Tag: ಸಿಬಿಐ

  • ಅಕ್ರಮ ಹಣ ಪತ್ತೆ ಪ್ರಕರಣ ಸಿಬಿಐಗೆ ವಹಿಸಲಿ: ಅಶ್ವಥ್ ನಾರಾಯಣ್

    ಅಕ್ರಮ ಹಣ ಪತ್ತೆ ಪ್ರಕರಣ ಸಿಬಿಐಗೆ ವಹಿಸಲಿ: ಅಶ್ವಥ್ ನಾರಾಯಣ್

    ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಎಡವಟ್ಟುಗಳ ಸರ್ಕಾರ. ಆಡಳಿತ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ರಾಜ್ಯದ ಮಾಜಿ ಸಚಿವ ಡಾ. ಸಿ.ಎನ್ ಅಶ್ವಥ್ ನಾರಾಯಣ್ (Ashwath Narayan) ಅವರು ಟೀಕಿಸಿದರು.

    ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬಿಜೆಪಿ (BJP) ವತಿಯಿಂದ ಇಂದು ನಡೆದ ಬೃಹತ್ ಪ್ರತಿಭಟನೆಯ ಸಂದರ್ಭದಲ್ಲಿ ಅವರು ಮಾತನಾಡಿ, ಐಟಿ ದಾಳಿ ಸಂಬಂಧ ಸಿಬಿಐ (CBI) ತನಿಖೆ ಮಾಡಿ ಹಣದ ಮೂಲವನ್ನು ಪತ್ತೆ ಮಾಡಬೇಕು ಎಂದು ಆಗ್ರಹಿಸಿದರು. ನಾಚಿಕೆ ಇಲ್ಲದ ಸರ್ಕಾರ ಇದು. ಪ್ರತಿಯೊಂದು ವಿಚಾರದಲ್ಲೂ ನಾಡಿಗೇ ಸಂಕಷ್ಟ ತಂದಿಟ್ಟ ಕಾಂಗ್ರೆಸ್ (Congress Govt) ಸರ್ಕಾರ ಇದಾಗಿದೆ. ಈ ಸರ್ಕಾರ ತೊಲಗುವುದನ್ನೇ ಜನ ಬಯಸುತ್ತಿದ್ದಾರೆ ಎಂದು ತಿಳಿಸಿದರು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಸಚಿವ ಸಂಪುಟದ ರಾಜೀನಾಮೆಗೆ ಅವರು ಆಗ್ರಹಿಸಿದರು.

    ಸಾಕಷ್ಟು ಆಡಳಿತ ಅನುಭವ, ಪರಿಣತಿ ಇದ್ದರೂ, ಭಾರೀ ಬಹುಮತ ಸಿಕ್ಕಿದರೂ ಜನಾಶೀರ್ವಾದಕ್ಕೆ ತಕ್ಕ ಗೌರವವನ್ನು ನೀಡಿಲ್ಲ. ನಾಮಕಾವಾಸ್ತೆಗೆ ಕೆಲವು ಭಾಗ್ಯಗಳನ್ನು ತೋರಿಸಿ ಲೂಟಿ ಸರ್ಕಾರವನ್ನು ಕೊಟ್ಟಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಸರ್ಕಾರ ರೈತರಿಗೆ 7 ಗಂಟೆ 3 ಫೇಸ್ ವಿದ್ಯುತ್ ಕೊಡಬೇಕು: ಜಿಟಿ ದೇವೇಗೌಡ

    ರಾಜ್ಯವನ್ನು ಲೂಟಿ ಮಾಡಲು ಮತ್ತು ಸ್ವಾರ್ಥದಾಹ ಹಿಂಗಿಸಲು ಈ ಸರ್ಕಾರ ಮುಂದಾಗಿದೆ. ಏನೇ ಆಪಾದನೆಗೂ ಅದು ಜಗ್ಗುತ್ತಿಲ್ಲ. ಭಂಡತನದ ಉತ್ತರವನ್ನು ನೀಡುತ್ತಿದ್ದಾರೆ. ಗುತ್ತಿಗೆದಾರರು, ಬಿಲ್ಡರ್‍ಗಳಿಂದ ಹಣ ಲೂಟಿ ಮಾಡುತ್ತಿದ್ದಾರೆ. ಭ್ರಷ್ಟಾಚಾರ ಮಿತಿ ಮೀರಿದೆ ಎಂದು ಆಕ್ಷೇಪಿಸಿದರು.

    ಈ ಪ್ರತಿಭಟನೆಯಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವಥ್ ನಾರಾಯಣ್, ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಮುಖಂಡರಾದ ಭಾಸ್ಕರ ರಾವ್, ನೆ.ಲ.ನರೇಂದ್ರ ಬಾಬು, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಜಿಲ್ಲಾ ಅಧ್ಯಕ್ಷ ಮಂಜುನಾಥ ಜಿ, ನಾರಾಯಣ ಗೌಡ, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಣಿಪುರ ವಿದ್ಯಾರ್ಥಿಗಳ ಹತ್ಯೆ ಪ್ರಕರಣ – ಆರೋಪಿ ಪುಣೆಯಲ್ಲಿ ಅರೆಸ್ಟ್

    ಮಣಿಪುರ ವಿದ್ಯಾರ್ಥಿಗಳ ಹತ್ಯೆ ಪ್ರಕರಣ – ಆರೋಪಿ ಪುಣೆಯಲ್ಲಿ ಅರೆಸ್ಟ್

    ಇಂಫಾಲ್: ಮಣಿಪುರದಲ್ಲಿ (Manipur) ನಡೆದಿದ್ದ ಇಬ್ಬರು ಮೈತೆಯಿ ವಿದ್ಯಾರ್ಥಿಗಳ ಹತ್ಯೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪುಣೆಯಲ್ಲಿ (Pune) ಸಿಬಿಐ (CBI) ಬಂಧಿಸಿದೆ. ಆರೋಪಿಯನ್ನು ನ್ಯಾಯಾಲಯ ಅ.16ರ ವರೆಗೆ ಸಿಬಿಐ (CBI) ಕಸ್ಟಡಿಗೆ ನೀಡಿದೆ.

