Tag: ಸಿ.ಡಿ

  • ಆಪರೇಷನ್ ಕಮಲ, ಹಣದ ಪ್ರಭಾದಿಂದ ಬಿಎಸ್‍ವೈ ಸಿಎಂ ಆಗಿದ್ದಾರೆ: ಸಿದ್ದರಾಮಯ್ಯ

    ಆಪರೇಷನ್ ಕಮಲ, ಹಣದ ಪ್ರಭಾದಿಂದ ಬಿಎಸ್‍ವೈ ಸಿಎಂ ಆಗಿದ್ದಾರೆ: ಸಿದ್ದರಾಮಯ್ಯ

    – ರಾಜ್ಯದ ಜನರಿಗೆ ಬಿಜೆಪಿಯವರು ಸುಳ್ಳು ಹೇಳಿದ್ದಾರೆ
    – ಹಣದ ಕುರಿತು ತನಿಖೆಗೆ ಮಾಜಿ ಸಿಎಂ ಆಗ್ರಹ

    ಬೆಂಗಳೂರು: ಯಡಿಯೂರಪ್ಪ ಅವರು ಜನರ ಆಶೀರ್ವಾದದಿಂದ ರಾಜ್ಯದ ಮುಖ್ಯಮಂತ್ರಿ ಆಗಿಲ್ಲ. ಆಪೆರೇಷನ್ ಕಮಲ, ಹಣದ ಪ್ರಭಾವದಿಂದ ಮುಖ್ಯಮಂತ್ರಿಯಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಸ್‍ವೈ ಆಪರೇಷನ್ ಕಮಲದ ಜನಕರಾಗಿದ್ದಾರೆ. ಬಿಎಸ್‍ವೈ ಸುಳ್ಳು ಹೇಳಿ, ಎಂಎಲ್‍ಎಗಳನ್ನು ಕೊಂಡುಕೊಂಡು, 9 ಕೋಟಿ ಹಣವನ್ನು ಖರ್ಚು ಮಾಡಿ ಮುಖ್ಯಮಂತ್ರಿ ಆಗಿದ್ದಾರೆ. ಸ್ವತಃ ಅವರ ಪಕ್ಷದವರೇ ಹಣ ಖರ್ಚು ಮಾಡಿರುವ ಕುರಿತು ಹೇಳಿದ್ದಾರೆ. ಈ ಬಗ್ಗೆ ತನಿಖೆ ಆಗಲಿ ಎಂದು ಆಗ್ರಹಿಸಿದ್ದಾರೆ.

    ಬಿಜೆಪಿಯವರು ಸಜ್ಜನರಂತೆ ಹಣ ಖರ್ಚು ಮಾಡಿಲ್ಲ ಅಂತ ಹೇಳಿದ್ದರು. ಆದರೆ ಆಪರೇಷನ್ ಕಮಲಕ್ಕೆ ಯೋಗೇಶ್ವರ್ ಹಣ ಖರ್ಚು ಮಾಡಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಒಪ್ಪಿಕೊಂಡಿದ್ದಾರೆ. ಆಪರೇಷನ್ ಕಮಲ ಮಾಡುವುದು ಎಂದರೆ ದುಡ್ಡುಕೊಟ್ಟು ಎಂಎಲ್‍ಎಗಳನ್ನು ಕೊಂಡುಕೊಳ್ಳುವುದು ಎಂದು ಆಗುತ್ತದೆ. ಇದನ್ನು ಅವರೇ ಈಗ ಒಪ್ಪಿಕೊಂಡಿದ್ದಾರೆ. ಆಪರೇಷನ್ ಕಮಲದಲ್ಲಿ ಹಣದ ಪ್ರಭಾವ ಇದೆ ಎಂದು ಈ ಮೂಲಕವಾಗಿ ತಿಳಿಯುತ್ತದೆ. ಆದರೆ ಬಿಜೆಪಿಯವರು ನಾವು ಹಣ ಕೊಟ್ಟಿಲ್ಲ ಯಾರನ್ನೂ ಕೊಂಡುಕೊಂಡಿಲ್ಲ, 17 ಎಂಎಲ್‍ಎಗಳು ಅವರಾಗಿಯೇ ಬಿಜೆಪಿಗೆ ಬಂದಿದ್ದಾರೆ ಎಂದು ಹೇಳಿದ್ದರು. ಆದರೆ ಯೋಗೇಶ್ವರ್ 9 ಕೋಟಿ ಹಣವನ್ನು ಖರ್ಚು ಮಾಡಿದ್ದಾರೆ ಎಂದು ಅವರ ಪಕ್ಷದವರೇ ಹೇಳಿದ್ದಾರೆ. ಈ ಕುರಿತಾಗಿ ಸ್ಪಷ್ಟ ಮತ್ತು ನಿಖರವಾದ ತನಿಖೆ ಆಗಬೇಕು ಎಂದು ಮಾಜಿ ಸಿಎಂ ಆಗ್ರಹಿಸಿದ್ದಾರೆ.

