Tag: ಸಿ.ಪಿ.ಯೋಗೇಶ್ವರ್

  • ನನ್ನ ಕೊನೆ ಉಸಿರು ಇರೋವರೆಗೂ ರಾಜಕೀಯ ಮಾಡ್ತೀನಿ: ಹೆಚ್‌.ಡಿ ದೇವೇಗೌಡ

    ನನ್ನ ಕೊನೆ ಉಸಿರು ಇರೋವರೆಗೂ ರಾಜಕೀಯ ಮಾಡ್ತೀನಿ: ಹೆಚ್‌.ಡಿ ದೇವೇಗೌಡ

    – ಉಪ ಚುನಾವಣೆ ಫಲಿತಾಂಶದಿಂದ ಧೃತಿಗೆಡಲ್ಲವೆಂದ ಗೌಡರು

    ನವದೆಹಲಿ: ಟೀಕೆ ಮಾಡುವ ಜನರು ಯಾವಾಗಲೂ ಇರ್ತಾರೆ, ನನ್ನ ವಿರುದ್ಧ ಬರುವ ಟೀಕೆಗಳನ್ನು ಸ್ವೀಕಾರ ಮಾಡುತ್ತೇನೆ. ಉಪ ಚುನಾವಣೆಯಲ್ಲಿ (BY Elecction) ಸೋತ ತಕ್ಷಣ ನಾನು ರಾಜಕೀಯ ಬಿಡುವುದಿಲ್ಲ ನಾನು ನನ್ನ ಕೊನೆ ಉಸಿರು ಇರುವವರೆಗೂ ರಾಜಕೀಯ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ (HD Devegowda) ಹೇಳಿದ್ದಾರೆ.

    ಶಾಸಕ ಸಿ.ಪಿ ಯೋಗೇಶ್ವರ್ (CP Yogeshwara) ಹೇಳಿಕೆಗೆ ನವದೆಹಲಿಯಲ್ಲಿ ತಿರುಗೇಟು ನೀಡಿದ ಅವರು, ಶುಕ್ರವಾರ ಸಂಸತ್ ನಲ್ಲಿ ಬೆಂಗಳೂರಿಗೆ ಕುಡಿಯುವ ನೀರಿನ ಬಗ್ಗೆ ಮಾತನಾಡಿದ್ದೇನೆ. ನನ್ನ ರಾಜ್ಯಸಭೆ ಅವಧಿ 18 ತಿಂಗಳು ಇದೆ, ನನ್ನ ಆರೋಗ್ಯ ಇರುವವರೆಗೂ ನಾನು ಹೋರಾಟ ಮಾಡುತ್ತೇನೆ, ಆರೋಗ್ಯ ವ್ಯತಾಸ ಆದರೆ ಗೊತ್ತಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

    ಹಾಸನದಲ್ಲಿ ಕಾಂಗ್ರೆಸ್‌ ಜನ ಕಲ್ಯಾಣ ಸಮಾವೇಶದ ಬಗ್ಗೆ ಮಾತನಾಡಿದ ಅವರು, ಹಾಸನದಲ್ಲಿ ಸಮಾವೇಶದಿಂದ ಜೆಡಿಎಸ್ ಮೇಲೆ ಯಾವುದೇ ಪರಿಣಾಮ ಬೀರಲ್ಲ, ಜೆಡಿಎಸ್ ಟಾರ್ಗೆಟ್ ಮಾಡಲೆಂದೇ ಹಾಸನದಲ್ಲಿ ಸಮಾವೇಶ ಮಾಡಿದ್ದಾರೆ. ಅದನ್ನು ಎದುರಿಸುವ ಸಾಮರ್ಥ್ಯ ಜೆಡಿಎಸ್‌ಗೆ ಇದೆ ಇಂದೂ ಎದುರಿಸುತ್ತೇವೆ, ನಾಳೆಯೂ ಎದುರಿಸುತ್ತೇವೆ. ಸಮಾವೇಶದಿಂದ ಏನ್ ಲಾಭ ಒಂದು ದಿನ ಬಂದರು ಮಾತನಾಡಿ ಹೋದರು ಎಂದರು. ಇದನ್ನೂ ಓದಿ: ಜಿ.ಪಂ ಸಿಇಓ ಸಹಿ ನಕಲು ಮಾಡಿ ಎಂಜಿನಿಯರ್‌ಗೆ ನೇಮಕಾತಿ ಪತ್ರ – ಎಫ್‌ಡಿಎ ಮೇಲೆ ಎಫ್‌ಐಆರ್

    ದೇವೇಗೌಡರನ್ನು ನಾವೇ ಸಿಎಂ ಮಾಡಿದ್ದು ಎನ್ನುವ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಸಿದ್ದರಾಮಯ್ಯ ರಾಜಕೀಯಕ್ಕೆ ಬಂದಿದ್ದು ಯಾವಾಗ? ರಾಮಕೃಷ್ಣ ಹೆಗೆಡೆ ಅವರನ್ನು ಸಿಎಂ ಮಾಡಿದ್ದು ಸಿದ್ದರಾಮಯ್ಯನಾ? ಕನಕಪುರದಲ್ಲಿ ನಿಲ್ಲಿಸಿ ಗೆಲ್ಲಿಸಿ ಸಿಎಂ ಮಾಡಿದ್ದು ಸಿದ್ದರಾಮಯ್ಯ ನಾ? ಆ ಹೆಗೆಡೆ ಅವರು ಸಿದ್ದರಾಮಯ್ಯ ಅವರನ್ನು ಕಾವಲು ಸಮಿತಿ ಅಧ್ಯಕ್ಷ ಮಾಡಿದ್ರಾ? ಯಾರಿಗೇಳ್ತಾರೆ, ಸುಳ್ಳು ಎಷ್ಟು ದಿನ ಹೇಳಬಹುದು ಎಂದು ಕುಟುಕಿದರು.

    ನಿಖಿಲ್ ಕುಮಾರಸ್ವಾಮಿ ಉಪ ಚುನಾವಣೆಯಲ್ಲಿ ಸೋತರೂ ಅವರ ನಾಯಕತ್ವ‌ ಮುಂದೆ ಬೆಳೆಯುತ್ತೆ, ಅವರಿಗೆ ಶಕ್ತಿ ಕೊಡಲು ಪಕ್ಷ ನಿರ್ಣಯ ಮಾಡಿದೆ. ಸೋಲಿನಿಂದ ಧೃತಿಗೆಟ್ಟಿಲ್ಲ, ಹೋರಾಟ ಮಾಡುವ ಕೆಚ್ಚೆದೆ ಇದೆ. ಸೋಲನ್ನು ಸಮತಲದಲ್ಲಿ ತೆಗೆದುಕೊಂಡಿದ್ದೇವೆ, ಇವತ್ತು ಜನರು ಸೋಲಿಸಿದ್ದಾರೆ, ನಾಳೆ ಗೆಲ್ಲಿಸುತ್ತಾರೆ, ಸೋಲು ಗೆಲುವಿಗಾಗಿ ಧೃತಿಗೆಟ್ಟು ಕೂರಲು ಸಾಧ್ಯವಿಲ್ಲ. ನಿಖಿಲ್ ಸಿನಿಮಾ ಬಿಟ್ಟು ಬಹಳ ದಿನ ಆಗಿದೆ. ಹಿರಿಯ ನಾಯಕರ ಒಂದಾಗಿ ಸದಸ್ಯತ್ವ ಅಭಿಯಾನ ಮಾಡುತ್ತಿದ್ದಾರೆ, ಮುಂದಿನ ದಿನಗಳಲ್ಲಿ ಎಲ್ಲ ನಾಯಕರು ಸೇರಿ ಪಕ್ಷವನ್ನು ಮರು ಸಂಘಟನೆ ಮಾಡಬೇಕು ಅಂದರೆ ಮಾಡುತ್ತಾರೆ ಎಂದು ನಿಖಿಲ್ ಗೆ ರಾಜ್ಯಧ್ಯಕ್ಷ ಜವಾಬ್ದಾರಿ ನೀಡುವ ಬಗ್ಗೆ ಸುಳಿವು ನೀಡಿದರು. ಇದನ್ನೂ ಓದಿ:  ಹಾಸನ | ಓಲ್ಡ್ ಬೆಲ್ಟ್ ಗುಂಪಿನ ಹೆಣ್ಣಾನೆಗೆ ರೇಡಿಯೋ ಕಾಲರ್ ಅಳವಡಿಕೆ

    ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್‌ ಚುನಾವಣೆಯಲ್ಲೂ ಮೈತ್ರಿ ಹೋರಾಟ ವಿಚಾರ ಕುರಿತು ಮಾತನಾಡಿ, ಸಂಸತ್‌ನಲ್ಲಿ ಜೊತೆಗೆ ಹೋರಾಟ ಮಾಡಿದ್ದೇವೆ, ಈಗಲೂ ಮಾಡುತ್ತೇವೆ, ಜೊತೆಗೆ ಹೋಗುತ್ತೇವೆ ಎಂದರು. ಜಿಟಿ ದೇವೇಗೌಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಬಗ್ಗೆ ಮಾತನಾಡಲು ಅವರು ನಿರಾಕರಿಸಿದರು.