    ಬಂಧಿತ ಆರೋಪಿಯನ್ನು ಪೌಲುನ್ ಮಾಂಗ್ (22) ಎಂದು ಗುರುತಿಸಲಾಗಿದೆ. ಘಟನೆಯ ಬಳಿಕ ಆರೋಪಿ ಪುಣೆಯಲ್ಲಿ ತಲೆಮರೆಸಿಕೊಂಡಿದ್ದ. ಆತನನ್ನು ಬಂಧಿಸಲಾಗಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಹಾಡಹಗಲೇ ಗ್ರಾಮ ಪಂಚಾಯತ್ ಅಧ್ಯಕ್ಷನ ಬರ್ಬರ ಕೊಲೆ

    ಹಿಜಾಮ್ ಲಿಂಥೋಯಿಂಗಮಿ (17) ಮತ್ತು ಫಿಜಾಮ್ ಹೆಮ್‍ಜಿತ್ (20) ಇಬ್ಬರೂ ಜು.6 ರಂದು ನಾಪತ್ತೆಯಾಗಿದ್ದರು. ಅವರ ಮೃತ ದೇಹಗಳ ಫೋಟೋ ಸೆ.25ರಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದು ಹಿಂಸಾತ್ಮಕ ಪ್ರತಿಭಟನೆಗೆ ಕಾರಣವಾಗಿತ್ತು. ಪ್ರಕರಣದಲ್ಲಿ ಇಲ್ಲಿಯವರೆಗೂ ಮಹಿಳೆಯರು ಸೇರಿದಂತೆ ನಾಲ್ವರನ್ನು ಈಗಾಗಲೇ ಸಿಬಿಐ ಬಂಧಿಸಿದೆ. ಬಂಧಿತ ನಾಲ್ವರೂ ಕುಕಿಗಳನ್ನು ಪಾವೊಮಿನ್ಲುನ್ ಹಾಕಿಪ್, ಎಸ್ ಮಲ್ಸಾನ್ ಹಾಕಿಪ್, ಲಿಂಗ್ನೀಚಾಂಗ್ ಬೈಟ್ ಮತ್ತು ಟಿನ್ನೆಲ್ಹಿಂಗ್ ಹೆಂಥಾಂಗ್ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಮಣಿಪುರ ಸರ್ಕಾರದ ಕೋರಿಕೆಯ ಮೇರೆಗೆ ಆ.23 ರಂದು ಸಿಬಿಐ ಎರಡು ಪ್ರಕರಣಗಳನ್ನು ದಾಖಲಿಸಿತ್ತು. ಅಪ್ರಾಪ್ತ ಸಂತ್ರಸ್ತೆಯ ಪೋಷಕರ ದೂರಿನ ಮೇರೆಗೆ ರಾಜ್ಯ ಪೊಲೀಸರು ಈ ಹಿಂದೆ ದಾಖಲಿಸಿದ್ದ ಪ್ರಕರಣಗಳ ತನಿಖೆಯನ್ನು ಸಿಬಿಐ ವಹಿಸಿಕೊಂಡಿದೆ.

    ತನಿಖೆಯ ವೇಳೆ ದುಷ್ಕರ್ಮಿಗಳು ಇಬ್ಬರನ್ನು ಅಪಹರಿಸಿರುವುದು ಬೆಳಕಿಗೆ ಬಂದಿತ್ತು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ವಾಹನದಲ್ಲಿ ಆರೋಪಿಗಳು ವಿದ್ಯಾರ್ಥಿಗಳನ್ನು ಅಪಹರಿಸಿದ್ದರು. ಬಳಿಕ ಅವರ ಹತ್ಯೆ ಮಾಡಿ ಹೂಳಿರುವುದು ಪತ್ತೆಯಾಗಿತ್ತು. ಇದನ್ನೂ ಓದಿ: ಅಜ್ಞಾತ ಸ್ಥಳಕ್ಕೆ ಎಳೆದೊಯ್ದು ಯುವತಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದ ಆರೋಪಿ ಬಂಧನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮುಕ್ತ ವಿವಿಯಲ್ಲಿ 250 ಕೋಟಿ ಅಕ್ರಮ – ಎಫ್‌ಐಆರ್‌ ದಾಖಲಿಸಿದ ಸಿಬಿಐ

    ಮುಕ್ತ ವಿವಿಯಲ್ಲಿ 250 ಕೋಟಿ ಅಕ್ರಮ – ಎಫ್‌ಐಆರ್‌ ದಾಖಲಿಸಿದ ಸಿಬಿಐ

    ನವದೆಹಲಿ/ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಸುಮಾರು 300 ಕೋಟಿ ರೂ. ನಿಧಿಯನ್ನು ದುರ್ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಅಪರಿಚಿತ ಅಧಿಕಾರಿಗಳ ವಿರುದ್ಧಎಫ್‌ಐಆರ್‌ ದಾಖಲಿಸಿದೆ.

    ಕೆಎಸ್‌ಒಯು ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವ ಯೋಜನೆಯಡಿ 2009-10 ರಿಂದ 2012-13 ರ ನಡುವೆ 250 ಕೋಟಿ ರೂ., 2013-14 ರಲ್ಲಿ 50 ಕೋಟಿ ರೂ. ಅಕ್ರಮ ಎಸಗಿರುವುದು ಲೆಕ್ಕ ಪರಿಶೋಧನೆ ವೇಳೆ ಬೆಳಕಿಗೆ ಬಂದಿತ್ತು.

    ಸಹಭಾಗಿತ್ವ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಂದ ದಾಖಲಾತಿ, ಪರೀಕ್ಷೆ, ಅಧ್ಯಯನ ಕೇಂದ್ರ ಸ್ಥಾಪನೆ ಹಾಗೂ ಇತರ ಶುಲ್ಕವಾಗಿ ಹಣವನ್ನು ಸಂಗ್ರಹಿಸಿವೆ. ಈ ಮೊತ್ತವನ್ನು ಸಂಸ್ಥೆಗಳು ವಿವಿಗೆ ಜಮೆ ಮಾಡಬೇಕಿತ್ತು. ಆದರೆ ಕೆಲವು ಸಂಸ್ಥೆಗಳು ಜಮೆ ಮಾಡುವ ಹಣದಲ್ಲಿ ವ್ಯತ್ಯಾಸ ಮಾಡಿದ್ದ ವಿಚಾರ ಪರಿಶೀಲನೆ ವೇಳೆ ಬೆಳಕಿಗೆ ಬಂದಿತ್ತು. ಇದನ್ನೂ ಓದಿ: ದರ್ಶನ್ ಜೊತೆಗಿನ ಮನಸ್ತಾಪ: ಅವರಿಗೆ ಒಂದಷ್ಟು ಪ್ರಶ್ನೆ ಕೇಳಿಬೇಕಿದೆ ಎಂದ ಧ್ರುವ

    ಭಾರೀ ಮೊತ್ತ ತಾಳೆಯಾಗದ ಕಾರಣ 2022ರ ಫೆಬ್ರವರಿಯಲ್ಲಿ ವಿಶ್ವವಿದ್ಯಾಲಯದ ಕುಲಸಚಿವರ ಪತ್ರ ಹಾಗೂ ವಿವಿಯ ಆಡಳಿತ ಮಂಡಳಿಯ ಸಭೆಯ ನಿರ್ಣಯ ಆಧರಿಸಿ ರಾಜ್ಯಪಾಲರು ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದ್ದರು. ಈ ಪತ್ರದ ಆಧಾರದ ಮೇಲೆ ರಾಜ್ಯ ಸರ್ಕಾರವು ಈ ವರ್ಷ ಮಾರ್ಚ್‌ 13ರಂದು ಸಿಬಿಐ ತನಿಖೆಗೆ ಆದೇಶಿಸಿತ್ತು. ಅಷ್ಟೇ ಅಲ್ಲದೇ ಸಂಬಂಧಿಸಿದ ಅಧಿಕಾರಿಗಳು, ಲೆಕ್ಕಪರಿಶೋಧಕರು, ಬ್ಯಾಂಕುಗಳು ಸಿಬಿಐಗೆ ಅಗತ್ಯ ಮಾಹಿತಿ ಒದಗಿಸುವಂತೆ ಸೂಚಿಸಿತ್ತು. 2009 ರಿಂದ 2016ರ ನಡುವಿನ ವ್ಯವಹಾರ ತನಿಖೆ ನಡೆಸುವಂತೆ ಕೋರಿ ಸಿಬಿಐಗೆ ರಾಜ್ಯ ಸರ್ಕಾರ ಪತ್ರ ಬರೆದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೆನ್ಸಾರ್ ಮಂಡಳಿ ಲಂಚ ಪ್ರಕರಣ: ಸಿಬಿಐನಿಂದ ಎಫ್.ಐ.ಆರ್ ದಾಖಲು

