ನವದೆಹಲಿ: ಜಾತಿ ಜನಗಣತಿ ವರದಿ (Caste Census Report) 9 ವರ್ಷಗಳ ಹಿಂದೆಯೇ ತಯಾರಿಸಲಾಗಿದೆ. ಮಂಡನೆಯಾದ ಬಳಿಕ ಏನಿದೆ ಅಂತ ಗೊತ್ತಾಗಲಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Wadiyar) ಹೇಳಿದ್ದಾರೆ.
ಇನ್ನೂ ಮುಡಾ ಕೇಸ್ ಸಿಬಿಐಗೆ ವಹಿಸಬೇಕು ಅನ್ನೋ ನಮ್ಮ ಒತ್ತಾಯ ಮೊದಲಿನಿಂದಲೂ ಇದೆ. ಇಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ ಮಾಡಿದ್ದೇನೆ. ಮೈಸೂರಿನ ಪ್ರವಾಸೋಧ್ಯಮ ಅಭಿವೃದ್ಧಿ ಕುರಿತಂತೆ ಚರ್ಚೆ ಮಾಡಿದ್ದೇನೆ. ಮೈಸೂರಿನ ಹಳೆ ಡಿಸಿ ಕಚೇರಿಯನ್ನು ಮ್ಯೂಸಿಯಂ ಮಾಡಬೇಕು ಎಂಬ ಒತ್ತಾಯವಿದೆ. ಯೋಗ ಪರಂಪರೆಯನ್ನು ಸಾರಲು, ಸಂರಕ್ಷಣೆ ಮಾಡಲು ಮ್ಯೂಸಿಯಂ ಮಾಡಬೇಕು. ಈ ಬಗ್ಗೆ ಕೇಂದ್ರ ಸಚಿವರೊಂದಿಗೆ ಪ್ರಸ್ತಾಪ ಮಾಡಿದ್ದೇನೆ ಎಂದರು. ಇದನ್ನೂ ಓದಿ: ಹೆಚ್‌ಎಂಟಿ ಅಧೀನದಲ್ಲಿರುವ ಅರಣ್ಯ ಭೂಮಿ ಹಿಂಪಡೆಯುವ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚೆ – ಹೆಚ್.ಕೆ ಪಾಟೀಲ್
ಅಂಬಾರಿ ಹೊತ್ತಿದ್ದ ಆನೆ ಅರ್ಜುನ ಕಾರ್ಯಾಚರಣೆಯಲ್ಲಿ ತೀರಿಹೋಗಿತ್ತು. ಅರ್ಜುನ ಆನೆಯ ಸ್ಮಾರಕ ನಿರ್ಮಾಣ ಮಾಡಬೇಕು ಎಂದು ಒತ್ತಾಯ ಕೇಳಿಬರುತ್ತಿದೆ. ಅರ್ಜುನನ ಪುತ್ಥಳಿ ಸ್ಥಾಪನೆ ಮಾಡಬೇಕು ಎಂಬ ಪ್ರಸ್ತಾಪ ಕೊಟ್ಟಿದ್ದೇವೆ. ಅಂಬಾರಿ ಸಾಗುವ ಮೈಸೂರಿನ ಸರ್ಕಲ್‌ನಲ್ಲಿ ಪುತ್ಥಳಿ ಮಾಡಬೇಕಿದೆ ಎಂದು ತಿಳಿಸಿದರು. ಇದನ್ನೂ ಓದಿ: 2ಕ್ಕಿಂತ ಹೆಚ್ಚು ಮಕ್ಕಳಿದ್ರೆ ಮಾತ್ರ ಸ್ಥಳೀಯ ಚುನಾವಣೆಯಲ್ಲಿ ಸ್ಫರ್ಧಿಸಲು ಅವಕಾಶ: ಚಂದ್ರಬಾಬು ನಾಯ್ಡು
ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ್ (Sachin Panchal) ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ (CBI) ನೀಡದೇ ಇದ್ದರೆ ಜನವರಿ 4 ರಂದು ಕಲಬುರಗಿಯಲ್ಲಿ (Kalaburagi) ಬೃಹತ್ ಪ್ರತಿಭಟನೆ (Protest) ನಡೆಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರು (CM Siddaramaiah) ಸಿಬಿಐ ತನಿಖೆಗೆ ಆದೇಶಿಸಿದರೆ ಒಳ್ಳೆಯದು. ಜನವರಿ 3 ರವರೆಗೂ ಕಾಯುತ್ತೇವೆ. ಸಿಬಿಐಗೆ ನೀಡದೇ ಇದ್ದರೆ ಜ.4 ರಂದು ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಆರೋಪಿ ರಾಜು ಕಪನೂರು ಪ್ರಿಯಾಂಕ್ ಖರ್ಗೆ (Priyank Kharge), ಸಿದ್ದರಾಮಯ್ಯ, ಡಿಕೆಶಿ ಜತೆಗೂ ಇರುವ ಫೋಟೋ ರಿಲೀಸ್ ಮಾಡಿ, ಈತ ಖರ್ಗೆ ಕುಟುಂಬಕ್ಕೆ ಪರಮಾತ್ರ. ರಾಜೂನ ಸಿಎಂ, ಡಿಸಿಎಂ ತೊಡೆ ಮೇಲೆ ಕೂರಿಸಿಕೊಳ್ಳುವುದು ಬಾಕಿ. ಬಿಟ್ಟರೆ ತಲೆ ಮೇಲೂ ಕೂರಿಸಿಕೊಳ್ತಾರೆ. ಪ್ರಿಯಾಂಕ್ ಖರ್ಗೆ ತಮಗೆ ರಾಜು ಕಪನೂರು ಪರಿಚಯ ಇಲ್ಲ ಅಂತ ಹೇಳಲು ಸಾಧ್ಯವಿಲ್ಲ ಎಂದರು.
ನಮ್ಮ ಕಲಬುರಗಿ ನಾಯಕರ ಕೊಲೆ ಬಗ್ಗೆ ಸಚಿನ್ ಡೆತ್‌ನೋಟ್‌ನಲ್ಲಿ ಉಲ್ಲೇಖವಾಗಿದೆ. ಆಂದೋಲನ ಸ್ವಾಮೀಜಿ ಕೊಲೆ ಬಗ್ಗೆಯೂ ಪ್ರಸ್ತಾಪವಾಗಿದೆ. ಕೊಲ್ಹಾಪುರದ ಸುಪಾರಿ ಕಿಲ್ಲರ್‌ಗಳಿಗೆ ಸುಪಾರಿ ಕೊಡಲಾಗಿದೆ ಅಂತ ಇದೆ. ಹೀಗಾಗಿ ಎಲ್ಲ ಅಂಶಗಳ ಬಗ್ಗೆಯೂ ಪಾರದರ್ಶಕ ತನಿಖೆಗೆ ಸಿಬಿಐ ತನಿಖೆ ನಡೆಯಬೇಕು. ನಮ್ಮ ಪೊಲೀಸರಿಂದ ನಿಷ್ಪಕ್ಷಪಾತ ತನಿಖೆ ಅಸಾಧ್ಯ ಎಂದರು.
ಪ್ರಿಯಾಂಕ್ ಖರ್ಗೆ ಇಲಾಖೆ ಕೇವಲ ಗ್ರಾಮೀಣಾಭಿವೃದ್ಧಿ, ಐಟಿಬಿಟಿ ಅಷ್ಟೇ ಅಲ್ಲ ಪ್ರಿಯಾಂಕ್ ಖರ್ಗೆ ಸರ್ವ ಇಲಾಖೆಗೂ ಮಂತ್ರಿ. ಸದನದಲ್ಲಿ ಎಲ್ಲಾ ಇಲಾಖೆಗಳ ಪ್ರಶ್ನೆಗೂ ಎದ್ದು ಎದ್ದು ಉತ್ತರ ಕೊಡ್ತಾರೆ. ಅವರು ಬಹಳ ದೊಡ್ಡ ಜ್ಞಾನಿ, ಪ್ರಭಾವಿ. ಬಿಜೆಪಿಯವರಿಗೆ ಆರೋಪ ಮಾಡುವ ಚಟ ಅಂತ ಪ್ರಿಯಾಂಕ್ ಖರ್ಗೆ ಆರೋಪ ಮಾಡಿದ್ದಾರೆ. ಪೋಕ್ಸೋ ಕೇಸ್ ನಿಂದ ಡೈವರ್ಟ್ ಮಾಡಲು ಆರೋಪ ಮಾಡ್ತಿದ್ದಾರೆ ಅಂದಿದ್ದಾರೆ. ನೀವೇನು ಹೈಕೋರ್ಟಾ? ಸುಪ್ರೀಂಕೋರ್ಟಾ? ಯಡಿಯೂರಪ್ಪ ಬಗ್ಗೆ ನೀವೇನು ಮಾತಾಡೋದು? ನಿಮ್ಮ ಆಪ್ತನ ಕುಮ್ಮಕ್ಕಿನಿಂದಲೇ ಸಚಿನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿದರು.
