Tag: ಸಿರವಾರ

  • ಕ್ಷುಲ್ಲಕ ಕಾರಣಕ್ಕೆ ಗುಂಪು ಘರ್ಷಣೆ – ಯುವಕನ ಕೊಲೆಯಲ್ಲಿ ಜಗಳ ಅಂತ್ಯ

    ಕ್ಷುಲ್ಲಕ ಕಾರಣಕ್ಕೆ ಗುಂಪು ಘರ್ಷಣೆ – ಯುವಕನ ಕೊಲೆಯಲ್ಲಿ ಜಗಳ ಅಂತ್ಯ

    ರಾಯಚೂರು: ಹಳೆಯ ವೈಷಮ್ಯ ಹಿನ್ನೆಲೆ ಕ್ಷುಲ್ಲಕ ಕಾರಣಕ್ಕೆ ಘರ್ಷಣೆ ನಡೆದಿದ್ದು, ಯುವಕನ ಕೊಲೆಯಲ್ಲಿ ಜಗಳ ಅಂತ್ಯವಾಗಿರುವ ಘಟನೆ ಜಿಲ್ಲೆಯ ಸಿರವಾರ (Sirwar) ತಾಲೂಕಿನ ಮಾಚನೂರು ಗ್ರಾಮದಲ್ಲಿ ನಡೆದಿದೆ.

    ಮೃತ ಯುವಕನನ್ನು ಮಾಚನೂರು ಗ್ರಾಮದ ನಿವಾಸಿ ಸಮೀರ್ (29) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ನವವೃಂದಾವನ ಗಡ್ಡೆಯ ಪದ್ಮನಾಭ ತೀರ್ಥರ ಆರಾಧನೆ ರಾಯರಮಠಕ್ಕೆ – ಸುಪ್ರೀಂ

    ಈ ಹಿಂದೆ ಮೊಹರಂ ಆಚರಣೆ ವೇಳೆ ಎರಡು ಗುಂಪುಗಳ ನಡುವೆ ಜಗಳ ನಡೆದಿತ್ತು. ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದು ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಯುವಕ ಸಮೀರನ ಎದೆಗೆ ಬಲವಾದ ಪೆಟ್ಟು ಬಿದ್ದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

    ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಸದ್ಯ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ತಮಿಳುನಾಡಿಗೆ ಹುಲಿ ಉಗುರು ಸಾಗಿಸುತ್ತಿದ್ದ ಆರೋಪಿ ಬಂಧನ

  • ರಾಯಚೂರು| ಕಾರು, ಲಾರಿ ಮಧ್ಯೆ ಭೀಕರ ಅಪಘಾತ – ಮೂವರ ದುರ್ಮರಣ

    ರಾಯಚೂರು| ಕಾರು, ಲಾರಿ ಮಧ್ಯೆ ಭೀಕರ ಅಪಘಾತ – ಮೂವರ ದುರ್ಮರಣ

    ರಾಯಚೂರು: ಕಾರು (Car) ಹಾಗೂ ಲಾರಿ (Lorry) ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಯಚೂರು (Raichur) ಜಿಲ್ಲೆ ಸಿರವಾರ (Sirwar) ತಾಲೂಕಿನ ಕಲ್ಲೂರು ಬಳಿ ನಡೆದಿದೆ.

    ಮಾನ್ವಿ ಪಟ್ಟಣದ ಮೆಕಾನಿಕ್‌ಗಳಾದ ಯಾಸಿನ್, ಮಕ್ಬಲ್, ಹರ್ಷದ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕಾರು ಮಾನ್ವಿಯಿಂದ ರಾಯಚೂರು ಕಡೆ ಹೊರಟಿತ್ತು. ಲಾರಿ ರಾಯಚೂರಿನಿಂದ ಮಾನ್ವಿ ಕಡೆ ಹೊರಟಿದ್ದ ಸಂದರ್ಭ ಭೀಕರ ಅಪಘಾತ ಸಂಭವಿಸಿದೆ. ಇತ್ತೀಚೆಗೆ ಶಾಲಾ ವಾಹನ ಹಾಗೂ ಸರ್ಕಾರಿ ಬಸ್ ನಡುವೆ ಅಪಘಾತವಾಗಿದ್ದ ರಸ್ತೆ ಮಾರ್ಗದಲ್ಲೇ ಘಟನೆ ನಡೆದಿದೆ. ಇದನ್ನೂ ಓದಿ: ವಿನಯ್ ಕುಲಕರ್ಣಿ ವರ್ಚಸ್ಸಿಗೆ ಧಕ್ಕೆ ತರುವ ಹುನ್ನಾರ ನಡೆದಿದೆ: ಏಗನಗೌಡರ

    ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಘಟನಾ ಸ್ಥಳಕ್ಕೆ ಸಿರವಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದ ರಾಯಚೂರು – ಮಾನ್ವಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಇದನ್ನೂ ಓದಿ:  Valmiki Scam | ನಾಗೇಂದ್ರಗೆ ಬಿಗ್‌ ರಿಲೀಫ್‌ – ಜಾಮೀನು ಮಂಜೂರು

  • ರಾಯಚೂರು| ತರಗತಿಯಲ್ಲಿ ಲೋ ಬಿಪಿಯಿಂದ ಕುಸಿದು ಬಿದ್ದ ವಿದ್ಯಾರ್ಥಿ – ಹೃದಯಾಘಾತದಿಂದ ಸಾವು

    ರಾಯಚೂರು| ತರಗತಿಯಲ್ಲಿ ಲೋ ಬಿಪಿಯಿಂದ ಕುಸಿದು ಬಿದ್ದ ವಿದ್ಯಾರ್ಥಿ – ಹೃದಯಾಘಾತದಿಂದ ಸಾವು

    ರಾಯಚೂರು: ಖಾಸಗಿ ಶಾಲೆಯೊಂದರಲ್ಲಿ (School) ತರಗತಿಯಲ್ಲಿ ಪಾಠ ನಡೆಯುತ್ತಿದ್ದ ವೇಳೆ ವಿದ್ಯಾರ್ಥಿಯೋರ್ವ (Student) ಕುಸಿದು ಬಿದ್ದು ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ ಘಟನೆ ರಾಯಚೂರು (Raichur) ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ನಡೆದಿದೆ.

    ತರುಣ್ ಅತ್ತನೂರು (14) ಮೃತ ದುರ್ದೈವಿ. ಸಿರವಾರ (Sirawara) ತಾಲೂಕಿನ ಅತ್ತನೂರು ಗ್ರಾಮದ ಎಂಟನೇ ತರಗತಿ ವಿದ್ಯಾರ್ಥಿ ತರುಣ್ ಎಂದಿನಂತೆ ಶಾಲೆಗೆ ಆಗಮಿಸಿದ್ದ. ಆದರೆ ಶಾಲೆಯಲ್ಲಿ ಲೋ ಬಿಪಿಯಿಂದ ಏಕಾಏಕಿ ಕುಸಿದು ಬಿದ್ದಿದ್ದ. ಈತನನ್ನು ಶಿಕ್ಷಕರು, ಸಿಬ್ಬಂದಿಗಳು ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಇದನ್ನೂ ಓದಿ: Mysuru| ಕಲುಷಿತ ನೀರು ಸೇವನೆ ಶಂಕೆ- ಓರ್ವ ಸಾವು, 12 ಜನ ಅಸ್ವಸ್ಥ

    ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ಖಾಸಗಿ ಆಸ್ಪತ್ರೆಗೆ ಕರೆತರುತ್ತಿದ್ದ ವೇಳೆ ಮಾರ್ಗ ಮಧ್ಯೆ ಹೃದಯಾಘಾತದಿಂದ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಗ್ಯಾರಂಟಿಯಿಂದಾಗಿ ಅನುದಾನ ಸಿಗ್ತಿಲ್ಲ: ದರ್ಶನ್ ಪುಟ್ಟಣ್ಣಯ್ಯ