    ಸೆನ್ಸಾರ್ ಮಂಡಳಿ ಲಂಚ ಪ್ರಕರಣ: ಸಿಬಿಐನಿಂದ ಎಫ್.ಐ.ಆರ್ ದಾಖಲು

    ಮಿಳಿನ ಖ್ಯಾತ ನಟ ವಿಶಾಲ್ (Vishal), ತಮ್ಮ ಸಿನಿಮಾಗೆ ಸೆನ್ಸಾರ್ (Censor) ಪ್ರಮಾಣ ಪತ್ರ ಪಡೆಯುವುದಕ್ಕಾಗಿ ಲಂಚ ನೀಡಬೇಕಾಯಿತು ಎನ್ನುವ ವಿಚಾರವನ್ನು ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದರು. ಮುಂಬೈನ ಸೆಂಟ್ರಲ್ ಬೋರ್ಡ್‍ ಆಫ್ ಫಿಲ್ಮ್ ಸರ್ಟಿಫಿಕೇಷನ್‍ (ಸಿಬಿಎಫ್.ಸಿ)ನಲ್ಲಿ ಲಂಚ ಪಡೆದಿದ್ದರು ಎನ್ನುವ ವಿಚಾರವನ್ನು ಸಾಕ್ಷಿ ಸಮೇತ ತಿಳಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಎಫ್.ಐ.ಆರ್ (FIR)  ದಾಖಲಾಗಿದೆ.

    ವಿಶಾಲ್ ಅವರ ಭ್ರಷ್ಟಾಚಾರ ಆರೋಪಕ್ಕೆ ಕೂಡಲೇ ಸ್ಪಂದಿಸಿದ್ದ ಸರಕಾರ, ಅಧಿಕಾರಿಯೊಬ್ಬರನ್ನು ನೇಮಿಸಿ ತನಿಖೆಗೆ ಆದೇಶಿಸಿತ್ತು. ಇದೀಗ ಆರೋಪಿಗಳ ಸ್ಥಳ ಮತ್ತು ಮುಂಬೈನ ನಾಲ್ಕ ಕಡೆ ಸಿಬಿಐ ಶೋಧ ಕಾರ್ಯ ನಡೆಸಿದಿ ಎಫ್.ಐ.ಆರ್ ಅನ್ನು ದಾಖಲಿಸಿದೆ.

    ಮೊನ್ನೆಯಷ್ಟೇ ವಿಶಾಲ್, ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಷನ್ (ಸಿ.ಬಿ.ಎಫ್.ಸಿ) ಮೇಲೆ ಗುರುತರ ಆರೋಪ ಮಾಡಿದ್ದರು. ತಾವು ತಮ್ಮ ಚಿತ್ರಕ್ಕೆ ಸೆನ್ಸಾರ್ ಪ್ರಮಾಣ ಪತ್ರ ಪಡೆಯುವುದಕ್ಕಾಗಿ 6.50 ಲಕ್ಷ ರೂಪಾಯಿಯನ್ನು ನೀಡಿರುವುದಾಗಿ ಅವರು ಹೇಳಿಕೊಂಡಿದ್ದರು. ಯಾರಿಗೆ ಎಷ್ಟೆಲ್ಲ ಹಣ ನೀಡಲಾಗಿದೆ ಎಂದು ವಿವರ ಸಮೇತ ವಿಡಿಯೋ ಮಾಡಿದ್ದರು. ಸೆನ್ಸಾರ್ ಮಂಡಳಿಯ ಅಧಿಕಾರಿಗಳಾದ ಎಂ.ರಾಜನ್ ಎನ್ನುವವರು ಮೂರು ಲಕ್ಷ ಮತ್ತು ಜೀಜಾ ರಾಮದಾಸ್ ಎನ್ನುವವರಿಗೆ 3.5 ಲಕ್ಷ ರೂಪಾಯಿಯನ್ನು ಬ್ಯಾಂಕ್ ಖಾತೆಗೆ ಹಾಕಿರುವ ವಿವರವನ್ನು ವಿಶಾಲ್ ಹೇಳಿದ್ದರು.

    ಸಾಕ್ಷಿ ಸಮೇತವಾಗಿ ವಿಶಾಲ್ ವಿಡಿಯೋ ಮಾಡಿ ಅದನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ಮತ್ತು ಪ್ರಧಾನ ಮಂತ್ರಿಗಳಿಗೆ ಟ್ಯಾಗ್ ಮಾಡಿದ್ದರು. ಇದರ ಗಂಭೀರತೆಯನ್ನು ಅರಿತ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಕೂಡಲೇ ತನಿಖೆಗೆ ಆದೇಶ ಮಾಡಿದೆ. ಸಿ.ಬಿ.ಎಫ್.ಸಿಯ ಹಿರಿಯ ಅಧಿಕಾರಿಯನ್ನು ತನಿಖಾಧಿಕಾರಿಯನ್ನಾಗಿ ನೇಮಿಸಿ, ತನಿಖೆಗೆ ಆದೇಶ ಮಾಡಿದೆ. ಈ ಕುರಿತು ಇದೊಂದು ದುರಾದೃಷ್ಟ ಸಂಗತಿ ಎಂದು ವಿಷಾದ ವ್ಯಕ್ತ ಪಡಿಸಿತ್ತು.

     

    ಲಂಚಮುಕ್ತ ಆಡಳಿತ ಕೊಡಬೇಕು ಎನ್ನುವುದು ನಮ್ಮ ಗುರಿ. ಆದರೆ, ಇಂತಹ ಬೆಳವಣಿಗೆ ನಡೆದಿದ್ದು ನೋವು ತಂದಿದೆ. ವಿಶಾಲ್ ಅವರು ವಿಡಿಯೋ ಹಾಕಿದ 24 ಗಂಟೆಯೊಳಗೆ ತನಿಖೆಗೆ ಆದೇಶ ಮಾಡಿದ್ದೇವೆ. ತಪ್ಪಿತಸ್ಥರಿಗೆ ಶಿಕ್ಷೆ ನೀಡಲಾಗುವುದು ಎಂದು ಸಚಿವಾಲಯ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದೆ. ವಿಶಾಲ್ ಅವರಿಗೆ ಟ್ಯಾಗ್ ಮಾಡಲಾಗಿತ್ತು. ಇದೀಗ ಹಣ ಪಡೆದ ಆರೋಪ ಹೊತ್ತಿರುವ ಅಧಿಕಾರಿಗಳ ಮೇಲೆ ಎಫ್.ಐ.ಆರ್ ದಾಖಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರೈಲ್ವೆಯಲ್ಲಿ ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣ – ಲಾಲು ಕುಟುಂಬಕ್ಕೆ ಜಾಮೀನು

    ರೈಲ್ವೆಯಲ್ಲಿ ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣ – ಲಾಲು ಕುಟುಂಬಕ್ಕೆ ಜಾಮೀನು

    ನವದೆಹಲಿ: ಭಾರತೀಯ ರೈಲ್ವೆಯಲ್ಲಿ ಉದ್ಯೋಗಕ್ಕಾಗಿ ಭೂಮಿ ನೀಡುವ ಹರಗಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಗಳಾದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ (Lalu Prasad Yadav), ರಾಬ್ರಿ ದೇವಿ, ಬಿಹಾರ ಡಿಸಿಎಂ ತೇಜಸ್ವಿ ಯಾದವ್ ಮತ್ತು ಸಂಸದೆ ಮೀಸಾ ಭಾರತಿಗೆ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಜಾಮೀನು (Bail) ನೀಡಿದೆ.

    ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ಸಿಬಿಐ ನ್ಯಾಯಾಧೀಶೆ ಗೀತಾಂಜಲಿ ಗೋಯೆಲ್ ಅವರು ಆದೇಶ ಹೊರಡಿಸಿದ್ದಾರೆ. ಜುಲೈ 3 ರಂದು ಸಿಬಿಐ ಹೊಸ ಚಾರ್ಜ್ಶೀಟ್ ಸಲ್ಲಿಸಿದ ಬಳಿಕ ನ್ಯಾಯಾಲಯವು ಸೆಪ್ಟೆಂಬರ್ 22 ರಂದು ತೇಜಸ್ವಿ ಯಾದವ್, ಲಾಲು ಯಾದವ್, ರಾಬ್ರಿ ದೇವಿ ಮತ್ತು ಇತರ 14 ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಿತ್ತು.

    ಲಾಲು ಪ್ರಸಾದ್ ಅವರು 2004 ರಿಂದ 2009 ರವರೆಗೆ ಕೇಂದ್ರ ರೈಲ್ವೆ ಸಚಿವರಾಗಿದ್ದಾಗ ರೈಲ್ವೆಯಲ್ಲಿ ನೇಮಕಾತಿಗಳನ್ನು ಮಾಡಲು ಬದಲಿಯಾಗಿ ಅವರ ಕುಟುಂಬಕ್ಕೆ ಆಕಾಂಕ್ಷಿಗಳು ಭೂಮಿ ನೀಡಿದ್ದರು ಎಂದು ಆರೋಪಿಸಲಾಗಿದೆ. ಕೇಂದ್ರೀಯ ತನಿಖಾ ದಳ (CBI) ರೈಲ್ವೆಯಲ್ಲಿ ಮಾಡಿದ ನೇಮಕಾತಿಗಳು ಭಾರತೀಯ ರೈಲ್ವೆ ಸ್ಥಾಪಿಸಿದ ಮಾನದಂಡಗಳು ಮತ್ತು ಮಾರ್ಗಸೂಚಿಗಳಿಗೆ ಅನುಗುಣವಾಗಿಲ್ಲ ಎಂದು ಹೇಳಿಕೊಂಡಿದೆ. ಇದನ್ನೂ ಓದಿ: ಮಹಿಷಾ ದಸರಾ ದಿನವೇ ಚಾಮುಂಡಿ ಬೆಟ್ಟಕ್ಕೆ ಬಿಜೆಪಿಯಿಂದ ಜಾಥಾ – 5 ಸಾವಿರ ಮಂದಿ ಭಾಗಿ

    2022 ರ ಮೇ 18 ರಂದು ಸಿಬಿಐ ಪ್ರಕರಣವನ್ನು ದಾಖಲಿಸಿಕೊಂಡು, 2022 ರ ಅಕ್ಟೋಬರ್ 7 ರಂದು ಚಾರ್ಜ್ಶೀಟ್ ಸಲ್ಲಿಸಿತ್ತು. 2023 ರ ಫೆಬ್ರವರಿ 27 ರಂದು ನ್ಯಾಯಾಲಯವು ಮೊದಲ ಚಾರ್ಜ್ಶೀಟ್ ಗಮನಹರಿಸಿತು. ನಂತರ ಅದು ಮಾರ್ಚ್ 15 ರೊಳಗೆ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಿತು. ಯಾವುದೇ ಬಂಧನವಿಲ್ಲದೆ ಆರೋಪಪಟ್ಟಿಯನ್ನು ಸಲ್ಲಿಸಲಾಗಿದೆ. ಇದನ್ನೂ ಓದಿ: ಸಿಕ್ಕಿಂನಲ್ಲಿ ಮೇಘಸ್ಫೋಟ – ಹಠಾತ್ ಪ್ರವಾಹದಲ್ಲಿ 23 ಸೈನಿಕರು ನಾಪತ್ತೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಾಜಿ ಸಿಬಿಐ ಅಧಿಕಾರಿ ಹೆಸರಲ್ಲಿ ಹಣದ ಬೇಡಿಕೆ – ಖಾಸಗಿ ವೀಡಿಯೋ ವೈರಲ್ ಬೆದರಿಕೆ

    ಮಾಜಿ ಸಿಬಿಐ ಅಧಿಕಾರಿ ಹೆಸರಲ್ಲಿ ಹಣದ ಬೇಡಿಕೆ – ಖಾಸಗಿ ವೀಡಿಯೋ ವೈರಲ್ ಬೆದರಿಕೆ

    ರಾಯಚೂರು: ನಗರದ ಚಿನ್ನದ ಅಂಗಡಿ ಮಾಲೀಕರೊಬ್ಬರಿಗೆ ಮಾಜಿ ಸಿಬಿಐ (CBI) ಅಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ಹೆಸರಲ್ಲಿ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ನಡೆದಿದೆ. ಹಣ ನೀಡದೇ ಇದ್ದರೆ ಖಾಸಗಿ ವೀಡಿಯೋ ವೈರಲ್ ಮಾಡುವ ಬೆದರಿಕೆಯನ್ನು ಹಾಕಿದ್ದಾರೆ ಎಂದು ವ್ಯಾಪಾರಿ ಆರೋಪಿಸಿದ್ದಾರೆ.