ಇದೇ ತಿಂಗಳ 27ರಂದು ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಗುತ್ತಿಗೆದಾರ ಸಚಿನ್ ಪಾಂಚಾಳ ಅವರ ಆತ್ಮಹತ್ಯೆ ಪ್ರಕರಣ ದೇಶಾದ್ಯಂತ ಸುದ್ದಿಯಾಗಿದೆ. ಅವರು ಬರೆದಿಟ್ಟ 7 ಪುಟಗಳ ಡೆತ್ ನೋಟ್‌ನಲ್ಲಿ ಕಿರುಕುಳದ ಉಲ್ಲೇಖವಿದೆ. ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿ ಬರೆದಿಟ್ಟ ಡೆತ್ ನೋಟಿನ ಮಾಹಿತಿ ಸತ್ಯಕ್ಕೆ ದೂರವಾಗುವ ಸಾಧ್ಯತೆ ಇಲ್ಲ ಎಂದು ತಿಳಿಸಿದರು.
ನಿನ್ನೆ ನಾನು, ವಿಪಕ್ಷ ನಾಯಕರು, ವಿಧಾನಪರಿಷತ್ ಸದಸ್ಯ ರವಿಕುಮಾರ್, ಸ್ಥಳೀಯ ಶಾಸಕರು, ಪಕ್ಷದ ಅಧ್ಯಕ್ಷರು, ಭಾಲ್ಕಿ ತಾಲ್ಲೂಕಿನ ಮೃತರ ಗ್ರಾಮಕ್ಕೆ ಭೇಟಿ ಕೊಟ್ಟಿದ್ದೇವೆ. ಸಚಿನ್ ಅವರ ಕುಟುಂಬವನ್ನು ಭೇಟಿ ಮಾಡಿದ್ದೇವೆ. ಆ ಹಿಂದುಳಿದ ವರ್ಗದ ಬಡ ಕುಟುಂಬದಲ್ಲಿ ಸಚಿನ್‍ಗೆ 5 ಜನರು ಸಹೋದರಿಯರಿದ್ದಾರೆ ಎಂದು ವಿವರಿಸಿದರು. ಬಿಜೆಪಿಯವರಿಗೆ ರಾಜಕೀಯ ತೆವಲು, ಚಟ, ಹಿಟ್ ಆಂಡ್ ರನ್ ಎಂದು ಕಾಂಗ್ರೆಸ್ಸಿನವರು ಮಾತನಾಡುತ್ತಾರೆ ಎಂದರು.
ಸಚಿನ್ ಸಾಮಾಜಿಕ ಜಾಲತಾಣದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪೋಸ್ಟ್ ಹಾಕಿಕೊಂಡಿದ್ದಾಗ ಅವರ ಇಬ್ಬರು ಸಹೋದರಿಯರಾದ ಸವಿತಾ, ಸುನೀತಾ ಮಧ್ಯಾಹ್ನವೇ 2.15ಕ್ಕೆ ಪೊಲೀಸ್ ಠಾಣೆಗೆ ಧಾವಿಸಿದ್ದರು. ಗೋಗರೆದು ಕೇಳಿದರೆ ಪ್ರಾಣ ಉಳಿಸಲು ಕೋರಿದರೆ, ಅವರ ಮನವಿಯನ್ನು ಕಿಂಚಿತ್ತೂ ಲೆಕ್ಕಿಸದೆ, ಅಮಾನವೀಯವಾಗಿ ಪಿಎಸ್‍ಐ ನಡೆದುಕೊಂಡಿದ್ದಾರೆ ಎಂದು ಆರೋಪಿಸಿದರು. ಅವರನ್ನು ಪೊಲೀಸ್ ಸ್ಟೇಷನ್‍ಗಳಿಗೆ ತಿರುಗಾಡಿಸಿದ್ದರು ಎಂದು ಟೀಕಿಸಿದರು.
ಸಚಿನ್ ಕುಟುಂಬದವರಿಂದ ಪೊಲೀಸರು ದೂರು ಸ್ವೀಕರಿಸಿಲ್ಲ, ಸಚಿನ್ ಹುಡುಕುವ ಕೆಲಸವನ್ನೂ ಮಾಡಿಲ್ಲ. ಪೊಲೀಸ್ ಅಧಿಕಾರಿಗಳ ವರ್ತನೆಯು ಖಂಡನೀಯ. ಕಾಂಗ್ರೆಸ್ ಹಿರಿಯ ಮುಖಂಡ, ಖರ್ಗೆ ಕುಟುಂಬಕ್ಕೆ ಹತ್ತಿರ ಇರುವ ರಾಜು ಕಪನೂರ್ ಈ ಪ್ರಕರಣದ ಹಿಂದಿನ ಪ್ರಮುಖ ಆರೋಪಿ ಎಂಬುದು ಡೆತ್ ನೋಟಿನಲ್ಲಿದೆ ಎಂದು ತಿಳಿಸಿದರು.
ಅತ್ಯಂತ ಹಿಂದುಳಿದ ವರ್ಗಕ್ಕೆ ಸೇರಿದ ಬಡ ಕುಟುಂಬಕ್ಕೆ ಅನ್ಯಾಯವಾಗಿದೆ. ಕುಟುಂಬದ ಆಧಾರಸ್ತಂಭ ಕುಸಿದಿದೆ. ಹಾಗಾಗಿ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲು ನಾವು ಒತ್ತಾಯಿಸುತ್ತಿದ್ದೇವೆ. ದೆಹಲಿಯಲ್ಲಿ ಪ್ರಮುಖ ಸಭೆ ಇದ್ದರೂ ಇಲ್ಲಿ ಬಂದಿದ್ದೇನೆ. ಭಾಲ್ಕಿಗೆ ಹೋಗಿ ಬಂದಿದ್ದೇವೆ ಎಂದ ಅವರು, ರಾಜು ಕಪನೂರ್, ಖರ್ಗೆ ಕುಟುಂಬಕ್ಕೆ ಪರಮಾಪ್ತ. ಬಡ ಸಚಿನ್ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವ ಪ್ರಾಮಾಣಿಕ ಇಚ್ಛೆ ನಮ್ಮದು ಎಂದರು.
ಬೆಂಗಳೂರು: ರಾಜ್ಯದ ಪೊಲೀಸರ ಮೇಲೆ ನಂಬಿಕೆ ಇಲ್ಲದೆ ಹೋದ್ರೆ ಎಸ್‌ಪಿಜಿ (SPG) ಭದ್ರತೆ ಹಾಕಿಸಿಕೊಳ್ಳಲಿ ಎಂದು ಮಾಜಿ ಸಂಸದ ಡಿಕೆ ಸುರೇಶ್ (DK Suresh) ಸಿಟಿ ರವಿ (CT Ravi) ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ನನ್ನ ಬಂಧನಕ್ಕೆ ಡಿಕೆಶಿ ಕಾರಣ ಎಂಬ ಸಿಟಿ ರವಿ ಹೇಳಿಕೆ ವಿಚಾರ ಪ್ರತಿಕ್ರಿಯೆ ನೀಡಿದ ಅವರು, ಸಿಟಿ ರವಿ ಕೆಲ ವಿಷಯದಲ್ಲಿ ಪ್ರಚಲಿತರು. ಅವರ ಒಡನಾಟ ಇರುವುದು ಅಂತಹವರ ಜೊತೆ. ರಾಜ್ಯದ ಪೊಲೀಸ್ ಮೇಲೆ ನಂಬಿಕೆ ಇಲ್ಲ ಅಂದರೆ ಡೆಲ್ಲಿ ಸಪೋರ್ಟ್ ತಗೊಂದು ಎಸ್‌ಪಿಜಿ ಭದ್ರತೆ ನೀಡಲು ಹೇಳಿ. ಇಲ್ಲೇ ಹಿಂದೆ ಮುಂದೆ ಸೆಕ್ಯುರಿಟಿ ವ್ಯಾನ್ ಹಾಕಿಕೊಂಡು ಹೋಗೋಕೆ ಹೇಳಿ. ರಾಜ್ಯ ಪೊಲೀಸರ ಮೇಲೆ ನಂಬಿಕೆ ಇಲ್ಲ ಅಂದರೆ ಎಸ್‌ಪಿಜಿ ಭದ್ರತೆಯನ್ನು ಕೇಳಿ ತಗೊಳ್ಳಲಿ ಎಂದು ತಿರುಗೇಟು ಕೊಟ್ಟರು.