  • ರಾಯಚೂರಲ್ಲಿ ಡೆತ್‌ನೋಟ್ ಬರೆದಿಟ್ಟು ಬಿಎ ವಿದ್ಯಾರ್ಥಿ ನೇಣಿಗೆ ಶರಣು

    ರಾಯಚೂರಲ್ಲಿ ಡೆತ್‌ನೋಟ್ ಬರೆದಿಟ್ಟು ಬಿಎ ವಿದ್ಯಾರ್ಥಿ ನೇಣಿಗೆ ಶರಣು

    ರಾಯಚೂರು: ಡೆತ್‌ನೋಟ್ (Death Note) ಬರೆದಿಟ್ಟು ವಿದ್ಯಾರ್ಥಿಯೋರ್ವ (Student) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರು (Raichur) ಜಿಲ್ಲೆಯ ಸಿರವಾರದಲ್ಲಿ (Sirwar) ನಡೆದಿದೆ.

    ವೆಂಕಟೇಶ್ ನಾಯಕ್ (20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಈತ ಧಾರವಾಡದಲ್ಲಿ ಬಿಎ ಪದವಿ ವ್ಯಾಸಂಗ ಮಾಡುತ್ತಿದ್ದು, ಇತ್ತೀಚಿಗೆ ಊರಿಗೆ ಬಂದಿದ್ದ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನನ್ನ ಸಾವಿಗೆ ಯಾರೂ ಜವಾಬ್ದಾರರಲ್ಲ, ಹೊಣೆಗಾರರಲ್ಲ ಎಂದು ಡೆತ್ ನೋಟ್ ಬರೆದು ನೇಣಿಗೆ ಶರಣಾಗಿದ್ದಾನೆ. ಇದನ್ನೂ ಓದಿ: ಪತಂಜಲಿ ಸಸ್ಯಾಹಾರಿ ಹರ್ಬಲ್ ಟೂತ್ ಪೌಡರ್‌ನಲ್ಲಿ ಮಾಂಸಾಹಾರಿ ಅಂಶ – ದೆಹಲಿ ಹೈಕೋರ್ಟ್‌ಗೆ ಅರ್ಜಿ

    ವಿದ್ಯಾರ್ಥಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕುಟುಂಬಸ್ಥರು ತಮ್ಮದೇ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮನೆಯಲ್ಲಿ ಒಬ್ಬನೇ ಉಳಿದಿದ್ದ ವೆಂಕಟೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಸಂಬಂಧ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: BMTC ನಿರ್ವಾಹಕ ಹುದ್ದೆಗೆ ಪರೀಕ್ಷೆ, ಕಟ್ಟುನಿಟ್ಟಿನ ನಿಗಾವಹಿಸುವಂತೆ ಕ್ರಮ – ಕೆಇಎ

  • ಮಾರ್ಗ ಮಧ್ಯೆಯೇ ಅಂಬುಲೆನ್ಸ್‌ನಲ್ಲಿ ಹೆಣ್ಣು ಮಗುವಿಗೆ ಜನ್ಮಕೊಟ್ಟ ಮಹಿಳೆ

    ಮಾರ್ಗ ಮಧ್ಯೆಯೇ ಅಂಬುಲೆನ್ಸ್‌ನಲ್ಲಿ ಹೆಣ್ಣು ಮಗುವಿಗೆ ಜನ್ಮಕೊಟ್ಟ ಮಹಿಳೆ

    ರಾಯಚೂರು: ಅಂಬುಲೆನ್ಸ್‌ನಲ್ಲಿ (Ambulence) ಮಧ್ಯರಾತ್ರಿ ಮಾರ್ಗ ಮಧ್ಯೆಯೇ ಮಹಿಳೆಯೋರ್ವಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ರಾಯಚೂರಿನ (Raichur) ಸಿರವಾರ (Siravara) ತಾಲೂಕಿನ ಕುರಕುಂದ ಗ್ರಾಮದಲ್ಲಿ ನಡೆದಿದೆ.

