Tag: ಸಿಸಿ ಕ್ಯಾಮೆರಾ

  • 59 ಸಿಸಿ ಕ್ಯಾಮೆರಾ ಪರಿಶೀಲಿಸಿದ ಬಳಿಕ ಹಿಟ್ ಆ್ಯಂಡ್ ರನ್ ಪ್ರಕರಣದ ಕಾರು ಪತ್ತೆ

    59 ಸಿಸಿ ಕ್ಯಾಮೆರಾ ಪರಿಶೀಲಿಸಿದ ಬಳಿಕ ಹಿಟ್ ಆ್ಯಂಡ್ ರನ್ ಪ್ರಕರಣದ ಕಾರು ಪತ್ತೆ

    ಬೆಂಗಳೂರು: ಕೆ.ಆರ್.ಪುರಂ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ಕಾರು, ಪಾದಚಾರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 59 ಸಿಸಿ ಕ್ಯಾಮೆರಾ ಪರಿಶೀಲಿಸಿ ಹಿಟ್ ಆ್ಯಂಡ್ ರನ್ ಪ್ರಕರಣದ ಕಾರು ಮತ್ತು ಆರೋಪಿಯನ್ನು ಪತ್ತೆ ಹಚ್ಚಲಾಗಿದೆ.

    ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಕಸ್ತೂರಿ ನಗರ 2ನೇ ಮುಖ್ಯರಸ್ತೆಯಲ್ಲಿ ಪಾದಚಾರಿಗೆ ಕಾರು ಡಿಕ್ಕಿಯಾದ ಬಳಿಕ ಗಾಯಾಳುವನ್ನು ಚಿಕಿತ್ಸೆಗಾಗಿ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಮೃತಪಟ್ಟಿದ್ದು, ಈ ಸಂಬಂಧ ಕೆ.ಆರ್.ಪುರಂ ಸಂಚಾರಿ ಪೊಲೀಸರು 115/21ರಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ತನಿಖೆ ಪ್ರಾರಂಭ ಮಾಡಿದ್ದರು. ಇದನ್ನೂ ಓದಿ: ಮದುವೆಯಾಗಬೇಕೆಂದು ಹಠಕ್ಕೆ ಬಿದ್ದು ಪ್ರಾಣ ಬಿಟ್ಟ ಯುವಕ

    ಕೆ.ಆರ್.ಪುರಂ ಸಂಚಾರಿ ಪೊಲೀಸ್ ಠಾಣಾಧಿಕಾರಿ ಮಹಮದ್ ಎಂ.ಎ ರವರ ನೇತೃತ್ವದಲ್ಲಿ, ಆರೋಪಿ ಕಾರು ಯಾವುದು ಎಂಬ ಬಗ್ಗೆ ಸುಮಾರು 50ಕ್ಕೂ ಅಧಿಕ ಸಿಸಿಟಿವಿ ಫೋಟೋಗಳನ್ನು ಪರಿಶೀಲಿಸಲಾಗಿದ್ದು, ಯಾವುದೇ ಸಿಸಿಟಿವಿ ಕ್ಯಾಮೆರಾದಲ್ಲಿ ಕಾರ್ ಸಂಖ್ಯೆ ಲಭ್ಯವಾಗಲಿಲ್ಲ. ಆದರೆ ಅದು ಎರ್ಟಿಗಾ ಮಾದರಿಯ ಕಾರು ಎಂದು ತಿಳಿಯಿತು ಹಾಗೂ ಇದರ ಚಾಲಕನ ಫೋಟೋ ಲಭ್ಯವಾಗಿತ್ತು. ಚಾಲಕ ಅಪಘಾತದ ನಂತರ ಹಲವು ರಸ್ತೆಗಳಲ್ಲಿ ಸಂಚರಿಸಿ ಒಂದು ಜೆರಾಕ್ಸ್ ಅಂಗಡಿಗೆ ತೆರಳಿ ಅಲ್ಲಿ ಯಾವುದೋ ದಾಖಲಾತಿಗಳನ್ನು ಜೆರಾಕ್ಸ್ ಮಾಡಿಸಿಕೊಂಡ ಬಗ್ಗೆ ಮಾಹಿತಿ ಕಲೆಹಾಕಿದ ಪೊಲೀಸರು ಅಂಗಡಿಯಲ್ಲಿ ವಿಚಾರಿಸಿದಾಗ ಆರೋಪಿಯ ಭಾವಚಿತ್ರ ಲಭ್ಯವಾಗಿದೆ. ಭಾವಚಿತ್ರವನ್ನು ಸ್ಥಳೀಯ ಗ್ಯಾಸ್, ಹಾಲು, ಪತ್ರಿಕಾ ವಿತರಕ ಹುಡುಗರು ಮತ್ತು ಇತರ ಸಾರ್ವಜನಿಕರಿಗೆ ತೋರಿಸಿದಾಗ ಆರೋಪಿಯ ಮಾಹಿತಿ ಲಭ್ಯವಾಗಿದೆ.


