Tag: ಸಿಬಿಐ

  • NEET: ಪರೀಕ್ಷಾ ಮಂಡಳಿ ಟ್ರಂಕ್‌ನಿಂದ ಪ್ರಶ್ನೆಪತ್ರಿಕೆ ಕದ್ದಿದ್ದ ಎಂಜಿನಿಯರ್‌ ಬಂಧನ

    NEET: ಪರೀಕ್ಷಾ ಮಂಡಳಿ ಟ್ರಂಕ್‌ನಿಂದ ಪ್ರಶ್ನೆಪತ್ರಿಕೆ ಕದ್ದಿದ್ದ ಎಂಜಿನಿಯರ್‌ ಬಂಧನ

    ನವದೆಹಲಿ: ಬಿಹಾರದ ಹಜಾರಿಬಾಗ್‌ನಲ್ಲಿರುವ ಪರೀಕ್ಷಾ ಮಂಡಳಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯ (NTA) ಟ್ರಂಕ್‌ನಿಂದ ನೀಟ್-ಯುಜಿ (NEET) ಪೇಪರ್ ಕದ್ದಿದ್ದ ವ್ಯಕ್ತಿಯೊಬ್ಬನನ್ನು ಸಿಬಿಐ (CBI) ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.

    ಪೇಪರ್ ಕದ್ದ ಪಂಕಜ್ ಕುಮಾರ್ ಎಂಬಾತನನ್ನು ಪಾಟ್ನಾದಲ್ಲಿ ಬಂಧಿಸಲಾಗಿದೆ. ಈತ 2017 ರಲ್ಲಿ ಎನ್‌ಐಟಿ ಜೆಮ್‌ಶೆಡ್‌ಪುರದಲ್ಲಿ ಸಿವಿಲ್ ಎಂಜಿನಿಯರಿಂಗ್ ಮಾಡಿದ್ದ. ಆತನ ಸಹಚರ ರಾಜು ಸೋರಿಕೆಯಾದ ಪ್ರಶ್ನೆಪತ್ರಿಕೆ ಹಂಚಿದ್ದಾನೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಹರಿಯಾಣದಲ್ಲಿ ಮುಸ್ಲಿಂ ಮೀಸಲಾತಿಗೆ ಬಿಜೆಪಿ ಅವಕಾಶ ನೀಡಲ್ಲ: ಅಮಿತ್‌ ಶಾ

    ಹಜಾರಿಬಾಗ್‌ನ ಓಯಸಿಸ್ ಶಾಲೆಯಿಂದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಸಿಬಿಐ ತನಿಖೆಯಿಂದ ಬೆಳಕಿಗೆ ಬಂದಿದೆ. ಒಂಬತ್ತು ಸೆಟ್ ಪ್ರಶ್ನೆ ಪತ್ರಿಕೆಗಳನ್ನು ಎಸ್‌ಬಿಐ ಹಜಾರಿಬಾಗ್‌ನಿಂದ ವಿವಿಧ ಕೇಂದ್ರಗಳಿಗೆ ರವಾನಿಸಲಾಗಿದೆ. ಓಯಸಿಸ್ ಶಾಲಾ ಕೇಂದ್ರವನ್ನು ತಲುಪಿದ್ದ ಪ್ರಶ್ನೆಪತ್ರಿಕೆಗಳ ಸೀಲುಗಳನ್ನು ತೆಗೆದಂತಿತ್ತು. ಆದರೆ ಅಲ್ಲಿನ ಸಿಬ್ಬಂದಿ ಈ ಬಗ್ಗೆ ಯಾವುದೇ ಮಾಹಿತಿ ನೀಡಲಿಲ್ಲ. ಹೀಗಾಗಿ ಪ್ರಕರಣದಲ್ಲಿ ಅವರನ್ನೂ ಪಾತ್ರಧಾರಿಗಳು ಎಂದು ಪರಿಗಣಿಸಲಾಗಿದೆ ಎಂದು ಸಿಬಿಐ ತಿಳಿಸಿದೆ.

    ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸುವ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ, ಹಲವು ಎಫ್‌ಐಆರ್‌ಗಳನ್ನು ದಾಖಲಿಸಿಕೊಂಡಿದ್ದು, ಇದುವರೆಗೆ ಸುಮಾರು 60 ಮಂದಿಯನ್ನು ಬಂಧಿಸಿದೆ. ಇದನ್ನೂ ಓದಿ: Jammu Terrorist Attack: ಜಮ್ಮುವಿನಲ್ಲಿ ದಿಢೀರ್‌ ಭಯೋತ್ಪಾದಕ ದಾಳಿ ಹೆಚ್ಚಾಗುತ್ತಿರುವುದು ಏಕೆ?

    ಈ ವರ್ಷದ ಮೇ 5 ರಂದು ವಿದೇಶದ 14 ಸೇರಿದಂತೆ 571 ನಗರಗಳ 4,750 ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಲಾಯಿತು. 23 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

  • 24 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ, ರಾಜ್ಯದಲ್ಲಿ NEET ಪರೀಕ್ಷೆ ರದ್ದು ಮಾಡಿ: ಐವಾನ್ ಡಿಸೋಜಾ

    24 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ, ರಾಜ್ಯದಲ್ಲಿ NEET ಪರೀಕ್ಷೆ ರದ್ದು ಮಾಡಿ: ಐವಾನ್ ಡಿಸೋಜಾ

    ಬೆಂಗಳೂರು: ರಾಜ್ಯದಲ್ಲಿ ನೀಟ್ ಪರೀಕ್ಷೆ (NEET Exam) ರದ್ದು ಮಾಡಬೇಕು ಅಂತ ಕಾಂಗ್ರೆಸ್ ‌ಸದಸ್ಯ ಐವಾನ್ ಡಿಸೋಜಾ (Ivan D’Souza) ಆಗ್ರಹಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ನೀಟ್ ರದ್ದು ಮಾಡಲು ಒತ್ತಾಯ ಮಾಡಿದ್ರು.

    ನೀಟ್ ಪರೀಕ್ಷೆಯಲ್ಲಿ ದೊಡ್ಡ ಅವ್ಯವಹಾರವಾಗಿದೆ. ಪೇಪರ್ ಲೀಕ್ ಆಗಿ 24 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ. ಹಿಂದೆ ಸಿಇಟಿ ಪರೀಕ್ಷೆ (CET Exam) ಇದ್ದಾಗ ನಮ್ಮ ಮಕ್ಕಳಿಗೆ ಹೆಚ್ಚು ಅನುಕೂಲ ಆಗ್ತಿತ್ತು. ನೀಟ್ ವ್ಯವಸ್ಥೆ ಫೆಲ್ಯೂರ್ ಸಿಸ್ಟಮ್. ಇದರಿಂದ ಮಕ್ಕಳಿಗೆ ಅನಾನುಕೂಲ. ಈ ಪರೀಕ್ಷೆಯಲ್ಲಿ ಸಾಮಾಜಿಕ ನ್ಯಾಯ ಇಲ್ಲ. ಹೀಗಾಗಿ ರಾಜ್ಯ ಸರ್ಕಾರ (Karnataka Government) ನೀಟ್ ರದ್ದು ಮಾಡಬೇಕು. ತಮ್ಮದೇ ಪರೀಕ್ಷಾ ವ್ಯವಸ್ಥೆ ಜಾರಿ ಮಾಡಬೇಕು ಅಂತ ಆಗ್ರಹಿಸಿದರು.

    ಇದಕ್ಕೆ ಸಚಿವ ಶರಣ ಪ್ರಕಾಶ್ ಪಾಟೀಲ್ ಉತ್ತರ ನೀಡಿ, ನೀಟ್‌ ಪರೀಕ್ಷೆಯಲ್ಲಿ ಅಕ್ರಮವಾಗಿದೆ. ಕೇಂದ್ರ ಸರ್ಕಾರ ಇದರಲ್ಲಿ ಎಡವಟ್ಟು ಮಾಡಿದೆ. ನೀಟ್ ಪರೀಕ್ಷೆ ಮಾಡೋದ್ರಲ್ಲಿ ಕೇಂದ್ರ ಎಡವಿದೆ. ಪೇಪರ್ ಲೀಕ್ ಆದಾಗ ನಾವು ತನಿಖೆ ಮಾಡಿ ಅಂತ ಆಗ್ರಹ ಮಾಡಿದ್ವಿ, ಕೇಂದ್ರ ಒಪ್ಪಲಿಲ್ಲ. ಬಳಿಕ ತಪ್ಪೊಪ್ಪಿಕೊಂಡು ಸಿಬಿಐ ತನಿಖೆಗೆ ಒಪ್ಪಿಸಿದೆ. ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಕೇಸ್ ಇದೇ 18ಕ್ಕೆ ವಿಚಾರಣೆಯಿದೆ. ಏನು ತೀರ್ಮಾನ ಆಗುತ್ತದೆಯೋ ನೋಡೋಣ ಎಂದರು‌. ಇದನ್ನೂ ಓದಿ: ಕಾವೇರಿ ನೀರು ಬಿಡುಗಡೆ ವಿಚಾರ; ರಾಜ್ಯ ಸರ್ಕಾರ ನಿರ್ಧಾರದ ಬೆನ್ನಲ್ಲೇ ಸರ್ವಪಕ್ಷಗಳ ಸಭೆ ಕರೆದ ತ.ನಾಡು ಸರ್ಕಾರ

    ಕೇಂದ್ರ ನಿರ್ಧಾರ ಮಾಡಬೇಕು:
    ನೀಟ್‌ ರದ್ದು ಮಾಡೋದು ಸಾಧ್ಯವಿಲ್ಲ. ನೀಟ್ ವ್ಯವಸ್ಥೆ ಸುಪ್ರೀಂ ಕೋರ್ಟ್ ಆದೇಶದಿಂದ ಆಗಿದೆ. ಕೇಂದ್ರ ಸರ್ಕಾರ ಇದನ್ನ ಕಾಯ್ದೆ ತಂದು ಮಾಡಿದೆ. ಇದನ್ನ ರದ್ದು ಮಾಡಲು ಸುಪ್ರೀಂ ಕೋರ್ಟ್ ಆದೇಶ ಮಾಡಬೇಕು. ಅಥವಾ ಕೇಂದ್ರ ಸರ್ಕಾರ ನಿರ್ಧಾರ ಮಾಡಬೇಕು ಎನ್ನುವ ಮೂಲಕ ನೀಟ್ ವ್ಯವಸ್ಥೆ ರದ್ದು ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು. ಇದನ್ನೂ ಓದಿ: Assembly Session: ಪರಿಷತ್‌ನಲ್ಲಿ ವಾಲ್ಮೀಕಿ ನಿಗಮ ಹಗರಣದ ಗದ್ದಲ; ಚರ್ಚೆಗೆ ಅವಕಾಶ ಕೊಡುವಂತೆ ಬಿಜೆಪಿ ಬಿಗಿಪಟ್ಟು!