    ಕುರಕುಂದ ಗ್ರಾಮದ ರೇಣುಕಾ ಅಂಬುಲೆನ್ಸ್‌ನಲ್ಲಿ ಮಗುವಿಗೆ ಜನ್ಮವಿತ್ತ ಮಹಿಳೆ. ಈಕೆ ಮಧ್ಯರಾತ್ರಿ ಹೆರಿಗೆ (Delivery) ನೋವಿನಿಂದ ಬಳಲುತ್ತಿದ್ದರು. ಸಿರವಾರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯುವ ಸಲುವಾಗಿ ಆರೋಗ್ಯ ಕವಚ 108 ಅಂಬುಲೆನ್ಸ್ ಬಂದಿತ್ತು. ಈಕೆಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಸಂದರ್ಭ ಮಾರ್ಗ ಮಧ್ಯೆಯೇ ಹೆರಿಗೆಯಾಗಿದೆ. ಇದನ್ನೂ ಓದಿ: ಕರ್ತವ್ಯ ಸಮಯದಲ್ಲಿ ಲಂಚ ಪಡೆದ ಮಹಿಳಾಧಿಕಾರಿ – ಕಡ್ಡಾಯ ನಿವೃತ್ತಿಗೊಳಿಸಿ ಆದೇಶ

    ಹೆರಿಗೆ ನೋವು ಹೆಚ್ಚಾದ ಹಿನ್ನೆಲೆ ಶುಶ್ರೂಷಕಿ ಲಕ್ಷ್ಮೀ ಅಂಬುಲೆನ್ಸ್‌ನಲ್ಲಿಯೇ ಸುರಕ್ಷಿತ ಹೆರಿಗೆ ಮಾಡಿಸಿದ್ದಾರೆ. ನಂತರ ತಾಯಿ ಮಗುವನ್ನು ಸಿರವಾರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. 108 ಅಂಬುಲೆನ್ಸ್ ಸಿಬ್ಬಂದಿಯಾದ ಚಾಲಕ ಯಾಸಿನ್ ಬಿ. ಗಣೇಕಲ್ ಮತ್ತು ಶುಶ್ರೂಷಕಿ ಲಕ್ಷ್ಮೀ ಅವರಿಗೆ ಕುಟುಂಬಸ್ಥರು ಕೃತಜ್ಞತೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಒಂದು ಸಣ್ಣ ಆ್ಯಕ್ಸಿಡೆಂಟ್‌.. ರಕ್ತನೂ ಬರಲಿಲ್ಲ, ಆದ್ರೆ ಬ್ರೈನ್ ಡೆಡ್!

  • ಟಂಟಂ, ಟಾಟಾ ಏಸ್ ಡಿಕ್ಕಿ: ಮಕ್ಕಳು ಸೇರಿ 21 ಮಂದಿಗೆ ಗಂಭೀರ ಗಾಯ

    ಟಂಟಂ, ಟಾಟಾ ಏಸ್ ಡಿಕ್ಕಿ: ಮಕ್ಕಳು ಸೇರಿ 21 ಮಂದಿಗೆ ಗಂಭೀರ ಗಾಯ

    ರಾಯಚೂರು: ಜಿಲ್ಲೆಯ ಸಿರವಾರದಲ್ಲಿ ಚಿಕ್ಕಮಕ್ಕಳು ಸೇರಿದಂತೆ ಕೂಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ಟಾಟಾ ಏಸ್ ವಾಹನ ಹಾಗೂ ಟಂಟಂ ನಡುವೆ ಮುಖಾಮುಖಿ ಡಿಕ್ಕಿಯಾಗಿ 21 ಜನರು ಗಾಯಗೊಂಡಿರುವ ಘಟನೆ ನಡೆದಿದೆ.

