Tag: ಸಿಸಿಬಿ ಪೊಲೀಸ್

  • Bengaluru | ಅಕ್ರಮವಾಗಿ ನಾಡ ಪಿಸ್ತೂಲ್ ಮಾರಾಟ ಮಾಡುತ್ತಿದ್ದ ರೌಡಿಶೀಟರ್ ಬಂಧನ

    Bengaluru | ಅಕ್ರಮವಾಗಿ ನಾಡ ಪಿಸ್ತೂಲ್ ಮಾರಾಟ ಮಾಡುತ್ತಿದ್ದ ರೌಡಿಶೀಟರ್ ಬಂಧನ

    ಬೆಂಗಳೂರು: ಅಕ್ರಮವಾಗಿ ನಾಡ ಪಿಸ್ತೂಲ್ (Countrymade Pistol) ತಂದು ಮಾರಾಟ ಮಾಡುತ್ತಿದ್ದ ರೌಡಿಶೀಟರ್‌ನನ್ನು ಬೆಂಗಳೂರಿನಲ್ಲಿ (Bengaluru) ಸಿಸಿಬಿ ಪೊಲೀಸರು (CCB Police) ಬಂಧಿಸಿದ್ದಾರೆ.

    ಕೆಜಿ ಹಳ್ಳಿ ರೌಡಿಶೀಟರ್ ಸಮೀರ್ ಬಂಧಿತ ಆರೋಪಿ. ಸಮೀರ್ ದೆಹಲಿಯಿಂದ ಕಡಿಮೆ ಬೆಲೆಗೆ ಪಿಸ್ತೂಲ್ ತಂದು ಬೆಂಗಳೂರಿನಲ್ಲಿ ಹೆಚ್ಚು ಹಣಕ್ಕೆ ಮಾರಾಟ ಮಾಡುತ್ತಿದ್ದ. ಅಲ್ಲದೇ ರೌಡಿಶೀಟರ್‌ಗಳಿಗೂ ಪಿಸ್ತೂಲ್ ಮಾರಾಟ ಮಾಡುತ್ತಿದ್ದ. ಈ ಹಿನ್ನೆಲೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಆರೋಪಿ ಸಮೀರ್‌ನನ್ನು ಅರೆಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಪಾಕ್‌ ಶೆಲ್‌ ದಾಳಿಗೆ ಒಳಗಾಗಿದ್ದ ಪೂಂಚ್‌ ಗುರುದ್ವಾರಕ್ಕೆ ರಾಹುಲ್‌ ಗಾಂಧಿ ಭೇಟಿ

    ಬಂಧಿತ ಆರೋಪಿಯಿಂದ 2 ನಾಡ ಪಿಸ್ತೂಲ್‌ನನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಆರೋಪಿಗೆ ಪಿಸ್ತೂಲ್ ಹೇಗೆ ಸಿಕ್ಕಿತು ಎಂಬುದರ ತನಿಖೆಗೆ ಸಿಸಿಬಿ ಪೊಲೀಸರು ಮುಂದಾಗಿದ್ದಾರೆ. ಇದನ್ನೂ ಓದಿ: 2025ರ UG-CET ಫಲಿತಾಂಶ ಪ್ರಕಟ – 2,75,677 ವಿದ್ಯಾರ್ಥಿಗಳಿಗೆ ರ‍್ಯಾಂಕ್‌

  • ರೈಲ್ವೆ ಇಲಾಖೆಯಲ್ಲಿ ಟಿಕೆಟ್‌ ಕಲೆಕ್ಟರ್ ಕೆಲಸ ಕೊಡಿಸೋದಾಗಿ ಲಕ್ಷ ಲಕ್ಷ ಉಂಡೆನಾಮ

    ರೈಲ್ವೆ ಇಲಾಖೆಯಲ್ಲಿ ಟಿಕೆಟ್‌ ಕಲೆಕ್ಟರ್ ಕೆಲಸ ಕೊಡಿಸೋದಾಗಿ ಲಕ್ಷ ಲಕ್ಷ ಉಂಡೆನಾಮ

    ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ಟಿಕೆಟ್‌ ಕಲೆಕ್ಟರ್ ಕೆಲಸ (Railway Tticket collector Job) ಕೊಡಿಸುವುದಾಗಿ ಹೇಳಿ ಖದೀಮರು ಲಕ್ಷ ಲಕ್ಷ ಹಣ ವಂಚಿಸಿರುವ ಘಟನೆ ನಡೆದಿದೆ.

    ಘಟನೆ ಸಂಬಂಧ ವಿಜಯಪುರದ (Vijayapura) ಡಾ.ಲಕ್ಷ್ಮಿಕಾಂತ್ ಹೊಸಮನಿ, ಮುರುಳಿ, ಭೀಮರಾವ ಎಂಟಮನಿ, ಬಸು ಕಾಸಪ್ಪ, ಕೂಲಪ್ಪ ಸಿಂಗೆ, ಸಂತೋಷ್, ಶ್ರೀಧರ್ ಸೇರಿ ಒಟ್ಟು 7 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ | ರಾಜ್ಯಕ್ಕೂ ತಟ್ಟಿದ ಸೈಕ್ಲೋನ್ ಎಫೆಕ್ಟ್ – ಚುಮುಚುಮು ಚಳಿಯೊಂದಿಗೆ ತುಂತುರು ಮಳೆ!

    ಆನ್‌ಲೈನ್‌ ಮೂಲಕ ತರಬೇತಿಗೆ ನಕಲಿ ಆರ್ಡರ್‌ ಕಾಪಿ ಕೊಟ್ಟಿದ್ದ ಖದೀಮರು ಮುಂಬೈ ಹಾಗೂ ಕಾನ್ಪುರದಲ್ಲಿ ಫೇಕ್ ಟ್ರೈನಿಂಗ್ ಕೂಡ ಕೊಡಿಸಿದ್ರು. ಇದನ್ನು ನಂಬಿದ್ದ ಉದ್ಯೋಗಾಕಾಂಕ್ಷಿಗಳು ನೇಮಕಾತಿ ಪತ್ರ ಹಿಡಿದು ಉದ್ಯೋಗಕ್ಕೆ ಜಾಯಿನ್‌ ಆಗಲು ಹೋದಾಗ ನಾಯಕ ಬಯಲಾಗಿದೆ. ಬಳಿಕ ವಂಚನೆ ಬಗ್ಗೆ ವಿಜಯಪುರದ ಹುಸನಪ್ಪ ಮಾಡ್ಯಾಳ್ ಸಿಸಿಬಿಗೆ ದೂರು‌ ನೀಡಿದ್ದು, 7 ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇದನ್ನೂ ಓದಿ: ಚಾಮುಂಡಿ ದೇವಿಗೆ ಕೊಟ್ಟ ಹರಕೆ ಸೀರೆ ಕಾಳಸಂತೆಯಲ್ಲಿ ಮಾರಾಟ ಆರೋಪ – ಸ್ನೇಹಮಯಿ ಕಷ್ಣ ದೂರು