    ಕಾರು ಹಾಗೂ ಅದರ ಚಾಲಕನ ಮನೆ ಪತ್ತೆಯಾಗಿದ್ದು, ಕಾರಿನ ಮಾಲೀಕರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ ಬಳಿಕ, ಅವರು ನೇರವಾಗಿ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಪಡೆದು ಠಾಣೆಗೆ ಹಾಜರಾಗಿದ್ದಾರೆ. ಆರೋಪಿಯನ್ನು ಶ್ರೀಧರ್ ಎಂದು ಗುರುತಿಸಲಾಗಿದೆ. ಅವರು ಎಚ್‍ಎಎಲ್ ನಿವೃತ್ತ ಉದ್ಯೋಗಿಯಾಗಿದ್ದು, ಅಪಘಾತ ದಿನ ವಿಪರೀತ ಮಳೆ ಇದ್ದುದರಿಂದಾಗಿ ಕಾರು ನಿಲ್ಲಿಸದೇ ಹೊರಟು ಹೋಗಿರುವುದಾಗಿ ಪೊಲೀಸರ ಮುಂದೆ ತಪ್ಪು ಒಪ್ಪಿಕೊಂಡಿದ್ದಾರೆ. ಈ ಬಗ್ಗೆ  ಕೆ.ಆರ್.ಪುರಂ ಸಂಚಾರಿ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ:   ಚಲಿಸುವ ರೈಲಿನಲ್ಲಿ ಸಾಮೂಹಿಕ ಅತ್ಯಾಚಾರ- ನಾಲ್ವರ ಬಂಧನ

  • ಅಂಗಡಿ ಮುಂಭಾಗದ ಬಲ್ಬು ಕಳ್ಳನ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆ

    ಅಂಗಡಿ ಮುಂಭಾಗದ ಬಲ್ಬು ಕಳ್ಳನ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆ

    ಬೆಂಗಳೂರು: ಬ್ರಾಂಡೆಡ್ ಬಟ್ಟೆಗಳು ಮತ್ತು ಶೂಗಳನ್ನು ರಾತ್ರಿ ಸಮಯದಲ್ಲಿ ಕಳ್ಳತನ ಮಾಡುವುದರೊಂದಿಗೆ ಅಂಗಡಿ ಮುಂಭಾಗದಲ್ಲಿ ಹಾಕಿರುವಂತಹ ಬಲ್ಬುಗಳನ್ನು ಕದಿಯುತ್ತಿದ್ದ ಕಳ್ಳನ ಕೈಚಳಕ ಇದೀಗ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಬೆಂಗಳೂರು ಹೊರವಲಯದ ಸರ್ಜಾಪುರ ರಸ್ತೆ ಕೊಡತಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಳ್ಳ ಪ್ರತಿದಿನ ಬೈಕ್‍ನಲ್ಲಿ ರಾತ್ರಿ ಸಮಯದಲ್ಲಿ ಬಂದು ಮನೆ ಹೊರಗಡೆ ಬಿಟ್ಟಿರುವ ಶೂ ಮತ್ತು ಬ್ರಾಂಡೆಡ್ ಬಟ್ಟೆಗಳನ್ನು ಕಳ್ಳತನ ಮಾಡಿಕೊಂಡು ಹೋಗುತ್ತಿದ್ದ.