ಸಿಟಿ ರವಿ ಬಂಧನ ಪ್ರಕರಣವನ್ನು ಸಿಬಿಐ (CBI) ಅಥವಾ ನ್ಯಾಯಾಂಗ ತನಿಖೆಗೆ ನೀಡಬೇಕು ಅಂತ ಬಿಜೆಪಿ ನಾಯಕರ ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ನಾಯಕರಿಗೆ ಸಿಬಿಐ ಅನ್ನೋದು ಮನೆ ಒಳಗಿನ ಸರಕು ಆಗಿದೆ. ಮನೆ ಕೆಲಸದವನ್ನು ಉಪಯೋಗ ಮಾಡುವ ರೀತಿ ಸಿಬಿಐ ಉಪಯೋಗ ಮಾಡುತ್ತಿದ್ದಾರೆ. ನಡೆದ ಘಟನೆ ಬಿಜೆಪಿಗೆ ಶೋಭೆ ತರುತ್ತಾ ಅಂತ ಬಿಜೆಪಿ ನಾಯಕರು ಹೇಳಬೇಕು. ಸಿಟಿ ರವಿ ಪದೇ ಪದೇ ಹೆಣ್ಣು ಮಕ್ಕಳ ಬಗ್ಗೆ ಈ ರೀತಿ ಮಾತಾಡ್ತಿದ್ದಾರೆ. ಬಿಜೆಪಿ ಸಂಸ್ಕೃತಿ ಎಲ್ಲಿ ಹೋಯ್ತು? ಆರ್‌ಎಸ್‌ಎಸ್ ಹೇಳಿಕೊಟ್ಟ ಸಂಸ್ಕೃತಿ ಇದೆನಾ ಅಂತ ಪ್ರಶ್ನೆ ಮಾಡಿದರು. ಇದನ್ನೂ ಓದಿ: ಸಿ.ಟಿ ರವಿ ಫೇಕ್ ಎನ್‌ಕೌಂಟರ್ ಮಾಡಬೇಕೆಂಬ ವಿಚಾರ ಅಲ್ಲಿನ ಪೊಲೀಸ್ ತಂಡಕ್ಕೆ ಇತ್ತು ಅನಿಸುತ್ತೆ: ಜೋಶಿ ಬಾಂಬ್
ಬಿಜೆಪಿ ನಾಯಕರು ಪದೇ ಪದೇ ಹೀಗೆ ಮಾತಾಡೋದನ್ನ ರಾಜ್ಯದ ಜನರು ಗಮನಿಸಬೇಕು. ಹೆಣ್ಣುಮಕ್ಕಳು, ಮಹಿಳೆಯರ ಬಗ್ಗೆ ಮಾತಾಡ್ತಾರೆ. ಅವರ ನಡವಳಿಕೆ ನೋಡಿದ್ರೆ ಅವರ ತಾಯಿ, ಹೆಂಡತಿ, ಮಕ್ಕಳಿಗೂ ಗೌರವ ಕೊಡೊಲ್ಲ ಅನ್ನಿಸುತ್ತೆ. ಆರ್‌ಎಸ್‌ಎಸ್ (RSS) ತರಬೇತಿ ಕೇಂದ್ರ ಈಗಲಾದರೂ ಬಿಜೆಪಿ ನಾಯಕರಿಗೆ ಕಡಿವಾಣ ಹಾಕಬೇಕು. ಬಿಜೆಪಿಯ ಒಬ್ಬೇ ಒಬ್ಬ ನಾಯಕರು ಈ ಹೇಳಿಕೆ ಖಂಡಿದೇ. ತಿರುಚುವ ಕೆಲಸ ಮಾಡ್ತಿದ್ದಾರೆ. ಮಾಧ್ಯಮಗಳ ಬಳಿ ದಾಖಲೆ ಇದ್ದರು ಕೂಡಾ ಬೇರೆ ವಿಚಾರಗಳನ್ನು ಪ್ರಚಾರಕ್ಕೆ ಬಿಡುತ್ತಿದ್ದೀರಿ. ಮಾಧ್ಯಮಗಳು ಜನಪ್ರತಿನಿಧಿಗಳು ಹೀಗೆ ಮಹಿಳಾ ಕುಲಕ್ಕೆ ಆದ ಅವಮಾನದ ಬಗ್ಗೆ ಮಾತಾಡುತ್ತಿಲ್ಲ. ಆ ನಾಯಕರು ಕ್ಷಮೆ ಕೋರುತ್ತಿಲ್ಲ. ಮಾಧ್ಯಮಗಳು ಯಾಕೆ ಅವರಿಗೆ ಬೆಂಬಲ ಕೊಡ್ತೀರಾ ಡಿಕೆ ಸುರೇಶ್ ಗರಂ ಆದರು.
ವಿರೋಧ ಪಕ್ಷದ ನಾಯಕರು ಈ ರೀತಿ ಪ್ರವೃತ್ತಿ ಪದೇ ಪದೇ ತೋರಿಸುತ್ತಿದ್ದಾರೆ. ಕರ್ನಾಟಕದ ಗೌರವ ಕಡಿಮೆ ಮಾಡ್ತಿದ್ದಾರೆ. ಕನ್ನಡಿಗರು ಸುಸಂಸ್ಕೃತರು ಅಂತ ಹೇಳ್ತಾರೆ. ಆದರೆ ಬಿಜೆಪಿ ನಾಯಕರ ಆಟ ನೋಡಿದ್ರೆ 10-12 ವರ್ಷಗಳಿಂದ ಇದೇ ರೀತಿ ಬಿಜೆಪಿ ಅವರು ನಡೆಸಿಕೊಂಡು ಬರ್ತಿದ್ದಾರೆ. ಮೌಲ್ಯಗಳು ಕುಸಿಯುತ್ತಿದ್ದು ಓಲೈಕೆ ಹೆಚ್ಚಾಗುತ್ತಿದೆ. ಜನಪ್ರತಿನಿಧಿಗಳ ಅಪಹಾಸ್ಯಕ್ಕೆ ಒಳಗಾಗುತ್ತಿದ್ದಾರೆ. ಎಚ್ಚರಿಕೆ ಇಂದ ನಡೆಯಬೇಕು ಅಂತ ತಿಳಿಸಿದರು.
ಸಿಟಿ ರವಿ ರಾಹುಲ್ ಗಾಂಧಿ (Rahul Gandhi) ಡ್ರಗ್ ಅಂದರು, ಕೆಟ್ಟ ಪದ ಬಳಕೆ ಆಯ್ತು ಮಾಧ್ಯಮಗಳು ಯಾವುದನ್ನು ತೋರಿಸಲಿಲ್ಲ. ಸಿಟಿ ರವಿ ಮಾತು ತಿರುಗಿಸೋದ್ರಲ್ಲಿ ಎಕ್ಸ್‌ಪರ್ಟ್ ಆಗಿದ್ದಾರೆ. ಸಿಟಿ ರವಿ ಮಹಿಳೆಯರ ಕ್ಷಮೆ ಕೇಳಬೇಕು. ಅವರ ಮನೆಯಲ್ಲಿ ಮಹಿಳೆಯರು ಇದ್ದಾರೆ. ತಾಯಿ ಜನ್ಮ ಕೊಟ್ರೆ ಇವರು ಆಚೆ ಬರೋಕೆ ಸಾಧ್ಯವಿಲ್ಲ. ತಾಯಿ ಬಿಟ್ಟು ಬೇರೆ ರೀತಿ ಹುಟ್ಟೋದನ್ನ ಬಿಜೆಪಿ ಅವರು ಕಂಡುಕೊಂಡಿರಬೇಕು. ಕರ್ಣ ಹುಟ್ಟಿದ ರೀತಿ ಜನ್ಮ ತಾಳಿದ್ದಾರಾ? ಅವರ ನಾಯಕರೇ ಅದನ್ನ ಹೇಳಿದ್ದಾರೆ. ಮೋದಿ ಅವರೇ ನಾನು ದೈವ ಸಂಭೂತ ಅಂತ ಹೇಳಿದ್ದಾರೆ. ಹಾಗೆ ಏನಾದ್ರು ಬಿಜೆಪಿ ಅವರ ಹುಟ್ಟಿದ್ರಾ? ಬಿಜೆಪಿಯಲ್ಲಿ ಲಂಗು-ಲಗಾಮು ಇಲ್ಲ ಅಂತ ಅನ್ನಿಸುತ್ತೆ. ಅದಕ್ಕೆ ಪದೇ ಪದೇ ಹೀಗೆ ಮಾತಾಡ್ತಿದ್ದಾರೆ .ಬಿಜೆಪಿ ಅವರು ಏನೇನು ಮಾತಾಡಿದರು ಪಟ್ಟಿ ಮಾಡಿ ತೋರಿಸಿ ಅಂತ ಮಾಧ್ಯಮಗಳ ಮೇಲೆ ಆರೋಪ ಮಾಡಿದ್ರು.
