಿಸಿದ್ದರು. ಈ ಆರೋಪಗಳನ್ನು ಮೊಯಿತ್ರಾ ಅವರು ನಿರಾಕರಿಸಿದ್ದರು. ಇದನ್ನೂ ಓದಿ: ಆಸ್ತಿ ತೆರಿಗೆ ಪಾವತಿದಾರರಿಗೆ ಬಂಪರ್‌ – ಏಪ್ರಿಲ್‌ 30ರ ವರೆಗೆ 5% ರಿಯಾಯಿತಿ ನೀಡಿದ ಹು-ಧಾ ಪಾಲಿಕೆ

    ನಂತರ ಲೋಕಪಾಲ್ ಸಿಬಿಐನಿಂದ ಆರು ತಿಂಗಳೊಳಗೆ ತನಿಖಾ ವರದಿ ಕೇಳಿತ್ತು. ತನಿಖೆಯ ಸ್ಥಿತಿಗತಿ ಕುರಿತು ಮಾಸಿಕ ವರದಿ ಸಲ್ಲಿಸುವಂತೆ ಸಿಬಿಐಗೆ ಸೂಚಿಸಲಾಗಿತ್ತು. ಮಹುವಾ ಮೊಯಿತ್ರಾ ಅವರನ್ನು ಕಳೆದ ವರ್ಷ ಲೋಕಸಭೆಯಿಂದ ಉಚ್ಛಾಟನೆ ಮಾಡಲಾಗಿತ್ತು. ಉಚ್ಚಾಟನೆಯನ್ನು ಪ್ರಶ್ನಿಸಿ ಮಹುವಾ ಮೊಯಿತ್ರಾ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ. ಈ ನಡುವೆಯೇ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಈ ಹಿಂದೆ ಗೆದ್ದಿದ್ದ ಕೃಷ್ಣನಗರ ಕ್ಷೇತ್ರದಿಂದ ಟಿಎಂಸಿಯಿಂದ ಅವರನ್ನು ಕಣಕ್ಕಿಳಿಸಲಾಗಿದೆ. ಇದನ್ನೂ ಓದಿ: ಡೇನಿಯಲ್ ಬಾಲಾಜಿ ನಿಧನದ ಬಳಿಕ ಮತ್ತೊಂದು ಶಾಕ್- ವಿಶ್ವೇಶ್ವರ ರಾವ್ ವಿಧಿವಶ

  • ಪ್ರಶ್ನೆಗಾಗಿ ಹಣ ಪಡೆದ ಆರೋಪ – ಮಹುವಾ ಮೊಯಿತ್ರಾ ಮನೆಯಲ್ಲಿ ಸಿಬಿಐ ಶೋಧ

    ಪ್ರಶ್ನೆಗಾಗಿ ಹಣ ಪಡೆದ ಆರೋಪ – ಮಹುವಾ ಮೊಯಿತ್ರಾ ಮನೆಯಲ್ಲಿ ಸಿಬಿಐ ಶೋಧ

    ನವದೆಹಲಿ: ಪ್ರಶ್ನೆಗಾಗಿ ಹಣ ಪಡೆದ ಆರೋಪದ ಮೇಲೆ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್‍ನ (Trinamool Congress) ಮಾಜಿ ಸಂಸದೆ ಮಹುವಾ ಮೊಯಿತ್ರಾ (Mahua Moitra) ಅವರಿಗೆ ಸಂಬಂಧಿಸಿದ ಕೋಲ್ಕತ್ತಾದ ಹಲವು ಸ್ಥಳಗಳಲ್ಲಿ ಕೇಂದ್ರೀಯ ತನಿಖಾ ದಳ (CBI) ಶೋಧ ಕಾರ್ಯ ನಡೆಸುತ್ತಿದೆ. ಮಹುವಾ ಮೊಯಿತ್ರಾ ವಿರುದ್ಧ ಎಫ್‍ಐಆರ್ ದಾಖಲಾದ ಬಳಿಕ ಈ ಬೆಳವಣಿಗೆ ನಡೆದಿದೆ.

