Tag: ಸಿಬಿಐ

  • ಸೌಜನ್ಯ ರೇಪ್‌, ಮರ್ಡರ್‌ ಕೇಸ್‌- ಆರೋಪಿ ಸಂತೋಷ್‌ ರಾವ್‌ ಖುಲಾಸೆ

    ಬೆಂಗಳೂರು: ಸೌಜನ್ಯ ಅತ್ಯಾಚಾರ ಮತ್ತು ಕೊಲೆ (Sowjanya Rape and Murder) ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್‌ ರಾವ್‌ನನ್ನು (Santosh Rao) ಕೋರ್ಟ್‌ ದೋಷಮುಕ್ತಗೊಳಿಸಿದೆ.

    ಸಿಬಿಐ ವಿಶೇಷ ನ್ಯಾಯಾಲಯದ (CBI Special Court) ನ್ಯಾಯಾಧೀಶ ಸಂತೋಷ್.ಸಿ.ಬಿ. ಇಂದು ತೀರ್ಪು ಪ್ರಕಟಿಸಿ, ಸಾಕ್ಷ್ಯಾಧಾರ ಕೊರತೆಯಿಂದ ಆರೋಪಿಯನ್ನು ಬಿಡುಗಡೆ ಮಾಡುವಂತೆ ಆದೇಶಿಸಿದ್ದಾರೆ. ಆರೋಪಿ ಪರ ವಕೀಲ ಮೋಹಿತ್ ಕುಮಾರ್ ವಾದ ಮಂಡಿಸಿದ್ದರು.

    ಆರೋಪಿ ಪರ ವಾದ ಏನಿತ್ತು?
    ಆತ್ಯಾಚಾರ ಹಾಗೂ ಕೊಲೆಯಾದ ವೇಳೆ ಆರೋಪಿ ಸ್ಥಳದಲ್ಲಿ ಇರಲಿಲ್ಲ. ರೇಪ್ ಮಾಡಿರುವ ಬಗ್ಗೆ ವೈದ್ಯಕೀಯ ವರದಿ ಇರಲಿಲ್ಲ. ಎರಡು ದಿನ ಬಳಿಕ ಆರೋಪಿಯನ್ನು ಬಂಧಿಸಲಾಗಿತ್ತು. ಸೌಜನ್ಯ ಮೃತಪಟ್ಟ ದಿನ ಭಾರೀ ಮಳೆ ಇತ್ತು. ಅಂದು 500 ಜನ ಹುಡುಕಾಟ ನಡೆಸಿದ್ದರು. ಆದರೆ ಅಂದು ಶವ ಪತ್ತೆಯಾಗಿರಲಿಲ್ಲ. ಇದನ್ನೂ ಓದಿ: ರಾಜ್ಯದಲ್ಲಿ ಫ್ರೀ ಬಸ್ ಸೇವೆ, ನಮ್ಮ ಸಂಸ್ಥೆಗಳ ಮೇಲೆ ಯಾವುದೇ ಹೊರೆಯಾಗಲ್ಲ: ರಾಮಲಿಂಗಾ ರೆಡ್ಡಿ

    ನದಿ ದಾಟಿ ಹೋಗಿದ್ದಾನೆ ಎಂದು ಅನುಮಾನ ವ್ಯಕ್ತಪಡಿಸಿದ ಪೊಲೀಸರು ಎರಡು ದಿನದ ಬಳಿಕ ಸಂತೋಷ್‌ ರಾವ್‌ನನ್ನು ಬಂಧಿಸಿದ್ದರು. ಅಲ್ಲಿದ್ದ ಪ್ರಕೃತಿ ಚಿಕಿತ್ಸಾಲಯದ ಸಿಸಿಟಿವಿ ಸಂಗ್ರಹಿಸಿಲ್ಲ. ಮರಣೋತ್ತರ ಪರೀಕ್ಷೆಯಲ್ಲಿ ರಾತ್ರೋರಾತ್ರಿ ಕೆಟ್ಟ ಬೆಳಕಿನಲ್ಲಿ ಮಾಡಲಾಗಿದೆ. ಸಂತೋಷ್‌ ರಾವ್‌ ಕೊಲೆ ಮಾಡಿದ್ದಾನೆ ಎಂಬುದಕ್ಕೆ ಯಾವುದೇ ಸಾಕ್ಷ್ಯಗಳು ಇಲ್ಲ ಎಂದು ಹೇಮಂತ್‌ ವಾದಿಸಿದ್ದರು.

     

    ಏನಿದು ಪ್ರಕರಣ?
    ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸೌಜನ್ಯ 2012ರ ಅಕ್ಟೋಬರ್ 9ರಂದು ಕಾಣೆಯಾಗಿದ್ದಳು ಎಂದು ತಂದೆ ಚಂದ್ರಪ್ಪ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಅಕ್ಟೋಬರ್ 10ರಂದು ಅರೆನಗ್ನ ಸ್ಥಿತಿಯಲ್ಲಿ ಸೌಜನ್ಯ ಶವ ಪತ್ತೆಯಾಗಿತ್ತು. ಬಳಿಕ ಆಕೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದರು. ಈ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಪ್ರತಿಭಟನೆ, ಆಕ್ರೋಶಕ್ಕೆ ಕಾರಣವಾಗಿತ್ತು.

    ಮೊದಲು ಬೆಳ್ತಂಗಡಿ ಪೊಲೀಸರು ತನಿಖೆ ನಡೆಸಿದ್ದರು. ನಂತರ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು. ಆ ಬಳಿಕ ಸರ್ಕಾರ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತ್ತು. 2016ರಲ್ಲಿ ತನಿಖೆ ಪೂರ್ಣಗೊಳಿಸಿದ ಸಿಬಿಐ ಆರೋಪ ಪಟ್ಟಿ ಸಲ್ಲಿಸಿತ್ತು.

