Tag: ಸಿಬಿಐ

  • ಧರ್ಮಸ್ಥಳ ಕೇಸ್ 90% ತನಿಖೆ ಮುಗಿದಿದೆ, ಎನ್‌ಐಎ, ಸಿಬಿಐ ಅಗತ್ಯವಿಲ್ಲ: ರಾಮಲಿಂಗಾ ರೆಡ್ಡಿ

    ಧರ್ಮಸ್ಥಳ ಕೇಸ್ 90% ತನಿಖೆ ಮುಗಿದಿದೆ, ಎನ್‌ಐಎ, ಸಿಬಿಐ ಅಗತ್ಯವಿಲ್ಲ: ರಾಮಲಿಂಗಾ ರೆಡ್ಡಿ

    ಬೆಂಗಳೂರು: ಧರ್ಮಸ್ಥಳ ಕೇಸ್ (Dharmasthala Case) ಎಲ್ಲಾ ಮುಗಿಯುವ ಹಂತಕ್ಕೆ ಬಂದಿದೆ. ನಮ್ಮ ಅಭಿಪ್ರಾಯದಲ್ಲಿ 90% ಕೇಸ್ ತನಿಖೆ ಮುಗಿದಿದೆ. ಎನ್‌ಐಎ (NIA), ಸಿಬಿಐ (CBI) ತನಿಖೆ ಬೇಕಾಗಿಲ್ಲ ಎಂದು ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಹೇಳಿದ್ದಾರೆ.

    ಧರ್ಮಸ್ಥಳ ಪ್ರಕರಣದ ಕುರಿತು ಸತೀಶ್ ಜಾರಕಿಹೊಳಿ ಹೇಳಿಕೆಗೆ ನೆಲಮಂಗಲದಲ್ಲಿ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ, ಪರಮೇಶ್ವರ್ ಕ್ಲಾರಿಟಿ ಕೊಡಬೇಕು ಎಂಬ ತೀರ್ಮಾನ ತೆಗೆದುಕೊಂಡಿದ್ದರಿಂದ ಒಂದು ಹಂತಕ್ಕೆ ಬಂದಿದೆ. ಎನ್‌ಐಎ, ಸಿಬಿಐ ಬೇಕಾಗಿಲ್ಲ, ನಮ್ಮ ಪೊಲೀಸರೇ ಸಮರ್ಥವಾಗಿದ್ದಾರೆ. ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಬಗ್ಗೆ ವ್ಯಾಪಕವಾಗಿ ಯೂಟ್ಯೂಬರ್ಸ್ ಪರ ಹಾಗೂ ವಿರೋಧ ಇದ್ದರೂ ಎಲ್ಲವೂ ಅಂತ್ಯವಾಗತ್ತದೆ ಎಂದರು. ಇದನ್ನೂ ಓದಿ: ಕೇಜ್ರಿವಾಲ್ ಪ್ರಕರಣ ಉಲ್ಲೇಖಿಸಿ ವಿಪಕ್ಷಗಳಿಗೆ ತಿರುಗೇಟು – ಪಿಎಂ, ಸಿಎಂ ವಜಾ ಮಸೂದೆ ಸಮರ್ಥಿಸಿಕೊಂಡ ಅಮಿತ್ ಶಾ

    ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಹ್ವಾನ ವಿಚಾರದ ಕುರಿತು ಮಾತನಾಡಿ, ಅಬ್ದುಲ್ ಕಲಾಂ ರಾಷ್ಟ್ರಪತಿಯವರಾಗಿರಲಿಲ್ವಾ? ಅಬ್ದುಲ್ ಕಲಾಂ ರಾಷ್ಟ್ರಪತಿಯಾಗಿದ್ದಾರೆ ಅಂದ್ರೆ ಬಾನು ಮುಷ್ತಾಕ್ ಉದ್ಘಾಟನೆ ಮಾಡೋದ್ರಲ್ಲಿ ತಪ್ಪೇನಿದೆ? ಅವರು ಇದೇ ಮಣ್ಣಿನಲ್ಲಿ ಹುಟ್ಟಿ ಅಭಿಮಾನ ಇರುವಂಥವರು. ಎಲ್ಲ ಧರ್ಮವನ್ನು ಸಮಾನವಾಗಿ ಕಾಣುವಂಥವರು. ಬೂಕರ್ ಪ್ರಶಸ್ತಿ ವಿಜೇತರು ಅವರು, ಉದ್ಘಾಟನೆ ಮಾಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಕನ್ನಡ ತಾಯಿ ಭುವನೇಶ್ವರಿಯನ್ನು ಒಪ್ಪದ ಬಾನು ಮುಷ್ತಾಕ್ ನಾಡದೇವತೆಯನ್ನು ಒಪ್ಪುತ್ತಾರಾ: ಪ್ರತಾಪ್ ಸಿಂಹ ಪ್ರಶ್ನೆ

    ಆರ್‌ಎಸ್‌ಎಸ್ ಗೀತೆ ವಿಚಾರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಆರ್‌ಎಸ್‌ಎಸ್ ನಮ್ಮ ಸ್ವಾತಂತ್ರ ಚಳುವಳಿಯಲ್ಲಿ ಭಾಗವಹಿಸಿಲ್ಲ. ಅವರ ಪಾತ್ರ ಏನೂ ಇಲ್ಲ, 52 ವರ್ಷಗಳ ಕಾಲ ನಮ್ಮ ತ್ರಿವರ್ಣ ಧ್ವಜ ಹಾರಿಸಲಿಲ್ಲ. ದೇಶದ ಸ್ವಾತಂತ್ರ‍್ಯಕ್ಕೆ ಅವರ ಕೊಡುಗೆ ಏನೂ ಇಲ್ಲ ಎಂದರು. ಇದನ್ನೂ ಓದಿ: ಬೆಂಗಳೂರಿಗರೇ ಗಮನಿಸಿ, ಮನೆ ಮನೆ ಕಸ ಸಂಗ್ರಹದ ಆಟೋಗಳ ಸಮಯ ಬದಲಾವಣೆ

  • ಎಸ್‌ಬಿಐಗೆ 2 ಸಾವಿರ ಕೋಟಿ ವಂಚನೆ – ಅನಿಲ್‌ ಅಂಬಾನಿಗೆ ಸಿಬಿಐ ಶಾಕ್‌

    ಎಸ್‌ಬಿಐಗೆ 2 ಸಾವಿರ ಕೋಟಿ ವಂಚನೆ – ಅನಿಲ್‌ ಅಂಬಾನಿಗೆ ಸಿಬಿಐ ಶಾಕ್‌

    – 6 ಜಾಗದಲ್ಲಿ ಅಧಿಕಾರಿಗಳಿಂದ ಶೋಧ

    ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 2,000 ಕೋಟಿ ರೂ.ಗಳಿಗೂ ಹೆಚ್ಚು ನಷ್ಟ ಉಂಟುಮಾಡಿದ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಕಮ್ಯುನಿಕೇಷನ್ಸ್ (RCOM)) ಮತ್ತು ಅದರ ಪ್ರವರ್ತಕ ನಿರ್ದೇಶಕ ಅನಿಲ್ ಅಂಬಾನಿಗೆ (Anil Ambani) ಸಂಬಂಧಿಸಿದ ಸ್ಥಳಗಳ ಮೇಲೆ ಕೇಂದ್ರೀಯ ತನಿಖಾ ದಳ (CBI) ಶನಿವಾರ ದಾಳಿ ನಡೆಸಿದೆ.

    ಆರ್‌ಕಾಮ್ ಮತ್ತು ಮುಂಬೈನಲ್ಲಿರುವ 66 ವರ್ಷದ  ಅನಿಲ್‌ಗೆ ಸಂಬಂಧಿಸಿದ ಆರು ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ. ಬ್ಯಾಂಕ್ ಹಣವನ್ನು ಹೇಗೆ ದುರುಪಯೋಗಪಡಿಸಿಕೊಳ್ಳಲಾಗಿದೆ ಮತ್ತು ಸಾಲಗಳನ್ನು ಬೇರೆಡೆಗೆ ತಿರುಗಿಸಲಾಗಿದೆಯೇ ಎಂಬುದನ್ನು ಪತ್ತೆಹಚ್ಚಲು ಈ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ.