  • ಯೋಗೇಶ್ವರ್ ನಂಬಿ ನಾವು ಗೆದ್ದು ಬಂದಿಲ್ಲ: ಶಾರದಾ ಪೂರ್ಯನಾಯ್ಕ್ ತಿರುಗೇಟು

    ಯೋಗೇಶ್ವರ್ ನಂಬಿ ನಾವು ಗೆದ್ದು ಬಂದಿಲ್ಲ: ಶಾರದಾ ಪೂರ್ಯನಾಯ್ಕ್ ತಿರುಗೇಟು

    – ನಾವು ಫೀನಿಕ್ಸ್ ಹಕ್ಕಿಯಂತೆ ಮತ್ತೆ ಎದ್ದು ಬರುತ್ತೇವೆ

    ಶಿವಮೊಗ್ಗ: ನಾವು ನಿಮ್ಮನ್ನು ನಂಬಿ ನಮ್ಮ ಕ್ಷೇತ್ರದಲ್ಲಿ ಗೆದ್ದು ಬಂದಿಲ್ಲ ಎಂದು ಜೆಡಿಎಸ್ (JDS) ಶಾಸಕಿ ಶಾರದಾ ಪೂರ್ಯನಾಯ್ಕ್ (Sharada Puryanaik) ಅವರು ಸಿ.ಪಿ ಯೋಗೇಶ್ವರ್ (C.P Yogeshwar) ಅವರಿಗೆ ತಿರುಗೇಟು ಕೊಟ್ಟಿದ್ದಾರೆ.

    ಶಿವಮೊಗ್ಗದಲ್ಲಿ (Shivamogga) ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಜೆಡಿಎಸ್ ಶಾಸಕರನ್ನು ಕಾಂಗ್ರೆಸ್‍ಗೆ ಕರೆದುಕೊಂಡು ಬರುತ್ತೇನೆ ಎಂಬ ಸಿಪಿವೈ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದರು. ಅವರು ಯಾರು? ನಮ್ಮನ್ನು ಕೊಂಡುಕೊಂಡಿದ್ದಾರಾ? ನಾವೇನು ಅವರನ್ನು ನಂಬಿಕೊಂಡು ರಾಜಕಾರಣ ಮಾಡುತ್ತಿದ್ದೇವಾ? ಎಂದು ಪ್ರಶ್ನಿಸಿದ್ದಾರೆ.

    ಶಾಸಕರಾಗಿ ಗೌರವಯುತವಾಗಿ ನಡೆದುಕೊಳ್ಳುವುದನ್ನು ಅವರು ಕಲಿತುಕೊಳ್ಳಬೇಕು. ನಮಗೆ ಟಾಸ್ಕ್ ಕೊಟ್ಟರೆ ಅವರನ್ನು ಸೆಳೆಯುತ್ತೇವೆ. ಇವರನ್ನು ಕರೆದುಕೊಂಡು ಬರುತ್ತೇವೆ ಎನ್ನುವುದನ್ನು ಬಿಡಬೇಕು. ಅವರಿಗೆ ಇದನ್ನೇ ಮಾಡಿ ಅಭ್ಯಾಸ, ಹಾಗಾಗಿ ಅವರು ಇದನ್ನೇ ಹೇಳುತ್ತಾರೆ. ಹೋದ ಕಡೆಯಲ್ಲಿ ಅದನ್ನೇ ನೆನಪಿಸಿಕೊಳ್ಳುತ್ತಾರೆ. ಅಹಂ ಇರುತ್ತದೆಯಲ್ಲ ಹಾಗಾಗಿ ಈ ರೀತಿ ಹೇಳಿಕೆ ಕೊಡುತ್ತಾರೆ. ಯೋಗೇಶ್ವರ್ ಯಾರು ನಮ್ಮ ಪಕ್ಷದ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಎಂದು ಕಿಡಿಕಾರಿದ್ದಾರೆ.

    ನಮ್ಮ ಪಕ್ಷ ಫೀನಿಕ್ಸ್ ಹಕ್ಕಿ ಇದ್ದ ಹಾಗೆ, ನಾವು ಮತ್ತೆ ಎದ್ದು ಬರುತ್ತೇವೆ ಎಂಬ ದೃಢವಾದ ನಂಬಿಕೆ ಇದೆ. ರಾಜಕಾರಣದಲ್ಲಿ ಜೆಡಿಎಸ್‍ಗೆ ಖಂಡಿತವಾಗಿಯೂ ಮುಂದಿನ ದಿನಗಳಲ್ಲಿ ಭವಿಷ್ಯವಿದೆ. ನನ್ನ ಪ್ರಕಾರ ಜೆಡಿಎಸ್‍ನಲ್ಲೆ ಎಲ್ಲರೂ ಇರುತ್ತಾರೆ ಎನ್ನುವ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  • ಆ ಸಮುದಾಯಕ್ಕೆ ನಮ್ಮ ಅವಶ್ಯಕತೆ ಇಲ್ಲ: ಮತ್ತೆ ಅಲ್ಪಸಂಖ್ಯಾತರತ್ತ ಬೊಟ್ಟು ಮಾಡಿದ ನಿಖಿಲ್

    ಆ ಸಮುದಾಯಕ್ಕೆ ನಮ್ಮ ಅವಶ್ಯಕತೆ ಇಲ್ಲ: ಮತ್ತೆ ಅಲ್ಪಸಂಖ್ಯಾತರತ್ತ ಬೊಟ್ಟು ಮಾಡಿದ ನಿಖಿಲ್

    – ಅಧಿಕಾರ ದಾಹಕ್ಕೆ ಗೌಡರು ರಾಜಕಾರಣ ಮಾಡ್ತಿಲ್ಲ; ಸಿಪಿವೈಗೆ ತಿರುಗೇಟು

    ಬೆಂಗಳೂರು/ಮಂಡ್ಯ: ಈ ಚುನಾವಣೆಯಲ್ಲಿ (Election) ಆ ಒಂದು ಸಮುದಾಯವನ್ನ ಕಡೆಗಣಿಸಬಾರದು, ಅವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕು ಅಂತ ಪ್ರಯತ್ನ ಮಾಡಿದ್ವಿ, ಆದರೆ ನಮ್ಮ ಅವಶ್ಯಕತೆ ಅವರಿಗೆ ಇಲ್ಲ, ಅಂತ ಆ ಸಮುದಾಯ ನಿನ್ನೆ ಸ್ಪಷ್ಟ ಸಂದೇಶ ಕೊಟ್ಟಿದೆ ಎಂದು ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಬೇಸರ ಹೊರಹಾಕಿದರು.

    ಮಾಧ್ಯಮಗಳೊಂದಿಗೆ ಮಾನನಾಡಿದ ಅವರು, ಯಾವುದೇ ಕಾರ್ಯಕರ್ತ ನಿಂತರೂ ಬರುತ್ತಿದ್ದ ನಮ್ಮ ಸಾಂಪ್ರದಾಯಿಕ ಕನಿಷ್ಠ 60 ಸಾವಿರ ಮತಗಳು ಈಗ 87 ಸಾವಿರಕ್ಕೆ ಹೋಗಿ ಮುಟ್ಟಿದೆ. ಪಕ್ಷದ ಅಭಿಮಾನಿಗಳಾಗಿರುವ ಜನ ಯಾರೂ ನಮ್ಮ ಕೈಬಿಟ್ಟಿಲ್ಲ. ಆದ್ರೆ 1 ಸಮುದಾಯದ ಪರವಾಗಿ ದೇವೇಗೌಡರು ಹಿಂದೆ ನಿರ್ಣಯ ಕೈಗೊಂಡಿದ್ದರು, ಮೀಸಲಾತಿ ವಿಚಾರದ ಬಗ್ಗೆಯೂ ತೀರ್ಮಾನ ಮಾಡಿದ್ರು. ಈ ಚುನಾವಣೆಯಲ್ಲೂ ಆ ಸಮುದಾಯವನ್ನ ಕಡೆಗಣಿಸಬಾರದು, ಅವರನ್ನೂ ವಿಶ್ವಾಸಕ್ಕೆ ತಗೊಂಡು ಹೋಗಬೇಕು ಅಂತ ಪ್ರಯತ್ನ ಮಾಡಿದ್ವಿ. ಆದರೆ ನಮ್ಮ ಅವಶ್ಯಕತೆ ಅವರಿಗೆ ಇಲ್ಲ ಅಂತ ಆ ಸಮುದಾಯ (Muslim community) ನಿನ್ನೆ ಸ್ಪಷ್ಟ ಸಂದೇಶ ಕೊಟ್ಟಿದೆ. ಮುಂದಿನ ದಿನಗಳಲ್ಲಿ ಬೇರೆ ಸಮುದಾಯಗಳನ್ನು ಯಾವ ರೀತಿ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಕೆಲಸ ಮಾಡಬೇಕೋ ಅದನ್ನು ಮಾಡ್ತೇವೆ ಎಂದು ನುಡಿದರು. ಇದನ್ನೂ ಓದಿ: ನಿಖಿಲ್‌ ಸೋಲಿನಿಂದ ಬೇಸರ – ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ!

