ನವದೆಹಲಿ: ಕೇಂದ್ರೀಯ ತನಿಖಾ ದಳ (CBI) ಜಮ್ಮು ಮತ್ತು ಕಾಶ್ಮೀರದ (Jammu and Kashmir) ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ (Satya Pal Malik) ಅವರ ನಿವಾಸ, ಕಚೇರಿ ಮೇಲೆ ದಾಳಿ ನಡೆಸಿದೆ.
ಕಿರು ಜಲವಿದ್ಯುತ್ ಯೋಜನೆಯಲ್ಲಿ ಭಾರೀ ಭ್ರಷ್ಟಾಚಾರ (Corruption) ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಬಿಐ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.
ಕಳೆದ 3-4 ದಿನಗಳಿಂದ ನಾನು ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದೇನೆ. ಇಷ್ಟೆಲ್ಲಾ ಆದರೂ ಸರ್ಕಾರಿ ಸಂಸ್ಥೆಗಳ ಮೂಲಕ ನನ್ನ ಮನೆ ಮೇಲೆ ದಾಳಿ ನಡೆಸಲಾಗಿದೆ. ನನ್ನ ಚಾಲಕ ಮತ್ತು ನನ್ನ ಸಹಾಯಕರ ಮೇಲೂ ದಾಳಿ ಮಾಡಿ ಅನಗತ್ಯವಾಗಿ ಕಿರುಕುಳ ನೀಡಲಾಗುತ್ತಿದೆ ಎಂದು ಮಲಿಕ್ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಗಮನಿಸಿ: ಬೆಂಗಳೂರಿನಲ್ಲಿ 2 ದಿನ ನೀರು ಪೂರೈಕೆ ಇರಲ್ಲ
ಆರೋಪ ಏನು?
ಕಿರು ಹೈಡ್ರೊ ಎಲೆಕ್ಟ್ರಿಕ್ ಪವರ್ ಪ್ರಾಜೆಕ್ಟ್ (ಎಚ್‌ಇಪಿ) ಯ ಅಂದಾಜು 2,200 ಕೋಟಿ ರೂಪಾಯಿ ಮೌಲ್ಯದ ಸಿವಿಲ್ ಕಾಮಗಾರಿಯ ಗುತ್ತಿಗೆಯನ್ನು 2019 ರಲ್ಲಿ ಖಾಸಗಿ ಕಂಪನಿಗೆ ನೀಡುವಲ್ಲಿ ಅವ್ಯವಹಾರ ನಡೆದಿದೆ. ಇ ಮಾರ್ಗಸೂಚಿಗಳನ್ನು ಅನುಸರಿಸದೇ ಗುತ್ತಿಗೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಸತ್ಯಪಾಲ್ ಮಲಿಕ್ ರಾಜ್ಯಪಾಲರಾಗಿದ್ದ ಸಂದರ್ಭದಲ್ಲಿ ಈ ಯೋಜನೆಗೆ ಸಂಬಂಧಿಸಿದಂತೆ ಎರಡು ಕಡತಗಳನ್ನು ತೆರವುಗೊಳಿಸಲು 300 ಕೋಟಿ ರೂ. ಲಂಚ ಪಡೆದಿರುವ ಆರೋಪವನ್ನು ಎದುರಿಸುತ್ತಿದ್ದಾರೆ.
2022 ರಲ್ಲಿ ಜಮ್ಮು ಮತ್ತು ಕಾಶ್ಮೀರ ಸರ್ಕಾರದ ಕೋರಿಕೆಯ ಮೇರೆಗೆ ಅಂದಿನ ಅಧ್ಯಕ್ಷ ಮತ್ತು ಎಂಡಿ, ಚೆನಾಬ್ ವ್ಯಾಲಿ ಪವರ್ ಪ್ರಾಜೆಕ್ಟ್ಸ್ (ಸಿವಿಪಿಪಿಪಿಎಲ್) ಇಬ್ಬರು ನಿರ್ದೇಶಕರು, ಖಾಸಗಿ ಕಂಪನಿ ಮತ್ತು ಇತರರ ವಿರುದ್ಧ ಅಕ್ರಮಗಳ ಎಸೆಗಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಅಕ್ರಮ ಆಸ್ತಿಗಳಿಕೆ ಪ್ರಕರಣದ ತನಿಖೆಯ ಪೂರ್ವಾನುಮತಿಯನ್ನು ಹಿಂಪಡೆದ ಬಳಿಕ ಸರ್ಕಾರ ತನಿಖೆಯ ಜವಾಬ್ದಾರಿಯನ್ನು ಲೋಕಾಯುಕ್ತಕ್ಕೆ ನೀಡಿತ್ತು. ಈಗ ಲೋಕಾಯುಕ್ತ ಪೊಲೀಸರು ಫೆ.8 ರಂದು ಡಿಕೆಶಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಇದನ್ನೂ ಓದಿ: ದೆಹಲಿಯ ಲೋಕಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ಗೆ 1 ಸ್ಥಾನ- AAP ಪ್ರಸ್ತಾಪ
ರಾಮನಗರ: ಡಿ.ಕೆ.ಶಿವಕುಮಾರ್ (DK Shivakumar) ಮತ್ತೆ ಜೈಲಿಗೆ ಹೋಗ್ತಾರೆ ಎಂಬ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa) ಹೇಳಿಕೆಗೆ ಡಿಸಿಎಂ ಡಿಕೆಶಿ ಟಾಂಗ್ ನೀಡಿದ್ದಾರೆ.
ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನನ್ನು ಜೈಲಿಗೆ ಕಳುಹಿಸುವುದಾಗಿ ಅನೇಕರು ಮಾತನಾಡಿದ್ದಾರೆ. ಅವರೂ ಮಾತನಾಡಿದ್ದಾರೆ, ನಮ್ಮ ಜಿಲ್ಲೆಯವರೂ ಮಾತನಾಡಿದ್ದಾರೆ. ನಾನು ಎಲ್ಲದಕ್ಕೂ ಸಿದ್ಧನಿದ್ದೇನೆ. ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಸಿಬಿಐ (CBI) ಮೂಲಕ ಏನೇನು ಮಾಡಿಸುತ್ತಿದ್ದಾರೆ, ಬೇರೆಯವರ ಮೂಲಕ ಏನು ಮಾಡಿಸುತ್ತಿದ್ದಾರೆ ಎಂದು ನನಗೂ ಗೊತ್ತಿದೆ. ಸಮಯ ಬಂದಾಗ ಎಲ್ಲವನ್ನೂ ಮಾತನಾಡುತ್ತೇನೆ ಎಂದು ಡಿಕೆಶಿ ತಿಳಿಸಿದ್ದಾರೆ.
ಮೋದಿ ಪ್ರಧಾನಿಯಾಗುವುದನ್ನು (Narendra Modi) ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಈ ಹಿಂದೆ ಹೇಳಿದ್ದೆಲ್ಲಾ ಮತ್ತೆ ನೆನಪಿಸಿಕೊಳ್ಳಿ. ಅವರು ಪ್ರಧಾನಿಯಾದರೆ ದೇಶ ಬಿಟ್ಟು ಹೋಗುವುದಾಗಿ ದೇವೇಗೌಡರೇ (Deve Gowda) ಹೇಳಿದ್ದರು. ಅದಕ್ಕೆ ಪ್ರಧಾನಿಗಳು ನನ್ನ ಮನೆಯಲ್ಲೇ ಜಾಗ ನೀಡುತ್ತೇನೆ ಬನ್ನಿ ಎಂದಿದ್ದರು. ಕುಮಾರಸ್ವಾಮಿ ಅವರ ಮಾತುಗಳ ದಾಖಲೆ ಮಾಧ್ಯಮಗಳ ಬಳಿಯೂ ಇದೆ ಎಂದು ತಿರುಗೇಟು ನೀಡಿದ್ರು.
ಇದೇ ವೇಳೆ ಇಂದು ರಾಜ್ಯಪಾಲರ ಭಾಷಣದಲ್ಲಿ ಸುಳ್ಳು ಹೇಳಿಸಲಾಗಿದೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ತಿರುಗೇಟು ನೀಡಿದ ಡಿಕೆಶಿ, ರಾಜ್ಯದ ಮಹಿಳೆಯರಿಗೆ 2 ಸಾವಿರ ಕೊಟ್ಟಿರುವುದು ಸುಳ್ಳೇ, ಮಹಿಳೆಯರು ಬಸ್ ಗಳಲ್ಲಿ ಉಚಿತವಾಗಿ ಸಂಚಾರ ಮಾಡುತ್ತಿರುವುದು ಸುಳ್ಳೇ, ಯುವಕರಿಗೆ ನಿರುದ್ಯೋಗ ಭತ್ಯೆ ಸಿಗುತ್ತಿರುವುದು ಸುಳ್ಳಾ ಬಡವರಿಗೆ 5 ಕೆ.ಜಿ ಅಕ್ಕಿ ಹಾಗೂ ಉಳಿದ 5 ಕೆ.ಜಿ ಅಕ್ಕಿಯ ಹಣ ನೀಡುತ್ತಿರುವುದು ಸುಳ್ಳಾ? 200 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡುತ್ತಿರುವುದು ಸುಳ್ಳಾ? ಬಿಜೆಪಿಯವರು ರಾಮನ ಹೆಸರಲ್ಲಿ ಮತ ಕೇಳಲು ಹೊರಟಿದ್ದಾರೆ. ರಾಮ ಅವರ ಮನೆ ಆಸ್ತಿಯೇ? ರಾಮ ನಮ್ಮ ಆಸ್ತಿಯಲ್ಲವೇ? ನಾವು ಹಿಂದೂಗಳಲ್ಲವೇ?” ಎಂದು ತಿರುಗೇಟು ನೀಡಿದರು.
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ (Disproportionate Assets Case) ಸಂಬಂಧಿಸಿದಂತೆ ಇಂದು ಹೈಕೋರ್ಟ್‌ನಲ್ಲಿ (High Court) ಅರ್ಜಿ ವಿಚಾರಣೆ ನಡೆಯಿತು.
ಈ ವೇಳೆ ಸಿಬಿಐ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ ಡಿಕೆ ಶಿವಕುಮಾರ್ ಪರ ವಕೀಲ ಅಭಿಷೇಕ್ ಮನುಸಿಂಘ್ವಿ, ತನಿಖೆಯ ಹೊಣೆ ಲೋಕಾಯುಕ್ತ ಪೊಲೀಸರಿಗೆ ವರ್ಗಾಯಿಸಿದರೂ ಸಿಬಿಐ ನೋಟಿಸ್ ನೀಡುತ್ತಿದೆ. ನೋಟಿಸ್ ನೀಡುತ್ತಿರುವ ಸಿಬಿಐ ಕ್ರಮ ಸರಿಯಲ್ಲ ಎಂದು ಮನವಿ ಮಾಡಿದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಸಿಬಿಐ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿ ಮುಂದಿನ ವಿಚಾರಣೆಯನ್ನು ಫೆ.12ಕ್ಕೆ ಮುಂದೂಡಿತು.