    ಚಿನ್ನದ ವ್ಯಾಪಾರಿ ವಿ.ಸುರೇಶ್ ಅವರಿಗೆ ಕಿಡಿಗೇಡಿಗಳು ಈ ರೀತಿ ಬ್ಲಾಕ್‍ಮೇಲ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಅಪರಿಚಿತರು ಕರೆ ಮಾಡಿ ಸಿಬಿಐ ಅಧಿಕಾರಿಗಳು ಎಂದು ಹೇಳಿಕೊಂಡಿದ್ದಾರೆ. ಬಳಿಕ ಒಂದು ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಹಣ ಕೊಡದೇ ಇದ್ದರೆ ತನ್ನ ಬಳಿ ಇರುವ ಖಾಸಗಿ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವ ಬೆದರಿಕೆ ಹಾಕಿದ್ದಾನೆ ಎಂದು ಸುರೇಶ್ ಆರೋಪಿಸಿದ್ದಾರೆ. ಇದನ್ನೂ ಓದಿ: ನಾನು ಓದಿದ್ದು 7ನೇ ಕ್ಲಾಸ್‌ – ಮೋಸಹೋದ ಕಥೆಯನ್ನು ವಿನಯ್‌ ಗುರೂಜಿಗೆ ಪತ್ರದಲ್ಲಿ ವಿವರಿಸಿದ್ದ ಗೋವಿಂದ ಪೂಜಾರಿ

    ಮಾಜಿ ಸಿಬಿಐ ಅಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ಹೆಸರಲ್ಲಿ ವಂಚನೆಗೆ ಯತ್ನಿಸಲಾಗಿದೆ. ಹಿಂದಿಯಲ್ಲಿ ಮಾತನಾಡಿ ಬೆದರಿಕೆ ಹಾಕಿದ್ದ ಸೈಬರ್ ಕಿರಾತಕರು (Cyber Crime), ಸುಬೋಧ್ ಕುಮಾರ್ ಐಡಿ ಕಾರ್ಡ್ ಹಾಗೂ ಫೋಟೋಗಳನ್ನು ಸಹ ದುರ್ಬಳಕೆ ಮಾಡಿಕೊಂಡು ಹೆದರಿಸಿದ್ದಾರೆ.

    ಈ ಸಂಬಂಧ ರಾಯಚೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ?: ಹೆಚ್‍ಡಿಕೆ ಕಿಡಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅನಾರೋಗ್ಯದಿಂದ ಜಾಮೀನು ಪಡೆದಿದ್ದ ಲಾಲೂ ಪ್ರಸಾದ್‌ ಯಾದವ್‌ ಬ್ಯಾಡ್ಮಿಂಟನ್‌ ಆಟದಲ್ಲಿ ಬ್ಯುಸಿ

    ಅನಾರೋಗ್ಯದಿಂದ ಜಾಮೀನು ಪಡೆದಿದ್ದ ಲಾಲೂ ಪ್ರಸಾದ್‌ ಯಾದವ್‌ ಬ್ಯಾಡ್ಮಿಂಟನ್‌ ಆಟದಲ್ಲಿ ಬ್ಯುಸಿ

    – ಜಾಮೀನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ ಮೊರೆ ಹೋದ ಸಿಬಿಐ

    ಪಾಟ್ನಾ: ಮೇವು ಹಗರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ರಾಷ್ಟ್ರೀಯ ಜನತಾ ದಳ (RJD) ನಾಯಕ ಲಾಲೂ ಪ್ರಸಾದ್‌ ಯಾದವ್‌ (Lalu Prasad Yadav) ಅನಾರೋಗ್ಯ ಕಾರಣಕ್ಕಾಗಿ ಕೋರ್ಟ್‌ನಿಂದ ಜಾಮೀನು ಪಡೆದಿದ್ದರು, ಆದರೀಗ ಬ್ಯಾಡ್ಮಿಂಟನ್‌ (Badminton) ಆಡೋದ್ರಲ್ಲಿ ಅವರು ಬ್ಯುಸಿ ಆಗಿದ್ದಾರೆ.

    ಅನಾರೋಗ್ಯದ ಕಾರಣಕ್ಕಾಗಿ ಜಾರ್ಖಂಡ್ ಹೈಕೋರ್ಟ್ (Jharkhand High Court) ಲಾಲೂ ಪ್ರಸಾದ್‌ ಯಾದವ್‌ ಅವರಿಗೆ ಜಾಮೀನು ನೀಡಲಾಗಿತ್ತು. ಆದ್ರೆ ಜಾಮೀನು ಪಡೆದು ಜೈಲಿನಿಂದ ಹೊರಬಂದ ಲಾಲೂ ಪ್ರಸಾದ್ ಯಾದವ್ ಬ್ಯಾಡ್ಮಿಂಟನ್ ಆಟ ಆಡದಲ್ಲಿ ಬ್ಯುಸಿಯಾಗಿದ್ದಾರೆ ಎಂದು ಹೇಳಿರುವ ಸಿಬಿಐ (CBI), ಲಾಲೂ ಯಾದವ್ ಅವರ ಜಾಮೀನು ರದ್ದು ಮಾಡುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದೆ. ಆದ್ರೆ ಲಾಲೂ ಪ್ರಸಾದ್ ಯಾದವ್ ಪರ ವಕೀಲರು, ಇತ್ತೀಚೆಗಷ್ಟೇ ಲಾಲೂ ಪ್ರಸಾದ್ ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಅವರ ಜಾಮೀನು ರದ್ದು ಮಾಡದಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ’ತುಕ್ರ-ತನಿಯ’ ಕಥೆ ಹೇಳ್ತಿದ್ದಾರೆ ರಾಘು ಶಿವಮೊಗ್ಗ: ಟೈಟಲ್ ಲಾಂಚ್ ಮಾಡಿದ ದುನಿಯಾ ವಿಜಯ್

    ಮೇವು ಹಗರಣ ಸಂಬಂಧ ಬಿಹಾರದ ದೊರಾಂಡಾ ಖಜಾನೆಯಲ್ಲಿ ಇದ್ದ ಹಣವನ್ನು ದುರ್ಬಳಕೆ ಮಾಡಿಕೊಂಡ ಆರೋಪ ಸಾಬೀತಾಗಿದ್ದ ಹಿನ್ನೆಲೆಯಲ್ಲಿ ಲಾಲೂ ಪ್ರಸಾದ್ ಯಾದವ್ ಅವರಿಗೆ ನ್ಯಾಯಾಲಯ 5 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿತ್ತು. ಆ ಬಳಿಕ ಆರೋಗ್ಯ ಸಂಬಂಧಿ ಕಾರಣಗಳಿಂದಾಗಿ ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾಮೀನು ಸಿಕ್ಕಿತ್ತು. ಜಾಮೀನು ಪಡೆದು ಹೊರ ಬಂದ ಬಳಿಕ ಲಾಲೂ ಯಾದವ್ ಬ್ಯಾಡ್ಮಿಂಟನ್ ಆಡುತ್ತಿದ್ದಾರೆ ಎಂದಿರುವ ಸಿಬಿಐ ಪರ ವಕೀಲರು, ಲಾಲೂ ಅವರ ಜಾಮೀನು ಏಕೆ ರದ್ದು ಮಾಡಬಾರದು? ಎಂದು ಸುಪ್ರೀಂ ಕೋರ್ಟ್‌ಗೆ ಕೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗಾಗಿ ಹೊಸ ʻಎಲಿವೇಟೆಡ್ ವಾಕ್‌ವೇʼ ಆರಂಭ