    ಸರ್ಜಾಪುರದ ಸ್ಥಳೀಯ ನಿವಾಸಿಗಳು ಕಳ್ಳನ ಹಾವಳಿಯಿಂದ ಕಂಗಾಲಾಗಿದ್ದರು. ರಾತ್ರಿ ಸಮಯದಲ್ಲಿ ಮನೆಯಿಂದ ಹೊರಗಡೆ ಯಾವುದೇ ವಸ್ತು ಬಿಡಲು ಭಯ ಬೀಳುತ್ತಿದ್ದರು. ಇದೀಗ ಕಳ್ಳ ಅಂಗಡಿ ಮುಂಭಾಗದ ಬಲ್ಬು ಕದಿಯುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆತನ ವಿರುದ್ಧ ಬೆಳ್ಳಂದೂರು ಮತ್ತು ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲು ಸ್ಥಳೀಯರು ನಿರ್ಧರಿಸಿದ್ದಾರೆ.

  • ಬೇಗೂರಿನಲ್ಲಿ ಚಿರತೆ ಭಯ – ಸಿಸಿಟಿವಿ, ಡ್ರೋಣ್ ಬಳಸಿ 6 ದಿನಗಳಿಂದ ಹುಡುಕಾಟ

    ಬೇಗೂರಿನಲ್ಲಿ ಚಿರತೆ ಭಯ – ಸಿಸಿಟಿವಿ, ಡ್ರೋಣ್ ಬಳಸಿ 6 ದಿನಗಳಿಂದ ಹುಡುಕಾಟ

    ಆನೇಕಲ್: ಬೇಗೂರು ಪ್ರೆಸ್ಟೀಜ್ ಅಪಾರ್ಟ್ ಮೆಂಟ್ ಬಳಿ ಚಿರತೆ ಪ್ರತ್ಯಕ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡೀ ರಾತ್ರಿ ಕಾರ್ಯಾಚರಣೆ ನಡೆಸಿದರೂ ಚಿರತೆ ಮಾತ್ರ ಪತ್ತೆಯಾಗಿಲ್ಲ. ಅಪಾರ್ಟ್ ಮೆಂಟ್ ಸುತ್ತಮುತ್ತಲಿನ ಏರಿಯಾಗಳಲ್ಲಿ ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

    ನಿನ್ನೆ ಡ್ರೋನ್ ಕ್ಯಾಮೆರಾ ಬಳಸಿ ಕಾರ್ಯಾಚರಣೆ ಮಾಡಿದ್ದರು. ಡ್ರೋನ್ ಕ್ಯಾಮ್ ನಿಂದ ಐಡೆಂಟಿಫಿಕೇಷನ್ ಕಷ್ಟ ಅನ್ನೋ ಕಾರಣಕ್ಕೆ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಸಿಬ್ಬಂದಿ ಚಿರತೆ ಸೆರೆಹಿಡಿಯಲು ಬೋನ್ ಗಳನ್ನು ನಿರ್ಮಿಸಿದ್ದಾರೆ. ನಾಲ್ಕು ದಿನಗಳಿಂದ ಸಿಸಿಟಿವಿಗೂ ಕಾಣಿಸಿಕೊಂಡಿಲ್ಲ, ಬೋನ್ ಗಳ ಕಡೆ ಕೂಡ ಬಂದಿಲ್ಲ. ಹೀಗಾಗಿ ಮೇಲಾಧಿಕಾರಿಗಳ ಜೊತೆ ಚರ್ಚಿಸಿ ಬೋನ್ ಗಳನ್ನು ತೆರವು ಮಾಡುವ ಸಾಧ್ಯತೆ ಇದೆ.