    ಎಫ್‌ಐಆರ್‌ನಲ್ಲಿ ಏನಿದೇ?
    ರೈಲ್ವೆ ಇಲಾಖೆಯಲ್ಲಿ ಟಿಸಿ ಹುದ್ದೆ ಕೊಡಿಸುವುದಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಇದನ್ನೇ ನಂಬಿದ್ದ ವಿಜಯಪುರದ ಹುಸನಪ್ಪ ಮಾಡ್ಯಾಳ್, ಶಿವಕುಮಾರ್, ಅಶೋಕ್ ಹಾಗೂ ಇತರರು ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಬಳಿಕ ಬೆಂಗಳೂರು, ವಿಜಯಪುರ ಸೇರಿ ಹಲವು ಕಡೆ ಕರೆಸಿ ಒಬ್ಬೊಬರಿಂದ ಹಂತಹಂತವಾಗಿ 20 ರಿಂದ 25 ಲಕ್ಷ ರೂ. ಹಣ ಪಡೆದುಕೊಂಡಿದ್ದರು. ಇದನ್ನೂ ಓದಿ: ಇಂದಿನಿಂದ ಮಹಾಕುಂಭ ಮೇಳ – 5,500 ಕೋಟಿ ಮೊತ್ತದ ಯೋಜನೆಗಳಿಗೆ ಪ್ರಧಾನಿ ಮೋದಿಯಿಂದ ಚಾಲನೆ

    ಹಣ ಪಡೆದುಕೊಂಡು ಆನ್‌ಲೈನ್‌ ಮೂಲಕ ನಕಲಿ ಟ್ರೈನಿಂಗ್‌ ಆರ್ಡರ್‌ ಕಾಫಿ ಕೂಡ ಕೊಟ್ಟಿದ್ದರು. ನಂತರ ಮುಂಬೈ ಹಾಗೂ ಕಾನ್ಪುರದಲ್ಲಿ ಫೇಕ್‌ ಟ್ರೈನಿಂಗ್ ಕೂಡ ಕೊಡಿಸಿದ್ದರು. ಟ್ರೈನಿಂಗ್ ಮುಗಿದ ಕೆಲ ದಿನಗಳ ನಂತರ ಡ್ಯೂಟಿಗೆ ಜಾಯಿನ್ ಆಗಲು ಹೇಳಿದ್ದಾರೆ. ಕೆಲಸ ಸಿಕ್ಕೇ ಬಿಡ್ತು ಎಂಬ ಖುಷಿಯಲ್ಲಿದ್ದರಿಗೆ ತಿಂಗಳು ಉರುಳಿದ್ರು ನೇಮಕಾತಿ ಪತ್ರ ಬರಲಿಲ್ಲ. ಇದರಿಂದ ಅನುಮಾನಗೊಂಡ ಆಕಾಂಕ್ಷಿಗಳು ಪರಿಶೀಲಿಸಿದಾಗ ಮೋಸ ಹೋಗಿದ್ದು ಗೊತ್ತಾಗಿದೆ. ಮೋಸ ಹೋದವರು ವಂಚಕರ ಬಳಿ ಕೇಳಿದಾಗ ಪ್ರಾಣ ಬೆದರಿಕೆ ಹಾಕಿದ್ದಾರೆ. ಆ ಬಳಿಕವೇ ಆಕಾಂಕ್ಷಿಗಳು ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದಾರೆ. ಹಣ ವಾಪಸ್ ಕೇಳಿದಾಗ ಕೊಡಲ್ಲ ಅಂತ ಅವಾಚ್ಯ ಶಬ್ದಗಳಿಂದ ನಿಂದಿಸಿ, ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

  • ನಕಲಿ ಅಡ್ರೆಸ್ ಕೊಟ್ಟು ಮಾದಕ ವಸ್ತು ಕೊರಿಯರ್ – 2 ತಿಂಗಳಾದ್ರೂ ಪತ್ತೆಯಾಗಿಲ್ಲ ವಿಳಾಸ

    ನಕಲಿ ಅಡ್ರೆಸ್ ಕೊಟ್ಟು ಮಾದಕ ವಸ್ತು ಕೊರಿಯರ್ – 2 ತಿಂಗಳಾದ್ರೂ ಪತ್ತೆಯಾಗಿಲ್ಲ ವಿಳಾಸ

    ಬೆಂಗಳೂರು: ನ್ಯೂ ಇಯರ್ (New Year) ಹತ್ತಿರವಾಗುತ್ತಿದ್ದಂತೆ ಮಾದಕ ವಸ್ತುಗಳ ಮೂಲಗಳ ಬಗ್ಗೆ ಹಲವು ಕುತೂಹಲಕಾರಿ ವಿಚಾರಗಳು ಬೆಳಕಿಗೆ ಬರುತ್ತಿವೆ.

    ವಿದೇಶಗಳಿಂದ ವಿವಿಧ ಬಗೆಯ ಡ್ರಗ್ಸ್ ಬೆಂಗಳೂರಿಗೆ ಕೊರಿಯರ್‌ಗಳ ಮೂಲಕ ಬರುತ್ತಿವೆ ಎಂಬ ಮಾಹಿತಿ ಸಿಕ್ಕಿತ್ತು. ಈ ಮಾಹಿತಿ ಆಧರಿಸಿದ ಸಿಸಿಬಿ ಪೊಲೀಸರು (CCB Police) ಕಳೆದ ಅಕ್ಟೋಬರ್ 20ರಂದು ಬೆಂಗಳೂರಿನ (Bengaluru) ಚಾಮರಾಜಪೇಟೆಯ (Chamarajpet) ಫಾರಿನ್ ಪೋಸ್ಟ್ ಆಫೀಸ್ ಮೇಲೆ ದಾಳಿ ಮಾಡಿದ್ದರು. ದಾಳಿ ವೇಳೆ ಅನುಮಾನಾಸ್ಪದ 3,500 ಕೊರಿಯರ್‌ಗಳನ್ನು ಪರಿಶೀಲಿಸಿದ ವೇಳೆ 606 ಕೊರಿಯರ್‌ಗಳಲ್ಲಿ ಬರೋಬ್ಬರಿ 21 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆಯಾಗಿತ್ತು. ಇದನ್ನೂ ಓದಿ: ಸಿರಿಯಾದಲ್ಲಿ ಭಾರತೀಯ ಪ್ರಜೆಗಳು ಸೇಫ್‌ – ರಾಯಭಾರ ಕಚೇರಿಯಿಂದ ಮಾಹಿತಿ