    ಉತ್ತರ ನೀಡುವ ವೇಳೆ, ಕೇಂದ್ರದ ಮೇಲೆ ಸಚಿವ ಶರಣು ಪ್ರಕಾಶ್ ಪಾಟೀಲ್ ಆರೋಪ ಮಾಡಿದ್ರು. ಕೇಂದ್ರದ ಮೇಲೆ ಆರೋಪ ಮಾಡಿದ್ದಕ್ಕೆ ಬಿಜೆಪಿ ಸದಸ್ಯ ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಸದನದಲ್ಲಿ ಗದ್ದಲ ಗಲಾಟೆ ಆಯ್ತು. ನೀಟ್ ಪರೀಕ್ಷೆಯಲ್ಲಿ ಮಕ್ಕಳ ಭವಿಷ್ಯ ಹಾಳು ಮಾಡಿದ್ದು ಕೇಂದ್ರ ಸರ್ಕಾರ ಎಂದ ಕಾಂಗ್ರೆಸ್ ಸದಸ್ಯರು‌. ಇದಕ್ಕೆ ಸಿಇಟಿಯಲ್ಲಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೊಟ್ಟು ನೀವು ಹಾಳು ಮಾಡಿದ್ದು ಅಂತ ಬಿಜೆಪಿ ಸದಸ್ಯರು ಕಿಡಿಕಾರಿದರು. ಸದನದಲ್ಲಿ ಗದ್ದಲ ಗಲಾಟೆ ಉಂಟಾಯ್ತು. ಬಳಿಕ ಮಧ್ಯೆ ‌ಪ್ರವೇಶ ಮಾಡಿ ಅರ್ಧ ಗಂಟೆ ಚರ್ಚೆಗೆ ಅವಕಾಶ ನೀಡಿದ ಉಪ ಸಭಾಪತಿಗಳು ಗದ್ದಲಕ್ಕೆ ಬ್ರೇಕ್ ಹಾಕಿದ್ರು. ಇದನ್ನೂ ಓದಿ: ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ | ಸಿಬಿಐ ಪ್ರಕರಣ ರದ್ದಿಲ್ಲ – ಸುಪ್ರೀಂನಲ್ಲಿ ಡಿಕೆಶಿ ಅರ್ಜಿ ವಜಾ

  • ಆದಾಯ ಮೀರಿ ಆಸ್ತಿ ಗಳಿಕೆ ಕೇಸ್| ಸಿಬಿಐ ಎಫ್‌ಐಆರ್ ರದ್ದು ಮಾಡಲ್ಲ: ಸುಪ್ರೀಂ ಹೇಳಿದ್ದೇನು?

    ಆದಾಯ ಮೀರಿ ಆಸ್ತಿ ಗಳಿಕೆ ಕೇಸ್| ಸಿಬಿಐ ಎಫ್‌ಐಆರ್ ರದ್ದು ಮಾಡಲ್ಲ: ಸುಪ್ರೀಂ ಹೇಳಿದ್ದೇನು?

    ನವದೆಹಲಿ: ತನ್ನ ವಿರುದ್ಧ ಸಿಬಿಐ (CBI) ದಾಖಲಿಸಿರುವ ಅದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣವನ್ನು(Disproportionate Assets Case) ರದ್ದುಗೊಳಿಸುವಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ (Supreme Court) ಸೋಮವಾರ ವಜಾಗೊಳಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಬೇಲಾ ಎಂ ತ್ರಿವೇದಿ ಮತ್ತು ನ್ಯಾ. ಎಸ್‌ಸಿ ಶರ್ಮಾ ಅವರಿದ್ದ ದ್ವಿಸದಸ್ಯ ಪೀಠ ಅರ್ಜಿ ವಜಾ ಮಾಡಿದೆ.

    ಶಿವಕುಮಾರ್ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಮುಕುಲ್ ರೋಹಟಗಿ, ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿರುವ ಅನುಮತಿಯನ್ನು ಈಗಾಗಲೇ ರಾಜ್ಯ ಸರ್ಕಾರ ಹಿಂಪಡೆದಿದೆ. ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಅಧಿಕಾರಿಗಳು ನಮ್ಮ ಕಕ್ಷಿದಾರರನ್ನು ತನಿಖೆ ನಡೆಸುತ್ತಿದ್ದಾರೆ. ಇಡಿ ಪ್ರಕರಣವನ್ನು ಈಗಾಗಲೇ ರದ್ದು ಮಾಡಿದೆ. ಒಂದೇ ಕೇಸ್ ಅನ್ನು ಎರಡು ಸಂಸ್ಥೆಗಳು ತನಿಖೆ ಮಾಡುತ್ತಿರುವುದು ಸರಿಯಲ್ಲ ಎಂದು ವಾದಿಸಿದರು.

    ಈ ಆಕ್ಷೇಪಕ್ಕೆ ಪ್ರತಿಕ್ರಿಯಿಸಿದ ನ್ಯಾ.ಬೇಲಾ ಎಂ ತ್ರಿವೇದಿ, ಸರ್ಕಾರದ ಮಂಜೂರಾತಿ ಆದೇಶಕ್ಕೆ ಹೈಕೋರ್ಟ್ ತಡೆ ನೀಡುವುದು ಹೇಗೆ? ಇದು ಕೇಳರಿಯದ ಸಂಗತಿ. ಹೈಕೋರ್ಟ್ (High Court) ಸರಿಯಾದ ನಿರ್ಧಾರವನ್ನೇ ತೆಗೆದುಕೊಂಡಿದೆ. ಆದರೆ ನಿಮ್ಮ ಮೇಲೆ ಭ್ರಷ್ಟಾಚಾರ ತಡೆ ಕಾಯ್ದೆಯ (PC Act) ಅಡಿಯನ್ನು ಕಾನೂನು ಕ್ರಮ ಕೈಗೊಳ್ಳಲಾಗಿದೆ. ಪಿಸಿ ಆಕ್ಟ್ ಅಡಿಯಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಕಾನೂನು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಸಿಬಿಐ ತನಿಖೆ ಮಾಡಬಹುದು, ನಾವು ಇದರಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ, ಕ್ಷಮಿಸಿ ಎಂದು ಅರ್ಜಿ ವಜಾಗೊಳಿಸಿದರು. ಇದನ್ನೂ ಓದಿ: ಮುಸ್ಲಿಂ ಮಹಿಳೆ ವಿಚ್ಚೇದನ ಜೀವನಾಂಶಕ್ಕೆ ಅರ್ಹಳು: ಸುಪ್ರೀಂ ತೀರ್ಪು ಇಸ್ಲಾಮಿಕ್ ಕಾನೂನಿಗೆ ವಿರುದ್ಧವಾಗಿದೆ ಎಂದ ಮುಸ್ಲಿಂ ಬೋರ್ಡ್‌

    ಡಿಕೆ ಶಿವಕುಮಾರ್ ವಿರುದ್ಧ 2020 ರ ಅಕ್ಟೋಬರ್ 3 ರಂದು ಎಫ್‌ಐಆರ್ ದಾಖಲಾಗಿತ್ತು. ಡಿಕೆಶಿ ಆಸ್ತಿ 2013 ರಿಂದ 2018 ರವರೆಗೆ ತೀವ್ರ ಹೆಚ್ಚಾಗಿದೆ ಎಂದು ಸಿಬಿಐ ಆರೋಪಿಸಿದೆ. ಏಪ್ರಿಲ್ 2013 ರಲ್ಲಿ 33.92 ಕೋಟಿ ರೂ. ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಯನ್ನು ಹೊಂದಿದ್ದ ಡಿ.ಕೆ ಶಿವಕುಮಾರ್ 2018 ರ ವೇಳೆಗೆ 128.6 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಸಂಪಾದಿಸಿದ್ದಾರೆ. ಏಪ್ರಿಲ್ 30, 2018ರ ವೇಳೆಗೆ ಅವರ ಒಟ್ಟು ಆಸ್ತಿ ಮೌಲ್ಯ 162.53 ಕೋಟಿ ರೂ.ಗೆ ಏರಿಕೆಯಾಗಿದೆ ಎಂದು ಸಿಬಿಐ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದೆ.

     

     

    2017ರಲ್ಲಿ ಆದಾಯ ತೆರಿಗೆ ಇಲಾಖೆ ಡಿಕೆ ಶಿವಕುಮಾರ್ ಮೇಲೆ ದಾಳಿ ನಡೆಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ಡಿಕೆಶಿ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್‌ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು.  ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರ 2019ರ ಸೆ.25ರಂದು ಅನುಮತಿ ನೀಡಿದ ಬೆನ್ನಲ್ಲೇ 2020ರ ಅಕ್ಟೋಬರ್‌ 3 ರಂದು ಡಿಕೆ ಶಿವಕುಮಾರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು.

    ಅಕ್ಟೋಬರ್ 2023 ರಲ್ಲಿ ಸಿಬಿಐ ತನಿಖೆಯನ್ನು ರದ್ದುಗೊಳಿಸುವಂತೆ ಶಿವಕುಮಾರ್ ಅವರ ಮನವಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿತ್ತು. ಇದೇ ವೇಳೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಹೊಸ ಸರ್ಕಾರ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಹಿಂದಿನ ಸರ್ಕಾರ ನೀಡಿದ್ದ ಅನುಮತಿಯನ್ನು ಹಿಂಪಡೆದಿತ್ತು.

    ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರಶ್ನಿಸಿದ್ದಾರೆ. ಸಿಬಿಐ ಕೂಡಾ ಒಂದು ಅರ್ಜಿ ಸಲ್ಲಿಸಿದೆ. ಇದಕ್ಕೆ ಸಂಬಂಧಿಸಿದಂತೆ ವಾದ ಪ್ರತಿವಾದ ಅಂತ್ಯವಾಗಿದ್ದು ಆದೇಶ ಕಾಯ್ದಿರಿಸಲಾಗಿದೆ. ಒಂದು ವೇಳೆ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದರೆ ಡಿ.ಕೆ ಶಿವಕುಮಾರ್ ಅವರಿಗೆ ಸಿಬಿಐ ಸಂಕಷ್ಟ ಹೆಚ್ಚಾಗಲಿದೆ. ಸದ್ಯ ಹೈಕೋರ್ಟ್‌ ಆದೇಶದ ಮೇಲೆ ಡಿಕೆ ಶಿವಕುಮಾರ್‌ ಭವಿಷ್ಯ ನಿಂತಿದೆ.

  • ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ | ಸಿಬಿಐ ಪ್ರಕರಣ ರದ್ದಿಲ್ಲ – ಸುಪ್ರೀಂನಲ್ಲಿ ಡಿಕೆಶಿ ಅರ್ಜಿ ವಜಾ

    ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ | ಸಿಬಿಐ ಪ್ರಕರಣ ರದ್ದಿಲ್ಲ – ಸುಪ್ರೀಂನಲ್ಲಿ ಡಿಕೆಶಿ ಅರ್ಜಿ ವಜಾ

    ನವದೆಹಲಿ: ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ (Disproportionate Assets Case) ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಸಂಕಷ್ಟ ಎದುರಾಗಿದೆ. ಸಿಬಿಐ ಪ್ರಕರಣವನ್ನು ರದ್ದು ಕೋರಿ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ (Supreme Court) ವಜಾಗೊಳಿಸಿದೆ.

    ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಎಸ್‌ಸಿ ಶರ್ಮಾ ಅವರ ಪೀಠವು ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿತು.

    ಸಿಬಿಐ ದಾಖಲಿಸಿದ್ದ ಎಫ್‌ಐಆರ್‌ ಅನ್ನು ರದ್ದುಗೊಳಿಸುವಂತೆ ಕೋರಿ ಡಿಕೆಶಿ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅಕ್ಟೋಬರ್ 19, 2023 ರಂದು ಕರ್ನಾಟಕ ಹೈಕೋರ್ಟ್ ಡಿಕೆಶಿ ಅರ್ಜಿಯನ್ನು ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಡಿಕೆಶಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಇದನ್ನೂ ಓದಿ: ಬಸ್ ಟಿಕೆಟ್‌ ದರ ಏರಿಕೆ ಸದ್ಯಕ್ಕಿಲ್ಲ : ರಾಮಲಿಂಗಾ ರೆಡ್ಡಿ

    ಏನಿದು ಪ್ರಕರಣ?
    2017ರಲ್ಲಿ ಆದಾಯ ತೆರಿಗೆ ಇಲಾಖೆ ಡಿಕೆ ಶಿವಕುಮಾರ್ ಮೇಲೆ ದಾಳಿ ನಡೆಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ಡಿಕೆಶಿ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್‌ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ಸರ್ಕಾರ 2019ರ ಸೆ.25ರಂದು ಅನುಮತಿ ನೀಡಿದ ಬೆನ್ನಲ್ಲೇ 2020ರ ಅಕ್ಟೋಬರ್‌ 3 ರಂದು ಡಿಕೆ ಶಿವಕುಮಾರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಈ ಎಫ್‌ಐಆರ್‌ ಅನ್ನು ರದ್ದುಗೊಳಿಸುವಂತೆ ಕೋರಿ ಡಿಕೆಶಿ ಹೈಕೋರ್ಟ್‌, ಸುಪ್ರೀಂ ಮೊರೆ ಹೋಗಿದ್ದರು.

    ಡಿಕೆ ಶಿವಕುಮಾರ್ ಅವರು 2013 ಮತ್ತು 2018 ರ ನಡುವೆ ತಮ್ಮ ಆದಾಯಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿಯನ್ನು ಗಳಿಸಿದ್ದಾರೆ . ಈ ಅವಧಿಯಲ್ಲಿ ಅವರು ಸಚಿವರಾಗಿದ್ದರು ಎಂದು ಸಿಬಿಐ ಆರೋಪಿಸಿದೆ.

  • ನೀಟ್‌-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಮಾಸ್ಟರ್‌ಮೈಂಡ್‌ ಬಂಧನ

    ನೀಟ್‌-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಮಾಸ್ಟರ್‌ಮೈಂಡ್‌ ಬಂಧನ

    ನವದೆಹಲಿ: ನೀಟ್‌-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕಿಂಗ್‌ಪಿನ್ ಎನ್ನಲಾದ ರಾಕೇಶ್ ರಂಜನ್ ಅಲಿಯಾಸ್ ರಾಕಿ ಎಂಬಾತನನ್ನು ಸಿಬಿಐ (CBI) ಬಂಧಿಸಿದೆ.

    ಆರೋಪಿ ರಂಜನ್‌ನನ್ನು 10 ದಿನಗಳ ಕಾಲ ಏಜೆನ್ಸಿ ಕಸ್ಟಡಿಗೆ ಕಳುಹಿಸಲಾಗಿದೆ. ಈ ಪ್ರಕರಣದಲ್ಲಿ ಬಿಹಾರದ ಪಾಟ್ನಾ ಬಳಿ ಎರಡು ಮತ್ತು ಪಶ್ಚಿಮ ಬಂಗಾಳದ ಕೋಲ್ಕತ್ತಾ ಬಳಿ ಎರಡು ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ರಾಕಿಯನ್ನು ಹೊರತುಪಡಿಸಿ ಎಂಟು ಜನರನ್ನು ಬಂಧಿಸಿದೆ. ಇದನ್ನೂ ಓದಿ: Godhra NEET Case | ಅನ್ಯರಾಜ್ಯಗಳ ವಿದ್ಯಾರ್ಥಿಗಳಿಗೆ ಗುಜುರಾತಿಯಲ್ಲಿ ನೀಟ್ ಬರೆಯಲು ಸೂಚನೆ – ಸಿಬಿಐ ಮಹತ್ವದ ಮಾಹಿತಿ

    ಜಾರ್ಖಂಡ್‌ನ ಹಜಾರಿಬಾಗ್‌ನ ಶಾಲೆಯೊಂದರ ಪ್ರಾಂಶುಪಾಲರು ಮತ್ತು ಉಪಪ್ರಾಂಶುಪಾಲರು ಸೇರಿದಂತೆ ಹನ್ನೆರಡು ಜನರನ್ನು ಇದುವರೆಗೆ ಬಂಧಿಸಲಾಗಿದೆ. ವಿವಿಧ ರಾಜ್ಯ ಪೊಲೀಸ್ ಪಡೆಗಳು ಮತ್ತು ಸಿಬಿಐ, NEET ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆಯಂತಹ ರಾಷ್ಟ್ರೀಯ ದಂಧೆಗಳ ಬಗ್ಗೆ ತನಿಖೆ ನಡೆಸುತ್ತಿವೆ.

    ರಾಷ್ಟ್ರವ್ಯಾಪಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ದಂಧೆಯ ತನಿಖೆಯ ಕಾರ್ಯವನ್ನು ಸಿಬಿಐ ವಹಿಸಿಕೊಂಡಿದ್ದು, ಬಿಹಾರದಲ್ಲಿ ಮೂರು ಪ್ರತ್ಯೇಕ ಪ್ರಕರಣಗಳಿಗೆ ಆರು ಎಫ್‌ಐಆರ್‌ಗಳನ್ನು ದಾಖಲಿಸಿದೆ. ನೀಟ್ ಪೇಪರ್ ಸೋರಿಕೆ ಮೂಲ ಹಜಾರಿಬಾಗ್ ಶಾಲೆ. ಅಲ್ಲಿಂದ ಸೋರಿಕೆಯಾದ ಪೇಪರ್‌ಗಳು ಬಿಹಾರಕ್ಕೂ ಬಂದಿವೆ ಎಂದು ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ – ಸಚಿವೆ ಶೋಭಾ ಕರಂದ್ಲಾಜೆಗೆ ಮದ್ರಾಸ್ ಹೈಕೋರ್ಟ್ ತರಾಟೆ

  • ವಾಲ್ಮೀಕಿ ನಿಗಮದಲ್ಲಿ ಅಕ್ರಮ; ಸಿಬಿಐನಿಂದ ತನಿಖೆ ತೀವ್ರಗೊಳಿಸಿ – ಅಮಿತ್ ಶಾಗೆ ಶೋಭಾ ಕರಂದ್ಲಾಜೆ ಪತ್ರ

    ವಾಲ್ಮೀಕಿ ನಿಗಮದಲ್ಲಿ ಅಕ್ರಮ; ಸಿಬಿಐನಿಂದ ತನಿಖೆ ತೀವ್ರಗೊಳಿಸಿ – ಅಮಿತ್ ಶಾಗೆ ಶೋಭಾ ಕರಂದ್ಲಾಜೆ ಪತ್ರ

    ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ (Valmiki Development Corporation) ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರಿಗೆ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಮನವಿ ಮಾಡಿದ್ದಾರೆ.

    ಈ ಬಗ್ಗೆ ಪತ್ರ ಬರೆದಿರುವ ಅವರು, ಪ್ರಕರಣದಲ್ಲಿ ಯೂನಿಯನ್ ಬ್ಯಾಂಕ್ ಶಾಮೀಲಾಗಿದೆ ಎನ್ನಲಾಗಿದೆ. ಯೂನಿಯನ್ ಬ್ಯಾಂಕ್ ಮತ್ತು ಇತರೆ ಹಣಕಾಸು ಸಂಸ್ಥೆಗಳ ಪಾತ್ರದ ತನಿಖೆಯಾಗಬೇಕು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಸಮಗ್ರ ತನಿಖೆ ಮಾಡಿಸಿ ಹಗರಣದಲ್ಲಿ ಭಾಗಿಯಾದವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ಹಗರಣ – ಬಳ್ಳಾರಿಯಲ್ಲಿ ನಾಗೇಂದ್ರ ಆಪ್ತರಿಗೆ ಡ್ರಿಲ್‌, 2 ಬ್ಯಾಗ್‌ ದಾಖಲೆಯೊಂದಿಗೆ ತೆರಳಿದ ಅಧಿಕಾರಿಗಳು

    ಚಂದ್ರಶೇಖರ್ ಆತ್ಮಹತ್ಯೆಗೆ ಕಾರಣ ಪತ್ತೆಹಚ್ಚಬೇಕು. ಅವರ ಕುಟುಂಬಕ್ಕೆ ನೆರವು ಖಾತ್ರಿಪಡಿಸಬೇಕು. ಭವಿಷ್ಯದಲ್ಲಿ ಇಂತಹ ಕೃತ್ಯಗಳನ್ನು ತಡೆಯಲು ಕ್ರಮವಹಿಸಬೇಕು. ಸರ್ಕಾರದ ವಿವಿಧ ಅಭಿವೃದ್ಧಿ ನಿಧಿಗಳ ಮೇಲ್ವಿಚಾರಣೆ ಮಾಡಬೇಕು. ಇದಕ್ಕೆ ಸಂಬಂಧಿಸಿದಂತೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ‌.

    ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್‌ ಖಾತೆಯಿಂದ ಬಹುಕೋಟಿ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಶಾಸಕ ನಾಗೇಂದ್ರ ವಿರುದ್ಧ ಆರೋಪ ಕೇಳಿಬಂದಿದೆ. ಪರಿಣಾಮವಾಗಿ ಅವರು ಸಚಿವ ಸ್ಥಾನವನ್ನು ಕಳೆದುಕೊಳ್ಳುವಂತಾಯಿತು. ಜೊತೆಗೆ ನಿಗಮದ ಅಧ್ಯಕ್ಷರಾದ, ಶಾಸಕ ಬಸನಗೌಡ ದದ್ದಲ್‌ ವಿರುದ್ಧವೂ ಆರೋಪವಿದೆ. ಈ ಹಿನ್ನೆಲೆಯಲ್ಲಿ ಬುಧವಾರ ನಸುಕಿನ ವೇಳೆ ಇಬ್ಬರೂ ನಾಯಕರು ಹಾಗೂ ಅವರ ಆಪ್ತರ ಮನೆ, ಕಚೇರಿಗಳ ಮೇಲೆ ಇಡಿ ದಾಳಿ ನಡೆಸಿ ಪರಿಶೀಲಿಸಿದೆ. ಜೊತೆಗೆ ನಿಗಮದ ಅಧಿಕಾರಿಗಳ ಮನೆಗಳ ಮೇಲೂ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದೆ. ಇದನ್ನೂ ಓದಿ: Valmiki Scam | ಮಾಲ್‌, ಪಾರ್ಕ್‌, ಜಂಕ್ಷನ್‌ನಲ್ಲಿ ಕೋಟಿ ಕೋಟಿ ಸಂದಾಯ

  • Godhra NEET Case | ಅನ್ಯರಾಜ್ಯಗಳ ವಿದ್ಯಾರ್ಥಿಗಳಿಗೆ ಗುಜುರಾತಿಯಲ್ಲಿ ನೀಟ್ ಬರೆಯಲು ಸೂಚನೆ – ಸಿಬಿಐ ಮಹತ್ವದ ಮಾಹಿತಿ

    Godhra NEET Case | ಅನ್ಯರಾಜ್ಯಗಳ ವಿದ್ಯಾರ್ಥಿಗಳಿಗೆ ಗುಜುರಾತಿಯಲ್ಲಿ ನೀಟ್ ಬರೆಯಲು ಸೂಚನೆ – ಸಿಬಿಐ ಮಹತ್ವದ ಮಾಹಿತಿ

    ನವದೆಹಲಿ: ಒಡಿಶಾ, ಬಿಹಾರ, ಮಹಾರಾಷ್ಟ್ರ, ರಾಜಸ್ಥಾನ ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳ ಹಲವಾರು NEET-UG ಅಭ್ಯರ್ಥಿಗಳು ಗುಜರಾತ್‌ನ ಗೋಧ್ರಾದಲ್ಲಿರುವ (Godhra NEET Case) ಕೇಂದ್ರದಲ್ಲಿ ತಮ್ಮ ಪರೀಕ್ಷೆ ಬರೆದಿದ್ದು, ಗುಜುರಾತಿಯನ್ನು (Gujarati) ಪರೀಕ್ಷಾ ಭಾಷೆಯಾಗಿ ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಸಿಬಿಐ ಹೇಳಿದೆ.

    ಪರೀಕ್ಷಾ ಪ್ರಕ್ರಿಯೆಯ ಭಾಗವಾಗಿದ್ದ ಇಬ್ಬರು ಗುಜರಾತಿ ವ್ಯಕ್ತಿಗಳನ್ನು ಕಸ್ಟಡಿಗೆ ಕೋರುವಾಗ ಗುಜರಾತ್ ನ್ಯಾಯಾಲಯದಲ್ಲಿ (Gujarat Court) ಸಿಬಿಐ ಈ ಅಂಶವನ್ನು ಬಹಿರಂಗಪಡಿಸಿದೆ. ಈ ಇಬ್ಬರು ಆರೋಪಿಗಳು ಇತರೆ ರಾಜ್ಯಗಳ ವಿದ್ಯಾರ್ಥಿಗಳಿಗೆ ಶಾಶ್ವತ ವಿಳಾಸವನ್ನು ಪಂಚಮಹಲ್ ಅಥವಾ ವಡೋದರಾ ಎಂದು ತೋರಿಸಲು ಸೂಚಿದ್ದರು. ಈ ಎರಡು ಕೇಂದ್ರಗಳಲ್ಲಿ ಅಕ್ರಮ ನಡೆಸಲಾಗಿದೆ ಎಂದು ಸಿಬಿಐ (CBI) ಹೇಳಿದೆ.

    ಎರಡೂ ಪರೀಕ್ಷಾ ಕೇಂದ್ರಗಳ ನಿಯಂತ್ರಣ ಒಬ್ಬರೇ ನಿರ್ವಾಹಕರದ್ದಾಗಿದ್ದು, ವಿವಿಧ ರಾಜ್ಯಗಳ ಎಲ್ಲ ಅಭ್ಯರ್ಥಿಗಳನ್ನು ಆರೋಪಿಗಳು ವಿವಿಧ ಲಿಂಕ್‌ಗಳ ಮೂಲಕ ಸಂಪರ್ಕಿಸಿದ್ದಾರೆ. ಮೇ 5 ರಂದು ನಡೆದ NEET-UG ಪರೀಕ್ಷೆಗೆ ಗೊತ್ತುಪಡಿಸಿದ ಕೇಂದ್ರಗಳಲ್ಲಿ ಒಂದಾದ ಗೋದ್ರಾದ ಜೈ ಜಲರಾಮ್ ಶಾಲೆಯಲ್ಲಿ ಅಕ್ರಮ ನಡೆಸಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ – ಸಚಿವೆ ಶೋಭಾ ಕರಂದ್ಲಾಜೆಗೆ ಮದ್ರಾಸ್ ಹೈಕೋರ್ಟ್ ತರಾಟೆ

    ಸಾಂದರ್ಭಿಕ ಚಿತ್ರ
    ಸಾಂದರ್ಭಿಕ ಚಿತ್ರ

    ಶಾಲೆಯ ಮಾಲೀಕ ದೀಕ್ಷಿತ್ ಪಟೇಲ್ ಸೇರಿದಂತೆ ಆರು ಆರೋಪಿಗಳ ಪೈಕಿ ಐವರನ್ನು ಈಗಾಗಲೇ ಸಿಬಿಐ ತನ್ನ ಕಸ್ಟಡಿಗೆ ತೆಗೆದುಕೊಂಡಿದೆ. ದೀಕ್ಷಿತ್ ಪಟೇಲ್ ನೀಟ್-ಯುಜಿ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಪ್ರತಿ ವಿದ್ಯಾರ್ಥಿಯಿಂದ 10 ಲಕ್ಷ ರೂ. ಪಡೆದಿದ್ದಾರೆ ಎಂದು ಸಿಬಿಐ ಹೇಳಿದ್ದು, ಕಳೆದ ತಿಂಗಳು ಗುಜರಾತ್ ಪೊಲೀಸರಿಂದ ಪ್ರಕರಣದ ತನಿಖೆಯನ್ನು ವಹಿಸಿಕೊಂಡ ಬಳಿಕ ಈಗ ದೊಡ್ಡ ಪಿತೂರಿಯ ಭಾಗವಾಗಿ ಅಂತರರಾಜ್ಯ ಸಂಪರ್ಕಗಳನ್ನು ಬಯಲಿಗೆಳೆಯುವತ್ತ ಗಮನ ಹರಿಸಿದೆ. ಇದನ್ನೂ ಓದಿ: ಆರ್ಕಿಟೆಕ್ಚರ್ ಕೋರ್ಸ್ ಅರ್ಹತಾ ಅಂಕ ಶೇ.45ಕ್ಕೆ ಇಳಿಕೆ – ಅರ್ಜಿ ಸಲ್ಲಿಸಲು ಜು.13 ರವರೆಗೆ ಅವಕಾಶ: ಕೆಇಎ

    ವೈದ್ಯಕೀಯ ಕೋರ್ಸ್‌ಗಳಿಗೆ ನಡೆಯುವ ಪ್ರವೇಶ ಕೋರ್ಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ, ಇದುವರೆಗೆ ಆರು ಎಫ್‌ಐಆರ್‌ಗಳನ್ನು ದಾಖಲಿಸಿ 11 ಜನರನ್ನು ಬಂಧಿಸಿದೆ. ಬಿಹಾರದಲ್ಲಿ ದಾಖಲಾದ ಎಫ್‌ಐಆರ್ ಪೇಪರ್ ಸೋರಿಕೆಗೆ ಸಂಬಂಧಿಸಿದ್ದು, ಗುಜರಾತ್, ರಾಜಸ್ಥಾನ ಮತ್ತು ಮಹಾರಾಷ್ಟ್ರದಲ್ಲಿ ದಾಖಲಾದ ಎಫ್‌ಐಆರ್ ಅಭ್ಯರ್ಥಿಗಳ ವಂಚನೆಗೆ ಸಂಬಂಧಿಸಿವೆ. ಇದನ್ನೂ ಓದಿ: ನಟ ದರ್ಶನ್‌ ಬಂಧನವಾಗಿ ಒಂದು ತಿಂಗಳು ಪೂರ್ಣ – ಅರೆಸ್ಟ್‌ ದಿನದಿಂದ ಇಲ್ಲಿವರೆಗೆ ಏನೇನಾಯ್ತು? ಇಲ್ಲಿದೆ ಟೈಮ್‌ಲೈನ್‌!