    ಸಿರವಾರ ಪಟ್ಟಣದ ಹೆಚ್.ಪಿ ಪೆಟ್ರೋಲ್ ಬಂಕ್ ಬಳಿ ಈ ಅಪಘಾತ ನಡೆದಿದೆ. ಅಪಘಾತದಲ್ಲಿ 4 ಜನ ಮಕ್ಕಳು ಸೇರಿ 11 ಜನರ ಪರಿಸ್ಥಿತಿ ಗಂಭೀರವಾಗಿದೆ. ಶಾಲೆಗಳು ಆರಂಭವಾದರೂ ಗ್ರಾಮೀಣ ಭಾಗದಲ್ಲಿ ಮಕ್ಕಳನ್ನ ಕೂಲಿಗೆ ಕಳುಹಿಸಲಾಗುತ್ತಿದೆ. ಕೂಲಿ ಕೆಲಸಕ್ಕೆ ಹೋಗಿದ್ದ ಮಕ್ಕಳು ಈಗ ಆಸ್ಪತ್ರೆ ಸೇರಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ನಿಂದ ಬಿಜೆಪಿಗೆ ಬರಲು ಹಲವರು ಸರತಿಯಲ್ಲಿ ನಿಂತಿದ್ದಾರೆ: ರೇಣುಕಾಚಾರ್ಯ

    ಗಾಯಾಳುಗಳನ್ನು ಪ್ರಾಥಮಿಕ ಚಿಕಿತ್ಸೆಗಾಗಿ ಸಿರವಾರ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎರಡು ವಾಹನಗಳ ಚಾಲಕರ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಇದನ್ನೂ ಓದಿ: ಭದ್ರತಾ ಮಂಡಳಿ ಜೊತೆ ಎನ್‍ಎಸ್‍ಜಿಯಲ್ಲೂ ಭಾರತ ಇರಬೇಕು: ಬೈಡನ್

    ಕೂಲಿ ಕೆಲಸಕ್ಕೆ ಮಕ್ಕಳನ್ನ ಕರೆದೊಯ್ಯುವುದಲ್ಲದೇ ಅಧಿಕ ಸಂಖ್ಯೆಯಲ್ಲಿ ಜನರನ್ನ ತುಂಬಿಕೊಂಡು ಹೋಗುವುದು, ಬೇಜವಾಬ್ದಾರಿಯಾಗಿ ವಾಹನ ಚಲಾಯಿಸಿದ್ದು ಅಪಘಾತಕ್ಕೆ ಕಾರಣ ಅಂತ ಗಾಯಾಳುಗಳ ಸಂಬಂಧಿಕರು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ರಾಯಚೂರಿನಲ್ಲಿ ಪ್ರತ್ಯೇಕ ಅಪಘಾತ- ನಾಲ್ವರು ಸಾವು

    ರಾಯಚೂರಿನಲ್ಲಿ ಪ್ರತ್ಯೇಕ ಅಪಘಾತ- ನಾಲ್ವರು ಸಾವು

    –  ಸ್ಟೇರಿಂಗ್ ಕಿತ್ತು ಬಂದಿದ್ದಕ್ಕೆ ಅಪಘಾತ

    ರಾಯಚೂರು: ಜಿಲ್ಲೆಯ ದೇವದುರ್ಗದ ಮುಷ್ಟೂರು ಕ್ರಾಸ್ ಬಳಿ ಕ್ರೂಸರ್ ಸ್ಟೇರಿಂಗ್ ಕಿತ್ತು ಬಂದಿದ್ದರಿಂದ ಅಪಘಾತ ಸಂಭವಿಸಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಶಬ್ಬೀರ್ (50 ), ಖಾಜಾ ಸಾಬ್( 65) ಮೃತ ದುರ್ದೈವಿಗಳು. ಹನುಮಂತ, ಖಾಜಾ ಬೀ ಸೇರಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ರಾಮದುರ್ಗದಿಂದ ಶಾಖಪುರಕ್ಕೆ ಮದುವೆಗೆ ಹೊರಟಿದ್ದ ಕ್ರೂಸರ್ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಗಾಯಾಳುಗಳನ್ನ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ಗಾಯಾಳುಗಳು ಚೇತರಿಸಿಕೊಳ್ಳುತ್ತಿದ್ದಾರೆ.

    ಸಿರವಾರ ತಾಲೂಕಿನ ಕಲ್ಲೂರು ಬಳಿ ಸ್ಟೇರಿಂಗ್ ತುಂಡಾಗಿ ಮಿನಿಲಾರಿ ಪಲ್ಟಿಯಾಗಿದ್ದರಿಂದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನ ಕೊಪ್ಪಳದ ಕಾರಟಗಿ ಮೂಲದ ಸುರೇಶ್ (36) ಹಾಗು ಮರಿಯಾ (25) ಅಂತ ಗುರುತಿಸಲಾಗಿದೆ.