ಸಿಟಿ ರವಿಯನ್ನ ಎನ್‌ಕೌಂಟರ್ ಮಾಡೋ ಪ್ಲ್ಯಾನ್ ಮಾಡಿದ್ರು ಕೇಂದ್ರ ಸಚಿವ ಜೋಷಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು,ಅಂಬೇಡ್ಕರ್ ಮೇಲಿನ ಹೇಳಿಕೆ ಮರೆ ಮಾಚಲಿ ಬಿಜೆಪಿ ಕುತಂತ್ರ ಮಾಡಿದೆ. ಬಿಜೆಪಿ ಅವರು ಮಾಡ್ತಿರೋದನ್ನ ಮಾಧ್ಯಮಗಳು ಚೆನ್ನಾಗಿ ತೋರಿಸ್ತಿದ್ದಾರೆ. ಈ ದೇಶ ಅಂಬೇಡ್ಕರ್ ಸಂವಿಧಾನದಿಂದ ಉಳಿದಿದೆ. ನೀವು ಅಂಬೇಡ್ಕರ್ ಬಗ್ಗೆ ಅಪಮಾನ ಆಗಿದ್ದು ತೋರಿಸದೇ ಸಿಟಿ ರವಿ ತೋರಿಸ್ತಿದ್ದೀರಾ. ಮೌಲ್ಯಗಳು ಮುಂದಿನ ದಿನಗಳಲ್ಲಿ ಮಾಧ್ಯಮಗಳಿಗೆ ಮುಂದೆ ಬರುತ್ತದೆ ಎಂದರು.
ಬೆಳಗಾವಿ: ವಿಧಾನಸಭಾ ಕಲಾಪದಲ್ಲಿ ಆರಂಭದಲ್ಲೇ ಇಂದು ಬಿಜೆಪಿ ಮತ್ತು ಕಾಂಗ್ರೆಸ್ (BJP, Congress) ನಾಯಕರು ಸಿಬಿಐ ತನಿಖೆಗೆ ಆಗ್ರಹಿಸಿದ ಪ್ರಸಂಗ ನಡೆಯಿತು.
ಸದನ ಆರಂಭಗೊಳ್ಳುತ್ತಿದ್ದಂತೆ ಸ್ಪೀಕರ್ ಖಾದರ್ (UT Khader) ಅವರು ಉತ್ತರ ಕರ್ನಾಟಕ (North Karnaataka) ಭಾಗದ ಚರ್ಚೆಗೆ ಅವಕಾಶ ನೀಡಿದರು. ಈ ವೇಳೆ ಪ್ರತಿಪಕ್ಷ ನಾಯಕ ಅಶೋಕ್ (Ashok) ಅವರು ವಕ್ಫ್ ವಿಚಾರವನ್ನು ಪ್ರಸ್ತಾಪ ಮಾಡಿದರು.
ಪ್ರಿಯಾಂಕ್ ಖರ್ಗೆ (Priyank Kharge) ವಿಜಯೇಂದ್ರ ವಿರುದ್ಧ ಮೊನ್ನೆ ಆರೋಪ ಮಾಡಿದ್ದಾರೆ. ಆದರೆ ಅವರು ಮಾತನಾಡುವುದಕ್ಕೆ ಮೊದಲೇ ನೋಟಿಸ್ ನೀಡಬೇಕಿತ್ತು ಎಂದು ಹೇಳಿ ವಿರೋಧ ವ್ಯಕ್ತಪಡಿಸಿದರು.
ಇದಕ್ಕೆ ಪ್ರಿಯಾಂಕ್ ಖರ್ಗೆ, ನಾನು ಆರೋಪ ಮಾಡಿದ್ದಲ್ಲ, ಮಾಣಿಪ್ಪಾಡಿ (Anwar Manippady) ಆರೋಪ ಮಾಡಿದ್ದು, ಅದನ್ನೇ ನಾನು ಹೇಳಿದ್ದು ಎಂದು ಹೇಳಿದರು. ಪ್ರಿಯಾಂಕ್ ಖರ್ಗೆ ಆರೋಪದ ಬಗ್ಗೆ ಬಿಜೆಪಿ ನಾಯಕರು ಚರ್ಚೆಗೆ ಅವಕಾಶ ಕೇಳಿದರು. ಆದರೆ ಚರ್ಚೆಗೆ ಅವಕಾಶ ನೀಡದ ಸ್ಪೀಕರ್ ವಿಜಯೇಂದ್ರ ಅವರಿಗೆ ಸ್ಪಷ್ಟನೆ ನೀಡುವಂತೆ ಸೂಚಿಸಿದರು. ಇದನ್ನೂ ಓದಿ: ಹಾಸನ-ಮಂಗಳೂರು ಹೈವೇಯಲ್ಲಿ ಮತ್ತೊಂದು ಟೋಲ್ ಆರಂಭ – ಸಾರ್ವಜನಿಕರಿಂದ ತೀವ್ರ ಆಕ್ರೋಶ
ನನ್ನ ಮೇಲೆ ಪ್ರಿಯಾಂಕ್ ಖರ್ಗೆ ಗುರುತರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಅಧಿಕಾರ ದುರುಪಯೋಗ ಪಡಿಸಿಕೊಂಡಿದೆ. ಸಿಎಂಗೆ ಈಗ ಸಿಬಿಐ (CBI) ಮೇಲೆ ನಂಬಿಕೆ ಬಂದಿದೆ ಎಂದು ವಿಜಯೇಂದ್ರ ಹೇಳಿದಾಗ ಎದ್ದು ನಿಂತ ಕೃಷ್ಣಬೈರೇಗೌಡ ಇಲ್ಲಿ ರಾಜಕೀಯ ಭಾಷಣ ಮಾಡಬೇಡಿ ಎಂದು ಪ್ರತಿಕ್ರಿಯಿಸಿದರು.
ಈ ವೇಳೆ ಸಿಟ್ಟಾದ ವಿಜಯೇಂದ್ರ, ಸಿಎಂಗೆ ಪರಮಾಧಿಕಾರ ಇದ್ದು ಸಿಬಿಐ ತನಿಖೆಗೆ ನೀಡಲಿ. ಸಿಎಂ ಹಗರಣಗಳ ಸುಳಿಗೆ ಸಿಕ್ಕಿದ್ದಾರೆ. ಅದರಿಂದ ಬಚಾವಾಗಲು ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.
ಸಿಎಂ ಅವರಿಗೆ ಸಿಬಿಐ ಬಗ್ಗೆ ಬಹಳ ವಿಶ್ವಾಸ ಇದೆ. 150 ಕೋಟಿ ರೂ. ಆಮಿಷ ಆರೋಪವನ್ನು ಸಿಬಿಐಗೆ ವಹಿಸಲಿ. ಜೊತೆಗೆ ಅನ್ವರ್ ಮಾಣಿಪ್ಪಾಡಿ ವರದಿಯ ತನಿಖೆಯನ್ನೂ ಸಿಬಿಐಗೆ ಕೊಡಲಿ ಎಂದು ಸವಾಲು ಎಸೆದರು. ಅಷ್ಟೇ ಅಲ್ಲದೇ ಮುಡಾ ಪ್ರಕರಣವನ್ನು ಸಿಬಿಐಗೆ ನೀಡಲಿ ಎಂದು ಹೇಳಿದರು. ಈ ವೇಳೆ ಕಾಂಗ್ರೆಸ್ ನಾಯಕರು ಎದ್ದು ನಿಂತು ವಿರೋಧ ವ್ಯಕ್ತಪಡಿಸಿದಾಗ ಸದನದಲ್ಲಿ ಭಾರೀ ಕೋಲಾಹಲ, ಗದ್ದಲ ನಡೆಯಿತು.