    ಸಿಬಿಐ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಾಡಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ ರಾಜು, ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾಮೀನು ನೀಡಿದ ಜಾರ್ಖಂಡ್ ಹೈಕೋರ್ಟ್‌ ಆದೇಶವು ದೋಷಪೂರಿತ ಹಾಗೂ ಕಾನೂನಾತ್ಮಕವಾಗಿ ಕೆಟ್ಟದ್ದು ಎಂದು ವಾದಿಸಿದ್ದಾರೆ. ಸಿಬಿಐನ ಈ ಮನವಿ ವಿರುದ್ಧ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಇತ್ತೀಚೆಗಷ್ಟೇ ಲಾಲೂ ಪ್ರಸಾದ್ ಯಾದವ್ ಅವರು ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಇದನ್ನು ಪರಿಗಣಿಸಿ ಜಾಮೀನು ಮುಂದುವರೆಸಿ ಎಂದು ಮನವಿ ಮಾಡಿದರು. ಅಷ್ಟೇ ಅಲ್ಲ, ಲಾಲೂ ಪ್ರಸಾದ್ ಯಾದವ್ ಅವರು ಈಗಾಗಲೇ 42 ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದಾರೆ ಎಂದೂ ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಇದನ್ನೂ ಓದಿ: Chandrayaan-3 ಲ್ಯಾಂಡರ್‌ನಿಂದ ಚಂದ್ರನ ಮೇಲೆ ಇಳಿಯುತ್ತಿರುವ ರೋವರ್ – ವೀಡಿಯೋ ರಿಲೀಸ್ ಮಾಡಿದ ಇಸ್ರೋ

    ಇದಕ್ಕೆ ತಿರುಗೇಟು ನೀಡಿದ ಸಿಬಿಐ ಪರ ವಕೀಲರು, ಲಾಲೂ ಪ್ರಸಾದ್ ಯಾದವ್ ಅವರು 3.5 ವರ್ಷ ಜೈಲಿನಲ್ಲಿ ಇದ್ದರು. ಆದರೆ ಅವರಿಗೆ ವಿಧಿಸಿರುವ 5 ವರ್ಷಗಳ ಜೈಲು ಶಿಕ್ಷೆ ನಿರಂತರವಾಗಿ ಇರಬೇಕು. ಜೈಲಿನಿಂದ ಆರೋಗ್ಯ ಸಮಸ್ಯೆ ಕಾರಣಕ್ಕೆ ಹೊರ ಬಂದಿರುವ ಲಾಲೂ ಯಾದವ್ ಬ್ಯಾಡ್ಮಿಂಟನ್ ಆಡುತ್ತಿದ್ದಾರೆ. ಇದನ್ನು ಗಮನಿಸಿದರೆ ನ್ಯಾಯಾಲಯ ಜಾಮೀನು ನೀಡಿರುವ ಆದೇಶವು ದೋಷಪೂರಿತ ಎಂಬಂತೆ ಕಾಣುತ್ತಿದೆ ಎಂದು ಹೇಳಿದರು. ಬಳಿಕ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾದ ಎ. ಎಸ್. ಬೋಪಣ್ಣ ಹಾಗೂ ಎಂ. ಎಂ. ಸುಂದರೇಶ್ ಅವರಿದ್ದ ಪೀಠವು ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 17ಕ್ಕೆ ಮುಂದೂಡಿದರು.

    ಕೆಲ ದಿನಗಳ ಹಿಂದೆಯಷ್ಟೇ ಲಾಲೂ ಪ್ರಸಾದ್‌ ಯಾದವ್‌ ಅವರ ಮನೆ ಮೇಲೆ ದಾಳಿ ನಡೆದ್ದ ಜಾರಿ ನಿರ್ದೇಶನಾಲಯ ಲಾಲೂ ಪ್ರಸಾದ್‌ ಹಾಗೂ ಅವರ ಕುಟುಂಬಸ್ಥರಿಗೆ ಸೇರಿದ್ದ 6 ಕೋಟಿ ರೂ. ಮೌಲ್ಯದ ಆಸ್ತಿಯನ್ನ ಮುಟ್ಟುಗೋಲುಹಾಕಿಕೊಂಡಿತ್ತು.

    ಏನಿದು ಮೇವು ಹಗರಣ?
    1992 ರಿಂದ 1995ರ ಅವಧಿಯಲ್ಲಿ ಮೇವು ಹಗರಣ ನಡೆದಿತ್ತು. 950 ಕೋಟಿ ರೂ. ಮೊತ್ತದ ಭಾರೀ ಹಗರಣ ಇದಾಗಿದ್ದು, ಈ ಹಗರಣದಲ್ಲಿ ಲಾಲೂ ಪ್ರಸಾದ್‌ ಯಾದವ್‌ ಅವರನ್ನ ದೋಷಿ ಎಂದು ಪರಿಗಣಿಸಿ 5 ವರ್ಷಗಳ ಕಾಲ ಶಿಕ್ಷೆ ವಿಧಿಸಲಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಅಕ್ರಮ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

    ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಅಕ್ರಮ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

    ಇಂಫಾಲ್: ಹಿಂಸಾಚಾರ ಪೀಡಿತ ಮಣಿಪುರದ (Manipur Violence) ವಿವಿಧ ಜಿಲ್ಲೆಗಳಲ್ಲಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು 8 ಬಂದೂಕುಗಳು, 112 ಕಾಟ್ರಿಡ್ಜ್‌ಗಳು ಮತ್ತು 6 ಸ್ಫೋಟಕಗಳನ್ನು ವಶಪಡಿಸಿಕೊಂಡಿವೆ ಎಂದು ಪೊಲೀಸರು (Police) ತಿಳಿಸಿದ್ದಾರೆ.

    ಬಿಷ್ಣುಪುರ್, ಚುರಾಚಂದ್‌ಪುರ, ತೆಂಗನೌಪಾಲ್, ಕಾಂಗ್‌ಪೋಕ್ಪಿ ಮತ್ತು ರಾಜಧಾನಿ ಇಂಫಾಲ್ ಪಶ್ಚಿಮ ಜಿಲ್ಲೆಗಳಿಂದ ಈ ಶಸ್ತ್ರಾಸ್ತ್ರಗಳನ್ನ ವಶಪಡಿಸಿಕೊಳ್ಳಲಾಗಿದೆ. ತೆಂಗ್ನೌಪಾಲ್ ಜಿಲ್ಲೆಯಲ್ಲಿ ಶೋಧ ಕಾರ್ಯಾಚರಣೆ ಸಂದರ್ಭದಲ್ಲಿ 6 ಬಂಕರ್‌ಗಳನ್ನ ಸಹ ನಾಶಪಡಿಸಲಾಗಿದೆ. ಇದನ್ನೂ ಓದಿ: ಹಿಮಾಚಲ, ಉತ್ತರಾಖಂಡದಲ್ಲಿ ಮಳೆಗೆ 81 ಸಾವು – ಪಂಜಾಬ್‌ನಲ್ಲಿ ಪ್ರವಾಹ ಪರಿಸ್ಥಿತಿ

    ಇಂಫಾಲ್ ಜಿಲ್ಲೆಯ ಮಂತ್ರಪುಖ್ರಿ ಪ್ರದೇಶದಿಂದ ಒಪಿಯಾಡ್ ನೋವು ನಿವಾರಕ ಸಿರಪ್‌ನ 1,240 ಕೊಡೈನ್ ಫಾಸ್ಫೇಟ್ ಬಾಟಲಿಗಳೊಂದಿಗೆ ಅಸ್ಸಾಂ ಮೂಲದ ನಾಲ್ವರನ್ನ ಬಂಧಿಸಿದೆ ಎಂದು ನಾರ್ಕೋಟಿಕ್ಸ್ ಅಂಡ್‌ ಅಫೇರ್ಸ್‌ ಆಫ್‌ ಬಾರ್ಡರ್‌  (NAB) ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮಳೆ ಅವಾಂತರಕ್ಕೆ ಹಿಮಾಚಲದಲ್ಲಿ 71 ಬಲಿ – 7.5 ಸಾವಿರ ಕೋಟಿ ನಷ್ಟ