  • ರೆಡ್ಡಿ, ಪತ್ನಿ ಅರುಣಾಗೆ ಶಾಕ್‌ – 100ಕ್ಕೂ ಹೆಚ್ಚು ಆಸ್ತಿ ಜಪ್ತಿಗೆ ಆದೇಶ

    ರೆಡ್ಡಿ, ಪತ್ನಿ ಅರುಣಾಗೆ ಶಾಕ್‌ – 100ಕ್ಕೂ ಹೆಚ್ಚು ಆಸ್ತಿ ಜಪ್ತಿಗೆ ಆದೇಶ

    ಬೆಂಗಳೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಗಂಗಾವತಿ ಶಾಸಕ, ಮಾಜಿ ಸಚಿವ ಜನಾರ್ದನ ರೆಡ್ಡಿ (Janardhan Reddy) ಮತ್ತು ಪತ್ನಿ ಲಕ್ಷ್ಮೀ ಅರುಣಾ ರೆಡ್ಡಿ (Lakshmi Aruna Reddy) ಅವರ ಆಸ್ತಿ ಜಪ್ತಿ ಮಾಡುವಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಆದೇಶ ಹೊರಡಿಸಿದೆ.

    ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಒಟ್ಟು 100ಕ್ಕೂ ಹೆಚ್ಚು ಆಸ್ತಿಗಳನ್ನು ಜಪ್ತಿ ಮಾಡುವಂತೆ ವಿಶೇಷ ಕೋರ್ಟ್ ಆದೇಶ ಪ್ರಕಟಿಸಿದೆ. ಜನಾರ್ದನ ರೆಡ್ಡಿ ದಂಪತಿಗೆ ಸೇರಿದ ಒಟ್ಟು 124 ಆಸ್ತಿಗಳ ಜಪ್ತಿ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ತನಿಖೆ ವೇಳೆ ಸೈಟ್, ಕಟ್ಟಡ, ಖಾಲಿ ಜಮೀನು ಸೇರಿದಂತೆ ನೂರಕ್ಕೂ ಅಧಿಕ ಆಸ್ತಿಗಳನ್ನು ಸಿಬಿಐ ಪತ್ತೆ ಮಾಡಿತ್ತು.

    ಹಿಂದೆ ಏನಾಗಿತ್ತು?
    ಅಕ್ರಮ ಗಣಿಗಾರಿಕೆ (Illegal Mining) ಹಣದಿಂದ ರೆಡ್ಡಿ ಹೊಸದಾಗಿ ತೆಲಂಗಾಣ ರಾಜ್ಯಗಳಲ್ಲಿ 219 ಕಡೆ ಆಸ್ತಿಗಳನ್ನು ಖರೀದಿ ಮಾಡಿದ್ದಾರೆ. ಈ ಆಸ್ತಿಗಳನ್ನು ಜಪ್ತಿ ಮಾಡಲು ಅನುಮತಿ ನೀಡಬೇಕೆಂದು ಸರ್ಕಾರಕ್ಕೆ 2022ರ ಆಗಸ್ಟ್‌ 30 ರಂದು ಸಿಬಿಐ (CBI) ಮನವಿ ಮಾಡಿತ್ತು. ಇದನ್ನೂ ಓದಿ: ಟ್ವಿಟ್ಟರ್ ಕಂಪನಿ ಮುಚ್ಚುತ್ತೇವೆ, ಉದ್ಯೋಗಿಗಳ ಮೇಲೆ ದಾಳಿ: ಭಾರತದಿಂದ ಬೆದರಿಕೆ ಬಂದಿತ್ತು ಎಂದ ಡಾರ್ಸಿ

    ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ಸಿಬಿಐ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಸಿಬಿಐ ಅರ್ಜಿಗೆ ಸರ್ಕಾರ ಯಾವುದೇ ಉತ್ತರ ನೀಡಿರಲಿಲ್ಲ.

    ಆಸ್ತಿ ಜಪ್ತಿ ಅರ್ಜಿ ವಿಚಾರ ತಿಳಿದ ರೆಡ್ಡಿ ಕರ್ನೂಲ್, ರಂಗಾರೆಡ್ಡಿ ಜಿಲ್ಲೆಗಳಲ್ಲಿ ಆಸ್ತಿ ಮಾರಾಟಕ್ಕೆ ಯತ್ನಿಸಿದ್ದರು.  ಈ ವಿಚಾರ ತಿಳಿಯುತ್ತಿದ್ದಂತೆ ಆಸ್ತಿ ಜಪ್ತಿಗೆ ಅನುಮತಿ ನೀಡುವಂತೆ ಸರ್ಕಾರಕ್ಕೆ ಆದೇಶ ನೀಡಬೇಕು ಅಂತಾ ಸಿಬಿಐ ಹೈಕೋರ್ಟ್‌ನಲ್ಲಿ ವಾದ ಮಂಡಿಸಿತ್ತು.

    ನಿಮ್ಮ ಕಾರ್ಯವೈಖರಿ ಇದೇನಾ? ಐದು ತಿಂಗಳಾದರೂ ಯಾಕೆ ಕ್ರಮ ಕೈಗೊಂಡಿಲ್ಲ? ನಿಮ್ಮ ದೃಷ್ಟಿಯಲ್ಲಿ ನಿರ್ಧಾರ ಕೈಗೊಳ್ಳದೇ ಇರುವುದು ಒಂದು ಕ್ರಮವಿರಬಹುದು. ಈ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ ಬೀಸಿ ನೋಟಿಸ್ ಜಾರಿ ಮಾಡಿತ್ತು. ಹೈಕೋರ್ಟ್‌ ಬಿಸಿ ಮುಟ್ಟಿಸಿದ ಬೆನ್ನಲ್ಲೇ ಅಂದಿನ ಬೊಮ್ಮಾಯಿ ಸರ್ಕಾರ ಈ ವರ್ಷದ ಜನವರಿಯಲ್ಲಿ ರೆಡ್ಡಿಯ ಆಸ್ತಿ ಜಪ್ತಿಗೆ ಅನುಮತಿ ನೀಡಿತ್ತು.