    ಕಾರಟಗಿಯಿಂದ ರಾಯಚೂರಿಗೆ ಭತ್ತ ಕಟಾವು ಮಾಡುವ ಯಂತ್ರವನ್ನ ಹೊತ್ತು ತರುತ್ತಿದ್ದ ವೇಳೆ ಮಿನಿ ಲಾರಿ ಪಲ್ಟಿಯಾಗಿದೆ. ಸ್ಟೇರಿಂಗ್ ತುಂಡಾಗಿದ್ದರಿಂದ ಚಾಲಕನ ನಿಯಂತ್ರಣಕ್ಕೆ ಸಿಗದೆ ಲಾರಿ ಪಲ್ಟಿ ಹೊಡೆದಿದೆ. ಅಪಘಾತವಾದ ಹಿನ್ನೆಲೆ ಸ್ಥಳದಲ್ಲಿ ಕೆಲ ಹೊತ್ತು ಟ್ರಾಫಿಕ್ ಜಾಮ್ ಆಗಿತ್ತು. ರಸ್ತೆ ಮೇಲೆ ಬಿದ್ದ ಮಿನಿ ಲಾರಿಯನ್ನು ಕ್ರೇನ್ ಮೂಲಕ ತೆರವು ಮಾಡಲಾಗಿದೆ. ಘಟನೆ ಹಿನ್ನೆಲೆ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕೊರೊನಾ ಭೀತಿಯಿಂದ ಕೆರೆ ನೀರನ್ನೇ ಕುಡಿಯದ ಗ್ರಾಮಸ್ಥರು: ಇಕ್ಕಟ್ಟಿನಲ್ಲಿ ಅಧಿಕಾರಿಗಳು

    ಕೊರೊನಾ ಭೀತಿಯಿಂದ ಕೆರೆ ನೀರನ್ನೇ ಕುಡಿಯದ ಗ್ರಾಮಸ್ಥರು: ಇಕ್ಕಟ್ಟಿನಲ್ಲಿ ಅಧಿಕಾರಿಗಳು

    ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಶಾಖಾಪುರದಲ್ಲಿ ವ್ಯಕ್ತಿ  ಕೆರೆಗೆ ಕಲ್ಲು ಎಸೆದಿದ್ದರಿಂದ ಗ್ರಾಮಸ್ಥರು ಕೊರೊನಾ ಭೀತಿಯಿಂದ ಕೆರೆ ನೀರನ್ನ ಹೊರಹರಿಸಿದ ಪ್ರಕರಣ ಈಗ ಗಂಭೀರವಾಗುತ್ತಿದೆ.

    ಈ ಕುರಿತು ಪಬ್ಲಿಕ್ ಟಿವಿ ಸಹ ವರದಿ ಪ್ರಸಾರ ಮಾಡಿತ್ತು. ಸಿರವಾರ ತಹಶೀಲ್ದಾರ್ ಕೆ.ಶೃತಿ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಕೆರೆಯಲ್ಲಿ ಉಳಿದಿರುವ ನೀರನ್ನ ಹೊರಬಿಡದಂತೆ ಎಚ್ಚರಿಸಿದ್ದಾರೆ.

    ಗ್ರಾಮ ಪಂಚಾಯ್ತಿ ಪಿಡಿಓ ಕೆರೆಯ ಹೂಳು ತೆಗೆಯಲು ನೀರು ಹೊರಬಿಟ್ಟಿರುವುದಾಗಿ ಸಮಜಾಯಿಷಿ ನೀಡಿದ್ದಾರಾದ್ರೂ ತಹಶೀಲ್ದಾರ್ ಎಚ್ಚರಿಕೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ನೀರನ್ನ ಹೊರಬಿಡಬಾರದು. ನೀರಿನ ಪರೀಕ್ಷೆ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಪಕ್ಕದ ಗ್ರಾಮದ ವ್ಯಕ್ತಿ ಕೆರೆಗೆ ಕಲ್ಲನ್ನ ಎಸೆದಿದ್ದು ಕೊರೊನಾ ಭೀತಿಯಿಂದ ಜನ ಕೆರೆ ನೀರನ್ನೇ ಖಾಲಿ ಮಾಡಲು ಮುಂದಾಗಿದ್ದರು.