    ಮಾರ್ಚ್ 3 ರಂದು ಮಣಿಪುರದಲ್ಲಿ ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ ಆಯೋಜನೆ ಬಳಿಕ ಆರಂಭವಾದ ಘರ್ಷಣೆಯಲ್ಲಿ 150ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿ, ಸಾಮೂಹಿಕ ಅತ್ಯಚಾರ ಮಾಡಿದ್ದು ದೇಶಾದ್ಯಂತ ಟೀಕೆಗೆ ಕಾರಣವಾಗಿತ್ತು. ಇದೀಗ ಮಣಿಪುರ ಹಿಂಸಾಚಾರದ ಕುರಿತು ತನಿಖೆ ನಡೆಸಲು ಕೇಂದ್ರೀಯ ತನಿಖಾ ದಳ (CBI) ದೇಶಾದ್ಯಂತ ತನ್ನ ಘಟಕಗಳಿಂದ 29 ಮಹಿಳಾ ಸಿಬ್ಬಂದಿ ಸೇರಿದಂತೆ 53 ಅಧಿಕಾರಿಗಳನ್ನ ನಿಯೋಜನೆ ಮಾಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

    [contact-form][contact-field label=”Name” type=”name” required=”true” /][contact-field label=”Email” type=”email” required=”true” /][contact-field label=”Website” type=”url” /][contact-field label=”Message” type=”textarea” /][/contact-form]

  • ಮಣಿಪುರ ಹಿಂಸಾಚಾರ ತನಿಖೆಗೆ 53 ಸಿಬಿಐ ಅಧಿಕಾರಿಗಳ ನಿಯೋಜನೆ

    ಮಣಿಪುರ ಹಿಂಸಾಚಾರ ತನಿಖೆಗೆ 53 ಸಿಬಿಐ ಅಧಿಕಾರಿಗಳ ನಿಯೋಜನೆ

    ಇಂಫಾಲ್: ಮಣಿಪುರ ಹಿಂಸಾಚಾರದ (Manipur Violence) ತನಿಖೆಗಾಗಿ ಸಿಬಿಐ (CBI) ದೇಶಾದ್ಯಂತ ತನ್ನ ಘಟಕಗಳಿಂದ 29 ಮಹಿಳಾ ಸಿಬ್ಬಂದಿ ಸೇರಿದಂತೆ 53 ಅಧಿಕಾರಿಗಳನ್ನು ನಿಯೋಜಿಸಿದೆ. ಮೂವರು ಡಿಐಜಿಗಳಾದ ಲವ್ಲಿ ಕಟಿಯಾರ್, ನಿರ್ಮಲಾ ದೇವಿ ಮತ್ತು ಮೋಹಿತ್ ಗುಪ್ತಾ ಮತ್ತು ಪೊಲೀಸ್ ವರಿಷ್ಠಾಧಿಕಾರಿ ರಾಜ್‍ವೀರ್ ಅವರನ್ನು ಒಳಗೊಂಡ ತಂಡವು ಜಂಟಿ ನಿರ್ದೇಶಕ ಘನಶ್ಯಾಮ್ ಉಪಾಧ್ಯಾಯ ಅವರಿಗೆ ವರದಿ ಸಲ್ಲಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಇಷ್ಟು ದೊಡ್ಡ ಸಂಖ್ಯೆಯ ಮಹಿಳಾ ಅಧಿಕಾರಿಗಳನ್ನು ಏಕಕಾಲದಲ್ಲಿ ಸೇವೆಗೆ ನಿಯೋಜಿಸಲಾದ ಮೊದಲ ಪ್ರಕರಣ ಇದಾಗಿದೆ. ಅಲ್ಲದೆ 16 ಇನ್ಸ್‌ಪೆಕ್ಟರ್‌ ಮತ್ತು 10 ಸಬ್‍ಇನ್ಸ್‌ಪೆಕ್ಟರ್ ಸಹ ತಂಡದ ಭಾಗವಾಗಲಿದ್ದಾರೆ. ಪ್ರಕರಣದ ತನಿಖೆಯಲ್ಲಿ ಪಕ್ಷಪಾತದ ಆರೋಪಗಳನ್ನು ತಪ್ಪಿಸಲು ಸ್ಥಳೀಯ ಅಧಿಕಾರಿಗಳ ಪಾತ್ರವನ್ನು ಕಡಿಮೆ ಮಾಡಲಾಗಿದೆ. ಇದನ್ನೂ ಓದಿ: Manipur: ಅಬ್ದುಲ್‌ ಕಲಾಂರಿಂದ ಗೌರವಿಸಲ್ಪಟ್ಟ ಸ್ವಾತಂತ್ರ್ಯ ಹೋರಾಟಗಾರನ ಪತ್ನಿಯ ಸಜೀವ ದಹನ

    ಸಿಬಿಐ ಈಗಾಗಲೇ ಎಂಟು ಪ್ರಕರಣಗಳನ್ನು ದಾಖಲಿಸಿದೆ. ಇದರಲ್ಲಿ ಮೇ 4 ರಂದು ಜನಸಮೂಹದಿಂದ ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿದ ಎರಡು ಪ್ರಕರಣಗಳು ಸೇರಿದೆ. ಈ ವೀಡಿಯೋ ಜುಲೈ 16 ರಂದು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡ ನಂತರ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೇ ಹಿಂಸಾಚಾರಕ್ಕೆ ಸಂಬಂಧಿಸಿದ ಇನ್ನೂ 9 ಪ್ರಕರಣಗಳನ್ನು ತನಿಖೆ ಮಾಡಲು ಸಿಬಿಐ ಸಜ್ಜಾಗಿದೆ. ಇದರಿಂದ ಸಿಬಿಐ ತನಿಖೆ ನಡೆಸುವ ಪ್ರಕರಣಗಳ ಸಂಖ್ಯೆ 17ಕ್ಕೆ ಏರಿಕೆಯಾಗಲಿದೆ. ಆದ್ಯತೆಯ ಮೇರೆಗೆ ತನಿಖೆ ನಡೆಸುವ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಮಣಿಪುರದಲ್ಲಿ ಹಿಂಸಾಚಾರ ನಡೆದಿದ್ದೇಕೆ?: ಮೀಟೈ ಸಮುದಾಯ ಎಸ್‍ಟಿ ಸ್ಥಾನಮಾನದ ಬೇಡಿಕೆಯ ಕುರಿತು 4 ವಾರಗಳಲ್ಲಿ ಕೇಂದ್ರಕ್ಕೆ ಶಿಫಾರಸನ್ನು ಕಳುಹಿಸುವಂತೆ ಮಣಿಪುರ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ನಂತರ ನಾಗಾಗಳು ಮತ್ತು ಕುಕಿಗಳು ಸೇರಿದಂತೆ ಬುಡಕಟ್ಟು ಜನಾಂಗದವರು ಮೆರವಣಿಗೆಯನ್ನು ಆಯೋಜಿಸಿದ್ದರು. ಆಲ್ ಟ್ರೈಬಲ್ ಸ್ಟೂಡೆಂಟ್ ಯೂನಿಯನ್ ಮಣಿಪುರ ಚುರಾಚಂದ್‍ಪುರ ಜಿಲ್ಲೆಯ ಟೋಬರ್ಂಗ್ ಪ್ರದೇಶದಲ್ಲಿ ಬುಡಕಟ್ಟು ಐಕ್ಯತಾ ಮೆರವಣಿಗೆಗೆ ಕರೆ ನೀಡಿತ್ತು. ಈ ರ‍್ಯಾಲಿಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು. ಆದರೆ ಈ ಸಂದರ್ಭದಲ್ಲಿ ಆದಿವಾಸಿಗಳು ಮತ್ತು ಬುಡಕಟ್ಟು ಜನಾಂಗದವರ ನಡುವೆ ಹಿಂಸಾಚಾರ ಆರಂಭವಾಗಿತ್ತು. ನಂತರ ಇದರಲ್ಲಿ 160 ಕ್ಕೂ ಹೆಚ್ಚು ಜನರು ಸಾವನ್ನಪ್ಪಿ, ನೂರಾರು ಜನರು ಗಾಯಗೊಂಡಿದ್ದರು. ಇದನ್ನೂ ಓದಿ: Manipur Violence: ಮಣಿಪುರದಲ್ಲಿ 40 ಮಂದಿ ದಂಗೆಕೋರರ ಹತ್ಯೆ – ಇಂಟರ್ನೆಟ್ ಸೇವೆ ಬಂದ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಣಿಪುರ ಜನಾಂಗೀಯ ಸಂಘರ್ಷ – ತನಿಖೆಯ ಮೇಲ್ವಿಚಾರಣೆಗೆ ನ್ಯಾಯಾಂಗ ಸಮಿತಿ ರಚನೆ