150 ಕೋಟಿ ರೂ. ಆಮಿಷವನ್ನು ಸಿಬಿಐಗೆ ನೀಡಬೇಕೆಂದು ಕಾಂಗ್ರೆಸ್‌ನವರು ಕೂಗಿದರೆ ಬಿಜೆಪಿಯವರು ಮುಡಾ ಹಗರಣವನ್ನು ಸಿಬಿಐಗೆ ನೀಡಿ ಎಂದು ಆಗ್ರಹಿಸಿದರು. ಈ ಮಧ್ಯೆ ಮಾತಾಡಲು ಪ್ರಿಯಾಂಕ್ ಖರ್ಗೆ ಎದ್ದಾಗ ಖಾದರ್ ಅವಕಾಶ ನೀಡಲಿಲ್ಲ. ವಿಜಯೇಂದ್ರ ಅವರಿಂದ ಸ್ಪಷ್ಟನೆ ಬಂದಿದೆ. ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ಮಾಡಿ ಎಂದು ಸೂಚಿಸಿ ಎರಡು ಪಕ್ಷಗಳ ಕಿತ್ತಾಟಕ್ಕೆ ಪೂರ್ಣ ವಿರಾಮ ಹಾಕಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವರ್ಗಾಯಿಸಬೇಕು ಎಂದು ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೆಪ್ಟೆಂಬರ್ 30ರಂದು ಮುಕ್ತಾಯಗೊಳಿಸಿ ಇಂದಿಗೆ ತೀರ್ಪು ಕಾಯ್ದಿರಿಸಿತ್ತು.
ಬೆಂಗಳೂರು ಪೂರ್ವ ವಲಯದ ಸಿಬಿಐ ಡಿಜಿಎಂ ಜೆ. ಮಹೇಶ್ ಎಂಬುವವರು ಈ ಹಿಂದೆಯೇ ಸರ್ಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳು, ಖಾಸಗಿ ವ್ಯಕ್ತಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಿ ದೂರಿನಲ್ಲಿ ಉಲ್ಲೇಖ ಮಾಡಿದ್ದರು.
ಯೂನಿಯನ್ ಬ್ಯಾಂಕ್ ಹಿರಿಯ ಅಧಿಕಾರಿಗಳ ಪತ್ರದ ಅನ್ವಯ ಬ್ಯಾಂಕಿನ ಮೂವರು ಸೇರಿ ಐವರ ವಿರುದ್ಧ ಸಿಬಿಐ ಎಫ್ಐಆರ್ ದಾಖಲು ಮಾಡಿತ್ತು. ಈ ನಡುವೆ ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವಹಿಸಿ ಆದೇಶಿಸಿತ್ತು. ಎಸ್‌ಐಟಿ ಈಗಾಗಲೇ ಪ್ರಕರಣದ ತನಿಖೆ ನಡೆಸಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ವಾಲ್ಮಿಕಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆಯಾದ ಬಗ್ಗೆ ಈಗಾಗಲೇ ಜಾರಿ ನಿರ್ದೇಶನಾಲಯ ಸಹ ತನಿಖೆ ನಡೆಸಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ.
ಏನಿದು ಪ್ರಕರಣ?
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ (Chandrashekaran) ಶಿವಮೊಗ್ಗದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್‌ನೋಟ್‌ನಲ್ಲಿ ಮೂವರು ಹೆಸರು ಹಾಗೂ ಬಹುಕೋಟಿ ಹಗರಣ ನಡೆದಿರುವ ಬಗ್ಗೆ ಉಲ್ಲೇಖಿಸಿದ್ದರು. ಈ ಬೆನ್ನಲ್ಲೇ ಬ್ಯಾಂಕ್‌ನಿಂದ 94 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿದೆ. ಹಣ ವರ್ಗಾವಣೆಯಾದ ಬಗ್ಗೆ ಯಾವುದೇ ಮೇಲ್, ಮೆಸೇಜ್ ಬಂದಿಲ್ಲ. ಬ್ಯಾಂಕ್ ಸಿಬ್ಬಂದಿಯಿಂದಲೇ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬ್ಯಾಕ್‌ನ 6 ಮಂದಿ ಸಿಬ್ಬಂದಿ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ತನ್ನ ಪಿಎಗಳನ್ನು ಬಳಸಿ ಮಾಡುತ್ತಿರುವ ಅನ್ಯಾಯ ನೋಡಲಾಗದೇ ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಾವಿ ಗ್ರಾಮೀಣದಲ್ಲಿ ಜನ ಹೆಚ್ಚಿನ ಲೀಡ್ ನೀಡಿದ್ದರು. ಹೆಬ್ಬಾಳ್ಕರ್ ಬಂದ ಮೇಲೆ ಭ್ರಷ್ಟಾಚಾರ ಹೆಚ್ಚಾಗಿದೆ. ಅಮಾಯಕ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಕರಣ ಸಂಬಂಧ ಇಲ್ಲಿಯವರೆಗೆ ಯಾವುದೇ ಬಂಧನ ಆಗಿಲ್ಲ. ತಹಶೀಲ್ದಾರ್ ಕಚೇರಿ ಸಿಸಿಟಿವಿಯನ್ನು ವಶಕ್ಕೆ ಪಡೆದುಕೊಂಡಿಲ್ಲ. ಸಾಕ್ಷಿ ನಾಶದ ಅನುಮಾನ ವ್ಯಕ್ತವಾಗಿದೆ ಎಂದು ದೂರಿದರು. ಇದನ್ನೂ ಓದಿ: ಸರ್ ಎಂ.ವಿಶ್ವೇಶ್ವರಯ್ಯ ಓದಿದ್ದ ಸರ್ಕಾರಿ ಶಾಲೆಯೂ ವಕ್ಫ್ ಹೆಸರಿಗೆ
ಸಾಕ್ಷಿ ನಾಶ ಮಾಡುವ ಬಗ್ಗೆ ಜನರಿಗೆ ಸಂಶಯವಿದೆ. ಪೊಲೀಸ್ ಇಲಾಖೆ ತನ್ನ ಕೆಲಸವನ್ನು ಸರಿಯಾಗಿ ಮಾಡುತ್ತಿಲ್ಲ. ಸಿಎಂ ಹಾಗೂ ಸಚಿವರ ಒತ್ತಡಕ್ಕೆ ಪೊಲೀಸ್ ಅಧಿಕಾರಿಗಳು ಮಣಿದಿದ್ದಾರೆ. ಪಿಎ ಮಾಡಿರುವ ಕೆಲಸಕ್ಕೆ ಸಚಿವರೇ ಹೊಣೆ ಹೊರಬೇಕು.ಪೊಲೀಸ್ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ. ಸಿಬಿಐಗೆ ಪ್ರಕರಣದ ತನಿಖೆ ವಹಿಸಬೇಕು ಎಂದು ಬೆಲ್ಲದ್ ಆಗ್ರಹಿಸಿದರು.
ರಾಜ್ಯ ಸರ್ಕಾರದ 16 ತಿಂಗಳಲ್ಲಿ ದಿನಕ್ಕೆ ಒಂದೊಂದು ಹಗರಣ ಹೊರಗೆ ಬರುತ್ತಿವೆ. ಭ್ರಷ್ಟಾಚಾರ ಅಂದರೆ ಕಾಂಗ್ರೆಸ್ ಎನ್ನುವಂತೆ ರಾಜ್ಯದಲ್ಲಿ ಆಗಿದೆ. ಯಾವುದೇ ಹಗರಣ ಬಂದರೂ ಅದರಲ್ಲಿ ಹೆಬ್ಬಾಳ್ಕರ್ ಹೆಸರು ಕೇಳಿ ಬರುತ್ತಿದೆ. ವಾಲ್ಮೀಕಿ ಹಗರಣ ಬಗ್ಗೆ ಸತೀಶ್ ಜಾರಕಿಹೊಳಿ ಚಕಾರ ಎತ್ತಿಲ್ಲ. ಮುಡಾ, ವಕ್ಫ್ ಇಲಾಖೆಯಲ್ಲಿ ಹಗರಣ ಮಾಡಿದ್ದಾರೆ. ಪ್ರವಾಸೋದ್ಯಮ, ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದರು.
ಬೆಂಗಳೂರು: ಬೆಲೇಕೇರಿ ಬಂದರಿನಿಂದ (Belekeri Port) ಅಕ್ರಮವಾಗಿ ಅದಿರು ರಫ್ತು (llegal Export of Iron Ore) ಪ್ರಕರಣಕ್ಕೆ ಸಂಬಂಧಿಸಿದ ಆರು ಪ್ರಕರಣಗಳಲ್ಲಿ ದೋಷಿಯಾಗಿದ್ದ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ (Satish Sail) ಶನಿವಾರ ಕೋರ್ಟ್ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ.