  • MUDA Scam | ಸರ್ಕಾರದ ವಿರುದ್ಧ ಸಮರ ಸಾರಿದ ವಿಜಯೇಂದ್ರ – ಶುಕ್ರವಾರ ಮೈಸೂರಲ್ಲಿ ಬೃಹತ್‌ ಪ್ರತಿಭಟನೆಗೆ ಕರೆ!

    MUDA Scam | ಸರ್ಕಾರದ ವಿರುದ್ಧ ಸಮರ ಸಾರಿದ ವಿಜಯೇಂದ್ರ – ಶುಕ್ರವಾರ ಮೈಸೂರಲ್ಲಿ ಬೃಹತ್‌ ಪ್ರತಿಭಟನೆಗೆ ಕರೆ!

    – ಬಡ ಹೆಣ್ಮಕ್ಕಳಿಗೆ 2,000 ಕೊಟ್ಟು, ತಮ್ಮ ಪತ್ನಿಗೆ 2 ಕೋಟಿಗೂ ಅಧಿಕ ಮೌಲ್ಯದ ನಿವೇಶನ ಕೊಟ್ಟಿದ್ದಾರೆ
    – ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು – ವಿಜಯೇಂದ್ರ ಆಗ್ರಹ

    ಬೆಂಗಳೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ)ದ ಅಕ್ರಮವನ್ನು ಖಂಡಿಸಿ ಬಿಜೆಪಿ ವತಿಯಿಂದ ಇದೇ ಜು.12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ ವಿಜಯೇಂದ್ರ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

    ಬೆಂಗಳೂರು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮನಬಂದಂತೆ ನಿವೇಶನ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಈ ಹಗರಣವನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಜು.12ರಂದು ನಾನು, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ಬಿಜೆಪಿ ಶಾಸಕರು, ಕಾರ್ಯಕರ್ತರು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎಂದು ಎಚ್ಚರಿಸಿದರು.

    ಮುಖ್ಯಮಂತ್ರಿಗಳು ಬಡವರ ಬಗ್ಗೆ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ. ಬಡವರಿಗೆ ನಿವೇಶನ ಹಂಚಬೇಕು. ಈಗಾಗಲೇ ನಡೆದ ನಿವೇಶನ ಹಂಚಿಕೆಯನ್ನು ರದ್ದು ಮಾಡಬೇಕು. ಸಿಎಂ, ಅವರ ಪತ್ನಿ ಮೇಲೆ ಆರೋಪ ಇರುವ ಕಾರಣ ಮತ್ತೊಂದು ಎಸ್‍ಐಟಿ ಮಾಡಿ ತನಿಖೆ ನಡೆಸುವುದು ಸೂಕ್ತವಲ್ಲ. ಈ ಬಾರಿ ಹಗರಣದ ಸಮಗ್ರ ತನಿಖೆಯನ್ನು ಸಿಬಿಐಗೆ ಕೊಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು. ಇದನ್ನೂ ಓದಿ: ವಿಚ್ಛೇದಿತ ಮುಸ್ಲಿಂ ಮಹಿಳೆಯರು ಜೀವನಾಂಶ ಪಡೆಯಲು ಅರ್ಹರು: ಸುಪ್ರೀಂ ಮಹತ್ವದ ತೀರ್ಪು

    ಶಾಸಕರು, ಸಿಎಂ ಪರಮಾಪ್ತರು ಬುಧವಾರ ಪ್ರೆಸ್‌ಮೀಟ್‌ ಮಾಡಿದ್ದಾರೆ. 1992ರಲ್ಲಿ ಭೂ ವಶಕ್ಕೆ ಪಡೆಯುವ ಕೆಲಸ ಶುರುವಾಗಿದೆ. 2004ರಲ್ಲಿ ಪಾರ್ವತಮ್ಮ ಅವರ ಅಣ್ಣ ಜಮೀನು ಖರೀದಿ ಮಾಡಿದ್ದಾರೆ. ಮೂಡಾ ಸ್ವಾಧೀನದಲ್ಲಿದ್ದ ಜಾಗವನ್ನು ಮಲ್ಲಿಕಾರ್ಜುನ ಸ್ವಾಮಿ ಅವರು ಖರೀದಿ ಮಾಡಿದ್ದು ಹೇಗೆ? 2009 – 10ರಲ್ಲಿ ಗಿಫ್ಟ್ ಡೀಡ್ ಆದಾಗಲೂ ಸಹ ಈ ಜಾಗವು ಮೂಡಾ ಆರ್‌ಟಿಸಿಯಲ್ಲಿ ನಮೂದಾಗಿತ್ತು. ಭೂಮಿ ಖರೀದಿ ಆಗಿ ಕನ್ವರ್ಷನ್ ಆಗಿತ್ತು. ಗಿಫ್ಟ್ ಡೀಡ್ ಎಂದು ಮಾಹಿತಿ ಕೊಡುವಾಗಲೂ ಅದು ಕೃಷಿ ಭೂಮಿ ಆಗಿರಲಿಲ್ಲ. ಇದು ಕೂಡ ತಪ್ಪು ಮಾಹಿತಿ ಎಂದು ವಿಜಯೇಂದ್ರ ಮಾಹಿತಿ ನೀಡಿದರು.

    2 ನಿವೇಶನಕ್ಕೆ ಅರ್ಹತೆ – 14 ನಿವೇಶನ ಹಂಚಿಕೆ:
    2022ರ ಜನವರಿ 12ರಂದು ಕ್ರಯಪತ್ರ ಆಗಿದ್ದು, ಇದರಲ್ಲಿ ಗಮನಿಸಬೇಕಾದ ಅಂಶ ಏನೆಂದರೆ ಮೂಡಾ ಪ್ರೋತ್ಸಾಹದಾಯಕ ಯೋಜನೆಯಡಿಯಲ್ಲಿ ನಿಯಮಗಳು 1991ರ ಮೇರೆಗೆ ಎಂದು ಉಲ್ಲೇಖಿಸಿ 14 ಸೈಟ್ ಕೊಟ್ಟಿದ್ದಾರೆ. ಇದು ಕ್ರಯಪತ್ರದಲ್ಲಿ ಉಲ್ಲೇಖವಾಗಿದೆ. ಆದರೆ, 1991ರ ಕಾನೂನು ಪ್ರಕಾರ ಅವರಿಗೆ 1 ಎಕರೆ ಮೀರಿದ ಜಮೀನಾದರೆ 40-60 ಒಂದೇ ನಿವೇಶನ ಕೊಡಬೇಕು. 3ರಿಂದ 4 ಎಕರೆ ಆಗಿದ್ದರೆ 4,800 ಅಡಿಯ ನಿವೇಶನ (40-60ರ 2 ನಿವೇಶನ) ಕೊಡಬೇಕಿತ್ತು. ಮುಖ್ಯಮಂತ್ರಿಯವರ ಧರ್ಮಪತ್ನಿ ಪಾರ್ವತಮ್ಮ ಅವರಿಗೆ 2 ನಿವೇಶನ ಮಾತ್ರ ಕೊಡಬೇಕಿತ್ತು. 2 ನಿವೇಶನದ ಬದಲು 14 ನಿವೇಶನ ಕೊಟ್ಟಿದ್ದು, ಇದು ಸಂಪೂರ್ಣ ಕಾನೂನುಬಾಹಿರ ಎಂದು ವಿಜಯೇಂದ್ರ ಅವರು ವಿಜಯೇಂದ್ರ ಆಕ್ಷೇಪಿಸಿದರು.

    ಮೈಸೂರಿನದ್ದು ಲ್ಯಾಂಡ್ ಸ್ಕ್ಯಾಮ್:
    ಮುಡಾ ಪ್ರಾಧಿಕಾರದ ಭೂಮಿ ಸಂಬಂಧ ದೊಡ್ಡ ಹಗರಣ ಅಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಸಿದ್ದರಾಮಯ್ಯನವರು ಅನೇಕ ತಪ್ಪು ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿಗಳ ಮುಖವಾಡ ಕಳಚಿಬಿದ್ದಿದೆ. ಹೇಗಾದರೂ ಬೆಲೆಬಾಳುವ ನಿವೇಶನ ಕಬಳಿಸಬೇಕು ಎಂದುಕೊಂಡು ನಿಯಮ ಗಾಳಿಗೆ ತೂರಿ ಅಕ್ರಮ ನಡೆಸಿದ್ದಾರೆ. ಈ ವಿಷಯದಲ್ಲಿ ಮುಖ್ಯಮಂತ್ರಿಗಳು ಜನತೆಗೆ ಉತ್ತರಿಸಬೇಕು. ಈ ಹಗರಣಕ್ಕೆ ಹೊಣೆ ಹೊರಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: 2.5 ಕೋಟಿ ನಗದು ಬಹುಮಾನ ನಿರಾಕರಿಸಿದ ದ್ರಾವಿಡ್‌ – ಕನ್ನಡಿಗನ ನಡೆಗೆ ವ್ಯಾಪಕ ಮೆಚ್ಚುಗೆ!

    ಮಹದೇವಪ್ಪನವರೇ ನಿನ್ನ ಹೆಂಡತಿಗೂ ಫ್ರೀ, ನನ್ನ ಹೆಂಡತಿಗೂ ಫ್ರೀ ಎಂದ ಸಿಎಂ, ಬಡ ಹೆಣ್ಮಕ್ಕಳಿಗೆ 2 ಸಾವಿರ ಕೊಟ್ಟರೆ, ತಮ್ಮ ಪತ್ನಿಗೆ 2 ಕೋಟಿಗೂ ಹೆಚ್ಚು ಮೌಲ್ಯದ 14 ನಿವೇಶನಗಳನ್ನು ಪಡೆದಿದ್ದಾರೆ. 63-64 ಕೋಟಿಗೂ ಹೆಚ್ಚು ಬೆಲೆಯ ನಿವೇಶನ ಪಡೆದುದನ್ನು ರಾಜ್ಯದ ಜನರೂ ಪ್ರಶ್ನೆ ಮಾಡುತ್ತಿದ್ದಾರೆ ಎಂದು ವಿಶ್ಲೇಷಿಸಿದರು. ಇದನ್ನೂ ಓದಿ: ಮಳೆಯಿಂದ ಜೀವಕಳೆ, ಕಬಿನಿ ಡ್ಯಾಂ ಭರ್ತಿಗೆ ಎರಡೇ ಅಡಿ ಬಾಕಿ – ಯಾವ್ಯಾವ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?