  • ಬಾಲಸೋರ್ ರೈಲು ಅಪಘಾತ – ತನಿಖೆ ಆರಂಭಿಸಿದ ಸಿಬಿಐ

    ಬಾಲಸೋರ್ ರೈಲು ಅಪಘಾತ – ತನಿಖೆ ಆರಂಭಿಸಿದ ಸಿಬಿಐ

    ಭುವನೇಶ್ವರ: 278 ಜನರ ಸಾವಿಗೆ ಕಾರಣವಾದ ಒಡಿಶಾದ ಬಾಲಸೋರ್ ರೈಲು ಅಪಘಾತದ ತನಿಖೆಯನ್ನು ಕೇಂದ್ರೀಯ ತನಿಖಾ ದಳ (CBI) ಮಂಗಳವಾರ ಅಧಿಕೃತವಾಗಿ ಆರಂಭಿಸಿದೆ. ಅಪಘಾತದ ತನಿಖೆಯನ್ನು ಪ್ರಾರಂಭಿಸುವ ಮೊದಲು ತನಿಖಾ ಸಂಸ್ಥೆಯು ದಾಖಲೆಗಳು ಮತ್ತು ಹೇಳಿಕೆಗಳನ್ನು ಸಂಗ್ರಹಿಸುವ ಪ್ರಕ್ರಿಯೆಯಲ್ಲಿದೆ.

    ಸೋಮವಾರ 10 ಜನರ ಸಿಬಿಐ ತಂಡ ಬಾಲಸೋರ್ (Balasore Train Tragedy) ನಲ್ಲಿ ರೈಲು ಅಪಘಾತ ಸ್ಥಳಕ್ಕೆ ಭೇಟಿ ನೀಡಿತ್ತು. ಪ್ರಾಥಮಿಕ ವರದಿಯೂ ಸೇರಿದಂತೆ ಬೇರೆ ಬೇರೆ ಆಯಾಮಗಳಲ್ಲಿ ಮಾಹಿತಿಗಳನ್ನು ಸಂಗ್ರಹಿಸಲಾಯಿತು. ಇದೇ ವೇಳೆ ಸ್ಥಳೀಯರಿಂದಲೂ ಹೇಳಿಕೆ ಪಡೆಯಲಾಗಿದೆ. ಇದನ್ನೂ ಓದಿ: ಒಡಿಶಾ ರೈಲು ದುರಂತವಾಗಿ 4 ದಿನ ಕಳೆದರೂ 101 ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ

    ಅಪಘಾತಕ್ಕೆ ಸಂಬಂಧಿಸಿದಂತೆ ಐಪಿಸಿ ಮತ್ತು ರೈಲ್ವೆ ಕಾಯ್ದೆಯ ವಿವಿಧ ಸೆಕ್ಷನ್‍ಗಳ ಅಡಿಯಲ್ಲಿ ಒಡಿಶಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಘಟನೆಯ ಹಿಂದೆ ದುಷ್ಕೃತ್ಯದ ಅನುಮಾನಗಳಿರುವ ಹಿನ್ನೆಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಶಿಫಾರಸು ಮಾಡಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnav) ಹೇಳಿದ್ದರು. ಇದನ್ನೂ ಓದಿ: ಸತ್ತಿದ್ದಾನೆಂದು ಹೆಣಗಳ ರಾಶಿಯಲ್ಲಿ ಇಟ್ಟಿದ್ದ ಮಗನನ್ನು ಜೀವಂತವಾಗಿ ಹೊರ ತೆಗೆದ ತಂದೆ!

    ಜೂನ್ 2 ರಂದು ಎರಡು ಪ್ಯಾಸೆಂಜರ್ ರೈಲುಗಳು ಮತ್ತು ಗೂಡ್ಸ್ ರೈಲು ಒಳಗೊಂಡ ಅಪಘಾತದಲ್ಲಿ 278 ಜನರು ಸಾವನ್ನಪ್ಪಿದರು ಮತ್ತು 1,100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಸದ್ಯ ಘಟನಾ ಸ್ಥಳವನ್ನು ಸರಿಪಡಿಸಿದ್ದು ಮತ್ತೆ ಡೀಸೆಲ್ ಇಂಜಿನ್ ಸೇರಿದಂತೆ ಒಂದೇ ಭಾರತ್ ರೈಲು ಸಂಚಾರ ಆರಂಭಿಸಿದೆ. ಬುಧವಾರದಿಂದ ಎಲೆಕ್ಟ್ರಿಕ್ ಇಂಜಿನ್ ರೈಲು ಸಂಚಾರ ಆರಂಭಿಸಲಿದೆ.

  • ಒಡಿಶಾ ರೈಲು ದುರಂತದ ತನಿಖೆ ಸಿಬಿಐ ಹೆಗಲಿಗೆ

    ಒಡಿಶಾ ರೈಲು ದುರಂತದ ತನಿಖೆ ಸಿಬಿಐ ಹೆಗಲಿಗೆ

    ಭುವನೇಶ್ವರ: ಒಡಿಶಾದಲ್ಲಿ ಸಂಭವಿಸಿದ ಮೂರು ರೈಲು ಅಪಘಾತದ (Odisha Train Tragedy) ತನಿಖೆ ಕೇಂದ್ರೀಯ ತನಿಖಾ ಸಂಸ್ಥೆ(CBI) ಹೆಗಲಿಗೆ ಬಿದ್ದಿದೆ.

    ಒಡಿಶಾ ರೈಲು ಅಪಘಾತ ಸಂಬಂಧ ತನಿಖೆಯನ್ನು ಸಿಬಿಐ ತನಿಖೆಗೆ ರೈಲ್ವೇ ಮಂಡಳಿ ಶಿಫಾರಸು ಮಾಡಿದೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಹೇಳಿದ್ದಾರೆ.