    ರಾಜಕೀಯ ಎಂದರೆ ವಿರೋಧ ಪಕ್ಷದವರು ಆರೋಪ ಮಾಡಿದರೆ, ಅವರು ಮಾಡುತ್ತಾರೆ ಎಂದು ಆಗುತ್ತಿತ್ತು. ಆದರೆ ಆರೋಪ ಮಾಡಿರುವವರು ಅವರ ಪಕ್ಷದವರಾಗಿದ್ದಾರೆ. ರಾಜ್ಯದ ಜನರಿಗೆ ಬಿಜೆಪಿಯವರು ಸುಳ್ಳು ಹೇಳಿದ್ದಾರೆ. ಬಿಜೆಪಿಯವರು ಏನು ಎಂದು ಗೊತ್ತಾಗಬೇಕು. ಸಿಡಿ ಕುರಿತಾಗಿ ತನಿಖೆ ಆಗಬೇಕು. ಬಿಜೆಪಿ ಒಬ್ಬ ಸೀನಿಯರ್ ಬಿಜೆಪಿ ಲೀಡರ್ ಆಗಿರುವ ಯತ್ನಾಳ್ ಅವರೇ ಬಾಯಿ ಬಿಟ್ಟು ಹೆಳ್ತಾ ಇದ್ದಾರೆ, ಯಡಿಯೂರಪ್ಪ ಅಲ್ಲಿ ಕೊಳಕು ದೃಶ್ಯಗಳಿವೆ ಎಂದು ಹೇಳುತ್ತಾರೆ. ಇದು ರಾಜ್ಯದ ಜನರಿಗೆ ಗೊತ್ತಾಗಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

  • ಅಮಿತ್‌ ಶಾ ಜೊತೆಗೆ ನಾಳೆ ಬಿಎಸ್‌ವೈ 20 ನಿಮಿಷ ಚರ್ಚೆ

    ಅಮಿತ್‌ ಶಾ ಜೊತೆಗೆ ನಾಳೆ ಬಿಎಸ್‌ವೈ 20 ನಿಮಿಷ ಚರ್ಚೆ

    ಬೆಂಗಳೂರು: ಕರ್ನಾಟಕ ಭೇಟಿಗೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ಸಿಎಂ ಕಚೇರಿಯಲ್ಲಿ 20 ನಿಮಿಷ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆ ಚರ್ಚೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಸಚಿವ ಸ್ಥಾನ ವಂಚಿತ ಶಾಸಕರು ಆರೋಪಿಸಿದ ಸಿ.ಡಿ. ವಿಚಾರದ ಚರ್ಚೆಯೂ ನಡೆಯಲಿದೆ ಎನ್ನಲಾಗಿದ್ದು, ಆ 20 ನಿಮಿಷದ ಸಿಟ್ಟಿಂಗ್ ರಹಸ್ಯ ತೀವ್ರ ಕುತೂಹಲ ಮೂಡಿಸಿದೆ.
  • ಸಿಡಿ ಕೈಯಲ್ಲಿ ಇದ್ದರೆ ಬಿಡುಗಡೆ ಮಾಡಲಿ, ಗೊಂದಲ ಬೇಡ: ಮುನಿರತ್ನ