    ಜೂನ್ 13 ರಂದು ಎಸ್‌ಬಿಐ ಆರ್‌ಸಿಒಎಂ ಮತ್ತು ಅನಿಲ್‌ ಅಂಬಾನಿಯನ್ನು ವಂಚನೆ ಎಸಗಿದ್ದಾರೆ ಎಂದು ವರ್ಗೀಕರಿಸಿ ಜೂನ್ 24 ರಂದು ಭಾರತೀಯ ರಿಸರ್ವ್ ಬ್ಯಾಂಕ್‌ಗೆ (RBI) ವರದಿಯನ್ನು ಕಳುಹಿಸಿತ್ತು. ಇದನ್ನೂ ಓದಿ: ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿ ರಿಲೀಸ್ ಸಿಎಂ ಸಿದ್ದರಾಮಯ್ಯಗೆ ಮೂರನೇ ಸ್ಥಾನ

    ಆರ್‌ಬಿಐ ಮಾರ್ಗಸೂಚಿಗಳ ಪ್ರಕಾರ, ಬ್ಯಾಂಕ್ ಒಂದು ಖಾತೆಯನ್ನು ‘ವಂಚನೆ’ ಎಂದು ವರ್ಗೀಕರಿಸಿದ ನಂತರ ಸಾಲದಾತನು ಪತ್ತೆಯಾದ 21 ದಿನಗಳಲ್ಲಿ ಆರ್‌ಬಿಐಗೆ ವರದಿ ಮಾಡಬೇಕು ಮತ್ತು ಪ್ರಕರಣವನ್ನು ಸಿಬಿಐ ಅಥವಾ ಪೊಲೀಸರಿಗೆ ವರದಿ ಮಾಡಬೇಕಾಗುತ್ತದೆ.

    ಜಾರಿ ನಿರ್ದೇಶನಾಲಯ (ED) ಅಂಬಾನಿ ಅವರನ್ನು ಅವರ ಸಮೂಹ ಕಂಪನಿಗಳ ವಿರುದ್ಧ ಕೋಟ್ಯಂತರ ರೂಪಾಯಿ ಮೌಲ್ಯದ ಬಹು ಬ್ಯಾಂಕ್ ಸಾಲ ವಂಚನೆ ಪ್ರಕರಣಗಳಿಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರಶ್ನಿಸಿದ ವಾರಗಳ ನಂತರ ಈ ಶೋಧಗಳನ್ನು ನಡೆಸಲಾಗಿದೆ.

    ಯೆಸ್ ಬ್ಯಾಂಕಿನಿಂದ 2017 ಮತ್ತು 2019 ರ ನಡುವೆ 3,000 ಕೋಟಿ ರೂ. ಸಾಲಗಳನ್ನು ಬೇರೆ ಕಡೆ ಹೂಡಿಕೆ ಮಾಡಿದ ವಿಚಾರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

    ರಿಲಯನ್ಸ್ ಕಮ್ಯುನಿಕೇಷನ್ಸ್ ಕೂಡ ಇದೇ ರೀತಿಯ 14,000 ಕೋಟಿ ರೂ.ಗಳಿಗೂ ಹೆಚ್ಚಿನ ವಂಚನೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • ಜಮ್ಮು & ಕಾಶ್ಮೀರ | ಕಾನ್ಸ್‌ಟೇಬಲ್‌ಗೆ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ್ದ 6 ಪೊಲೀಸರು ಅರೆಸ್ಟ್‌

    ಜಮ್ಮು & ಕಾಶ್ಮೀರ | ಕಾನ್ಸ್‌ಟೇಬಲ್‌ಗೆ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ್ದ 6 ಪೊಲೀಸರು ಅರೆಸ್ಟ್‌

    – ಪ್ರಕರಣದ ತನಿಖೆ ಸಿಬಿಐಗೆ ಒಪ್ಪಿಸಿದ್ದ ಸುಪ್ರೀಂ ಕೋರ್ಟ್‌
    – ತಿಂಗಳೊಳಗೆ ಆರೋಪಿಗಳ ಬಂಧನಕ್ಕೆ ಆದೇಶಿಸಿದ್ದ ನ್ಯಾಯಾಲಯ

    ಶ್ರೀನಗರ: ಕಾಶ್ಮೀರದ ಪೊಲೀಸ್ ಕಾನ್ಸ್​ಟೇಬಲ್​ ಒಬ್ಬರಿಗೆ‌ ಕಸ್ಟಡಿಯಲ್ಲಿ​​ ಚಿತ್ರಹಿಂಸೆ (Custodial Violence) ನೀಡಿದ ಆರೋಪದ ಮೇಲೆ ಪೊಲೀಸ್ ಉಪ ವರಿಷ್ಠಾಧಿಕಾರಿ ಮತ್ತು ಇನ್ಸ್‌ಪೆಕ್ಟರ್ ಸೇರಿದಂತೆ 6 ಪೊಲೀಸರನ್ನು ಹಾಗೂ ಇಬ್ಬರು ನಾಗರಿಕರನ್ನು ಕೇಂದ್ರ ತನಿಖಾ ದಳ (CBI) ಬಂಧಿಸಿದೆ.

    ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಕಾನ್ಸ್​ಟೇಬಲ್ ಖುರ್ಷೀದ್ ಅಹ್ಮದ್ ಚೌಹಾಣ್‌ ಅವರ ಮೇಲೆ ನಡೆದಿದ್ದ ಚಿತ್ರಹಿಂಸೆಯನ್ನು ಗಂಭೀರವಾಗಿ ಪರಿಗಣಸಿದ್ದ ಸುಪ್ರೀಂ ಕೋರ್ಟ್ (Supreme Court)​ ಜು.21ರಂದು ಬಂಧನಕ್ಕೆ ನಿರ್ದೇಶನ ನೀಡಿತ್ತು. ಕೋರ್ಟ್‌ನ ಆದೇಶದ ಅನ್ವಯ ಕುಪ್ವಾರಾದ ಜಂಟಿ ವಿಚಾರಣಾ ಕೇಂದ್ರದ ಡಿಎಸ್​ಪಿ ಐಜಾಜ್ ಅಹ್ಮದ್ ನಾಯ್ಕು ಮತ್ತು ಸಬ್ ಇನ್ಸ್‌ಪೆಕ್ಟರ್ ರಿಯಾಜ್ ಅಹ್ಮದ್, ಜಹಾಂಗೀರ್ ಅಹ್ಮದ್, ಇಮ್ತಿಯಾಜ್ ಅಹ್ಮದ್, ಮೊಹಮ್ಮದ್ ಯೂನಿಸ್ ಮತ್ತು ಶಾಕಿರ್ ಅಹ್ಮದ್ ಸೇರಿದಂತೆ ಇಬ್ಬರು ನಾಗರೀಕರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಜಮ್ಮು ಕಾಶ್ಮೀರದ ಪೇದೆಗೆ ಕಸ್ಟಡಿಯಲ್ಲಿ ಚಿತ್ರಹಿಂಸೆ – ಸಿಬಿಐ ತನಿಖೆಗೆ ಆದೇಶಿಸಿದ ಸುಪ್ರೀಂ ಕೋರ್ಟ್

    ಕಾನ್ಸ್‌ಟೇಬಲ್‌ ಖುರ್ಷೀದ್ ಅಹ್ಮದ್ ಚೌಹಾಣ್, ತಮ್ಮನ್ನು 2023 ರಲ್ಲಿ ಕುಪ್ವಾರಾದಲ್ಲಿ ಹಲವಾರು ದಿನಗಳ ಕಾಲ ಅಕ್ರಮವಾಗಿ ಬಂಧಿಸಲಾಗಿತ್ತು. ಈ ಸಮಯದಲ್ಲಿ ಖಾಸಗಿ ಭಾಗಗಳನ್ನು ವಿರೂಪಗೊಳಿಸುವುದು ಸೇರಿದಂತೆ, ಅಮಾನವೀಯವಾಗಿ ಅಧಿಕಾರಿಗಳು ವರ್ತಿಸಿದ್ದರು ಎಂದು ಆರೋಪಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದರು.