    ದುರಂತ ನಡೆದ ಸ್ಥಳದಲ್ಲಿರುವ ಅಶ್ವಿನಿ ವೈಷ್ಣವ್‌, ಅಪಘಾತ ಹೇಗಾಯ್ತು?, ಆಡಳಿತವು ಹೊಂದಿರುವ ಮಾಹಿತಿಯನ್ನು ಗಮನದಲ್ಲಿಟ್ಟುಕೊಂಡು ರೈಲ್ವೇ ಮಂಡಳಿಯು ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ಶಿಫಾರಸು ಮಾಡಿದೆ ಎಂದು ತಿಳಿಸಿದರು. ಇದನ್ನೂ ಓದಿ: ಒಡಿಶಾ ರೈಲ್ವೇ ದುರಂತ – ಅನಾಥರಾದ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ವಹಿಸಿಕೊಂಡ ಅದಾನಿ ಗ್ರೂಪ್

     

    ಒಡಿಶಾ ಬಾಲಸೋರ್‌ನ ಬಹನಾಗ ಬಜಾರ್ ರೈಲು ನಿಲ್ದಾಣದಲ್ಲಿ ನಡೆದ ಅಪಘಾತದಲ್ಲಿ 275 ಮಂದಿ ಮೃತಪಟ್ಟಿದ್ದು ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

    ಪ್ರಾಥಮಿಕ ತನಿಖೆಯಲ್ಲಿ ಸಿಗ್ನಲಿಂಗ್‌ನಲ್ಲಿ ದೋಷ ಪತ್ತೆಯಾಗಿರುವುದು ತಿಳಿದು ಬಂದಿದೆ. ಗೂಡ್ಸ್‌ ರೈಲು ಹಳಿ ತಪ್ಪಿರಲಿಲ್ಲ. ಹಳಿ ತಪ್ಪಿದ ಕೋರಮಂಡಲ್ ಎಕ್ಸ್‌ಪ್ರೆಸ್‌ (Coromandel Express) ಬೋಗಿಗಳು ಇನ್ನೊಂದು ಮುಖ್ಯ ಹಳಿ ಮೇಲೆ ಬಿದ್ದ ಪರಿಣಾಮ ಗರಿಷ್ಠ ಮಟ್ಟದ ಸಾವು ನೋವು ಸಂಭವಿಸಿದೆ. ಕೋರಮಂಡಲ್ ಎಕ್ಸ್‌ಪ್ರೆಸ್‌ನ ಹಳಿತಪ್ಪಿದ ಬೋಗಿಗಳು ಗಂಟೆಗೆ 126 ಕಿ.ಮೀ ವೇಗದಲ್ಲಿ ಬರುತ್ತಿದ್ದ ಯಶವಂತಪುರ ಎಕ್ಸ್‌ಪ್ರೆಸ್‌ ರೈಲಿನ ಕೊನೆಯ ಎರಡು ಬೋಗಿಗಳ ಮೇಲೆ ಬಿದ್ದ ಪರಿಣಾಮ ಸಾವು ನೋವು ಹೆಚ್ಚಾಗಿದೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.

     

    ಎಲೆಕ್ಟ್ರಾನಿಕ್ ಇಂಟರ್‌ಲಾಕಿಂಗ್ (Electronic Interlocking) ಸಮಯದಲ್ಲಿ ಉಂಟಾದ ಬದಲಾವಣೆಯಿಂದ ಅಪಘಾತ ಸಂಭವಿಸಿರುವುದು ತಿಳಿದು ಬಂದಿದೆ. ಈ ಬದಲಾವಣೆಯನ್ನು ಯಾರು ಮಾಡಿದ್ದಾರೆ ಮತ್ತು ಅದು ಹೇಗೆ ಸಂಭವಿಸಿತು ಎಂಬುದನ್ನು ಸರಿಯಾದ ತನಿಖೆಯ ನಂತರ ಕಂಡುಹಿಡಿಯಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

  • ಶಾರುಖ್ ಪುತ್ರನ ಡ್ರಗ್ಸ್ ಕೇಸಲ್ಲಿ ಲಂಚದ ಆರೋಪ ಎದುರಿಸುತ್ತಿರುವ ಅಧಿಕಾರಿಗೆ ದಾವೂದ್ ಇಬ್ರಾಹಿಂ ಹೆಸರಲ್ಲಿ ಬೆದರಿಕೆ

    ಶಾರುಖ್ ಪುತ್ರನ ಡ್ರಗ್ಸ್ ಕೇಸಲ್ಲಿ ಲಂಚದ ಆರೋಪ ಎದುರಿಸುತ್ತಿರುವ ಅಧಿಕಾರಿಗೆ ದಾವೂದ್ ಇಬ್ರಾಹಿಂ ಹೆಸರಲ್ಲಿ ಬೆದರಿಕೆ

    ಮುಂಬೈ: ನನಗೆ ಹಾಗೂ ನನ್ನ ಕುಟುಂಬಕ್ಕೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹೆಸರಿನಲ್ಲಿ ಬೆದರಿಕೆಗಳು ಬರುತ್ತಿವೆ ಎಂದು ಮುಂಬೈನ ಎನ್‍ಸಿಬಿ (Narcotics Control Bureau) ಮಾಜಿ ನಿರ್ದೇಶಕ ಸಮೀರ್ ವಾಂಖೆಡೆ ಹೇಳಿದ್ದಾರೆ.

    ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿರುವ ಅವರು, ನಕಲಿ ಟ್ವಿಟ್ಟರ್ ಖಾತೆಯ ಮೂಲಕ ಬೆದರಿಕೆಗಳು ಬರುತ್ತಿವೆ. ನನಗೆ ಹಾಗೂ ನನ್ನ ಕುಟುಂಬದ ಮೇಲೆ ದಾಳಿಯಾದರೆ ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ದೇವರ ದಯೆಯಿಂದ ನಾವು ಕೋರಮಂಡಲ್ ಎಕ್ಸ್‌ಪ್ರೆಸ್ ಹತ್ತಲಿಲ್ಲ – ಬೆಂಗಳೂರಿಗೆ ಬಂದಿಳಿದ ವಾಲಿಬಾಲ್ ಕೋಚ್ ಪ್ರತಿಕ್ರಿಯೆ

    ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಅವರ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದಲ್ಲಿ 25 ಕೋಟಿ ರೂ. ಲಂಚಕ್ಕೆ ಬೇಡಿಕೆ ಇಟ್ಟ ಆರೋಪವನ್ನು ವಾಂಖೆಡೆ ಎದುರಿಸುತ್ತಿದ್ದಾರೆ. ಈ ಬಗ್ಗೆ ಸಿಬಿಐ (CBI) ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಡ್ರಗ್ಸ್ ಪ್ರಕರಣದಲ್ಲಿ ನಟ ಶಾರುಖ್ ಖಾನ್ ಅವರೊಂದಿಗೆ ಮಾತುಕತೆ ನಡೆಸಿ ಸಮೀರ್ ವಾಂಖೆಡೆ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಎನ್‍ಸಿಬಿ ಆರೋಪಿಸಿದೆ.