ಬೆಂಗಳೂರು: ಲೋಕಸಭಾ ಚುನಾವಣೆ (Loksabha Election) ಸನಿಹದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಗೆ (DK Shivakumar) ಸಾಲು ಸಾಲು ಸಂಕಷ್ಟ ಎದುರಾಗುವಂತೆ ಕಾಣುತ್ತಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತನಿಖೆಯ ಪೂರ್ವಾನುಮತಿ ಹಿಂಪಡೆದ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ (CBI) ಇದೀಗ ಹೈಕೋರ್ಟ್ (HighCourt) ಮೆಟ್ಟಿಲೇರಿದೆ. ಪ್ರಕರಣದ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ನೀಡಿದ್ದ ಆದೇಶವನ್ನು ಪ್ರಶ್ನಿಸಿದೆ. ಒಂದೇ ಪ್ರಕರಣಕ್ಕೆ ಮತ್ತೊಂದು ಎಫ್‍ಐಆರ್ ಮಾಡಲು ಸಾಧ್ಯವಿಲ್ಲ. ಹೀಗಿರುವಾಗ ಲೋಕಾಯುಕ್ತಕ್ಕೆ (Lokayukta) ಕೊಟ್ಟಿರೋ ಆದೇಶ ಸರಿಯಲ್ಲ ಎಂದು ಸಿಬಿಐ ವಾದ ಮಂಡಿಸಿದೆ.
ಸಿಬಿಐ ವಾದವನ್ನು ಆಕ್ಷೇಪಿಸಿದ ಎಜಿ, ಸರ್ಕಾರದ ನಿಲುವನ್ನು ಸಮರ್ಥಿಸಿದ್ರು. ವಾದ ಪ್ರತಿವಾದ ಆಲಿಸಿದ ಹೈಕೋರ್ಟ್, ಈ ಪ್ರಕರಣವನ್ನು ವಿಸ್ತøತ ಪೀಠಕ್ಕೆ ವರ್ಗಾವಣೆ ಮಾಡಿತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಸಿಬಿಐಗೆ ಮೇಲ್ಮನವಿ ಹೋಗಲು ಹಕ್ಕಿದೆ. ಅವರು ಹೋಗಲಿ, ನಾವು ನಮ್ಮ ವಾದ ಮಂಡಿಸ್ತೇವೆ ಅಂದ್ರು. ಇದನ್ನೂ ಓದಿ: ಹುಬ್ಬಳ್ಳಿ ಕೇಸ್ – ಕರಸೇವಕ ಶ್ರೀಕಾಂತ್ ಪೂಜಾರಿಗೆ ಜಾಮೀನು
ಇತ್ತ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರು, ಪಂಚರಾಜ್ಯ ಚುನಾವಣೆಯ ವೇಳೆ ಸಿಕ್ಕಿಬಿದ್ದ ಹಣವೆಲ್ಲಾ ಬೆಂಗಳೂರಿಂದ ಹೋಗಿರೋದು ಎಂಬ ಸ್ಫೋಟಕ ಆರೋಪವನ್ನು ಮಾಡಿದ್ದಾರೆ. ಡಿಸಿಎಂ ಎಲ್ಲೆಲ್ಲಿಗೆ ಹೋದ್ರೋ ಅಲ್ಲಿಗೆಲ್ಲಾ ಹಣ ಸಾಗಿಸಿದ್ದಾರೆ. ದೇಶಕ್ಕೆಲ್ಲಾ ಉಪದೇಶ ಮಾಡೋ ಸಿಎಂ ಇದನ್ನು ಏಕೆ ತಡೆಯಲಿಲ್ಲ ಎಂದು ಜೆಡಿಎಸ್ ವರಿಷ್ಠರು ಪ್ರಶ್ನಿಸಿದ್ದಾರೆ.
ಬೆಂಗಳೂರು: ಸರ್ಕಾರ ಕೇಸ್ ವಾಪಸ್ ಪಡೆದ ನಂತರ ಸೇಫ್ ಎಂದುಕೊಂಡಿದ್ದ ಡಿಸಿಎಂ ಡಿಕೆ ಶಿವಕುಮಾರ್‌ಗೆ (DCM DK Shivakumar) ಸಿಬಿಐ (CBI) ಶಾಕ್ ನೀಡಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಕೆ ಪ್ರಕರಣಕ್ಕೆ (Disproportionate Assets Case )ಸಂಬಂಧಿಸಿದಂತೆ ಡಿಕೆಶಿ ಕುಟುಂಬಕ್ಕೆ ಹಾಗೂ ವ್ಯಾವಹಾರಿಕ ಆಪ್ತರಿಗೆ ಸಿಬಿಐ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಸರ್ಕಾರ ಕೇಸಿನ ಶಿಫಾರಸ್ಸನ್ನು ವಾಪಸ್ ಪಡೆದ ನಂತರವೂ ಸಿಬಿಐ ತಮ್ಮ ವಿರುದ್ಧ ಬಿದ್ದಿಗೆ ಬಿದ್ದಿದೆ. ಇದರ ಹಿಂದೆ ರಾಜಕೀಯ ಎದುರಾಳಿಗಳಾದ ದೊಡ್ಡ ದೊಡ್ಡವರ ಕೈವಾಡವಿದೆ ಎನ್ನುವುದು ಡಿಕೆಶಿ ಆರೋಪ.