ಪ್ರಕರಣದ ವಿಚಾರಣೆ ನಡೆಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ (Special Courts for MP/MLA) ನ್ಯಾಯಾಧೀಶ ಗಜಾನನ ಭಟ್ ಶುಕ್ರವಾರ ಶಿಕ್ಷೆ ಪ್ರಮಾಣದ ಅರ್ಜಿಯನ್ನು ವಿಚಾರಣೆ ನಡೆಸಿ ಶನಿವಾರ ಶಿಕ್ಷೆಯನ್ನು ಪ್ರಕಟಿಸುವುದಾಗಿ ತಿಳಿಸಿದರು.
ಇಂದು ಸಿಬಿಐ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ.ಎಸ್.ಹೇಮಾ ಅವರು, 3100 ಮೆಟ್ರಿಕ್ ಟನ್ ಅದಿರು ಕಳ್ಳಸಾಗಣಿಕೆ ಮಾಡಿದ್ದಾರೆ. ಹೀಗಾಗಿ ಆರೋಪಿಗಳಿಗೆ ಜೈಲು ಶಿಕ್ಷೆಯ ಜೊತೆಗೆ ಗರಿಷ್ಠ ದಂಡ ವಿಧಿಸುವಂತೆ ಮನವಿ ಮಾಡಿದರು.
ಸತೀಶ್ ಸೈಲ್ ಪರ ವಕೀಲ ಮೂರ್ತಿ ಡಿ ನಾಯ್ಕ್ ಅವರು, ಶಾಸಕ ಸತೀಶ್ ಸೈಲ್ ಗೆ ಅನಾರೋಗ್ಯ ಇದೆ. ಸದ್ಯ ಸತೀಶ್ ಸೈಲ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಅನಾರೋಗ್ಯ ಕಾರಣದಿಂದ ಬೇಲ್ ಕೂಡ ಪಡೆದಿದ್ದರು. ಹೀಗಾಗಿ ಕನಿಷ್ಠ ಶಿಕ್ಷೆ ವಿಧಿಸುವಂತೆ ಮನವಿ ಮಾಡಿದರು. ಅಷ್ಟೇ ಅಲ್ಲದೇ ಸತೀಶ್ ಸೈಲ್ ಆರೋಗ್ಯಕ್ಕೆ ಸಂಬಂಧಿಸಿ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದರು.
ಈ ಬೆನ್ನಲ್ಲೇ ನ್ಯಾಯಾಲಯದಲ್ಲಿ ಹಾಜರಿದ್ದ ಶಾಸಕ ಸತೀಶ್ ಸೈಲ್, ಅರಣ್ಯಾಧಿಕಾರಿ ಮಹೇಶ್ ಬಿಳಿಯೆ, ಚೇತನ್ ಷಾ, ಸೋಮಶೇಖರ್, ಜನಾರ್ದನ ರೆಡ್ಡಿಯ ಆಪ್ತ ಸ್ವಸ್ತಿಕ್ ನಾಗರಾಜ್, ಖಾರದಪುಡಿ ಮಹೇಶ್, ಕೆವಿ ಗೋವಿಂದರಾಜುನನ್ನು ವಶಕ್ಕೆ ಪಡೆದ ಸಿಬಿಐ ಅಧಿಕಾರಿಗಳು, ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಿದರು.
2009-10ರ ನಡುವೆ ನಡೆದಿದ್ದ ಬೆಲೆಕೇರಿ ಅದಿರು ನಾಪತ್ತೆಗೆ ಸಂಬಂಧಿಸಿದ ಆರು ಪ್ರಕರಣಗಳ ತನಿಖೆ ನಡೆಸಿದ್ದ ಸಿಬಿಐ 2013ರಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಎಂಟು ತಿಂಗಳ ಅವಧಿಯಲ್ಲಿ ಸೈಲ್ ಮಾಲೀಕತ್ವದ ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ಸುಮಾರು 7.23 ಲಕ್ಷ ಟನ್ ಮೆಟ್ರಿಕ್ ಅದಿರನ್ನು ಬೇಲಿಕೇರಿ ಮೂಲಕ ವಿದೇಶಕ್ಕೆ ರಫ್ತು ಮಾಡಿರೋದನ್ನು ಪತ್ತೆ ಹಚ್ಚಿತ್ತು. 2012ರಲ್ಲಿ ಸೈಲ್ ನಿವಾಸದ ಮೇಲೆ ದಾಳಿ ನಡೆಸಿದ್ದ ಸಿಬಿಐ, 2013ರಲ್ಲಿ ಬಂಧಿಸಿತ್ತು. ಆಗ ಸತೀಶ್ ಸೈಲ್ ಒಂದು ವರ್ಷಕ್ಕೂ ಹೆಚ್ಚು ಕಾಲ ಜೈಲಲ್ಲಿ ಇದ್ದರು. ವಿಶೇಷ ಏನೆಂದರೆ ಆಗಲೂ ಕೂಡ ಸತೀಶ್ ಸೈಲ್ ಶಾಸಕರಾಗಿದ್ದರು.
ಬೆಂಗಳೂರು: ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಸಿಬಿಐ (CBI) ತನಿಖೆ ನೀಡಿದ್ದ ಆದೇಶವನ್ನು ಹಿಂಪಡೆದ ಕರ್ನಾಟಕದ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್‌ಗೆ (Supreme Court) ಅರ್ಜಿ ಸಲ್ಲಿಸಿದೆ.
ಬಿಜೆಪಿ ಶಾಸಕ ಯತ್ನಾಳ್ ಅರ್ಜಿ ವಿಚಾರಣೆ ವೇಳೆ ಈ ಪ್ರಕರಣದ ವಿಚಾರಣೆಯಲ್ಲಿ ಭಾಗಿಯಾಗುವ ಬಗ್ಗೆ ಕೋರ್ಟ್ ಸಿಬಿಐ ಅಭಿಪ್ರಾಯ ಕೇಳಿತ್ತು. ಕೋರ್ಟ್ ಅಭಿಪ್ರಾಯ ಕೇಳಿದ್ದ ಹಿನ್ನೆಲೆಯಲ್ಲಿ ಸಿಬಿಐನಿಂದಲೂ ಈಗ ಅರ್ಜಿ ಸಲ್ಲಿಕೆಯಾಗಿದೆ.
ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಿಬಿಐ (CBI) ತನಿಖೆಗೆ ನೀಡಿದ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರದ ಆದೇಶದ ವಿರುದ್ಧ ಶಾಸಕ ಬಸನಗೌಡ ಯತ್ನಾಳ್ (Basanagouda Patil Yatnal) ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿತ್ತು.
ರಾಜ್ಯ ಸರ್ಕಾರ ನೀಡಿರುವ ಲೋಕಾಯುಕ್ತ ತನಿಖೆಗೆ ತಡೆ ನೀಡಬೇಕು ಮತ್ತು ಸರ್ಕಾರ ಮಾಡಿರುವ ಆದೇಶಕ್ಕೆ ತಡೆ ನೀಡಬೇಕು ಎಂದು ಯತ್ನಾಳ್ ಪರ ವಕೀಲರು ಮನವಿ ಮಾಡಿದ್ದರು. ಲೋಕಾಯುಕ್ತ ತನಿಖೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿತು. ಒಂದು ವೇಳೆ ತನಿಖೆ ನ್ಯಾಯಬದ್ಧವಾಗಿಲ್ಲ ಎಂದಾದರೆ ಮತ್ತೆ ಸುಪ್ರೀಂಕೋರ್ಟ್ ಸಂಪರ್ಕ ಮಾಡಬಹುದು ಎಂದು ಸೂಚಿಸಿತ್ತು.
ಈಗ ಸಿಬಿಐ ಅರ್ಜಿ ಸಲ್ಲಿಸಿದ್ದು ಯಾಕೆ?
ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ಲೋಕಾಯುಕ್ತಕ್ಕೆ ನೀಡಿದ್ದನ್ನು ಪ್ರಶ್ನಿಸಿ ಸಿಬಿಐ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಲೋಕಾಯುಕ್ತದಲ್ಲಿ ತನಿಖೆ ಮುಂದುವರೆಸಬಹುದು ಎಂದು ಆದೇಶದಲ್ಲಿ ತಿಳಿಸಿತ್ತು. ರಾಜ್ಯ ಸರ್ಕಾರ- ಸಿಬಿಐ ನಡುವೆ ಘರ್ಷಣೆಗೆ ಕಾರಣವಾದ ಪ್ರಕರಣ ಸುಪ್ರೀಂಕೋರ್ಟ್‍ನಲ್ಲಿ ಬಗೆಹರಿಯುವುದು ಸೂಕ್ತ ಎಂದು ಅಭಿಪ್ರಾಯಪಟ್ಟು ಯತ್ನಾಳ್ ಮತ್ತು ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಯತ್ನಾಳ್ ಮೇಲ್ಮನವಿ ಸಲ್ಲಿಸಿದ್ದರೆ ಸಿಬಿಐ ಮೇಲ್ಮನವಿ ಸಲ್ಲಿಸಿರಲಿಲ್ಲ.