    ಆರೋಪಿಯ ಕುಟುಂಬದೊಂದಿಗೆ ವಾಂಖೆಡೆ ಮಾತನಾಡಿರುವುದು ಎನ್‍ಸಿಬಿಯ ನೀತಿ ನಿಯಮಗಳಿಗೆ ವಿರುದ್ಧವಾಗಿದೆ. ತನಿಖಾಧಿಕಾರಿಯು ಆರೋಪಿಯ ಕುಟುಂಬದೊಂದಿಗೆ ಮಾತನಾಡುವ ಅಗತ್ಯ ಏನಿತ್ತು? ಎಂದು ನ್ಯಾಯಾಲಯದಲ್ಲಿ ಸಿಬಿಐ ವಾದಿಸಿತ್ತು. ಅಲ್ಲದೆ ಶಾರುಖ್ ಖಾನ್ ಅವರೊಂದಿಗೆ ಸಂಪರ್ಕಿಸಿದ್ದ ಮೊಬೈಲ್ ನೀಡಲು ನಿರಾಕರಿಸಿದ್ದರು. ಅಧಿಕಾರಿಗಳಿಗೆ ಹೆದರಿಸುವ ಪ್ರಯತ್ನ ಮಾಡಿದ್ದರು ಎಂದು ಸಿಬಿಐ ಆರೋಪಿಸಿದೆ.

    ಸಿಬಿಐ ಕ್ರಮದ ವಿರುದ್ಧ ವಾಂಖೆಡೆ ಬಾಂಬೆ ಹೈಕೋರ್ಟ್ (Bombay High Court) ಮೊರೆ ಹೋಗಿದ್ದರು. ಅಲ್ಲಿಂದ ಅವರಿಗೆ ಮೇ 22 ರ ವರೆಗೆ ಬಂಧಿಸದಂತೆ ಕೋರ್ಟ್ ರಕ್ಷಣೆ ನೀಡಿತ್ತು. ಬಳಿಕ ಕೋರ್ಟ್ ಜೂನ್ 8 ರವರೆಗೆ ಬಂಧಿಸದಂತೆ ವಿಸ್ತರಿಸಿದೆ. ಇದನ್ನೂ ಓದಿ: ಅರ್ಕೆಸ್ಟ್ರಾ ಹಾಡು ಬದಲಿಸುವ ವಿಚಾರಕ್ಕೆ ಗಲಾಟೆ – ಚಾಕುವಿನಿಂದ ಇರಿದು ವ್ಯಕ್ತಿ ಕೊಲೆ

  • ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಮತ್ತೆ ಬಿಗ್ ರಿಲೀಫ್

    ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಮತ್ತೆ ಬಿಗ್ ರಿಲೀಫ್

    ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ (DK Shivakumar) ಮತ್ತೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (CBI) ತನಿಖೆಗೆ ಹೈಕೋರ್ಟ್ ನೀಡಿದ್ದ ಮಧ್ಯಂತರ ತಡೆಯಾಜ್ಞೆ ಮತ್ತೆ ವಿಸ್ತರಣೆಯಾಗಿದೆ.

    ಪ್ರಕರಣದ ಫೈಲ್ ಸಿಜೆ ಅಂಗಳಕ್ಕೆ ಹೋಗಿದೆ. ಈ ಹಿಂದೆ ನ್ಯಾ.ನಟರಾಜನ್ ಪೀಠದಲ್ಲಿ ವಿಚಾರಣೆ ನಡೆದಿತ್ತು. ಇದೀಗ ನ್ಯಾ.ಎಂ.ನಾಗಪ್ರಸನ್ನ ಅವರ ಪೀಠಕ್ಕೆ ವರ್ಗಾವಣೆ ಆಗಿದೆ. ಹೀಗಾಗಿ ಯಾವ ಪೀಠದಲ್ಲಿ ವಿಚಾರಣೆ ಮುಂದುವರಿಸಬೇಕು ಎಂದು ಸಿಜೆ ನಿರ್ಧಾರ ಮಾಡಲಿದ್ದಾರೆ. ಪ್ರಕರಣ ಫೈಲ್ ರಿಜಿಸ್ಟ್ರಾರ್‌ಗೆ ನ್ಯಾ.ನಾಗಪ್ರಸನ್ನ ಅವರು ಕಳುಹಿಸಿದ್ದಾರೆ. ಮುಂದಿನ ವಿಚಾರಣೆವರೆಗೂ ಮಧ್ಯಂತರ ತಡೆಯಾಜ್ಞೆ ಮುಂದುವರೆಸಿ ಕೋರ್ಟ್ ಆದೇಶ ಹೊರಡಿಸಿದೆ. ಇದನ್ನೂ ಓದಿ: ಪುತ್ತೂರುನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್‍ಗೆ ದಂತದಿಂದ ತಿವಿದ ಕಾಡಾನೆ!

    ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ಈಗ ವಿಸ್ತರಣೆಯಾಗಿದೆ. ನ್ಯಾ.ಎಂ.ನಾಗಪ್ರಸನ್ನ ಅವರ ಪೀಠದಲ್ಲಿ ವಿಚಾರಣೆ ನಡೆಯಲಿದೆ. ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಧ್ಯಂತರ ತಡೆಯಾಜ್ಞೆ ವಿಸ್ತರಣೆಯಾಗಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ತಡೆ ತೆರವು ಮಾಡಿ ತನಿಖೆಗೆ ಅವಕಾಶ ಕೊಡಬೇಕು ಎಂದು ಸಿಬಿಐ ಮೇಲ್ಮನವಿ ಸಲ್ಲಿಸಿತ್ತು. ಸಿಬಿಐ ತನಿಖೆಗೆ ಡಿ.ಕೆ.ಶಿವಕುಮಾರ್ ಕೋರ್ಟ್ನಿಂದ ತಡೆ ಪಡೆದಿದ್ದರು. ಕೋರ್ಟ್ ರಜಾ ದಿನಗಳ ಬಳಿಕ ಮತ್ತೆ ಅರ್ಜಿ ವಿಚಾರಣೆಯಾಗಲಿದೆ. ಇದನ್ನೂ: ಮುಸ್ಲಿಂ ಮಹಿಳೆಯರು ‘ಬೇಬಿ ಫ್ಯಾಕ್ಟರಿ’ ಎಂದು ಪೋಸ್ಟ್ ಹಾಕಿದ RSS ಕಾರ್ಯಕರ್ತ ಅರೆಸ್ಟ್

  • ಸಿಬಿಐ ನಿರ್ದೇಶಕರಾಗಿ ಪ್ರವೀಣ್ ಸೂದ್ ಅಧಿಕಾರ ಸ್ವೀಕಾರ

    ಸಿಬಿಐ ನಿರ್ದೇಶಕರಾಗಿ ಪ್ರವೀಣ್ ಸೂದ್ ಅಧಿಕಾರ ಸ್ವೀಕಾರ

    ನವದೆಹಲಿ: ಕೇಂದ್ರೀಯ ತನಿಖಾ ದಳ (CBI) ನೂತನ ನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ (Praveen Sood) ಇಂದು (ಗುರುವಾರ) ಅಧಿಕಾರ ಸ್ವೀಕರಿಸಿದ್ದಾರೆ.

    ಹಾಲಿ ಸಿಬಿಐ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ (Subodh Kumar Jaiswal) ಅಧಿಕಾರವಧಿ ಇಂದಿಗೆ ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿದ್ದ ಪ್ರವೀಣ್ ಸೂದ್ ಅವರನ್ನು ಮೇ 14 ರಂದು 2 ವರ್ಷಗಳ ಅವಧಿಗೆ ಸಿಬಿಐ ನಿರ್ದೇಶಕರನ್ನಾಗಿ ಕೇಂದ್ರ ಸರ್ಕಾರ ನೇಮಿಸಿದೆ.

    ವರದಿಗಳ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ (Narendra Modi), ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಭಾಗವಹಿಸಿದ್ದ ಸಭೆಯಲ್ಲಿ ಸಿಬಿಐ ನಿರ್ದೇಶಕರ ಹುದ್ದೆಗೆ ಪ್ರವೀಣ್ ಸೂದ್ ಅವರ ಹೆಸರನ್ನು ಅಂತಿಮಗೊಳಿಸಲಾಯಿತು. ಇದನ್ನೂ ಓದಿ: ಸಿದ್ದರಾಮಯ್ಯರಿಗೆ ಈಗಲೂ ಬಿಜೆಪಿಯಿಂದ ಜೀವ ಬೆದರಿಕೆ ಇದೆ: ಎಂ.ಲಕ್ಷ್ಮಣ್ ಆರೋಪ

    ಕರ್ನಾಟಕ ಕೇಡರ್ ನ 1986 ಬ್ಯಾಚ್‍ನ ಐಪಿಎಸ್‌ (IPS) ಅಧಿಕಾರಿಯಾಗಿರುವ ಪ್ರವೀಣ್ ಸೂದ್ ಅವರು 2013-14ರಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡರು. ಅಲ್ಲದೆ ರಾಜ್ಯ ಗೃಹ ಇಲಾಖೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ರಾಜ್ಯ ಮೀಸಲು ಪೊಲೀಸ್‍ನ ಎಡಿಜಿಪಿ ಆಗಿಯೂ ಕೆಲಸ ಮಾಡಿದ್ದಾರೆ.

    2024ರಲ್ಲಿ ಪ್ರವೀಣ್‌ ಸೂದ್ ಸೇವೆಯಿಂದ ನಿವೃತ್ತಿ ಹೊಂದಬೇಕಿತ್ತು. ಆದರೆ ಸಿಬಿಐ ನೂತನ ನಿರ್ದೇಶಕರಾಗಿ ನೇಮಿಸಿದ ಕಾರಣ ಈಗ ಎರಡು ವರ್ಷಗಳ ಅಧಿಕಾರವಧಿ ವಿಸ್ತರಣೆಗೊಂಡಿದೆ.

  • CBI ನಿರ್ದೇಶಕರಾಗಿ ಕರ್ನಾಟಕದ ಡಿಜಿಪಿ ಪ್ರವೀಣ್‌ ಸೂದ್‌ ನೇಮಕ

    CBI ನಿರ್ದೇಶಕರಾಗಿ ಕರ್ನಾಟಕದ ಡಿಜಿಪಿ ಪ್ರವೀಣ್‌ ಸೂದ್‌ ನೇಮಕ

    ನವದೆಹಲಿ: ಕೇಂದ್ರೀಯ ತನಿಖಾ ದಳದ (CBI) ನಿರ್ದೇಶಕರಾಗಿ ಕರ್ನಾಟಕದ ಡಿಜಿಪಿ ಪ್ರವೀಣ್‌ ಸೂದ್‌ (Praveen Sood) ನೇಮಕಗೊಂಡಿದ್ದಾರೆ.