    ಅವ್ಯವಹರಿಸಿ ಪರಿಹಾರ ಕೇಳಿದ ಮೊದಲ ಸಿಎಂ ಇವರೇ:
    ತಮ್ಮ ಅವಧಿಯಲ್ಲಿ ಅವ್ಯವಹಾರ ನಡೆಸಿ, ತಾವೇ ಪರಿಹಾರ ಕೇಳಿರುವ ಮೊದಲ ಮುಖ್ಯಮಂತ್ರಿ ಇವರು. ಮೈಸೂರಿನ ಕೆಸರೇ ಗ್ರಾಮದ 3.16 ಎಕರೆ ಜಮೀನಿಗೆ ಬದಲಾಗಿ ತಮ್ಮ ಪತ್ನಿಗೆ 14 ನಿವೇಶನ ಮಂಜೂರು ಮಾಡಿಸಿಕೊಂಡಿದ್ದಾರೆ. ಅದರ ಬೆಲೆ 62 ಕೋಟಿ ರೂ. ಬರಬೇಕಿದ್ದು, 18 ಕೋಟಿಯ ನಿವೇಶನ ಪಡೆದುದ್ದಾಗಿ ಹೇಳಿದ್ದಾರೆ. ಆದರೆ, ಮುಖ್ಯಮಂತ್ರಿಗಳು 2013ರ ಚುನಾವಣಾ ಅಫಿಡವಿಟ್‍ನಲ್ಲಿ 3.16 ಎಕರೆ ಭೂಮಿಯನ್ನು ಉಲ್ಲೇಖಿಸಿಲ್ಲ. ಇದು ಚುನಾವಣೆ ನಿಯಮಗಳ ಉಲ್ಲಂಘನೆ. ಇದೆಲ್ಲವನ್ನೂ ಪರಿಶೀಲಿಸಿ ಚುನಾವಣಾ ಆಯೋಗಕ್ಕೆ ದೂರು ಕೊಡುವ ಕುರಿತು ನಿರ್ಧರಿಸುತ್ತೇವೆ ಎಂದು ಬಿ.ವೈ ವಿಜಯೇಂದ್ರ ಅವರು ತಿಳಿಸಿದರು.

    18 ಕೋಟಿ ರೂ. ನಿವೇಶನ ಲಭಿಸಿದೆ. ಆದರೆ, 62 ಕೋಟಿ ರೂ. ಮೌಲ್ಯದ ನಿವೇಶನಗಳು ಸಿಗಬೇಕಿತ್ತು ಎಂದು ತಪ್ಪು ಮಾಹಿತಿ ಕೊಟ್ಟಿದ್ದಾರೆ. ಮೂಡಾ ಹಗರಣದಲ್ಲಿ 2 ಪ್ರಕರಣಗಳಿವೆ. ಸಿಎಂ ಧರ್ಮಪತ್ನಿಗೆ ಕೊಟ್ಟ 14 ನಿವೇಶನಗಳದ್ದು ಒಂದು ಪ್ರಕರಣ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು ಓಡೋಡಿ ತರಾತುರಿಯಲ್ಲಿ ಮೈಸೂರಿಗೆ ಹೋಗಿ ಮುಡಾ ಅಧಿಕಾರಿಗಳ ಸಭೆ ನಡೆಸಿದ್ದರು. ಸಭೆಯಲ್ಲಿ ಮಾಹಿತಿ ಪಡೆದು ಎಲ್ಲ ಅಧಿಕಾರಿಗಳನ್ನೂ ಏಕಾಏಕಿ ವರ್ಗಾವಣೆ ಮಾಡಿದ್ದಾರೆ ಎಂದು ಸಂಶಯ ವ್ಯಕ್ತಪಡಿಸಿದರು.

    ಇದು ಅತಿದೊಡ್ಡ ಭ್ರಷ್ಟಾಚಾರ ಹಗರಣ:
    5 ಸಾವಿರ ಕೋಟಿ ರೂ.ಗಿಂತಲೂ ಹೆಚ್ಚು ಮೌಲ್ಯದ ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದ್ದಾರೆ. ಹಗರಣದಲ್ಲಿ ಭಾಗಿಯಾದವರನ್ನು ಶಿಕ್ಷಿಸುವುದನ್ನು ತಪ್ಪಿಸಲು ಹಾಗೂ ರಕ್ಷಿಸಲು ಭೈರತಿ ಸುರೇಶ್ ಮುಂದಾಗಿದ್ದಾರೆ. ಮೂಡಾ ಭ್ರಷ್ಟಾಚಾರದ ಬಗ್ಗೆ ತನಿಖೆ ಮಾಡಿ ವರದಿ ಕೊಟ್ಟ ಜಿಲ್ಲಾಧಿಕಾರಿಯನ್ನೂ ತರಾತುರಿಯಲ್ಲಿ ವರ್ಗಾವಣೆ ಮಾಡಿದ್ದಾರೆ ಎಂದು ಆಕ್ಷೇಪಿಸಿದರು. ಭೈರತಿ ಸುರೇಶ್ ಅವರು ಈ ಹಗರಣ ಮುಚ್ಚಿ ಹಾಕಲು ಎಲ್ಲ ಕಡತಗಳನ್ನು ಬೆಂಗಳೂರಿಗೆ ಒಯ್ದಿದ್ದಾರೆ. ಹಗರಣ ಮುಚ್ಚಿ ಹಾಕುವ ಕೆಲಸ ನಡೆಯುತ್ತಲೇ ಇದೆ. ಸಿಎಂ ಕೂಡ ಮೈಸೂರು ಜಿಲ್ಲೆಯವರು. ಅತಿ ದೊಡ್ಡ ಭ್ರಷ್ಟಾಚಾರ ಹಗರಣವಿದು. ಎಲ್ಲ ಕಡತ ಮುಚ್ಚಿಡಲು ಭೈರತಿ ಸುರೇಶ್ ಮುಂದಾಗಿದ್ದಾರೆ ಎಂದ ಅವರು, ದೇವನೂರು ಜಮೀನಿನ ಬೆಲೆ ಬಗ್ಗೆ ಸಿಎಂ ಮಾತನಾಡುತ್ತಾರೆ. ಗೈಡ್‍ಲೈನ್ ಮೌಲ್ಯ 1,300 ರೂ. ಇದ್ದರೆ 9 ಸಾವಿರ ಮಾರುಕಟ್ಟೆ ಮೌಲ್ಯ ಇದೆ. 2 ಸೈಟಿಗೆ ಮಾತ್ರ ಅವರು ಅರ್ಹರಾಗಿದ್ದರು ಎಂದು ಪುನರುಚ್ಚರಿಸಿದರು.

    ಮೂಡಾ ಅವ್ಯವಹಾರಕ್ಕೆ ಸಂಬಂಧಿಸಿ ಜಿಲ್ಲಾಧಿಕಾರಿಗಳ ವರದಿಯ ಬಳಿಕವೂ 15-6-2024ರಲ್ಲಿ ಸುಮಾರು 42 ಸೈಟ್‍ಗಳನ್ನು ಒಬ್ಬರಿಗೆ ಬದಲಿಯಾಗಿ ಕೊಟ್ಟಿದ್ದಾರೆ. ಇಂಥ ಸಾವಿರಾರು ನಿವೇಶನಗಳನ್ನು ಈ ಸರ್ಕಾರ ಕಾನೂನುಬಾಹಿರವಾಗಿ ಕೊಟ್ಟಿದೆ. ಬಡವರು, ದಲಿತರು, ಪರಿಶಿಷ್ಟ ಸಮುದಾಯಕ್ಕೆ ಮೀಸಲಿಟ್ಟ ನಿವೇಶನಗಳನ್ನು ತಮಗೆ ಬೇಕಾದಂತೆ ಹಂಚಿದ್ದಾರೆ. ಸಿಬಿಐ ತನಿಖೆ ಮಾತ್ರವಲ್ಲದೇ ಮುಖ್ಯಮಂತ್ರಿಗಳು ತಮ್ಮ ಹುದ್ದೆಗೆ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರಲ್ಲದೇ ಸದನದಲ್ಲೂ ಈ ವಿಚಾರ ಕೈಗೆತ್ತಿಕೊಳ್ಳುತ್ತೇವೆ. ಸದನದ ಹೊರಗೆ ಕೂಡ ಈ ಸಂಬಂಧ ಬಿಜೆಪಿಯಿಂದ ಹೋರಾಟ ನಡೆಯಲಿದೆ ಎಂದು ತಿಳಿಸಿದರು.

    ವಾಲ್ಮೀಕಿ ನಿಗಮದ ಹಗರಣ ಸಂಬಂಧ ಪ್ರಶ್ನೆಗೆ ಉತ್ತರಿಸಿದ ಅವರು, ದಲಿತರಿಗೆ ಮೀಸಲಿಟ್ಟ ಹಣವನ್ನು ಚುನಾವಣೆಗೆ ಬಳಸಿಕೊಂಡಿದ್ದಾರೆ. ದದ್ದಲ್, ನಾಗೇಂದ್ರರನ್ನು ಎಸ್‍ಐಟಿ ತನಿಖೆಗೆ ಕರೆಯಲು ಬಿಜೆಪಿ ಪ್ರತಿಭಟನೆಯೇ ಕಾರಣ. ಆದರೂ, ಇದು ತಿಪ್ಪೆ ಸಾರಿಸುವ ಕೆಲಸ. ಇಡಿ ಇವತ್ತು ದಾಳಿ ಮಾಡಿದ್ದನ್ನು ನಾವು ಸ್ವಾಗತಿಸುತ್ತೇವೆ. ಎಸ್‍ಐಟಿ ನಿಧಾನವಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರವು ಸಚಿವರು, ಶಾಸಕರನ್ನು ರಕ್ಷಿಸಲು ಮುಂದಾಗಿತ್ತು ಎಂದು ದೂರಿದರು.

    ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಪತ್ರದ ಬಳಿಕ ಸಿಬಿಐ ತನಿಖೆ ಕೈಗೆತ್ತಿಕೊಂಡಿದೆ. ಒಂದೆಡೆ ಎಸ್‍ಐಟಿ ತನಿಖೆ ನಡೆದರೆ, ಇಡಿ ದಾಳಿಯೂ ಆಗಿದೆ. ಇತಿಹಾಸದಲ್ಲಿ ಕಂಡು ಕೇಳರಿಯದ ಹಗರಣ ಇದಾಗಿದೆ. ದಲಿತರಿಗೆ ಮೀಸಲಿಟ್ಟ ಹಣವನ್ನು ದುರುಪಯೋಗ ಮಾಡಿ, ಹೊರರಾಜ್ಯಕ್ಕೆ ವರ್ಗಾವಣೆ ಮಾಡಿ, ಚುನಾವಣೆಗಳಿಗೆ ಹಣ ದುರ್ಬಳಕೆ ಮಾಡಿದ್ದಾರೆ ಎಂದು ವಿಜಯೇಂದ್ರ ಟೀಕಿಸಿದರು. ಇದನ್ನೂ ಓದಿ: ಆ್ಯಕ್ಷನ್ ದೃಶ್ಯ ಚಿತ್ರೀಕರಣದ ವೇಳೆ ಊರ್ವಶಿ ರೌಟೇಲಾಗೆ ಏಟು- ಆಸ್ಪತ್ರೆಗೆ ದಾಖಲು 

  • NEET-UG ಮರು ಪರೀಕ್ಷೆ ನಮ್ಮ ಕೊನೆಯ ಆಯ್ಕೆ, ಪೇಪರ್‌ ಸೋರಿಕೆ ಬಗ್ಗೆ ತನಿಖೆ ನಡೆಸಬೇಕು: ಸುಪ್ರೀಂ

    ನವದೆಹಲಿ: ಮರು ಪರೀಕ್ಷೆ ನಡೆಸುವುದು ನಮ್ಮ ಕೊನೆಯ ಆಯ್ಕೆ. ಮರು ಪರೀಕ್ಷೆಯನ್ನು ನಡೆಸುವ ನಿರ್ಧಾರವನ್ನು ತೆಗೆದುಕೊಳ್ಳುವ ಮುನ್ನ 23 ಲಕ್ಷ ವಿದ್ಯಾರ್ಥಿಗಳೊಂದಿಗೆ ನಾವು ವ್ಯವಹರಿಸುತ್ತಿರುವ ಕಾರಣ ಸೋರಿಕೆಯ ವ್ಯಾಪ್ತಿಯ ಬಗ್ಗೆ ನಾವು ಜಾಗೃತರಾಗಿರಬೇಕು ಎಂದು ಸುಪ್ರೀಂಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ (CJI DY Chandrachud) ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    NEET-UG ಪ್ರಶ್ನೆ ಪತ್ರಿಕೆ ಸೋರಿಕೆ, ಮರು ಪರೀಕ್ಷೆ ಕೋರಿ ಸಲ್ಲಿಕೆಯಾಗಿದ್ದ 30ಕ್ಕೂ ಹೆಚ್ಚು ಅರ್ಜಿಗಳ ವಿಚಾರಣೆ ನಡೆಸಿದ ಸಿಜೆಐ ಚಂದ್ರ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಮೂರು ಪ್ರಮುಖ ಪ್ರಶ್ನೆಗಳನ್ನು ಕೇಂದ್ರ ಸರ್ಕಾರ, ಸಿಬಿಐ ಮತ್ತು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರದ (NTA) ಮುಂದಿಟ್ಟಿದೆ.‌  ಇದನ್ನೂ ಓದಿ: ವಿಶ್ವ ಚಾಂಪಿಯನ್ಸ್‌ಗೆ 125 ಕೋಟಿ ರೂ. ಬಹುಮಾನ – ರೋಹಿತ್‌, ಕೊಹ್ಲಿ, ದ್ರಾವಿಡ್‌ಗೆ ಸಿಕ್ಕಿದ್ದೆಷ್ಟು?

    ವಕೀಲರ ವಾದ ಆಲಿಸಿದ ಬಳಿಕ ಮಧ್ಯಂತರ ಆದೇಶ ನೀಡಿದ ಪೀಠ, ವಕೀಲರು ಮಂಡಿಸಿದ ವಾದದಲ್ಲಿ 2020 ರಲ್ಲಿ ಒಬ್ಬ ವಿದ್ಯಾರ್ಥಿ, 2021 ರಲ್ಲಿ 3 ಮತ್ತು 2022 ರಲ್ಲಿ 1, 2023 ರಲ್ಲಿ 2 ವಿದ್ಯಾರ್ಥಿಗಳು ಪೂರ್ಣ ಅಂಕಗಳನ್ನು ಗಳಿಸಿದ್ದಾರೆ. 2024 ರಲ್ಲಿ 720 ವಿದ್ಯಾರ್ಥಿಗಳು ಗರಿಷ್ಠ ಅಂಕಗಳನ್ನು ಪಡೆದಿದ್ದಾರೆ. ಫಲಿತಾಂಶದಲ್ಲಿ ಆಮೂಲಾಗ್ರ ಹೆಚ್ಚಳ ಕಂಡು ಬಂದಿದೆ. ಪ್ರಸ್ತುತ ಹಂತದಲ್ಲಿ ಪಾಟ್ನಾ, ದೆಹಲಿ, ಗುಜರಾತ್, ಜಾರ್ಖಂಡ್ ಮತ್ತು ರಾಜಸ್ಥಾನದಲ್ಲಿ ಎಫ್‌ಐಆರ್ ದಾಖಲಾಗಿರುವುದನ್ನು ನ್ಯಾಯಾಲಯವು ಅನುಮೋದಿಸಿದೆ.

    ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಎಫ್‌ಐಆರ್‌ಗಳು ಕೇವಲ ಪಾಟ್ನಾಕ್ಕೆ ಸೀಮಿತವಾಗಿದೆಯೇ ವಿವರಕ್ಕೆ ಕಾಯಬೇಕಾಗಿದೆ. ಪರೀಕ್ಷೆಯನ್ನು ಸುಮಾರು 23 ಲಕ್ಷ ವಿದ್ಯಾರ್ಥಿಗಳನ್ನು ಒಳಗೊಂಡ ವ್ಯಾಪಕ ಶ್ರೇಣಿಯಲ್ಲಿ ನಡೆಸಲಾಗಿದೆ. ಪೇಪರ್ ಲೀಕ್ ವ್ಯವಸ್ಥಿತ ಮಟ್ಟದಲ್ಲಿ ನಡೆದಿದೆಯೇ?, ಅಕ್ರಮ ಸಂಪೂರ್ಣ ಪರೀಕ್ಷಾ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರಿದೆಯೇ?, ವಂಚನೆಯ ಫಲಾನುಭವಿಗಳನ್ನು ಕಳಂಕರಹಿತ ವಿದ್ಯಾರ್ಥಿಗಳಿಂದ ಪ್ರತ್ಯೇಕಿಸಲು ಸಾಧ್ಯವೇ ಎಂಬುದನ್ನು ಪರಿಶೀಲಿಸಬೇಕಾಗಿದೆ. ವಂಚನೆಯ ಫಲಾನುಭವಿಗಳನ್ನು ಇತರರಿಂದ ಪ್ರತ್ಯೇಕಿಸಲು ಸಾಧ್ಯವಾಗದಿದ್ದಲ್ಲಿ ಮರು-ಪರೀಕ್ಷೆಯನ್ನು ಮಾಡುವುದು ಅಗತ್ಯವಾಗಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿತು. ಇದನ್ನೂ ಓದಿ: ಋತುಚಕ್ರದ ವೇಳೆ ಮಹಿಳೆಯರಿಗೆ ರಜೆ ನೀಡೋದು ಸರ್ಕಾರದ ನೀತಿಯ ವಿಷಯ- ವಿಚಾರಣೆ ನಡೆಸಲು ಸುಪ್ರೀಂ ನಕಾರ

    ಪ್ರಶ್ನೆ ಪತ್ರಿಕೆ ಸೋರಿಕೆಯ ಸ್ವರೂಪ, ಪ್ರಶ್ನೆ ಪತ್ರಿಕೆ‌ ಸೋರಿಕೆಯಾದ ಸ್ಥಳಗಳು, ಸೋರಿಕೆ ಮತ್ತು ಪರೀಕ್ಷೆಯ ನಡವಳಿಕೆಯ ನಡುವಿನ ಸಮಯದ ವಿಳಂಬ ಈ ಅಂಶದ ಮೇಲೆ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ. ತನಿಖಾಧಿಕಾರಿ ತನಿಖೆಯ ಪ್ರಸ್ತುತ ಸ್ಥಿತಿಗತಿಯ ವರದಿಯನ್ನು ಸಲ್ಲಿಸಬೇಕು ಎಂದು ಸಿಬಿಐಗೆ ಸೂಚಿಸಿತು.

    ಪ್ರಶ್ನೆ ಪತ್ರಿಕೆ ಸೋರಿಕೆಯ ಫಲಾನುಭವಿಗಳನ್ನು ಗುರುತಿಸಲು ತೆಗೆದುಕೊಂಡ ಕ್ರಮಗಳನ್ನು ನ್ಯಾಯಾಲಯಕ್ಕೆ ತಿಳಿಸಬೇಕು, ಸೋರಿಕೆಯಾದ ಕೇಂದ್ರಗಳು/ನಗರಗಳನ್ನು ಗುರುತಿಸಲು NTA ತೆಗೆದುಕೊಂಡ ಕ್ರಮಗಳು, ಸೋರಿಕೆಯ ಫಲಾನುಭವಿಗಳನ್ನು ಗುರುತಿಸಲು ಅನುಸರಿಸಿದ ವಿಧಾನಗಳು, ಸೋರಿಕೆಯನ್ನು ಹೇಗೆ ಪ್ರಸಾರ ಮಾಡಲಾಯಿತು ಎಲ್ಲಾ ಮಾಹಿತಿಯನ್ನು ಒದಗಿಸುವಂತೆ ಕೋರ್ಟ್ ಎನ್‌ಟಿಎ, ಕೇಂದ್ರ ಸರಕಾರ ಮತ್ತು ಸಿಬಿಐ ಸೂಚಿಸಿದೆ. ಬುಧವಾರ ಸಂಜೆ 5 ಗಂಟೆ ಒಳಗೆ ಅಫಿಡವಿಟ್ ಸಲ್ಲಿಸಬೇಕು ಎಂದು ಸೂಚಿಸಿ ಜುಲೈ 11ಕ್ಕೆ ವಿಚಾರಣೆಯನ್ನು ಮುಂದೂಡಿತು.