ಏನಿದು ಸಿಬಿಐ ಪ್ರಕರಣ?
2017 ರಲ್ಲಿ ಡಿಕೆ.ಶಿವಕುಮಾರ್ ವಾಸ್ತವ್ಯವಿದ್ದ ಈಗಲ್‌ಟನ್ ರೆಸಾರ್ಟ್ ಮತ್ತು ಅವರ ಸಹಚರರ ಮೇಲೆ ದಾಳಿ ಮೇಲೆ ದಾಳಿ ಮಾಡಿದ್ದ ಆದಾಯ ತೆರಿಗೆ ಇಲಾಖೆ (Income Tax Department) ಸುಮಾರು 8.59 ಕೋಟಿ ಹಣ ವಶಪಡಿಸಿಕೊಂಡಿತ್ತು. ಲೆಕ್ಕಕ್ಕೆ ಸಿಗದ ಈ ಹಣವನ್ನು ಡಿ.ಕೆ.ಶಿವಕುಮಾರ್ ತಮ್ಮ ಸಹಚರರ ಬಳಿ ಇರಿಸಿದ್ದರು ಎಂದು ಆರೋಪಿಸಿತ್ತು. ಇದೇ ಪ್ರಕರಣದಲ್ಲಿ ಇಡಿ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿತ್ತು. ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದ ಇಡಿ ಪಿಸಿ ಆ್ಯಕ್ಟ್ ನಡಿ ತನಿಖೆ ನಡೆಸಲು ಸಿಬಿಐಗೆ ನೀಡಲು ಶಿಫಾರಸು ಮಾಡಿತ್ತು. ಶಿಫಾರಸು ಆಧರಿಸಿ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ನೇತೃತ್ವದ ಸರ್ಕಾರ ಸಿಬಿಐ ತನಿಖೆಗೆ ನೀಡಿತ್ತು. ಸಿದ್ದರಾಮಯ್ಯ ಸರ್ಕಾರ ಸಿಬಿಐಗೆ ನೀಡಿದ ಪ್ರಕರಣವನ್ನು ಹಿಂಪಡೆದು ಲೋಕಾಯುಕ್ತಕ್ಕೆ ನೀಡಿತ್ತು.
ಬೆಂಗಳೂರು: ಮೈಸೂರು ಮುಡಾ (MUDA) ನಿವೇಶನ ಹಂಚಿಕೆ ಹಗರಣವನ್ನು ಸಿಬಿಐಗೇ (CBI) ಕೊಡಬೇಕು. ಹಾಗಿದ್ದರೆ ಮಾತ್ರ ಸತ್ಯಾಂಶ ಹೊರಬರಲು ಸಾಧ್ಯ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಅವರು ಆಗ್ರಹಿಸಿಸಿದರು.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತನಿಖೆಯನ್ನು ಸಿಬಿಐಗೆ ಕೊಡದೇ ಇದ್ದಲ್ಲಿ ಕೇಸನ್ನು ಸಂಪೂರ್ಣವಾಗಿ ಮುಚ್ಚಿ ಹಾಕುವ ವ್ಯವಸ್ಥೆ ನಡೆಯುತ್ತಿದೆ ಎಂಬ ಅನುಮಾನವಿದೆ ಎಂದು ತಿಳಿಸಿದರು.
ಕಾಂಗ್ರೆಸ್ಸಿನವರಿಗೆ ಮಾನವೀಯತೆ ಇದ್ದರೆ ವಾಲ್ಮೀಕಿ ಜಯಂತಿಯನ್ನು (Valmiki Jayanti) ಪಶ್ಚಾತ್ತಾಪ ದಿನ ಎಂದು ಆಚರಣೆ ಮಾಡಬೇಕಿತ್ತು ಎಂದ ಅವರು, ಮುಖ್ಯಮಂತ್ರಿಗಳು ತಕ್ಷಣ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ಎಲ್ಲ ಕಡತಗಳನ್ನು ಹೆಲಿಕಾಪ್ಟರ್‌ನಲ್ಲಿ ತುಂಬಿಕೊಂಡು ಬಂದವರನ್ನೂ ತನಿಖೆಗೆ ಒಳಪಡಿಸಬೇಕು. ಮುಖ್ಯಮಂತ್ರಿಗಳು ತಕ್ಷಣ ರಾಜೀನಾಮೆ ಕೊಡಬೇಕು. ಮಾನ್ಯ ಸುರೇಶ್ ಅವರೂ ರಾಜೀನಾಮೆ ನೀಡಬೇಕು. ಇಲ್ಲವಾದರೆ ಇಡಿ. ಅಧಿಕಾರಿಗಳು ಮಾನ್ಯ ಮುಖ್ಯಮಂತ್ರಿಗಳನ್ನು ಬಂಧಿಸಲಿ ಎಂದು ಛಲವಾದಿ ಒತ್ತಾಯಿಸಿದರು. ಇದನ್ನೂ ಓದಿ: ಮುಡಾದಲ್ಲಿ ಬರೋಬ್ಬರಿ 5,000 ಕೋಟಿ ಅವ್ಯವಹಾರ ಆಗಿದೆ – ಶಾಸಕ ಎ ಮಂಜು ಹೊಸ ಬಾಂಬ್
ತಿಂದು ತೇಗಿದ್ದಾರೆ:
ಭ್ರಷ್ಟಾಚಾರ (Corruption) ಅಪರಾಧವಲ್ಲ ಎಂಬ ಮನಸ್ಥಿತಿಗೆ ಮುಖ್ಯಮಂತ್ರಿಗಳು ಮತ್ತು ಕಾಂಗ್ರೆಸ್ ಪಕ್ಷ ಬಂದ ಹಾಗಿದೆ. ಕುರಿಗಳನ್ನು ಕಾಯಲು ತೋಳನನ್ನು ಕಾಂಗ್ರೆಸ್ ಸರ್ಕಾರ ನೇಮಿಸಿದಂತಿದೆ. ಇವತ್ತು ಇಷ್ಟೊಂದು ಭ್ರಷ್ಟಾಚಾರ ನಡೆಯುತ್ತಿದ್ದರೂ ಜೈಲಿನಿಂದ ಬಂದವರು ವಿಜೃಂಭಿಸಿ ಬರುತ್ತಿದ್ದಾರೆ. ನಿನ್ನೆ ತಾನೇ ವಾಲ್ಮೀಕಿ ಜಯಂತಿ ನಡೆದಿದೆ. ಸಿದ್ದರಾಮಯ್ಯನವರು ವಾಲ್ಮೀಕಿ ಜಯಂತಿ ಮಾಡುವಾಗ ನನಗೇ ನಾಚಿಕೆ ಅನಿಸಿತ್ತು. ವಾಲ್ಮೀಕಿ ನಿಗಮವನ್ನು ತಿಂದು ತೇಗಿದವರು ವಾಲ್ಮೀಕಿ ಜಯಂತಿ ಮಾಡುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದರು.
ಇಂದು ಬೆಳಿಗ್ಗೆ ಮುಡಾ ಕಚೇರಿ, ತಾಲೂಕು ಕಚೇರಿ ಮತ್ತು ದೇವರಾಜು ಅವರ ಮನೆಗೆ ಇಡಿ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಮೂರು ಬಾರಿ ಮುಡಾ ಕಡತಗಳನ್ನು ಕೇಳಿದ್ದರೂ ಅಧಿಕಾರಿಗಳು ತಿರಸ್ಕರಿಸಿದ್ದೇ ಇದಕ್ಕೆ ಕಾರಣ ಎಂದು ವಿವರಿಸಿದರು.
ಈ ಹಗರಣದಲ್ಲಿ ಸತ್ಯ ಹೊರಗಡೆ ಬರುವುದು ರಾಜ್ಯ ಸರ್ಕಾರಕ್ಕೆ ಬೇಕಾಗಿಲ್ಲ. ಮುಡಾ ನಿವೇಶನಗಳನ್ನು ಅವಶ್ಯಕತೆ ಇಲ್ಲದಿದ್ದರೂ ವಾಪಸ್ ಕೊಡಲಾಗಿದೆ. ಅಧ್ಯಕ್ಷರಾಗಿದ್ದ ಮರಿಗೌಡರನ್ನು ಎತ್ತಂಗಡಿ ಮಾಡಿಸಲಾಗಿದೆ. ಅಲ್ಲಿನ ಅಧಿಕಾರಿಗಳನ್ನು ಬೇರೆ ಬೇರೆ ಇಲಾಖೆಗಳಿಗೆ ಕಳುಹಿಸಲಾಗಿದೆ. ಮುಡಾದಲ್ಲಿ ಅಪಾರವಾದ ಭ್ರಷ್ಟಾಚಾರ ನಡೆದಿದೆ ಎಂಬುದನ್ನು ಇದೆಲ್ಲವೂ ತೋರಿಸುತ್ತದೆ ಎಂದು ವಿಶ್ಲೇಷಿಸಿದರು.