    ಪ್ರಧಾನ ಮಂತ್ರಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಕೇಂದ್ರೀಯ ತನಿಖಾ ದಳದ ಉನ್ನತ ಹುದ್ದೆಗೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳ ಹೆಸರನ್ನು ಸಚಿವ ಸಂಪುಟಕ್ಕೆ ಶಿಫಾರಸು ಮಾಡಿತ್ತು. ಶನಿವಾರ ಸಂಜೆ ನಡೆದ ಉನ್ನತ ಮಟ್ಟದ ಸಮಿತಿ ಸಭೆಯ ನಂತರ ಹೆಸರುಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿತ್ತು. ಇದನ್ನೂ ಓದಿ: CBI ನಿರ್ದೇಶಕರ ಆಯ್ಕೆ ಪಟ್ಟಿಯಲ್ಲಿ ಕರ್ನಾಟಕದ ಡಿಜಿಪಿ ಪ್ರವೀಣ್‌ ಸೂದ್‌ ಹೆಸರು

    ಸಿಬಿಐ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಅವರ ಎರಡು ವರ್ಷಗಳ ಅವಧಿ ಮೇ 25 ರಂದು ಕೊನೆಗೊಳ್ಳಲಿದೆ. ಮೇ 26 ಕ್ಕೆ ಸಿಬಿಐ ನಿರ್ದೇಶಕರಾಗಿ ಪ್ರವೀಣ್‌ ಸೂದ್‌ ಅಧಿಕಾರ ಸ್ವೀಕರಿಸಲಿದ್ದಾರೆ.

    ರಾಜ್ಯ ಕೇಡರ್‌ನ 1986-ಬ್ಯಾಚ್‌ನ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರು ಈ ಹುದ್ದೆಗೆ ಮುಂಚೂಣಿಯಲ್ಲಿದ್ದಾರೆ. ಡಿಜಿಪಿ ಪ್ರವೀಣ್‌ ಸೂದ್‌ ಆಡಳಿತಾರೂಢ ಬಿಜೆಪಿ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದ್ದು, ಅವರನ್ನು ರಕ್ಷಿಸುತ್ತಿದ್ದಾರೆ. ನಮ್ಮ ಪಕ್ಷದ ನಾಯಕರ ವಿರುದ್ಧ ಪ್ರಕರಣ ದಾಖಸುತ್ತಿದ್ದಾರೆ. ಪ್ರವೀಣ್‌ ಸೂದ್‌ ಒಬ್ಬ ನಾಲಾಯಕ್‌. ಕೂಡಲೇ ಅವರ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಟೀಕಿಸಿದ್ದರು. ಇದನ್ನೂ ಓದಿ: ಮೋದಿ ಅಲೆ ಮುಗಿದಿದೆ, ಬಜರಂಗ ಬಲಿ ಕಾಂಗ್ರೆಸ್ ಜೊತೆಗಿದೆ: ಸಂಜಯ್ ರಾವತ್

    ಪ್ರಧಾನ ಮಂತ್ರಿ, ಸಿಜೆಐ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಎರಡು ವರ್ಷಗಳ ಅವಧಿಗೆ ಸಿಬಿಐ ನಿರ್ದೇಶಕರನ್ನು ಆಯ್ಕೆ ಮಾಡುತ್ತದೆ. ಅಧಿಕಾರಾವಧಿಯನ್ನು ಐದು ವರ್ಷಗಳವರೆಗೆ ವಿಸ್ತರಿಸಬಹುದು.

  • CBI ನಿರ್ದೇಶಕರ ಆಯ್ಕೆ ಪಟ್ಟಿಯಲ್ಲಿ ಕರ್ನಾಟಕದ ಡಿಜಿಪಿ ಪ್ರವೀಣ್‌ ಸೂದ್‌ ಹೆಸರು

    CBI ನಿರ್ದೇಶಕರ ಆಯ್ಕೆ ಪಟ್ಟಿಯಲ್ಲಿ ಕರ್ನಾಟಕದ ಡಿಜಿಪಿ ಪ್ರವೀಣ್‌ ಸೂದ್‌ ಹೆಸರು

    ನವದೆಹಲಿ: ಕೇಂದ್ರೀಯ ತನಿಖಾ ದಳದ (CBI) ಉನ್ನತ ಹುದ್ದೆಗೆ ಆಯ್ಕೆ ಪಟ್ಟಿಯಲ್ಲಿ ಕರ್ನಾಟಕದ ಡಿಜಿಪಿ (DGP) ಪ್ರವೀಣ್‌ ಸೂದ್‌ (Praveen Sood) ಅವರ ಹೆಸರೂ ಇದೆ ಎನ್ನಲಾಗಿದೆ.

    ಪ್ರಧಾನ ಮಂತ್ರಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಕೇಂದ್ರೀಯ ತನಿಖಾ ದಳದ ಉನ್ನತ ಹುದ್ದೆಗೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಆಯ್ಕೆ ಮಾಡಿದೆ. ಶನಿವಾರ ಸಂಜೆ ನಡೆದ ಉನ್ನತ ಮಟ್ಟದ ಸಮಿತಿ ಸಭೆಯ ನಂತರ ಹೆಸರುಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: 2024ರ ಹೊತ್ತಿಗೆ ಬಿಜೆಪಿ ಅಂತ್ಯ ಶುರು: ಮಮತಾ ಬ್ಯಾನರ್ಜಿ

    ಪ್ರವೀಣ್ ಸೂದ್ (ಡಿಜಿಪಿ ಕರ್ನಾಟಕ), ಸುಧೀರ್ ಸಕ್ಸೇನಾ (ಡಿಜಿಪಿ ಮಧ್ಯಪ್ರದೇಶ) ಮತ್ತು ತಾಜ್ ಹಾಸನ್ ಈಗ ಸಿಬಿಐ ಮುಂದಿನ ನಿರ್ದೇಶಕರಾಗುವ ಲೆಕ್ಕಾಚಾರದಲ್ಲಿದ್ದಾರೆ ಎಂದು ಹೇಳಲಾಗಿದೆ. ಸಿಬಿಐ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಅವರ ಎರಡು ವರ್ಷಗಳ ಅವಧಿ ಮೇ 25 ರಂದು ಕೊನೆಗೊಳ್ಳಲಿದೆ.