    ಬಿಜೆಪಿ ಲೋಕಸಭಾ ಸದಸ್ಯ ನಿಶಿಕಾಂತ್ ದುಬೆ ಅವರು ಮೊಯಿತ್ರಾ ವಿರುದ್ಧ ಪ್ರಶ್ನೆಗಾಗಿ ಹಣ ಪಡೆದ ಆರೋಪ ಮಾಡಿದ್ದರು. ಇದೀಗ ಮೊಯಿತ್ರಾ ವಿರುದ್ಧ  ಲೋಕಪಾಲ್ ನಿರ್ದೇಶನದ ಮೇರೆಗೆ ಎಫ್‍ಐಆರ್ ದಾಖಲಿಸಲಾಗಿದ್ದು, ಪ್ರಕರಣದ ವಿರುದ್ಧ ತನಿಖೆ ಆರಂಭಗೊಂಡಿದೆ.

    ಕೈಗಾರಿಕೋದ್ಯಮಿ ಗೌತಮ್ ಅದಾನಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಪ್ರಶ್ನೆಗಳ ದಾಳಿ ಮಾಡಲು ದುಬೈ ಮೂಲದ ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ನಗದು ಮತ್ತು ಉಡುಗೊರೆಗಳನ್ನು ಪಡೆದು ಟಿಎಂಸಿ ನಾಯಕಿ ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ನಿಶಿಕಾಂತ್ ದುಬೆ ಆರೋಪಿಸಿದ್ದರು. ಈ ಆರೋಪಗಳನ್ನು ಮೊಯಿತ್ರಾ ಅವರು ನಿರಾಕರಿಸಿದ್ದಾರೆ.

    ಲೋಕಪಾಲ್ ಸಿಬಿಐನಿಂದ ಆರು ತಿಂಗಳೊಳಗೆ ತನಿಖಾ ವರದಿ ಕೇಳಿದೆ. ತನಿಖೆಯ ಸ್ಥಿತಿಗತಿ ಕುರಿತು ಮಾಸಿಕ ವರದಿ ಸಲ್ಲಿಸುವಂತೆ ಸಿಬಿಐಗೆ ಸೂಚಿಸಲಾಗಿದೆ. ಮಹುವಾ ಮೊಯಿತ್ರಾ ಅವರನ್ನು ಕಳೆದ ವರ್ಷ ಲೋಕಸಭೆಯಿಂದ ಉಚ್ಛಾಟನೆ ಮಾಡಲಾಗಿತ್ತು. ಉಚ್ಚಾಟನೆಯನ್ನು ಪ್ರಶ್ನಿಸಿ ಮಹುವಾ ಮೊಯಿತ್ರಾ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಈ ಹಿಂದೆ ಗೆದ್ದಿದ್ದ ಕೃಷ್ಣನಗರ ಕ್ಷೇತ್ರದಿಂದ ಟಿಎಂಸಿಯಿಂದ ಅವರನ್ನು ಕಣಕ್ಕಿಳಿಸಲಾಗಿದೆ.

  • ರಷ್ಯಾ ಸೇನೆಯಲ್ಲಿ ಸಿಲುಕಿದ್ದ ಭಾರತೀಯನ ಸಾವು – ಮರುದಿನವೇ ಸಿಬಿಐ ಮಹತ್ವದ ಕಾರ್ಯಾಚರಣೆ

    ರಷ್ಯಾ ಸೇನೆಯಲ್ಲಿ ಸಿಲುಕಿದ್ದ ಭಾರತೀಯನ ಸಾವು – ಮರುದಿನವೇ ಸಿಬಿಐ ಮಹತ್ವದ ಕಾರ್ಯಾಚರಣೆ

    – ಮಾನವ ಕಳ್ಳಸಾಗಣೆಯ ಬೃಹತ್‌ ಜಾಲ ಭೇದಿಸಿದ ಸಿಬಿಐ
    – 7 ಮಹಾನಗರಗಳ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಾಏಕಿ ದಾಳಿ