    ಡ್ರಗ್ಸ್ ಪತ್ತೆಯಾದ 606 ಕೊರಿಯರ್‌ಗಳ ಬೆನ್ನತ್ತಿದ ಪೊಲೀಸರಿಗೆ ಶಾಕ್ ಕಾದಿತ್ತು. ಯಾಕಂದರೆ ಅಷ್ಟೂ ಕೊರಿಯರ್‌ಗಳ ಅಡ್ರೆಸ್‌ಗಳು ನಕಲಿಯಾಗಿದ್ದವು. ಕಳೆದ ಎರಡು ತಿಂಗಳಲ್ಲಿ ಒಂದೇ ಒಂದು ಅಡ್ರೆಸ್ ಕೂಡ ಪೊಲೀಸರಿಗೆ ಪತ್ತೆಯಾಗಿಲ್ಲ. ಈ ನಡುವೆ ನ್ಯೂ ಇಯರ್ ಕೂಡ ಹತ್ತಿರ ವಾಗುತ್ತಿದ್ದು, ಶನಿವಾರವಷ್ಟೇ ಪೋಸ್ಟ್ ಆಫೀಸ್‌ಗಳು, ಖಾಸಗಿ ಕೋರಿಯರ್ ಆಫೀಸ್‌ಗಳು, ಟ್ರಾವೆಲ್ ಏಜೆನ್ಸಿಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಹಲವು ವಿಚಾರಗಳು ಬೆಳಕಿಗೆ ಬಂದಿವೆ.  ಇದನ್ನೂ ಓದಿ: ಸರ್ಕಾರದ ಬೊಕ್ಕಸ ಬರಿದಾಗಿ ಕಳಪೆ ಔಷಧ ಖರೀದಿ, ಬಾಣಂತಿಯರ ಸಾವಿಗೆ ಇದೇ ಕಾರಣ: ಜೋಶಿ

    ತಪ್ಪು ಅಡ್ರೆಸ್ ಇರುವ ಕೊರಿಯರ್‌ಗಳು ಅಡ್ರೆಸ್‌ಗೆ ಹೋಗಿ ವಾಪಸ್ ಬರುತ್ತವೆ. ನಂತರ ಕೊರಿಯರ್ ಆಫೀಸ್‌ಗಳಿಗೆ ಬಂದು ಬಳಕೆದಾರರು, ಅಥವಾ ಪೆಡ್ಲರ್‌ಗಳು ಡ್ರಗ್ಸ್ ಇರುವ ಕೋರಿಯರ್ ತೆಗೆದುಕೊಂಡು ಹೋಗುತ್ತಿದ್ದಾರೆ. ಇನ್ನೂ ಕೆಲ ಕಡೆಗಳಲ್ಲಿ ಅಲ್ಲಿನ ಸಿಬ್ಬಂದಿಗಳೇ ಈ ದಂಧೆಯಲ್ಲಿ ಭಾಗಿಯಾಗಿದ್ದು, ತಲುಪಿಸಬೇಕಾದ ಕಡೆಗೆ ತಲುಪಿಸುತ್ತಿದ್ದಾರೆ. ಸದ್ಯ ಇನ್ನೂ ತನಿಖೆ ಮುಂದುವರೆದಿದ್ದು, ಇನ್ನೂ ಯಾವೆಲ್ಲಾ ರೀತಿಯ ಪೆಡ್ಲಿಂಗ್ ನಡೆಯುತ್ತಿದೆ ಎಂಬುದು ತನಿಖೆ ನಂತರವೇ ಗೊತ್ತಾಗಬೇಕಿದೆ. ಇದನ್ನೂ ಓದಿ: ಬಳ್ಳಾರಿ ಬಳಿಕ ಬೆಳಗಾವಿಯಲ್ಲೂ ಬಾಣಂತಿಯರು, ಶಿಶುಗಳ ಸಾವು!

  • ಖಾಸಗಿ ವಿಡಿಯೋ ತೋರಿಸಿ ಹೈಸ್ಕೂಲ್‌ ಗೆಳತಿಗೆ ಬ್ಲ್ಯಾಕ್‌ಮೇಲ್‌ – 2.57 ಕೋಟಿ ಸುಲಿಗೆ!

    ಖಾಸಗಿ ವಿಡಿಯೋ ತೋರಿಸಿ ಹೈಸ್ಕೂಲ್‌ ಗೆಳತಿಗೆ ಬ್ಲ್ಯಾಕ್‌ಮೇಲ್‌ – 2.57 ಕೋಟಿ ಸುಲಿಗೆ!

    ಬೆಂಗಳೂರು: ತನ್ನ ಹೈಸ್ಕೂಲ್‌ ಗೆಳತಿಗೆ ಖಾಸಗಿ ವೀಡಿಯೋ (Private video) ತೋರಿಸಿ ಬ್ಲ್ಯಾಕ್‌ ಮೇಲ್‌ ಮಾಡಿ 2.57 ಕೋಟಿ ರೂ. ಹಣ ಸುಲಿಗೆ ಮಾಡಿದ್ದ ಖತರ್ನಾಕ್‌ನನ್ನ ಸಿಸಿಬಿ ಪೊಲೀಸರು (CCB Police) ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ಬ್ಲಾಕ್ ಮೇಲರ್ (Black Mailer) ಪ್ರಿಯತಮ ಮೋಹನ್ ಕುಮಾರ್ ಬಂಧಿತ ಆರೋಪಿ. ಬೆಂಗಳೂರಿನ ಚಾಮರಾಜಪೇಟೆಯ 19 ವರ್ಷದ ಯುವತಿಗೆ ನೀಡಿದ ದೂರಿನ ಮೇರೆಗೆ ಆರೋಪಿಯನ್ನ ಬಂಧಿಸಿದ್ದಾರೆ. ಇದನ್ನೂ ಓದಿ: ‘ನೋಡಿದವರು ಏನಂತಾರೆ’ ಎನ್ನುತ್ತಾ ಫ್ಯಾನ್ಸ್‌ಗೆ ಸಿನಿಮಾ ಅಪ್‌ಡೇಟ್‌ ಕೊಟ್ಟ ನವೀನ್‌ ಶಂಕರ್