    ರಾಜ್ಯ ಕೇಡರ್‌ನ 1986-ಬ್ಯಾಚ್‌ನ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರು ಈ ಹುದ್ದೆಗೆ ಮುಂಚೂಣಿಯಲ್ಲಿದ್ದಾರೆ. ಡಿಜಿಪಿ ಪ್ರವೀಣ್‌ ಸೂದ್‌ ಆಡಳಿತಾರೂಢ ಬಿಜೆಪಿ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದ್ದು, ಅವರನ್ನು ರಕ್ಷಿಸುತ್ತಿದ್ದಾರೆ. ನಮ್ಮ ಪಕ್ಷದ ನಾಯಕರ ವಿರುದ್ಧ ಪ್ರಕರಣ ದಾಖಸುತ್ತಿದ್ದಾರೆ. ಪ್ರವೀಣ್‌ ಸೂದ್‌ ಒಬ್ಬ ನಾಲಾಯಕ್‌. ಕೂಡಲೇ ಅವರ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಟೀಕಿಸಿದ್ದರು. ಇದನ್ನೂ ಓದಿ: ಈ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿ: ಕೆ. ಹೆಚ್ ಮುನಿಯಪ್ಪ

    ಪ್ರಧಾನ ಮಂತ್ರಿ, ಸಿಜೆಐ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಎರಡು ವರ್ಷಗಳ ಅವಧಿಗೆ ಸಿಬಿಐ ನಿರ್ದೇಶಕರನ್ನು ಆಯ್ಕೆ ಮಾಡುತ್ತದೆ. ಅಧಿಕಾರಾವಧಿಯನ್ನು ಐದು ವರ್ಷಗಳವರೆಗೆ ವಿಸ್ತರಿಸಬಹುದು.

  • ಮಾಜಿ ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ವಿರುದ್ಧ ಸಿಬಿಐನಿಂದ ಭ್ರಷ್ಟಾಚಾರ ಕೇಸ್ ದಾಖಲು

    ಮುಂಬೈ: 2 ವರ್ಷಗಳ ಹಿಂದೆ ಡ್ರಗ್ಸ್ ಪ್ರಕರಣದಲ್ಲಿ ನಟ ಶಾರೂಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ (Aryan Khan) ಅವರನ್ನು ಬಂಧಿಸಿದ್ದ ಮಾಜಿ ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆ (Sameer Wankhede) ವಿರುದ್ಧ ಕೇಂದ್ರೀಯ ತನಿಖಾ ದಳ (CBI) ಶುಕ್ರವಾರ ಭ್ರಷ್ಟಾಚಾರ ಪ್ರಕರಣವನ್ನು ದಾಖಲಿಸಿದೆ.

    ವಾಂಖೆಡೆ ಭ್ರಷ್ಟಾಚಾರದ ಮೂಲಕ ಆಸ್ತಿ ಗಳಿಕೆ ಮಾಡಿರುವ ಆರೋಪದಡಿ ಅವರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ. ಸಮೀರ್ ವಾಂಖೆಡೆ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆಯ ಭಾಗವಾಗಿ ಅಂಧೇರಿ, ಮುಂಬೈಯಲ್ಲಿರುವ ಅವರ ಮನೆ ಸೇರಿದಂತೆ 29 ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ.

    2021ರ ಅಕ್ಟೋಬರ್‌ನಲ್ಲಿ ವಾಂಖೆಡೆ ನೇತೃತ್ವದ ತಂಡ ಮುಂಬೈ ಇಂಟರ್ನ್ಯಾಷನಲ್ ಕ್ರೂಸ್ ಟರ್ಮಿನಲ್‌ನಲ್ಲಿ ಕಾರ್ಡೆಲಿಯಾ ಹಡಗಿನ ಮೇಲೆ ದಾಳಿ ಮಾಡಿ ಆರ್ಯನ್ ಖಾನ್ ಹಾಗೂ ಇತರರನ್ನು ಬಂಧಿಸಿತ್ತು. ಮಾದಕ ವಸ್ತು ಸಂಗ್ರಹ, ಸೇವನೆ, ಕಳ್ಳಸಾಗಣೆಯ ಆರೋಪ ಹೊರಿಸಿ ಆರ್ಯನ್ ಖಾನ್ ಅವರನ್ನು 22 ದಿನಗಳ ಕಾಲ ಜೈಲಿನಲ್ಲಿಡಲಾಗಿತ್ತು. ಬಳಿಕ ಸಾಕಷ್ಟು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಎನ್‌ಸಿಬಿ ಮೇ 2022ರಲ್ಲಿ ಕ್ಲೀನ್ ಚಿಟ್ ನೀಡಿತ್ತು. ಇದನ್ನೂ ಓದಿ: ಕಣಿವೆಯಲ್ಲಿ ಹೆಚ್ಚುತ್ತಿರುವ ಉಗ್ರರ ಹಾವಳಿ – ಕೇಂದ್ರದ ದಿಟ್ಟ ನಿರ್ಧಾರ

    ಇದರ ನಡುವೆ ಸಮೀರ್ ವಾಂಖೆಡೆ ವಿರುದ್ಧ ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್ ಹಲವು ಆರೋಪಗಳನ್ನು ಮಾಡಿದರು. ಅದರಲ್ಲಿ ಒಂದು ವಾಂಖೆಡೆ ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ಹುದ್ದೆ ಪಡೆದಿದ್ದರು ಎಂಬುದೂ ಆಗಿತ್ತು. ಆ ಕೇಸ್‌ನ ಬಳಿಕ ಅವರಿಗೆ ಮಹಾರಾಷ್ಟ್ರದ ಜಾತಿ ಪರಿಶೀಲನಾ ಸಮಿತಿ ಕ್ಲೀನ್ ಚಿಟ್ ನೀಡಿತ್ತು. 2021ರಲ್ಲಿ ಎನ್‌ಸಿಬಿ ವಲಯ ನಿರ್ದೇಶಕರಾಗಿ ಅವರ ಅವಧಿ ಮುಗಿದಿದ್ದು ಬಳಿಕ ಕಂದಾಯ ಇಲಾಖೆಗೆ ವರ್ಗಾವಣೆಗೊಂಡಿದ್ದರು. ಇದನ್ನೂ ಓದಿ: ಹಿಂಡನ್‍ಬರ್ಗ್ ವರದಿ ವಿವಾದ – ತನಿಖೆಗೆ 3 ತಿಂಗಳ ಗಡುವು ನೀಡಿದ ಸುಪ್ರೀಂ