    ನವದೆಹಲಿ: ವಂಚನೆಗೊಳಗಾಗಿ ರಷ್ಯಾ ಸೇನೆಯಲ್ಲಿ (Russia Army) ಸಿಲುಕಿದ್ದ ಹೈದರಾಬಾದ್‌ ಮೂಲದ ಯುವಕ ಸಾವನ್ನಪ್ಪಿದ ಒಂದು ದಿನದ ನಂತರ ಸಿಬಿಐ (CBI) ಮಹತ್ವದ ಕಾರ್ಯಾಚರಣೆ ನಡೆಸಿದೆ. ದೇಶಾದ್ಯಂತ ಸುಮಾರು 7 ಪ್ರಮುಖ ನಗರಗಳಲ್ಲಿ 10ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿ ಭಾರತೀಯರನ್ನು ವಿದೇಶಗಳಿಗೆ ಕಳ್ಳಸಾಗಣೆ ಮಾಡುತ್ತಿದ್ದ ಜಾಲವನ್ನು ಭೇದಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಹೆಚ್ಚಿನ ವೇತನ ನೀಡುವ ಆಸೆ ತೋರಿಸಿ, ಉದ್ಯೋಗಿಗಳನ್ನು ನೇಮಿಸಿಕೊಳ್ಳುವ ನೆಪದಲ್ಲಿ ವಿದೇಶಗಳಿಗೆ ಕಳ್ಳಸಾಗಣೆ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸಿಬಿಐ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಸಿಬಿಐ, ಮಾನವ ಕಳ್ಳಸಾಗಣೆಯಲ್ಲಿ ತೊಡಗಿದ್ದ ಏಜೆಂಟರಿಗೆ (Human Trafficking Agents) ಸಂಬಂಧಿಸಿದ 7 ಮಹಾನಗರಗಳ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದೆ. ದೆಹಲಿ, ಮುಂಬೈ, ಚೆನ್ನೈ, ತಿರುವನಂತಪುರಂ, ಅಂಬಾಲಾ, ಚಂಡೀಗಢ ಮತ್ತು ಮಧುರೈನಲ್ಲಿ ದಾಳಿ ನಡೆಸಿದೆ. ಸಿಬಿಐ ಪ್ರಕರಣದಲ್ಲಿ ದುಬೈ ಮೂಲದ ಯೂಟ್ಯೂಬ್‌ ಬ್ಲಾಗರ್‌ ಫೈಸಲ್ ಖಾನ್ ಅಲಿಯಾಸ್ ಬಾಬಾ (Faisal Khan alias Baba) ಹೆಸರೂ ದಾಖಲಾಗಿದೆ. ಇದನ್ನೂ ಓದಿ: Shivaratri Speical: ಶಿವಭಕ್ತಿಗೆ ಒಲಿದ ಆಸ್ಟ್ರೇಲಿಯಾ – ಮುಕ್ತಿ ಗುಹೇಶ್ವರ ದೇವಾಲಯದಲ್ಲಿ ಹಲವು ವಿಶೇಷ!

    ಕಳ್ಳಸಾಗಣೆ ಮಾಡುತ್ತಿದ್ದದ್ದು ಹೇಗೆ?
    ಭದ್ರತಾ ಸಿಬ್ಬಂದಿ ಹಾಗೂ ಪೌರ ಕಾರ್ಮಿಕ ಕೆಲಸಗಳಿಗೆ ನೇಮಕ ಮಾಡಿಕೊಳ್ಳುತ್ತಿರುವುದಾಗಿ ಅದಕ್ಕಾಗಿ ಹೆಚ್ಚಿನ ವೇತನ ನೀಡುವುದಾಗಿ ಯುವಕರಿಗೆ ಆಮಿಷ ನೀಡುತ್ತಿದ್ದರು. ನಂತರ ಅವರನ್ನು ರಷ್ಯಾ ಸೇನೆಗೆ ತಳ್ಳಿದ್ದು, ಯುದ್ಧದಲ್ಲಿ ಹೋರಾಡುವಂತೆ ಒತ್ತಾಯಿಸಿದ್ದರು. ತಮ್ಮ ಮನೆ ಮಕ್ಕಳು ನಾಪತ್ತೆಯಾದ ಬಗ್ಗೆ ಅನೇಕ ಕುಟುಂಬಗಳು ಮಾಧ್ಯಮಗಳೊಂದಿಗೆ ತಮ್ಮ ಸಂಕಷ್ಟ ಹೇಳಿಕೊಂಡಿವೆ. ಈ ವೇಳೆ ಪದೇ ಪದೇ ಫೈಸಲ್ ಖಾನ್ ಹೆಸರು ಕೇಳಿಬಂದಿದೆ. ಇದನ್ನೂ ಓದಿ: ವಂಚನೆಯಿಂದ ರಷ್ಯಾ ಸೇನೆಯಲ್ಲಿ ಸಿಲುಕಿದ್ದ ಹೈದರಾಬಾದ್‌ ಯುವಕ – ಯುದ್ಧದಲ್ಲಿ ದುರಂತ ಸಾವು