    ಸಿಡಿ ಕೈಯಲ್ಲಿ ಇದ್ದರೆ ಬಿಡುಗಡೆ ಮಾಡಲಿ, ಗೊಂದಲ ಬೇಡ: ಮುನಿರತ್ನ

    ದಾವಣಗೆರೆ: ಸಿಡಿ ಕೈಯಲ್ಲಿ ಇದ್ದರೆ ಬಿಡುಗಡೆ ಮಾಡಲಿ. ಸಿಡಿ ಇದೆ ಎಂದು ಗೊಂದಲ ಸೃಷ್ಟಿಸುವುದು ಬೇಡ ಎಂದು ಶಾಸಕ ಮುನಿರತ್ನ ಹೇಳಿದ್ದಾರೆ.

    ಯತ್ನಾಳ್ ಸಿಡಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸಿ.ಡಿ ಇದ್ದಿದ್ದೇ ಆದರೆ ಅದನ್ನು ಬಿಡುಗಡೆ ಮಾಡಲಿ. ಸುಳ್ಳು, ಆಧಾರರಹಿತ ಆರೋಪ ಮಾಡುವುದು ಬೇಡ ಎಂದು ತಿಳಿಸಿದ್ದಾರೆ.

    ಇನ್ನು ಸಚಿವ ಸ್ಥಾನ ಕೈ ತಪ್ಪಿದ ಕುರಿತು ಮಾತನಾಡಿದ ಶಾಸಕರು, ಸಚಿವ ಸ್ಥಾನ ಸದ್ಯಕ್ಕೆ ಮುಗಿದ ಅಧ್ಯಾಯ. ಪಕ್ಷ, ಸಂಘಟನೆ, ಕ್ಷೇತ್ರದ ಬಗ್ಗೆ ನಾನು ತಲೆಕಡಿಸಿಕೊಳ್ಳುತ್ತೇನೆ. ಸಚಿವ ಸ್ಥಾನ ಬಗ್ಗೆ ಚರ್ಚೆ ಬೇಡ ಕಾಲ ಕೂಡಿ ಬರುತ್ತೆ. ಎಲ್ಲದಕ್ಕೂ ದೈವ ಕೃಪೆ ಬೇಕು ಅದು ಬರುತ್ತೆ. ಯಾವಾಗ ಕಾಲ ಕೂಡಿ ಬರುತ್ತೆ ನೋಡೊಣ. ನನಗೆ ಸಚಿವ ಸ್ಥಾನ ನೀಡದಿದ್ದಕ್ಕೆ ಕಾರಣ ಏನೂ ಇಲ್ಲ. ಆದರೂ ಯಾಕೆ ಕೈ ಬಿಟ್ಟರು ಗೊತ್ತಿಲ್ಲ. ಸಮಯ ಬಂದಾಗ ಎಲ್ಲಾ ಸರಿ ಹೋಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಅಧಿಕಾರ ಸಿಗಲಿಲ್ಲ ಅಂತ ಆರೋಪ-ಪ್ರತ್ಯಾರೋಪ ಮಾಡಲ್ಲ. ವರಿಷ್ಟರು, ಸಿಎಂ ಅವರು ನನಗೆ ಸಚಿವ ಸ್ಥಾನ ನೀಡಲು ಬದ್ಧ ಇದ್ದಾರೆ. ಎಲ್ಲದಕ್ಕೂ ಕಾಲ ಕೂಡಿ ಬರುತ್ತೆ. ಸದ್ಯಕ್ಕೆ ಕ್ಷೇತ್ರದ ಖುಣ ತೀರಿಸಲು ಗಮನ ಕೊಡುತ್ತೇನೆ. ಸಿಎಂ ಹೇಳಿದ್ದಾರೆ ಅವರ ಮೇಲೆ ನಂಬಿಕೆ ಇದೆ. ಕಾರಣಾಂತರ ವಿಳಂಬ ಆಗಿದೆ ಅಷ್ಟೆ, ಎಲ್ಲಾ ಸರಿ ಹೋಗುತ್ತೆ ಎಂದರು.

    ವೀಕ್ ಸಿಎಂ ಹೇಳಿಕೆ ಬಗ್ಗೆ ಮಾತನಾಡಿದ ಅವರು, ರಾಜಕೀಯವಾಗಿ ಆರೋಪ ಇದ್ದಿದ್ದೇ, ಈ ರೀತಿ ಮಾತನಾಡಲೇಬೇಕು. ಈ ರೀತಿ ಮಾತನಾಡಿದರೆ ಅವರು ರಾಜಕೀಯದಲ್ಲಿ ಇದ್ದಾರೆ ಅಂತ ಅರ್ಥ. ಆದರೆ ಆಧಾರ ಇಟ್ಟುಕೊಂಡು ಮಾತನಾಡಬೇಕು. ಊಹಾಪೋಹ ಮಾತನಾಡೊದು ಬೇಡ. ಸುಭದ್ರ ಸರಕಾರ ಇರುತ್ತೆ ಅಂತ ಅರುಣ್ ಸಿಂಗ್ ಅವರೇ ಹೇಳಿದ್ದಾರೆ. ಸಿಎಂ ಬದಲಾವಣೆ ಆಗಲ್ಲ ಬಿಎಸ್ ವೈ ಅವರೇ ಮುಂದುವರಿಯುತ್ತಾರೆ.

  • ಕುಮಾರಸ್ವಾಮಿ C.D ಪ್ರಿಯರು: ಶೋಭಾ ಕರಂದ್ಲಾಜೆ ವ್ಯಂಗ್ಯ

    ಕುಮಾರಸ್ವಾಮಿ C.D ಪ್ರಿಯರು: ಶೋಭಾ ಕರಂದ್ಲಾಜೆ ವ್ಯಂಗ್ಯ

    ಬೆಂಗಳೂರು: ತಣ್ಣಗಾಗಿದ್ದ ಮಂಗಳೂರು ಗಲಭೆ ವಿಚಾರ ಮತ್ತೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಗಲಭೆ ಸಂಬಂಧ ಪೊಲೀಸರು ದೃಶ್ಯವಾವಳಿಗಳನ್ನ ಬಿಡುಗಡೆ ಮಾಡಿದರು. ಆದರೆ ಇದೀಗ ಬಹಳ ದಿನಗಳ ಬಳಿಕ ಪೊಲೀಸರ ವಿರುದ್ಧ ದೃಶ್ಯಗಳನ್ನು ಬಿಡುಗಡೆ ಮಾಡಿರೋದು ಬಿಜೆಪಿ ಆಕ್ರೋಶಕ್ಕೆ ಕಾರಣವಾಗಿದೆ. ಹೆಚ್‍ಡಿಕೆ ಸಿ.ಡಿ ಬಿಡುಗಡೆ ಬೆನ್ನಲ್ಲೇ ಬಿಜೆಪಿ ನಾಯಕರು ವಾಗ್ಬಾಣ ಪ್ರಯೋಗಿಸಿದ್ದಾರೆ.

    ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಂಸದೆ ಶೋಭಾ ಕರಂದ್ಲಾಜೆ, ಕುಮಾರಸ್ವಾಮಿ ಸಿ.ಡಿ ಪ್ರಿಯರು. ಹಲವಾರು ವರ್ಷಗಳಲ್ಲಿ ಆರೇಳು ಸಿ.ಡಿಗಳನ್ನು ಬಿಡುಗಡೆ ಮಾಡಿದ್ದಾರೆ. ಯಾವುದನ್ನೂ ತುದಿ ಮುಟ್ಟಿಸಲು ಆಗಿಲ್ಲ. ಕುಮಾರಸ್ವಾಮಿ ಬಿಡುಗಡೆ ಮಾಡಿದ ಸಿ.ಡಿ ಕಟ್ ಆ್ಯಂಡ್ ಪೇಸ್ಟ್. ಸಿ.ಡಿ ಎಲ್ಲಿ ತಯಾರಾಯ್ತು..? ಕೇರಳದಿಂದ ಬಂತೋ..? ಜೆಎನ್ ಯು ನಿಂದ ಬಂತೋ..? ಈ ಬಗ್ಗೆ ತನಿಖೆ ಆಗಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಮಂಗ್ಳೂರನ್ನು ‘ಕಾಶ್ಮೀರ’ ಮಾಡಲು ಹೊರಟಿದೆ, ಇದನ್ನು ತೋರಿಸಲು 35 ವಿಡಿಯೋ ರಿಲೀಸ್ – ‘ಸಿಡಿ’ದ ಎಚ್‍ಡಿಕೆ

    ಅಷ್ಟೇ ಅಲ್ಲ ಕುಮಾರಸ್ವಾಮಿಗೂ ಮಂಗಳೂರಿಗೆ ಏನು ಸಂಬಂಧ..? ಅಂತ ಖಾರವಾಗಿಯೇ ಪ್ರಶ್ನಿಸಿದ್ರು. ಚುನಾವಣೆಗೆ ಇನ್ನೂ ಮೂರೂವರೆ ವರ್ಷ ಇದೆ. ಚುನಾವಣೆ ಬಂದಾಗ ಸಿ.ಡಿ ಬಿಡುಗಡೆ ರಾಜಕಾರಣ ಮಾಡಿ. ಆದರೆ ನೀವು ಪೊಲೀಸರ ನೈತಿಕ ಸ್ಥೈರ್ಯ ಕುಗ್ಗಿಸಬೇಡಿ. ಈಗ ಕೆಲಸ ಮಾಡುತ್ತಿರುವ ಪೊಲೀಸ್ ಕಮಿಷನರ್ ನಿಮ್ಮ ಕೆಳಗೆ ಕೆಲಸ ಮಾಡಿದವರು ಎಂದು ವಾಗ್ದಾಳಿ ನಡೆಸಿದ್ರು. ಇದನ್ನೂ ಓದಿ: ಶಾಂತವಾಗಿರೋ ಮಂಗ್ಳೂರನ್ನು ಮತ್ತೆ ಕೆಣಕಿದ್ದಾರೆ- ಹೆಚ್‍ಡಿಕೆ ವಿರುದ್ಧ ಬೊಮ್ಮಾಯಿ ವಾಗ್ದಾಳಿ

    ಮೆಕ್ಕಾ, ಮದೀನಾಕ್ಕೆ ಹೋದರೆ ಸೈತಾನರಿಗೆ ಕಲ್ಲು ಬಿಸಾಕುತ್ತಾರೆ. ಇಲ್ಲಿ ಮುಸುಕುಧಾರಿಗಳು ಕಲ್ಲು ಎಸೆಯುತ್ತಾರೆ. ಹಾಗಾದರೆ ಇಲ್ಲಿ ಯಾರು ಸೈತಾನರು ಕುಮಾರಸ್ವಾಮಿ ಅವರೇ..? ನೀವು ವಿದೇಶದಲ್ಲಿ ಕಾಲ ಕಳೆಯುತ್ತಿದ್ದವರು. ವಿದೇಶದಲ್ಲಿ ಇದ್ರಿ ತಾವು. ನಿಮಗೆ ಮಂಗಳೂರಿನಲ್ಲಿ ಬೇಸ್ ಇಲ್ಲ. ಆ ಬೇಸ್ ಸಿಗಲು ನಾವು ಬಿಡೋದಿಲ್ಲ ಅಂತ ಸಂಸದೆ ಹೆಚ್‍ಡಿಕೆಗೆ ಟಾಂಗ್ ಕೊಟ್ಟರು.