    ಅಧಿಕಾರದ ದಾಹಕ್ಕೆ ಗೌಡರು ರಾಜಕಾರಣ ಮಾಡ್ತಿಲ್ಲ:
    ಇನ್ನೂ ದೇವೇಗೌಡ್ರು ರಾಜಕೀಯ ನಿವೃತ್ತಿ ಘೋಷಿಸಲಿ ಎಂಬ ಸಿಪಿವೈ ಹೇಳಿಕೆಗೆ ಪ್ರತಿಕ್ರಿಯಿಸಿದ ನಿಖಿಲ್‌, ದೇವೇಗೌಡರು ಅಧಿಕಾರಕ್ಕಾಗಿ ರಾಜಕಾರಣ ಮಾಡ್ತಿಲ್ಲ. ಅವರ ವಯಸ್ಸು 92, ದೇಶ, ರಾಜ್ಯ ಕಟ್ಟಲು ಅವರ ಮಾರ್ಗದರ್ಶನ ಬೇಕು ಅಂತ ಅನೇಕ ವೇಳೆ ಪ್ರಧಾನಿಯವರೇ ಹೇಳಿದ್ದಾರೆ. ಇಲ್ಲಿ ಅಧಿಕಾರದ ದಾಹಕ್ಕೆ, ಅಧಿಕಾರಕ್ಕೆ ಅಂಟಿಕೊಂಡು ದೇವೇಗೌಡರು ರಾಜಕಾರಣ ಮಾಡ್ತಿಲ್ಲ. ಕಳೆದ 62 ವರ್ಷಗಳ ಅವರ ಪ್ರಾಮಾಣಿಕ ರಾಜಕೀಯ ಬದುಕಿನಲ್ಲಿ ಏನನ್ನೂ ಅಪೇಕ್ಷೆ ಇಟ್ಟುಕೊಂಡವರಲ್ಲ. ಅವರು ನಿವೃತ್ತಿ ಹೊಂದಬೇಕಾ? ಮುಂದುವರಿಬೇಕಾ ಅಂತ ರಾಜ್ಯದ ಜನ ತೀರ್ಮಾನ ಮಾಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

    ಇನ್ನೂ ನನ್ನನ್ನ ಪ್ರಚಾರಕ್ಕೇ ಕರೆದಿಲ್ಲ ಎಂಬ ಜಿ.ಟಿ ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿ, ಜಿಟಿಡಿ ಅವರು ಹಿರಿಯರು, ರಾಜಕೀಯದಲ್ಲಿ ಅವರಿಗೆ ಬಹಳ ಅನುಭವ ಇದೆ. ಅವರು ಯಾವ ಅರ್ಥದಲ್ಲಿ ಮಾತಾಡಿದ್ದಾರೋ ಗೊತ್ತಿಲ್ಲ. ನಮ್ಮ ಪಕ್ಷದ ಕೋರ್ ಕಮಿಟಿ ನಾಯಕರು, ಅವರಿಗೆ ಯಾವ ಗೌರವ ಕೊಡಬೇಕೋ ಅದನ್ನು ನಾವು ಕೊಡ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶ | ಜಾಮಾ ಮಸೀದಿ ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳ ಮೇಲೆ ಕಲ್ಲು ತೂರಾಟ

  • ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರವೂ ಕಾಂಗ್ರೆಸ್ ಪಾಲು – ಫಲಕೊಡದ ಗೌಡರ ತಂತ್ರ, ಕೈಹಿಡಿದ ಮುಸ್ಲಿಂ ಮತ!

    ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರವೂ ಕಾಂಗ್ರೆಸ್ ಪಾಲು – ಫಲಕೊಡದ ಗೌಡರ ತಂತ್ರ, ಕೈಹಿಡಿದ ಮುಸ್ಲಿಂ ಮತ!

    ಬೆಂಗಳೂರು: ಹೆಚ್‌.ಡಿ ಕುಮಾರಸ್ವಾಮಿ (HD Kumaraswamy), ಬಸವರಾಜ ಬೊಮ್ಮಾಯಿ ಹಾಗೂ ಈ. ತುಕಾರಾಮ್‌ ಅವರ ರಾಜೀನಾಮೆಯಿಂದ ತೆರವಾದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ (By Election) ನಡೆದರೂ ರಾಜ್ಯದ ಮಟ್ಟಿಗೆ ಹೆಚ್ಚು ಸದ್ದು ಮಾಡಿದ್ದು, ಹೈವೋಲ್ಟೇಜ್ ಕಣ ಚನ್ನಪಟ್ಟಣ.

    ಅಂತಿಮವಾಗಿ ಎಲ್ಲರ ಲೆಕ್ಕಾಚಾರ ತಲೆಕೆಳಗು ಮಾಡಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ (CP Yogeshwar) ಗೆಲುವಿನ ನಗಾರಿ ಬಾರಿಸಿದ್ದಾರೆ. ಕಾಂಗ್ರೆಸ್ ರೂಪಿಸಿದ ಚಕ್ರವ್ಯೂಹ ಬೇಧಿಸುವಲ್ಲಿ ನಿಖಿಲ್ ಕುಮಾರಸ್ವಾಮಿ 3ನೇ ಬಾರಿಯೂ ವಿಫಲರಾಗಿದ್ದಾರೆ. ಈ ಪ್ರತಿಷ್ಠೆಯ ರಾಜಕೀಯ ಆಟದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಕೈ ಮೇಲಾಗಿದೆ. ಇದನ್ನೂ ಓದಿ: ಜೈಲರ್‌ ಬಾಕ್ಸ್‌ನಿಂದ ಬ್ಯಾಲೆಟ್‌ ಬಾಕ್ಸ್‌ವರೆಗೆ – ಒಂದೇ ವರ್ಷದಲ್ಲಿ 2ನೇ ಬಾರಿ ಹೇಮಂತ್‌ ಸೊರೆನ್‌ ಸಿಎಂ

    ಸ್ವಂತ ಕ್ಷೇತ್ರದಲ್ಲಿ ಪುತ್ರನನ್ನು ಗೆಲ್ಲಿಸಲಾಗದೇ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಮುಜುಗರ ಅನುಭವಿಸಿದ್ದಾರೆ. ದೇವೇಗೌಡರು ನಿರಂತರ 10 ದಿನ ಪ್ರಚಾರ ನಡೆಸಿ ಅಬ್ಬರಿಸಿದರೂ, ಬಿಜೆಪಿ ನಾಯಕರು ಬಂದು ಸಂಘಟಿತವಾಗಿ ಪ್ರಚಾರ ನಡೆಸಿದ್ರೂ, ಅದು ನಿಖಿಲ್‌ಗೆ ಗೆಲುವು ತಂದುಕೊಡಲಿಲ್ಲ. ಮತ ಎಣಿಕೆಯ ಮೊದಲ 6 ಸುತ್ತಿನ ವರೆಗೂ ಹಾವು – ಏಣಿ ಆಟ ನಡೆದಿತ್ತು. ಆದ್ರೆ 6ನೇ ಸುತ್ತಿನ ಬಳಿಕ ಫಲಿತಾಂಶದ ದಿಕ್ಕೇ ಬದಲಾಯಿತು. ಯೋಗೇಶ್ವರ್‌ ಸತತ ಮುನ್ನಡೆ ಸಾಧಿಸುತ್ತಾ ಹೋದ್ರು, ಇದರಿಂದ ಗೆಲುವು ʻಕೈʼ ಪಾಲಾಯಿತು.

    ಮೂರು ಕ್ಷೇತ್ರಗಳ ಫಲಿತಾಂಶ ಹೊರ ಬೀಳುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮದಲ್ಲಿ ಮುಳುಗಿದ್ರೆ, ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಮೌನಕ್ಕೆ ಶರಣಾದ್ರು. ಸೋಲು ಗೆಲುವಿನ ಬಗ್ಗೆ ಎಂದಿನಂತೆ ರಾಜಕಾರಣಿಗಳು ಮಾತಾಡಿದರು. ಗೌಡರ ಒಕ್ಕಲಿಗ ನಾಯಕತ್ವವನ್ನು ಜನ ಕಿತ್ಕೊಂಡಿದ್ದಾರೆ ಎಂದು ಯೋಗೇಶ್ವರ್ ವ್ಯಾಖ್ಯಾನಿಸಿದರು. ಇದನ್ನೂ ಓದಿ: ಬೊಂಬೆನಗರಿಯಲ್ಲಿ ಯೋಗೇಶ್ವರ್ ಮ್ಯಾಜಿಕ್‌ ಹೇಗಾಯ್ತು? ಹಿಂದೆ ಯಾವ ಪಕ್ಷದಿಂದ ಯಾವಾಗ ಗೆದ್ದಿದ್ದರು?

    ಚನ್ನಪಟ್ಟಣ ಫಲಿತಾಂಶ – ಯಾರಿಗೆ ಎಷ್ಟು ಮತ?
    * ಯೋಗೇಶ್ವರ್ – ಕಾಂಗ್ರೆಸ್ – ಗೆಲುವು – 1,12,642 ಮತ
    * ನಿಖಿಲ್ – ಎನ್‌ಡಿಎ – ಸೋಲು – 87,229 ಮತ
    * ಕಾಂಗ್ರೆಸ್ ಗೆಲುವಿನ ಅಂತರ – 25,413 ಮತ

    ಚನ್ನಪಟ್ಟಣ ಫಲಿತಾಂಶ ಟ್ರೆಂಡ್ಸ್ ಹೇಗಿತ್ತು?
    * 1ನೇ ಸುತ್ತು – ಯೋಗೇಶ್ವರ್‌ಗೆ 49 ಮತಗಳ ಮುನ್ನಡೆ (ಗ್ರಾಮೀಣ)
    * 2ನೇ ಸುತ್ತು – ನಿಖಿಲ್‌ಗೆ 135 ಮತಗಳ ಮುನ್ನಡೆ (ಗ್ರಾಮೀಣ)
    * 5ನೇ ಸುತ್ತು – ನಿಖಿಲ್‌ಗೆ 1,306 ಮತಗಳ ಮುನ್ನಡೆ (ಗ್ರಾಮೀಣ)
    * 6ನೇ ಸುತ್ತು – ಯೋಗೇಶ್ವರ್‌ಗೆ 783 ಮತಗಳ ಮುನ್ನಡೆ (ಟೌನ್)
    * 10ನೇ ಸುತ್ತು – ಯೋಗೇಶ್ವರ್‌ಗೆ 19,799 ಮತಗಳ ಮುನ್ನಡೆ (ಟೌನ್)
    * 20ನೇ ಸುತ್ತು – 25,515 ಮತಗಳ ಅಂತರದಿಂದ ಯೋಗೇಶ್ವರ್ ಗೆಲುವು

    ಚನ್ನಪಟ್ಟಣ ಫಲಿತಾಂಶ ವಿಶ್ಲೇಷಣೆ
    * ಯೋಗೇಶ್ವರ್ ಕೈ ಹಿಡಿದ ಮುಸ್ಲಿಂ ಮತ
    * ಯೋಗೇಶ್ವರ್ ಕೈ ಹಿಡಿದ `ಪಟ್ಟಣ’ದ ಮತ
    * ಒಕ್ಕಲಿಗ ಮತ ವಿಭಜನೆ- ನಿಖಿಲ್ ಸೋಲು
    * ಯೋಗೇಶ್ವರ್ ಕೈ ಹಿಡಿದ `ಗೃಹಲಕ್ಷ್ಮಿ’ಯರ `ಶಕ್ತಿ’
    * ಸಿಪಿವೈ ವೈಯಕ್ತಿಕ ವರ್ಚಸ್ಸು – 2 ಸೋಲಿನ ಅನುಕಂಪ
    * ಬಿಜೆಪಿಯ `ವಕ್ಫ್’ ವಿರೋಧಿ ನೀತಿ-ನಿಖಿಲ್‌ಗೆ ಹೊಡೆತ
    * ಕಾಂಗ್ರೆಸ್‌ಗೆ ಪ್ಲಸ್ ಆದ ಜಮೀರ್ ವಿವಾದಿತ ಮಾತು
    * ಕೈಗೂಡದ ದೇವೇಗೌಡರು- ಹೆಚ್‌ಡಿಕೆ ರಣತಂತ್ರ

    ಶಿಗ್ಗಾಂವಿಯಲ್ಲಿ 3 ದಶಕದ ಬಳಿಕ ʻಕೈʼ ಮೇಲು:
    ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಶಿಗ್ಗಾಂವಿ ಉಪಚುನಾವಣೆಯಲ್ಲಿ ಎಲ್ಲರ ನಿರೀಕ್ಷೆ ಮೀರಿ ಮತಪ್ರಭುಗಳು ಅಚ್ಚರಿಯ ತೀರ್ಪು ನೀಡಿದ್ದಾರೆ. ಬಿಜೆಪಿಯ ಭದ್ರಕೋಟೆ ಛಿದ್ರವಾಗಿದೆ. 1994ರ ಬಳಿಕ ಇದೇ ಮೊದಲ ಬಾರಿಗೆ ಶಿಗ್ಗಾಂವಿ ಕಾಂಗ್ರೆಸ್ ಕೈ ಹಿಡಿದಿದೆ. ತಾವೇ ಕಟ್ಟಿರುವ ಕೋಟೆಯಲ್ಲಿ ಮಗನನ್ನು ಪ್ರತಿಷ್ಠಾಪಿಸಲು ಬೊಮ್ಮಾಯಿ ವಿಫಲರಾಗಿದ್ದಾರೆ. ಜನಾದೇಶ ಭರತ್ ಬೊಮ್ಮಾಯಿ ವಿರುದ್ಧ ಬಂದಿದೆ. ಮೊದಲ 7 ಸುತ್ತಿನವರೆಗೆ ಭರತ್ ಬೊಮ್ಮಾಯಿ ಲೀಡ್‌ನಲ್ಲಿದ್ದರು. ಆದ್ರೆ 8ನೇ ಸುತ್ತಿನ ನಂತ್ರ ಚಿತ್ರಣ ಬದಲಾಯ್ತು. ಅಂತಿಮವಾಗಿ ಕಾಂಗ್ರೆಸ್ ಜನಾದೇಶ ಕಾಂಗ್ರೆಸ್ ಪರ ಬಂತು. ಪರಿಣಾಮ ಯಾಸೀರ್ ಪಠಾಣ್ ಇದೇ ಮೊದಲ ಬಾರಿಗೆ ವಿಧಾನಸಭೆ ಪ್ರವೇಶ ಮಾಡ್ತಿದ್ದಾರೆ. ಕಾಂಗ್ರೆಸ್ ಹಣ ಹರಿಸಿದ್ದು, ಮುಸ್ಲಿಮರು, ಕುರುಬರು ಕಾಂಗ್ರೆಸ್ ಪರ ನಿಂತಿದ್ದು ನಮ್ಮ ಸೋಲಿಗೆ ಕಾರಣ ಎಂದು ಬಿಜೆಪಿ ಆರೋಪಿಸಿದೆ. ನಾನು ಡಿಸಿಎಂ ಅಲ್ದೇ ಇದ್ರೂ ಗೆಲ್ಸಿದ್ದೀನಿ ನೋಡಿ ಎನ್ನುತ್ತಾ ಡಿಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ಟವೆಲ್ ಹಾಕಿದ್ದಾರೆ. ಬೆಳಗಾವಿಯಲ್ಲಿ ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಘೋಷಣೆ ಮೊಳಗಿವೆ.

    ಶಿಗ್ಗಾಂವಿ ಫಲಿತಾಂಶ ಹೇಗಿದೆ?
    * ಯಾಸೀರ್ ಪಠಾಣ್ – ಕಾಂಗ್ರೆಸ್ – ಗೆಲುವು – 1,00,756 ಮತ
    * ಭರತ್ ಬೊಮ್ಮಾಯಿ – ಬಿಜೆಪಿ – ಸೋಲು – 87,308 ಮತ
    * ಕಾಂಗ್ರೆಸ್ ಗೆಲುವಿನ ಅಂತರ – 13,448 ಮತ

    ಶಿಗ್ಗಾಂವಿ ರಿಸಲ್ಟ್ ಟ್ರೆಂಡ್ಸ್ ಹೇಗಿತ್ತು?
    * 1ನೇ ಸುತ್ತು – ಭರತ್‌ಗೆ 325 ಮತಗಳ ಮುನ್ನಡೆ
    * 7ನೇ ಸುತ್ತು – ಭರತ್‌ಗೆ 998 ಮತಗಳ ಮುನ್ನಡೆ
    * 8ನೇ ಸುತ್ತು – ಯಾಸೀರ್‌ಗೆ 1158 ಮತಗಳ ಮುನ್ನಡೆ
    * 18ನೇ ಸುತ್ತು – ಯಾಸೀರ್‌ಗೆ 13,448 ಮತಗಳ ಗೆಲುವು

    ಶಿಗ್ಗಾಂವಿ ಫಲಿತಾಂಶ ವಿಶ್ಲೇಷಣೆ
    * ಕಾಂಗ್ರೆಸ್ ಕೈಹಿಡಿದ ಅಹಿಂದ ಮತ
    * ಕುರುಬ, ಮುಸ್ಲಿಂ ಮತ ಚದುರದಂತೆ ಸಿಎಂ ಕಾರ್ಯತಂತ್ರ
    * ಯಾಸೀರ್‌ಗೆ ವರವಾದ ಗ್ಯಾರಂಟಿ ಮತ
    * ತಳಮಟ್ಟದಲ್ಲಿ ಸತೀಶ್ ಜಾರಕಿಹೊಳಿ ಸಂಘಟನೆ
    * ಫಲ ಕೊಡದ ಬೊಮ್ಮಾಯಿ ಕಾರ್ಯತಂತ್ರ
    * ಕುಟುಂಬ ರಾಜಕೀಯ ಒಪ್ಪದ ಮತದಾರ

    ಸಂಡೂರು ಕ್ಷೇತ್ರಕ್ಕೆ ಮೊದಲ ಮಹಿಳಾ ಶಾಸಕಿ:
    ಇನ್ನೂ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಿದ್ದಾರೆ. 19 ಸುತ್ತುಗಳ ಮತ ಎಣಿಕೆಯಲ್ಲಿ ಆರಂಭದಿಂದ ಅನ್ನಪೂರ್ಣ, ಬಂಗಾರು ಹನುಮಂತು ನಡ್ವೆ ತುರುಸಿನ ಪೈಪೋಟಿ ಕಂಡುಬಂದಿತ್ತು. ಆದ್ರೆ 6 ಮತ್ತು 7ನೇ ಸುತ್ತು ಹೊರತು ಪಡಿಸಿದ್ರೆ, ಉಳಿದಂತೆ ಅನ್ನಪೂರ್ಣ ಎಲ್ಲೂ ಹಿನ್ನಡೆ ಕಾಣಲಿಲ್ಲ. ನಿಧಾನಕ್ಕೆ ಮತಗಳ ಅಂತರವನ್ನು ಹೆಚ್ಚಿಸಿಕೊಳ್ಳುತ್ತಾ, ಸುಲಭ ಜಯ ಗಳಿಸಿದ್ರು. ಈ ಮೂಲಕ ಸಂಡೂರಿನಿಂದ ವಿಧಾನಸಭೆ ಪ್ರವೇಶ ಮಾಡ್ತಿರುವ ಮೊದಲ ಮಹಿಳಾ ಶಾಸಕಿ ಅನ್ನೋ ಹೆಗ್ಗಳಿಕೆಗೂ ಪಾತ್ರರಾದ್ರು.

    ಸಂಡೂರು ಫಲಿತಾಂಶ ಹೇಗಿದೆ?
    * ಅನ್ನಪೂರ್ಣ – ಕಾಂಗ್ರೆಸ್ – ಗೆಲುವು – 93,616 ಮತ
    * ಬಂಗಾರು ಹನುಮಂತು – ಬಿಜೆಪಿ – ಸೋಲು – 83,967 ಮತ
    (ಕಳೆದ ಬಾರಿ ಬಿಜೆಪಿ ಪಡೆದ ಮತ 49,700 )
    * ಕಾಂಗ್ರೆಸ್ ಗೆಲುವಿನ ಅಂತರ – 9649 ಮತ

    ಸಂಡೂರು ರಿಸಲ್ಟ್ ಟ್ರೆಂಡ್ಸ್ ಹೇಗಿದೆ?
    * 1ನೇ ಸುತ್ತು – ಅನ್ನಪೂರ್ಣಗೆ 2,586 ಮತಗಳ ಮುನ್ನಡೆ
    * 6ನೇ ಸುತ್ತು – ಬಂಗಾರುಗೆ 262 ಮತಗಳ ಮುನ್ನಡೆ
    * 8ನೇ ಸುತ್ತು – ಅನ್ನಪೂರ್ಣಗೆ 33 ಮತಗಳ ಮುನ್ನಡೆ
    * 19ನೇ ಸುತ್ತು – ಅನ್ನಪೂರ್ಣಗೆ 9,649 ಮತಗಳ ಗೆಲುವು

    ಸಂಡೂರು ಫಲಿತಾಂಶ ವಿಶ್ಲೇಷಣೆ
    * ಕಾಂಗ್ರೆಸ್‌ನ ಭದ್ರಕೋಟೆ
    * ಸಂಸದ ತುಕಾರಾಂ ಸಾಫ್ಟ್ ಇಮೇಜ್
    * ಸಂತೋಷ್ ಲಾಡ್ ಸಂಘಟನೆ
    * ಕಾಂಗ್ರೆಸ್ ಕೈಹಿಡಿದ `ಗ್ಯಾರಂಟಿ’
    * ಜನಾರ್ದನರೆಡ್ಡಿ ರಣತಂತ್ರ ಫೇಲ್
    * ಬಿಜೆಪಿಯಲ್ಲಿ ಹೊಂದಾಣಿಕೆ ಕೊರತೆ
    * ಬಂಗಾರು ಹೊರಗಿನವರು ಎಂಬ ಆರೋಪ

  • ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ನೀಡಿದೆ: ಸಿಎಂ

    ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ನೀಡಿದೆ: ಸಿಎಂ

    ಬೆಂಗಳೂರು: ವಿಧಾನಸಭಾ ಉಪಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ (CM Siddaramaiah) ತಮ್ಮ ಎಕ್ಸ್ ಖಾತೆಯಲ್ಲಿ ಗೆಲುವಿನ ಸಂಭ್ರಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

    ಸಿಎಂ ಪೋಸ್ಟ್‌ನಲ್ಲಿ ಏನಿದೆ?
    ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವದಿಸಿದ ಶಿಗ್ಗಾಂವಿ, ಸಂಡೂರು (Sanduru) ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಪ್ರೀತಿಪೂರ್ವಕ ಧನ್ಯವಾದಗಳು.

    ಈ ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿ, ವಿಧಾನಸಭೆಗೆ ಪ್ರವೇಶಿಸಿರುವ ನಮ್ಮ ಅಭ್ಯರ್ಥಿಗಳಾದ ಯಾಸಿರ್ ಅಹ್ಮದ್ ಖಾನ್ ಪಠಾಣ್, ಅನ್ನಪೂರ್ಣ ತುಕಾರಾಮ್ ಹಾಗೂ ಸಿ.ಪಿ.ಯೋಗೇಶ್ವರ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ಇದನ್ನೂ ಓದಿ: ಸಿಪಿವೈ ಶಾಸಕರಾಗಿರಬಹುದು, ಬಿಜೆಪಿಯಲ್ಲೇ ಇದ್ದಿದ್ರೆ ಲೀಡರ್ ಆಗಿರುತ್ತಿದ್ರು: ಅಶ್ವಥ್ ನಾರಾಯಣ್

    ವಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ. ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ಇದೇ ವೇಳೆ ನೆನೆಯುತ್ತೇನೆ. ಇದನ್ನೂ ಓದಿ: ಯಡಿಯೂರಪ್ಪ, ಪುತ್ರ ವ್ಯಾಮೋಹದಿಂದ ಬಿಜೆಪಿ ಸೋತಿದೆ: ಯತ್ನಾಳ್‌ ವಾಗ್ದಾಳಿ

    ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ. ತಮ್ಮೆಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ದರ್ಶನ್ & ಗ್ಯಾಂಗ್ ವಿರುದ್ಧ 1200 ಪುಟಗಳ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಕೆ

  • ಸಿಪಿವೈ ಶಾಸಕರಾಗಿರಬಹುದು, ಬಿಜೆಪಿಯಲ್ಲೇ ಇದ್ದಿದ್ರೆ ಲೀಡರ್ ಆಗಿರುತ್ತಿದ್ರು: ಅಶ್ವಥ್ ನಾರಾಯಣ್

    ಸಿಪಿವೈ ಶಾಸಕರಾಗಿರಬಹುದು, ಬಿಜೆಪಿಯಲ್ಲೇ ಇದ್ದಿದ್ರೆ ಲೀಡರ್ ಆಗಿರುತ್ತಿದ್ರು: ಅಶ್ವಥ್ ನಾರಾಯಣ್

    – ಭ್ರಷ್ಟ ಕಾಂಗ್ರೆಸ್ ಅಭಿವೃದ್ಧಿ ಮಾಡದೇ ಗೆದ್ದಿದೆ
    – `ಕೈ’ಗೆ ತಾತ್ಕಾಲಿಕ ಸಂತೋಷ

    ಬೆಂಗಳೂರು: ಭ್ರಷ್ಟ ಕಾಂಗ್ರೆಸ್ (Congress) ಅಭಿವೃದ್ಧಿ ಮಾಡದೇ ಉಪಚುನಾವಣೆಯಲ್ಲಿ (By Election) ಗೆದ್ದಿದೆ ಎಂದು ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಅಸಮಾಧಾನ ಹೊರ ಹಾಕಿದ್ದಾರೆ.

    ಬೆಂಗಳೂರಿನಲ್ಲಿ `ಪಬ್ಲಿಕ್ ಟಿವಿ’ ಜೊತೆ ಅವರು ಮಾತನಾಡಿದರು. ಈ ವೇಳೆ, ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿರಬಹುದು. ಆದರೆ ಸಂಪೂರ್ಣ ದೇಶದಲ್ಲಿ ಕಾಂಗ್ರೆಸ್ ವಿರೋಧಿ ಅಲೆ ಇದೆ ಎಂದಿದ್ದಾರೆ.

    ಚನ್ನಪಟ್ಟಣ (Channapatna) ಕ್ಷೇತ್ರದಲ್ಲಿ ಕಾಂಗ್ರೆಸ್‍ಗೆ ಸ್ವಂತ ಬಲದಲ್ಲಿ ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ. ಯೋಗೇಶ್ವರ್ (C.P Yogeshwar) ಅವರಿಂದ ಕಾಂಗ್ರೆಸ್ ಗೆಲುವು ಕಂಡಿದೆ. ಕಾಂಗ್ರೆಸ್‍ಗೆ ತಾತ್ಕಾಲಿಕ ಸಂತೋಷ ಸಿಕ್ಕಿದೆ. ಅಲ್ಲಿ ಅವರ ಪರವಾದ ಅಲೆ ಇತ್ತು. ನಾವೂ ಸಹ ಯೋಗೇಶ್ವರ್ ಅವರಿಗೆ ಸೀಟು ಕೊಡಿಸುವ ಪ್ರಯತ್ನ ಮಾಡಿದ್ವಿ. ಜೆಡಿಎಸ್‍ನಿಂದಲೂ ಅವರಿಗೆ ಆಹ್ವಾನ ಕೊಟ್ಟಿದ್ದರು. ಕಾಂಗ್ರೆಸ್‍ನಿಂದ ಗೆದ್ದು ಅವರು ಶಾಸಕರಾಗಿರಬಹುದು, ಬಿಜೆಪಿಯಲ್ಲಿ ಇದ್ದಿದ್ದರೆ (BJP) ಲೀಡರ್ ಆಗಿರುತ್ತಿದ್ದರು ಎಂದಿದ್ದಾರೆ.

    ನಿಖಿಲ್ ಕುಮಾರಸ್ವಾಮಿಯವರಿಗೆ ಸೋಲಾಗಿದ್ದರೂ ಸಹ ಒಬ್ಬ ನಾಯಕರಾಗಿ ಬೆಳೆದಿದ್ದಾರೆ. ಇನ್ನೂ ಶಿಗ್ಗಾಂವಿಯಲ್ಲಿ ಎಲ್ಲಾ ವಿರೋಧಿ ಬಣಗಳು ಒಂದಾಗಿದ್ದಕ್ಕೆ ಸೋಲಾಗಿದೆ ಎಂದು ಹೇಳಿದ್ದಾರೆ.

    ಯೋಗೇಶ್ವರ್ 25,357 ಮತಗಳಿಂದ ಗೆಲುವು ದಾಖಲಿಸಿದ್ದಾರೆ. 20 ಸುತ್ತುಗಳ ಮತ ಎಣಿಕೆಯ ನಂತರ ಯೋಗೇಶ್ವರ್ 1,12,388 ಮತಗಳನ್ನು ಪಡೆದರೆ ನಿಖಿಲ್ ಕುಮಾರಸ್ವಾಮಿ 87,031 ಮತಗಳನ್ನು ಪಡೆದಿದ್ದಾರೆ.

  • ನಾವು ಓಲೈಕೆ ಮಾಡಲ್ಲ, ಮುಸ್ಲಿಮರು ನಮ್ಗೆ ಮತ ಹಾಕಲ್ಲ: ಸಿ.ಟಿ ರವಿ

    ನಾವು ಓಲೈಕೆ ಮಾಡಲ್ಲ, ಮುಸ್ಲಿಮರು ನಮ್ಗೆ ಮತ ಹಾಕಲ್ಲ: ಸಿ.ಟಿ ರವಿ

    ಕಲಬುರಗಿ: ನಾವು ಮುಸ್ಲಿಮರ ಪರವಾಗಿ ಎಷ್ಟೇ ಕೆಲಸ ಮಾಡಿದರೂ ಅವರು ನಮಗೆ ಮತ ಹಾಕಲ್ಲ, ಏಕೆಂದರೆ ನಾವು ಅವರನ್ನ ಓಲೈಕೆ ಮಾಡಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ.

    ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಟಫ್ ಪೈಟ್ ಇದೆ, ಆದ್ರೂ ಎರಡರಲ್ಲಿ ಎನ್‌ಡಿಎ ಗೆಲ್ಲುತ್ತೆ ಅಂತ ವಿಶ್ವಾಸವಿದೆ ಎಂದಿದ್ದಾರೆ. ಪ್ರಯತ್ನ ನಾವು ಪಟ್ಟಿದ್ದೆವೆ ತೀರ್ಪು ಜನರು ಕೊಡ್ತಾರೆ ಎಂದಿದ್ದಾರೆ.

    ಮಹಾರಾಷ್ಟ್ರದಲ್ಲಿ ಕರ್ನಾಟಕದಿಂದ ನಾನು ಸೇರಿ ಹಲವು ಜನರು ಕೆಲಸ ಮಾಡಿದ್ದೆವೆ. ಪಶ್ಚಿಮ ಮಹಾರಾಷ್ಟ್ರದ 58 ಕ್ಷೇತ್ರದಲ್ಲಿ ಓಡಾಟ ನಡೆಸಿದ್ದೇನೆ. ಎನ್‌ಡಿಎ 221 ಕ್ಷೇತ್ರದಲ್ಲಿ ಮುನ್ನಡೆ ಕಾಯ್ಡುಕೊಂಡಿದೆ. ಇದೇ ಅಂತಿಮ ಅಲ್ಲ, ಜಾರ್ಖಂಡ್‌ನಲ್ಲಿ ನಮ್ಮ ನೀರಿಕ್ಷೆಯಷ್ಟು ಮುನ್ನಡೆ ಸಿಕ್ಕಿಲ್ಲ. ಮಹಾರಾಷ್ಟ್ರ ಮತ್ತು ಜಾರ್ಖಂಡ್ ಎರಡೂ ರಾಜ್ಯಗಳಲ್ಲಿ ಅಧಿಕಾರಕ್ಕೆ ಬರ್ತೀವಿ ಅನ್ನೋ ವಿಶ್ವಾವಿದೆ. ಕರ್ನಾಟಕದಲ್ಲಿ ಏನಾಗುತ್ತದೆ ಎಂಬುದನ್ನು ಕಾದುನೋಡಬೇಕು ಎಂದು ಹೇಳಿದ್ದಾರೆ.

    ಚನ್ನಪಟ್ಟಣದಲ್ಲಿ ಅಲ್ಲಿನ ಮುಸ್ಲಿಂ ಮತಗಳ ಸಂಖ್ಯೆ ಜಾಸ್ತಿ ಇದೆ. ಹಾಗಾಗಿ ಯೋಗೇಶ್ವರ್‌ಗೆ ಮುನ್ನಡೆ ಇರಬೇಕು. ನಾವು ಎಷ್ಟೇ ಅವರ ಪರ ಕೆಲಸ ಮಾಡಿದ್ರು ಮುಸ್ಲಿಮರು ನಮಗೆ ಮತ ಹಾಕಲ್ಲ. ಶಿಗ್ಗಾಂವಿ ನಗರದಲ್ಲೂ ಮುಸ್ಲಿಂ ಮತಗಳು ಹೆಚ್ಚಾಗಿದೆ. ಓಲೈಕೆ ನಾವು ಮಾಡಲ್ಲ ಹಾಗಾಗಿ ಅವರು ನಮಗೆ ಮತ ಹಾಕಲ್ಲ. ತೀರ್ಪು ಏನೇ ಬಂದರೂ ಕ್ರೀಡಾ ಮನೋಭಾವದಿಂದ ಸ್ವೀಕರಿಸುತ್ತೇವೆ. ಆದ್ರೆ ಕಾಂಗ್ರೆಸ್ ಮೂರು ಗೆದ್ದರೆ ಜನಾದೇಶ ಅಂತಾರೆ. ಬರಲಿಲ್ಲ ಅಂದ್ರೆ ಇವಿಎಂ ದೋಷ ಅಂತಾ ಹೇಳ್ತಾರೆ ಎಂದು ಕುಟುಕಿದ್ದಾರೆ.

    ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮುನ್ನಡೆ:
    ರಾಜ್ಯದಲ್ಲಿ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಇಂದು ಹೊರಬೀಳುತ್ತಿದೆ. ಚನ್ನಪಟ್ಟಣದಲ್ಲಿ ಯೋಗೇಶ್ವರ್‌ 23,210 ಮತಗಳ ಮುನ್ನಡೆ ಸಾಧಿಸಿದ್ದಾರೆ. 15ನೇ ಸುತ್ತಿನಲ್ಲಿ ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ 8,239 ಮತಗಳ ಮುನ್ನಡೆಯಲ್ಲಿದ್ದಾರೆ. ಶಿಗ್ಗಾಂವಿಯಲ್ಲಿ ಯಾಸೀರ್‌ ಖಾನ್ ಪಠಾಣ್‌ 12,251 ಮತಗಳಿಂದ ಮುನ್ನಡೆಯಲ್ಲಿದ್ದಾರೆ.

  • ಚನ್ನಪಟ್ಟಣದಲ್ಲಿ ನಿಖಿಲ್‌ ಕುಮಾರಸ್ವಾಮಿಗೆ ಮುನ್ನಡೆ

    ಚನ್ನಪಟ್ಟಣದಲ್ಲಿ ನಿಖಿಲ್‌ ಕುಮಾರಸ್ವಾಮಿಗೆ ಮುನ್ನಡೆ

    ರಾಮನಗರ: ಭಾರಿ ಕುತೂಹಲ ಮೂಡಿಸಿರುವ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಗೆಲುವು ಸಾಧಿಸುವ ಸಾಧ್ಯತೆ ಇದೆ ಎಂದು ಪಿ-ಮಾರ್ಕ್‌ ಚುನಾವಣೋತ್ತರ ಸಮೀಕ್ಷೆ ಭವಿಷ್ಯ ನುಡಿದಿದೆ.

    ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‌ ಹಿನ್ನಡೆ ಅನುಭವಿಸಲಿದ್ದಾರೆಂದು ಸಮೀಕ್ಷೆ ತಿಳಿಸಿದೆ.

    ಚನ್ನಪಟ್ಟಣ ಗೆಲುವಿಗಾಗಿ ಎರಡೂ ಕಡೆಯಿಂದ ಭರ್ಜರಿ ಪ್ರಚಾರ ನಡೆದಿತ್ತು. ಪ್ರಚಾರದ ವೇಳೆ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿ ಸಚಿವ ಜಮೀರ್‌ ಅಹ್ಮದ್‌ ವಾಗ್ದಾಳಿ ನಡೆಸಿದ್ದರು. ಇದು ಕಾಂಗ್ರೆಸ್‌ ಅಭ್ಯರ್ಥಿ ಹಿನ್ನಡೆಗೆ ಕಾರಣವಾಗಲಿದೆ ಎಂದೇ ವಿಶ್ಲೇಷಿಸಲಾಗಿತ್ತು.

    ಸ್ವತಃ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‌ ಅವರು ಹತಾಶೆಯಿಂದ ಮಾತನಾಡಿದ್ದರು. ಜಮೀರ್‌ ಹೇಳಿಕೆಯಿಂದ ಡ್ಯಾಮೇಜ್‌ ಆಗಿರುವ ವಿಚಾರವನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದರು.

  • ಚನ್ನಪಟ್ಟಣದಲ್ಲಿ ನಿಖಿಲ್ ಗೆಲುವು ನಿಶ್ಚಿತ: ಸಂಸದ ಯದುವೀರ್ ವಿಶ್ವಾಸ

    ಚನ್ನಪಟ್ಟಣದಲ್ಲಿ ನಿಖಿಲ್ ಗೆಲುವು ನಿಶ್ಚಿತ: ಸಂಸದ ಯದುವೀರ್ ವಿಶ್ವಾಸ

    ಮಡಿಕೇರಿ: ರಾಜ್ಯದಲ್ಲಿ ಮೂರು ಕ್ಷೇತ್ರದ ಉಪಾಚುನಾವಣೆಯಾದ ಹಿನ್ನೆಲೆ ಮೂರು ಕ್ಷೇತ್ರದಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ. ಅದರಲ್ಲೂ ಹೈವೋಲ್ಟೇಜ್ ಕ್ಷೇತ್ರ ಚನ್ನಪಟ್ಟಣದಲ್ಲಿ (Channapatna) ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲುವು ನಿಶ್ಚಿತ ಎಂದು ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಕೊಡಗು ಜಿಲ್ಲೆ ಮಡಿಕೇರಿ (Madikeri) ತಾಲೂಕಿನ ಮಕ್ಕಂದೂರು ಗ್ರಾಮದಲ್ಲಿ ‘ಪಬ್ಲಿಕ್ ಟಿವಿ’ಯೊಂದಿಗೆ ಮಾತಾನಾಡಿದ ಅವರು, ಚನ್ನಪಟ್ಟಣದಲ್ಲಿ ಚುನಾವಣೆ ಸಂದರ್ಭ ಗ್ರೌಂಡ್ ರಿಪೋರ್ಟ್ ನೋಡಿದಾಗ ಅಲ್ಲಿನ ಜನರು ಮೈತ್ರಿ ಪಕ್ಷದ ಅಭ್ಯರ್ಥಿ ಪರವಾಗಿ ಇದ್ದರು. ಹಾಗಾಗಿ ನಮ್ಮಗೆ ವಿಶ್ವಾಸ ಇದೆ, ಎನ್‌ಡಿಎ ಪರವಾಗಿ ಗೆಲುವು ಆಗುತ್ತದೆ ಎಂಬ ಭರವಸೆಯನ್ನು ಕ್ಷೇತ್ರದ ಜನರು ತುಂಬಿದ್ದಾರೆ ಎಂದರು. ಇದನ್ನೂ ಓದಿ: ಅಪ್ರಾಪ್ತೆ ಪತ್ನಿಯ ಜೊತೆಗಿನ ಸಮ್ಮತಿಯ ಲೈಂಗಿಕ ಕ್ರಿಯೆ ಅತ್ಯಾಚಾರಕ್ಕೆ ಸಮ – ಬಾಂಬೆ ಹೈಕೋರ್ಟ್

    ಇಬ್ಬರಲ್ಲಿ ಯಾರಿಗೆ ಗೆಲುವು ಆದ್ರೂ ಕೂದಲೆಳೆಯ ಅಂತರದಲ್ಲಿ ಆಗಬಹುದು. ಜಮೀರ್ ಅಹ್ಮದ್ (Zameer Ahmed Khan) ಅವರ ಮಾತಿನಿಂದ ಮತಗಳು ವಿಭಜನೆಯಾಗಿದೆ ಎಂಬ ಸಿ.ಪಿ ಯೋಗೇಶ್ವರ್ ಹೇಳಿಕೆ ವಿಚಾರಕ್ಕೆ ಪ್ರಕ್ರಿಯಿಸಿ, ಅವರನ್ನೇ ಇನ್ನಷ್ಟು ನೇರವಾಗಿ ಪ್ರಶ್ನೆ ಮಾಡಬೇಕಾಗುತ್ತದೆ. ನಮ್ಮ ದೃಷ್ಟಿಕೋನದಲ್ಲಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಎಲ್ಲಾ ರೀತಿಯ ವಿಜಯವನ್ನು ಸಾಧಿಸುತ್ತಾರೆ. ನಮಗೂ ಅವರು ಗೆಲ್ಲುವ ವಿಶ್ವಾಸ ಇದೆ ಎಂದು ಹೇಳಿದರು. ಇದನ್ನೂ ಓದಿ: ಜಮೀರ್‌ ನಿಯತ್ತಾಗಿ ಬಸ್ ಓಡಿಸಿ ಬಂದ ದುಡ್ಡಾ ಅದು? ನಾಲ್ವರಿಂದ ನಾನು ಕೆಟ್ಟೆ: ಹೆಚ್‌ಡಿಕೆ ಕಿಡಿ

    ನಾವು ಪ್ರಚಾರಕ್ಕೆ ಹೋಗಿದ ಸಂದರ್ಭದಲ್ಲಿ ಅಲ್ಲಿನ ಗ್ರೌಂಡ್ ರಿಪೋರ್ಟ್‌ನಲ್ಲೇ ಜನರ ನಾಡಿ ಮಿಡಿತ ನೋಡಿದ್ದೇವೆ. ನಾವು ಹಾಗು ರಾಜ್ಯದ ಅನೇಕ ನಾಯಕರು ಅಲ್ಲಿಗೆ ಹೋಗಿದ್ದ ಸಂದರ್ಭದಲ್ಲಿ ಮತದಾರರು ಉತ್ತಮ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದರು. ಈ ರೀತಿಯ ಪ್ರತಿಕ್ರಿಯೆ ಮೊದಲೇ ಬಂದಿರುವುದರಿಂದ ಈಗಾಗಲೇ ಚನ್ನಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ಪರವಾಗಿ ಗೆಲ್ಲುವಿನ ವಾತಾವರಣ ಸೃಷ್ಟಿಯಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮ್ಯಾಟ್ರಿಮೋನಿಯಲ್ಲಿ ಯುವತಿಯರನ್ನು ಪರಿಚಯಿಸಿಕೊಂಡು ಲಕ್ಷ ಲಕ್ಷ ವಂಚನೆ – ಆರೋಪಿ ಅರೆಸ್ಟ್

  • ಚನ್ನಪಟ್ಟಣ ಫಲಿತಾಂಶಕ್ಕೂ ಮುನ್ನವೇ ಸೋಲೊಪ್ಪಿಕೊಂಡ್ರಾ ಯೋಗೇಶ್ವರ್‌?

    ಚನ್ನಪಟ್ಟಣ ಫಲಿತಾಂಶಕ್ಕೂ ಮುನ್ನವೇ ಸೋಲೊಪ್ಪಿಕೊಂಡ್ರಾ ಯೋಗೇಶ್ವರ್‌?

    – ನಾನು ಕಟ್ಟಿದ ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಸೇರುವ ಸ್ಥಿತಿ ಬಂತು
    – ದೇವೇಗೌಡರನ್ನು ಹಾಡಿ ಹೊಗಳಿದ `ಸೈನಿಕ’
    – ಯಾರೇ ಗೆದ್ದರೂ ಕೂದಲೆಳೆ ಅಂತರದಲ್ಲಿ ಗೆಲ್ತೀವಿ

    ರಾಮನಗರ: ಕುಮಾರಸ್ವಾಮಿ ಅವರೇ ನಾನು ಕಾಂಗ್ರೆಸ್ (Congress) ಸೇರುವ ಅನಿವಾರ್ಯ ಸ್ಥಿತಿಯನ್ನ ನಿರ್ಮಾಣ ಮಾಡಿದ್ರು. ಆದ್ದರಿಂದ ನಾನು ಕಟ್ಟಿದ ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಸೇರುವ ಪರಿಸ್ಥಿತಿ ಬಂತು. ನಾನು ಹಿಂದೆ ಗೆದ್ದಿದ್ದು ಬಿಟ್ರೆ ಇಲ್ಲಿ ಕಾಂಗ್ರೆಸ್‌ಗೆ ಅಸ್ತಿತ್ವ ಇರಲಿಲ್ಲ. ಇನ್ನೂ ಜಮೀರ್‌ ಹೇಳಿಕೆ ಒಂದು ಕಡೆ ಲಾಭ ಆದ್ರೆ, ಒಂದಷ್ಟು ನಷ್ಟ ಆಗಿದೆ ಎಂದು ಚನ್ನಪಟ್ಟಣ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ ಯೋಗೇಶ್ವರ್‌ (CP Yogeshwar) ಉಪಚುನಾವಣೆ ಫಲಿತಾಂಶಕ್ಕೂ ಮುನ್ನವೇ ಅಚ್ಚರಿ ಹೇಳಿಕೆ ನೀಡಿದ್ದಾರೆ.