    ಈಗಾಗಲೇ ರಷ್ಯಾ ಸೇನೆಯಲ್ಲಿ ಒಂದು ಡಜನ್‌ಗೂ ಹೆಚ್ಚು ಭಾರತೀಯ ಯುವಕರು ಸಿಲುಕಿರುವುದಾಗಿ ಮಾಹಿತಿ ಲಭ್ಯವಾಗಿದ್ದು, ಅವರನ್ನು ಕರೆತರಲು ಭಾರತೀಯ ರಾಯಭಾರ ಕಚೇರಿ ರಷ್ಯಾದ ರಕ್ಷಣಾ ಇಲಾಖೆಯೊಂದಿಗೆ ನಿರಂತರ ಸಂಪರ್ಕ ಸಾಧಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕೃತ್ಯದಲ್ಲಿ ದೆಹಲಿ, ಮುಂಬೈ, ಚಂಡೀಗಢ ಮೂಲದ ಖಾಸಗಿ ಕಂಪನಿಗಳು ಭಾಗಿಯಾಗಿವೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಆದ್ರೆ ಕಂಪನಿಗಳ ಹೆಸರನ್ನು ಬಹಿರಂಗಪಡಿಸಿಲ್ಲ. ಇದನ್ನೂ ಓದಿ: ಕ್ಷಿಪಣಿ ದಾಳಿಗೆ ಕೇರಳ ಮೂಲದ ವ್ಯಕ್ತಿ ಸಾವು – ಇಸ್ರೇಲ್‌ನಲ್ಲಿರುವ ಭಾರತೀಯರಿಗೆ ಎಚ್ಚರಿಕೆ ಸಂದೇಶ

  • ಮತ್ತೆ ಸಿಬಿಐ ವಶಕ್ಕೆ ಶೇಖ್ ಶಹಜಹಾನ್ – ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಮುಖಭಂಗ!

    ಮತ್ತೆ ಸಿಬಿಐ ವಶಕ್ಕೆ ಶೇಖ್ ಶಹಜಹಾನ್ – ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಮುಖಭಂಗ!

    ಕೋಲ್ಕತ್ತಾ: ಸಂದೇಶ್‌ಖಾಲಿ (Sandeshkhali) ಪ್ರಕರಣ ಪ್ರಮುಖ ಆರೋಪಿ ಶೇಖ್ ಶಹಜಹಾನ್‌ನನ್ನು ಸಿಬಿಐಗೆ ಒಪ್ಪಿಸುವ ವಿಚಾರದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಮುಖಭಂಗ ಉಂಟಾಗಿದೆ. ಕೊಲ್ಕತ್ತಾ ಹೈಕೋರ್ಟ್ (Calcutta High Court) ಗರಂ ಆಗಿ ಗಡುವು ನೀಡಿದ ಹಿನ್ನೆಲೆಯಲ್ಲಿ ಶೇಖ್ ಶಹಜಹಾನ್‌ನನ್ನು ಪೊಲೀಸರು ಸಿಬಿಐ ವಶಕ್ಕೆ ಒಪ್ಪಿಸಿದ್ದಾರೆ.

    ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಇ.ಡಿ ಅಧಿಕಾರಿಗಳ ಮೇಲೆ ದಾಳಿ, ಬುಡಕಟ್ಟು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ರೈತರ ಕೃಷಿ ಜಮೀನು ಅತಿಕ್ರಮಣ ಸೇರಿ ಹಲವು ಪ್ರಕರಣಗಳಲ್ಲಿ ಬಂಧಿತನಾಗಿರುವ ಟಿಎಂಸಿ ಉಚ್ಚಾಟಿತ ನಾಯಕ ಶೇಖ್ ಶಹಜಹಾನ್‌ನನ್ನು (Sheikh Shahjahan) ಸಿಬಿಐ ಕಸ್ಟಡಿಗೆ ವಹಿಸಬೇಕು ಎಂದು ಕೋಲ್ಕೊತಾ ಹೈಕೋರ್ಟ್ ಮತ್ತೆ ಆದೇಶ ಹೊರಡಿಸಿತು. ನಂತರ ಸಿಬಿಐ (CBI) ಅಧಿಕಾರಿಗಳು ಕೋಲ್ಕತ್ತಾದಲ್ಲಿರುವ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಶಹಜಹಾನ್‌ನನ್ನ ವಶಕ್ಕೆ ಪಡೆದರು.

    ಶೇಖ್ ಶಹಜಹಾನ್‌ನನ್ನು ಮಂಗಳವಾರವೇ (ಮಾರ್ಚ್ 5) ಸಿಬಿಐ ವಶಕ್ಕೆ ನೀಡಬೇಕು. ಇ.ಡಿ ಅಧಿಕಾರಿಗಳ ಮೇಲೆ ದಾಳಿ, ಲೈಂಗಿಕ ದೌರ್ಜನ್ಯ ಸೇರಿ ಎಲ್ಲ ಪ್ರಕರಣಗಳ ಕುರಿತ ದಾಖಲೆಗಳನ್ನು ಕೂಡ ಸಿಬಿಐ ಅಧಿಕಾರಿಗಳಿಗೆ ನೀಡಬೇಕು ಎಂದು ಕೋಲ್ಕತ್ತಾ ಹೈಕೋರ್ಟ್ ಆದೇಶಿಸಿತ್ತು. ಆದರೆ, ಶೇಖ್ ಶಹಜಹಾನ್‌ನನ್ನು ಸಿಬಿಐಗೆ ವಹಿಸಲು ಪಶ್ಚಿಮ ಬಂಗಾಳ ಸರ್ಕಾರ ನಿರಾಕರಿಸಿತ್ತು. ಅಷ್ಟೇ ಅಲ್ಲ, ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಆದರೆ, ಕೋಲ್ಕೊತಾ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿತು, ಜೊತೆಗೆ ತುರ್ತು ವಿಚಾರಣೆಗೆ ನಿರಾಕರಿಸಿತು. ಆದ್ದರಿಂದಾಗಿ ಮತ್ತೆ ಹೈಕೋರ್ಟ್ ಸಿಬಿಐಗೆ ಒಪ್ಪಿಸುವಂತೆ ಆದೇಶಿಸಿತು.

    ಈ ನಡುವೆ ಶಹಜಹಾನ್ ಶೇಖ್‌ಗೆ ಸಂಬಂಧಿಸಿದ 12.78 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಇ.ಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಸಂದೇಶ್‌ಖಾಲಿಯಲ್ಲಿರುವ ಕೃಷಿ ಭೂಮಿ, ಕೋಲ್ಕತ್ತಾದಲ್ಲಿರುವ ಅಪಾರ್ಟ್ಮೆಂಟ್, ಬ್ಯಾಂಕ್ ಠೇವಣಿ ಸೇರಿ ಹಲವು ಆಸ್ತಿಗಳನ್ನು ಇ.ಡಿ ಜಪ್ತಿ ಮಾಡಿದೆ. ಇದರಿಂದಾಗಿ ಶಹಜಹಾನ್ ಶೇಖ್‌ಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ.