Tag: ಸಿ. ಚನ್ನಿಗಪ್ಪ

  • ಮಾಜಿ ಸಚಿವ ಸಿ ಚನ್ನಿಗಪ್ಪ ಇನ್ನಿಲ್ಲ

    ಮಾಜಿ ಸಚಿವ ಸಿ ಚನ್ನಿಗಪ್ಪ ಇನ್ನಿಲ್ಲ

    ನೆಲಮಂಗಲ: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮಾಜಿ ಅರಣ್ಯ ಸಚಿವ ಸಿ. ಚನ್ನಿಗಪ್ಪ ನಿಧನರಾಗಿದ್ದಾರೆ.

    ಕಳೆದ ಒಂದು ವರ್ಷದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚನ್ನಿಗಪ್ಪ, ಬಹು ಅಂಗಾಂಗ ವೈಪಲ್ಯದಿಂದ ಬಳಲುತ್ತಿದ್ದರು. ಇಂದು ಬೆಂಗಳೂರಿನ ಸಾಗರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

    ವಿದೇಶದಲ್ಲಿ ಚಿಕಿತ್ಸೆ ಪಡೆದು ಬೆಂಗಳೂರಿಗೆ ಬಂದು ನಂತರ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ನೆಲಮಂಗಲ ತಾಲೂಕಿನ ಬೈರನಾಯಕನಹಳ್ಳಿಯಲ್ಲಿ ಅಂತ್ಯಕ್ರಿಯೆ ಸಾಧ್ಯತೆಯಿದೆ.

    ಮಾಜಿ ಸಚಿವ ಚನ್ನಿಗಪ್ಪ ಅವರು ಮೂರು ಜನ ಪುತ್ರರನ್ನು ಹೊಂದಿದ್ದಾರೆ.  ಮೃತರು ಪತ್ನಿ ಮಕ್ಕಳನ್ನು ಅಗಲಿದ್ದಾರೆ.