    ಮಣಿಪುರ ಜನಾಂಗೀಯ ಸಂಘರ್ಷ – ತನಿಖೆಯ ಮೇಲ್ವಿಚಾರಣೆಗೆ ನ್ಯಾಯಾಂಗ ಸಮಿತಿ ರಚನೆ

    ನವದೆಹಲಿ: ಮಣಿಪುರ ಜನಾಂಗೀಯ ಸಂಘರ್ಷದ (Manipur Violence) ತನಿಖೆಯ ಮೇಲ್ವಿಚಾರಣೆಗೆ ಜಮ್ಮು ಮತ್ತು ಕಾಶ್ಮೀರ (Jammu Kashmir) ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್ ಅವರ ನೇತೃತ್ವದಲ್ಲಿ ಮೂವರು ಮಹಿಳಾ ಸದಸ್ಯರ ಒಳಗೊಂಡ ನ್ಯಾಯಾಂಗ ಸಮಿತಿಯನ್ನು ಸುಪ್ರೀಂಕೋರ್ಟ್ (Supreme Court) ರಚಿಸಿದೆ.

    ಸೋಮವಾರ ಪ್ರಕರಣ ವಿಚಾರಣೆ ನಡೆಸಿದ ಸಿಜೆಐ ಡಿವೈ ಚಂದ್ರಚೂಡ್ (CJI DY Chandrachud) ನೇತೃತ್ವದ ಪೀಠ, ಸಿಬಿಐ ತನಿಖೆಯನ್ನು (CBI Enquiry) ಬದಲಿಸುವುದಿಲ್ಲ ಆದರೆ ಕಾನೂನಿನ ಆಳ್ವಿಕೆಯಲ್ಲಿ ನಂಬಿಕೆಯನ್ನು ಖಚಿತಪಡಿಸಿಕೊಳ್ಳಲು ಸಮಿತಿಯನ್ನು ರಚಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದೆ. ಸಮಿತಿಯೂ ನ್ಯಾ.ಶಾಲಿನಿ ಜೋಶಿ ಮತ್ತು ನ್ಯಾ. ಆಶಾ ಮೆನನ್ ಅವರನ್ನು ಒಳಗೊಂಡಿರುತ್ತದೆ ಎಂದು ತಿಳಿಸಿತು. ಇದನ್ನೂ ಓದಿ: ಜೂನ್‌ನಲ್ಲಿ ರಷ್ಯಾದಿಂದ ಭಾರೀ ಕಡಿಮೆ ಬೆಲೆಯಲ್ಲಿ ತೈಲ ಖರೀದಿಸಿದ ಭಾರತ

    ಸಮಿತಿಯೂ ಕೇಂದ್ರೀಯ ತನಿಖಾ ದಳ ಮತ್ತು ಮಣಿಪುರ ಪೊಲೀಸರು ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ನಡೆಸುತ್ತಿರುವ ತನಿಖೆಯನ್ನು ಪರಿಶೀಲಿಸಲಿದೆ. ಇದರ ಜೊತೆಗೆ ಪರಿಹಾರ ಮತ್ತು ಪುನರ್ವಸತಿಯನ್ನು ಸೂಚಿಸುವ ವಿಶಾಲ-ಆಧಾರಿತ ಕಾರ್ಯವನ್ನು ಹೊಂದಿರುತ್ತದೆ ಎಂದು ಪೀಠ ಹೇಳಿತು.

    ಇದೇ ವೇಳೆ ಪ್ರಕರಣಗಳ ವಿಚಾರಣೆಯನ್ನು ಮಣಿಪುರದ ಹೊರಗಿನ ರಾಜ್ಯಕ್ಕೆ ವರ್ಗಾಯಿಸಲು ನ್ಯಾಯಾಲಯ ನಿರಾಕರಿಸಿತು. ಸಿಬಿಐ ವಿಚಾರಣೆ ನಡೆಸುತ್ತಿರುವ ಹಿನ್ನೆಲೆ ನಾವು ಅದನ್ನು ಬದಲಿಸುವುದಿಲ್ಲ. ಆದರೆ ಕಾನೂನಿನಲ್ಲಿ ನಂಬಿಕೆಯನ್ನು ಖಚಿತಪಡಿಸಿಕೊಳ್ಳಲು ತನಿಖಾ ಪ್ರಗತಿಯನ್ನು ಮಹಾರಾಷ್ಟ್ರದ ಮಾಜಿ ಡಿಜಿಪಿ ಮತ್ತು ಎನ್ಐಎ ಅಧಿಕಾರಿ ದತ್ತಾತ್ರೇ ಪಡಸಾಲ್ಗಿಕರ್ ಅವರು ವಿಶೇಷವಾಗಿ ಪರಿಶೀಲಿಸುತ್ತಾರೆ ಎಂದು ನ್ಯಾ. ಚಂದ್ರಚೂಡ್ ಹೇಳಿದರು. ನ್ಯಾಯಾಂಗ ಸಮಿತಿ ಮತ್ತು ದತ್ತಾತ್ರೇ ಪಡಸಾಲಗಿಕರ್ ಇಬ್ಬರೂ ಪ್ರತ್ಯೇಕ ವರದಿಗಳನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಸಬೇಕು ಎಂದು ಪೀಠ ಆದೇಶಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]