ಏನಿದು ಪ್ರಕರಣ?
2017 ರಲ್ಲಿ ಡಿ.ಕೆ.ಶಿವಕುಮಾರ್ ವಾಸ್ತವ್ಯವಿದ್ದ ಈಗಲ್‌ಟನ್ ರೆಸಾರ್ಟ್ ಮತ್ತು ಅವರ ಸಹಚರರ ಮೇಲೆ ದಾಳಿ ಮೇಲೆ ದಾಳಿ ಮಾಡಿದ್ದ ಆದಾಯ ತೆರಿಗೆ ಇಲಾಖೆ (Income Tax Department) ಸುಮಾರು 8.59 ಕೋಟಿ ಹಣ ವಶಪಡಿಸಿಕೊಂಡಿತ್ತು. ಲೆಕ್ಕಕ್ಕೆ ಸಿಗದ ಈ ಹಣವನ್ನು ಡಿ.ಕೆ.ಶಿವಕುಮಾರ್ ತಮ್ಮ ಸಹಚರರ ಬಳಿ ಇರಿಸಿದ್ದರು ಎಂದು ಆರೋಪಿಸಿತ್ತು. ಇದೇ ಪ್ರಕರಣದಲ್ಲಿ ಇಡಿ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿತ್ತು. ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದ ಇಡಿ ಪಿಸಿ ಆ್ಯಕ್ಟ್ ನಡಿ ತನಿಖೆ ನಡೆಸಲು ಸಿಬಿಐಗೆ ನೀಡಲು ಶಿಫಾರಸು ಮಾಡಿತ್ತು. ಶಿಫಾರಸು ಆಧರಿಸಿ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ನೇತೃತ್ವದ ಸರ್ಕಾರ ಸಿಬಿಐ ತನಿಖೆಗೆ ನೀಡಿತ್ತು.
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು (Disproportionate Assets Case) ಈಗ ಎರಡು ಸಂಸ್ಥೆಗಳು ತನಿಖೆ ನಡೆಸಲಿದೆ.
ಹೌದು. ಅಕ್ರಮ ಆಸ್ತಿ ಪ್ರಕರಣದ ತನಿಖೆಯನ್ನು ಲೋಕಾಯುಕ್ತದಿಂದ (Lokayukta) ನಡೆಸಲು ಸರ್ಕಾರ ಮುಂದಾಗಿದೆ. ಡಿಕೆ ಶಿವಕುಮಾರ್ ಅವರೇ ಈ ವಿಚಾರವನ್ನು ತಿಳಿಸಿದ್ದು, ಸರ್ಕಾರದಿಂದ ಅಧಿಕೃತ ಆದೇಶ ಆಗಿದೆ ಎಂದು ಹೇಳಿದ್ದಾರೆ.
2013ರಿಂದ 2018ರವರೆಗೆ 74 ಕೋಟಿ ರೂ. ಅಕ್ರಮ ಆಸ್ತಿಯನ್ನು ಡಿಕೆಶಿ ಸಂಪಾದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು ಈಗ ಸಿಬಿಐ (CBI) ತನಿಖೆ ನಡೆಸಿದ್ದು ಚಾರ್ಜ್‌ಶೀಟ್ (Chargesheet) ಸಲ್ಲಿಕೆ ಮಾಡಲು ಮಾತ್ರ ಬಾಕಿಯಿದೆ. ಇದನ್ನೂ ಓದಿ: ಫ್ಯಾನ್‍ಗೆ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ
ಏನಿದು ಪ್ರಕರಣ?
2017 ರಲ್ಲಿ ಡಿ.ಕೆ.ಶಿವಕುಮಾರ್ ವಾಸ್ತವ್ಯವಿದ್ದ ಈಗಲ್‌ಟನ್ ರೆಸಾರ್ಟ್ ಮತ್ತು ಅವರ ಸಹಚರರ ಮೇಲೆ ದಾಳಿ ಮೇಲೆ ದಾಳಿ ಮಾಡಿದ್ದ ಆದಾಯ ತೆರಿಗೆ ಇಲಾಖೆ (Income Tax Department) ಸುಮಾರು 8.59 ಕೋಟಿ ಹಣ ವಶಪಡಿಸಿಕೊಂಡಿತ್ತು. ಲೆಕ್ಕಕ್ಕೆ ಸಿಗದ ಈ ಹಣವನ್ನು ಡಿ.ಕೆ.ಶಿವಕುಮಾರ್ ತಮ್ಮ ಸಹಚರರ ಬಳಿ ಇರಿಸಿದ್ದರು ಎಂದು ಆರೋಪಿಸಿತ್ತು. ಇದೇ ಪ್ರಕರಣದಲ್ಲಿ ಇಡಿ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿತ್ತು. ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದ ಇಡಿ ಪಿಸಿ ಆ್ಯಕ್ಟ್ ನಡಿ ತನಿಖೆ ನಡೆಸಲು ಸಿಬಿಐಗೆ ನೀಡಲು ಶಿಫಾರಸು ಮಾಡಿತ್ತು. ಶಿಫಾರಸು ಆಧರಿಸಿ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ನೇತೃತ್ವದ ಸರ್ಕಾರ ಸಿಬಿಐ ತನಿಖೆಗೆ ನೀಡಿತ್ತು.