    ಬೆಂಗಳೂರಿನ (Bengaluru) ಚಾಮರಾಜಪೇಟೆಯ 19 ವರ್ಷದ ಯುವತಿಗೆ 2019ರಿಂದಲೇ ಆರೋಪಿ ಪರಿಚಯವಾಗಿದ್ದ. ದೇವನಹಳ್ಳಿಯ ಖಾಸಗಿ ಬೋರ್ಡಿಂಗ್ ಸ್ಕೂಲ್ ನಲ್ಲಿ ಓದುತ್ತಿದ್ದಾಗ ಪರಸ್ಪರ ಪರಿಚಯವಾಗಿದ್ದರು. ಆಗ ಇಬ್ಬರಿಗೆ ಪರಿಚಯವಾಗಿ ಬಳಿಕ ಪ್ರೀತಿ ಶುರುವಾಗಿತ್ತು. ರಜೆಯಲ್ಲಿ ಮನೆಯವರಿಗೆ ತಿಳಿಯದಂತೆ ಗೋವಾ ಸೇರಿ ಹಲವು ಕಡೆಗೆ ಇಬ್ಬರೂ ಟ್ರಿಪ್ ಹೋಗ್ತಿದ್ರು. ಮೋಹನ್ ಕುಮಾರ್ ಹಾಗೂ ಆತನ ಗೆಳೆಯರೊಂದಿಗೆ ಯುವತಿ ಟ್ರಿಪ್ ಹೋಗ್ತಿದ್ದಳು. ಆಗ ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಬಳಿಕ ಅದನ್ನ ವಿಡಿಯೋ ಚಿತ್ರೀಕರಣ ಸಹ ಮಾಡಿಕೊಂಡಿದ್ದಾನೆ. ಕೆಲ ದಿನಗಳ ನಂತರ ಖಾಸಗಿ ವಿಡಿಯೋ ಹಾಗೂ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್‌ ಮಾಡೋದಕ್ಕೆ ಶುರು ಮಾಡಿದ್ದಾನೆ.

    ಖಾಸಗಿ ವೀಡಿಯೋ ತೋರಿಸಿ, ಹಣಕ್ಕೆ ಡಿಮ್ಯಾಂಡ್‌ ಮಾಡಿದ್ದಾನೆ. ಹಣ ಕೊಡದಿದ್ದರೆ, ವಿಡಿಯೋವನ್ನು ಸೋಶಿಯಲ್‌ ಮೀಡಿಯಾದಲ್ಲಿ ಅಪ್‌ಲೋಡ್‌ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಆಗ ಯುವತಿ ತನ್ನ ಅಜ್ಜಿ ಅಕೌಂಟ್‌ನಿಂದ ಹಣ ವರ್ಗಾವಣೆ ಮಾಡಿದ್ದಾಳೆ. ಆರೋಪಿ ಮೋಹನ್‌ ಹೇಳಿದಂತೆ ಆತನ ಕುಟುಂಸ್ಥರು ಹಾಗೂ ಆತನ ಗೆಳಯರ ಖಾತೆಗೆ ಹಂತ ಹಂತವಾಗಿ 1.25 ಕೋಟಿ ರೂ. ಗಣ ವರ್ಗಾವಣೆ ಮಾಡಿದ್ದಾಳೆ, ಜೊತೆಗೆ ಬರೋಬ್ಬರಿ 1.32 ಕೋಟಿ ರೂ. ನಗದು ಹಣ ನೀಡಿದ್ದಾಳೆ. ಇದನ್ನೂ ಓದಿ: ಗಮನಿಸಿ, ಭಾನುವಾರ ಪಿಡಿಒ ಪರೀಕ್ಷೆ – ಬೆಳಗ್ಗೆ 5:30 ರಿಂದ ಮೆಟ್ರೋ ಸಂಚಾರ ಆರಂಭ

    ಪೊಲೀಸರಿಗೆ ದೂರು ನೀಡಿದ್ರೆ ಆಕೆ ಹಾಗೂ ಕುಟುಂಬಸ್ಥರನ್ನು ಕೊಲ್ಲುವುದಾಗಿಯೂ ಬೆದರಿಕೆ ಹಾಕಿದ್ದಾನೆ. ಇದರಿಂದ ಬೆದರಿದ ಯುವತಿ ಹೇಳಿದಂತೆ ದುಡ್ಡುಕೊಟ್ಟಿದ್ದಾಳೆ. ಇದಾದ ನಂತರವೂ ಆರೋಪಿ ಮೋಹನ್‌ ಕಿರುಕುಳ ನೀಡಲು ಶುರು ಮಾಡಿದ್ದಾನೆ. ಕೊನೆಗೆ ರೋಸಿಹೋಗಿ ಮೋಹನ್ ಮತ್ತು ಆತನ ಕುಟುಂಸ್ಥರ ವಿರುದ್ಧ ಯುವತಿ ದೂರು ನೀಡಿದ್ದಾಳೆ. ದೂರಿನ ಆಧಾರದ ಮೇಲೆ ಮೋಹನ್, ತಂದೆ ಆಶ್ವತ್ಥ್ ನಾರಾಯಣ ಹಾಗೂ ಕುಟುಂಸ್ಥರಾದ ಪ್ರೀತಿ, ಲಿಖಿತಾ, ಲವಕುಮಾರ್ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ.

    ಯುವತಿಯಿಂದ ಹಣ ಮಾತ್ರವಲ್ಲದೇ ಬಲವಂತವಾಗಿ ಚಿನ್ನ, ಗಾಡಿ, ದುಬಾರಿ ವಾಚ್ ಪಡೆದುಕೊಂಡಿರುವ ಆರೋಪವೂ ಕೇಳಿಬಂದಿದೆ. ಇದನ್ನೂ ಓದಿ: ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಶಾಸಕರ ಭರ್ಜರಿ ಆಫರ್‌ – ಮದ್ವೆಯಾಗಲು ಅಪ್ರಾಪ್ತರಿಂದಲೂ ಅರ್ಜಿ!