ಮುಖ್ಯಮಂತ್ರಿ ಕುಟುಂಬವೇ ಪಾಲ್ಗೊಂಡ ಇಂಥ ಹಗರಣವನ್ನು ಮುಚ್ಚಿ ಹಾಕುವ ಉದ್ದೇಶ ಸರ್ಕಾರದ್ದು. ಮೊದಲು ಎಸ್‍ಐಟಿಗೆ ತನಿಖೆಯನ್ನು ಕೊಡಲಾಗಿತ್ತು. ಕೋರ್ಟ್ ಆದೇಶವಾಗಿದ್ದರೂ ಎಸ್‍ಐಟಿ ಈ ಕೇಸನ್ನು ವಾಪಸ್ ಪಡೆದಿಲ್ಲ. ಐಎಎಸ್ ಅಧಿಕಾರಿಗಳ ತಂಡ ತನಿಖೆ ಮಾಡಲಿದೆ ಎಂದು ಹೇಳಲಾಗಿತ್ತು. ಅದನ್ನೂ ವಾಪಸ್ ತೆಗೆದುಕೊಂಡಿಲ್ಲ ಎಂದು ತಿಳಿಸಿದರು.
ಲೋಕಾಯುಕ್ತ ಕೂಡ ತನ್ನ ಕೆಲಸ ಪ್ರಾರಂಭಿಸಿತ್ತು. ಆದರೆ ಲೋಕಾಯುಕ್ತದ ಬಗ್ಗೆ ನನಗೆ ನನ್ನದೇ ಆದ ಅನುಮಾನವಿದೆ. ಇದುವರೆಗೂ ಕೂಡ ಯಾರನ್ನೂ ಕರೆದು ತನಿಖೆಗೆ ಒಳಪಡಿಸಿಯೇ ಇಲ್ಲ. ಕೋರ್ಟ್ ಆದೇಶಗಳನ್ನು ಮೀರಿ ಲೋಕಾಯುಕ್ತ ಇದರಲ್ಲಿ ಒಳಗೊಳ್ಳುತ್ತಿದೆ ಎಂದು ಅನುಮಾನ ಕಾಡುತ್ತಿದೆ ಎಂದು ನಾರಾಯಣಸ್ವಾಮಿ ಅನಿಸಿಕೆ ವ್ಯಕ್ತಪಡಿಸಿದರು.
ಕೋಲ್ಕತ್ತಾ: ಆರ್.ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (RG Kar Medical College and Hospital) ಕರ್ತವ್ಯನಿರತ ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂಜಯ್ ರಾಯ್ ವಿರುದ್ಧ ಕೇಂದ್ರೀಯ ತನಿಖಾ ದಳ (CBI) ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದೆ.
ಸೋಮವಾರ ಮಧ್ಯಾಹ್ನ ಸೀಲ್ದಾಹ್‌ನಲ್ಲಿರುವ ಕೋಲ್ಕತ್ತಾದ ವಿಶೇಷ ನ್ಯಾಯಾಲಯಕ್ಕೆ ಸಿಬಿಐ ದೋಷಾರೋಪ ಪಟ್ಟಿ (Chargesheet) ಸಲ್ಲಿಸಿದೆ. ವಿರಾಮದ ಸಮಯದಲ್ಲಿ ಟ್ರೈನಿ ವೈದ್ಯೆ ಆಸ್ಪತ್ರೆ ಸೆಮಿನಾರ್ ಕೊಠಡಿಯಲ್ಲಿ ವಿಶ್ರಾಂತಿಗೆ ಹೋದಾಗ ಆರೋಪಿ ಕೃತ್ಯ ಎಸಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಿಬಿಐ ಮೂಲಗಳ ಪ್ರಕಾರ, ಚಾರ್ಚ್ಶೀಟ್‌ನಲ್ಲಿ ಆರೋಪಿ ಸಂಜಯ್ ರಾಯ್ ಹೆಸರಿಸಿರುವ ಸುಮಾರು 200 ಜನರ ಹೇಳಿಕೆಗಳನ್ನ ದಾಖಲಿಸಲಾಗಿದೆ. ಈ ಸಂದರ್ಭದಲ್ಲಿ ಕೆಲವರು ಗ್ಯಾಂಗ್ ರೇಪ್ ಆಗಿರಬಹುದು ಎಂದು ಶಂಕಿಸಿ ಹೇಳಿಕೆ ನೀಡಿದ್ದಾರೆ ಎಂದು ಚಾರ್ಚ್ಶೀಟ್‌ನಲ್ಲಿ ಉಲ್ಲೇಖಿಸಿರುವುದಾಗಿ ವರದಿಯಾಗಿದೆ.
ಆಗಸ್ಟ್ 9ರಂದು ಟ್ರೈನಿ ವೈದ್ಯೆ ಹತ್ಯೆಗೀಡಾದ ನಂತರ ತನಿಖಾ ಹಂತದಲ್ಲಿ ಒಂದೊಂದೇ ಭಯಾನಕ ಸತ್ಯಗಳು ಬಯಲಾಗುತ್ತಾ ಹೋದವು. ಇದರಿಂದ ದೇಶವ್ಯಾಪಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಇದರಿಂದ ಎಚ್ಚೆತ್ತ ಹೈಕೋರ್ಟ್ ಕೋಲ್ಕತ್ತಾ ಪೊಲೀಸರಿಂದ ಸಿಬಿಐಗೆ ತನಿಖೆ ವಹಿಸುವಂತೆ ಸೂಚಿಸಿತು. ಬಳಿಕ ಆರೋಪಿ ಹೇಳಿಕೆ ಆಧರಿಸಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಸಿಬಿಐ ಅಂದಿನ ಪ್ರಾಂಶುಪಾಲನಾಗಿದ್ದ ಸಂದೀಪ್ ಘೋಷ್ ಅವರನ್ನೂ ಬಂಧಿಸಿ ತನಿಖೆ ನಡೆಸಿತು.
ಕೋಲ್ಕತ್ತಾ ಪ್ರಕರಣ ಏನು?
ಕಳೆದ ಆ.9ರಂದು ಬೆಳಗ್ಗೆ ಸ್ನಾತಕೋತ್ತರ ತರಬೇತಿ ನಿರತ ವೈದ್ಯೆಯ ಶವ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ರೀತಿಯಲ್ಲಿ ಪತ್ತೆಯಾಗಿತ್ತು. ಬಳಿಕ ಕೃತ್ಯ ನಡೆಸಿದ್ದ ಆರೋಪಿ ಸಂಜಯ್‌ನನ್ನು ಪೊಲೀಸರು ಬಂಧಿಸಿದ್ದರು. ಅಶ್ಲೀಲ ವೀಡಿಯೋಗಳಿಗೆ ವ್ಯಸನಿಯಾಗಿದ್ದ ಸಂಜಯ್ ಕೊಲೆಯ ನಂತರ ಸಾಕ್ಷ್ಯ ನಾಶಪಡಿಸಲು ರಕ್ತಸಿಕ್ತ ಬಟ್ಟೆಯನ್ನು ತೊಳೆದಿದ್ದ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದರು. ಈ ಹಿಂದೆ ಪೊಲೀಸ್ ಸ್ವಯಂ ಸೇವಕನಾಗಿದ್ದ ಈತ 4 ಬಾರಿ ಮದುವೆಯಾಗಿದ್ದು, ಪತ್ನಿಯರಿಗೆ ಆಗಾಗ ಕಿರುಕುಳ ನೀಡುತ್ತಿದ್ದ ಎಂದು ತನಿಖೆಯಿಂದ ತಿಳಿದುಬಂದಿತ್ತು. ಈ ಪ್ರಕರಣದ ತನಿಖೆ ಹೊಣೆ ಹೊತ್ತಿದ್ದ ಸಿಬಿಐ ಇದೀಗ ದೋಷಾರೋಪ ಪಟ್ಟಿ ಸಲ್ಲಿಸಿದೆ.