    ಸತತ ಆರನೇ ದಿನವೂ ಚಿರತೆಗಾಗಿ ಶೋಧ ಕಾರ್ಯ ಮುಂದುವರಿದಿದೆ. ಸೋಮವಾರ ಮುಂಜಾನೆ ಕಾಣಿಸಿಕೊಂಡಿದ್ದ ಚಿರತೆ ಇಲ್ಲಿವರೆಗೂ ನಾಪತ್ತೆಯಾಗಿದೆ. ಅರಣ್ಯ ಇಲಾಖೆಯಿಂದ ಸತತ ಮೂರನೇ ದಿನವೂ ಬೋನ್ ಇಟ್ಟು ಸಿಬ್ಬಂದಿ ಕಾಯುತ್ತಿದ್ದಾರೆ. ಬೋನ್ ಒಳಗಡೆ ಮೇಕೆ ಮರಿಯನ್ನು ಇಡಲಾಗಿದ್ದು ಚಿರತೆಗಾಗಿ ಕಾದುಕುಳಿತಿದ್ದಾರೆ. ನಿನ್ನೆ ರಾತ್ರಿ ಪೂರ್ತಿ ಐದು ಮಂದಿ ಅರಣ್ಯ ಸಿಬ್ಬಂದಿಯಿಂದ ಚಿರತೆಗಾಗಿ ಹುಡುಕಾಟ ನಡೆಯಿತು.

    ಚಿರತೆ ರಾತ್ರಿ ಸಮಯದಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿರುವುದರಿಂದ ಹತ್ತಕ್ಕೂ ಹೆಚ್ಚು ಸಿಸಿ ಕ್ಯಾಮೆರಾಗಳು ಹಾಕಲಾಗಿದೆ. ಚಿರತೆ ಚಲನವಲನಗಳ ಬಗ್ಗೆ ನಿಗಾ ಇಡಲು ತಜ್ಞರು ಸೂಚನೆ ನೀಡಿದ್ದಾರೆ. ಡ್ರೋನ್ ಕ್ಯಾಮೆರಾ ಮೂಲಕ ಚಿರತೆ ಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಕಲ್ಲು ಕ್ವಾರಿಯಲ್ಲಿ ಚಿರತೆ ಅಡಗಿರುವ ಶಂಕೆ ವ್ಯಕ್ತವಾಗುತ್ತಿದ್ದು, ಬಿಟಿಎಂ ಬಡಾವಣೆಯ ಜನ ಯಾರು ಸಹ ಸಂಜೆ ಮತ್ತು ಬೆಳಗ್ಗಿನ ಜಾವ ಹೊರಗಡೆ ಬರಬಾರದು ಅಂತ ಅರಣ್ಯ ಇಲಾಖೆ ಸೂಚನೆ ನೀಡಿದೆ.

  • SSLC ಪರೀಕ್ಷೆಗೆ ಸಿದ್ಧತೆ ಪೂರ್ಣ – ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಫಿಕ್ಸ್

    SSLC ಪರೀಕ್ಷೆಗೆ ಸಿದ್ಧತೆ ಪೂರ್ಣ – ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಫಿಕ್ಸ್

    ಬೆಂಗಳೂರು: ಪ್ರಸಕ್ತ ವರ್ಷದ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಬೋರ್ಡ್ ಸಿದ್ಧತೆ ಪೂರ್ಣಗೊಳಿಸಿದೆ. ಸ್ವತಃ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಿದ್ಧತೆಗೆ ಬಗ್ಗೆ ಇವತ್ತು ಸಭೆ ನಡೆಸಿ, ಪರಿಶೀಲನೆ ನಡೆಸಿದರು.

    ಮಾರ್ಚ್ 27 ರಿಂದ ಏಪ್ರಿಲ್ 9 ವರೆಗೆ ಪರೀಕ್ಷೆ ನಡೆಯಲಿದೆ. ಈ ಬಾರಿ ಒಟ್ಟು 8,48,192 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಒಟ್ಟಾರೆ 2,879 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ವಿಶೇಷ ಅಂದರೆ ಎಲ್ಲಾ 2,879 ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ವ್ಯವಸ್ಥೆ ಮಾಡಿ ಅಕ್ರಮ ತಡೆಗೆ ಕ್ರಮವಹಿಸಲಾಗುತ್ತಿದೆ.

    ಎಸ್​ಎಸ್​ಎಲ್​ಸಿ ಮೌಲ್ಯಮಾಪನ ಎಪ್ರಿಲ್ 19 ರಿಂದ ನಡೆಯಲಿದ್ದು ಮೇ ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಮೌಲ್ಯಮಾಪನ ರಾಜ್ಯಾದ್ಯಂತ 228 ಕೇಂದ್ರಗಳಲ್ಲಿ ನಡೆಯಲಿದೆ. ಈ ವರ್ಷ 79 ಸಾವಿರ ಶಿಕ್ಷಕರು ಮೌಲ್ಯಮಾಪನಕ್ಕೆ ಹೆಸರು ನೊಂದಾಯಿಸಿಕೊಂಡಿದ್ದು, ಅಗತ್ಯ 64 ಸಾವಿರ ಶಿಕ್ಷಕರನ್ನು ಮೌಲ್ಯಮಾಪನಕ್ಕೆ ಬಳಸಿಕೊಳ್ಳಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದರು.

    ಮಕ್ಕಳ ಆಂತರಿಕ ಅಂಕ ಆನ್ ಲೈನ್ ಮೂಲಕವೇ ಫೆಬ್ರವರಿ 3ನೇ ವಾರದಲ್ಲಿ ನಮೂದು ಮಾಡಲು ಅವಕಾಶ ನೀಡಲು ಬೋರ್ಡ್ ನಿರ್ಧರಿಸಿದೆ. ಓಎಂಆರ್ ಬದಲು ಆನ್ ಲೈನ್ ಮೂಲಕ ಅಂಕ ನಮೂದು ಮಾಡುವ ಹೊಸ ಪದ್ದತಿ ಇಲಾಖೆ ತರುತ್ತಿದೆ. ಪರೀಕ್ಷಾ ಅಕ್ರಮ ತಡೆಗೂ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

  • ಸಿಸಿ ಕ್ಯಾಮೆರಾದ ವೈರ್ ಕತ್ತರಿಸಿ ಬರೋಬ್ಬರಿ 30ಲಕ್ಷ ರೂ. ಮೌಲ್ಯದ ಸಿಗರೇಟ್ ಕದ್ರು!

    ಸಿಸಿ ಕ್ಯಾಮೆರಾದ ವೈರ್ ಕತ್ತರಿಸಿ ಬರೋಬ್ಬರಿ 30ಲಕ್ಷ ರೂ. ಮೌಲ್ಯದ ಸಿಗರೇಟ್ ಕದ್ರು!

    ರಾಯಚೂರು: ನಗರದಲ್ಲಿ ಸಿಸಿ ಕ್ಯಾಮೆರಾದ ವೈರ್ ಕತ್ತರಿಸಿ 30 ಲಕ್ಷ ರೂ. ಮೌಲ್ಯದ ಸಿಗರೇಟ್ ಕಳ್ಳತನ ಮಾಡಲಾಗಿದೆ.

    ನಗರದ ಯರಗೇರಾ ಲೇಔಟ್‍ನ ಜಿ.ಅಬ್ದುಲ್ ಅಂಡ್ ಸನ್ಸ್ ಐಟಿಸಿ ಏಜೆನ್ಸಿಯ ಗೋದಾಮುನಲ್ಲಿ ಈ ಘಟನೆ ನಡೆದಿದೆ. ಸುಮಾರು 2 ಲಕ್ಷ 50 ಸಾವಿರ ರೂಪಾಯಿ ನಗದು ಹಾಗೂ ಅಂದಾಜು 30 ಲಕ್ಷ ರೂಪಾಯಿ ಮೌಲ್ಯದ ಸಿಗರೇಟನ್ನ ಕಳ್ಳರು ಕದ್ದು ಪರಾರಿಯಾಗಿದ್ದಾರೆ.

    ಖದೀಮರು ಗುರುತು ಪತ್ತೆಯಾಗ ಬಾರದು ಎಂದು ಶಾಪ್ ನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾ ವೈರನ್ನು ಕತ್ತರಿಸಿ ಕಳ್ಳತನ ಮಾಡಿದ್ದಾರೆ. ಶೆಟರ್ ಮುರಿದು ಗೋದಾಮಿನಲ್ಲಿದ್ದ ಸಿಗರೇಟ್ ಪ್ಯಾಕ್ ಗಳನ್ನ ರಾತ್ರೋರಾತ್ರಿ ಕದ್ದು ಸಾಗಿಸಿದ್ದಾರೆ.

    ಈ ಘಟನೆ ನೇತಾಜಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಿಶೋರ್ ಬಾಬು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.