  • ನ್ಯೂಇಯರ್‌ಗೆ ಪೊಲೀಸರು ಅಲರ್ಟ್; ರೆಸಾರ್ಟ್‌, ಏರ್ಪೋರ್ಟ್‌, ರೈಲ್ವೆ ನಿಲ್ದಾಣಗಳ ಮೇಲೆ ಹದ್ದಿನ ಕಣ್ಣು

    ನ್ಯೂಇಯರ್‌ಗೆ ಪೊಲೀಸರು ಅಲರ್ಟ್; ರೆಸಾರ್ಟ್‌, ಏರ್ಪೋರ್ಟ್‌, ರೈಲ್ವೆ ನಿಲ್ದಾಣಗಳ ಮೇಲೆ ಹದ್ದಿನ ಕಣ್ಣು

    ಬೆಂಗಳೂರು: ಹೊಸ ವರ್ಷಕ್ಕೆ (New Year 2025) ಇನ್ನೇನು ಒಂದು ತಿಂಗಳಷ್ಟೇ ಬಾಕಿ ಇದೆ. ಆದ್ರೆ ಸಿಸಿಬಿ ಪೊಲೀಸರು ಈಗಾಗಲೇ ಅಲರ್ಟ್ ಆಗಿದ್ದಾರೆ. ಮಹಾನಗರಿ ಬೆಂಗಳೂರಿಗೆ ದೊಡ್ಡ ಮಟ್ಟದಲ್ಲಿ ಮಾದಕ ವಸ್ತುಗಳು ಬರುವ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ಲಭ್ಯವಾಗಿದೆ.

    ಈ ಮಾಹಿತಿ ಆಧರಿಸಿ ಬೆಂಗಳೂರು ಸಿಸಿಬಿ ಪೊಲೀಸರು (Bengaluru CCB Police), ನಗರದ ಪ್ರತಿಷ್ಟಿತ ಹೋಟೆಲ್‌ಗಳು, ಹೊರವಲಯದ ಫಾರಂ ಹೌಸ್‌ಗಳು, ರೆಸಾರ್ಟ್‌ಗಳ ಮೇಲೆ ತೀವ್ರ ನಿಗಾವಹಿಸಿದ್ದಾರೆ. ಇದನ್ನೂ ಓದಿ: QR ಕೋಡ್‌ ಇಲ್ಲದ ಪಾನ್‌ ಕಾರ್ಡ್‌ ಮಾನ್ಯವೇ? ಪಾನ್‌ 2.0 ಯೋಜನೆ ಏನು? ಹೊಸ ಪಾನ್‌ ಪಡೆಯುವುದು ಹೇಗೆ?

    ಅಷ್ಟೇ ಅಲ್ಲದೇ, ಏರ್‌ಪೋರ್ಟ್‌ಗಳು, ರೈಲ್ವೇ ನಿಲ್ದಾಣಗಳು, ಬಸ್ ನಿಲ್ದಾಣಗಳು, ಬೇರೆ ರಾಜ್ಯಗಳಿಂದ ನಗರಕ್ಕೆ ಬರುವ ರಾಷ್ಟೀಯ ಹೆದ್ದಾರಿಗಳಲ್ಲಿ ಗಮನ ಹರಿಸುವಂತೆ ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ. ಇದನ್ನೂ ಓದಿ: ಕಲಬುರಗಿ ಸೆಂಟ್ರಲ್ ಜೈಲ್ ಅಧೀಕ್ಷಕಿಗೆ ಬೆದರಿಕೆ ಕೇಸ್‌ – 9 ಕೈದಿಗಳ ವಿರುದ್ಧ ಎಫ್‌ಐಆರ್‌

    ಇದರ ಜೊತೆಗೆ ಹೊಸ ವರ್ಷಾಚರಣೆಗೆ ಈಗಾಗಲೇ ಬುಕ್ಕಿಂಗ್ ಕೂಡ ಓಪನ್ ಆಗಿದ್ದು, ಈ ನಿಟ್ಟಿನಲ್ಲಿ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ನ್ಯೂ ಇಯರ್ ವೇಳೆ ಯಾವುದೇ ನಿಯಮ ಉಲ್ಲಂಘನೆ ಆಗದಂತೆ ಗೈಡ್‌ಲೈನ್ಸ್‌ ಬಿಡುಗಡೆಗೆ ಸಿದ್ಧತೆ ನಡೆಸಿದ್ದಾರೆ. ಇದನ್ನೂ ಓದಿ: ಕೇಜ್ರಿವಾಲ್‌ ಮೇಲೆ ನಿಗೂಢ ದ್ರವ ಎಸೆತ – ದಾಳಿ ಹಿಂದೆ ಬಿಜೆಪಿ ಕೈವಾಡ ಎಂದು ಆರೋಪ

  • ಮಾಜಿ ಸಚಿವರಿಗೆ ಕಾಂಗ್ರೆಸ್ ನಾಯಕಿ ಹನಿಟ್ರ್ಯಾಪ್‌; 20 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಮಹಿಳೆ ಪೊಲೀಸರಿಗೆ ಲಾಕ್

    ಮಾಜಿ ಸಚಿವರಿಗೆ ಕಾಂಗ್ರೆಸ್ ನಾಯಕಿ ಹನಿಟ್ರ್ಯಾಪ್‌; 20 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಮಹಿಳೆ ಪೊಲೀಸರಿಗೆ ಲಾಕ್

    ಬೆಂಗಳೂರು/ಕಲಬುರಗಿ: ಪ್ರಭಾವಿ ಮಾಜಿ ಸಚಿವರೊಬ್ಬರಿಗೆ ಹನಿಟ್ರ್ಯಾಪ್ (Honey Trap) ವಿಡಿಯೊ ತುಣುಕು ತೋರಿಸಿ 20 ಲಕ್ಷ ರೂ. ನೀಡುವಂತೆ ಬ್ಲ್ಯಾಕ್‌ಮೇಲ್‌ ಮಾಡಲು ಯತ್ನಿಸಿದ ನಲಪಾಡ್ ಬ್ರಿಗೇಡ್ ಅಧ್ಯಕ್ಷೆ ಮಂಜುಳಾ ಪಾಟೀಲ್‌ ಹಾಗೂ ಆಕೆಯ ಪತಿ ಬೆಂಗಳೂರು ಸಿಸಿಬಿ ಪೊಲೀಸ್ (Bengaluru CCP Police) ಅತಿಥಿಯಾಗಿದ್ದಾರೆ.

    ಹನಿಟ್ರ್ಯಾಪ್ ನೆಪದಲ್ಲಿ ತಮಗೆ 20 ಲಕ್ಷ ರೂ. ನೀಡುವಂತೆ ಬೆದರಿಕೆ ಹಾಕುತ್ತಿರುವ ಬಗ್ಗೆ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ನೀಡಿದ ದೂರು ಆಧರಿಸಿ ಕಾರ್ಯಾಚರಣೆ ಕೈಗೊಂಡ ಸಿಸಿಬಿ ಪೊಲೀಸರು ನಲಪಾಡ್ ಬ್ರಿಗೇಡ್ ಕಲಬುರಗಿ ಘಟಕದ ಅಧ್ಯಕ್ಷೆ, ಆಳಂದ ಕಾಲೋನಿ ನಿವಾಸಿ ಮಂಜುಳಾ ಪಾಟೀಲ್ (32) ಹಾಗೂ ಆಕೆಯ ಪತಿ ಶಿವರಾಜ್ ಪಾಟೀಲನನ್ನು (39) ಬಂಧಿಸಿದ್ದಾರೆ. ಬಂಧನದ ಬಳಿಕ ದಂಪತಿಯನ್ನು ನ್ಯಾಯಾಲಯದ ಎದುರು ಹಾಜರುಪಡಿಸಿದ ಬಳಿಕ ಕೋರ್ಟ್ 8 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ್ದು, ಇಬ್ಬರನ್ನೂ ವಿಚಾರಣೆಗೆ ಒಳಪಡಿಸಲಾಗಿದೆ.

    ಆರೋಪಿ ಮಂಜುಳಾ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಅವರ ಮೊಬೈಲ್ ನಂಬರ್ ಪಡೆದು ವಾಟ್ಸಪ್‌ನಲ್ಲಿ ಪರಿಚಯ ಮಾಡಿಕೊಂಡು ನಂತರ, ವಾಟ್ಸಪ್‌ನಲ್ಲಿ ಚಾಟ್ ಮಾಡಿದ್ದಾಳೆ. ಆಗಾಗ ಸಲುಗೆಯಿಂದ ಚಾಟಿಂಗ್ ಮಾಡುತ್ತಾ, ತೀರಾ ಸಲುಗೆ ಬೆಳೆಸಿಕೊಂಡಿದ್ದಾಳೆ. ಈ ಮಧ್ಯೆ ತನ್ನೊಂದಿಗೆ ಖಾಸಗಿಯಾಗಿ ಕಾಣಿಸಿಕೊಂಡ ಮಾಜಿ ಸಚಿವರ ದೃಶ್ಯಗಳನ್ನು ವಿಡಿಯೋ, ಫೋಟೋಗಳನ್ನು ಇಟ್ಟುಕೊಂಡು, ಆ ವಿಡಿಯೋ ತುಣುಕು ಮಾಜಿ ಸಚಿವರಿಗೆ ಕಳುಹಿಸಿ ಬೆದರಿಕೆ ಹಾಕಲು ಶುರು ಮಾಡಿದ್ದಾಳೆ.

    20 ಲಕ್ಷ ರೂ. ನೀಡದೆ ಹೋದರೆ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾಳೆ. ಈ ಬೆಳವಣಿಗೆಯಿಂದ ಕಂಗಾಲಾದ ಮಾಜಿ ಸಚಿವರು ಈ ಕುರಿತು ತಮ್ಮ ಪುತ್ರನೊಂದಿಗೆ ಎಲ್ಲವನ್ನೂ ಹಂಚಿಕೊಂಡಿದ್ದಾರೆ. ಪುತ್ರ ತಮ್ಮ ತಂದೆಗೆ ಧೈರ್ಯ ತುಂಬಿ ಮಹಿಳೆಯ ವಿರುದ್ಧ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದಾರೆ. ಜೊತೆಗೆ, ಹಣ ಕೊಡುವುದಾಗಿ ಮಹಿಳೆಯನ್ನು ಬೆಂಗಳೂರಿಗೆ ಕರೆಸಿ, ಆಕೆ ಪತಿಯೊಂದಿಗೆ ಹಣ ಪಡೆಯಲು ಬಂದಾಗ ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

  • ಬೆಳಗಾವಿಯಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2.73 ಕೋಟಿ ಹಣ ಜಪ್ತಿ

    ಬೆಳಗಾವಿಯಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2.73 ಕೋಟಿ ಹಣ ಜಪ್ತಿ

    ಬೆಳಗಾವಿ: ಇಲ್ಲಿನ ಸಿಸಿಬಿ ಪೊಲೀಸರು (Belagavi CCB Police) ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2.73 ಕೋಟಿ ರೂ. ಹಣ ಜಪ್ತಿ ಮಾಡಲಾಗಿದೆ.

    ಮಹಾರಾಷ್ಟ್ರದ ಸಾಂಗಲಿ‌ಯಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಗೂಡ್ಸ್ ವಾಹನದಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ವಾಹನ ಚಾಲಕನನ್ನು ವಶಕ್ಕೆ ಪಡೆದು ಹಣ ಜಪ್ತಿ (Money seized) ಮಾಡಿದ್ದಾರೆ. ಇದನ್ನೂ ಓದಿ: Chattisgarh | ಅಬುಜ್ಮಾರ್ ಎನ್‌ಕೌಂಟರ್‌ನಲ್ಲಿ 38 ಮಾವೋವಾದಿಗಳ ಹತ್ಯೆ

    ಮಹಾರಾಷ್ಟ್ರದ ಸಾಂಗಲಿ ಪಟ್ಟಣದ ಸಚೀನ ಮೇನಕುದುಳೆ, ಮಾರುತಿ ಮಾರಗುಡೆ ಎಂಬ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ತಲೆ ಸೀಳಿದ ಬುಲೆಟ್‌, ಬೆರಳು ಕಟ್‌; ಭೀಕರ ಹತ್ಯೆಯಾದ ಹಮಾಸ್‌ ಮುಖ್ಯಸ್ಥನ ದೇಹ ಸ್ಥಿತಿ ಹೇಗಿತ್ತು?

    ಹಣ ಸಾಗಾಟ ಮಾಡಲು ಗೂಡ್ಸ್ ವಾಹನದ ಕ್ಯಾಬಿನನ್ನೇ ಮಾಡಿಫೈ ಮಾಡಿದ್ದಾರೆ. ಜಪ್ತಿಯಾದ ಹಣದ ಮೂಲ ಯಾವುದು ಎಂದು ತನಿಖೆ ನಡೆಸುತ್ತಿರುವುದಾಗಿ ಡಿಸಿಪಿ ರೋಹನ್ ಜಗದೀಶ್ ಮಾಹಿತಿ ನೀಡಿದ್ದಾರೆ. ಬೆಳಗಾವಿ ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಈ ಕುರಿತು ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದೆ. ಇದನ್ನೂ ಓದಿ: ಮತ್ತೆ 3 ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ – ಬೆಂಗಳೂರಿಂದ ಮುಂಬೈಗೆ ಹೊರಟಿದ್ದ ಫ್ಲೈಟ್‌ಗೂ ಥ್ರೆಟ್ ಕಾಲ್

  • ಜೈಲಿನಲ್ಲಿದ್ದುಕೊಂಡೇ ಮಹಿಳೆಗೆ ಬೆತ್ತಲೆ ಫೋಟೊ ಕಳಿಸಿ ಬ್ಲ್ಯಾಕ್‌ಮೇಲ್‌ – 5 ಲಕ್ಷಕ್ಕೆ ರೌಡಿ ಶೀಟರ್ ಡಿಮ್ಯಾಂಡ್

    ಜೈಲಿನಲ್ಲಿದ್ದುಕೊಂಡೇ ಮಹಿಳೆಗೆ ಬೆತ್ತಲೆ ಫೋಟೊ ಕಳಿಸಿ ಬ್ಲ್ಯಾಕ್‌ಮೇಲ್‌ – 5 ಲಕ್ಷಕ್ಕೆ ರೌಡಿ ಶೀಟರ್ ಡಿಮ್ಯಾಂಡ್

    ಬೆಂಗಳೂರು: ಏರಿಯಾದಲ್ಲಿ ಹವಾ ಇಟ್ಟಿರೋ ರೌಡಿಶೀಟರ್‌ಗಳ ಜೊತೆ ಸ್ನೇಹ ಬೆಳೆಸೋ ಹುಡುಗಿಯರು ಈ ಸ್ಟೋರಿ ನೋಡಲೇಬೇಕು. ನಿಮ್ಮ ನಿಸ್ವಾರ್ಥ ಸ್ನೇಹ, ಪ್ರೀತಿಯನ್ನ ರೌಡಿ ಶೀಟರ್‌ಗಳು (Rowdy Sheeter) ದುರುಪಯೋಗ ಪಡಿಸಿಕೊಳ್ಳಬಾರದು.

    ಏಕೆಂದರೆ ಇಲ್ಲೊಬ್ಬ ರೌಡಿ ಶೀಟರ್ ತನ್ನ ಪರಿಚಯಸ್ಥ ಮಹಿಳೆಗೆ ಜೈಲಿನಲ್ಲಿದ್ದುಕೊಂಡೇ (Bengaluru Jail) ಮಾರ್ಫ್ ಮಾಡಿದ ಬೆತ್ತಲೆ ಫೋಟೋ ಕಳುಹಿಸಿ ಲಕ್ಷ ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾನೆ. ರೌಡಿ ಮನೋಜ್ ಅಲಿಯಾಸ್‌ ಕೆಂಚ, ಬೆತ್ತಲೆ ಫೋಟೊ ಇಟ್ಕೊಂಡು ಬ್ಲ್ಯಾಕ್‌ಮೇಲ್‌ ಮಾಡಿದ್ದಾನೆ. ಇದನ್ನೂ ಓದಿ: ಭರತ್ ಶೆಟ್ಟಿ ವಿರುದ್ಧ ಕೇಸ್ – ಇನ್ಸ್‌ಪೆಕ್ಟರ್‌ ಫೋನ್‌ಕಾಲ್ ಡಿಟೇಲ್ಸ್ ಚೆಕ್ ಮಾಡಿ: ಸದನದಲ್ಲಿ ಅಶೋಕ್ ಆಗ್ರಹ

    ಕಳೆದ ಆಗಸ್ಟ್‌ನಲ್ಲಿ ಆರೋಪಿ ಕೆಂಚ, ಮಹಿಳೆಯ (Women) ತಾಯಿಗೆ ವಾಟ್ಸಪ್‌ ಮೂಲಕ ಮಗಳ ಬೆತ್ತಲೆ ಫೋಟೋ ಕಳುಹಿಸಿ 40 ಸಾವಿರ ರೂ. ಹಣಕ್ಕೆ ಡಿಮ್ಯಾಂಡ್‌ ಮಾಡಿದ್ದ. ಅದರಂತೆ ಮಹಿಳೆ ತಾಯಿ ಚೋಟು ಎಂಬವನ ಖಾತೆಗೆ 20 ಸಾವಿರ ರೂ., ಮತ್ತೊಬ್ಬನ ಖಾತೆಗೆ 20 ಸಾವಿರ ರೂ. ಹಣ ಹಾಕಿದ್ದರು. ಇದನ್ನೂ ಓದಿ: ಬೆಂಗಳೂರಿಗೆ ಫೆಬ್ರವರಿಯಲ್ಲೇ ಸಮಸ್ಯೆ – ಶುದ್ದ ಕುಡಿಯುವ ನೀರಿನ ಘಟಕದಲ್ಲಿ ಸಮಯ ನಿಗದಿ

    ನಂತರ ಕೆಂಚನ ಸ್ನೇಹಿತ ಎಂದು ಹೇಳಿಕೊಂಡು ಕಾರ್ತಿಕ್‌ ಎಂಬಾತ ಕರೆ ಮಾಡಿ, ನಾನು ಕೆಂಚನ ಸ್ನೇಹಿತ ನಿಮ್ಮ ಮಗಳ ಫೋಟೋ, ವೀಡಿಯೋ ನಮ್ಮ ಬಳಿ ಇದೆ, ನನಗೆ ಮನು ಹೇಳಿದ್ದಾನೆ. ನೀವು 5 ಲಕ್ಷ ಹಣ ಕೊಡದೇ ಇದ್ದರೆ, ನಿಮ್ಮ ಮಗಳ ಫೋಟೋವನ್ನು ನಿಮ್ಮ ಅಳಿಯನಿಗೆ ಕಳಿಸ್ತೇವೆ ಎಂದು ಬೆದರಿಕೆ ಹಾಕಿದ್ದಾನೆ, ಸಂತ್ರಸ್ತ ಮಹಿಳೆಗೂ ಬೆದರಿಸಿದ್ದಾನೆ. ಫೆಬ್ರವರಿ 12 ರಂದು ಮತ್ತೆ ವಾಟ್ಸಪ್‌, ಫೇಸ್‌ಬುಕ್‌ ಮೆಸೆಂಜರ್‌ಗಳಲ್ಲಿ ಕಾಲ್‌ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ. ಇದರಿಂದ ಮನನೊಂದ ಮಹಿಳೆ ಹಾಗೂ ಆಕೆಯ ತಾಯಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