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ (Disproportionate Assets Case) ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಮತ್ತೆ ನೋಟಿಸ್ ನೀಡುತ್ತಾ ಎಂಬ ಪ್ರಶ್ನೆಯೊಂದು ಎದ್ದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಟಿವಿಯ ಬಳಿ ಹೈಕೋರ್ಟ್ ಆದೇಶದ ಪ್ರತಿ ಲಭ್ಯವಿದೆ. ಹಾಗಿದ್ರೆ ಹೈಕೋರ್ಟ್ (High Court) ಆದೇಶ ಪ್ರತಿಯಲ್ಲಿರುವ ಅಂಶಗಳೇನು..?, ಡಿಕೆ ಶಿವಕುಮಾರ್ ಇನ್ನೂ ರಿಲೀಫ್ ಸಿಕ್ಕಿಲ್ವಾ…?, ಕೇಸಿನಲ್ಲಿ ಸಿಬಿಐ ಮತ್ತೆ ನೋಟಿಸ್ ನೀಡುತ್ತಾ…? ಹೀಗೊಂದು ಅನುಮಾನ ಶುರುವಾಗಿದೆ.
ಹೈಕೋರ್ಟ್ ಹೇಳಿದ್ದೇನು?: ರಾಜಕೀಯ ಪಕ್ಷಗಳು ಬರುತ್ತವೆ. ಅಧಿಕಾರಕ್ಕೆ ಬರುವ ಸರ್ಕಾರಗಳು ಬೇರೆ ಬೇರೆ ತೀರ್ಮಾನಗಳನ್ನು ಕೈಗೊಳ್ಳುತ್ತವೆ. ಅದರ ಬಗ್ಗೆ ನಾವೇನೂ ಹೇಳಲ್ಲ. ನಾವು ಗಮನಿಸಿರುವ ಹಾಗೆ ಕೇವಲ ಮೇಲ್ಮನವಿ ಅರ್ಜಿಯನ್ನು ಹಿಂಪಡೆಯುವ ಬಗ್ಗೆಯಷ್ಟೇ ತೀರ್ಮಾನ ಕೈಗೊಂಡಿದ್ದೇವೆ. ಆದರೆ ಎಫ್ಐಆರ್ ವಿಚಾರದಲ್ಲಿ ಮೈಲಿಗಳಷ್ಟು ದೂರು ಉಳಿಯುತ್ತೇವೆ. ಇದು ಮೇಲ್ಮನವಿ ಹಿಂಪಡೆಯುವ ವಿಚಾರವಷ್ಟೇ. ಅದನ್ನು ಹೊರತು ಪಡಿಸಿ ವಿಶೇಷವಾಗಿ ಯಾವ ಅಂಶವನ್ನು ಪರಿಗಣಿಸಿಲ್ಲ ಎನ್ನುವ ಮೂಲಕ ಕೋರ್ಟ್ ಕೇವಲ ಮೇಲ್ಮನವಿ ವಾಪಸ್ಸಾತಿ ವಿಚಾರವನ್ನು ಮಾತ್ರ ಉಲ್ಲೇಖಿಸಿದೆ. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ನಡೆಸಬಹುದಾಗಿದೆ. ಇದನ್ನೂ ಓದಿ: ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ- CBIಗೆ ವಹಿಸಿದ್ದ ಕೇಸ್ ಹಿಂಪಡೆಯಲು ಸಂಪುಟ ಸಮ್ಮತಿ
ಸದ್ಯ ಪ್ರಕರಣದಲ್ಲಿ ಹೈಕೋರ್ಟ್‍ನ ಆದೇಶದಿಂದ ಸಿಬಿಐ ನಿರಾಳವಾಗಿದೆ. ಹಾಗಾದ್ರೆ ಡಿಕೆ ಶಿವಕುಮಾರ್ (DK Shivakumar) ಪ್ರಕರಣದಲ್ಲಿ ಸಿಬಿಐ ಮುಂದೇನು ಮಾಡಬಹುದು ಎನ್ನುವ ಕುತೂಹಲವೂ ಇದೆ. ಡಿಕೆಶಿಗೆ ಸಿಬಿಐ ನೋಟಿಸ್ ಕೊಡಲು ಅವಕಾಶ ಇದೆ. ಈಗಾಗಲೇ 90% ತನಿಖೆ ಮುಕ್ತಾಯಗೊಳಿಸಿರೋ ಸಿಬಿಐ, ಮತ್ತೆ ನೋಟಿಸ್ ನೀಡಿ ವಿಚಾರಣೆ ಹಾಜರಾಗಲು ಸೂಚಿಸುತ್ತಾ..?, ಅಥವಾ ಅದರ ಬದಲಾಗಿ ನೇರವಾಗಿ ಕೋರ್ಟಿಗೆ ದೋಷಾರೋಪ ಪಟ್ಟಿ ಹಾಕ್ತಾರಾ…? ಎಂಬ ಕುತೂಹಲದ ಪ್ರಶ್ನೆಗಳು ಹುಟ್ಟಿಕೊಂಡಿವೆ.
ಬೆಂಗಳೂರು: ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ (L.R Shivarame Gowda) ವಿರುದ್ಧ ಕೇಂದ್ರೀಯ ತನಿಖಾ ದಳ (CBI) ಎಫ್‍ಐಆರ್ ದಾಖಲಿಸಿದೆ.
ನಕಲಿ ದಾಖಲೆ ಸೃಷ್ಟಿಸಿ 12.48 ಕೋಟಿ ಲೋನ್ (Loan Cheating) ಪಡೆದು ವಂಚನೆ ಮಾಡಿರುವ ಆರೋಪದ ಎಲ್ ಆರ್ ಶಿವರಾಮೇಗೌಡ ಸೇರಿ ಏಳು ಮಂದಿ ವಿರುದ್ಧ ಕೇಸ್ ಹಾಕಲಾಗಿದೆ. ಇದನ್ನೂ ಓದಿ: ಬಿಗ್‍ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್‍ಗೆ ಸಂಕಷ್ಟ..!
ಎಂಜಿ ರಸ್ತೆಯ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಶಿವರಾಮೇ ಗೌಡರು ಲೋನ್ ಪಡೆದಿದ್ದರು. ಇದೀಗ ಈ ಸಾಲದ ಹಣ ಬೇರೆಡೆ ವರ್ಗಾಯಿಸಿ ಅನ್ಯ ಉದ್ದೇಶಕ್ಕೆ ಬಳಕೆ ಮಾಡಿರುವ ಕುರಿತು ಬ್ಯಾಂಕ್ ನ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ದೂರು ಸಲ್ಲಿಸಿದ್ದರು. ಈ ದೂರಿನ ಮೇರೆಗೆ ಶಿವರಾಮೇಗೌಡ, ಪತ್ನಿ ಸುಧಾ, ಮಗ ಚೇತನ್ ಗೌಡ, ಶಿವರಾಮೇಗೌಡ ಸೊಸೆ ಹಾಗೂ ರಾಯಲ್ ಕಂಕರ್ಡ್ ಎಜುಕೇಷನಲ್ ಟ್ರಸ್ಟ್ ವಿರುದ್ಧ ಸಿಬಿಐ ಎಫ್‍ಐಆರ್ ದಾಖಲಿಸಿದೆ.
ಐಪಿಸಿ ಸೆಕ್ಷನ್ 120b (ಕ್ರಿಮಿನಲ್ ಪಿತೂರಿ), 420 (ವಂಚನೆ), 468 (ಮೋಸ ಮಾಡುವ ಉದ್ದೇಶದಿಂದ ಫೋರ್ಜರಿ) ಹಾಗೂ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಸಿಬಿಐ ಇನ್ಸ್ ಪೆಕ್ಟರ್ ಸಿದ್ದಪ್ಪ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ (Disproportionate Assets Case) ಆರೋಪ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಸಿಬಿಐ (CBI) ತನಿಖೆಗೆ ನೀಡಿದ್ದ ಪೂರ್ವಾನುಮತಿಯನ್ನು ಹಿಂದಕ್ಕೆ ಪಡೆದ ರಾಜ್ಯ ಸರ್ಕಾರದ ನಿರ್ಧಾರವನ್ನು ಹೈಕೋರ್ಟ್ (High Court) ಪರಿಗಣಿಸಿದ್ದು, ಡಿಕೆಶಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಕೀಲ ಸುಪ್ರೀಂಕೋರ್ಟ್ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ (Kapil Sibal) ಸರ್ಕಾರದ ಅಧಿಸೂಚನೆಯನ್ನು ನ್ಯಾ.ಪಿ.ಬಿ ವರಾಳೆ ಮತ್ತು ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರಿಂದ ವಿಭಾಗೀಯ ನ್ಯಾಯಪೀಠಕ್ಕೆ ಮೆಮೋ ಮೂಲಕ ಸಲ್ಲಿಸಿದರು. ಇದನ್ನು ಪರಿಗಣಿಸಿದ ಹೈಕೋರ್ಟ್ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದ ಸಂಪುಟದ ನಿರ್ಧಾರವನ್ನು ಇಲ್ಲಿಯವರೆಗೂ ಯಾರೂ ಪ್ರಶ್ನಿಸಿಲ್ಲ. ಹೀಗಾಗಿ ತಮ್ಮನ್ನು ಪ್ರತಿವಾದಿಯಾಗಿ ಸೇರಿಸಿಕೊಳ್ಳಬೇಕೆಂಬ ಯತ್ನಾಳ್ ಅರ್ಜಿಯನ್ನು ಪರಿಗಣಿಸುವುದಿಲ್ಲ. ಸಂಪುಟದ ನಿರ್ಧಾರವನ್ನು ಯಾರೂ ಬೇಕಿದ್ದರು ಪ್ರಶ್ನಿಸಬಹುದು ಎಂದು ತಿಳಿಸಿತು. ಇದೇ ವೇಳೆ ಸಿಬಿಐ ತನಿಖೆ ಪ್ರಶ್ನಿಸಿ ಈ ಹಿಂದೆ ಡಿಕೆ ಸಲ್ಲಿಸಿದ್ದ ರಿಟ್ ಅರ್ಜಿ ಮತ್ತು ಮೇಲ್ಮನವಿ ಅರ್ಜಿಯನ್ನು ಡಿಕೆ ಶಿವಕುಮಾರ್ ಹಿಂಪಡೆದರು. .
ಲೋಕಸಭೆ ಚುನಾವಣೆ (Lok Sabha Election) ಹೊಸ್ತಿಲಲ್ಲಿ ಸಿಬಿಐ ಇಕ್ಕಳಕ್ಕೆ ಸಿಲುಕುವ ಆತಂಕದಲ್ಲಿದ್ದ ಡಿಸಿಎಂ ಡಿಕೆಶಿವಕುಮಾರ್ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಸಂಪುಟದ ತೀರ್ಮಾನ ಸದ್ಯಕ್ಕೆ ಡಿಕೆ ಶಿವಕುಮಾರ್ ಕೈಹಿಡಿದಂತೆ ಕಾಣುತ್ತಿದೆ. ಸಿಬಿಐ ಮುಂದಿನ ನಡೆಯವರೆಗೂ ಡಿಕೆಶಿ ನಿಟ್ಟುಸಿರು ಬಿಡಬಹುದಾಗಿದೆ.
ಸರ್ಕಾರದ ವಾದ ಏನಿತ್ತು?
ಡಿಕೆಶಿ ವಿರುದ್ಧ ತನಿಖೆ ನಡೆಸಲು ಬಿಜೆಪಿ ಸರ್ಕಾರ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್ ಪಡೆಯಲಾಗಿದೆ. ಸಿಬಿಐ ಸಂಸ್ಥೆ ತನಿಖೆ ಮುಂದುವರೆಸಲು ಬಯಸುವುದು ಬೇರೆ ವಿಚಾರ. ಆದರೆ ಒಮ್ಮೆ ಅನುಮತಿ ಹಿಂಪಡೆದರ ತನಿಖೆ ಮುಂದುವರೆಸುವುದಕ್ಕೆ ಅವಕಾಶವಿಲ್ಲ ಎಂದು ದೆಹಲಿ ಸ್ಪೆಷಲ್ ಪೊಲೀಸ್ ಎಸ್ಟಾಬ್ಲಿಷ್‌ಮೆಂಟ್ ಕಾಯ್ದೆಯ ಸೆಕ್ಷನ್ 6 ಹೇಳುತ್ತದೆ. ಖಾಜಿ ದೋರ್ಜಿ ವರ್ಸಸ್ ಸಿಬಿಐ ಪ್ರಕರಣ ಈ ಪ್ರಕರಣಕ್ಕೆ ಅನ್ವಯಿಸುವುದಿಲ್ಲ. ಈ ಹಿಂದಿನ ಸರ್ಕಾರ ಅನುಮತಿಸುವಾಗ ಕೆಲ ನಿಯಮ ಉಲ್ಲಂಘನೆ ಮಾಡಿದೆ. ಹೀಗಾಗಿಯೇ ರಾಜ್ಯ ಸರ್ಕಾರ ಕಾನೂನುಬದ್ಧವಾಗಿ ಅನುಮತಿ ಹಿಂಪಡೆದಿದೆ.
ಡಿಕೆ ಪರ ವಕೀಲರ ವಾದ ಏನು?
ಡಿಕೆಯನ್ನು ಪ್ರತಿನಿಧಿಸಿದ ಅಭಿಷೇಕ್ ಮನು ಸಿಂಘ್ವಿ, ಉದಯ್ ಹೊಳ್ಳ ಅವರು, ರಾಜ್ಯ ಸರ್ಕಾರ ನ.28ರಂದು ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದು ಆದೇಶ ಹೊರಡಿಸಿದೆ. ಹೀಗಾಗಿ ರಿಟ್ ಅರ್ಜಿ ಅಮಾನ್ಯಗೊಂಡಿದೆ. ಈ ನೆಲೆಯಲ್ಲಿ ರಿಟ್ ಅರ್ಜಿ, ಮೇಲ್ಮನವಿ ಅರ್ಜಿ ಹಿಂಪಡೆಯಲು ಅನುಮತಿಸಬೇಕು ಎಂದು ವಾದಿಸಿದರು.
ಸಿಬಿಐ ಪರ ವಕೀಲರ ವಾದ ಏನಿತ್ತು?
ಸರ್ಕಾರದ ಈ ಆದೇಶ ಈ ಹಂತದಲ್ಲಿ ಅಸಮಂಜಸವಾಗಿದ್ದು ರಿಟ್ ಅರ್ಜಿಯನ್ನು ಹಿಂಪಡೆಯುವುದಕ್ಕೆ ನಮ್ಮ ಆಕ್ಷೇಪವಿದೆ. ಮೇಲ್ಮನವಿ ಅರ್ಜಿ ಹಿಂಪಡೆಯುವುದಕ್ಕೆ ನಮ್ಮ ಆಕ್ಷೇಪವಿಲ್ಲ. ಎಫ್‌ಐಆರ್‌ಅನ್ನು ರಾಜ್ಯ ಸರ್ಕಾರ ಹಿಂಪಡೆಯಲಾಗದು. ಕೋರ್ಟ್ ಮಾತ್ರ ಸಿಆರ್‌ಪಿಸಿ ಸೆಕ್ಷನ್ 482ರ ಅಡಿ ಎಫ್‌ಐಆರ್ ವಜಾ ಮಾಡಬಹುದು. 2019ರಲ್ಲಿ ಸಿಬಿಐಗೆ ನೀಡಿದ್ದ ಅನುಮತಿ ಭಾಗವಾಗಿ ಎಫ್‌ಐಆರ್ ದಾಖಲಿಸಿ ಪ್ರಕ್ರಿಯೆ ನಡೆದಿದೆ. ಈಗಾಗಲೇ ಪ್ರಕರಣದ ಭಾಗಶಃ ತನಿಖೆ ನಡೆದಿದ್ದು 1994ರ ಸುಪ್ರೀಂಕೋರ್ಟ್ ತೀರ್ಪಿನ ಅನ್ವಯ ಇದು ಊರ್ಜಿತ ಆಗುವುದಿಲ್ಲ. ರಾಜ್ಯ ಸರ್ಕಾರ ಅನುಮತಿ ಹಿಂಪಡೆದಿರುವುದನ್ನು ಒಪ್ಪಲಾಗದು. ಇದನ್ನೂ ಓದಿ: ಇನ್ನು ಮುಂದೆ ಬೇಕಾಬಿಟ್ಟಿ ಸಿಮ್ ಕಾರ್ಡ್ ಖರೀದಿಸುವಂತಿಲ್ಲ – ಡಿ.1ರಿಂದ ಜಾರಿಯಾಗಲಿರುವ ಕಠಿಣ ನಿಯಮಗಳು ಏನು?
ಹೈಕೋರ್ಟ್ ವಿಭಾಗೀಯ ಪೀಠ ಹೇಳಿದ್ದೇನು?
ಪ್ರತಿಪಕ್ಷ ಬದಲಾದಾಗ ಈ ರೀತಿ ಆದೇಶ ಮಾಡಿದ್ರೆ ತನಿಖೆ ಮೇಲೆ ಪ್ರಭಾವ ಬೀರಲ್ವಾ ಎಂದು ಪ್ರಶ್ನಿಸಿದ ಪೀಠ ರಾಜ್ಯ ಸರ್ಕಾರದ ಆದೇಶವನ್ನು ಈವರೆಗೂ ಯಾರೂ ಪ್ರಶ್ನೆ ಮಾಡಿಲ್ಲ. ಹೀಗಾಗಿ ಸಿಬಿಐ ಪರ ವಕೀಲರ ವಾದವನ್ನು ಪರಿಗಣಿಸಲು ಸಾಧ್ಯವಿಲ್ಲ. ಆದರೆ ಎಫ್ಐಆರ್ ವಿಚಾರದಲ್ಲಿ ಸಿಬಿಐ ಮುಂದುವರೆಯಬಹುದು. ನಿಮ್ಮ ಎಫ್‌ಐಆರ್ ವಿಚಾರವನ್ನು ನಾವು ಮೈಲಿ ದೂರ ಇಟ್ಟಿದ್ದೇವೆ. ರಿಟ್ ಅರ್ಜಿಯನ್ನು, ಮೇಲ್ಮನವಿ ಅರ್ಜಿ ಹಿಂಪಡೆಯಲು ಅವಕಾಶ ನೀಡಲಾಗಿದೆ ಎಂದು ಹೇಳಿತು.
ಏನಿದು ಖಾಜಿ ದೋರ್ಜಿ ವರ್ಸಸ್ ಸಿಬಿಐ ಕೇಸ್?
ಡಿಕೆ ಶಿವಕುಮಾರ್ ಪ್ರಕರಣದಲ್ಲಿ ಪದೇ ಪದೇ ಕೇಳಿಬಂದಿದ್ದು 1994ರಲ್ಲಿ ಖಾಜಿ ದೋರ್ಜಿ ವರ್ಸಸ್ ಸಿಬಿಐ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿದ ತೀರ್ಪು. ರಾಷ್ಟ್ರಪತಿ ಆಳ್ವಿಕೆ ಸಂದರ್ಭದಲ್ಲಿ ಸಿಕ್ಕಿಂ ಸಿಎಂ ನಾಡಬಹದ್ದೂರ್ ಭಂಡಾರಿ ವಿರುದ್ಧ 2 ಕ್ರಿಮಿನಲ್ ಕೇಸ್ ದಾಖಲಾಗಿತ್ತು. ಈ ಕೇಸ್‌ಗಳ ಬಗ್ಗೆ ಸಿಬಿಐ ತನಿಖೆ ಆರಂಭವಾಗಿತ್ತು. 1987ರಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಸಿಕ್ಕಿಂ ಸರ್ಕಾರ ಹಿಂಪಡೆದಿತ್ತು. ಇದನ್ನು ಮಾಜಿ ಸಿಎಂ ಖಾಜಿ ದೋರ್ಜಿ ಸುಪ್ರೀಂನಲ್ಲಿ ಪ್ರಶ್ನಿಸಿದರು. ಈ ಅರ್ಜಿಯನ್ನು ಪುರಸ್ಕರಿಸಿದ ಕೋರ್ಟ್ ಒಮ್ಮೆ ಅನುಮತಿ ಕೊಟ್ಟ ನಂತರ ವಾಪಸ್ ಪಡೆಯುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಸಿಬಿಐ ತನಿಖೆಗೂ ಸಮ್ಮತಿ ವಾಪಸ್‌ಗೂ ಸಂಬಂಧವಿಲ್ಲ ಎಂದ ಕೋರ್ಟ್ ಸಿಬಿಐಗೆ ಚಾರ್ಜ್‌ಶೀಟ್ ಸಲ್ಲಿಕೆಗೆ ಅವಕಾಶ ನೀಡಿತ್ತು.
ಡಿಕೆ ಕೇಸ್: ಮುಂದೇನು?
ಸಿಬಿಐ ತನ್ನ ತನಿಖೆ ಮುಂದುವರೆಸಬಹುದೇ ಎನ್ನುವುದರ ಬಗ್ಗೆ ಯಾವುದೇ ಸ್ಪಷ್ಟತೆಯಿಲ್ಲ. ರಾಜ್ಯ ಸಂಪುಟದ ಆದೇಶ ಸಿಂಧುವಾಗುತ್ತದೆಯೇ ಎನ್ನುವುದು ಸ್ಪಷ್ಟವಾಗಿಲ್ಲ.ಈ ಪ್ರಕರಣ ತಾರ್ಕಿಕ ಅಂತ್ಯ ಕಾಣಲು ಸಾಕಷ್ಟು ಸಮಯ ಹಿಡಿಯಬಹುದು. ಅಲ್ಲಿಯವರೆಗೆ ಡಿಕೆಶಿಗೆ ರಿಲೀಫ್ ಸಿಕ್ಕಿದೆ.