    ಪಂಪ್ ಸೆಟ್ ಕೆಟ್ಟಿದ್ದರಿಂದ ಕೆರೆಯಲ್ಲಿ ಅಲ್ಪಸ್ವಲ್ಪ ನೀರು ಉಳಿದಿದೆ. ಕೆರೆಗೆ ಕಲ್ಲು ಎಸೆದ ವ್ಯಕ್ತಿ ಈಗಾಗಲೇ ಕೆರೆ ನೀರನ್ನ ಕುಡಿದಿದ್ದಾನೆ. ಅದೇ ನೀರಲ್ಲಿ ಸ್ನಾನ ಮಾಡಿದ್ದಾನೆ. ಆದ್ರೆ ಗ್ರಾಮಸ್ಥರಿಗೆ ಅನುಮಾನ ಮಾತ್ರ ಹೋಗಿಲ್ಲ. ಕೆರೆ ನೀರನ್ನ ಬಿಟ್ಟು ಈಗ ಬೋರ್ ವೆಲ್ ನೀರಿನ ಮೇಲೆ ಅವಲಂಬಿತರಾಗಿದ್ದಾರೆ.

  • ರಾಯಚೂರು: ಸ್ಟೇರಿಂಗ್ ರಾಡ್ ಕಟ್ ಆಗಿ ಕಾಲುವೆಗೆ ಉರುಳಿದ ಬಸ್- ಪ್ರಯಾಣಿಕರು ಪಾರು

    ರಾಯಚೂರು: ಸ್ಟೇರಿಂಗ್ ರಾಡ್ ಕಟ್ ಆಗಿ ಕಾಲುವೆಗೆ ಉರುಳಿದ ಬಸ್- ಪ್ರಯಾಣಿಕರು ಪಾರು

    ರಾಯಚೂರು: ಸಾರಿಗೆ ಬಸ್ ನ ಸ್ಟೇರಿಂಗ್ ರಾಡ್ ಕಟ್ ಆಗಿ ಬಸ್ ಕಾಲುವೆ ಉರುಳಿದ ಘಟನೆ ಮಾನ್ವಿ ತಾಲೂಕಿನ ಸಿರವಾರ ಬಳಿ ನಡೆದಿದೆ.

    ವೇಗದಲ್ಲಿದ್ದ ಬಸ್‍ನ ಸ್ಟೇರಿಂಗ್ ರಾಡ್ ಕಟ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಗದ್ದೆ ಪಕ್ಕದ ಸಣ್ಣ ಕಾಲುವೆಗೆ ಉರುಳಿದೆ. ಕಾಲುವೆಯಲ್ಲೆ ಬಸ್ ನಿಂತಿದ್ದರಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ 8 ಜನರಿಗೆ ಗಾಯಗಳಾಗಿವೆ

    ಲಿಂಗಸೂಗುರಿನಿಂದ ರಾಯಚೂರಿಗೆ ತೆರಳುತ್ತಿದ್ದ ಸಾರಿಗೆ ಬಸ್ 30 ಕ್ಕೂ ಹೆಚ್ಚು ಜನ ಪ್ರಯಾಣಿಕರನ್ನ ಕರೆದೊಯ್ಯುತ್ತಿತ್ತು. ಸಿರವಾರ ಬಳಿ ಏಕಾಏಕಿ ತೊಂದರೆ ಕಾಣಿಸಿಕೊಂಡಿದ್ದು, ಅಪಘಾತ ಸಂಭವಿಸಿದೆ.

    ಗಾಯಾಳುಗಳು ಹಾಗೂ ಉಳಿದ ಪ್ರಯಾಣಿಕರನ್ನ ಕೂಡಲೇ ಬದಲಿ ಬಸ್ ನಲ್ಲಿ ರಾಯಚೂರಿಗೆ ಕಳುಹಿಸಲಾಗಿದೆ.