    ಮಹಿಳೆಯ ದೂರಿನ ಅನ್ವಯ ಮಾಹಿತಿ ತಂತ್ರಜ್ಞಾನ ಆ್ಯಕ್ಟ್‌ 67, ಐಪಿಸಿ ಸೆಕ್ಷನ್‌ 34, 384ರ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಯಲಹಂಕ ಟೌನ್‌ ಪೊಲೀಸರು ಮತ್ತೊಬ್ಬ ಆರೋಪಿ ಕಾರ್ತಿಕ್‌ ಪತ್ತೆಗೆ ಬಲೆ ಬೀಸಿದ್ದಾರೆ. ಸದ್ಯ ಮನುವನ್ನ ಜೈಲಿನಿಂದ ಬಾಡಿವಾರೆಂಟ್ ಆಧಾರದ ಮೇಲೆ ಮೇಲೆ ವಶಕ್ಕೆ ಪಡೆಯಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಇದನ್ನೂ ಓದಿ: ಕ್ರಿಶ್ಚಿಯನ್‌ ಶಾಲೆ ಮುಂದೆ ಜೈ ಶ್ರೀರಾಮ್ ಘೋಷಣೆ – ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಸೇರಿ ಐವರ ವಿರುದ್ಧ FIR

  • ಪೋಸ್ಟ್ ಮೂಲಕ ಡ್ರಗ್ಸ್ ಸರಬರಾಜು – ವ್ಯಕ್ತಿ ಅರೆಸ್ಟ್, 6.50 ಲಕ್ಷ ಮೌಲ್ಯದ ಡ್ರಗ್ಸ್ ವಶ

    ಪೋಸ್ಟ್ ಮೂಲಕ ಡ್ರಗ್ಸ್ ಸರಬರಾಜು – ವ್ಯಕ್ತಿ ಅರೆಸ್ಟ್, 6.50 ಲಕ್ಷ ಮೌಲ್ಯದ ಡ್ರಗ್ಸ್ ವಶ

    ಬೆಂಗಳೂರು: ಪೋಸ್ಟ್ ಮೂಲಕ ಡ್ರಗ್ಸ್ (Drugs ) ಸರಬರಾಜು ಮಾಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ (CCB)  ಪೊಲೀಸರು ಬಂಧಿಸಿ 6.50 ಲಕ್ಷ ಮೌಲ್ಯದ ಡ್ರಗ್ಸ್ ವಶ ಪಡಿಸಿಕೊಂಡಿದ್ದಾರೆ.

    ರಿತಿಕ್ ರಾಜ್ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಆರೋಪಿ. ಜಾರ್ಖಂಡ್‌ನಿಂದ ನಗರಕ್ಕೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದನು. ಪೋಸ್ಟ್ ಮೂಲಕ ನಗರದ ವಿವಿಧ ಭಾಗಗಳಿಗೆ ಡ್ರಗ್ಸ್ ಸರಬರಾಜು ಮಾಡಲಾಗುತಿತ್ತು. ಇದನ್ನೂ ಓದಿ: ನಡು ರಸ್ತೆಯಲ್ಲಿ ಕೊಲೆ ಮಾಡಿ ಪೊಲೀಸರಿಗೆ ಶರಣಾದ ಆರೋಪಿ

    ಸಿಸಿಬಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ಬರುತ್ತಿದ್ದ ಪೋಸ್ಟ್ ಅನ್ನು ಟ್ರ್ಯಾಪ್ ಮಾಡಿದ್ದಾರೆ. ಬಳಿಕ ಪೋಸ್ಟ್ ಡೆಲಿವರಿ ಆಗುವ ಜಾಗದಲ್ಲಿ ಸಿಸಿಬಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಗಿಫ್ಟ್ ಬಾಕ್ಸ್ ರೂಪದಲ್ಲಿ ನಗರಕ್ಕೆ ಚರಸ್ ಡ್ರಗ್ಸ್ನ ಕಳುಹಿಸಲಾಗಿತ್ತು. ನಂತರ ಬಂದಿದ್ದ ಬಾಕ್ಸ್ಗಳನ್ನು ಆರೋಪಿಯಿಂದಲೇ ಪೊಲೀಸರು ತೆಗೆಸಿದ್ದಾರೆ. ಇದನ್ನೂ ಓದಿ: ನಿರ್ಮಲಾ ಸೀತಾರಾಮನ್‌ ಪಿಎ ಹೆಸರು ಹೇಳಿ ಧೋನಿ ಮ್ಯಾನೇಜರ್‌ಗೆ ಲಕ್ಷ ಲಕ್ಷ ವಂಚನೆ

    ಬಾಕ್ಸ್ ತೆಗೆದು ನೋಡಿದ ಸುಮಾರು 6.50 ಲಕ್ಷ ಮೌಲ್ಯದ 130 ಗ್ರಾಂ ಚರಸ್ ಪತ್ತೆಯಾಗಿದೆ. ಇವುಗಳನ್ನು ಋಷಿಕೇಶದಿಂದ ಪೋಸ್ಟ್ ಮೂಲಕ ಕಳುಹಿಸಲಾಗಿತ್ತು. ಕೇರಳ ಮೂಲದ ಆರೋಪಿ ಅದಿತ್ ಸರ್ವೋತ್ತಮ್ ಎಂಬವನು ಪಾರ್ಸೆಲ್ ಮಾಡಿದ್ದನು. ಸದ್ಯ ಅದಿತ್ ತಲೆಮರೆಸಿಕೊಂಡಿದ್ದು ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಾಜಸ್ಥಾನ ಮಾಜಿ ಸಿಎಂ ಅಶೋಕ್‌ ಗೆಹ್ಲೋಟ್‌ಗೆ ಹಂದಿ ಜ್ವರ & ಕೋವಿಡ್‌ ಪಾಸಿಟಿವ್‌