     

  • ಮುಡಾ ಪ್ರಕರಣ ಸಿಬಿಐ ಅಥವಾ ನ್ಯಾಯಾಧೀಶರಿಂದ ತನಿಖೆಯಾಗಲಿ: ಬೊಮ್ಮಾಯಿ

    ಮುಡಾ ಪ್ರಕರಣ ಸಿಬಿಐ ಅಥವಾ ನ್ಯಾಯಾಧೀಶರಿಂದ ತನಿಖೆಯಾಗಲಿ: ಬೊಮ್ಮಾಯಿ

    ಗದಗ: ಮುಡಾ ಸೈಟು (MUDA Site) ಹಂಚಿಕೆ ಪ್ರಕರಣವನ್ನು ಸಿಬಿಐ (CBI) ಅಥವಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಮಾಡಿದರೆ ಸತ್ಯ ಹೊರಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಆಗ್ರಹಿಸಿದ್ದಾರೆ.

    ಗದಗದಲ್ಲಿ (Gadag) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ ಎಂದು ಮುಖ್ಯಮಂತ್ರಿಗಳು ಹೇಳುತ್ತಾರೆ. ಹಾಗಿದ್ದರೆ ಇದರ ಬಗ್ಗೆ ಸ್ವತಂತ್ರ ಸಂಸ್ಥೆಯಿಂದ ತನಿಖೆಯಾಗಬೇಕು. ಒಂದು ಸಿಬಿಐ ಅಥವಾ ನ್ಯಾಯಾಧೀಶರಿಂದ ತನಿಖೆಯಾಗಬೇಕು. ಬೇರೆ ಬೇರೆ ಸರ್ಕಾರದ ಸ್ಕೀಂನಲ್ಲಿ ಜಮೀನು ಹಂಚಿಕೆಯಾಗಿರುತ್ತದೆ. ಸ್ಕೀಮ್‌ನ ನ್ಯಾಯ ಸಮ್ಮತವಾಗಿ ಮಾಡಿಕೊಂಡಿದ್ದರೆ ತಕರಾರಿಲ್ಲ. ಆದರೆ ಸ್ಕೀಂ ಬದಲಾವಣೆ ಮಾಡಿಕೊಂಡರೆ ತನಿಖೆಯಿಂದ ಹೊರಬರುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಮುಂದಿನ ಶುಕ್ರವಾರದಿಂದ ಚಾಮುಂಡಿ ಬೆಟ್ಟದಲ್ಲಿ ಆಷಾಢ ಪೂಜೆ ಆರಂಭ – ವಿಶೇಷ ಪಾಸ್ ರದ್ದು

    ಡೆಂಗ್ಯೂ ಎದುರಿಸುವಲ್ಲಿ ವಿಫಲ:
    ಡೆಂಗ್ಯೂ ಜ್ವರ ಎದುರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಸರ್ಕಾರ ಬಡವರ ಜೀವನದ ಜೊತೆ ಚೆಲ್ಲಾಟ ಆಡುತ್ತಿದೆ. ಡೆಂಗ್ಯೂ ಪ್ರಕರಣಗಳು ಒಂದೂವರೆ ತಿಂಗಳಿನಿಂದ ಪ್ರಾರಂಭವಾಗಿದೆ. ಮುಂಜಾಗ್ರತಾ ಕ್ರಮಗಳನ್ನು ಸರ್ಕಾರ, ಆರೋಗ್ಯ ಇಲಾಖೆ, ಡಿಹೆಚ್‌ಓಗಳು ತೆಗೆದುಕೊಳ್ಳಬೇಕಿತ್ತು. ಆದರೆ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಸರ್ಕಾರ ಕೈಗೊಂಡಿಲ್ಲ ಎಂದು ಆರೋಪಿಸಿದರು. ಇದನ್ನೂ ಓದಿ: ಎರಡನೇ ವಿಮಾನ ನಿಲ್ದಾಣದ ಬಗ್ಗೆ ವಿಸ್ತೃತ ಚರ್ಚೆ ಬಳಿಕ ಸೂಕ್ತ ತೀರ್ಮಾನ: ಎಂ‌.ಬಿ.ಪಾಟೀಲ್

    ಹೊಸ ಮಳೆ ಬಂದಾಗ ನಿಂತ ನೀರಿನಿಂದ ಬರುವ ರೋಗವಿದು. ಜಾಗೃತಿ ಮೂಡಿಸುವುದು, ಔಷಧ ಸಿಂಪಡಿಸುವ ಕೆಲಸ ಮಾಡಬೇಕಿತ್ತು. ಆ ಕೆಲಸ ಮಾಡಿಲ್ಲ. ಡೆಂಗ್ಯೂ ಜ್ವರ ಬಂದರೂ ಅವುಗಳನ್ನು ಬೇರೆ ಕೆಟಗರಿಗಳಲ್ಲಿ ಹಾಕಿ ಡೆಂಗ್ಯೂ ಕಡಿಮೆ ಇದೆ ಅಂತ ತೋರಿಸುವ ಪ್ರಯತ್ನ ಮಾಡಿದರು. ಟೆಸ್ಟ್ ಮಾಡುವುದನ್ನು ಕಡಿಮೆ ಮಾಡಿದ್ದಾರೆ. ಈಗಲೂ ಟೆಸ್ಟ್ ಕಡಿಮೆ ಆಗುತ್ತಿವೆ. ಸರ್ಕಾರದ ಅಧಿಕೃತ ಸಂಖ್ಯೆ 7,000 ಇದೆ ಎನ್ನುತ್ತಿದ್ದಾರೆ. ಆದರೆ ಇದರ ಎರಡು ಪಟ್ಟು ರೋಗಿಗಳ ಸಂಖ್ಯೆ ಇದೆ. ಅದನ್ನು ಮುಚ್ಚಿಟ್ಟಿದ್ದಾರೆ. ಸಾಕಷ್ಟು ಸಾವು ನೋವು ಆಗುತ್ತಿದೆ. ಆರೋಗ್ಯ ಇಲಾಖೆಯ ಮಂತ್ರಿಗಳು, ಅಧಿಕಾರಿಗಳು ಕೇವಲ ಸಭೆ ಮಾಡಿ ಎಲ್ಲಾ ಸರಿ ಇದೆ ಎಂಬ ಭಾವನೆಯಲ್ಲಿದ್ದಾರೆ. ಚಿಕಿತ್ಸೆ, ಔಷಧಿ, ಟೆಸ್ಟ್ ಸರಿಯಾಗಿ ಮಾಡಬೇಕು. ಅನೇಕ ಜಿಲ್ಲಾ ಆಸ್ಪತ್ರೆಗಳಲ್ಲಿ ತಪಾಸಣೆ, ಸರಿಯಾದ ಔಷಧ ವ್ಯವಸ್ಥೆ ಇಲ್ಲ. ಇನ್ನು ತಾಲೂಕಿನ ಆಸ್ಪತ್ರೆಗಳಲ್ಲಿ ಕೇಳುವವರಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಕೆರೆ ಕಟ್ಟೆ ತುಂಬಿಸಲು ನಾಳೆ ಸಂಜೆಯಿಂದ ಕೆಆರ್‌ಎಸ್‌ನಿಂದ ವಿ.ಸಿ.ನಾಲೆಗೆ ನೀರು

    ಸಾರ್ವಜನಿಕರು, ಬಡವರು ಸೇರಿದಂತೆ ಸಾಕಷ್ಟು ಸಾವು-ನೋವುಗಳಾಗಿವೆ. ಅತ್ಯಂತ ಚಿಂತಾಜನಕವಾದ ಪರಿಸ್ಥಿತಿ ರಾಜ್ಯದಲ್ಲಿ ಎದುರಾಗಿದೆ. ಕೂಡಲೇ ಯುದ್ದೋಪಾದಿಯಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಮಾಡಿ ಡೆಂಗ್ಯೂ ವಿರುದ್ಧ ಕ್ರಮ ಕೈಗೊಳ್ಳಬೇಕು. ಬಹಳ ದೊಡ್ಡ ಪ್ರಮಾಣದಲ್ಲಿ ಹಬ್ಬಿದರೆ ಮುಂದೆ ಬೇರೆ ರೋಗಕ್ಕೂ ಅಂಟಿಕೊಳ್ಳುತ್ತದೆ. ಈ ರೋಗದಿಂದ ಗುಣಮುಖರಾಗಲು ಮೂರು ಅಥವಾ ಆರು ತಿಂಗಳು ಬೇಕಾಗುತ್ತದೆ. ಆದ್ದರಿಂದ ಇದನ್ನು ವಾರ್ ಫುಂಟಿಗ್‌ನಲ್ಲಿ ತೆಗೆದುಕೊಂಡು ಎಲ್ಲಾ ಜಿಲ್ಲೆಗಳಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಗಮನಿಸಿ ಎಂದು ಆರೋಗ್ಯ ಸಚಿವರನ್ನು ಒತ್ತಾಯಿಸಿದರು. ಇದನ್ನೂ ಓದಿ: ಹೊಸ ಕ್ರಿಮಿನಲ್‌ ಕಾನೂನಿನಡಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಕೇಸ್‌ ದಾಖಲು

    ಸರ್ಕಾರ ತಕ್ಷಣ ಟೆಸ್ಟ್ ಹೆಚ್ಚಿಸಿ, ಔಷಧ, ಚುಚ್ಚುಮದ್ದು ಹೆಚ್ಚಿನ ರೀತಿಯಲ್ಲಿ ಸರಬರಾಜು ಮಾಡಬೇಕು. ಇದನ್ನು ಪ್ರಾರಂಭಿಕ ಹಂತದಲ್ಲೇ ತಡಗಟ್ಟಬೇಕಿತ್ತು. ಬಡವರಿಗೆ ತಪಾಸಣೆ ಮಾಡಿಸುವ, ಚಿಕಿತ್ಸೆ ಪಡೆಯುವ ಸ್ಥಿತಿ ಇಲ್ಲ. ಆದ್ದರಿಂದ ಸರ್ಕಾರ ಎಲ್ಲರಿಗೂ ಉಚಿತ ತಪಾಸಣೆ ವ್ಯವಸ್ಥೆ ಮಾಡಬೇಕು ಎಂದರು. ಇದನ್ನೂ ಓದಿ: ಸಂಸದ ಸುಧಾಕರ್ ಅಭಿನಂದನಾ ಸಮಾವೇಶದಲ್ಲಿ ಎಣ್ಣೆ, ಬಾಡೂಟಕ್ಕೆ ಮುಗಿಬಿದ್ದ ಜನ