    ಚನ್ನಪಟ್ಟಣದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಧನ್ಯವಾದ ತಿಳಿಸುತ್ತೇನೆ. ನನಗಾಗಿ ಈ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿ ಹಲವು ಸಚಿವರು ಕೆಲಸ ಮಾಡಿದ್ದಾರೆ. ಸಾಕಷ್ಟು ಶಾಸಕರು ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡಿದ್ದಾರೆ. ಡಿ.ಕೆ ಸುರೇಶ್ (DK Suresh) ವಿಶೇಷವಾಗಿ ಕೆಲಸ ಮಾಡಿದ್ದಾರೆ. ನನ್ನ ರಾಜಕೀಯ ಜೀವನದ ದೊಡ್ಡ ಚುನಾವಣೆ ಇದು. ಇಷ್ಟೊಂದು ತೀವ್ರತೆ ಪಡೆಯುತ್ತೆ ಅಂದುಕೊಂಡಿರಲಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹೊತ್ತಿ ಉರಿದ ಅಂಬುಲೆನ್ಸ್‌, ಆಕ್ಸಿಜನ್ ಸಿಲಿಂಡರ್ ಸ್ಫೋಟ – ಕೂದಲೆಳೆ ಅಂತರದಲ್ಲಿ ಗರ್ಭಿಣಿ ಪಾರು!

    ಇದು ಕುಮಾರಸ್ವಾಮಿ (HD Kumaraswamy) ಅವರಿಂದ ತೆರವಾದ ಕ್ಷೇತ್ರ, ಕುಟುಂಬಕ್ಕೆ ಉಳಿಸಿಕೊಳ್ಳಲು ಮುಂದಾದ್ರು. ರಾಜಕೀಯ ದೈತ್ಯ ನಾಯಕ ದೇವೇಗೌಡರ ಹಠ, ಮೊಮ್ಮಗನ ಗೆಲ್ಲಿಸುವ ಶಪಥ ಮಾಡಿದ್ರು. ಕೇಂದ್ರ ಸಚಿವ ಕುಮಾರಸ್ವಾಮಿ ಪುತ್ರನನ್ನ ಗೆಲ್ಲಿಸಿಕೊಂಡು ಕ್ಷೇತ್ರ ಉಳಿಸಿಕೊಳ್ಳಲು ಹೋರಾಟ ಮಾಡಿದ್ರು. ಎರಡೂ ಕಡೆಯೂ ಸಮಬಲದ ಹೋರಾಟ ಇದೆ. ಆದರೂ ಕೆಲವು ಸ್ಟೇಟ್‌ಮೆಂಟ್‌ ಹಾಗೂ ಮಾತುಗಳು ಜನರ ಭಾವನೆಗೆ ಘಾಸಿ ಮಾಡಿದೆ ಎಂದು ಬೇಸರ ಹೊರಹಾಕಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶ | ವೈದ್ಯರ ಯಡವಟ್ಟು – ಎಡಗಣ್ಣಿನ ಆಪರೇಷನ್‌ಗೆ ಬಂದಿದ್ದ ಬಾಲಕನಿಗೆ ಬಲಗಣ್ಣಿನ ಆಪರೇಷನ್‌!

    ಸಚಿವ ಜಮೀರ್‌ ಹೇಳಿಕೆ ಒಂದಷ್ಟು ಲಾಭ ಆದ್ರೆ ಒಂದಷ್ಟು ನಷ್ಟ ಆಗಿದೆ. ಮುಸ್ಲಿಂ ಮತಗಳ ಕ್ರೂಢೀಕರಣ ಒಂದುಕಡೆ ಆದ್ರೆ ಇನ್ನೊಂದು ಸಮುದಾಯಕ್ಕೆ ಹೊಡೆತ ಬಿದ್ದಿದೆ. ಅದರಿಂದ ಸ್ವಲ್ಪ ಆಘಾತ ಆಗಿದೆ. ನಿರಾಶಾದಾಯಕ ವಿಷಯ ಏನಿಲ್ಲ, ಯಾರೇ ಗೆದ್ರೂ ಕೂದಲೆಳೆ ಅಂತರದಲ್ಲಿ ಗೆಲ್ತೀವಿ ಎಂದು ಸಿಪಿವೈ ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ ದಾಖಲೆ ಸುಳ್ಳಿದ್ದರೆ ಸಿಎಂ ನನ್ನ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡಲಿ: FIRಗೆ ಸ್ನೇಹಮಯಿ ಕೃಷ್ಣ ಟಾಂಗ್‌

    ನಾನು ಕಾನ್ಫಿಡೆನ್ಸ್ ಕಳೆದುಕೊಂಡಿಲ್ಲ. ದೈತ್ಯ ಶಕ್ತಿ, ಒಕ್ಕಲಿಗರ ಬೆಂಬಲ ಇರೋ ವಂಶದ ಕುಡಿ ನನ್ನ ವಿರುದ್ಧ ಸ್ಪರ್ಧೆ ಮಾಡಿದೆ. ಕಳೆದ ಚುನಾವಣೆ ಕಾಂಗ್ರೆಸ್ ಪಡೆದ ಮತ 15 ಸಾವಿರ. ಈಗ ನಾವು ಒಂದು ಲಕ್ಷಕ್ಕಿಂತ ಅಧಿಕ ಮತ ಪಡೆದರೆ ಗೆಲುವು ಸಿಗುತ್ತೆ. ಈವರೆಗೂ ನನ್ನ ಎಲ್ಲಾ ಚುನಾವಣೆಯಲ್ಲೂ 80 ರಿಂದ 90 ಸಾವಿರ ಮತಗಳ ಪಡೆಯುತ್ತಿದ್ದೆ. ಈಗ ಕಾಂಗ್ರೆಸ್ ಅಭ್ಯರ್ಥಿ ಆಗಿದ್ದೇನೆ. ಬಿಜೆಪಿ-ಜೆಡಿಎಸ್ ಎರಡರ ಮೈತ್ರಿ ಇಲ್ಲಿ ವರ್ಕ್ ಆಗಬಹುದು. ಹಾಗಾಂತ ಹತಾಶೆ ಇಲ್ಲ, ಸಮಬಲದ ಹೋರಾಟ ಅಷ್ಟೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

    ಕುಮಾರಸ್ವಾಮಿ ಅವರೇ ನಾನು ಕಾಂಗ್ರೆಸ್ ಸೇರುವ ಅನಿವಾರ್ಯ ಸ್ಥಿತಿಯನ್ನ ನಿರ್ಮಾಣ ಮಾಡಿದ್ರು. ನಾನು ಕಟ್ಟಿದ ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಸೇರುವ ಪರಿಸ್ಥಿತಿ ಬಂತು. ನಾನು ಹಿಂದೆ ಗೆದ್ದಿದ್ದು ಬಿಟ್ರೆ ಇಲ್ಲಿ ಕಾಂಗ್ರೆಸ್‌ಗೆ ಅಸ್ತಿತ್ವ ಇರಲಿಲ್ಲ. ಈಗ ಕಡಿಮೆ ಸಮಯದಲ್ಲಿ ನಾನು ಸಂಘಟನೆ ಮಾಡಿದ್ದೇನೆ. ನನ್ನ ರಾಜಕೀಯ ಜೀವನ ಒಂಥರಾ ಐಪಿಎಲ್ ಮ್ಯಾಚ್ ರೀತಿ ಆಗಿದೆ. ಒಂದೊಂದು ಸೀಸನ್ ನಲ್ಲಿ ಒಂದೊಂದು ಟೀಮ್‌ನಲ್ಲಿ ಆಟ ಆಡುವಂತಾಗಿದೆ . ದೇವೇಗೌಡರು ಒಂದು ದೈತ್ಯ ಶಕ್ತಿ. ದೇವೇಗೌಡರಿಗೆ, ಕುಮಾರಸ್ವಾಮಿಗೆ ಬೈದರೆ ಸಹಿಸದ ಸಮುದಾಯ ಇದೆ. ಜನ ದೇವೇಗೌಡರು, ಕುಮಾರಸ್ವಾಮಿರನ್ನ ಮಾತ್ರ ಸಮುದಾಯದ ನಾಯಕ ಅಂತ ಗುರುತಿಸ್ತಾರೆ. ನಮ್ಮನ್ನ ಸಮುದಾಯದ ಲೀಡರ್ ಅಂತ ಯಾವಾಗ ಸ್ವೀಕಾರ ಮಾಡ್ತಾರೋ ಗೊತ್ತಿಲ್ಲ ಎಂದ ನುಡಿದಿದ್ದಾರೆ.