    ಏನಿದು ಪ್ರಕರಣ?
    ಮಾದಕವಸ್ತು ಪ್ರಕರಣದಲ್ಲಿ ಸಮನ್ಸ್​ ನೀಡಿದ ಬಳಿಕ ತಮ್ಮ ಪತಿಯನ್ನು ಅಕ್ರಮವಾಗಿ ಬಂಧಿಸಿ 6 ದಿನಗಳ ಕಾಲ ಚಿತ್ರ ಹಿಂಸೆ ನೀಡಲಾಗಿತ್ತು ಎಂದು ಚೌಹಣ್​ ಅವರ ಪತ್ನಿ ರುಬೀನಾ ಅಖ್ತರ್​ ದೂರು ದಾಖಲಿಸಿದ್ದರು. ಅಲ್ಲದೇ ಪತಿ ಮೇಲೆ ಕಬ್ಬಿಣದ ಸಲಾಕೆ ಹಾಗೂ ಕಟ್ಟಿಗೆಯಿಂದ ಹಲ್ಲೆ ಮಾಡಿದ್ದರು. ಎಲೆಕ್ಟ್ರಿಕ್​ ಶಾಕ್​ ನೀಡಲಾಗಿತ್ತು ಎಂದು ಆರೋಪಿಸಿದ್ದರು. ಈ ಪ್ರಕರಣದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಕಳೆದ ಜುಲೈನಲ್ಲಿ ವಿಚಾರಣೆ ನಡೆಸಿತ್ತು.

    ಈ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದ ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ, ಕಸ್ಟಡಿ ಹಿಂಸಾಚಾರದಲ್ಲಿ ಭಾಗಿಯಾದ ಆರೋಪಿ ಅಧಿಕಾರಿಗಳನ್ನು ಒಂದು ತಿಂಗಳೊಳಗೆ ಬಂಧಿಸಬೇಕು. ಅಲ್ಲದೇ ತನಿಖೆಯನ್ನು 3 ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ಆದೇಶಿಸಿತ್ತು. ಇದನ್ನೂ ಓದಿ: ಪೋಕ್ಸೊ ಪ್ರಕರಣದಲ್ಲಿ ಮಹಿಳೆಗೆ 20 ವರ್ಷ ಜೈಲು

  • SBI ಬ್ಯಾಂಕ್‌ಗೆ 8 ಕೋಟಿ ವಂಚನೆ – 20 ವರ್ಷದಿಂದ ಸಿಗದವರು ಇಮೇಜ್ ಸರ್ಚ್ ಅನಾಲಿಟಿಕ್ಸ್‌ ಸಾಫ್ಟ್‌ವೇರ್‌ನಿಂದ ಸಿಬಿಐಗೆ ಲಾಕ್

    SBI ಬ್ಯಾಂಕ್‌ಗೆ 8 ಕೋಟಿ ವಂಚನೆ – 20 ವರ್ಷದಿಂದ ಸಿಗದವರು ಇಮೇಜ್ ಸರ್ಚ್ ಅನಾಲಿಟಿಕ್ಸ್‌ ಸಾಫ್ಟ್‌ವೇರ್‌ನಿಂದ ಸಿಬಿಐಗೆ ಲಾಕ್

    ಬೆಂಗಳೂರು: ಬ್ಯಾಂಕ್‌ಗೆ (SBI Bank) 20 ಕೋಟಿ ವಂಚಿಸಿ ತಲೆಮರೆಸಿಕೊಂಡಿದ್ದ ಮಹಿಳೆಯನ್ನ ಬರೋಬ್ಬರಿ 20 ವರ್ಷದ ಬಳಿಕ ಸಿಬಿಐ ಪೊಲೀಸರು (CBI Police) ಬಂಧಿಸಿದ್ದಾರೆ.

    ಮಣಿ ಸೇಖರ್ ಬಂಧಿತ ಮಹಿಳೆ. ಎಸ್‌ಬಿಐ ಶಾಖೆಯೊಂದಕ್ಕೆ 8 ಕೋಟಿ ವಂಚನೆ ಮಾಡಿದ್ದ ದಂಪತಿ ಮುತ್ತು ರಾಮಲಿಂಗಂ ಸೇಖರ್ ಮತ್ತು ಪತ್ನಿ ಮಣಿ ಸೇಖರ್ ತಲೆ ಮರೆಸಿಕೊಂಡಿದ್ರು. 2002 -05ರ ನಡ್ವೆ ನಡೆದಿದ್ದ ವಂಚನೆ ಪ್ರಕರಣ ಸಂಬಂಧ ಬೆಂಗಳೂರು ಸಿಬಿಐನಲ್ಲಿ 2006ರಲ್ಲಿ ಎಫ್‌ಐಆರ್ ದಾಖಲಾಗಿತ್ತು. ಇದನ್ನೂ ಓದಿ: 10 ವರ್ಷಗಳಿಂದ ಭಾರತದಲ್ಲಿ ಮಂಗಳಮುಖಿ ವೇಷದಲ್ಲಿದ್ದ ಅಬ್ದುಲ್ ಕಲಾಂ ಅರೆಸ್ಟ್‌

    ಕೇಸ್ ದಾಖಲಾಗ್ತಿದ್ದಂತೆ ತಲೆಮರೆಸಿಕೊಂಡಿದ್ದ ದಂಪತಿ ಮೇಲೆ 2007 ರಲ್ಲಿ ಸಿಬಿಐ ಚಾರ್ಜ್ ಶೀಟ್ ಹಾಕಿತ್ತು. ಆರೋಪಿಗಳ ವಿರುದ್ಧ ನ್ಯಾಯಲಯ 2009 ರಲ್ಲಿ ಪ್ರೊಕ್ಲೈಮೇಷನ್ ಆದೇಶ ಹೊರಡಿಸಿತ್ತು. ಆರೋಪಿಗಳು ತಮ್ಮ ಗುರುತು ಸಿಗದಂತೆ ಕೆವೈಸಿ ಬದಲಿಸಿ ಕೃಷ್ಣ ಕುಮಾರ್ ಗುಪ್ತ ಹಾಗೂ ಗೀತಾ ಕೃಷ್ಣ ಕುಮಾರ್ ಗುಪ್ತ ಎಂದು ಹೆಸರು ಬದಲಾವಣೆ ಮಾಡಿಕೊಂಡಿದ್ರಂತೆ. ಮೊಬೈಲ್ ನಂಬರ್, ಇಮೇಲ್, ಪ್ಯಾನ್‌ ಎಲ್ಲವನ್ನೂ ಬದಲಿಸಿದ್ದ ದಂಪತಿ ಮಧ್ಯಪ್ರದೇಶದ ಇಂದೋರ್ ನಲ್ಲಿ ತಲೆಮರೆಸಿಕೊಂಡು ವಾಸ ಮಾಡ್ತಿದ್ರು. ಇದನ್ನೂ ಓದಿ: Uttar Pradesh | ಸ್ಕೂಲ್ ವ್ಯಾನ್‌ನಲ್ಲಿ 4 ವರ್ಷದ ಬಾಲಕಿ ಮೇಲೆ ರೇಪ್ – ಡ್ರೈವರ್ ಬಂಧನ

    ಸಿಬಿಐ ಅತ್ಯಾಧುನಿಕ ಇಮೇಜ್ ಸರ್ಚ್ ಅನಾಲಿಟಿಕ್ಸ್‌ ಸಾಫ್ಟ್‌ವೇರ್ ಮೂಲಕ ಆರೊಪಿಯನ್ನ ಬಂಧಿಸಿದೆ. ಹಳೇ ಕೇಸ್ ಆರೋಪಿಗಳ ಬಗ್ಗೆ ಸರ್ಚ್ ಮಾಡುವಾಗ ಸುಳಿವು ಪತ್ತೆ‌ಯಾಗಿದ್ದು ಹಳೇ ಇಮೇಜ್ ಇಟ್ಟುಕೊಂಡು ಶೋಧ ನಡೆಸಿದಾಗ ಮಹಿಳೆ ಇಂದೋರ್‌ನಲ್ಲಿ ಪತ್ತೆಯಾಗಿದ್ದಾಳೆ. ಸದ್ಯ ಸಿಬಿಐ ಮಹಿಳೆಯನ್ನ ಬಂಧಿಸಿ ವಿಚಾರಣೆ ನಡೆಸುತ್ತಿದೆ. ವಿಚಾರಣೆ ವೇಳೆ ಗಂಡ ಮುತ್ತು ರಾಮಲಿಂಗಂ ಸಾವಿನ ಕುರಿತು ವಿಚಾರ ತಿಳಿಸಿದ್ದಾಳೆ. ಎಂಟು ಕೋಟಿ ಬ್ಯಾಂಕ್ ಸಾಲ ಪಡೆದು ವಂಚಿಸಿದ್ದ ದಂಪತಿ ಪತ್ತೆಗೆ ಸಿಬಿಐ ತಲಾ 50 ಸಾವಿರ ಬಹುಮಾನ ಕೂಡ ಘೋಷಿಸಿತ್ತು. ಸದ್ಯ ಮಹಿಳೆಯನ್ನ ಬಂಧಿಸಿ ಸಿಬಿಐ ಜೈಲಿಗಟ್ಟಿದೆ. ಇದನ್ನೂ ಓದಿ: Chitradurga | ಮದುವೆಯಾಗಲು ಹೆಣ್ಣು ಸಿಕ್ಕಿಲ್ಲವೆಂದು ಹೋಂ ಗಾರ್ಡ್ ನೇಣಿಗೆ ಶರಣು 

  • ವಾಲ್ಮೀಕಿ ಹಗರಣ| ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ – ಎಸ್‌ಐಟಿ ರದ್ದು, ಸಿಬಿಐ ತನಿಖೆಗೆ ಆದೇಶ

    ವಾಲ್ಮೀಕಿ ಹಗರಣ| ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ – ಎಸ್‌ಐಟಿ ರದ್ದು, ಸಿಬಿಐ ತನಿಖೆಗೆ ಆದೇಶ

    ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki Board) ಬಹುಕೋಟಿ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ (CBI) ತನಿಖೆಗೆ ವಹಿಸಿ ಹೈಕೋರ್ಟ್‌ (High Court) ಮಹತ್ವದ ಆದೇಶ ಪ್ರಕಟಿಸಿದೆ.

    ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್‌ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸಿದೆ. ಅಷ್ಟೇ ಅಲ್ಲದೇ ಎಸ್‌ಐಟಿ ಸಂಗ್ರಹಿಸಿದ ಎಲ್ಲಾ ದಾಖಲೆಗಳನ್ನು ಸಿಬಿಐಗೆ ವರ್ಗಾಯಿಸುವಂತೆ ಆದೇಶಿಸಿದೆ.

    ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (Union Bank Of India) ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ 2024ರ ಸೆಪ್ಟೆಂಬರ್ 30ರಂದು ಮುಕ್ತಾಯಗೊಳಿಸಿ ತೀರ್ಪು ಕಾಯ್ದಿರಿಸಿತ್ತು. ಹೈಕೋರ್ಟ್‌ ಆದೇಶದಿಂದ ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ.

    ಬೆಂಗಳೂರು ಪೂರ್ವ ವಲಯದ ಯೂನಿಯನ್ ಬ್ಯಾಂಕ್‌ ಡಿಜಿಎಂ ಜೆ. ಮಹೇಶ್ ಎಂಬುವವರು ಸರ್ಕಾರಿ ಅಧಿಕಾರಿಗಳು,‌ ಜನಪ್ರತಿನಿಧಿಗಳು, ಖಾಸಗಿ ವ್ಯಕ್ತಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದರು. ಹಿರಿಯ ಅಧಿಕಾರಿಗಳ ಪತ್ರದ ಅನ್ವಯ ಬ್ಯಾಂಕಿನ ಮೂವರು ಸೇರಿ ಐವರ ವಿರುದ್ಧ ಸಿಬಿಐ ಎಫ್ಐಆರ್ ದಾಖಲು ಮಾಡಿ ಈಗಾಗಲೇ ತನಿಖೆ ಆರಂಭಿಸಿದೆ.  ಇದನ್ನೂ ಓದಿ: ಹೆಚ್ಚುತ್ತಿರುವ ಹೃದಯಾಘಾತ ಮೈಸೂರಿನ ಜಯದೇವ ಆಸ್ಪತ್ರೆಗೆ ತಪಾಸಣೆಗೆ ಬರುವವರ ಸಂಖ್ಯೆ ದಿಢೀರ್ ಏರಿಕೆ

    ಏನಿದು ಪ್ರಕರಣ?
    ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ (Chandrashekaran) ಇತ್ತೀಚೆಗೆ ಶಿವಮೊಗ್ಗದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್‌ನೋಟ್‌ನಲ್ಲಿ ಮೂವರು ಹೆಸರು ಹಾಗೂ ಬಹುಕೋಟಿ ಹಗರಣ ನಡೆದಿರುವ ಬಗ್ಗೆ ಉಲ್ಲೇಖಿಸಿದ್ದರು. ಈ ಬೆನ್ನಲ್ಲೇ ಬ್ಯಾಂಕ್‌ನಿಂದ 94 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿದೆ. ಹಣ ವರ್ಗಾವಣೆಯಾದ ಬಗ್ಗೆ ಯಾವುದೇ ಮೇಲ್‌, ಮೆಸೇಜ್‌ ಬಂದಿಲ್ಲ. ಬ್ಯಾಂಕ್‌ ಸಿಬ್ಬಂದಿಯಿಂದಲೇ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬ್ಯಾಕ್‌ನ 6 ಮಂದಿ ಸಿಬ್ಬಂದಿ ವಿರುದ್ಧ ಹೈಗ್ರೌಂಡ್ಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

    ಈ ಪ್ರಕರಣಕ್ಕೆ ಸಂಬಂದಿಸಿದಂತೆ ಜಾರಿ ನಿರ್ದೇಶನಾಲಯ ಸಹ ತನಿಖೆ ನಡೆಸುತ್ತಿದೆ. ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಶಾಸಕ ನಾಗೇಂದ್ರ ನಿಗಮದ ಅಧ್ಯಕ್ಷರಾದ, ಶಾಸಕ ಬಸನಗೌಡ ದದ್ದಲ್‌ ಅವರು ಈ ಹಣವನ್ನು ಲೋಕಸಭಾ ಚುನಾವಣೆಗೆ ಬಳಕೆ ಮಾಡಿರುವ ಬಗ್ಗೆ ಆರೋಪ ಬಂದಿದೆ. ಈ ಹಗರಣದ ಬಗ್ಗೆ ತನಿಖೆ ನಡೆಸಿದ್ದ ಎಸ್‌ಐಟಿ ನಾಗೇಂದ್ರ ಮತ್ತು ದದ್ದಲ್‌ ಅವರಿಗೆ ಕ್ಲಿನ್‌ ಚಿಟ್‌ ನೀಡಿತ್ತು.

  • ನ್ಯಾಯಾಧೀಶರ ಮುಂದೆ ಹಾಜರಾದ ವಿನಯ್ ಕುಲಕರ್ಣಿ – ಶಾಸಕನನ್ನು ವಶಕ್ಕೆ ಪಡೆದ ಸಿಬಿಐ

    ನ್ಯಾಯಾಧೀಶರ ಮುಂದೆ ಹಾಜರಾದ ವಿನಯ್ ಕುಲಕರ್ಣಿ – ಶಾಸಕನನ್ನು ವಶಕ್ಕೆ ಪಡೆದ ಸಿಬಿಐ

    – ಕೋರ್ಟ್ ಕಾರಿಡಾರ್‌ನಲ್ಲೇ ಎ9 ಆರೋಪಿಯಿಂದ ಮಹಿಳಾ ಸಾಕ್ಷಿಗೆ ಬೆದರಿಕೆ

    ಬೆಂಗಳೂರು: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಶುಕ್ರವಾರ ಕೋರ್ಟ್ನಲ್ಲಿ ಶರಣಾಗಿದ್ದಾರೆ. ಅವರನ್ನು ಸಿಬಿಐ (CBI) ವಶಕ್ಕೆ ಪಡೆದಿದೆ.

    ವಿನಯ್ ಕುಲಕರ್ಣಿ ಜಾಮೀನು ರದ್ದು ಮಾಡಿ ಶರಣಾಗತಿಗೆ ಸುಪ್ರೀಂ ಕೋರ್ಟ್ (Supreme Court) ಗಡುವು ನೀಡಿತ್ತು. ಒಂದು ವಾರದ ಗಡುವು ಹಿನ್ನೆಲೆ ಶಾಸಕ ಇಂದು ಜನಪ್ರತಿನಿಧಿ ವಿಶೇಷ ನ್ಯಾಯಾಲದ ಮುಂದೆ ಹಾಜರಾದರು. ಇದನ್ನೂ ಓದಿ: ಧಾರವಾಡ ಜಿಪಂ ಸದಸ್ಯನ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಜಾಮೀನು ರದ್ದು

    ವಿಚಾರಣೆ ಬಳಿಕ ಅವರನ್ನು ಸಿಬಿಐ ವಶಕ್ಕೆ ಪಡೆದಿದೆ. ಕೋರ್ಟ್ ಸೂಚನೆಯ ಮೇರೆಗೆ ಸಿಬಿಐ ವಶಕ್ಕೆ ತೆಗೆದುಕೊಂಡಿದೆ. ಪರಪ್ಪನ ಅಗ್ರಹಾರಕ್ಕೆ ಶಾಸಕರನ್ನು ಶಿಫ್ಟ್ ಮಾಡಲಾಗುವುದು.

    ವಿನಯ್ ಕುಲಕರ್ಣಿ ಪರ ವಕೀಲರು ಶರಣಾಗಲು ಸಮಯ ವಿಸ್ತರಿಸುವಂತೆ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾ. ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ನ್ಯಾ. ಮನಮೋಹನ್ ಅವರಿದ್ದ ಪೀಠವು ಶರಣಾಗತಿಗೆ ಸಮಯ ನೀಡಲು ಕೋರ್ಟ್ ನಿರಾಕರಿಸಿದೆ. ಇದನ್ನೂ ಓದಿ: ಇಡೀ ವಿಮಾನ ಸುಟ್ಟು ಭಸ್ಮವಾದರೂ ಒಂದಿಷ್ಟೂ ಹಾನಿಯಾಗದ ಸ್ಥಿತಿಯಲ್ಲಿ ಸಿಕ್ತು ಭಗವದ್ಗೀತೆ ಪುಸ್ತಕ

    ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಹಿಳಾ ಸಾಕ್ಷಿಯೊಬ್ಬರಿಗೆ ಕೋರ್ಟ್ ಕಾರಿಡಾರ್‌ನಲ್ಲೇ ಬೆದರಿಕೆ ಹಾಕಿರುವ ಪ್ರಸಂಗ ನಡೆದಿದೆ. ಎ9 ಆರೋಪಿ ಅಶ್ವಥ್ ಗೌಡನಿಂದ ಬೆದರಿಕೆ ಹಾಕಲಾಗಿದೆ. ಆರೋಪಿ ಬೆದರಿಕೆ ಹಾಕಿರುವುದಾಗಿ ಕೋರ್ಟ್‌ಗೆ ಮಹಿಳೆ ಇ-ಮೇಲ್ ಮಾಡಿದ್ದಾರೆ. ಸಿಬಿಐ ಅಧಿಕಾರಿಗಳಿಗೂ ಇ-ಮೇಲ್ ಮಾಡಿ ಮಾಹಿತಿ ನೀಡಿದ್ದಾರೆ.

    ಮಹಿಳೆ ನೀಡಿದ್ದ ಮಾಹಿತಿ ಆಧರಿಸಿ ಎಸ್ಪಿಪಿ ಗಂಗಾಧರ್ ಶೆಟ್ಟಿ ಅವರಿಂದ ಮೆಮೋ ಸಲ್ಲಿಕೆಯಾಗಿದೆ. ವಿಚಾರಣೆ ನಡೆಸಿದ ಕೋರ್ಟ್ ತನಿಖೆಗೆ ಆದೇಶ ನೀಡಿದೆ. ಸಿಐಎಸ್‌ಎಫ್‌ನಿಂದ ತನಿಖೆಗೆ ಕೋರ್ಟ್ ಆದೇಶಿಸಿದೆ.

  • 2,200 ಕೋಟಿ ರೂ. ಭ್ರಷ್ಟಾಚಾರ ಕೇಸ್‌ – ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ವಿರುದ್ಧ ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಕೆ

    2,200 ಕೋಟಿ ರೂ. ಭ್ರಷ್ಟಾಚಾರ ಕೇಸ್‌ – ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ವಿರುದ್ಧ ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಕೆ

    ನವದೆಹಲಿ: ಬರೋಬ್ಬರಿ 2,200 ಕೋಟಿ ರೂ. ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ (Satyapal Malik) ವಿರುದ್ಧ ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಸಿದೆ.

    ಕಿರು ಜಲವಿದ್ಯುತ್ ಯೋಜನೆಗೆ 2,200 ಕೋಟಿ ರೂ.ಗಳ ನಾಗರಿಕ ಕಾಮಗಾರಿಗಳ ಮಂಜೂರಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಪ್ರಕರಣದಲ್ಲಿ ಸತ್ಯಪಾಲ್ ಮಲಿಕ್ ಮತ್ತು ಇತರ ಏಳು ಜನರ ವಿರುದ್ಧ ಸಿಬಿಐ (CBI) ಆರೋಪಪಟ್ಟಿ ಸಲ್ಲಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಇದನ್ನೂ ಓದಿ: ಸೂಕ್ಷ್ಮ ಮಾಹಿತಿ ಸೋರಿಕೆ – 600 ಪಾಕಿಸ್ತಾನಿಯರ ಸಂಪರ್ಕದಲ್ಲಿದ್ದ ಬೇಹುಗಾರ ವಾರಣಾಸಿಯಲ್ಲಿ ಅರೆಸ್ಟ್‌

    ಮೂರು ವರ್ಷಗಳ ತನಿಖೆಯ ನಂತರ ವಿಶೇಷ ನ್ಯಾಯಾಲಯದ ಮುಂದೆ ಸಿಬಿಐ ತನ್ನ ಆರೋಪಪಟ್ಟಿಯನ್ನು ಸಲ್ಲಿಸಿದ್ದು, ಮಲಿಕ್ ಮತ್ತು ಅವರ ಇಬ್ಬರು ಸಹಾಯಕರಾದ ವೀರೇಂದ್ರ ರಾಣಾ ಮತ್ತು ಕನ್ವರ್ ಸಿಂಗ್ ರಾಣಾ ಅವರನ್ನು ಹೆಸರಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಆರೋಪಪಟ್ಟಿಯಲ್ಲಿ ಹೆಸರಿಸಲಾದ ಇತರ ವ್ಯಕ್ತಿಗಳಲ್ಲಿ ಆಗಿನ ಚೆನಾಬ್ ವ್ಯಾಲಿ ಪವರ್ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ (ಸಿವಿಪಿಪಿಪಿಎಲ್) ವ್ಯವಸ್ಥಾಪಕ ನಿರ್ದೇಶಕ ಎಂ.ಎಸ್. ಬಾಬು, ಅದರ ನಿರ್ದೇಶಕರಾದ ಅರುಣ್ ಕುಮಾರ್ ಮಿಶ್ರಾ ಮತ್ತು ಎಂ.ಕೆ.ಮಿತ್ತಲ್, ನಿರ್ಮಾಣ ಸಂಸ್ಥೆ ಪಟೇಲ್ ಎಂಜಿನಿಯರಿಂಗ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ರೂಪೇನ್ ಪಟೇಲ್ ಮತ್ತು ಖಾಸಗಿ ವ್ಯಕ್ತಿ ಕನ್ವಲ್ಜೀತ್ ಸಿಂಗ್ ದುಗ್ಗಲ್ ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕಳೆದ ವರ್ಷ ಫೆಬ್ರವರಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಿಕ್ ಮತ್ತು ಇತರರ ನಿವಾಸಗಳಲ್ಲಿ ಸಿಬಿಐ ಶೋಧ ನಡೆಸಿತ್ತು. 2019 ರಲ್ಲಿ ಕಿರು ಹೈಡ್ರೊ ಎಲೆಕ್ಟ್ರಿಕ್ ಪವರ್ (ಎಚ್‌ಇಪಿ) ಯೋಜನೆಯ ಸುಮಾರು 2,200 ಕೋಟಿ ರೂ. ಮೌಲ್ಯದ ಸಿವಿಲ್ ಕಾಮಗಾರಿಗಳ ಒಪ್ಪಂದವನ್ನು ಖಾಸಗಿ ಕಂಪನಿಗೆ ನೀಡುವಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳಿಗೆ ಈ ಪ್ರಕರಣ ಸಂಬಂಧಿಸಿದೆ ಎಂದು 2022 ರಲ್ಲಿ ಎಫ್‌ಐಆರ್ ದಾಖಲಾದ ನಂತರ ಸಿಬಿಐ ಹೇಳಿತ್ತು.

    ಈ ಹಿಂದೆ ಪ್ರಧಾನಿ ಮೋದಿ ಅವರ ವಿರುದ್ಧ ಸತ್ಯಪಾಲ್‌ ಮಲಿಕ್‌ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದರು. ಆದರೆ, ಈಗ ಸ್ವತಃ ಮಲಿಕ್‌ ಅವರೇ ಬಹುಕೋಟಿ ಹಗರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾರೆ. ಇದನ್ನೂ ಓದಿ: ನಾನು ಶಾಂತವಾಗಿದ್ದರೂ ನನ್ನ ರಕ್ತ ನಾಳಗಳಲ್ಲಿ ʻಸಿಂಧೂರʼ ಕುದಿಯುತ್ತಲೇ ಇರುತ್ತೆ – ಪಾಕ್‌ಗೆ ಮೋದಿ ಖಡಕ್‌ ಸಂದೇಶ

    ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಕೆ ಬೆನ್ನಲ್ಲೇ ಮಲಿಕ್‌ ಅವರ ಎಕ್ಸ್‌ ಖಾತೆಯಿಂದ ಪೋಸ್ಟ್‌ವೊಂದು ಬಂದಿದೆ. ‘ನನ್ನ ಅನೇಕ ಹಿತೈಷಿಗಳಿಂದ ನನಗೆ ಕರೆಗಳು ಬರುತ್ತಿವೆ. ಆದರೆ ನಾನು ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ನನ್ನ ಸ್ಥಿತಿ ಈಗ ತುಂಬಾ ಕೆಟ್ಟದಾಗಿದೆ. ನಾನು ಯಾರೊಂದಿಗೂ ಮಾತನಾಡುವ ಸ್ಥಿತಿಯಲ್ಲಿಲ್ಲ. ನಾನು ಮೇ 11 ರಿಂದ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಾಗಿದ್ದೇನೆ. ಸೋಂಕಿನ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಈಗ ಸ್ಥಿತಿ ತುಂಬಾ ಗಂಭೀರವಾಗಿದ್ದು, ಕಳೆದ ಮೂರು ದಿನಗಳಿಂದ ಮೂತ್ರಪಿಂಡದ ಡಯಾಲಿಸಿಸ್‌ಗೆ ಒಳಗಾಗುತ್ತಿದ್ದೇನೆಂದು’ ಮಾಡಲಾಗಿದೆ.

    ಸತ್ಯಪಾಲ್‌ ಮಲಿಕ್‌ ಅವರ ಎಕ್ಸ್‌ ಖಾತೆ ಪೋಸ್ಟ್‌ಗೆ ನೆಟ್ಟಿಗರು ಕಾಮೆಂಟ್‌ ಮಾಡುತ್ತಿದ್ದಾರೆ. ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಕೆ ಬೆನ್ನಲ್ಲೇ ನಿಮಗೆ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆಯೇ ಎಂದು ಪ್ರಶ್ನಿಸುತ್ತಿದ್ದಾರೆ. ಇದನ್ನೂ ಓದಿ: ಜ್ಯೋತಿ ಮಲ್ಹೊತ್ರಾಗೆ ನಾಲ್ಕು ದಿನ ಪೊಲೀಸ್ ಕಸ್ಟಡಿ ವಿಸ್ತರಣೆ

  • ಎಡಿಜಿಪಿ ಅಲೋಕ್‌ ಕುಮಾರ್‌ಗೆ ಮುಂಬಡ್ತಿ ನೀಡದೇ 6 ವರ್ಷದ ಹಳೆ ಕೇಸ್‌ ಕೆದಕಿದ ಸರ್ಕಾರ

    ಎಡಿಜಿಪಿ ಅಲೋಕ್‌ ಕುಮಾರ್‌ಗೆ ಮುಂಬಡ್ತಿ ನೀಡದೇ 6 ವರ್ಷದ ಹಳೆ ಕೇಸ್‌ ಕೆದಕಿದ ಸರ್ಕಾರ

    ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯ ತರಬೇತಿ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಕುಮಾರ್‌ (Alok Kumar) ಅವರಿಗೆ ಮುಂಬಡ್ತಿ ನೀಡದ ಸರ್ಕಾರ 6 ವರ್ಷದ ಹಿಂದಿನ ಪ್ರಕರಣವನ್ನು ಕೆದಕಿರುವ ವಿಚಾರ ಈಗ ಬೆಳಕಿಗೆ ಬಂದಿದೆ.

    ಹೌದು.ಈ ಹಿಂದೆ ಕೇಳಿ ಬಂದಿದ್ದ ಫೋನ್‌ ಟ್ಯಾಪಿಂಗ್‌ (Phone Tapping) ಹಾಗೂ ಅಕ್ರಮವಾಗಿ ಮೊಬೈಲ್‌ ಕರೆ ವಿವರ(ಸಿಡಿಆರ್‌) ಪಡೆದ ಪ್ರಕರಣದಲ್ಲಿ ಅಲೋಕ್‌ ಕುಮಾರ್‌ ವಿರುದ್ಧ ಸರ್ಕಾರ ಇಲಾಖಾ ವಿಚಾರಣೆಗೆ ಆದೇಶ ನೀಡಿದೆ ಎನ್ನಲಾಗುತ್ತಿದೆ.

    ಇಲಾಖಾ ವಿಚಾರಣೆಗೆ ಆದೇಶ ನೀಡುವುದಾದರೆ ಈ ಹಿಂದೆಯೇ ನೀಡಬಹುದಿತ್ತು. ಆದರೆ ಡಿಜಿಪಿ ಸ್ಥಾನಕ್ಕೆ ಪದೋನ್ನತಿ ಸಿಗುವ ಸಮಯದಲ್ಲೇ  ಹಳೆಯ ಪ್ರಕರಣವನ್ನು ಕೆದಕ್ಕಿದ್ದು ಎಷ್ಟು ಸರಿ ಎಂಬ ಪ್ರಶ್ನೆ ಎದ್ದಿದೆ. ಸರ್ಕಾರದ ಈ ನಡೆಗೆ ಹಿರಿಯ ಐಪಿಎಸ್ ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ಒಂದು ಡಿಜಿಪಿ ಸ್ಥಾನ ತೆರವಾದ ಹಿನ್ನೆಲೆ 1994ನೇ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿರುವ ಅಲೋಕ್‌ ಕುಮಾರ್‌ ಅವರಿಗೆ ಈ ತಿಂಗಳಲ್ಲಿ ಡಿಜಿಪಿ ಆಗಿ ಮುಂಬಡ್ತಿ ಸಿಗಬೇಕಿತ್ತು. ಆದರೆ ಈಗ ಇಲಾಖಾ ವಿಚಾರಣೆಗೆ ಆದೇಶ ನೀಡಿರುವುದರಿಂದ ಮುಂಬಡ್ತಿ ನೀಡಲು ಸಾಧ್ಯವಿಲ್ಲ. ಇದರಿಂದಾಗಿ ಅದೇ ಬ್ಯಾಚ್‌ನ ಹಿರಿಯ ಅಧಿಕಾರಿಯಾದ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಅವರಿಗೆ ಡಿಜಿಪಿಯಾಗಿ ಮುಂಬಡ್ತಿ ಸಿಗುವ ಸಾಧ್ಯತೆಯಿದೆ. ಇದನ್ನೂ ಓದಿ: ಜೈಶಂಕರ್‌ ಕರೆ ಬೆನ್ನಲ್ಲೇ ತಾಲಿಬಾನ್‌ ವಿದೇಶಾಂಗ ಸಚಿವರನ್ನೇ ಬೀಜಿಂಗ್‌ಗೆ ಕರೆಸಿ ಪಾಕ್‌ ಜೊತೆ ಕೈ ಕುಲುಕಿಸಿದ ಚೀನಾ!

    ಫೋನ್‌ಟ್ಯಾಪಿಂಗ್‌, 50ಕ್ಕೂ ಹೆಚ್ಚು ಮಂದಿಯ ಸಿಡಿಆರ್‌ ಪಡೆದ ಆರೋಪದಡಿ ಸರ್ಕಾರ ಇಲಾಖಾ ವಿಚಾರಣೆಗೆ ಆದೇಶ ನೀಡಲಾಗಿದ್ದು, ಈ ಕುರಿತು ಅಲೋಕ್‌ ಕುಮಾರ್‌ ಅವರಿಗೂ ಮಾಹಿತಿ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಏನಿದು ಪ್ರಕರಣ?
    ಕಾಂಗ್ರೆಸ್‌- ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಅಧಿಕಾರದ ಅವಧಿಯಲ್ಲಿ ಅಲೋಕ್‌ ಕುಮಾರ್‌ ಸಿಸಿಬಿ ಮುಖ್ಯಸ್ಥರಾಗಿದ್ದರು. 2019 ರಲ್ಲಿ ಬಿಜೆಪಿ ಆಪರೇಷನ್ ಕಮಲ ನಡೆಸಲು ಕಾಂಗ್ರೆಸ್​-ಜೆಡಿಎಸ್​ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿದೆ ಎಂಬ ಸುದ್ದಿಗಳು ಹರಿದಾಡಲು ಆರಂಭವಾಗಿತ್ತು. ಈ ವೇಳೆ ಕುಮಾರಸ್ವಾಮಿ ಸರ್ಕಾರ ಕೆಲ ಅಧಿಕಾರಿಗಳು, ಸ್ವಾಮೀಜಿಗಳು ಮತ್ತು ರಾಜಕೀಯ ಮುಖಂಡರ ಫೋನ್‌ ಟ್ಯಾಪಿಂಗ್‌ ಮತ್ತು ಸಿಡಿಆರ್‌ ಸಂಗ್ರಹಿಸಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿತ್ತು. ಇದು ಭಾರೀ ಚರ್ಚೆಗೆ ಗ್ರಾಸವಾಗಿತ್ತು.

    ಚರ್ಚೆ ಜೋರಾಗುತ್ತಿದ್ದ ಸಮಯದಲ್ಲೇ ಕುಮಾರಸ್ವಾಮಿ ಅವರು ಅಲೋಕ್‌ ಕುಮಾರ್‌ ಅವರನ್ನು ಎಡಿಜಿಪಿಯಾಗಿ ಮುಂಬಡ್ತಿ ನೀಡಿ, ನಗರ ಪೊಲೀಸ್‌ ಆಯುಕ್ತರನ್ನಾಗಿ ನೇಮಕ ಮಾಡಿದ್ದರು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಫೋನ್‌ ಟ್ಯಾಪಿಂಗ್‌ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಸಿಬಿಐ ಅಲೋಕ್‌ ಕುಮಾರ್‌ ಮನೆ ಮೇಲೆ ದಾಳಿ ಸಹ ನಡೆಸಿತ್ತು. ಈ ವೇಳೆ ಭಾಸ್ಕರ್‌ರಾವ್‌ ಯಾರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಫೋನ್‌ ಟ್ಯಾಪಿಂಗ್‌ ಮಾಡಿದ್ದ ಆಡಿಯೋ ಒಂದು ವೈರಲ್‌ ಮಾಡಲಾಗಿತ್ತು. ಇದನ್ನೂ ಓದಿ:  ಪರಂಗೆ ಇಡಿ ಈಟಿ – 140 ಕೋಟಿ ವ್ಯವಹಾರ ನಡೆದ್ರೂ 95 ಕೋಟಿಗೆ ಖರೀದಿ?

    ಅಲೋಕ್‌ ಕುಮಾರ್‌ ಸಿಎಟಿ ಮೂಲಕ ತಡೆಯಾಜ್ಞೆ ತಂದಿದ್ದರೆ ಸಿಬಿಐ ಅಧಿಕಾರಿಗಳು ಸಲ್ಲಿಸಿದ್ದ ಬಿ-ರಿಪೋರ್ಟ್‌ ಅನ್ನು ಭಾಸ್ಕರ್‌ರಾವ್‌ ಪ್ರಶ್ನಿಸಿದ್ದರು.

  • ಸುಶಾಂತ್‌ ಸಿಂಗ್‌ ರಜಪೂತ್‌ ಆತ್ಮಹತ್ಯೆಗೆ ಯಾರೂ ಪ್ರಚೋದನೆ ಮಾಡಿಲ್ಲ: ಅಂತಿಮ ವರದಿ ಸಲ್ಲಿಸಿದ ಸಿಬಿಐ

    ಸುಶಾಂತ್‌ ಸಿಂಗ್‌ ರಜಪೂತ್‌ ಆತ್ಮಹತ್ಯೆಗೆ ಯಾರೂ ಪ್ರಚೋದನೆ ಮಾಡಿಲ್ಲ: ಅಂತಿಮ ವರದಿ ಸಲ್ಲಿಸಿದ ಸಿಬಿಐ

    ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಂತಿಮ ವರದಿ ಸಲ್ಲಿಕೆ ಮಾಡಿದೆ.

    34 ವರ್ಷದ ಸುಶಾಂತ್ ಸಿಂಗ್ ರಜಪೂತ್, 2020ರ ಜೂನ್ 14ರಂದು ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಫ್ಲಾಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅವರ ಸಾವು ಅಭಿಮಾನಿಗಳನ್ನು ಆಘಾತಗೊಳಿಸಿತ್ತು. ಸಾವಿನ ಬಗ್ಗೆ ನಾನಾ ರೀತಿಯಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿದ್ದವು.

    ಸುಶಾಂತ್ ರಜಪೂತ್ ಅವರ ತಂದೆ, ತಮ್ಮ ಪುತ್ರನ ಗೆಳತಿ ಮತ್ತು ನಟಿ ರಿಯಾ ಚಕ್ರವರ್ತಿ ವಿರುದ್ಧ ಮಾಡಿದ ಆರೋಪಗಳು, ಸುಶಾಂತ್ ಕುಟುಂಬದ ವಿರುದ್ಧ ಚಕ್ರವರ್ತಿ ಅವರ ಆರೋಪಗಳು, ಎರಡು ಪ್ರಕರಣಗಳಲ್ಲಿ ಅಂತಿಮ ವರದಿಯನ್ನು ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸಿಬಿಐ ಈ ಪ್ರಕರಣವನ್ನು 2020ರ ಆಗಸ್ಟ್‌ನಲ್ಲಿ ಬಿಹಾರ ಪೊಲೀಸರಿಂದ ವಹಿಸಿಕೊಂಡಿತ್ತು. ನಾಲ್ಕು ವರ್ಷಗಳಿಗೂ ಹೆಚ್ಚು ಕಾಲ ತನಿಖೆ ನಡೆಸಿದ ನಂತರ, ಸುಶಾಂತ್ ರಜಪೂತ್ ಆತ್ಮಹತ್ಯೆಗೆ ಯಾರೂ ಪ್ರಚೋದನೆ ನೀಡಿಲ್ಲ. ಪ್ರಚೋದಿಸಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳು ಸಂಸ್ಥೆಗೆ ಸಿಗಲಿಲ್ಲ ಎಂದು ವರದಿಯಲ್ಲಿ ತಿಳಿಸಿದೆ. ರಿಯಾ ಚಕ್ರವರ್ತಿ ಮತ್ತು ಅವರ ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಏಮ್ಸ್) ವಿಧಿವಿಜ್ಞಾನ ತಂಡವು ಸುಶಾಂತ್ ರಜಪೂತ್ ಅವರನ್ನು ಕೊಲೆ ಮಾಡಿಲ್ಲ. ಇದು ಆತ್ಮಹತ್ಯೆ ಎಂದು ಹೇಳಿತ್ತು.

  • ಕಂತೆ ಕಂತೆ ನೋಟು ಪತ್ತೆಯಾದ ಜಡ್ಜ್‌ ಮೇಲೆ ದಾಖಲಾಗಿತ್ತು ಸಿಬಿಐ ಎಫ್‌ಐಆರ್‌

    ಕಂತೆ ಕಂತೆ ನೋಟು ಪತ್ತೆಯಾದ ಜಡ್ಜ್‌ ಮೇಲೆ ದಾಖಲಾಗಿತ್ತು ಸಿಬಿಐ ಎಫ್‌ಐಆರ್‌

    ನವದೆಹಲಿ: ನಿವಾಸದಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿ ಸುದ್ದಿಯಲ್ಲಿರುವ ದೆಹಲಿ ಹೈಕೋರ್ಟ್‌ (Delhi High Court) ನ್ಯಾ. ಯಶವಂತ ವರ್ಮಾ (Justice Yaswant Varma) ಅವರ ಹೆಸರನ್ನು ಪ್ರಕರಣ ಒಂದರಲ್ಲಿ ಸಿಬಿಐ (CBI) ಆರೋಪಿಯನ್ನಾಗಿಸಿ ಎಫ್‌ಐಆರ್‌ ದಾಖಲು ಮಾಡಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ.

    ಬ್ಯಾಂಕ್‌ನಿಂದ ಪಡೆದ ಸಾಲವನ್ನು ದುರುಪಯೋಗ ಮಾಡಿಕೊಂಡ ಆರೋಪದ ಅಡಿ ಸಿಂಭಾವೋಲಿ ಶುಗರ್ಸ್ ಕಂಪನಿ ವಿರುದ್ಧ 2018 ರಲ್ಲಿ ಸಿಬಿಐ ಮತ್ತು ಇಡಿ ಎಫ್‌ಐಆರ್‌ ದಾಖಲಿಸಿತ್ತು. ಅಲಹಾಬಾದ್‌ ಹೈಕೋರ್ಟ್‌ ಆದೇಶದ ಮೇರೆಗೆ ಸಿಬಿಐ ಎಫ್‌ಐಆರ್‌ ದಾಖಲಿಸಿಕೊಂಡಿತ್ತು. ಈ ಕಂಪನಿಯಲ್ಲಿ ಯಶವಂತ ವರ್ಮಾ ಕಾರ್ಯನಿರ್ವಾಹಕೇತರ ನಿರ್ದೇಶಕರಾಗಿದ್ದರು. ಸಿಬಿಐ ವರ್ಮಾ ಅವರನ್ನು 10ನೇ ಆರೋಪಿಯನ್ನಾಗಿ ಉಲ್ಲೇಖಿಸಿತ್ತು. ಕ್ರಿಮಿನಲ್ ದುರ್ನಡತೆ, ವಂಚನೆ ಮತ್ತು ಕ್ರಿಮಿನಲ್ ಪಿತೂರಿ ಅಡಿ ಎಫ್‌ಐಆರ್‌ ದಾಖಲಾಗಿತ್ತು.

    ಯಶವಂತ ವರ್ಮಾ ಅವರು 2014 ರಲ್ಲಿ ಅಲಹಾಬಾದ್ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಬಡ್ತಿ ಪಡೆಯುವ ಮೊದಲು ಕಂಪನಿಯ ಕಾರ್ಯನಿರ್ವಾಹಕೇತರ ನಿರ್ದೇಶಕರಾಗಿದ್ದರು. ಸಿಬಿಐ ತನಿಖೆಗೆ ಆದೇಶಿಸಿದ್ದ ಅಲಹಾಬಾದ್‌ ಹೈಕೋರ್ಟ್‌ ಆದೇಶವನ್ನು ಸುಪ್ರೀಂ ಕೋರ್ಟ್‌ ಕಳೆದ ವರ್ಷ ರದ್ದುಗೊಳಿಸಿತ್ತು.  ಇದನ್ನೂ ಓದಿ: ದೆಹಲಿ ಹೈಕೋರ್ಟ್ ಜಡ್ಜ್‌ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ – ವರ್ಗಾವಣೆ ಕ್ರಮದ ಭಾಗವಲ್ಲ ಎಂದ ಸುಪ್ರೀಂ

    ಎಫ್‌ಐಆರ್ ದಾಖಲಾದ ಸ್ವಲ್ಪ ಸಮಯದ ನಂತರ ಸಿಬಿಐ ವರ್ಮಾ ಅವರ ಹೆಸರನ್ನು ಎಫ್‌ಐಆರ್‌ನಿಂದ ತೆಗೆದುಹಾಕಿತ್ತು. ಈ ವಿಚಾರವನ್ನು ಕೋರ್ಟ್‌ ಗಮನಕ್ಕೆ ತಂದಿತ್ತು. ಇದನ್ನೂ ಓದಿ: ದೆಹಲಿ ಹೈಕೋರ್ಟ್ ಜಡ್ಜ್ ಮನೆಗೆ ಬೆಂಕಿ – ನಂದಿಸಲು ಹೋದಾಗ ಸಿಕ್ಕಿದ್ದು ಕಂತೆ ಕಂತೆ ನೋಟು

    ಎಫ್‌ಐಆರ್‌ ದಾಖಲಾಗಿದ್ದು ಯಾಕೆ?
    ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್‌ನಿಂದ ಸಿಂಭಾವೋಲಿ ಶುಗರ್ಸ್ ರೈತರ ಕೃಷಿ ಉಪಕರಣಗಳು ಮತ್ತು ಇತರ ಅಗತ್ಯಗಳಿಗಾಗಿ ಸಾಲವನ್ನು ಪಡೆದುಕೊಂಡಿತ್ತು. ಈ ಸಾಲವನ್ನು ಕಂಪನಿ ಬೇರೆ ಉದ್ದೇಶಗಳಿಗೆ ಬಳಕೆ ಮಾಡಿದ ಆರೋಪ ಕೇಳಿ ಬಂದಿತ್ತು. ಕ್ರಿಮಿನಲ್ ನಂಬಿಕೆ ಉಲ್ಲಂಘನೆಯ ಕಾರಣಕ್ಕಾಗಿ 97.85 ಕೋಟಿ ರೂ.ಹಣವನ್ನು ವಂಚನೆ ಮಾಡಲಾಗಿದೆ ಎಂದು ಬ್ಯಾಂಕ್‌ ಘೋಷಿಸಿ 2015 ರಲ್ಲಿ ಆರ್‌ಬಿಐಗೆ ವರದಿ ನೀಡಿತ್ತು.

    ಯಾವುದೇ ತನಿಖೆ ಅಗತ್ಯವಿಲ್ಲದ ಕಾರಣ ಈ ವಿಷಯದಲ್ಲಿ ಸಿಬಿಐ ತನಿಖೆಗೆ ಆದೇಶಿಸುವಲ್ಲಿ ಹೈಕೋರ್ಟ್ ತಪ್ಪು ಮಾಡಿದೆ ಎಂದು ಸುಪ್ರೀಂ ಕೋರ್ಟ್ ಕಳೆದ ವರ್ಷ ಹೇಳಿತ್ತು.